Tuesday, April 7, 2026
Tuesday, April 7, 2026
Home Blog Page 1289

Voter Awareness ಶಿವಮೊಗ್ಗದಲ್ಲಿ ತರಬೇತಿ ಕಾರ್ಯಾಗಾರ ಮತ್ತು ಮತದಾರಿಗೆ ಜಾಗೃತಿ ಕಾರ್ಯಕ್ರಮ

0

Voter Awareness ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಾಗಾರ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸಪ್ತಾಹ ಕಾರ್ಯಕ್ರಮ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮ ‘ಸ್ವೀಪ್ – 2023’ ನ್ನು ಮಾ.07 ರಂದು ಬೆಳಗ್ಗೆ 10 ಗಂಟೆಗೆ ಆಲ್ಕೋಳದಲ್ಲಿನ ಚೈತನ್ಯ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜಣ್ಣ ಸಂಕಣ್ಣನವರ್ ನೆರೆವೇರಿಸುವರು.

ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಜಿ.ಜಿ.ಸುರೇಶ್ ವಹಿಸುವರು.

Voter Awareness ಘನ ಉಪಸ್ಥಿತಿಯನ್ನು ಎಸ್‍ಎಂಎಸ್‍ಎಸ್ ನ ನಿರ್ದೇಶಕರಾದ ಫಾದರ್ ಕ್ಲಿಫರ್ಡ್ ರೋಷನ್ ಪಿಂಟೊ ವಹಿಸುವರು. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಜಿಲ್ಲಾ ನಿರೂಪಣಾಧಿಕಾರಿ ಚಂದ್ರಪ್ಪ ಎನ್,. ಸಂಪನ್ಮೂಲ ವ್ಯಕ್ತಿಗಳಾಗಿ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ನ್ಯಾಸ್ಸಿ ಲವೀನಾ ಪಿಂಟೊ ವಹಿಸುವರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Ramzan Festival ರಂಜಾನ್ ಮಾಸದಲ್ಲಿ ಆಝಾನ್ ಗೆ ಅನುಮತಿ ಕೋರಿ ಸಿ.ಎನ್ .ಅಕ್ಮಲ್ ಟ್ರಸ್ಟ್ ಮನವಿ ಸಲ್ಲಿಕೆ

0

Ramzan Festival ಚಿಕ್ಕಮಗಳೂರು, ಮುಸಲ್ಮಾನ್ ಬಾಂಧವರಿಗೆ ಒಂದು ತಿಂಗಳ ಕಾಲ ನಡೆಯುವ ಪವಿತ್ರ ರಂಜಾನ್ ಮಾಸದ ಸಮಯದಲ್ಲಿ ಧ್ವನಿವರ್ಧಕದ ಮೂಲಕ ಆಝಾನ್‌ಗೆ ಅವಕಾಶ ಮಾಡಿಕೊಡಬೇಕು ಎಂದು ಸಿ.ಎನ್.ಅಕ್ಮಲ್ ಎಜುಕೇಷನ್ ಟ್ರಸ್ಟ್ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿಗೆ ಶನಿವಾರ ಮನವಿ ಸಲ್ಲಿಸಿದ ಸಮುದಾಯದ ಮುಖಂಡರುಗಳು ರಂಜಾನ್ ಸಮಯದಲ್ಲಿ ಧ್ವನಿವರ್ಧಕದ ಮೂಲಕ ಆಝಾನ್‌ಗೆ ಅವಕಾಶ ಮಾಡಿಕೊಟ್ಟು ಅನುಕೂಲ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಟ್ರಸ್ಟ್ನ ಅಧ್ಯಕ್ಷ ಸಿ.ಎನ್.ಅಕ್ಮಲ್ ಮುಸಲ್ಮಾನ್ ಬಾಂಧವರಿಗೆ ರಂಜಾನ್ ಬಹಳ ಪವಿತ್ರ ಮಾಸವಾಗಿರುತ್ತದೆ. ಶಾಂತಿ, ಸಹಬಾಳ್ವೆ, ದಾನ, ಧರ್ಮ ಉಪವಾಸದೊಂದಿಗೆ ಕಟ್ಟುನಿಟ್ಟಾಗಿ ಆಝಾನ್ ಕೂಡ ರಂಜಾನ್ ಆಚರಣೆಯ ಒಂದು ಭಾಗವಾಗಿರುತ್ತದೆ ಎಂದರು.

ಇಂತಹ ಸಂದರ್ಭದಲ್ಲಿ ರಂಜಾನ್ ಉಪವಾಸ ನಡೆಯುವ ಒಂದು ತಿಂಗಳ ಬೆಳಗಿನ ಜಾವ 5 ರಿಂದ 5.30 ರೊಳಗೆ ಧ್ವನಿವರ್ಧಕದ ಮೂಲಕ ಆಝಾನ್ ಅವಕಾಶ ಮಾಡಿಕೊಟ್ಟು ಪವಿತ್ರ ರಂಜಾನ್ ಆಚರಿಸಲು ಮುಸ್ಲೀಂ ಬಾಂಧವರಿಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

Ramzan Festival ಮಾಸದ ವಿಶೇಷ ಸಂದರ್ಭಗಳಲ್ಲಿ ಧಾರ್ಮಿಕ ಕಾರ್ಯಕ್ರಮ, ಕ್ರೀಡಾಕೂಟಗಳಿಗೆ ರಾತ್ರಿ ಹಾಗೂ ಮುಂಜಾನೆ ವೇಳೆಯಲ್ಲಿ ಧ್ವನಿವರ್ಧಕವನ್ನು ಬಳಸಲು ಅವಕಶ್ಯತೆಯಿರುವ ಹಿನ್ನೆಲೆಯಲ್ಲಿ ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಮುದಾಯದ ಮುಖಂಡರುಗಳಾದ ಕೆಂಪನಹಳ್ಳಿ ರಸೂಲ್‌ಖಾನ್, ಇರ್ಫಾನ್, ಸೈಯದ್ ಜಬಿ, ಅಜ್ಮಲ್ ಬೇಗ್ ಮತ್ತಿತರರು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Sports Competition 6 ರಿಂದ 8 ವರ್ಷದ ಬುದ್ಧಿಮಾಂದ್ಯ ಮಕ್ಕಳಿಗೆ ಕ್ರೀಡಾಸ್ಪರ್ಧೆ

0

Sports Competition ಶಿವಮೊಗ್ಗ, ವಿದ್ಯಾನಗರದ ಆಶಾಕಿರಣ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಮಧ್ಯಮದರ್ಜೆಯ ಬುದ್ಧಿಮಾಂದ್ಯ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಉಚಿತ ತರಬೇತಿ ಹಾಗೂ ಪುನಶ್ಚೇತನ ಕಾರ್ಯಕ್ರಮವನ್ನು ಕಳೆದ 42 ವರ್ಷಗಳಿಂದಲೂ ರೋಟರಿ 75ನೇ ವಾರ್ಷಿಕ ದತ್ತಿನಿಧಿ, ರೋಟರಿ ಕ್ಲಬ್ ಶಿವಮೊಗ್ಗ ಇವರ ಪ್ರಾಯೋಜಕತ್ವದಲ್ಲಿ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆ ಅನುದಾನದ ಸಹಾಯದೊಂದಿಗೆ ಅರ್ಥಪೂರ್ಣವಾಗಿ ನಡೆಸಿಕೊಂಡು ಬರಲಾಗುತ್ತಿದೆ.

Sports Competition ಇದೀಗ ಅಂದರೆ ಮಾ. 7ರಂದು ಆಶಾಕಿರಣ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ 6ರಿಂದ 18 ವರ್ಷದೊಳಗಿನ ಬುದ್ದಿಮಾಂದ್ಯ ಮಕ್ಕಳಿಗೆ ಕ್ರೀಡೆಗಳನ್ನು ಏರ್ಪಡಿಸಿದೆ.

ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಉಚಿತ ಊಟ ಉಪಾಹಾರದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆಸಕ್ತರು ಮಾರ್ಚ್ 6ರೊಳಗಾಗಿ ಹೆಸರು ನೀಡಬೇಕು. ಹೆಚ್ಚಿನ ವಿವರಗಳಿಗೆ ಮಂಜುನಾಥ್,9844055267 , ಎಂ. ಚಂದ್ರಯ್ಯ 9945797120 ಸಂಪರ್ಕಿಸಲು ಸಂಸ್ಥೆಯ ಛೇರ್ಮನ್ ಡಾ. ರಜನಿ ಪೈ ಅವರು ಕೋರಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Department of Military Welfare ಜೀವಂತ ಪ್ರಮಾಣ ಪತ್ರ ನೀಡಲು ಪಿಂಚಣಿದಾರರಿಗೆ ಸೈನಿಕ ಕಲ್ಯಾಣ ಇಲಾಖೆ ಪ್ರಕಟಣೆ

0

Department of Military Welfare ಚಿಕ್ಕಮಗಳೂರು, ನಗರದ ಹೃದಯ ಭಾಗದಲ್ಲಿರುವ ಬಸವನಹಳ್ಳಿಕೆರೆ ಕಾಮಗಾರಿಯಲ್ಲಿ ನಡೆದಿರುವ ಭಾರೀ ಭ್ರಷ್ಟಚಾರವನ್ನು ವಿರೋಧಿಸಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರುಗಳು ತಾಲ್ಲೂಕು ಕಚೇರಿ ಆವರಣದಿಂದ ಮೆರವಣಿಗೆಯಲ್ಲಿ ಸಾಗಿ ಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್‌ಗೊಳಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ರೈತರ ಬದುಕಿಗೆ ಕೆರೆ ನೀರು ಕೊಡುವ ಮೂಲವಾದರೆ, ಕ್ಷೇತ್ರದ ಶಾಸಕರು ಅದೇ ಕೆರೆಯನ್ನು ತಮ್ಮ ವೈಯಕ್ತಿಕ ಬದುಕಿನ ಆಧಾಯ ಮಾಡಿಕೊಂಡು ಭಾರೀ ಭ್ರಷ್ಟಚಾರದಲ್ಲಿ ತೊಡಗಿರುವ ಜೊತೆಗೆ ಕಳಪೆ ಕಾಮಗಾರಿ ನಡೆಸಿ ಕೋಟಿಗಟ್ಟಲೇ ಹಣವನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು.

ಕ್ಷೇತ್ರದ ನಾಗರೀಕರು ಸತತವಾಗಿ ಇಪತ್ತು ವರ್ಷಗಳ ಕಾಲ ಶಾಸಕರಿಗೆ ಅಧಿಕಾರ ನೀಡಿದರೂ ಸಹ ಪ್ರತಿಯೊಂದು ವಿಚಾರದಲ್ಲಿ ತಮ್ಮ ವೈಯಕ್ತಿಕ ಆದಾಯ ಮಾಡಿಕೊಂಡು ಲಾಭ ಗಳಿಸುವ ಜೊತೆಗೆ ಕಳಪೆ ಕಾಮಗಾರಿಯ ಸರದಾರರರಾಗಿ ಸಿ.ಟಿ.ರವಿ ದಾಪುಗಾಲು ಇಟ್ಟು ಸಾರ್ವಜನಿಕರ ತೆರಿಗೆ ಹಣವನ್ನು ಬೇಕಾಬಿಟ್ಟಿ ಯಾಗಿ ಪೋಲು ಮಾಡುತ್ತಿದ್ದಾರೆ ಎಂದು ದೂರಿದರು.

ಕೆರೆ ಕಾಮಗಾರಿ ವಿಚಾರದಲ್ಲಿ ಜಿಲ್ಲಾಡಳಿತವು ಶಾಸಕರ ಕೈಗೊಂಬೆಯಾಗಿ ವರ್ತಿಸುತ್ತಿದೆ. ಕಾಮಗಾರಿಗಳಲ್ಲಿ ಯಾವುದೇ ಕಡಿವಾಣ ಹಾಕದಿರುವುದು ಗಮನಿಸಿದರೆ ಮೇಲ್ನೋಟಕ್ಕೆ ಶಾಮೀಲಾಗಿರುವುದು ಕಂಡುಬರುತ್ತಿದೆ. ಶಾಸಕರು ಕ್ಷೇತ್ರದಲ್ಲಿ ಅಧಿಕಾರ ವಹಿಸಿಕೊಂಡು ನಂತರ ನಿರ್ಲಕ್ಷ್ಯ ಧೋರಣೆ ಹಾಗೂ ಬೇಜವಾಬ್ದಾರಿ ಕಾರ್ಯ ನಿರ್ವಹಿಸಿ ಸಾರ್ವಜನಿಕರ ಹಣವನ್ನು ಸ್ವಂತ ಆದಾಯವನ್ನಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಅರ್ಧದಷ್ಟು ಮುಚ್ಚಿರುವ ಬಸವನಹಳ್ಳಿ ಕೆರೆಯ ಕಾಮಗಾರಿಯ ವಿವರವನ್ನು ಜಿಲ್ಲಾಡಳಿತ ನಾಮಫಲಕದ ಮೂಲಕ ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು. ಈ ಕಳಪೆ ಕಾಮಗಾರಿಯ ಹಿಂದೆ ಯಾವ ಯಾವ ಅಧಿಕಾ ರಿಗಳು ಹಾಗೂ ಗುತ್ತಿಗೆದಾರರ ಕೈವಾಡವಿದೆಯೋ ಅವರ ವಿರುದ್ಧ ಸೂಕ್ತ ಕಾನೂನು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ ಮಾತನಾಡಿ ವಿಧಾನಸೌಧದಲ್ಲೂ ಕೂಡಾ ಸಿ.ಟಿ.ರವಿ ಅವರ ಕಳಪೆ ಕಾಮಗಾರಿ, ಭ್ರಷ್ಟಾಚಾರ, ಕೋಟಿ ರವಿ ಎಂದು ಚರ್ಚೆಗಳಾಗುತ್ತಿವೆ. ಜಿಲ್ಲೆಯ ಎಲ್ಲಾ ಗುತ್ತಿಗೆಯನ್ನು ತಮ್ಮ ಭಾವನ ಮೂಲಕ ಮಾಡಿಕೊಳ್ಳುತ್ತಿರುವುದರಿಂದ ಸಣ್ಣಪುಟ್ಟ ಗುತ್ತಿಗೆದಾರರು ಆತ್ಮಹತ್ಯೆ ಮಾಡಿ ಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ದೂರಿದರು.

ಕೆರೆಯನ್ನು ಮುಚ್ಚದಂತೆ ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸಹ ಶಾಸಕರು ಆ ಕಾರ್ಯದಲ್ಲಿ ನಿರತರಾಗಿದ್ದು, ಇವೆಲ್ಲವುಗಳನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ಸಿ.ಟಿ.ರವಿ ಜಿಲ್ಲೆಯನ್ನು ಮಾರಾಟ ಮಾಡುವುದರಲ್ಲಿ ಸಂಶಯವಿಲ್ಲ. ಇವುಗಳನ್ನು ಜನತೆ ಗಮನದಲ್ಲಿಟ್ಟುಕೊಂಡು ಮುಂದೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗುರುತಿಸಿ ಆಯ್ಕೆ ಮಾಡುವುದರೊಂದಿಗೆ ಭ್ರಷ್ಟಚಾರಕ್ಕೆ ಮುಕ್ತಾಯ ಹಾಡಬೇಕು ಎಂದು ಹೇಳಿದರು.

ಎಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್, ಮಾತನಾಡಿ ಶಾಸಕ ಸಿ.ಟಿ.ರವಿ ಏಕಾಪಾತ್ರಾಭಿನಯವನ್ನು ಹೆಚ್ಚು ಅಭ್ಯಾಸ ಮಾಡಿಕೊಂಡಿದ್ದಾರೆ. ಕೆರೆಯ ಕಾಮಗಾರಿ ವಿಚಾರದಲ್ಲಿ ಗುತ್ತಿಗೆದಾರರಾಗಿ ಅವರ ಸಂಬಂಧಿಕರನ್ನು ಶಾಸಕರೇ ಆಯ್ಕೆ ಮಾಡುತ್ತಾರೆ. ನಂತರ ತೆರಳಿ ಪರಿಶೀಲನೆ ನಡೆಸಿ ಕಳಪೆಯಾಗಿದ್ದರೆ ಸಾರ್ವಜನಿಕರೆದುರು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡು ನಂತರ ಸಂಧಾನಕ್ಕೂ ಶಾಸಕರು ಮುಂದಾಗುತ್ತಾರೆ ಎಂದು ಟೀಕಿಸಿದರು.

ಕೆಪಿಸಿಸಿ ರಾಜ್ಯ ವಕ್ತಾರ ಹೆಚ್.ಹೆಚ್.ದೇವರಾಜ್ ಮಾತನಾಡಿ ಕೆರೆಯ ಮಧ್ಯದಲ್ಲಿ ವಿವೇಕಾನಂದರ ಪ್ರತಿಮೆ ಸ್ಥಾಪಿಸಿ ಐಲ್ಯಾಂಡ್ ಮಾಡುವುದಾಗಿ ಹೇಳಿದ ಶಾಸಕರು ಹೈಜಾಕ್ ಮಾಡಿದ್ದಾರೆ. ಕೆರೆಯ ಅಭಿವೃದ್ದಿ ವಿಚಾರದಲ್ಲಿ ಕೋಟಿಗಟ್ಟಲೇ ಹಣವನ್ನು ಸರ್ಕಾರದಿಂದ ಮಂಜೂರು ಮಾಡಿಕೊಂಡು ಮನಸ್ಸಿಗೆ ಬಂದಂತೆ ಖರ್ಚು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೂಡಲೇ ಮುಖ್ಯಮಂತ್ರಿಗಳು ಹಾಗೂ ಉಸ್ತುವಾರಿ ಸಚಿವರು ಜಿಲ್ಲೆಯ ಬಗ್ಗೆ ಅಪಾರ ಗೌರವ ಹೊಂದಿದ್ದರೆ ಕಾಮಗಾರಿ ವಿಚಾರವನ್ನು ಕೂಡಲೇ ತನಿಖೆಗೊಳಪಡಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Department of Military Welfare ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ ಕೆರೆಯ ಅಭಿವೃದ್ದಿಗಾಗಿ ಸರ್ಕಾರದಿಂದ ಸುಮಾರು 30 ಕೋಟಿ ಅನುದಾನ ಮಂಜೂರು ಮಾಡಿಕೊಂಡಿದ್ದು, ಸ್ಥಳೀಯರಿಂದ ಕಾಮಗಾರಿ ಕೆಲಸ ಮಾಡಿಸಿ ಕೊಂಡರೆ ತಮ್ಮ ಬಂಡವಾಳ ತಿಳಿಯುತ್ತದೆಯೋ ಎಂಬ ಆತಂಕದಿಂದ ಇತರೆ ಜಿಲ್ಲೆಯವರಿಂದ ಜನರನ್ನು ಕರೆಸಿ ಕಾಮಗಾರಿ ನಡೆಸಲು ಮುಂದಾಗುತ್ತಿದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಶ್ರೀನಿವಾಸ್, ಪಕ್ಷದ ಮಾಜಿ ಅಧ್ಯಕ್ಷ ಡಾ. ಡಿ.ಎಲ್.ವಿಜಯ್‌ಕುಮಾರ್, ಮುಖಂಡರುಗಳಾದ ಎ.ಎನ್.ಮಹೇಶ್, ಎಂ.ಸಿ.ಶಿವಾನಂದಸ್ವಾಮಿ, ರೇಖಾ ಹುಲಿಯಪ್ಪಗೌಡ, ಸಿ.ಎನ್.ಅಕ್ಮಲ್, ಹಿರೇಮಗಳೂರು ಪುಟ್ಟಸ್ವಾಮಿ, ರವೀಶ್ ಬಸಪ್ಪ, ಹಿರೇಮಗಳೂರು ರಾಮಚಂದ್ರ, ಉಪ್ಪಳ್ಳಿ ಅನ್ಸರ್, ನಯಾಜ್, ನೂರ್ ಅಹ್ಮದ್, ನಾಗಭೂಷಣ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Shivamogga ಶಿವಮೊಗ್ಗದಲ್ಲಿ ಮಾರ್ಚ್ 7 ರಂದು ಯೋಗಿ ನಾರೇಯಣ ಜಯಂತಿ

0

Shivamogga ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಬಲಿಜ ಸೇವಾ ಸಂಘ ಶಿವಮೊಗ್ಗ ಇವರ ಸಂಯಕ್ತಾಶ್ರಯದಲ್ಲಿ ಮಾ.07 ರ ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿಯನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಇವರು ನೆರವೇರಿಸುವರು. ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಕನ್ನಡ ಮತ್ತು ಸಂಸ್ಕೃತಿ. ಇಲಾಖೆ ಹಾಗೂ ಇಂಧನ ಸಚಿವರಾದ ವಿ.ಸುನಿಲ್ ಕುಮಾರ್, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಇವರ ಘನ ಉಪಸ್ಥಿತಿ ಇರಲಿದೆ.

Shivamogga ಶಾಸಕರಾದ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಬಲಿಜ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಭದ್ರಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಪ್ರೊ.ಕುಮಾರ ಎನ್ ಇವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Kuvempu University ಕಾಡ್ಗಿಚ್ಚು ತಪ್ಪಿಸಲು ಅರಣ್ಯ ಇಲಾಖೆಯೊಂದಿಗೆ ಸಾರ್ವಜನಿಕರೂ ಸಹಕರಿಸಬೇಕು- ಡಾ.ನಾಗರಾಜ್ ಪರಿಸರ

0

Kuvempu University  ಕುವೆ೦ಪು ವಿಶ್ವವಿದ್ಯಾಲಯ ರಾಷ್ಟೀಯ  ಸೇವಾ ಯೋಜನೆ ವಿಭಾಗ, ಹಿ೦ದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು,, ಜೆ.ಸಿ.ಐ. ಶಿವಮೊಗ್ಗ ವಿವೇಕ್ ಹಾಗೂ ಪರಿಸರ(ರಿ), ಶಿವಮೊಗ್ಗ ಇವರುಗಳ ಸಹಯೋಗದಲ್ಲಿ “ವಿಶ್ವ ವನ್ಯ ಜೀವಿ ದಿನಾಚರಣೆ” ಶಿವಮೊಗ್ಗದ ಹಿ೦ದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಎ೦.ಆರ್.ಎಸ್. ವೃತ್ತ,” ಇಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ.ನಾಗರಾಜ ಪರಿಸರರವರು, ವನ್ಯಜೀವಿ ಸ೦ಪತ್ತು ರಾಷ್ಟçದ ಸ೦ಪತ್ತು. “ವನ್ಯಜೀವಿಗಳ ಸ೦ರಕ್ಷಣೆ ನಮ್ಮ-ನಿಮ್ಮೆಲ್ಲರ ಹೊಣೆ” ಎ೦ದು ತಿಳಿಸುತ್ತಾ, ಪ್ರತಿ ವರ್ಷವೂ ಮಾರ್ಚ್ ೦೩ರ೦ದು ವಿಶ್ವ ವನ್ಯ ಜೀವಿ ದಿನಾಚರuಯನ್ನು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ವನ್ಯಜೀವಿಗಳ ಪ್ರಾಮುಖ್ಯತೆ ಮತ್ತು ಅವುಗಳ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ, ಆಚರಿಸುತ್ತಾ ಬರಲಾಗಿದೆ. ಇತ್ತೀಚಿನ ದಿನಗಳಲ್ಲಿ ಅರಣ್ಯಕ್ಕೆ ಬೆ೦ಕಿ ಬೀಳುವುದು ಸರ್ವೇಸಾಮಾನ್ಯವಾಗಿದೆ. ಘನಸರ್ಕಾರವು ಇದನ್ನು ತಡೆಯಲು ಏರಿಯಲ್ ಬಳಸುವ ವ್ಯವಸ್ಥೆಯನ್ನು ಅತೀ ಶೀಘ್ರದಲ್ಲಿ ಮಾಡುವುದರಿ೦ದ ವನ್ಯಜೀವಿ ಸ೦ಕುಲವನ್ನು ಉಳಿಸಬಹುದಾಗಿದೆ.

ಸಾರ್ವಜನಿಕರೂ ಸಹ ಅರಣ್ಯ ಬೆ೦ಕಿಯನ್ನು ನ೦ದಿಸುವ ಕಾರ್ಯದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೊ೦ದಿಗೆ ಕೈಜೋಡಿಸಬೇಕಾಗಿದೆ ಎ೦ದು ತಿಳಿಸಿದರು.

ಶ್ರೀ ಜಯ೦ತ್ ಬಾಬು ಎ೦.ಎಸ್., ನಿರ್ದೇಶಕರು, ಪರಿಸರ(ರಿ), ಶಿವಮೊಗ್ಗ ಮತು ಸ೦ಶೋಧನಾ ವಿದ್ಯಾರ್ಥಿ, ಪರಿಸರ ವಿಜ್ಞಾನ ವಿಭಾಗ, ಕುವೆ೦ಪು ವಿಶ್ವವಿದ್ಯಾಲಯ, ಇವರು ಉರಗಗಳ ಪ್ರಾಮುಖ್ಯತೆ ಮತ್ತು ಅವುಗಳ ವೈವಿಧ್ಯತೆಯನ್ನು ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಟ್ಟರು. ಹಾವು ಕಚ್ಚಿದ ಸ೦ದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆಯ ಮಾಹಿತಿಯನ್ನೂ ನೀಡಿದರು.

Kuvempu University  ಮುಖ್ಯ ಅತಿಥಿಗಳಾದ ಶ್ರೀ ಹೆಚ್.ಎಸ್ ಟಿ. ಸ್ವಾಮಿ, ಖಜಾ೦ಚಿ, ಕ.ರಾ.ವಿ.ಪ., ಮತ್ತು ಶ್ರೀ ಶ್ರೀಧರ್ ಹೆಗ್ಡೆ, ಅಧ್ಯಕ್ಷರು, ಶುಭ೦ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸ೦ಸ್ಥೆ ಮತ್ತು ಜೆ.ಸಿ.ಐ. ವಿವೇಕ್ ಶಿವಮೊಗ್ಗ ಇವರುಗಳು ಭಾಗವಹಿಸಿದ್ದರು.

ಅಧ್ಯಕ್ಶೀಯ ನುಡಿ ಮಾತನಾಡಿದ ಶ್ರೀ ಪವಿತ್ರಾನ೦ದರಾಜು ಎಸ್., ತಾಲ್ಲೂಕು ಕಲ್ಯಾಣಾಧಿಕಾರಿಗಳು, ಹಿ೦ದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರು ಪ್ಲಾಸ್ಟಿಕ್ ಹಾವಳಿಯನ್ನು ತಡೆಗಟ್ಟುವುದರ ಮೂಲಕ ವನ್ಯಜೀವಿ ಸ೦ಕುಲವನ್ನು ಪ್ರಾಣಾಪಾಯದಿ೦ದ ರಕ್ಷಿಸಬೇಕಾಗಿದೆ ಎ೦ದರು.

ವೇದಿಕೆಯಲ್ಲಿ ಶ್ರೀ ಲೋಕೇಶ್ವರಪ್ಪ, ಕಾರ್ಯದರ್ಶಿ ಕ.ರಾ.ವಿ.ಪ., ನಿಲಯ ಮೇಲ್ವಿಚಾರಕರಾದ ಶ್ರೀಮತಿ ಚ೦ದ್ರಮತಿ ಎ೦.ಆರ್., ಮತ್ತು ಶ್ರೀ ಅ೦ಬರೀಶ್ ಇವರು ಉಪಸ್ಥಿತರಿದ್ದರು. ವಿವಿಧ ಪದವಿ ಕಾಲೇಜುಗಳ ೨೫೦ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ok Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Residential School Admission ಮಾರ್ಚ್ 12 ರಂದು ವಸತಿ ಶಾಲೆಗಳ 6 ನೇ ತರಗತಿಗೆ ಪ್ರವೇಶ ಪರೀಕ್ಷೆ

0

Residential School Admission ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಮಾ.12 ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾ.03 ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಮಾ.12 ರ ಭಾನುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆವರೆಗೆ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 6045 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು.

ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯರ ಸಮಿತಿ ನೇಮಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

Residential School Admission  ಪರೀಕ್ಷೆ ಕರ್ತವ್ಯಕ್ಕೆ ಸಂಬಂಧಿಸಿದ ಮಾರ್ಗಾಧಿಕಾರಿಗಳು, ಪರಿವೀಕ್ಷಕರು ಹಾಗೂ ಇನ್ನಿತರೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕಾರ್ಯಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಈಗಲೇ ಆಸನಗಳು, ಮೂಲಭೂತ ಸೌಕರ್ಯಗಳ ಕುರಿತು ಪರೀಕ್ಷಾ ಕೇಂದ್ರಗಳಿಗೆ ತೆರಳಿ ಖಾತ್ರಿಪಡಿಸಿಕೊಳ್ಳಬೇಕು. ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಇಲಾಖೆ ನಿಗಾ ವಹಿಸಬೇಕು. ಹಾಗೂ ಪರೀಕ್ಷಾ ಸಮಯದಲ್ಲಿ ಯಾವುದೇ ಗೊಂದಲಗಳಿಗೆ ಎಡೆಮಾಡದೆ, ವ್ಯವಸ್ಥಿತವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡು, ಸಿದ್ದವಾಗಿರುವಂತೆ ಸೂಚನೆ ನೀಡಿದರು.

ಡಿಡಿಪಿಯು ಬಿ.ಕೃಷ್ಣಪ್ಪ, ಪರೀಕ್ಷಾಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದರು. ಸಭೆಯಲ್ಲಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಯ ಅಧಿಕಾರಿಗಳು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Exam Preparation ಮಾರ್ಚ್ 9 ರಿಂದ ಆರಂಭವಾಗುವ ದ್ವಿತೀಯ ಪಿಯು ಪರೀಕ್ಷೆಗಳಿಗೆ ಸಕಲಸಿದ್ಧತೆ

0

Exam Preparation ಶಿವಮೊಗ್ಗ, ಜಿಲ್ಲೆಯಲ್ಲಿ ಮಾರ್ಚ್ 09 ರಿಂದ 29 ರವರೆಗೆ ಒಟ್ಟು 36 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್ ತಿಳಿಸಿದರು.

ಮಾ.03 ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಪರೀಕ್ಷೆಗೆ ಒಟ್ಟು 18,970 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. 16711 ರೆಗ್ಯುಲರ್ ವಿದ್ಯಾರ್ಥಿಗಳು, 1451 ರಿಪೀಟರ್ ಮತ್ತು 808 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಶಿವಮೊಗ್ಗ 13, ಭದ್ರಾವತಿ 06, ತೀರ್ಥಹಳ್ಳಿ 03, ಹೊಸನಗರ 03, ಸಾಗರ 05, ಶಿಕಾರಿಪುರ 04 ಮತ್ತು ಸೊರಬ 02 ಸೇರಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು.

Exam Preparation  ಪ್ರಶ್ನೆ ಪತ್ರಿಕೆ ಸಾಗಾಟಕ್ಕೆ ತ್ರಿಸದಸ್ಯ ಸಮಿತಿ ನೇಮಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತ್ ನೀಡುವ ಬಗ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಪರೀಕ್ಷೆ ಕರ್ತವ್ಯಕ್ಕೆ ಸಂಬಂಧಿಸಿದ ಮಾರ್ಗಾಧಿಕಾರಿಗಳು, ಪರಿವೀಕ್ಷಕರು ಹಾಗೂ ಇನ್ನಿತರೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕಾರ್ಯಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಈಗಲೇ ಆಸನಗಳು, ಮೂಲಭೂತ ಸೌಕರ್ಯಗಳ ಕುರಿತು ಪರೀಕ್ಷಾ ಕೇಂದ್ರಗಳಿಗೆ ತೆರಳಿ ಖಾತ್ರಿಪಡಿಸಿಕೊಳ್ಳಬೇಕು.

ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಇಲಾಖೆ ನಿಗಾ ವಹಿಸಬೇಕು. ಮತ್ತು ಯಾವುದೇ ಗೊಂದಲಗಳಿಗೆ ಎಡೆಮಾಡದೆ, ವ್ಯವಸ್ಥಿತವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡು, ಸಿದ್ದವಾಗಿರುವಂತೆ ಸೂಚನೆ ನೀಡಿದರು.

ಡಿಡಿಪಿಯು ಬಿ.ಕೃಷ್ಣಪ್ಪ, ಪರೀಕ್ಷಾಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದರು.

ಸಭೆಯಲ್ಲಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ ಪರೀಕ್ಷೆಯ ಅಧಿಕಾರಿಗಳು ಹಾಜರಿದ್ದರು

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Astronomy ಖಗೋಳದಲ್ಲಿನ ಆಕಾಶಕಾಯಗಳ ಪರಿಚಯ ಕಾರ್ಯಕ್ರಮ

0

Astronomy ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ರಾಷ್ಟ್ರೀಯ ಪದವಿ ಪೂರ್ವ ಕಾಲೇಜು ( ಶಾಲಾ ವಿಭಾಗ) ದಲ್ಲಿ ವಿದ್ಯಾರ್ಥಿಗಳಿಗೆ ಬಿ.ಎಂ.ರಘು ರವರ ಮಾರ್ಗದರ್ಶನಲ್ಲಿ ಖಗೋಳದಲ್ಲಿನ ಅಕಾಶ ಕಾಯಗಳ ಪರಿಚಯ ಮತ್ತು ಗುರುತಿಸುವ ಕಾರ್ಯಕ್ರಮ ನಡೆಯಿತು .ಈ ಸಂದರ್ಭದಲ್ಲಿ ದಲ್ಲಿ ಸಂಪನ್ಮೂಲ ವ್ಯಕ್ತಿಗಳು ಹೆಚ್.ಟಿ.ಸ್ವಾಮಿ ಡಾ ನಾಗರಾಜ್ ಪಂಚಾಲಯ್ಯ ಪ್ರಾನ್ಸಿಸ್ ಬೆಂಜಾಮಿನ್ ವಿದ್ಯಾರ್ಥಿಗಳು ಸೇರಿದಂತೆ ಮತ್ತಿತ್ತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Chikmagalur ದಲಿತ ಸಂಘಟನೆಗಳಿಂದ ಚಿಕ್ಕಮಗಳೂರು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಆರೋಪ

0

Chikmagalur ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಯವರು ಭಾರೀ ಭ್ರಷ್ಟಾಚಾರ ಹಾಗೂ ದಲಿತರ ನೌಕರರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಗೆ ದಲಿತ ಸಂಘಟನೆಗಳ ಐಕ್ಯತಾ ಚಾಲನ ಸಮಿತಿ ಒತ್ತಾಯಿಸಿದೆ.

ಈ ಸಂಬಂಧ ಆಯುಕ್ತ ರಾಕೇಶ್ ಅವರಿಗೆ  ಬೆಂಗಳೂರಿಗೆ ತೆರಳಿ ಮನವಿ ಸಲ್ಲಿಸಿದ ಸಮಿತಿಯ ಪದಾಧಿಕಾರಿಗಳು ಜಿಲ್ಲಾ ಸಮಾಜ ಕಲ್ಯಾಣಧಿಕಾರಿ ಚೈತ್ರ ಅವರು ಭಾರೀ ಭ್ರಷ್ಟಚಾರ ಹಾಗೂ ದಲಿತರನ್ನು ಅವಮಾನಿಸಿ ಅಧಿಕಾರದಲ್ಲಿ ಮೆರೆಯುತ್ತಿದ್ದು ಕೂಡಲೇ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ವಿದ್ಯಾರ್ಥಿ ನಿಲಯಕ್ಕೆ ಹೈಮಾಸ್ಕ್ ಲೈಟ್‌ಗಳ ಖರೀದಿಯಲ್ಲಿ ಕಳಪೆ ಗುಣಮಟ್ಟದ ಉಪಕರಣಗಳನ್ನು ಖರೀದಿಸಿ ಭ್ರಷ್ಟಚಾರ ಎಸಗಲಾಗಿದೆ. ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ನಿರ್ವಹಣೆ ವೆಚ್ಚದ ಅನುದಾನವನ್ನು ಯಾವುದೇ ಮೇಲಾಧಿಕಾರಿಗಳ ಅನುಮತಿ ಪಡೆಯದೇ ಲಕ್ಷಾಂತರ ಮೌಲ್ಯದ ಸ್ಟೀಮ್ ಕುಕ್ಕರ್ ಖರೀದಿಸಿ ನಂತರ ನೇರ ಯಂತ್ರಪಕರಣಗಳನ್ನು ಸ್ಥಾಪಿಸಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದರು.

Chikmagalur ವಿದ್ಯಾರ್ಥಿನಿಲಯಗಳ ನಾಮಫಲಕವನ್ನು ಅತಿಹೆಚ್ಚಿನ ಮೊತ್ತಕ್ಕೆ ಕೊಟೇಷನ್ ಮೂಲಕ ಮಾಡಿದ್ದು ಇದು ಕೆಟಿಟಿಪಿ ಕಾಯ್ದೆಯ ವಿರುದ್ಧವಾಗಿದೆ. ಜೊತೆಗೆ ನೇರ ಟೆಂಡರ್ ಮಾಡದೇ ನಿರ್ಲಕ್ಷ್ಯ ವಹಿಸಿರುವುದರಿಂದ ಹಣ ದುರುಪಯೋಗವಾಗಿದೆ. ಚಿಕ್ಕಮಗಳೂರು ತಾಲ್ಲೂಕು ವ್ಯಾಪ್ತಿಯ ಆಹಾರ ಬೇಡಿಕೆಯಲ್ಲಿ ಭಾರಿ ಅವ್ಯವಹಾರ ಮಾಡಿ ಭ್ರಷ್ಟಚಾರವೆಸಗಲಾಗಿದೆ ಎಂದು ದೂರಿದರು.

ಕೊಪ್ಪ, ಎನ್.ಆರ್.ಪುರ ಹಾಗೂ ಶೃಂಗೇರಿಯಲ್ಲಿ ಲೆಕ್ಕ ಅಧೀಕ್ಷಕರ ಹುದ್ದೆಗಳನ್ನು ಹಣದ ಆಸೆಗಾಗಿ ನೀಡಿ ಆಡಳಿತ ದುರ್ಬಳಕೆಯಾಗಿದೆ. ಉಪನಿರ್ದೇಶಕರಾಗಿ ಚೈತ್ರ ಅವರು ಈ ಹಿಂದೆ ಕರ್ತವ್ಯ ನಿರ್ವಹಿಸಿದ ಹಾವೇರಿ ಜಿಲ್ಲೆಯ ಸರಕು- ಸೇವದಾರರಿಂದ ಮಾತ್ರ ಹೆಚ್ಚಿನ ಸರಕನ್ನು ಖರೀದಿಸಿರುವುದು ಎಷ್ಟರ ಮಟ್ಟಿಗೆ ಸರಿಯಿದೆ ಎಂದು ಪ್ರಶ್ನಿಸಿದ್ದಾರೆ.

ಕೂಡಲೇ ಎಲ್ಲಾ ಅಂಶಗಳನ್ನು ಪರಿಗಣಿಸಿ ಸಮಾಜ ಕಲ್ಯಾಣಾಧಿಕಾರಿ ಚೈತ್ರ ಹಾಗೂ ಇವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದಸಂಸ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಪ್ರಗತಿಪರ ಚಿಂತಕ ಅಂಗಡಿ ಚಂದ್ರು, ಸಂತೋಷ ದಾವಣಗೆರೆ, ಜಿಲ್ಲಾ ಪ್ರಧಾನ ಸಂಚಾಲಕ ದುಗ್ಗಪ್ಪ, ಹಾವೇರಿ ಜಿಲ್ಲಾ ಪ್ರಧಾನ ಸಂಚಾಲಕ ಮೆಣಸಿನಹಾಳ ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.