CET/NEET Competitive Exam ಮಾಜಿ ಸೈನಿಕ ದೃಢೀಕರಣ ಪತ್ರ ಪಡೆಯಲು ಸೂಚನೆ
CET/NEET Competitive Exam ಸಿ.ಇ.ಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಮಾಜಿ ಸೈನಿಕ ಮೀಸಲಾತಿ ಕೋರಿರುವರು ಮಾಜಿ ಸೈನಿಕರ ಮಕ್ಕಳು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಪಡೆಯಬೇಕಾಗಿರುತ್ತದೆ ಹಾಗೂ ಈ ದೃಢೀಕರಣ ಪತ್ರವನ್ನು ವಿಶೇಷ ವರ್ಗ(ಸ್ಪೆಷಲ್ ಕೆಟಗರಿ)ಗಳ ದಾಖಲೆ ಮಂಡನೆ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.
CET/NEET Competitive Exam ಪ್ರಸ್ತುತ ಸರ್ಕಾರಿ ನೌಕರರು/ಅಧಿಕಾರಿಗಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಳ್ಳಬಹುದಾದ ಕಾರಣಗಳಿಂದ ಸಿ.ಇ.ಟಿ / ನೀಟ್ ನಲ್ಲಿ ಮಾಜಿ ಸೈನಿಕ(ಎಕ್ಸ್ ಡಿಫೆನ್ಸ್) ಮೀಸಲಾತಿ ಕೋರಿರುವ ಎಲ್ಲಾ ಮಾಜಿ ಸೈನಿಕರು ಕೊನೆಯ ದಿನಾಂಕದವರೆಗೆ ಕಾಯದೇ ಕೂಡಲೇ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದುಕೊಳ್ಳಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ 08182-220925 ನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ. ಸಿ.ಎ ಹಿರೇಮಠ ತಿಳಿಸಿದ್ದಾರೆ.
Kagodu Thimmappa ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಬಿಜೆಪಿಗೆ ಸೇರ್ಪಡೆ?
Kagodu Thimmappa ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ಜೋರಾಗಿದೆ. ಟಿಕೆಟ್ ಸಿಗದ ಕಾರಣ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಸಾಗರದಿಂದ ಕಾಗೋಡು ತಿಮ್ಮಪ್ಪ ಮತ್ತೆ ಸ್ಪರ್ಧಿಸಲು ಸಜ್ಜಾಗಿದ್ದರು. ವಯಸ್ಸಿನ ಕಾರಣದಿಂದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರೆ ಪುತ್ರಿಗೆ ಟಿಕೆಟ್ ಕೊಡಿಸಲು ಮುಂದಾಗಿದ್ದರು.
ಆದರೆ ಕಾಂಗ್ರೆಸ್ ಕಾಗೋಡು ತಿಮ್ಮಪ್ಪ, ಪುತ್ರಿ ರಾಜನಂದಿನಿ ಬದಲು ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಿದ್ದರು.
Kagodu Thimmappa ಬೆಂಗಳೂರಿನಲ್ಲಿ ರಾಜನಂದಿನಿ ಅವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹೀಗಾಗಿ ರಾಜನಂದಿನಿ ಬಿಜೆಪಿ ಸೇರುವುದು ಬಹುತೇಕ ಖಚಿತ ಎಂದು ಹೇಳಲಾಗಿತ್ತು. ಅದೀಗ ಖಚಿತವಾಗಿದೆ.
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ರಾಜನಂದಿನಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Legislative Assembly Constituency Elections ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರ ಚುನಾವಣಾ ನಾಮಪತ್ರ ಸಲ್ಲಿಕೆ ಮಾಹಿತಿ
Legislative Assembly Constituency Elections ಮೇ 10ರಂದು ನಡೆಯಲಿರುವ 111-ಶಿವಮೊಗ್ಗ ಗ್ರಾಮಾಂತರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ವಿಧಾನಸಭಾ ಚುನಾವಣೆಗೆ ಶಿವಮೊಗ್ಗ ತಾಲೂಕು ಆಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸೂಡಾ ಆಯುಕ್ತ ಕೊಟ್ರೇಶ್ ಹೆಚ್. ಅವರು ಹೇಳಿದರು.
ಅವರು ತಾಲೂಕು ಚುನಾವಣಾ ಕಚೇರಿ ಕಾರ್ಯಾಲಯದಲ್ಲಿ ವಿಧಾನಸಭಾ ಚುನಾವಣಾ ಪೂರ್ವಸಿದ್ಧತೆಗಳ ಕುರಿತು ಮಾಧ್ಯಮಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. 2023ರ ಜನವರಿ 05ರಂದು ಪ್ರಕಟಗೊಂಡ ಅಂತಿಮ ಕರಡು ಪಟ್ಟಿಯಲ್ಲಿ ಗುರುತಿಸಲಾಗಿರುವಂತೆ 01,03,534 ಪುರುಷರು, 01,04,525 ಮಹಿಳೆಯರು, ಇತರೆ ಮೂರು ಮಂದಿ ಸೇರಿದಂತೆ ಒಟ್ಟು 02,08,062 ಮತದಾರರು ಪ್ರಸಕ್ತ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ ಎಂದ ಅವರು, 2698 ವಿಕಲಚೇತನರನ್ನು ಹಾಗೂ 3301, 80+ ವಯೋಮಿತಿಯ ಮತದಾರರನ್ನು ಗುರುತಿಸಲಾಗಿದೆ ಎಂದರು.
Legislative Assembly Constituency Elections ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯ ಹರಿಗೆ, ಮಲವಗೊಪ್ಪ, ಸೂಳೆಬೈಲು, ಭದ್ರಾವತಿ ತಾಲೂಕಿನ ಹೊಳೆಹೊನ್ನೂರು(ಭಾಗಶಃ), ಆನವೇರಿ ಮತ್ತು ಕಲ್ಲಿಹಾಳ, ಶಿವಮೊಗ್ಗ ತಾಲೂಕು ವ್ಯಾಪ್ತಿಯ 37 ಮತ್ತು ಭದ್ರಾವತಿ ತಾಲೂಕಿನ 17 ಪಂಚಾಯಿತಿಗಳು ಸೇರಿದಂತೆ ಒಟ್ಟು 54 ಗ್ರಾಮ ಪಂಚಾಯತಿಗಳು ಒಳಗೊಂಡಿವೆ.
ಅಲ್ಲದೇ ಹೊಸದಾಗಿ ರಚನೆಗೊಂಡ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಗೊಳಪಡಲಿವೆ ಎಂದ ಅವರು, ಶಿವಮೊಗ್ಗ ತಾಲೂಕಿನಲ್ಲಿ 171 ಮತ್ತು ಭದ್ರಾವತಿ ತಾಲೂಕಿನಲ್ಲಿ 76 ಸೇರಿದಂತೆ ಒಟ್ಟು 247 ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ.
ಅವುಗಳ ಪೈಕಿ 26 ಸೂಕ್ಷ್ಮ ಮತ್ತು 39 ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದವರು ತಿಳಿಸಿದ್ದಾರೆ.
ಏಪ್ರಿಲ್ 13ರಂದು ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಅಂದಿನಿಂದ ಏಪ್ರಿಲ್ 20ರವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಬೆಳಿಗ್ಗೆ 11ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಏಪ್ರಿಲ್ 21 ರಂದು ಉಮೇದುವಾರರು ಸಲ್ಲಿಸಿದ ನಾಮಪತ್ರಗಳನ್ನು ಪರಿಶೀಲನೆ ನಡೆಸಲಾಗುವುದು. ಏಪ್ರಿಲ್ 24 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ನಗರದ ಸಹ್ಯಾದ್ರಿ ಕಲಾ ಪದವಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಆಯ್ಕೆ ಬಯಸುವ ಉಮೇದುವಾರರು ತಮ್ಮ ನಾಮಪತ್ರಗಳನ್ನು ಸಲ್ಲಿಸಲು ಶಿವಮೊಗ್ಗ ತಾಲೂಕು ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಚುನಾವಣೆಯಲ್ಲಿ ಅಕ್ರಮಗಳು ನಡೆಯದಂತೆ ನಿಯಂತ್ರಣ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಮೂರು ಪಾಳಿಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಟಿ. 05 ತಂಡಗಳನ್ನು ರಚಿಸಲಾಗಿದ್ದು, ಅಂತರ ಜಿಲ್ಲಾ ಗಡಿಯಲ್ಲಿ ಚೆಕ್‌ಪೋಸ್ಟ್ಗಳನ್ನು ನಿರ್ಮಿಸಲಾಗಿದೆ. ಅಲ್ಲದೇ ಎಫ್.ಎಸ್.ಟಿ. 05 ತಂಡ, 08 ವಿಡಿಯೋ ಸರ್ವೇಲೆನ್ಸ್ ತಂಡ, ಮಾದರಿ ನೀತಿ ಸಂಹಿತೆ 01 ತಂಡ, ಲೆಕ್ಕ ಪತ್ರ ವೀಕ್ಷಕರ 01 ತಂಡ ಹಾಗೂ ಅವರಿಗೆ ಸಹಾಯಕರಾಗಿ ಲೆಕ್ಕವೀಕ್ಷಕರ 01 ತಂಡವನ್ನು ರಚಿಸಲಾಗಿದೆ.
25 ಸೆಕ್ಟರ್ ಅಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದಿದ್ದಾರೆ.
ಕ್ಷೇತ್ರದ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯ ಯಾವುದೇ ಪ್ರಕರಣಗಳ ಕುರಿತು ಮಾಹಿತಿ ನೀಡಲು ಹಾಗೂ ಸಾರ್ವಜನಿಕರಿಂದ ದೂರುಗಳನ್ನು ಪಡೆಯಲು ದಿನದ 24 ಗಂಟೆಗಳು ಸಕ್ರಿಯವಾಗಿರುವಂತೆ 08182-200508 ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದ್ದು, ಸಾರ್ವಜನಿಕರು ಕರೆ ಮಾಡಿ ದೂರುಗಳನ್ನು ದಾಖಲಿಸಬಹುದಾಗಿದೆ.
ಅಲ್ಲದೇ, ಸಿವಿಜಲ್ ಆ್ಯಪ್ ನಲ್ಲಿಯೂ ದೂರುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಸಹಾಯಕ ಚುನಾವಣಾಧಿಕಾರಿ ಪರಶುರಾಮ ಸತ್ತಿಗೇರಿ, ಸಿ.ಡಿ.ಪಿ.ಒ. ಚಂದ್ರಪ್ಪ, ಅರುಣ್ ಮುಂತಾದವರು ಉಪಸ್ಥಿತರಿದ್ದರು.
District Police Shivamogga ಭದ್ರಾವತಿ ಪೊಲೀಸ್ ಸಿಬ್ಬಂದಿಯಿಂದ ಕಳವು ಮಾಲುಗಳ ಕೈವಶ
District Police ಭದ್ರಾವತಿ ಠಾಣೆಯ ಪಿಎಸ್ಐ ನ್ಯೂ ಟೌನ್ & ಸಿಬ್ಬಂದಿಗಳ ತಂಡವು, ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋದ ಅಂದಾಜು 2,50,000/- ರೂಗಳ ಒಟ್ಟು 18 ವಿವಿಧ ಕಂಪನಿಗಳ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ, ವಾರಸುದಾರರಿಗೆ ಹಸ್ತಾಂತರಿಸಿರುತ್ತಾರೆ.
District Police Shivamogga ಪಿ.ಐ ಭದ್ರಾವತಿ ಗ್ರಾ & ಸಿಬ್ಬಂದಿಗಳ ತಂಡ ಠಾಣಾ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡಿದ ಆರೋಪಿತಳನ್ನು ದಸ್ತಗಿರಿ ಮಾಡಿ, 43,000/- ರೂಗಳ ಬೆಳ್ಳಿ& ಬಂಗಾರದ ಆಭರಣ, 1 ಫ್ರಿಡ್ಜ್, 1 ಅಲ್ಮೆರಾ & 1 ಕುಕ್ಕರ್ ಅನ್ನು ಅಮಾನತುಪಡಿಸಿಕೊಂಡಿದೆ.
ಈ ಎರಡೂ ತಂಡದ ಉತ್ತಮ ಕಾರ್ಯಕ್ಷಮತೆಯನ್ನ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಾದ ಜಿ.ಕೆ. ಮಿಥುನ್ ಕುಮಾರ್ ಅವರು ಪ್ರಶಂಸಿಸಿದ್ದಾರೆ.

BJP karnataka ವಿಧಾನ ಸಭಾ ಚುನಾವಣೆಯ 189 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
BJP karnataka ರಾಜ್ಯ ವಿಧಾನಸಭೆಗೆ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲಾಗಿದೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ. ಸೋಮಣ್ಣ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಂದಾಯ ಸಚಿವ ಆರ್. ಅಶೋಕ್ ಕಣಕ್ಕೆ ಇಳಿದಿದ್ದಾರೆ.
ಒಟ್ಟು 189 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
BJP karnataka ಆರ್.ಅಶೋಕ್ ಅವರು ಪದ್ಮನಾಭನಗರ ಹಾಗೂ ಸೋಮಣ್ಣ ಅವರು ಚಾಮರಾಜನಗರದಿಂದಲೂ ಸ್ಪರ್ಧೆ ಮಾಡಲಿದ್ದಾರೆ. ಸಚಿವರ ಪೈಕಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಬದಲು ಪುತ್ರ ಸಿದ್ದಾರ್ಥ್ ಸಿಂಗ್ ಅವರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಎಲ್ಲಾ ಶಾಸಕರಿಗೆ ಟಿಕೆಟ್ ನೀಡಲಾಗಿದೆ.
ಹಿರಿಯ ಶಾಸಕರು ಪ್ರತಿನಿಧಿಸುವ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿಲ್ಲ. ಮೊದಲ ಪಟ್ಟಿಯಲ್ಲಿ ಎಂಟು ಶಾಸಕರಿಗೆ ಟಿಕೆಟ್ ನೀಡದೇ ಹೊಸಮುಖಗಳಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿದುಬಂದಿದೆ.
ಟಿಕೆಟ್ ನಿರೀಕ್ಷೆಯಲ್ಲಿದ್ದ ಹಲವು ಹಿರಿಯರಿಗೆ ನಿರಾಶಿಯಂತೂ ಆಗಿದೆ. ಅವರ ಮುಂದಿನ ನಡೆ ಎತ್ತ ಸಾಗುತ್ತದೋ ಕಾದು ನೋಡಬೇಕು
