Sunday, April 12, 2026
Sunday, April 12, 2026
Home Blog Page 1252

Shivamogga Institute Of Medical Sciences ದೇಹದಾನಿ ಅಮರ ಜೀವಿ ದಿ.ನಾಗರತ್ನಮ್ಮ

Shivamogga Institute Of Medical Sciences ವೈದ್ಯಕೀಯ ವಿಜ್ಞಾನ ಈಗ ಅನೇಕ ಆವಿಷ್ಕಾರಗಳನ್ನ ಮಾಡುತ್ತಿದೆ.
ಅವುಗಳಲ್ಲಿ ಮಾನವನ ಅನಾರೋಗ್ಯದ ಕಾರಣಕ್ಕೆ ಎಲ್ಲಿಲ್ಲದ ಆದ್ಯತೆ ನೀಡಲಾಗಿದೆ.
ಈ ಪ್ರಯೋಗಗಳಿಗೆ ಸಹಾಯಕವಾಗಿ ಬೇಕಿರುವುದು ಮನುಷ್ಯನ ದೇಹ.

ಅದಕ್ಕಾಗಿ ಸಮಾಜದಲ್ಲಿ ದೇಹದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
ಸ್ವಯಂಪ್ರೇರಣೆಯಿಂದ ದಾನಮಾಡುವ ಅನೇಕರು ತಾವು ಜೀವಿಸಿರುವಾಗಲೇ ಉಯಿಲು ಅಥವಾ ಪ್ರಮಾಣಪತ್ರಗಳನ್ನ
ಬರೆದಿಡುವುದನ್ನ ನೋಡಬಹುದಾಗಿದೆ.

ಅಂಥದೊಂದು ಮಾದರಿ ದಾನದ ಪ್ರಸಂಗ ಶಿವಮೊಗ್ಗದಲ್ಲಿ ಘಟಿಸಿದೆ.

Shivamogga Institute Of Medical Sciences ಶಿವಮೊಗ್ಗದ ಶ್ರೀಮತಿ ನಾಗರತ್ನಮ್ಮ ಕೋಂ. ಬಸವರಾಜಪ್ಪ (ವೀರಭದ್ರೇಶ್ವರ ಗ್ಲಾಸ್ ಮಾಲಿಕರು) ಶಿವಕ್ಯ ರಾಗಿದ್ದು , ಅವರ ಸ್ವ ಇಚ್ಛೆ ಯಿಂದ ಅವರ ದೇಹವನ್ನು ವೈದ್ಯಕೀಯ ಕಾಲೇಜ್ ಗೆ ದಾನ ಮಾಡಿರುತ್ತಾರೆ.

ರಕ್ತದಾನ, ನೇತ್ರದಾನಗಳೊಂದಿಗೆ ಜನರು ದೇಹದಾನ ಮಾಡುವ ಮೂಲಕ ಕಾಯಕಕ್ಕೆ ಮುಂದಾಗಿ ತಾವು ಇಹಲೋಕ ತ್ಯಜಿಸಿದ ನಂತರವು ಇನ್ನೋಬ್ಬರ ಬಾಳಿಗೆ ಬೆಳಕಾಗುವ ಕಾರ್ಯ ನಿಜಕ್ಕೂ ಶ್ಲಾಘನೀಯ…

ಶ್ರೀಮತಿ ನಾಗರತ್ನಮ್ಮ ಕೋಂ. ಬಸವರಾಜಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ

Election Campaign ಮನಸ್ಸಿನಿಂದ ಮನಸ್ಸಿಗೆ ಭಾಗ – 22

0

Election Campaign ವಿಚಿತ್ರ ಆದರೂ ಸತ್ಯ……

ಈ ವಿಷಯ ಸ್ವಲ್ಪ ವಿಚಿತ್ರವಾದರು ಇದರಲ್ಲಿರುವ ವಾಸ್ತವ ಮತ್ತು ಸತ್ಯದ ಹುಡುಕಾಟ ನಡೆಸಬೇಕಾಗಿದೆ………

ಚುನಾವಣೆಗಳಲ್ಲಿ ಮತ ಹಾಕಲು ಹಣ ಪಡೆಯುವವರಿಗೆ ಬೇಡ ಎಂದು ಹೇಳುವುದಕ್ಕಿಂತ ಅತಿ ಹೆಚ್ಚಿನ ಮಹತ್ವ ಹಣ ನೀಡುವ ಖದೀಮರಿಗೆ ಕಠಿಣ ಶಿಕ್ಷೆ ನೀಡಲು ಅಥವಾ ಅವರ ಮನಃಪರಿವರ್ತನೆಗೆ ನೀಡಬೇಕು…….

ಲಂಚ ನೀಡುವ ಸಾಮಾನ್ಯ ಜನರಿಗೆ ನೀಡಬೇಡಿ ಎಂದು ಹೇಳುವುದಕ್ಕಿಂತ ಅದನ್ನು ಪಡೆಯುವ ಭ್ರಷ್ಟರಿಗೆ ಬಹಿಷ್ಕಾರ ಹಾಕಬೇಕು…………

ಕೆಟ್ಟ ಕಾರ್ಯಕ್ರಮ ನೋಡಬೇಡಿ ಎಂದು ವೀಕ್ಷಕರಿಗೆ ಹೇಳುವುದಕ್ಕಿಂತ ಆ ರೀತಿಯ ಕೆಟ್ಟ ಕಾರ್ಯಕ್ರಮ ರೂಪಿಸಿ ಪ್ರಸಾರ ಮಾಡುವ ಚಾನಲ್ ಗಳಿಗೆ ಎಚ್ಚರಿಕೆ ಕೊಟ್ಟು ದಂಡ ವಿಧಿಸಬೇಕು………

ಮೌಡ್ಯವನ್ನು ನಂಬಿ ಜ್ಯೋತಿಷಿಗಳ ಮಾತು ಕೇಳುವ ಜನರಿಗೆ ಬುದ್ಧಿ ಹೇಳುವುದಕ್ಕಿಂತ ಜ್ಯೋತಿಷಿಗಳಲ್ಲೇ ವೈಜ್ಞಾನಿಕ ಮನೋಭಾವ ಬೆಳೆಸಲು ಪ್ರಯತ್ನಿಸಬೇಕು ಅಥವಾ ಅವರನ್ನು ಹೊರಹಾಕಬೇಕು…………….

ಸಿಗರೇಟು ಸೇದಬೇಡಿ, ಪ್ಲಾಸ್ಟಿಕ್ ಬಳಸಬೇಡಿ ಎಂದು ಜನಸಾಮಾನ್ಯರಿಗೆ ಹೇಳುವುದಕ್ಕಿಂತ ಅದರ ಉತ್ಪಾದನೆಯನ್ನೇ ನಿಷೇಧಿಸಬೇಕು……..

ಕಲಬೆರಕೆ, ಮೋಸ, ವಂಚನೆಗೆ ಒಳಗಾಗುವ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಿಂತ ಅದನ್ನು ಮಾಡುವ ದುರುಳರನ್ನು ನಿಯಂತ್ರಿಸಲು ಆಸಕ್ತಿ ವಹಿಸಬೇಕು…………..

Election Campaign ಏಕೆಂದರೆ ನಮ್ಮ ದೇಶದ ಜನಸಂಖ್ಯೆ ಸುಮಾರು 140 ಕೋಟಿಗೂ ಹೆಚ್ಚು. ಇಷ್ಟೊಂದು ಬೃಹತ್ ಮತ್ತು ವೈವಿಧ್ಯಮಯ ಜನರಿಗೆ ಸತ್ಯದ ನೆಲೆಯಲ್ಲಿ ವಾಸ್ತವಾಂಶ ತಿಳಿಸಿ ಬದಲಾಯಿಸುವುದು ಎಂತಹ ಮಹಾತ್ಮನಿಗೂ ಸಾಧ್ಯವಿಲ್ಲ. ಅದಕ್ಕೆ ಬದಲು ಹಣ ಹಂಚುವ, ಲಂಚ ಪಡೆಯುವ, ಮೌಡ್ಯ ಬಿತ್ತುವ, ಕೆಟ್ಟ ಕಾರ್ಯಕ್ರಮ ರೂಪಿಸುವ, ಕಲಬೆರಕೆ ಮಾಡುವ ಜನರ ಸಂಖ್ಯೆ ಕಡಿಮೆ ಇದೆ. ಅವರನ್ನೇ ಗುರಿಯಾಗಿಸಿ ದಕ್ಷ ಕಾರ್ಯಪಡೆ ರಚಿಸಿ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಅವರ ನಾಗರೀಕ ಹಕ್ಕುಗಳನ್ನು ಕಿತ್ತುಕೊಂಡು ಬಯಲು ಜೈಲುಗಳನ್ನು ನಿರ್ಮಿಸಿ ಅಲ್ಲಿ ಅವರನ್ನು ಕೂಡಿ ಹಾಕಿ ಅಲ್ಲಿಂದಲೇ ಅವರಿಂದ ದುಡಿಸಿಕೊಂಡು ಅವರ ಆತ್ಮಾವಲೋಕನಕ್ಕೆ ಅವಕಾಶ ಕಲ್ಪಿಸಬೇಕು……….

ಅದುಬಿಟ್ಟು ಜನ ಸರಿಯಿಲ್ಲ ಎಂಬುದನ್ನೇ ನೆಪವಾಗಿಟ್ಟುಕೊಂಡು ತಮ್ಮ ಅನೈತಿಕ ದಂಧೆಗಳನ್ನು ಮುಂದುವರಿಸಿಕೊಂಡು ಹೋಗಲು ಅವಕಾಶ ನೀಡಬಾರದು. ಇಷ್ಟೊಂದು ದೊಡ್ಡ ಗಾತ್ರದ, ಅಭಿವ್ಯಕ್ತಿ ಸ್ವಾತಂತ್ರ್ಯವಿರುವ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಮಾನ ಮನಸ್ಸುಗಳ ಒಗ್ಗಟ್ಟು ಪ್ರದರ್ಶಿಸುವುದು ಸಾಧ್ಯವಿಲ್ಲದ ಮಾತು………..

ಸಂಪೂರ್ಣ ಅಧಿಕಾರ ಹೊಂದಿದ ಒಂದು ಒಳ್ಳೆಯ ಸರ್ಕಾರ ಇದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗುತ್ತದೆ. ಅದಕ್ಕಾಗಿ ನಮ್ಮೆಲ್ಲರ ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ ಅಂತರಗದ ಚಳುವಳಿ ರೂಪಿಸಿಕೊಂಡು ಕ್ರಾಂತಿಕಾರಕ ಬದಲಾವಣೆಯ ಮುಖಾಂತರ ಅತ್ಯುತ್ತಮ ಸರ್ಕಾರ ರಚಿಸಿದರೆ ಇದು ಸುಲಭವಾಗುತ್ತದೆ. ನಮ್ಮ ಗಮನ ಆ ಕಡೆಯೇ ಹೆಚ್ಚು ಕೇಂದ್ರೀಕರಿಸಬೇಕಿದೆ……….

ಮುಖವಾಡಗಳ ಮರೆಯಲ್ಲಿ ಆಡಳಿತ ಮಾಡುವ ಜನರ ನಡುವೆ ನಾವು ಬೆಪ್ಪರಂತೆ ಬದುಕುವ ಮನಸ್ಥಿತಿ ತೊರೆಯಬೇಕು. ಆಗ ಮಾತ್ರ ಬದಲಾವಣೆ ಸಾಧ್ಯ. ದುರ್ಬಲರಿಗೆ ಬುದ್ದಿ ಹೇಳುತ್ತಾ ಅವರ ಮೇಲೆ ಸವಾರಿ ಮಾಡುವುದಕ್ಕಿಂತ ನಮ್ಮ ಶಕ್ತಿಯನ್ನು ಪ್ರಬಲರ ಮೇಲೆ ತೋರಿಸಬೇಕು……

ಸಣ್ಣ ಪುಟ್ಟ ಬದಲಾವಣೆಗಳಿಂದ ವ್ಯವಸ್ಥೆಯ ಬದಲಾವಣೆ ಸಾಧ್ಯವಿಲ್ಲ. ಅದಕ್ಕಾಗಿ ನಿಮ್ಮೊಂದಿಗೆ ……………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ ಎಚ್ ಕೆ.
9844013068……

karnataka food Department ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದಲ್ಲಿ ಉದ್ಯೋಗಾವಕಾಶಗಳು

0

karnataka food Department ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಶುಭ ಸುದ್ದಿ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಲಿಮಿಟೆಡ್ KFCSC ಅಧಿಕೃತ ಅಧಿಸೂಚನೆ ಏಪ್ರಿಲ್ 2023 ರ ಮೂಲಕ ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

386 ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

karnataka food Department KFCSC ಹುದ್ದೆಯ ವಿವರಗಳು

ಸಹಾಯಕ ವ್ಯವಸ್ಥಾಪಕ- 10
ಹಿರಿಯ ಸಹಾಯಕರು- 57
ಹಿರಿಯ ಸಹಾಯಕರು (ಖಾತೆಗಳು)- 33
ಕ್ವಾಲಿಟಿ ಇನ್ಸ್‌ಪೆಕ್ಟರ್- 23
ಕಿರಿಯ ಸಹಾಯಕರು- 263

KFCSC ಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (KFCSC)
ಹುದ್ದೆಗಳ ಸಂಖ್ಯೆ: 386
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್
ವೇತನ: ರೂ.11600-43200/- ಪ್ರತಿ ತಿಂಗಳು

KFCSC ಸಂಬಳದ ವಿವರಗಳು
ಸಹಾಯಕ ವ್ಯವಸ್ಥಾಪಕರು- ರೂ.22800-43200/-
ಹಿರಿಯ ಸಹಾಯಕರು- ರೂ.14550-26700/-
ಹಿರಿಯ ಸಹಾಯಕರು (ಖಾತೆಗಳು)- ರೂ.14550-26700/-
ಗುಣಮಟ್ಟದ ಇನ್ಸ್ಪೆಕ್ಟರ್- ರೂ.14550-26700/-
ಕಿರಿಯ ಸಹಾಯಕರು ರೂ.11600-21000/-

KFCSC ನೇಮಕಾತಿ 2023 ಅರ್ಹತಾ ವಿವರಗಳು
ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ: KFCSC ನೇಮಕಾತಿ ನಿಯಮಗಳ ಪ್ರಕಾರ
ವಯೋಮಿತಿ ಸಡಿಲಿಕೆ: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ: ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
ಮೊದಲನೆಯದಾಗಿ KFCSC ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
KFCSC ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
KFCSC ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
KFCSC ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17-04-2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-ಮೇ-2023
ಇ-ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 20-
ಮೇ-2023

Coronavirus Disease ಎಲ್ಲಾ ಜಿಲ್ಲಾಡಳಿತಗಳು ಕೋವಿಡ್ ಹಿನ್ನೆಲೆಯಲ್ಲಿ ಆರೋಗ್ಯ ಸೇವೆ ಪರಿಶೀಲಿಸಲು ಕೇಂದ್ರದ ಸೂಚನೆ

0

Coronavirus Disease ಕೊರೊನಾ ವೈರಸ್ ಮತ್ತೊಮ್ಮೆ ಲಗ್ಗೆ ಇಟ್ಟಿದೆ. ಕೋವಿಡ್-19 ಹೊಸ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿವೆ. ಇದರ ಪರಿಣಾಮ ದೆಹಲಿಯಲ್ಲೂ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 733 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ತಿಳಿದುಬಂದಿದೆ.

ಮಾರ್ಚ್ 30 ರಂದು ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 932 ಆಗಿತ್ತು. ಅಂಕಿಅಂಶಗಳ ಪ್ರಕಾರ, ಮಾರ್ಚ್ 30 ಮತ್ತು ಏಪ್ರಿಲ್ 6 ರ ನಡುವೆ, 6 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸಾವುಗಳಲ್ಲಿ ಏಪ್ರಿಲ್ 3 ರಂದು ಇಬ್ಬರು ಸೋಂಕಿತರ ಸಾವು ಕೂಡ ಸೇರಿದೆ. ಕಳೆದ 1 ವಾರದಿಂದ ಸಕಾರಾತ್ಮಕತೆಯ ದರದಲ್ಲಿ ಹೆಚ್ಚಳ ಕಂಡುಬರುತ್ತಿದೆ.

Coronavirus Disease ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವರು, ಈ ಹಿಂದೆ ಕೋವಿಡ್ ಅಲೆಗಳ ಸಮಯದಲ್ಲಿ ಕೊರೊನಾ ವೈರಸ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಗಾಗಿ ನಾವು ಮಾಡಿದ ರೀತಿಯಲ್ಲಿಯೇ ಈ ಬಾರಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ಆಸ್ಪತ್ರೆಗಳಲ್ಲಿನ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ಏಪ್ರಿಲ್ 10-11 ರಂದು ಅಣಕು ಡ್ರಿಲ್ ನಡೆಸುವಂತೆ ಅವರು ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರಿಗೆ ತಿಳಿಸಿದರು. ಇದಲ್ಲದೆ, ಏಪ್ರಿಲ್ 8-9 ರಂದು ಆರೋಗ್ಯ ಅಧಿಕಾರಿಗಳು ಮತ್ತು ಜಿಲ್ಲಾಡಳಿತದೊಂದಿಗೆ ಆರೋಗ್ಯ ಸೇವೆಗಳ ಸಿದ್ಧತೆಯನ್ನು ಪರಿಶೀಲಿಸಬೇಕೆಂದು ಮಾಹಿತಿ ನೀಡಿದರು

cVIGIL App ಸಾರ್ವಜನಿಕರು ಸಿ ವಿಜಿಲ್ ಆಪ್ ಮೂಲಕ ಚುನಾವಣಾ ಅಕ್ರಮಗಳನ್ನ ಜಿಲ್ಲಾಧಿಕಾರಿಗಳಿಗೆ ತಿಳಿಸಬಹುದು

0

cVIGIL App ಸಾರ್ವಜನಿಕರು ಸಿ ವಿಜಿಲ್ ಆಪ್ ಮೂಲಕ ಚುನಾವಣಾ ಅಕ್ರಮಗಳನ್ನ ಜಿಲ್ಲಾಧಿಕಾರಿಗಳಿಗೆ ತಿಳಿಸಬಹುದು ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸುವ ಉದ್ದೇಶದಿಂದ ಚುನಾವಣಾ ಆಯೋಗವು ಸಿ-ವಿಜಿಲ್(cVIGIL) ಆ್ಯಪ್ ಬಿಡುಗಡೆ ಮಾಡಿದ್ದು ಸಾರ್ವಜನಿಕರು ಇದನ್ನು ಬಳಕೆ ಮಾಡಿಕೊಂಡು ಪಾರದರ್ಶಕ ಚುನಾವಣೆ ನಡೆಸುವಲ್ಲಿ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಚುನಾವಣಾ ಸಂದರ್ಭ ದಲ್ಲಿ ವಿವಿಧ ಪಕ್ಷಗಳು ಮತಗಳನ್ನು ಸೆಳೆಯಲು ಮತದಾರರಿಗೆ ಹಣ, ಹೆಂಡ ಹಾಗೂ ಇತರೆ ಆಸೆ, ಆಮಿಷ ತೋರಿಸುವುದು ಸಹಜ. ಇಂತಹ ಚುನಾವಣಾ ಅಕ್ರಮಗಳ ತಡೆಗೆ ಸಿವಿಜಿಲ್ ಆ್ಯಪ್ ಬಿಡುಗಡೆಗೊಳಿಸಲಾಗಿದ್ದು, ಸಿವಿಜಿಲ್ ಮೊಬೈಲ್ ಅಪ್ಲಿಕೇಷನ್ ಮೂಲಕ ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಅಕ್ರಮವನ್ನು ತಮ್ಮ ಮೊಬೈಲ್‍ಗಳ ಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬಹುದು.

ದೂರುದಾರರ ಹೆಸರು, ವಿಳಾಸವನ್ನು ಆಯೋಗ ಗೌಪ್ಯವಾಗಿ ಇಡುವ ಭರವಸೆಯನ್ನು ಕೂಡ ಆಯೋಗ ನೀಡಿದೆ.

cVIGIL App ಸಾರ್ವಜನಿಕರು ಸಿ ವಿಜಿಲ್ ಆಪ್ ಮೂಲಕ ಚುನಾವಣಾ ಅಕ್ರಮಗಳನ್ನ ಜಿಲ್ಲಾಧಿಕಾರಿಗಳಿಗೆ ತಿಳಿಸಬಹುದು ಚುನಾವಣಾ ಸಮಯದಲ್ಲಿ ಮತದಾರರು ನಿರ್ಧಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯಲ್ಲಿ ಆಮಿಷ ನೀಡಬಹುದಾದ ಹಣ ವಿತರಣೆ, ಉಡುಗೊರೆಗಳು, ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿ ಇಲ್ಲದ ಪೋಸ್ಟರ್ ಮತ್ತು ಬ್ಯಾನರ್‍ಗಳು, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಆಸ್ತಿ ವಿರೂಪ, ಧಾರ್ಮಿಕ ಅಥವಾ ಕೋಮು ಭಾಷಣಗಳು/ಸಂದೇಶಗಳು, ಮತಗಟ್ಟೆಯ 200 ಮೀ.ಪ್ರದೇಶದಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಮತದಾನದ ದಿನದಂದು ವಾಹನಗಳಲ್ಲಿ ಮತದಾರರ ಸಾಗಣೆ ಮುಂತಾದ ಯಾವುದೇ ರೀತಿಯ ಪ್ರಲೋಭನೆ, ಬೆದರಿಕೆ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರೇ ನೇರವಾಗಿ ಸಿವಿಜಿಲ್ ಆ್ಯಪ್‍ನಲ್ಲಿ ದೂರು ದಾಖಲಿಸಬಹುದು.

ಸ್ಮಾರ್ಟ್ ಪೋನ್ ನ ಗೂಗಲ್ ಪ್ಲೇ ನಲ್ಲಿ ಸಿ- ವಿಜಿಲ್ ಆ್ಯಪ್ ಡೌನ್‍ಲೋಡ್ ಮಾಡ್ಕೊಂಡು ಅತ್ಯಂತ ಸುಲಭವಾಗಿ ಇದನ್ನು ಬಳಸಬಹುದಾಗಿದೆ. ಅಕ್ರಮದ ಕುರಿತಾದ ಫೆÇೀಟೋ ಅಥವಾ ವಿಡಿಯೋ ಗಳನ್ನು ಅಪ್‍ಲೋಡ್ ಮಾಡಿ ದೂರು ನೀಡಬಹುದು. ಆ್ಯಪ್ ತಮ್ಮ ಸ್ವವಿವರ ನೀಡಿಯಾದರೂ, ಅಥವಾ ನೀಡದೆಯೂ ದೂರು ನೀಡಬಹುದು. ಆ್ಯಪ್ ನಲ್ಲಿ ತಿಳಿಸಿದ 16 ರೀತಿಯ ದೂರುಗಳ ಪೈಕಿ ಒಂದನ್ನು ಸೆಲೆಕ್ಟ್ ಮಾಡಿ ಸೆಂಡ್ ಮಾಡಬಹುದು. ದೂರು ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಡಲಾಗುವುದು.

ಸಿವಿಜಿಲ್‍ನಲ್ಲಿ ದಾಖಲಾಗುವ ದೂರುಗಳನ್ನು ನಿರ್ವಹಿಸಲು ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇವರು ಮತದಾನ ಮುಕ್ತಾಯವಾಗುವವರೆಗೂ 3 ಪಾಳಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವರು. ದೂರು ಬಂದ ಕೂಡಲೇ ಅವುಗಳನ್ನು ಪರಿಶೀಲಿಸಿ, ಸದರಿ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಾಪ್ತಿಯ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರ ಹಾಗೂ ಮಾಹಿತಿಯನ್ನು ರವಾನಿಸಲಾಗುತ್ತದೆ.

ಈ ಮಾಹಿತಿ ಆಧಾರದಲ್ಲಿ ತಕ್ಷಣ ಸ್ಥಳಕ್ಕೆ ಭೇಟಿ ನೀಡುವ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ದೂರು ಕುರಿತಂತೆ ಅಗತ್ಯ ಕ್ರಮ ಕೈಗೊಂಡು ಗರಿಷ್ಟ 100 ನಿಮಿಷದ ಒಳಗೆ ದೂರನ್ನು ಇತ್ಯರ್ಥಪಡಿಸುವರು.

ಸಾರ್ವಜನಿಕರು ಸಿವಿಜಿಲ್ ಮಾತ್ರವಲ್ಲದೇ ಉಚಿತ ಸಹಾಯವಾಣಿ 1950 ಕ್ಕೆ ಸಹ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ

JCI Shivamogga ನಾಯಕತ್ವ ಗುಣ ಬೆಲೆಸುವಲ್ಲಿ ಜೆಸಿಐ ಮಹತ್ತರ ಪಾತ್ರ-ಮಾನಕ್ ಚಂದ್

0

JCI Shivamogga ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಜತೆಯಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಜೆಸಿಐ ಸಂಸ್ಥೆ ಮಹತ್ತರ ಪಾತ್ರ ವಹಿಸುತ್ತದೆ. ಯುವಜನತೆ ಜೆಸಿಐನಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಜೆಸಿಐ ರಾಷ್ಟ್ರೀಯ ತರಬೇತುದಾರ ಕುನಾಲ್ ಮಾನಕಚಂದ್ ಹೇಳಿದರು.

ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ಪರಿಣಾಮಕಾರಿ ಸಂವಹನ ಕೌಶಲ್ಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಧನಾತ್ಮಕ ಆಲೋಚನೆ ಹಾಗೂ ಉತ್ತಮ ನಿರ್ಧಾರಗಳನ್ನು ಕೈಗೊಳ್ಳುವಂತೆ ವ್ಯಕ್ತಿತ್ವ ಬೆಳೆಸುವಲ್ಲಿ ಜೆಸಿಐ ಹೆಚ್ಚು ಸಹಕಾರಿ ಆಗಿದೆ.
ಜೀವನದಲ್ಲಿ ಯಶಸ್ಸು ಗಳಿಸಲು ನೆರವಾಗುತ್ತದೆ ಎಂದು ತಿಳಿಸಿದರು.

JCI Shivamogga ಜೆಸಿಐ ಸಂಸ್ಥೆಯು ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ವಿಶ್ವವಿದ್ಯಾಲಯದಷ್ಟು ಅಪಾರ ಜ್ಞಾನಭಂಡಾರ ಹೊಂದಿದ್ದು, ಜೆಸಿಐನಲ್ಲಿ ಭಾಗಿಯಾಗುವ ಪ್ರತಿಯೊಬ್ಬರು ಜೀವನ ಉತ್ತಮಗೊಳಿಸಲು ಅಗತ್ಯವಿರುವ ಅಂಶಗಳನ್ನು ಕಲಿಯುತ್ತಾರೆ. ಜೆಸಿ ಸದಸ್ಯರ ತೊಡಗಿಸಿಕೊಳ್ಳುವಿಕೆಯು ಬಹಳ ಮುಖ್ಯವಾಗುತ್ತದೆ ಎಂದರು.

ಶಿವಮೊಗ್ಗ ಬಿಇಒ ನಾಗರಾಜ್ ಮಾತನಾಡಿ, ಸೇವಾ ಮನೋಭಾವದಿಂದ ಸಮಾಜದಲ್ಲಿ ಉತ್ತಮ ಕೆಲಸ ಮಾಡುತ್ತಿರುವ ಸಂಸ್ಥೆ ಜೆಸಿಐ. ಶಾಲಾ ಅಭಿವೃದ್ಧಿ ಕಾರ್ಯಗಳಲ್ಲಿಯು ಜೆಸಿಐ ಸಂಸ್ಥೆ ನಿರಂತರವಾಗಿ ತೊಡಗಿಸಿಕೊಂಡಿದೆ. ನಿರಂತರವಾಗಿ ಶಿಕ್ಷಣ, ಆರೋಗ್ಯ, ವ್ಯಕ್ತಿತ್ವ ನಿರ್ಮಾಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶೇಷ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.

ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಕೆ, ಉತ್ತಮ ವ್ಯಕ್ತಿತ್ವ ನಿರ್ಮಾಣ ಹಾಗೂ ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯಾಗಿ ನಿರ್ಮಾಣ ಮಾಡುವುದು ಶಿಕ್ಷಣದ ಮೂಲ ಆಶಯ. ಶಿಕ್ಷಣದ ಜತೆಯಲ್ಲಿ ಸಂವಹನ ಕೌಶಲ್ಯವು ಅತ್ಯಂತ ಅವಶ್ಯಕ. ಉತ್ತಮ ಸಾಧಕರಾಗಿ ರೂಪುಗೊಳ್ಳಲು ಸಂವಹನ ಅತ್ಯಂತ ಅಗತ್ಯ ಎಂದು ತಿಳಿಸಿದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ ಹಿರೇಮಠ್ ಮಾತನಾಡಿ, ಯುವಜನರಲ್ಲಿ ನಾಯಕತ್ವ ಗುಣ ಸೇರಿದಂತೆ ಕೌಶಲ್ಯಯುತ ವ್ಯಕ್ತಿತ್ವ ನಿರ್ಮಿಸುವಲ್ಲಿ ಜೆಸಿಐ ವಿಶೇಷ ಸಂವಹನ ಕೌಶಲ್ಯ ಕಾರ್ಯಾಗಾರ ಹಮ್ಮಿಕೊಂಡಿದ್ದು, ಭಾಗಿಯಾಗಿರುವ ಪ್ರತಿಯೊಬ್ಬರು ತರಬೇತಿಯ ಸಂಪೂರ್ಣ ಪ್ರಯೋಜನ ಪಡೆದುಕೊಂಡು ಉತ್ತಮ ಸಂವಹನಕಾರರಾಗಬೇಕು. ಉತ್ತಮ ಸಂವಹನ ಕೌಶಲ್ಯ ಜೀವನದಲ್ಲಿ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಜೆಸಿ ಕಾರ್ಯಕ್ರಮ ಸಂಯೋಜಕ ಮಂಜುನಾಥ ಕದಂ ಮಾತನಾಡಿ, ಜೆಸಿಐ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ಸೇರಿದಂತೆ ಸೇವಾ ಕ್ಷೇತ್ರದಲ್ಲಿ ವಿಶೇಷ ಕೆಲಸ ಮಾಡುತ್ತಿದ್ದು, ಯುವಜನರು ಜೆಸಿಐನಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಇದರಿಂದ ಸಾಧನೆಯ ಹಾದಿಯಲ್ಲಿ ಮಾರ್ಗದರ್ಶನವಾಗಿ ನೆರವಾಗುತ್ತದೆ ಎಂದು ತಿಳಿಸಿದರು.
ಜೆಸಿಐ ವಲಯ ಅಧ್ಯಕ್ಷ ಅನುಷ್ ಗೌಡ, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ನಿಕಟಪೂರ್ವ ಅಧ್ಯಕ್ಷ ಸತೀಶ್ ಚಂದ್ರ, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಕಾರ್ಯದರ್ಶಿ ಡಾ. ಲಲಿತಾ ಭರತ್, ಜೆಸಿ ರಾಷ್ಟ್ರೀಯ ತರಬೇತುದಾರ ಪ್ರಜ್ವಲ್ ಜೈನ್, ಜೆಸಿ ಸಂತೋಷ್, ಕುಮಾರಿ ವರ್ಷಿತಾ ಮತ್ತಿತರರು ಉಪಸ್ಥಿತರಿದ್ದರು.

Code of Election Conduct ಕಮಲ ವಿನ್ಯಾಸದ ಶಿವಮೊಗ್ಗ ಏರ್ ಪೋರ್ಟ್ ಮರೆಮಾಚಲು ಚುನಾವಣಾ ನೀತಿ ಸಂಹಿತೆ ಪ್ರಕಾರ ಮನವಿ

0

Code of Election Conduct ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಆದ್ದರಿಂದ ಶಿವಮೊಗ್ಗದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣ ಟರ್ಮಿನಲ್ ಕಮಲದ ರೂಪದಲ್ಲಿ ಇರುವುದರಿಂದ ಇದು ಸಹ ನೀತಿ ಸಂಹಿತೆ ಉಲ್ಲಂಘನೆಯಾಗಿದೆ.ಹಾಗಾಗಿ ಕೂಡಲೇ ಚುನಾವಣಾ ಆಯೋಗ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಚುನಾವಣೆ ಮುಗಿಯುವವರೆಗೂ ಪರದೆ ಮುಚ್ಚಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಚುನಾವಣಾ ಅಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಮನವಿ ನೀಡಿದೆ.

Code of Election Conduct ಈ ವಿಮಾನ ನಿಲ್ದಾಣವು ಫೆ.27 ರಂದು ಪ್ರಧಾನಿಗಳು ಉದ್ಘಾಟಿಸಿದ್ದರು.ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ದೇವೆಂದ್ರಪ್ಪ ಹಾಗೂ ಕವಿತಾ ರಾಘವೇಂದ್ರ, ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಕಮಲ ಆಕಾರದ ವಿಮಾನ ನಿಲ್ದಾಣದ ಟರ್ಮಿನಲ್ ಪೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವ ಮೂಲಕ ಇದು ನಮ್ಮ ಸಾಧನೆ ಎಂದು ಬಿಜೆಪಿ ಪಕ್ಷ ಬಿಂಬಿಸುತ್ತಿದೆ. ಹಾಗಾಗಿ ಚುನಾವಣೆ ಮುಗಿಯುವವರೆಗೂ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಸಂಪೂರ್ಣ ಪರದೆಯಿಂದ ಮುಚ್ಚಬೇಕು. ಸಾರಿಗೆ ಬಸ್ ಗಳಲ್ಲಿ ಇರುವ ಸರ್ಕಾರದ ಜಾಹಿರಾತುಗಳನ್ನು ಸಹ ತೆರವು ಮಾಡಬೇಕು ಎಂದು ಆಗ್ರಹಿಸಲಾಗಿದೆ.

Shivamogga District Police ಆನಂದಪುರದ ಬಳಿ ಗಾಂಜಾ ಸಾಗಣೆಕೋರನ ಬಂಧನ

0

Shivamogga District Police ದಿನಾಂಕ: 07-04-2023 ರಂದು ಮೊಹಮ್ಮದ್ ಬೇಗ್ ಎಂಬ ವ್ಯಕ್ತಿಯು ಓಮಿನಿ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಇಟ್ಟುಕೊಂಡು ಸಾಗರದ ಕಡೆಯಿಂದ ಆನಂದಪುರದ ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಶ್ರೀ ಮಹೇಶ್ ಕುಮಾರ್ ಪೋಲಿಸ್ ಉಪನಿರೀಕ್ಷಕರು ಆನಂದಪುರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡವು ಠಾಣಾ ವ್ಯಾಪ್ತಿಯ *ಆನಂದಪುರ ಗ್ರಾಮದ ಅರಣ್ಯ ಇಲಾಖಾ ವಸತಿ ಗೃಹದ ಹತ್ತಿರ, ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿಕೊಂಡು, ವಾಹನಗಳನ್ನು ಪರಿಶೀಲನೆ ಮಾಡಿದ್ದಾರೆ.

Shivamogga District Police ಸಾಗರದ ಕಡೆಯಿಂದ ಬರುತ್ತಿದ್ದ ಸಿಲ್ವರ್ ಬಣ್ಣದ ಓಮಿನಿ ವಾಹನವನ್ನು ತಡೆದು ಪರಿಶೀಲನೆ ಮಾಡಿದಾಗ ಓಮಿನಿಯ ಒಳಗೆ ಗಾಂಜಾ ಪದಾರ್ಥವು ದೊರಕಿರುತ್ತದೆ. ನಂತರ ಓಮಿನಿ ವಾಹನದ ಚಾಲಕನಾದ ಆರೋಪಿ ಮೊಹಮ್ಮದ್ ಬೇಗ್ 42 ವರ್ಷ ಆಚಾಪುರ ಗ್ರಾಮ ಸಾಗರ ಈತನನ್ನು ವಶಕ್ಕೆ ಪಡೆದು, ಆರೋಪಿಯಿಂದ ಅಂದಾಜು ಮೌಲ್ಯ 13,000/- ರೂ ಗಳ ಒಟ್ಟು 960 ಗ್ರಾಂ ತೂಕದ ಒಣ ಗಾಂಜಾ, ಒಂದು ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಓಮಿನಿ ವಾಹನವನ್ನು ಅಮಾನತ್ತು ಪಡಿಸಿಕೊಂಡು, ಗುನ್ನೆ ಸಂಖ್ಯೆ 07/2023 NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ.

BR Ambedkar ಅಂಬೇಡ್ಕರ್ ಜಯಂತಿಯಂದು ವಿಶೇಷ ಬೈಕ್ ಜಾಥಾ

0

BR Ambedkar ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಏಪ್ರಿಲ್ 14ರಂದು ಭೀರ್ಮಿ ಆರ್ಮಿ ಹಾಗೂ ದಲಿತ ಸಂಘಟನೆಗಳ ನೇತೃತ್ವದಲ್ಲಿ ಬೈಕ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭೀಮ್ ಆರ್ಮಿ ಗೌರವಾಧ್ಯಕ್ಷ ಹೊನ್ನೇಶ್ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಏ.14 ರಂದು ಬೆಳಿಗ್ಗೆ 09 ಗಂಟೆಗೆ ತೊಂಗರಿ ಹಂಕಲ್ ವೃತ್ತ ಭೀಮ್ ಆರ್ಮಿ ಕಚೇರಿಯಿಂದ ಜಿಲ್ಲಾ ಪಂಚಾಯಿತಿವರೆಗೆ ಬೈಕ್ ಜಾಥಾ ಮೂಲಕ ತೆರಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು.

BR Ambedkar ನಂತರ ತಾಲ್ಲೂಕು ಕಚೇರಿಗೆ ಆಗಮಿಸಿ ಅಲ್ಲಿಂದ ಎಂ.ಜಿ.ರಸ್ತೆ ಮುಖಾಂತರ ಅಂಭೇಡ್ಕರ್ ಭಾವಚಿತ್ರದೊದಿಗೆ ಅಭಿಮಾನಿಗಳು ಮೆರವಣಿಗೆ ನಡೆಸಲಿದ್ದಾರೆ.

ಬಳಿಕ ಆಜಾದ್‌ಪಾರ್ಕ್ನಲ್ಲಿ ಮೆರವಣಿಗೆ ಸಮಾವೇಶಗೊಂಡು ಬಹಿರಂಗ ಸಭೆ ನಡೆಸಲಾಗುವುದು. ಸಭೆಗೆ ಉರಿಲಿಂಗಪೆದ್ದು ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ದಲಿತಪರ ಮುಖಂಡರುಗಳು ಸೇರಿದಂತೆ ವಿವಿಧ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Women’s Day ಹೊಸಮುತ್ತಿಗೆ ಹಳ್ಳಿಯಲ್ಲಿ ಮಹಿಳಾ ದಿನಾಚರಣೆ

0

Women’s Day ಐ.ಸಿ.ಎ.ಆರ್. – ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ ವತಿಯಿಂದ ಶಿಕಾರಿಪುರ ತಾಲೂಕಿನ ಹೊಸ ಮುತ್ತಿಗೆ ಹಳ್ಳಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

Women’s Day ಕೆ. ವಿ. ಕೆ.,ಯ ವಿಜ್ಞಾನಿ (ಗೃಹ ವಿಜ್ಞಾನ) ಡಾ. ಜ್ಯೋತಿ ಎಂ. ರಾಠೋಡ್, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಇತಿಹಾಸ, ವಿಶೇಷತೆ ಮತ್ತು ಪ್ರಾಮುಖ್ಯತೆ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆ. ವಿ. ಕೆ., ವಿಜ್ಞಾನಿ (ಮಣ್ಣು ವಿಜ್ಞಾನ) ಡಾ. ಅಂಜಲಿ ಎಂ. ಸಿ., ಹಿರಿಯ ಸಹಾಯಕ ಸಂಶೋಧಕಿ(ಆರ್ಯ ಯೋಜನೆ) ಡಾ. ಪೂಜಾ ಜಿ. ಕೆ., ಮತ್ತು ಮಹಿಳೆಯರು ಉಪಸ್ಥಿತರಿದ್ದರು.