Sunday, April 12, 2026
Sunday, April 12, 2026
Home Blog Page 1243

Environment Department ಅಭಿವೃದ್ಧಿ ಹೆಸರಲ್ಲಿ ಪರಿಸರ ನಾಶ ಮತ್ತು ಜಾಗತಿಕ ತಾಪಮಾನ ಏರಿಕೆ-ಡಾ.ಎಲ್.ಕೆ.ಶ್ರೀಪತಿ

0

Environment Department ಅಭಿವೃದ್ಧಿ ನೆಪದಲ್ಲಿ ಪರಿಸರ ವಿನಾಶ ಆಗುವ ಜತೆಯಲ್ಲಿ ಜಾಗತಿಕ ತಾಪಮಾನದ ಮೇಲೆ ಪರಿಣಾ ಬೀರುತ್ತಿದೆ. ಅತಿ ಹೆಚ್ಚು ಕಾರ್ಖಾನೆಗಳಿಂದ ಪರಿಸರ ವಿನಾಶ ಅಗುತ್ತಿದೆ ಎಂದು ಪರಿಸರವಾದಿ ಡಾ. ಎಲ್.ಕೆ.ಶ್ರೀಪತಿ ಹೇಳಿದರು.

ಶಿವಮೊಗ್ಗ ರಾಜೇಂದ್ರನಗರದ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಾಗತಿಕ ದುಷ್ಪರಿಣಾಮಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಅತಿಯಾದ ಇಂಧನ ಬಳಕೆಯಿಂದ ಹಾಗೂ ಮರ ಗಿಡಗಳ ನಾಶದಿಂದ ಜಾಗತಿಕ ತಾಪಮಾನ ಏರಿಕೆ ಆಗುತ್ತಿದೆ. ಇದರಿಂದ ಬರುವ ದಿನಗಳಲ್ಲಿ ಬದುಕುವುದೇ ಕಷ್ಟಕರವಾಗಲಿದೆ ಎಂದು ತಿಳಿಸಿದರು.

Environment Department ಜಾಗತಿಕ ತಾಪಮಾನ ಏರಿಕೆಯಿಂದ ಭೂಮಿ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಮನುಷ್ಯನಿಗೂ ತೊಂದರೆ ಆಗುತ್ತದೆ. ಮನುಷ್ಯನ ಜೀವಿತ ಅವಧಿಯು ಕಡಿಮೆ ಆಗುತ್ತದೆ. ಆರ್ಥಿಕವಾಗಿ ತುಂಬಾ ನಷ್ಟ ಎದುರಿಸಬೇಕಾಗುತ್ತದೆ. ಗಿಡಗಳನ್ನು ನೆಡುವುದರ ಮೂಲಕ ಪರಿಸರ ಸಂಪನ್ಮೂಲ ಕಾಪಾಡಿಕೊಳ್ಳಬೇಕಿದೆ. ಎಲ್ಲರೂ ಪರಿಸರ ಸಂರಕ್ಷಣೆ ಬಗ್ಗೆ ಆಲೋಚಿಸಬೇಕು ಎಂದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಮಾತನಾಡಿ, ಪ್ರತಿಯೊಬ್ಬರು ಪರಿಸರ ಕಾಳಜಿ ವಹಿಸುವುದರ ಜತೆಯಲ್ಲಿ ಇಂಧನ ಕಡಿಮೆ ಬಳಕೆ ಮಾಡಬೇಕು. ಸೌರವಿದ್ಯುತ್, ಬಯೋಡಿಸೆಲ್ ಬಳಕೆ ಹೆಚ್ಚು ಮಾಡಬೇಕು. ಉತ್ತಮ ಪರಿಸರ ಕಾಪಾಡಿಕೊಳ್ಳುವಲ್ಲಿ ಎಲ್ಲರ ಪ್ರಯತ್ನ ಮುಖ್ಯ ಎಂದು ತಿಳಿಸಿದರು.

ಡಾ. ಎಲ್.ಕೆ.ಶ್ರೀಪತಿ ಅವರಿಗೆ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸನ್ಮಾನಿಸಲಾಯಿತು. ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಚಂದ್ರಹಾಸ ಪಿ ರಾಯ್ಕರ್, ಡಾ. ಪರಮೇಶ್ವರ ಶಿಗ್ಗಾಂವ್, ಚಂದ್ರಶೇಖರಯ್ಯ, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ, ಮಂಜುನಾಥ್, ಸತೀಶ್ ಚಂದ್ರ, ಡಾ. ಅರುಣ್, ಕೆ.ಜಿ.ರಾಮಚಂದ್ರ, ಅನೂಷ್‌ಗೌಡ, ಗಣೇಶ್, ಕೇಶವಪ್ಪ, ಕೃಷ್ಣಮೂರ್ತಿ, ಬಿಂದು ವಿಜಯಕುಮಾರ್, ಕಿಶೋರ್, ರೋಟರಿ ಸದಸ್ಯರು ಉಪಸ್ಥಿತರಿದ್ದರು.

Shivamogga Smart City ಸ್ಮಾರ್ಟ್ ಸಿಟಿ ಗಮನಕ್ಕೆ ದೋಷಪೂರಿತ ಕಾಮಗಾರಿ ಬಗ್ಗೆ ಹಿತರಕ್ಷಣಾ ವೇದಿಕೆ ವರದಿ

0

Shivamogga Smart City ಶಿವಮೊಗ್ಗ ಸ್ಮಾರ್ಟ್ ಸಿಟಿ ಆಗುವತ್ತ ದಾಪುಗಾಲಿಡುತ್ತಿದೆ. ಸಾರ್ವಜನಿಕರಿಗೆ ಅವಶ್ಯಕವಾದ ಮೂಲಭೂತ ಸೌಕರ್ಯಗಳ ಬಗ್ಗೆ ಕೂಡ ಸುಧಾರಣೆಯ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ.

ಹಲವು ಕಡೆ ಈ ಕಾಮಗಾರಿಗಳು ಫಲಪ್ರದವಾಗಿವೆ. ಇನ್ನೂ. ಕೆಲವು ಕಡೆ ನಿರ್ಲಕ್ಷ್ಯದಿಂದ ಕಾಮಗಾರಿಗಳಲ್ಲಿ ದೋಷಗಳು ಕಂಡು ಬರುತ್ತಿವೆ. ಇವುಗಳ ಬಗ್ಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳು ಸ್ಮಾರ್ಟ್ ಸಿಟಿ ಆಡಳಿತದ ಗಮನಕ್ಕೆ ಆಗಾಗ್ಗೆ ತರುತ್ತಿವೆ. ಇವುಗಳನ್ನು ಸ್ಮಾರ್ಟ್ ಸಿಟಿ ಆಡಳಿತವು ಸೂಕ್ತವಾಗಿ ರಿಪೇರಿ ಕೂಡ ಮಾಡಿಸುತ್ತಿದೆ.

ಶಿವಮೊಗ್ಗ ನಾಗರಿಕ ಹಿತ ರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಶ್ರೀ ವಸಂತಕುಮಾರ್ ಇವರು ಕೆ ಲೈವ್ ನ್ಯೂಸ್ ಗೆ ದೋಷಪೂರಿತ ಕಾಮಗಾರಿ ಬಗ್ಗೆ ಅಹವಾಲು ಕಳಿಹಿಸಿದ್ದಾರೆ.

Shivamogga Smart City ಸಾರ್ವಜನಿಕರ ಸಮಸ್ಯೆ ಬಗ್ಗೆ ಸೂಕ್ತವಾಗಿ ಸ್ಪಂದಿಸುತ್ತಿರುವ ಸ್ಮಾರ್ಟ್ ಸಿಟಿ ಆಡಳಿತವು ಈ ದೋಷಪೂರಿತ ಕಾಮಗಾರಿ ಬಗ್ಗೆ ಸೂಕ್ತ ಕ್ರಮ ಜರುಗಿಸಲು ಕೋರಿದ್ದಾರೆ.

ಅವರು ಬರೆದ ಒಕ್ಕಣಿಕೆ ಹೀಗಿದೆ..

ಪತ್ರಕರ್ತರೇ ಎಚ್ಚರ ಕಾಲು ಮುರಿದೀತು: ಸ್ಮಾರ್ಟಸಿಟಿ ಪುಟ್ಪಾತ್ ಕಳಪೆ ಕಾಮಗಾರಿ. ಸ್ಥಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮೇಟಲು ಎದುರ ಭಾಗ.

Rural Assembly Constituency ಶಾಸಕ ಕೆ.ಬಿ.ಅಶೋಕ ನಾಯಕ್ ಅವರಿಂದ ಏಪ್ರಿಲ್ 18 ರಂದು ನಾಮಪತ್ರ ಸಲ್ಲಿಕೆ

0

Rural Assembly Constituency ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಏಪ್ರಿಲ್ 18ರಂದು ನಾಮಪತ್ರ ಸಲ್ಲಿಸುತ್ತಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಹೇಳಿದರು.

ಹೊಳೆಹೊನ್ನೂರು ಮಂಡಲ ವ್ಯಾಪ್ತಿಯ ಅರಹತೋಳಲು ಕೈಮರ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಮಂಗಳವಾರ ಏಪ್ರಿಲ್ 18ರ ಬೆಳಗ್ಗೆ 8.30ಕ್ಕೆ ರವೀಂದ್ರನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾವಿರಾರು ಕಾರ್ಯಕರ್ತರ ಆಶೀರ್ವಾದದೊಂದಿಗೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ತಿಳಿಸಿದರು.

ಐದು ವರ್ಷಗಳಲ್ಲಿ ಗ್ರಾಮಾಂತರ ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಪ್ರಾಮುಖ್ಯತೆ ಕೊಟ್ಟು ಕೆಲಸ ಮಾಡಿದ್ದೇನೆ. ಎಲ್ಲರ ಬೆಂಬಲ ಹಾಗೂ ಆಶೀರ್ವಾದದಿಂದ ಬಿಜೆಪಿ ಮತ್ತೊಮ್ಮೆ ಗೆಲ್ಲಿಸಲು ಎಲ್ಲ ಕಾರ್ಯಕರ್ತರೂ ಒಟ್ಟಾಗಿ ಕೆಲಸ ಮಾಡಬೇಕಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಆಡಳಿತಕ್ಕೆ ತರಬೇಕಿದೆ ಎಂದರು.

Rural Assembly Constituency ದೇವಕಾತಿಕೊಪ್ಪದ ಶ್ರೀ ಬಸವೇಶ್ವರ ಸ್ವಾಮಿ ಹಾಗೂ 51ನೇ ವರ್ಷದ ಶ್ರೀ ಆದಿಶಕ್ತಿ ಜಕಾತಮ್ಮ ದೇವಿಯ ಹಬ್ಬದ ಪ್ರಯುಕ್ತ ಶುಕ್ರವಾರದಂದು ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಅವರು ದೇವರ ದರ್ಶನ ಪಡೆದು ಆರ್ಶೀವಾದ ಪಡೆದರು. ನಂತರ ಹೊಳೆಹೊನ್ನೂರು, ಚಂದನಕೆರೆ ಭಾಗಗಳಲ್ಲಿ ಗ್ರಾಮದ ಪ್ರಮುಖರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಮುದುವಾಲ ಗ್ರಾಮದಲ್ಲಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.

ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಬಿ.ಕೆ.ಶ್ರೀನಾಥ್, ಗ್ರಾಮಾಂತರ ಮಂಡಲ ರತ್ನಾಕರ ಶೆಣೈ, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಮಂಜುನಾಥ ಕಲ್ಲಜ್ಜನಾಳ್, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಗೋಪಾಲ್, ಗಿರೀಶ್, ಹೊಳೆಹೊನ್ನೂರು ಮಂಡಲ ಪ್ರಧಾನ ಕಾರ್ಯದರ್ಶಿ ಉಜ್ಜಿನಪ್ಪ, ಮಲ್ಲೇಶ್, ಪ್ರಮುಖರಾದ ಜಗದೀಶ್, ನಾಗರತ್ನ ಮತ್ತಿತರರು ಉಪಸ್ಥಿತರಿದ್ದರು.

BJP Karnataka ಲಕ್ಷ್ಮಣ ಸವದಿ ಎಂ ಎಲ್ ಸಿ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವಕ್ಕೂ ರಾಜಿನಾಮೆ

0

BJP Karnataka ಲಕ್ಷ್ಮಣ ಸವದಿ ಎಂ ಎಲ್ ಸಿ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವಕ್ಕೂ ರಾಜಿನಾಮೆ.
ಇಂದು ಬೆಂಗಳೂರಿನಲ್ಲಿ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮುಖತಃ ರಾಜಿನಾಮೆ ಪತ್ರ ಸಲ್ಲಿಸಿದರು.

ಮನೆ ಬಿಟ್ಟಾಗಿದೆ.ಅದರ ಬಗ್ಗೆ ಯೋಚನೆ ಮಾಡಲ್ಲ. ನನ್ನ ಜೊತೆ ಕೆಲಸ ಮಾಡಿದ ಎಲ್ಲರಿಗೂ ಒಳ್ಳೆಯದಾಗಲಿ .ಹಾಗೇ ಕಾಂಗ್ರೆಸ್ ಸೇರುತ್ತೇನೆ. ನನಗೂ ಒಳ್ಳೇಯದನ್ನ ಹಾರೈಸಿ ಎಂದರು.

BJP Karnataka ಅಥಣಿಯಲ್ಲಿ ಸ್ಪರ್ಧೆ ಮಾಡ್ತೀನಿ .ಹೆಚ್ಚಿನ ಮತಗಳಿಂದ ಆರಿಸಿ ಬರ್ತೀನಿ.ನಿಮ್ಮೆದುರು ಮಾತಾಡ್ತೀನಿ ಎಂದೂ ಮಾಧ್ಯಮಗಳಿಗೆ ತಿಳಿಸಿದರು.

ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ,ಸವದಿಯ ಅವರನ್ನ ಗೌಪ್ಯವಾಗಿ ಭೇಟಿ ಮಾಡಿದರೆಂದೂ ಗುಸುಗುಸು ಸುದ್ದಿ ಹರಡಿದೆ.

ಸವದಿಯ ನಡೆ ಬೆಳಗಾಂ ಪವರ್ ಬ್ಯಾಂಕ್ ನಲ್ಲಿ ಎಷ್ಟು
ಬಿಜೆಪಿಗೆ ಪವರ್ ಮೈನಸ್ ಮಾಡತ್ತೆ ಕಾದು ನೋಡಬೇಕಿದೆ.

Chanakya Chess Academy ಏಪ್ರಿಲ್17 ರಿಂದ 27 ರವರೆಗೆ ಚಾಣಕ್ಯ ಚೆಸ್ ಸ್ಕೂಲ್ ನಿಂದ ಚೆಸ್ ತರಬೇತಿ ಶಿಬಿರ

0

Chanakya Chess Academy ಶಿವಮೊಗ್ಗದ ಚಾಣಕ್ಯ ಚೆಸ್ ಸ್ಕೂಲ್ ವತಿಯಿಂದ ಏ.17ರಿಂದ 27ರವರೆಗೆ ಬೇಸಿಗೆ ಚೆಸ್ ತರಬೇತಿ ಶಿಬಿರ ಹಾಗೂ ಪ್ರತಿದಿನ ಬೇಸಿಕ್ ಹಾಗೂ ಇಂಟರ್ ಮೀಡಿಯೆಟ್ ಲೇವೆಲ್ ಚೆಸ್ ತರಬೇತಿಯನ್ನು 02 ಬ್ಯಾಚ್‌ಗಳಲ್ಲಿ ಆಯೋಜಿಸಲಾಗಿದೆ.

Chanakya Chess Academy ಪ್ರತಿದಿನ 0ರಿಂದ 11:30 ಹಾಗೂ 11:30ರಿಂದ 01 ಗಂಟೆಯವರೆಗೆ, ಗೋಪಾಲಗೌಡ ಬಡಾವಣೆಯ ಲಾಸ್ಟ್ ಬಸ್ ಸ್ಟಾಪ್ ಎದುರು ಗುರು ಬಿಲ್ಡಿಂಗ್‌ನಲ್ಲಿ ತರಬೇತಿ ನಡೆಸಲಾಗು ವುದು. ಮಾಹಿತಿಗೆ ಮೊ. 9845830233, 9741591672ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

Ramzan Festival ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲೀಂ ಬಾಂಧವರಿಗೆ ದಿನಸಿ ಕಿಟ್ ವಿತರಣೆ

0

Ramzan Festival ರಂಜಾನ್ ಹಬ್ಬದ ಪ್ರಯುಕ್ತ ಷರೀಪ್‌ಗಲ್ಲಿಯಲ್ಲಿ ಮುಸ್ಲಿಂ ಬಾಂಧವರಿಗೆ ಸಮಾಜದ ಮುಖಂಡ ಸಿ.ಎನ್.ಅಕ್ಮಲ್ ಅವರು ತಮ್ಮ ಸ್ವಗೃಹ ಸಮೀಪದಲ್ಲಿ ಶುಕ್ರವಾರ ಹಬ್ಬದ ಆಚರಣೆಗೆ ಉಚಿತವಾಗಿ ದಿನಸಿ ಕಿಟ್‌ನ್ನು ನಿವಾಸಿಗಳಿಗೆ ವಿತರಿಸಿದರು.

ಬಳಿಕ ಮಾತನಾಡಿದ ಅವರು ರಂಜಾನ್ ಹಬ್ಬದ ಮುಕ್ತಾಯವು ಇನ್ನೂ ಕೆಲವು ದಿನಗಳಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ನಿವಾಸಿಗಳಿಗೆ ಹಬ್ಬವನ್ನು ಆಚರಿಸಲು ದಿನೋಪಯೋಗಿ ವಸ್ತುಗಳ ಕಿಟ್‌ನ್ನು ವಿತರಿಸಲಾಗಿದ್ದು ಸಾರ್ವಜನಿಕರು ಅತ್ಯಂತ ಸಡಗರದಿಂದ ಆಚರಣೆ ಮಾಡಬೇಕು ಎಂದು ಶುಭ ಕೋರಿದರು.

Ramzan Festival ಅತ್ಯಂತ ಆರ್ಥಿಕ ಸಂಕಷ್ಟದಲ್ಲಿರುವ ಮುಸ್ಲೀಂ ಬಾಂಧವರಿಗೆ ತಮ್ಮ ವೈಯಕ್ತಿಕವಾಗಿ ಕಿಟ್‌ಗಳನ್ನು ವಿತರಣೆ ಮಾಡಲಾಗುತ್ತಿದ್ದು ಇಂದು ಸುಮಾರು ೨೦೦ಕ್ಕೂ ಹೆಚ್ಚು ಮಂದಿಗೆ ಕಿಟ್‌ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರುಗಳಾದ ಸಾದಿಕ್, ರಿಜ್ವಾನ್, ಮುಬರಕ್, ಜಬೀ, ಅಜ್ಮಲ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Dr. Ambedkar ಜಾತಿಮತ ಬಿಡಿ ಮಾನವತೆಗೆ ಜೀವ ಕೊಡಿ ಅಂಬೇಡ್ಕರ್ ನೀಡಿದ ಕರೆ- ಪ್ರೊ.ಮಹಾದೇವಸ್ವಾಮಿ

0

Dr. Ambedkar ಜಾತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್‍ರವರು ಜಾತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಮಹಾದೇವಸ್ವಾಮಿ ತಿಳಿಸಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಇಂದು ಏರ್ಪಡಿಸಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‍ರವರ 132 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

ಮೂಲ ನಿವಾಸಿ, ಅನ್ಯ ನಿವಾಸಿಗಳಿಬ್ಬರ ನಡುವಿನ ಸಾಮಾಜಿಕ ಅಂತರವೇ ಜಾತಿ. ಮತ ಎನ್ನುವುದು ಮನುಷ್ಯನನ್ನು ಮನುಷ್ಯನನ್ನಾಗಿ ನೋಡುವುದೇ ವಿನಃ ಪ್ರಾಣಿಗಳಿಗಿಂತ ಕೀಳಾಗಿ ಕಾಣುವುದಲ್ಲ. ಪರಸ್ಪರ ವ್ಯಕ್ತಿ ಗೌರವ ಹಾಗೂ ಆರ್ಥಿಕ, ಸಾಮಾಜಿಕ ಸಮಾನತೆ ನೀಡುವುದೇ ಉತ್ತಮ ಶಿಕ್ಷಣ.

Dr. Ambedkar ಜಾತಿ, ಮತದಾಚೆ ಬದುಕಲು ಕಲಿಸುವುದೇ ಸಂಘಟನೆ. ನೈತಿಕತೆ ಎಂಬುದು ನಾವು ರೂಢಿಸಿಕೊಳ್ಳುವ ವಿಧಾನ. ಆರ್ಥಿಕ, ಸಾಮಾಜಿಕ ಜನತಂತ್ರ ರೂಪುಗೊಳ್ಳಲು ನೈತಿಕ ವಿಧಾನದಲ್ಲಿ ಸಮಾಜ ಕಟ್ಟುವ ಕೆಲಸವೇ ಹೋರಾಟ ಎಂದಿದ್ದರು ಅಂಬೇಡ್ಕರ್.

ಸಮಾಜದ ಹಿತದೃಷ್ಟಿಯಿಂದ ಇಂತಹ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಕ ಹೇಗೆ ಹೆಜ್ಜೆ ಇಡಬೇಕೆಂದು ಅವರು ಸ್ಪಷ್ಟವಾಗಿ ತಿಳಿಸಿದ್ದರು. ಸಾಮಾಜಿಕ ಮತ್ತು ನೈತಿಕ ಬದ್ದತೆ ಇದ್ದಾಗ, ಪರಸ್ಪರ ನಂಬಿಕೆ ಬೆಳೆದಾಗ ಮಾತ್ರ ಸಮಾಜದ ಉನ್ನತಿ ಸಾಧ್ಯ ಎಂದಿದ್ದರು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಮಾತನಾಡಿ, ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ನಮ್ಮ ಜನತಂತ್ರ ವ್ಯವಸ್ಥೆ ಇಷ್ಟು ಗಟ್ಟಿಯಾಗಿರಲು ಕಾರಣ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ವರು. ಅವರು ಕೇವಲ ನಮಗೆ ಸಂವಿಧಾನ ಮಾತ್ರ ನೀಡಿಲ್ಲ ಸದೃಢ ಅರ್ಥವ್ಯವಸ್ಥೆ ಬಗ್ಗೆ ಮುಂದಾಲೋಚನೆ ಮಾಡಿ ಒಳನೋಟವನ್ನು ನೀಡಿದ್ದಾರೆ.

ಸಂವಿಧಾನ ಜಾರಿಯಾದ ಮೊದಲ ದಿನವೇ ಎಲ್ಲರಿಗೂ ಸಮಾನವಾಗಿ ಮತದಾನದ ಹಕ್ಕನ್ನು ನೀಡಲಾಗಿದೆ. ಇದೊಂದು ದೊಡ್ಡ ಸಾಧನೆಯೇ ಸರಿ. ಏಕೆಂದರೆ ಎಷ್ಟೋ ಮುಂದುವರೆದ ರಾಷ್ಟ್ರಗಳು ಮಹಿಳೆಯರಿಗೆ ಮತದಾನದ ಹಕ್ಕನ್ನು ನೀಡಿರಲಿಲ್ಲ. ಆದರೆ ನಮ್ಮ ಸಂವಿಧಾನ ಜಾರಿಯಾದಗಿನಿಂದ ಎಲ್ಲರಿಗೂ ಸಮಾನವಾಗಿ ಮತದಾನದ ಹಕ್ಕನ್ನು ನೀಡಿದೆ. ನಾವೆಲ್ಲರೂ ಇದರ ಸದುಪಯೋಗ ಪಡೆಯಬೇಕು ಎಂದರು.

ಅಂಬೇಡ್ಕರ್ ರವರು ಅರ್ಥಶಾಸ್ತ್ರದಲ್ಲಿ ಒಳ್ಳೆಯ ಪುಸ್ತಕ ಬರೆದಿದ್ದಾರೆ. ಪ್ರಸ್ತುತ ಸನ್ನಿವೇಶದ ಬಗ್ಗೆ ಅಷ್ಟು ಹಿಂದೆಯೇ ಮುಂದಾಲೋಚನೆ ಮಾಡಿ ಬರೆದಿದ್ದಾರೆ. ಇವರು ಯುವಜನತೆಗೆ, ಸಾಧಕರಿಗೆ ಸ್ಪೂರ್ತಿಯಾಗಿದ್ದು, ನಾವೆಲ್ಲರೂ ಇವರ ಜೀವನ ಚರಿತ್ರೆಯನ್ನು ಓದಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಅಂಬೇಡ್ಕರ್‍ರವರ ಬಗ್ಗೆ ಮಾತನಾಡುವುದೇ ಹೆಮ್ಮೆಯ ವಿಚಾರ. ಅವರು ಎಂದಿಗೂ ಸ್ಮರಣೀಯ. ಹಿಂದುಳಿದವರು, ಬಡವರು ಮತ್ತು ಮಹಿಳೆಯರಿಗೆ ಶಿಕ್ಷಣದ ಅಗತ್ಯತೆ ಬಗ್ಗೆ ಒತ್ತಿ ಹೇಳಿದ್ದರು.

ಆಡು ಮುಟ್ಟದ ಸೊಪ್ಪಿಲ್ಲ ಎನ್ನುವ ರೀತಿ ಅವರು ತಿಳಿಯದ ಕ್ಷೇತ್ರಗಳಿಲ್ಲ ಎನ್ನಬಹುದು. ನೂರಾರು ಕ್ಷೇತ್ರಗಳ ಬಗ್ಗೆ ಅವರು ಅಧ್ಯಯನ ಮಾಡಿ ಬರೆದಿದ್ದಾರೆ. ಅದನ್ನು ಓದಿ ಅರ್ಥ ಮಾಡಿಕೊಂಡರೆ ನಮ್ಮ ಜೀವನ ಸಾರ್ಥಕವಾಗುತ್ತದೆ. ಮಾದರಿ ವ್ಯಕ್ತಿತ್ವ ಅವರದ್ದಾಗಿದ್ದು ಅವರೊಬ್ಬ ಜ್ಞಾನ ಭಂಡಾರ. ಅಂತಹ ಮಹಾನ್ ವ್ಯಕ್ತಿಯ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳಬೇಕಿದೆ ಎಂದರು.

ನಮ್ಮ ಜೀವನದಲ್ಲಿ ನಾವು ಎಷ್ಟು ವ್ಯಕ್ತಿಗಳ ಜೀವನ ಕಟ್ಟಿದ್ದೇವೆ ಅನ್ನೋದು ನಮ್ಮ ಧ್ಯೇಯವಾಗಬೇಕು. ಹಾಗೂ ನಮ್ಮ ಸುತ್ತಮುತ್ತ ಶಿಕ್ಷಣದಿಂದ ವಂಚಿತರಾದವರನ್ನು ಗುರುತಿಸಿ ಅವರ ಮನವೊಲಿಸಿ ಶಿಕ್ಷಣದಲ್ಲಿ ತೊಡಗಿಸಬೇಕು. ಜೊತೆಗೆ ನಾವೆಲ್ಲರೂ ಸಂವಿಧಾನವನ್ನು ಓದಿಕೊಳ್ಳಬೇಕು. ಅದರಲ್ಲಿ ಮುಖ್ಯವಾಗಿ ಮೂಲಭೂತ ಹಕ್ಕುಗಳು, ಕರ್ತವ್ಯಗಳು ಹಾಗೂ ರಾಜ್ಯನೀತಿಯ ನಿರ್ದೇಶನ ತತ್ವಗಳನ್ನು ಪ್ರತಿಯೊಬ್ಬರೂ ಓದಿ ತಿಳಿದುಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಜಿ.ಪಂ ಸಿಇಓ ಸ್ನೇಹಲ್ ಎಸ್ ಲೋಖಂಡೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್, ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.