Saturday, April 4, 2026
Saturday, April 4, 2026
Home Blog Page 1316

ಯುಜಿಸಿಯ ಜೆಆರ್ ಎಫ್ ಹಾಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆಗೆ ತರಬೇತಿ ಶಿಬಿರ

0

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ ಮತ್ತು ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ಫೆ.08 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗಾಗಿ
0821-2515944 ನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರಾದ ಪ್ರೋ. ಕೆ.ಎಲ್.ಎನ್.ಮೂರ್ತಿ ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸಂಚಾರ ನಿಯಮ ಉಲ್ಲಂಘನೆ ದಂಡ ಬಾಕಿಗೆ ಶೇ 50 ರಿಯಾಯ್ತಿ

0

ಸಂಚಾರ ನಿಯಮ ಉಲ್ಲಂಘಿಸಿ ದಂಡದ ಮೊತ್ತವನ್ನು ಕಟ್ಟದ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಸರಕಾರ ಭರ್ಜರಿ ರಿಯಾಯಿತಿ ಘೋಷಿಸಿದೆ.

ಕರ್ನಾಟಕ ರಾಜ್ಯ ಕಾನೂನು ಶಿಫಾರಸಿನ ಮೇರೆಗೆ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲು ಸರಕಾರ ಮುಂದಾಗಿದೆ.

ದಂಡದ ಮೊತ್ತ ಬಾಕಿ ಉಳಿಸಿಕೊಂಡಿರುವವರು ಫೆ.11ರೊಳಗೆ ದಂಡ ಕಟ್ಟಿದರೆ ಅಂತಹವರು ರಿಯಾಯಿತಿ ಪಡೆಯಬಹುದಾಗಿದೆ. ಫೆ.11ರ ರಾಜ್ಯವ್ಯಾಪಿ ರಾಷ್ರ್ಟೀಯ ಲೋಕ ಅದಾಲತ್‌ ಹಿನ್ನೆಲೆಯಲ್ಲಿ ಈ ರಿಯಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಶಿಫಾರಸ್ಸಿನ ಮೇರೆಗೆ ಈ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಸಂಚಾರ ಪೊಲೀಸರು ವಿಧಿಸಿರುವ ದಂಡದ ಮೊತ್ತದಲ್ಲಿ ಸುಮಾರು 1300 ಕೋಟಿ ರೂ. ಬಾಕಿ ಇತ್ತು. ಆ ಕುರಿತು ಸರ್ಕಾರಕ್ಕೆ ಪ್ರಾಧಿಕಾರ ಸಲಹೆ ನೀಡಿತ್ತು. ಅದನ್ನು ಪರಿಗಣಿಸಿ ಸರ್ಕಾರ ದಂಡದ ಮೊತ್ತದಲ್ಲಿ 50ರಷ್ಟು ವಿನಾಯಿತಿ ನೀಡಿದ್ದು , ಸಾರ್ವಜನಿಕರು ಇದನ್ನು ಸದುಪಯೋಗ ಮಾಡಿಕೊಳ್ಳಬೇಕೇಂದು ಕೆ ಎಸ್ ಎಲ್ ಎ ನ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾಯ.ಬಿ. ವೀರಪ್ಪ ನವರು ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮಹಿಳೆಯರಿಗೆ ಶಿವರಾತ್ರಿ ಪ್ರಯುಕ್ತ ಮೇಕಪ್ ವಿಶೇಷ ಶಿಬಿರ

0

ಮೇಕಪ್ ಕಲಿಕೆಯಿಂದ ಮಹಿಳೆಯರು ಮತ್ತು ಯುವತಿಯರು ಸ್ವ ಉದ್ಯೋಗ, ಸ್ವಂತ ದುಡಿಮೆಯನ್ನ ಸೃಷ್ಠಿಸಿಕೊಳ್ಳುವ ಜೊತೆಗೆ ಉತ್ತಮ ಬದುಕನ್ನು ಕಟ್ಟಿಕೊಳ್ಳಬಹುದು ಎಂದು ಅಶ್ವಿನೀಸ್ ಮೇಕೋವರ್ ಸಂಸ್ಥೆಯ ಮುಖ್ಯಸ್ಥೆ ಅಶ್ವಿನಿ ಎಸ್. ಎಂ ಅವರು ಹೇಳಿದರು.

ಅವರು ಮೇಕಪ್ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಮಾತನಾಡುತ್ತಾ, ಶಿವಮೊಗ್ಗ ನಗರದಲ್ಲಿ ಮೊದಲ ಬಾರಿಗೆ ಅಶ್ವಿನೀಸ್ ಮೇಕೋವರ್ ಸ್ಟುಡಿಯೋ ಸಂಸ್ಥೆಯ ವಾರ್ಷಿಕೊತ್ಸವ ಮತ್ತು ಮಹಾ ಶಿವರಾತ್ರಿ ಹಬ್ಬದ ವಿಶೇಷವಾಗಿ ಮಹಿಳೆಯರಿಗೆ, ಯುವತಿಯರಿಗೆ ರಿಯಾಯಿತಿ ದರದಲ್ಲಿ ಮೇಕಪ್ ತರಬೇತಿ ನೀಡಲಾಗುತ್ತಿದೆ ಎಂದರು.

ಅಶ್ವಿನಿ ಮೇಕೊವರ್ ಸಂಸ್ಥೆಯ ಮೊದಲ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ 15 ಫೆಬ್ರವರಿ ಬುಧವಾರ ಒಳಗೆ ಮೇಕಪ್ ಕೋರ್ಸ್ ಗೆ ನೋಂದಣಿಯಾದ ವಿದ್ಯಾರ್ಥಿಗಳಿಗೆ, ಇದೇ ಪ್ರಥಮ ಬಾರಿಗೆ ತರಬೇತಿ ಶುಲ್ಕದಲ್ಲಿ 60% ವಿಶೇಷ ರಿಯಾಯಿತಿಯನ್ನ ಆಫರ್ ನೀಡಲಾಗುತ್ತಿದೆ. ಮೊದಲು ನೊಂದಣಿಯಾದ 10 ಜನರಿಗೆ ಮಾತ್ರ ಮೊದಲ ಆದ್ಯತೆ ನೀಡಲಾಗಿದ್ದು, ತರಬೇತಿ ಪಡೆದವರಿಗೆ ಸರ್ಟಿಫಿಕೇಟ್ ಸಹ ನೀಡಿ ಗೌರವಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷೆ ಶಿವಲೀಲಾ ಮಾತನಾಡುತ್ತಾ, 8 ಮಾಚ್೯ 2023 ಬುಧವಾರದಿಂದ ಹೊಸ ಬ್ಯಾಚ್ ಆರಂಭಗೊಳ್ಳುತ್ತಿದ್ದು, ಮೇಕಪ್ ಕೊರ್ಸ್ ಗೆ ಸೇರಬಯಸುವ ಯುವತಿಯರು ಮತ್ತು ಮಹಿಳಾ ವಿದ್ಯಾರ್ಥಿಗಳಿಗೆ ಅತಿ ಕಡಿಮೆ ದರದಲ್ಲಿ ಅತ್ಯುನ್ನತ ಗುಣಮಟ್ಟದ ಮೇಕಪ್ ತರಬೇತಿಯನ್ನು ಶಿವಮೊಗ್ಗ ಸಿಟಿಯಲ್ಲೆ ಹೇಳಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕೂಡಲೇ ಕರೆ ಮಾಡಿ : 9901216093 ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಮಹಿಳೆಯರು ಉಪಸ್ಥಿತರಿದ್ದರು

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಗ್ರಾಮಾಭಿವೃದ್ಧಿಯ ಬಗ್ಗೆ ಯುವಜನತೆ ಆಲೋಚಿಸಬೇಕು-ವಿಜಯ್ ಕುಮಾರ್

0

ಗ್ರಾಮೀಣಾಭಿವೃದ್ಧಿಯ ಪರಿಕಲ್ಪನೆ, ಕನಸು ಸಾಕಾರಗೊಳಿಸುವ ದಿಸೆಯಲ್ಲಿ ಯುವಜನತೆ ಆಲೋಚನೆ ನಡೆಸಬೇಕಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದರು.

ಶಿವಮೊಗ್ಗ ತಾಲೂಕಿನ ಗಾಜನೂರಿನ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕುವೆಂಪು ವಿವಿಯ ವಿಶ್ವವಿದ್ಯಾಲಯ ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್‌ಎಸ್‌ಎಸ್ 1 & 2 ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳ ಬಗ್ಗೆಯು ಆಸಕ್ತಿ ಬೆಳೆಸಿಕೊಳ್ಳಬೇಕು. ಗ್ರಾಮೀಣಾಭಿವೃದ್ಧಿ ಕುರಿತು ಆಲೋಚನೆ ನಡೆಸಬೇಕು. ಸೇವಾ ಮನೋಭಾವ ಬೆಳೆಸಿಕೊಳ್ಳುವ ಜತೆಯಲ್ಲಿ ಇಂತಹ ಶಿಬಿರಗಳಿಂದ ಗ್ರಾಮಾಂತರ ಪ್ರದೇಶದ ಅರಿವು ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಮಾಜಿ ಸಹಾಯಕ ಗವರ್ನರ್ ರವೀಂದ್ರನಾಥ ಐತಾಳ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಸೇವೆ ಮಾಡುವ ಮನೋಭಾವಕ್ಕೆ ಗುರು ಹಿರಿಯರು, ಸ್ಥಳೀಯರು ಮತ್ತು ಸರ್ಕಾರದ ಪ್ರೋತ್ಸಾಹ ಅಗತ್ಯ. ಇಂದಿನ ಶಿಬಿರಕ್ಕೆ ಮಕ್ಕಳೊಂದಿಗೆ ಕೈ ಜೋಡಿಸುವ ಸ್ಥಳೀಯ ನಾಗರಿಕರ ಮತ್ತು ಜನ ಪ್ರತಿನಿಧಿಗಳ ಸಹಾಯ ಮುಖ್ಯ ಎಂದು ಹೇಳಿದರು.

ಪ್ರತಿ ದಿನ ಶಿಬಿರಾರ್ಥಿಗಳು ಗಮನ ಕೊಡುವ ಸ್ವಚ್ಚ ಭಾರತ ಪರಿಕಲ್ಪನೆಯ ಗ್ರಾಮ ನೈರ್ಮಲ್ಯ, ಸ್ವಚ್ಚತೆ ಮತ್ತು ಪರಿಸರ ಪ್ರೇಮ ಇದು ಮಹಾತ್ಮಾ ಗಾಂಧಿ ಹಾಗೂ ಪ್ರಧಾನ ಮಂತ್ರಿ ಮೋದಿಯವರ ಕನಸು ಇದಕ್ಕೆ ಸಹಕರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್.ಎಸ್.ಎಸ್ ತರಬೇತುದಾರ ನಾಗರಾಜ ಮಾತನಾಡಿ ಶಿಬಿರದ ಉದ್ದೇಶ ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಶರತ್, ಕಿರಣ ವಿ.ಕೆ, ವಾಣಿ.ವಿ, ತೇಜಸ್ವಿನಿ ಮತ್ತು ಸಲ್ಮ ಭಾಗಿಯಾಗಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಅಂಡಮಾನ್ ಪ್ರವಾಸ ಮಾಡಬೇಕೆ? ಇಲ್ಲಿದೆ ಮಾಹಿತಿ

0

ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯು ಮಾರ್ಚ್ 1ರಿಂದ 6ರವರೆಗೆ ಅಂಡಮಾನ್ ದ್ವೀಪದ ಪ್ರವಾಸ ಆಯೋಜಿಸಿದೆ.

ಪ್ರವಾಸ ಮಾಡಲಿಚ್ಚಿಸುವ ಆಸಕ್ತರು ವೇದಿಕೆಯವರನ್ನು ಸಂಪರ್ಕಿಸಿ ಹೆಸರು ನೋಂದಣಿ ಮಾಡಿಸಬೇಕು ಎಂದು ವೇದಿಕೆಯ ಕಾರ್ಯದರ್ಶಿ ಎನ್.ಗೋಪಿನಾಥ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯು ಮಾರ್ಚ್ 1 ರಿಂದ 6 ರವರೆಗೆ ಅಂಡಮಾನ್ ದ್ವೀಪಗಳ ಪ್ರವಾಸ ಹಮ್ಮಿಕೊಂಡಿದೆ. ಅಂಡಮಾನ್ ಪ್ರವಾಸಿ ತಾಣಗಳ ವೀಕ್ಷಣೆಗೆ ಅವಕಾಶ ಇರಲಿದೆ. ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹಾಗೂ ಇನ್ನಿತರರು ಇದ್ದ ಸೆಲ್ಲುಲ್ಯಾರ್ ಜೈಲ್ ನೋಡಬಹುದಾಗಿದೆ.

ಮಾಹಿತಿ ಹಾಗೂ ನೋಂದಣಿಗೆ ಜಿ.ವಿಜಯಕುಮಾರ್ 9448105198, ವಿಜಯೇಂದ್ರ ರಾವ್ 9448790127, ವಾಗೇಶ್ 9844809533 ಅವರನ್ನು ಸಂಪರ್ಕಿಸುವಂತೆ ವೇದಿಕೆಯ ಕಾರ್ಯದರ್ಶಿ ಎನ್.ಗೋಪಿನಾಥ್ ಕೋರಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸಾಗರ ಮಾರಿಕಾಂಬ ಜಾತ್ರೆಗೆ ಅಮ್ಯೂಸ್ ಮೆಂಟ್ ಪಾರ್ಕ್ ಗೆ ಸಿದ್ಧತೆ

0

ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ಜಾತ್ರೆಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಶ್ರೀ ಮಾರಿಕಾಂಬಾ ದೇವಸ್ಥಾನಗಳ ವ್ಯವಸ್ಥಾಪಕ ಸಮಿತಿಯು ನಿರಾಪೇಕ್ಷಣ ಪತ್ರ ನೀಡಿತು. ಅತ್ಯಂತ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಮನೋರಂಜನಾ ಚಟುವಟಿಕೆಗಳ ಸೇವೆ ಒದಗಿಸುವಂತೆ ಸೂಚಿಸಲಾಯಿತು.

ಅಮ್ಯೂಸ್‌ಮೆಂಟ್ ಮಾಡುವ ಸಂಬಂಧ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಗೌತಮ್ ಎಂಬುವವರಿಗೆ ಟೆಂಡರ್ ನೀಡಲಾಗಿದೆ. ಜಾತ್ರಾ ಸಮಿತಿ ಸೂಚಿಸಿರುವ ಎಲ್ಲ ಷರತ್ತುಗಳನ್ನು ಪಾಲಿಸುವ ಜತೆಯಲ್ಲಿ ಜನರಿಗೆ ಯಾವುದೇ ತೊಂದರೆ ಆಗದಂತೆ ಅಮ್ಯೂಸ್‌ಮೆಂಟ್ ಸ್ಥಾಪಿಸಲು ಸಮಿತಿ ವತಿಯಿಂದ ತಿಳಿಸಲಾಯಿತು.

ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ಅಧಿಕಾರಿಗಳ ಜತೆ ನಡೆದಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ನಡೆಸುವ ಮನೋರಂಜನಾ ಆಟಿಕೆಗಳಿಗೆ 50 ರೂ. ಅಥವಾ ಕಡಿಮೆ ದರ ನಿಗಧಿಪಡಿಸಬೇಕು.

ಯಾವುದೇ ಕಾರಣಕ್ಕೂ ಹೆಚ್ಚಿನ ದರ ನಿಗಧಿಪಡಿಸುವಂತಿಲ್ಲ. ಹೆಚ್ಚಿನ ದರ ಪಡೆದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಹರತಾಳು ಹಾಲಪ್ಪ ಸಭೆಯಲ್ಲಿ ಸೂಚಿಸಿದ್ದರು.

ಶ್ರೀ ಮಾರಿಕಾಂಬಾ ದೇವಸ್ಥಾನಗಳ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ ಮಾತನಾಡಿ, ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಜಾತ್ರಾ ಸಮಿತಿಯು ಸೂಚಿಸಿರುವ ಎಲ್ಲ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಮನೋರಂಜನಾ ಚಟುವಟಿಕೆಗಳ ಸೌಲಭ್ಯ ನೀಡಬೇಕು. ಹೆಚ್ಚಿನ ದರ ನಿಗಧಿಪಡಿಸಬಾರದು ಎಂದು ಹೇಳಿದರು.

ವ್ಯವಸ್ಥಾಪಕ ಸಮಿತಿ ಜಾತ್ರೆ ಆಚರಣೆ ಸಂಬಂಧಿಸಿ ಎಲ್ಲ ಸಿದ್ಧತೆ ನಡೆಸಿದ್ದು, ಮಳಿಗೆ ನಿರ್ಮಾಣ ಸೇರಿದಂತೆ ಅಗತ್ಯ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದೆ. ಜಾತ್ರೆಯ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.

ಶ್ರೀ ಮಾರಿಕಾಂಬಾ ದೇವಸ್ಥಾನಗಳ ವ್ಯವಸ್ಥಾಪಕ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರರಾವ್, ಉಪಾಧ್ಯಕ್ಷ ಸುಂದರ್‌ಸಿಂಗ್, ಖಜಾಂಚಿ ನಾಗೇಂದ್ರ ಕುಮಟ, ವಿವಿಧ ಸಮಿತಿಯ ಸಂಚಾಲಕರು, ಸಹ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಭದ್ರಾವತಿಯಲ್ಲಿ ಆರೋಗ್ಯ ಶಿಬಿರ

0

ರೋಟರಿ ಕ್ಲಬ್ ಭದ್ರಾವತಿ,
ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ, ಭದ್ರಾವತಿ ಮತ್ತು ಸಹ್ಯಾದ್ರಿ
ನಾರಾಯಣ ಆಸ್ಪತ್ರೆ ಶಿವಮೊಗ್ಗ ಸಹಯೋಗದಲ್ಲಿ
ಭದ್ರಾವತಿಯ ರೋಟರಿ ಸಮುದಾಯ ಭವನದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ’ದ
ಅಂಗವಾಗಿ ಆರೋಗ್ಯ ಶಿಬಿರವನ್ನು
ಆಯೋಜಿಸಲಾಗಿತ್ತು.

ಬಿ.ಪಿ, ಶುಗರ್ ತಪಾಸಣೆ, ಕೋವಿಡ್ ಲಸಿಕೆ ಬೂಸ್ಟರ್ ಡೋಸ್,
ಮೂಳೆ, ದಂತ ತಪಾಸಣೆಯನ್ನು ಮೂಳೆ ತಜ್ಞವೈದ್ಯರಾದ
ಡಾ|| ಎಮ್.ವೈ.ಸುರೇಶ್ ಮತ್ತು ದಂತ ವೈದ್ಯರಾದ ಎಸ್.ಎನ್. ಸುರೇಶ್ ಚಿಕಿತ್ಸೆ ನೀಡಿದರು . ಹೃದಯ
ಸಮಸ್ಯೆಗಳ ತಪಾಸಣೆಯನ್ನು ಸಹ್ಯಾದ್ರಿ
ನಾರಾಯಣ ಹೃದಯಾಲದ ಹೃದ್ರೋಗ ತಜ್ಞವೈದ್ಯರಾದ ಡಾ||
ಶರತ್ ಮತ್ತು ಡಾ|| ಹಂಸಲೇಖ ಮಾಡಿದರು.

ಕಾರ್ಯಕ್ರಮವನ್ನು ಎಸ್ ಎ ಐ ಎಲ್, ವಿಐಎಸ್ ಎಲ್ ನ ಕಾರ್ಯಪಾಲಕ
ನಿರ್ದೇಶಕರಾದ ಶ್ರೀ ಬಿ.ಎಲ್. ಚಂದ್ವಾನಿ ಅವರು ಉದ್ಘಾಟಿಸಿದರು. ಶ್ರೀ
ಎಸ್. ಅಡವೀಶಯ್ಯ, ಅಧ್ಯಕ್ಷರು, ಮತ್ತು ಶ್ರೀ ಸುರೇಶ್
ಕುಮಾರ್, ಕಾರ್ಯದರ್ಶಿಗಳು ರೋಟರಿ ಕ್ಲಬ್, ಡಾ||
ಎಮ್.ವೈ.ಸುರೇಶ್, ಮುಖ್ಯ ವೈದ್ಯಾಧಿಕಾರಿಗಳು ಮತ್ತು ಶ್ರೀ
ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಸಿಬ್ಬಂದಿ ಮತ್ತು
ಸಾರ್ವಜನಿಕ ಸಂಪರ್ಕ), ಶ್ರೀಮತಿ ಕೆ.ಎಸ್.ಶೋಭ, ಸಹಾಯಕ
ಪ್ರಬಂಧಕರು (ಸಿಬ್ಬಂದಿ) ಉಪಸ್ಥಿತರಿದ್ದರು.

ಎಸ್ ಎ ಐ ಎಲ್ – ವಿ ಐ ಎಸ್ ಎಲ್ ಆಸ್ಪತ್ರೆಯಿಂದ ಉಚಿತ ಔಷಧಿಗಳನ್ನು
ವಿತರಿಸಲಾಯಿತು. ಒಟ್ಟು 48 ಮಂದಿ ಶಿಬಿರದ ಪ್ರಯೋಜನ
ಪಡೆದರು.

ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

0

ಶಿವಮೊಗ್ಗದ ಎಂ.ಆರ್.ಎಸ್ 220 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಬೇ ಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-1, ಎಂಸಿಎಫ್-2, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-17, ಎಂಸಿಎಫ್-18, ಎಂಸಿಎಫ್-20 ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಫೆ.06 ರ ಬೆಳಿಗ್ಗೆ 9:30 ರಿಂದ ಸಂಜೆ 5:30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ,
ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೊನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್,ಆರ್,ಪಿ ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ
ಆಡಳಿತ ಮಂಡಳಿ ತಿಳಿಸಿದೆ

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಶಿವಮೊಗ್ಗ ಏರ್ ಪೋರ್ಟ್ ಫೆಬ್ರವರಿ 27 ಕ್ಕೆ ಲೋಕಾರ್ಪಣೆ- ಬಿ.ವೈ.ರಾಘವೇಂದ್ರ

0

ಶಿವಮೊಗ್ಗ ಜಿಲ್ಲೆಯ ಜನರ ಬಹುನಿರೀಕ್ಷೆಯ ವಿಮಾನ ನಿಲ್ದಾಣದ ಕನಸು ಇದೀಗ ಸಾಕಾರಗೊಂಡು ಉದ್ಘಾಟನೆಯ ಹೊಸ್ತಿಲಲ್ಲಿದೆ.

ಇದೇ ಫೆಬ್ರವರಿ 27 ರಂದು ನಮ್ಮ ಹೆಮ್ಮೆಯ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.

ಈ ಸಂಗತಿಯನ್ನ ಶಿವಮೊಗ್ಗ ಕ್ಷೇತ್ರದ
ಜನಪ್ರಿಯ ಸಂಸದ
ಬಿ.ವೈ.ರಾಘವೇಂದ್ರ ಅವರು ಇದೀಗ ತಾನೆ ಟ್ವೀಟರ್ ಖಾತೆಯ
ಮೂಲಕ ಸಾರ್ವಜನಿಕರೊಂದಿಗೆ ಹಂಚಿಕೊಂಡಿದ್ದಾರೆ.
ಸಂಸದರ ಸಂಕಲ್ಪ ಶಕ್ತಿಗೆ ಇದೊಂದು ಸ್ಪಷ್ಟ ಉದಾಹರಣೆಯಾಗಿದೆ ಎಂದು ಜನರಲ್ಲಿ ರಾಘವೇಂದ್ರ ಅವರ ಬಗ್ಗೆ ಹೊಸ ಭರವಸೆಮೂಡಿದಂತಾಗಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಪೋಲೀಸ್ ಫೈಲ್ ನಿಂದ – 02

0

ಬಿಆರ್. ರವಿ ಎ ಎಸ್ ಐ & ಬಿ. ವೆಂಕಟೇಶಪ್ಪ ಸಿಎಚ್ ಸಿ ರವರು ಶಿವಮೊಗ್ಗ ಜಿಲ್ಲಾ ಪೊಲೀಸ್ ಯಲ್ಲಿ ಸುದೀರ್ಘ ಸೇವೆಯನ್ನು ಸಲ್ಲಿಸಿ, ಈ ದಿನ ವಯೋನಿವೃತ್ತಿ ಹೊಂದಿರುತ್ತಾರೆ. ಶ್ರೀ ಬಿ.ಆರ್.ರವಿ ಮತ್ತು ಬಿ.ವೆಂಕಟೇಶಪ್ಪನವರಿಗೆ ಜಿಲ್ಲಾ ರಕ್ಷಣಾಧಿಕಾರಿ ಶ್ರೀ.ಜಿ.ಕೆ.ಮಿಥುನ್ ಕುಮಾರ್ ಅವರು ನೆನಪಿನ ಕಾಣಿಕೆಯನ್ನು ನೀಡಿ ಗೌರವ ಅರ್ಪಿಸಿದರು.

ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಜಿಲ್ಲಾ ಪೋಲಿಸ್ ಕಾರ್ಯಾಲಯದ ವತಿಯಿಂದ ಶುಭಕೋರಿ ಬೀಳ್ಕೊಡಲಾಯಿತು.