Saturday, April 11, 2026
Saturday, April 11, 2026
Home Blog Page 1257

Babu Jagjivanaram ಸಮಾಜದ ಸರ್ವಾಂಗೀಣ ಪ್ರಗತಿಯಲ್ಲಿ ಡಾ. ಜಗಜೀವನ್ ರಾಂ ಅವರದ್ದು ನಿಸ್ವಾರ್ಥ ಸೇವೆ

0

Babu Jagjivanaram ಸಾಮಾಜಿಕ ನ್ಯಾಯ, ಸಮ ಸಮಾಜ ನಿರ್ಮಾಣ ಮತ್ತು ಸಮಾಜದ ಸರ್ವಾಂಗೀಣ ಅಭಿವೃದ್ದಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದವರಲ್ಲಿ ಡಾ.ಜಗಜೀವನರಾಮ್‍ರವರು ಒಬ್ಬರಾಗಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಷಯ ಉಪನ್ಯಾಸಕರಾದ ರಾಜು ಹೇಳಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನರಾಮ್ ರವರ 116ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಪಾಲ್ಗೊಂಡು ಅವರು ಮಾತನಾಡಿದರು.

Babu Jagjivanaram ಭಾರತ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ ಡಾ.ಜಗಜೀವನರಾಮ್‍ರವರ ಪಾತ್ರ ಪ್ರಮುಖವಾಗಿದ್ದು ಇವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಗಾಂಧೀಜಿಯವರೊಂದಿಗೆ ಸಕ್ರಿಯವಾಗಿ ಪಾಲ್ಗೊಂಡಿದ್ದರು ಎಂದರು ಸ್ಮರಿಸಿದರು.

1908 ರ ಏಪ್ರಿಲ್ 1 ರಂದು ಬಿಹಾರದ ಭೋಜಪುರ ಜಿಲ್ಲೆಯ ಚಾಂದ್ವದಲ್ಲಿ ಜನಿಸಿದರು. ಸಮಾಜದಲ್ಲಿನ ಮೇಲು ಕೀಳು ಭಾವನೆಯನ್ನು ಹೋಗಲಾಡಿಸಿ ಸಮಾನತೆಯನ್ನು ತರಲು ಹೋರಾಡಿದರು. ಅಸ್ಪೃಶ್ಯತೆ ಸಾಮಾಜಿಕ ಅಂತರವನ್ನು ಹೋಗಲಾಡಿಸಲು ಶ್ರಮಿಸಿದ ಇವರು ಸಂವಿಧಾನ ರಚನೆಯಲ್ಲಿ ಕೂಡ ಮುಖ್ಯ ಪಾತ್ರ ವಹಿಸಿದ್ದಾರೆ.

ಕಾರ್ಮಿಕ ಸಚಿವರಾಗಿ, ರಕ್ಷಣಾ ಮಂತ್ರಿ, ಉಪ ಪ್ರಧಾನಿಯಾಗಿ ಹಲವಾರು ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಇವರು 1986 ಜುಲೈ 6 ರಂದು ದೈವಾಧೀನರಾಗುತ್ತಾರೆಂದು ತಿಳಿಸಿದ ಅವರು ಸ್ವಾತಂತ್ರ್ಯ ಹಾಗೂ ಸಮ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದ ಇಂತಹ ಮಹಾನ್ ಪುರಷರನ್ನು ನಾವು ಕೇವಲ ಅವರ ಜಯಂತಿ ಮತ್ತು ರಾಷ್ಟ್ರೀಯ ಹಬ್ಬಗಳಲ್ಲಿ ಸ್ಮರಿಸದೆ, ಎಂದಿಗೂ ನೆನಪಿಸಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಮಾತನಾಡಿ, ಪರಿಶ್ರಮ ಮತ್ತು ಸಾಮಾಜಿಕ ಕಳಕಳಿಯಿಂದ ನಾವು ಯಾವ ದೊಡ್ಡ ಮಟ್ಟಕ್ಕಾದರೂ ಏರಬಹುದೆಂಬುದಕ್ಕೆ ಡಾ.ಬಾಬು ಜಗಜೀನರಾಮ್‍ರವರೇ ಉದಾಹರಣೆಯಾಗಿದ್ದು ಇವರು ಸಮಾಜ ಸುಧಾರಣೆಯ ಓರ್ವ ಆದರ್ಶ ಪುರುಷ ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿ.ಪಂ ಸಿಇಓ ಸ್ನೇಹಲ್ ಲೋಖಂಡೆ, ಪ್ರೊಬೇಷನರಿ ಐಎಎಸ್ ಅಧಿಕಾರಿ ದಲ್ಜೀತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್, ದಲಿತ ಸಂಘರ್ಷ ಸಮಿತಿಯ ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರುಗಳು, ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Canara Bank Rural Self Employment Training Institute ಹೊಳಲೂರಿನಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಉಚಿತ ತರಬೇತಿ

0

Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು ( ಶಿವಮೊಗ್ಗ ತಾಲ್ಲೂಕು)ಇಲ್ಲಿ “ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ” 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 08ನೇ ತರಗತಿ ಉತ್ತೀರ್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.

Canara Bank Rural Self Employment Training Institute ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು 17/04/2023 ರಿಂದ ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595, 8660062683, 9449371579, 9481955721
ಅಥವಾ email -cbrsetiholalur@gmail.com
ಸಂಪರ್ಕಿಸಿ.

JDS Karnataka ಕಡೂರಿಗೆ ಏಪ್ರಿಲ್ 7ರಂದು ಜೆಡಿಎಸ್ ಪಂಚರತ್ನ ರಥಯಾತ್ರೆ ಆಗಮನ

0

JDS Karnataka ಕಡೂರಿಗೆ ಪಂಚರತ್ನ ಯೋಜನೆಯ ರಥಯಾತ್ರೆಯು ಏ.07ರಂದು ಆಗಮಿಸಲಿದ್ದು ಅಂದು ಕಡೂರಿನ ಎಪಿಎಂಸಿ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ಬಹಿರಂಗ ಸಭೆಯನ್ನು ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್‌ಅಜಿತ್‌ಕುಮಾರ್ ಹೇಳಿದ್ದಾರೆ.

JDS Karnataka ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಪಂಚರತ್ನ ಯೋಜನೆಯ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಸೇರಿದಂತೆ ವಿವಿಧ ಗಣ್ಯರು ಕಡೂರು ಪ್ರಮುಖ ವೃತ್ತದಿಂದ ಮೆರವಣಿಗೆ ನಡೆಸಿ ನಂತರ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ.

Innerwheel Shivamogga ಭಾರತೀಯ ಸೈನಿಕರನ್ನ ಗೌರವಿಸುವುದು ನಮ್ಮ ಕರ್ತವ್ಯ- ಮಧುರಾ ಮಹೇಶ್

0

Innerwheel Shivamogga ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದವರನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಮಧುರಾ ಮಹೇಶ್ ಹೇಳಿದರು.

ಶಿವಮೊಗ್ಗದ ಕೃಷಿನಗರದಲ್ಲಿ ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದ ಜನರು ನೆಮ್ಮದಿಯ ಜೀವನ ನಡೆಸಲು ದೇಶದ ಸೇನೆಯು ಮುಖ್ಯ ಕಾರಣ. ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿ ಹಗಲಿರುಳು ದೇಶವನ್ನು ಕಾಯುವ ಸೈನಿಕರ ಕಾರ್ಯ ಶ್ರೇಷ್ಠ ಎಂದು ತಿಳಿಸಿದರು.

ಇಪ್ಪತ್ತು ವರ್ಷಗಳಿಂದ ಭಾರತೀಯ ವಾಯು ಸೇನೆಯಲ್ಲಿ ಅಸ್ಸಾಂ, ದೆಹಲಿ, ಬೆಂಗಳೂರು, ಆಗ್ರಾ ಸೇರಿದಂತೆ ವಿವಿಧೆಡೆಗಳಲ್ಲಿ ಸೇವೆ ಸಲ್ಲಿಸಿದ ಸೇನಾ ಅಧಿಕಾರಿ ಮಹಾಬಲೇಶ್ವರ ಹೆಗಡೆ ಅವರಿಗೆ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಮಹಾಬಲೇಶ್ವರ ಹೆಗಡೆ, ಇಪ್ಪತ್ತು ವರ್ಷಗಳ ಕಾಲ ಭಾರತೀಯ ವಾಯುಸೇನೆಯಲ್ಲಿ ಸೇವೆ ಮಾಡುವ ಅವಕಾಶ ಸಿಕ್ಕಿತು. ಜ್ಯೂನಿಯರ್ ವಾರೆಂಟ್ ಆಫಿಸರ್ ಆಗಿ ಕೆಲಸ ಮಾಡಿದೆ. ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುವ ಪುಣ್ಯ ನನ್ನದಾಗಿತ್ತು ಎಂದು ತಿಳಿಸಿದರು.

Innerwheel Shivamogga ಕೃಷಿನಗರದ ಎಲ್‌ಬಿಎಸ್ ನಗರದಲ್ಲಿ ಉಚಿತವಾಗಿ ಯೋಗ ಶಿಕ್ಷಣ ನೀಡುತ್ತಿರುವ ಚಂದ್ರಶೇಖರ್ ಹಾಗೂ ನಾಗರತ್ನಮ್ಮ ಅವರಿಗೆ ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ಯೋಗ ಕುರಿತು ತಿಳವಳಿಕೆ ಮೂಡಿಸಲಾಯತು.

ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ್‌ಕುಮಾರ್, ಸಹ ಕಾರ್ಯದರ್ಶಿ ಆಶಾ ಶ್ರೀಕಾಂತ್, ನಿರ್ಮಲಾ ಮಹೇಂದ್ರ, ವೀಣಾ ಸುರೇಶ್, ರಾಜೇಶ್ವರಿ ಪ್ರತಾಪ್, ವೀಣಾ ಹರ್ಷ, ವಾಣಿ ಪ್ರವೀಣ್, ಜಯಂತಿ ವಾಲಿ, ವಿಜಯ ರಾಯ್ಕರ್, ನಮಿತಾ ಸೂರ್ಯನಾರಾಯಣ, ವಿಜಯ ಶಶಿಧರ್, ಸುಮಾ ರವಿ, ಜ್ಯೋತಿ ಸುಬ್ಬೇಗೌಡ, ವೇದಾ ನಾಗರಾಜ, ಶಿಲ್ಪಾ ಗೋಪಿನಾಥ್, ಲತಾ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Hanuman Jayanti ಚಿಕ್ಕಮಗಳೂರಿನಲ್ಲಿ ಹನುಮ ಜಯಂತಿ

0


Hanuman Jayanti ಚಿಕ್ಕಮಗಳೂರಿನ ವಿಜಯಪುರ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಏ.06 ರಂದು ಹನುಮ ಜಯಂತಿ ಕಾರ್ಯಕ್ರಮವನ್ನು ವಿಶೇಷ ಪೂಜೆಯೊಂದಿಗೆ ಅತ್ಯಂತ ಶ್ರದ್ದಾಭಕ್ತಿಯಿಂದ ಆಯೋಜಿಸಲಾಗಿದೆ.


Hanuman Jayanti ಅಂದು ಬೆಳಿಗ್ಗೆ 05 ಗಂಟೆಗೆ ಫಲಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಬೆಳಿಗ್ಗೆ 10:30ಕ್ಕೆ ಸಾಮೂಹಿಕ ಸತ್ಯ ನಾರಾಯಣಪೂಜೆ, 01 ಗಂಟೆಗೆ ಮಹಾಮಂಗಳಾರತಿ ಪ್ರಸಾದ ವಿನಿಯೋಗ, ಸಂಜೆ 06ಕ್ಕೆ ವಿಶೇಷಪೂಜೆ ಹಾಗೂ ರಾತ್ರಿ 8:30ಕ್ಕೆ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ ಎಂದು ದೇವಾಲಯ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ವಿ.ರಾಮಚಂದ್ರ ತಿಳಿಸಿದ್ದಾರೆ.

Adi Chunchanagiri Mutt ಆದಿ ಚುಂಚನಗಿರಿ ಮಠದಲ್ಲಿ ಕಾಲಭೈರವೇಶ್ವರ ದೇವಾಲಯ ವಾರ್ಷಿಕೋತ್ಸವ

0

Adi Chunchanagiri Mutt ಆದಿ ಚುಂಚನಗಿರಿ ಮಠದಲ್ಲಿ ಕಾಲಭೈರವೇಶ್ವರ ದೇವಾಲಯ ವಾರ್ಷಿಕೋತ್ಸವ ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಮಠದ ಆದಿಚುಂಚನಗಿರಿ ಸಮುದಾಯಭವನ ಹಾಗೂ ಕಾಲಬೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಸಮಾರಂಭದ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಡಾ. ಬಾಲ ಗಂಗಾಧರನಾಥ ಮಹಾಸ್ವಾಮೀಜಿಗಳವರ ಕೃಪಾಶೀರ್ವಾದಗಳೊಂದಿಗೆ,
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

Adi Chunchanagiri Mutt ಆದಿ ಚುಂಚನಗಿರಿ ಮಠದಲ್ಲಿ ಕಾಲಭೈರವೇಶ್ವರ ದೇವಾಲಯ ವಾರ್ಷಿಕೋತ್ಸವ ಇಲ್ಲಿನ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ, ಆದಿಚುಂಚನಗಿರಿ ಸಮುದಾಯ ಭವನದ ರಜತ ಮಹೋತ್ಸವ, ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ, ಬಿಜಿಎಸ್ ದತ್ತಿನಿದಿ ಹಾಗೂ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮವು ಏಪ್ರಿಲ್ 06 ಮತ್ತು 07 ರಂದು ಎರಡು ದಿನಗಳ ಕಾಲ ನಗರದ ಶರಾವತಿ ನಗರದ ಬಡಾವಣೆಯಲ್ಲಿರುವ ಶ್ರೀ ಕಾಲಭೈರವೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ನಡೆಯಲಿದೆ.

ಏಪ್ರಿಲ್ 06 ರಂದು ಬೆಳಿಗ್ಗೆ 5:30 ರಿಂದ ಶ್ರೀ ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಸಮಾರಂಭದ ನಿಮಿತ್ತ ಸ್ವಾಮಿಗೆ ಹೋಮ ಹವನಾದಿಗಳೊಂದಿಗೆ ಕುಂಭಾಭಿಷೇಕ, ಮಹಾಮಂಗಳಾರತಿ ವಿಶೇಷ ಪೂಜಾ ಕೈಂಕರ್ಯಗಳೊAದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

ನಂತರ ಬೆಳಿಗ್ಗೆ 08 ಗಂಟೆಗೆ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಸಹ ಇದೇ ಸ್ಥಳದಲ್ಲಿ ನಡೆಯಲಿದೆ.
ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಬೆಳಿಗ್ಗೆ 10:30ಕ್ಕೆ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಯುವ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಅಂದು ಸಂಜೆ 6:30 ರಿಂದ ಸಾಹಿತ್ಯ ಹುಣ್ಣಿಮೆ ಹಾಗೂ ಬಿಜಿಎಸ್ ದತ್ತಿ ನಿಧಿ ಹಾಗೂ ಸಾಹಿತ್ಯ ಹುಣ್ಣಿಮೆ ಮತ್ತು ಇತರೆ ಕಾರ್ಯಕ್ರಮಗಳು ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯಲಿದೆ.

ಏಪ್ರಿಲ್ 07 ರಂದು ಬೆಳಿಗ್ಗೆ 8:00 ಗಂಟೆಗೆ ಚಿಣ್ಣರ ಬೇಸಿಗೆ ಶಿಬಿರವನ್ನು ಪೂಜ್ಯರು ಉದ್ಘಾಟಿಸಲಿದ್ದು ಶ್ರೀ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಾಗೂ ಶರಾವತಿ ನಗರದ ಸಂಯುಕ್ತ ಪ್ರೌಢಶಾಲೆಯಲ್ಲಿ ಶಿಬಿರವನ್ನ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪರಮಪೂಜ್ಯ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸಾನ ಶಾಖಾ ಮಠದ ಪೂಜ್ಯರು ಈ ಎಲ್ಲಾ ಕಾರ್ಯಕ್ರಮದಲ್ಲಿ ನಗರದ ನಾಗರಿಕರು ಹಾಗೂ ಪೋಷಕ ಬಂಧುಗಳು ಹಾಗೂ ಶ್ರೀ ಮಠದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಎರಡು ದಿನಗಳ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

Congress Assembly Aspirants ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಗೋಪಾಲ್ ಗೆ ಟಿಕೆಟ್ ನೀಡಲು ಒತ್ತಾಯ

0

Congress Assembly Aspirants ಮೂಡಿಗೆರೆ ಕಾಂಗ್ರೆಸ್ ವಿಧಾನಸಭಾ ಆಕಾಂಕ್ಷಿ ಹಾಗೂ ಸಾಮಾಜಿಕ ಹೋರಾಟಗಾರ ಬಿ.ಗೋಪಾಲ್ ಅವರ 69ನೇ ಹುಟ್ಟುಹಬ್ಬದ ಅಂಗವಾಗಿ ಚಿಕ್ಕಮಗಳೂರಿನ ಹೆರಿಗೆ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಅಭಿಮಾನಿಗಳು ಹಣ್ಣು ವಿತರಣೆ ಮಾಡುವ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಿದರು.

ಈ ವೇಳೆ ಮಾತನಾಡಿದ ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಎಸ್ಸಿಎಸ್ಟಿ ಘಟಕದ ಅಧ್ಯಕ್ಷ ರಾಕೇಶ್ ಸಾಮಾಜಿಕ ಚಿಂತನೆಗಳನ್ನು ಒಳಗೊಂಡು ಬಿ.ಗೋಪಾಲ್ ಅವರು ಉತ್ತಮ ಕಾರ್ಯನಿರ್ವಹಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಹಾಗೂ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗಳಿಗೆ ಹಣ್ಣು ವಿತರಿಸುವ ಮೂಲಕ ಹುಟ್ಟುಹಬ್ಬದ ಸಂಭ್ರಮ ವನ್ನು ನಡೆಸಲಾಯಿತು ಎಂದರು.

Congress Assembly Aspirants ಮೂಡಿಗೆರೆ ಕ್ಷೇತ್ರದಲ್ಲೂ ಜನಸಾಮಾನ್ಯರೊಂದಿಗೆ ಉತ್ತಮ ಒಡನಾಟ ಹೊಂದಿರುವ ಅವರು ಜನತೆಗೆ ಸ್ಪಂದಿಸುವ ಸಾಕಷ್ಟು ಕಾರ್ಯಗಳನ್ನು ಮಾಡಿದ್ದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೂಡಿಗೆರೆ ಯಿಂದ ಸ್ಪರ್ಧಿಸಲು ಅವಕಾಶ ದೊರೆಯಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮೂಡಿಗೆರೆ ಎಸ್ಸಿಎಸ್ಟಿ ಘಟಕದ ಉಪಾಧ್ಯಕ್ಷ ಕೆ.ಎಂ.ಸುಧೀರ್, ಅಭಿಮಾನಿಗಳಾದ ಲೋಕೇಶ್, ಚೇತನ್, ಭರತ್‌ಕುಮಾರ್, ಸುಜಯ್, ಕಿರಣ್ ಮತ್ತಿತರರು ಹಾಜರಿದ್ದರು.