Monday, April 6, 2026
Monday, April 6, 2026
Home Blog Page 1297

Power Cut in Shimogga ಫೆ. 28ರಂದು ಶಿವಮೊಗ್ಗದ ವಿವಿಧಡೆ ವಿದ್ಯುತ್ ವ್ಯತ್ಯಯ

0

Power Cut in Shimogga ಫೆ.28 ರಂದು ಪರಿವರ್ತಕ ಅಳವಡಿಸುವ ಕಾಮಗಾರಿ ಇರುವುದರಿಂದ ಫೀಡರ್-3 ರ 11 ಕೆವಿ ಮಾರ್ಗ ಮುಕ್ತತೆ ನೀಡುವ ಕಾರಣ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯಾನಗರ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ವೆಂಕಟೇಶ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Chikkamagalur taxi services ಚಿಕ್ಕಮಗಳೂರಿನಲ್ಲಿ ಸೆಲ್ಫ್ ಬೈಕ್ ಗಳ ಹಾವಳಿಯಿಂದ ಟ್ಯಾಕ್ಸಿ, ಆಟೋ ಚಾಲಕರಿಗೆ ತೊಂದರೆ

0

Chikkamagalur taxi services ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದೀಗ ಸೆಲ್ಪ್ ಬೈಕ್‌ಗಳ ಹಾವಳಿ ಹೆಚ್ಚಾಗಿರುವ ಕಾರಣ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ತೀವ್ರ ತೊಂದರೆಯಾಗುತ್ತಿದ್ದು ಕೂಡಲೇ ನಗರದಲ್ಲಿ ಸೆಲ್ಪ್ ಬೈಕ್‌ಗಳ ಪರವಾನಗಿ ನೀಡುವುದನ್ನು ಸ್ಥಗಿತಗೊಳಿಸಬೇಕು ಎಂದು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘ ಹಾಗೂ ಜಿಲ್ಲಾ ಟ್ಯಾಕ್ಸಿ ಯೂನಿಯನ್ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವನ್ನು ಒತ್ತಾಯಿಸಿದೆ.

ಈ ಸಂಬಂಧ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಮನವಿ ಸಲ್ಲಿಸಿದ ಆಟೋ ಮತ್ತು ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರುಗಳು ಸೆಲ್ಪ್ ಬೈಕ್‌ಗಳ ಪರವಾನಗೆ ನೀಡುವುದರಿಂದ ಸ್ಥಳೀಯವಾಗಿ ಕಾರ್ಯನಿರ್ವಹಿ ಸುತ್ತಿರುವ ಚಾಲಕರಿಗೆ ತೀವ್ರ ತೊಂದರೆಯಾಗಲಿದೆ ಎಂದು ಹೇಳಿದರು.

Chikkamagalur taxi services ಈ ವೇಳೆ ಮಾತನಾಡಿದ ಆಟೋ ಸಂಘದ ಕಾರ್ಯದರ್ಶಿ ಜಗದೀಶ್ ಕೋಟೆ ನಗರದಲ್ಲಿ ನಾಲ್ಕು ಸಾವಿರ ಆಟೋ ಚಾಲಕರುಗಳು ವಾಹನವನ್ನು ನಂಬಿ ಜೀವನ ಸಾಗಿಸುತ್ತಿದ್ದಾರೆ. ಇದೀಗ ಸೆಲ್ಪ್ ಬೈಕ್‌ಗಳ ಹಾವಳಿ ಹೆಚ್ಚಾಗಿರುವ ಪರಿಣಾಮ ದಿನನಿತ್ಯದ ದುಡಿಮೆಗೂ ಸಂಕಷ್ಟ ಎದುರಾಗಿ ಪರಿತಪಿಸುವಂತಾಗಿದೆ ಎಂದು ಹೇಳಿದರು.

ಸುಮಾರು ಹತ್ತು ಲಕ್ಷ ಜನಸಂಖ್ಯೆ ಹೊಂದಿರುವ ಜಿಲ್ಲೆಗೆ ಮಾತ್ರ ಸೆಲ್ಪ್ ಬೈಕ್‌ಗಳಿಗೆ ಅನುಮತಿಯಿದೆ. ಆದರೆ ಚಿಕ್ಕಮಗಳೂರು ತಾಲ್ಲೂಕಿನಲ್ಲಿ 50 ಸಾವಿರ ಜನಸಂಖ್ಯೆ ಹೊಂದಿರುವ ಕಾರಣ ಸೆಲ್ಪ್ ಬೈಕ್‌ಗಳಿಗೆ ಅನುಮತಿ ನೀಡಲು ಅವಕಾಶವಿರುವುದಿಲ್ಲ.

ಆ ನಿಟ್ಟಿನಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಬೈಕ್‌ಗಳಿಗೆ ಅನುಮತಿ ನೀಡುವುದನ್ನು ತಡೆಹಿಡಿದು ಬಡ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ಕಳೆದ ಕೊರೋನಾ ಸಂಕಷ್ಟದಿಂದ ಚಾಲಕರು ಸ್ವಲ್ಪಮಟ್ಟಿನಲ್ಲಿ ಚೇತರಿಕೆ ಕಾಣುತ್ತಿದ್ದಾರೆ. ಈ ನಡುವೆೆ ಪೆಟ್ರೋಲ್, ಡೀಸೆಲ್ ದರ ಹಾಗೂ ವಾಹನಗಳ ಬಿಡಿಭಾಗಗಳು ಏರಿಕೆಯಾಗಿದೆ. ಸುಮಾರು 250 ಸೆಲ್ಪ್ ಬೈಕ್‌ಗಳು ನಗರದಲ್ಲಿ ಸಂಚರಿಸುತ್ತಿದ್ದು ಇದರಿಂದ ಆಟೋ ಹಾಗೂ ಟ್ಯಾಕ್ಸಿ ಚಾಲಕರುಗಳಿಗೆ ಜೀವನ ನಡೆಸಲು ಕಷ್ಟಕರವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಟ್ಯಾಕ್ಸಿ ಯೂನಿಯನ್ ಅಧ್ಯಕ್ಷ ಮಂಜೇಗೌಡ ಮಾತನಾಡಿ ನಗರದಲ್ಲಿ ಒಂದು ಸಾವಿರ ಟ್ಯಾಕ್ಸಿ ಚಾಲಕರು, ಮಾಲೀಕರು ವಾಹನವನ್ನು ನಂಬಿಕೊಂಡು ಬದುಕುತ್ತಿದ್ದು ಇದೀಗ ಸೆಲ್ಪ್ ಬೈಕ್‌ಗಳ ಹಾವಳಿಯಿಂದ ತೊಂದರೆ ಎದುರಾಗಿರುವ ಕಾರಣ ಕೂಡಲೇ ಸಾರಿಗೆ ಪ್ರಾಧಿಕಾರದ ಅಧಿಕಾರಿಗಳು ಸೆಲ್ಪ್ ಬೈಕ್‌ಗಳಿಗೆ ಕಡಿವಾಣ ಹಾಕಿ ಟ್ಯಾಕ್ಸಿ ಚಾಲಕರಿಗೆ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಸಾರಿಗೆ ಪ್ರಾಧಿಕಾರದ ಈ ನಿರ್ಧಾರದಿಂದ ಚಾಲಕರಿಗೆ ಮರಣ ಶಾಸನ ಬರದಂತಾಗಿ ಜೀವನ ನಡೆಸಲು ದುಸ್ಥಿತಿಗೆ ತಂದೊಡ್ಡಿದೆ. ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿರ್ವಾಯತೆ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಆಟೋ ಸಂಘದ ಅಧ್ಯಕ್ಷ ಆರ್.ರಾಮೇಗೌಡ, ಉಪಾಧ್ಯಕ್ಷ ಎಸ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಹೆಚ್.ಸಿ.ರಾಘವೇಂದ್ರ, ಕಾರ್ಯಾಧ್ಯಕ್ಷ ಉದಯ್‌ಕುಮಾರ್, ಟ್ಯಾಕ್ಸಿ ಯೂನಿಯನ್ ಪ್ರಧಾನ ಕಾರ್ಯದರ್ಶಿ ಸತೀಶ್‌ಕುಮಾರ್, ಚಾಲಕರಾದ ದಿನೇಶ್, ಭರತ್, ಆದರ್ಶ, ವಸಂತ್, ಸುಶೀಲ್, ಕುಮಾರ್, ವಿನೋದ್, ರಮೇಶ್, ಶಂಭು ಮತ್ತಿತರರು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Marikamba Temple ಫೆ 25 ಮತ್ತು 26 ರಂದು ಉಪ್ಪಳ್ಳಿ ಮಾರಿಯಮ್ಮ ಗೋಪುರ ಕುಂಭಾಭಿಷೇಕ

0

Marikamba Temple ಫೆ. 25 ಮತ್ತು 26 ರಂದು ಉಪ್ಪಳ್ಳಿ ಮಾರಿಯಮ್ಮ ಗೋಪುರ ಕುಂಭಾಭಿಷೇಕಚಿಕ್ಕಮಗಳೂರಿನ ಉಪ್ಪಳ್ಳಿಯ ಶ್ರೀ ಮಾರಿಯಮ್ಮ ದೇವಸ್ಥಾನದ ಗೋಪುರ ಮಹಾ ಕುಂಭಾಭಿಷೇಕ, ಭೂತಪ್ಪಸ್ವಾಮಿ ಪ್ರತಿಷ್ಟಾಪನೆಯನ್ನು ಫೆ.25 ರಿಂದ 26ರವರೆಗೆ ಹಮ್ಮಿಕೊಳ್ಳಲಾಗಿದೆ.

Marikamba Temple ಫೆ. 25 ಮತ್ತು 26 ರಂದು ಉಪ್ಪಳ್ಳಿ ಮಾರಿಯಮ್ಮ ಗೋಪುರ ಕುಂಭಾಭಿಷೇಕಫೆ.25ರಂದು ಗೋಪೂಜೆ, ವಾಸ್ತುಮಂಡಲಪೂಜೆ, ವಾಸ್ತುಹೋಮ, ಬಲಿ ಹಾಕುವ ಕಾರ್ಯಕ್ರಮವಿದೆ. ಫೆ.26 ರಂದು ಗಂಗೆಪೂಜೆ, ಶುದ್ಧಪುಣ್ಯಾಹವಾಚನ, ಬಿಂಬಶುದ್ಧಿ, ಕಳಾತತ್ವ, ನವಗ್ರಹ, ದುರ್ಗಾ ಹೋಮ, ಪೂರ್ಣಾಹುತಿ, ತೀರ್ಥ ಪ್ರಸಾದ ವಿತರಣೆ ಜರುಗಲಿದ್ದು ಮಧ್ಯಾಹ್ನ 1:00 ಗಂಟೆಗೆ ಸಾರ್ವಜನಿಕ ಸಂತರ್ಪಣೆ ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಮುರುಗೇಶ್ ತಿಳಿಸಿದ್ದಾರೆ.

CPI Chikkamagalurನಿರಾಶ್ರಿತರಿಗೆ ನಿವೇಶನ ಹಂಚಲು ಚಿಕ್ಕಮಗಳೂರು ಜಿಲ್ಲಾ ಸಿಪಿಐ ಒತ್ತಾಯ

0

CPI Chikkamagalur ಚಿಕ್ಕಮಗಳೂರು ತಾಲ್ಲೂಕಿನ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಸಿಪಿಐ ಹಾಗೂ ತಾಲ್ಲೂಕು ಕಟ್ಟಡ ಕಾರ್ಮಿಕರ ಸಂಘದ ಚಳುವಳಿ ಇಂದಿಗೆ ನಾಲ್ಕನೇ ದಿನ ಕಳೆದರೂ ಯಾವುದೇ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಉಪವಾಸ ಸತ್ಯಾಗ್ರಹ ಮತ್ತು ಜಿಲ್ಲಾ ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ರಾಧಾಸುಂದ್ರೇಶ್ ಎಚ್ಚರಿಸಿದರು.

CPI Chikkamagalur ಪ್ರತಿಭಟನಾ ವೇಳೆಯಲ್ಲಿ ಮಾತನಾಡಿದ ಅವರು ಕಳೆದ ನಾಲ್ಕು ದಿನಗಳಿಂದ ಕೂಲಿಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ಜಿಲ್ಲಾಡಳಿತ ಅಥವಾ ಜನಪ್ರತಿನಿಧಿಗಳಾಗಲೀ ಪ್ರಶ್ನಿಸದೇ ತಮ್ಮ ಪಾಡಿಗೆ ಇರು ವುದು ವ್ಯಕ್ತವಾಗುತ್ತಿದ್ದು ಸೋಮವಾರದ ನಂತರ ಉಗ್ರವಾದ ಚಳುವಳಿ ನಡೆಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ, ತಹಶೀಲ್ದಾರ್‌ರವರು ಪ್ರತಿಭಟನೆ ನಡೆಸುತ್ತಿದ್ದವವರ ಸ್ಥಳಕ್ಕೆ ಭೇಟಿ ನೀಡದೇ ಸುಖಸುಮ್ಮನೆ ಕೆಲಸ ಮಾಡುತ್ತಿದ್ದಾರೆ. ಭಾರತದ ದೇಶದ ಪ್ರಜೆಗಳಾದ ನಿವಾಸಿಗಳಾದ ನಿವೇಶನ ರಹಿತರಿಗೆ ನಿವೇಶನವನ್ನು ಒದಗಿಸುವಲ್ಲಿ ವಿಳಂಭ ಧೋರಣೆ ತಾಳಿರುವುದು ಸರಿಯಾದ ವಿಚಾರ ಎಂದು ದೂರಿದರು.

ಬಿಜೆಪಿ ವಕ್ತಾರರಂತೆ ಜಿಲ್ಲಾ ದಂಡಾಧಿಕಾರಿಗಳು ಕಾರ್ಯನಿರ್ವಹಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಇಲ್ಲಿನ ನೂರಾರು ಕೂಲಿಕಾರ್ಮಿಕರು ಸರ್ಕಾರದ ಭೂಮಿಯನ್ನು ನಿವೇಶನಕ್ಕಾಗಿ ಒತ್ತಾಯಿಸಿದ್ದಾರೆಯೇ ಹೊರತು ಬಂಗಾಲೆ ನಿರ್ಮಿಸಿ ಕೊಡಿ ಎಂದು ಕೇಳುತ್ತಿಲ್ಲ. ಇದನ್ನು ಜಿಲ್ಲಾ ಹಾಗೂ ತಾಲ್ಲೂಕು ದಂಡಾಧಿಕಾರಿಗಳು ಅರಿತುಕೊಂಡು ಸಮಸ್ಯೆ ಬಗೆಹರಿಸುವಲ್ಲಿ ಮುಂದಾಗಬೇಕು ಎಂದರು.

ಇದೇ ರೀತಿ ಕಾರ್ಮಿಕರನ್ನು ನಿರ್ಲಕ್ಷೀಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾದರೆ ಸೋಮವಾರ ನಂತರ ಚಳುವಳಿ ರೂಪ ಬದಲಾಗಲಿದ್ದು ಒಂದು ತಂಡ ಉಪವಾಸ ಸತ್ಯಾಗ್ರಹ ನಡೆಸಿದರೆ ಇನ್ನೊಂ ದೆಡೆ ಎಲ್ಲಾ ತಾಲ್ಲೂಕು ಸಂಘದಿಂದ ರ‍್ಯಾಲಿಗಳ ಮೂಲಕ ಜಿಲ್ಲಾ ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಕೆಲಸ ಮಾಡಲಾಗುವುದು ಎಂದು ಎಚ್ಚರಿಸಿದರು.

ನಂತರ ಒಂದೊಂದು ದಿನವು ಆಯಾ ಗ್ರಾಮ ಪಂಚಾಯಿತಿಗಳಿಗೆ ತೆರಳಿ ಪಂಚಾಯಿತಿಗೆ ಬೀಗ ಹಾಕುವ ಮೂಲಕ ಬಂದ್ ಮಾಡಿಸಿ ಪ್ರತಿಭಟನೆ ನಡೆಸಲಾಗುವುದು. ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮ ವಹಿಸದಿದ್ದಲ್ಲಿ ಸಿಪಿಐ ಹಾಗೂ ಕಟ್ಟಡ ಕಾರ್ಮಿಕರ ಸಂಘದಿಂದ ಕೂಲಿ ಕಾರ್ಮಿಕರಿಗೆ ನ್ಯಾಯ ದೊರೆಯುವವರೆಗೂ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಪಕ್ಷದ ನಗರ ಕಾರ್ಯದರ್ಶಿ ವಸಂತ್‌ಕುಮಾರ್ ಮಾತನಾಡಿ ಪ್ರತಿಭಟನೆಯು ಮೊದಲನೇ ದಿನದಲ್ಲಿ ಕಡವಂತಿ, ಎರಡನೇ ದಿನ ಬೆಳಗುಳ, ಮೂರನೇ ದಿನ ಮಲ್ಲಂದೂರು, ನಾಲ್ಕನೇ ದಿನವಾದ ಇಂದು ಆಲ್ದೂರು ನಿವೇಶನ ರಹಿತರು ಪ್ರತಿಭಟನೆ ನಡೆಸುತ್ತಿದ್ದು ಐದನೇ ದಿನಕ್ಕೆ ಬಣಕಲ್ ಗ್ರಾಮಸ್ಥರು ಬರಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಖಜಾಂಚಿ ಹೆಚ್.ಎಂ.ರೇಣುಕಾರಾಧ್ಯ, ಸಹ ಕಾರ್ಯದರ್ಶಿ ಜಿ.ರಘು, ತಾಲ್ಲೂಕು ಕಾರ್ಯದರ್ಶಿ ಕೆರೆಮಕ್ಕಿ ರಮೇಶ್, ಸೋಮೇಗೌಡ ಆಲ್ದೂರು ಗ್ರಾಮಸ್ಥರಾದ ರವಿ, ಹೆಡದಾಳು ಕುಮಾರ್ ಮತ್ತಿತರರು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

KSRTC Bus ಫೆ. 27 ಶಿವಮೊಗ್ಗ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ವ್ಯತ್ಯಯ ಸಹಕರಿಸಲು ರಾಜ್ಯ ಸಾರಿಗೆ ಸಂಸ್ಥೆ ಮನವಿ

0

KSRTC Bus ಫೆ.27ರಂದು ಭಾರತ ಸರ್ಕಾರದ ಪ್ರಧಾನ ಮಂತ್ರಿಗಳು ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆ ಮಾಡುವುದರಿಂದ ಫೆ. 26 ರ ಮಧ್ಯಾಹ್ನದಿಂದ 27 ರವರೆಗೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಕ.ರಾ.ರ.ಸಾ.ನಿಗಮದ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
KSRTC Bus ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ಆಗಮಿಸುವ ಸಲುವಾಗಿ ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 200 ವಾಹನಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ. ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಶಿವಮೊಗ್ಗ ವಿಭಾಗದ ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Deputy Commissioner Shivamogga ಫೆ 27 ವಿಮಾನ ನಿಲ್ದಾಣ ಉದ್ಘಾಟನೆ ಡಾ.ಸೆಲ್ವಮಣಿ ಅವರಿಂದ ಕಾರ್ಯಕ್ರಮ ವಿವರ

0

Deputy Commissioner Shivamogga  ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.

ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ವಿಮಾನ ನಿಲ್ದಾಣ ಮತ್ತು ಇತರೆ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮದ ಸಿದ್ದತೆ ಕುರಿತು ಮಾಹಿತಿ ನೀಡಿದರು.

ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತವು ಸಾರ್ವಜನಿಕರನ್ನು ಸ್ವಾಗತಿಸುತ್ತಿದ್ದು, 1 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 02 ಕಡೆ ಊಟದ ವ್ಯವಸ್ಥೆ ಇದ್ದು ಒಂದೊಂದು ಕಡೆ 100 ಕೌಂಟರ್‍ಗಳನ್ನು ತೆರೆಯಲಾಗುವುದು. ಕಾರ್ಯಕ್ರಮದ ವೀಕ್ಷಣೆಗೆ 04 ಕಡೆ ವಿಶಾಲವಾದ ಪ್ರಾಜೆಕ್ಟರ್‍ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಹಾಗೂ ಕಾರ್ಯಕ್ರಮಕ್ಕೆ ಅಗತ್ಯವಾದ ಎಲ್ಲ ಸಿದ್ದತೆಗಳೊಂದಿಗೆ ಸೂಕ್ತ ಪೊಲೀಸ್ ಬಂಧೋಬಸ್ತ್ ಮಾಡಲಾಗಿದೆ ಎಂದರು.

ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ವಿವರ:

Deputy Commissioner Shivamogga ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ ರೂ.449.22 ಕೋಟಿ ವೆಚ್ಚದಲ್ಲಿ ಎಟಿಆರ್ 72 ರಿಂದ ಏರ್‍ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ 3.2 ಕಿ.ಮೀ ರನ್‍ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳೊಂದಿಗೆ ನಿರ್ಮಿಸಿರುವ ವಿಮಾನ ನಿಲ್ದಾಣ.

ರೂ.995 ಕೋಟಿ ವೆಚ್ಚದಲ್ಲಿ 103 ಕಿ.ಮೀ ಉದ್ದದ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ಶಂಕುಸ್ಥಾಪನೆ, ರೂ.97.18 ಕೋಟಿ ವೆಚ್ಚದಲ್ಲಿ ಕೋಟೆಗಂಗೂರಿನಲ್ಲಿ ರೈಲ್ವೇ ಕೋಚಿಂಗ್ ಡಿಪೋ, ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ರೂ.862 ಕೋಟಿ ಮೊತ್ತದ ಕಾಮಗಾರಿ ಶಂಕುಸ್ಥಾಪನೆ ಮತ್ತು ರೂ.91.50 ಕೋಟಿ ಮೊತ್ತದ ಕಾಮಗಾರಿ ಲೋಕಾರ್ಪಣೆ.

ರೂ.66.44 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 766ಸಿ ಬೈಂದೂರು-ರಾಣೆಬೆನ್ನೂರು ರಸ್ತೆಯಲ್ಲಿ 14.77 ಕಿಮೀ ಉದ್ದದ ಶಿಕಾರಿಪುರ ಬೈಪಾಸ್ ನಿರ್ಮಾಣ, ರೂ.96.20 ಕೋಟಿ ವೆಚ್ಚದಲ್ಲಿ ರಾ.ಹೆ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಮೇಗರವಳ್ಳಿಯಿಂದ ಆಗುಂಬೆವರೆಗೆ 17.77 ಕಿ.ಮೀ ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ.

ರೂ.56.56 ಕೋಟಿ ವೆಚ್ಚದಲ್ಲಿ ರಾ.ಹೆ 169 ಶಿವಮೊಗ್ಗ-ಮಂಗಳೂರು ರಸ್ತೆಯ ತೀರ್ಥಹಳ್ಳಿ ತಾಲ್ಲೂಕಿನ ಭಾರತೀಪುರ ಬಳಿ 1.29 ಕಿ.ಮೀ ರಸ್ತೆ ನಿರ್ಮಾಣ ಮತ್ತು ತಿರುವಿನ ಅಭಿವೃದ್ದಿ.

ಒಟ್ಟು ರೂ.896.16 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ನಿರ್ಮಾಣಗೊಂಡಿರುವ 44 ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ, ಶಿಮುಲ್ ಶಿವಮೊಗ್ಗ ಕೇಂದ್ರ ಡೇರಿ ಆವರಣದಲ್ಲಿ ರೂ.45 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರೂ.2 ಲಕ್ಷ ಲೀಟರ್ ಸಾಮಥ್ರ್ಯದ ಹಾಲು, ಮೊಸಲು ಮತ್ತು ಮಜ್ಜಿಗೆ ಪ್ಯಾಕಿಂಗ್ ಘಟಕ ಕಟ್ಟಡ ಉದ್ಘಾಟನ ಹಾಗೂ ನಗರದ ಎಪಿಎಂಸಿ ಆವರಣದಲ್ಲಿ ರೂ.8 ಕೋಟಿ ವೆಚ್ಚಲ್ಲಿ ನಿರ್ಮಿಸಿರುವ ಮ್ಯಾಮ್‍ಕೋಸ್‍ನ 4 ಅಂತಸ್ತುಗಳ ಆಡಳಿತ ಕಚೇರಿ ಕಟ್ಟಡದ ಉದ್ಘಾಟನೆಯನ್ನು ಮಾನ್ಯ ಪ್ರಧಾನಮಂತ್ರಿಗಳು ನೆರವೇರಿಸುವರು ಎಂದು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ, ಕಾರ್ಯಕ್ರಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಲ್ಲ ಕಡೆ ಸಿಸಿ ಕ್ಯಾಮೆಗಳನ್ನು ಅಳವಡಿಸಲಾಗಿದೆ. ಎಲ್ಲ ಸಾರ್ವಜನಿಕರು ಬೆಳಿಗ್ಗೆ 10 ಗಂಟೆಯ ಒಳಗೆ ಕಾರ್ಯಕ್ರಮದ ಆವರಣದೊಳಗೆ ಬರಬೇಕು.

ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇದ್ದು, ನಿಗದಿಪಡಿಸಿದ ಸ್ಥಳದಲ್ಲಿಯೇ ವಾಹನಗಳನ್ನು ನಿಲ್ಲಿಸಬೇಕು.

ಯಾರೂ ಕೂಡ ಕಪ್ಪು ಬಣ್ಣದ ಬಟ್ಟೆ, ಕರ್ಚೀಫ್‍ಗಳನ್ನು ಧರಿಸಿ ಬರುವಂತಿಲ್ಲ. ನೀರಿನ ಬಾಟಲ್, ಹ್ಯಾಂಡ್ ಬ್ಯಾಗ್ ಮತ್ತು ಕಪ್ಪು ಕರ್ಚೀಫ್‍ಗಳನ್ನು ತರುವಂತಿಲ್ಲ. ಮೊಬೈಲ್ ಮತ್ತು ಪರ್ಸ್‍ಗೆ ಮಾತ್ರ ಅವಕಾಶ ಇರುತ್ತದೆ. ಎರಡು ಹಂತದ ತಪಾಸಣೆ ಇರುತ್ತದೆ ಎಂದು ತಿಳಿಸಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Deputy Commissioner Shimoga ಫೆ.26 ಮತ್ತು 27 ರಂದು ಶಿವಮೊಗ್ಗದಲ್ಲಿ ವಾಹನ ಸಂಚಾರ ಕಡ್ಡಾಯ ಮಾರ್ಗಸೂಚಿ- ಡಾ.ಸೆಲ್ವಮಣಿ

0

Deputy Commissioner Shimoga ಫೆ.27 ರಂದು ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಹಾಗೂ ಈ ಕಾರ್ಯಕ್ರಮಕ್ಕೆ ಸುತ್ತಮುತ್ತಲ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು , ವಾಹನಗಳು ಬರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಕೆಳಕಂಡಂತೆ ಶೂನ್ಯ ಸಂಚಾರ ರಸ್ತೆ ಮಾರ್ಗ ಮತ್ತು ವಾಹನ ಸಂಚಾರಕ್ಕೆ ಬದಲಿ ಮಾರ್ಗಗಳ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೊರಡಿಸಿದ್ದಾರೆ.

ಶೂನ್ಯ ಸಂಚಾರ ರಸ್ತೆ ಮಾರ್ಗ:

Deputy Commissioner ದಿನಾಂಕ: 26-06-2023 ಮತ್ತು 27-02-2023 ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ಸರ್ಕಲ್‍ನಿಂದ ಎನ್.ಆರ್.ಪುರ ರಸ್ತೆ ಲಕ್ಕಿನಕೊಪ್ಪ ಸರ್ಕಲ್‍ವರೆಗೆ, ಮತ್ತೂರು-ಮಂಡೇನಕೊಪ್ಪ-ಸೋಗಾನೆ ವಿಮಾನ ನಿಲ್ದಾಣದವರೆಗೆ ಶೂನ್ಯ ಸಂಚಾರ ರಸ್ತೆ ಎಂದು ಅಧಿಸೂಚಿಸಲಾಗಿದೆ.

ಸಾರ್ವಜನಿಕ ವಾಹನಗಳ ಮಾರ್ಗ ಬದಲಾವಣೆ (ದಿ: 27-02-2023 ರಂದು ಮಾತ್ರ):
• ಎನ್.ಆರ್.ಪುರದಿಂದ-ಭದ್ರಾವತಿ ಕಡೆಗೆ ಹೋಗುವ ವಾಹನಗಳು ಉಂಬ್ಳೆಬೈಲ್-ಹುಣಸೆಕಟ್ಟೆ-ಜಂಕ್ಷನ್ ಮೂಲಕ ಭದ್ರಾವತಿಗೆ ಹೋಗುವುದು.
• ಶಿಕಾರಿಪುರ-ಹೊನ್ನಾಳಿ-ದಾವಣಗೆರೆ ಕಡೆಯಿಂದ ಎನ್.ಆರ್.ಪುರಕ್ಕೆ ಹೋಗುವ ವಾಹನಗಳು ಶಿವಮೊಗ್ಗ ನಗರಕ್ಕೆ ಬಂದು ತೀರ್ಥಹಳ್ಳಿ ರಸ್ತೆ(ಎನ್.ಟಿ.ರಸ್ತೆ) ಮೂಲಕ ಎನ್.ಆರ್.ಪುರಕ್ಕೆ ಹೋಗುವುದು.

• ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂ ಮಂಡ್ಲಿ ಸರ್ಕಲ್-ಗೋಪಾಳ ಸರ್ಕಲ್-ಆಲ್ಕೊಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಗೆ ಬಂದು ಸೇರುವುದು.

• ಸಾಗರ ರಸ್ತೆ ಕಡೆಯಿಂದ ತೀರ್ಥಹಳ್ಳಿ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೋಳ ಸರ್ಕಲ್-ಗೋಪಾಳ ಸರ್ಕಲ್-ನ್ಯೂ ಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು.

ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಮಾರ್ಗ (ದಿ: 27-02-2023 ರಂದು ಮಾತ್ರ):

• ಕಾರ್ಯಕ್ರಮಕ್ಕೆ ಆಗಮಿಸುವ ವಿವಿಐಪಿ ಪಾಸ್ ಹೊಂದಿರುವ ಗಣ್ಯರು ಶಿವಮೊಗ್ಗ ನಗರದಿಂದ ಬೈಪಾಸ್-ಊರಗಡೂರು ಸರ್ಕಲ್-ಸೂಳೆಬೈಲು-ಮತ್ತೂರು ರಸ್ತೆ ಎಡಭಾಗಕ್ಕೆ ತಿರುವು ಪಡೆದುಕೊಂಡು-ಮಂಡೇನಕೊಪ್ಪ ಮುಖಾಂತರ ಸೋಗಾನೆ ವಿಮಾನ ನಿಲ್ದಾಣಕ್ಕೆ ತಲುಪುವುದು.

• ತೀರ್ಥಹಳ್ಳಿ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಭಾಗದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ತೀರ್ಥಹಳ್ಳಿ ರಸ್ತೆ-ಮುಡುಬ ಬಲಕ್ಕೆ ತಿರುಗಿ ಶಂಕರಪುರ-ಉಂಬ್ಳೇಬೈಲು ಮುಖಾಂತರ ಲಕ್ಕಿನಕೊಪ್ಪ ಸರ್ಕಲ್‍ಗೆ ಬಂದು ಸೇರುವುದರಿಂದ ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್‍ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.

• ಸಾಗರ, ಶಿಕಾರಿಪುರ, ಸೊರಬ, ಹೊಸನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಶಿವಮೊಗ್ಗ ನಗರದಿಂದ ಅಶೋಕ ಸರ್ಕಲ್-ಬಿ.ಹೆಚ್.ರಸ್ತೆ-ಎಎ ಸರ್ಕಲ್-ಶಂಕರಮಠ ಸರ್ಕಲ್-ಹೊಳೆಹೊನ್ನೂರು ಸರ್ಕಲ್-ಎಂ.ಆರ್.ಎಸ್ ಸರ್ಕಲ್‍ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‍ಫೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.

• ಶಿಕಾರಿಪುರ, ಹೊನ್ನಾಳಿ, ದಾವಣಗೆರೆ ಕಡೆಯಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂ.ಆರ್.ಎಸ್ ಸರ್ಕಲ್‍ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‍ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.

• ಶಿವಮೊಗ್ಗ ನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂಆರ್‍ಎಸ್ ಸರ್ಕಲ್ ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏಪ್‍ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು

• ತರೀಕೆರೆ, ಭದ್ರಾವತಿ, ಕಡೂರು, ಚಿಕ್ಕಮಗಳೂರು ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಭದ್ರಾವತಿ ನಗರದ ಕೃಷ್ಣಪ್ಪ ನಗರದ ಕೃಷ್ಣಪ್ಪ ಸರ್ಕಲ್‍ನಿಂದ ಎಡಕ್ಕೆ ತಿರುಗಿ-ಹಿರಿಯೂರು ಸರ್ಕಲ್-ತಾರೀಕಟ್ಟೆ ಸರ್ಕಲ್-ಹೆಚ್.ಕೆ.ಜಂಕ್ಷನ್-ಲಕ್ಕಿನಕೊಪ್ಪ ಸರ್ಕಲ್‍ಗೆ ಬಂದು ಸೇರುವುದು. ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್‍ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು ಎಂದು ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

City Corporation Shivamogga ಶಿವಮೊಗ್ಗ ಪೌರ ಕಾರ್ಮಿಕ ಹುದ್ದೆಗಳ ನೇಮಕದ ತಾತ್ಕಾಲಿಕ ಪಟ್ಟಿಯ ಅಧಿಸೂಚನೆ

0

City Corporation Shivamogga ಶಿವಮೊಗ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಭದ್ರಾವತಿ, ಸಾಗರ ನಗರಸಭೆ ಹಾಗೂ ಶಿಕಾರಿಪುರ, ಸೊರಬ, ಶಿರಾಳಕೊಪ್ಪ ಪುರಸಭೆ ಮತ್ತು ತೀರ್ಥಹಳ್ಳಿ, ಹೊಸನಗರ, ಜೋಗ್-ಕಾರ್ಗಲ್ ಪಟ್ಟಣ ಪಂಚಾಯಿತಿ ಇಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ಕರ್ನಾಟಕ ಪೌರಸಭೆಗಳ (ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿನ ಪೌರಕಾರ್ಮಿಕ ನೇಮಕಾತಿ) (ವಿಶೇಷ) ನಿಯಮಗಳು 2022 ರ ರೀತ್ಯಾ ಭರ್ತಿ ಮಾಡಲು ತಾತ್ಕಾಲಿಕ ಆಯ್ಕೆ ಪಟ್ಟಿಯ ಅಧಿಸೂಚನೆಯನ್ನು ಹೊರಡಿಸಲಾಗಿದೆ.

City Corporation Shivamogga ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಗಳೇನಾದರೂ ಇದ್ದಲ್ಲಿ ಈ ಅಧಿಸೂಚನೆ ಹೊರಡಿಸಿದ 7 ದಿನಗಳೊಳಗಾಗಿ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ ಶಿವಮೊಗ್ಗ ಇಲ್ಲಿ ಕಚೇರಿ ವೇಳೆಯಲ್ಲಿ ಲಿಖಿತ ರೂಪದಲ್ಲಿ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.

ಈ ಅಧಿಸೂಚನೆಯನ್ನು ಆಯಾ ನಗರ ಸ್ಥಳೀಯ ಸಂಸ್ಥೆಗಳ ವೆಬ್‍ಸೈಟ್‍ನಲ್ಲಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ವೆಬ್‍ಸೈಟ್ ಹಾಗೂ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಕಚೇರಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಶಿವಮೊಗ್ಗ ಇಲ್ಲಿ ಪ್ರಕಟಿಸಲಾಗಿರುತ್ತದೆಂದು ಶಿವಮೊಗ್ಗ ಪೌರಕಾರ್ಮಿಕ ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.Book Your Advertisement Now.
Our site will give you the option of the best Article available in the selected arcityea along with their Analytics of advertisement. You can choose the Keelambi Media Lab Pvt Ltd according to your need/budget.

C.T. Ravi ಸಿ.ಟಿ.ರವಿ ಹೇಳಿಕೆ ವಿರುದ್ಧ ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ

0

C.T. Ravi ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಮುಸ್ಲೀಂ ಜನ್ಮ ಬೇಕೆನ್ನು ವುದಾದರೆ ಯಾಕೆ ತಡ ಮಾಡುತ್ತೀರಿ ತಕ್ಷಣವೇ ತೆರಳಿ, ಮುಂದಿನ ಜನ್ಮವೆಂಬುದು ಇರುವುದಿಲ್ಲ ಎಂದು ಹೇಳಿಕೆ ನೀಡಿರುವ ಶಾಸಕ ಸಿ.ಟಿ.ರವಿ ವಿರುದ್ಧ ಜಾತ್ಯಾತೀತ ಜನತಾದಳದ ಮುಖಂಡರುಗಳು ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಚಿಕ್ಕಮಗಳೂರು ಜೆಡಿಎಸ್ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ಅವರು ಹೆಚ್.ಡಿ. ದೇವೇಗೌಡ ಅವರು ಮುಸ್ಲಿಂ ಸಮುದಾಯ ಬಗ್ಗೆ ಕಾಳಜಿ ಹೊಂದಿರುವ ಹಿನ್ನೆಲೆಯಲ್ಲಿ ಮುಂದಿನ ಜನ್ಮದಲ್ಲಿ ಮುಸ್ಲೀಂ ವ್ಯಕ್ತಿಯಾಗಿ ಹುಟ್ಟುತ್ತೇವೆಂದು ಹೇಳಿಕೆ ನೀಡಿದ್ದರು. ಆದರೆ ಶಾಸಕ ಸಿ.ಟಿ.ರವಿ ಮುಸ್ಲೀಂ ಜನಾಂಗದಲ್ಲಿ ಮುಂದಿನ ಜನ್ಮವಿರುವುದಿಲ್ಲ, ಹುಟ್ಟುವುದು ಗೊತ್ತಿಲ್ಲ. ಹಾಗಾಗಿ ಈಗಲೇ ಧರ್ಮ ಬದಲಿಸಿಕೊಳ್ಳಿ ಎಂದು ಅವಹೇಳನಕಾರಿ ಹೇಳಿಕೆ ನೀಡಿ ಅವಮಾನಿಸಲಾಗಿದೆ ಎಂದು ಆರೋಪಿಸಿದರು.

C.T. Ravi ಶಾಸಕ ಸಿ.ಟಿ.ರವಿ ಮುಸ್ಲೀಂನಲ್ಲಿ ಮುಂದಿನ ಜನ್ಮವಿಲ್ಲ, ಕೇವಲ ಹಿಂದೂಗಳಿಲ್ಲ ಮಾತ್ರ ಇದೆ ಎಂಬುದನ್ನು ತೆರಳಿ ನೋಡಿದ್ದಾರೆಯೇ ಎಂದು ಪ್ರಶ್ನಿಸಿದ ಅವರು ಇಂತಹ ಹೇಳಿಕೆಯಿಂದ ಹೆಚ್.ಡಿ.ದೇವೇಗೌಡ ಅವರನ್ನು ತೇಜೋವಧೆಗೆ ಮುಂದಾಗಿ ಕೀಳುಮಟ್ಟದ ರಾಜಕಾರಣ ಶಾಸಕರು ಪ್ರದರ್ಶಿಸುತ್ತಿದ್ದಾರೆ ಎಂದು ದೂರಿದರು.

ನಗರಾಧ್ಯಕ್ಷ ಎ.ಸಿ.ಕುಮಾರಗೌಡ ಮಾತನಾಡಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯದ ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳು ಹೆಚ್.ಡಿ.ದೇವೇಗೌಡ ಅವರ ಬಗ್ಗೆ ಅಪಾರ ಗೌರವ ಹೊಂದಿ ದ್ದಾರೆ. ಆದರೆ ಶಾಸಕ ಸಿ.ಟಿ.ರವಿ ಅವರು ಹಿರಿಯ ರಾಜಕಾರಣ ಗಳ ಮೇಲೆ ಇಲ್ಲಸಲ್ಲದ ಹೇಳಿಕೆ ನೀಡಿ ರಾಜಕೀ ಯವಾಗಿ ಬೆಳೆಯಲು ಪ್ರಯತ್ನಿಸಿದ್ದು ಈ ಬಾರಿ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಶಾಸಕ ರವಿಯವರು ರಾಜಕೀಯ ಪ್ರವೇಶಿಸುವ ಮೊದಲೇ ಅವರ ತಂದೆ ದೇವೇಗೌಡರ ಪಕ್ಷವನ್ನು ಸೇರ್ಪಡೆಗೊಳ್ಳುವಂತೆ ಅವರೇ ಖುದ್ದು ಹೇಳಿಕೆ ನೀಡಿದ್ದರು.

ಆದರೆ ಶಾಸಕರು ತಮ್ಮ ತಂದೆಯ ಮಾತಿಗೂ ಬೆಲೆ ಕೊಡದೇ ಹಿಂದುತ್ವದ ಹೆಸರಿನಲ್ಲಿ ಅಮಾಯಕರನ್ನು ಬಳಸಿಕೊಳ್ಳುವ ಪಕ್ಷಕ್ಕೆ ಸೇರ್ಪಡೆಯಾಗಿ ಧೀಮಂತ ನಾಯಕರ ಮೇಲೆ ಹೇಳಿಕೆ ನೀಡಿ ತಂದೆ ಮಾತಿಗೂ ಹಾಗೂ ದೇವೇಗೌಡರಿಗೂ ಅವಮಾನಿಸಿದ್ದಾರೆ ಎಂದರು.

ಪಕ್ಷದ ಜಿಲ್ಲಾ ವಕ್ತಾರ ಹೊಲದಗದ್ದೆ ಗಿರೀಶ್ ಮಾತನಾಡಿ ಹೆಚ್.ಡಿ.ದೇವೇಗೌಡ ಅವರು ಮುಸ್ಲೀಂ ಜನಾಂಗ ಕ್ಕೆ ಕ್ಷಣವೇ ತೆರಳಿ ಮುಂದಿನ ಜನ್ಮವಿಲ್ಲ ಎಂದು ಶೇ.40% ಕಮೀಷನ್ ಸರ್ಕಾರದ ರೂವಾರಿ ಶಾಸಕ ಸಿ.ಟಿ.ರವಿ ಹೇಳಿಕೆ ದೇಶವೇ ತಲೆತಗ್ಗಿಸುವಂತಹ ಹೇಳಿಕೆಯಾಗಿದ್ದು ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದಲ್ಲಿ ಮುಂದೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮಣಗೌಡ, ಅಯೂಬ್‌ಖಾನ್, ನಗರಸಭಾ ಸದಸ್ಯ ಗೋಪಿ, ಪಕ್ಷದ ಮುಖಂಡರುಗಳಾದ ಮಾನುಮಿರಾಂಡ, ಎನ್.ಎನ್.ಚಂದ್ರಶೇಖರ್, ದೇವಿಪ್ರಸಾದ್, ಸಿ.ಕೆ. ಮೂರ್ತಿ, ಚಿದಾನಂದ್, ನಿಸಾರ್ ಅಹ್ಮದ್, ಇರ್ಷಾದ್, ಸಿ.ಎನ್.ದೇವರಾಜ್ ಅರಸ್, ಜಯಂತಿ, ಶಿವು, ಸೈಯದ್ ಮತ್ತಿತರರು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Araga Jnanendra ಕಣ್ಮರೆಯಾದ ಅ.ಪ.ರಾಮಭಟ್ಟರಿಗೆ ಸಚಿವ ಜ್ಞಾನೇಂದ್ರ ಅವರಿಂದ ಬರಹ ನಮನ

0

ನನ್ನ ಜೀವನಕ್ಕೆ ಮಾರ್ಗದರ್ಶನ ಮಾಡಿದ ಮಹನೀಯರ ಮತ್ತೊಂದು ಕೊಂಡಿ ಕಳಚಿತು.

Araga Jnanendra ಶಬ್ದಗಳು ಸಿಗುತ್ತಿಲ್ಲ ಏನು ಹೇಳುವುದೋ ಗೊತ್ತಾಗುತ್ತಿಲ್ಲ, ಕಳೆದ ಹತ್ತಾರು ವರ್ಷಗಳಿಂದ ಶಿವಮೊಗ್ಗದಲ್ಲಿ ನನಗೆ ಎಲ್ಲಿ ಊಟ ಸಿಗದೇ ಇದ್ದರೂ ಅ. ಪ. ರಾಮಭಟ್ಟರ ಮನೆಯಲ್ಲಿ ಊಟ ಯಾವತ್ತೂ ಎಷ್ಟೊತ್ತಿಗೆ ಹೋದರು ಇರುತ್ತಿತ್ತು.

ಅವರು ಅದೆಷ್ಟೇ ಕಾರ್ಯದ ಒತ್ತಡದಲ್ಲಿ ಇದ್ದರೂ ಅವರ ಮನೆಯ ತಾಯಂದಿರು ಪ್ರತಿ ಸಾರಿಯೂ ಪ್ರೀತಿಯಿಂದ ಊಟ ಬಡಿಸುತ್ತಿದ್ದರು. ರಾಮಭಟ್ಟರಂತೂ ಪಕ್ಕದಲ್ಲಿ ಕುಳಿತು ಊಟವಾಗುವ ತನಕ ಮಾತನಾಡುತ್ತಾ ಇರುತ್ತಿದ್ದರು.ಅದೆಷ್ಟು ಪ್ರೀತಿ ಅವರಿಗೆ,ದೇವರು ಅವರನ್ನು ಇಷ್ಟು ಬೇಗ ಕರೆದುಕೊಂಡನಲ್ಲಾ ಎನ್ನುವ ಆಘಾತ ನೋವು ತುಂಬಾ ಆಗುತ್ತಿದೆ.

Araga Jnanendra ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಶಿವಮೊಗ್ಗಕ್ಕೆ ಜನಪ್ರತಿನಿಧಿಯ ಕರ್ತವ್ಯದ ವಿವಿಧ ಸಭೆಗಳಿಗೆ ಹೋಗಬೇಕಾದಾಗ ಹೋಟೆಲ್ ತೆರೆದಿರುತ್ತಿರಲಿಲ್ಲ.
ಕುಡಿಯಲು ನೀರು ಕೂಡ ಸಿಗದೇ ಇದ್ದ ಕೊರೋನಾ ಕಾಲಘಟ್ಟದಲ್ಲಿ ಶಿವಮೊಗ್ಗದಲ್ಲಿ ನಮಗೆ ಒಳ್ಳೇ ಊಟ ರಾಮ ಭಟ್ಟರ ಮನೆಯಲ್ಲಿ ತಯಾರಿರುತ್ತಿತ್ತು, ನಾವು ಶಿವಮೊಗ್ಗ ಬರುವ ವರ್ತಮಾನ ಮೊದಲೇ ತಿಳಿದುಕೊಂಡು ಮಧ್ಯಾಹ್ನ ಊಟಕ್ಕೆ ಮನೆಗೆ ಬರಬೇಕು ಅಂತ ಕರೆ ಮಾಡುತ್ತಿದ್ದರು. ನನಗೆ ಮಾತ್ರವಲ್ಲದೇ ಜೊತೆಗಿದ್ದ ನನ್ನ ಸಿಬ್ಬಂದಿ ಮತ್ತು ಪಕ್ಷದ ಸ್ನೇಹಿತರಿಗೂ ಅದು ಒಮ್ಮೊಮ್ಮೆ 20 ಅಂಕಿ ದಾಟಿದ ಸಂಖ್ಯೆಗೂ ಅವರ ಮನೆಯಲ್ಲಿ ಊಟ ಇರುತ್ತಿತ್ತು. ಊಟದ ರುಚಿ ಮತ್ತು ಜೊತೆಗಿದ್ದ ಪ್ರೀತಿ ಬಗ್ಗೆ ನೆನಪು ಮಾಡಿಕೊಂಡಾಗ ರಾಮ ಭಟ್ಟರಿಗೆ ರಾಮ ಭಟ್ಟರು ಮಾತ್ರ ಹೋಲಿಕೆಯಾಗಬಲ್ಲರು ಎಂದೆನಿಸುತ್ತದೆ.

ಅಂಬುತೀರ್ಥ ಅಭಿವೃದ್ಧಿ ಆಗಬೇಕು ಎಂದು ಅದೇಕೋ ಅವರಾಗೆ ಮನಸ್ಸಿಗೆ ತಂದುಕೊಂಡು ನಮ್ಮೆಲ್ಲರಲ್ಲಿ ಅಭಿಪ್ರಾಯ ಹಂಚಿಕೊಂಡರು.
ಅವರ ಪ್ರಭಾವ ಎಷ್ಟಿತ್ತೆಂದರೆ ಅವರ ಅಪೇಕ್ಷೆ ತಿಳಿದ ಶಿವಮೊಗ್ಗ ಜಿಲ್ಲೆಯ ಪ್ರಮುಖರ ಸಹಯೋಗದೊಂದಿಗೆ ಸೇರಿ 6 ಕೋಟಿ ರೂಪಾಯಿಗಳನ್ನು ವಿವಿಧ ಇಲಾಖೆಗಳಿಂದ ಮಂಜೂರು ಮಾಡಿಸಿದೆವು.
ಇವತ್ತು ಶರಾವತಿ ಉಗಮ ಸ್ಥಾನ ಹೊಸ ರೂಪ ಪಡೆದುಕೊಂಡಿದೆಯೆಂದರೆ
ಇದರ ಹಿಂದೆ ಇದ್ದಿದ್ದು ರಾಮ ಭಟ್ಟರ ಅಪೇಕ್ಷೆಯೇ ಹೊರತು ಜನಪ್ರತಿನಿಧಿಗಳ ಹೆಚ್ಚುಗಾರಿಕೆ ಅಂತ ನನಗೇನೂ ಅನಿಸುವುದಿಲ್ಲ.

ಸಂಘದ ಸ್ವಯಂ ಸೇವಕರಾಗಿ, ರವೀಂದ್ರ ನಗರ ಗಣಪತಿ ದೇವಸ್ಥಾನದಲ್ಲಿ ಜನರ ಪ್ರೀತಿಯ ಅರ್ಚಕರಾಗಿ, ಶಿವಮೊಗ್ಗ ನಗರದ ಜನಸಾಮಾನ್ಯರ ಜೊತೆಗೆ ಪ್ರಭಾವಿ ವ್ಯಕ್ತಿಗಳಿಗೂ ಅಚ್ಚುಮೆಚ್ಚಿನ ಗುರುಗಳಾಗಿ ಸಾವಿರಾರು ಜನರ ಅದರಲ್ಲೂ ಬಡವರ ಪುರೋಹಿತರಾಗಿ ಬದುಕಿ ಬಾಳಿದ ಅ.ಪ. ರಾಮಭಟ್ಟರ ಅಗಲಿಕೆಯ ಈ ದಿನ ನನಗಂತೂ ಹೆಚ್ಚು ದುಃಖದ ದಿನ ಎಂದರೆ ಅತಿಶಯೋಕ್ತಿಯಲ್ಲ.

ಕಳೆದವಾರದ ಅಧಿವೇಶನ ಮುಗಿಸಿದವನೇ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಟರನ್ನು ನೋಡಲು ಕಳೆದ ಶುಕ್ರವಾರ ಸಂಜೆ ಬೆಂಗಳೂರಿನಿಂದ ಮಂಗಳೂರಿಗೆ ವಿಮಾನ ಮೂಲಕ ಹೋಗಿ ರಾತ್ರಿ 8 ಘಂಟೆ ಸುಮಾರಿಗೆ ನೋಡಿ ಮಾತನಾಡಿಸಿ ಬಂದಿದ್ದೆ ಇಂದು ಅವರಿಲ್ಲಾ ಎನ್ನುವುದು ನಂಬಲಾಗುತ್ತಿಲ್ಲ.

ಒಳ್ಳೆಯವರನ್ನು ಭಗವಂತ ಬೇಗ ತನ್ನ ಬಳಿ ಕರೆದುಕೊಳ್ಳುತ್ತಾನೆ, ಎನ್ನುವ ಮಾತು ಮತ್ತೊಮ್ಮೆ ಸತ್ಯವಾಯಿತು ಎಂದಷ್ಟೆ ಹೇಳಬಹುದು.
ಅವರ ಆತ್ಮಕ್ಕೆ ಶಾಂತಿ ದೊರಕಲಿ
ಅವರ ಕುಟುಂಬಕ್ಕೆ ಭಕ್ತರಿಗೆ ದುಃಖ ಭರಿಸುವ ಶಕ್ತಿ ಭಗವಂತ ಕೊಡಲಿ.

ಓಂ ಶಾಂತಿಃ..

ಶ್ರೀಆರಗ ಜ್ಞಾನೇಂದ್ರ
ಗೃಹಸಚಿವರು, ಕರ್ನಾಟಕ ಸರ್ಕಾರ

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.