Thursday, November 19, 2026
Thursday, November 19, 2026
Home Blog Page 1256

Ds Arun ಕ್ರೀಡಾಪಟುಗಳು ಒಳ್ಳೆಯ ಅವಕಾಶ & ವೇದಿಕೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು- ಡಿ.ಎಸ್.ಅರುಣ್

0

Ds Arun ಓದಿಗೆ ಕೊಡುವಷ್ಟು ಪ್ರಾಮುಖ್ಯತೆಯನ್ನು ಕ್ರೀಡೆಗೂ ನೀಡಬೇಕು. ಪ್ರಸ್ತುತ ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿದ್ದು ಆಸಕ್ತರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್ ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 2023-24 ನೇ ಸಾಲಿನ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ಐದು ವರ್ಷಗಳಲ್ಲಿ ದೇಶದ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಬೆಳೆವಣಿಗೆಯಾಗಿದೆ. ನಮ್ಮ ಪ್ರಧಾನಿಯವರ ದೂರದೃಷ್ಟಿಯಿಂದ ಖೇಲೋ ಇಂಡಿಯಾ ಎಂಬ ಪರಿಕಲ್ಪನೆಯಡಿ ಮುಂದಿನ ಒಲಂಪಿಕ್ಸ್ ಕ್ರೀಡೆಗೆ ಈಗಲೇ ಕ್ರೀಡಾಪಟುಗಳನ್ನು ಸಿದ್ದಪಡಿಸಲಾಗುತ್ತಿದೆ. ಸರ್ಕಾರದ ದೂರದೃಷ್ಟಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಬೆಳೆವಣಗೆಯಾಗುತ್ತಿದ್ದು ಪ್ರತಿಭಾವಂತ ಕ್ರೀಡಾಪಟುಗಳು ಹೊರಹೊಮ್ಮುತ್ತಿದ್ದಾರೆ. ನಮ್ಮ ಕ್ರೀಡಾಪಟುಗಳು ಏಷ್ಯನ್ ಕ್ರೀಡೆಗಳಲ್ಲಿ ಒಳ್ಳೆಯ ಸಾಧನೆ ಮಾಡುತ್ತಿದ್ದಾರೆ. ಇಂದಿಗೆ 23 ಚಿನ್ನದ ಪದಕ ಸೇರಿದಂತೆ ಒಟ್ಟು 88 ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಷಯ ಎಂದರು.

ಎನ್‍ಇಪಿ ಅಡಿಯಲ್ಲಿ ಓದಿನ ಜೊತೆಗೆ ನಮಗೆ ಕ್ರೀಡೆ, ಕಲೆ, ಸಾಹಿತ್ಯ ಹೀಗೆ ಆಸಕ್ತಿ ಇರುವಂತಹ ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಇದೆ. ವಿದ್ಯಾರ್ಥಿಗಳು ತಮ್ಮದೇ ಆದ ದೂರದೃಷ್ಟಿ, ಗುರಿ ಹೊಂದಬೇಕು. ಸೋಲನ್ನು ಸವಾಲಾಗಿ ಸ್ವೀಕರಿಸಿ ಮುಂದೆ ಬರಬೇಕು. ಶಿವಮೊಗ್ಗದಲ್ಲೂ ಕ್ರೀಡಾ ವಲಯ ಸಾಕಷ್ಟು ಬೆಳೆವಣೆ ಕಾಣುತ್ತಿದ್ದು ಕ್ರಿಕೆಟ್ ಮೈದಾನ, ಸಾಕಷ್ಟು ಒಳಾಂಗಣ ಕ್ರೀಡಾಂಗಣಗಳು ಹೀಗೆ ಅಭಿವೃದ್ದಿಯಾಗುತ್ತಿದೆ. ಒಳ್ಳೆಯ ಅವಕಾಶ ಮತ್ತು ವೇದಿಕೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಶಿವಮೊಗ್ಗದಲ್ಲಿ ಏರ್ಪಡಿಸಲಾಗಿದ್ದು ಪ್ರತಿ ವಿಭಾಗ ಮಟ್ಟಕ್ಕೂ ವಿವಿಧ ಕ್ರೀಡೆಗಳನ್ನು ನೀಡಲಾಗಿದೆ. ಈ ವಿಭಾಗಕ್ಕೆ ಟೆನ್ನಿಸ್, ಜುಡೋ, ಯೋಗ, ವಾಲಿಬಾಲ್ ಮತ್ತು ಷಟಲ್ ಬ್ಯಾಡ್ಮಿಂಟನ್ ಒಟ್ಟು 5 ಕ್ರೀಡೆಗಳನ್ನು ನೀಡಲಾಗಿದೆ. ಸುಮಾರು 650 ಕ್ರೀಡಾಪಟುಗಳು ನೋಂದಣಿಯಾಗಿದ್ದಾರೆ. ಇಲ್ಲಿ ಆಯ್ಕೆಯಾದವರು ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವರು ಎಂದರು.

ಕಾರ್ಯಕ್ರಮದಲ್ಲಿ ತರಬೇತುದಾರರಾದ ನಾಗರಾಜ್, ಬಾಳಪ್ಪ ಮಾನೆ, ಕೇಶವನ್ ಮತ್ತು ಶ್ರೀಕಾಂತ್ ಇವರನ್ನು ಸನ್ಮಾನಿಸಲಾಯಿತು.

Ds Arun ಕಾರ್ಯಕ್ರಮದಲ್ಲಿ ತರಬೇತುದಾರರಾದ ನಾಗರಾಜ್, ಜಮಾಲ್ ಅಹಮದ್, ಬಾಳಪ್ಪ ಮಾನೆ, ಕ್ರೀಡಾಪಟುಗಳು ಹಾಜರಿದ್ದರು.

Shimoga Dasara Preparations ಶಿವಮೊಗ್ಗ ದಸರಾ ಪೂರ್ವಸಿದ್ಧತೆ ಬಗ್ಗೆಶಾಸಕ ಚನ್ನವೀರಪ್ಪ ಅವರಿಂದ ಸಚಿವರುಗಳ ಭೇಟಿ – ಚರ್ಚೆ

0

Shimoga Dasara Preparations ನಾಡಹಬ್ಬ ದಸರಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ, ಇದರ ಪೂರ್ವಭಾವಿಯಾಗಿ ಅನೇಕ ಸಭೆಗಳು ನಡೆಯುತ್ತಿವೆ.

ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಹಿಂದುಳಿದ ವರ್ಗದ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದಂತ ಸಚಿವರಾದ ಶ್ರೀ ಶಿವರಾಜ್ ತಂಗಡಗಿ ರವರ ಕಾರ್ಯದರ್ಶಿ ರವರನ್ನು ಭೇಟಿಯಾಗಿ ದಸರಾ ಅನುದಾನದ ಬಗ್ಗೆ ಚರ್ಚೆ ನಡೆಸಿದರು.

ಈ ಚರ್ಚೆಯಲ್ಲಿ ದಸರಾ ಉತ್ಸವಕ್ಕಾಗಿ ಆನೆಗಳಿಗಾಗಿ ಅನುಮತಿಯನ್ನು ಪಡೆದುಕೊಂಡರು.

ಭೇಟಿಯ ಸಮಯದಲ್ಲಿ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಉಪಮಹಾಪೌರರಾದ ಲಕ್ಷ್ಮಿ ಶಂಕರ್ ನಾಯಕ್. ಆಡಳಿತ ಪಕ್ಷದ ನಾಯಕರಾದ ಶ್ರೀ ಜ್ಞಾನೇಶ್ವರ್, ಪಾಲಿಕೆಯ ಸದಸ್ಯರಾದ ಪ್ರಭಾಕರ್, ವಿಶ್ವಾಸ್, ಅನಿತಾ ರವಿಶಂಕರ್. ವಿಶ್ವನಾಥ್, ಭಾನುಮತಿ, ವಿನೋದ್ ಉಪಸ್ಥಿತರಿದ್ದರು.

Shimoga Dasara Preparations ನಂತರ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಮಧು ಬಂಗಾರಪ್ಪ ರವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ದಸರಾ ಹಬ್ಬದ ಕುರಿತು ಚರ್ಚಿಸಿದರು.

Siddaramaiah ಕಲುಷಿತ ಕುಡಿಯುವ ನೀರಿನ ಸರಬರಾಜಾದರೆ ಅನಾಹುತಕ್ಕೆ ಸಂಬಂಧಿತ ಅಧಿಕಾರಿಗಳೇ ಹೊಣೆ- ಸಿದ್ಧರಾಮಯ್ಯ

0

Siddaramaiah ಕಲುಷಿತ ನೀರು ಸೇವನೆಯಿಂದ ಸಾವು ಸಂಭವಿಸಿದ ಕಾವಾಡಿಗರಹಟ್ಟಿಯ ಸಂತ್ರಸ್ಥ ಕುಟುಂಬಗಳನ್ನು ಭೇಟಿಮಾಡಿ, ಬಳಿಕ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ
ಸಿದ್ದರಾಮಯ್ಯ
ಅವರು, ಅವುಗಳ ಪರಿಹಾರಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ 4 ಕೋಟಿ ರೂಪಾಯಿ ನೀಡಿದ್ದೇವೆ.
ಸಂತ್ರಸ್ಥ ಕುಟುಂಬಗಳ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ. ಈ ಕುಟುಂಬಗಳ ಸದಸ್ಯರಿಗೆ ಉದ್ಯೋಗವನ್ನೂ ಕೊಡುತ್ತೇವೆ, ಮನೆಯನ್ನೂ ಕಟ್ಟಿಸಿಕೊಡುತ್ತೇವೆ.

ಶುದ್ಧ ಕುಡಿಯುವ ನೀರು ಕೊಡುವುದು ನಮ್ಮ ಕರ್ತವ್ಯ. ಘಟನೆ ಘಟಿಸಿದ ತಕ್ಷಣ ಸ್ಥಳೀಯ ಶಾಸಕರು, ಜಿಲ್ಲಾ ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ಕೊಟ್ಟು, ತಕ್ಷಣಕ್ಕೆ 10 ಲಕ್ಷ ಪರಿಹಾರ ನೀಡಲಾಗಿತ್ತು.

Siddaramaiah ಮೊದಲೇ ಶುದ್ಧ ನೀರಿನ ವ್ಯವಸ್ಥೆ ಇದ್ದಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ. ಘಟನೆ ಬಳಿಕ ಶುದ್ಧ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದೆ ಇಂತಹ ಅನಾಹುತ ನಡೆದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Shivamogga DC Dr. Selvamani ಸಾಗರ ರಸ್ತೆ ಕೈಗಾರಿಕಾ ವಸಾಹತು ಮೂಲಭೂತ ಸೌಕರ್ಯ ಅಭಿವೃದ್ಧಿ ಕುಂಠಿ: ಸಂಬಂಧಿಸಿದ ಅಧಿಕಾರಿಗೆ ನೋಟೀಸ್- ಡಾ. ಸೆಲ್ವಮಣಿ

0

Shivamogga DC Dr. Selvamani ಸಾಗರ ರಸ್ತೆಯ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಕೆಲವು ವರ್ಷಗಳ ಹಿಂದೆ 10 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾರ್ಯ ಇನ್ನೂ ಅಪೂರ್ಣವಾಗಿದೆ.

ಈ ಕಾಮಗಾರಿಯು ಮುಂದಿನ 15 ದಿನಗಳೊಳಗಾಗಿ ಪೂರ್ಣಗೊಳಿಸಿ, ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು. ತಪ್ಪಿದಲ್ಲಿ ಕಾಮಗಾರಿಯ ಮೇಲುಸ್ತುವಾರಿ ವಹಿಸಿಕೊಂಡಿರುವ ಮಹಾನಗರಪಾಲಿಕೆ ಸಹಾಯಕ ಅಭಿಯಂತರ ಹಾಲೇಶಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಹೇಳಿದರು.

ಅವರು ಶಿವಮೊಗ್ಗದ ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ 189ನೇ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ 22ನೇ ಕೈಗಾರಿಕಾ ಸ್ಪಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಈ ವಿಷಯಕ್ಕೆ ಸಂಬ0ಧಿಸಿದ0ತೆ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಸಂಬ0ಧ ಉಸ್ತುವಾರಿ ಅಧಿಕಾರಿಗೆ ನೋಟೀಸ್ ಜಾರಿಗೊಳಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್ ಅವರಿಗೆ ಸೂಚಿಸಿದರು.

ಸದರಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಪಾಲಿಕೆ ವತಿಯಿಂದ ಕಸದ ವಿಲೇವಾರಿ ಆಗುತ್ತಿದೆ. ಪ್ರಸ್ತುತ 24×7 ನೀರಿನ ಸಂಪರ್ಕದ ಕೊರತೆ ಇದ್ದು, ಅದನ್ನು ವiಹಾನಗರಪಾಲಿಕೆ ವತಿಯಿಂದ ಮುಂದಿನ ಕೆಲವು ದಿನಗಳೊಳಗಾಗಿ ಒದಗಿಸಲು ಕ್ರಮ ವಹಿಸಲಾಗುವುದು ಎಂದ ಅವರು, ವಸಾಹತು ಮುಂಭಾಗದ ಮುಖ್ಯ ರಸ್ತೆಯಲ್ಲಿ ಟ್ರಕ್ ಹಾಗೂ ಇತರೆ ವಾಹನಗಳ ನಿಲುಗಡೆ ಮಾಡುತ್ತಿರುವುದರಿಂದ ಆಕಸ್ಮಿಕ ಅಫಘಾತಗಳು ಸಂಭವಿಸುತ್ತಿವೆ ಎಂಬ ಬಗ್ಗೆ ಆರೋಪಗಳಿವೆ. ಈ ಸಂಬAಧ ಕೈಗಾರಿಕೋದ್ಯಮಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಉಪಸ್ಥಿತಿಯಲ್ಲಿ ಶೀಘ್ರದಲ್ಲಿ ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದವರು ನುಡಿದರು.

ನಗರದ ಹೊರವಲಯ ನಿದಿಗೆಯ ಕೈಗಾರಿಕಾ ಪ್ರದೇಶದಲ್ಲಿರುವ ಶಾಹಿ ಎಕ್ಸ್ಪೋರ್ಟ್ಸ್ ಪ್ರೆö.ಲಿ., ಕೈಗಾರಿಕಾ ಘಟಕದ ಮಾಲಿನ್ಯದಿಂದ ವಾತಾವರಣ ನಿರಂತರವಾಗಿ ಕಲುಷಿತಗೊಳ್ಳುತ್ತಿರುವ ಬಗ್ಗೆ ಬಂದಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬ0ಧ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿ ಪಡೆದು ನಿಯಮಾನುಸಾರ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.

ಈ ಪ್ರದೇಶದಲ್ಲಿ ಖೊಡೇಸ್ ಕಂಪನಿಯ ಕೈಗಾರಿಕಾ ಘಟಕಗಳನ್ನು ತೆರೆಯಲು ದಶಕಗಳ ಹಿಂದೆಯೇ ಸುಮಾರು 140ಎಕರೆ ಜಮೀನನ್ನು ಮಂಜೂರು ಮಾಡಿದ್ದು, ಅವರು ಸದರಿ ಭೂಮಿಯನ್ನು ಸ್ವತಃ ತಾವೂ ಬಳಸದೇ, ಇತರರಿಗೂ ಅವಕಾಶ ನೀಡದೆ ಹಾಗೆಯೇ ಉಳಿದಿದೆ. ಆದ್ದರಿಂದ ಸದರಿ ಭೂಮಿಯ ಒಡೆತನ ಹೊಂದಿರುವ ಸಂಸ್ಥೆಯ ಮುಖ್ಯಸ್ಥರಿಗೆ ಮನವಿ ಮಾಡಿಕೊಂಡು ಭೂಮಿಯನ್ನು ವಶಕ್ಕೆ ಪಡೆದು, ಇತರ ಆಸಕ್ತರಿಗೆ ಹಂಚಿಕೆ ಮಾಡುವುದರಿಂದ ಕೈಗಾರಿಕಾ ಪ್ರದೇಶ ವಿಸ್ತರಣೆಗೊಳ್ಳಲಿದೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಕೈಗಾರಿಕೋದ್ಯಮಿಗಳು ಸಭೆಯ ಗಮನಕ್ಕೆ ತಂದರು.

ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚುವರಿ ಉತ್ಪನ್ನ ತಯಾರಿಸಲು ಹಾಗೂ ಘಟಕಕ್ಕೆ ಮುಂದಾಗಿರುವ ೫೦ಹೆಚ್.ಪಿ. ವಿದ್ಯುತ್‌ಗೆ ಹೆಚ್ಚುವರಿಯಾಗಿ 150ಹೆಚ್.ಪಿ. ವಿದ್ಯುತ್ ಮಂಜೂರಾತಿಗಾಗಿ ಕೋರಿಕೆ ಸಲ್ಲಿಸಿರುತ್ತಾರೆ. ಅಲ್ಲದೇ ಅಲ್ಲಿನ ಎಸ್.ಜಿ.ಕೆ. ಇಂಡಸ್ಟಿçಸ್‌ನ ಹೆಸರನ್ನು ಬದಲಾಯಿಸಿಕೊಳ್ಳಲು ಅನುಮತಿ ನೀಡುವಂತೆ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಮೆ.ರಹಮಾನಿಯ ಕಾಂಕ್ರೀಟ್ ಪ್ರೊಡಕ್ಟ್ ಘಟಕಕ್ಕೆ ಹೆಚ್ಚಿನ ವಿದ್ಯುತ್ ಸರಬರಾಜು ಮಾಡುವ ಮುನ್ನ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆಯುವಂತೆ ಅವರು ಸೂಚಿಸಿದರು.

ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ ಹಂಚಿಕೆಗೆ ಪಡೆದು ಮಂಡಳಿಯ ನಿಯಮಾನುಸಾರ ಘಟಕ ಸ್ಥಾಪಿಸದಿರುವವರಿಗೆ ಮೂರು ತಿಂಗಳ ಕಾಲಾವಕಾಶ ನೀಡಿ ತಿಳುವಳಿಕೆ ನೀಡುವಂತೆ ಹಾಗೂ ಡಿಸೆಂಬರ್ 31ರೊಳಗಾಗಿ ಪ್ರತಿಕ್ರಿಯಿಸದಿದ್ದಲ್ಲಿ ಮಾಲೀಕತ್ವವನ್ನು ಪರಬಾರೆ ಮಾಡಲು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

Shivamogga DC Dr. Selvamani ಸಭೆಯಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ನಿಗಮದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಕೈಗಾರಿಕಾ ಪ್ರದೇಶಾಭಿವೃದ್ಧಿ ಸಮಿತಿಯ ನೋಡಲ್ ಅಧಿಕಾರಿ ಹೆಚ್.ಆರ್.ರಾಜಪ್ಪ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಸೇರಿದಂತೆ ವಿವಿಧ ಕೈಗಾರಿಕಾ ಸಂಘಗಳ ಅಧ್ಯಕ್ಷರು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸಸ್ಥಿತರಿದ್ದರು.

List of Research Scientists ಶಿವಮೊಗ್ಗದ ಡಾ.ವರುಣ್ ಕುಮಾರ್ ಸ್ಟ್ಯಾನ್ ಫೋರ್ಡ್ ವಿವಿ ಯ ಸಂಶೋಧಕ ವಿಜ್ಞಾನಿಗಳ ಪಟ್ಟಿಗೆ ಸೇರ್ಪಡೆ

List of Research Scientists ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೇರಿಕಾದ ಪ್ರತಿಷ್ಠಿತ ಸ್ಟ್ಯಾ ನ್ ಫೋರ್ಡ್ ವಿಶ್ವವಿದ್ಯಾನಿಲಯವು ಬಿಡುಗಡೆ ಮಾಡಿರುವ ವಿಶ್ವದ ಟಾಪ್ ಶೇ.2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ.ಸಿ.ಪ್ರಸನ್ನಕುಮಾರ ಸೇರಿದಂತೆ ಅವರ ಸಂಶೋಧನಾ ವಿದ್ಯಾರ್ಥಿ ಶಿವಮೊಗ್ಗದ ಡಾ. ಆರ್ ಎಸ್ ವರುಣ್ ಕುಮಾರ್ ಅವರಿಗೆ ಸ್ಥಾನ ಲಭಿಸಿದೆ.

ಡಾ.ಆರ್ ಎಸ್ ವರುಣ್ ಕುಮಾರ್ ಶಿವಮೊಗ್ಗದ ಪತ್ರಕರ್ತರಾದ ಎನ್. ರವಿಕುಮಾರ್(ಟೆಲೆಕ್ಸ್),ಶ್ರೀಮತಿ ಶಶಿಕಲಾ ಅವರ ಪುತ್ರರಾಗಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗ ಡಾ. ಬಿ ಸಿ ಪ್ರಸನ್ನಕುಮಾರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆಯಲ್ಲಿ ತೊಡಗಿರುವ ಡಾ. ಆರ್.ಜೆ.ಪುನೀತ್ ಗೌಡ (45450), ಡಾ.ಆರ್.ನವೀನ್ ಕುಮಾರ್ ( 65146), ಡಾ. ಜೆ.ಕೆ.ಮಧುಕೇಶ್ (190634) ಇವರುಗಳು ಕೂಡ ಜಾಗತಿಕ ವಿಜ್ಞಾನಿಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಸ್ಟ್ಯಾನ್ ಫೋರ್ಡ್ ವಿವಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸಂಶೋಧನೆ, ಸಂಶೋಧನಾ ವರದಿ, ಸಂಶೋಧನಾ ಉಲ್ಲೇಖಗಳು, ಲೇಖನಗಳನ್ನು ಒಳಗೊಂಡ ಹೆಚ್-ಇಂಡೆಕ್ಸ್, ಐ-ಟೆನ್ ಇಂಡೆಕ್ಸ್ ಸೇರಿದಂತೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಈ ಮಾನದಂಡಗಳ ಪ್ರಕಾರ ವಿಜ್ಞಾನಿಗಳನ್ನು 22 ವೈಜ್ಞಾನಿಕ ಕ್ಷೇತ್ರಗಳು ಮತ್ತು 174 ಉಪ-ಕ್ಷೇತ್ರಗಳಾಗಿ ವರ್ಗೀಕರಿಸಲಾಗಿದೆ. ಇದರಲ್ಲಿ ದಾವಣಗೆರೆ ವಿವಿಯ ಗಣಿತಶಾಸ್ತ್ರ ವಿಭಾಗದ ಪ್ರೊ. ಬಿ.ಸಿ.ಪ್ರಸನ್ನಕುಮಾರ ರವರು ಈ ವರ್ಷದ ಶ್ರೇಯಾಂಕ ಪಡೆದಿದ್ದು, ಸತತ ಮೂರನೇ ಬಾರಿಗೆ ಈ ಸ್ಥಾನ ಪಡೆದಿದ್ದಾರೆ. ಇದರ ಜತೆಗೆ ವೃತ್ತಿ ಜೀವನದ ಸಾಧನೆಯಲ್ಲಿ ಶ್ರೇಯಾಂಕವನ್ನು ಪಡೆದಿರುವುದು ಗಮನರ್ಹವಾಗಿದೆ.

ಪ್ರೊ. ಬಿ.ಸಿ.ಪ್ರಸನ್ನ ಕುಮಾರ ಮಾತ್ರವಲ್ಲದೆ ಅವರ ಮಾರ್ಗದರ್ಶದಲ್ಲಿ ಸಂಶೋಧನೆಯನ್ನು ನಡೆಸುತ್ತಿರುವ ಡಾ. ಆರ್.ಜೆ.ಪುನೀತ್ ಗೌಡ, ಡಾ. ಆರ್.ನವೀನ್ ಕುಮಾರ್, ಡಾ. ಜೆ.ಕೆಮಧುಕೇಶ್, ಮತ್ತು ಡಾ.ಆರ್.ಎಸ್.ವರುಣ್ ಕುಮಾರ್ ಇವರುಗಳು “ಗಣಿತಶಾಸ್ತçದ ಶಾಖ ಮತ್ತು ಸಮೂಹ ವರ್ಗಾವಣೆ, ದ್ರವಚನ ಶಾಸ್ತ್ರ” ವಿಷಯಗಳಲ್ಲಿ ಸಂಶೋಧನೆಯಲ್ಲಿ ತೊಡಗಿದ್ದು, ಮಾರ್ಗದರ್ಶರೊಡನೆಯೇ ವಿಜ್ಞಾನಿಗಳ ಪಟ್ಟಿಗೆ ಸೇರಿರುವುದು ಸ್ಪೂರ್ತಿದಾಯಕವಾಗಿದೆ.

ಅಮೇರಿಕಾದ ಪ್ರತಿಷ್ಠಿತ ಸ್ಟ್ಯನ್ ಫೋರ್ಡ್ ವಿಶ್ವವಿಜ್ಞಾನಿಗಳ ಪಟ್ಟಿಯಲ್ಲಿರುವ 5 ವಿಜ್ಞಾನಿಗಳು ಪ್ರಸುತ್ತ ರಾಜ್ಯದ ಪ್ರತಿಷ್ಠಿತ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

List of Research Scientists ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿoಗ್ ಅಂಡ್ ಟೆಕ್ನಾಲಜಿಯಲ್ಲಿ ಡಾ. ಆರ್.ಜೆ.ಪುನೀತ್ ಗೌಡ, ಬೆಂಗಳೂರಿನ ಅಮೃತ ವಿಶ್ವ ವಿದ್ಯಾಪೀಠಂನ ಗಣಿತಶಾಸ್ತ್ರ ವಿಭಾಗದಲ್ಲಿ ಡಾ. ಆರ್.ನವೀನ್ ಕುಮಾರ್, ಡಾ.ಜೆ.ಕೆ.ಮಧುಕೇಶ್ ಮತ್ತು ಡಾ.ಆರ್.ಎಸ್. ವರುಣ್ ಕುಮಾರ್ ಇವರುಗಳು ಸಹಾಯಕ ಪ್ರಾಧ್ಯಾಪಕರುಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ಹಿಂದೆಯೂ ಕೂಡ 2020 ಮತ್ತು 2021 ನೇ ಸಾಲಿನಲ್ಲಿ ಬಿಡುಗಡೆಯಾ ಪಟ್ಟಿಯಲ್ಲಿ ಪ್ರೊ. ಬಿ.ಸಿ.ಪ್ರಸನ್ನ ಕುಮಾರ, ಡಾ.ಆರ್.ಜೆ. ಪುನೀತ್ ಗೌಡ ಹಾಗೂ ಡಾ. ಆರ್.ನವೀನ್ ಕುಮಾರ್ ರವರುಗಳು ಸ್ಥಾನ ಪಡೆದಿದ್ದರು.

ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಡಾ.ಬಿ.ಸಿ.ಪ್ರಸನ್ನಕುಮಾರ, ಡಾ.ಆರ್.ಜೆ.ಪುನೀತ್ ಗೌಡ, ಡಾ. ಆರ್. ನವೀನ್ ಕುಮಾರ್, ಡಾ.ಜೆ.ಕೆ.ಮಧುಕೇಶ್ ಮತ್ತು ಡಾ.ಆರ್.ಎಸ್. ವರುಣ್ ಕುಮಾರ್ ಇವರುಗಳಿಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ ಬಿ.ಡಿ. ಕುಂಬಾರ, ಬಿಐಟಿಇ ಪ್ರಾಂಶುಪಾಲ ಡಾ.ಎಚ್.ಬಿ. ಅರವಿಂದ, ದಾವಣಗೆರೆ ಬಿಐಇಟಿ ನಿರ್ದೇಶಕ ಪ್ರೊ.ವೈ.ವೃಷಭೇಂದ್ರಪ್ಪ, ಕುಲಪತಿ ಶ್ರೀ ಮಾತಾ ಅಮೃತಾನಂದಮಯಿ ದೇವಿ, ಸಂಶೋಧನಾ ಡೀನ್ ಕೆ.ವಿ.ನಾಗರಾಜ್ ಹಾಗೂ ಅಮೃತ ವಿಶ್ವವಿದ್ಯಾಪೀಠಂ ಮತ್ತು ಆಡಳಿತ ವರ್ಗ ಅಭಿನಂದಿಸಿದ್ದಾರೆ.

Power Cut in Shivamogga ಅಕ್ಟೋಬರ್ 7 ರಂದು ಶಿವಮೊಗ್ಗ ಪಿಯರ್ ಲೈಟ್ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

Power Cut in Shivamogga ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-೫ ಘಟಕ-6ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11 ಕೆ.ವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಈ ಕೆಳಕಂಡ ಪ್ರದೇಶಗಳಲ್ಲಿ ಅ.7 ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Power Cut in Shivamogga ಪೀಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆ.ಹೆಚ್.ಬಿ ಕಾಲೋನಿ, ಮೇಲಿನ ತುಂಗಾನಗರ ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್.ಟಿ ರಸ್ತೆ, ಬಿ.ಹೆಚ್ ರಸ್ತೆ, ಓಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ, ಜೆ.ಸಿ ನಗರ, ಬುದ್ಧ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿಕಾಲೋನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರೂ ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಗಾಂಧಿ ಬಜಾರ್, ಕುಂಬಾರ್ ಗುಂಡಿ, ಬಿ.ಬಿ ರಸ್ತೆ, ಕೆ.ಆರ್ ಪುರಂ, ಸೀಗೆಹಟ್ಟಿ, ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ, ಲಾಲ್ ಬಂದರ್ ಕೇರಿ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 14ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಇಲಿಯಾಜ್ ನಗರ ಮಂಡಕ್ಕಿ ಭಟ್ಟಿ, ಟಿಪ್ಪು ನಗರ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ ಹಾಗೂ ಸುತ್ತಮುತ್ತಲಿನ ಪ್ರದೇಸಗಳು. ಎಫ್-5 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-6 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದಾ ಕಾಲೋನಿ ಮತ್ತು ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Mysore Dasara 2023  ಮೈಸೂರು ದಸರಾದಲ್ಲಿ ಪುಸ್ತಕ ಮಳಿಗೆ ತೆರೆಯಲು ಅರ್ಜಿ ಆಹ್ವಾನ

0

Mysore Dasara 2023  ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2023 ನ್ನು ದಿನಾಂಕ: 15.10.2023 ರಿಂದ 23.10.2023 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2023”ನ್ನು ಓವಲ್ ಗ್ರೌಂಡ್, ಹಳೆಯ ಡಿ.ಸಿ. ಆಫೀಸ್ ಪಕ್ಕ, ಮೈಸೂರು ಇಲ್ಲಿ ಏರ್ಪಡಿಸಲಾಗುತ್ತದೆ.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1,000-00ಗಳ ಭದ್ರತಾ ಠೇವಣಿಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕoತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:12.10.2023 ರಂದು ಸಂಜೆ 5 ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ರ ಮೂಲಕ ಸಲ್ಲಿಸಲು ಕೋರಿದೆ.

Mysore Dasara 2023  ನಿರ್ಮಿಸಲಾಗುವ 60 ಮಳಿಗೆಗಳನ್ನುಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ :ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ದೂ:080-22484516 / 22107704 ಅನ್ನು ಸಂಪರ್ಕಿಸಬಹುದೆಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ ಬಿ ಕಿರಣ್ ಸಿಂಗ್ ತಿಳಿಸಿದ್ದಾರೆ.

Health Information Program for Women ಶೇಡ್ಗಾರ್ ನಲ್ಲಿ ಮಹಿಳೆಯರಿಗಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮ

0

Health Information Program for Women ಶೇಡ್ಗಾರ್ ಕ್ಷೇತ್ರ ಗ್ರಾಮ ಪಂಚಾಯಿತಿ ಕಾರ್ಯಾಲಯ, ಕರ್ನಾಟಕ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಇದರ ಸಹಯೋಗದಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಮುಟ್ಟು ಗುಟ್ಟಲ್ಲಾ ಅಭಿಯಾನ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಇದೇ ತಿಂಗಳ ಅಂದರೆ ಅಕ್ಟೋಬರ್ 10, ರಂದು ಶೇಡ್ಗಾರ್ ಗ್ರಾಮ ಪಂಚಾಯಿತಿ ಆವರಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವು ಬೆಳಗ್ಗೆ 10.30 ರಂದು ಆರಂಭಗೊಳ್ಳಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಅವರು ಆಗಮಿಸಲಿದ್ದಾರೆ.

ಜಿಲ್ಲಾ ಪಂಚಾಯತ್ ಶಿವಮೊಗ್ಗ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳಾದ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಉಪಸ್ಥಿತರಿರಲ್ಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೇಡ್ಗಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಯು. ಎಂ. ಚಂದ್ರಶೇಖರ್ ವಹಿಸಲಿದ್ದಾರೆ.

ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಿಹಿ ಮೂತ್ರ ರೋಗ ತಪಾಸಣೆ, ರಕ್ತ ಒತ್ತಡ ತಪಾಸಣೆ, ಟಿಬಿ ಮೌಕಿಕ ತಪಾಸಣೆ, ಸ್ತ್ರೀರೋಗ ತಪಾಸಣೆ, ಜನರ ಮೆಡಿಸನ್, ಹಾಗೂ ಅಪೌಷ್ಟಿಕತೆ ಈ ವಿಷಯಗಳ ಕುರಿತು ತಪಾಸನೆ ನಡೆಯಲಿದೆ.

Health Information Program for Women ಸಾರ್ವಜನಿಕರು ಹಾಗೂ ಮಹಿಳೆಯರು ಈ ಅಭಿಯಾನ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು.

Ragigudda Incident ಶಿವಮೊಗ್ಗ ರಾಗಿ ಗುಡ್ಡದಲ್ಲಿ ನಿಜವಾಗಿ ನಡೆದದ್ದೇನು?

0

Ragigudda Incident ಈದ್ ಮಿಲಾದ್ ಸಂದರ್ಭದಲ್ಲಿ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಿಜವಾಗಿಯೂ ನಡೆದಿದ್ದೇನು?

ವಸ್ತುಸ್ಥಿತಿ ತಿಳಿಯುವ ಸಲುವಾಗಿ ಇವತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಅಶ್ವಥ್ ನಾರಾಯಣ್, ಮಾಜಿ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ, ಶಾಸಕರಾದ ಶ್ರೀ ಚನ್ನಬಸಪ್ಪ ಮುಂತಾದವರೊಂದಿಗೆ ನಾನು ರಾಗಿಗುಡ್ಡಕ್ಕೆ ಹೋಗಿದ್ದೆ. ಅಲ್ಲಿ ದಾಳಿಗೀಡಾದ ಕುಟುಂಬಗಳು ತಮ್ಮ ಆತಂಕ-ಸಂಕಷ್ಟ ತೋಡಿಕೊಂಡರು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದ್ದಾರೆ.

ಅದಕ್ಕೂ ಮುನ್ನ ಮೆಗ್ಗಾನ್ ಆಸ್ಪತ್ರೆಗೂ ಭೇಟಿಕೊಟ್ಟು ಅಲ್ಲಿ ಗಾಯಗೊಂಡು ನೋವಿನಲ್ಲಿ ಮಲಗಿದ್ದವರನ್ನು ಮಾತಾಡಿಸಿಕೊಂಡು ಬಂದೆವು. ಅಲ್ಲಿಯೂ ದುಃಖ ಆತಂಕ ಮಡುಗಟ್ಟಿತ್ತು ಎಂದು ತಿಳಿಸಿದ್ದಾರೆ.

Ragigudda Incident ಒಟ್ಟಾರೆ, ಮೊನ್ನೆಯ ಗಲಭೆ ಜನರ ಮನಸ್ಸಿನಲ್ಲಿ ಭಯ ಹುಟ್ಟುವ ಹಾಗೆ ಮಾಡಿರುವುದೂ ಸುಳ್ಳಲ್ಲ, ಇದೊಂದು ಟಾರ್ಗೆಟೆಡ್ ಅಟ್ಯಾಕ್ ಅನ್ನುವುದೂ ಸುಳ್ಳಲ್ಲ ಅನ್ನಿಸಿತು. ವಸ್ತುಸ್ಥಿತಿ ಹೀಗಿರುವಾಗ ಸರ್ಕಾರ ಬೇರೆಯದೇ ರೀತಿಯಲ್ಲಿ ಪ್ರೇರೇಪಿಸುವ, ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ವಿನಾಕಾರಣ ಹಿಂದೂ ಹುಡುಗರ ಮೇಲೆ ಕೇಸುಗಳನ್ನು ಹಾಕುತ್ತಿದೆ. ಇದು ಖಂಡನೀಯ ಎಂದು ಸಂಸದ ಬಿವೈ ರಾಘವೇಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

District Organization of Bharat Scouts and Guides ಸ್ವಧರ್ಮ ಗೌರವಿಸಿದಂತೆ ಇತರ ಧರ್ಮಗಳನ್ನೂ ಗೌರವಿಸುವಂತೆ ಸ್ಕೌಟ್ ನಿಂದ ಬೋಧನೆ

0

District Organization of Bharat Scouts and Guides ಜಗತ್ತಿಗೆ ಶಾಂತಿ, ಸಹೋದರತೆ ಹಾಗೂ ಸೌಹಾರ್ದ ಭಾವನೆ ಮೂಡಿ ಸುವ ಜತೆಗೆ ಉತ್ತಮ ಪ್ರಜೆಗಳ ನಿರ್ಮಾಣ ಮಾಡುವ ಮಹತ್ವದ ಕಾರ್ಯವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮಾಡುತ್ತಿದೆ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.
ನಗರದ ಸ್ಕೌಟ್ಸ್ ಭವನದಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ಕಾರ್ಯಾಗಾರಕ್ಕೆ ಗುರುವಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗುವ ಜತೆಗೆ ಆದರ್ಶ ವ್ಯಕ್ತಿಗಳಾಗಿ ಬದುಕಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ನ ಶಿಕ್ಷಕರು ಸೇವಾ ಮನೋಭಾವದಿಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.
ಮಕ್ಕಳಿಗೆ ವಿದ್ಯೆ ಜೊತೆಗೆ ಬೌದ್ಧಿಕ ಜ್ಞಾನ ಅಗತ್ಯ. ಶಿಸ್ತು ಜೀವನ ಮೌಲ್ಯವನ್ನು ಸಮಂಜಸವಾಗಿ ತಿಳಿಸಿದರೆ ಮಗು ಭವಿಷ್ಯದಲ್ಲಿ ಉತ್ತಮ ನಾಗರೀಕನಾಗುತ್ತಾನೆ. ಆ ನಿಟ್ಟಿನಲ್ಲಿ ಸ್ಥಾಪಿತವಾದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಪ್ರಸ್ತುತ ಸಂಸ್ಕೃತಿ ಬಿಂಬಿಸುವ ಹಲವು ಕಾರ್ಯಕ್ರಮವನ್ನು ಏರ್ಪಡಿಸಿ ಶಿಕ್ಷಕರು ಹಾಗೂ ಶಾಲಾ ಮಕ್ಕಳಿಗೆ ತರಬೇತಿ ನೀಡ ಲಾಗುತ್ತಿದೆ ಎಂದು ಹೇಳಿದರು.
ರಾಷ್ಟ್ರಪ್ರೇಮ ಮೂಡಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ಜೊತೆಗೆ ಸಸಿಗಳನ್ನು ನೆಡುವುದು, ಪೋಷಿಸುವುದು, ಬೀಜದುಂಡೆಗಳನ್ನು ತಯಾರಿಸುವುದು ಮತ್ತು ಸ್ವಧರ್ಮವನ್ನು ಗೌರವಿ ಸಿದಂತೆ ಇತರೆ ಧರ್ಮವನ್ನು ಗೌರವಿಸುವ ಪದ್ಧತಿಯನ್ನು ತರಬೇತಿ ಕಾರ್ಯಾಗಾರದಲ್ಲಿ ಅಭ್ಯಾಸಿಸಲಾಗುತ್ತಿದೆ ಎಂದರು.

District Organization of Bharat Scouts and Guides ಇಂದಿನ ಯುವಪೀಳಿಗೆಯ ಮಕ್ಕಳು ಆನ್‌ಲೈನ್ ಆಟಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದು ಇವುಗಳಿಂದ ಹೊರತರುವ ನಿಟ್ಟಿನಲ್ಲಿ ಶಿಕ್ಷಕರು ಪ್ರಯತ್ನಿಸಬೇಕು. ಸ್ಕೌಟ್ಸ್ & ಗೈಡ್ಸ್ ತರಬೇತಿ ಪಾಲ್ಗೊಳ್ಳುವಿಕೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿದರೆ ಸ್ವಬಲದ ಮೇಲೆ ಪ್ರತಿಯೊಂದು ಕೆಲಸವನ್ನು ನಿಭಾಯಿಸಿಕೊಳ್ಳುವರು. ಇದರೊಂದಿಗೆ ಸಂಸ್ಥೆ ಬಡತನ ನಿರ್ಮೂಲನೆ ಹಾಗೂ ಗುಣಮಟ್ಟ ಶಿಕ್ಷಣ ಆಧಾರದಲ್ಲಿ ಮೇಲೆ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ ಎಂದರು.

ಮುಂದಿನ ದಿನಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಎಲ್‌ಕೆಜಿ, ಯುಕೆಜಿಗಳಲ್ಲೂ ಬರ‍್ಸ್ ಮತ್ತು ಬನ್ನಿಸ್ ತರಬೇತಿ ಪ್ರಾರಂಭಿಸುವ ಮೂಲಕ ಬಾಲ್ಯದಿಂದಲೇ ಜೀವನದ ಕ್ರಮ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಲಾಗುವುದು. ಆ ನಿಟ್ಟಿನಲ್ಲಿ ಸರ್ಕಾರವು ಗ್ರಾಮಮಟ್ಟದಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲು ಜಿ.ಪಂ., ತಾ.ಪಂ. ಹಾಗೂ ಗ್ರಾ.ಪಂ.ಗಳು ಮುತುವರ್ಜಿ ವಹಿಸಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜೆ.ರಂಗನಾಥ ಸ್ವಾಮಿ ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಸ್ಕೌಟ್ಸ್ ಮೌಲ್ಯ ಮೂಡಿಸಲು ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಆ ನಿಟ್ಟಿ ನಲ್ಲಿ ಶಾಲೆಯ ಮುಖ್ಯಸ್ಥರು ಆಸಕ್ತಿ ಇರುವ ಶಿಕ್ಷಕರಿಗೆ ಆಯ್ಕೆಗೊಳಿಸಿ ತರಬೇತಿ ಕಾರ್ಯಾಗಾರಕ್ಕೆ ಕಳಿಸಬೇಕು. ಇದರ ಪ್ರಯೋಜನಪಡೆದುಕೊಂಡು ಮಕ್ಕಳನ್ನು ಉತ್ತಮ ಪ್ರಜೆಯನ್ನಾಗಿ ರೂಪಿಸಲು ಶಿಕ್ಷಕರು ಪಣತೊಡಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಗೋಪಾಲಕೃಷ್ಣ ಮಾತನಾಡಿ ದೇಶದ ಉತ್ತಮ ಪ್ರಜೆಯನ್ನು ರೂಪಿಸುವ ಶಕ್ತಿ ಶಿಕ್ಷಕರಿಗಿದೆ. ಪಠ್ಯದ ಜೊತೆಗೆ ಸಮಾಜದಲ್ಲಿ ಬದುಕಲು ಹಲವಾರು ಸವಾಲುಗಳು ಮುಂದಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಬಾಲ್ಯದಿಂದ ತಯಾರಿಸಬೇಕಿದೆ. ಈ ವಿಚಾರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಉಪಾಧ್ಯಕ್ಷ ಎ.ಎನ್.ಮಹೇಶ್, ಸಂಘಟನಾ ಆಯುಕ್ತ ಪ್ರಭಾಕರ್‌ಭಟ್, ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್.ಷಡಕ್ಷರಿ, ಗೈಡ್ಸ್ ಆಯುಕ್ತೆ ಶ್ರೀಮತಿ ಡಿ.ಎಸ್.ಮಮತ, ತರಬೇತಿ ಆಯುಕ್ತೆ ಸಂಧ್ಯಾರಾಣ , ಜಂಟಿ ಸಹ ಕಾರ್ಯದರ್ಶಿ ನೀಲಕಂಠಪ್ಪ, ಸ್ಥಾನಿಕ ಆಯುಕ್ತರಾದ ಭಾರತಿ, ಸಿದ್ದೇಗೌಡ, ಸಂಘಟನಾ ಆಯುಕ್ತ ಕಿರಣ್‌ಕುಮಾರ್, ಕಡೂರು ಅಧ್ಯಕ್ಷ ಶರತ್‌ಕೃಷ್ಣಮೂರ್ತಿ, ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ರಾಜ್ ಅರಸ್, ಸಂಘಟಕ ನಿಹಾಲ್ ಮತ್ತಿತರರು ಹಾಜರಿದ್ದರು.