Monday, April 13, 2026
Monday, April 13, 2026
Home Blog Page 1226

Chamber Of Commerce Shivamogga ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರ ಚುನಾವಣಾ ಅಭ್ಯರ್ಥಿಗಳೊಂದಿಗೆ ಮುಖಾಮುಖಿ

0

Chamber Of Commerce Shivamogga ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ವತಿಯಿಂದ ಶಿವಮೊಗ್ಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನನಗೂ ಪಕ್ಷದ ಅಭ್ಯರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ತಾವು ಶಾಸಕರಾಗಿ ಆಯ್ಕೆಯಾದರೆ ತಮ್ಮ ಅಧಿಕಾರದ ಅವಧಿಯಲ್ಲಿ ಶಿವಮೊಗ್ಗ ಹೇಗಿರಬೇಕು ಎಂಬ ವಿಷಯದ ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದು ತಿಳಿಸಲಾಗಿತ್ತು.

ಅದರಂತೆ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್, ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪ, ಕಾಂಗ್ರೆಸ್ ಅಭ್ಯರ್ಥಿ ಎಚ್ ಸಿ ಯೋಗೀಶ್, ಹಾಗೂ ಆಮ್ ಆದ್ಮಿ ಪಕ್ಷದ ನೇತ್ರಾವತಿ ಗೌಡ ಅವರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.

Chamber Of Commerce Shivamogga ಹಿಂದೂ ಸಮಾಜದ ಮೇಲೆ ಹಲ್ಲಿಯಾದರೆ ಹಿಂದುಗಳನ್ನು ಕೊಂದರೆ ಅದನ್ನು ಪ್ರಶ್ನಿಸುವುದು ತಪ್ಪೇ. ಶಾಂತಿಯನ್ನು ಕದಡುವವರು ನಾವಲ್ಲ. ವಿಶ್ವವೇ ಒಂದು ಕುಟುಂಬ ಎಂದು ಹಿಂದು ಸಮಾಜ ಬಯಸುತ್ತದೆ. ಆದರೆ ಅಶಾಂತಿಗೆ ಕಾರಣರಾದವರ ವಿರುದ್ಧ ನಮ್ಮ ಧ್ವನಿ ಸದಾ ಇರುತ್ತದೆ. ಎಲ್ಲರೂ ಒಟ್ಟಾಗಿ ಬಾಳಬೇಕು ಎಂಬುದೇ ನಮ್ಮ ತತ್ವ. ಜೊತೆಗೆ ಶಿವಮೊಗ್ಗದ ಅಭಿವೃದ್ಧಿಗೆ ಯಾವತ್ತಿಗೂ ನಮ್ಮ ಮೊದಲ ಆದ್ಯತೆ ಇದೆ ಎಂದು ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪ ಅವರು ತಿಳಿಸಿದರು.

ಶಿವಮೊಗ್ಗದಲ್ಲಿ ಮುಖ್ಯವಾಗಿ ಉದ್ಯೋಗ ನಿರ್ಮಾಣ ಮಾಡಬೇಕಾಗಿದೆ. ಇಲ್ಲಿ ಮಹಿಳೆಯರಿಗೆ ಉದ್ಯೋಗಗಳೇ ಸಿಗುತ್ತಿಲ್ಲ. ಕಷ್ಟಪಟ್ಟು ಓದಿ ಕೆಲಸವಿಲ್ಲದೆ ಮನೆಯಲ್ಲಿ ಇರಬೇಕಾದ ಪರಿಸ್ಥಿತಿ ಇದೆ. ಇವರೆಲ್ಲರಿಗೂ ಉದ್ಯೋಗ ನೀಡುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ . ಮುಖ್ಯವಾಗಿ ಮಹಿಳೆಯರಿಗೆ ರಕ್ಷಣೆ ಬೇಕಾಗಿದೆ. ಶಿವಮೊಗ್ಗಕ್ಕೆ ಮತ್ತಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ ಎಂದು ಆಮ್ ಆದ್ವಿ ಪಾರ್ಟಿಯ ಅಭ್ಯರ್ಥಿ ನೇತ್ರಾವತಿ ಗೌಡ ಅವರು ತಿಳಿಸಿದರು.

Chamber Of Commerce Shivamogga ಶಿವಮೊಗ್ಗಕ್ಕೆ ಮುಖ್ಯವಾಗಿ ಬೇಕಾಗಿರುವುದು ಶಾಂತಿ. ಇಲ್ಲಿ ಶಾಂತಿ ಇಲ್ಲದ ಕಾರಣಕ್ಕಾಗಿಯೇ ಉದ್ಯಮಿಗಳು ಬರುತ್ತಿಲ್ಲ. ಶಾಂತಿ ನೆಮ್ಮದಿಗೆ ಬಂದ ತರುವವರನ್ನು ಒದ್ದು ಹಾಕಿದರೆ ಮಾತ್ರ ಈಗಿರುವ ಅಶಾಂತಿನಗರವನ್ನು ನಾನು ಶಾಸಕರಾದರೆ ಖಂಡಿತ ಬದಲಾಯಿಸುವೆ ಎಂದು ಜೆಡಿಎಸ್ ಪಕ್ಷದ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು ಹೇಳಿದರು.

ಶಿವಮೊಗ್ಗದಲ್ಲಿ ಇದು ಗಲಭೆಗಳೆ ಇರಬಾರದು. ಪ್ರಪಂಚದ ಎಲ್ಲಾ ಉದ್ಯಮಿಗಳು ಸಾಂಸ್ಕೃತಿಕ ನಗರಕ್ಕೆ ಕಾಲಿಡಬೇಕು. ಅಂತಹ ವಾತಾವರಣವನ್ನು ನಿರ್ಮಿಸಬೇಕು ಎಂಬುದೇ ನನ್ನ ಉದ್ದೇಶವಾಗಿದೆ. ಕೋಮು ರಾಜಕಾರಣ ಕೊನೆಯಾಗಬೇಕು ಎಂದು ಕಾಂಗ್ರೆಸ್ ಪಕ್ಷದ ಯೋಗೀಶ್ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎನ್. ಗೋಪಿನಾಥ್ , ಉಪಾಧ್ಯಕ್ಷರಾದ ಬಿ ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಜಂಟಿ ಕಾರ್ಯದರ್ಶಿ ಜಿ. ವಿಜಯಕುಮಾರ್, ಹಾಗೂ ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಎಂ ಎ ರಮೇಶ್ ಹೆಗ್ಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

Assembly Election ಪಾರದರ್ಶಕವಾಗಿ ಚುನಾವಣೆ ನಡೆಸಲು ಅಧಿಕಾರಿವರ್ಗಕ್ಕೆ ಆಗ್ರಹ

0

Assembly Election ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಅಭ್ಯರ್ಥಿಗಳು ಯಾವುದೇ ಆಮಿಷವನ್ನು ಒಡ್ಡದಂತೆ ಪಾರದರ್ಶಕವಾಗಿ ಚುನಾವಣೆಯನ್ನು ನಡೆಸಲು ಅಧಿಕಾರಿಗಳು ಮುಂದಾ ಗಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ರಾಜ್ಯಾಧ್ಯಕ್ಷೆ ಸರೋಜಾ ಬಸವರಾಜ್ ಆಗ್ರಹಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಹಣ, ಹೆಂಡ ಹಾಗೂ ಉಡುಗೊರೆಗಳ ಮಹಾಪೂರವೇ ಹರಿದು ಬರುವ ಸಂಭವವಿರುವುದರಿಂದ ಇವುಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ಅಧಿಕಾ ರಿಗಳು ಸಹಕರಿಸಬೇಕು ಎಂದು ಹೇಳಿದ್ದಾರೆ.

Assembly Election ಈಗಾಗಲೇ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ವಿವಿಧ ಗಡಿಭಾಗಳಲ್ಲಿ ಹಣ, ಚಿನ್ನ, ಕುಕ್ಕರ್ ಸೇರಿದಂತೆ ಅಪಾರ ಮೌಲ್ಯದ ವಸ್ತುಗಳು ಲಭ್ಯವಾಗುತ್ತಿರುವುದು ನಮ್ಮೆಲ್ಲರ ಗಮನಕ್ಕೆ ಬಂದಿದ್ದು ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತವಾಗಿ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.

ಇದರೊಂದಿಗೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಮತದಾರರಿಗೆ ಆಮಿಷವೊಡ್ಡಲು ಕೆಲವು ಮಂದಿ ಪ್ರಯತ್ನಿಸುವ ಸಂಭವವಿರುವ ಕಾರಣ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ರಾಜ್ಯದ ಮತದಾರರಿಗೆ ಉತ್ತಮ ಅಭ್ಯರ್ಥಿ ಆಯ್ಕೆಗೊಳಿಸಲು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

Assembly Election ವಕ್ಫ್ ಮಂಡಳಿಯ ಧಾರ್ಮಿಕ ಸಂಸ್ಥೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಅನ್ವಯ ರಾಜಕೀಯ ಚಟುವಟಿಕೆ ನಿಷೇಧ

0

Assembly Election ಮೇ.10 ರಂದು ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಜೊತೆಗೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವಕ್ಫ್ ಮಂಡಳಿಯ ಧಾರ್ಮಿಕ ಸಂಸ್ಥೆಗಳು, ವಿಧಿಗಳಲ್ಲಿ ರಾಜಕೀಯ ಚಟುವಟಿಕೆ ಅಥವಾ ಲಾಭಕ್ಕಾಗಿ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಮಹಮ್ಮದ್ ಶಾಹೀದ್ ರಜ್ವಿ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಯಲ್ಲಿ ತಿಳಿಸಿರುವ ಅವರು ರಾಜ್ಯ ವಕ್ಫ್ ಸಲಹಾ ಸಮಿತಿಯ ಆದೇಶ ದನ್ವಯ ಜಿಲ್ಲೆಯಲ್ಲಿ ವಕ್ಫ್ ಮಂಡಳಿ ಅಧೀನದಲ್ಲಿರುವ ನೋಂದಾಯಿತ, ನೋಂದಾಯಿತವಿಲ್ಲದಿರುವ ಸಂಸ್ಥೆಗಳು, ಮಸೀದಿ, ದರ್ಗಾ, ಈದ್ಗಾ ಮೈದಾನ, ಇನ್ನಿತರೆ ಧಾರ್ಮಿಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಚಟುವಟಿ ಕೆಗಳು ಕಂಡುಬಂದಲ್ಲಿ ಸಂಬಂಧಪಟ್ಟ ಆಡಳಿತ ಸಮಿತಿಯವರನ್ನು ನೇರ ಹೊಣೆಗಾರರು ಎಂದು ಬಿಂಬಿಸಿ ಅಂತಹ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Assembly Election ಈ ಬಗ್ಗೆ ರಾಜ್ಯ ವಕ್ಫ್ ಮಂಡಳಿಯ ಉಲ್ಲೇಖಿತ ಪತ್ರದಲ್ಲಿ ನಿರ್ದೇಶಿಸಲಾಗಿದೆ. ಆದುದರಿಂದ ಕರ್ನಾಟಕ ರಾಜ್ಯದ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು ಚುನಾವಣಾ ಮಾದರಿ ನೀತಿ ಸಂಹಿತೆ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tobacco Control Cell ತಂಬಾಕು ನಿಷೇಧ ಕಾನೂನಿನ್ವಯ ‌ಸಹ್ಯಾದ್ರಿ ಕಾಲೇಜು ಪ್ರದೇಶದ ಸುತ್ತಮುತ್ತ ದಾಳಿ

0

Tobacco Control Cell ಶಿವಮೊಗ್ಗ ನಗರದ ಕೋಟೆ ಪೋಲೀಸ್ ಸ್ಟೇಷನ್ ವ್ಯಾಪ್ತಿಯ ಹೊಳೆ ಬಸ್ ನಿಲ್ದಾಣ ಹಾಗೂ ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ ತಂಬಾಕು ದಾಳಿಗಳನ್ನು ಹಮ್ಮಿಕೊಂಡು, ಒಟ್ಟು 19 ಪ್ರಕರಣಗಳನ್ನು ದಾಖಲಿಸಿ 2500 ದಂಡವನ್ನು ಸಂಗ್ರಹಿಸಲಾಯಿತು.

Tobacco Control Cell ದಾಳಿಯ ನೇತೃತ್ವವನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ಮಲ್ಲಪ್ಪ ಓ. ವಹಿಸಿದ್ದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗು ಪೋಲೀಸ್ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಕುರಿತು ಅರಿವು ಮೂಡಿಸಲಾಯಿತು.

Department Of Health and Family Welfare ಶಿವಮೊಗ್ಗ ಜಿಲ್ಲೆಯಲ್ಲಿ ಮಲೇರಿಯ ಶೇ 95 ಕಡಿಮೆ ಆಗಿದೆ- ಡಾ.ಗುಡದಪ್ಪ ಕಸಬಿ

0

Department Of Health and Family Welfare ಮಲೇರಿಯಾ ನಿರ್ಮೂಲನೆ ಗುರಿ ತಲುಪಲು ಹೊಸ ಹೊಸ ವಿಧಾನಗಳನ್ನು ಅಳವಡಿಸಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ ಅಭಿಪ್ರಾಯಪಟ್ಟರು.

ಶಿವಮೊಗ್ಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಾಪೂಜಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ, ಬಾಪೂಜಿ ನರ್ಸಿಂಗ್ ಕಾಲೇಜ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಶಿವಮೊಗ್ಗ ಮತ್ತು ನಗರದ ಎಲ್ಲಾ ರೋಟರಿ ಕ್ಲಬ್ ಗಳ ಸಹಯೋಗದಲ್ಲಿ ಬಾಪೂಜಿ ನರ್ಸಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಲೇರಿಯಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

Department Of Health and Family Welfare ವರದಿಗಳ ಪ್ರಕಾರ ವಿಶ್ವದಲ್ಲಿ ಪ್ರತಿ ವರ್ಷ 241 ಮಿಲಿಯನ್ ಮಲೇರಿಯಾ ಪ್ರಕರಣಗಳು ವರದಿ ಆಗುತ್ತಿದ್ದು, 6 ಲಕ್ಷ ಮರಣಗಳು ಸಂಭವಿಸುತ್ತಿವೆ. ಶಿವಮೊಗ್ಗ ಜಿಲ್ಲೆಯಲ್ಲಿ 10 ವರ್ಷಗಳ ಅಂಕಿ ಆಂಶ ಅವಲೋಕಿಸಿದಾಗ ಮಲೇರಿಯಾ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಶೇ. 95 ರಷ್ಟು ಕಡಿಮೆ ಆಗಿದೆ. 2025 ರ ವೇಳೆಗೆ ಜಿಲ್ಲೆಯಿಂದ ಮಲೇರಿಯಾ ನಿರ್ಮೂಲನೆ ಮಾಡುವ ಗುರಿಯತ್ತ ಸಾಗುತ್ತಿರುವುದು ಆರೋಗ್ಯ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿಯವರ ಪರಿಶ್ರಮಕ್ಕೆ ದೊರೆತ ಪ್ರತಿಫಲವಾಗಿದೆ ಎಂದು ತಿಳಿಸಿದರು.

ಸ್ವಯಂರಕ್ಷಣಾ ವಿಧಾನ ಮತ್ತು ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಪ್ರತಿಯೊಬ್ಬರೂ ರೋಗವಾಹಕ ಖಾಯಿಲೆಗಳ ನಿಯಂತ್ರಣದಲ್ಲಿ ಸಹಕರಿಸುವಂತೆ ಕೋರಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಿದ್ದನಗೌಡ ಪಾಟೀಲ್ ಮಾತನಾಡಿ, ನಮ್ಮಲ್ಲಿ ಮಲೇರಿಯಾ ಇಲ್ಲದಿದ್ದರೂ ಉತ್ತರ ಭಾರತದಿಂದ ಜಿಲ್ಲೆಗೆ ಆಗಮಿಸುವ ವಲಸಿಗರ ಬಗ್ಗೆ ನಿಗಾವಹಿಸಿ ತಪ್ಪದೇ ರಕ್ತಲೇಪನ ಪರೀಕ್ಷೆಗೊಳಪಡಿಸುವಂತೆ ಸೂಚಿಸಿದರು.

ರೋಟರಿ ವಲಯ ಸಹಾಯಕ ಗವರ್ನರ್ ಸುನಿತಾ ಶ್ರೀಧರ್ ಮಾತನಾಡಿ, ವಿಶ್ವದಲ್ಲಿ ಪೋಲಿಯೋ ನಿರ್ಮೂಲನೆಯಲ್ಲಿ ಸಹಕರಿಸಿದಂತೆ ಮಲೇರಿಯಾ ನಿರ್ಮೂಲನೆಗೂ ಸಹಕರಿಸಲು ರೋಟರಿ ಸದಾ ಸಿದ್ದವಿದೆ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ, ರೋಟರಿ ಶಿವಮೊಗ್ಗ ಅಧ್ಯಕ್ಷ ಎನ್ ವಿ ಭಟ್, ರೋಟರಿ ಶಿವಮೊಗ್ಗ ಉತ್ತರದ ಅಧ್ಯಕ್ಷ ಜಗದೀಶ್ ಸರ್ಜಾ, ರೋಟರಿ ಶಿವಮೊಗ್ಗ ಮಿಡ್ ಟೌನ್ ಅಧ್ಯಕ್ಷೆ ವೀಣಾ ಸುರೇಶ್, ರೋಟರಿ ರಿವರ್ ಸೈಡ್ ಅಧ್ಯಕ್ಷ ದೇವೆಂದ್ರಪ್ಪ ಸಹಕಾರ ನೀಡಿದರು.

ಕಾಲೇಜಿನ ಪ್ರಾಚಾರ್ಯ ಡಾ.ಪಂಕಜ್ ಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ. ನಾಗರಾಜ್ ನಾಯ್ಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಲ್ಲಪ್ಪ, ಮೆಗ್ಗಾನ್ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್, ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಮಾ ಬೇಗಂ ಫಕ್ರುದ್ಧೀನ್ ಮಾತನಾಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್ ಜಿ.ಬಿ, ಕುಮಾರಸ್ವಾಮಿ, ಮುಸ್ತಾಖ್, ಚಂದ್ರಿಕಾ ಗಿರಿಮಾಜಿ, ಬಸವರಾಜಪ್ಪ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಮೇಲ್ವಿಚಾರಕ ನಾರಾಯಣ್, ಉಮೇಶ್, ಯಜುರ್ವೇದ, ತಿಪ್ಪೆಸ್ವಾಮಿ, ಧೀರೆಂದ್ರ, ಶಶಿಕುಮಾರ್, ಶೇರ್ ಆಲಿಖಾನ್, ಭರತ್, ತಾಲ್ಲೂಕು ಆರೋಗ್ಯಾಧಿಕಾರಿ ಚಂದ್ರಶೇಖರ್, ನರ್ಸಿಂಗ್ ಕಾಲೇಜ್ ಪ್ರಾಚಾರ್ಯೆ ಡಾ. ಕವಿತಾ ದೇವರಾಜ್ ಉಪಸ್ಥಿತರಿದ್ದರು.

Karnataka Neuroscience Academy ಏಪ್ರಿಲ್ 28 ರಂದು ಶಿವಮೊಗ್ಗದಲ್ಲಿ ನರರೋಗ ವಿಜ್ಞಾನ ತಜ್ಞರ ವಾರ್ಷಿಕ ಸಮಾವೇಶ ಉದ್ಘಾಟನೆ

0

Karnataka Neuroscience Academy ಕರ್ನಾಟಕ ನ್ಯುರೋ ಸೈನ್ಸ್ ಅಕಾಡೆಮಿ ವತಿಯಿಂದ 12ನೇ ವಾರ್ಷಿಕ ವೈಜ್ಞಾನಿಕ ಸಮ್ಮೇಳನವನ್ನು ಏ.28,29,30ರಂದು ಶಿವಮೊಗ್ಗದ ಸುಬ್ಬಯ್ಯ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯ ಮಟ್ಟದ ಈ ಸಮ್ಮೇಳನದ ಜವಾಬ್ದಾರಿ ಹಾಗೂ ಆತಿಥ್ಯವನ್ನು ಶಿವಮೊಗ್ಗದ ಸಹ್ಯಾದ್ರಿ, ನ್ಯೂರೋ ಸೈಕ್ಯಾಟರಿ ಅಸೋಸಿಯೇಷನ್ ವಹಿಸಲಿದೆ ಎಂದು ಸಮ್ಮೇಳನದ ಆಯೋಜಕ ಡಾ.ಎ. ಶಿವರಾಮಕೃಷ್ಣ ಆರೂರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಏ.28 ಮತ್ತು 29ರಂದು ಪೂರ್ವಭಾವಿ ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗಿದೆ.

Karnataka Neuroscience Academy ಹಾಗೆಯೇ ಏ.29ರ ಮಧ್ಯಾಹ್ನ 12 ಗಂಟೆಗೆ ಉದ್ಘಾಟನಾ ನಡೆಯಲಿದ್ದು, ಮುಖ್ಯ ಅತಿಥಿ ಯಾಗಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್‌ ಸೈನ್ಸ್ ನ ಬ್ರೈನ್ ರೀಸರ್ಚ್ ಲ್ಯಾಬ್‌ನ ನಿರ್ದೇಶಕ ಡಾ.ವೈ. ನರಹರಿ, ಎಸ್ ಎನ್ ಪಿಎ ಅಧ್ಯಕ್ಷ ಡಾ. ಹರೀಶ್ ದೇಲಂತಬೆಟ್ಟು, ಡಾ. ಕೆ ಆರ್ ಶ್ರೀಧರ ಆಗಮಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನ ಕೆಎನ್ಎ ಅಧ್ಯಕ್ಷರಾದ ಡಾ.ಎಸ್.ಪಿ‌‌. ಬಳಿಗಾರ್ ವಹಿಸಲಿದ್ದಾರೆ.

ಈ ಸಮ್ಮೇಳನದಲ್ಲಿ ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಂದ ನರಶಾಸ್ತ್ರ ತಜ್ಞರು, ನರ ರೋಗ ಶಸ್ತ್ರ ಚಿಕಿತ್ಸಕರು, ಮನು ವೈದ್ಯರು ಹಾಗೂ ಇತರೆ ವೈದ್ಯರು ಆಗಮಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ನ್ಯುರೋ ಸರ್ಜನ್ ಡಾ.ಎಲ್. ಕೃಷ್ಣಮೂರ್ತಿ, ಡಾ. ಬಿ. ಎ. ಚಂದ್ರಮೌಳಿ, ಡಾ ಜಿ ಎಸ್ ಉಮಾಮಹೇಶ್ವರ ರಾವ್ ಅವರನ್ನು ಸನ್ಮಾನಿಸಲಾಗುವುದು.

Chamber Of Commerce Shivamogga ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೊಡುಗೆಯಿಂದ ಶಿವಮೊಗ್ಗದಲ್ಲಿ ಮೂಲ ಸೌಕರ್ಯಕ್ಕೆ ವಿಶೇಷ ಪ್ರಾಮುಖ್ಯತೆ- ಮಹೇಂದ್ರ ನಾಥ್ ಪಾಂಡೆ

0

Chamber Of Commerce Shivamogga ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ ಮೂಲಸೌಕರ್ಯಕ್ಕೆ ವಿಶೇಷ ಪ್ರಾಮುಖ್ಯತೆ ನೀಡಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೊಡುಗೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಹತ್ತರ ಅಭಿವೃದ್ಧಿ ಆಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಮಹೇಂದ್ರ ನಾಥ ಪಾಂಡೆ ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ “ಶಿವಮೊಗ್ಗ ಜಿಲ್ಲೆಯ ಕೈಗಾರಿಕಾಭಿವೃದ್ಧಿ ಕುರಿತ ಸಂವಾದ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಶೀಘ್ರದಲ್ಲೇ ಕಾರ್ಯ ಆರಂಭ ಮಾಡಲಿದೆ. ಇದರಿಂದ ಕೈಗಾರಿಕಾ ಉದ್ಯಮಕ್ಕೆ ಅನುಕೂಲ ಆಗಲಿದೆ ಎಂದು ತಿಳಿಸಿದರು.

Chamber Of Commerce Shivamogga ಶಿವಮೊಗ್ಗ ಜಿಲ್ಲೆಯಲ್ಲಿ ರೈಲ್ವೇ ಕ್ಷೇತ್ರಕ್ಕೆ ಮಹತ್ತರ ಕೊಡುಗೆಗಳನ್ನು ಕೇಂದ್ರ ಸರ್ಕಾರ ನೀಡಿದ್ದು, ಶಿವಮೊಗ್ಗ ರಾಣೆಬೆನ್ನೂರು ಮಾರ್ಗ, ಶಿವಮೊಗ್ಗ, ಬೆಂಗಳೂರು-ಮುಂಬೈ ಮಾರ್ಗದ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಸದೃಢಗೊಳಿಸುವ ಮೂಲಕ ಕೈಗಾರಿಕೆ ಮತ್ತು ಉದ್ಯಮ ಕ್ಷೇತ್ರಕ್ಕೆ ಪೂರಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುವುದು ಎಂದರು.

ಶಿವಮೊಗ್ಗ ಜಿಲ್ಲೆಯಲ್ಲಿ ಆರ್ಥಿಕ ವ್ಯವಸ್ಥೆ ಸದೃಢಗೊಳ್ಳುತ್ತಿದ್ದು, ದೇಶದ ಉದ್ಯಮ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಕೇಂದ್ರವಾಗಿ ರೂಪುಗೊಳ್ಳುವುದು ನಿಶ್ಚಿತ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ವಿಶೇಷ ಕೊಡುಗೆಗಳನ್ನು ನೀಡಿದ್ದಾರೆ. ಮುಂದಿನ ವರ್ಷಗಳಲ್ಲಿ ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ನೆರವು ನೀಡಲಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ದೇಶ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರಗಳು ಉದ್ಯಮ ಹಾಗೂ ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ನಿರಂತರವಾಗಿ ನೀಡುತ್ತ ಬಂದಿದ್ದು, ಕೈಗಾರಿಕೋದ್ಯಮಕ್ಕೆ ಸಂಬಂಧಿಸಿದ ಸಮಸ್ಯೆ ಹಾಗೂ ಪರಿಹಾರ ಸಲಹೆಗಳಿದ್ದಲ್ಲಿ ಕೇಂದ್ರ ಸಚಿವರ ಗಮನಕ್ಕೆ ತಂದ ಸಂದರ್ಭಗಳಲ್ಲಿ ಕೂಡಲೇ ಅನುಷ್ಠಾನ ಮಾಡುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸುವ ಸಂಬಂಧ ಸಮಾಲೋಚನೆ ನಡೆದಿದ್ದು, ಶೀಘ್ರವೇ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ಅನುಕೂಲವಾಗುವಂತೆ ಕೌಶಲ್ಯ ಅಭಿವೃದ್ಧಿ ಕೇಂದ್ರ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗ ಜಿಲ್ಲೆಗೆ ಅವಶ್ಯಕತೆ ಇರುವ ರಸ್ತೆ ಸಂಪರ್ಕ, ಜಾಗ, ನೀರಿನ ಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರ ಸಚಿವರ ಗಮನಕ್ಕೆ ತರಲಾಯಿತು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಬಿ.ಗೋಪಿನಾಥ್, ಪ್ರದೀಪ್ ಎಲಿ, ಮರಿಸ್ವಾಮಿ, ಪರಮೇಶ್ವರ್, ಗಣೇಶ ಅಂಗಡಿ, ರಮೇಶ್ ಹೆಗಡೆ, ಸಂಘದ ನಿರ್ದೇಶಕರು, ಪದಾಧಿಕಾರಿಗಳು, ಮಾಚೇನಹಳ್ಳಿ ಕೈಗಾರಿಕಾ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.