Friday, April 10, 2026
Friday, April 10, 2026
Home Blog Page 1282

Y. S. V. Datta ಚುನಾವಣಾ ಅಭ್ಯರ್ಥಿಗೇ ಗಿಫ್ಟ್ ಕೊಟ್ಟ ಅಭಿಮಾನಿ ಮತದಾರ

0

 Y. S. V. Datta ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದೆ. ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲ್ಲಬೇಕು ಎಂದು ಅನೇಕ ರಾಜಕಾರಣಿಗಳು ಮತದಾರರನ್ನ ತನ್ನತ್ತ ವಹಿಸಿಕೊಳ್ಳಲು ಅನೇಕ ಗಿಫಿಗಳನ್ನು ನೀಡುವುದು ಮಾಮೂಲಿಯಾಗಿದೆ. ಆದ್ರೆ ನಾವು ಹೇಳುವ ಈ ಸ್ಟೋರಿ ಸ್ವಲ್ಪ ಡಿಫರೆಂಟ್ ಆಗಿದೆ…

ಏನದು ಅಂತ ಯೋಚನೆ ಮಾಡ್ತಾ ಇದ್ದೀರಾ… ನಾವು ಚುನಾವಣೆಯಲ್ಲಿ ಅಭ್ಯರ್ಥಿಗಳು ಮತದಾರರಿಗೆ ಹಣವನ್ನು ನೀಡುವುದನ್ನ ಕೇಳಿರುತ್ತೇವೆ. ಆದ್ರೆ ಇನ್ನೊಬ್ಬ ಅಭಿಮಾನಿ ಅಭ್ಯರ್ಥಿಗೆ ಹಣವನ್ನು ನೀಡಿರುವ ಘಟನೆ ನಡೆದಿದೆ.

ಸಾಮಾನ್ಯವಾಗಿ ದೇವರಿಗೆ 51, 101 ರೂಪಾಯಿ ಕಾಣಿಕೆ ರೂಪದಲ್ಲಿ ನೀಡುತ್ತೇವೆ. ಆದ್ರೆ ಇಲ್ಲೋಬ್ಬ, ಅಭಿಮಾನಿ ತನ್ನ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾದ ವೈ ಎಸ್ ವಿ ದತ್ತ ಅವರಿಗೆ ಪತ್ರ ಬರೆದು, ಅದರಲ್ಲಿ 101 ರೂಪಾಯಿ ಇತ್ತು, ಪೋಸ್ಟ್ ಮಾಡಿರುವ ಘಟನೆ ನಡೆದಿದೆ.

ಹೌದು, ಈ ವಿಷಯ ಕೇಳಿದಾಗ ನಿಜಕ್ಕೂ ಅಚ್ಚರಿಯಾಗಿರಬೇಕು…! ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಮಾಜಿ ಶಾಸಕ ವೈ ಎಸ್ ಬಿ ದತ್ತ ಅವರಿಗೆ ಜಿ.ಕೆ. ಭಾರ್ಗೇಶಪ್ಪ ಪತ್ರ ಬರೆದಿದ್ದಾನೆ.

ಹಾಗಾದ್ರೆ ಆ ಪತ್ರದಲ್ಲಿ ಏನಿತ್ತು ಎಂಬುದಕ್ಕೆ ಉತ್ತರ ಇಲ್ಲಿದೆ.

ವೈ ಎಸ್ ಬಿ ದತ್ತಣ್ಣನವರಿಗೆ, ಬಾರ್ಗೆ ಶಪ್ಪನವರಿಂದ ಅನಂತ ನಮಸ್ಕಾರಗಳು… ತಮ್ಮ ಅಧಿಕಾರದ ಅವಧಿಯಲ್ಲಿ ಕ್ಷೇತ್ರದ ಜನತೆ ಮೇಲೆ ತೋರಿದ ಪ್ರೀತಿ, ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸುವ ರೀತಿ ಇವೆಲ್ಲವೂ ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ.

Y. S. V. Datta ಕ್ಷೇತ್ರದ ಅಭಿವೃದ್ಧಿಗೆ ಒತ್ತುಕೊಡುವ ಕೆಲಸಗಳನ್ನು ನೀವು ಮಾಡುತ್ತಿದ್ದೀರಿ. ನಿಮ್ಮ ವ್ಯಕ್ತಿತ್ವಕ್ಕೆ ಅನಂತ ಅನಂತ ಪ್ರಣಾಮಗಳು. ನಿಮ್ಮಂತಹ ಅನೇಕ ದತ್ತಣ್ಣನವರುಗಳಿಂದ ಪ್ರಕೃತಿಯನ್ನು ಕಾಪಾಡುವ ಹಾಗೂ ಜನಸಾಮಾನ್ಯರ ಸಮಸ್ಯೆಗಳನ್ನ ಪರಿಹರಿಸುವ ಹೊಸ ಜವಾಬ್ದಾರಿ ಇದೆ ಎಂಬ ಅಪಾರವಾದ ನಂಬಿಕೆ ನನಗಿದೆ. ಕಾರಣ, ಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕೈಬಲ ಪಡಿಸಲು ನನ್ನ ಮತ್ತು ನನ್ನ ಪತ್ನಿಯ ವೋಟುಗಳು ನಿಮಗೆ ಮೀಸಲಿದೆ. ನಾನು ಆರ್ಥಿಕವಾಗಿ ಸಬಲವಿಲ್ಲದ ಕಾರಣ ಕೇವಲ ನೂರ ಒಂದು ರೂಪಾಯಿಗಳನ್ನು ಕಳುಹಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಎಲ್ಲ ರಾಜಕೀಯ ವ್ಯಕ್ತಿಗಳಿಗೆ ಅಭಿಮಾನಿಗಳಿರುತ್ತಾರೆ. ಆದರೆ, ಈ ಅಭಿಮಾನಿಯ ಮುಗ್ಧ ಪ್ರೀತಿ, ಕಾಳಜಿ ಎಲ್ಲರಿಗೂ ಅಚ್ಚರಿ ಮೂಡಿಸುವಂತಿದೆ…

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Hosanagara Bike Accident ವೇಗದ ಬೈಕ್ನಿಂದ ಬಿದ್ದು ಯುವಕನಿಗೆ ಗಂಭೀರ ಗಾಯ

0

Hosanagara Bike Accident ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೈಕ್ ನಿಂದ ಬಿದ್ದು ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಹೊಸನಗರದ ಆದರ್ಶ ಎಂಬಾತ, ಸೊನಲೆ ಹಳ್ಳಿ ರಸ್ತೆಯಲ್ಲಿ ಹೋಗುತ್ತಿರುವಾಗ ಬೈಕ್ ಬ್ಯಾಲೆನ್ಸ್ ತಪ್ಪಿ ದೆ. ಇದರ ಪರಿಣಾಮ ಕೆಳಗೆ ಬಿದ್ದ ಆದರ್ಶನ ತಲೆಗೆ ಗಂಭೀರವಾದ ಪೆಟ್ಟಾಗಿದೆ. ತಕ್ಷಣದಲ್ಲಿ ಅವರನ್ನು ಪ್ರಾಥಮಿಕ ಚಿಕಿತ್ಸೆ ಕೊಡಿಸಲು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಬಲವಾದ ಪೆಟ್ಟು ತಲೆಗೆ ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗುವ ಸಾಧ್ಯತೆ ಕಡಿಮೆ ಇದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Hosanagara Bike Accident ಸದ್ಯಕ್ಕೆ ಗಾಯಾಳು ವನ್ನು ಹೊಸನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Davanagere Bus Accident ಬಸ್ ತಡೆಗೋಡೆಗೆ ಡಿಕ್ಕಿಹೊಡೆದು ಪಲ್ಟಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

0

Davanagere Bus Accident ದಾವಣಗೆರೆ ತಾಲೂಕಿನ ಎಲೇಬೇತೂರು ಗ್ರಾಮದಲ್ಲಿ ಹಳ್ಳದ ತಡೆಗೋಡೆಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.

ಘಟನೆಯಿಂದ ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಾಯಾಳುಗಳಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮಸ್ಥರು ಬಂದು ಪ್ರಯಾಣಿಕರನ್ನ ರಕ್ಷಿಸಿದ್ದಾರೆ.

Davanagere Bus Accident ಚಳ್ಳಕೆರೆಯಿಂದ ದಾವಣಗೆರೆ ಮಾರ್ಗವಾಗಿ ಬರುತ್ತಿದ್ದ ಲಕ್ಷ್ಮೀ ಎಕ್ಸ್ಪ್ರೆಸ್ ಬಸ್ ಬೇತೂರಿನಲ್ಲಿ ಅಪಘಾತಗೊಂಡಿದೆ.

ಅದೃಷ್ಟವಶಾತ್ ಬಸ್ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಳ್ಳದ ತಡೆಗೋಡೆಯನ್ನ ಗುದ್ದಿ ಅದರ ಮೇಲೆ ಬಿದ್ದಿದೆ. ಒಂದು ವೇಳೆ ತಡೆಗೋಡೆ ಇಲ್ಲದಿದ್ದರೆ ಬಸ್ ಹಳ್ಳಕ್ಕೆ ಬೀಳುತ್ತಿತ್ತು. ತಡೆಗೋಡೆ ಇದ್ದಿದ್ದರಿಂದ ಯಾವುದೇ ಪ್ರಾಣಪಾಯ ಆಗಿಲ್ಲ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

K. S. Eshwarappa ಶಿವಮೊಗ್ಗದ ಮುಸಲ್ಮಾನರು ಗಲಾಟೆ ಮಾಡೋರಲ್ಲ ನನಗೆ ನೂರಕ್ಕೆ ನೂರು ಗೊತ್ತು- ಕೆ.ಎಸ್.ಈಶ್ವರಪ್ಪ

0

K. S. Eshwarappa  ಶಿವಮೊಗ್ಗದ ಮುಸಲ್ಮಾನರು ಗಲಾಟೆ ಮಾಡೋರಲ್ಲ ನನಗೆ ನೂರಕ್ಕೆ ನೂರು ಗೊತ್ತು. ಹಿಂದುಗಳಲ್ಲಿಯೂ ಕೆಲ ತಲೆ ಹರಟೆಗಳಿದ್ದಾರೆ. ನಾನು ಇಲ್ಲ ಅಂದಿಲ್ಲ. ಮುಸ್ಲಿಮರಲ್ಲಿಯೂ ತಲೆಹರಟೆಗಳಿದ್ದಾರೆ. ಅವರೊಂದು ನಾಲ್ಕು ಜನ ಇವರೊಂದು ನಾಲ್ಕು ಜನ ಸೇರ್ಕೊಂಡು ತಲೆ ಹರಟೆ ಕೆಲಸ ಮಾಡಿದಾಗ ಗಲಾಟೆಗಳು ಸೃಷ್ಟಿಯಾಗುತ್ತದೆ ಎಂದು ಶಿವಮೊಗ್ಗ ಶಾಸಕ ಕೆ ಎಸ್ ಈಶ್ವರಪ್ಪ ಅವರು ಹೇಳಿರುವ ವಿಡಿಯೋ ಎಲ್ಲೆಡೆ ಸಾಕಷ್ಟು ಸದ್ದು ಮಾಡುತ್ತಿದೆ.

ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಮೊಹಮ್ಮದ್ ಶಫಿ ಎಂಬುವರ ಫೇಸ್ಬುಕ್ನಲ್ಲಿ ಈ ವಿಡಿಯೋ ಮೊದಲು ಪ್ರಕಟವಾಗಿದೆ. ಆನಂತರದಲ್ಲಿ ಸೋಶಿಯಲ್ ಮೀಡಿಯಾ ಗಳಲ್ಲಿ ಪರ, ವಿರೋಧ ಚರ್ಚೆಗಳು ಸೃಷ್ಟಿಯಾಗುತ್ತಿದೆ.

K. S. Eshwarappಶಿವಮೊಗ್ಗ ಶಾಸಕ ಕೆಎಸ್ ಈಶ್ವರಪ್ಪ ಅವರು
ಮುಸ್ಲಿಮರಲ್ಲಿ ಕೆಲ ತಲೆ ಹರಟೆಗಳಿದ್ದಾರೆ. ಹಿಂದುಗಳಲ್ಲಿ ಕೆಲ ತಲೆ ಹರಟೆಗಳಿದ್ದಾರೆ. ನಾಲ್ಕು ಜನ ಸೇರಿಕೊಂಡು ತಲೆ ಹರಟೆ ಕೆಲಸ ಮಾಡಿದಾಗ ಗಲಾಟೆ ಸೃಷ್ಟಿಯಾಗುತ್ತದೆ. ಇಲ್ಲಾಂದ್ರೆ ಎಲ್ಲದು ತಣ್ಣಗೆ ಇರುತ್ತದೆ. ನಾನು ಏನು ಹೇಳಲು ಹೊರಟಿದ್ದೇನೆ. ನಾನು ತಪ್ಪು ಮಾಡಿದ್ರೆ ಇಲ್ಲಿಯೇ ಸಭೆಯಲ್ಲಿ ಹೇಳಿ, ಸಮಾಜದಲ್ಲಿ ಅಣ್ಣತಮ್ಮಂದಿರಂತೆ ಇರುತ್ತೇವೆ. ನಾನು ಯಾವ ವಿಚಾರಕ್ಕೆ ಗಲಾಟೆ ಮಾಡುತ್ತೇನೆ ಎಂದರೆ ಉದಾಹರಣೆ ಹೇಳುವುದಾದರೆ, ಶಿವಪ್ಪ ನಾಯಕ ಸರ್ಕಲ್ ನಲ್ಲಿ ಎಸ್ ಡಿ ಪಿ ಐ ನವರು ಒಂದು ಸಮ್ಮೇಳನ ಮಾಡಿದ್ರು. ಆ ಸಮ್ಮೇಳನದಲ್ಲಿ ಯಾರೋ ಒಬ್ಬ ಹಿಂದುಸ್ತಾನ್ ಮುರದಬಾದ್ ಎಂದು ಕೂಗಿದ. ಯಾರಾದರೂ ಇದನ್ನು ಕೇಳಿ ಸುಮ್ಮನಿರುತ್ತಾರ? ನಾನು ಬಾಯಿ ಬಿಟ್ಟು ಹೇಳುತ್ತೇನೆ. ಆದರೆ ನಾನು ಸುಮ್ಮನಿರಲಿಲ್ಲ. ಮತ್ತೆ ಅಂದು ವಾಪಸ್ ಹೋಗುತ್ತಾ ಗಾಜನೂರು ಹತ್ರ ತಳವಾರ್ ಬೀಸಿದ್ರು. ಯಾರು? ಅಂದ್ರೆ ಶಿವಮೊಗ್ಗದವರಲ್ಲ. ಯಾರು ಒಬ್ಬ ಸತ್ತ ಇದಕ್ಕೆ ಮುಸಲ್ಮಾನರು ಕಾರಣನಾ? ಎಂದು ಹೇಳಿದ್ದಾರೆ.

ಸುಮ್ ಸುಮ್ನೆ ನಮ್ಮ ನಿಮ್ಮ ಮಕ್ಕಳನ್ನ ಹೊಡಿದ್ರೆ ಸುಮ್ಮನಿರುವುದಕ್ಕೆ ಆಗುತ್ತಾ? ಖಂಡಿಸ ಬೇಕಾ ಅಥವಾ ಬೇಡ್ವಾ? ನಾನಂತೂ ಖಂಡಿಸುತ್ತೇನೆ. ಎಲ್ಲ ಮುಸಲ್ಮಾನರ ಬಗ್ಗೆ ನಾವು ಹೇಳೋದಿಲ್ಲ. ಗುಂಡಾಗಿರಿ ಮಾಡಿ ತೊಂದರೆ ಕೊಡುವವರ ಬಗ್ಗೆ ನಾನು ಖಂಡಿಸುತ್ತೇನೆ ಎಂದಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

JCI Shimoga ಮಹಿಳೆ ಸ್ವಾವಲಂಬಿಯಾದರೆ ಕುಟುಂಬ ಆರ್ಥಿಕ ಸದೃಢ-ಸುಷ್ಮಾ ಹಿರೇಮಠ

0

JCI Shimoga : ಮಹಿಳೆಯರು ಕೈಗಾರಿಕೆ ಮತ್ತು ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದರಿಂದ ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವ ಜತೆಯಲ್ಲಿ ಕುಟುಂಬದ ಆರ್ಥಿಕ ವ್ಯವಸ್ಥೆಯು ಸದೃಢವಾಗಿರುವಂತೆ ನೋಡಿಕೊಳ್ಳಬಹುದು ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ ಹಿರೇಮಠ ಹೇಳಿದರು.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಶುಭಂ ಸಭಾಂಗಣದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಿಳಾ ಉದ್ಯಮಿ ರೇಷ್ಮಾ ವಿಜಯ್‌ಕುಮಾರ್ ಅವರನ್ನು ಸನ್ಮಾನಿಸಿ ಮಾತನಾಡಿದರು.

ವಿಜ್ಞಾನ, ಶಿಕ್ಷಣ, ಕೈಗಾರಿಕೆ, ಉದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯು ಮಹಿಳೆಯರು ಯಶಸ್ಸು ಸಾಧಿಸುತ್ತಿದ್ದು, ಯುವ ಉದ್ಯಮಿಗಳ ಯಶಸ್ಸಿನ ಬಗ್ಗೆ ಅರಿತುಕೊಳ್ಳುವುದರಿಂದ ನಮ್ಮ ವೃತ್ತಿ ಜೀವನದಲ್ಲಿ ಉತ್ತಮ ಅಂಶಗಳನ್ನು ಅಳವಡಿಸಿಕೊಂಡು ಗೆಲುವು ಸಾಧಿಸಬಹುದಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಉದ್ಯಮಿ ರೇಷ್ಮಾ ವಿಜಯ್‌ಕುಮಾರ್, ಮಹಿಳೆಯರು ಯಶಸ್ವಿಯಾಗಲು ಕುಟುಂಬದ ಸಹಕಾರ, ಸಲಹೆ ಹಾಗೂ ಸೂಕ್ತ ಮಾರ್ಗದರ್ಶನ ಅತ್ಯಂತ ಅವಶ್ಯಕ. ಧನಾತ್ಮಕ ಬೆಂಬಲ ನೀಡುವುದರಿಂದ ಕೌಶಲ್ಯಯುತ ಮಹಿಳೆಯರು ಯಶಸ್ವಿಯಾಗಿ ಮುನ್ನಡೆಯುತ್ತಾರೆ ಎಂದು ಹೇಳಿದರು.

JCI Shimoga ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಆಗಬೇಕು. ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಇತರರಿಗೂ ಸ್ಫೂರ್ತಿ, ಪ್ರೇರಣೆ ಸಿಗುತ್ತದೆ. ಸಾರ್ವಜನಿಕ ಕ್ಷೇತ್ರದಲ್ಲಿ ಹೆಚ್ಚು ಸೇವಾ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುತ್ತದೆ. ಎಲ್ಲರ ಸಹಕಾರ ಹಾಗೂ ಬೆಂಬಲ ಅಗತ್ಯ ಎಂದು ತಿಳಿಸಿದರು.

ಮಹಿಳಾ ಜೆಸಿ ಅಧ್ಯಕ್ಷೆ ಡಾ. ಅಕಿಲಾ ಮಾತನಾಡಿ, ಮಹಿಳೆಯರಿಗೆ ಸೂಕ್ತ ಸ್ಥಾನಮಾನಗಳ ಜತೆಯಲ್ಲಿ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು. ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಕಾರ್ಯದರ್ಶಿ ಡಾ. ಲಲಿತಾ ಭರತ್, ಸ್ವಪ್ನಾ, ಶ್ವೇತಾ, ಡಾ. ತೇಜಸ್ವಿನಿ, ಹರ್ಷ, ಶೇಷಗಿರಿ ಕೋಟ್ಯಾನ್, ಮಲ್ಲಿಕಾರ್ಜುನ್, ಜಿ.ವಿಜಯ್‌ಕುಮಾರ್, ಸಂತೋಷ್, ಸತೀಶ್‌ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Rain Updates ಬೇಸಿಗೆ ಬಂತು ಆದರೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯೂ ಇದೆ

0

Rain Updates ಬೇಸಿಗೆ ಶುರುವಾಯಿತು. ಕಳೆದ ಎರಡು ದಿನಗಳಿಂದ ಬಿಸಿಲಿನ ದಗೆ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಹವಮಾನ ಇಲಾಖೆ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣದಿಂದ ಕರ್ನಾಟಕದ ಅನೇಕ ಭಾಗಗಳಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

Rain Updates  ಮಾರ್ಚ್ 14 ರಿಂದ ಮಾರ್ಚ್ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಮಳೆ ಯಾಗಲಿದೆ. ಮಾರ್ಚ್ 16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ ಆಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಈ ಭಾಗಗಳಲ್ಲಿ ಹಗುರವಾದ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

BJP Yuva Morcha ಮಾರ್ಚ್15 ರಂದು ಕುಂಸಿಯಲ್ಲಿ ಮಹಿಳಾ ಸಮಾವೇಶ

0

BJP Yuva Morcha ಶಿವಮೊಗ್ಗ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಮಾರ್ಚ್ 15ರಂದು ಸಂಜೆ 4 ಗಂಟೆಗೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಕುಂಸಿ ಗ್ರಾಮದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಮಹಿಳಾ ಸಮಾವೇಶ ನಡೆಯಲಿದೆ.

BJP Yuva Morcha ಈ ಸಮಾವೇಶದಲ್ಲಿ ಜಿಲ್ಲೆಯ 10 ಮಂಡಲಗಳ ಮಹಿಳಾ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಬಿ .ವೈ ರಾಘವೇಂದ್ರ, ಶಾಸಕರಾದ ಕೆ ಎಸ್ ಈಶ್ವರಪ್ಪ, ಟಿ.ಡಿ ಮೇಘರಾಜ್, ಡಿಎಸ್ ಅರುಣ್, ಎಸ್ ರುದ್ರೇಗೌಡ, ಆಯನೂರು ಮಂಜುನಾಥ್, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಇನ್ನು ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

BJP Yuva Morcha ಸೊರಬದಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಸಮಾವೇಶ

0

BJP Yuva Morcha  ದಿನಾಂಕ 12.03.23 ರ ಭಾನುವಾರ ಸೊರಬ ಬಿಜೆಪಿ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಸಮಾವೇಶವನ್ನು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ನೆ.ಲ. ನರೇಂದ್ರ ಬಾಬು ಅವರು ಉದ್ಘಾಟಿಸಿ ಮಾತನಾಡಿದರು.

ಸಮಾವೇಶದ ಸಮಾರೋಪ ಭಾಷಣವನ್ನು ಸೊರಬ ಶಾಸಕರಾದ ಕುಮಾರ್ ಬಂಗಾರಪ್ಪನವರು ಮಾತನಾಡಿದರು.

ಸೊರಬ ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ ಅವರು ಸಮಾರೋಪ ಭಾಷಣ ಮಾಡಿದರು.
ಸಮಾವೇಶದ ಅಧ್ಯಕ್ಷತೆ ಯನ್ನು ಜಿಲ್ಲಾ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಮಾಲತೇಶ್ ಸಿ ಎಚ್ ವಹಿಸಿದರು.

BJP Yuva Morcha  ಸಮಾವೇಶವನ್ನು ಉದ್ದೇಶಿಸಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ ಮೇಘರಾಜ್ ರವರು ರಾಜ್ಯ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಜು ತಲ್ಲೂರು, ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷರಾದ ಅಶೋಕ್ ಮೂರ್ತಿ, ಸೊರಬ ಮಂಡಲ ಅಧ್ಯಕ್ಷರಾದ ಪ್ರಕಾಶ್ ತಳಕಲ್ಕೊಪ್ಪ ರವರು ಮಾತನಾಡಿದರು.

ಈ ಸಂದರ್ಭದಲ್ಲಿ ವಿಭಾಗ ಸಹ ಸಂಘಟನಾ ಕಾರ್ಯದರ್ಶಿ ಎ ಎನ್ ನಟರಾಜ್, ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿಗಳಾದ ಬಿ ಕೆ ಶ್ರೀನಾಥ್, ಜಿಲ್ಲಾ ಕಾರ್ಯದರ್ಶಿ ಹೃಷಿಕೇಶ್ ಪೈ ಹಾಗೂ ಒಬಿಸಿ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Sri Adichunchanagiri Samudaya Bhavan ಪುಸ್ತಕದ ಓದು ಭವಿಷ್ಯ ರೂಪಿಸುತ್ತದೆ- ಅಕ್ಷಯ ಗೋಖಲೆ

0

Sri Adichunchanagiri Samudaya Bhavan ಶಿವಮೊಗ್ಗ : ಪ್ರತಿಯೊಬ್ಬ ವಿದ್ಯಾರ್ಥಿ ಜೀವನದಲ್ಲಿ ಪರೀಕ್ಷೆಗಳನ್ನು ಗೆದ್ದರೆ ಸಾಧನೆಯ ಶಿಖರವನ್ನು ಏರಬಹುದು ಎಂದು ಖ್ಯಾತ ವಾಗ್ಮೀ ಅಕ್ಷಯ ಗೋಖಲೆ ಹೇಳಿದರು.

ಶಿವಮೊಗ್ಗನಗರದ ಆದಿಚುಂಚನಗಿರಿ ಸಂಯುಕ್ತ ಆಂಗ್ಲಮಾಧ್ಯಮ ಪ್ರೌಢಶಾಲೆಯ ವತಿಯಿಂದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕಲಿಕಾ ಕೌಶಲ್ಯ ಕಾರ‍್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಪರೀಕ್ಷೆಗಳನ್ನು ಎದುರಿಸುವುದೇ ಒಂದು ಕೌಶಲ್ಯ ಎಂದರು.

ಬದುಕನ್ನು ನೋಡುವ ರೀತಿ ಬಹಳ ಮುಖ್ಯವಾಗಿರುತ್ತದೆ. ನಮ್ಮ ಆಲೋಚನಾ ಶಕ್ತಿ ಬದುಕನ್ನು ರೂಪಿಸುತ್ತದೆ. ನಮ್ಮ ಆಲೋಚನೆ ಉತ್ತಮ ರೀತಿಯಲ್ಲಿ ಇದ್ದರೆ ನಮ್ಮ ಬದುಕು ಸಹ ಅದೇ ದಾರಿಯಲ್ಲಿ ಸಾಗುತ್ತದೆ. ನಮ್ಮ ಯೋಚನೆ ಹಾಗೂ ಜೀವನದ ಮಾರ್ಗ ದುಮಾರ್ಗದಲ್ಲಿ ಸಾಗಿದರೆ ಬದುಕು ದುಸ್ಥರವಾಗುತ್ತದೆ ಎಂದು ಒಂದು ಕಥೆಯ ಮೂಲಕ ವಿದ್ಯಾರ್ಥಿಗಳಿಗೆ ಮನ ಮುಟ್ಟುವ ರೀತಿಯಲ್ಲಿ ಹೇಳಿದರು.

ಮೊಬೈಲ್ ಬಳಕೆ ಅತಿಯಾದರೆ ಅದು ನಮ್ಮ ಜೀವನವನ್ನೇ ಹಾಳು ಮಾಡುತ್ತದೆ. ಅದನ್ನು ಹಿತಮಿತವಾಗಿ ಬಳಸಿದರೆ ನಮ್ಮ ಜೀವನಕ್ಕೆ ಸಹಾಯ ಮಾಡುತ್ತದೆ. ಆದರೆ ವಿದ್ಯಾರ್ಥಿಗಳಾದ ನಿಮಗೆ ಅದರಲ್ಲಿ ಕೆಟ್ಟದ್ದನ್ನು ಬಳಸಿಕೊಳ್ಳುವ ಮನಸ್ಥಿತಿಯೇ ಹೆಚ್ಚಾಗಿರುತ್ತದೆ. ಆದ್ದರಿಂದ ಪರೀಕ್ಷೆ ಮುಗಿಯುವ ತನಕ ಮೊಬೈಲನ್ನು ಮುಟ್ಟದೇ ಪುಸ್ತಕದ ಮೊರೆ ಹೋಗಿ ಅದು ನಿಮ್ಮ ಭವಿಷ್ಯವನ್ನು ರೂಪಿಸುತ್ತದೆ ಎಂದ ಅವರು, ಪರೀಕ್ಷೆಗೆ ಕೆಲವೇ ದಿನಗಳು ಇರುವ ಈ ಸಂದರ್ಭದಲ್ಲಿ ಪ್ರತಿ ನಿಮಿಷವನ್ನೂ ಕೂಡ ವ್ಯಯಮಾಡದೇ ಸದುಪಯೋಗ ಪಡಿಸಿಕೊಂಡು ಅಭ್ಯಾಸ ಮಾಡಿದ್ದೇ ಆದರೆ ಪರೀಕ್ಷೆಯಲ್ಲಿ ನಿಮ್ಮ ನಿರೀಕ್ಷೆಯ ಗೋಲನ್ನು ಮುಟ್ಟಲು ಸಾಧ್ಯವಾಗುತ್ತದೆ ಎಂದರು.

ನಿಮ್ಮ ತಂದೆ ತಾಯಿಗಳು ಶ್ರಮಪಟ್ಟು ಬಿಜಿಎಸ್‌ನಂತಹ ಹೆಸರಾಂತ ವಿದ್ಯಾ ಸಂಸ್ಥೆಯಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಬೇಕೆಂದು ನಿಮ್ಮನ್ನು ಇಲ್ಲಿಗೆ ಸೇರಿಸಿದ್ದಾರೆ. ಅವರು ಎಂದೂ ಸಹ ತಾವುಪಟ್ಟ ಶ್ರಮವನ್ನು ನಿಮ್ಮ ಬಳಿ ಹೇಳಿಕೊಳ್ಳುವುದಿಲ್ಲ. ನನ್ನ ಮಗ ಅಥವಾ ಮಗಳು ಉತ್ತಮ ಶಿಕ್ಷಣವನ್ನು ಪಡೆದು ಈ ಸಮಾಜದ ಆಸ್ತಿಯಾಗಬೇಕೆಂದು ಬಯಸುತ್ತಾರೆ ಹೊರತು. ನಮ್ಮನ್ನು ಸಲಹುವಂತೆ ಎಂದೂ ಬಯಸುವುದಿಲ್ಲ. ಇದರ ಅರಿವು ಮಕ್ಕಳಾದ ನಿಮಗೆ ಇರುವುದಿಲ್ಲ. ಆದ್ದರಿಂದ ನೀವುಗಳು ನಿಮ್ಮ ತಂದೆ ತಾಯಿಗಳ ಶ್ರಮವನ್ನು ಅರಿತು, ಶಿಕ್ಷಕರ ಪ್ರೋತ್ಸಾಹವನ್ನು ಪಡೆದು ಪರೀಕ್ಷೆಗೆ ತಯಾರಿ ನಡೆಸಿ ಎಂದು ಕಿವಿ ಮಾತು ಹೇಳಿದರು.

Sri Adichunchanagiri Samudaya Bhavan ಮತ್ತೋರ್ವ ಸಂಪನ್ಮೂಲ ವ್ಯಕ್ತಿಗಳಾಗಿದ್ದ ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲೆ ಡಾ. ಅಮುದಾ ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಆರಂಭದಿಂದಲೇ ಅಭ್ಯಾಸದಲ್ಲಿ ನಿರತರಾಗಬೇಕು. ಅಂದಿನ ಪಾಠವನ್ನು ಅಂದೇ ಕಲಿಯಬೇಕು. ಆಗ ಪರೀಕ್ಷಾ ಸಮಯದಲ್ಲಿ ಒತ್ತಡವಾಗುವುದಿಲ್ಲ ಎಂದು ಹೇಳಿದರು.

ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಶಿಕ್ಷಣ ಸಂಸ್ಥೆಯ ನಿರ್ದೇಶಕ ಡಿ.ವಿ. ಸತೀಶ್, ಪ್ರಾಂಶುಪಾಲೆ ಎಸ್.ಆರ್.ಹೇಮಾ, ಗುರುಪುರ ಬಿಜಿಎಸ್ ಶಾಲಾ-ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್.ಹೆಚ್. ವ್ಯವಸ್ಥಾಪಕರಾದ ಅಮಿಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Shivamogga City Corporation ಲೋಕಾಯುಕ್ತ ಅಧಿಕಾರಿಗಳಿಂದ ಮಾರ್ಚ್15 ರಂದು ಶಿವಮೊಗ್ಗದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

0

Shivamogga City Corporation  ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಇಲಾಖೆಯಿಂದ ಮಾ. 15 ರಂದು ಬೆ.11 ರಿಂದ ಮ.1 ರವರೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆ ಬಗ್ಗೆ ಅಹವಾಲು ಮತ್ತು ಅರ್ಜಿ ಸ್ವೀಕಾರ ಸಭೆಯನ್ನು ಆಯೋಜಿಸಲಾಗಿದೆ.

Shivamogga City Corporation  ಈ ಸಭೆಗೆ ಸಾರ್ವಜನಿಕರು ಹಾಜರಾಗಿ ಸರ್ಕಾರದ ಯೋಜನೆಗಳಾದ ವೃದ್ಯಾಪ್ಯ ವೇತನ, ಬಿ.ಪಿ.ಎಲ್., ಎ.ಪಿ.ಎಲ್. ಕಾರ್ಡ್ಗಳು, ಪಹಣಿ, ಪೋಡಿ, ಖಾತೆ ಬದಲಾವಣೆ, ಸರ್ಕಾರಿ ಕಾಮಗಾರಿಗಳು, ಗ್ರಾಮ ಪಂಚಾಯಿತಿಯ ಯೋಜನೆಗಳು, ಕಂದಾಯ ಇಲಾಖೆ, ಸಾರಿಗೆ ಇಲಾಖೆ, ನೊಂದಣಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ, ಆಸ್ಪತ್ರೆಗಳು, ಜಿಲ್ಲಾ ಪಂಚಾಯತ್ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳು, ಅರೆ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಸಂಘ ಸಂಸ್ಥೆಗಳಲ್ಲಿ ಬರುವ ಎಲ್ಲಾ ಕರ್ತವ್ಯಗಳು ಮತ್ತು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಂಬಂಧಿಸಿದ ಸರ್ಕಾರಿ ಇಲಾಖೆಗಳು ನಿರ್ಲಕ್ಷ್ಯ ಧೋರಣೆ, ವಿಳಂಬ, ಅನುದಾನ ದುರ್ಬಳಕೆ ಮಾಡಿಕೊಂಡಿರುವುದು ಕಂಡು ಬಂದಲ್ಲಿ ಲೋಕಾಯುಕ್ತ ಠಾಣೆಗೆ ಅಥವಾ ತಾಲೂಕು ಭೇಟಿಯ ಸಮಯದಲ್ಲಿ ಖುದ್ದಾಗಿ ಫಾರಂ 1 ಮತ್ತು 2 ನ್ನು ಪಡೆದು ಭರ್ತಿ ಮಾಡಿ ನೋಟರಿಯವರಲ್ಲಿ ಪ್ರಮಾಣೀಕರಿಸಿ ಸೂಕ್ತ ದಾಖಲೆಗಳ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಿದಲ್ಲಿ ಅಂತಹ ಸರ್ಕಾರಿ ನೌಕರರ ವಿರುದ್ಧ ಕ್ರಮಕ್ಕಾಗಿ ಮತ್ತು ವಿಚಾರಣೆಗಾಗಿ ಲೋಕಾಯುಕ್ತರಿಗೆ ಕಳುಹಿಸಿಕೊಡಲಾಗುತ್ತದೆ ಎಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.