Friday, August 7, 2026
Friday, August 7, 2026
Home Blog Page 121

ಮೊಬೈಲ್ ರಿಪೇರಿ, ಟೈಲರಿಂಗ್, ಬ್ಯೂಟಿ ಪಾರ್ಲರ್,ಹೈನುಗಾರಿಕೆ ಉಚಿತ ತರಬೇತಿ. ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದ ಪ್ರಕಟಣೆ

0

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 49 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.

ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

30 ದಿನಗಳ
ಮೊಬೈಲ್ ಫೋನ್ ರಿಪೇರ್ & ಸರ್ವಿಸಸ್ ತರಬೇತಿಯು
02/05/2026ರಿಂದ ಆರಂಭಗೊಳ್ಳಲಿದೆ.

06 ದಿನಗಳ
ವಿಭಿನ್ನ ಶೈಲಿಯ ಬ್ಲೌಸ್ ಡಿಸೈನಿಂಗ್ ಅನ್ನು
04/05/2026 ರಿಂದ ಆರಂಭಗೊಳ್ಳಲಿದೆ.

35 ದಿನಗಳ
ಬ್ಯೂಟಿ ಪಾರ್ಲರ್ ಮ್ಯಾನೇಜ್ಮೆಂಟ್
12/05/2026 ರಿಂದ ಆರಂಭಗೊಳ್ಳಲಿದೆ.

12 ದಿನಗಳ
ಹೈನುಗಾರಿಕೆ & ಎರೆಹುಳೂ ಗೋಬ್ಬರ ತಯಾರಿಕೆ ಇತ್ಯಾದಿ ) ತರಬೇತಿಯು
14/05/2026 ರಿಂದ ಆರಂಭಗೊಳ್ಳಲಿದೆ.

10 ದಿನಗಳ
ಅಣಬೆ ಬೇಸಾಯ ತರಬೇತಿಯು
20/05/2026ರಿಂದ ಆರಂಭಗೊಳ್ಳಲಿದೆ.

ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು- 577 216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.9481955721, 9743429595, 9164411580, 9632961707, 8722384541, 9449371579 ಗೆ ಸಂಪರ್ಕಿಸಬಹುದಾಗಿದೆ

₹15 ಕೋಟಿ ವೆಚ್ಚದಲ್ಲಿ ‘ಟಿಎಂಎಇ’ ಆಯುರ್ವೇದ ಕಾಲೇಜಿನ ನೂತನ ಕಟ್ಟಡ ನಿರ್ಮಾಣ- ಜಿ.ಎ.ಹಿರೇಮಠ್.

0

ಹರಪನಹಳ್ಳಿ ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷರೂ ಟಿಎಂಎಇ ಸೊಸೈಟಿಯ ಅಧ್ಯಕ್ಷರೂ ಆಗಿರುವ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿಯವರು ಭಾರತೀಯ ಪಾರಂಪರಿಕ ವೈದ್ಯ ಪದ್ಧತಿಯಾದ ಆಯುರ್ವೇದ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಟಿಎಂಎಇಎಸ್ ಆಯುರ್ವೇದ ಕಾಲೇಜಿನ ನೂತನ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಟಿಎಂಎಇಎಸ್ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಜಿ.ಎ. ಹಿರೇಮಠ ತಿಳಿಸಿದರು.

ತಾಲೂಕಿನ ನಿದಿಗೆಯಲ್ಲಿರುವ ಟಿಎಂಎಇಎಸ್ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಏ. 24ರ ಶುಕ್ರವಾರ ಬೆಳಿಗ್ಗೆ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿಯವರ 33ನೇ ವರ್ಧಂತ್ಯುತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಉಚಿತ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಅಕ್ಷರ ದಾಸೋಹಿಗಳು ಹಾಗೂ ಶೈಕ್ಷಣಿಕ ಕ್ಷೇತ್ರದ ಹರಿಕಾರರು ಆಗಿರುವ ಶ್ರೀ ವರಸದ್ಯೋಜಾತ ಶಿವಾಚಾರ್ಯರು ಧರ್ಮ ಮತ್ತು ತತ್ವ ಜಾಗೃತಿ, ಶಿಕ್ಷಣ ಹಾಗೂ ಜ್ಞಾನ ಪ್ರಸಾರ, ಗುರು-ವಿರಕ್ತ ಪರಂಪರೆ ಸೇರಿದಂತೆ ಒಟ್ಟಾರೆಯಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಕಂಕಣ ಬದ್ಧರಾಗಿದ್ದಾರೆ. ಟಿಎಂಎಇಎಸ್ ಸಂಸ್ಥೆಯ ಮೂಲಕ ಇವರು ನಾಡಿನಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಉಂಟು ಮಾಡುತ್ತಿದ್ದಾರೆಂದರು.

ಟಿಎAಎಇಎಸ್ ವತಿಯಿಂದ ರಾಜ್ಯದ ಏಳು ಜಿಲ್ಲೆಗಳಲ್ಲಿ 72 ವಿದ್ಯಾಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಈವರೆಗೆ ಈ ವಿದ್ಯಾಸಂಸ್ಥೆಗಳ ಮೂಲಕ ಒಂದು ಲಕ್ಷದ 80 ಸಾವಿರಕ್ಕೂ ಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣ ಪೂರೈಸಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅಲ್ಲದೆ 18 ಸಾವಿರದಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಪ್ರಾAಶುಪಾಲರಾದ ರುದ್ರಾಂಬಿಕ ಬಿರಾದಾರ್, ಉಪ ಪ್ರಾಂಶುಪಾಲ ಡಾ. ಸದಾನಂದ ಜೋಶಿ, ಡಾ.ಎಸ್.ವಿ. ಪ್ರಶಾಂತ್, ಡಾ. ರಮ್ಯಾ, ಡಾ. ಮಲ್ಲಿಕಾ ನಡುಮನಿ, ಡಾ.ಎಂ.ಎಲ್. ಅಶೋಕ್, ಆರ್ ಎಂಓ ಡಾ. ಶುಕ್ಲದಾಸ್, ಸಂತೋಷ್ ಕುಮಾರ್ ವಿ., ಡಾ. ಅರ್ಪಿತ, ಡಾ. ಅನುಷಾ, ಡಾ. ತೀರ್ಥಶ್ರೀ, ಡಾ. ಯಶೋಧ, ರೂಪ, ರೇಖಾ ಮತ್ತಿತರರು ಉಪಸ್ಥಿತರಿದ್ದರು.

ಆದಿಚುಂಚನಗಿರಿ ಶಾಲೆಯ ಕು.ವಿ.ರುಚಿತ,ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶೇ.97.44 ಸಾಧನೆ

0

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಗರದ ಶ್ರೀ ಆದಿ ಚುಂಚನಗಿರಿ ಶಾಲೆ ವಿದ್ಯಾ ರ್ಥಿನಿ ರುಚಿತ.ವಿ ಅವರಿಗೆ ೬೦೭ ಅಂಕ ಪಡೆದು ಶೇ.97.44 ಫಲಿತಾಂಶ ಲಭಿಸಿದೆ. ಈ ಪ್ರತಿ ಭಾನ್ವಿತೆ ವಿಜ ಯ್,ಶೋಭಾ ದಂಪತಿಗಳ ಪುತ್ರಿ.

ಎಐ ತಂತ್ರಜ್ಞಾನ:ಪೂರಕ ಕೌಶಲ್ಯ ಮತ್ತು ಜ್ಞಾನ ಹೆಚ್ಚಿಸಿಕೊಂಡಲ್ಲಿ ಸಮಸ್ಯೆ ನಿವಾರಿಸಬಹುದು- ಸಿ.ಎಸ್.ಷಡಕ್ಷರಿ

0

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಆಧುನಿಕ ಜಗತ್ತಿನ ಅತಿದೊಡ್ಡ ಕ್ರಾಂತಿಯಾಗಿದ್ದು, ಶಿಕ್ಷಣ ಸೇರಿದಂತೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಈ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುತ್ತಿದೆ. ಭಾವಿ ಶಿಕ್ಷಕರಾಗಿರುವ ಪ್ರಶಿಕ್ಷಣಾರ್ಥಿಗಳು ಡಿಜಿಟಲ್ ಸಾಕ್ಷರತೆ, ಕೌಶಲ್ಯತೆ ಮೂಲಕ ಎಐ ತಂತ್ರಜ್ಞಾನದ ಸವಾಲು ಸ್ವೀಕರಿಸಿ ಯಶಸ್ಸು ಸಾಧಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಕರೆ ನೀಡಿದರು.

ಶಿವಮೊಗ್ಗ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಶಿವಮೊಗ್ಗ ತಾಲೂಕಿನ ಕುಂಸಿಯಲ್ಲಿ ಹಮ್ಮಿಕೊಂಡಿರುವ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಎಐ ತಂತ್ರಜ್ಞಾನ ಉದ್ಯೋಗಾವಕಾಶಗಳ ಮೇಲೆ ಪ್ರಭಾವ ಬೀರಲಿದ್ದು, ಯಾಂತ್ರೀಕರಣದಿಂದಾಗಿ ಸಾಂಪ್ರದಾಯಿಕ ಉದ್ಯೋಗಗಳು ಕಡಿಮೆಯಾಗುವ ಸಾಧ್ಯತೆ ಇದೆ. ಹೊಸ ತಂತ್ರಜ್ಞಾನಕ್ಕೆ ಪೂರಕವಾಗಿ ಕೌಶಲ್ಯ ಮತ್ತು ಜ್ಞಾನ ಹೆಚ್ಚಿಸಿಕೊಂಡಲ್ಲಿ ಸಮಸ್ಯೆ, ಸಂಕೋಲೆಗಳನ್ನು ಸಮರ್ಥವಾಗಿ ಎದುರಿಸಬಹುದು.

ಸರ್ಕಾರಿ ಅಥವಾ ಖಾಸಗಿ ಕ್ಷೇತ್ರದಲ್ಲಿನ ಕೆಲಸಗಳಿಗೆ ಜೋತು ಬೀಳದೆ ಸ್ವಸಾಮರ್ಥ್ಯದ ಮೇಲೆ ಸ್ವಯಂ ಉದ್ಯೋಗಾವಕಾಶಗಳನ್ನು ಸೃಷ್ಟಿಸಿಕೊಳ್ಳಬಹುದೆಂದರು.

ದುಡ್ಡೇ ದೊಡ್ಡಪ್ಪ ಎನ್ನುವ ಕಾಲ ಇದಲ್ಲ. ಇದು ಜ್ಞಾನಕ್ಕೆ ಮನ್ನಣೆ ಇರುವ ಕಾಲಮಾನ. ಆಲೋಚನೆ, ಯೋಜನೆ, ಯೋಚನೆ ಮೂಲಕ ವ್ಯವಸ್ಥೆ ರೂಪಿಸುವ ಶಕ್ತಿ ಹೊಂದಿದವರಿಗೆ ಮನ್ನಣೆ, ಮಾನ್ಯತೆ ದೊರೆಯುತ್ತಿದೆ. ಜ್ಞಾನ, ವಿಜ್ಞಾನ, ತಂತ್ರಜ್ಞಾನವನ್ನು ಬಳಸಿಕೊಳ್ಳುವವರಿಗೆ ಸಾಕಷ್ಟು ಅವಕಾಶಗಳು ದೊರೆಯುತ್ತವೆ ಎಂದರು.

ಒಂದು ಕಾಲಘಟ್ಟದಲ್ಲಿ ರಾಜ್ಯದಲ್ಲಿ 700ರಿಂದ 800 ಡಿಇಡಿ ಕಾಲೇಜುಗಳಿದ್ದವು. ಆದರೆ ಈ ಕಾಲೇಜುಗಳು ಬಹುತೇಕ ಮುಚ್ಚಿವೆ. ಜಿಲ್ಲೆಯಲ್ಲಿ ಡಯಟ್‌ನಲ್ಲಿ ಮಾತ್ರ ಡಿಇಡಿ ಇದ್ದು, ನಾಲ್ವರು ವಿದ್ಯಾರ್ಥಿಗಳಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಎಐ ತಂತ್ರಜ್ಞಾನ ದಾಪುಗಾಲು ಇಡುತ್ತಿರುವುದರಿಂದ ಬಿಇಡಿ ಕಾಲೇಜಿಗೂ ಸಹ ಇದೇ ಪರಿಸ್ಥಿತಿ ಬರಬಹುದು. ಪ್ರಶಿಕ್ಷಣಾರ್ಥಿಗಳಿಗೆ ಕಠಿಣ ಸವಾಲು ಎದುರಾಗಬಹುದು. ಆದರೆ ಭವಿಷ್ಯದ ಬಗ್ಗೆ ಆತಂಕಕ್ಕೆ ಒಳಗಾಗದೆ ಬುದ್ದಿವಂತಿಕೆಯಿಂದ ಬದುಕನ್ನು ಕಟ್ಟಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳಿಗೆ ಅಕಾಡೆಮಿಕ್ ಜ್ಞಾನ ಇದ್ದರಷ್ಟೇ ಸಾಲದು. ಬದುಕಿನ ಕೌಶಲ್ಯತೆ, ಸಮಸ್ಯೆ ಮತ್ತು ಸಮಸ್ಯೆಗಳನ್ನು ಎದೆಗುಂದದೆ ಎದುರಿಸುವ ಸದೃಢ ಮನೋಭಾವ, ದೇಶಭಕ್ತಿ, ಸೇವಾ ಮನೋಭಾವ, ಸಾಮಾಜಿಕ ಕಾಳಜಿ ಇರಬೇಕು. ಇವುಗಳನ್ನು ಕಲಿಸುವ ನಿಟ್ಟಿನಲ್ಲಿ ಎನ್‌ಎಸ್‌ಎಸ್ ಮಹತ್ವದ ಪಾತ್ರ ವಹಿಸುತ್ತದೆ. ಈ ಕಾರಣಕ್ಕಾಗಿಯೇ ಪ್ರತಿ ಕಾಲೇಜುಗಳಲ್ಲಿ ಎನ್‌ಎಸ್‌ಎಸ್ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆಯಬೇಕೆಂದು ಹೇಳಿದರಲ್ಲದೆ ತಾವೂ ಸಹ ಕಾಲೇಜು ಓದುವಾಗ ಎನ್‌ಎಸ್‌ಎಸ್ ಸೇವಾರ್ಥಿಯಾಗಿದ್ದನ್ನು ಸ್ಮರಿಸಿಕೊಂಡರು.

ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಕೆ.ಪಿ. ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷ ದಜೆ.ಎಲ್. ಪದ್ಮನಾಭ್, ಎನ್.ಎ. ಮಾದೇಶ್ ಹೆಗ್ಡೆ, ಎನ್.ಹೆಚ್. ನಾಗರಾಜ್ ನೀರುಳ್ಳಿ, ಬೇಳೆಗದ್ದೆ ಪ್ರಭಾಕರ್, ಪ್ರಾಂಶುಪಾಲ ಡಾ.ಜಿ. ಮಧು, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್, ಗ್ರಾಪಂ ಉಪಾಧ್ಯಕ್ಷೆ ಕೆ.ಪಿ. ಶಾರದಾ, ಶಿಕ್ಷಕರ ಸಂಘದ ದಿನೇಶ್, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಎನ್.ಜೆ. ಪ್ರಕಾಶ್, ಮಹಾವಿದ್ಯಾಲಯದ ಕಚೇರಿ ಮೇಲ್ವಿಚಾರಕಿ ಕಾವ್ಯ, ಕೆ.ಎಸ್. ಸಂಜಯ್ ಉಪಸ್ಥಿತರಿದ್ದರು.

ರಾಜ್ಯದ ಪ್ರತೀ ವಿದ್ಯಾರ್ಥಿಗೂ ಅತ್ಯುತ್ತಮ ಶಿಕ್ಷಣ ಮತ್ತು ಸೌಲಭ್ಯ ಒದಗಿಸಲು ಸರ್ಕಾರ ಬದ್ಧ- ಮಧು ಬಂಗಾರಪ್ಪ

0

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ಮುಂಬರುವ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿ ಮಧು ಬಂಗಾರಪ್ಪ ಅವರು ಮಹತ್ವದ ಸಭೆ ನಡೆಸಿದರು.

ಸಭೆಯಲ್ಲಿ ಮುಖ್ಯವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ಕುರಿತು, ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳ ಪೂರೈಕೆ, ಮುಂಬರುವ ದಾಖಲಾತಿ ಆಂದೋಲನ, ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಸುಧಾರಣೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿ, ಅಗತ್ಯ ನಿರ್ದೇಶನಗಳನ್ನು ನೀಡಿದರು.

ರಾಜ್ಯದ ಪ್ರತಿಯೊಬ್ಬ ವಿದ್ಯಾರ್ಥಿಗೂ ಅತ್ಯುತ್ತಮ ಶಿಕ್ಷಣ ಮತ್ತು ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ.

ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ಮಹೇಶ್, ಆಯುಕ್ತರಾದ ಶ್ರೀ ವಿಕಾಸ್ ಕಿಶೋರ್ ಸುರಳ್ಕರ್, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರಾದ ಶ್ರೀ ಜಿ. ಜಗದೀಶ, ಯೋಜನಾ ನಿರ್ದೇಶಕಿ ಶ್ರೀಮತಿ ವಿದ್ಯಾಕುಮಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಶ್ರೀ ಭರತ್ ಎಸ್, ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಗುರುಪುರ ಬಿಜಿಎಸ್ ಶಾಲೆಗೆ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

0

ಶಿವಮೊಗ್ಗ ಹೊರ ವಲಯದಲ್ಲಿರುವ ಗುರುಪುರದ ಬಿಜಿಎಸ್ ಪ್ರೌಢಶಾಲಾ ವಿಭಾಗದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿರುವುದು ವಿಶೇಷ ಸಂಗತಿ.

ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳು 84, ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು 83,ಅತ್ಯುನ್ನತ ಶ್ರೇಣಿಯಲ್ಲಿ18,ಉನ್ನತ ಶ್ರೇಣಿಯಲ್ಲಿ 23, ಪ್ರಥಮ ಶ್ರೇಣಿಯಲ್ಲಿ19,ದ್ವಿತೀಯ ದರ್ಜೆಯಲ್ಲಿ12, ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ.ಶೇ 98.8 ಫಲಿತಾಂಶ ಬಂದಿರುತ್ತದೆ.

ಗ್ರಾಮೀಣ ಭಾಗದ ಹೆಚ್ಚು ಮಕ್ಕಳನ್ನು ಹೊಂದಿರುವ ಈ ಪ್ರೌಢಶಾಲೆಯಲ್ಲಿ ನುರಿತ ಶಿಕ್ಷಕರು ಗುರುಕುಲ ಮಾದರಿಯಲ್ಲಿ ವಸತಿ ವ್ಯವಸ್ಥೆಯ ಸಹಿತ ಶಿಕ್ಷಣ ನೀಡುತ್ತಿರುವುದು ಫಲಿತಾಂಶ ಹೆಚ್ಚಳಕ್ಕೆ ಕಾರಣವಾಗಿದೆ.

ಈ ಶಿಕ್ಷಣ ಸಂಸ್ಥೆಯ ಆವಣದಲ್ಲಿ ಸುಂದರ ಪ್ರಕೃತಿಯ ವಾತಾವರಣವಿದ್ದು, ಸುಸಜ್ಜಿತವಾದ ಕೊಠಡಿಗಳು, ಗ್ರಂಥಾಲಯ, ಕ್ರೀಡಾಂಗಣ,ಪ್ರಯೋಗಾಲಯ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಕಂಡು ಬರುವುದು ಮತ್ತೊಂದು ವಿಶೇಷ.

ಪ್ರತೀಕ್ಷಾ ಎನ್.ಆರ್.625ಕ್ಕೆ 614 ಅಂಕ ಪಡೆದು, ಶಾಲೆಗೆ ಪ್ರಥಮ ಸ್ಥಾನ ಪಡೆದರೆ,ಸುಬ್ರಮಣ್ಯ ಆರ್. 625 ಕ್ಕೆ 607 ಅಂಕಗಳಿಸುವ ಮೂಲಕ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಾನ್ವಿ ಎಂ.605, ಪ್ರೀತಮ್ ಎಲ್. 603, ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಪೂಜ್ಯ ಶ್ರೀ ನಾದ ಮಯಾನಂದನಾಥ ಸ್ವಾಮೀಜಿ, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್., ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.xx

ಎಸ್ಎಸ್ಎಲ್ ಸಿ ಪರೀಕ್ಷೆ: ಶೇ.100 ಫಲಿತಾಂಶ ಸಾಧಿಸಿದ ರಾಮಕೃಷ್ಣ ವಿದ್ಯಾಸಂಸ್ಥೆ

0

ಎಸ್ .ಎಸ್. ಎಲ್. ಸಿ ಪರೀಕ್ಷಾ ಫಲಿತಾಂಶದಲ್ಲಿ ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ, ಅನುಪಿನ ಕಟ್ಟೆಯಲ್ಲಿರುವ ಶ್ರೀ ರಾಮಕೃಷ್ಣ ಗುರುಕುಲ ಆಂಗ್ಲ ಮಾಧ್ಯಮ ಶಾಲೆ ಹಾಗೂ ಚೋರಡಿಯ ಶ್ರೀ ರಾಮಕೃಷ್ಣ ಶಾಲೆಗಳಲ್ಲಿ ಪರೀಕ್ಷೆ ಬರೆದ ಎಲ್ಲಾ ಮಕ್ಕಳು ಡಿಸ್ಟಿಂಕ್ಷನ್ ಹಾಗೂ ಪ್ರಥಮದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಗೋಪಾಳ ರಾಮಕೃಷ್ಣ ವಿದ್ಯಾನಿಕೇತನದ ಎಸ್. ಎಂ.ಭಗತ್ 625 ಕ್ಕೆ 619 ಅಂಕ ಪಡೆದಿರುವುದು ವಿಶೇಷ. ಬಹುತೇಕ ವಿದ್ಯಾರ್ಥಿಗಳು 600 ಕ್ಕೂ ಹೆಚ್ಚು ಅಂಕ ಗಳಿಸಿದ್ದಾರೆ.
ಸಂಸ್ಥೆಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದ ಎಲ್ಲಾ ಮಕ್ಕಳಿಗೆ, ಶಿಕ್ಷಕ ವೃಂದಕ್ಕೆ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಡಿ.ಆರ್. ನಾಗೇಶ್ ಹಾಗೂ ಕಾರ್ಯದರ್ಶಿ ಶೋಭಾ ವೆಂಕಟರಮಣ ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.

District Consumer Disputes Redressal Commission ಟರ್ನ್ ಕೀ ಹಾಲಿಡೇಸ್ ಸಂಸ್ಥೆಯಿಂದ ಸೇವಾ ನ್ಯೂನತೆ. ಗ್ರಾಹಕರಿಗೆ ಪರಿಹಾರ ನೀಡಲು ಆಯೋಗ ಆದೇಶ

0

District Consumer Disputes Redressal Commission ಶಿವಮೊಗ್ಗ ಹೊನ್ನಾಳಿ ರಸ್ತೆ, ಮಲ್ಲಿಕಾರ್ಜುನ ನಗರದ ಎಂ.ಕೆ. ದಿವಾಕರ್ ಎಂಬುವವರು ಬೆಂಗಳೂರು ಮಹಾಲಕ್ಷ್ಮೀ ಲೇಔಟ್‌ನ ಟರ್ನ್ ಕೀ ಹಾಲಿಡೇಸ್ ಪ್ರವಾಸಿ ಸಂಸ್ಥೆಯ ವಿರುದ್ಧ ಹಣವನ್ನು ಹಿಂದುರುಗಿಸದೇ ಸೇವಾನ್ಯೂನತೆಯನ್ನು ಎಸಗಿದ ಬಗ್ಗೆ ವಕೀಲರ ಮೂಲಕ ನೀಡಿದ ದೂರಿನ ಕುರಿತು ವಿಚಾರಣೆ ನಡೆಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಹಣವನ್ನು ಹಿಂದುರುಗಿಸುವಂತೆ ಎದುರುದಾರರಿಗೆ ಆದೇಶಿಸಿ ತೀರ್ಪು ನೀಡಿದೆ.
ದೂರುದಾರರು ಎದುರುದಾರರಲ್ಲಿ ಜಪಾನ್ ಮತ್ತು ಸೌತ್ ಕೋರಿಯ ದೇಶಗಳಿಗೆ 10 ದಿನಗಳ ಪ್ರವಾಸಕ್ಕಾಗಿ ನೋಂದಣಿ ಮಾಡಿಸಿದ್ದು, ಏಪ್ರಿಲ್ 2025ರಲ್ಲಿ ಪ್ರವಾಸ ನಿಗಧಿಯಾಗಿದ್ದು ಪ್ರವಾಸದ ಮೊತ್ತ 4,09,865/- ಗಳನ್ನು ಹಂತ ಹಂತವಾಗಿ ಪಾವತಿಸಿರುತ್ತಾರೆ. ಮಾರ್ಚ್-2025ರಲ್ಲಿ ದೂರದಾರರಿಗೆ ಅಫಘಾತವಾಗಿದ್ದು ಕಾಲು ಮುರಿದುಹೋಗಿದ್ದು, ವೈದ್ಯರು ಒಂದು ತಿಂಗಳು ವಿಶ್ರಾಂತಿಗೆ ಸಲಹೆ ನೀಡಿದ್ದರಿಂದ ಪ್ರವಾಸ ಹೋಗಲು ಸಾಧ್ಯವಾಗದೆ ರದ್ದು ಮಾಡಿ, ಪಾವತಿಸಿದ ಹಣವನ್ನು ವಾಪಸು ಮಾಡಲು ಕೋರಿ ಪತ್ರ ಬರೆದಿರುತ್ತಾರೆ. ಸಂಸ್ಥೆಯು ವಿವಿಧ ಸಂಸ್ಥೆಗಳಿಂದ ಪಡೆದಿರುವ ರೀಫಂಡ್ ಮೊತ್ತ ರೂ. 2,52,000/-ಗಳನ್ನು ಜುಲೈ 2025ರೊಳಗೆ ಇದೇ ತೆರನಾದ ಯಾವುದಾದರೂ ಪ್ರವಾಸಕ್ಕೆ ಬಂದಲ್ಲಿ ಹೊಂದಾಣಿಕೆ ಮಾಡುವುದಾಗಿ ತಿಳಿಸಿರುತ್ತಾರೆ. ಆದರೆ ದೂರದಾರರು ಮೊತ್ತವನ್ನು ವಾಪಾಸ್ಸು ನೀಡಲು ಲೀಗಲ್ ನೋಟೀಸ್ ನೀಡಿದ್ದು, ಅದಕ್ಕೂ ಎದುರುದಾರರು ಯಾವುದೇ ಪ್ರತ್ಯುತ್ತರ ನೀಡದೆ ಸೇವಾನ್ಯೂನತೆ ಎಸಗಿರುತ್ತಾರೆ ಎಂದು ಆಯೋಗಕ್ಕೆ ದೂರನ್ನು ಸಲ್ಲಿಸಿರುತ್ತಾರೆ.
District Consumer Disputes Redressal Commission ಆಯೋಗವು ದೂರನ್ನು ದಾಖಲಿಸಿಕೊಂಡು ಎದುರುದಾರರಿಗೆ ನೋಟೀಸ್ ನೀಡಿದ್ದು, ಎದುರುದಾರರು ಆಯೋಗಕ್ಕೆ ತಮ್ಮ ವಕೀಲರ ಮೂಲಕ ಹಾಜರಾಗಿದ್ದು, ಎರಡೂ ಪಕ್ಷಗಾರರು ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲಾತಿಗಳನ್ನು ಪರಿಶೀಲಿಸಿ, ವಾದ ವಿವಾದವನ್ನು ಆಲಿಸಿ, ಎದುರುದಾರರು ದೂರದಾರರ ಪ್ರವಾಸಕ್ಕೆ ನೀಡಿದ ಮೊತ್ತವನ್ನು ಹಿಂತಿರುಗಿಸದೆ ಬೇರೆ ಪ್ರವಾಸಕ್ಕೆ ಹೊಂದಾಣಿಕೆ ಮಾಡುತ್ತೇವೆ ಎಂಬುದು ಸಹಾ ಸೇವಾನ್ಯೂನ್ಯತೆಯಾಗುತ್ತದೆ ಎಂದು ತೀರ್ಮಾನಿಸಿ, ದೂರನ್ನು ಭಾಗಶಃ ಪುರಸ್ಕರಿಸಿದೆ. ಎದುರುದಾರರು ದೂರುದಾರರಿಗೆ ನೀಡಬೇಕಾಗಿದ್ದ ರೂ.2.52 ಲಕ್ಷಗಳಿಗೆ ದಿ: 28/05/2025 ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ. 8ರ ಬಡ್ಡಿಯನ್ನು ಸೇರಿಸಿ, ಈ ಆದೇಶವಾದ 45 ದಿನಗಳೊಳಗೆ ಪಾವತಿಸುವುದು ಹಾಗೂ ರೂ. 10,000/- ಗಳನ್ನು ದೂರಿನ ಖರ್ಚು ವೆಚ್ಚಕ್ಕಾಗಿ ಈ ಆದೇಶವಾದ 45 ದಿನಗಳೊಳಗಾಗಿ ದೂರುದಾರರಿಗೆ ಪಾವತಿಸುವಂತೆ ತಪ್ಪಿದ್ದಲ್ಲಿ ವಾರ್ಷಿಕ ಶೇ. 10ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಏ.18 ರಂದು ಆದೇಶಿಸಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಗಂಗಾಧರ ನಾಯ್ಕ್ ಎಂ.ಟಿ. ತಿಳಿಸಿದ್ದಾರೆ.

ಶಿವಮೊಗ್ಗ ಭಾವನಾ ಜೇಸಿಸ್ ನಿಂದ ಸಲ್ಯೂಟ್ ದ ಸೈಲೆಂಟ್ ಫಾರ್ಮರ್ ಕಾರ್ಯಕ್ರಮ

0

ಶಿವಮೊಗ್ಗ ಭಾವನದಿಂದ ಉತ್ಸಾವ್ ಹಾಲ್ ಶುಭಂ ನಲ್ಲಿ ಸೆಲ್ಯೂಟ್ ದ ಸೈಲೆಂಟ್ ಫರ್ಮರ್ ಎಂಬ ಶೀರ್ಷಿಕೆಯಡಿ ರೈತರಿಗೆ ಸನ್ಮಾನ ಮಾಡಲಾಯಿತು. ಜೆಸಿಐ ಶಿವಮೊಗ್ಗ ಭಾವನದ ಅಧ್ಯಕ್ಷರಾದ ಕರಿಬಸಮ್ಮ ಆನಂದ್‌ರವರು ಸನ್ಮಾನಿಸಿದರು. ಈ ಕಾರ್ಯಕ್ರದಲ್ಲಿ ಅತಿಥಿಗಳಾಗಿ ಝೆನ್ ವೈಸ್ ಪ್ರೆಸಿಡೆಂಟ್ ಜೆಸಿಐ ಸೆನೆಟರ್ ಕಾರ್ಕಳ ಗಣೇಶ್ ಪೈ, ಐಪಿಪಿ ರೇಖಾ ರಂಗನಾಥ್, ಪಾಸ್ಟ್ ಪ್ರೆಸಿಡೆಂಟ್ ಪ್ರತಿಮಾ ಡಾಕಪ್ಪ ಭಾಗವಹಿಸಿದ್ದರು.

S.N. Channabasappa ಪ್ರಧಾನಿ ಮೋದಿ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಂದನೆ: ಶಾಸಕ ಚನ್ನಿ ನೇತೃತ್ವದಲ್ಲಿ ಪ್ರತಿಭಟನೆ

0

S.N. Channabasappa ವಿಶ್ವವೇ ಮಾನ್ಯ ಮಾಡುವ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ನೀಡಿರುವ “ಭಯೋತ್ಪಾದಕ” ಎಂಬ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ನಗರದ ಗೋಪಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಎಸ್ .ಎನ್. ಚನ್ನಬಸಪ್ಪ ಅವರು ಭಾಗವಹಿಸಿದ್ದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, “ಕಾಂಗ್ರೆಸ್ ಪಕ್ಷವು ಸತತ ವೈಫಲ್ಯಗಳಿಂದ ದಿಕ್ಕುತೋಚದೆ ಹತಾಶೆಯ ಪರಮಾವಧಿಗೆ ತಲುಪಿದೆ.

ಜಗತ್ತೇ ಮೆಚ್ಚುವ ನಾಯಕನನ್ನು ‘ಭಯೋತ್ಪಾದಕ’ ಎಂದು ಕರೆದಿರುವುದು ಕೇವಲ ಪ್ರಧಾನಿಯವರಿಗೆ ಮಾಡಿದ ಅವಮಾನವಲ್ಲ, ಬದಲಾಗಿ ದೇಶದ 140 ಕೋಟಿ ಜನತೆಗೆ ಮಾಡಿದ ದ್ರೋಹವಾಗಿದೆ. ಕಾಂಗ್ರೆಸ್ ತನ್ನ ಇಂತಹ ಕೀಳುಮಟ್ಟದ ರಾಜಕಾರಣವನ್ನು ತಕ್ಷಣವೇ ನಿಲ್ಲಿಸಬೇಕು,” ಎಂದು ಎಚ್ಚರಿಸಿದರು.

S.N. Channabasappa ಈ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಹಿರಿಯ ಮುಖಂಡರಾದ ಶ್ರೀ ಜ್ಯೋತಿಪ್ರಕಾಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಪ್ರಶಾಂತ್ ಕುಕ್ಕೆ, ನಗರಾಧ್ಯಕ್ಷರಾದ ಶ್ರೀ ರಾಹುಲ್ ಬಿದರೆ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಯುವ ಮೋರ್ಚಾದ ಕಾರ್ಯಕರ್ತರು ಭಾಗವಹಿಸಿದ್ದರು.