Sunday, April 12, 2026
Sunday, April 12, 2026
Home Blog Page 1245

Shivamogga Tourism ಜಿಲ್ಲೆಯಲ್ಲಿ ಪ್ರವಾಸ ಮತ್ತು ಸಾಹಸ ಕ್ರೀಡೆಗಳಿಗಿರುವ ಅವಕಾಶ ಲಭ್ಯ ಯೋಜನೆಗಳನ್ನ ತಿಳಿಸಬೇಕು- ಡಾ.ಸೆಲ್ವಮಣಿ

0

Shivamogga Tourism ಪ್ರವಾಸೋದ್ಯಮ ಕ್ಷೇತ್ರ ಹಾಗೂ ಸಾಹಸಿ ಕ್ರೀಡೆಗಳಿಗೆ ಅನುಕೂಲವಾಗುವ ರೀತಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಅವಕಾಶಗಳಿದ್ದು, ಅಗತ್ಯ ರೀತಿಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಪರಿಚಯಿಸಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಜ್ರ ಮಹೋತ್ಸವ ಪ್ರಯುಕ್ತ ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ, ಶಿವಮೊಗ್ಗ ಬೈಕ್ ಕ್ಲಬ್, ನಮ್ಮ ಕನಸಿನ ಶಿವಮೊಗ್ಗ, ಶಿವಮೊಗ್ಗ ಪ್ರವಾಸೋದ್ಯಮ ವೇದಿಕೆ, ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿರುವ ಅಂತರಾಷ್ಟ್ರೀಯ ಬೈಕ್ ರ‍್ಯಾಲಿ ಹಾಗೂ ಸುರಕ್ಷತೆ ಪ್ರಯಾಣದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

Shivamogga Tourism ಬಾಲ್ಯದ ದಿನಗಳಲ್ಲಿ ನನಗೂ ಸಾಹಸಿ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಇತ್ತು. ಶಿವಮೊಗ್ಗ ಜಿಲ್ಲೆಯಲ್ಲಿ ಸಾಹಸಿ ಕ್ರೀಡೆಗಳಿಗೆ ಇರುವ ಅವಕಾಶಗಳನ್ನು ಸಮರ್ಪಕ ರೀತಿಯಲ್ಲಿ ಬಳಸಿಕೊಳ್ಳುವ ಬಗ್ಗೆ ಎಲ್ಲರೂ ಒಟ್ಟುಗೂಡಿ ಕಾರ್ಯಗತಗೊಳಿಸಬೇಕು. ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಕ್ಕೆ ಹೆಚ್ಚಿನ ಅವಕಾಶ ಸಿಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ನಮ್ಮ ಸಂಘವು ವಜ್ರ ಮಹೋತ್ಸವ ಆಚರಣೆಯ ಸಂಭ್ರಮದಲ್ಲಿ ಇದ್ದು, ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆದಿದೆ. ಮೊದಲ ಕಾರ್ಯಕ್ರಮವಾಗಿ ಶಿವಮೊಗ್ಗ ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಬೈಕ್ ರ‍್ಯಾಲಿ ಕಾರ್ಯಕ್ರಮ ನಡೆಯುತ್ತಿದೆ ಎಂದು ಹೇಳಿದರು.

ಅಂತರಾಷ್ಟ್ರೀಯ ಬೈಕ್ ರ‍್ಯಾಲಿಯು ನೇಪಾಳದಿಂದ ಶಿವಮೊಗ್ಗದವರೆಗೂ ನಡೆಯಲಿದ್ದು, ಬೈಕ್ ಪ್ರವಾಸದ ಸಂದರ್ಭದಲ್ಲಿ ವಿವಿಧ ಆಯ್ದ ಪ್ರದೇಶಗಳಲ್ಲಿ “ ಈ ಬಾರಿ ಶಿವಮೊಗ್ಗ “ ವಿಷಯ ಕುರಿತು ಪ್ರಚಾರ ನಡೆಸಲಿದ್ದು, ವಿವಿಧ ರಾಜ್ಯಗಳ ಜನರಿಗೆ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳ ಪರಿಚಯ ಮಾಡಿಕೊಡುವ ಜತೆಯಲ್ಲಿ ಶಿವಮೊಗ್ಗಕ್ಕೆ ಭೇಟಿ ನೀಡುವಂತೆ ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಪ್ರವಾಸೋದ್ಯಮ ಸಮಿತಿ ಅಧ್ಯಕ್ಷ ಪ್ರದೀಪ್ ಎಲಿ ಮಾತನಾಡಿ, ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನೇಪಾಳದಿಂದ ಶಿವಮೊಗ್ಗದವರೆಗೂ ಬೈಕ್ ಪ್ರವಾಸ ಆಯೋಜಿಸಿದ್ದು, ನೇಪಾಳದಿಂದ ಆರಂಭಗೊಂಡು ಭಾರತ ದೇಶದ ವಿವಿಧ ರಾಜ್ಯಗಳಲ್ಲಿ ಪ್ರವಾಸ ಸಾಗಲಿದೆ. ಅಂದಾಜು 4000 ಕೀಮಿ ಪ್ರಯಾಣ ಆಗಲಿದೆ. 11 ಜನರು ಬೈಕ್ ಸಾಹಸಿಗಳು ಪ್ರವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಶಿವಮೊಗ್ಗ ಪ್ರವಾಸೋದ್ಯಮ ವೇದಿಕೆ ಅಧ್ಯಕ್ಷ ಡಿ.ಎಂ.ಶಂಕರಪ್ಪ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಬಿ.ಗೋಪಿನಾಥ್, ಜಿ.ವಿಜಯ್‌ಕುಮಾರ್, ಟಿ.ಆರ್.ಅಶ್ವತ್ಥ ನಾರಾಯಣ ಶೆಟ್ಟಿ, ವಸಂತ ಹೋಬಳಿದಾರ್, ರಮೇಶ್ ಹೆಗ್ಡೆ, ಪರಮೇಶ್ವರ್, ಎಸ್.ಎಸ್.ವಾಗೀಶ್, ಮರಿಸ್ವಾಮಿ, ಅನಾ ವಿಜಯೇಂದ್ರ, ಗಣೇಶ್ ಅಂಗಡಿ ಮತ್ತಿತರರು ಉಪಸ್ಥಿತರಿದ್ದರು.

Navodaya School Shivamogga ನವೋದಯ ಶಾಲೆಯಲ್ಲಿನ ಹುಂಚ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ಉಚಿತ ನೀಡಿಕೆ- ಪ್ರಕಾಶ್ ಜೊಯಿಸ್

Navodaya School Shivamogga ಶಿವಮೊಗ್ಗದ ಹುಂಚ ಗ್ರಾಮದಲ್ಲಿ ನಡೆಯುತ್ತಿರುವ ನವೋದಯ ಮತ್ತು ಮೊರಾರ್ಜಿ ಶಿಬಿರದ 45 ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸದ ಅಂಗವಾಗಿ ಗಾಜನೂರು ನವೋದಯ ಶಾಲೆಗೆ ಭೇಟಿ ನೀಡಿದರು.

ಶಿಬಿರದ ಮಕ್ಕಳು ನವೋದಯ ಶಾಲೆಯ ಸುಸಜ್ಜಿತ ಕಲಿಕಾ ಕೊಠಡಿಗಳು, ಗ್ರಂಥಾಲಯ, ಅಟಲ್ ತಿಂಕರಿಂಗ್ ಲ್ಯಾಬ್, ಕವಿ ವನ, ಕ್ರೀಡಾಂಗಣ, ಊಟದ ಹಾಲ್ ಸೇರಿದಂತೆ ನವೋದಯ ಶಾಲೆಯ ಕ್ಯಾಂಪಸ್ ನೋಡಿ ಆನಂದಿಸಿದರು.

ಈ ಸಂದರ್ಭದಲ್ಲಿ ನವೋದಯ ಶಾಲೆಯ ಪ್ರಸ್ತುತ 7ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳು, ಹುಂಚ ಶಿಬಿರದ ಮಕ್ಕಳ ಜೊತೆ ತಮ್ಮ ನವೋದಯ ಪರೀಕ್ಷೆಯ ಅನುಭವ, ಪ್ರವೇಶ ಪರೀಕ್ಷೆಯ ತೆಯ್ಯಾರಿ, ಸಮಯ ನಿರ್ವಹಣೆ ಮತ್ತು ನವೋದಯ ಶಾಲೆಯ ದಿನಚರಿ ಹಂಚಿಕೊಂಡರು.

Navodaya School Shivamogga ಜವಾಹರ ನವೋದಯ ಶಾಲೆಯ ಪ್ರಾಂಶುಪಾಲರಾದ
ಶ್ರೀಮತಿ. ವಲ್ಲಯಾಮೈ ಮಕ್ಕಳನ್ನು ಕುರಿತು ಮಾತನಾಡಿ “ಜವಾಹರ ನವೋದಯ ವಿದ್ಯಾಲಯ, ಭಾರತದ ಕೇಂದ್ರ ಸರ್ಕಾರದ ವತಿಯಿಂದ ನಡೆಸಲಾಗುತ್ತಿರುವ ಉಚಿತ ವಸತಿ ಶಾಲೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವರ ಆರ್ಥಿಕ ಅಥವಾ ಸಾಮಾಜಿಕ ಪರಿಸ್ಥಿತಿ ಲೆಕ್ಕಿಸದೆ, ಅವರಿಗೆ ಉತ್ತಮವಾದ ಆಧುನಿಕ ವಿದ್ಯಾಭ್ಯಾಸದ ಅವಕಾಶ ಕಲ್ಪಿಸಿಕೊಡುವುದು ಇದರ ಉದ್ದೇಶ. ನವೋದಯ ಪ್ರವೇಶ ಪರೀಕ್ಷೆಗೆ ಅಣಿಯಾಗಿರುವ  ಶಿಬಿರದ ಎಲ್ಲಾ ಮಕ್ಕಳಿಗೆ, ಶಿಕ್ಷಣದ ಮಹತ್ವ ತಿಳಿಸಿ, ನವೋದಯ ಪ್ರವೇಶ ಪರೀಕ್ಷೆಯನ್ನು ಶಾಂತಚಿತ್ತರಾಗಿ ಏಕಾಗ್ರತೆಯಿಂದ ಬರೆದು, ನವೋದಯ ಶಾಲೆಗೆ ಉತ್ತಿರ್ಣರಾಗಿ” ಎಂದು ಶುಭ ಹಾರೈಸಿದರು.

ಶಿಬಿರದ ರೂವಾರಿ ಮತ್ತು ನವೋದಯ ಶಾಲೆಯ 8ನೇ ಬ್ಯಾಚ್ ವಿದ್ಯಾರ್ಥಿಯಾದ ಪ್ರಕಾಶ್ ಜೋಯ್ಸ್ – ಸೀನಿಯರ್ ಮ್ಯಾನೇಜರ್ ಕಾಗ್ನಿಜಂಟ್ ಮಾತನಾಡಿ “ಹುಂಚ ವ್ಯಾಪ್ತಿಯ (ಪರೀಕ್ಷೆಗೆ ದಾಖಲಿಸಿದ) ವಿದ್ಯಾರ್ಥಿಗಳಿಗೆ ಉಚಿತವಾಗಿ ನವೋದಯ ಮತ್ತು ಮೊರಾರ್ಜಿ ಶಾಲೆಯ ಪರಿಚಯ, ಆಯ್ಕೆ ಪ್ರಕ್ರಿಯೆ ಮಾಹಿತಿ, ಕೋಚಿಂಗ್, ಮಾದರಿ ಪರೀಕ್ಷೆ, ಕಲಿಕಾ ಸಾಮಗ್ರಿಗಳು, ಸಮಯ ನಿರ್ವಹಣೆ ಮತ್ತು ಇತರೆ ಉಪಯುಕ್ತ ಮಾಹಿತಿಗಳನ್ನು ಉಚಿತವಾಗಿ ಕೊಡಲಾಗುವುದು” ಎಂದು ನುಡಿದರು.

ಈ ಸಂದರ್ಭದಲ್ಲಿ ಶಿಬಿರದ ಶಿಕ್ಷಕರ ವೃಂದದ ಶಿವಕುಮಾರ್, ಅಕ್ಷತ, ಸವಿತಾ ಹಾಗೂ ಸಂಚಾಲಕರಾದ ಅಭಿಷೇಕ್, ಸಂಜಯ್.. ಜೊತೆಗೆ ನವೋದಯ ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ಶಿಬಿರದ ಮಾರ್ಗದರ್ಶಕರಾದ ನವೀನ್ ಕುಮಾರ್ ಎಂ ಪಿ – ಪ್ರಾಂಶುಪಾಲರು, ಸುನಿಲ್ ಕುಮಾರ್ ಕೆ ಪಿ – ವೈದ್ಯರು ಮ್ಯಾಕ್ಸ್ ಆಸ್ಪತ್ರೆ, ಸುನಿಲ್ ಕುಮಾರ್ ಕೆ ಎಂ – ಮುಖ್ಯ ಪಶು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಹುಂಚ ಗ್ರಾಮ ಪಂಚಾಯತ್ ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯ ಮಕ್ಕಳಿಗೆ ಅನುಕೂಲ ಆಗುವಂತೆ ಹುಂಚದಲ್ಲಿಯೇ, ನುರಿತ ಶಿಕ್ಷಕರಿಂದ ಉಚಿತ ತರಬೇತಿ ಶಿಬಿರ ಹಮ್ಮಿಕೊಂಡಿದ್ದು. ಪ್ರಥಮ ವರ್ಷದ ಶಿಭಿರದಲ್ಲಿ 27 ಮಕ್ಕಳು, 12 ವಿವಿಧ ಶಾಲೆಗಳಿಂದ ಭಾಗವಹಿಸಿ, 8 ಮಕ್ಕಳು ಮೊರಾರ್ಜಿ ಶಾಲೆಗೆ ತೇರ್ಗಡೆ ಆಗಿರುತ್ತಾರೆ. ಪ್ರಸಕ್ತ ಸಾಲಿನಲ್ಲಿ 17 ಶಾಲೆಗಳಿಂದ ಒಟ್ಟು 49 ಮಕ್ಕಳಿದ್ದು ಎಲ್ಲಾ ಮಕ್ಕಳು ನವೋದಯ ಪ್ರವೇಶ ಪರೀಕ್ಷೆಗೆ ಉತ್ತಮವಾಗಿ ತೆಯ್ಯಾರಿ ನಡೆಸಿದ್ದಾರೆ..

Shivamogga Police ಮತದಾನವು ಪ್ರಜಾಪ್ರಭುತ್ವದ ಹಬ್ಬವಾಗಿ ಆಚರಿಸಬೇಕು- ರೋಹನ್ ಜಗದೀಶ್

0

Shivamogga Police ಮತದಾನವನ್ನು ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ಹಬ್ಬದಂತೆ ಆಚರಿಸಬೇಕು ಎಂದು ಸಾಗರದ ಪೊಲೀಸ್ ಉಪ ಅಧೀಕ್ಷಕ ರೋಹನ್ ಜಗದೀಶ್ ಸಲಹೆ ನೀಡಿದರು.

ಸಾಗರದ ಸಾಗರ್ ಹೋಟೆಲ್ ವೃತ್ತದಲ್ಲಿ ಪ್ರೆಸ್ ಟ್ರಸ್ಟ್ ಆಫ್ ಸಾಗರ್ ಮತ್ತು ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಮತದಾನ ಜಾಗೃತಿ ವiತ್ತು ಅರಿವು ಸಮಿತಿ ಸಹಯೋಗದಲ್ಲಿ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಎಲ್ಲರೂ ಕುಟುಂಬ ಸಮೇತ ಬಂದು ಕಡ್ಡಾಯವಾಗಿ ಮತದಾನ ಮಾಡುವುದರಿಂದ ಪ್ರಜಾಪ್ರಭುತ್ವದ ಬೇರುಗಳು ಗಟ್ಟಿಗೊಳ್ಳುತ್ತವೆ ಎಂದರು.
ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಮತದಾನದ ಹಕ್ಕನ್ನು ಚಲಾಯಿಸಬೇಕು. ಇದು ನಮ್ಮ ಕರ್ತವ್ಯದ ಭಾಗವೂ ಹೌದು. ಒಂದು ರಾಷ್ರ್ಟದ ಪ್ರಗತಿಗೆ ಮತದಾನವೂ ಪ್ರೇರಣೆಯಾಗಿದೆ. ನಮ್ಮ ಮತ ನಮ್ಮ ಹಕ್ಕು ಎಂದರು.

Shivamogga Police ಸಂಘದ ಅಧ್ಯಕ್ಷ ರಮೇಶ್ ಹೆಗಡೆ ಗುಂಡೂಮನೆ ಮಾತನಾಡಿ, ಹಕ್ಕು ಕೇಳುವ ನಾವು ಕರ್ತವ್ಯವನ್ನು ಮರೆಯಬಾರದು. ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಅರಿವು ಗ್ರಾಮೀಣ ಭಾಗದಲ್ಲಿ ಕಾಣಬಹುದು. ಆದರೆ ನಗರ ಪ್ರದೇಶಗಳಲ್ಲಿ ಕಡಿಮೆ ಮತದಾನವಾಗುತ್ತಿರುವುದು ವಿದ್ಯಾವಂತರೇ ಮತದಾನಕ್ಕೆ ಬಾರದಿರುವುದು ವಿಷಾದನೀಯ. ಮತದಾನ ಮಾಡುವಲ್ಲಿ ನಮ್ಮ ಬದ್ಧತೆ ತೋರಬೇಕು ಎಂದರು.

ಶಿಕ್ಷಕ, ಲೇಖಕ ಪಾಲಾಕ್ಷಪ್ಪ ಎಸ್.ಎನ್. ಅವರು ಮತದಾನದ ಜಾಗೃತಿ ಕುರಿತಂತೆ ಕವನವೊಂದನ್ನು ವಾಚಿಸಿದರು.
ಪ್ರೆಸ್ ಟ್ರಸ್ಟ್ ಆಫ್ ಸಾಗರ್ ಅಧ್ಯಕ್ಷ ಎಚ್.ವಿ.ರಾಮಚಂದ್ರರಾವ್, ಕಾರ್ಯದರ್ಶಿ ಎಸ್.ವಿ.ಹಿತಕರ ಜೈನ್, ಟ್ರಸ್ಟಿ ಕೆ.ಎನ್.ವೆಂಕಟಗಿರಿ, ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣಪತಿ ಶಿರಳಗಿ, ಖಜಾಂಚಿ ರಮೇಶ್ ಎನ್., ಸದಸ್ಯರಾದ ಶೈಲೇಂದ್ರ, ಧರ್ಮರಾಜ್, ಶ್ರೀಧರ ಭಾಗ್ವತ್, ವಿಜಯೇಂದ್ರ ಶ್ಯಾನಭಾಗ್, ಅಂತೋನಿ ನಜರತ್, ರವಿ, ಪಂಚಮಿ ಹಾಗೂ ಮತದಾನ ಜಾಗೃತಿ ಮತ್ತು ಅರಿವು ಸಮಿತಿಯ ವೆಂಕಟೇಶ್, ಗಂಗಾಧರ ಮತ್ತಿತರರು ಹಾಜರಿದ್ದರು.

ಮತದಾನ ಜಾಗೃತಿ ಅಂಗವಾಗಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು.

DC Shivamogga ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ ಕಾನೂನಿನಲ್ಲಿ ನಿಷೇಧ-ಡಾ.ಸೆಲ್ವಮಣಿ

0

DC Shivamogga 2023 ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮಕ್ಕಳ ದುರುಪಯೋಗ ತಡೆ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ತನ್ನ ಅಧಿನಿಯಮ 2005 ರ ಕಲಂ 13 ರನ್ವಯ ದೂರುಗಳನ್ನು ವಿಚಾರಣೆಗೊಳಪಡಿಸುವ ಹಾಗೂ ಕಲಂ 14 ರಡಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯವು ನಿರ್ವಹಿಸುವ ಅಧಿಕಾರವನ್ನು ಹೊಂದಿರತ್ತದೆ.

ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ ಪ್ರಕರರಣಗಳಿಗೆ ಸಂಬಂಧಿಸಿದಂತೆ ಆಯೋಗವು ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವ ಕಾರ್ಯ ವ್ಯಾಪ್ತಿ ಹೊಂದಿರುತ್ತದೆ.

DC Shivamogga ಆದ್ದರಿಂದ ರಾಜ್ಯದಲ್ಲಿ ನಡೆಯುವ ಚುನಾವಣಾ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ಮಕ್ಕಳನ್ನು ಬಳಸಿಕೊಳ್ಳುವುದನ್ನು, ಆಮಿಷಗಳನ್ನು ಒಡ್ಡುವುದು ಮತ್ತು ಉಡುಗೊರೆಗಳನ್ನು ನೀಡುವುದನ್ನು ನಿಷೇಧಿಸಿದೆ. ಆದಾಗ್ಯೂ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದು, ಆಮಿಷ ಒಡ್ಡುವುದು, ಉಡುಗೊರೆ ನೀಡುವುದು, ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕು ಉಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಬಳಸಿಕೊಂಡಿರುವುದು ಕಂಡುಬಂದಿದ್ದಲ್ಲಿ ಅಂತಹವರ ವಿರುದ್ದ ಮಕ್ಕಳ ಹಕ್ಕುಗಳ ಉಲ್ಲಂಘನೆ ಮತ್ತು ವಿಶ್ವಸಂಸ್ಥೆಯ ಮಕ್ಕಲ ಹಕ್ಕುಗಳ ಒಡಂಬಡಿಕೆಯ ಕಲಂ 32, 36 ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) ಮತ್ತು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ-2018 ರನ್ವಯ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Shimoga Lokayukta Police ಸಾರ್ವಜನಿಕರ ಮಾಹಿತಿಗೆ ಶಿವಮೊಗ್ಗ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಸಂಪರ್ಕ ಮೊಬೈಲ್ ಸಂಖ್ಯೆಗಳು

0

Shimoga Lokayukta Police ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಪೊಲೀಸ್ ಠಾಣೆ ಹಾಗೂ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರು ಮೊಬೈಲ್ ನಂಬರ್‍ಗಳನ್ನು ವಿತರಿಸಿದ್ದು, ಈ ಕೆಳಕಂಡಂತೆ ಇವೆ.

Shimoga Lokayukta Police ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಮೊ.ಸಂ: 9364062525, ಪೊಲೀಸ್ ಅಧೀಕ್ಷಕರು ಚಿತ್ರದುರ್ಗ(ಪ್ರಭಾರ) 9364062513, ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ 9364062560, ಪೊಲೀಸ್ ಇನ್ಸ್‍ಪೆಕ್ಟರ್-1 ಶಿವಮೊಗ್ಗ 9364062647, ಪೊಲೀಸ್ ಇನ್ಸ್‍ಪೆಕ್ಟರ್-2 ಶಿವಮೊಗ್ಗ 9364062648, ಪೊಲೀಸ್ ಇನ್ಸ್‍ಪೆಕ್ಟರ್-3 ಶಿವಮೊಗ್ಗ 9364062649 ಆಗಿರುತ್ತದೆ ಎಂದು ಕರ್ನಾಟಕ ಲೋಕಾಯುಕ್ತ ಶಿವಮೊಗ್ಗದ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

MESCOM ಚಿಕ್ಕಮಗಳೂರು ಜಿಲ್ಲೆ ಬಸರವಳ್ಳಿ ಮತ್ತು ಕೆಳಗಣಿ ಗ್ರಾಮಗಳಿಗೆ ವಿದ್ಯುತ್ ಅಡಚಣೆ ಸೂಕ್ತ ಕ್ರಮಕ್ಕಾಗಿ ಮನವಿ

0

MESCOM ಚಿಕ್ಕಮಗಳೂರು ತಾಲ್ಲೂಕಿನ ಬಸರವಳ್ಳಿ ಹಾಗೂ ಕೆಳಗಣೆ ಗ್ರಾಮಗಳಿಗೆ ಕೃಷಿ ಚಟುವಟಿಕೆ ಹಾಗೂ ಇನ್ನಿತರೆ ಕೆಲಸಗಳಿಗೆ ಸ್ಥಳೀಯ ಮೆಸ್ಕಾಂ ಅಧಿಕಾರಿಗಳು ಸೂಕ್ತ ವಿದ್ಯುತ್ ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ತಾಲ್ಲೂಕು ಘಟಕ ನಗರದ ಮೆಸ್ಕಾಂ ಕಚೇರಿಗೆ ಮನವಿ ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದೆ.

ಈ ಸಂಬಂಧ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಜಿ. ಮಾರುತಿ ಅವರಿಗೆ ಮನವಿ ಸಲ್ಲಿಸಿದ ತಾಲ್ಲೂಕು ಘಟಕದ ಕಾರ್ಯದರ್ಶಿ ಕೆ.ಇ.ಪೂಣೇಶ್ ಸ್ಥಳೀಯ ಕೆಇಬಿ ಅಧಿಕಾರಿಗಳು ಇವೆರಡು ಗ್ರಾಮಗಳಲ್ಲಿ ವಿದ್ಯುತ್ ಸಮರ್ಪಕವಾಗಿ ವ್ಯವಸ್ಥೆ ಕಲ್ಪಿಸದೇ ಅಕ್ರಮವೆಸಗುತ್ತಿದೆ ಎಂದು ದೂರಿದರು.

MESCOM ಬಸರವಳ್ಳಿ ಗ್ರಾ.ಪಂ. ಸಮೀಪ ಟಿಸಿ ಇದೆ. ಇದರಲ್ಲಿ 08 ಹೆಚ್.ಪಿ.ಯಿಂದ ಸುಮಾರು 30 ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಆದರೆ ಹೊಸ ಕಲೆಕ್ಷನ್ 03 ಹೆಚ್.ಪಿ. ಕೇಳಿದರೆ ಓವರ್‌ಲೋಡ್ ಎಂದು ಹೇಳಿ ಆ ಟಿಸಿಗೆ 04 ಹೆಚ್‌ಪಿ ಹೆಚ್ಚಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ ಎಂದರು.

ಮೆಸ್ಕಾಂ ಅಧಿಕಾರಿಗಳು ಈ ಭಾಗದಲ್ಲಿ ಕಂಬಗಳಿಲ್ಲದೇ ಕೇಬಲ್‌ಗಳ ಮೂಲಕ ಸಂಪರ್ಕವನ್ನು ನೀಡಿರುತ್ತಾರೆ. ಬೇರೆ ಕಡೆಗಳಲ್ಲಿ 25 ಟಿಸಿಯಲ್ಲಿ ಸುಮಾರು 05 ರಿಂದ 10 ಪಂಪ್‌ಸೆಟ್ ಮೂಲಕ 50 ಮನೆಗೆ ಸಂಪರ್ಕ ಕಲ್ಪಿಸಲಾಗಿದೆ ಎಂದರು.

ಅದೇ ರೀತಿ ಕೆಳಗಣೆ ಬಾರಮನೆಯಲ್ಲಿ 25 ಕೆವಿ ಟಿಸಿಯಲ್ಲಿ 10 ರಿಂದ 15 ಬೋರ್‌ವೆಲ್ ಮತ್ತು 40 ಮನೆಗಳಿಗೆ ಸಂಪರ್ಕ ಕಲ್ಪಿಸಿರುವ ಪರಿಣಾಮ ತೋಟದ ಒಳಗಿನ ಲೈನ್‌ನಲ್ಲಿ ಕೆಲಸಗಾರರಿಗೆ, ರೈತರಿಗೆ ಸಣ್ಣಪುಟ್ಟ ಅನಾಹುತಗಳಾಗಿದ್ದು ಲೈನ್ ರಸ್ತೆ ಪಕ್ಕದಲ್ಲಿ ಅಳವಡಿಸಿ ಹೆಚ್ಚುವರಿ ಟಿಸಿ ತುರ್ತಾಗಿ ಹಾಕಿಕೊಡಬೇಕು. ಮುಂದಿನ ದಿನಗಳಲ್ಲಿ ಯಾವುದೇ ಅನಾಹುತಗಳಾಗದಂತೆ ತಪ್ಪಿಸಬೇಕು ಎಂದು ಒತ್ತಾಯಿಸಿದರು.

Canara Bank Rural Self Employment Training Center ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದಲ್ಲಿ ಮೊಬೈಲ್ ರಿಪೇರಿ ಉಚಿತ ಕಲಿಕೆ

Canara Bank Rural Self Employment Training Center ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ,ಶಿವಮೊಗ್ಗ ತಾಲ್ಲೂಕು ಹೊಳಲೂರಿನಲ್ಲಿ 30 ದಿನಗಳ ಮೊಬೈಲ್ ರಿಪೇರಿ ಮತ್ತು ಸರ್ವಿಸ್ಸಿಂಗ್ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ನಿರುದ್ಯೋಗಿ ಯುವಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು. 8ನೇ ತರಗತಿ ಉತ್ತೀರ್ಣರಾಗಿರಬೇಕು, ಗ್ರಾಮೀಣ ಭಾಗದ ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಮತ್ತು ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತಿ ಇರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ.
Canara Bank Rural Self Employment Training Center ತರಬೇತಿಯು 15/05/2023 ರಿಂದ ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577216 (ಶಿವಮೊಗ್ಗ ತಾಲ್ಲೂಕು)
ಇವರಿಗೆ ಕೂಡಲೇ / ತಕ್ಷಣವೇ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.866006283, 8105378735, 9481955721, 9743429595, 9449371579,
ಸಂಪರ್ಕಿಸಬಹುದು.

Coronavirus Disease ದೇಶದಲ್ಲಿ ಏರಿಕೆಯಲ್ಲಿರುವ ಕೊರೋನ ಸೋಂಕು

0

Coronavirus Disease ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಒಂದೇ ದಿನದಲ್ಲಿ 7000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇದು ಕಳೆದ 223 ದಿನಗಳಲ್ಲಿ ಪತ್ತೆಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ.
24 ಗಂಟೆಯಲ್ಲಿ 2,14,242 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Coronavirus Disease ದೇಶದಲ್ಲಿ ಈವರೆಗೆ 5,31,016 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಈವರೆಗೆ 4,42,04,771 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ತಿಳಿದುಬಂದಿದೆ.

BR Ambedkar ಡಾ.ಅಂಬೇಡ್ಕರ್ ಅಪರೂಪದ ವ್ಯಕ್ತಿತ್ವ ಲೇ:ವಿವೇಕಾನಂದ ಎಚ್.ಕೆ.

0

BR Ambedkar ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು ಸಾಧನೆ ನೆನಪು ಮಾಡಿಕೊಳ್ಳುವ ಒಂದು ಸಣ್ಣ ಪ್ರಯತ್ನ……..

ಸಂವಿಧಾನ, ಬಾಬಾ ಸಾಹೇಬ್ ನೀಡಿದ ನೆರಳು ಎನ್ನಲು ಕಾರಣ…..

ಸುಮ್ಮನೆ ಒಮ್ಮೆ ಯೋಚಿಸಿ ನೋಡಿ, ಒಂದು ವೇಳೆ ಅಂಬೇಡ್ಕರ್ ಅವರಲ್ಲದೆ ಬೇರೆ ಯಾರಾದರೂ ಭಾರತದ ಸಂವಿಧಾನ ರಚನಾ ಕರಡು ಸಮಿತಿಯ ಅಧ್ಯಕ್ಷರಾಗಿದ್ದಿದ್ದರೆ ಅದರ ಮೂಲ ಸ್ವರೂಪ ಏನಾಗಿರುತ್ತಿತ್ತು…….

1) ಅಂಬೇಡ್ಕರ್ ಅಸ್ಪೃಶ್ಯ ಸಮುದಾಯದಲ್ಲಿ ಹುಟ್ಟಿ ಅದೇ ವಾತಾವರಣದಲ್ಲಿ ಬೆಳೆದು ಬಂದವರು. ಅವರ ವಯಸ್ಸು ಮತ್ತು ಶಿಕ್ಷಣ ಬೆಳೆದಂತೆಲ್ಲಾ ಅವರಿಗೆ ಭಾರತೀಯ ಸಾಮಾಜಿಕ ವ್ಯವಸ್ಥೆಯ ಅಸಮಾನತೆ, ಅಮಾನವೀಯತೆ ಸ್ವತಃ ಅರಿವಾಗತೊಡಗಿತು. ಅದೃಷ್ಟವಶಾತ್ ಅವರು ಹುಟ್ಟಿನಿಂದಲೇ ಪ್ರತಿಭಾವಂತ ವಿದ್ಯಾರ್ಥಿ ಮತ್ತು ಸಹಜವಾಗಿ ಕೆಲವು ಮಕ್ಕಳಲ್ಲಿ ಕಂಡುಬರುವ ಪ್ರತಿಭೆ ಮತ್ತು ಶ್ರದ್ಧೆ ಅವರಲ್ಲಿ ಅಂತರ್ಗತವಾಗಿತ್ತು.

BR Ambedkar 2) ಅಂಬೇಡ್ಕರ್ ಕೇವಲ ಭಾರತೀಯ ಸಮಾಜದ ಬಗ್ಗೆ ಮಾತ್ರ ಅಧ್ಯಯನ ಮಾಡಲಿಲ್ಲ. ಇಲ್ಲಿನ ವೇದಾಧ್ಯಯನ, ಮನುಸ್ಮೃತಿಗಳು ಮಾತ್ರ ಓದಿನ ವಿಷಯಗಳಾಗಿರಲಿಲ್ಲ. ಪಾಶ್ಚಾತ್ಯ ಸಂಸ್ಕೃತಿಗಳನ್ನು ಅವರದೇ ನೆಲದಲ್ಲಿ ಓದಿ ಡಾಕ್ಟರೇಟ್ ಮೀರಿದ ಅಧ್ಯಯನ ಮಾಡಿದರು. ನಮ್ಮ ಸಂಸ್ಕೃತಿಗೆ ಭಿನ್ನ ಸಂಸ್ಕೃತಿಯ ಅಧ್ಯಯನ ಅವರಲ್ಲಿ ಉಂಟುಮಾಡಿರುವ ಮಾನಸಿಕ ಘರ್ಷಣೆಯನ್ನು ಊಹಿಸುವುದು ಕಷ್ಟ.

3) ಓದು ಅಧ್ಯಯನ ಮಾತ್ರವಲ್ಲದೆ ವಿಶಾಲ ಅರಿವಿನ ಮನಸ್ಥಿತಿ ಮತ್ತು ಅದನ್ನು ಪ್ರಕಟಿಸಲು ಸಾರ್ವಜನಿಕ ಜೀವನದ ಪ್ರವೇಶವೂ ಅವರ ಬದುಕಿನಲ್ಲಾದ ಮಹತ್ವದ ಘಟನೆ. ಏಕೆಂದರೆ ಒಬ್ಬ ಪ್ರತಿಭಾವಂತ ವ್ಯಕ್ತಿ ಆ ಪ್ರತಿಭೆಯನ್ನು ತನ್ನ ಔನತ್ಯಕ್ಕೆ ಮಾತ್ರ ಬಳಸುವ ಸಾಧ್ಯತೆಯೇ ಹೆಚ್ಚು. ಸಾರ್ವಜನಿಕ ಜೀವನ ಸ್ವಲ್ಪ ತಲೆನೋವಿನ ಕೆಲಸ.

4) ಐತಿಹಾಸಿಕ ಅದೃಷ್ಟವೂ ಅವರ ಪಾಲಿಗೆ ಒದಗಿ ಬಂದಿತು. ಈ ಜಗತ್ತು ಕಂಡ ಕೆಲವೇ ಶ್ರೇಷ್ಠ ಮಾನವ ಪ್ರಾಣಿಗಳಲ್ಲಿ ಒಬ್ಬರಾದ ಮಹಾತ್ಮ ಗಾಂಧಿಯವರ ಸಮಕಾಲೀನತೆ, ಒಡನಾಟ, ತೀವ್ರ ಚರ್ಚೆ, ವಿರೋಧ ಎಲ್ಲವನ್ನೂ ಅನುಭವಿಸುವ ಅವಕಾಶ ಬಾಬಾ ಸಾಹೇಬರಿಗೆ ಸಿಕ್ಕಿತು. ಶೋಷಿತ ಸ್ವಾತಂತ್ರ್ಯ ಮತ್ತು ಭಾರತ ದೇಶದ ಸ್ವಾತಂತ್ರ್ಯ ಎಂಬ ಎರಡು ಬೃಹತ್ ಹೋರಾಟಗಳ ಸಮಯದಲ್ಲಿ ತಮ್ಮ ಚಿಂತನೆಗಳನ್ನು ರೂಪಿಸಿಕೊಳ್ಳುವ ಸುವರ್ಣಾವಕಾಶ ಅವರ ಪಾಲಿಗೆ ದೊರೆಯಿತು. ಅಲ್ಲದೆ ಗಾಂಧಿ ಎಂಬ ಮಹಾತ್ಮ ( ಅಂಬೇಡ್ಕರ್ ಅವರನ್ನು ಮಹಾತ್ಮ ಎಂದು ಒಪ್ಪಿಕೊಳ್ಳಲಿಲ್ಲ. ಅದು ಅವರ ಅಭಿಪ್ರಾಯ ಮತ್ತು ಸ್ವಾತಂತ್ರ್ಯ ) ಅಂಬೇಡ್ಕರ್ ಅವರನ್ನು ಯಾವ ಕಾರಣದಿಂದಲೂ ನಿರ್ಲಕ್ಷಿಸದೆ ಅವರೊಂದಿಗೆ ಕೆಲವು ವಿಷಯಗಳಲ್ಲಿ ವಿರೋಧ ಇದ್ದರೂ ಅವರಿಗೆ ಹೆಚ್ಚಿನ ಮಹತ್ವ ನೀಡಿದರು. ಆಗಿನ ಕಾಲಕ್ಕೆ ಅಂಬೇಡ್ಕರ್ ಅವರನ್ನು ಸ್ವಲ್ಪ ಮಟ್ಟಿಗೆ ನಿರ್ಲಕ್ಷಿಸಬಹುದಾದಷ್ಟು ದೈತ್ಯ ಶಕ್ತಿ ಗಾಂಧಿಗೆ ಇದ್ದರೂ ಪೂನಾ ಒಪ್ಪಂದದ ಸಮಯದಲ್ಲಿ ಅಂಬೇಡ್ಕರ್ ಅವರನ್ನು ಒಪ್ಪಿಸಲು ಸ್ವತಃ ಉಪವಾಸ ಮಾಡಿದರು ಎಂದರೆ ಅವರಿಗೆ ಅಂಬೇಡ್ಕರ್ ಅವರ ಪ್ರತಿಭೆ ಮತ್ತು ಸಂಘಟನಾ ಶಕ್ತಿಯ ಬಗ್ಗೆ ಬಹುದೊಡ್ಡ ಗೌರವವಿತ್ತು ಎನಿಸುತ್ತದೆ.

5 ) ವಿಶ್ವದ ಆಧ್ಯಾತ್ಮಿಕ ತವರೂರು ಎಂದು ಕರೆಯಲಾಗುವ, ಅಸ್ಪೃಶ್ಯತೆ ಎಂಬ ಕೆಟ್ಟ ಕೊಳಕ ಸಾಮಾಜಿಕ ವ್ಯವಸ್ಥೆ ಹೊಂದಿದ್ದ ಭಾರತದ ಸಂವಿಧಾನ ರಚಿಸುವ ನೇತೃತ್ವ ವಹಿಸುವ ಅವಕಾಶ ಅದೇ ಜನಾಂಗದ ಒಬ್ಬ ವ್ಯಕ್ತಿಗೆ 1945/46 ರ ಆಸುಪಾಸಿನಲ್ಲಿ ದೊರೆಯಿತು ಎಂಬುದು ಈಗಲೂ ನಂಬಲಾಸಾಧ್ಯ ಎನಿಸುತ್ತದೆ ಮತ್ತು ಅಂಬೇಡ್ಕರ್ ದೈತ್ಯ ಶಕ್ತಿಯ ಅರಿವಾಗುತ್ತದೆ.

ಇದು ಅಂಬೇಡ್ಕರ್ ಅವರ ಜ್ಞಾನದ ಅಗಾಧತೆಯನ್ನು ತೋರಿಸುತ್ತದೆ ಮತ್ತು ಅವರು ಕರಡು ಸಮಿತಿಯ ಅಧ್ಯಕ್ಷರಾಗಲು ಇದ್ದ ಅರ್ಹತೆ ಮಾತ್ರ. ಅದು ಅವರ ವೈಯಕ್ತಿಕ ಸಾಮರ್ಥ್ಯ. ಈಗ ಸಂವಿಧಾನದಲ್ಲಿ ಅವರು ನಮಗೆ ನೀಡಿರುವ ಹಕ್ಕುಗಳು ನಾವು ಹೇಗೆ ಅರ್ಥೈಸಿಕೊಳ್ಳಬೇಕು…………

1) ಮನುಸ್ಮೃತಿಗಳ ಆಧಾರದ ಮೇಲೆ ನಿರ್ಮಾಣವಾಗಿದ್ದು ಭಾರತೀಯ ಸಮಾಜ. ಮಹಿಳೆಯರಿಗೆ ಗೌರವ ನೀಡಲಾಗಿತ್ತು ನಿಜ ಆದರೆ ಅದು ಅಧಿಕಾರಯುತ, ಷರತ್ತು ಬದ್ಧ ಮತ್ತು ನಿಯಂತ್ರಿತವಾಗಿತ್ತು. ಸ್ವಾತಂತ್ರ್ಯ ಮತ್ತು ಸಮಾನತೆ ಇರಲೇ ಇಲ್ಲ. ಮುಸ್ಲಿಂ ದಾಳಿಕೋರರ ನಂತರ ಅದು ಮತ್ತಷ್ಟು ಕಠಿಣವಾಯಿತು. ಬ್ರಿಟಿಷರ ಕಾಲದಲ್ಲಿ ಒಂದು ಚೂರು ಸಡಿಲವಾಯಿತು. ಅಂಬೇಡ್ಕರ್ ಅವರಲ್ಲದೆ ಬೇರೆ ಯಾರೇ ಸಂವಿಧಾನ ರಚಿಸುವ ಅಧಿಕಾರ ಪಡೆದಿದ್ದರೆ ಖಂಡಿತ ನಾವು ನಮ್ಮ ಹೆಣ್ಣು ಮಕ್ಕಳ ಈ ರೀತಿಯ ಸ್ವಾತಂತ್ರ್ಯ ಸಮಾನತೆ ಮತ್ತು ಅಭಿವೃದ್ಧಿ ಕಾಣುವುದು ಸಾಧ್ಯವಿರಲಿಲ್ಲ ಮತ್ತು ಅದಕ್ಕಾಗಿ ಇನ್ನೂ ಅನೇಕ ವರ್ಷಗಳ ಹೋರಾಟ ಮಾಡಬೇಕಾಗಿತ್ತು. ಅದನ್ನು ಕಾನೂನಿನ ಮೂಲಕ ಒದಗಿಸಿಕೊಟ್ಟ ಅಂಬೇಡ್ಕರ್ ಅವರಿಗೆ ಎಲ್ಲಾ ಜಾತಿ ಸಮುದಾಯಗಳ ಹೆಣ್ಣು ಮಕ್ಕಳು ಕೃತಜ್ಞರಾಗಿರಬೇಕು. ಇಂದಿನ ರಾಜಕೀಯ ವ್ಯವಸ್ಥೆ ಹೇಗೇ ಇರಲಿ ಹೆಣ್ಣು ಮಕ್ಕಳ ಕನಿಷ್ಠ ನೆಮ್ಮದಿಯ ಬದುಕಿಗೆ ನಿಜವಾದ ಅಡಿಪಾಯ ಹಾಕಿದವರು ಬಾಬಾ ಸಾಹೇಬ್. ಪಾಶ್ಚಾತ್ಯ ನಾಗರಿಕತೆಯ ಅಧ್ಯಯನ ಅದಕ್ಕೆ ಕಾರಣ.

2) ಇದೇ ಅಂಶಗಳು ಎಲ್ಲಾ ವರ್ಗದ ಕಾರ್ಮಿಕರಿಗೂ ಅನ್ವಯಿಸುತ್ತದೆ. ಕೈಗಾರಿಕಾ ಕ್ರಾಂತಿಯ ವಿಷಯಗಳು, ಮಾರ್ಕ್ಸ್ ಸಿದ್ದಾಂತಗಳನ್ನು ಅಧ್ಯಯನ ಮಾಡಿದ ಕಾರಣದಿಂದಾಗಿಯೇ ಕಾರ್ಮಿಕ ಕಾನೂನುಗಳು ಸಂವಿಧಾನದಲ್ಲಿ ಅಡಕವಾಗಲು ಸಾಧ್ಯವಾಯಿತು. ಮಾರ್ಕ್ಸ್ ಓದದ ಯಾರಿಗೂ ಈ ರೀತಿಯ ಕಾನೂನು ಮಾಡಲು‌ ಸಾಧ್ಯವೇ ಇಲ್ಲ. 8 ಗಂಟೆಗಳ ಕೆಲಸ ಮತ್ತು ವಾರದ ರಜಾ ಮಾರ್ಕ್ಸ್ ಪ್ರೇರಿತ ಎಂಬುದು ಸ್ಪಷ್ಟ. ಬಂಡವಾಳಶಾಹಿ ವ್ಯವಸ್ಥೆ ಕಾರ್ಮಿಕರನ್ನು ಹೀನಾಯವಾಗಿ ದುಡಿಸಿಕೊಳ್ಳಲು ಇದ್ದ ಅನಿಯಮಿತ ಅಧಿಕಾರಕ್ಕೆ ಮಿತಿ ಹೇರಿದೆ ನಮ್ಮ ಕಾನೂನುಗಳು.

3) ಅತಿ ಮುಖ್ಯವಾಗಿ ಸಾಮಾನ್ಯ ಜನರು ಗಮನಹರಿಸಬೇಕಾದ ವಿಷಯ ಅಂಬೇಡ್ಕರ್ ಕೇವಲ ತಾವು ಅನುಭವಿಸಿದ ಜಾತಿ ದೌರ್ಜನ್ಯದ ಬಗ್ಗೆ ಮಾತ್ರ ಒತ್ತುಕೊಡಲಲ್ಲಿ. ಈ ಸಮಾಜದಲ್ಲಿ ಬೆಳೆದು ಬಂದಿದ್ದ ಆರ್ಥಿಕ ಮತ್ತು ಧಾರ್ಮಿಕ ದೌರ್ಜನ್ಯವೂ ಅವರ ವಿಶಾಲ ಹೃದಯದಲ್ಲಿ ಜಾಗ ಪಡೆಯಿತು. ಶ್ರೀಮಂತರು ಬಡವರನ್ನು ಶೋಷಿಸಬಹುದು ಎಂಬ ಕಾರಣದಿಂದಾಗಿಯೇ ನಾಗರಿಕ ಹಕ್ಕುಗಳು ಮತ್ತು ಅಪರಾಧ ಸಂಹಿತೆಯಲ್ಲಿ ಕಾನೂನಾತ್ಮಕ ಹೋರಾಟ ಮಾಡಲು ಅಸಹಾಯಕರಿಗೂ ಅವಕಾಶ ಕಲ್ಪಿಸುವ ನ್ಯಾಯಾಂಗದ ಕೆಲವು ಸೂಕ್ಷ್ಮ ಅಂಶಗಳನ್ನು ಸೇರಿಸಿದರು. ಬಹುಶಃ ಯಾರಾದರೂ ವಕೀಲರು ಅದರ ತಾಂತ್ರಿಕ ಅಂಶಗಳನ್ನು ಇನ್ನಷ್ಟು ಕೂಲಂಕಷವಾಗಿ ಹೇಳಬಹುದು.

ಭಾರತದ ಧಾರ್ಮಿಕ ವೈವಿಧ್ಯತೆಯನ್ನು ಕಾಪಾಡಲು ಭಾರತದ್ದೇ ವಿಶಿಷ್ಟ ಧಾರ್ಮಿಕ ಸ್ವಾತಂತ್ರ್ಯದ ಅಂಶಗಳನ್ನು ಸೇರಿಸಿದ್ದಕ್ಕಾಗಿ ಎಲ್ಲಾ ಧಾರ್ಮಿಕ ನಾಯಕರು ಅವರಿಗೆ ಋಣಿಯಾಗಿರಬೇಕು. ಜಾತಿ ಮೀಸಲಾತಿಯ ಕಾರಣದಿಂದ ಮೇಲ್ವರ್ಗದವರಿಗೆ ಸ್ವಲ್ಪ ಅಸಮಾಧಾನ ಇರಬಹುದೇ ಹೊರತು ಅವರ ಮಾನವೀಯ ತುಡಿತ ಮತ್ತು ಸಮಾನತೆಯ ನಡೆಯ ಬಗ್ಗೆ ಮನುಷ್ಯರಾದವರಿಗೆ ಯಾವುದೇ ತಕರಾರು ಇರುವುದಿಲ್ಲ.

4) ಬಾಬಾ ಸಾಹೇಬರ ಮತ್ತೊಂದು ಹೆಗ್ಗಳಿಕೆ ಭಾರತೀಯ ಸಮಾಜದ ಮೂಲ ಸ್ವರೂಪಕ್ಕೆ ಎಲ್ಲಿಯೂ ಧಕ್ಕೆ ಬಾರದಂತೆ ಸನಾತನ ಧರ್ಮದ ಮೌಲ್ಯಗಳನ್ನು ಗೌರವಿಸುತ್ತಾ ಕೇವಲ ಅದರಲ್ಲಿ ಇರಬಹುದಾದ ಕೆಟ್ಟ ಅಂಶಗಳನ್ನು ಮಾತ್ರ ಗುರುತಿಸಿ ಅದಕ್ಕೆ ತಿದ್ದುಪಡಿ ತಂದು ಅನೇಕ ಅಂಶಗಳನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಮೇಲ್ವರ್ಗದ ಮೇಲೆ ಯಾವುದೇ ಸೇಡಿನ ಕ್ರಮದ ಲವಲೇಷವೂ ಅದರಲ್ಲಿ ಕಾಣಬರುವುದಿಲ್ಲ. ಬದುಕಿನ ವಿವಿಧ ಹಂತಗಳಲ್ಲಿ ಸಾಕಷ್ಟು ಅಸಮಾನತೆಯ ನೋವು ಅವರಿಗೆ ಕಾಡಿದೆ. ಆದರೆ ಸಂವಿಧಾನ ಕರಡು ರಚಿಸುವ ಜವಾಬ್ದಾರಿ ದೊರೆತಾಗ ಅದು ತಮ್ಮ ಮನಸ್ಸಿನಲ್ಲಿ ಸುಳಿಯದಂತೆ ನೋಡಿ ಕೊಂಡಿದ್ದಾರೆ. ಈಗಲೂ ಭಾರತ ಬಹುಸಂಖ್ಯಾತರು ಸಂವಿಧಾನದ ಅಡಿಯಲ್ಲಿ ಹಿಂದೂ ಸಂಸ್ಕೃತಿಯ ಜೀವನ ಶೈಲಿಯನ್ನೇ ಅಳವಡಿಸಿಕೊಂಡಿದ್ದಾರೆ.

5) ಕಾಲದ ಸಂಘರ್ಷದಲ್ಲಿ ಒಂದಷ್ಟು ಬದಲಾವಣೆಯ ಅವಶ್ಯಕತೆ ಇರಬಹುದು. ಸ್ವತಃ ಅಂಬೇಡ್ಕರ್ ಹೇಳುವಂತೆ ನೀತಿ ನಿಯಮಗಳ ನಿಜವಾದ ಯಶಸ್ಸು ಅದನ್ನು ಜಾರಿಗೊಳಿಸುವವರ ಪ್ರಾಮಾಣಿಕತೆಯ ಮೇಲೆ ಅವಲಂಬಿಸಿರುತ್ತದೆ. ಸುಮಾರು 73 ವರ್ಷಗಳ ನಂತರ ತಿರುಗಿ ನೋಡಿದಾಗ ಭಾರತದ ಏಕತೆ, ವೈವಿಧ್ಯತೆ ಮತ್ತು ಸಮಗ್ರತೆಯ ಬಗ್ಗೆ ಹೆಮ್ಮೆ ಮೂಡುತ್ತದೆ. ಅದಕ್ಕೆ ಸಂವಿಧಾನದ ಮೂಲ ಸ್ವರೂಪ ಮತ್ತು ಬಾಬಾ ಸಾಹೇಬರ ಅಧ್ಯಯನ, ಚಿಂತನೆ, ದೂರದೃಷ್ಟಿ ಮತ್ತು ವಿಶಾಲ ಮನಸ್ಥಿತಿ ಕಾರಣ.

ಮೊದಲು ಹೇಳಿದ್ದನ್ನೇ ಮತ್ತೆ ನೆನಪಿಸುತ್ತೇನೆ. ಬಾಬಾ ಸಾಹೇಬ್ ಅವರಲ್ಲದೆ ಬೇರೆಯವರು ನಮ್ಮ ಸಂವಿಧಾನ ರಚಿಸಿದ್ದರೆ ಭಾರತ ಹೇಗಿರುತ್ತಿತ್ತು ಊಹಿಸಿ ನೋಡಿ. ಬಹುಶಃ ಈಗಿನಷ್ಟು ಸಾಮಾಜಿಕ ನೆಮ್ಮದಿ ಸಿಗುತ್ತಿರಲಿಲ್ಲ. ಆದ್ದರಿಂದ ಅಂಬೇಡ್ಕರ್ ಎಲ್ಲಾ ಭಾರತೀಯರು ಗೌರವಿಸಲೇ ಬೇಕಾದ ವ್ಯಕ್ತಿತ್ವ ಹೊಂದಿರುವವರು.

ಹಾಗೆಂದು ಸಂಪೂರ್ಣ ತೃಪ್ತಿ ಇದೆಯೇ ?
ಖಂಡಿತ ಇಲ್ಲ. ನಮ್ಮ ರಾಜಕೀಯ ಆಡಳಿತ ವ್ಯವಸ್ಥೆ ಭ್ರಷ್ಟಗೊಂಡಿದೆ. ನ್ಯಾಯ ಬಹುತೇಕ ಉಳ್ಳವರ ಪಾಲಾಗುತ್ತಿದೆ. ಅನೇಕ ವರ್ಗಗಳು ತಮ್ಮದೇ ಕಾರಣದಿಂದಾಗಿ ಅಸಮಾಧಾನ ಹೊಂದಿವೆ. ಕೆಲವು ಕಾನೂನುಗಳು ದುರುಪಯೋಗವಾಗುತ್ತಿದೆ. ಅದಕ್ಕೆ ಮೂಲ ಕಾರಣ ಮಾನವೀಯ ಮೌಲ್ಯಗಳ ಕುಸಿತ. ಅದನ್ನು ಮತ್ತೆ ನಾವು ಹಳಿಗೆ ತಂದರೆ ಮುಂದಿನ ದಿನಗಳು ನಮ್ಮ ಪಾಲಿಗೆ ಶಾಂತಿ ನೆಮ್ಮದಿ ಮೂಡಿಸುತ್ತದೆ. ಈಗ ನಮ್ಮೆಲ್ಲರ ಆದ್ಯತೆ ಮಾನವೀಯ ಮೌಲ್ಯಗಳ ಪುನರುಜ್ಜೀವನ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ ಎಚ್ ಕೆ.
9844013068……

Mamata Commercial Education Institute ಶಿವಮೊಗ್ಗ ಮಮತಾ ವಾಣಿಜ್ಯ ಶಿಕ್ಷಣ ಸಂಸ್ಥೆಗೆ ಭರ್ಜರಿ ಫಲಿತಾಂಶ

Mamata Commercial Education Institute ಕಳೆದ ಜನವರಿಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ
ಪರೀಕ್ಷಾ ಮಂಡಳಿಯಿಂದ ನಡೆಸಿದ ರಾಜ್ಯ ಮಟ್ಟದ ಟೈಪಿಂಗ್ ಹಾಗೂ
ಕಂಪ್ಯೂ ಟರ್ ಪರೀಕ್ಷೆಯಲ್ಲಿ ನಗರದ ಮಮತಾ ಟೈಪಿಂಗ್ ಮತ್ತು
ಕಂಪ್ಯೂಟರ್ ತರಬೇತಿ ಕೇಂದ್ರದ 47 ವಿದ್ಯಾರ್ಥಿಗಳು ಡಿಸ್ಪಿಂಕ್ಷನ್
ಪಡೆದಿದ್ದಾರೆ.

Mamata Commercial Education Institute ಶಿವಮೊಗ್ಗ ನಗರಕ್ಕೆ ಹಾಗೂ ಸಂಸ್ಥೆಗೆ ಈ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ
ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.