Friday, April 10, 2026
Friday, April 10, 2026
Home Blog Page 1281

Welfare Schemes Of Karnataka ಮಾರ್ಚ್16 ರಂದು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ

0

welfare schemes of karnataka ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಡಳಿತಾರೂಢ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಆಶೋತ್ತರಗಳಿಗೆ ಪೂರಕವಾಗಿ ರೂಪಿಸಿ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಿರುವ ಜನಪರ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆದ ಫಲಾನುಭವಿಗಳೊಂದಿಗೆ ಸಮಾಲೋಚನೆ, ಸೌಲಭ್ಯ ಪಡೆಯುವವರು ಹಾಗೂ ಅರ್ಹರಿರುವವರಿಗೆ ಯೋಜನೆಗಳ ಮಾಹಿತಿ ಹಾಗೂ ಸಂವಾದ ನಡೆಸುವ ಸದುದ್ದೇಶದಿಂದ ಮಾರ್ಚ್ 16ರಂದು ಬೆಳಿಗ್ಗೆ 11ಗಂಟೆಗೆ ನಗರದ ಪ್ರೀಡಂಪಾರ್ಕ್ ಆವರಣದಲ್ಲಿ ಫಲಾನುಭವಿಗಳ ಸಮಾವೇಶವನ್ನು ಆಯೋಜಿಸಿದೆ.

welfare schemes of karnata ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಮೂರೂವರೆ ವರ್ಷಗಳ ಅವಧಿಯಲ್ಲಿ ಮತ್ತು ಕೇಂದ್ರ ಸರ್ಕಾರದ ಒಂಬತ್ತು ವರ್ಷಗಳ ಅವಧಿಯಲ್ಲಿ ಅನುಷ್ಠಾನಗೊಳಿಸಲಾದ ಸರ್ಕಾರದ ಯೋಜನೆಗಳ ಫಲಾನುಭವಿಗಳು ಮತ್ತು ಸಾರ್ವಜನಿಕರಿಗೆ ಯೋಜನೆಗಳ ಮಾಹಿತಿ ದೊರೆಯಲಿದೆ.

ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಸರಳವಾಗಿ ಮಾಹಿತಿ ದೊರಕಿಸುವ ಉದ್ದೇಶದಿಂದ ಪ್ರೀಡಂಪಾರ್ಕ್ನಲ್ಲಿ ಸುಮಾರು 50ಕ್ಕೂ ಹೆಚ್ಚಿನ ಸ್ಟಾಲ್‌ಗಳನ್ನು ಸೃಜಿಸಿ, ಅವುಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುಷ್ಠಾನದಲ್ಲಿರುವ ಯೋಜನೆಗಳ ಮಾಹಿತಿಯನ್ನು ಒದಗಿಸಲು ಉದ್ದೇಶಿಸಲಾಗಿದ್ದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಅದರ ಜವಾಬ್ದಾರಿ ನೀಡಲಾಗಿದೆ.

ಜಿಲ್ಲೆಯಲ್ಲಿ ಸುಮಾರು 25-80ಲಕ್ಷ ಫಲಾನುಭವಿಗಳು ವಿವಿಧ ಯೋಜನೆಗಳಡಿಯಲ್ಲಿ ಸೌಲಭ್ಯ ಹೊಂದಿದ್ದಾರೆ. ಜಿಲ್ಲೆಯ ವಿವಿಧ ತಾಲೂಕುಗಳಿಂದ ಸರ್ಕಾರದ ಹಲವು ಯೋಜನೆಗಳಲ್ಲಿ ಸೌಲಭ್ಯ ಪಡೆದ ಸುಮಾರು 25,000-30,000 ಫಲಾನುಭವಿಗಳು ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಅದಕ್ಕಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಅದರ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆರ್.ಸೆಲ್ವಮಣಿಯವರು ತಿಳಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಬಹುತೇಕ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಿಂದ ಈವರೆಗೆ ಸೌಲಭ್ಯ ಪಡೆದ ಹಾಗೂ ಪಡೆಯಲಿರುವ ಫಲಾನುಭವಿಗಳು ಮತ್ತು ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್.ಡಿ.ಪ್ರಕಾಶ್ ಅವರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ರೇಷ್ಮೇ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಕೆ.ಸಿ.ನಾರಾಯಣಗೌಡ ಅವರು ಉಪಸ್ಥಿತರಿರುವರು. ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿರುವರು. ಶಾಸಕ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಂಸದ ಬಿ.ವೈ.ರಾಘವೇಂದ್ರ, ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳ ಚುನಾಯಿತ ಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ನಿಗಮ-ಮಂಡಳಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

District Collectors village stay ಸಾಗರ ತಾಲ್ಲೂಕು ಸೈದೂರಿನಲ್ಲಿ ಮಾರ್ಚ18 ರಂದು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

0

District Collectors Village stay ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿಗಳು ಮಾರ್ಚ್ 18 ರಂದು ಸಾಗರ ತಾಲ್ಲೂಕಿನ ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವರು.

ಅಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಗ್ರಾಮ ವಾಸ್ತವ್ಯ ಮಾಡುವರು.

District Collectors Village stay  ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ, ಮಾ. 18 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಎಸ್.ಎಸ್. ಬಿರಾದರ್ ಅವರು ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Agricultural Fair ಮಾರ್ಚ್ 17 ರಿಂದ 20 ವರೆಗೆ ಶಿವಪ್ಪ ನಾಯಕ ಕೃಷಿ & ತೋಟಗಾರಿಕಾ ವಿವಿ ಕೃಷಿಮೇಳ-ಡಾ.ಆರ್.ಸಿ.ಜಗದೀಶ

0

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಮಾರ್ಚ್ 17 ರಿಂದ 20 ರವರೆಗೆ ನಾಲ್ಕು ದಿನಗಳ ಕೃಷಿ ಮತ್ತು ತೋಟಗಾರಿಕಾ ಮೇಳ-2023ರನ್ನು ‘ಸುಸ್ಥಿರ ಆದಾಯಕ್ಕಾಗಿ – ಸೆಕೆಂಡರಿ ಕೃಷಿ ತಾಂತ್ರಿಕತೆಗಳು ಮತ್ತು ಮೌಲ್ಯವರ್ಧನೆ’ ಎಂಬ ಧ್ಯೇಯದೊಂದಿಗೆ ನವುಲೆ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಆಚರಿಸಲು ಉದ್ದೇಶಿಸಿದೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ|| ಆರ್.ಸಿ.ಜಗದೀಶ್ ಅವರು ಹೇಳಿದರು.

Agricultural Fair  ತಮ್ಮ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಮಾರ್ಚ್ 17ರಂದು ತಾಂತ್ರಿಕ ಸಮಾವೇಶದಲ್ಲಿ ಅಡಿಕೆ ಬೇಸಾಯ ಪದ್ಧತಿಗಳು, ಅಡಿಕೆ ಬೆಳೆಯಲ್ಲಿ ಸಮಗ್ರ ಬೆಳೆ ಸಂರಕ್ಷಣೆ, ಬಹು ಬೆಳೆ ಪದ್ಧತಿ, ಮಾರುಕಟ್ಟೆ ಅವಕಾಶಗಳು ಮತ್ತು ಮೌಲ್ಯವರ್ಧನೆ ವಿಷಯಗಳ ಕುರಿತು ಹಾಗೂ ತೋಟಗಾರಿಕಾ ಇಲಾಖೆಯ ಯೋಜನೆಗಳ ವಿಷಯದ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದ ನಡೆಯಲಿದೆ ಎಂದರು.

Agricultural Fair  ಮಾರ್ಚ್ 18ರಂದು ನಡೆಯಲಿರುವ ಸಮಾವೇಶದಲ್ಲಿ ಗೋಡಂಬಿ ಬೆಳೆಯ ಸಂಸ್ಕರಣೆ ಹಾಗೂ ಮೌಲ್ಯವರ್ಧನೆ, ಸಾಂಬಾರು ಬೆಳೆಗಳಲ್ಲಿ ಮೌಲ್ಯವರ್ಧನೆ, ಹಲಸು, ಬಾಳೆ ಹಾಗೂ ಅಡಿಕೆಯಲ್ಲಿ ಕೊಯ್ಲೋತ್ತರ ತಂತ್ರಜ್ಞಾನ ಹಾಗೂ ಮೌಲ್ಯವರ್ಧನೆ, ಕೃಷಿ ನವೋದ್ಯಮ ಮತ್ತು ಸೆಕೆಂಡರಿ ಕೃಷಿ, ಜೇನು ಕೃಷಿ ಮತ್ತು ಮೌಲ್ಯವರ್ಧನೆ, ತೋಟಗಾರಿಕೆ ನರ್ಸರಿ ಮತ್ತು ಮೌಲ್ಯವರ್ಧನೆ, ಕೃಷಿ ಇಲಾಖೆಯ ಕಾರ್ಯಕ್ರಮಗಳ ಕಿರುಪರಿಚಯದ ವಿಷಯದ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದ ಏರ್ಪಡಿಸಲಾಗಿದೆ ಎಂದರು.
ಮಾರ್ಚ್ 19ರಂದು ಸಿರಿಧಾನ್ಯಗಳು ಆರೋಗ್ಯ ಮತ್ತು ಭವಿಷ್ಯದ ಬೆಳೆ, ಸಮಗ್ರ ಕೃಷಿ ಪದ್ಧತಿ, ಸುಸ್ಥಿರ ಆದಾಯಕ್ಕಾಗಿ ಸಮಗ್ರ ಕೃಷಿ ಪದ್ಧತಿಗಳು, ಸಿರಿಧಾನ್ಯಗಳ ಸಂರಕ್ಷಣೆ ಹಾಗೂ ಮೌಲ್ಯವರ್ಧನೆಯಲ್ಲಿ ರೈತ ಉತ್ಪಾದಕ ಸಂಸ್ಥೆಗಳ ಪಾತ್ರ ಮತ್ತು ಸಿರಿಧಾನ್ಯಗಳ ವೈವಿಧ್ಯತೆ ಮತ್ತು ಮಾರುಕಟ್ಟೆ ಅವಕಾಶಗಳು ವಿಷಯದ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದ ನಡೆಯಲಿದೆ ಎಂದರು.

ಕೃಷಿ ಮತ್ತು ತೋಟಗಾರಿಕಾ ಮೇಳದ ವಿಶೇಷತೆಗಳು : ತಂತ್ರಜ್ಞಾನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ಹೈ-ಟೆಕ್ ತೋಟಗಾರಿಕೆ-ಹೈಡ್ರೋಫೋನಿಕ್ ಕೃಷಿ, ಪುಷ್ಪ ಕೃಷಿ, ಜೇನು ಸಾಕಾಣ ಕೆ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ, ಕೃಷಿ-ತೋಟಗಾರಿಕೆ-ಅರಣ್ಯ ಸಮಗ್ರ ಪದ್ಧತಿಗಳು, ಸಾವಯವ ಕೃಷಿ, ಅಣಬೆ ಬೇಸಾಯ, ಪಶುಸಂಗೋಪನೆ ಮತ್ತು ಮೀನುಗಾರಿಕೆ ತಂತ್ರಜ್ಞಾನಗಳು, ಕೊಯ್ಲೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು, ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು, ಹವಾಮಾನ ಆಧಾರಿತ ಕೃಷಿ, ಕೃಷಿ ಪರಿಕರ ಮತ್ತು ಯಂತ್ರೋಪಕರಣಗಳ ಪ್ರದರ್ಶನ, ಶ್ರೇಷ್ಟ ಕೃಷಿಕರು ಮತ್ತು ಕೃಷಿ ಮಹಿಳೆಯರಿಗೆ ಪ್ರಶಸ್ತಿ ಪ್ರಧಾನ, ರೈತರ ಯಶೋಗಾಥೆ ಮತ್ತು ಕೃಷಿ ತಜ್ಞರೊಂದಿಗೆ ಸಂವಾದ, ರೈತರ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ ದೊರೆಯಲಿವೆ.

ಈ ಮೇಳದಲ್ಲಿ ವಿಶೇಷವಾಗಿ ವಿಶ್ವಸಂಸ್ಥೆಯು ಭಾರತ ಸರ್ಕಾರದ ಪ್ರಸ್ತಾವನೆಯನ್ನು ಒಪ್ಪಿಕೊಂಡು ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023 ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಸಿರಿಧಾನ್ಯಗಳ ಸುಸ್ಥಿರ ಉತ್ಪಾದನೆ ಮತ್ತು ಗುಣಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ಆಹಾರ ಭದ್ರತೆ ಮತ್ತು ಪೋಷಣೆಗೆ ಸಿರಿಧಾನ್ಯಗಳ ಕೊಡುಗೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದರು.

ರೈತರ ಆದಾಯ ದ್ವಿಗುಣ : ರೈತರ ಆದಾಯ ದ್ವಿಗುಣಗೊಳಿಸುವುದು ಭಾರತ ಸರ್ಕಾರದ ಕನಸಿನ ಯೋಜನೆಗಳ ಪೈಕಿ ಪ್ರಮುಖವಾದದ್ದಾಗಿದೆ. ಯೋಜನೆಗೆ ಸಂಬಂಧಿಸಿದ ರೂಪರೇಷೆಗಳು ಸುಲಭ ಆದರೆ ಅದನ್ನು ಸಾಧಿಸಲು ಇರುವ ಮಾರ್ಗ ಬಹಳ ಸವಾಲಿನದ್ದಾಗಿದೆ ಎಂದ ಅವರು, ಇದಕ್ಕಾಗಿ ಬೆಳೆ ಸುಧಾರಣೆ, ಜಾನುವಾರು ಉತ್ಪಾದಕತೆ, ಸಂಪನ್ಮೂಲ ಬಳಕೆಯಲ್ಲಿ ದಕ್ಷತೆ, ಉತ್ಪಾದನಾ ವೆಚ್ಚದಲ್ಲಿ ಉಳಿತಾಯ, ಬೆಳೆಯ ತೀವ್ರತೆಯನ್ನು ಹೆಚ್ಚಿಸುವುದು, ವಾಣಿಜ್ಯ ಬೆಳೆಗಳ ಕಡೆಗೆ ವೈವಿಧ್ಯಗೊಳಿಸುವುದು, ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸುವುದು ಮತ್ತು ರೈತರ ಬೆಳೆಗಳಿಗೆ ನೈಜ ಬೆಲೆಯನ್ನು ನೀಡುವತ್ತ ಗಮನ ಕೇಂದ್ರೀಕರಿಸುವ ಅಗತ್ಯವಿದೆ.

ರೈತರ ಆದಾಯ ದ್ವಿಗುಣಗೊಳಿಸುವುದರಲ್ಲಿ ಬಹುದೊಡ್ಡ ಸವಾಲು ಇರುವುದು ಕೊಯ್ಲು ನಂತರದ ಪ್ರಕ್ರಿಯೆ, ಆದ್ದರಿಂದ ಆಹಾರೋತ್ಪನ್ನಗಳ ಕೊಯ್ಲು ನಂತರದ ಪ್ರಕ್ರಿಯೆಗಳನ್ನು ಮತ್ತಷ್ಟು ಪರಿಣಾಮಕಾರಿಯನ್ನಾಗಿಸುವುದರತ್ತ ಹೆಚ್ಚಿನ ಗಮನ ಹರಿಸಬೇಕಿದ್ದು, ಕೊಯ್ಲು ನಂತರ-ಒಟ್ಟುಗೂಡಿಸುವಿಕೆ, ಸಂಸ್ಕರಣೆ, ಬ್ರ‍್ಯಾಂಡಿಂಗ್, ಮಾರ್ಕೆಟಿಂಗ್ ಮತ್ತು ರಫ್ತು ವಿಭಾಗಗಳೂ ಕೂಡ ರೈತರ ಆದಾಯವನ್ನು ದ್ವಿಗುಣಗೊಳಿಸುವುದಕ್ಕೆ ಪ್ರಮುಖ ಅಂಶವಾಗಿರಲಿವೆ ಎಂದವರು ತಿಳಿಸಿದರು.

ಈ ಕೃಷಿ ಮೇಳವನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದು, ಕೃಷಿ ಸಚಿವ ಬಿ.ಸಿ.ಪಾಟೀಲ್, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ಶಾಸಕ ಕೆ.ಬಿ.ಅಶೋಕನಾಯ್ಕ್ ಅಧ್ಯಕ್ಷತೆ ವಹಿಸುವರು.

ಇದೇ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವ್ಯಾಪ್ತಿಗೊಳಪಡುವ ಏಳು ಜಿಲ್ಲೆಗಳಿಂದ ಕೃಷಿ ಮತ್ತು ತೋಟಗಾರಿಕೆಯಲ್ಲಿ ಸಾಧನೆಗೈದ ರೈತರು ಮತ್ತು ರೈತ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು. ಅಲ್ಲದೇ ವಿವಿಧ ನವೀನ ತಾಂತ್ರಿಕತೆಗಳು ಮತ್ತು ವಿವಿಧ ಬೆಳೆಗಳ ಹೊಸ ತಳಿಗಳನ್ನು ಮತ್ತು ರೈತ ಸಮೂಹಕ್ಕೆ ಮಾಹಿತಿಗಾಗಿ ವಿವಿಧ ಬೆಳೆ ಹಾಗೂ ತಾಂತ್ರಿಕತೆಗಳನ್ನು ಹೊತ್ತ ತಾಂತ್ರಿಕ ಕೈಪಿಡಿ ಬಿಡುಗಡೆಗೊಳಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೃಷಿ ವಿವಿ.ಯ ವಿಸ್ತರಣಾ ನಿರ್ದೇಶಕ ಡಾ|| ಹೇಮ್ಲಾನಾಯ್ಕ್, ಮೃತ್ಯುಂಜಯ ಸಿ.ವಾಲಿ, ಡೀನ್ ಡಾ|| ದುಶ್ಯಂತಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

JCI Shimogga ಜೆಸಿಐ ಶಿವಮೊಗ್ಗ ಮೆಟ್ರೊ ವತಿಯಿಂದ ಬೈಕ್ ಜಾಥಾ

0

JCI Shimogga ಜೆಸಿಐ ಶಿವಮೊಗ್ಗ ಮೆಟ್ರೋ ವತಿಯಿಂದ ಮಹಿಳಾ ಸಪ್ತಾಹ ದ ಅಂಗವಾಗಿ ಮೊನ್ನೆ ಭಾನುವಾರ ಬೈಕ್ ಜಾಥ ವನ್ನು ಏರ್ಪಡಿಸಲಾಗಿತ್ತು.

ಬೈಕ್ ಜಾತಕ್ಕೆ ಚಾಲನೆ ನಿಕಟ ಪೂರ್ವ ಅಧ್ಯಕ್ಷರಾದ ಪ್ರಮೋದ್ ಶಾಸ್ತ್ರಿ ಕಾರ್ಯದರ್ಶಿಗಳು ಮುರಳಿ ಹೆಚ್ ಸಣ್ಣಕ್ಕಿ ನೀಡಿದರು.

JCI Shimogga ವಿನೋಬನಗರ ಕರಿಯಣ್ಣ ಬಿಲ್ಡಿಂಗ್ ಇಂದ ಪ್ರಾರಂಭವಾಗಿ ಪೊಲೀಸ್ ಚೌಕಿ ಮುಖಾಂತರ ಮತ್ತೆ ಕರಿಯಣ್ಣ ಬಿಲ್ಡಿಂಗ್ ಬಳಿ ಕೊನೆಗೊಂಡಿತು.

ಬೈಕ್ ಜಾಥಾದಲ್ಲಿ ಲೇಡಿ ಜೆಸಿ ವಿಭಾಗದ ಅಧ್ಯಕ್ಷೆ ಜೆಸಿ ಜಯಮಾಲಾ ಶೆಟ್ಟಿ,
ಉಪಾಧ್ಯಕ್ಷೆ ಜೆಸಿ ಸುಮಾ, ಖಜಾಂಚಿ * ಜೆ ಸಿ ರಾಣಿ S D* ಮತ್ತು ಅನೇಕ ಮಹಿಳೆಯರು ಭಾಗವಹಿಸಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Violence Against Women ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು-ಮಧುರಾ ಮಹೇಶ್

0

Violence against women ನಮ್ಮ ಜೀವನದಲ್ಲಿ ನಾವು ಮಾಡಿದ ಸೇವೆ ಸದಾ ಅವೀರಸ್ಮರಣೀಯ ಆಗಿರಬೇಕು. ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಮಧುರಾ ಮಹೇಶ್ ಹೇಳಿದರು.

ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಕ್ಲಬ್ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬರು ಸೇವಾ ನಿರಂತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕೈಜೋಡಿಸಿ ಕೆಲಸ ಮಾಡಬೇಕು ಎಂದು ತಿಳಿಸಿದರು.

Violence Against Women ಮಹಿಳೆಯರಿಗೆ ಸೂಕ್ತ ರಕ್ಷಣೆ ಹಾಗೂ ಸುರಕ್ಷತೆ ಒದಗಿಸುವ ಕೆಲಸ ಮಾಡಬೇಕು. ಮಹಿಳೆಯರ ಮೇಲೆ ಆಗುವ ದೌರ್ಜನ್ಯಗಳನ್ನು ನಿಲ್ಲಿಸಬೇಕು. ಮಹಿಳೆಯರನ್ನು ಗೌರವಿಸುವ ಜತೆಯಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸಬೇಕು ಎಂದು ತಿಳಿಸಿದರು.

ಶರಣ್ಯ ಸಂಸ್ಥೆ, ಗುಡ್‌ಲಕ್ ಆರೈಕೆ ಕೇಂದ್ರದಲ್ಲಿ ವೃದ್ಧರ ಸೇವೆ, ರೋಗಿಗಳನ್ನು ನಿಸ್ವಾರ್ಥದಿಂದ ಆರೈಕೆ ಮಾಡುತ್ತಿರುವ ಸುನಂದಮ್ಮ, ಅನು ಹಾಗೂ ಹಿರಿಯ ಕವಯತ್ರಿ ಸೀತಾರತ್ನ ಅವರಿಗೆ ಇನ್ನರ್‌ವ್ಹೀಲ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಸೇವಾ ಅನಿಸಿಕೆಗಳನ್ನು ಹಂಚಿಕೊಂಡರು.
ರಸಪ್ರಶ್ನೆಯಲ್ಲಿ ವಿಜೇತರಾದ ಸದಸ್ಯೆಯರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಲತಾ ಶಂಕರ್ ಅವರಿಂದ ಪ್ರಾರ್ಥನೆ, ಮಧುರಾ ಅವರಿಂದ ಸ್ವಾಗತ, ಬಿಂದು ವಿಜಯ್‌ಕುಮಾರ್ ಅವರಿಂದ ನಿರೂಪಣೆ, ವಾಣಿ ಪ್ರವೀಣ್, ಕಾರ್ಯದರ್ಶಿ ಉಮಾ ವೆಂಕಟೇಶ್ ಅವರು ವಂದನಾರ್ಪಣೆ ನಡೆಸಿಕೊಟ್ಟರು.

ಇನ್ನರ್‌ವ್ಹೀಲ್ ಜಿಲ್ಲಾ ಖಜಾಂಚಿ ಶಬರಿ ಕಡಿದಾಳ್, ವೇದಾ ನಾಗರಾಜ್, ವಿಜಯಾ ರಾಯ್ಕರ್, ಜಯಂತಿ ವಾಲಿ, ವೀಣಾ ಹರ್ಷ, ವೀಣಾ ಸುರೇಶ್, ಸುಮಾ, ವಿನೋದಾ, ನಿರ್ಮಲಾ ಮಹೇಂದ್ರ, ಶ್ವೇತಾ, ಆಶಿತಾ ಹಾಗೂ ಇನ್ನರ್‌ವ್ಹೀಲ್ ಸದಸ್ಯೆಯರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Education Abroad ಚಿಕ್ಕಮಗಳೂರಿನ ಈರ್ವರು ವಿದ್ಯಾರ್ಥಿಗಳಿಗೆ ಯು ಎಸ್ ಎ ನಲ್ಲಿ ಅಧ್ಯಯನಕ್ಕೆ ₹ ಒಂದೂವರೆ ಕೋಟಿ ವಿದ್ಯಾರ್ಥಿ ವೇತನ

0

Education Abroad ಚಿಕ್ಕಮಗಳೂರಿನ ಸೇಂಟ್ ಮೇರಿಸ್ ಐ.ಎಸ್.ಸಿ ಕಾಲೇಜಿನ ವಿದ್ಯಾರ್ಥಿ ಮಿಥಾಲಿ ಲೂನಾ ವತ್ ಹಾಗೂ ಸಮಯ್ ಮಲ್ಲೇಶ್ ಅವರಿಗೆ ಸೇಂಟ್ ಮೇರಿಸ್ ಇಂಟರ್ನ್ಯಾಷನಲ್ ಶಾಲೆಯ ಸ್ಟಡಿ ಅಬ್ರಾಡ್ ಯೋಜನೆಯ ಅಡಿಯಲ್ಲಿ 1.5 ಕೋಟಿ ಹಾಗೂ 86 ಲಕ್ಷ ವಿದ್ಯಾರ್ಥಿ ವೇತನಗಳಿಸುವುದರ ಮೂಲಕ ಅಮೇರಿಕಾದ ಪ್ರತಿಷ್ಟಿತ ಯುನಿವರ್ಸಿಟಿ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಆಯ್ಕೆಗೊಂಡಿರುತ್ತಾರೆ.

Education Abroad ಅತ್ಯುತ್ತಮವಾದ ಸಾಧನೆಗೆ ಸೇಂಟ್ ಮೇರಿಸ್ ಇಂಟರ್ನ್ಯಾಷನಲ್ ಶಾಲೆಯ ಸಂಸ್ಥಾಪಕ ಜೆರಾಲ್ಡ್ ಲೋಬೊ ಹಾಗೂ ಆಡಳಿತ ವರ್ಗದವರು ಹಾಗೂ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಮಿಥಾಲಿ ಲೂನಾವತ್ ಅವರು ಚಿಕ್ಕಮಗಳೂರು ನಗರವಾಸಿ ಸುಶೀಲ್ ಕುಮಾರ್ ಲೂನಾವತ್ ಹಾಗೂ ಅನುಪಮಾ ದೇವಿ ಲೂನಾವತ್ ದಂಪತಿಯ ಪುತ್ರಿ ಹಾಗೂ ಸಮಯ್ ಮಲ್ಲೇಶ್ ಅವರು ಬಿ.ಎನ್.ಮಲ್ಲೇಶ್ ಹಾಗೂ ತಾಯಿ ಆಶಾ ರವರ ಪುತ್ರರಾಗಿದ್ದಾನೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

women Empowerment ಪ್ರಸ್ತುತ ಪುರುಷರಿಗಿಂತ ಮಹಿಳೆಯರೇ ಒಂದು ಹೆಜ್ಜೆ ಮುಂದಿದ್ದಾರೆ-ಸರೋಜಾ ಚಂದ್ರೇಗೌಡ

0
women empowerment ಆಧುನಿಕ ಕಾಲದಲ್ಲಿ ಪುರುಷರಿಗಿಂತ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ  ಸಾಧನೆ ಮಾಡುವ ಮೂಲಕ ಒಂದು ಹೆಜ್ಜೆ ಮುಂದಿದ್ದಾರೆ ಎಂದು ಕನಕ ಶ್ರೀ ಮಹಿಳಾ ಸಮಾಜದ ಉಪಾಧ್ಯಕ್ಷೆ  ಸರೋಜಾ ಚಂದ್ರೇಗೌಡ ಹೇಳಿದರು.
ಚಿಕ್ಕಮಗಳೂರಿನ ಕನಕ ಭವನದಲ್ಲಿ ಕನಕ ಶ್ರೀ ಮಹಿಳಾ ಸಮಾಜದಿಂದ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು  ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ದೇಶದ ಕಾನೂನು ಮಹಿಳೆಯರಿಗೆ ವಿಶಿಷ್ಟ ಗೌರವ, ಸ್ಥಾನಮಾನ ಮತ್ತು ಸಮಾನ ಹಕ್ಕನ್ನು ನೀಡಿದೆ. ಮಹಿಳೆಯರು ಇಂದು ತಂತ್ರಜ್ಞಾನದ ಬೆಳವಣ ಗೆ ಹಾಗೂ ಇನ್ನಿತರ ಯಾವುದೇ ಕ್ಷೆತ್ರದಲ್ಲಾದರೂ ಕಾರ್ಯ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು.
women empowerment ಮಹಿಳೆ ಪುರುಷರಿಗಿಂತ ಹೆಚ್ಚು ಶಕ್ತಿವಂತಳು, ಇಡೀ ಕುಟುಂಬವನ್ನು ತಿದ್ದಿತೀಡಿ ದಾರಿಗೆ ತರುವ ಸಾಮರ್ಥ್ಯ ಮತ್ತು ಹೊಣೆಗಾರಿಕೆ ಉಳ್ಳುವರು. ಇಂತಹ ಮಹಿಳೆಯನ್ನು ನಾವೆಲ್ಲರೂ ಸದಾ ಗೌರವಿಸಬೇಕು ಎಂದು ಕಿವಿಮಾತು ಹೇಳಿದರು.
ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ರಾಜ್ಯಾಧ್ಯಕ್ಷೆ ಸರೋಜಾ ಬಸವರಾಜ್ ಮಾತನಾಡಿ ಪ್ರಸ್ತುತ ಎಲ್ಲಾ ಕ್ಷೇತ್ರದಲ್ಲಿ ಮಹಿಳೆ ಪುರುಷರಿಗೆ ಸರಿಸಮಾನವಾಗಿ ಸ್ಪರ್ಧಿಯಾಗಿ ಹೊರಹೊಮ್ಮುತ್ತಿದ್ದಾಳೆ. ಒಂದು ಉತ್ತಮ ಕುಟುಂಬದ ಹಿಂದೆ ಹೆಣ್ಣಿನ ಪಾತ್ರ ಮಹತ್ವದ್ದಾಗಿದೆ. ಮೇಲು-ಕೀಳು ಎನ್ನದೇ ಹೊಂದಾಣ ಕೆಯಿಂದ ನಡೆದರೆ ಸಾಮರಸ್ಯ ಸಾಧ್ಯವಾಗಲಿದೆ ಎಂದರು.
ಇದೇ ವೇಳೆ ಎಸ್.ಎಸ್.ಎಲ್.ಸಿ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ಕನಕ ಶ್ರೀ ಮಹಿಳಾ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಸ್ಥಾನ ಗಳಿಸಿದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಈ ಸಂರ್ಭದಲ್ಲಿ ಸಮಾಜದ ಮಾಜಿ ಅಧ್ಯಕ್ಷೆ ಜಯಮ್ಮ ಪುಷ್ಪನೇಗೌಡ, ನಗರಸಭೆ ಸದಸ್ಯೆ ಇಂದಿರಾ ಶಂಕರ್  ಹಾಗೂ ಕನಕಶ್ರೀ ಮಹಿಳಾ ಸಮಾಜದ ನಿರ್ದೇಶಕರು, ಸದಸ್ಯರುಗಳು ಉಪಸ್ಥಿತರಿದ್ದರು.
ವನಜಾಕ್ಷಿ ಗೋಪಾಲ ಗೌಡ ನಿರೂಪಿಸಿದರು. ಕನಕ ಶ್ರೀ ಮಹಿಳಾ ಸಮಾಜದವರು ಪ್ರಾರ್ಥಿಸಿದರು. ಅನ್ನಪೂರ್ಣಗೋಪಾಲಗೌಡ ಸ್ವಾಗತಿಸಿದರು. ಶಾರದಾ ಮಾಸ್ತೇಗೌಡ ವಂದಿಸಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Social work ಸಮಾಜಕ್ಕೆ ಸೇವೆ ಸಲ್ಲಿಸುವುದೇ ಒಂದು ಕೊಡುಗೆ-ಜಿ.ಪ್ರಭು

0

Social work  ತಳಮಟ್ಟದಿಂದಲೂ ಸಾಮಾಜಿಕ ಸೇವೆಗಳನ್ನು ನೀಡುತ್ತಾ ಜನಮಾನಸದಲ್ಲಿ ಗುರುತಿಸಿಕೊಂಡಿರುವ ಲಯನ್ಸ್ ಸಂಸ್ಥೆ ವಿಶ್ವದಲ್ಲಿ ಉತ್ತಮ ಹೆಸರನ್ನು ಸಂಪಾದಿಸಿ ಅಗ್ರಗಣ್ಯ ಪಟ್ಟಿಗೆ ಸೇರ್ಪಡೆಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಹೇಳಿದರು.

ಚಿಕ್ಕಮಗಳೂರಿನ ಲಯನ್ಸ್ ಸೇವಾ ಭವನದಲ್ಲಿ ನಡೆದ ಲಯನ್ ಪ್ರಾಂತೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಮಾಜಕ್ಕೆ ಏನನ್ನಾದರೂ ಕೊಡಬೇಕು ಎಂದು ಯೋಚಿಸಿದಾಗ ಮಾತ್ರ ಸೇವೆ ಮಾಡಲು ಸಾಧ್ಯ. ಅಂತಹ ಸೇವಾಕಾರ್ಯವನ್ನು ಲಯನ್ಸ್ ಸಂಸ್ಥೆ ನಿರಂತರವಾಗಿ ಮಾಡುತ್ತಾ ಬಂದಿದೆ. ಆರೋಗ್ಯ ಹಾಗೂ ಕೃಷಿ ಸೇರಿದಂತೆ ವಿವಿಧ ವಲಯಗಳಲ್ಲಿ ಲಯನ್ಸ್ ಕ್ಲಬ್ ಅತ್ಯುತ್ತಮ ಕಾರ್ಯಕ್ರಮವನ್ನು ರೂಪಿಸಿ ಜನಪರವಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

Social work  ಉದಾತ್ತ ಸಾಮಾಜಿಕ ಸೇವೆಗಾಗಿ ಗುರುತಿಸಿಕೊಂಡಿರುವ ಲಯನ್ಸ್ ಸಂಸ್ಥೆ ಅಧಿಕಾರ, ಅಂತಸ್ತು, ನಾಮಫಲಕಗಳಿಗೆ ಸೀಮಿತಗೊಳ್ಳದೆ ನಿಸ್ವಾರ್ಥ ಸೇವೆಯ ಮೂಲಕ ಸಮಾಜದ ವಿಶ್ವಾಸವನ್ನು ಗಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ಸಾಹಿತಿ ಚಟ್ನಳ್ಳಿ ಮಹೇಶ್ ಮಾತನಾಡಿ ಯಾವುದೇ ಸಂಘ ಸಂಸ್ಥೆಯಾಗಿರಲಿ ನಿಸ್ವಾರ್ಥ ಸೇವಾ ಗುಣ, ಮನೋಭಾವದಿಂದ ಕೆಲಸ ಮಾಡಿದಲ್ಲಿ ಸಮಾಜದ ಏಳ್ಗೆಯಾಗುತ್ತದೆ. ಆ ನಿಟ್ಟಿನಲ್ಲಿ ಎಲ್ಲರು ಶ್ರಮಿಸಬೇಕು ಎಂದು ಹೇಳಿದರು.

ಸಮ್ಮೇಳನದ 3ರ ಪ್ರಾಂತೀಯ ಅಧ್ಯಕ್ಷ ಜೆ.ಎನ್.ಜೆ.ಲೋಬೋ ಮಾತನಾಡಿ ಚಿಕ್ಕಮಗಳೂರಿನಲ್ಲಿ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಸಮಾಜದಲ್ಲಿ ಗಮನ ಸೆಳೆದಿದ್ದಾರೆ. ಇತಿಹಾಸದಲ್ಲಿ ಲಯನ್ಸ್ ಪ್ರಾಂತೀಯ ಸಮ್ಮೇಳನ ಒಂದು ಐತಿಹಾಸಿಕ ದಾಖಲೆ ಹಾಗೂ ಸಮ್ಮೇಳನ ಯಶಸ್ಸಿಗೆ ಶ್ರಮಿಸಿದ ಎಲ್ಲರನ್ನು ಅಭಿನಂದಿಸಿದರು.

ಪಿಎಂಜೆಎಫ್ ಜಿಲ್ಲಾ ರಾಜ್ಯಪಾಲ 317-ಡಿ ಸಂಜಿತ್‌ಶೆಟ್ಟಿ ಅಭಿನಂದನಾ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಪ್ರಾಂತೀಯ ಮೊದಲ ಮಹಿಳೆ ಎಲಿಜಿಬಿತ್ ಲಿವಿನ್ ಡಿಕುನ್ನ, ಪ್ರಾಂತೀಯ ಸಮ್ಮೇಳನ ಸಮಿತಿ ಅಧ್ಯಕ್ಷ ಶಶಿಪ್ರಸಾದ್, ಕಾರ್ಯದರ್ಶಿ ಸಿಜು, ಖಜಾಂಚಿ ಗೋಪಾಲಗೌಡ, ಅತಿಥೇಯ ಕ್ಲಬ್ ಅಧ್ಯಕ್ಷ ಲಕ್ಷ್ಮಣಗೌಡ, ಲಯನ್ಸ್ ಕ್ಲಬ್ ಜಿಲ್ಲಾಧ್ಯಕ್ಷ ವೆಂಕಟೇಶ್ ಹಾಗೂ ಜಿಲ್ಲೆ 317-ಡಿ ಎಲ್ಲಾ ಅಧ್ಯಕ್ಷರು, ವಲಯ ದೂತರು, ವಲಯ ಅಧ್ಯಕ್ಷರುಗಳು, ಪ್ರಾಂತೀಯ ಅಧ್ಯಕ್ಷರುಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Blindness Prevention ಅಂಧತ್ವಕ್ಕೆ ಮೂಲಕಾರಣ ಅಪೌಷ್ಢಿಕತೆ-ಡಾ.ಕೆ.ಸುಂದರಗೌಡ

0

Blindness Prevention ಚಿಕ್ಕಮಗಳೂರಿನ ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಕಣ್ಣಿನ ಪೊರೆ ಸೇರಿದಂತೆ ಇತರೆ ಆರೋಗ್ಯದ ಸಮಸ್ಯೆ ಉದ್ಬವಿಸದಂತೆ ಮುಂಜಾಗ್ರತಾ ವಹಿಸುವ ನಿಟ್ಟಿನಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಗ್ರಾಮದಲ್ಲಿ ಆಯೋಜಿಸಿ ಸ್ಪಂದಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದು ಎಎಪಿ ರಾಜ್ಯ ಜಂಟಿ ಕಾರ್ಯ ದರ್ಶಿ ಡಾ|| ಕೆ.ಸುಂದರಗೌಡ ಹೇಳಿದರು.

ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಗ್ರಾಮದ ಕನಕ ಸಮುದಾಯ ಭವನದಲ್ಲಿ ಉಡುಪಿ ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಎಎಪಿ ಜಿಲ್ಲಾ ಘಟಕ ಹಾಗೂ ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಬಿಕ್ಕೆಮನೆ ಇವರ ಸಂಯು ಕ್ತಾಶ್ರದಯಲ್ಲಿ ನಡೆದ ಉಚಿತ ನೇತ್ರ, ಕಿವಿ, ಮೂಗು, ಗಂಟಲು ಹಾಗೂ ದಂತ ಕ್ಷಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

Blindness Prevention ಪ್ರಸ್ತುತ ದೇಶದಲ್ಲಿ ಸುಮಾರು 80 ಲಕ್ಷ ಮಂದಿ ಅಂಧತ್ವದಿಂದ ನರಳುತ್ತಿದ್ದು ಇದಕ್ಕೆ ಮೂಲ ಕಾರಣ ಅಪೌಷ್ಟಿಕತೆ, ಕಣ್ಣಿನ ಪೊರೆ ಅಥವಾ ಜನನ ಸಮಯದಲ್ಲಿ ಕೆಲವೊಂದು ಸಮಸ್ಯೆಯಿಂದ ಅಂಧತ್ವನ್ನು ಹೊಂದುತ್ತಾರೆ. ಅವರನ್ನು ಯಾವುದೇ ಕಾರಣಕ್ಕೂ ಸಮಾಜದಲ್ಲಿ ನಿರ್ಲಕ್ಷ್ಯ ವಹಿಸದೇ ಪರಿವರ್ತನೆ ಮಾಡುವ ಕಾರ್ಯದಲ್ಲಿ ಮುಂದಾಗಬೇಕು ಎಂದು ಸಲಹೆ ಮಾಡಿದರು.

ಇತ್ತೀಚೆಗೆ ದಿನಗಳಲ್ಲಿ ನಗರ ಅಥವಾ ಗ್ರಾಮೀಣ ಪ್ರದೇಶದಲ್ಲಿ ವಯೋವೃದ್ದರ ನಿರ್ಲಕ್ಷ್ಯತನ ಅಥವಾ ಮನೆಯಲ್ಲಿ ಆರ್ಥಿಕ ಸಮಸ್ಯೆಯಿಂದ ನೇತ್ರ ಸೇರಿದಂತೆ ಯಾವುದೇ ಆರೋಗ್ಯ ತಪಾಸಣೆಗೊಳಪಡಿಸಿಕೊಳ್ಳುವುದಿಲ್ಲ. ಇಂದಿನ ಯುವಪೀಳಿಗೆಯು ಕೂಡಾ ಹಿರಿಯ ವೃದ್ದರಿಗೆ ಸೂಕ್ತ ತಪಾಸಣೆ ನಡೆಸದೇ ಅಸಡ್ಡೆ ತೋರುತ್ತಿದ್ದು ಅಂತಹ ವ್ಯಕ್ತಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮದಲ್ಲಿ ಶಿಬಿರ ಆಯೋಜಿಸಿದ್ದು ಪ್ರತಿಯೊಬ್ಬರು ಸದ್ಬಳಕೆ ಮಾಡಿ ಕೊಳ್ಳಬೇಕು ಎಂದರು.

ಸಮಾಜದ ನಾಗರೀಕರು ಸೇವಾ ಮನೋಭಾವನ್ನು ಹೊಂದಬೇಕು. ಜೀವನದಲ್ಲಿ ಗಳಿಸಿರುವ ದುಡಿಮೆಯ ಲ್ಲಿ ಶೇ.10ರಷ್ಟನ್ನು ಸಾಮಾಜಿಕ ಕಾರ್ಯದಲ್ಲಿ ತೊಡಗಿಸಲು ಮುಂದಾದರೆ ಒಂದೊಂದೇ ಆರ್ಥಿಕ ಸಂಕಷ್ಟದಲ್ಲಿರುವ ವ್ಯಕ್ತಿಗಳ ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಬಹುದು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೈಜೋಡಿಸಿದ್ದಲ್ಲಿ ಅಂಧತ್ವವನ್ನು ನಿವಾರಣೆ ಮಾಡಲು ಸಾಧ್ಯ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಚಂದ್ರೇಗೌಡ ಮಾತನಾಡಿ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಉಚಿತ ಶಿಬಿರವನ್ನು ಗ್ರಾಮದಲ್ಲಿ ಆಚರಿಸುತ್ತಿರುವುದು ಖುಷಿಯ ಸಂಗತಿ. ಜೊತೆಗೆ ಚಿಕ್ಕಗೌಜ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಶಿಬಿರದಲ್ಲಿ ಪಾಲ್ಗೊಂಡು ತಪಾಸಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಶಿಬಿರದಲ್ಲಿ ಸುಮಾರು 750 ಮಂದಿ ತಪಾಸಣೆಗೊಳಪಡಿಸಿಕೊಂಡಿದ್ದು ಕಣ್ಣಿನ ಗ್ಲಾಕೋಮಾ ಎಂಬ ಕಾಯಿಲೆಯಿಂದ ಬಳಲುತ್ತಿರುವ 10 ಮಂದಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಗೆ ಕಳಿಸಿಕೊಡುವ ವ್ಯವಸ್ಥೆ ಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಎಎಪಿ ಜಿಲ್ಲಾಧ್ಯಕ್ಷ ಹೇಮಂತ್‌ಕುಮಾರ್, ಕಾರ್ಯದರ್ಶಿ ಅಂತೋಣ , ಆಕಾಂಕ್ಷಿ ಈರೇಗೌಡ, ಮುಖಂಡರುಗಳಾದ ಲಿಂಗಾರಾಧ್ಯ, ಶಿವೇಗೌಡ, ನಾಗರಾಜ್, ಜಯಣ್ಣ, ನಾಸಿರ್ ಬೇಗಂ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Drugs Mafia ಮಾದಕ ವಸ್ತು ಕಳ್ಳಸಾಗಣೆ ಓರ್ವನ ಬಂಧನ

0

Drugs Mafia ನಿನ್ನೆ ಬೆಳಗ್ಗೆ ಮಂಗಳೂರಿನಿಂದ ಒಬ್ಬ ವ್ಯಕ್ತಿ ಸಾಗರದ ಅಣಲೇ ಕೊಪ್ಪಕ್ಕೆ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ. ಈತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ವಿಷಯ ತಿಳಿದ ನಂತರ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಟೌನ್ ಪೋಲಿಸರು ಈತನನ್ನ ಬಂಧಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಸಿಬ್ಬಂದಿ ವರ್ಗವು ಅಣಲೆಕೊಪ್ಪದ ಶುಂಠಿ ಕಣದ ಬಳಿ ದಾಳಿ ನಡೆಸಿದ್ದಾರೆ. ಸಾಗರ ಟೌನ್ ಪೋಲೀಸ್ ಪಿ.ಐ ಸೀತಾರಾಂ, ಸಾಗರ ಉಪ ವಿಭಾಗದ ಅಬಕಾರಿ ಉಪಾಧೀಕ್ಷಕರು ಸ್ಥಳಕ್ಕೆ ತೆರಳಿ ಅನುಮಾನಸ್ಪದವಾಗಿ ಅಲ್ಲಿದ್ದ ಶಿಫ್ಟ್ ಡಿಸೈರ್ ಕಾರಿನ ಮೇಲೆ ದಾಳಿ ನಡೆಸಿದ್ದಾರೆ.

ಸೃಜನ್ ಎಸ್. ಶೆಟ್ಟಿ (20 ವರ್ಷ), ತೋಡರ್ ಗ್ರಾಮ ಮಂಗಳೂರು, ಮೊಹಮ್ಮದ್ ಸಮ್ಮಾನ್(24 ವರ್ಷ)- ಅಣಲೆಕೊಪ್ಪ.

ಮೊಹಮ್ಮದ್ ಯಾಸಿಫ್ (25 ವರ್ಷ), ಶ್ರೀಧರ್, ನಗರ ಸಾಗರ ಟೌನ್ ಇವರುಗಳು ಆರೋಪಿತ ವ್ಯಕ್ತಿಗಳು ಎಂಬುವುದು ತಿಳಿದು ಬಂದಿದೆ.

Drugs Mafia ಆರೋಪಿತರಿಂದ ಸುಮಾರು 10,000 ರೂಪಾಯಿ, 1.06 ಗ್ರಾಂ ತೂಕದ ಬಿಳಿ ಬಣ್ಣದ ಮಾದಕ ವಸ್ತುವಿನ ಪುಡಿ, ದ್ರವರೂಪದ ವಸ್ತುವಿದ್ದ ಕಿಂಗ್ಸ್ ಹೀನಾ (Kings Heena)25grams ಬಾಟಲಿ ಮತ್ತು Zydus Fortiza ಎಂಬ ಮಾತ್ರೆಯ ಶೀಟ್, ನಾಲ್ಕು ಮೊಬೈಲ್ ಫೋನ್ ಗಳು, 2 ಸಿಮ್ ಕಾರ್ಡ್ ಗಳು, 200 ರೂಪಾಯಿ ನಗದು ಹಣ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಡಿಸೈರ್ ಕಾರನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.

Drugs Smuggling ಆರೋಪಿತರ ವಿರುದ್ಧ ಗುನ್ನೆ ಸಂಖ್ಯೆ 0049/2023 ಕಲಂ 8(ಸಿ),22(ಎ),27(ಎ),29,30 NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಆ ಸ್ಥಳದಲ್ಲಿದ್ದ ಮೂರು ಜನರನ್ನ ಬಂಧಿಸಿದ್ದಾರೆ. ಅವರ ಬಳಿ ಇದ್ದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.