S N Channabasappa ಸ್ವಾವಲಂಬನೆಯ ಪರಿಕಲ್ಪನೆಯೊಂದಿಗೆ ಸ್ವಾದೇಶಿ ಜಾಗರಣ ಮಂಚ್, ಕರ್ನಾಟಕ ವತಿಯಿಂದ ಡಿಸೆಂಬರ್ ತಿಂಗಳ 6 ರಿಂದ 10 ವರೆಗೆ ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ (ಚಂದ್ರಶೇಖರ್ ಆಜಾದ್ ಪಾರ್ಕ್) ಆವರಣದಲ್ಲಿ ನಡೆಯಲಿರುವ ಸ್ವದೇಶಿ ಮೇಳದ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.
S N Channabasappa ಮೊಟ್ಟ ಮೊದಲ ಬಾರಿಗೆ ನಡೆಯುತ್ತಿರುವ ಈ ಮೇಳವೂ ಭಾರತೀಯ ಸಂಸ್ಕೃತಿ ಹಾಗೂ ಪಾರಂಪರೆಯನ್ನು ಪ್ರದರ್ಶಿಸುವ ಹಾಗೂ ಸಾರ್ವಜನಿಕರಿಗೆ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಈ ಮೇಳವು ಹಮ್ಮಿಕೊಳ್ಳಲಾಗಿದೆ.
Priyank Kharge ರಾಜ್ಯದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ 11,170 ಸಿಬ್ಬಂದಿಗೆ ಸೇವಾ ಭದ್ರತೆ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿರುವುದಾಗಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು Priyank Kharge ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
S N Channabasappa ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾವಸಾರ ಕ್ಷತ್ರಿಯ ಸಹೋದರ ಸಂಘದ ವತಿಯಿಂದ ಶಿವಮೊಗ್ಗ ನಗರದ ವೀರ ಸಾವರ್ಕರ್ ನಗರದಲ್ಲಿ (ಡಬಲ್ ರೋಡ್) ನೂತನ ಭಾವಸಾರ ಶಿಶುವಿಹಾರ ಹಾಗೂ ಅಂಗನವಾಡಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.
S N Channabasappa ಈ ಸಂದರ್ಭದಲ್ಲಿ ಹಿರಿಯರಾದ ಕೆ.ಎಸ್ ಈಶ್ವರಪ್ಪನವರು, ಭಾವಸಾರ ಕ್ಷತ್ರಿಯ ಸಮಾಜದ ಪದಾಧಿಕಾರಿಗಳು, ಸಮಾಜದ ಬಾಂಧವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
B. Y. Vijayendra ಪ್ರಜಾಪ್ರಭುತ್ವ, ಸಹಬಾಳ್ವೆ, ವೈವಿಧ್ಯತೆಯಲ್ಲಿ ಏಕತೆಯಂತಹ ಮಹತ್ವದ ಮೌಲ್ಯಗಳನ್ನು ಕಾಪಾಡುವ ಶಕ್ತಿಯಾದ ಭಾರತ ಸಂವಿಧಾನ ದಿನದ ಹಾರ್ದಿಕ ಶುಭಾಶಯಗಳು ಎಂದು ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರು ಜನರಿಗೆ ತಿಳಿಸಿದ್ದಾರೆ.
B. Y. Vijayendra ಸಂವಿಧಾನದ ಆಶಯಗಳು ಇನ್ನಷ್ಟು ಬೇರೂರಲಿ, ಸಂವಿಧಾನದ ಶಕ್ತಿಯೂ ಹೆಚ್ಚಲಿ. ರಾಷ್ಟ್ರೀಯತೆ, ಏಕತೆ, ಸಮಾನತೆ, ಸೋದರತೆಯಂತಹ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ ಎಂದು ಹೇಳಿದ್ದಾರೆ.
Kambala ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾಲ್ಗೊಂಡಿದ್ದರು.
ನಂತರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದರು.
ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ. ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ. ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ. ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಬಂದು ನೋಡುವ, ಪ್ರೋತ್ಸಾಹಿಸುವ ಅವಕಾಶ ದೊರೆತಿದೆ ಎಂದು ಹೇಳಿದರು.
ಹಿಂದೊಮ್ಮೆ ಉಡುಪಿ ಹಾಗೂ ಬಂಟ್ವಾಳ ಭಾಗದಲ್ಲಿ ಕಂಬಳ ಉದ್ಘಾಟಿಸಿದ್ದೆ. ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಜನರ ಕಲೆಯನ್ನು ಬಹಳ ಜನ ಮೈಗೂಡಿಸಿಕೊಂಡಿದ್ದಾರೆ. ಬಹಳ ಜನ ಇದಕ್ಕೆ ಪ್ರೋತ್ಸಾಹ ನೀಡುತ್ತಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆ ಇದ್ದಂತೆ ಕಂಬಳದಲ್ಲಿ ಕೋಣಗಳಿಗೆ ನೊಗ ಹಾಕಿ ಓಡಿಸುತ್ತಾರೆ. ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಕೋಣ ಸಾಕಲು ಒಂದು ವರ್ಷಕ್ಕೆ 15 ಲಕ್ಷದವರೆಗೆ ವೆಚ್ಚವಾಗುತ್ತದೆ. ತಿಂಗಳಿಗೆ 1 ಲಕ್ಷಕ್ಕಿಂತ ಹೆಚ್ಚಾಗುತ್ತದೆ. ನವೆಂಬರ್, ಡಿಸೆಂಬರ್, ಫೆಬ್ರವರಿ ಮಾರ್ಚ್ ತಿಂಗಳುಗಳಲ್ಲಿ ವ್ಯವಸಾಯ ಇಲ್ಲದಿದ್ದಾಗ ಜನ ಜಾನುವಾರುಗಳ ಉತ್ಸವ ಮಾಡಿ ಮನರಂಜನೆ ಪಡೆಯುತ್ತಿದ್ದರು. ಗದ್ದೆಗಳಲ್ಲಿ ಮಣ್ಣನ್ನು ಹದಗೊಳಿಸಿ ಕಂಬಳ ಆಡಿಸುತ್ತಿದ್ದರು. ಕೋಣಗಳನ್ನು ಓಡುವವರಿಗೆ ಅಭ್ಯಾಸವಿರಬೇಕು. ಕ್ರೀಡಾಪಟುವಾಗಿದ್ದರೆ ಮಾತ್ರ ಕೋಣಗಳ ಜೊತೆಗೆ ಓಡಲು ಸಾಧ್ಯ ಎಂದು ತಿಳಿಸಿದರು.
Kambala ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು. ನವೆಂಬರ್, ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಿದರೆ ಜನ ನೋಡುತ್ತಾರೆ. ಇದೊಂದು ಮನರಂಜನೆಯ ಕ್ರೀಡೆಯಾಗುತ್ತದೆ. ಜಲ್ಲಿಕಟ್ಟು, ಕಂಬಳ ನಡೆಸಬಾರದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದಕ್ಕೆ ಸುಗ್ರೀವಾಜ್ಞೆ ಹೊರಡಿಸಿ ಜನಪ್ರಿಯ ಕ್ರೀಡೆ ಉಳಿಸುವ ಕೆಲಸವಾಗಿದೆ. ಇದನ್ನು ಬೆಳಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಮುದಾಯ ಭವನಕ್ಕಾಗಿ ನಿವೇಶನ ಕೋರಿದ್ದು, ಇದಕ್ಕೂ ನಾವು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
Constitution Day ಸಂವಿಧಾನ ದಿನಾಚರಣೆಯ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಆವರಣದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ Constitution Day ಸಲ್ಲಿಸಿದರು.
Samanvaya Trust ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ನಗರದ ಏರ್ಪೋರ್ಟ್ ರಸ್ತೆಯ ಒಡ್ಡಿನಕೊಪ್ಪ ಬಳಿ ಇರುವ ಪೋಧಾರ್ ಇಂಟರ್ನ್ಯಾಷನಲ್ ಶಾಲೆ ಬಳಿ ಸಮನ್ವಯ ಟ್ರಸ್ಟ್ ನ ವತಿಯಿಂದ ನಿರ್ಮಿಸಿರುವ ನೂತನ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Samanvaya Trust ಈ ಸಂಧರ್ಭದಲ್ಲಿ ಗೊಣಿಬೀಡು ಮಠದ ಡಾ. ಸಿದ್ದಲಿಂಗ ಮಹಾಸ್ವಾಮಿಗಳು, ಅವಧೂತರಾದ ಅರ್ಜುನ್ ಗುರೂಜಿ, ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್, ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ, ಖ್ಯಾತ ನಟಿ ಪ್ರೇಮಾ, ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಮಂಜುನಾಥ ಗೌಡರು ಹಾಗೂ ಸಮನ್ವಯ ಟ್ರಸ್ಟ್ ನ ಸಮನ್ವಯ ಕಾಶಿ ಹಾಗೂ ತಂಡದವರು, ಸ್ಥಳಿಯರು ಉಪಸ್ಥಿತರಿದ್ದರು.
Samanvaya Trust ಸಮಾಜದ ಒಳಿತಿಗೆ ಹಾಗೂ ಉತ್ತಮ ಯುವ ಸಮೂಹ ನಿರ್ಮಾಣ ಮಾಡಲು ಸಲ್ಲಿಸುವ ಸೇವೆಯು ಅತ್ಯಂತ ಶ್ರೇಷ್ಠ ಕಾರ್ಯ ಎಂದು ಹೊಸನಗರ ಮೂಲೆಗದ್ದೆ ಸದಾಶಿವಾಶ್ರಮದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಅಭಿಪ್ರಾಯಪಟ್ಟರು.
ಶಿವಮೊಗ್ಗ ನಗರದ ಏರ್ ಪೋರ್ಟ್ ರಸ್ತೆಯಲ್ಲಿರುವ ಪೋದಾರ್ ಶಾಲೆಯ ಸಮೀಪದಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ನಿರ್ಮಿಸಿರುವ ಅಧ್ಯಯನ ಕೇಂದ್ರ “ಕೆ.ಎ.ದಯಾನಂದ ಐಎಎಸ್ ವಾಚನಾಲಯ” ಲೋಕಾರ್ಫಣೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ನಿಸ್ವಾರ್ಥ ಮನೋಭಾವದಿಂದ ಯುವಸಮೂಹದಲ್ಲಿ ಪ್ರೇರಣೆ ತುಂಬುವ ಕಾರ್ಯ ನಡೆಸುತ್ತಿದ್ದು, ಸಮಾಜದ ಸದೃಢ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುವ ಶಕ್ತಿಯಾಗಿ ಯುವಜನರನ್ನು ಸಿದ್ಧಪಡಿಸುವ ಕಾರ್ಯ ಅಧ್ಯಯನ ಕೇಂದ್ರದಿಂದ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರಿನ ಶ್ರೀ ಅರ್ಜುನ ಅವಧೂತ ಮಹರಾಜರು ಮಾತನಾಡಿ, ತಂದೆ ತಾಯಿಯರ ಸೇವೆ ಸಲ್ಲಿಸುವುದು ಪ್ರತಿಯೊಬ್ಬ ವ್ಯಕ್ತಿ ಮಾಡಬೇಕಾದ ಪುಣ್ಯದ ಕೆಲಸ ಹಾಗೂ ಸಂಕಷ್ಟದಲ್ಲಿ ಇರುವ ಜನರಿಗೆ ನೆರವು ಒದಗಿಸುವ ಕೆಲಸ ಮಾಡಬೇಕು. ಸಮಾಜಕ್ಕಾಗಿಯೇ ದುಡಿಯುವ ಮೂಲಕ ಸಾವಿರಾರು ಜನರಿಗೆ ಪ್ರೇರಣಾ ಶಕ್ತಿಯಾಗಿ ಸಮನ್ವಯ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಸಮನ್ವಯ ಟ್ರಸ್ಟ್ ದಶಕಗಳಿಂದ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದು, ಇದೀಗ ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಯುವ ಆಕಾಂಕ್ಷಿಗಳಿಗೆ ಮಾರ್ಗದರ್ಶನ ನೀಡುವ ಕೆಲಸ ಮಾಡಲು ಮುಂದಾಗಿದೆ. ಅತ್ಯಂತ ಯಶಸ್ವಿಯಾಗಿ ಸೇವಾ ಕಾರ್ಯ ಮುಂದುವರೆಯಬೇಕು ಎಂದು ಆಶಿಸಿದರು. ಸಮನ್ವಯ ಟ್ರಸ್ಟ್ ವತಿಯಿಂದ ನಿರ್ಮಾಣ ಮಾಡಿರುವ ನೂತನ ಕಟ್ಟಡದಲ್ಲಿ “ಕೆ.ಎ.ದಯಾನಂದ ಐಎಎಸ್, ರಾಜ್ಯದ ಮೊದಲ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ವಾಚನಾಲಯ”, ಅಲ್ಲಮ ಪ್ರಭು ಜ್ಞಾನ ಮಂದಿರ, ಅತಿಥಿಗೃಹ, ಕುವೆಂಪು ಅಂಗಳ ಹಾಗೂ ಸಮನ್ವಯ ಕಾರ್ಯಾಲಯ ಕೂಡ ಕಾರ್ಯ ನಿರ್ವಹಿಸಲಿದೆ. Samanvaya Trust ಗೋಣಿಬೀಡು ಶೀಲಸಂಪಾದನಾ ಮಠದ ಶ್ರೀ ಡಾ. ಸಿದ್ಧಲಿಂಗ ಸ್ವಾಮೀಜಿ, ಶಿವಮೊಗ್ಗ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿ, ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಎಲ್ಸಿ ಡಿ.ಎಸ್.ಅರುಣ್, ಎಸ್.ರುದ್ರೇಗೌಡ, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ನಟಿ ಪ್ರೇಮಾ ಹಾಜರಿದ್ದರು. ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಕೆ.ಎಂ.ಗಿರಿಜಾದೇವಿ, ಟ್ರಸ್ಟಿ ವಿಕ್ರಂ.ಎ.ವಿ, ನಿರ್ದೇಶಕ ಸಮನ್ವಯ ಕಾಶಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಎಚ್.ಎಂ.ಸುರೇಶ್, ಪ್ರಮುಖರಾದ ಆರ್.ಎಂ.ಮಂಜುನಾಥ್ಗೌಡ, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಎನ್.ಗೋಪಿನಾಥ್, ಬಿ.ಗೋಪಿನಾಥ್ ಮತ್ತಿತರರು ಉಪಸ್ಥಿತರಿದ್ದರು
Sri Ramakrishna Vidyaniketan School ಮಾನವೀಯ ಮೌಲ್ಯಗಳು ಮುಂದಿನ ಸಮಾಜಕ್ಕೆ ಅತಿ ಅವಶ್ಯಕ. ಇಂದಿನ ಮಕ್ಕಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಹಾಗೂ ಹಿರಿಯರು, ತಂದೆ-ತಾಯಿಯರನ್ನು ಗೌರವಿಸುವಂತಹ ತಿಳುವಳಿಕೆ ನೀಡುವುದು ಅತಿ ಮುಖ್ಯವಾಗಿದೆ ಎಂದು ರಾಣೆಬೆನ್ನೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ಪ್ರಕಾಶನಂದ ಜೀ ಮಹಾರಾಜ್ ತಿಳಿಸಿದರು.
ಅವರು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ವಾರ್ಷಿಕೋತ್ಸವ, ಚಿಣ್ಣರ ಚಿಲುಮೆ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡುತ್ತಾ, ಮಕ್ಕಳಿಗೆ ಪೋಷಕರು ವೈದ್ಯನಾಗು, ಇಂಜಿನಿಯರಿಂಗ್ ಆಗು ಎಂದು ಒಂದೇ ವಿಷಯದ ಮೇಲೆ ಒತ್ತಡ ಹಾಕಬೇಡಿ. ಮಕ್ಕಳ ಅಭಿರುಚಿಗೆ ತಕ್ಕಂತೆ ಬೆಳೆಯಲು ಅವಕಾಶ ನೀಡಿ. ಉತ್ತಮ ಪ್ರಜೆಯನ್ನಾಗಿ ರೂಪಿಸಿ ಎಂದು ಕಿವಿಮಾತು ಹೇಳಿದರು.
ಸ್ವಾಮಿ ವಿವೇಕಾನಂದರ ಘೋಷಣೆಯಂತೆ ಜ್ಞಾನಾರ್ಜನೆಯೇ ಶಿಕ್ಷಣವಲ್ಲ. ಕಲಿತ ಜ್ಞಾನವನ್ನು ತನ್ನ ಹಾಗೂ ಸಮಾಜದ ಅಭ್ಯುದಯಕ್ಕೆ ಹೇಗೆ ಬಳಸಿಕೊಳ್ಳಬೇಕು. ಸುಂದರ ದೇಶವನ್ನು ಹೇಗೆ ಕಟ್ಟಬೇಕು ಎನ್ನುವುದನ್ನು ಮಕ್ಕಳು ಕಲಿಯಬೇಕು. ದೇಶ ಕಟ್ಟುವ ಕೆಲಸವೆಂದರೆ ತಾವು ಮಾಡುವ ಕೆಲಸಗಳಲ್ಲಿ ಪ್ರಮಾಣೀಕತೆಯನ್ನು ಬೆಳೆಸಿಕೊಳ್ಳಬೇಕು ಎಂದ ಅವರು ಪೋಷಕರು ಹಾಗೂ ಶಿಕ್ಷಕರು ಮಕ್ಕಳ ಮನದಲ್ಲಿ ನೈತಿಕ ಮೌಲ್ಯಗಳನ್ನು ಕ್ರೂಢಿಕರಿಸಬೇಕು ಎಂದರು.
ಮಕ್ಕಳ ಬದಲಾವಣೆಯನ್ನು ಗಮನಿಸಲು ಎಸ್ಪಿ ಕರೆ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಇಂದಿನ ಸಮಾಜದಲ್ಲಿ ಹೆಚ್ಚು ಮಕ್ಕಳು ಬೇರೆ ಬೇರೆ ಆಮಿಷಗಳಿಗೆ ಒಳಗಾಗುತ್ತಿದ್ದಾರೆ. ಪೋಷಕರು ಹಾಗೂ ಶಿಕ್ಷಕರು ಪ್ರತಿ ಮಕ್ಕಳ ನಡವಳಿಕೆಯನ್ನು ಗಮನಿಸಬೇಕು. ಮಕ್ಕಳು ತಪ್ಪು ಮಾಡಿದರೆ ಆದು ಆ ಕ್ಷಣಕ್ಕೆ ಮಾಡಿದ ತಪ್ಪಲ್ಲ. ಪೂರ್ವದಿಂದಲೇ ಆ ಕೆಲಸಕ್ಕೆ ಕೈ ಹಾಕಿರುತ್ತದೆ. ಅದನ್ನು ಗಮನಿಸುವ ಮೂಲಕ ಆರಂಭದಲ್ಲೇ ಮಕ್ಕಳಿಗೆ ಕೌನ್ಸಿಲಿಂಗ್ ಮಾಡಿ ತಿದ್ದುವ ಕೆಲಸ ಮಾಡಬೇಕಿದೆ ಎಂದರು. ಇಂದು ಮಕ್ಕಳು ಹೊಂದುವ ಗೆಳೆತನದ ಬಗ್ಗೆ ಯೋಚಿಸುವಂತೆ ತಿಳಿಹೇಳ ಬೇಕಿದೆ. ಒಳ್ಳೆಯವರ ಗೆಳೆತನ ಸಾಕಷ್ಟು ಒಳ್ಳೆದನ್ನು ನೀಡಿದರೆ ದುಷ್ಟ ಮನಸ್ಸುಗಳ ಗೆಳೆತನ ಸಮಾಜ ವ್ಯವಸ್ಥೆಯನ್ನೇ ಅಲ್ಲೊಲ-ಕಲ್ಲೋಲ ಮಾಡುತ್ತದೆ. ಅದನ್ನು ಮಕ್ಕಳ ಮನದಲ್ಲಿ ಉದಾಹರಣೆಗಳ ಮೂಲಕ ಬಿಂಬಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕಿದೆ ಎಂದರು.
Sri Ramakrishna Vidyaniketan School ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ನಾಗರಾಜ್ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ರಾಮಕೃಷ್ಣ ವಿದ್ಯಾನಿಕೇತನ ಅಧ್ಯಕ್ಷ ಡಾ.ಡಿ.ಆರ್.ನಾಗೇಶ್ ವಹಿಸಿದ್ದು, ಕಾರ್ಯದರ್ಶಿ ಶೋಭಾ ವೆಂಕಟರಮಣ, ಮುಖ್ಯ ಶಿಕ್ಷಕ ತೀರ್ಥೆಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಂಸ್ಥೆಯ ಪ್ರಮುಖರಾದ ಡಿ.ಆರ್.ದೇವರಾಜ್ ಅವರು ಪ್ರಸ್ತಾವಿಕವಾಗಿ ಕಾಮಕೃಷ್ಣ ಶಾಲೆಯ ಯಶಸ್ಸಿನ ಬಗ್ಗೆ ವಿವರಣೆ ನೀಡಿದರು.