Friday, November 20, 2026
Friday, November 20, 2026
Home Blog Page 1171

Abacus Gann ಶಿವಮೊಗ್ಗ ತಾಲ್ಲೂಕು‌ ಮಟ್ಟದ ಅಬಾಕಸ್ ಬರಹ;& ಚಿತ್ರಕಲಾ ಸ್ಪರ್ಧೆ

0

Abacus Gann ಅಬಾಕಸ್ ಗ್ಯಾಂನ್ ವತಿಯಿಂದ ಶಿವಮೊಗ್ಗ ತಾಲೂಕು ಮಟ್ಟದ ತಾಲೂಕು ಮಟ್ಟದ ಅಬಾಕಸ್ ಚಿತ್ರಕಲೆ ಬರವಣಿಗೆ ಸ್ಪರ್ಧೆಗಳನ್ನು ಡಿಸೆಂಬರ್ 17ರಂದು ಭದ್ರಾವತಿ ನಗರದಲ್ಲಿರುವ ಬಲಿಜ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.

Abacus Gann ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ದೂರವಾಣಿ ಸಂಖ್ಯೆ 9845152879 ಮತ್ತು 9035970219 ಸಂಪರ್ಕಿಸಲು ಕೋರಲಾಗಿದೆ.
ಈ ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಮೆಡಲ್ ಹಾಗೂ ಪ್ರಮಾಣಪತ್ರ ನೀಡಲಾಗುವುದು.

Power Outage ಗಾಜನೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

Power Outage ಶಿವಮೊಗ್ಗ ತಾಲೂಕು ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಗ್ರಾಮಗಳಲ್ಲಿ ಡಿ.16 ರ ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Power Outage ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ರೇಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೇಕಲ್, ತಟ್ಟಿಕೆರೆ, ಯರಗನಾಳ್, ಕುಸ್ಕೂರು, ಸಿದ್ಧರಹಳ್ಳಿ, ಮಂಡೇನಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಶ್ರೀಕಂಠಪುರ, ವೀರಾಪುರ, ಹೊಸಕೊಪ್ಪ, ಆನೆಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Youth Congress ಸಂಸದ ಪ್ರತಾಪ ಸಿಂಹ ಅವರ ರಾಜಿನಾಮೆಗೆ ಒತ್ತಾಯ

0

Youth Congress ಸಂಸತ್ ಭವನದ ದಾಳಿಗೆ ಕಾರಣರಾಗಿರುವ ಪ್ರತಾಪ್‌ ಸಿಂಹ ಅವರನ್ನು ಕೂಡಲೇ ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಂಸತ್ ಭವನದ ಮೇಲೆ ಸ್ಮೋಕ್ ಬಾಂಬ್ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಪಾಸ್ ಪಡೆದಿರುವ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು’ ಎಂದು ಚೇತನ್ ಪ್ರಶ್ನಿಸಿದ್ದಾರೆ.

ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ ಎಂದಿದ್ದಾರೆ.

ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದಿದ್ದಾರೆ.

Youth Congress ಇಪ್ಪತ್ತೆರಡು ವರ್ಷಗಳ ಹಿಂದೆ (2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಭದ್ರತಾ ಲೋಪ ಎದ್ದು ಕಾಣುತ್ತಿದೆ. 300 ಕೆಜಿ RDX ಯಾವುದೇ ಅಡೆತಡೆ ಇಲ್ಲದೆ ಕಾಶ್ಮೀರದೊಳಗೆ ಬರುತ್ತದೆ. ಸ್ಪೋಟಕ ವಸ್ತು ಯಾವುದೇ ಅಡೆತಡೆ ಇಲ್ಲದೆ ಸಂಸತ್ತಿನೊಳಗೆ ಬರುತ್ತದೆ. ಸಂಸತ್ತನ್ನೇ ಕಾಯಲಾಗದ ಚೌಕಿದಾರ್ ದೇಶ ಕಾಯಲು ಸಾಧ್ಯವೇ? ಎಂದು ಚೇತನ್ ಪ್ರಶ್ನಿಸಿದ್ದಾರೆ.

Department of Forest ಅರಗೊಡಿಗಿಯಲ್ಲಿ ಹೆಬ್ಬಾವು ಪ್ರತ್ಯಕ್ಷ, ಜೋಪಾನವಾಗಿ ಕಾಡೊಳಗೆ ಬಿಟ್ಟ ಅರಣ್ಯ ಸಿಬ್ಬಂದಿ

0

Department of Forest ಹೊಸನಗರದಲ್ಲಿ ಅರಣ್ಯ ಅಧಿಕಾರಿಗಳು ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ನಡೆದಿದೆ.

ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಗೊಡಗಿ ಗ್ರಾಮದಲ್ಲಿ ರೈತನ ಗದ್ದೆಯಲ್ಲಿ ಕಾಣಿಸಿಕೊಂಡ ಹೆಬ್ಬಾವನ್ನು ಸ್ಥಳೀಯ ರೈತ ಮಹೇಶ್ ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದು ಹೊಸನಗರ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಅವರ ನೇತೃತ್ವದ ತಂಡ ಸ್ಥಳಕ್ಕೆ ಆಗಮಿಸಿ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.

Department of Forest ಈ ಕಾರ್ಯಾಚರಣೆಯಲ್ಲಿ ಚಾಲಕ ಜಗದೀಶ್ ಪ್ರಮುಖ ಪಾತ್ರ ವಹಿಸಿದ್ದು ಜೊತೆಗೆ ಉಪ ವಲಯ ಅರಣ್ಯಾಧಿಕಾರಿ ಅನಿಲ್, ಅರಣ್ಯ ರಕ್ಷಕ ಸುರೇಶ್, ಇವರುಗಳು ಭಾಗಿಯಾಗಿದ್ದರು.

B.S.Yediyurappa ರೈತರ ಸಾಲ ಮನ್ನಾ ಮಾಡಿ ನಿರ್ಧಾರ ಪ್ರಕಟಿಸಿ ಇಲ್ಲದಿದ್ದರೆ ಹೋರಾಟ ನಡೆಸುವೆವು ಬಿಎಸ್ ವೈ ಎಚ್ಚರಿಕೆ

0

B.S.Yediyurappa ಮುಂದಿನ 15ರಿಂದ 20 ದಿನಗಳ ಒಳಗೆ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡುವ ನಿರ್ಧಾರ ಪ್ರಕಟಿಸಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಹೋರಾಟ ಮಾಡುವೆ. ಸರ್ಕಾರ ಓಡಿಸುವವರೆಗೂ ವಿಶ್ರಮಿಸುವುದಿಲ್ಲ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಗುಡುಗಿದರು.

‘ನನ್ನ ಅಧಿಕಾರದಲ್ಲಿ ಯಾವುದೇ ಷರತ್ತಿಲ್ಲದೇ ರೈತರಿಗೆ ವಿದ್ಯುತ್ ನೀಡಿದ್ದೆ. ಈಗ ಅನೇಕ ಷರತ್ತು ಗಳನ್ನು ವಿಧಿಸಿ ರೈತರೊಂದಿಗೆ ಚೆಲ್ಲಾಟ ಮಾಡುತ್ತಿರುವುದು ಖಂಡನೀಯ. ಇದನ್ನು ರಾಜ್ಯದಾದ್ಯಂತ ಮಾಡದಿದ್ದರೆ ಹೋರಾಟ ಮಾಡುವುದು ಅನಿವಾರ್ಯ’ ಎಂದರು.

B.S.Yediyurappa ಬೆಳಗಾವಿ ನಗರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ತೀವ್ರ ಬರ ಇದೆ. ಸರ್ಕಾರ ಕೈಕಟ್ಟಿ ಕೂರುವುದು ಎಷ್ಟು ಸರಿ? ಈ ಹಿಂದೆ ಅತಿವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಒಳಗಾದಾಗ ನಾನು ತಡ ಮಾಡದೇ ಸಾಲ ಮನ್ನಾ ಮಾಡಿದ್ದೆ. ಈಗಲೂ ನೀವು ಅಂಥ ನಿರ್ಧಾರ ತೆಗೆದು ಕೊಳ್ಳಬೇಕು’ ಎಂದು ಆಗ್ರಹಿಸಿದರು.

Anjaneya Temple ಪ್ರಸನ್ನ ಆಂಜನೇಯ ದೇವಾಲಯದಲ್ಲಿ ಭಕ್ತಿ ಸಂಗೀತ

0

Anjaneya Temple ಡಿ.14.ಪ್ರಸನ್ನ ಆಂಜನೇಯ ದೇವಸ್ಥಾನದ ಶಿವಾಲಯ ಎದುರು ವಿನೋಬ ನಗರ
ಶಿವಮೊಗ್ಗದಲ್ಲಿ ಇತ್ತೀಚಿಗೆ ನಡೆದ
ಸಪ್ತಸ್ವರ ಟ್ರಸ್ಟ್ ವತಿಯಿಂದ ಗಾಯಕರಾದ ಶ್ರಿ ಚಂದ್ರಶೇಖರ್ ಭಟ್, ಶ್ರೀಮತಿ ಸುಮಚಂದ್ರಶೇಖರ್ ಭಟ್,
ಶ್ರಿ ಶಿವಕುಮಾರ್
ಶ್ರೀ ರಘು ಭಟ್ ಇವರಿಂದ
ಭಕ್ತಿ ಸಂಗೀತ ಕಾರ್ಯಕ್ರಮ ನಡೆಸಿಕೊಡಲಾಯಿತು.

DC Shivamogga ಜಿಲ್ಲೆಯಲ್ಲಿ ಪ್ರಸವ ಪೂರ್ವಲಿಂಗ ಪತ್ತೆ & ಭ್ರೂಣ ಹತ್ಯೆ ಗೌಪ್ಯವಾಗಿ ನಡೆಯುತ್ತಿದೆ ಸಭೆಯಲ್ಲಿ ಜಿಲ್ಲಾಧಿಕಾರಿ ಆತಂಕ

0

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸವಪೂರ್ವ ಲಿಂಗಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣಗಳು ಗೌಪ್ಯವಾಗಿ ನಿರಂತರವಾಗಿ ನಡೆಯುತ್ತಿವೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕಾಗಿದ್ದ ಸ್ಕ್ಯಾನಿಂಗ್ ಸೆಂಟರ್‌ಗಳು ಸರ್ಕಾರದ ನಿಯಮಗಳನ್ನು ನಿರ್ಲಕ್ಷಿಸಿ ಕಾರ್ಯನಿರ್ವಹಿಸುತ್ತಿರುವುದು ಆತಂಕಕಾರಿ ಬೆಳವಣ ಗೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣ ಅವರು ಹೇಳಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಸವಪೂರ್ವ ಲಿಂಗ ಪತ್ತೆ, ಭ್ರೂಣಹತ್ಯೆ ಮತ್ತು ಸ್ಕ್ಯಾನಿಂಗ್ ಸೆಂಟರ್‌ಗಳ ಕಾರ್ಯವೈಖರಿಗಳ ಕುರಿತು ಏರ್ಪಡಿಸಲಾಗಿದ್ದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿನ ಸ್ಕ್ಯಾನಿಂಗ್ ಸೆಂಟರ್‌ಗಳ ಕಾರ್ಯವೈಖರಿ ಹಾಗೂ ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ. ಕೂಡಲೇ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಹಾಗೂ ಸಲಹಾ ಸಮಿತಿಯ ಸದಸ್ಯರು ವಾರಕ್ಕೊಮ್ಮೆಯಂತೆ ನಗರ ವ್ಯಾಪ್ತಿಯಲ್ಲಿ ಮಾತ್ರವಲ್ಲದೇ ಜಿಲ್ಲೆಯ ಯಾವುದೇ ತಾಲೂಕುಗಳ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಹಾಗೂ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿ, ದಾಖಲೆಗಳನ್ನು ಪರಿಶೀಲಿಸಿ, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಅವರು ಸೂಚಿಸಿದರು.

ಯಾವುದೇ ಅಹಿತಕರ ಘಟನೆಗಳು ತಿಳಿದು ನಂತರ ಅವುಗಳ ಕುರಿತು ಕ್ರಮ ವಹಿಸುವ ಮೊದಲು ಮುನ್ನೆಚ್ಚರಿಕೆ ವಹಿಸುವುದು ಉತ್ತಮ, ಸಂಬಂಧಿತ ಇಲಾಖಾ ಅಧಿಕಾರಿಗಳು ಕೂಡಲೇ ಕ್ರಮವಹಿಸುವಂತೆ ಹಾಗೂ ಕೈಗೊಂಡ ಕ್ರಮದ ಬಗ್ಗೆ ಕೂಡಲೇ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ಅವಧಿಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳ ಜೊತೆಗೆ ಆಶಾ, ಅಂಗನವಾಡಿ ಕಾರ್ಯಕರ್ತರ ಸಹಕಾರ ಪಡೆದುಕೊಳ್ಳುವಂತೆ ತಿಳಿಸಿದ ಅವರು, ಆಶಾ ಕಾರ್ಯಕರ್ತೆಯರು ಸ್ಥಳೀಯವಾಗಿರುವ ಅನೇಕ ವಿಷಯಗಳನ್ನು ಬಲ್ಲವರಾಗಿರುತ್ತಾರೆ ಎಂದವರು ನುಡಿದರು.

ಸ್ಕ್ಯಾನಿಂಗ್ ನಂತರ ಕೆಲವೇ ದಿನಗಳಲ್ಲಿ ಗರ್ಭಪಾತವಾಗಿರುವ ಪ್ರಕರಣಗಳ ಮೂಲ ಹಾಗೂ ಕಾರಣಗಳನ್ನು ಹುಡುಕಿದಾಗ ವಾಸ್ತವದ ಅರಿವಾಗಲಿದೆ. ಅವರು ನೀಡುವ ಕಾರಣ ವೈಜ್ಞಾನಿಕವಾಗಿದ್ದಲ್ಲಿ ಒಪ್ಪಿಕೊಳ್ಳಬಹುದಾಗಿದೆ. ಅಥವಾ ಅದು ಸಕಾರಣವಲ್ಲ ಎಂದು ತಿಳಿದಾಗ ಅಂತಹ ಗರ್ಭಪಾತಕ್ಕೆ ಸಹಕರಿಸಿದ ವೈದ್ಯರು, ಸ್ಕ್ಯಾನಿಂಗ್ ಸೆಂಟರ್‌ಗಳ ನಿರ್ವಾಹಕರು ಮತ್ತು ಅಂತಹ ಕುಟುಂಬಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದರು. ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ದಾಖಲೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಕೇಂದ್ರದಲ್ಲಿ ಕ್ಯಾಮರಾಗಳನ್ನು ಅಳವಡಿಸಿರಬೇಕು. ಭ್ರೂಣ ಪತ್ತೆ ಮಾಡದಿರುವ ಬಗ್ಗೆ ಮಾಹಿತಿ ಫಲಕ ಅಳವಡಿಸಬೇಕು. ಮುಂತಾದ ಮಾಹಿತಿಗಳಿರುವುದನ್ನು ಖಚಿತಪಡಿಸಿಕೊಳ್ಳುವಂತೆ ವೈದ್ಯರಿಗೆ ಸೂಚಿಸಿದರು.

DC Shivamogga ಸ್ಕ್ಯಾನಿಂಗ್ ಸೆಂಟರ್‌ಗಳ ನಿರ್ವಾಹಕರು ಸಕಾಲದಲ್ಲಿ ತಮ್ಮ ಘಟಕದ ಪರವಾನಗಿ ನವೀಕರಣ ಮತ್ತು ನಿರ್ವಹಿಸಿದ ದಾಖಲೆಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿ ಸಲ್ಲಿಸಬೇಕು. ನಿರ್ಲಕ್ಷ್ಯ ತೋರುವ ಘಟಕಗಳ ಪರವಾನಿಗೆಯನ್ನು ರದ್ದುಗೊಳಿಸುವ ಕಠಿಣ ನಿರ್ಧಾರ ಕೈಗೊಳ್ಳಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ವೈದ್ಯರು ಹಾಗೂ ಸ್ಕ್ಯಾನಿಂಗ್ ಸೆಂಟರ್‌ಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಅಗತ್ಯವಿದ್ದಲ್ಲಿ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.

ಕೆಲವು ಕಡೆಗಳಲ್ಲಿ ಆಯುಷ್ ಇಲಾಖೆಯ ವೈದ್ಯರು ಆಯುಷ್ ಬದಲಾಗಿ ಆಲೋಪತಿ ಚಿಕಿತ್ಸೆ ನೀಡುತ್ತಿರುವ ಬಗ್ಗೆಯೂ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಈ ಬಗ್ಗೆ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಗಮನಿಸಿ ಕ್ರಮವಹಿಸಬೇಕೆಂದು ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳಿ, ಕುಟುಂಬ ಕಲ್ಯಾಣಾಧಿಕಾರಿ ವೆಂಕಟೇಶ್, ಡಾ|| ಮಂಜುನಾಥ ನಾಗಲೀಕರ್ ಸೇರಿದಂತೆ ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Kuvempu University ಸಾಗರ ಉಳ್ಳೂರಿನ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದ 2023-24 ಸಾಲಿನ ಸಂಯೋಜನೆ ಹಿಂಪಡೆಯಲಾಗಿದೆ

0

Kuvempu University ಶಂಕರಘಟ್ಟ ಜ್ಞಾನ ಸಹ್ಯಾದ್ರಿ ಕಾಲೇಜು ಅಭಿವೃದ್ಧಿ ಪರಿಷತ್ ಕಾರ್ಯಾಲಯವು ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಸಾಗರ ತಾಲೂಕು ಉಳ್ಳೂರುನಲ್ಲಿರುವ ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದ 2023-24ನೇ ಸಾಲಿನ ಸಂಯೋಜನೆಯನ್ನು ಹಿಂಪಡೆಯಲಾಗಿದ್ದು, 2023-24ನೇ ಸಾಲಿನಿಂದ ಬಿ.ಇಡಿ ಗೆ ಹೊಸ ದಾಖಲಾತಿಗಳನ್ನು ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ ಎಂದು ಕುವೆಂಪು ವಿಶ್ವವಿದ್ಯಾಲಯ ತಿಳಿಸಿದೆ.

Parliament House ಸಂಸದ್ ಭವನದಲ್ಲಿ ಭದ್ರತಾ ವೈಫಲ್ಯ,ಅಗಂತುಕರ ದಿಢೀರ್ ಪ್ರವೇಶ ದಾಂಧಲೆ

0

Parliament House ಭಾರತದ ಸಂಸತ್ ಮೇಲೆ ದಾಳಿ ನಡೆದು 22 ವರ್ಷವಾದ ದಿನವೇ ಲೋಕಸಭೆಯಲ್ಲಿ ಭದ್ರತಾ ವೈಫಲ್ಯ ಎದುರಾಗಿದೆ. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಇಬ್ಬರು ಅಪರಿಚಿತ ಯುವಕರು ಸಂಸದರು ಕುಳಿತುಕೊಳ್ಳುವ ವೇದಿಕೆಗೆ ಎಗರಿದ್ದಾರೆ. ತಮ್ಮ ಬಳಿ ಇದ್ದ ಬಣ್ಣದ ಹೊಗೆ ಹೊರಸೂಸುವ ವಸ್ತುಗಳನ್ನು ಸಿಡಿಸಿದ್ದಾರೆ. ಇದೊಂದು ಅತಿ ದೊಡ್ಡ ಭದ್ರತಾ ಲೋಪವಾಗಿದ್ದು, ಸಂಸದರು ಪಕ್ಷಾತೀತವಾಗಿ ಘಟನೆಯನ್ನು ಖಂಡಿಸಿದ್ದಾರೆ. ಸಂಸತ್‌ನ ಭದ್ರತೆಗೆ ಇದು ಖಂಡಿತವಾಗಿಯೂ ದೊಡ್ಡ ಸವಾಲಾಗಿದೆ.

2001ರಲ್ಲಿ ಸಂಸತ್‌ ಭವನದ ಮೇಲೆ ದಾಳಿ ನಡೆದು 22 ವರ್ಷ ಆದ ದಿನವೇ ಈ ಘಟನೆ ನಡೆದಿದೆ. ಸಂಸತ್‌ನಲ್ಲಿ ಎದುರಾಗಿರುವ ಈ ಭದ್ರತಾ ಲೋಪ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಂಸದರು ಭದ್ರತಾ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Parliament House ಘಟನೆ ನಡೆದ ವೇಳೆ ಬಿಜೆಪಿ ಸಂಸದ ರಾಜೇಂದ್ರ ಅಗರ್ವಾಲ್ ಅವರು ಸ್ಪೀಕರ್ ಅವರ ಪೀಠದಲ್ಲಿ ಅಲಂಕೃತರಾಗಿ ಕಲಾಪವನ್ನು ನಿರ್ವಹಿಸುತ್ತಿದ್ದರು. ಈ ಘಟನೆ ಕುರಿತು ಮಾಹಿತಿ ನೀಡಿದ ಅಗರ್ವಾಲ್, ಮೊದಲಿಗೆ ಯುವಕ ಗ್ಯಾಲರಿಯಿಂದ ಕೆಳಗೆ ನೆಗೆದಾಗ ಆತ ಆಕಸ್ಮಿಕವಾಗಿ ಕೆಳಗೆ ಬಿದ್ದಿರಬಹುದು ಎಂದು ಭಾವಿಸಿದೆವು. ಆದರೆ, ಎರಡನೇ ವ್ಯಕ್ತಿಯೂ ಗ್ಯಾಲರಿಯಿಂದ ಕೆಳಗೆ ಬಂದರು. ಅಪರಿಚಿತರು ತಮ್ಮ ಶೂನಿಂದ ಒಂದಷ್ಟು ವಸ್ತುಗಳನ್ನು ಹೊರಗೆ ತೆಗೆದರು. ಅದರಿಂದ ಹಳದಿ ಬಣ್ಣದ ಹೊಗೆ ಹೊರ ಬಂತು ಎಂದು ವಿವರಿಸಿದ್ದಾರೆ.

ಇನ್ನು ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರು ಇದೊಂದು ಭಯಾನಕ ಅನುಭವ ಎಂದಿದ್ದಾರೆ. ದುಷ್ಕರ್ಮಿಗಳ ಟಾರ್ಗೆಟ್ ಏನು ಅನ್ನೋದು ಯಾರಿಗೂ ಗೊತ್ತಿರಲಿಲ್ಲ. ನಾವು ಆ ಕೂಡಲೇ ಲೋಕಸಭೆಯಿಂದ ಹೊರಗೆ ಬಂದೆವು. ಆದರೆ ಇದು ಖಂಡಿತವಾಗಿಯೂ ಭದ್ರತಾ ವೈಫಲ್ಯ ಎಂದು ಬಂಡೋಪಾಧ್ಯಾಯ ಹೇಳಿದ್ದಾರೆ.

Karnataka Sanga ನಮ್ಮ ಬದುಕೂ ದಶಾವತಾರವೇ!? ವಾಗ್ಮಿ ಹಿರೇಮಗಳೂರು ಕಣ್ಣನ್ ಅವರಿಂದ ಕರ್ನಾಟಕ ಸಂಘದಲ್ಲಿ ಭಾಷಣ

0

Karnataka Sanga ಡಿಸೆಂಬರ್ 17, 2023ರ ಭಾನುವಾರ, ಸಂಜೆ 6:30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಹಿರೇಮಗಳೂರಿನ ಶ್ರೀ ಕೋದಂಡರಾಮಚಂದ್ರಸ್ವಾಮಿ ದೇವಾಲಯದ ಕನ್ನಡ ಪೂಜಾರಿಯೆಂದೇ ಪ್ರಖ್ಯಾತರಾದ ಪ್ರಧಾನ ಅರ್ಚಕರು ಮತ್ತು ವಾಗ್ಮಿಗಳು ಆದ ಶ್ರೀ ಹಿರೇಮಗಳೂರು ಕಣ್ಣನ್ ಅವರು “ ನಮ್ಮ ಬದುಕೂ ದಶಾವತಾರವೇ!? ” ವಿಷಯದ ಕುರಿತು ಮಾತನಾಡಲಿದ್ದಾರೆ.

Karnataka Sanga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.