Tuesday, April 7, 2026
Tuesday, April 7, 2026
Home Blog Page 1293

Blood Donation ನೂರು ಬಾರಿ ರಕ್ತದಾನ ಮಾಡಿದ ಯಜ್ಞನಾರಾಯಣ್ ಅವರಿಗೆ ಸನ್ಮಾನ

0








Blood Donation ಶಿವಮೊಗ್ಗ: ರಕ್ತದಾನಿ, ಸಮಾಜಸೇವಕ ಜಿ.ಎಸ್.ಯಜ್ಞನಾರಾಯಣ ಅವರಿಗೆ ಗುಡ್‌ಲಕ್ ಆರೈಕೆ ಕೇಂದ್ರದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. 100 ಬಾರಿ ರಕ್ತದಾನ ಮಾಡಿರುವ ಹೆಗ್ಗಳಿಕೆ ಜಿ.ಎಸ್.ಯಜ್ಞನಾರಾಯಣ ಅವರದ್ದಾಗಿದೆ.
ಶಿವಮೊಗ್ಗದಲ್ಲಿ ರಕ್ತದಾನ ಮಾಡುವ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಜೊತೆಯಲ್ಲಿ 100 ಬಾರಿ ರಕ್ತದಾನ ಮಾಡಿದ್ದಾರೆ.

ರಕ್ತದಾನ ಮಾಡಲು ಸಾರ್ವಜನಿಕರಿಗೆ ಪ್ರೇರಣೆ ಆಗಿದ್ದಾರೆ. ರಕ್ತದ ಕೊರತೆ ನೀಗಿಸುವ ಕಾಯಕದಲ್ಲಿ ಮಹತ್ತರ ಪಾತ್ರ ವಹಿಸುವ ಜತೆಯಲ್ಲಿ ಸಮಾಜಮುಖಿಯಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಜಿ.ಎಸ್.ಯಜ್ಞನಾರಾಯಣ ಅವರು ಬಂದಿದ್ದಾರೆ.

 

Blood Donation ಶಿವಮೊಗ್ಗ ನಗರದ ಪ್ರಿಯದರ್ಶಿನಿ ಬಡಾವಣೆಯಲ್ಲಿರುವ ಅನಾಥರ, ಬುದ್ದಿಮಾಂದ್ಯರಿಗೆ ಇರುವ “ಗುಡ್‌ಲಕ್ ಆರೈಕೆ ಕೇಂದ್ರ”ಕ್ಕೆ ಗೌರವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಅನೇಕ ನೊಂದ ಜೀವಿಗಳಿಗೆ ಆಶ್ರಯದಾತರಾಗಿರುವ ರಕ್ತದಾನಿ ಜಿ.ಎಸ್.ನಾರಾಯಣ ಅವರ 83ನೇ ಜನ್ಮದಿನ ಹಾಗೂ 53ನೇ ವಿವಾಹ ವಾರ್ಷಿಕೋತ್ಸವ ಸಂದರ್ಭದಲ್ಲಿ ವಿಶೇಷವಾಗಿ ಸನ್ಮಾನಿಸಲಾಯಿತು.


ಗುಡ್‌ಲಕ್ ಆರೈಕೆ ಕೇಂದ್ರದ ಅಧ್ಯಕ್ಷ ರವೀಂದ್ರನಾಥ್ ಐತಾಳ್ ಮಾತನಾಡಿ, ಯಜ್ಞನಾರಾಯಣ ಅವರು ಯುವಪೀಳಿಗೆಗೆ ಸ್ಫೂರ್ತಿ ಆಗಿದ್ದು, ರಕ್ತದಾನದ ಮಹತ್ವದ ಬಗ್ಗೆ ನಿರಂತರವಾಗಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಸ್ವತಃ ನೂರು ಬಾರಿ ರಕ್ತದಾನ ಮಾಡಿದ್ದಾರೆ. ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.


ನಿವೃತ್ತ ಕಮಾಂಡೆಂಟ್ ಆನಂದ್‌ರಾವ್, ನಿರ್ದೇಶಕ ಮತ್ತು ರಕ್ತದಾನಿ ಜಿ.ವಿಜಯ್‌ಕುಮಾರ್, ಕಿರುತೆರೆ ಕಲಾವಿದ, ಸಂಗೀತ ವಿದ್ಯಾಂಸ, ಕರ್ನಾಟಕ ಸಂಘದ ನಿರ್ದೇಶಕ ವಿನಯ, ಯಜ್ಞನಾರಾಯಣ ಪತ್ನಿ ವಿಜಯಾ, ಗುಡ್‌ಲಕ್ ಆರೈಕೆ ಕೇಂದ್ರದ ಪದಾಧಿಕಾರಿಗಳು ಉಪಸ್ಥಿತರಿದ್ದರು.


Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Chunchadri Cooperative Society ಚುಂಚಾದ್ರಿ ಸಹಕಾರ ಸಂಘದ ಕಛೇರಿಯ ಸ್ಥಳಾಂತರ

0



Chunchadri Cooperative Society  ಶಿವಮೊಗ್ಗದ ಗಾರ್ಡನ್ ಏರಿಯಾದ 3ನೇ ತಿರುವಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚುಂಚಾದ್ರಿ
ಮಹಿಳಾ ವಿವಿದ್ದೋದ್ದೇಶ ಸಹಕಾರಿ ನಿಯಮಿತ ಕಛೇರಿಯು ಕೆಲವು ಕಾರಣಂತರದಿಂದ
ಹೊಸಮನೆಯ ಚಾನಲ್‌ನ ಹತ್ತಿರ ಪುನೀತ್ ರಾಜ್ ರಸ್ತೆಯ ಮಾದೇಶ್ವರ ದೇವಸ್ಥಾನದ ಎದುರು
ಎಡಭಾಗ ಸ್ಥಳಾಂತರಿಸಲಾಗಿದೆ.

Chunchadri Cooperative Society  ಇನ್ನೂಮುಂದೆ ಕಛೇರಿಯ ಖಾಯಂ ವಿಳಾಸ ಇದ್ದಾಗಿದ್ದು,
ಸಂಘದ ಎಲ್ಲಾ ಸದಸ್ಯರು ಹಾಗೂ ವ್ಯವಹಾರದಾತರೂ ಈ ವಿಳಾಸದ ಮೂಲಕ ವ್ಯವಹಾರವನ್ನು ನಡೆಸಬಹುದಾಗಿ ಸಂಘದ ಅಧ್ಯಕ್ಷೆ ಗಿರಿಜಮ್ಮಕುಮಾರ್ ರವರು ಪತ್ರಿಕಾ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

District Level Sports ಜಿಲ್ಲಾಮಟ್ಟದ ಕ್ರೀಡಾಕೂಟದ ಉದ್ಘಾಟನೆ

0



District Level Sports  ನೆಹರು ಯುವ ಕೇಂದ್ರ ಹಾಗೂ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಶಿವಮೊಗ್ಗ ನಗರದ ಶಾಸಕರಾದ ಶ್ರೀ ಕೆ ಎಸ್ ಈಶ್ವರಪ್ಪನವರು ಉದ್ಘಾಟನೆ ಮಾಡಿದರು.

District Level Sports  ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀಕಾಂತೇಶ್ ಹಾಗೂ ಶಿವಮೊಗ್ಗ ಭದ್ರಾವತಿ ನಗರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ದೇವರಾಜ್ ನಾಯಕ್ ಸಹ್ಯಾದ್ರಿ ಸ್ನೇಹ ಸಂಘದ ಸತೀಶ್ ಕುಮಾರ್ ಶೆಟ್ಟಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಶ್ರೀ ಉಲ್ಲಾಸ್ ಮತ್ತು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಶಿವಮೊಗ್ಗ ವಿನೋದ್ ಉಪಸ್ಥಿತರಿದ್ದರು

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

KEB Lineman ಕೆಇಬಿ ಲೈನ್ ಮನ್ ಗಳ ಸೇವೆ ಅಪಾರ-ಪೂರ್ಣಿಮಾ ಸುನೀಲ್

0



KEB Lineman   ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅನೇಕರು ಸದ್ದಿಲ್ಲದೇ ನಿರಂತರ ಸೇವೆ ಮಾಡುತ್ತಿದ್ದು, ವಿದ್ಯುತ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವವರ ಪಾತ್ರವು ಪ್ರಮುಖ. ಕೆಇಬಿ ಲೈನ್‌ಮ್ಯಾನ್‌ಗಳ ಸೇವೆ ಅಪಾರ ಎಂದು ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಹೇಳಿದರು.


ಶಿವಮೊಗ್ಗ ನಗರದ ಶ್ರೀ ಕೋಟೆ ಮಾರಿಕಾಂಬಾ ದೇವಸ್ಥಾನದ ಸಭಾಭವನದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಸಲ್ಯೂಟ್ ದಿ ಸೈಲೆಂಟ್ ವರ್ಕರ್ ಶೀರ್ಷಿಕೆಯಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆಇಬಿ ಲೈನ್‌ಮ್ಯಾನ್‌ಗಳಿಗೆ ಸನ್ಮಾನಿಸಿ ಮಾತನಾಡಿದರು.


ಲೈನ್‌ಮ್ಯಾನ್ ಆಗಿ ವಿದ್ಯುತ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಯು ವರ್ಷದ 365 ದಿನಗಳಲ್ಲಿಯೂ ಎಂತಹ ಸಮಸ್ಯೆ ಕಂಡುಬಂದರೂ ಸ್ಥಳಕ್ಕೆ ತೆರಳಿ ಸರಿಪಡಿಸುವ ಕೆಲಸ ಮಾಡುತ್ತಾರೆ. ಸಮಾಜಕ್ಕಾಗಿ ನಿರಂತರವಾಗಿ ಸೇವೆ ಮಾಡುತ್ತಿರುತ್ತಾರೆ ಎಂದು ತಿಳಿಸಿದರು.


KEB Lineman ಆಗಿ ಕೆಲಸ ಮಾಡುವ ಸಿಬ್ಬಂದಿ ಜೀವನ ಹಂಗು ತೊರೆದು ಕೆಲಸ ಮಾಡಬೇಕಾಗುತ್ತದೆ. ಕಠಿಣ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ. ಉತ್ತಮವಾಗಿ ವಿದ್ಯುತ್ ಸೌಕರ್ಯ ಕೊಡಲು ಶ್ರಮಿಸುತ್ತಿದ್ದಾರೆ ಎಂದರು.
ಸಮಾಜಮುಖಿ ಚಿಂತನೆಯೊಂದಿಗೆ ಸೇವಾ ಚಟುವಟಿಕೆಗಳನ್ನು ಜೆಸಿಐ ಸಂಸ್ಥೆಯು ನಡೆಸಿಕೊಂಡು ಬರುತ್ತಿದ್ದು, ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾಗಿದೆ. ಪ್ರತಿ ತಿಂಗಳು ವಿಶೇಷ ಕಾರ್ಯಕ್ರಮ ಆಯೋಜಿಸಿಕೊಂಡು ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗೌರವಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು.
ಕೆಇಬಿ ಲೈನ್‌ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಆನಂದ್, ನಾಗರಾಜ್, ಶಿವಕುಮಾರ್, ಪ್ರಶಾಂತ್ ಕುಮಾರ್, ವಿಜಯ ಕುಮಾರ್, ತಮ್ಮಯ್ಯ ಅವರಿಗೆ ಗೌರವಪೂರ್ವಕವಾಗಿ ಜೆಸಿಐ ಶಿವಮೊಗ್ಗ ಭಾವನಾದಿಂದ ಸನ್ಮಾನಿಸಲಾಯಿತು.
ಜೆಸಿಐ ಸಂಸ್ಥೆಯು ಸಮಾಜಮುಖಿ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುವ ಜತೆಯಲ್ಲಿ ನಮ್ಮ ಸೇವೆಗಳನ್ನು ಗುರುತಿಸಿ ಗೌರವಿಸುತ್ತಿರುವುದು ಅತ್ಯಂತ ಸಂತೋಷ ತಂದಿದೆ. ವಿವಿಧ ಕ್ಷೇತ್ರಗಳಲ್ಲಿ ಇದೇ ರೀತಿ ಸೇವೆ ಸಲ್ಲಿಸುತ್ತಿರುವವರಿಗೆ ಗುರುತಿಸುವ ಕೆಲಸ ಆಗಬೇಕು ಎಂದು ಸನ್ಮಾನಿತರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಕಾರ್ಯದರ್ಶಿ ಕವಿತಾ ಜೋಯಿಸ್ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Shimoga AYUSH Department ಶಿವಮೊಗ್ಗ ಆಯುಷ್ ಇಲಾಖೆಯ ಜಿ.ಎಸ್.ಅನಂತ್ ಅವರಿಗೆ ವಿಪ್ರಶ್ರೀ ಪ್ರಶಸ್ತಿ

0



Shimoga AYUSH Department  ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ನಗರದ ಆಯುಷ್ ಇಲಾಖೆಯ ಔಷಧ ವಿಭಾಗದ ಮುಖ್ಯಸ್ಥ ಜಿ.ಎಸ್.ಅನಂತ್‌ರವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿರುವ ಅಪೂರ್ವ ಸಾಧನೆಯನ್ನು ಗುರುತಿಸಿ ವಿಪ್ರ ಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಅನಂತ್‌ರವರಿಗೆ ಸಹೋದ್ಯೋಗಿಗಳು, ವಿಪ್ರ ಬಂಧುಗಳು ಅಭಿನಂದನೆ ಸಲ್ಲಿಸಿದ ಮುಂದಿನ ದಿನಗಳಲ್ಲಿ ನಿಮ್ಮ ಸೇವೆ ಮತ್ತಷ್ಟು ವಿಸ್ತಾರಗೊಳ್ಳಲಿ, ಹೆಚ್ಚು ಹೆಚ್ಚು ಪ್ರಶಸ್ತಿಗಳು ನಿಮ್ಮ ಮುಡಿಗೇರಲಿ ಎಂದು ಹಾರೈಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

National Science Day ವಿದ್ಯಾರ್ಥಿಗಳು ಅವಕಾಶಗಳನ್ನ ಸದುಪಯೋಗಪಡಿಸಿಕೊಳ್ಳಿ- ಡಿ.ಎಸ್.ಅರುಣ್

0

National Science Day ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು,, ಶಿವಮೊಗ್ಗ, ಸಹ್ಯಾದ್ರಿ ವಿಜ್ಞಾನ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಪರಿಸರ(ರಿ), ಶಿವಮೊಗ್ಗ ಇವರುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್ ನಾವು ಚಿಕ್ಕಾನಿಂದಲೂ ವಿಜ್ಞಾನ ದಿನಾಚರಣೆಯನ್ನು ಆಚರಿಸಿಕೊಂಡು ಬಂದಿದ್ದೇವೆ. ವಿಜ್ಞಾನ ದಿನಾಚರಣೆ ಎಂದಾಕ್ಷಣ ನಮಗೆ ನೆನಪಿಗೆ ಬರುವುದು ಸರ್ ಸಿ. ವಿ.ರಾಮನ್. 1986ರಲ್ಲಿಯೇ ಫೆಬ್ರವರಿ 28 ನ್ನು ವಿಜ್ಞಾನ ದಿನವನ್ನಾಗಿ ಘೋಷಣೆ ಮಾಡಿದರೂ, 1987ರಿ೦ದ ಪ್ರತಿ ವರ್ಷ ಫೆಬ್ರವರಿಯನ್ನು ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ.

ಈ ವರ್ಷದ ಶೀರ್ಷಿಕೆ “ಜಾಗತಿಕ ಯೋಗ ಕ್ಷೇಮಕ್ಕಾಗಿ ಜಾಗತಿಕ ವಿಜ್ಞಾನ” ಎಂಬುದಾಗಿದೆ.

ಪ್ರತಿನಿತ್ಯ ನಮ್ಮ ಭಾರತೀಯ ವಿಜ್ಞಾನಿಗಳು ಒ೦ದಲ್ಲ ಒ೦ದು ಸ೦ಶೋಧನೆಯಲ್ಲಿ ತೊಡಗಿಸಿಕೊ೦ಡು, ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಆಖಆಔ, ISಖಔ ದ೦ತಹ ಸ೦ಸ್ಥೆಗಳಿ೦ದ ಪ್ರತಿನಿತ್ಯ ಹೊಸಹೊಸ ಆವಿಷ್ಕಾರಗಳು ನಡೆಯುತ್ತಲೇ ಇವೆ. ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶಗಳನ್ನು ಸದುಪಯೋಗ ಮಾಡಿಕೊ೦ಡು, ಸ೦ಶೋಧನೆಯಲ್ಲಿ ತೊಡಗಿಸಿಕೊಳ್ಳಲು ಕರೆ ನೀಡಿದರು.

ಕುವೆ೦ಪು ವಿಶ್ವವಿದ್ಯಾಲಯದ ಗಣಿತ ಶಾಸ್ತç ವಿಭಾಗದ ಪ್ರೊ.ಗಿರೀಶ್ ಬಿ.ಜೆ., ಇವರು ವೈಜ್ಞಾನಿಕ ಪರ೦ಪರೆ ಬೆಳೆದು ಬ೦ದ ರೀತಿ ಮತ್ತು ನಮಗಿರುವ ಸವಾಲುಗಳು, ಅವುಗಳನ್ನು ಎದುರಿಸುವ ತ೦ತ್ರಜ್ಞಾನದ ಅವಶ್ಯಕತೆಗಳು, ಸ೦ಶೋಧನೆಯಲ್ಲಿ ಇರುವ ಅವಕಾಶಗಳನ್ನು ಕುರಿತು ಮಾತನಾಡಿದರು.

ಪ್ರಾ೦ಶುಪಾಲರಾದ ಪ್ರೊ. ರಾಜೇಶ್ವರಿ ಮಾತನಾಡಿ ಆರೋಗ್ಯ ಕ್ಶೇತ್ರದಲ್ಲಿ ಆಗಿರುವ ಸುಧಾರಣೆಗಳು ವೈಜ್ಞಾನಿಕ ಅನ್ವೇಷಣೆಗಳು ಮತ್ತು ಅದರ ಅನುಕೂಲಗಳ ಬಗ್ಗೆ ತಿಳಿಸಿದರು.

National Science Day ಕ.ರಾ.ವಿ.ಪ. ನಿರ್ದೇಶಕರಾದ ಇ೦ಜಿನೀಯರ್ ಸೋಮಶೇಖರ ಅವರು, ಸ೦ಶೋಧನಾ ಕ್ಷೇತ್ರದಲ್ಲಿರುವ ನ್ಯೂನ್ಯತೆಗಳು, ವೈಫಲ್ಯತೆಗಳು, ಸವಾಲುಗಳನ್ನು ಎದುರಿಸಲು ಅವಶ್ಯಕವಾದ ಮಾರ್ಗೋಪಾಯಗಳನ್ನು ಕ೦ಡುಕೊಳ್ಳಬೇಕೆ೦ದು ನುಡಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಪರಿಸರ(ರಿ), ಸ೦ಸ್ಥೆಯ ಗೌರವಾಧ್ಯಕ್ಷರಾದ ಶ್ರೀ ಜ್ಯೋತಿಪ್ರಕಾಶ್‌ರವರು ಮಾತನಾಡಿ, ಎಲ್ಲಾ ಕ್ಷೇತ್ರಗಳಲ್ಲೂ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ನಮ್ಮ ದೇಶದ ಸರ್ವತೋಮುಖ ಅಭಿವೃದ್ಧಿಗೆ ಯುವ ಜನತೆ ಕೈಜೋಡಿಸಬೇಕೆ೦ದು ಕರೆ ನೀಡಿದರು.

ಕ.ರಾ.ವಿ.ಪ. ಜಿಲ್ಲಾಧ್ಯಕ್ಷರಾದ ಡಾ.ನಾಗರಾಜ್ ಅವರು, ಪರಿಸರ, ಭಾರತದಲ್ಲಿ ಸ೦ಶೋಧನೆಗೆ ಅತಿ ಹೆಚ್ಚಿನ ಅವಕಾಶಗಳಿದ್ದು, ನಮ್ಮ ಘನ ಸರ್ಕಾರ ಗುಣಾತ್ಮಕ ಸ೦ಶೋಧನೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕಾಗಿದೆ. ಪ್ರತಿ ವರ್ಷ ಕಾಡ್ಗಿಚ್ಚಿನಿ೦ದ ಅರಣ್ಯ ನಾಶವಾಗುತ್ತಿದ್ದು, ಇದನ್ನು ತಡೆಯಲು ಏರಿಯಲ್ ಪ್ಲೇಟ್ ಬಳಸುವ ಮೂಲಕ ಕಾಡಿನ ಬೆ೦ಕಿಯನ್ನು ಆರಿಸಿ ಜೀವ ವೈವಿಧ್ಯವನ್ನು ಉಳಿಸಬೇಕಾಗಿದೆ. ಸರ್ಕಾರವು ಸ೦ಶೋಧನೆಗೆ ಹೆಚ್ಚಿನ ಆರ್ಥಿಕ ನೆರವು ನೀಡುವುದರ ಮೂಲಕ ಪ್ರೋತ್ಸಾಹಿಸಬೇಕಾಗಿದೆ ಎ೦ದು ತಿಳಿಸಿದರು.

ವೇದಿಕೆಯಲ್ಲಿ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶು ಪ್ರೊ. ಎಂ. ಕೆ. ವೀಣಾ, ಶ್ರೀ ಲೋಕೇಶ್ವರಪ್ಪ, ಕ.ರಾ.ವಿ.ಪ. ಕಾರ್ಯದರ್ಶಿ, ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

B.S Yediyurappa ಬಿಎಸ್ ವೈ ಜನ್ಮದಿನ ಶ್ರೀ ಬೆಕ್ಕಿನಕಲ್ಮಠ ಶ್ರೀಗಳ ಶುಭಾಶಂಸನೆ

0

B.S Yediyurappa ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಗಳು,
ಕನ್ನಡ ನಾಡಿನ ಅಭಿವೃದ್ಧಿ ಹರಿಕಾರನಾಗಿ ಯಡಿಯೂರಪ್ಪ ಜನ್ಮವಾಗಿದೆ.
ಎಂದೂ ಕಂಡರಿಯದ ಅಭಿವೃದ್ಧಿ ಯಡಿಯೂರಪ್ಪ ಕಾಲದಲ್ಲಿ ಆಗಿದೆ.
ದಕ್ಷಿಣ ದಿಂದ ಉತ್ತದವರೆಗೆ ಯಡಿಯೂರಪ್ಪ ಜನಪ್ರಿಯರಾಗಿದ್ದಾರೆ ಎಂದು ಹೇಳಿದ್ದಾರೆ.

ಸಾಮಾನ್ಯರನ್ನು ಪ್ರೀತಿಸುವ ಮನಸ್ಸು ಯಡಿಯೂರಪ್ಪ ಅವರದ್ದು. ಯಡಿಯೂರಪ್ಪ ಗೆ ಯಡಿಯೂರಪ್ಪ ಅವರೇ ಸಾಠಿ.
ಎಲ್ಲರೂ ಆಶ್ಚರ್ಯ ಪಡುವ ರೀತಿಯಲ್ಲಿ ಶಿವಮೊಗ್ಗ ಅಭಿವೃದ್ಧಿ ಆಗಿದೆ.
ಮಲೆನಾಡು ಅಭಿವೃದ್ಧಿಗೆ ಯಡಿಯೂರಪ್ಪ ಬರಬೇಕಾಯಿತು.
ಯಡಿಯೂರಪ್ಪ ಛಲಗಾರರು, ಸಂಕಲ್ಪ ಮಾಡಿದ್ದನ್ನು ಮಾಡಿ ತೋರಿಸಿದ್ದಾರೆ ಎಂದು ತಿಳಿಸಿದ್ದಾರೆ.

B.S Yediyurappa  ಅಭಿವೃದ್ಧಿಯ ಕನಸು ಕಂಡವರು. ಅದನ್ನು ಸಾಕಾರ ಮಾಡುತ್ತಿರುವವರು ಸಂಸದ ರಾಘವೇಂದ್ರ ಅವರು.
ಮಠಗಳಿಗೆ ಅನುದಾನ ನೀಡುವ ಪರಂಪರೆ ಆರಂಭಿಸಿದ್ದಾರೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ನಮ್ಮವರು, ನಮ್ಮ ಜಿಲ್ಲೆಯವರು ಎಂದು ಹೇಳಲು ಅಭಿಮಾನ ಉಂಟಾಗುತ್ತದೆ.
ಬೆಕ್ಕಿನ ಕಲ್ಮಠ ಇದ್ರೂ, ಇಲ್ಲದಂಗಾಗಿತ್ತು.
ಈ ಮಠದ ಕಟ್ಟಡ ಕಟ್ಟುವಲ್ಲಿ ಯಡಿಯೂರಪ್ಪ ಪಾತ್ರ ಬಹುದೊಡ್ಡದು ಎಂದು ಹೇಳಿದ್ದಾರೆ.

Shivamogga Meggan Hospital ಶಿವಮೊಗ್ಗದ ಮೆಗಾನ್ ಆಸ್ಪತ್ರೆಯಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ಆರಂಭ

0

Shivamogga Meggan Hospital ಮೊಟ್ಟ ಮೊದಲ ಬಾರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹುಟ್ಟಿನಿಂದಲೇ ಬರುವ ಕಿವುಡುತನಕ್ಕೆ ಅತ್ಯಾಧುನಿಕವಾದ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ಇಂದಿನಿಂದ ಪ್ರಾರಂಭಿಸಲಾಗಿದೆ.

ಹುಟ್ಟಿನಿಂದಲೇ ಸಂಪೂರ್ಣ ಕಿವುಡಾದ ಮಕ್ಕಳಿಗೆ ಶ್ರವಣ ಸಾಧನಗಳು ಉಪಯೋಗಕ್ಕೆ ಬರುವುದಿಲ್ಲ. ಇಂತಹ ಮಕ್ಕಳಿಗೆ ವರದಾನವಾಗಿ ಬಂದಿರುವುದು ಈ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯಾಗಿದೆ. ಈ ಶಸ್ತ್ರಚಿಕಿತ್ಸೆ ದುಬಾರಿಯಾಗಿದೆ. ಆದ್ದರಿಂದ ರಾಜ್ಯ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯಡಿ ಈ ಚಿಕಿತ್ಸೆಯನ್ನು ಸೇರಿಸಿದ್ದು ಇದನ್ನು ಸಂಪೂರ್ಣ ಉಚಿತವಾಗಿ ಮಾಡಲಾಗುವುದು.

ಪ್ರತಿ ಸಾವಿರ ಜನನ ಪ್ರಮಾಣಕ್ಕೆ ಎರಡು ಮಕ್ಕಳು ಹುಟ್ಟುವಾಗಲೇ ಕಿವುಡು ಉಂಟಾಗಿರುತ್ತದೆ ಇದರಲ್ಲಿ ಒಂದು ಮಗುವಿನ ಕಿವುಡುತನ ಅಲ್ಪ ಪ್ರಮಾಣದಲ್ಲಿದ್ದು ಅದನ್ನು ವಿವಿಧ ಸುಲಭ ಚಿಕಿತ್ಸೆ, ಹಿಯರಿಂಗ್ ಏಡ್ ಅಥವಾ ಶ್ರವಣ ಸಾಧನಗಳನ್ನು ಬಳಸಿ ಪುನಶ್ಚೇತನಗೊಳಿಸಬಹುದು.

ಆದರೆ, ಹುಟ್ಟುವಾಗಲೇ ಸಂಪೂರ್ಣ ಕಿವುಡುತನ ಇರುವ ಮಕ್ಕಳಿಗೆ ಕಿವಿಯ ಒಳಗಡೆ ಇರುವ ಶ್ರವಣಕ್ಕೆ ಸಂಬಂಧಿಸಿದ ನರಗಳು ಕೆಲಸ ಮಾಡುವುದಿಲ್ಲ. ಆದ್ದರಿಂದ ಇವರಿಗೆ ಶ್ರವಣ ಸಾಧನ ಕೆಲಸ ಮಾಡುವುದಿಲ್ಲ.

ಕಳೆದ 50 ರಿಂದ 60 ವರ್ಷಗಳಿಂದ ಇದರ ಬಗ್ಗೆ ನಿರಂತರವಾಗಿ ಸಂಶೋಧನೆಗಳು ನಡೆದಿದ್ದರೂ, 15 ರಿಂದ 20 ವರ್ಷಗಳಿಂದೀಚಿಗೆ ಇದು ಚೆನ್ನಾಗಿ ಅಭಿವೃದ್ದಿಯಾಗಿದೆ. ಭಾರತದಲ್ಲಿ ಕಳೆದ 10 ವರ್ಷಗಳಿಂದ ಇದು ಜನಪ್ರಿಯವಾಗಿದೆ.

ಈ ಚಿಕಿತ್ಸೆ ಮುಖ್ಯ ಸಮಸ್ಯೆ ಎಂದರೆ ಇದಕ್ಕೆ ಸುಮಾರು ರೂ. 10 ರಿಂದ 12 ಲಕ್ಷ ಖರ್ಚಾಗುತ್ತದೆ. ಎಲ್ಲರಿಗೂ ಇದನ್ನು ಭರಿಸಲು ಸಾಧ್ಯವಾಗುವುದಿಲ್ಲ. ಈ ಹಿಂದೆ ಕೇಂದ್ರ ಸರ್ಕಾರ ಎಡಿಐಪಿ ಯೋಜನೆಯಡಿ ಇದರ ವೆಚ್ಚ ಭರಿಸುತ್ತಿದ್ದರೂ ಹೆಚ್ಚಿನ ಪ್ರಮಾಣದ ಅನುದಾನ ದೊರೆಯುತ್ತಿರಲಿಲ್ಲ. ರಾಷ್ಟ್ರೀಯ ಕಿವುಡುತನ ನಿರ್ಮೂಲನಾ ಮತ್ತು ನಿಯಂತ್ರಣ ಯೋಜನೆಯ ಕಾರಣದಿಂದ ನಮ್ಮ ಸಂಸ್ಥೆಯಲ್ಲಿ ಕಿವುಡುತನದ ಬಗ್ಗೆ ಸಾಕಷ್ಟು ಅರಿವು ಮೂಡಿದೆ. ಈ ಯೋಜನೆಯ ಕಾರಣದಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ವಾಕ್ ಶ್ರವಣ ಕೇಂದ್ರ ಪ್ರಾರಂಭಿಸಲಾಗಿದೆ. ಮತ್ತು ಹುಟ್ಟುವ ಎಲ್ಲಾ ಮಕ್ಕಳಿಗೆ ಅತ್ಯಾಧುನಿಕ ತಂತ್ರಜ್ಞಾನದಿಂದ ಕಿವುಡುತನ ತಪಾಸಣೆ ಮಾಡಲಾಗುತ್ತಿದೆ.

ಈ ವರ್ಷ ರಾಜ್ಯದಲ್ಲಿ 500 ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ಮಾಡುವ ಗುರಿಯನ್ನು ಹೊಂದಲಾಗಿದೆ.

ಈ ಯೋಜನೆಯಡಿ ಶಸ್ತ್ರಚಿಕಿತ್ಸೆಗೆ ಮುಂಚಿನ ತಪಾಸಣೆ, ಕಾಕ್ಲಿಯರ್ ಇಂಪ್ಲಾಂಟ್ ಸಾಧನ, ಶಸ್ತ್ರಚಿಕಿತ್ಸೆ ಮತ್ತು ನಂತರದ ವಾಕ್‍ಶ್ರವಣ ಪುನಶ್ಚೇತನ ಚಿಕಿತ್ಸೆ ಇವೆಲ್ಲವೂ ಉಚಿತವಾಗಿರುತ್ತದೆ. ಹಾಗೂ ವಾಕ್‍ಶ್ರವಣ ಪುನಶ್ಚೇತನ ಚಿಕಿತ್ಸೆ ಕ್ಲಿಷ್ಟಕರವಾಗಿದ್ದು ಇದು 8 ರಿಂದ 10 ತಿಂಗಳು ಹಿಡಿಯುತ್ತದೆ.

ಅನೇಕ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಮಾಡಿರುವ ಮತ್ತು ಅನೇಕ ಅತ್ಯಾಧುನಿಕ ಉಪಕರಣಗಳನ್ನು ಹೊಂದಿರುವ ಮೆಗ್ಗಾನ್ ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗಕ್ಕೆ ಈ ಶಸ್ತ್ರಚಿಕಿತ್ಸೆಯ ಅವಕಾಶ ಹೆಮ್ಮೆಯ ಗರಿಯಾಗಿದೆ.

Shivamogga Meggan Hospital ಈ ಶಸ್ತ್ರಚಿಕಿತ್ಸೆಯನ್ನು ಕರ್ನಾಟಕದ ಖ್ಯಾತ ಕಾಕ್ಲಿಯರ್ ಇಂಪ್ಲಾಂಟ್ ಸರ್ಜನ್ ಮತ್ತು ಕಿವಿ ಮೂಗು ಗಂಟಲು ತಜ್ಞರ ರಾಷ್ಟ್ರೀಯ ಅಧ್ಯಕ್ಷರಾಗಿರುವ ಬೆಂಗಳೂರಿನ ಡಾ.ಶಂಕರ್ ಮಡಿಕೇರಿಯವರು ನೆರವೇರಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಪ್ರಾಧ್ಯಾಪಕ ಡಾ.ಕೆ.ಎಸ್.ಗಂಗಾಧರ, ಸಹ ಪ್ರಾಧ್ಯಾಪಕ ಡಾ.ಶ್ರೀಧರ್ ಎಸ್ ಮತ್ತು ಸೀನಿಯರ್ ರೆಸಿಡೆಂಟ್ ಡಾ.ಹಂಸ ಎಸ್ ಶೆಟ್ಟಿ ಇವರನ್ನು ತರಬೇತುಗೊಳಿಸಲಾಗುತ್ತಿದೆ.

ಇನ್ನು ಮುಂದೆ ನಿರಂತರವಾಗಿ ಆಸ್ಪತ್ರೆಯಲ್ಲಿ ಕಾಕ್ಲಿಯಾರ್ ಇಂಪ್ಲಾಂಟ್ ಚಿಕಿತ್ಸೆಯು ಪ್ರಾರಂಭವಾಗಿದ್ದು ಮಾರ್ಚ್ ತಿಂಗಳಲ್ಲಿ ಇನ್ನೂ ಮೂರು ಶಸ್ತ್ರಚಿಕಿತ್ಸೆ ಮಾಡುವ ಗುರಿ ಹೊಂದಲಾಗಿದೆ ಎಂದು ಇಎನ್‍ಟಿ ವಿಭಾಗದ ಮುಖ್ಯಸ್ಥರಾದ ಡಾ.ಕೆ.ಎಸ್.ಗಂಗಾಧರ, ಮೆಗ್ಗಾನ್ ಜಿಲ್ಲಾ ಬೋಧನಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್ ಎಸ್ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟಿಲ್ ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Chikmagalur ಬಲಿಜ ಸಂಘದ ಬೆಳವಣಿಗೆಯನ್ನ ಒಟ್ಟಾಗಿ ಮಾಡೋಣ- ನರೇಂದ್ರನಾಥ್

0

Chikmagalur  ಬಲಿಜ ಸಂಘದ ಬೆಳವಣಿಗೆಗೆ ಜನಾಂಗದ ಪ್ರತಿಯೊಬ್ಬರು ಕೈಜೋಡಿ ಸುವಲ್ಲಿ ಮುಂದಾದಾಗ ಮಾತ್ರ ಸಂಘವನ್ನು ಜಿಲ್ಲಾ ಮಟ್ಟದಲ್ಲಿ ಹೆಚ್ಚು ಅಭಿವೃದ್ದಿಗೊಳಿಸಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಬಲಿಜ ಸಂಘದ ಅಧ್ಯಕ್ಷ ಸಿ.ಎನ್.ನರೇಂದ್ರನಾಥ್ ಹೇಳಿದರು.

ಚಿಕ್ಕಮಗಳೂರು ನಗರದ ಲಯನ್ಸ್ ಸೇವಾ ಭವನದಲ್ಲಿ ಜಿಲ್ಲಾ ಬಲಿಜ ಸಂಘದ ಸರ್ವ ಸದಸ್ಯರ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಸಣ್ಣ ಸಮುದಾಯವಾಗಿರುವ ಬಲಿಜ ಜನಾಂಗದವರು ರಾಜಕೀಯ ಹಾಗೂ ಆರ್ಥಿಕವಾಗಿ ಸದೃಢರಾಗಬೇಕು. ಮುಂಬರುವ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮೂಲಕ ಜನಾಂಗದ ಬೆಳವಣಿಗೆಗೆ ಮುಂದಾಗ ಬೇಕು ಎಂದು ಸಲಹೆ ಮಾಡಿದರು.
ಸಂಘದ ಗೌರವ ಸಲಹೆಗಾರ ಕೆ.ವೆಂಕಟೇಶ್ ಮಾತನಾಡಿ ಜಲಿವು ಸಮುದಾಯವು ಜಿಲ್ಲೆಯಲ್ಲಿ ಸುಮಾರು 21 ಉಪಪಂಡಗಳನ್ನು ಹೊಂದಿದೆ. ಸದ್ಯದ ಪರಿಸ್ಥಿತಿಯಲ್ಲಿ ಸಂಕಷ್ಟವನ್ನು ಎದುರಿಸುತ್ತಿದೆ. ಇದನ್ನು ನಿವಾರಿಸುವ ಎಲ್ಲರೂ ಒಗ್ಗಟ್ಟಾಗಿ ಮುಂದಾಗಿದ್ದಲ್ಲಿ ಜನಾಂಗ ಬೆಳವಣಿಗೆಯಾಗಲು ಸಾಧ್ಯ ಎಂದರು.

Chikmagalur   ತಾಲ್ಲೂಕು ಸಂಘದ ಅಧ್ಯಕ್ಷ ದೇವರಾಜ್ ಮಾತನಾಡಿ ಎಂತಹ ಸಂಕಷ್ಟದ ಸಮಯದಲ್ಲಿದ್ದರೂ ಸಮುದಾ ಯವು ಒಗ್ಗಟ್ಟನ್ನು ಪ್ರದರ್ಶಿಸಬೇಕು. ಎಲ್ಲರನ್ನು ಜೊತೆಗೂಡಿಸಿಕೊಂಡು ಜನಾಂಗದ ಸಭೆ, ಸಮಾರಂಭಗಳಿಗೆ ಭಾಗವಹಿಸಬೇಕು ಎಂದು ಸಲಹೆ ಮಾಡಿದರು.

ಇದೇ ವೇಳೆ ನೂತನ ಪದಗ್ರಹಣ ಪದಾಧಿಕಾರಿಗಳ ಆಯ್ಕೆಯನ್ನು ಹಿಂದಿನ ಕಮಿಟಿಯನ್ನು ಮುಂದುವರೆಸಿ ಕೊಂಡು ನಂತರ ಬದಲಾವಣೆ ಮಾಡಿಕೊಳ್ಳಲಾಗುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಉಪಾಧ್ಯಕ್ಷರಾದ ರಂಗನಾಥಶೆಟ್ಟಿ, ಜಿ.ನಾಗರಾಜ್, ಉಮಾಶಂಕರ್ ನಾಯ್ಡು, ಪ್ರಧಾನ ಕಾರ್ಯದರ್ಶಿ ಕೆ.ವಿ.ಶ್ರೀಧರ್, ಖಜಾಂಚಿ ರತೀಶ್‌ಕುಮಾರ್, ಹಿರಿಯ ಮುಖಂಡ ತಿರುಪಾಲಯ್ಯ, ತರೀಕೆರೆ ಅಧ್ಯಕ್ಷ ಶಿವಣ್ಣ, ಮೂಡಿಗೆರೆ ಅಧ್ಯಕ್ಷ ದಿವಾಕರ, ಬೀರೂರು ಅಧ್ಯಕ್ಷ ರಾಜೇಶ್, ಸದಸ್ಯ ಆನಂದಶೆಟ್ಟಿ, ಮುಖಂಡರುಗಳಾದ ತನೋಜ್ ನಾಯ್ಡು, ರೂಪೇಶ್ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Chikmagalur Jail ಚಿಕ್ಕಮಗಳೂರು ಕಾರಾಗೃಹ ಸಿಬ್ಬಂದಿಯಿಂದ ವಿನೂತನ ಕಾರ್ಯಕ್ರಮ

0

Chikmagalur Jail  ಪ್ರತಿನಿತ್ಯ ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಲ್ಲಿ ಅಧಿಕಾರಿಗಳ ತಂಡ ಬಂಧಿಗಳ ದಾಖ ಲಾತಿ ತಪಾಸಣೆ, ಗದ್ದಲ ಹಾಗೂ ರಾಜೀ ಸಂಧಾನಕ್ಕೆ ನಿರತರಾಗಿರುವ ಸಂದರ್ಭದಲ್ಲಿ ಕಾರಾಗೃಹ ಇಲಾಖೆಯ ಮಹಿಳಾ ಪೇದೆಗೆ ಸೀಮಂತ ನಡೆಸುವ ಮೂಲಕ ಅಪರೂಪ ಕಾರ್ಯಕ್ರಮ ಆಯೋಜಿಸಿ ಸಂಭ್ರಮಿಸುತ್ತಿರುವುದು ಋಷಿ ತಂದಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹ ಅಧೀಕ್ಷಕ ಶ್ರೀಶೈಲಾ ಎಸ್. ಮೇಟಿ ಅವರು ಹೇಳಿದರು.

ಚಿಕ್ಕಮಗಳೂರು ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಆಶ್ರಯದಲ್ಲಿ ನಗರದ ಜಿಲ್ಲಾ ಕಾರಾಗೃಹದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ಕುಟುಂಬ ಕಲ್ಯಾಣ ದಿನಾಚರಣೆ ಪ್ರಯುಕ್ತ ಇಲಾಖೆಯ ಮಹಿಳಾ ಪೇದೆ ಜಿ.ಲಾವಣ್ಯ ಅವರಿಗೆ ಅಧಿಕಾರಿಗಳ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಸೀಮಂತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಸದಾ ಕಾಲ ಗದ್ದಲ, ದೂರು- ಪ್ರತಿ ದೂರು, ರಾಜೀ ಸಂಧಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮಹಿಳಾ ಪೊಲೀಸ್ ಪೇದೆ ಲಾವಣ್ಯ ಅವರಿಗೆ ಸಹೋದ್ಯೋಗಿ ಸಿಬ್ಬಂದಿಗಳು ಆರತಿ ಬೆಳಗಿ, ಮಡಿಲು ತುಂಬುವುದರೊಂದಿಗೆ ಮನದುಂಬಿ ಹರಸಿ, ಬೀಳ್ಕೊಟ್ಟ ಅಪರೂಪದ ಸೀಮಂತ ಕಾರ್ಯಕ್ರಮ ರಾಜ್ಯಾದ್ಯಂತ ಪ್ರಥಮ ಬಾರಿಗೆ ಕಾರಾಗೃಹದಲ್ಲಿ ಆಚರಿಸಿರುವುದು ಸಂತಸದ ವಿಷಯ ಎಂದರು.

ಕಾರಾಗೃಹದಲ್ಲಿ ಉತ್ತಮ ವಾತಾವರಣ ನಿರ್ಮಾಣದ ಜೊತೆಗೆ ಸಹೋದ್ಯೋಗಿ ಸ್ನೇಹಿ ವಾತಾವರಣ ನಿರ್ಮಾಣವಾಗಬೇಕು. ಅಧಿಕಾರಿ, ಸಿಬ್ಬಂದಿ ಎಂಬ ಭೇದಭಾವವಿಲ್ಲದೆ ಎಲ್ಲರೂ ಒಂದೇ ಕುಟುಂಬ ಎಂದು ಕಾರ್ಯನಿರ್ವಹಿಸಿದರೆ ಸಾರ್ವಜನಿಕವಾಗಿ ಉತ್ತಮ ಸೇವೆ ನೀಡಲು ಸಾಧ್ಯ ಎಂದರು.

ಇದೇ ವೇಳೆ ಮಹಿಳಾ ಸಿಬ್ಬಂದಿ, ಅರಿಶಿಣ, ಕುಂಕುಮ ನೀಡುವುದರೊಂದಿಗೆ ತಲೆಗೆ ಹೂ ಮುಡಿಸಿ, ಮಡಿಲು ತುಂಬಿದರು. ನೆರೆದಿದ್ದ ಸಹೋದ್ಯೋಗಿ ಮಿತ್ರರು, ಶುಭವಾಗಲಿ ಎಂದು ಹಾರೈಸಿದರು.

Chikmagalur Jail  ಮಹಿಳಾ ಪೇದೆಯೊಬ್ಬರಿಗೆ ಸೀಮಂತ ಮಾಡುವ ಮೂಲಕ ಕಾರಾಗೃಹದಲ್ಲಿ ಕೌಟುಂಬಿಕ ಸಂಭ್ರಮದ ವಾತಾವರಣ ನಿರ್ಮಾಣಕ್ಕೆ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಸಹಕರಿಸಿದರು.

ಈ ಸಂದರ್ಭದಲ್ಲಿ ಕಾರಾಗೃಹದ ಜೈಲರ್ ಎಂ.ಕೆ.ನೆಲಧರಿ, ಅಧಿಕಾರಿಗಳಾದ ಅಲೀಮುದ್ದಿನ್, ವನಖಂಡೆ, ಬೊಂಗಾಳೆ, ಸಿಬ್ಬಂದಿಗಳಾದ ವಿನಾಯಕ ಮತ್ತಿತರರು ಉಪಸ್ಥಿತರಿದ್ದರು.

ook Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.