Thursday, April 2, 2026
Thursday, April 2, 2026
Home Blog Page 1325

ತ್ಯಾವರೆಚಟ್ನಳ್ಳಿಯಲ್ಲಿ ಸಹ್ಯಾದ್ರಿ ರೋಲರ್ ಸ್ಕೇಟಿಂಗ್ ಕ್ಲಬ್ ಉದ್ಘಾಟನೆ

0

ಶಿವಮೊಗ್ಗಕ್ಕೆ ಸಮೀಪದ ತ್ಯಾವರೆ ಚಟ್ನಳ್ಳಿಯ ತರಳಬಾಳು ಲೇಔಟ್‌ನಲ್ಲಿ ನಗರದ ಸಹ್ಯಾದ್ರಿ ರೋಲರ್ ಸ್ಕೇಟಿಂಗ್ ಕ್ಲಬ್‌ನಿಂದ ನೂತನವಾಗಿ ಪ್ರಾರಂಭಿಸಲಾದ ತರಬೇತಿ ಶಾಖೆಯನ್ನು ಶಾಸಕ ಕೆ.ಎಸ್. ಈಶ್ವರಪ್ಪ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್.ಸಿ. ಯೋಗೀಶ್, ಧೀರರಾಜ್ ಹೊನ್ನವಿಲೆ, ಆಶ್ರಯ ಕಮಿಟಿ ಅಧ್ಯಕ್ಷ ಶಶಿಧರ್, ಲೇಔಟ್‌ನ ಹಿರಿಯ ಕರಿಬಸವಯ್ಯ ಹಾಗೂ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಪದಾಧಿಕಾರಿಗಳಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಶಿವಮೊಗ್ಗ ಜಿಲ್ಲಾ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಮಾಹಿತಿ

0

ಶಿವಮೊಗ್ಗ ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ ಏಪ್ರಿಲ್ 2022 ರಿಂದ ಡಿಸೆಂಬರ್ 2022 ರವರೆಗೆ ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ಸಾಧಿಸಲಾದ ಪ್ರಗತಿಯ ವಿವರವನ್ನು ಇಲಾಖೆಯ ಸಹಾಯಕ ನಿಯಂತ್ರಕರು ನೀಡಿದ್ದಾರೆ..
ತೂಕ, ಅಳತೆ ಸಾಧನಗಳ ಸತ್ಯಾಪನೆ/ಮುದ್ರೆಯಿಂದ ಸಂಗ್ರಹಿಸಿದ ಶುಲ್ಕ ರೂ. 1,14,84,030/- ಆಗಿರುತ್ತದೆ. ತಪಾಸಣೆ ಮಾಡಿರುವ ವ್ಯಾಪಾರಸ್ಥರ ಮತ್ತು ಕೈಗಾರಿಕೆಗಳ ಸಂಖ್ಯೆ 2378. ತಪ್ಪಿತಸ್ಥರ ಮೇಲೆ ಹೂಡಿರುವ ಮೊಕದ್ದಮೆಗಳ ಸಂಖ್ಯೆ 844 ಆಗಿರುತ್ತದೆ. ರಾಜಿ ಅಭಿಸಂಧಾನ ಮಾಡಿರುವ ಮೊಕದ್ದಮೆಗಳ ಸಂಖ್ಯೆ 847 ಮೊಕದ್ದಮೆಗಳನ್ನು ರಾಜಿ ಅಭಿಸಂಧಾನ ಮಾಡಿ ವಿಧಿಸಿದ ದಂಡ ರೂ.15,52,3೦೦/- ಆಗಿರುತ್ತದೆ ಎಂದು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯ ನಿಯಂತ್ರಕ ಎಸ್.ಮಂಜುನಾಥ ಅವರು ತಿಳಿಸಿದ್ದಾರೆ.Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಶಿವಮೊಗ್ಗದಲ್ಲಿ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ

0

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಾನಗರಪಾಲಿಕೆ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಜ.25 ರ ಬೆಳಿಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ ನೆರವೇರಿಸುವರು. ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ಅಧ್ಯಕ್ಷತೆ ವಹಿಸುವರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಜಿಲ್ಲಾ ಪಂಚಾಯತ್ ಸಿಇಓ ಎನ್.ಡಿ.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ ಕೆ, ಶಿವಮೊಗ್ಗ ಉಪವಿಭಾಗಾಧಿಕಾರಿ ಹೆಚ್.ಬಿ.ಚನ್ನಪ್ಪ, ಚುನಾವಣಾ ಶಾಖೆ ತಹಶೀಲ್ದಾರ್ ಮಂಜುಳಾ ಭಜಂತ್ರಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಶಿವಮೊಗ್ಗ ಪ್ರತಿಭೆ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

0

ಶಿವಮೊಗ್ಗ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ ಅಡಿಯಲ್ಲಿ ಬರುವ ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿಯಾದ ಸೌಭಿಯಾ ತೆಹರಿಮ್ ಅವರು ಕಲಬುರಗಿಯ ಶ್ರೀ ಗುರು ವಿದ್ಯಾಪೀಠದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ವಿಜ್ಞಾನ ಸಮಾವೇಶ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಜನವವರಿ,16, 17 ಮತ್ತು 18 ರಂದು 3ದಿನ ನಡೆದ 30 ನೇ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿ, “ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವ ಪರಿಸರ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳೋಣ” ಎಂಬ ವಿಷಯವನ್ನು ಕುರಿತು, ಉತ್ತಮವಾಗಿ ವಿಷಯ ಮಂಡಿಸಿದ್ದಾರೆ.

ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಅವರಿಗೆ ಬಂಗಾರದ ಪದಕ,ಪ್ರಶಸ್ತಿ ಪತ್ರ ಸಿಕ್ಕಿದೆ.

ಸೌಭಿಯಾ ಅವರು 9ನೇ ತರಗತಿಯಲ್ಲಿ ಓದುತ್ತಿದ್ದಾರೆ. ಶಿವಮೊಗ್ಗದ ಮಹಮ್ಮದ್ ಆದಿಲ್ ಷಾ ಮತ್ತು ಉಮ್ಮೆಸಲ್ಮಾ ದಂಪತಿಗಳ ಪುತ್ರಿ.

ವಿದ್ಯಾರ್ಥಿನಿ ಸೌಭಿಯಾ ಜನವರಿ ತಿಂಗಳ ಅಂತ್ಯದಲ್ಲಿ ನಡೆಯಲಿರುವ
ಗುಜರಾತಿನ ಅಮದಾಬಾದಿನ ರಾಷ್ಟ್ರೀಯ ವಿಜ್ಞಾನ ಮಕ್ಕಳ ಸಮಾವೇಶದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥಸ್ವಾಮೀಜಿ ಯವರು, ಆಡಳಿತ ಮಂಡಳಿಯ ಸದಸ್ಯರು,ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಹಳೇ ಪಿಂಚಣಿ ವ್ಯವಸ್ಥೆಯನ್ನ ರಾಜ್ಯ ಸರ್ಕಾರ ಜಾರಿಗೊಳಿಸಲಿ – ಆಯನೂರು ಮಂಜುನಾಥ್

0

ಶಿವಮೊಗ್ಗ: ರಾಜ್ಯ ಸರ್ಕಾರದ ಮುಂದಿನ ಬಜೆಟ್ ಅಧಿವೇಶನದೊಳಗೆ ಎನ್‌ಪಿಎಸ್ ನೌಕರರ ಬೇಡಿಕೆ ಈಡೇರಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಎನ್‌ಪಿಎಸ್ ಮುಖಂಡರ ಜತೆಯಲ್ಲಿ ವಿಶೇಷ ಸಭೆ ಆಯೋಜಿಸಲಾಗುತ್ತದೆ. ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಒತ್ತಡ ಹಾಕಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಹೇಳಿದರು.

ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಘಟಕ, ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಶಿವಮೊಗ್ಗ ಜಿಲ್ಲಾ ಮಟ್ಟದ ಎನ್‌ಪಿಎಸ್ ನೌಕರರ ಸಮಾವೇಶ ಮತ್ತು ವೋಟ್ ಫಾರ್ ಒಪಿಎಸ್ ಅಭಿಯಾನ, ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.

ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಹೋರಾಟ ನಡೆಸುವಾಗ ದಬ್ಬಾಳಿಕೆ ನಡೆಯುವುದು ಸಹಜ. ಆದರೆ ಯಾವುದೇ ಒತ್ತಡಕ್ಕೂ ಹೆದರದೇ ನಿರಂತರವಾಗಿ ಹೋರಾಟ ಮುಂದುವರೆಸೋಣ, ಎನ್‌ಪಿಎಸ್ ನೌಕರರ ಬೇಡಿಕೆ ಈಡೇರುವವರೆಗೂ ನಿಮ್ಮ ಹೋರಾಟಕ್ಕೆ ನಾನು ಸದಾ ಬೆಂಬಲ ನೀಡುತ್ತೇನೆ ಎಂದು ತಿಳಿಸಿದರು.

ಬೇಡಿಕೆಗಳ ಈಡೇರಿಕೆಗಾಗಿ ಯಾರೇ ಹೋರಾಟ ನಡೆಸಿದರೂ ಅವರಿಗೆ ಬೆಂಬಲ ನೀಡುವುದು ಸಜ್ಜನರ ಕರ್ತವ್ಯ. ಎನ್‌ಪಿಎಸ್ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿಕೊಂಡು ರಾಜ್ಯಮಟ್ಟದಲ್ಲಿ ಹೋರಾಟ ನಡೆಸುತ್ತಿದ್ದಾರೆ. ಅವರ ಬೆಂಬಲಕ್ಕೆ ಎಲ್ಲರೂ ನಿಲ್ಲಬೇಕು ಎಂದರು.

ರಾಜ್ಯದಲ್ಲಿ ರಾಜಕಾರಣಿಗಳಿಗೆ ಮಾತ್ರ ಒಪಿಎಸ್ ವ್ಯವಸ್ಥೆ ಇದ್ದು, ಸರ್ಕಾರಿ ನೌಕರರಿಗೆ ಎನ್‌ಪಿಎಸ್ ಜಾರಿಗೊಳಿಸಿರುವುದು ಯಾವ ನ್ಯಾಯ. ಒಂದು ವೇಳೆ ಎನ್‌ಪಿಎಸ್ ಉತ್ತಮ ವ್ಯವಸ್ಥೆ ಆಗಿದ್ದರೆ ರಾಜಕಾರಣಿಗಳಿಗೂ ಎನ್‌ಪಿಎಸ್ ಅನ್ವಯ ಮಾಡಲಿ. ರಾಜ್ಯ ಸರ್ಕಾರ ಎನ್‌ಪಿಎಸ್ ನಿಂದ ಆಗುತ್ತಿರುವ ಸಮಸ್ಯೆಗಳನ್ನು ಗಮನಿಸಿ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಾಂತಾರಾಮ್ ಮಾತನಾಡಿ, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ವೋಟ್ ಫಾರ್ ಒಪಿಎಸ್ ಎಂಬ ಅಭಿಯಾನದ ಮುಖಾಂತರ ಸರ್ಕಾರಕ್ಕೆ ಒತ್ತಡ ಹಾಕಲಾಗುವುದು ಎಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ಕೆ.ಎನ್.ಮಾತನಾಡಿ, ಒಪಿಎಸ್ ಯೋಜನೆ ಜಾರಿ ಹೋರಾಟ ಬದುಕಿನ ಹೋರಾಟ ಆಗಿದೆ. ಎನ್‌ಪಿಎಸ್ ನಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅನುಭವಿಸಿದವರಿಗೆ ಗೊತ್ತಿದೆ. ರಾಜ್ಯ ಸರ್ಕಾರ ಕೂಡ ಎನ್‌ಪಿಎಸ್ ನೌಕರರ ಸಮಸ್ಯೆಗಳನ್ನು ಅರಿತುಕೊಂಡು ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ಸಮಾವೇಶ ನಡೆಯುವ ಫ್ರೀಡಂ ಪಾರ್ಕ್ ಸಭಾಂಗಣಕ್ಕೆ ಎಲ್ಲ ಎನ್‌ಪಿಎಸ್ ನೌಕರರು ಆಗಮಿಸಿದರು.

ಎಲ್ಲರಿಗೂ ಮಧ್ಯಾಹ್ನ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಜ್ಜಿಗೆ ವಿತರಿಸಲಾಯಿತು.

3 ಸಾವಿರಕ್ಕೂ ಅಧಿಕ ಎನ್‌ಪಿಎಸ್‌ ನೌಕರರು ಪಾಲ್ಗೊಂಡಿದ್ದರು.

ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪರ‍್ಯಾನಾಯ್ಕ, ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ನಾಗನಗೌಡ, ಹಿರಿಯ ಉಪಾಧ್ಯಕ್ಷ ಸಿದ್ದಪ್ಪ ಸಂಗಣ್ಣ, ಚಂದ್ರಕಾಂತ್, ತಾಲೂಕು ಅಧ್ಯಕ್ಷ ಪ್ರಭಾಕರ್‌, ಪ್ರಮುಖರಾದ ಗುರುಸ್ವಾಮಿ, ಮಹಾಬಲೇಶ್ವರ ಹೆಗಡೆ, ಡಾ. ನಾಗರಾಜ್‌ ಪರಿಸರ , ರಾಧಾ, ಕೇಶವಪ್ರಸಾದ್, ರವಿ, ವಿವಿಧ ಜಿಲ್ಲೆಗಳ ಅಧ್ಯಕ್ಷರು, ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಇಂಟರ್ ಆ್ಯಕ್ಟ್ ಸಂಸ್ಥೆ ವಿದ್ಯಾರ್ಥಿಗಳಲ್ಲಿ ಶಿಕ್ಷಣ ಹಂತದಿಂದಲೇ ಸಮಾಜಪ್ರೀತಿ ಬೆಳೆಸುತ್ತದೆ- ಡಾ.ಗುಡದಪ್ಪ ಕಸಬಿ

0

ಶಿವಮೊಗ್ಗ : ನಾಯಕತ್ವ ಗುಣ, ಜೀವನ‌ ಮೌಲ್ಯ ಹಾಗೂ ಸಾಮಾಜಿಕ ಕಳಕಳಿಯ ಅರಿವು ಮೂಡಿಸುವಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಸಹಕಾರಿ ಆಗುತ್ತದೆ ಎಂದು ರೋಟರಿ ಸಹಾಯಕ ಗವರ್ನರ್ ಡಾ. ಗುಡದಪ್ಪ ಕಸಬಿ ಹೇಳಿದರು.

ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ವತಿಯಿಂದ ವಲಯ 10 ರ ಇಂಟರ‍್ಯಾಕ್ಟ್ ಕ್ಲಬ್ ಶಾಲೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿಕಸನ – ವಲಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಇಂಟರ‍್ಯಾಕ್ಟ್ ಕ್ಲಬ್ ನಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಶಿಕ್ಷಣ ಹಂತದಿಂದಲೇ ಸಮಾಜಮುಖಿ ಆಲೋಚನೆ ಬೆಳೆಯುತ್ತದೆ. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿ ಆಗುತ್ತದೆ. ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಜೀವನದಲ್ಲಿ ಉತ್ತಮ ಅವಕಾಗಳು ಸಿಗಲಿದೆ. ನಿಮ್ಮ ಆಸಕ್ತ ಕ್ಷೇತ್ರದಲ್ಲಿ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ತರಬೇತಿ ಮುಖಾಂತರ ವೃತ್ತಿಯಲ್ಲಿ ಯಶಸ್ಸು ಸಾಧಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ಸನ್ಮಾರ್ಗದಲ್ಲಿ ಮುನ್ನಡೆಯಬೇಕು ಎಂದರು.

ರೋಟರಿ ಶಿವಮೊಗ್ಗ ಕ್ಲಬ್ ಅಧ್ಯಕ್ಷ ಎನ್.ವಿ.ಭಟ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ನಿಸ್ವಾರ್ಥ ಸೇವಾ ಮನೋಭಾವ ವೃದ್ಧಿಸುವಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಸಹಕಾರಿ ಆಗುತ್ತದೆ. ವಿದ್ಯಾರ್ಥಿಗಳಿಗೆ ಉಪಯುಕ್ತ ಆಗುವ ಅಧ್ಯಯನ ವಿಧಾನ, ಪರೀಕ್ಷಾ ತಯಾರಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕ ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಮನೆ ಮತ್ತು ಸುತ್ತಮುತ್ತಲಿನ ಪರಿಸರ ಆವರಣವನ್ನು ಸ್ವಚ್ಛವಾಗಿ ಇಡುವ ಬಗ್ಗೆ ಮನೆ ಹಿರಿಯರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಎಲ್ಲೆಂದರಲ್ಲಿ ಕಸ ಎಸೆಯಬಾರದು. ಉತ್ತಮ ಪರಿಸರ ನಿರ್ಮಾಣ ಮಾಡಲು ಎಲ್ಲರ ಸಹಕಾರ ಮುಖ್ಯ ಎಂದು ತಿಳಿಸಿದರು.

ಇಂದಿನ ದಿನಗಳಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯದಂತೆಯೇ ಇ-ತ್ಯಾಜ್ಯ ಕೂಡ ಭೂಮಿಗೆ ಹಾನಿ ಉಂಟುಮಾಡುತ್ತಿದೆ. ಇ-ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ವಿಷಪದಾರ್ಥಗಳು ಭೂಮಿ ಸೇರುತ್ತವೆ. ಆದ್ದರಿಂದ ಈಗಿನಿಂದಲೇ ಎಚ್ಚೆತ್ತುಕೊಂಡು ವೈಜ್ಞಾನಿಕವಾಗಿ ಇ-ತ್ಯಾಜ್ಯ ವಿಲೇವಾರಿ ಮಾಡಬೇಕು ಎಂದರು.

ವಲಯ 10 ಇಂಟರ‍್ಯಾಕ್ಟ್ ಕೋ ಆರ್ಡಿನೇಟರ್ ಕಿಶೋರ್ ಶಿರ್ನಾಳಿ ಮಾತನಾಡಿ, ಇಂಟರ‍್ಯಾಕ್ಟ್ ಕ್ಲಬ್ ನಲ್ಲಿರುವ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸೇವಾ ಚಟುವಟಿಕೆಗಳನ್ನು ನಾಯಕತ್ವ ವಹಿಸಿಕೊಂಡು ಮುನ್ನಡೆಸಬೇಕು. ಇದರಿಂದ ಪರಸ್ಪರ ಸಂವಹನ ಕೌಶಲ್ಯ ವೃದ್ಧಿ ಆಗುತ್ತದೆ ಎಂದು ತಿಳಿಸಿದರು.

ಅಧ್ಯಯನ ವಿಧಾನ, ಏಕಾಗ್ರತೆ, ಪರೀಕ್ಷಾ ತಯಾರಿ, ಉತ್ತಮ ಹವ್ಯಾಸ ಹಾಗೂ ವ್ಯಕ್ತಿತ್ವ ವಿಕಸನ, ಸಿದ್ಧತೆಯಿಂದ ಸಾಧನೆಯೆಡೆಗೆ ವಿಷಯಗಳ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು. ನೂರಾರು ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಪಾಲ್ಗೊಂಡಿದ್ದರು.

ರೋಟರಿ ಶಿವಮೊಗ್ಗ ಕ್ಲಬ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಭಟ್, ಇಂಟರ‍್ಯಾಕ್ಟ್ ಕಮಿಟಿ ಚೇರ್ಮನ್ ಎನ್.ಜಿ.ಉಷಾ, ರೋಟರಿ ಕ್ಲಬ್ ಮಿಡ್ ಟೌನ್ ಅಧ್ಯಕ್ಷೆ ವೀಣಾ ಸುರೇಶ್, ವೀರಣ್ಣ ಹುಗ್ಗಿ, ವಿಲಿಯಂ ಡಿಸೋಜಾ, ಕವಿತಾ ಸುಧೀಂದ್ರ, ಉದಯಶಂಕರ ಶಾಸ್ತ್ರಿ, ಗಾಯತ್ರಿ ಸುಮತೀಂದ್ರ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಚಿಕ್ಕಮಗಳೂರು ನಗರದಲ್ಲಿ ಆಮ್ ಆದ್ಮಿ ಪಕ್ಷದ ಪಾದಯಾತ್ರೆ

0

ಚಿಕ್ಕಮಗಳೂರು: ದೇಶದಲ್ಲಿ ಭ್ರಷ್ಟಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರು ತೊಡಗಿ ಶ್ರೇಷ್ಟ ಭಾರತ ನಿರ್ಮಾಣಕ್ಕೆ ಮುಂದಾಗಬೇಕೆಂದು ಎಎಪಿ ಮುಖಂಡರುಗಳು ನಗರದ ಹನುಮಂತಪ್ಪ ಸರ್ಕಲ್‌ನಿಂದ ಆಜಾದ್‌ ಪಾರ್ಕ್ವರೆಗೆ ಪಾದಯಾತ್ರೆ ನಡೆಸಿ ಅಂಗಡಿ ಮುಂಗಟ್ಟುದಾರರಿಗೆ ಕರಪತ್ರ ಹಂಚುವ ಮೂಲಕ ಒತ್ತಾಯಿಸಿದರು.

ಪಾದಯಾತ್ರೆ ಮೆರವಣಿಗೆಯು ಆಜಾದ್‌ಪಾರ್ಕ್ ಸಮಾವೇಶಗೊಂಡು ನಂತರ ಮಾತನಾಡಿದ ಎಎಪಿ ಮುಖಂಡ ಡಾ. ಕೆ.ಸುಂದರಗೌಡ ಭ್ರಷ್ಟಚಾರ ಮುಕ್ತಗೊಳಿಸಲು ಸಾರ್ವಜನಿಕರು ಪಣ ತೊಡದಿದ್ದ ಪಕ್ಷದಲ್ಲಿ ನೆರೆಯ ದೇಶಗಳು ಮೂಲಭೂತ ಸೌಲಭ್ಯಗಳು ದೊರಕದೇ ದಿವಾಳಿಯಾದಂತೆ ಭಾರತವು ಮುಂದಿನ ದಿನಗಳಲ್ಲಿ ದಿವಾಳಿಯ ಹಂಚಿಗೆ ತಲುಪುವಲ್ಲಿ ಸಂದೇಹವಿಲ್ಲ ಎಂದು ಹೇಳಿದರು.

ಭಾರತವು ಈಗಾಗಲೇ 150ಲಕ್ಷ ಕೋಟಿ ಹಾಗೂ ರಾಜ್ಯ 4.5 ಲಕ್ಷ ಕೋಟಿ ಸಾಲ ಮಾಡಿ ಆಡಳಿತ ನಡೆಸುತ್ತಿದೆ. ಇದರಿಂದ ಸಾರ್ವಜನಿಕರಿಗೆ ಸರ್ಕಾರವು ಎಲ್ಲವು ಉಚಿತವಾಗಿ ನೀಡಿದರೆ ಮನುಷ್ಯ ದುಡಿಯದೇ ಸೋಮಾರಿಯಾಗುವ ಜೊತೆಗೆ ಭವಿಷ್ಯದ ದಿನಗಳಲ್ಲಿ ಭಿಕ್ಷಾಟನೆ ಮಾಡುವ ಸಂಭವ ಎದು ರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಭ್ರಷ್ಟಚಾರ ಮುಕ್ತಗೊಳಿಸುವ ಸಲುವಾಗಿ ದೇಶ ಹಾಗೂ ರಾಜ್ಯದ ನಿವಾಸಿಗಳು ಈ ಬಾರಿ ಎಎಪಿ ಯನ್ನು ಬೆಂಬಲಿಸಿದ್ದಲ್ಲಿ ಪ್ರತಿ ಕುಟುಂಬಕ್ಕೂ ಉತ್ತಮ ಆರೋಗ್ಯ, ಗುಣಮಟ್ಟದ ಶಿಕ್ಷಣ, ಆಶ್ರಯ ಹಾಗೂ ಶುದ್ಧಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ ಒದಗಿಸುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸುಭಿಕ್ಷೆ ಸರ್ಕಾರ ರಚಿಸುವ ಸಲುವಾಗಿ ಸಾರ್ವಜನಿಕರು ಮತವನ್ನು ಓಟಿಗಾಗಿ ಮಾರಿ ಕೊಳ್ಳುವ ಬದಲು, ಮಕ್ಕಳ ಉಜ್ವಲ ಭವಿಷ್ಯದ ದೃಷ್ಟಿಯಲ್ಲಿಟ್ಟುಕೊಂಡು ಎಎಪಿಯನ್ನು ಬೆಂಬಲಿಸಿದ್ದಲ್ಲಿ ಸದೃಢ ಸರ್ಕಾರ ರಚಿಸಿ ಸಾರ್ವಜನಿಕ ಸೇವೆಗೆ ಮುಂದಾಗುವುದು.

ಇದರೊಂದಿಗೆ ರಾಜ್ಯದಲ್ಲಿ ಭ್ರಷ್ಟಚಾರ ಮುಕ್ತವಾಗಿ ಕಾರ್ಯನಿರ್ವಹಿಸಲು ಕ್ರಮ ವಹಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಈರೇಗೌಡ, ಹೇಮಂತ್, ರಂಗನಾಥ್, ಪರಮೇಶ್, ಜಮೀರ್ ಅಹ್ಮದ್, ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಆರೋಗ್ಯಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆ ಮಹತ್ತರ ಅಭಿವೃದ್ದಿ ಸಾಧಿಸಿದೆ- ಬಿ.ವೈ.ರಾಘವೇಂದ್ರ

0

ಶಿವಮೊಗ್ಗ: ಪ್ರಸ್ತುತ ದಿನಗಳಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಿರುವುದು ಅತ್ಯಂತ ಅವಶ್ಯಕ. ಸಾರ್ವಜನಿಕರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಡಿಸಿಸಿ ಬ್ಯಾಂಕ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಹಯೋಗದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆವರಣದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಆಯುಷ್ಮಾನ್ ಭಾರತ್, ಯಶಸ್ವಿನಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಮುಖಾಂತರ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಪ್ರಯತ್ನ ನಡೆಸುತ್ತಿವೆ. ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ಸಿಗುವಂತಾಗಬೇಕು ಎಂದು ತಿಳಿಸಿದರು.

ಆರೋಗ್ಯ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮಹತ್ತರ ಅಭಿವೃದ್ಧಿ ಕಾರ್ಯಗಳು ಆಗಿದೆ. ಮೂಲಸೌಕರ್ಯ ಸೇರಿದಂತೆ ಎಲ್ಲ ರೀತಿಯ ಅತ್ಯಾಧುನಿಕ ಸೌಲಭ್ಯಗಳು ಶಿವಮೊಗ್ಗ ಜಿಲ್ಲೆಯಲ್ಲಿ ಲಭ್ಯವಿದೆ. ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಕಲ ರೀತಿಯ ನೆರವು ನೀಡಿವೆ ಎಂದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಪತಿ ಎಸ್.ಪಿ.ದಿನೇಶ್ ಮಾತನಾಡಿ, ಕರೊನಾ ಸಂದರ್ಭದಲ್ಲಿ ರಕ್ತದಾನ ಮಾಡಲು ಹಿಂದೇಟು ಹಾಕುತ್ತಿದ್ದರು. ರಕ್ತದ ಕೊರತೆ ಹೆಚ್ಚಾಗಿ ಸಮರ್ಪಕ ಪ್ರಮಾಣದಲ್ಲಿ ರಕ್ತದಾನ ನಡೆದಿರಲಿಲ್ಲ. ರಕ್ತದಾನದಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ರಕ್ತದಾನದ ಬಗ್ಗೆ ಹಿಂಜರಿಕೆ ಪಡದೇ ಆರೋಗ್ಯವಂತ ಯುವಜನರು ರಕ್ತದಾನ ಮಾಡಬೇಕು ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯ ವಿವಿಧೆಡೆಗಳಲ್ಲಿ ನಡೆದ ರಕ್ತದಾನ ಶಿಬಿರಗಳಲ್ಲಿ 600 ಯೂನಿಟ್ ರಕ್ತದಾನ ಸಂಗ್ರಹ ಆಗಿದ್ದು, ಗರಿಷ್ಠ ಆಗಿತ್ತು. ಇದೀಗ ಡಿಸಿಸಿ ಬ್ಯಾಂಕ್‌ನಲ್ಲಿ ಆಯೋಜಿಸಿರುವ ಶಿಬಿರದಲ್ಲಿ ಸಾವಿರಕ್ಕೂ ಅಧಿಕ ಯೂನಿಟ್ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಎಲ್ಲರೂ ನೋಂದಣಿ ಮಾಡಿಸಿಕೊಂಡಿದ್ದಾರೆ. ನೀರಿಕ್ಷಿತ ಯೂನಿಟ್‌ಗಳಷ್ಟು ರಕ್ತ ಸಂಗ್ರಹ ಆಗಲಿದೆ ಎಂದು ತಿಳಿಸಿದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ ಮಾತನಾಡಿ, ಬ್ಯಾಂಕ್ ವತಿಯಿಂದ ಆರ್ಥಿಕ ಚಟುವಟಿಕೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ. ಪ್ರಥಮ ಬಾರಿಗೆ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಸಿದ್ದು, ಸಾವಿರಕ್ಕೂ ಅಧಿಕ ಜನರು ರಕ್ತದಾನ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದರು.

ರಕ್ತದಾನ ಮಾಡುವುದರಿಂದ ಜೀವ ಉಳಿಸುವ ಮಹಾತ್ಕಾರ್ಯದಲ್ಲಿ ನಾವೆಲ್ಲರೂ ಭಾಗಿಯಾದ ಪುಣ್ಯ ಸಿಗುತ್ತದೆ. ತುರ್ತು ಸಂದರ್ಭದಲ್ಲಿ ನಾವು ಮಾಡಿದ ರಕ್ತದಾನ ಅವಶ್ಯಕತೆ ಇದ್ದವರ ನೆರವಿಗೆ ಬರುತ್ತದೆ. ಮತ್ತೊಬ್ಬರ ಜೀವ ಉಳಿಯುತ್ತದೆ. ರಕ್ತದಾನ ಮಾಡುವ ಜತೆಯಲ್ಲಿ ಇತರರಿಗೂ ರಕ್ತದಾನ ಮಾಡುವಂತೆ ಪ್ರೇರಣೆ ನೀಡಬೇಕು ಎಂದು ತಿಳಿಸಿದರು.

ರೆಡ್‌ಕ್ರಾಸ್ ಸಂಜೀವಿನಿ ಬ್ಲಡ್ ಬ್ಯಾಂಕ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ಸಾವಿರಕ್ಕೂ ಅಧಿಕ ಜನರು ರಕ್ತದಾನಕ್ಕೆ ನೋಂದಣಿ ಮಾಡಿಸಿದ್ದರು. ಉಪಹಾರ ಮತ್ತು ಊಟದ ವ್ಯವಸ್ಥೆ ಮಾಡಲಾಗಿತ್ತು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಗೌರವ ಕಾರ್ಯದರ್ಶಿ ಡಾ. ದಿನೇಶ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಎಲ್.ಷಡಾಕ್ಷರಿ, ಶಿಮುಲ್ ಅಧ್ಯಕ್ಷ ಶ್ರೀಪಾದರಾವ್, ಬೃಹತ್ ರಕ್ತದಾನ ಶಿಬಿರದಲ್ಲಿ ಪ್ರಮುಖರಾದ ವಿಜಯದೇವ್, ಪರಮೇಶ್ವರ್, ಯೋಗೇಶ್, ದುಗ್ಗಪ್ಪ, ಅಶ್ವತ್ಥನಾರಾಯಣ ಶೆಟ್ಟಿ, ಗುರುರಾಜ್, ಕೀರ್ತಿರಾಜ್, ವೆಂಕಟೇಶ್, ದಿವಾಕರಶೆಟ್ಟಿ, ನಾಗೇಶ ಡೋಂಗ್ರೆ, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ನೃತ್ಯ ಸಂಗೀತ ಕ್ಷೇತ್ರದಲ್ಲಿ ಪರಿಣಿತಿ ಸಂಸ್ಥೆಯ ಸೇವೆ ಶ್ಲಾಘನೀಯ-ವೇಣುಗೋಪಾಲ್

0

ಪ್ರತಿಭಾವಂತರಿಗೆ ರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಅವಕಾಶ ಕಲ್ಪಿಸುವ ಜತೆಯಲ್ಲಿ ಯುವ ಕಲಾವಿದರಿಗೆ ಪರಿಣಿತಿ ಕಲಾಕೇಂದ್ರ ನಿರಂತರ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ಭಾರತೀಯ ವಿದ್ಯಾಭವನ ಜಂಟಿ ನಿರ್ದೇಶಕ ವೇಣುಗೋಪಾಲ್‌ ಹೇಳಿದರು.

ಪರಿಣಿತಿ ಕಲಾಕೇಂದ್ರದ 8ನೇ ವರ್ಷದ ಸಂಭ್ರಮದ ಪ್ರಯುಕ್ತ ನಗರದ ಗಾಂಧಿ ಮೈದಾನದಲ್ಲಿ ಪರಿಣಿತಿ ಕಲಾಕೇಂದ್ರದ ವತಿಯಿಂದ ಆಯೋಜಿಸಿದ್ದ “8ನೇ ವರ್ಷದ ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ 2023” ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.

ನೃತ್ಯ, ಸಂಗೀತ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪರಿಣಿತಿ ಕಲಾಕೇಂದ್ರ ಉತ್ತಮ ಸೇವೆ ಸಲ್ಲಿಸುತ್ತಿದೆ. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಕಲಾವಿದರನ್ನು ಸಾಗರಕ್ಕೆ ಕರೆಯಿಸುವ ಮುಖಾಂತರ ವೈವಿಧ್ಯ ನೃತ್ಯ ಪ್ರಕಾರಗಳ ಬಗ್ಗೆ ಸಾಗರದ ಸ್ಥಳೀಯ ಪ್ರತಿಭೆಗಳಿಗೆ ಪರಿಚಯಿಸುವ ಕೆಲಸ ಇಂತಹ ಕಾರ್ಯಕ್ರಮಗಳಿಂದ ಆಗುತ್ತಿದೆ ಎಂದು ತಿಳಿಸಿದರು.

ಉದ್ಯಮಿ ಟಿ.ವಿ.ಪಾಂಡುರಂಗ ಮಾತನಾಡಿ, ಸಂಸ್ಕೃತಿ ಪರಂಪರೆ ಬಿಂಬಿಸುವ ಕಾರ್ಯ ಅಭಿನಂದನೀಯ. ರಾಮಾಯಣ, ಮಹಾಭಾರತದ ಕಥನಗಳನ್ನು ನೃತ್ಯದ ಮೂಲಕ ಸುಲಭವಾಗಿ ಅರ್ಥಮಾಡಿಸಲು ಸಾಧ್ಯವಿದೆ. ಎಲ್ಲ ನೃತ್ಯಗಳ ಮೂಲಕ ಒಂದೊಂದು ಕಥನವನ್ನು ಪ್ರೇಕ್ಷಕರಿಗೆ ಪರಿಚಯಿಸಲಾಗುತ್ತಿದೆ ಎಂದರು.

ಮಲೇಷಿಯಾ ನೃತ್ಯ ಗುರು ಡಾ. ಗಣೇಶನ್‌ ಮಾತನಾಡಿ, ರಾಷ್ಟ್ರೀಯ ನೃತ್ಯ ಮಹೋತ್ಸವ ವೇದಿಕೆಯು ಯುವ ಪ್ರತಿಭಾವಂತ ಕಲಾವಿದರಿಗೆ ಅತ್ತ್ಯುತ್ತಮ ವೇದಿಕೆ ಹಾಗೂ ಅವಕಾಶ ಸೃಷ್ಠಿಸುತ್ತದೆ. ಇಂತಹ ಉತ್ಸವ ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದರು.

ಪರಿಣಿತಿ ಕಲಾಕೇಂದ್ರದ ವಿದ್ವಾನ್‌ ಎಂ.ಗೋಪಾಲ್‌ ಮಾತನಾಡಿ, ನಮ್ಮ ಕಲಾಕೇಂದ್ರದ ವತಿಯಿಂದ ನೃತ್ಯ ತರಬೇತಿ ಜತೆಯಲ್ಲಿ ಯುವ ಉತ್ಸವ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ನೀಡಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರು, ಕೇರಳ, ಪಶ್ಚಿಮ ಬಂಗಾಳ, ಮಲೇಷಿಯಾ ಸೇರಿ ವಿವಿಧೆಡೆಯಿಂದ ಕಲಾವಿದರು ನೃತ್ಯ ಸಂಗೀತೋತ್ಸವದಲ್ಲಿ ಪಾಲ್ಗೊಂಡಿದ್ದರು.

ಉದ್ಯಮಿ ಟಿ.ವಿ.ಪಾಂಡುರಂಗ ಅವರಿಗೆ ಎಸ್‌.ಎಸ್‌.ರಮೇಶ್‌ ಸ್ಮಾರಕ ಪುರಸ್ಕಾರ, ಡಾ. ಗಣೇಶನ್‌ ಮತ್ತು ಬಿ.ವಿ.ದತ್ತಾತ್ರೇಯ ಅವರಿಗೆ ಜೀವಮಾನ ಸಾಧನೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಡಾ. ಮಾಯಾ ರಾಜೇಶ್‌ ಅವರಿಗೆ ಪರಿಣಿತಿ ಎಕ್ಸಲೆನ್ಸ್‌, ಅಂಗ್ಸುಮಾನ್‌ ಗುಪ್ತಾ, ಅರ್ಚನಾ ಪುಣ್ಯೇಶ್‌ ಹಾಗೂ ನಿಖಿತಾ ಮಂಜುನಾಥ್‌ ಅವರಿಗೆ ಯಂಗ್‌ ಅಚೀವರ್‌ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ ಸಮಿತಿ ಅಧ್ಯಕ್ಷ ಅರುಣ್‌ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಪರಿಣಿತಿ ಕಲಾಕೇಂದ್ರದ ಗೌರವಾಧ್ಯಕ್ಷೆ ವೀಣಾ ಬೆಳೆಯೂರು, ವಿಠ್ಠಲ್‌ ಪೈ ಹೆಗ್ಗೋಡು, ಉದ್ಯಮಿ ಎಸ್‌.ಡಿ.ವೀರಪ್ಪ ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕೆಂಪೇಗೌಡರದ್ದು ನಾಡ ಅಭಿವೃದ್ಧಿಗೆ ಅಪಾರ ಕೊಡುಗೆ-ಸಿ.ಟಿ.ರವಿ

0

ಚಿಕ್ಕಮಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ರಾಷ್ಟ್ರಕವಿ ಕುವೆಂಪು ಹಾಗೂ ಬೆಂಗಳೂರು ಅಭಿವೃದ್ದಿ ವಿಚಾರದಲ್ಲಿ ಕೆಂಪೇಗೌಡರು ಸಾರ್ವಜನಿಕವಾಗಿ ಸೇವೆ ಸಲ್ಲಿಸಿ ಅಪಾರವಾದ ಕೊಡುಗೆ ನೀಡಿ ದೇಶಾದ್ಯಂತ ಮನ್ನಣೆ ಗಳಿಸಿದ್ದು, ಅಂತಹ ಮಹಾನೀಯರನ್ನು ಪ್ರತಿನಿತ್ಯವು ನಾವುಗಳು ಸ್ಮರಿಸುವಂತಾಗಬೇಕು ಎಂದು ಶಾಸಕ ಸಿ.ಟಿ.ರವಿ ಅವರು ಹೇಳಿದರು.

ಚಿಕ್ಕಮಗಳೂರಿನ ಕೆ.ಎಸ್.ಆರ್.ಟಿ.ಸಿ. ಬಸ್‌ನಿಲ್ದಾಣದಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಒಕ್ಕಲಿಗರ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ದಿ ಜಿಲ್ಲಾ ಸಂಘದಿಂದ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜನ್ಮದಿನಾಚರಣೆ ಹಾಗೂ ರಾಷ್ಟ್ರಕವಿ ಕುವೆಂಪು ಭಾವಚಿತ್ರ ಅನಾವರಣ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕೆಂಪೇಗೌಡರು ನಾಡಿನ ಶ್ರೇಯೋಭಿವೃದ್ದಿಗಾಗಿ ಅಂದಿನ ಸಮಯದಲ್ಲೇ ದೂರದೃಷ್ಟಿಯನ್ನಿಟ್ಟು ಕೊಂಡು ಬೆಂದಕಾಳೂರಿಗೆ ನಗರ ಬೆಳವಣಿಗೆ ಹಾಗೂ ಸಾವಿರಾರು ಕೆರೆಗಳನ್ನು ಅಭಿವೃಧ್ದಿಪಡಿಸಿ ಶ್ರಮವಹಿಸಿದವರು. ತಮ್ಮ ಕುಲದೇವರ ಹೆಸರಿನಲ್ಲಿ ಕೆಂಪಾಬೂದಿ ಕೆರೆಯನ್ನು ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಕುಡಿಯುವ ನೀರನ್ನು ಒದಗಿಸಲು ಕಾರ್ಯನಿರ್ವಹಿಸಿದ್ದರು ಎಂದರು.

ಕುವೆಂಪು ಅವರು ನಾಡಗೀತೆಯ ಮೂಲಕ ದೇಶ ಹಾಗೂ ನಾಡಿನ ನಡುವೆ ತಾಯಿ, ಮಗಳ ಸಂಬಂಧವನ್ನು ಸೂಚಿಸುವ ಆಶಯವನ್ನು ವ್ಯಕ್ತಪಡಿಸಿರುವುದಲ್ಲದೇ ಅಕ್ಕಪಕ್ಕದ ರಾಜ್ಯಗಳನ್ನು ಸಹೋದ ರತ್ವದಂತೆ ಬಿಂಬಿಸುವ ಮೂಲಕ ಸಂಬಂಧ ವನ್ನು ಗಟ್ಟಿಸುವಲ್ಲಿ ಮುಂದಾಗಿದ್ದರು ಎಂದು ತಿಳಿಸಿದರು.

ಅನೇಕ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಈ ಇಬ್ಬರು ಮಹಾನೀಯರು ಎಂದಿಗೂ ವೈಯಕ್ತಿಕ ಆದ್ಯತೆಗಿಂತ ಹೆಚ್ಚಾಗಿ, ಸಮಾಜದ ಬೆಳವಣಿಗೆಗೆ ಹೆಚ್ಚು ಆದ್ಯತೆ ನೀಡಿದವರು. ಇವರ ಆದರ್ಶ, ತತ್ವಗಳನ್ನು ಜೀವನದಲ್ಲಿ ಪ್ರತಿಯೊಬ್ಬರು ಮೈಗೂಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕು ಎಂದರು.

ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿ ಕುವೆಂಪು ಹಾಗೂ ಕೆಂಪೇಗೌಡರು ನಾಡಿನ ಬೆಳವಣಿಗೆ ಯಲ್ಲಿ ಮೇಲು-ಕೀಳು ಎನ್ನದೇ ಎಲ್ಲಾ ಜಾತೀಯ ಉದ್ದಾರಕ್ಕಾಗಿ ದುಡಿದಂತಹ ಅವಿಸ್ಮರಣಿಯರು. ಕೆಂಪೇಗೌಡರ ಶ್ರಮವು ಬೆಂಗಳೂರು ಐಟಿಬಿಟಿಯಲ್ಲಿ ದೊಡ್ಡ ನಗರವಾದರೆ, ಕುವೆಂಪು ಅವರ ಸಾಹಿತ್ಯ ವಿಶ್ವಾದ್ಯಂತ ಮನ್ನಣೆ ಗಳಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಪಿ.ಪ್ರಕಾಶ್ ಸಂಘದ ಚಾಲಕ ರು ಹಾಗೂ ಅಧಿಕಾರಿಗಳು ಸಹಭಾಗಿತ್ವದೊಂದಿಗೆ ಇಂದು ಕೆಂಪೇಗೌಡರ ಜಯಂತಿ ಹಾಗೂ ಕುವೆಂಪು ಭಾವಚಿತ್ರ ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮವು ಯಶಸ್ವಿಗೊಳಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಪ್ರಥಮ ಬಾರಿಗೆ ಜಿಲ್ಲಾ ಒಕ್ಕಲಿಗರ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘವನ್ನು ಅಸ್ಥಿತ್ವ ತರುವ ಮೂಲಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನಂತರ ಏಕಲವ್ಯ ಪ್ರಶಸ್ತಿ ಪುರಸ್ಕೃತ ಹೆಚ್.ಎಸ್.ಸಾಕ್ಷತ್‌ಗೌಡ ಅವರಿಗೆ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಆರ್.ಬಸವರಾಜ್, ವಿಧಾನಸಭಾ ಮಾಜಿ ಸದಸ್ಯ ಐ.ಬಿ.ಶಂಕರ್, ಎಐಟಿ ಕಾಲೇಜು ಪ್ರಾಂಶುಪಾಲ ಡಾ. ಜಯದೇವ, ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್, ಉಪಾಧ್ಯಕ್ಷ ಎನ್. ಲಕ್ಷ್ಮಣೇಗೌಡ, ಗೌರವ ಕಾರ್ಯದರ್ಶಿ ಮಾಡ್ಲ ಪ್ರಕಾಶ್, ಜೆಡಿಎಸ್ ಮುಖಂಡ ಬಿ.ಎಂ.ತಿಮ್ಮಶೆಟ್ಟಿ, ಸಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಾಧಾಸುಂದ್ರೇಶ್ ಸಂಘದ ಉಪಾಧ್ಯಕ್ಷ ಜಗನ್ನಾಥ್ ಹಾಗೂ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.