Wednesday, April 1, 2026
Wednesday, April 1, 2026
Home Blog Page 1331

ಮಕ್ಕಳ ಅಸ್ವಾಸ್ಥ್ಯಕ್ಕೆ ಕಾರಣರಾದವರ ಮೇಲೆ ಕ್ರಮ ಜರುಗಿಸಿ-ಬಾಲಾಜಿ

0

ಶಿವಮೊಗ್ಗ: ವಿಷಪೂರಿತ ಆಹಾರ ನೀಡಿ ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ ಆಗ್ರಹಿಸಿದ್ದಾರೆ.

ಪ್ರತಿನಿತ್ಯ ಹಾಸ್ಟೆಲ್ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಂಡಿದ್ದ ವಿವಿಧ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳನ್ನು ಭಾನುವಾರ ಯೋಗ ಕಾರ್ಯಕ್ರಮದ ನೆಪದಲ್ಲಿ ಶಿವಮೊಗ್ಗ ನೆಹರು ಕ್ರೀಡಾಂಗಣಕ್ಕೆ ಕರೆಸಿಕೊಂಡು ವಿಷಪೂರಿತ ಆಹಾರ ನೀಡಿರುವುದೇ ಮಕ್ಕಳು ಅಸ್ವಸ್ಥರಾಗಲು ಪ್ರಮುಖ ಕಾರಣ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ಹಾಸ್ಟೆಲ್‌ನಲ್ಲಿ ವಿಷಪೂರಿತ ಆಹಾರ ನೀಡಿದ್ದರೇ ಅಲ್ಲಿನ ಎಲ್ಲಾ ಮಕ್ಕಳು ಅಸ್ವಸ್ಥರಾಗಬೇಕಿತ್ತು, ಆದರೆ, ಯೋಗ ಕಾರ್ಯಕ್ರಮಕ್ಕೆ ಹೋಗಿ ಬಂದವರಿಗೆ ಮಾತ್ರವೇ ಅನಾರೋಗ್ಯ ಕಂಡು ಬಂದಿದೆ. ಅಲ್ಲಿ ಮಕ್ಕಳಿಗೆ ಅವಧಿ ಮೀರಿದ ಎಳ್ಳು, ಬೆಲ್ಲ, ಮಜ್ಜಿಗೆ ನೀಡಿರುವ ಸಾಧ್ಯತೆ ಇದೆ. ಹಾಗಾಗಿ ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪೋಷಕರು ತಮ್ಮ ಮಕ್ಕಳ ಬಗ್ಗೆ ನೂರೆಂಟು ಕನಸು, ಆಸೆಗಳನ್ನು ಕಟ್ಟಿಕೊಂಡು ಶಾಲೆ, ಹಾಸ್ಟೆಲ್‌ಗಳಿಗೆ ಸೇರಿಸಿದ್ದಾರೆ. ಆದರೆ, ಈ ಘಟನೆಯಿಂದ ಪೋಷಕರು ಭಯಭೀತರಾಗಿದ್ದಾರೆ. ಹಲವೆಡೆ ಹಾಸ್ಟೆಲ್‌ಗಳಿಗೆ ಪೋಷಕರನ್ನು ಕರೆಯಿಸಿ ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿ ಎನ್ನುವ ದೃಶ್ಯಾವಳಿಗಳು ಕಾಣುತ್ತಿವೆ. ಇದರಿಂದ ಪೋಷಕರು ದಿಕ್ಕುತೋಚದಂತಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕಠಿಣ ಕ್ರಮಕ್ಕೆ ಆಗ್ರಹ: ಮಕ್ಕಳಿಗೆ ಆಹಾರ ನೀಡುವ ಮುನ್ನ ಹತ್ತಾರು ಬಾರಿ ಪರಿಶೀಲಿಸಬೇಕು. ಆದರೆ, ಯಾವುದೇ ಮುನ್ನೆಚ್ಚರಿಕೆ ಇಲ್ಲದ ಆಹಾರ ನೀಡಿರುವುದು ಹಲವು ಗುಮಾನಿಗಳಿಗೆ ಕಾರಣವಾಗಿದೆ. ಹಾಗಾಗಿ ಈ ಬಗ್ಗೆ ಸಮಗ್ರ ತನಿಖೆ ನಡಸಬೇಕು, ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಜನವರಿ ಅಂತ್ಯಕ್ಕೆ ರೈತಶಕ್ತಿ ಯೋಜನೆಗೆ ಚಾಲನೆ- ಕೃಷಿಸಚಿವ ಬಿ.ಸಿ.ಪಾಟೀಲ್

0

ರೈತಾಪಿ ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ” ರೈತ ಶಕ್ತಿ ಯೋಜನೆ” ಈ ತಿಂಗಳಾಂತ್ಯಕ್ಕೆ ಸಿಎಂ ಚಾಲನೆ‌ ನೀಡಲಿದ್ದಾರೆ.

ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ.ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ” ರೈತ ಶಕ್ತಿ ಯೋಜನೆ
ಕೃಷಿ ಉತ್ಪಾದಕತೆಯನ್ನು ಹೆಚ್ಚಿ ಸುವಲ್ಲಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ ವೆಚ್ಚದ ಹೊರೆಯನ್ನು ಕಡಿಮೆ ಮಾಡಲು ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಈ “ರೈತ ಶಕ್ತಿ ಯೋಜನೆ” ಇದೇ ತಿಂಗಳಾಂತ್ಯಕ್ಕೆ ಜಾರಿಯಾಗಲಿದೆ.

ಪ್ರತಿ ಎಕರೆಗೆ ರೂ .250 / – ಗಳಂತೆ ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡುವ ” ರೈತ ಶಕ್ತಿ ” ಯೋಜನೆಯನ್ನು ಈ ತಿಂಗಳಾಂತ್ಯಕ್ಕೆ ಅನುಷ್ಠಾನಗೊಳ್ಳುತ್ತಿದ್ದು,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಬಿಡುಗಡೆ ಮಾಡಲಿದ್ದಾರೆ.

ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್‌‌ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ . ಅದೇ ರೀತಿಯಲ್ಲಿ FRUITS ಪೋರ್ಟಲ್‌ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು , ಸಹ ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ ( DBT ) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ.

ನಗದು ಯೋಜನೆಯ FRUITS ಪೋರ್ಟಲ್ ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.ಈ ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ , ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ FRUITS ಪೋರ್ಟಲ್ ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುವುದು . FRUITS ಪೋರ್ಟಲ್‌ನಲ್ಲಿ ನಮೂದಿಸಲಾದ ಹಿಡುವಳಿಯ ವಿಸ್ತೀರ್ಣದ ಆಧಾರದ ಮೇಲೆ ರೈತರಿಗೆ ಡೀಸೆಲ್‌ ಸಹಾಯಧನವನ್ನು ನೇರ ನಗದು ವರ್ಗಾವಣೆ ( DBT ) ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುವುದು.

FRUITS ತಂತ್ರಾಂಶದಲ್ಲಿ ನೋಂದಾವಣಿಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ ರೂ .250 / – ರಂತೆ ಗರಿಷ್ಠ ಐದು ಎಕರೆಗೆ ರೂ .1250 / – ರವರಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುವುದು.

ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ DBT ವೋರ್ಟಲ್ ಮೂಲಕ ಆಧಾರದ ಸೀಡೆಡ್ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುವುದು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕಾಂಗ್ರೆಸ್ ನ ರಾಜ್ಯ ಕಿಸಾನ್ ಸೆಲ್ ಸಂಚಾಲಕರ ಮನೆ ಮೇಲೆ ಐಟಿ ದಾಳಿ

0

ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡ ಹಾಗೂ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ಅವರ ಮನೆಯ ಮೇಲೆ ನಡೆದಂತಹ ಐಟಿ ದಾಳಿಯು ಒಂದು ರಾಜಕೀಯ ಪ್ರೇರಿತವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಅಫ್ಜಲ್ ಪಾಷ ಅವರು ಹೇಳಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಐಟಿ ದಾಳಿಗಳು ಸಾಮಾನ್ಯವಾಗಿದೆ. ಆದರೆ ಓರ್ವ ಮುಸ್ಲಿಂ ಸಮುದಾಯದ ಪ್ರಮುಖ ಮುಖಂಡರಾಗಿ ರುವ ಅಕ್ಮಲ್ ಅವರಿಗೆ ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಒಳ್ಳೆಯ ಭವಿಷ್ಯವನ್ನು ಕಾಣುತ್ತಿರುವುದ ನ್ನು ಸಹಿಸಲಾಗದೇ ಈ ರೀತಿಯ ಕೃತ್ಯವೆಸಗಲಾಗಿದೆ ಎಂದು ಖಂಡಿಸಿದ್ದಾರೆ.

ಐಟಿ ದಾಳಿಯಿಂದ ಮಾನಸಿಕ ಶಕ್ತಿಯನ್ನು ಕುಗ್ಗಿಸುವ ಸಲುವಾಗಿ ಕೆಲವು ಬಲಾಡ್ಯರ ಕಾಣದ ಕೈಗಳು ಹಿಂಬದಿಯಲ್ಲಿ ಕುಳಿತು ದಾಳಿಗಳನ್ನು ಮಾಡಿಸಿ ಸಂತೋಷಪಡುತ್ತಿದ್ದಾರೆ. ಇದು ಮುಂದಿನ ದಿನಗಳಲ್ಲಿ ಅವರಿಗೂ ಪುನರಾವರ್ತನೆ ಆಗುವುದರಲ್ಲಿ ಸಂಶಯವಿಲ್ಲ ಎಂದು ಟೀಕಿಸಿದ್ದಾರೆ.

ಒಬ್ಬರ ಆಸ್ತಿಯ ಬಗ್ಗೆ ಅನುಮಾನ ಬಂದಲ್ಲಿ ಐಟಿ ಸಂಸ್ಥೆ ದಾಳಿ ನಡೆಸಬಹುದು. ಆದರೆ ಚುನಾವಣೆ ಸಂದರ್ಭಗಳಲ್ಲೇ ಈ ರೀತಿಯ ದಾಳಿಯನ್ನು ನಡೆಸುವುದು ಸರಿಯಲ್ಲ. ಜಿಲ್ಲೆಯಲ್ಲಿ ಅಕ್ರಮ ಆಸ್ತಿ ಗಳಿಕೆ ಯಲ್ಲಿ ಕೆಲ ರಾಜಕಾರಣಿಗಳ ಹೆಸರುಗಳಿದ್ದು ಮೊದಲು ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳ ಬೇಕು ಎಂದು ಒತ್ತಾಯಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಖಾಸಗಿ ಕಂಪನಿ ಬಿಸ್ಕತ್ ಜಾಹೀರಾತಿಗೆ ಮಾಡೆಲ್ ಆಗಿದ್ದಅಮಿತಾಬ್ ಗೆ ಚಿಂತಕರ ಪತ್ರ

0

ಸ್ವತಂತ್ರ ವೈದ್ಯಕೀಯ ತಜ್ಞರು, ಶಿಶುವೈದ್ಯರು ಮತ್ತು ಪೌಷ್ಟಿಕತಜ್ಞರ ರಾಷ್ಟ್ರೀಯ ಚಿಂತಕರ ಚಾವಡಿಯಾದ ನ್ಯೂಟ್ರಿಷನ್ ಅಡ್ವೊಕಸಿ ಇನ್ ಪಬ್ಲಿಕ್ ಇಂಟರೆಸ್ಟ್-ಇಂಡಿಯಾ , ಅನಾರೋಗ್ಯಕರ ಬಿಸ್ಕೆಟ್ ಬ್ರಾಂಡ್ ಅನ್ನು ಪ್ರಚಾರ ಮಾಡುವುದರ ವಿರುದ್ಧ ಬಾಲಿವುಡ್ ಐಕಾನ್ ಅಮಿತಾಬ್ ಬಚ್ಚನ್ ಅವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ.

ಬ್ರಿಟಾನಿಯಾ ಮಿಲ್ಕ್ ಬಿಕಿಸ್’ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಡಿಸೆಂಬರ್ 28 ರಂದು ಬಿಗ್ ಬಿ ಅವರಿಗೆ ಚಿಂತಕರ ಚಾವಡಿಯು ಈ ಹಿಂದೆಯೇ ಪತ್ರ ಬರೆದಿತ್ತು.

ಮುಂದಿನ ದಿನಗಳಲ್ಲಿ ‘ಅಲ್ಟ್ರಾ-ಪ್ರೊಸೆಸ್ಡ್ ಆಹಾರ ಉತ್ಪನ್ನಗಳು ಅಥವಾ ಹೆಚ್ಚಿನ ಕೊಬ್ಬು/ಸಕ್ಕರೆ ಮತ್ತು ಉಪ್ಪಿನ ಆಹಾರಗಳು (HFSS) ಎಂದು ಲೇಬಲ್ ಮಾಡಬಹುದಾದ ಆಹಾರ ಪದಾರ್ಥಗಳ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳದಂತೆ ಜನವರಿ 11ರ ಪತ್ರದಲ್ಲಿ ಮನವಿ ಮಾಡಿದೆ.

ಈ ಪತ್ರಕ್ಕೆ ಕಮ್ಯುನಿಟಿ ಮಕ್ಕಳ ತಜ್ಞೆ, ಜನ ಸ್ವಾಸ್ಥ್ಯ ಅಭಿಯಾನದ ಜಂಟಿ ಸಂಚಾಲಕಿ ಮತ್ತು ಸಾರ್ವಜನಿಕ ಆರೋಗ್ಯ ಸಂಪನ್ಮೂಲದ (ಪಿಎಚ್‌ಆರ್‌ಎನ್) ರಾಷ್ಟ್ರೀಯ ಸಂಚಾಲಕಿ ಡಾ. ವಂದನಾ ಪ್ರಸಾದ್ ಹಾಗೂ ಮಕ್ಕಳ ತಜ್ಞ ಮತ್ತು ಎನ್‌ಎಪಿಯ ಸಂಚಾಲಕ ಡಾ. ಅರುಣ್ ಗುಪ್ತಾ ಸಹ ಸಹಿ ಮಾಡಿದ್ದಾರೆ ಎಂದು ಪತ್ರದ ಸಹಿದಾರರಲ್ಲಿ ಒಬ್ಬರು ತಿಳಿಸಿದ್ದಾರೆ.

ಮೊದಲ ಪತ್ರಕ್ಕೆ ಅಮಿತಾಬ್ ಬಚ್ಚನ್ ಅವರಿಂದ ಯಾವುದೇ ಪ್ರತಿಕ್ರಿಯೆ ಬರದ ಕಾರಣ ಅವರು ಮತ್ತೊಮ್ಮೆ ಪತ್ರ ಬರೆದಿದ್ದಾರೆ.

ಬ್ರಿಟಾನಿಯಾ ಮಿಲ್ಕ್ ಬಿಕಿಸ್’ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಡಿಸೆಂಬರ್ 28 ರಂದು ಬಿಗ್ ಬಿ ಅವರಿಗೆ ಚಿಂತಕರ ಚಾವಡಿಯು ಈ ಹಿಂದೆಯೇ ಪತ್ರ ಬರೆದಿತ್ತು. ಮುಂದಿನ ದಿನಗಳಲ್ಲಿ ‘ಅಲ್ಟ್ರಾ-ಪ್ರೊಸೆಸ್ಡ್ ಆಹಾರ ಉತ್ಪನ್ನಗಳು ಅಥವಾ ಹೆಚ್ಚಿನ ಕೊಬ್ಬು/ಸಕ್ಕರೆ ಮತ್ತು ಉಪ್ಪಿನ ಆಹಾರಗಳು (HFSS) ಎಂದು ಲೇಬಲ್ ಮಾಡಬಹುದಾದ ಆಹಾರ ಪದಾರ್ಥಗಳ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳದಂತೆ ಜನವರಿ 11ರ ಪತ್ರದಲ್ಲಿ ಮನವಿ ಮಾಡಿದೆ.

ಭವಿಷ್ಯದಲ್ಲಿ ಅಲ್ಟ್ರಾ-ಸಂಸ್ಕರಿಸಿದ ಆಹಾರ ಉತ್ಪನ್ನಗಳೆಂದು ಲೇಬಲ್ ಮಾಡಬಹುದಾದ ಯಾವುದೇ ಅನಾರೋಗ್ಯಕರ ಆಹಾರ ಉತ್ಪನ್ನಗಳ ಪ್ರಚಾರಕ್ಕೆ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳದಂತೆ ಅವರು ಪತ್ರದಲ್ಲಿ ವಿನಂತಿಸಲಾಗಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ತೀರ್ಥಹಳ್ಳಿಯಲ್ಲಿ ಫೆ.12 ರಿಂದ ದಕ್ಷಿಣ ಭಾರತ ಮಟ್ಟದ ಜಾದೂಗಾರರ ಮೇಳ

0

ರಾಜ್ಯದ ಬೇರೆ ಭಾಗಗಳಲ್ಲಿ ಸಮ್ಮೇಳನ ಮಾಡುವ ಒತ್ತಡ ಇದ್ದರೂ ಜನರ ಸಹಕಾರದಿಂದ ತೀರ್ಥಹಳ್ಳಿಯಲ್ಲಿ ಅಖಿಲ ದಕ್ಷಿಣ ಭಾರತ ಜಾದೂಗಾರರ ಮಹಾ ಸಮ್ಮೇಳನ ಫೆ. 12. 13ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ಮ್ಯಾಜಿಕ್ ಸರ್ಕಲ್ ಸಂಚಾಲಕ ಸರ್ಕಲ್ ಸಂಚಾಲಕರಾದ ನಿಶ್ಚಿಲ್ ಜಾದೂಗಾರ್ ಅವರು ತಿಳಿಸಿದ್ದಾರೆ.

ಈ ಕುರಿತು ತೀರ್ಥಹಳ್ಳಿಯ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ರಾಜ್ಯದಲ್ಲಿ ಜಾದುಗಾರ್ ಮೌಢ್ಯ ನಿಷೇಧ ಕಾಯ್ದೆ ಜಾರಿಗೊಳಿಸಿದ್ದು ಹಲವು ಅನಿಷ್ಟ ಪದ್ದತಿಗಳನ್ನು ತೆಗೆದು ಹಾಕಲಾಗಿದೆ. ಅಂತಹ ಪಟ್ಟಿಯಲ್ಲಿ ಜಾದೂ ಕಲಾವಿದರೂ ಸೇರಿಕೊಂಡಿದ್ದರು. ಅತಿಮಾನುಷ ಶಕ್ತಿ ಪವಾಡ ಮುಂತಾದ ಢೋಂಗಿ, ಸುಳ್ಳುಗಳನ್ನು ಸಾರ್ವಜನಿಕರಿಗೆ ತಿಳಿಸುವ ಜಾದೂಗಾರರು ಅಗತ್ಯವಾಗಿ ಬೇಕಾಗಿದ್ದಾರೆ ಎಂದು ಮ್ಯಾಜಿಕ್ ಸರ್ಕಲ್ ಉಪಾಧ್ಯಕ್ಷ ನೆಂಪೆ ದೇವರಾಜ್ ಹೇಳಿದರು.

ಮೂರು ವರ್ಷಗಳ ಹಿಂದೆ ತೀರ್ಥಹಳ್ಳಿ ಪಟ್ಟಣದಲ್ಲಿ ರಾಜ್ಯಮಟ್ಟದ ಜಾದುಗಾರರ ಸಮ್ಮೇಳನ ಯಶಸ್ವಿಯಾಗಿ ನಡೆದಿದೆ. ಈ ವರ್ಷ ವಿಶೇಷವಾಗಿ ಜಾದೂ ಸ್ಪರ್ಧೆ, ಜಾದೂ ಜಾತ್ರೆ, ಉಪನ್ಯಾಸ, ಕಲಾವಿದರಿಗೆ ಸಹಾಯ, ತರಬೇತಿ, ಕಾರ್ಯಗಾರಗಳನ್ನು ಏರ್ಪಡಿಸಲಾಗಿದೆ. ದಕ್ಷಿಣ ಭಾರತದ ಪ್ರಖ್ಯಾತ ಜಾದು ಕಲಾವಿದರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ದೇವರಾಜ್ ಮಲ್ಯ, ಉಪಾಧ್ಯಕ್ಷ ಪ್ರಶಾಂತ್ ಹೆಗಡೆ, ಕಾರ್ಯದರ್ಶಿ ಶಿವಾಜಿ ಜಾದುಗಾರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕರ್ನಾಟಕ ಸಂಘದ ವಾರ್ಷಿಕ ಪುಸ್ತಕ ಬಹುಮಾನಕ್ಕೆ ಕೃತಿಗಳಿಗೆ ಆಹ್ವಾನ

0

ಪ್ರತಿ ವರ್ಷದಂತೆ ಶಿವಮೊಗ್ಗ ಕರ್ನಾಟಕ ಸಂಘವು 2022ನೇಯ ಸಾಲಿನಲ್ಲಿ ಮೊದಲ ಮುದ್ರಣವಾಗಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ಬಹುಮಾನವನ್ನು ನೀಡಲು ಲೇಖಕರಿಂದ ಮತ್ತು ಪ್ರಕಾಶಕರಿಂದ ಕೆಳಕಂಡ ನಿಯಮಗಳಿಗೆ ಒಳಪಟ್ಟಂತೆ ಕೃತಿಗಳನ್ನು ಆಹ್ವಾನಿಸುತ್ತಿದೆ.

01.ಮರುಮುದ್ರಣಗೊಂಡ ಕೃತಿಗಳಿಗೆ, ಹಸ್ತ ಪ್ರತಿಗಳಿಗೆ ಮತ್ತು ಸಂಪಾದಿತ ಕೃತಿಗಳಿಗೆ ಅವಕಾಶವಿರುವುದಿಲ್ಲ.

02. ಈ ಹಿಂದೆ ಕರ್ನಾಟಕ ಸಂಘದ ಬಹುಮಾನ ಪಡೆದವರು ಅದೇ ವಿಭಾಗದಲ್ಲಿ ಸ್ಪರ್ಧಿಸುವಂತಿಲ್ಲ, ಇನ್ನಿತರೆ ಯಾವುದೇ ವಿಭಾಗಕ್ಕೆ ಸ್ಪರ್ಧಿಸಬಹುದು.

03. ಕರ್ನಾಟಕ ಸಂಘದ ಸದಸ್ಯರು ಭಾಗವಹಿಸುವಂತಿಲ್ಲ.

04. ಪುಸ್ತಕ ಬಹುಮಾನಕ್ಕೆ ಪುಸ್ತಕದ ಒಟ್ಟು 04 ಪ್ರತಿಗಳನ್ನು ಕಳುಹಿಸಬೇಕು / ಬಹುಮಾನಕ್ಕೆ ಕಳುಹಿಸಿದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.

05. ಅಂಕಣ ಬರಹಗಳು ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಬಗ್ಗೆ ದಾಖಲೆ ನೀಡಬೇಕು.

06. ಬರಹಗಾರರು/ಪ್ರಕಾಶಕರು – ಪತ್ರದ ಮುಖೇನ ಸ್ವವಿವರ / ವಿಳಾಸ / ಮೊಬೈಲ್ ನಂ. ಮತ್ತು ಯಾವ ಪ್ರಕಾರಕ್ಕೆ ಸಲ್ಲಿಸುತ್ತಿರುವುದು ಎಂಬ ಬಗ್ಗೆ ವಿವರವನ್ನು ಕಳುಹಿಸಬೇಕು.

07. ಒಂದು ಪ್ರಕಾರಕ್ಕೆ ಕನಿಷ್ಠ 05 ಕೃತಿಗಳು ಬರದಿದ್ದರೆ ಬಹುಮಾನಕ್ಕೆ ಪರಿಗಣ ಸಲಾಗುವುದಿಲ್ಲ.

08. ವಿವಿಧ ಪ್ರಕಾರಕ್ಕೆ ಪುಸ್ತಕ ಕಳಿಸಿದಲ್ಲಿ ಒಂದೊಂದು ಪ್ರಕಾರಕ್ಕೂ 04 ಪುಸ್ತಕಗಳು ಪ್ರತ್ಯೇಕವಾಗಿರಬೇಕು.

ಪ್ರಕಾರ

01.ಕಾದಂಬರಿ
ಕುವೆಂಪು ಪುರಸ್ಕಾರ

02.ಅನುವಾದ
ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಪುರಸ್ಕಾರ

03.ಮಹಿಳಾ ಸಾಹಿತ್ಯ
ಶ್ರೀಮತಿ ಎಂ.ಕೆ. ಇಂದಿರಾ ಪುರಸ್ಕಾರ

04.ಮುಸ್ಲಿಂ ಬರಹಗಾರರು
ಶ್ರೀ ಪಿ. ಲಂಕೇಶ್ ಪುರಸ್ಕಾರ

05.ಕವನ ಸಂಕಲನ
ಡಾ. ಜಿ. ಎಸ್. ಶಿವರುದ್ರಪ್ಪ ಪುರಸ್ಕಾರ

06. ಅಂಕಣ ಬರಹಗಾರರು
ಡಾ. ಹಾ. ಮಾ. ನಾಯಕ ಪುರಸ್ಕಾರ

07.ಸಣ್ಣ ಕಥಾ ಸಂಕಲನ
ಡಾ. ಯು. ಆರ್. ಅನಂತಮೂರ್ತಿ ಪುರಸ್ಕಾರ

08.ನಾಟಕ
ಡಾ. ಕೆ. ವಿ. ಸುಬ್ಬಣ್ಣ ಪುರಸ್ಕಾರ

09.ಪ್ರವಾಸ ಸಾಹಿತ್ಯ
ಶ್ರೀ ಕುಕ್ಕೆ ಸುಬ್ರಹ್ಮಣ್ಯ ಶಾಸ್ತ್ರಿ ಪುರಸ್ಕಾರ

10. ವಿಜ್ಞಾನ ಸಾಹಿತ್ಯ
ಶ್ರೀ ಹಸೂಡಿ ವೆಂಕಟಶಾಸ್ತ್ರೀ ಪುರಸ್ಕಾರ

11. ಮಕ್ಕಳ ಸಾಹಿತ್ಯ
ಡಾ. ನಾ. ಡಿಸೋಜ ಪುರಸ್ಕಾರ

12. ವೈದ್ಯ ಸಾಹಿತ್ಯ
ಡಾ. ಹೆಚ್. ಡಿ. ಚಂದ್ರಪ್ಪಗೌಡ ಪುರಸ್ಕಾರ

ಮೇಲ್ಕಂಡ ಪ್ರಕಾರಗಳ ಸಾಹಿತ್ಯ ಕೃತಿಗಳ 04 (ನಾಲ್ಕು) ಪ್ರತಿಗಳನ್ನು ಸಲ್ಲಿಸಲು ದಿನಾಂಕ 15- 03-2023ರವರೆಗೆ ಕಾಲಾವಕಾಶವಿರುತ್ತದೆ.
ನಂತರ ಬಂದ ಕೃತಿಗಳನ್ನು ಪರಿಗಣ ಸಲಾಗುವುದಿಲ್ಲ. ಪುಸ್ತಕಗಳನ್ನು ಗೌರವ ಕಾರ್ಯದರ್ಶಿಗಳು, ಕರ್ನಾಟಕ ಸಂಘ, ಬಿ.ಹೆಚ್.ರಸ್ತೆ, ಶಿವಮೊಗ್ಗ-577201 ಇವರಿಗೆ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು.

ಅತ್ಯುತ್ತಮವೆಂದು ಆಯ್ಕೆ ಆದ ಕೃತಿಗಳಿಗೆ ರೂ: 10,000/- (ಹತ್ತು ಸಾವಿರ) ನಗದು ಬಹುಮಾನ ಮತ್ತು ಫಲಕವನ್ನು ನೀಡಿ ಗೌರವಿಸಲಾಗುವುದು.
ತೀರ್ಪುಗಾರರ ತೀರ್ಮಾನವೇ ಅಂತಿಮ.

ಹೆಚ್ಚಿನ ವಿವರಗಳಿಗೆ ಕರ್ನಾಟಕ ಸಂಘದ ಕಛೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ದೂರವಾಣ ಸಂಖ್ಯೆ ( 08182-277406/ 99801599696/ 959077200

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಜೋಗದಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

0

ಶಿವಮೊಗ್ಗ: ಮೆಸ್ಕಾಂ ಜೋಗ ಉಪವಿಭಾಗ ಕಛೇರಿಯಲ್ಲಿ ದಿನಾಂಕ19.01.2023 ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ1.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರು ಭಾಗವಹಿಸಿ, ತಮ್ಮ ಅಹವಾಲುಗಳನ್ನು ನೀಡಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:9448289520 ನ್ನು ಸಂಪರ್ಕಿಸಬಹುದು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸರ್ಕಾರಿ ನೌಕರರ ಮೇಲೆ ಮಿಥ್ಯಾರೋಪಮಾಡುವ ವರ್ತನೆಯನ್ನ ಸಹಿಸುವುದಿಲ್ಲ- ಷಡಕ್ಷರಿ

0

ಶಿವಮೊಗ್ಗ : ಜಿಲ್ಲೆಯ ಅನೇಕ ಇಲಾಖೆಗಳಲ್ಲಿ ಗೌರವಯುತವಾಗಿ ಸೇವೆ ಸಲ್ಲಿಸುತ್ತಿರುವ ನೌಕರರ ವಿರುದ್ಧ ಸಲ್ಲದ ಮಿಥ್ಯಾರೋಪ ಮಾಡುವ, ಸರ್ಕಾರಿ ಸೇವೆಗೆ ಅಡ್ಡಿಪಡಿಸುವ ಯಾವುದೇ ಸಮಾಜಘಾತಕ ವ್ಯಕ್ತಿ ಅಥವಾ ಶಕ್ತಿಗಳ ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ. ಅದಕ್ಕೆ ಸಕಾಲದಲ್ಲಿ ಸೂಕ್ತ ಉತ್ತರ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ತಿಳಿಸಿದ್ದಾರೆ.

ಅವರು ಇತ್ತೀಚೆಗೆ ಸಾಗರ ತಾಲೂಕಿನ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಶಿಕ್ಷಕರ ವಿರುದ್ಧ ಆಧಾರರಹಿತವಾಗಿರುವ ಸುಳ್ಳು ಆರೋಪ ಮಾಡಿದ್ದಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಯಬಿಟ್ಟು ನೌಕರರಿಗೆ ಮಾನಸಿಕವಾಗಿ ನೋವನ್ನುಂಟು ಮಾಡುತ್ತಿರುವ ವ್ಯಕ್ತಿಯ ಚಟುವಟಿಕೆಗಳನ್ನು ಸಂಘಟನೆ ಗಂಭೀರವಾಗಿ ಪರಿಗಣಿಸಿದೆ. ಮಿಥ್ಯಾರೋಪ ಮಾಡುವ ವ್ಯಕ್ತಿಗಳು ಸಂಬಂಧಿಸಿದ ಇಲಾಖೆ ಅಥವಾ ಸಂಬಂಧಿಸಿದ ಮೇಲಾಧಿಕಾರಿಗಳಲ್ಲಿ ದೂರು ನೀಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ತಪ್ಪಿದಲ್ಲಿ ಇಂತಹ ಕುತ್ಸಿಕ ಮನಸ್ಥಿತ ಹೊಂದಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸಂಘಟನೆ ಸಕಾಲಿಕ ನಿರ್ಧಾರ ಕೈಗೊಳ್ಳಲಿದೆ ಎಂದವರು ತಿಳಿಸಿದ್ದಾರೆ.

ಶಿಕ್ಷಕರ ಸೇವೆಗೆ ಸಮಾಜದಲ್ಲಿ ವಿಶೇಷ ಗೌರವಯುತ ಸ್ಥಾನಮಾನವಿದೆ. ಅದರಲ್ಲೂ ವಿಶೇಷವಾಗಿ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಅದರ ಬದಲಾಗಿ ಅವರನ್ನು ನಿಂಧಿಸುವುದು, ಸುಳ್ಳು ಆರೋಪ ಮಾಡಿ, ಅವರ ಮನಸ್ಸಿಗೆ ನೋವುಂಟು ಮಾಡುವುದರಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗಲಿದೆ. ಆರೋಪ ಮಾಡುವ ಮುನ್ನ ಸಂಭವಿಸಬಹುದಾದ ಘಟನಾವಳಿಗಳು, ಸಾರ್ವಜನಿಕರಲ್ಲಿ ಶಿಕ್ಷಕರ ಬಗ್ಗೆ ಮೂಡುವ ಭಾವನೆಯಿಂದ ಶಿಕ್ಷಕರ ಗೌರವಕ್ಕೆ ಧಕ್ಕೆ ಉಂಟಾಗಲಿದೆ. ಇದು ಸಲ್ಲದು ಎಂದವರು ತಿಳಿಸಿದ್ದಾರೆ.

ಸಾಗರ ತಾಲೂಕಿನಲ್ಲಿ ಶಿಕ್ಷಣ ಇಲಾಖೆಯ ವಿವಿಧ ಕ್ಲಸ್ಟರ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯೋಪಾಧ್ಯಾಯರು, ಅಧಿಕಾರಿ-ಸಿಬ್ಬಂಧಿಗಳ ವಿರುದ್ಧ ಸುಳ್ಳು ಆರೋಪ ಮಾಡಿದ್ದಲ್ಲದೆ ಸಾಮಾಜಿಕ ಸ್ವಾತಂತ್ರ್ಯ ಹಾಳುಮಾಡುತ್ತಿರುವ ವ್ಯಕ್ತಿಯೊಬ್ಬನ ವಿರುದ್ಧ ನೊಂದ ನೌಕರರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಲು ಈಗಾಗಲೇ ಸೂಚಿಸಲಾಗಿದೆ. ಈ ಬಗ್ಗೆ ಸಕ್ಷಮ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದವರು ತಿಳಿಸಿದ್ದಾರೆ.

ನೌಕರರ ಮೇಲೆ ಸಲ್ಲದ ಆರೋಪ ಮಾಡುವ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಡುವ ವಿಕೃತ ಮನಸ್ಸಿನ ವ್ಯಕ್ತಿಗಳನ್ನು ಪೊಲೀಸ್ ಇಲಾಖೆ ಸೂಕ್ಷ್ಮವಾಗಿ ಗಮನಿಸಿ, ಪರಿಶೀಲಿಸಿ, ಸಾಮಾಜಿಕ ಕಂಟಕಪ್ರಾಯವಾಗುವ ಇಂತಹ ವ್ಯಕ್ತಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಅವರು ಪೊಲೀಸ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಶಿಕ್ಷಕರು ಸೇರಿದಂತೆ ಸರ್ಕಾರದ ಬೇರೆ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಇಂತಹ ಆರೋಪಗಳಿಂದ ಮಾನಸಿಕ ನೆಮ್ಮದಿ ಕಳೆದುಕೊಳ್ಳದಿರುವಂತೆ ಹಾಗೂ ಸಂಘಟನೆಯು ತಮ್ಮ ನೆರವಿಗೆ ಸದಾ ಧಾವಿಸಲಿದೆ ಎಂದು ತಿಳಿಸಿರುವ ಅವರು, ತಮ್ಮ ಕಾರ್ಯಕ್ಷೇತ್ರದಲ್ಲಿ ಸೌಲಭ್ಯಗಳಿಗಾಗಿ ಆಗಮಿಸುವ ಸಾರ್ವಜನಿಕರಿಗೆ ಉತ್ತಮ ಹಾಗೂ ತ್ವರಿತಗತಿಯ ಸೇವೆ ನೀಡುವಂತೆ ಅವರು ನೌಕರರಲ್ಲಿ ಮನವಿ ಮಾಡಿದ್ದಾರೆ

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಭುವನ ಸುಂದರಿ ಪಟ್ಟಕ್ಕೆ ಅಮೆರಿಕಾದ ಬೋನಿ ಆಯ್ಕೆ

ಅಮೇರಿಕಾದ ಎ ಆರ್ ಬೋನಿ ಗೇಬ್ರಿಯಲ್ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಲೂಸಿಯಾನದ ಓರ್ಲಿಯನ್ಸ್ ನಲ್ಲಿ ನಡೆದ ವರ್ಣರಂಜಿತಾ ಸ್ಪರ್ಧೆಯಲ್ಲಿ 84 ಸುಂದರಿಯರನ್ನು ಹಿಂದಿಕ್ಕಿದ್ದಾರೆ.

71ನೇ ಆವೃತ್ತಿಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಮಿಸ್ ಇಂಡಿಯಾ ಯೂನಿವರ್ಸ್ ದಿವಿತಾ ರೈ ಅವರು ಅಗ್ರ 16 ನೇ ಸ್ಥಾನ ಪಡೆದಿದ್ದಾರೆ.ಆದರೆ ಅಗ್ರ 5ರಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

ಗೇಬ್ರಿಯಲ್ ಮಾಡೆಲ್, ಹಾಗೂ ಫ್ಯಾಶನ್ ಡಿಸೈನರ್ ಆಗಿದ್ದಾರೆ. ಇವರು ಉತ್ತರ ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಫ್ಯಾಶನ್ ಡಿಸೈನ್ನಲ್ಲಿ ಬ್ಯಾಚುಲರ್ ಪದವಿ ಪಡೆದಿದ್ದಾರೆ.
ಗೇಬ್ರಿಯಲ್ ತನ್ನದೇ ಆದ ಪರಿಸರಸ್ನೇಹಿ ಉಡುಪುಗಳ ಕಂಪನಿ ಹೊಂದಿದ್ದಾರೆ.

11 ವರ್ಷಗಳಲ್ಲಿ ಮೊದಲ ಬಾರಿಗೆ ಅಮೆರಿಕದವರು ವಿಶ್ವ ಸುಂದರಿ ಕಿರೀಟವನ್ನು ಪಡೆದುಕೊಂಡಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮಲೆನಾಡು ಕರ್ನಾಟಕ ಪ್ರಾದೇಶಿಕ ಸಾಂಸ್ಕೃತಿಕ ಕಲಾ ಉತ್ಸವ

0

ಶಿವಮೊಗ್ಗ: ಬಿ ಎಚ್ ರಸ್ತೆಯ ಕರ್ನಾಟಕ ಸಂಘದ ಆಡಿಟೋರಿಯಂನಲ್ಲಿ, ದಿನಾಂಕ 21-2-2023 ಪೂರ್ಣ ದಿನ, ಸುರ್ವೆ ಕಲ್ಚರ್ ಅಕಾಡೆಮಿ ಬೆಂಗಳೂರು ವತಿಯಿಂದ, “ಮಲೆನಾಡು ಕರ್ನಾಟಕ ಪ್ರಾದೇಶಿಕ ಸಾಂಸ್ಕೃತಿಕ ಕಲಾ ಉತ್ಸವ” ನಡೆಯಲಿದೆ.

ಮಲೆನಾಡು ಕರ್ನಾಟಕ ಪ್ರಾದೇಶಿಕ ಅಸಮತೋಲನ ಕುರಿತು ವಿಚಾರ ಸಂಕಿರಣ,( ಶಿವಮೊಗ್ಗ, ಚಿಕ್ಕಮಗಳೂರು, ಹಾಸನ) ಸಾಂಸ್ಕೃತಿಕ ಕಾರ್ಯಕ್ರಮಗಳು, ಎಲ್ಲಾ ತರಹದ ನೃತ್ಯಗಳು, ಕರೋಕೆ ಗಾಯನಗಳಿಗೆ ಅವಕಾಶವಿದೆ.

ಮದ್ಯಾಹ್ನ 2-30 ರಿಂದ ಕವಿಗೋಷ್ಠಿ ಇದೆ.( ಮಲೆನಾಡಿನ ನಿಸರ್ಗ, ಮಲೆನಾಡಿನ ಸಾಧಕರು, ಪುನೀತ ರಾಜ್ ಕುಮಾರ ಕುರಿತು ಕವಿತೆಗಳಿಗೆ ಅವಕಾಶವಿದೆ. ಹೆಚ್ಚಿನ ವಿವರಗಳಿಗೆ ವಿಳಾಸದೊಂದಿಗೆ ಸಂಪರ್ಕಿಸಿ.
ರಮೇಶ ಸುರ್ವೆ, 9845307327.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.