Sunday, April 5, 2026
Sunday, April 5, 2026
Home Blog Page 1314

ಶಿವಮೊಗ್ಗದಲ್ಲಿ ಬಿಜೆಪಿ ಪೇಜ್ ಪ್ರಮುಖರ ಸಮಾವೇಶಕ್ಕೆ ನಳೀನ್ ಕುಮಾರ್ ಚಾಲನೆ

0

ಶಿವಮೊಗ್ಗದಲ್ಲಿ ಚುನಾವಣೆಗೆ ಬಿಜೆಪಿ ರಣತಂತ್ರ ರೂಪಿಸಿದೆ.
ಶಿವಮೊಗ್ಗದಲ್ಲಿ ಇಂದು ಪೇಜ್ ಪ್ರಮುಖರ ಸಭೆಗೆ ಚಾಲನೆ ನೀಡಲಾಯಿತು. ಸಭೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರು ಚಾಲನೆ ನೀಡಿದರು. ಸಭೆಯನ್ನು
ದೀಪ ಬೆಳಗುವುದರ ಮುಖಾಂತರ ಚಾಲನೆ ನೀಡಿದರು.

ಶಿವಮೊಗ್ಗದ ಎನ್ ಇ ಎಸ್ ಮೈದಾನದಲ್ಲಿ ಸಭೆ ಯನ್ನು ನಡೆಸಲಾಯಿತು. ಸಭೆಯಲ್ಲಿ ಬಿಜೆಪಿ
ಸಂಘಟನಾತ್ಮಕ ಚಟುವಟಿಕೆಗೆ ಒತ್ತು ನೀಡಿತು.

ಮುಂಬರುವ ಚುನಾವಣೆ ಹಿನ್ನೆಲೆ ಸಂಘಟನಾತ್ಮಕ ದೃಷ್ಟಿಯಿಂದ ಸಭೆ ಆಯೋಜನೆ ಮಾಡಲಾಗಿತ್ತು.

ಸಭೆಯಲ್ಲಿ
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಎಂ.ಎಲ್.ಸಿ. ಆಯನೂರು ಮಂಜುನಾಥ್, ಡಿ.ಎಸ್. ಅರುಣ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ರಾಜ್ಯ ಬಿಜೆಪಿ ಮುಖಂಡರಾದ ಭಾನುಪ್ರಕಾಶ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಸಭೆಯಲ್ಲಿ 299 ಬೂತ್ ಗಳಲ್ಲಿನ 8,426 ಪೇಜ್ ಪ್ರಮುಖರು ಭಾಗಿಯಾಗಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಪತ್ರಕರ್ತರು ಸಮಗ್ರ ಕರ್ನಾಟಕದ ಬಗ್ಗೆ ಮಾತಾಡಬೇಕು- ಬಸವರಾಜ ಬೊಮ್ಮಯಿ

0

ಗ್ರಾಮೀಣ ಪತ್ರಕರ್ತರಿಗೂ ಬಸ್ ಪಾಸ್ ವ್ಯವಸ್ಥೆಗೆ ಜಾರಿಗೆ ಬದ್ಧ. ಈ ನಿಟ್ಟಿನಲ್ಲಿ ಪತ್ರಕರ್ತರ ಸಂಘ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಅರ್ಹ ಪತ್ರಕರ್ತರಿಗೆ ಈ ಯೋಜನೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗುಲ್ಬರ್ಗ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಇಂದು ಆಯೋಜನೆಗೊಂಡ 37ನೇ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕೋದ್ಯಮ ಕವಲು ದಾರಿಯಲ್ಲಿದ್ದು, ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಇಂದು ಪ್ರತೀ ಓದುಗನೂ ಕೂಡಾ ಪತ್ರಕರ್ತನಾಗಿದ್ದಾನೆ. ಪತ್ರಿಕೋದ್ಯಮವನ್ನು ಉಳಿಸಿಕೊಳ್ಳುವುದು ದೊಡ್ಡ ಸವಾಲು. ಹೀಗಾಗಿ ವಿಶ್ವಾಸಾರ್ಹತೆ ಬಹಳ ಮುಖ್ಯ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ಪತ್ರಿಕೆಗಳ ಹಿತ ಕಾಯುವುದು ಸರ್ಕಾರದ ಆದ್ಯ ಕರ್ತವ್ಯ ಎಂದರು.

ನಿವೃತ್ತ ಮಾಸಾಶಾನ ಹೆಚ್ಚಿಗೆಗೆ ಸಹಮತ ವ್ಯಕ್ತಪಡಿಸಿದ ಅವರು, ಈ ಬಗ್ಗೆ ಮುಂಗಡ ಪತ್ರದಲ್ಲಿ ಅಗತ್ಯ ಹಣವನ್ನು ಮೀಸಲಿರಿಸಲಾಗುವುದು. ಮುಂದಿನ ದಿನಗಳಲ್ಲಿ ಪತ್ರಿಕಾ ಭವನ ನಿರ್ವಹಣೆಯನ್ನು ಪತ್ರಕರ್ತರ ಸಂಘಕ್ಕೆ ವಹಿಸಿಕೊಡಲು ಸಿದ್ಧ. ಈ ಬಗ್ಗೆ ಕಾರ್ಯನಿರತ ಪತ್ರಕರ್ತರ ಸಂಘ ರೂಪು ರೇಷೆಗಳನ್ನು ಸಿದ್ಧಪಡಿಸುವಂತೆ ಸೂದರು.

ವಿಧಾನ ಪರಿಷತ್‌ನಲ್ಲಿ ಪತ್ರಕರ್ತರಿಗೂ ಅವಕಾಶ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು ಹಾಗೆಯೇ, ಕಾರ್ಮಿಕ ಇಲಾಖೆಯ ಮುಖಾಂತರ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಲು ಬದ್ಧ ಎಂದ ಅವರು, ಜಾಹಿರಾತು ದರ ಪರಿಷ್ಕರಣೆಗೆ ಆದೇಶ ಜಾರಿ ಮಾಡಲಾಗಿದೆ. ಯಶಸ್ವಿನಿ ವ್ಯಾಪ್ತಿಗೂ ಪತ್ರಕರ್ತರನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಪತ್ರಕರ್ತರೂ ಕೂಡಾ ಪ್ರಾದೇಶಿಕವಾಗಬಾರದು. ಅಖಂಡ ಕರ್ನಾಟಕದ ಪತ್ರಕರ್ತರಾಗಬೇಕು ಎಂದ ಅವರು, ಸಮಗ್ರ ಕರ್ನಾಟಕದ ಬಗ್ಗೆ ಮಾತಾಡುವಂತಾಗಬೇಕು. ಪತ್ರಕರ್ತರಿಗೂ ರಾಜಕಾರಣಿಗೂ ಅವಿನಾಭಾವ ಸಂಬಂಧವಿದೆ. ಒಬ್ಬರ ಬಿಟ್ಟು ಇನ್ನೊಬ್ಬರು ಇರಲಾರರು. ಪ್ರಾಮಾಣಿಕ ಕಾರ್ಯನಿರತವಾಗಿರುವ ಬಾಂಧವ್ಯವಾಗಿರಬೇಕು. ಇಬ್ಬರೂ ಕೂಡಾ ಗಡಿಯನ್ನು ಮೀರಬಾರದು ಎಂದು ಎಚ್ಚರಿಸಿದರು.

ಸಣ್ಣ ಹಾಗೂ ಪ್ರಾದೇಶಿಕ ಪತ್ರಿಕೆಗಳು ಉಳಿಯಬೇಕು. ಇದು ಜನ ಸಂಸ್ಕೃತಿಯ ಜೀವಾಳ. ಈ ಸಂಸ್ಕೃತಿಯನ್ನು ಉಳಿಸಬೇಕಾದ್ದು ಸಮ್ಟ ಜವಾಬ್ದಾರಿ. ಈ ಬಗ್ಗೆ ಯಾವುದೇ ರಾಜಿ ಇಲ್ಲ ಎಂದ ಅವರು, ವಿಶೇಷವಾಗಿ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರ ನಡೆದುಕೊಂಡ ರೀತಿ ಅವಿಸ್ಮರಣೀಯ. ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದು ಮರೆಯುವಂತಿಲ್ಲ ಎಂದ ಅವರು, ಕೋವಿಡ್ ಕಾರಣದಿಂದ ಮೃತರಾದ ಎಲ್ಲ ಪತ್ರಕರ್ತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದರು.

ಜ್ಞಾನ ಯೋಗಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಛಾಯಚಿತ್ರ ಪ್ರದರ್ಶನವನ್ನು ಸಚಿವ ಸಿ. ಸಿ. ಪಾಟೀಲ್, ವಸ್ತು ಪ್ರದರ್ಶನವನ್ನು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ವ್ಯಂಗ್ಯ ಚಿತ್ರ ಪ್ರದರ್ಶನವನ್ನು ಸಚಿವ ಮುರುಗೇಶ್ ನಿರಾಣಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹೊರತರಲಾದ ಸ್ಮರಣ ಸಂಚಿಕೆಯನ್ನು ಸಚಿವ ಗೋವಿಂದ ಕಾರಜೋಳ ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ವಹಿಸಿದ್ದರು.

ವೇದಿಕೆಯಲ್ಲಿ ಸಚಿವರಾದ ಹಾಲಪ್ಪ ಆಚಾರ್, ನಾರಾಯಣ ಗೌಡ, ಶಂಕರ ಗೌಡ ಪಾಟೀಲ್ ಮುನೇನ ಕೊಪ್ಪ, ಗೋಪಾಲಯ್ಯ, ಸಂಸದ ರಮೇಶ್ ಜಿಗಜಿಣಗಿ, ಜಿಲ್ಲಾಽಕಾರಿ ವಿಜಯ ಮಹಂತೇಶ್ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ, ರಾಹುಲ್ ಸಿಂಧೆ, ಪೋಲೀಸ್ ವರಿಷ್ಟಾಧಿಕಾರಿ ಆನಂದ ಕುಮಾರ್, ವಾರ್ತಾ ಇಲಾಖೆ ಆಯುಕ್ತ ಡಾ. ಪಿ. ಎಸ್.ಹರ್ಷ, ಸ್ಥಳೀಯ ಶಾಸಕರು ಉಪಸ್ಥಿತರಿದ್ದರು.

ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಗಮೇಶ ಚೂರಿ ಮಾತನಾಡಿದರು.

ಪ್ರಜಾವಾಣಿಯ ಸಂಪಾದಕ ರವೀಂದ್ರ ಭಟ್ಟರವರಿಂದ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಾಧಕ ಪತ್ರಕರ್ತರನ್ನು ಸನ್ಮಾನಿಸಲಾಯಿತ

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸಾಗರ ಮಾರಿಕಾಂಬೆ ಜಾತ್ರೆ ಸಂದರ್ಭ ವಾಹನ ಸಂಚಾರ ನಿಲುಗಡೆ ಮಾರ್ಗಸೂಚಿ

0

ಸಾಗರದ ಪ್ರಸಿದ್ಧ ಮಾರಿಕಾಂಬ ಜಾತ್ರಾ ಮಹೋತ್ಸವವು ಫೆ.07 ರಿಂದ ಫೆ.15 ರವರೆಗೆ ನಡೆಯಲಿದ್ದು ವಾಹನ ನಿಲುಗಡೆ ನೀಷೆಧ ಹಾಗೂ ಪಾರ್ಕಿಂಗ್ ವ್ಯವಸ್ಥೆಗಾಗಿ ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ಇವರು ಈ ಕೆಳಕಂಡಂತೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.

ಸಾಗರ ಪೇಟೆ ಪೋಲೀಸ್ ಠಾಣೆ ಎದುರಿನ ಜೆ.ಸಿ ವೃತ್ತದಿಂದ ಜೆ.ಸಿ ರಸ್ತೆ ಮೂಲಕ ಸಾಗರ ಸರ್ಕಲ್ ಮಾರ್ಗವಾಗಿ ಐತಪ್ಪ ವೃತ್ತದವರೆಗೆ ಎರಡೂ ಕಡೆ ಹೋಗಿ ಬರುವ ವಾಹನಗಳನ್ನು ನಿಷೇಧಿಸಲಾಗಿದೆ. ಅಂಬೇಡ್ಕರ್ ವೃತ್ತದಿಂದ ಸಾಗರ ಸರ್ಕಲ್‍ವರೆಗೆ ವಾಹನ ಸಂಚಾರ ನಿಷೇಧಿಸಿದೆ.

ಸತ್ಯನಾರಾಯಣ ಸ್ವಾಮಿ ದೇವಸ್ಥಾನ ಸರ್ಕಲ್‍ನಿಂದ ಸಾಗರ ಸರ್ಕಲ್‍ವರೆಗೆ ವಾಹನ ಸಂಚಾರ ನಿಷೇಧಿಸಿದೆ. ದುರ್ಗಾಂಬ ವೃತ್ತ ಮೂಲಕ ಸೊರಬ ರಸ್ತೆ ಮಾರ್ಕೇಟ್ ರಸ್ತೆ ಮೂಲಕ ಎಸ್,ಎನ್ ವೃತ್ತದವರೆಗೆ ಎಲ್ಲಾ ಮಾದರಿ ವಾಹನ ನಿಲುಗಡೆಯನ್ನು ಮತ್ತು ಎಲ್ಲಾ ಮಾದರಿಯ ಸರಕು ವಾಹನಗಳನ್ನು ನಿಷೇಧಿಸಲಾಗಿದ್ದು ಈ ಎಲ್ಲಾ ಮಾರ್ಗ ಬದಲಾವಣೆಗಳು ಪೋಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತು ಪಡಿಸಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ತುರ್ತು ಕಾಮಗಾರಿ ತೀರ್ಥಹಳ್ಳಿ ಕುಂದಾಪುರ ಹೆದ್ದಾರಿ 52 ರಲ್ಲಿ ಬಾಳೆಬರೆ ಘಾಟ್ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

0

ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್‍ನ ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್‍ಮೆಂಟ್ ನಿರ್ಮಿಸಬೇಕಿರುವುದರಿಂದ ದಿನಾಂಕ: 05-02-2023 ರಿಂದ 05-04-2023 ರವರೆಗೆ ಈ ಕೆಳಕಂಡಂತೆ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.

ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ-ಹಾಲಾಡಿ-ಬಸ್ರೂರು-ಕುಂದಾಪುರ ರಸ್ತೆ ಮೂಲಕ ಹಾಗೂ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ರಸ್ತೆ ಮೂಲಕ, ರಾಜ್ಯ ಹೆದ್ದಾರಿ-52 ರಿಂದ ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ-ಕಾನುಗೋಡು-ನಗರ-ಕೊಲ್ಲೂರು ಕುಂದಾಪುರ ಮೂಲಕ ಹಾಗೂ ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರ ಮೂಲಕ ಕುಂದಾಪುರ ಕಡೆ ಹೋಗುವ ಲಘು/ಭಾರಿ ವಾಹನಗಳು ಹೊಸನಗರ-ನಗರ-ಕೊಲ್ಲೂರು ರಸ್ತೆ ಮೂಲಕ ಸಂಚರಿಸಬೇಕೆಂದು ಆದೇಶಿಸಿದ್ದಾರೆ.Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಗಮನಿಸಿ ಪಿಳ್ಳಂಗಿರಿ ಸುತ್ತಮುತ್ತ ಫೆ6 ರಂದು ವಿದ್ಯುತ್ ವ್ಯತ್ಯಯ

0

ಫೆ.06 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ 110/11 ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಎಫ್-7 ಪಿಳ್ಳಂಗಿರಿ ಎನ್.ಜೆ.ವೈ ಮತ್ತು ಎಫ್-8 ಜಾವಳ್ಳಿ ಐಪಿ ಫೀಡರ್‍ನಿಂದ ವಿದ್ಯುತ್ ಸರಬರಾಜು ಪಡೆಯುವ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಆಡಳಿತ ಮಂಡಳಿ ತಿಳಿಸಿದೆ.Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಫೆ8 ರಂದು ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ 2 ಜನ ಸಂಪರ್ಕ ಸಭೆ

0

ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ-2 ರ ಕಚೇರಿಯಲ್ಲಿ ಫೆ.08 ರಂದು ಬೆಳಿಗ್ಗೆ 11 ಕ್ಕೆ ಜನ ಸಂಪರ್ಕ ಸಭೆ ನಡೆಯಲಿದೆ.

ಮೆಸ್ಕಾಂ ನ ಅಧಿಕಾರಿಗಳು ಅಂದು ಸಭೆಯಲ್ಲಿ ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರು ತಮ್ಮ ಅಹವಾಲುಗಳನ್ನು ನೀಡಿ ಈ ಸಭೆಯ ಸದುಪಯೋಗ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ಮೊ ಸಂ: 9448289449 ನ್ನು ಸಂಪರ್ಕಿಸಬಹುದೆಂದು ಮೆಸ್ಕಾಂ ಆಡಳಿತ ಮಂಡಳಿ ತಿಳಿಸಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಹಿಂದುಳಿದ ವರ್ಗಗಳ ವೃತ್ತಿಪರ ಕೋರ್ಸ್ ವಿದ್ಯಾರ್ಥಿ ಹಾಸ್ಟೆಲ್ ಗೆ ಆನ್ ಲೈನ್ ಪ್ರವೇಶಾತಿ ಫೆ11 ಕೊನೇದಿನ

0

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಗೂ ಪ್ರವರ್ಗ- 1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2022-23 ನೇ ಸಾಲಿನ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್ಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಕಲ್ಪಿಸಲು ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆ. 11 ರವರೆಗೆ ವಿಸ್ತರಿಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 8050770006, /28182-222129/080-35254757 ನ್ನು ಸಂಪರ್ಕಿಸುವುದು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕನ್ನಡ ಗೀತೆಗಳಿಗಿಂಪಿನ ಸ್ಪರ್ಶ ನೀಡಿದ ಕಂಠಸಿರಿ ವಾಣಿ ಜಯರಾಂ ಇನ್ನಿಲ್ಲ

0

ಭಾರತ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ​ ನಿಧನರಾಗಿದ್ದಾರೆ. ತಮಿಳುನಾಡಿನ ಚೆನ್ನೈನ ತಮ್ಮ ಮನೆಯಲ್ಲಿ ವಾಣಿ ಜಯರಾಂ​ ಕೊನೆಯುಸಿರೆಳೆದಿದ್ದಾರೆ. ಇತ್ತೀಚಗಷ್ಟೇ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿಯನ್ನು ಘೋಷಿಸಿತ್ತು.

ಕನ್ನಡ, ಹಿಂದಿ , ತೆಲುಗು, ತಮಿಳು ಸೇರಿದಂತೆ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ಹಾಡಿ ಪ್ರಖ್ಯಾತರಾಗಿದ್ದ ವಾಣಿ ಜಯರಾಂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ತಮಿಳಿನಲ್ಲಿ ‘ಅಪೂರ್ವ ರಾಗಂಗಳ್’, ‘ತೆಲುಗಿನಲ್ಲಿ ಶಂಕರಾಭರಣಂ’, ‘ಸ್ವಾತಿ ಕಿರಣಂ’ ಚಿತ್ರಗಳಲ್ಲಿನ ಹಿನ್ನಲೆ ಗಾಯನಕ್ಕೆ ಈ ಗಾಯಕಿಗೆ ರಾಷ್ಟ್ರಪ್ರಶಸ್ತಿ, ಹಲವು ರಾಜ್ಯಗಳ ಶ್ರೇಷ್ಠ ಗಾಯಕಿ ಪ್ರಶಸ್ತಿ, ಸಂಗೀತ ಸಮ್ಮಾನ್, ಹಿಂದಿ ಭಾಷೆಯನ್ನೊಳಗೊಂಡಂತೆ ಹಲವು ಭಾಷೆಗಳ ಚಿತ್ರಗಳ ಗಾಯನಕ್ಕಾಗಿ ಫಿಲಂ ಫೇರ್ ಪ್ರಶಸ್ತಿ, ಪದ್ಮಭೂಷಣ ಹೀಗೆ ಹಲವು ಪುರಸ್ಕಾರಗಳು ವಾಣಿ ಜಯರಾಂ ಸಂದಿವೆ.

ಈ ಪ್ರಶಸ್ತಿಗಳಲ್ಲಿ ಗುಜರಾಥ್, ಒರಿಸ್ಸಾ ರಾಜ್ಯಗಳ ಪ್ರಶಸ್ತಿಗಳೂ ಸೇರಿವೆ .

ಖ್ಯಾತ ಗಾಯಕಿ ನಿಧನಕ್ಕೆ ದೇಶದಾದ್ಯಂತ ಸಂಗೀತ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಶಿವಮೊಗ್ಗದಲ್ಲಿ ಮೂಳೆ ಸಾಂದ್ರತೆ ಉಚಿತ ಪರೀಕ್ಷಾ ಶಿಬಿರ

0

ನಿಮ್ಮ ಮೂಳೆಯ ಸಾಂದ್ರತೆ ಎಷ್ಟಿದೆ ಎಂಬುದನ್ನು ತಿಳಿಯಲು ಹಾಗೂ ಬೆನ್ನುನೋವು, ಮೊಣಕಾಲು ನೋವು, ಸೊಂಟನೋವು, ಸ್ನಾಯುನೋವಿಗೆ ಪರಿಹಾರ ಕಲ್ಪಿಸಲು ಇತರೆ ವ್ಯಾಧಿಗಳಾದ ಆಸ್ಪೆಯೋಪೋರೋಸಿಸ್‌ನ ಬಗ್ಗೆ ಚಿಕಿತ್ಸೆ ಪಡೆಯಲು ಡಾ. ಡಿ.ಎನ್.ರಮೇಶ್ ರವರು ಫೆಬ್ರವರಿ 06 ಮತ್ತು 07 ರಂದು ಬೆಳಿಗ್ಗೆ 10ರಿಂದ ಸಂಜೆ 06ರವರೆಗೆ ಅಶೋಕನಗರದ ರೋಹಿಣಿ ಫಾರ್ಮ, ಅಭಿಷೇಕ ಆಪ್ಟಿಕಲ್ ಹಿಂಭಾಗ, 2ನೇ ಕ್ರಾಸ್‌ನಲ್ಲಿ ಲಭ್ಯವಿರುತ್ತಾರೆ.

ಈ ನಂಬರ್ ಗೆ ಸಂಪರ್ಕಿಸಬಹುದು 9448319793,
8722208871

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕೋವಿಡ್ ನಿಂದ ತಪ್ಪಿದ್ದ ಉದ್ಯೋಗಾವಕಾಶ ಈಗ ತೆರೆದಿದೆ- ಪ್ರೊ.ವೀರಭದ್ರಪ್ಪ

0

ಉದ್ಯೋಗ ಪ್ರಪಂಚದ ಅಭಿವೃದ್ಧಿಗೆ ಸಾಕಷ್ಟು ಉತ್ತೇಜನ ನೀಡುತ್ತದೆ. ಯಾವ ದೇಶ ಹಾಗೂ ಅಲ್ಲಿನ ಸಮಾಜ ಮುಂದುವರಿಯಬೇಕೊ ಆ ದೇಶದಲ್ಲಿ ಹೂಡಿಕೆ ಹೆಚ್ಚಾಗಬೇಕು‌ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಪಿ.ವಿರಭದ್ರಪ್ಪ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯ ಹಾಗೂ ಕನೆಕ್ಟಿಂಗ್ ಎಜುಕೇಷನ್ ಆಂಡ್ ಎಂಟರ್ಪ್ರೈಸಸ್ ಸಹಯೋಗದೊಂದಿಗೆ ಸಹ್ಯಾದ್ರಿ ಕಲಾ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಾಬ್ ಫೆರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಹಸಿವು, ನಿರ್ಗತಿಕ ಹಾಗೂ ದಾರಿದ್ರ್ಯ ತೊಲಗಿ ಇವೆರೆಲ್ಲರ ನಾನು ಬೆಳವಣಿಗೆ ನೋಡಬೇಕು. ಆ ಯಶಸ್ವಿಯ ಭಾಗವಹಿಸಿಬೇಕು ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ. ಅದರಂತೆಯೇ ಈಗ ಮೋದಿ ದೇಶದ ಪ್ರತಿಯೊಬ್ಬರ ಮನೆಯಲ್ಲಿ ಒಬ್ಬರಿ ಕೆಲಸ ನೀಡಬೇಕೆಂದು ಹೇಳುವ ಮೂಲಕ ದೇಶದಲ್ಲಿ ನಿರುದ್ಯೋಗ ತೊಡೆದು ಹಾಕುವಲ್ಲಿ ಮುಂದಾಗಿದ್ದಾರೆ ಎಂದರು.

ಗಾಂಧಿ ಕಂಡ ಕನಸನ್ನು ಸಾಕಾರಗೊಳಿಸುವಲ್ಲಿ ಪ್ರಧಾನಿ ಮೋದಿ ಸಾಕಷ್ಟು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಉದ್ಯೋಗ ‌ಆಕಾಂಕ್ಷಿಗಳು ಸಾರ್ವಜನಿಕರು ಸೇವೆಯನ್ನು ಅರಸಿ ಈಗಾಗಲೇ ಸಾಕಷ್ಟು ಸಮಯ ಹಾಳು‌ ಮಾಡಿಕೊಂಡಿದ್ದಾರೆ. ಅವರ ಬದುಕನ್ನು ಮತ್ತೇ ಉತ್ತೇಜಿಸಲು ಈ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಉದ್ಯೋಗ ಆಕಾಂಕ್ಷಿಗಳಿಗೆ ಕುವೆಂಪು ವಿವಿ ಆಶಾ ಕಿರಣವಾಗಿದೆ ಎಂದರು .

ಇತ್ತೀಚೆಗೆ ಯುವ ಜನತೆ ಗೋಡೆಗಳು ಮಧ್ಯಯೇ ಬೆಳೆದು ವಿಶ್ವವನ್ನು ಅರ್ಥ ಮಾಡಿಕೊಳ್ಳಲು ಮುಂದಾಗಿದ್ದು, ಇದರಿಂದ ಆಚೆ ಬಂದಾಗ ಮಾತ್ರ ಈ ಜಗತ್ತು ಏನೆಂದು ಅರ್ಥ ಆಗುತ್ತದೆ. ವಿದ್ಯಾರ್ಥಿ ಗಳು ಜಗದಗಲ ಮುಗಿದಗಲ ಬೆಳೆಯಬೇಕು. ಇದಕ್ಕೆ ನಮ್ಮ ವಿವಿ ಸದಾ ಸಹಕಾರ ನೀಡುತ್ತಿದೆ‌. ಕೋವಿಡ್ ನಿಂದ ಕಳೆದುಕೊಂಡ ಅವಕಾಶವು ಈಗ ಉದ್ಯೋಗ ಮೇಳ‌ ಮುಖಾಂತರ ನಿಮ್ಮ‌ಮುಂದೆ ಇದೆ. ಈ ಅವಕಾಶವನ್ನು ಬೆಳೆಸಿಕೊಳ್ಳಬೇಕು ಎಂದರು.

ಇಲ್ಲಿ ಎಲ್ಲರೂ ಉದ್ಯೋಗಾಕಾಂಕ್ಷಿಗಳೇ ಆದರೆ ಅದನ್ನು ಪಡೆಯಲು ಶ್ರಮ ವಹಿಸಬೇಕು. ಜಗತ್ತಿನಾದ್ಯಂತ ಸಾಕಷ್ಟು ಕಂಪನಿಗಳಿವೆ. ಅದನ್ನು ಪಡೆಯುವಲ್ಲಿ ಕೌಶಲ್ಯವನ್ನೂ ಕರಗತ ಮಾಡಿಕೊಳ್ಳಬೇಕು. ಈಗಾಗಲೇ ಉದ್ಯೋಗ ಮೇಳದಲ್ಲಿ30 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, 40000 ವಿದ್ಯಾರ್ಥಿ ಗಳು ನೊಂದಾಣಿಯಾಗಿದ್ದಾರೆ. ಉದ್ಯೋಗ ಮೇಳ ಇಷ್ಟಕ್ಕೆ ‌ಮಾತ್ರ ಸಿಮೀತವಾಗದೆ ಮುಂದಿನ ದಿನಗಳು 100 ಕಂಪನಿಗಳು ಒಳಗೊಂಡಂತೆ ದೊಡ್ಡ ಮಟ್ಟದಲ್ಲಿ ನಡೆಸಲಾಗುತ್ತದೆ. ವಿದ್ಯಾರ್ಥಿ ಗಳು ಯಾವುದಕ್ಕೂ ಸಿಮೀತವಾಗದೆ ಕೃಷಿ, ಕೈಗಾರಿಕಾ, ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡ್ಬೇಕು. ಈ ನಿಟ್ಟಿನಲ್ಲಿ ಬಲಾಢ್ಯ ದೇಶವನ್ನು ಕಟ್ಟಲು ವಿದ್ಯಾರ್ಥಿಗಳು ಸಹಕಾರ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಕುವೆಂಪು ವಿವಿ ಕುಲಸಚಿವ ಪ್ರೊ.ಎಸ್.ಕೆ.ನವೀನ್ ಕುಮಾರ್, ಪ್ರಾಂಶುಪಾಲ ಪ್ರೊ.ಕೆ.ಬಿ ಧನಂಜಯ, ಕುವೆಂಪು ವಿವಿ ಪ್ಲೇಸ್ ಮೆಂಟ್ ಅಧಿಕಾರಿಗಳು ಡಾ.ಕೆ.ಆರ್.ಮಂಜುನಾಥ್, ವಾಣಿಜ್ಯ ಹಾಗೂ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಎಂಕೆ. ವೀಣಾ, ವಿಜ್ಞಾನ ಕಾಲೇಜು ಪ್ರಾಂಶುಪಾಲ ಪ್ರೋ.ಎನ್. ರಾಜೇಶ್ವರಿ ಇನ್ನಿತರರಿದ್ದರು.