Friday, August 7, 2026
Friday, August 7, 2026
Home Blog Page 131

National Education Committee ವಿಜ್ಞಾನದಲ್ಲಿ ಎಲ್ಲದಕ್ಜೆ ಉತ್ತರ ಲಭ್ಯ.ಆದರೆ ನೈಜ ರಕ್ತಕ್ಕೆ ಪರ್ಯಾಯ ವ್ಯವಸ್ಥೆಯಿಲ್ಲ- ಪಿ.ಸಂಜೀವ್ ಕುಮಾರ್

0

National Education Committee ತಾಂತ್ರಿಕ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಅದೃಷ್ಟವಂತರು. ಇಂದಿನ ವಿಜ್ಞಾನ ತಮ್ಮೆಲ್ಲ ಪ್ರಶ್ನೆಗಳಿಗೆ ಉತ್ತರ ನೀಡುತ್ತದೆ. ಆದರೆ ಇದುವರೆವಿಗೂ ರಕ್ತಕ್ಕೆ ಪರ್ಯಾಯ ವ್ಯವಸ್ಥೆ ದೊರಕಿಲ್ಲ. ರಕ್ತದಾನ ಶ್ರೇಷ್ಠದಾನ ಎಂದು ಡಿವೈಎಸ್ ಪಿ ಸಂಜೀವ್ ಕುಮಾರ್ ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ, ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ, ರೋಟರಿ ಕ್ಲಬ್, ಶಿವಮೊಗ್ಗ ಜ್ಯುಬಿಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕ ಜವಾಹರಲಾಲ್ ನೆಹರು ತಾಂತ್ರಿಕ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಇಂದು ಜೆ. ಎನ್.ಎನ್.ಸಿ. ಕಾಲೇಜಿನ ಲೈಬ್ರೆರಿ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ-2027 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಉತ್ತಮವಾದ ವಿಚಾರಗಳ ಕಡೆಗೆ ಗಮನ ಹರಿಸಬೇಕು. ಮತ್ತು ಭರಿಸುವ ಹಾಗೂ ದೇಹಕ್ಕೆ ಹಾನಿಕಾರಕವಾಗುವ ವಸ್ತುಗಳಿಂದ ದೂರ ಉಳಿದು, ರಸ್ತೆ ಸುರಕ್ಷಿತ ವಾಹನ ಚಾಲನೆಗೆ ಹೆಚ್ಚಿನ ಮಹತ್ವ ನೀಡಿದಾಗ, ಸಮಾಜ ಸುರಕ್ಷಿತವಾಗಿರಲು ಸಹಕಾರಿ. ಸ್ವಂತ ಉದ್ಯಮ ಸ್ಥಾಪಿಸಿ, ಉದ್ಯೋಗ ದಾತರಾಗಿ. ಆದಾಯ ಪಡೆಯುವುದಕ್ಕಿಂತ, ನೀಡುವುದರಲ್ಲಿ ಹೆಚ್ಚಿನ ಸಂತೋಷವಿದೆ. ವಿದ್ಯಾವಂತರು ಕೃಷಿ ಚಟುವಟಿಗಳಲ್ಲಿ ತಾಂತ್ರಿಕ ನೆರವು ನೀಡಿ ಆರ್ಥಿಕವಾಗಿ ದೇಶ ಸದೃಡವಾಗಲು ಶ್ರಮಿಸಿ ಎಂದು ಎಂದು ಕಿವಿ ಮಾತು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿಯ ನಿರ್ದೇಶಕರಾದ ಡಾ. ಟಿ.ಆರ್.ಅಶ್ವಥನಾರಾಯಣ್ ಶೆಟ್ಟಿ ಮಾತನಾಡಿ, ಐವತ್ತು ವರ್ಷಗಳ ಹಿಂದೆ ರಕ್ತದಾನದ ಬಗ್ಗೆ ಇಷ್ಟು ಅನುಕೂಲ ಇರಲಿಲ್ಲ. ತಮ್ಮ ಶ್ರೀನಿಧಿಯಲ್ಲಿ ರಕ್ತದಾನಿಗಳ ದೂರವಾಣಿ ಸಂಖ್ಯೆ ಸಂಗ್ರಹಿಸಿ ಅವಶ್ಯಕರಿಗೆ ಸಹಾಯ ಮಾಡುತ್ತಿದ್ದೆವು. ಅಂದು ವೈಯುಕ್ತಿಕವಾಗಿ ನಲವತ್ತು ಬಾರಿ ರಕ್ತದಾನ ಮಾಡಿದ್ದನ್ನು ಸ್ಮರಿಸಿಕೊಂಡರು.

ಸ್ವಯಂ ಪ್ರೇರಿತ ರಕ್ತದಾನ ಸೇವಾ ಸಂಸ್ಥೆಯ ಅಧ್ಯಕ್ಷರಾದ ಧರಣೇಂದ್ರ ದಿನಕರ್ ಮಾತನಾಡಿ, ತಾವು ಈ ದಿನ ಒಂದು ನೂರ ಇಪ್ಪತ್ತೊಂದನೆ ಬಾರಿಗೆ ರಕ್ತದಾನ ಮಾಡುತ್ತಿದ್ದು, ಸುರೇಶ್ ರವರು ತ್ತೊಂಬತ್ತೆರಡು ಬಾರಿ, ವಾಗೇಶ್ ಎಂಬತ್ತು ಬಾರಿ, ಜಿ.ವಿಜಯಕಮಾರ್ ನಲವತ್ತೈದು ಬಾರಿ, ಬಸವರಾಜ್ ಮುವತ್ತೈದು ಬಾರಿ ಹೀಗೆ ಇನ್ನೂ ಹಲವರು ನಗರದಲ್ಲಿ ರಕ್ತದಾನ ಮಾಡಿದ್ದು ನಾವೆಲ್ಲ ಸೇರಿ ಸ್ವಯಂ ಪ್ರೇರಿತ ರಕ್ತದಾನಿಗಳ ಸಂಘದಿಂದ ಉತ್ತಮ ಕಾರ್ಯ ಮಾಡುತ್ತಿದ್ದು, ಈ ಉತ್ತಮ ಕಾರ್ಯಕ್ಕೆ ವಿದ್ಯಾರ್ಥಿಗಳ ಸಹಕಾರ ಕೂಡಾ ಬಹಳ ಮುಖ್ಯ ಎಂದರು.

ಸಮಾಜ ಸೇವರಾದ ನವ್ಯಶ್ರೀ ನಾಗೇಶ್ ಮಾತನಾಡಿ, ತಮ್ಮ ದೈನಂದಿನ ದುಡಿಮೆಯಲ್ಲಿ ಕೆಲವು ಭಾಗ ಪ್ರಕೃತಿ ರಕ್ಷಣೆಗೆ, ಇಂತಹ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವವರಿಗೆ ಸಹಕರಿಸಿ, ಸಮಾಜದಲ್ಲಿ ಅಳಿಲು ಸೇವೆ ಸಲ್ಲಿಸುವ ಮೂಲಕ ತೃಪ್ತಿ ಹೊಂದುತ್ತಿರುವುದಾಗಿ ತಿಳಿಸಿದರು.

National Education Committee ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆ.ಎನ್.ಎನ್.ಸಿ. ಕಾಲೇಜಿನ ಪ್ರಾಂಶುಪಾಲರಾದ ಡಾ. ವೈ.ವಿಜಯಕುಮಾರ್ ವಹಿಸಿದ್ದರು. ರೋಟರಿ ಜ್ಯುಬಿಲಿ ಅಧ್ಯಕ್ಷರಾದ ಅಶ್ವಥ್ ಬಿ.ಎಸ್., ಎನ್.ಎಸ್.ಎಸ್. ಅಧಿಕಾರಿ ಅರುಣ್ ಕುಮಾರ್, ಬಸವರಾಜ್, ರೋಟರಿ ಜ್ಯುಬಿಲಿ ಕಾರ್ಯದರ್ಶಿ ರೇವಣಸಿದ್ದಪ್ಪ, ಕಾಲೇಜ್ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Chamber of Commerece Shivamogga ಶಿವಮೊಗ್ಗ- ಬೆಂಗಳೂರು ನಡುವೆ ವಿಮಾನ ಸಂಚಾರ ಮುಂದುವರೆಸಲು ಮನವಿ

0

Chamber of Commerece Shivamogga ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸಂಚಾರ ಸೇವೆ ಮುಂದುವರಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಧ್ಯಕ್ಷ ಬಿ.ಗೋಪಿನಾಥ್ ಮತ್ತು ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಶಿವಮೊಗ್ಗ ಮತ್ತು ಬೆಂಗಳೂರು ವಿಮಾನ ಸೇವೆಗಳನ್ನು ಪ್ರಾರಂಭಿಸಿರುವುದು ಮಲೆನಾಡು ಪ್ರದೇಶಕ್ಕೆ ಅನುಕೂಲವಾಗಿದೆ. ಪ್ರಯಾಣಿಕರ ಸಂಖ್ಯೆಯು ಹೆಚ್ಚಿನ ಸಂಖ್ಯೆಯಲ್ಲಿದ್ದು, ಲಾಭದಾಯಕ ಮಾರ್ಗವಾಗಿ ನಡೆಯುತ್ತಿದೆ. ಆದರೂ ಪ್ರಸ್ತುತ ಇರುವ ವಿಮಾನ ಸಂಪರ್ಕ ಮತ್ತು ಹಾರಾಟಗಳ ಸಂಖ್ಯೆಗಳು ಕಡಿಮೆ ಇದ್ದು, ವೇಗವಾಗಿ ಬೆಳೆಯುತ್ತಿರುವ ಶಿವಮೊಗ್ಗದ ಕೈಗಾರಿಕೆ, ವ್ಯಾಪಾರ, ಶಿಕ್ಷಣ, ಆರೋಗ್ಯ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳ ಹೆಚ್ಚುತ್ತಿರುವ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಇಲ್ಲ. ಬೆಂಗಳೂರು ಮತ್ತು ಶಿವಮೊಗ್ಗ ಸಂಪರ್ಕವನ್ನು ಇನ್ನಷ್ಟು ಬಲಪಡಿಸಬೇಕು ಎಂದು ಬಿ.ಗೋಪಿನಾಥ್ ಮನವಿ ಮಾಡಿದರು.

ಕೈಗಾರಿಕೆಗಳು ಮತ್ತು ಉದ್ಯಮಿಗಳಿಗೆ ಹೊಸ ಹೂಡಿಕೆಗಳನ್ನು ಆಕರ್ಷಿಸಲು ವಿಮಾನ ಸಂಪರ್ಕ ನೆರವಾಗುತ್ತದೆ. ರಾಜ್ಯ ಸರ್ಕಾರದ ಮಹತ್ವದ ಐಟಿ ಬಿಯಾoಡ್ ಬೆಂಗಳೂರು ಯೋಜನೆಗೆ ಸಹಕಾರಿ ಆಗುತ್ತದೆ. ಪ್ರವಾಸೋದ್ಯಮ ಉತ್ತೇಜಿಸುತ್ತದೆ. ಕೃಷಿ ಉತ್ಪನ್ನಗಳನ್ನು ರಾಷ್ಟ್ರೀಯ ಮಾರುಕಟ್ಟೆಗೆ ತಲುಪಿಸಲು ಕೃಷಿ ಲಾಜಿಸ್ಟಿಕ್ಸ್ ಅನ್ನು ಸುಧಾರಿಸುತ್ತದೆ. ಇಂಡಿಗೋ, ಸ್ಟಾರ್ ಏರ್ ಮತ್ತು ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಗಳೊಂದಿಗೆ ಸಂವಹನ ನಡೆಸಿ ಶಿವಮೊಗ್ಗದಿಂದ ಬೆಂಗಳೂರಿಗೆ ಹೆಚ್ಚಿನ ವಿಮಾನ ಸೇವೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಸರ್ಕಾರ ಈ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ಒದಗಿಸಬೇಕು. ಶಿವಮೊಗ್ಗ ಬೆಂಗಳೂರು ನಡುವೆ ವಿಮಾನ ಸಂಚಾರ ಸೇವೆ ಮುಂದುವರಿಸುವುದರಿಂದ ಮುಂದಿನ ದಿನಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವು ಮಲೆನಾಡಿನ ಆರ್ಥಿಕ, ಪ್ರವಾಸೋದ್ಯಮ ಹಾಗೂ ಉದ್ಯೋಗಾವಕಾಶಗಳಿಗೆ ಶಕ್ತಿ ತುಂಬಿ ಜಿಲ್ಲೆಯ ವ್ಯಾಪಾರ ವಾಣಿಜ್ಯ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಿ ಶಿವಮೊಗ್ಗ ಬೆಂಗಳೂರು ವಿಮಾನಯಾನ ಸೇವೆಯನ್ನು ಮುಂದುವರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ, ಇಂಡಿಗೋ ಮತ್ತು ಇತರ ವಿಮಾನಯಾನ ಸಂಸ್ಥೆಗಳ ಜೊತೆ ನಿರಂತರ ಸಂಪರ್ಕದಲ್ಲಿ ಇದ್ದು, ಸಂಚಾರ ಸೇವೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲು ಬಿಡುವುದಿಲ್ಲ ಎಂದರು.

Chamber of Commerece Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಗಣೇಶ ಎಂ.ಅಂಗಡಿ, ಕೆ.ಬಿ.ಶಿವಕುಮಾರ್, ಎಸ್.ಎಸ್.ಉದಯಕುಮಾರ್, ರವಿ ಪ್ರಕಾಶ್ ಜನ್ನಿ, ವಿನೋದ್ ಕುಮಾರ್, ಪ್ರದೀಪ್ ವಿ ಎಲಿ ಹಾಜರಿದ್ದರು.

Shivamogga Airport ಚನ್ನೈ ವಿಮಾನ ರದ್ದು. ಪ್ರಯಾಣಿಕರಿಗೆ ಚನ್ನೈಗೆ ‌ಕೊಂಡೊಯ್ಯಲು ಬಸ್ ವ್ಯವಸ್ಥೆ: ಜನರ ಆಕ್ರೋಶ

0

Shivamogga Airport ಶಿವಮೊಗ್ಗ ಏರ್ಪೋರ್ಟ್ ನಲ್ಲಿ ಚೆನ್ನೈ ವಿಮಾನ ರದ್ದಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ಚೆನ್ನೈಗೆ ತೆರಳ ಬೇಕಿದ್ದ ಸ್ಪೈಸ್ ಜೆಟ್ ವಿಮಾನವು ಕಾರಣಾಂತರಗಳಿಂದ ರದ್ದಾಗಿದೆ ‌. ಇದರಿಂದಾಗಿ 50ಕ್ಕೂ ಹೆಚ್ಚು ಪ್ರಯಾಣಿಕರು ಪರದಾಡುವಂತಾಗಿದೆ.
ವಿಮಾನ ರದ್ದಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಪರ್ಯಾಯಮಾರ್ಗವನ್ನು ಮಾಡಿಕೊಡಿ ಎಂದು ಆಗ್ರಹಿಸಿದ್ದಾರೆ. ವಿಮಾನಯಾನ ಸಂಸ್ಥೆಯು ಚೆನ್ನೈಗೆ ಪ್ರಯಾಣ ಮಾಡಲು ಬಸ್ ವ್ಯವಸ್ಥೆ ಮಾಡಿದ್ದು ಬಸ್ ಸ್ಥಿತಿ ಕಂಡು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮದುವಣಿಗರು ಎತ್ತಿನಗಾಡಿ ಮೆರವಣಿಗೆಯಲ್ಲಿ ರಾರಾಜಿಸಿದರು

0

ಶಿವಮೊಗ್ಗದ ಸಾಗರದ ಕಾಗೋಡಿನಲ್ಲಿ ಎತ್ತಿನ ಬಂಡಿಯಲ್ಲಿ ವಧು ವರರ ಮೆರವಣಿಗೆ ನಡೆಸಲಾಯಿತು.

ಕಾಗೋಡು ಶಾರದಕ್ಕ ಎಂಬುವವರಿಂದ ಎತ್ತಿನ ಬಂಡಿ ಮೆರವಣಿಗೆ ನಡೆಯಿತು.

ಕಳೆದ ಶುಕ್ರವಾರ ನಡೆದ ಮದುವೆ ಸಂಭ್ರಮದಲ್ಲಿ
ಊರಿನ ದೇವಸ್ಥಾನದಿಂದ ಗಂಡಿನ ಮನೆವರೆಗೂ ಎತ್ತಿನ ಬಂಡಿಯಲ್ಲಿ ಮೆರವಣಿಗೆ ನಡೆಸಲಾಯಿತು.

ಮಡಿವಾಳ ಧರ್ಮಪ್ಪರವರ ಮಗ ಹೆಮಂತ್ ಹಾಗೂ ಅಂಕಿತ ರವರ ಮದುವೆ ಸಂಭ್ರಮದಲ್ಲಿ ಈ ಅಪರೂಪದ ದೃಶ್ಯ ಕಾಣಸಿಕ್ಕಿತು.

ಏಪ್ರಿಲ್ 18. ಶಿವಮೊಗ್ಗದ ನಂಜಪ್ಪ ಲೇ ಔಟ್ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದಲ್ಲಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 18 ರಂದು ಬೆಳಗ್ಗೆ 9.30 ರಿಂದ ಸಂಜೆ 6.00 ರವರೆಗೆ ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಪಂಡಿತ್ ಲೇಔಟ್, ಊರುಗಡೂರು, ಕಂಟ್ರಿಕ್ಲಬ್ ರಸ್ತೆ, ಎಂ.ಸಿ.ಲೇಔಟ್, ಗೋಶಾಲೆ ರಸ್ತೆ, ಶ್ರೀರಾಮ ಬಡಾವಣೆ, ತೋಟಗಾರಿಕೆ ಇಲಾಖೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

JCI Shivamogga ಗುಡ್ ಲಕ್ ಆರೈಕೆ ಕೇಂದ್ರದಲ್ಲಿನ ಅನಾಥ ಮಹಿಳೆಯರಿಗೆ ಭಾವನಾ ಜೆಸಿಐನಿಂದ ಉಡುಪು ವಿತರಣೆ

0

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನದಿಂದ ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಅನಾಥ ವೃದ್ಧರಿಗೆ ಅಗತ್ಯವಿರುವ ನೈಟಿಗಳನ್ನು ವಿತರಿಸಲಾಗಯಿತು. ಅಧ್ಯಕ್ಷೆ ಕರಿಬಸಮ್ಮ ಆನಂದ್, ಜೆಸಿಐ ಸೆನೆಟರ್ ಕಾರ್ಕಳ ಗಣೇಶ್ ಪೈ, ಜೆಸಿಐ ಭಾವನದ ಐಪಿಪಿ, ಝೆನ್ ಆಫೀಸರ್ ರೇಖಾ ರಂಗನಾಥ್, ಜೆ ಎ ಸಿ ಝೆನ್ ವೈಸ್ ಚೇರ್ಮನ್ ಪೂರ್ಣಿಮಾ ಸುನೀಲ್ ಭಾಗವಹಿಸಿದ್ದರು.

Brahmakumari Ishwariya University ಆಧ್ಯಾತ್ಮ , ಧ್ಯಾನ ಮತ್ತು ಯೋಗ ಮನುಷ್ಯನ ನೈಜ ಸಂಪತ್ತು-ಬ್ರಹ್ಮಕುಮಾರಿ ಸ್ವಾತಿ

0

Brahmakumari Ishwariya University ಒತ್ತಡ ಮತ್ತು ಅಶಾಂತಿಯ ಜೀವನಶೈಲಿಯಲ್ಲಿ ಬದುಕುತ್ತಿರುವ ಜನರಿಗೆ ಅದರಿಂದ ಹೊರಬರಲು ಭಗವಂತನ ಸಂದೇಶ ಮತ್ತು ಶಾಂತಿಯ ಮಹತ್ವದ ಅರಿವು ಮೂಡಿಸಬೇಕಿದೆ. ಆಧ್ಯಾತ್ಮ, ಧ್ಯಾನ, ಯೋಗ ಮನುಷ್ಯನ ನಿಜವಾದ ಸಂಪತ್ತು ಎಂದು ನವುಲೆಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮುಖ್ಯಸ್ಥೆ, ರಾಜಯೋಗಿನಿ, ಬ್ರಹ್ಮಕುಮಾರಿ ಸ್ವಾತಿ ಹೇಳಿದರು.
ನವುಲೆಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಮಕ್ಕಳಿಗೆ ಆಯೋಜಿಸಿರುವ ವ್ಯಕ್ತಿತ್ವ ವಿಕಸನ ಬೇಸಿಗೆ ಶಿಬಿರದ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಸಂಸ್ಥೆಯು ಜಗತ್ತಿಗೆ ಶಾಂತಿಯ ಸಂದೇಶ ಸಾರುತ್ತ ಮನುಷ್ಯ ಉತ್ತಮ ಹಾದಿಯಲ್ಲಿ ಬದುಕು ರೂಪಿಸಿಕೊಳ್ಳುವಂತೆ ನೆರವಾಗುತ್ತಿದೆ ಎಂದು ತಿಳಿಸಿದರು.
ಮನುಷ್ಯ ಕೆಟ್ಟ ಚಟಗಳಿಗೆ ದಾಸನಾಗಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದು, ಒಳ್ಳೆಯ ಸಂಗತಿಗಳಿಂದ ದೂರ ಉಳಿಯುತ್ತಿದ್ದಾರೆ. ಕೆಟ್ಟ ಹವ್ಯಾಸಗಳಿಗೆ ಬೇಗನೇ ಬಲಿಯಾಗುತ್ತಿದೆ. ಅದನ್ನು ಬಿಡಲು ಸಾಧ್ಯವಾಗುತ್ತಿಲ್ಲ. ಒಳ್ಳೆಯ ವ್ಯಕ್ತಿಯಾಗಿ ರೂಪಿಸಲು ಪರಿವರ್ತನೆ ತರಬೇಕಿದೆ. ಆಧ್ಯಾತ್ಮಿಕ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಪರಮಾತ್ಮನ ನೆನಪು ನಮ್ಮಲ್ಲಿ ಸಾತ್ವಿಕ ಶಕ್ತಿ ವೃದ್ಧಿಸುತ್ತದೆ. ಒಳ್ಳೆಯ ಹಾದಿಯಲ್ಲಿ ಕೆಟ್ಟ ಸಂಗತಿಗಳಿಗೆ ಎಂದಿಗೂ ಪ್ರೇರಣೆ ಇರುವುದಿಲ್ಲ. ಪರಿಪೂರ್ಣ ವ್ಯಕ್ತಿತ್ವ ರೂಪುಗೊಳ್ಳಲು ಒಳ್ಳೆಯ ಸಂಗತಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವ್ಯಕ್ತಿತ್ವ ವಿಕಸನ ಶಿಬಿರವು ಮಕ್ಕಳ ಉತ್ತಮ ವ್ಯಕ್ತಿತ್ವ ಬೆಳವಣಿಗೆ ಬೆಳೆಸುವಲ್ಲಿ ನೆರವಾಗುತ್ತದೆ. ಆತ್ಮವಿಶ್ವಾಸ ವೃದ್ಧಿಸುತ್ತದೆ. ಸಂವಹನ ಕೌಶಲ್ಯಗಳನ್ನು ಬೆಳೆಸಲು ಸಾಧ್ಯವಾಗುತ್ತದೆ. ಮಕ್ಕಳ ವ್ಯಕ್ತಿತ್ವದ ಬೆಳವಣಿಗೆಗೆ ಶಿಬಿರ ಪೂರಕವಾಗಿದೆ ಎಂದು ತಿಳಿಸಿದರು.
Brahmakumari Ishwariya University ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರದ ಮಹತ್ವ ಅರಿವು ಮೂಡಿಸಬೇಕು. ಮಕ್ಕಳಲ್ಲಿ ಸಕಾರಾತ್ಮಕ ಚಿಂತನೆ ಬೆಳೆಸುವಲ್ಲಿ ಇಂತಹ ಶಿಬಿರಗಳು ಮಹತ್ತರ ಪಾತ್ರ ವಹಿಸುತ್ತವೆ. ಮಕ್ಕಳು ಸರಿಯಾದ ಹಾದಿಯಲ್ಲಿ ಮುನ್ನಡೆಯಲು ಪೋಷಕರು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.
ಬ್ರಹ್ಮಕುಮಾರಿ ಕಾವ್ಯಾ ಹಾಗೂ ಈಶ್ವರೀಯ ಸಂಸ್ಥೆಯ ಸದಸ್ಯರು ಹಾಜರಿದ್ದರು.

Dr. B.R. Ambedkar ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ 19 ಜನಕ್ಕೆ ಜೀವ ವಿಮಾ ಬಾಂಡ್ ವಿತರಣೆ

0

Dr. B.R. Ambedkar ಶಿವಮೊಗ್ಗ ಜಿಲ್ಲೆಯ ಹೊಳೆ ಬೆನವಲ್ಲಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ವಿಶ್ವ ನಾಯಕ ಭಾರತ ರತ್ನ ಡಾ ಬಿ.ಆ‌ರ್. ಅಂಬೇಡ್ಕ‌ರ್ ರವರ 135ನೇ ಜಯಂತಿಯನ್ನು ಅದಿ ದ್ರಾವಿಡ ಸ್ವಸಹಾಯ ಸಂಘದ ವತಿಯಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ನಗರ ಪಾಲಿಕೆಯ ಮಾಜಿ ಮಹಾಪೌರರು ಏಳು ಮಲೈ ಹಾಗೂ ಭದ್ರಾವತಿಯ ಆದಿ ದ್ರಾವಿಡ ತಮಿಳ್ ಹಿತ ರಕ್ಷಣಾ ಸಮಿತಿಯ ಜಿಲ್ಲಾಧ್ಯಕ್ಷರು ನಿತ್ಯಾನಂದನ್, ಜೈಪಾಲ್ .ನಾರಾಯಣಸ್ವಾಮಿ ಉದಯಕುಮಾ‌ರ್. ಗುನಾಲನ್‌. ಅರುಣ ಕುಮಾರ್. ಮುರುಗೇಶ್ ಸೇರಿದಂತೆ ಗ್ರಾಮದ ಮುಖಂಡರು ಮಹಿಳೆಯರು ಯುವಕ ಮಿತ್ರರು ಸೇರಿ ಆಚರಿಸಲಾಯಿತು.
Dr. B.R. Ambedkar ಈ ಕಾರ್ಯಕ್ರಮದಲ್ಲಿ ಸಂಘದ 19 ಜನ ಸದಸ್ಯರಿಗೆ ಎಲ್‌ಐಸಿ ಬಾಂಡ್‌ ವಿತರಿಸಲಾಯಿತು. ಭದ್ರಾವತಿ ಯಲ್ಲಿಯೂ ಆದಿ ದ್ರಾವಿಡ ತಮಿಳು ಹಿತ ರಕ್ಷಣಾ ಸಮಿತಿ ಯಿಂದ ತಮಿಳ್ ಯೂತ್ ಮುಖಾಂತರ ಸಿಹಿ ವಿತರಿಸಲಾಯಿತು.

VISL ಡಾ.ಅಂಬೇಡ್ಕರ್ ಮತ್ತು ವಿಶ್ವೇಶ್ವರಯ್ಯನವರ ಜೀವನದ ವಿಚಾರಗಳು ಮಕ್ಕಳಿಗೆ ಅಗತ್ಯ- ಬಿ.ವಿಶ್ವನಾಥ್

0

VISL ವಿಐಎಸ್‌ಎಲ್ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ದ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಹೆಚ್.ಆರ್) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕರು, ಶ್ರೀ ಟಿ. ರವಿಚಂದ್ರನ್, ಮಹಾಪ್ರಬಂಧಕರು ಪ್ರಭಾರಿ (ಸ್ಥಾವರ), ಶ್ರೀ ಎಂ. ಸುಬ್ಬರಾವ್, ಮಹಾಪ್ರಬಂಧಕರು (ಪರಿಸರ ನಿರ್ವಹಣಾ ಇಲಾಖೆ), ಶ್ರೀ ಎಲ್. ಸುಂದರವಡಿವೇಲು, ಮಹಾಪ್ರಬಂಧಕರು ಕಾರ್ಮಿಕರ ಸಮನ್ವಯಾಧಿಕಾರಿ, ಶ್ರೀ ನವೀನ್ ರಾಹುಲ್, ಸಹಾಯಕ ಮಹಾಪ್ರಬಂಧಕರು (ನಗರಾಡಳಿತ ಮತ್ತು ಸಾರ್ವಜನಿಕ ಸಂಪರ್ಕ) ಮತ್ತು ಅಧ್ಯಕ್ಷರು, ಅಸೋಸಿಯೇಷನ್, ಶ್ರೀ ಪಿ. ಅಮೃತ್ ಕುಮಾರ್, ಅಧ್ಯಕ್ಷರು, ಕಾರ್ಮಿಕರ ಸಂಘ, ಶ್ರೀ ಅಜಯ್ ಡಿ. ಸೋಂಕುವಾರ್, ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಮರ್ಪಿಸಿದರು.

ಶ್ರೀ ಚಂದ್ರಕಾಂತ್, ಸಂವಿಧಾನದ ಪ್ರಸ್ತಾವನೆಯನ್ನು ಓದಿದರು ಹಾಗೂ ಶ್ರೀ ಎಮ್.ಎಲ್. ಯೋಗೀಶ್, ಸಹಾಯಕ ಪ್ರಬಂಧಕರು (ಮಾನವ ಸಂಪನ್ಮೂಲ) ನೆರೆದವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು ಮತ್ತು ವಂದನಾರ್ಪಣೆಗೈದರು.

ಶ್ರೀ ಬಿ. ವಿಶ್ವನಾಥ ಅವರು ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಡಾ|| ಬಿ.ಆರ್. ಅಂಬೇಡ್ಕರ್ ಹಾಗೂ ಸರ್.ಎಂ.ವಿಶ್ವೇಶ್ವರಾಯ ಅವರ ಜೀವನದಿಂದ ಸಂಕ್ಷಿಪ್ತ ಕಲಿಕಾ ಅಂಶಗಳನ್ನು ನೀಡಿದರು ಮತ್ತು ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರಗಳನ್ನು ಕಲಿಸಲು ಕರೆಯಿತ್ತರು.

ಈ ಸಂದರ್ಭದಲ್ಲಿ ಶ್ರೀ ಟಿ. ರವಿಚಂದ್ರನ್, ಶ್ರೀ ನವೀನ್ ರಾಹುಲ್, ಶ್ರೀ ಪಿ. ಅಮೃತ್ ಕುಮಾರ್ ಮಾತನಾಡಿದರು.

VISL ಶ್ರೀ ಜಗದೀಶ್ ಬಡಿಗೇರ್, ಶ್ರೀ ಕೆ. ಲಕ್ಷ್ಮಣ, ಶ್ರೀ ಎಲ್. ಮಧುಕುಮಾರ್, ಶ್ರೀಮತಿ ಪ್ರೇಮಬಾಯಿ, ಶ್ರೀಮತಿ ರಮ್ಯ, ಶ್ರೀ ಬಿ.ಎಸ್. ವಸಂತ್, ಶ್ರೀಮತಿ ತ್ರಿವೇಣಿ, ಶ್ರೀಮತಿ ಹೇಮಾವತಿ ಮತ್ತು ಕು.ಜಾಹ್ನವಿ ಇವರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

2025-26ನೇ ಸಾಲಿನಲ್ಲಿ ಶೈಕ್ಷಣಿಕ ಸಾಧನೆಗೈದ ಕಾರ್ಮಿಕರ ಮಕ್ಕಳಿಗೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಆಯೋಜಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನಗಳನ್ನು ನೀಡಲಾಯಿತು.

ಶ್ರೀಮತಿ ರಮ್ಯಾ, ಶ್ರೀಮತಿ ಶೈಲಶ್ರೀ ಮತ್ತು ಶ್ರೀಮತಿ ಪ್ರೇಮಬಾಯಿ ಕಾರ್ಯಕ್ರಮವನ್ನು ನಿರೂಪಿಸಿದರು. ಗಿISಐ ಮಾನವಸಂಪನ್ಮೂಲ ಇಲಾಖೆ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಅಕ್ಷಯ ತೃತೀಯ: ಬಾಲ್ಯ ವಿವಾಹ ಮಾಡುವುದು ವಾಡಿಕೆ, ಪೊಲೀಸ್ ಇಲಾಖೆ ಕಟ್ಟೆಚ್ಚರವಹಿಸಿದೆ : ಜಿಲ್ಲಾ ರಕ್ಷಣಾಧಿಕಾರಿ ಸೂಕ್ತ ಕ್ರಮ

0

ಅಕ್ಷಯ ತೃತೀಯ ದಿನದಂದು ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಗಳಿರುವುದರಿಂದ, ಇದನ್ನು ತಡೆಗಟ್ಟಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಜಿಲ್ಲಾಡಳಿತ ಸನ್ನದ್ಧವಾಗಿದೆ. ಬಾಲ್ಯವಿವಾಹವು ಒಂದು ಗಂಭೀರ ಸಾಮಾಜಿಕ ಪಿಡುಗಾಗಿದ್ದು, ಇದು ಮಕ್ಕಳ ಸಾಮಾಜಿಕ, ಮಾನಸಿಕ, ದೈಹಿಕ ಹಾಗೂ ಆರ್ಥಿಕ ಬೆಳವಣಿಗೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ. ಅಕ್ಷಯ ತೃತೀಯದಂತಹ ಶುಭ ಮುಹೂರ್ತದ ದಿನಗಳಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ನಡೆಯುವ ಸಾಧ್ಯತೆಗಳಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ದಿನಾಂಕ 20-04-2026 ರಂದು ವಿಶೇಷ ನಿಗಾ: ಏಪ್ರಿಲ್ 20 ರಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದ್ದು, ಜಿಲ್ಲೆಯಾದ್ಯಂತ ಈ ದಿನದಂದು ನಡೆಯುವ ವಿವಾಹಗಳ ಮೇಲೆ ಹೆಚ್ಚಿನ ನಿಗಾ ಇರಿಸಲಾಗುವುದು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಬಾಲ್ಯವಿವಾಹ ಮಾಡುವುದು ಅಥವಾ ಅದಕ್ಕೆ ಪ್ರೇರಣೆ ನೀಡುವುದು ಕಾನೂನುಬಾಹಿರ ಎಂದು ಎಚ್ಚರಿಸಿದ್ದಾರೆ.
ಮಾಹಿತಿ ನೀಡಲು ಸಹಾಯವಾಣಿ:
ನಿಮ್ಮ ಸುತ್ತಮುತ್ತ ಎಲ್ಲಿಯಾದರೂ ಬಾಲ್ಯವಿವಾಹ ನಡೆಯುವ ಬಗ್ಗೆ ಮಾಹಿತಿ ಲಭಿಸಿದಲ್ಲಿ ಸರ್ಕಾರ ನೇಮಿಸಲ್ಪಟ್ಟ ಗ್ರಾಮ, ತಾಲ್ಲೂಕು, ಜಿಲ್ಲಾ ಮಟ್ಟದ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಅಥವಾ ಮಕ್ಕಳ ಸಹಾಯವಾಣಿ: 1098
ಪೊಲೀಸ್ ಸಹಾಯವಾಣಿ: 112 ಕರೆ ಮಾಡಿ ಮಾಹಿತಿ‌ನೀಡಬೇಕು.
ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು. ಬಾಲ್ಯವಿವಾಹಗಳನ್ನು ತಡೆಗಟ್ಟುವ ಮೂಲಕ ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಕೋರಿದ್ದಾರೆ.