ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮೇ 01 ರ ಬೆಳಗ್ಗೆ 11.00 ಕ್ಕೆ ಕುವೆಂಪು ರಂಗಮಂದಿರದಲ್ಲಿ ಭಗವಾನ್ ಶ್ರೀ ಬುದ್ಧರ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.ಸಾಗರದ ಸಿರಿವಂತೆ – “ಚಿತ್ರಸಿರಿ”, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಎನ್. ರವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದೆ.
ಮೇ.1. ಬುದ್ಧಜಯಂತಿ ಆಚರಣೆ, ಜಿಲ್ಲಾಡಳಿತದಿಂದ ಮಾಹಿತಿ
ಶಿವಮೊಗ್ಗದ ಎಂ.ಎನ್.ವೆಂಕಟೇಶ್ ಅವರಿಂದ 80 ನೇ ಬಾರಿಗೆ ರಕ್ತದಾನ
ಭಾವಸಾರ ವಿಷನ್ ಪ್ರೇರಣಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ರೋಟರಿ ಶಿವಮೊಗ್ಗದ ಸ್ಥಾಪಕ, ಫ್ರೆಂಡ್ಸ್ ಸೆಂಟರ್ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ, ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಎಂ.ಎನ್.ವೆಂಕಟೇಶ ರವರು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಇಂದು ಎಂ.ಎನ್.ವೆಂಕಟೇಶ ರವರು ಜೆಪಿಎನ್ ರಸ್ತೆಯಲ್ಲಿನ ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿಯಲ್ಲಿ 80ನೇ ಬಾರಿ ರಕ್ತದಾನ ಮಾಡಿ ಮಾನವೀಯತೆಯನ್ನು ಮೆರೆದಿದ್ದಾರೆ. ನಿರಂತರವಾಗಿ ರಕ್ತದಾನ ಮಾಡುತ್ತಾ ಹಾಗೂ ರಕ್ತದಾನದ ಬಗ್ಗೆ ಸ್ನೇಹಿತರಿಗೆ ಬಂಧುಗಳಿಗೆ ಜಾಗೃತಿ ಮಾಡಿಸಿ ಅವರಿಗೂ ರಕ್ತದಾನ ಮಾಡಲು ಪ್ರೇರೇಪಿಸುತ್ತಿರುವ ಎಂ.ಎನ್.ವೆಂಕಟೇಶ ರವರು ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದೇ ಸಂದರ್ಭದಲ್ಲಿ 120 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಧರಣೇಂದ್ರ ದಿನಕರ ಉಪಸ್ಥಿತರಿದ್ದರು.
Rotary Shivamogga ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಕರ್ಯ ಒದಗಿಸಬೇಕು- ಕೆ.ಫಾಲಾಕ್ಷ
Rotary Shivamogga ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಅವಶ್ಯಕ ಎಂದು ರೋಟರಿ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ ಹೇಳಿದರು.
ಸೋಗಾನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಕರ್ಯಗಳ ನೆರವು ಒದಗಿಸಬೇಕು ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಲಿ ಎಂದು ಆಶಿಸಿದರು. ಶಾಲೆಗೆ 3 ಬೋರ್ಡ್, 25 ಡಿಕ್ಷನರಿ, 50 ನೋಟ್ ಪುಸ್ತಕಗಳನ್ನು ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ವಿತರಿಸಲಾಯಿತು.
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್‌ಕುಮಾರ್ ಮಾತನಾಡಿ, ಗ್ರಾಮೀಣ ಶಾಲೆಗಳಿಗೆ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಹೆಚ್ಚಿನ ಸೌಕರ್ಯಗಳನ್ನು ಒದಗಿಸುತ್ತದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಮುಖ್ಯಶಿಕ್ಷಕಿ ಸುಮತಿ ಕುಮಾರಸ್ವಾಮಿ ಮಾತನಾಡಿ, ಗ್ರಾಮೀಣ ಭಾಗದ ಶಾಲೆಗಳನ್ನು ಗುರುತಿಸಿ ಮಕ್ಕಳಿಗೆ ಅನುಕೂಲ ಒದಗಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
Rotary Shivamogga ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಶ್ರಮಿಸುತ್ತಿರುವ ಶಿಕ್ಷಕರ ಕೊಡುಗೆ ಅಪಾರ ಎಂದು ತಿಳಿಸಿದರು.
ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ಶ್ರೀಕಾಂತ್, ಡಾ. ಗುಡದಪ್ಪ ಕಸಬಿ, ಗಣೇಶ್, ಲಕ್ಷ್ಮಣ್, ಸಹಾಯಕ ಗವರ್ನರ್ ಲಕ್ಷ್ಮಣ ಗೌಡ, ವಲಯ ಸೇನಾನಿ ಕಿರಣ್‌ಕುಮಾರ್, ವಲಯ ಕಾರ್ಯದರ್ಶಿ ರಾಧಕೃಷ್ಣ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
Kuvempu University ಕುವೆಂಪು ವಿವಿ, ಸಮಾಜಕಾರ್ಯ ವಿಭಾಗದಿಂದ ಪ್ರಶಿಕ್ಷಣ ಶಿಬಿರ
Kuvempu University ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದಿಂದ ಕೋಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಕಾಚಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಸಮಾಜಕಾರ್ಯ ಗ್ರಾಮೀಣ ಶಿಬಿರದ ಗ್ರಾಮೀಣ ಜನರ ಸಹಭಾಗಿತ್ವದೊಂದಿಗೆ ಸಮುದಾಯದ ಮೌಲ್ಯಮಾಪನ ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಸಂಪನ್ಮೂಲ ವ್ಯಕ್ತಿಗಳಾದ ಮಿತ್ರ ಆಪ್ತಸಮಾಲೋಚಕರು ಮತ್ತು ತುಮಕೂರು ತರಬೇತಿ ಕೇಂದ್ರ ಅಧ್ಯಕ್ಷರಾದ ಪಾವಟೆ ಉಪನ್ಯಾಸ ನೀಡಿದರು. ಕಾರ್ಯಕ್ರಮವು ಪ್ರಶಿಕ್ಷಣಾರ್ಥಿಗಳ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ನೀಡಿದರು. ಸಂದರ್ಭದಲ್ಲಿ ಗ್ರಾಮಸ್ಥರು, ಸಮಾಜಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
Dream Dance Academy ಸಂಗೀತ ಮತ್ತು ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ- ಫಾ.ರಾಬರ್ಟ್ ಡಿ’ ಮೆಲ್ಲೊ
Dream Dance Academy ಸಂಗೀತ ಮತ್ತು ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿದ್ದು, ಪೋಷಕರಾದವರು ಮಕ್ಕಳ ಮೇಲೆ ಒತ್ತಡ ಹೇರುವುದು ಸಲ್ಲದು ಎಂದು ಹೊಸಪೇಟೆ ಬಡಾಣವೆಯ ಸಂತ ಸೆಬಾಸ್ಟಿಯನ್ ಚರ್ಚ್ನ ಧರ್ಮಗುರು ಫಾದರ್ ರಾಬರ್ಟ್ ಡಿ’ಮೆಲ್ಲೋ ಹೇಳಿದರು.
ಪಟ್ಟಣದ ರಂಗಮಂದಿರದಲ್ಲಿ ಡ್ರೀಮ್ ಡ್ಯಾನ್ಸ್ ಅಕಾಡೆಮಿಯ ದಶಮಾನೋತ್ಸವ ಅಂಗವಾಗಿ ಹಮ್ಮಿಕೊಂಡ ಸೊರಬ ನೃತ್ಯೋತ್ಸವ-2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಲೆಗಳಲ್ಲಿ ತೊಡಗುವುದರಿಂದ ಮಕ್ಕಳಲ್ಲಿ ಸೋದರತೆಯ ಬಾಂಧವ್ಯದ ಜೊತೆ ಉತ್ತಮ ಸಂಸ್ಕಾರ ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಿದಾಗ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲಿದ್ದಾರೆ. ಗ್ರಾಮೀಣ ಭಾಗದ ಅನೇಕ ಪ್ರತಿಭೆಗಳನ್ನು ರಾಜ್ಯ ಮಟ್ಟಕ್ಕೆ ಪರಿಚಯಿಸಿದ ಕೀರ್ತಿ ಡಿಡಿ ಅಕಾಡೆಮಿಗೆ ಸಲ್ಲುತ್ತದೆ ಎಂದರು.
ಸಮಾಜ ಸೇವಕ ಡಾ. ಎಚ್.ಇ. ಜ್ಞಾನೇಶ್ ಮಾತನಾಡಿ, ಮಕ್ಕಳನ್ನು ಅಂಕಗಳಿಕೆಗೆ ಮಾತ್ರ ಸೀಮಿತಗೊಳಿಸದೇ ಅವಲ್ಲಿನ ಸೃಜನಾತ್ಮಕ ಕಲೆಗಳನ್ನು ಗುರುತಿಸಬೇಕು. ಈ ಮೂಲಕ ಅವರನ್ನು ಸಮಾಜದ ಸತ್ಪçಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಇದೆ. ಮಕ್ಕಳನ್ನು ಸಂಸ್ಕಾರವAತರನ್ನಾಗಿಸಿದಾಗ ವೃದ್ಧಾಶ್ರಮಗಳ ಸಂಖ್ಯೆ ಕುಂಠಿತವಾಗಲಿದೆ ಎಂದರು.
ಡ್ರೀಮ್ಸ್ ಡ್ಯಾನ್ಸ್ ಅಕಾಡೆಮಿ ಮುಖ್ಯಸ್ಥ ಹಾಗೂ ಡ್ಯಾನ್ಸ್ ಮಾಸ್ಟರ್ ಸ್ಟೀವನ್ ಮಾತನಾಡಿ, ನ್ಯತ್ಯ ತರಬೇತಿ ಸಂಸ್ಥೆಯನ್ನು ಆರಂಭಿಸಿದಾಗ ಹಲವಾರು ಸಮಸ್ಯೆಗಳು ಎದುರಾದವು. ಅವುಗಳನ್ನು ನಿವಾರಿಸಿಕೊಂಡು ನೂರಾರು ವಿದ್ಯಾರ್ಥಿಗಳಿಗೆ ನ್ಯತ್ಯವನ್ನು ಕಲಿಸಲಾಗಿದೆ. ಕೋವಿಡ್ ನಂತಹ ಸಂದರ್ಭದಲ್ಲಿ ಸಂಸ್ಥೆಯನ್ನು ನಡೆಸುವುದೇ ದುಸ್ಥರವಾಗಿತ್ತು. ಈ ವೇಳೆ ಉದ್ಯಮಿ ನಾಗರಾಜ ಗುತ್ತಿ ಅವರು ಮಾಡಿದ ಸಹಾಯವನ್ನು ಮರೆಯುವಂತಿಲ್ಲ. ಅಲ್ಲದೇ, ಹೊಸಪೇಟೆ ಬಡಾವಣೆಯ ಪರಶುರಾಮ್ ಮತ್ತು ವಿದ್ಯಾರ್ಥಿಗಳ ಪೋಷಕರ ಸಹಕಾರದಿಂದ ಸಂಸ್ಥೆಯು ಹತ್ತು ವರ್ಷಗಳನ್ನು ಪೂರೈಸಿ ಮುನ್ನೆಡೆಯುತ್ತಿರುವುದು ಸಂತಸ ತಂದಿದೆ ಎಂದರು.
Dream Dance Academy ಇದೇ ಸಂದರ್ಭದಲ್ಲಿ ಕಿರುತೆರೆ ಕಲಾವಿದೆ ಅನಘಾ, ಸಂಸ್ಥೆಯ ಹಳೇ ವಿದ್ಯಾರ್ಥಿಗಳಾದ ನಿವೇದಿತಾ ಹಾಗೂ ಸ್ಪಂದನಾ, ಶಿವಮೊಗ್ಗದ ಡ್ಯಾನ್ಸ್ ಸ್ಟೆಪ್ ಹೋಲ್ಡರ್‌ನ ಅರುಣ್ ರಾಜ್ ಶೆಟ್ಟಿ, ನೃತ್ಯ ತರಬೇತುದಾರರಾದ ಪ್ರಶಾಂತ್, ಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಿತು.
ಡ್ಯಾನ್ಸ್ ಸ್ಟೆಪ್ ಹೋಲ್ರ‍್ಸ್ನ ಅರುಣ್ ರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗುಂಡಶೆಟ್ಟಿಕೊಪ್ಪದ ಜ್ಞಾನ ಸಹ್ಯಾದಿ ಇಂಟರ್‌ನ್ಯಾಷನಲ್ ಸ್ಕೂಲ್‌ನ ಪ್ರಾಂಶುಪಾಲೆ ಡಾ. ಮೋನಿಕಾ ಡಿಸೋಜಾ, ಸಮಾಜ ಸೇವಕ ಶಂಕರ್ ಶೇಟ್, ರೋಟರಿ ಕ್ಲಬ್ ಅಧ್ಯಕ್ಷ ಜೆ.ಎಸ್. ಮಹಾಂತೇಶ್, ಮಾಜಿ ಅಧ್ಯಕ್ಷ ರಾಜು ಹಿರಿಯಾವಲಿ, ಉದ್ಯಮಿ ನಾಗರಾಜ ಗುತ್ತಿ, ಡಿ.ಎಸ್. ಪ್ರಶಾಂತ್ ದೊಡ್ಮನೆ ಸೇರಿದಂತೆ ಇತರರಿದ್ದರು. ನಾಗರಾಜ್ ಸಂಜನ್, ಕವನಾ ನಿರ್ವಹಿಸಿದರು.
S.N. Channabasappa ನಾರಿ ಶಕ್ತಿ ವಂದನ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಶಾಸಕ ಚನ್ನಿ ಆಕ್ರೋಶ
S.N. Channabasappa ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ ‘ನಾರಿ ಶಕ್ತಿ ವಂದನ ಅಧಿನಿಯಮ’ವನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಅತ್ಯಂತ ಖಂಡನೀಯ ಎಂದು ಶಿವಮೊಗ್ಗ ನಗರ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಆಕ್ರೋಶ ವ್ಯಕ್ತಪಡಿಸಿದರು.
ಇಂದು ಬಿಜೆಪಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ಸಬಲೀಕರಣದ ಬಗ್ಗೆ ಕಿಂಚಿತ್ತೂ ಗೌರವವಿಲ್ಲ. ಅಧಿಕಾರಕ್ಕಾಗಿ ಹಂಬಲಿಸುವ ಕಾಂಗ್ರೆಸ್, ಮಹಿಳೆಯರಿಗೆ ಸಿಗಬೇಕಾದ ಮೀಸಲಾತಿಯನ್ನು ತಡೆಯುವ ಮೂಲಕ ತನ್ನ ನೈಜ ಮುಖವನ್ನು ಬಯಲು ಮಾಡಿದೆ.” ಎಂದು ತಿಳಿಸಿದರು.
S.N. Channabasappa ಪ್ರತಿಭಟನೆಯಲ್ಲಿ ಸಂಸದರಾದ ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಆರ್ ಕೆ ಸಿದ್ದರಾಮಣ್ಣ, ಶ್ರೀ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಮಧುರ ಶಿವಾನಂದ್, ಮಹಿಳಾ ಮೋರ್ಚಾ ನಗರಾಧ್ಯಕ್ಷರಾದ ಶ್ರೀಮತಿ ರಶ್ಮಿ ಶ್ರೀನಿವಾಸ್, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ರೀಮತಿ ಮಂಜುಳಾ ಶ್ರೀನಿವಾಸ್ ಸೇರಿದಂತೆ ನೂರಾರು ಸಂಖ್ಯೆಯ ಆಕ್ರೋಶಿತ ಮಹಿಳಾ ಕಾರ್ಯಕರ್ತೆಯರು, ಬಿಜೆಪಿಯ ಪ್ರಮುಖರು ಭಾಗವಹಿಸಿದ್ದರು.
Madhu Bangarappa ಗಾಳಿಮಳೆಯಿಂದಾದ ಹಾನಿಗೆ ಸೂಕ್ತ ಕ್ರಮಕ್ಕೆ ಸೂಚನೆ : ಎಸ್ಸೆಸ್ಎಲ್ಸಿ & ಪಿಯು ಅತ್ಯುತ್ತಮ ಫಲಿತಾಂಶ- ಮಧುಬಂಗಾರಪ್ಪ
Madhu Bangarappa ಶಿಕ್ಷಣ ಇಲಾಖೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ಅಳವಡಿಸಿಕೊಂಡಿದ್ದು, ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಸಾಕಷ್ಟು ಸುಧಾರಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು.
ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿ ಅವರು ಮಾತನಾಡಿ, ಎಸ್‌ಸಿ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಶೇ 18.5 ಮತ್ತು ಎಸ್‌ಟಿ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಸಹ ಶೇ.17.5 ರಷ್ಟು ಸುಧಾರಣೆ ಕಂಡಿದ್ದು, ಇನ್ನೂ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಈ ಸಾಲಿನಲ್ಲಿ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಐತಿಹಾಸಿಕ ಫಲಿತಾಂಶ ಬಂದಿದ್ದು, ಫಲಿತಾಂಶವನ್ನು ಎಸ್‌ಎಂಎಸ್ ಮತ್ತು ವಾಟ್ಸಾಪ್ ಮೂಲಕ ಕಳುಹಿಸಿಕೊಡಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ ಎರಡನೇ ಸ್ಥಾನದಲ್ಲಿರುವುದು ಸಂತಸದ ವಿಷಯ. ಶಿಕ್ಷಣ ಇಲಾಖೆ ಮೂಲಕ ಗ್ಯಾರಂಟಿ ಶಿಕ್ಷಣ ಒದಗಿಸಲಾಗುತ್ತಿದ್ದು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ದಿ ಮತ್ತು ಉತ್ತಮ ಫಲಿತಾಂಶಕ್ಕಾಗಿ 2023 ರ ನವೆಂಬರ್ ಮಾಹೆಯಲ್ಲಿ ಉಚಿತವಾಗಿ ಎಲ್ಲ ಸರ್ಕಾರಿ ಶಾಲೆಗಳಿಗೆ ವಿದ್ಯುತ್ ಘೋಷಿಸಲಾಯಿತು. ಇದರಿಂದಾಗಿ ಮಕ್ಕಳಿಗೆ ವಿಶೇಷ ತರಗತಿಗಳನ್ನು ತೆಗೆದುಕೊಂಡು ಉತ್ತಮ ಫಲಿತಾಂಶ ಬರುವುದಕ್ಕೆ ಸಾಧ್ಯವಾಯಿತು ಎಂದರು.
ಹಾಗೂ ನ.14 ರ ಮಕ್ಕಳ ದಿನಾಚರಣೆಯಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮೆಗಾ ಪೇರೆಂಟ್ಸ್ ಟೀಚರ್ ಮೀಟಿಂಗ್ ನ್ನು ಸರ್ಕಾರಿ ಶಾಲೆಗಳಲ್ಲಿ ಮೊದಲ ಬಾರಿಗೆ ಇಲಾಖೆ ನಡೆಸಿದ್ದು, ಈಗ ನಿಯಮಿತವಾಗಿ ಪೋಷಕರ ಮತ್ತು ಶಿಕ್ಷಕರ ಸಭೆಗಳು ಜರುಗುತ್ತಿದ್ದು ಮಕ್ಕಳ ಶೈಕ್ಷಣಿಕ ಅಭಿವೃದ್ದಿ ಸೇರಿದಂತೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದರು.
ದೇಶದಲ್ಲೇ ಮೊದಲ ವೆಬ್ ಕಾಸ್ಟಿಂಗ್ : ಪಾರದರ್ಶಕವಾಗಿ ಮತ್ತು ಶಿಸ್ತಿನಿಂದ ಪರೀಕ್ಷೆಗಳನ್ನು ನಡೆಸಲು ದೇಶದಲ್ಲೇ ಮೊದಲ ಬಾರಿಗೆ ಶಿಕ್ಷಣ ಇಲಾಖೆ ವತಿಯಿಂದ ಎಸ್‌ಎಸ್ ಎಲ್‌ಸಿ ಮತ್ತು ಪಿಯುಸಿ ಮುಖ್ಯ ಪರೀಕ್ಷೆಗಳಿಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಿ ಯಶಸ್ವಿಯಾಗಿದ್ದು, ಮಾದರಿಯಾಗಿದ್ದೇವೆ.
ಹಾಗೂ ಮೂರು ಪರೀಕ್ಷಾ ನಿಯಮ ಸಹ ಯಶಸ್ವಿಯಾಗಿದ್ದು, ಇತರೆ ರಾಜ್ಯಗಳು ಇದನ್ನು ಅನುಸರಿಸಲು ಮುಂದಾಗಿವೆ. ಈ ಪರೀಕ್ಷಾ ಪದ್ದತಿಯಿಂದ ಮಕ್ಕಳ ಫಲಿತಾಂಶ ಉತ್ತಮಗೊಂಡಿದೆ. ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ವೃದ್ದಿಯಾಗಿದ್ದು ಈ ಸಾಲಿನಿಂದ ಮೂರರಿಂದ ಎರಡು ಪರೀಕ್ಷಾ ಪದ್ದತಿಯನ್ನು ಅಳವಡಿಸಲಾಗಿದೆ ಎಂದರು ತಿಳಿಸಿದರು.
Madhu Bangarappa ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಆರಂಭದ ಬಗ್ಗೆ ಮತ್ತು ವಿದ್ಯಾರ್ಥಿಗಳ ಸಾಧನೆ ಬಗ್ಗೆ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಪ್ರಚಾರ ನೀಡಲಾಗುತ್ತಿದ್ದು, ಪ್ರಚಾರ ಫಲಕಗಳನ್ನು ಹಾಕಲಾಗುತ್ತಿದೆ ಎಂದರು.
ನೇಮಕಾತಿಗೆ ಕ್ರಮ : ಒಳಮೀಸಲಾತಿ ಪ್ರಕ್ರಿಯೆಯು ಮುಗಿದಿದ್ದು, ಶೀಘ್ರದಲ್ಲೇ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಶಿಕ್ಷಕರ ನೇಮಕಾತಿ ಕುರಿತು ತಯಾರಿ ನಡೆಸಲು ಈಗಾಗಲೇ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಹಾಗೂ ಬಹು ವರ್ಷಗಳಿಂದ ಭರ್ತಿಯಾಗದೇ ಖಾಲಿ ಇರುವ ಸುಮಾರು 5800 ಅನುದಾನಿತ ಶಾಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದರು.
ಮಳೆ-ಗಾಳಿ ಹಾನಿಗೆ ಕ್ರಮ : ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಜೋರು ಗಾಳಿ ಮತ್ತು ಮಳೆಗೆ ಉಂಟಾಗಿರುವ ಹಾನಿ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ನೀಡಲು ಸೂಚಿಸಿದ್ದೇನೆ. ವರದಿ ಬಂದ ನಂತರ ಸ್ವತಃ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ.
ಹೊಳೆಹೊನ್ನೂರು ಗ್ರಾಮಾಂತರ ಪ್ರದೇಶದಲ್ಲಿ ಗಾಳಿ-ಮಳೆಯಿಂದ ಹಾನಿ ಉಂಟಾಗಿದೆ. ಸೊರಬ ಕ್ಷೇತ್ರದ ಉಳವಿ, ಇತರೆಡೆ ಬಿರುಗಾಳಿ ಮತ್ತು ಮಳೆಗೆ ಹಾನಿಯುಂಟಾಗಿದೆ. ಈ ಪ್ರದೇಶಗಳಲ್ಲೆಲ್ಲಾ ಸರ್ವೇ ಮಾಡಲು ಸೂಚಿಸಿದ್ದೇನೆ.
ಮಲೆನಾಡು ಭಾಗದಲ್ಲಿ ತೆಂಗಿನ ಮರಗಳು ಮಧ್ಯಭಾಗದಲ್ಲಿ ತುಂಡಾಗಿ ಬೀಳುತ್ತಿದ್ದು, ಮಾಲೀಕರು ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ವಿಪತ್ತು ನಿರ್ವಹಣಾ ವಿಭಾಗ ಮತ್ತು ಇತರೆ ಇಲಾಖೆಗಳು ತಂಡದAತೆ ಕಾರ್ಯ ನಿರ್ವಹಿಸಬೇಕು. ಮಳೆ ಗಾಳಿ ವೇಳೆ ಮೆಸ್ಕಾಂ ಅಧಿಕಾರಿಗಳು ಅರಿವು ಮೂಡಿಸುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸಹಕರಿಸಬೇಕು. ಜಿಲ್ಲೆಯ ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಇಓ ಸೇರಿದಂತೆ ಎಲ್ಲ ಅಧಿಕಾರಿಗಳು ಅತಿ ಎಚ್ಚರಿಕೆಯಿಂದ ಕ್ರಮ ವಹಿಸಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಬಿಇಓ ಗೆ ಶ್ಲಾಘನೆ : ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯೋರ್ವಳ ತಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆಯಲ್ಲಿಯೇ ತೀರಿಕೊಂಡಿದ್ದು, ಆ ಸಮಯದಲ್ಲಿ ಶಿವಮೊಗ್ಗ ಬಿಇಓ ರಮೇಶ್ ವಿದ್ಯಾರ್ಥಿನಿಯ ಮನೆಗೆ ತೆರಳಿ ವಿದ್ಯಾರ್ಥಿನಿ ಮತ್ತು ಕುಟಂಬದವರಿಗೆ ಸಾಂತ್ವನ ಹೇಳಿ, ವಿದ್ಯಾರ್ಥಿನಿ ಮನವೊಲಿಸಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ತಮ್ಮ ಸರ್ಕಾರಿ ವಾಹನದಲ್ಲಿಯೇ ಕರೆ ತಂದಿದ್ದಾರೆ. ವಿದ್ಯಾರ್ಥಿನಿಗೆ ಉತ್ತಮ ಫಲಿತಾಂಶ ಸಹ ಲಭಿಸಿದ್ದು ಹೀಗೆ ಮಾನವೀಯತೆ ಮೆರೆದ ಅವರಿಗೆ ಸೆಲ್ಯೂಟ್ ಮಾಡಬಯಸುತ್ತೇನೆ ಎಂದು ತಿಳಿಸಿದರು.
ಓದು ಕರ್ನಾಟಕ : ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಲ್ಲಿ ಓದುವ ಕೌಶಲ್ಯ ಮತ್ತು ಅಭ್ಯಾಸ ಬೆಳೆಸಲು ಪ್ರತಿ ದಿನ ದಿನಪತ್ರಿಕೆಗಳು ಮತ್ತು ಸರಳ ಕನ್ನಡ ಅಭ್ಯಾಸ ಪುಸ್ತಕಗಳನ್ನು ಓದಿಸುವ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದರು.
ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ : ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ 11 ವಿದ್ಯಾರ್ಥಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಇದೇ ವೇಳೆ ಸನ್ಮಾನಿಸಿ ಅಭಿನಂದಿಸಿದರು.
ಪತ್ರಿಕಾಗೋಷ್ಟಿಯಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಮಾಜಿ ವಿಧಾನ ಪರಿಷತ್ ಶಾಸಕರಾದ ಪ್ರಸನ್ನ ಕುಮಾರ್, ಆಯನೂರು ಮಂಜುನಾಥ್, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಚೇತನ್ ಕೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್, ದೇವಿಕುಮಾರ್, ಇತರೆ ಮುಖಂಡರು ಹಾಜರಿದ್ದರು.
ಬಾಲ ಕಾರ್ಮಿಕ ಪದ್ಧತಿ: ಕಟ್ಟುನಿಟ್ಟಿನ ಎಚ್ಚರಿಕೆ
ಶಿವಮೊಗ್ಗ: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಜಿಲ್ಲಾಡಳಿತ ಹಾಗೂ ಕಾರ್ಮಿಕ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಕಾನೂನು ಉಲ್ಲಂಘಿಸುವ ಮಾಲೀಕರಿಗೆ ಭಾರೀ ದಂಡ ಹಾಗೂ ಜೈಲು ಶಿಕ್ಷೆಯ ಎಚ್ಚರಿಕೆ ನೀಡಲಾಗಿದೆ.
ಪ್ರಮುಖ ನಿರ್ಬಂಧಗಳು:
14 ವರ್ಷದೊಳಗಿನ ಮಕ್ಕಳು: ಯಾವುದೇ ಅಂಗಡಿ, ವಾಣಿಜ್ಯ ಸಂಸ್ಥೆಗಳು ಅಥವಾ ಉದ್ದಿಮೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.
ಕಿಶೋರ ಕಾರ್ಮಿಕರು (14-18 ವರ್ಷ): 18 ವರ್ಷದೊಳಗಿನ ಕಿಶೋರಾವಸ್ಥೆಯ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ಬಳಸಿಕೊಳ್ಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಕಾನೂನು ಕ್ರಮ ಮತ್ತು ದಂಡ:
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ 2016ರ ತಿದ್ದುಪಡಿ ಕಾಯ್ದೆಯಡಿ ನಿಯಮ ಉಲ್ಲಂಘಿಸುವ ಮಾಲೀಕರ ಮೇಲೆ ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಲಾಗುವುದು:
ತಪ್ಪಿತಸ್ಥ ಮಾಲೀಕರಿಗೆ ₹50,000 ವರೆಗೆ ದಂಡ ವಿಧಿಸಲಾಗುವುದು. ಅಪರಾಧದ ತೀವ್ರತೆಯ ಆಧಾರದ ಮೇಲೆ ಎರಡು ವರ್ಷದವರೆಗೆ ಕಾರಾಗೃಹ ವಾಸದ ಶಿಕ್ಷೆ ವಿಧಿಸಲು ಅವಕಾಶವಿದೆ. ಹಾಗೂ ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಯಲ್ಲಿ ಎಫ್‌ಐಆರ್ ದಾಖಲಿಸಲಾಗುವುದು.
ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲಕಾರ್ಮಿಕರು ಅಥವಾ ಅಪಾಯಕಾರಿ ಕೆಲಸಗಳಲ್ಲಿ ತೊಡಗಿರುವ ಕಿಶೋರ ಕಾರ್ಮಿಕರು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಕಾರ್ಮಿಕ ಇಲಾಖೆ,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಥವಾ ಪೊಲೀಸ್ ಇಲಾಖೆ
ಮಕ್ಕಳ ಸಹಾಯವಾಣಿ ಸಂಖ್ಯೆ: 1098
ಅಲ್ಲದೆ, ಸಾರ್ವಜನಿಕರು ಆನ್‌ಲೈನ್ ಮೂಲಕವೂ ದೂರು ದಾಖಲಿಸಲು ಅವಕಾಶವಿದ್ದು, ತಕ್ಷಣವೇ www.pencil.gov.in ಪೋರ್ಟಲ್‌ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ವೇಣುಗೋಪಾಲ್ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಜಿಲ್ಲಾಡಳಿತ ಹಾಗೂ ಕಾರ್ಮಿಕ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಕಾನೂನು ಉಲ್ಲಂಘಿಸುವ ಮಾಲೀಕರಿಗೆ ಭಾರೀ ದಂಡ ಹಾಗೂ ಜೈಲು ಶಿಕ್ಷೆಯ ಎಚ್ಚರಿಕೆ ನೀಡಲಾಗಿದೆ.
ಪ್ರಮುಖ ನಿರ್ಬಂಧಗಳು:
14 ವರ್ಷದೊಳಗಿನ ಮಕ್ಕಳು: ಯಾವುದೇ ಅಂಗಡಿ, ವಾಣಿಜ್ಯ ಸಂಸ್ಥೆಗಳು ಅಥವಾ ಉದ್ದಿಮೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.
ಕಿಶೋರ ಕಾರ್ಮಿಕರು (14-18 ವರ್ಷ): 18 ವರ್ಷದೊಳಗಿನ ಕಿಶೋರಾವಸ್ಥೆಯ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ಬಳಸಿಕೊಳ್ಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಕಾನೂನು ಕ್ರಮ ಮತ್ತು ದಂಡ:
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ 2016ರ ತಿದ್ದುಪಡಿ ಕಾಯ್ದೆಯಡಿ ನಿಯಮ ಉಲ್ಲಂಘಿಸುವ ಮಾಲೀಕರ ಮೇಲೆ ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಲಾಗುವುದು:
ತಪ್ಪಿತಸ್ಥ ಮಾಲೀಕರಿಗೆ ₹50,000 ವರೆಗೆ ದಂಡ ವಿಧಿಸಲಾಗುವುದು. ಅಪರಾಧದ ತೀವ್ರತೆಯ ಆಧಾರದ ಮೇಲೆ ಎರಡು ವರ್ಷದವರೆಗೆ ಕಾರಾಗೃಹ ವಾಸದ ಶಿಕ್ಷೆ ವಿಧಿಸಲು ಅವಕಾಶವಿದೆ. ಹಾಗೂ ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಯಲ್ಲಿ ಎಫ್‌ಐಆರ್ ದಾಖಲಿಸಲಾಗುವುದು.
ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲಕಾರ್ಮಿಕರು ಅಥವಾ ಅಪಾಯಕಾರಿ ಕೆಲಸಗಳಲ್ಲಿ ತೊಡಗಿರುವ ಕಿಶೋರ ಕಾರ್ಮಿಕರು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಕಾರ್ಮಿಕ ಇಲಾಖೆ,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಥವಾ ಪೊಲೀಸ್ ಇಲಾಖೆ
ಮಕ್ಕಳ ಸಹಾಯವಾಣಿ ಸಂಖ್ಯೆ: 1098
ಅಲ್ಲದೆ, ಸಾರ್ವಜನಿಕರು ಆನ್‌ಲೈನ್ ಮೂಲಕವೂ ದೂರು ದಾಖಲಿಸಲು ಅವಕಾಶವಿದ್ದು, ತಕ್ಷಣವೇ www.pencil.gov.in ಪೋರ್ಟಲ್‌ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ವೇಣುಗೋಪಾಲ್ ತಿಳಿಸಿದ್ದಾರೆ.
ಸಹ್ಯಾದ್ರಿ ಇಂಗ್ಲೀಷ್ ಶಾಲೆಗೆ ಎಸ್ಎಸ್ಎಲ್ ಸಿ ಪರೀಕ್ಷೆ: ಶೇ.100 ಫಲಿತಾಂಶ
ರಾಜೇಂದ್ರನಗರದ 100ಅಡಿ ರಸ್ತೆಯಲ್ಲಿರುವ ಸಹ್ಯಾದ್ರಿ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಲಭಿಸಿದೆ.
ಪರೀಕ್ಷೆ ಎದುರಿಸಿದ 24ಕ್ಕೆ 24ವಿದ್ಯರ‍್ಥಿಗಳೂ ಉತ್ತರ‍್ಣರಾಗಿದ್ದಾರೆ. ಈ ಪೈಕಿ ಪಿ.ಎಸ್., ಅಂಜನಾ ವಿ., ಗೌತಮಿ ಎ. ಡಿಸ್ಟಿಂಕ್ಷನ್‌ನಲ್ಲಿ ಉತ್ತರ‍್ಣರಾಗಿದ್ದು, ಪ್ರಥಮ ರ‍್ಜೆಯಲ್ಲಿ 18, ದ್ವಿತೀಯ ರ‍್ಜೆಯಲ್ಲಿ ೩ ಹಾಗೂ ಕನ್ನಡ ಮಾಧ್ಯಮದಲ್ಲಿ ಅಮೂಲ್ಯ ಸಿ. 506ಅಂಕದೊಂದಿಗೆ (ಶೇ. 80.96) ಉತ್ತರ‍್ಣರಾಗಿದ್ದಾಳೆ.
ಈ ವಿದ್ಯರ‍್ಥಿಗಳಿಗೆ ಮತ್ತು ಶಿಕ್ಷಕ ವೃಂದಕ್ಕೆ ಅಧ್ಯಕ್ಷ ಡಾ. ಕಡಿದಾಳ್ ಗೋಪಾಲ್ ಮತ್ತು ಎಲ್ಲಾ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಡಿಪ್ಲೊಮಾ ಕೋರ್ಸ್ ಗಳಿಗೆ ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಮೈಸೂರು ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ಅಖಿಲ ಭಾರತ ಮಟ್ಟದಲ್ಲಿ 2026-27 ನೇ ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅನುದಾನಿತ ಕೋರ್ಸ್ ಗಳಲ್ಲಿ ಆರ್ಕಿಟೆಕ್ಚರ್ ಅಸಿಸ್ಟೆಂಟ್‌ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಹಾಗೂ ಅನುದಾನ ರಹಿತ ಕೋರ್ಸ್ ಗಳಲ್ಲಿ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್(ಫಾರ್ ವಿಜ್ಯುವಲಿ ಇಂಪೆರ‍್ಡ್), ಅಪಾರೇಲ್ ಡಿಸೈನ್ ಅಂಡ್ ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಂಡ್ ಎಲೆಕ್ಟ್ರಿಕಲ್ ವೆಹಿಕಲ್ ಟೆಕ್ನಾಲಜಿ ಕೋರ್ಸ್ ಗಳು ಲಭ್ಯವಿದೆ.
ಅರ್ಜಿ ಸಲ್ಲಿಸಲು ಕರ್ನಾಟಕ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಶೇ.40 ರಷ್ಟು ಮೇಲ್ಪಟ್ಟ ಮೂಳೆ ಮತ್ತು ಕೀಲು ಅಂಗವಿಕಲತೆ, 60 ಡಿಬಿ ಮೇಲ್ಪಟ್ಟ ಕಿವುಡು ಮತ್ತು ಮೂಗು ಅಂಗವಿಕಲತೆ ಹಾಗೂ ಅಂಧತ್ವ-6/60 ಅಥವಾ 20/200 ಸ್ನೆಲೆನ್‌ಗಳನ್ನು ಲಕ್ಷಣವನ್ನು ಹೊಂದಿರಬೇಕು.
ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯಲಿದೆ. ಪಾಲಿಟೆಕ್ನಿಕ್‌ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಲಿದ್ದು, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯವನ್ನು ಒದಗಿಸಲಾಗುತ್ತದೆ.
ನಿಗಧಿತ ನಮೂನೆ ಅರ್ಜಿಗಾಗಿ ಅರ್ಹ ವಿದ್ಯಾರ್ಥಿಗಳು ಜೆಎಸ್‌ಎಸ್ ವಿಶೇಷಚೇತರ ಪಾಲಿಟೆಕ್ನಿಕ್ ಕಾಲೇಜ್, ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು-570006 ಇಲ್ಲಿಂದ (ಸಾಮಾನ್ಯ ವರ್ಗದವರಿಗೆ ರೂ.100, ಎಸ್‌ಸಿ/ಎಸ್‌ಟಿ/ಸಿ-1 ವರ್ಗದವರಿಗೆ ರೂ.50)ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಜೂ.05 ರೊಳಗಾಗಿ ಕಳುಹಿಸಿ ಪಡೆಯಬಹುದು ಅಥವಾ ವೆಬ್‌ಸೈಟ್ www.jsspda.org ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಅಥವಾ ಮೊ.ಸಂ: 9844644937 ನ್ನು ಸಂಪರ್ಕಿಸಬಹುದು ಎಂದು ಜೆಎಸ್‌ಎಸ್ ವಿಶೇಷಚೇತನ ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ.
