Monday, April 6, 2026
Monday, April 6, 2026
Home Blog Page 1308

ಚಿಕ್ಕಮಗಳೂರು ಜಿಲ್ಲಾ ಉತ್ಸವ ವೆಚ್ಚದ ಲೆಕ್ಕ ಸಾರ್ವಜನಿಕರಿಗೆ ನೀಡಲಿ-ತಿಮ್ಮಶೆಟ್ಟಿ

0

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಐದು ದಿನಗಳ ಕಾಲ ಸರ್ಕಾರದ ವತಿಯಿಂದ ಅದ್ದೂರಿಯಾಗಿ ಆಯೋಜಿಸಿದ್ದ ಚಿಕ್ಕಮಗಳೂರು ಹಬ್ಬದ ಖರ್ಚು-ವೆಚ್ಚಗಳ ಬಗ್ಗೆ ಜಿಲ್ಲಾಡಳಿತ ಸಾರ್ವಜನಿಕರಿಗೆ ತಿಳಿಸದೇ ಮೌನವಾಗಿದೆ ಎಂದು ಚಿಕ್ಕಮಗಳೂರು ಜೆಡಿಎಸ್ ವಿಧಾನಸಭಾ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ಆರೋಪಿಸಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಸರ್ಕಾರದ ಕಾರ್ಯಕ್ರಮವನ್ನು ಬಿಜೆಪಿ ಕಾರ್ಯಕ್ರಮದಂತೆ ಬಿಂಬಿಸಿ ಸ್ವಪ್ರಚಾರದಲ್ಲಿ ಶಾಸಕರು ಹಾಗೂ ಜಿಲ್ಲಾಡಳಿತವು ಭಾಗಿಯಾಗಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಈ ಕಾರ್ಯಕ್ರಮಗಳಿಗೆ ಸಾರ್ವಜನಿಕರ ತೆರಿಗೆ ಹಣವು ಎಷ್ಟು ಖರ್ಚಾಗಿದೆ ಎಂದು ಲೆಕ್ಕ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

5 ದಿನಗಳ ಕಾಲ ಜಿಲ್ಲಾ ಉತ್ಸವ ಕಾರ್ಯಕ್ರಮಕ್ಕೆ ಸರ್ಕಾರ, ದಾನಿಗಳು ಹಾಗೂ ವಿವಿಧ ಇಲಾಖೆಯಿಂದ ಖರ್ಚಿನ ಮಾಹಿತಿ ಮತ್ತು ಯಾವ್ಯಾವ ಸಂಘ-ಸಂಸ್ಥೆಯವರಿಗೆ ಟೆಂಡರ್ ನೀಡಿದೆ. ಜಿಲ್ಲೆ ಹಾಗೂ ಹೊರ ಜಿಲ್ಲೆಯವರಿಗೆ ಎಷ್ಟು ಮಂದಿಗೆ ಕಾಮಗಾರಿ ಕೊಡಲಾಗಿದೆ ಎಂದು ಸಭೆ ನಡೆಸುವ ಮೂಲಕ ಸಾರ್ವಜನಿಕರಿಗೆ ತಿಳಿಸುವ ಕೆಲಸ ಮೊದಲಾಗಬೇಕು ಎಂದಿದ್ದಾರೆ.

ಸತತವಾಗಿ 20 ವರ್ಷಗಳ ಕಾಲ ಆಡಳಿತ ನಡೆಸಿರುವ ಶಾಸಕರು ಅಭಿವೃದ್ದಿ ಎಂದು ಹೇಳಿಕೊಂಡು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ.

ಚಿಕ್ಕಮಗಳೂರಿನಲ್ಲಿ ನಗರ ಅಭಿವೃದ್ದಿ ಪರಿಸ್ಥಿತಿ ಹದಗೆಟ್ಟಿದೆ. ಕೆಲವು ರಸ್ತೆ ಗಳಲ್ಲಿ ಕಳಪೆ ಕಾಮಗಾರಿಯಾದರೆ ಇನ್ನೊಂದೆಡೆ ಗುಂಡಿ ತೆಗೆದು ಮುಚ್ಚುವ ಕೆಲಸವಾಗುತ್ತಿದೆ ಎಂದು ದೂರಿದ್ದಾರೆ.

ಚಿಕ್ಕಮಗಳೂರಿನ ಹೃದಯ ಭಾಗದಲ್ಲಿರುವ ಬಸವನಹಳ್ಳಿ ಕೆರೆಯನ್ನು ಹಾಳುಗೆಡವಲಾಗಿದೆ. ಇದೀಗ ಕೆರೆಯನ್ನು ಗಮನಿಸಿದರೆ ಮುಚ್ಚುವ ಹಂತದಲ್ಲಿ ಕೆಲಸಗಳಾಗುತ್ತಿವೆ. ಇಷ್ಟೆಲ್ಲಾ ಹಣವನ್ನು ಬಿಡುಗಡೆ ಮಾಡಿಕೊಂಡು ಅಭಿವೃದ್ದಿ ಗೊಳಿಸದೇ ವೈಯಕ್ತಿಕವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ನಗರಸಭಾ ಕ್ಯಾಲೆಂಡರ್ ಬಿಡುಗಡೆಯು ಅದೇ ರೀತಿಯಾಗಿದ್ದು ಎಲ್ಲಾ ಸಂಘ-ಸಂಸ್ಥೆಗಳಲ್ಲಿ 12 ತಿಂಗಳ ಕ್ಯಾಲೆಂಡರ್ ಬಿಡುಗಡೆ ಮಾಡಿದರೆ ನಗರಸಭೆಯಲ್ಲಿ ಮಾತ್ರ ಒಂದು ತಿಂಗಳ ನಂತರ ಕ್ಯಾಲೆಂಡರ್ ಬಿಡುಗಡೆ ಮಾಡಿ 11 ಎಂಬಂತೆ ತೋರಿಸುವುದರ ಜೊತೆಗೆ ಬಿಜೆಪಿಯ ಕರಪತ್ರದಂತೆ ಪ್ರತಿ ಮನೆಗಳಿಗೆ ಹಂಚಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಕೂಡಲೇ ಜಿಲ್ಲಾಡಳಿತವು ಚಿಕ್ಕಮಗಳೂರು ಹಬ್ಬದ ಖರ್ಚು-ವೆಚ್ಚಗಳ ಮಾಹಿತಿಯನ್ನು ಸಾರ್ವಜನಿಕರ ಮುಂದಿಡುವಲ್ಲಿ ವಿಳಂಭವಾದಲ್ಲಿ ಮುಂದಿನ ದಿನಗಳಲ್ಲಿ ಶಾಸಕರು ಹಾಗೂ ಜಿಲ್ಲಾಡಳಿತದ ವಿರುದ್ಧ ಉಗ್ರವಾದ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸಮೃದ್ಧ ಭೂಮಿಯನ್ನ ಮುಂದಿನ ಪೀಳಿಗೆಗೆ ಉಳಿಸಬೇಕಿದೆ-ಡಾ.ಕೆ.ಸುಂದರ ಗೌಡ

0

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಚಿಕ್ಕಮಗಳೂರು: ಪ್ರಪಂಚದಲ್ಲಿ ಪ್ರತಿಯೊಬ್ಬರು ಶಾಂತಿ ದಾರಿಯಲ್ಲಿ ನಡೆದು, ಪ್ರೀತಿಯನ್ನು ಪರಸ್ಪರ ಹಂಚಿಕೊಂಡರೆ ಮಾತ್ರ ಮುಂದಿನ ಪೀಳಿಗೆಗೆ ಸಮೃದ್ದ ಭೂಮಿಯನ್ನು ಉಳಿಸಲು ಸಾಧ್ಯ ಎಂದು ರಾಜ್ಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಪ್ರತಿನಿಧಿ ಡಾ|| ಕೆ.ಸುಂದರಗೌಡ ಹೇಳಿದರು.

ಚಿಕ್ಕಮಗಳೂರಿನ ಸಂತ ಜೋಸೆಫರ ಕಾಲೇಜಿನಲ್ಲಿ ಯುವರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದ್ದ ಪರಿಸರ ಸಂರಕ್ಷಣೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು.

ವಿಶ್ವದ ಬಲಾಡ್ಯ ದೇಶಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಣುಬಾಂಬ್‌ಗಳಿವೆ. ಇವುಗಳ ಬಳಕೆಯಿಂದ ಪ್ರಪಂಚಕ್ಕೆ ಸಾಕಷ್ಟು ಹಾನಿಯಾಗಲಿದೆ. ಜಪಾನ್ ಹಾಗೂ ಈಚೆಗೆ ಸಿರಿಯಾದಲ್ಲಿ ಭೂಕಂಪವಾಗಿ ಸಾವಿರಾರು ಮಂದಿ ಸಾವಗೀಡಾಗಿರುವುದು ಹಾಗೂ ವಾತಾವರಣ ಕಲುಷಿತವಾಗಲು ಮೂಲ ಕಾರಣ ಅಣುಬಾಂಬ್ ಬಳಕೆ ಎಂದು ಹೇಳಿದರು.

ಮನುಷ್ಯ ಭೂಮಿಯಿಂದ ಗಾಳಿ, ನೀರು, ಆಹಾರಗಳನ್ನು ಪಡೆದುಕೊಳ್ಳುತ್ತಿದ್ದಾನೆ. ಹೊರತು ಪರಿಸರಕ್ಕೆ ಪೂರಕವಾಗಿಲ್ಲ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ನಾಗರೀಕರು ಭೂಮಿಯ ಋಣ ತೀರಿಸುವ ಸಲುವಾಗಿ ಪಣ ತೊಡಬೇಕು. ಪರಿಸರಕ್ಕೆ ಹಾನಿಯಾಗುವುದರ ವಿರುದ್ಧ ಹೋರಾಡಬೇಕು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಮುಂಜಾಗ್ರತಾ ಕ್ರಮ ವಹಿಸಿದ್ದಲ್ಲಿ ಉಸಿರಾಟಕ್ಕೆ ತೊಂದರೆಯಾಗಿ ಗಾಳಿಯನ್ನು ಸಿಲಿಂಡರ್ ಮಾದರಿಯಲ್ಲಿ ಖರೀದಿಸಿ ಉಸಿರಾಡಬೇಕಾಗುವ ಸಂಭವವಿದೆ. ಆ ಹಿನ್ನೆಲೆಯಲ್ಲಿ ಪರಿಸರ ಕಾಪಾಡುವಲ್ಲಿ ನಾವುಗಳು ಶ್ರಮವಹಿಸಿದ್ದಲ್ಲಿ ವಿಶ್ವವು ಅಳಿವಿನ ಹಂಚಿಗೆ ತಲುಪಬಹುದು ಎಂದು ಎಚ್ಚರಿಸಿದರು.

ವಿದ್ಯಾರ್ಥಿನಿ ಇಕ್ರಾ ಮೆಹ್ತಾ ಮಾತನಾಡಿ, ಪರಿಸರ ರಕ್ಷಣೆ ಬಗ್ಗೆ ನಾವು ಗಮನಹರಿಸದಿದ್ದಲ್ಲಿ ನೆರೆ ದೇಶಗಳಲ್ಲಿ ಆಹಾರ ಸಮಸ್ಯೆ ಮತ್ತು ಭೂಕಂಪದಂತಹ ದುರ್ಘಟನೆಯನ್ನು ಎದುರಿಸಬಹುದು. ಆದ್ದರಿಂದ ನಾವುಗಳು ಇಂದಿನಿಂದಲೇ ಪಣತೊಟ್ಟು ಪರಿಸರ ಬಗ್ಗೆ ಕಾಳಜಿ ವಹಿಸಿ ಸೂಕ್ತ ನಿರ್ಧಾರ ತೆಗೆದುಕೊಂಡು ಸಂರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾಧ್ಯಕ್ಷ ಆರ್.ಶ್ರೀನಿವಾಸ್, ಕಾಲೇಜಿನ ಪ್ರಾಂಶುಪಾಲ ವಿನ್ಸಲ್ ಕಾರ್‌ಡೋಸ್, ಯುವ ರೆಡ್‌ಕ್ರಾಸ್ ಸಂಸ್ಥೆ ಸಂಯೋಜಕ ವಿನಯ್‌ಕುಮಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿ ತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕಾಮನ್ ಬೈಲಾ ಜಾರಿಗೆ ದತ್ತಾತ್ರಿ ಅವರಿಂದ ಅಭಿನಂದನೆ ಅರ್ಪಣೆ

0

Book Your Advertisement Now.

ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಏಕರೂಪ ವ್ಯವಸ್ಥೆಯ ಕಾಮನ್ ಬೈಲಾ ಜಾರಿ ಮಾಡಿರುವ ಸರ್ಕಾರದ ನಡೆಗೆ ಭಾರತೀಯ ಜನತಾ ಪಾರ್ಟಿಯ ಮಾಜಿ ಜಿಲ್ಲಾಧ್ಯಕ್ಷರಾದ ಎಸ್. ದತ್ತಾತ್ರಿಯವರು ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕದ ವೈದ್ಯಕೀಯ ಶಿಕ್ಷಣ ಇಲಾಖೆಯ ಮಹತ್ವದ ತೀರ್ಮಾನದ ಪರಿಣಾಮವಾಗಿ ರಾಜ್ಯದ ಎಲ್ಲಾ ಸ್ವಾಯತ್ತ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಆಡಳಿತ ಹಾಗೂ ನಿರ್ವಹಣೆಯಲ್ಲಿ ಏಕರೂಪ ವ್ಯವಸ್ಥೆ ತರುವ ನಿಟ್ಟಿನಲ್ಲಿ ಕಾಮನ್ ಬೈಲಾ ಅಳವಡಿಸಿಕೊಳ್ಳಲಾಗಿದೆ. ಇತ್ತೀಚಿಗೆ ನಡೆದ ಸ್ವಾಯತ್ತ ವೈದ್ಯಕೀಯ ಕಾಲೇಜುಗಳು ಮತ್ತು ಸಂಸ್ಥೆಗಳ ವಿಶೇಷ ಆಡಳಿತ ಮಂಡಳಿಯ ಸಭೆಯಲ್ಲಿ ಐತಿಹಾಸಿಕ ನಿರ್ಣಯ ಕೈ ಕೊಳ್ಳಲಾಗಿದೆ. ಈ ಕ್ರಮದಿಂದ ವೈಜಿಕೀಯ ಕಾಲೇಜುಗಳ ಶೈಕ್ಷಣಿಕ ಮತ್ತು ಆಡಳಿತಾತ್ಮಕ ನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ಪಾರದರ್ಶಕತೆ ಬರಲಿದೆ ಎಂದಿದ್ದಾರೆ.

ಇದರಿಂದಾಗಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಪದೋನ್ನತಿ, ಕಾರ್ಯನಿರ್ವಹಣ ವರದಿ ಇನ್ನಿತರ ವಿಚಾರಗಳಲ್ಲಿ ಸಿಬ್ಬಂದಿಗಳ ಗೊಂದಲಗಳಿಗೆ ತೆರೆ ಬಿದ್ದಿದ್ದು, ವೈದ್ಯಕೀಯ ಹಾಗೂ ವೈದ್ಯಕೇತರ ಸಿಬ್ಬಂದಿಗಳು ನೆಮ್ಮದಿಯಿಂದ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದಂತಾಗುತ್ತದೆ.

ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಕಾಮನ್ ಬೈಲಾಜಾರಿಗೊಳಿಸಿ, ಐತಿಹಾಸಿಕ ನಿರ್ಣಯ ತೆಗೆದುಕೊಂಡ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಪೊಮ್ಮಾಯಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಶ್ರೀ ಸುಧಾಕರ್ ಅವರಿಗೆ ಎಸ್. ದತ್ತಾತ್ರಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಶಿವಮೊಗ್ಗ ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

0

ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದ ಜಿಲ್ಲೆಯ ಹಿರಿಯ ಪತ್ರಕರ್ತರಾದ ಚಂದ್ರಹಾಸ ಹಿರೇಮಳಲಿ, ಹುಲಿಮನೆ ತಿಮ್ಮಪ್ಪ, ಶಾಂತಕುಮಾರ್ ಎನ್.ಡಿ, ಹೊನ್ನಾಳಿ ಚಂದ್ರಶೇಖರ್, ನಾಗರಾಜು ನೇರಿಗೆ, ದೀಪಕ್ ಸಾಗರ್, ಡಿಪಿ ಅರವಿಂದ ಅಕ್ಲಾಪುರ, ವೆಂಕಟೇಶ್, ರಾಮ ಸ್ವಾಮಿ ಹುಲಕೋಡು ಇವರಿಗೆ ಕೆ ಲೈವ್ ನ್ಯೂಸ್ ಮಾಧ್ಯಮವು ಅಭಿನಂದನೆಯನ್ನು ತಿಳಿಸುತ್ತದೆ.Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮಕ್ಕಳ ಬೆಳವಣಿಗೆಯಲ್ಲಿ ಆಡ ಪಾಠ ಎರಡೂ ಮುಖ್ಯ-ಶ್ರೀ ಪ್ರಸನ್ನನಾಥ ಶ್ರೀ

0

Book Your Adv

ವಮೊಗ್ಗ : ವಿದ್ಯಾರ್ಥಿಗಳನ್ನು ಆಟ, ಪಾಠ ಎರಡೂ ವಿಷಯಗಳಲ್ಲಿ ಸಮನಾಗಿ ಪ್ರೋತ್ಸಾಹಿಸಬೇಕೆಂದು ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

ನಗರದ ಗುರುಪುರ ಬಡಾವಣೆಯಲ್ಲಿರುವ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಬಿಜಿಎಸ್ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಪೋಷಕರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇವಲ ಒಂದು ವಿಷಯದಲ್ಲಿ ಮಾತ್ರ ಮಕ್ಕಳನ್ನು ಪ್ರೋತ್ಸಾಹಿಸಿದರೆ ಸಾಲದು. ಮಗುವಿನ ಸರ್ವತೋಮುಖ ಬೆಳವಣಿಗೆಗೆ ಆಟ-ಪಾಠ ಎರಡೂ ಕೂಡ ಸಮನಾಗಿ ಬೇಕಾಗುತ್ತದೆ ಎಂದು ಹೇಳಿದರು.

ಮಗು ಯಾವ ವಿಷಯದಲ್ಲಿ ಆಸಕ್ತಿ ಹೊಂದಿರುತ್ತದೆಯೋ, ಆ ಕ್ಷೇತ್ರಕ್ಕೆ ಹೆಚ್ಚು ಪ್ರೋತ್ಸಾಹ ಕೊಡಬೇಕು. ದುರಂತವೆಂದರೆ ನಮ್ಮ ಪೋಷಕರು ತಮ್ಮ ಮನದ ಆಸೆಯನ್ನು ಮಗುವಿನ ಮೇಲೆ ಹೇರುತ್ತಿದ್ದಾರೆ. ಇದರಿಂದ ಮಗು ತನ್ನ ಆಸಕ್ತಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಶಿಕ್ಷಕರೂ ಕೂಡ ಮಕ್ಕಳ ಆಸಕ್ತಿಗೆ ಅನುಗುಣವಾಗಿ ಪ್ರೋತ್ಸಾಹ ನೀಡುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೆಲವು ಮಕ್ಕಳು ಆಟ-ಪಾಠ ಎರಡರಲ್ಲಿಯೂ ಆಸಕ್ತಿಯನ್ನು ತೋರುವುದಿಲ್ಲ. ಅಂತಹ ವಿದ್ಯಾರ್ಥಿಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಆ ಮಗುವಿನಲ್ಲಿ ಆಸಕ್ತಿಯನ್ನು ಕೆರಳಿಸಬೇಕು, ಅದು ಪೋಷಕರು ಮತ್ತು ಶಿಕ್ಷಕರ ಜವಾಬ್ದಾರಿಯಾಗಿರುತ್ತದೆ ಎಂದ ಅವರು, ಪ್ರತಿಯೊಂದು ಮಗುವಿನಲ್ಲಿಯೂ ಕೂಡ ತನ್ನದೇ ಆದ ಪ್ರತಿಭೆ ಅಡಗಿರುತ್ತದೆ. ಅದನ್ನು ಹೊರ ತೆಗೆಯುವಂತಹ ಕಾರ್ಯ ಮಾಡಬೇಕಾದದ್ದು, ಎಲ್ಲರ ಜವಾಬ್ದಾರಿ ಎಂದರು.

ಪ್ರತಿಯೊಬ್ಬ ಪೋಷಕರೂ ಸಹ ತಮ್ಮ ಮಗು ರ‍್ಯಾಂಕ್ ಬಂದರೆ ಸಾಕು ಎಂಬ ಗುರಿಯನ್ನು ಹೊಂದಿರುತ್ತಾರೆ. ರ‍್ಯಾಂಕ್ ಬರುವುದರಿಂದ ಮಗು ತನ್ನ ಜೀವನವನ್ನು ಭದ್ರ ಮಾಡಿಕೊಂಡಂತಾಗುತ್ತದೆ. ಆದರೆ ಕ್ರೀಡೆಯಲ್ಲಿ ಉನ್ನತ ಸ್ಥಾನಕ್ಕೇರಿದರೆ ನಿಮ್ಮ ಮಕ್ಕಳು ವಿಶ್ವದಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸುತ್ತಾರೆ. ಅದರ ಹಿರಿಮೆ ನಿಮಗೆ ಸಲ್ಲುತ್ತದೆ. ಆದ್ದರಿಂದ ನಿಮ್ಮ ಮಕ್ಕಳನ್ನು ಕ್ರೀಡೆಯಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಿ, ಆ ಮೂಲಕ ವಿಶ್ವದಲ್ಲಿ ಭಾರತದ ಧ್ವಜವನ್ನು ಎತ್ತರಕ್ಕೆ ಹಾರಿಸಲು ಕೈಜೋಡಿಸಿ ಎಂದು ಕಿವಿ ಮಾತು ಹೇಳಿದರು.
ಪ್ರಧಾನ ಮಂತ್ರಿಯಾದರೂ ಸಹ ದೇಶಕ್ಕೆ ಸೀಮಿತರಾಗುತ್ತಾರೆ. ಒಬ್ಬ ಕ್ರೀಡಾಪಟು ವಿಶ್ವದ ಆಸ್ತಿಯಾಗುತ್ತಾನೆ. ಇದರ ಸೂಕ್ಷ್ಮತೆಯನ್ನು ಪ್ರತಿಯೊಬ್ಬರೂ ಕೂಡ ಅರಿಯಬೇಕಾಗಿದೆ ಎಂದ ಅವರು, ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದರೆ ಭಾರತ ರತ್ನ ಪ್ರಶಸ್ತಿಗೂ ಕೂಡ ಭಾಜನರಾಗುವ ಅವಕಾಶವಿದೆ ಎಂದು ಹೇಳಿದರು.

ಕಾರ್ಯಕ್ರಮ ದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.

ಈ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಿರ್ದೇಶಕರಗಳಾದ ಹಿರಣ್ಣಯ್ಯ ಹೆಗಡೆ ಅವರು, ವಾಸಪ್ಪ ಗೌಡ ಅವರು, ಸತೀಶ್ ಡಿ.ವಿ ಅವರು, ಶ್ರೀ ಆದಿಚುಂಚನಗಿರಿ ಕನ್ನಡ ಮಾಧ್ಯಮ ಪ್ರೌಢ ಶಾಲೆ ಮುಖ್ಯೋಪಾಧ್ಯರಾದ ರಮೇಶ್ ರವರು, ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗುರುಪುರ ಪ್ರಾಂಶುಪಾಲರಾದ ಸುರೇಶ್ ರವರು ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

ertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ರೋಟರಿ ಸೇವಾಕಾರ್ಯ-ಜಯಗೌರಿ ಹಾದಿಗಲ್

0

ತೀರ್ಥಹಳ್ಳಿ: ರೋಟರಿ ಸಂಸ್ಥೆಯು ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವ ದೃಷ್ಠಿಯಿಂದ ಸೇವೆಗಳನ್ನು ನಡೆಸುತ್ತಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ಡಾ. ಜಯಗೌರಿ ಹಾದಿಗಲ್ ಹೇಳಿದರು.

ರೋಟರಿ ಕ್ಲಬ್ ತೀರ್ಥಹಳ್ಳಿ ಜಿಲ್ಲಾ ಗವರ್ನರ್ ಭೇಟಿ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸೇವಾ ವಿಭಾಗದಲ್ಲಿ ಉತ್ತಮ ಕೆಲಸ ಮಾಡುತ್ತ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಸ್ಪರ್ಧಾ ಚಟುವಟಿಕೆಗಳನ್ನು ನಡೆಸುತ್ತಿರುವುದು ಅಭಿನಂದನೀಯ ಕೆಲಸ ಎಂದು ಶ್ಲಾಘಿಸಿದರು.

ರೋಟರಿ ವಲಯ 11ರ ಸಹಾಯಕ ಗವರ್ನರ್ ಡಾ. ಗುಡದಪ್ಪ ಕಸಬಿ ಮಾತನಾಡಿ, ತೀರ್ಥಹಳ್ಳಿ ರೋಟರಿ ಕ್ಲಬ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಹೆಚ್ಚಿನ ಕಾರ್ಯಚಟುವಟಿಕೆಗಳನ್ನು ಆಯೋಜಿಸುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಧಿಕ ಕಾರ್ಯಕ್ರಮ ನಡೆಸಬೇಕು ಎಂದು ಸೂಚಿಸಿದರು.

ರೋಟರಿ ಕ್ಲಬ್ ತೀರ್ಥಹಳ್ಳಿ ಅಧ್ಯಕ್ಷ ಮನೋಜ್ ರತ್ನಾಕರ ಆಚಾರ್ಯ ಮಾತನಾಡಿ, ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ನಮ್ಮ ಕ್ಲಬ್ ನಿರಂತರವಾಗಿ ಸಮಾಜಮುಖಿ ಚಟುವಟಿಕೆಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ, ಆರೋಗ್ಯ ಶಿಬಿರ ಸೇರಿದಂತೆ ಸಾರ್ವಜನಿಕರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು.

ಕಲಾವಿದರಿಗೆ ಭಾಷೆಯ ತೊಡಕಿಲ್ಲ. ಒಬ್ಬ ಕಲಾವಿದ ತಾನು ಬರೆದ ಚಿತ್ರದಲ್ಲಿ ಆತ ಏನು ಹೇಳ ಬಯಸುತ್ತಾನೋ ಅದನ್ನು ವಿವರಿಸುತ್ತಾನೆ. ಕಲಾವಿದರಲ್ಲಿ ವಯಸ್ಸಿನ ಮೇಲೆ ಆಧರಿಸಿ ಹಿರಿಯ, ಕಿರಿಯ ಅಂತ ಇಲ್ಲ. ಕಲೆಯ ಆಸಕ್ತಿ ಹಾಗೂ ಆತ ಶ್ರಮವಹಿಸಿ ಸಾಧನೆ ಮಾಡಿದರೆ ಒಬ್ಬ ಕಿರಿಯ ವಯಸ್ಸಿನವವರೂ ಸಹ ಹಿರಿಯ ವಯಸ್ಸಿನವರಿಗಿಂತ ಹೆಚ್ಚು ಪ್ರೇಕ್ಷಕರ ಪ್ರಶಂಸೆಗೆ ಪಾತ್ರನಾಗುತ್ತಾನೆ ಎಂದರು.

ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಣೆ ಮಾಡಲಾಯಿತು. ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಕೆ.ಪಿ.ಎಸ್ ಸ್ವಾಮಿ, ಡಾ. ನಂದ ಕಿಶೋರ್, ಎಲ್ಲ ಪೂರ್ವ ಅಧ್ಯಕ್ಷರು, ಹಿರಿಯ ಸದಸ್ಯರು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಸಾಗರ ಮಾರಿಕಾಂಬೆ ಜಾತ್ರೆ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಚಾಲನೆ

0

ಸಾಗರ: ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ಜಾತ್ರಾಪ್ರಯುಕ್ತ ಸಮಿತಿ ವತಿಯಿಂದ ಆಯೋಜಿಸಿರುವ ಹೊನಲು ಬೆಳಕಿನ ರಾಷ್ಟಮಟ್ಟದ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.

3 ದಿನಗಳ ಕಾಲ ಕುಸ್ತಿ ಪಂದ್ಯಾವಳಿ ನಡೆಯಲಿದೆ.
ರಾಷ್ಟಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ದೇಶದ ವಿವಿಧರಾಜ್ಯದ ಕುಸ್ತಿಪಟುಗಳು ಪಾಲ್ಗೊಳ್ಳಲಿದ್ದು, ನುರಿತ ತೀರ್ಪುಗಾರರ ನೇತೃತ್ವದಲ್ಲಿ ಘಟಾನುಘಟಿಗಳ ಕುಸ್ತಿ ಪಂದ್ಯಗಳು ನಡೆಯಲಿವೆ.


ಮೊದಲ ದಿನವೇ ನೂರಾರು ಕುಸ್ತಿಪಟುಗಳು ಭಾಗವಹಿಸಿದ್ದರು.ಮೊದಲ ದಿನದ ಪಂದ್ಯಗಳು ರೋಚಕ ಹಣಾಹಣಿಯಿಂದ ನಡೆದವು.


ಫೆ.10 ರಿಂದ ಕುಸ್ತಿ ಪಂದ್ಯಾವಳಿ ಆರಂಭವಾಗಿದೆ. ಶನಿವಾರ ಹಾಗೂ ಭಾನುವಾರ ಸಹ ರಾಷ್ಟಮಟ್ಟದಲ್ಲಿ ಹೆಸರು ಗಳಿಸಿರುವ ಕುಸ್ತಿಪಟುಗಳ ಪಂದ್ಯಗಳು ನಡೆಯಲಿವೆ.

ಎರಡು ದಿನ ಮಧ್ಯಾಹ್ನ 3ರಿಂದ ರಾತ್ರಿ 9 ರವರೆಗೂ ಕುಸ್ತಿ ಪಂದ್ಯಗಳು ನಡೆಯಲಿವೆ. ವಿವಿಧ ರಾಜ್ಯಗಳಿಂದ ಆಗಮಿಸಿರುವ ಕುಸ್ತಿಪಟುಗಳಿಗೆ ಜಾತ್ರಾ ಸಮಿತಿ ವತಿಯಿಂದ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ.
ರ‍್ಯಾಣ, ಮಧ್ಯಪ್ರದೇಶ, ಮಹಾರಾಷ್ಟ, ಪಂಜಾಬ್ ಸೇರಿದಂತೆರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಕುಸ್ತಿ ಪಂದ್ಯಗಳಲ್ಲಿ ಗಮನ ಸೆಳೆದಿದ್ದ ಕುಸ್ತಿಪಟುಗಳು ಆಗಮಿಸಿದ್ದರು.

ಮಹಾರಾಷ್ಟದರಾಮ್, ಓಮಾಂಕ್ಷ್, ರ‍್ಯಾಣದ ಬಂಟಿ, ತೇಜು ಸೇರಿದಂತೆ ವಿವಿಧ ಕುಸ್ತಿಪಟುಗಳು ಆಗಮಿಸಿದ್ದರು.

ಮೊದಲ ದಿನದಂದು ಶಿಕಾರಿಪುರದ ರಾಘು, ಚಂದ್ರು, ದಾವಣಗೆರೆರಾಕಿ, ಲಕ್ಷ್ಮಣ್, ಬೊಮ್ಮನಕಟ್ಟೆ, ಮಧು ಭದ್ರಾವತಿ, ಶಿವಮೊಗ್ಗ ವಿನಯ ಭಗತ್ ಸೇರಿದಂತೆ ಶಿವಮೊಗ್ಗ ಜಿಲ್ಲೆ, ದಾವಣಗೆರೆಜಿಲ್ಲೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಕುಸ್ತಿಪಟುಗಳು ಭಾಗವಹಿಸಿದ್ದರು.


ವಿಜೇತರಿಗೆ ಬೆಳ್ಳಿ ಪದಕ, ಬೆಳ್ಳಿ ಬಳೆ, ಬೆಳ್ಳಿಯ ಗದೆ ಸೇರಿದಂತೆ ವಿಶೇಷ ನಗದು ಬಹುಮಾನಹಾಗೂ ಪ್ರಶಸ್ತಿ ಪತ್ರನೀಡಲಾಗುತ್ತಿದೆ. ಶ್ರೀ ಮಾರಿಕಾಂಬ ಜಾತ್ರಾಸಮಿತಿ ಕುಸ್ತಿ ಸಂಚಾಲಕರಾಗಿ ಎಸ್.ಅಶೋಕ್, ಸಹಸಂಚಾಲಕರಾಗಿ ಎಂ.ಎಸ್.ಶಶಿಕಾಂತ್ ಮತ್ತುಜಗನ್ನಾಥ್‌ ಜೇಡಿ ಕುಣಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸಾಗರದ ಮಾರಿಕಾಂಬ ಜಾತ್ರೆ ವೇಳೆಯಲ್ಲಿ ಆಯೋಜಿಸಿದ್ದ ಕುಸ್ತಿ ಪಂದ್ಯಾವಳಿ ವೀಕ್ಷಿಸಲು ಮೊದಲ ದಿನವೇ ಸಾವಿರಾರುಜನರು ಆಗಮಿಸಿದ್ದರು.ರಾಜ್ಯದ ವಿವಿಧಕಡೆಯಿಂದ ಕುಸ್ತಿ ಪ್ರೇಮಿಗಳು ಆಗಮಿಸಿದ್ದರು.

ರಾಷ್ಟಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ವಿಜೇತ ಕುಸ್ತಿಪಟುಗಳಿಗೆ ಬೆಳ್ಳಿ ಬಹುಮಾನ ಹಾಗೂ ವಿಶೇಷ ನಗದು ಬಹುಮಾನ ನೀಡಲಾಗುತ್ತಿದೆ.

200 ಬೆಳ್ಳಿ ಪದಕ, ಬೆಳ್ಳಿ ಬಳೆ,ಬೆಳ್ಳಿ ಗದೆ ಪಂದ್ಯಗಳು ನಡೆಯಲಿವೆ. 1 ಸಾವಿರ ರೂಪಾಯಿಯಿಂದ 25-50 ಸಾವಿರರೂ.ವರೆಗಿನ ಪಂದ್ಯಗಳು ನಡೆಯಲಿವೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ವೇತನ ಆಯೋಗಕ್ಕೆ ಸರ್ಕಾರಿ ನೌಕರರ ಸಂಘದಿಂದ ಅಗತ್ಯ ಮಾಹಿತಿ ಸಲ್ಲಿಕೆ- ಷಡಾಕ್ಷರಿ

0

ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ವೇತನ ಆಯೋಗದ ಅಧ್ಯಕ್ಷರಿಗೆ ಆಯೋಗದ ಅನೇಕ ಪ್ರಶ್ನೆಗಳಿಗೆ ಅಗತ್ಯ ಮಾಹಿತಿಗಳೊಂದಿಗೆ ಲಿಖಿತ ಉತ್ತರವನ್ನು ಸಲ್ಲಿಸಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ತಿಳಿಸಿದ್ದಾರೆ.

ಅವರು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ 8ನೇ ವೇತನ ಆಯೋಗವನ್ನು ರಚಿಸಿತ್ತು. ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವೇತನ ಆಯೋಗವು ಜನವರಿ 18ರಂದು ಪ್ರಶ್ನಾವಳಿಗಳನ್ನು ಬಿಡುಗಡೆಗೊಳಿಸಿ, ನೌಕರರ ಸಂಘದಿಂದ ಉತ್ತರ, ಅಭಿಪ್ರಾಯ ಮತ್ತು ಸಲಹೆಗಳನ್ನು ಆಹ್ವಾನಿಸಿತ್ತು.

ಈ ಹಿನ್ನೆಲೆಯಲ್ಲಿ ಸಂಘದ ಪದಾಧಿಕಾರಿಗಳ ನಿಯೋಗವು ಅಧ್ಯಕ್ಷರನ್ನು ಭೇಟಿ ಮಾಡಿ ಮಾಹಿತಿ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ಈ ಉತ್ತರ ಸಲ್ಲಿಸುವುದಕ್ಕೆ ಮುನ್ನ ರಾಜ್ಯದಾದ್ಯಂತ ವಿವಿದ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ-ನೌಕರರಿಂದ ಮಾಹಿತಿಗಳನ್ನು ಸಂಗ್ರಹಿಸಿ, ಸಂಘದ ಹಿರಿಯ ಪದಾಧಿಕಾರಿಗಳು ಮತ್ತು ವೃಂದ ಸಂಘಗಳ ಅಧ್ಯಕ್ಷರು ಸುದೀರ್ಘವಾಗಿ ಸಮಾಲೋಚನೆಯ ನಂತರ 65 ಪುಟಗಳ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿರುವುದಾಗಿ ತಿಳಿಸಿರುವ ಅವರು, ಸಂಘವು ಪ್ರಸ್ತಾಪಿಸಿರುವ ಅಂಶಗಳು ಸಕಾರಾತ್ಮಕವಾಗಿದೆ. ಸರ್ಕಾರದ ಹಿತ ಹಾಗೂ ರಾಜ್ಯ ಸರ್ಕಾರದ ಅಧಿಕಾರಿ-ನೌಕರರ ಅಭ್ಯುದಯವನ್ನು ಪರಿಗಣಿಸಿದೆ ಎಂದವರು ತಿಳಿಸಿದ್ದಾರೆ.

ಮುಖ್ಯಾಂಶಗಳು ಹಾಗೂ ಹೊಸ ವೇತನ ಶ್ರೇಣಿಗಳ ರಚನೆಗೆ ಅಳವಡಿಸಿಕೊಂಡಿರುವ ಮಾನಂದಂಡಗಳು :
ಸಮಾನ ಕೆಲಸಕ್ಕೆ-ಸಮಾನ ವೇತನ, ವಿದ್ಯಾರ್ಹತೆ, ಜವಾಬ್ದಾರಿಯ ಗುಣಮಟ್ಟ, ಕಾರ್ಯಕ್ಷಮತೆ, ಕಾರ್ಯಕ್ಷೇತ್ರದ ವ್ಯಾಪ್ತಿ, ಜೊತೆಗೆ ನೆರೆ ರಾಜ್ಯ ಮತ್ತು ಕೇಂದ್ರ ವೇತನ ಮತ್ತು ಭತ್ಯೆಗಳ ಹೋಲಿಕೆಗಳನ್ನು ತುಲನಾತ್ಮಕವಾಗಿ ಅಧ್ಯಯನ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.

ಕಚೇರಿ ವೇಳೆಯನ್ನು ಹೆಚ್ಚಿಸಿ, ವಾರದ ಕರ್ತವ್ಯದ ದಿನಗಳನ್ನು ಕಡಿಮೆ ಮಾಡುವುದು.

ಸರ್ಕಾರಕ್ಕೆ ಸಾರಿಗೆ, ವಿದ್ಯುತ್, ನೀರು, ಟ್ರಾಫಿಕ್, ಸರ್ಕಾರಿ ವಾಹನಗಳ ಇಂಧನ ಹಾಗೂ ನಿರ್ವಹಣೆ, ವೆಚ್ಚದಲ್ಲಿ ಆರ್ಥಿಕ ಮಿತವ್ಯಯ ಸಾಧಿಸುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರಿ ನೌಕರರಿಗಿರುವಂತೆ ಬೆಳಿಗ್ಗೆ 10ಕ್ಕೆ ಬದಲಾಗಿ ಬೆಳಿಗ್ಗೆ 9.30ರಿಂದ ಹಾಗೂ ಸಂಜೆ 5.30ಕ್ಕೆ ಬದಲಾಗಿ ಸಂಜೆ 6 ರವರೆಗೆ ಬದಲಾಯಿಸುವುದು. ತಿಂಗಳ ಮೊದಲ ಮತ್ತು ಮೂರನೆ ಶನಿವಾರ ಸಾರ್ವತ್ರಿಕ ರಜೆ ನೀಡುವುದು, ವೇತನ ಹೆಚ್ಚಳ ಹೊರೆ-ಸರಿದೂಗಿಸುವ ನಿಟ್ಟಿನಲ್ಲಿ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವುದು, ಆಡಳಿತದಲ್ಲಿ ತಂತ್ರಜ್ಞಾನವನ್ನು ಹೆಚ್ಚಿಸುವುದು, ನೌಕರರಲ್ಲಿ ದಕ್ಷತೆ ಮತ್ತು ನೈಪುಣ್ಯತೆ ಹಾಗೂ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಎಟಿಐ ಮಾದರಿ ತರಬೇತಿ ನೀಡುವ ಬಗ್ಗೆಯೂ ಗಮನಹರಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಅಲ್ಲದೆ, ಅನುಕೂಲವಾಗುವ ಕೇಂದ್ರ ಮತ್ತು ಕೇರಳ ರಾಜ್ಯ ನೌಕರರ ವೇತನ-ಭತ್ಯೆಗಳನ್ನು ಪರಿಗಣಿಸಬೇಕು, 6ನೇ ವೇತನ ಆಯೋಗದಲ್ಲಿ ಪ್ರಸ್ತುತ ಮೂಲ ವೇತನಕ್ಕೆ ಹಾಲಿ ಇರುವ ಶೇ.31ರಷ್ಟು ತುಟ್ಟಿಭತ್ಯೆಯನ್ನು ವಿಲೀನಗೊಳಿಸಿ ಶೇ. 40%ರಷ್ಟು ಫಿಟ್‌ಮೆಂಟ್ ಸೌಲಭ್ಯವನ್ನು ದಿನಾಂಕ:1/3/2022 ರಿಂದ ಜಾರಿಗೆ ತರುವ ಬಗ್ಗೆಯೂ ಆಯೋಗದ ಗಮನಸೆಳೆಯಲಾಗಿದೆ ಎಂದವರು ತಿಳಿಸಿದ್ದಾರೆ. 2023ರಲ್ಲಿ ಪರಿಷ್ಕರಣೆಯಾಗಲಿರುವ ಕೇಂದ್ರ ವೇತನ ಮತ್ತು ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಈಗಾಗಲೇ 26 ರಾಜ್ಯಗಳಲ್ಲಿರುವಂತೆ ಯಥಾವತ್ತಾಗಿ ಅನ್ವಯಗೊಳಿಸಲು ಆಯೋಗವು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಹಾಲಿ ಇರುವ 25 ಮಾಸ್ಟರ್ ವೇತನ ಶ್ರೇಣಿ ಹಾಗೂ 92 ವೇತನ ಹಂತಗಳನ್ನು ಮುಂದುವರೆಸಬೇಕು. ಹೊಸ ವೇತನ ಶ್ರೇಣಿಗಳನ್ನು 2022ನೇ ಸಾಲಿನ ಬೆಲೆ ಸೂಚ್ಯಾಂಕದ 12 ತಿಂಗಳ ಸರಾಸರಿಯ ಆಧಾರದ ಮೇಲೆ ವೇತನ ಶ್ರೇಣಿಗಳ ದರಗಳನ್ನು ನಿಗದಿಪಡಿಸಬೇಕು, ಕನಿಷ್ಟ 40% ಫಿಟ್‌ಮೆಂಟ್‌ನೊಂದಿಗೆ ಹಾಗೂ ಜೀವನ ರ‍್ವಹಣೆಯನ್ನಾಧರಿಸಿ ಗ್ರೂಪ್ ‘ಡಿ’ ನೌಕರನ ಕನಿಷ್ಟ ಮೂಲ ವೇತನ ರೂ.21,000ಕ್ಕೆ ನಿಗದಿಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದವರು ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಚಾರ ಕಾರ್ಯ

0

ಚಿಕ್ಕಮಗಳೂರು: ತಾಲ್ಲೂಕಿನ ಈಶ್ವರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಾಳಿಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ಪ್ರತಿ ಮನೆ ಮನೆಗೆ ಭೇಟಿ ನೀಡಿ ಪಕ್ಷದ ಪಂಚರತ್ನ ಯೋಜನೆ ಬಗ್ಗೆ ಚಿಕ್ಕಮಗಳೂರು ವಿಧಾನಸಭಾ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ಮಾಹಿತಿ ನೀಡಿ ಪ್ರಚಾರ ಕಾರ್ಯದಲ್ಲಿ ತೊಡಗಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಚುನಾವಣಾ ಉಸ್ತುವಾರಿ ಸ್ವಾಮಿಗೌಡ , ರೈತ ಮಹಿಳಾ ಅದ್ಯಕ್ಷೆ ಶ್ರೀಮತಿ ಚೈತ್ರಗೌಡ, ಕ್ಷೇತ್ರ ಸಮಿತಿ ಮಹಿಳಾ ಅದ್ಯಕ್ಷೆ ಶ್ರೀಮತಿ ನಾಗರತ್ನ, ಪಕ್ಷದ ಮುಖಂಡ ಪ್ರದೀಪ್, ಗ್ರಾಮದ ರತ್ನಣ್ಣ, ಕುಮಾರ, ನಾಗೇಶ್ ಮತ್ತಿತರರು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಶಿವಮೊಗ್ಗದಲ್ಲಿ ಸುಸಜ್ಜಿತ ರಾವ್ ಸ್ಪೋರ್ಟ್ಸ್ ಅರೆನಾ ಇನ್ ಡೋರ್ ಕ್ರೀಡಾಂಗಣ

0

ಶಿವಮೊಗದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಷಟಲ್‌ ಬ್ಯಾಡ್ಮಿಂಟನ್‌ ಹಾಗೂ ಕ್ರಿಕೆಟ್‌ ಗಾಗಿ ಸುಸಜ್ಜಿತವಾದ ಒಳಾಂಗಣ ಕ್ರೀಡಾಂಗಣ ರಾವ್‌ ಸ್ಪೋರ್ಟ್ಸ್‌ ಅರೆನಾ ಆರಂಭಗೊಂಡಿದೆ.

ಶಿವಮೊಗ್ಗದ ಗುಂಡಪ್ಪ ಶೆಡ್‌ ನಲ್ಲಿರುವ ರಾಮರಾವ್‌ ಲೇಔಟ್‌ನಲ್ಲಿ ಸುಂದರವಾದ ಪರಿಸರದಲ್ಲಿರುವ ಈ ಕ್ರೀಡಾಂಗಣದಲ್ಲಿ ಷಟಲ್‌ ಬ್ಯಾಡ್ಮಿಂಟನ್‌ಗಾಗಿ 5 ಕೋರ್ಟ್‌ ಹಾಗೂ ಕ್ರಿಕೆಟ್‌ ಗಾಗಿ 3 ಪಿಚ್ ಗಳನ್ನು ನಿರ್ಮಿಸಲಾಗಿದೆ.

ಇಂಡೋರ್‌ ಕ್ರಿಕೆಟ್‌ ಪಿಚ್‌ ಶಿವಮೊಗ್ಗದಲ್ಲೇ ಇದು ಮೊದಲನೆಯದ್ದಾಗಿದೆ.


ಈ ಕ್ರೀಡಾಂಗಣ ಬೆಳಗ್ಗೆ 5ಗಂಟೆಯಿಂದ ರಾತ್ರಿ 10ಗಂಟೆಯವರೆಗೆ ಕ್ರೀಡಾಪಟುಗಳಿಗೆ ತೆರೆದಿರುತ್ತದೆ. ಬ್ಯಾಡ್ಮಿಂಟನ್‌ ನ ಐದು ಕೋರ್ಟ್‌ ಗಳಲ್ಲಿ ನಿತ್ಯವೂ ತರಬೇತಿ ನಡೆಯಲಿದೆ, ಅಲ್ಲದೆ, ನಿತ್ಯವೂ ಕ್ರೀಡಾಪಟುಗಳು ಬಂದು ಅಭ್ಯಾಸ ನಡೆಸಲು ಅವಕಾಶವಿದೆ.

ಮುಖ್ಯ ತರಬೇತುದಾರ ಅರುಣ್‌ ಆರ್
ಕರ್ನಾಟಕ ರಾಜ್ಯ ಷಟಲ್‌ ಬ್ಯಾಡ್ಮಿಂಟನ್‌ ಅಸೋಷಿಯೇಷನ್‌ ಕಾರ್ಯನಿರ್ವಾಹಕ ಮಂಡಳಿಯ ಸದಸ್ಯರಾಗಿರುವ ಆರ್. ಅರುಣ್‌ ಮಲೆನಾಡಿನ ಹೆಮ್ಮೆಯ ಕ್ರೀಡಾಪಟು. ಶಿವಮೊಗ್ಗ ಜಿಲ್ಲಾ ಷಟಲ್‌ ಬ್ಯಾಡ್ಮಿಂಟನ್‌ ಅಸೋಷಿಯೇಷನ್‌ ಕಾರ್ಯದರ್ಶಿಯಾಗಿಯೂ ಸೇವೆ ಸಲಿಸುತ್ತಿದ್ದಾರೆ.


ಶಿವಮೊಗ್ಗದಲ್ಲಿ ಕಳೆದ 2 ದಶಕಗಳಿಂದ ಷಟಲ್‌ ಬ್ಯಾಡ್ಮಿಂಟನ್‌ ಕೋಚ್‌ ಆಗಿ ಸೇವೆ ಸಲ್ಲಿಸುತ್ತಿರುವ ಅರುಣ್‌ ಆರ್. ಅವರು ರಾವ್‌ ಸ್ಪೋರ್ಟ್ಸ್‌ ಅರೆನಾದ ಮುಖ್ಯಸ್ಥರಾಗಿದ್ದಾರೆ. ಇವರಿಂದ ತರಬೇತಿ ಪಡೆದ 15 ಕ್ಕೂ ಹೆಚ್ಚು ಕ್ರೀಡಾಪಟುಗಳು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಥಾನಗಳನ್ನು ಪಡೆದಿದ್ದಾರೆ. ಇವರೊಂದಿಗೆ ಆರ್. ಆದಿತ್ಯ ಅವರೂ ರಾವ್‌ ಸ್ಪೋರ್ಟ್ಸ್‌ ಅರೆನಾದ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಅರುಣ್‌ ಹಾಗೂ ಆದಿತ್ಯ ಅವರೊಂದಿಗೆ ಬೆಂಗಳೂರಿನಲ್ಲಿ ಇರುವ ಅಜಯ್‌ ಕೂಡಾ ರಾವ್‌ ಸ್ಪೋರ್ಟ್ಸ್‌ ಅರೆನಾದಲ್ಲಿ ವಿವಿಧ ತರಬೇತಿ ಶಿಬಿರಗಳಿಗೆ ಕೈಜೋಡಿಸಲಿದ್ದಾರೆ.


ಈ ಕ್ರೀಡಾಂಗಣದಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಪಂದ್ಯಗಳನ್ನು ನಡೆಸಲು ಅವಕಾಶವಿದೆ. ಜೊತೆಗೆ ಬೇರೆ ಬೇರೆ ಕ್ಲಬ್‌ ಗಳೂ ಇಲ್ಲಿ ತರಬೇತಿ ನೀಡಲು ಅವಕಾಶವಿದೆ. ವೈಯಕ್ತಿಕವಾಗಿ ತರಬೇತಿ ಪಡೆಯಲೂ ಅವಕಾಶವಿದೆ. ವರ್ಷವಿಡೀ ಬೇರೆ ಬೇರೆ ವಯೋಮಾನದವರಿಗೆ ವಿಶೇಷ ತರಬೇತಿ ಶಿಬಿರಗಳನ್ನು ಆಯೋಜನೆ ಮಾಡಲು ಉದ್ದೇಶಿಸಲಾಗಿದೆ.

ಶಿವಮೊಗ್ಗದಲ್ಲಿ ಸರಿಸುಮಾರು 4-5 ತಿಂಗಳು ಮಳೆ ಬರುತ್ತದೆ. ಈ ಸಂದರ್ಭದಲ್ಲಿ ಕ್ರೀಡಾಪಟುಗಳ ಅಭ್ಯಾ ಸವೇ ನಿಂತು ಹೋಗುತ್ತದೆ. ಆದರೆ, ರಾವ್‌ ಸ್ಪೋರ್ಟ್‌ ಅರೆನಾದಲ್ಲಿ ಯಾವುದೇ ಅಡೆತಡೆ ಇಲ್ಲದೆ ತರಬೇತಿ- ಅಭ್ಯಾಸ ಪಡೆಯಬಹುದಾಗಿದೆ.

ಕ್ರೀಡಾಂಗಣದ ವಿವರ:
• 100 ಕೆಲಸದ ದಿನಗಳಲ್ಲಿ ವಿಶ್ವ ದರ್ಜೆಯ ಈ ಕ್ರೀಡಾಂಗಣ ನಿರ್ಮಾಣವಾಗಿದೆ.
• 12500 ಚದರ ಅಡಿ ವಿಸ್ತೀರ್ಣದಲ್ಲಿರುವ ಈ ಕ್ರೀಡಾಂಗಣ 37 ಅಡಿ ಎತ್ತರವಿದೆ.
• ನೆಲಹಾಸು: ಸಿಲಿಕಾನ್ ತಂತ್ರಜ್ಞಾನ ಜರ್ಮನ್ ಇಂಜಿನಿಯರ್ಡ್ ಹೈಬ್ರಿಡ್ ಬ್ಯಾಡ್ಮಿಂಟನ್ ಕೋರ್ಟ್ ಮತ್ತು ಕ್ರಿಕೆಟ್ ಆಸ್ಟ್ರೋ ಟರ್ಫ್ ಪಿಚ್‌ ಇದೆ.
• ಎಲ್‌ಇಡಿ ಲೈಟ್‌ಗಳು: ಈ ಕ್ರೀಡಾಂಗಣದಲ್ಲಿ ಅಳವಡಿಸಿರುವ ವಿಶೇಷ ಎಲ್‌ಇಡಿ ಲೈಟ್‌ ಗಳಿಗೆ 350 ಲಕ್ಸ್ ಮಟ್ಟವಿದೆ. ಈ ಬೆಳಕಿನಲ್ಲಿ ಶಟಲ್‌ಗಳು ಗಂಟೆಗೆ 400ಕಿಮೀ ವೇಗದಲ್ಲಿ ಸಾಗುವಾಗಲೂ ಸ್ಪಷ್ಟವಾಗಿ ಗೋಚರಿಸುತ್ತವೆ.
• ದ್ವಿಚಕ್ರ ಮತ್ತು 4 ಚಕ್ರದ ವಾಹನಗಳಿಗೆ ಸಾಕಷ್ಟು ಪಾರ್ಕಿಂಗ್ ಸ್ಥಳ.
• ಸುಸಜ್ಜಿತ ಸ್ನಾನಗೃಹಗಳು ಮತ್ತು ಬಟ್ಟೆ ಬದಲಾವಣೆ ಕೊಠಡಿಗಳು
• ಶುದ್ಧ ಕುಡಿಯುವ ನೀರು
• 20 ವರ್ಷಗಳ ಅನುಭವ ಹೊಂದಿರುವ ರಾಷ್ಟ್ರೀಯ ಮಟ್ಟದ ತರಬೇತುದಾರರು.
• ಹೊರಾಂಗಣ ಫಿಟ್ನೆಸ್ ಪ್ರದೇಶ
• 24 ಗಂಟೆಗಳ ಪವರ್ ಬ್ಯಾಕ್ ಅಪ್
ಇಷ್ಟೆಲ್ಲಾ ಸೌಲಭ್ಯಗಳಿರುವ ಈ ರಾವ್‌ ಸ್ಪೋರ್ಟ್ಸ್‌ ಅರೆನಾದಿಂದ ಮಲೆನಾಡಿನಲ್ಲಿ ಷಟಲ್‌ ಬ್ಯಾಡ್ಮಿಂಟನ್‌ ಹಾಗೂ ಕ್ರಿಕೆಟ್‌ ನಲ್ಲಿ ವಿಶೇಷ ಸಾಧನೆ ಮಾಡಲು ಕ್ರೀಡಾಪಟುಗಳಿಗೆ ಅವಕಾಶ ಸಿಗಲಿದೆ.

 

ಮಲೆನಾಡಿನ ಹೆಮ್ಮೆಯ ಈ ರಾವ್‌ ಸ್ಪೋರ್ಟ್ಸ್‌ ಅರೆನಾ ಇದೇ ತಿಂಗಳ ಫೆಬ್ರವರಿ 12ರ ಭಾನುವಾರ ವಿದ್ಯುಕ್ತವಾಗಿ ಉದ್ಘಾಟನೆಗೊಳ್ಳಲಿದೆ.

ಜಿಲ್ಲೆಯ ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ ಪಟುಗಳು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.

ಜಿ.ಎಸ್. ನಾಗರಾಜ್‌
ಆರ್. ಆದಿತ್ಯ
ಆರ್. ಅರುಣ್‌
ಆರ್. ಅಜೇಯ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.