Wednesday, April 1, 2026
Wednesday, April 1, 2026
Home Blog Page 1342

ಮನಸ್ಸಿಂದ ಮನಸ್ಸಿಗೆ -10

0

ಕನ್ನಡ ಸಾಹಿತ್ಯ ಸಮ್ಮೇಳನ – ಹಾವೇರಿ,
ಜನ ಸಾಹಿತ್ಯ ಸಮ್ಮೇಳನ – ಬೆಂಗಳೂರು………..

ವಿವಾದದ ಗೂಡಿನಲ್ಲಿ ಕನ್ನಡದ ತೇರು ಎಳೆಯುತ್ತಾ……..

ಮುಖವಾಡಗಳ ಮರೆಯಲ್ಲಿ ಆಧುನಿಕ ಮನುಷ್ಯ ಬಚ್ಚಿಟ್ಟುಕೊಂಡಿರುವಾಗ ಎಲ್ಲವೂ ಗೋಜಲು – ಗೊಂದಲ…..

ಒಂದಷ್ಟು ಪ್ರೀತಿ ವಿಶ್ವಾಸ ವಿಶಾಲ ಮನೋಭಾವ ಕರುಣೆ ಕ್ಷಮಾಗುಣ ಎಲ್ಲವನ್ನೂ ಒಳಗೊಂಡ ಬುದ್ದತ್ವದಲ್ಲಿ ಎಲ್ಲವೂ ಸಹನೀಯ. ಯಾವುದೂ ವಿವಾದವೇ ಅಲ್ಲ. ಎಲ್ಲವೂ ಸಹಜ ಸ್ವಾಭಾವಿಕ……

ಆದರೆ, ಅಧಿಕಾರವೆಂಬುದು, ಹಣವೆಂಬುದು, ಪ್ರಶಸ್ತಿಯೆಂಬುದು, ಪ್ರಚಾರವೆಂಬುದು, ಜನಪ್ರಿಯತೆ ಎಂಬುದು ನೆತ್ತಿಗೇರಿ ಅಹಂಕಾರ ಮೀರಿ ದುರಹಂಕಾರವಾಗಿ ಪರಿವರ್ತನೆ ಹೊಂದಿದಾಗ ದ್ವೇಷ ಅಸೂಯೆಗಳು ಸುಲಭವಾಗಿ ನಮ್ಮನ್ನು ಆಕ್ರಮಿಸುತ್ತದೆ. ಆಗ ದೇವರೂ ಒಂದು ವಿವಾದ, ಧರ್ಮವೂ ಒಂದು ವಿವಾದ, ಭಾಷೆಯು ಒಂದು ವಿವಾದ, ಸಮ್ಮೇಳನವೂ ವಿವಾದವೇ…….

ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6/7/8 ನಡೆಯುತ್ತಲಿದೆ. ಅದಕ್ಕೆ ಶುಭ ಹಾರೈಸುತ್ತಾ…..

ಈ ರೀತಿಯ ಬೃಹತ್ ಪ್ರಮಾಣದ ಸಮ್ಮೇಳನದಲ್ಲಿ ಎಲ್ಲರನ್ನೂ ತೃಪ್ತಿ ಪಡಿಸುವುದು ಸಾಧ್ಯವಿಲ್ಲ. ಅಸಮಾಧಾನಗಳು ಸದಾ ಇರುತ್ತವೆ. ಆದರೆ ಉದ್ದೇಶ ಪೂರ್ವಕ ಪಕ್ಷಪಾತದ ನಿಲುವುಗಳನ್ನು ಪ್ರಶ್ನಿಸುವುದು ಮತ್ತು ವಿರೋಧಿಸುವುದು ಸಹ ಸ್ವೀಕಾರಾರ್ಹ…..

ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿಯುತ್ತದೆಯಂತೆ. ಕಾರಣ ತಾನು ಯಾರಿಗೂ ಕಾಣಬಾರದೆಂದು. ಆದರೆ ಈಗಿನ ಮನುಷ್ಯ ಸ್ವಭಾವಗಳು ಹೆಚ್ಚು ಸೂಕ್ಷ್ಮವಾಗಿದೆ. ಎಲ್ಲವನ್ನೂ ಅತಿಯಾಗಿಯೇ ಗಮನಿಸುತ್ತಾರೆ…..

ಈ ಸಮ್ಮೇಳನದಲ್ಲಿ ಮುಸ್ಲಿಂ ಸಾಹಿತಿಗಳನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಮತ್ತು ಇಲ್ಲ 13 ಮುಸ್ಲಿಂ ಲೇಖಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂಬ ಪ್ರತ್ಯುತ್ತರ……..

ಸರಿ ತಪ್ಪುಗಳ ಹುಡುಕಾಟ ಸರಿಯೇ ಅಥವಾ ಎಲ್ಲವನ್ನೂ ಮೌನವಾಗಿ ಸಹಿಸಬೇಕೇ ಅಥವಾ ಎಲ್ಲರ ಸ್ವಾತಂತ್ರ್ಯ ಗೌರವಿಸುತ್ತಾ ಸಮನ್ವಯ ‌ಸಾಧಿಸಬೇಕೇ ಅಥವಾ ಪರ್ಯಾಯ ಮಾರ್ಗಗಳ ಹುಡುಕಾಟ ನಡೆಸಬೇಕೇ……

ಈಗಾಗಲೇ ಒಂದಷ್ಟು ಜನ ಪರ್ಯಾಯವಾಗಿ ಇದೇ ಜನವರಿ 8 ರಂದು ಬೆಂಗಳೂರಿನಲ್ಲಿ ಜನ ಸಾಹಿತ್ಯ ಸಮ್ಮೇಳನ ನಡೆಸುವ ತಯಾರಿಯಲ್ಲಿದ್ದಾರೆ…..

ಒಂದು ಕಡೆ ಅತ್ಯಂತ ಮಹತ್ವದ ಐತಿಹಾಸಿಕ ಕನ್ನಡದ ನುಡಿ ಹಬ್ಬ ಇನ್ನೊಂದು ಕಡೆ ಅಷ್ಟೇ ಮಹತ್ವದ ಸಾಂಸ್ಕೃತಿಕ ಪ್ರತಿರೋಧ ಈ ಸಂಘರ್ಷ ಕನ್ನಡಿಗರ ಹಿತ ದೃಷ್ಟಿಯಿಂದ ಸಾಮಾಜಿಕವಾಗಿ ಅಷ್ಟು ಒಳ್ಳೆಯ ಬೆಳವಣಿಗೆಯಲ್ಲ….

ಆದರೆ ಈಗ ಕಾಲ ಮಿಂಚಿದೆ. ಸಮನ್ವಯ ಸಾಧ್ಯವಾಗುತ್ತಿಲ್ಲ. ಕುಳಿತು ಮಾತನಾಡಿ ಒಂದಷ್ಟು ಸರಿಪಡಿಸಿಕೊಳ್ಳುವ ವ್ಯವಧಾನ, ಆಸಕ್ತಿ ಮತ್ತು ಒಳ್ಳೆಯತನ ಕಾಣುತ್ತಿಲ್ಲ. ಈಗ ಮಾಡುವುದಾದರೂ ಏನು…….

ಪ್ರಗತಿಪರರು – ಬದಲಾವಣೆ ಬಯಸುವವರು – ಸಾಮರಸ್ಯ ಸೌಹಾರ್ದ ಇಷ್ಟ ಪಡುವವರು – ಪ್ರವಾಹದ ವಿರುದ್ಧ ಈಜುವ ಬಹುದೊಡ್ಡ ಜವಾಬ್ದಾರಿ ಇರುತ್ತದೆ. ಆದ ಕಾರಣ ಸಾಂಪ್ರದಾಯಿಕ ಶಕ್ತಿಗಳಿಗಿಂತ ಎರಡು ಮೂರು ಪಟ್ಟು ಹೆಚ್ಚು ತಾಳ್ಮೆ ವಿವೇಚನೆ ಪ್ರಬುದ್ದತೆ ಮತ್ತು ಪ್ರೀತಿ ಇರಬೇಕಾಗುತ್ತದೆ. ಪರ್ಯಾಯ ಹುಡುಕುವಾಗ ಸಂಘರ್ಷಕ್ಕಿಂತ ಹೆಚ್ಚು ಅಪ್ಪಿಕೊಳ್ಳುವ ಮತ್ತು ಪರಿವರ್ತಿಸುವ ಗುಣ ಇರಬೇಕಾಗುತ್ತದೆ..

ಯಾರದೋ ಒಬ್ಬ ವ್ಯಕ್ತಿಯ ಸೈದ್ಧಾಂತಿಕ ವಿರೋಧಕ್ಕಾಗಿ ಅಥವಾ ಅಸಮರ್ಪಕ ನಿರ್ವಹಣೆಗಾಗಿ ಆತನನ್ನು ಟೀಕಿಸುವುದು ಸರಿ ಇದೆ. ಆದರೆ ಕನ್ನಡದ ನುಡಿ ತೇರನ್ನು ಬಹಿಷ್ಕರಿಸಿದರೆ ಅದು ಉತ್ತಮ ನಡೆಯಾಗುವುದಿಲ್ಲ. ಬದಲಾವಣೆ ಮೂಲದಲ್ಲೇ ಆಗಬೇಕೆ ಹೊರತು ಸಮ್ಮೇಳನದ ಸಂದರ್ಭದಲ್ಲಿಯಲ್ಲ…..

ಪರ್ಯಾಯ ಜನ ಸಾಹಿತ್ಯ ಸಮ್ಮೇಳನ ಮಾಡುವುದು ಸಹ ಭಾಷಾ ಸಾಹಿತ್ಯದ ದೃಷ್ಟಿಯಿಂದ ಉತ್ತಮ ನಡೆ. ಆದರೆ ಹಾವೇರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಗಿದ ನಂತರ ಮಾಡಬೇಕು. ಅದು ನಡೆಯುವಾಗಲೇ ಇಲ್ಲಿ ಮತ್ತೊಂದು ನೆಡದರೆ ಸಂಘರ್ಷ ಹೆಚ್ಚಾಗುತ್ತದೆ. ಭಾಗವಹಿಸುವವರಿಗೂ ತೊಂದರೆಯಾಗುತ್ತದೆ.

ಪರ್ಯಾಯ ಮಾರ್ಗಗಳು ಸೇಡಿನ ರೂಪದಲ್ಲಿರದೆ ಸಹಬಾಳ್ವೆಯ ರೂಪ ಪಡೆದರೆ ಹೆಚ್ಚು ಆದರ್ಶ ಮತ್ತು ಅನುಕರಣೀಯವಾಗಿರುತ್ತದೆ. ತಪ್ಪು ಮಾಡಿದವರು ತಿದ್ದಿಕೊಳ್ಳಲು ಯೋಚಿಸುವಂತಿರಬೇಕು.

ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಆರೋಪಗಳನ್ನು ಸಹಿಸಿಕೊಳ್ಳಬೇಕು. ಪ್ರತ್ಯಾರೋಪಗಳು ವೈಯಕ್ತಿಕ ಸಂಬಂಧಗಳನ್ನು ಘಾಸಿಗೊಳಿಸುವಂತಿರಬಾರದು. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಚಿಂತನಾ ಸಾಮರ್ಥ್ಯವನ್ನು ಮೇಲ್ದರ್ಜೆಗೆ ಏರಿಸಬೇಕೆ ಹೊರತು ರಾಜಕೀಯ ಪ್ರೇರಿತ ಸಂಕುಚಿತ ಮನೋಭಾವ ಬೆಳೆಸಬಾರದು……..

ಆದ್ದರಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದ ದೃಷ್ಟಿಯಿಂದ ಹಾವೇರಿ ಸಮ್ಮೇಳನವೂ ಯಶಸ್ವಿಯಾಗಲಿ ಮತ್ತು ಅದರ ಕಾರ್ಯಕ್ರಮದ ರೂಪರೇಷೆಗಳ ಪಕ್ಷಪಾತದ ವಿರುದ್ಧ ಪ್ರತಿರೋಧದ ಜನ ಸಾಹಿತ್ಯ ಸಮ್ಮೇಳನವೂ ಯಶಸ್ವಿಯಾಗಲಿ. ಸಾಧ್ಯವಾದರೆ ಆಸಕ್ತಿ ಇರುವವರು, ಅವಕಾಶ ಸಿಕ್ಕರೆ ಎರಡೂ ಕಡೆ ಭಾಗವಹಿಸಿ…..

ತಪ್ಪುಗಳು ನಡೆಯುತ್ತಲೇ ಇರುತ್ತದೆ. ಕಸ ಬೀಳುತ್ತಲೇ ಇರುತ್ತದೆ. ಕೆಲವರಾದರೂ ಪೊರಕೆ ಹಿಡಿದು ಗುಡಿಸುತ್ತಾ ಸಾಗೋಣ ಮತ್ತೆ ಮತ್ತೆ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,

ವಿವೇಕಾನಂದ ಎಚ್. ಕೆ.

ಶಿವಮೊಗ್ಗದ ಸವಿತಾ ನಾಗಭೂಷಣ್ & ಗರ್ತಿಕೆರೆ ರಾಘಣ್ಣ ಅವರಿಗೆ ಕೆ ಎಸ್ ನ ಪ್ರಶಸ್ತಿ

0

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಎಸ್‌.ನರಸಿಂಹಸ್ವಾಮಿ ಟ್ರಸ್ಟ್ ನಿಡುವ ಕೆಲಸ ಸಾಹಿತ್ಯ’ ಹಾಗೂ
ಕಾವ್ಯ ಗಾಯನ ಪ್ರಶಸ್ತಿ’ಗೆ ಸವಿತಾ ನಾಗಭೂಷಣ, ಸರಜೂ ಕಾಟ್ಕರ್, ಸೇರಿದಂತೆ ನಾಲ್ವರು ಸಾಧಕರನ್ನು ಆಯ್ಕೆ ಮಾಡಲಾಗಿದೆ.

2021-22ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಶಿವಮೊಗ್ಗದ ಕವಯಿತ್ರಿ ಸವಿತಾ ನಾಗಭೂಷಣ್ ,2022-23ನೇ ಸಾಲಿನ ಕಾವ್ಯ ಗಾಯನ ಪ್ರಶಸ್ತಿಗೆ ಶಿವಮೊಗ್ಗದ ಗಾಯಕ ಗರ್ತಿಕೆರೆ ರಾಘಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. 2022-23ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಕವಿ ಸರಜೂ ಕಾಟ್ಕರ್ ಆಯ್ಕೆಯಾಗಿದ್ದಾರೆ.

2021 -22ನೇ ಸಾಲಿನ ಕಾವ್ಯ ಗಾಯನ ಪ್ರಶಸ್ತಿಗೆ ಗಾಯಕಿ ಎಂ.ಕೆ. ಜಯಶ್ರೀ, ಅವರನ್ನು ಆಯ್ಕೆ ಮಾಡಲಾಗಿದೆ .

ಪ್ರಶಸ್ತಿಗಳು ತಲಾ 25 ಸಾವಿರ ನಗದು, ಸ್ಮರಣಿಕೆಯನ್ನು ಒಳಗೊಂಡಿವೆ.

ಜ. 5ರಂದು ಮಂಡ್ಯದ ಡಾ. ಬಿ‌. ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ರೇಷ್ಮೆ, ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯನಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪತ್ರಿಕಾ ವಿತರಕರಿಗೆ ಸರ್ಕಾರ ಭದ್ರತೆ ಒದಗಿಸಬೇಕು-ಪತ್ರಕರ್ತ ಮಹೇಶ್

0

ಸೊರಬ: ಮಳೆ, ಗಾಳಿ, ಚಳಿಯನ್ನು ಲೆಕ್ಕಿಸದೇ ಪತ್ರಿಕಾ ವಿತರಣೆ ಮಾಡುವುದು ಸವಾಲಿನ ಕೆಲಸವಾಗಿದೆ. ಪತ್ರಿಕಾ ವಿತರಕರಿಗೆ ಸರ್ಕಾರ ಜೀವನ ಭದ್ರತೆ ಒದಗಿಸಬೇಕು ಎಂದು ಪತ್ರಕರ್ತ ಮಹೇಶ್ ಗೋಖಲೆ ಒತ್ತಾಯಿಸಿದರು.
ಪಟ್ಟಣದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಸೊರಬದಲ್ಲಿ 2023ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಸಾಮಾಜಿಕ ಜಾಲತಾಣಗಳು, ಅಂತರ್ಜಾಲ ಪತ್ರಿಕೋದ್ಯಮದ ಪೈಪೋಟಿಯ ನಡುವೆ ಪತ್ರಿಕೆಗಳು ಮುದ್ರಣವಾಗುವವರೆಗೂ ಹಲವು ಹಂತದಲ್ಲಿ ಕಾರ್ಯನಿರ್ವಹಿಸಲಾಗುತ್ತದೆ. ಆದರೆ, ಮುದ್ರಣಗೊಂಡ ಪತ್ರಿಕೆಗಳನ್ನು ಓದುಗನ ಮನೆ ಬಾಗಿಲಿಗೆ ತಲುಪಿಸುವ ಪತ್ರಿಕಾ ವಿತರಕರು ಪತ್ರಿಕೆಗಳಿಗೆ ಕಳಸವಿದ್ದಂತೆ ಎಂದರೆ ತಪ್ಪಾಗಲಾರದು. ಪತ್ರಿಕೆಗಳು ನೀಡುವ ಕಮಿಷನ್ ಆಧಾರದಲ್ಲಿ ಕಾರ್ಯನಿರ್ವಹಿಸುವ ಪತ್ರಿಕಾ ವಿತರಕರಿಗೆ ಜೀವನ ಭದ್ರತೆ, ನಿವೇಶನ, ವಾಹನ ಸೌಲಭ್ಯ, ವೃದ್ಧಾಪ್ಯದಲ್ಲಿ ವೇತನ ಸೇರಿದಂತೆ ಸರ್ಕಾರದಿಂದ ಸಾಧ್ಯವಾದಷ್ಟು ಸೌಲಭ್ಯಗಳನ್ನು ಒದಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸೊರಬ ಶಾಖೆ ಉಪಾಧ್ಯಕ್ಷ ಮುಹಮ್ಮದ್ ಆರೀಫ್, ಸದಸ್ಯ ಮಧುಕೇಶ್ವರ್, ಪತ್ರಿಕಾ ವಿತರಕರಾದ ಸುರೇಶ್, ಪುರುಷೋತ್ತಮ ಚಂದ್ರಗುತ್ತಿ ಸೇರಿದಂತೆ ಇತರರಿದ್ದರು.

ಸಿರಿಧಾನ್ಯ ಕೃಷಿಯಲ್ಲಿ ಕರ್ನಾಟಕ ದೇಶಕ್ಕೇ ಮಾದರಿ- ಬಿ.ಸಿ.ಪಾಟೀಲ್

0

ಜನರು “ಜಂಕ್ಫುಡ್ ಗುಲಾಮಗಿರಿ”ಯಿಂದ ಹೊರಬಂದು ಆರೋಗ್ಯಕರ ಆಹಾರ ಶೈಲಿಗೆ ಹೆಚ್ಚು ಒತ್ತು ನೀಡಬೇಕು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದ ಪೂರ್ವಭಾವಿ ಸಭಾ ಕಾರ್ಯಕ್ರಮವನ್ನು ಕೃಷಿ ಸಚಿವರು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.

2023 ರ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಿಸಲಾಗಿದೆ. ಅದರನ್ವಯ
ಪೂರ್ವಭಾವಿಯಾಗಿ ಸಭೆ ನಡೆಯುತ್ತಿದೆ.ಸಿರಿಧಾನ್ಯಬಳಕೆ ಮತ್ತು ಬೆಳೆಯುವಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ. ಕರ್ನಾಟಕ “ಸಿರಿಧಾನ್ಯಗಳ ರಾಜ”ಎಂದು ಕರೆಯಲಾಗಿದೆ.

ಮಸಾಲೆ ಉತ್ಪನ್ನಗಳು, ಸೌಂದರ್ಯವರ್ದಕ ಉತ್ಪನ್ನಗಳು,ಪರಿಸರ ಸ್ನೇಹಿ ಉತ್ಪನ್ನಗಳುಸೇರಿದಂತೆ ಹಲವು ಉತ್ಪನ್ನಗಳನ್ನು ಸಹ ಸಾವಯವ ಸಿರಿಧಾನ್ಯದಿಂದ ತಯಾರಿಸಲಾಗುತ್ತಿದ್ದೆ. ಪೌಷ್ಠಿಕ ಆಹಾರದ ಬಗ್ಗೆ ಜನ ಹೆಚ್ಚು ಉತ್ಸುಕರಾಗುತ್ತಿದ್ದಾರೆ. ಜಂಕ್ ಫುಡ್‌ಗಳ ಗುಲಾಮರು ಜನರಾಗಿದ್ದು ಇದರಿಂದ ಆರೋಗ್ಯ ಹದಗೆಡುತ್ತಿದ್ದೆ. ಹೀಗಾಗಿ ಜನರು ಇತ್ತೀಚೆಗೆ ಸಾವಯವ ಸಿರಿಧಾನ್ಯಗಳಿಗೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ. ಜನರು ಜಂಕ್ಪಪುಡ್ ಮಾದರಿಯನ್ನು ಕೈಬಿಡಬೇಕು.ಉತ್ತಮ ಆರೋಗ್ಯಕ್ಕಾಗಿ ಸಾವಯವ ಸಿರಿಧಾನ್ಯಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ಕರೆ ನೀಡಿದರು.

ಕೋವಿಡ್ ಸಾಂಕ್ತಾಮಿಕ ಬಳಿಕ ಜನರು ಆರೋಗ್ಯದತ್ತ ಹೆಚ್ಚೆಚ್ಚು ಗಮನ ಹರಿಸುತ್ತಿದ್ದಾರೆ. ಭವಿಷ್ಯದ ಆಹಾರ ಸಿರಿಧಾನ್ಯವಾಗಿದೆ‌. ಹೀಗಾಗಿ ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸಲು ಹಾಗೂ ಸಿರಿಧಾನ್ಯ ಸಾವಯವ ಬೆಳೆಗಾರರಿಗೆ ಉತ್ತೇಜನ ನೀಡಲು ಬೆಂಗಳೂರಿನ ಅರಮನೆ ಮೈದಾನ ತ್ರಿಪಿರವಾಸಿನಿಯಲ್ಲಿ ಜನವರಿ 20 ರಿಂದ‌22 ರವರೆಗೆ ಸಿರಿಧಾನ್ಯ ಸಾವಯವ ಮೇಳ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಕೇಂದ್ರದ ಸಚಿವರುಗಳು ಆಗಮಿಸುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುತ್ತಿದ್ದಾರೆ. ಜನವರಿ 14 ರಂದು ಸಿರಿಧಾನ್ಯ ಸಾವಯವ ಕುರಿತು ಜಾಗೃತಿಗೆ ಕಬ್ಬನ್‌ಪಾರ್ಕಿನಲ್ಲಿ ವಾಕ್‌ಥಾನ್ ನಡೆಯಲಿದೆ. ಈಗಾಗಲೇ ರಾಜ್ಯದ‌ ಎಲ್ಲಾ ಜಿಲ್ಲೆಗಳಲ್ಲಿ ಸಿರಿಧಾನ್ಯ ಸಾವಯವ ಮೇಳಗಳು ನಡೆಯುತ್ತಿವೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು.

ಸಿರಿಧಾನ್ಯಗಳ ತೆನೆಯಿಂದ ಕಾರ್ಯಕ್ರಮದಲ್ಲಿ
ಕಾರ್ಯಕ್ರಮದಲ್ಲಿ ಸಿರಿಧಾನ್ಯ ಮೇಳದ ವೆಬ್‌ಸೈಟ್ ಅನ್ನು ಲೋಕಾರ್ಪಣೆಗೊಳಿಸಲಾಯಿತು.

ಕೃಷಿ ಇಲಾಖೆಯ ನಿರ್ದೇಶಕಜಿ.ಟಿ.ಪುತ್ರನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಕೃಷಿ‌ಇಲಾಖೆಯ ಆಯುಕ್ತರಾದ ಶರತ್, ಕೆಪೆಕ್ ಅಧ್ಯಕ್ಷ ವಿರೂಪಾಕ್ಷಪ್ಪ ,ಕೆಮಿಕ್‌ನಿರ್ದೇಶಕ ಪದ್ಮನಾಭಯ್ಯ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಬಂತನಾಳ್ ಜಲಾನಯನ ಅಭಿವೃದ್ಧಿಇಲಾಖೆಯ ನಿರ್ದೇಶಕ ಶ್ರೀನಿವಾಸ್, ಅಪೆಡಾ ಜಿಎಂ, ರವೀಂದ್ರ ಸೇರಿದಂತೆ ಮತ್ತಿತ್ತರ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದು‌ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸ್ಥಳೀಯವಾಗಿ ಉದ್ದಿಮೆಗಳು ಹೆಚ್ಚಬೇಕು- ಎನ್.ಗೋಪಿನಾಥ್

0

ಶಿವಮೊಗ್ಗ: ಸ್ಥಳೀಯ ಉದ್ದಿಮೆದಾರರು ಹೆಚ್ಚಾಗಬೇಕು ಎಂಬುದು ವಾಣಿಜ್ಯ ಸಂಘದ ಆಶಯ. ಹೊಸ ಉದ್ಯಮದಾರರಿಗೆ ಸ್ವಂತ ಉದ್ಯಮ ಆರಂಭಿಸಲು ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡಲಾಗುತ್ತದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಅವರು ಹೇಳಿದರು.

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ 2ರ ಎಲ್‌ಬಿಎಸ್ ನಗರದಲ್ಲಿ ಕರ್ನಾಟಕ ಓನ್ ಕೇಂದ್ರ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರಿಗೆ ಹೆಚ್ಚು ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕು. ಇಂತಹ ಸಂಸ್ಥೆಗಳಿಂದ ಸಾರ್ವಜನಿಕರಿಗೆ ತ್ವರಿತಗತಿಯಲ್ಲಿ ಸರ್ಕಾರಿ ಸೇವೆಗಳನ್ನು ಕಲ್ಪಿಸಲು ಸಾಧ್ಯವಾಗುತ್ತದೆ. ಜನರು ಕೇಂದ್ರದ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಭಾರತ ದೇಶದ ಆರ್ಥಿಕವಾಗಿ ವಿಶ್ವದಲ್ಲೇ ಮೊದಲ ಸ್ಥಾನ ಗಳಿಸಲು ಉದ್ದಿಮೆದಾರರ ಸಂಖ್ಯೆ ಹೆಚ್ಚಾಗುವ ಜೊತೆಯಲ್ಲಿ ಆರ್ಥಿಕ ವಹಿವಾಟು ಅಧಿಕವಾಗಬೇಕು. ಹೊಸ ಉದ್ದಿಮೆದಾರರು ಸ್ಥಳೀಯ, ಜಿಲ್ಲೆ, ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಉದ್ಯಮ ಆರಂಭಿಸಿ ಯಶಸ್ವಿಯಾಗಬೇಕು ಎಂದು ಆಶಿಸಿದರು.

ಸೂಡಾ ಮಾಜಿ ಅಧ್ಯಕ್ಷ ಎಸ್.ದತ್ತಾತ್ರಿ ಮಾತನಾಡಿ, ಸ್ಥಳೀಯ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆಗಳನ್ನು ನೀಡಲು ಕರ್ನಾಟಕ ಓನ್ ಸಂಸ್ಥೆಯಿಂದ ಸಾಧ್ಯವಾಗಲಿದೆ. ನೂರಕ್ಕೂ ಹೆಚ್ಚು ಸೇವೆಗಳು ಕರ್ನಾಟಕ ಓನ್ ನಿಂದ ಸಾಧ್ಯವಾಗಲಿದೆ. ಪಹಣಿ, ವಿದ್ಯುತ್ ಬಿಲ್ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಯ ಸೇವೆಗಳು ಲಭ್ಯವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಆನ್‌ಲೈನ್ ನಲ್ಲಿ ಲಭ್ಯವಿರುವ ಸೇವೆಗಳು ದೊರೆಯಲಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಸದಸ್ಯ ಇ.ವಿಶ್ವಾಸ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಸುಪ್ರಿಯಾ, ಗಣೇಶ್ ಪ್ರಸಾದ್, ನಾಗವೇಣಿ, ರವಿ, ಎನ್.ವಿ.ಭಟ್, ಶ್ರೀಧರ್, ಬಿಂದು ವಿಜಯ್‌ಕುಮಾರ್ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿಸಾಧನೆಮಾಡುತ್ತಿದ್ದಾರೆ- ಆರಗ ಜ್ಞಾನೇಂದ್ರ

0

ಶಿವಮೊಗ್ಗ: ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸುತ್ತಿದ್ದು, ಉದ್ಯಮ, ಆಹಾರ ಕ್ಷೇತ್ರ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.

ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ನಗರದ ಒಕ್ಕಲಿಗರ ಮಹಿಳಾ ವೇದಿಕೆ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಮಲೆನಾಡು ಮೇಳಕ್ಕೆ ಚಾಲನೆ ನೀಡಿ ಮಾತನಾಡಿ, ಮಹಿಳೆಯರು ಸಮಾಜದ ಮುಖ್ಯವಾಹಿನಿಯಲ್ಲಿ ಮುನ್ನಡೆಯುತ್ತಿದೆ. ಅನೇಕ ಕ್ಷೇತ್ರದಲ್ಲಿ ಸಾಧನೆ ಮಾಡುವವರಿಗೆ ಸೂಕ್ತ ಪ್ರೋತ್ಸಾಹ ಹಾಗೂ ಬೆಂಬಲ ನೀಡಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿ ಸರ್ಕಾರ ಎಲ್ಲ ರೀತಿ ಕ್ರಮಗಳನ್ನು ಕೈಗೊಂಡಿದೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗುವ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತಿದೆ. ಮಹಿಳೆಯರ ಅತ್ಮರಕ್ಷಣೆಗೆ ಸಂಬಂಧಿಸಿ ಕರಾಟೆ ಹಾಗೂ ಅನೇಕ ಆತ್ಮರಕ್ಷಣಾ ಕಲೆಗಳನ್ನು ಕಲಿಸಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ಅಧ್ಯಕ್ಷೆ ಸುಪ್ರಿಯಾ ರಾಮಪ್ಪ ಮಾತನಾಡಿ, ಮೇಳಗಳಿಂದ ಪರಸ್ಪರ ಓಡನಾಟ ಸಂಪರ್ಕ ಹೆಚ್ಚುವುದರಿಂದ ಆರ್ಥಿಕವಾಗಿ ಸಬಲರಾಗುತ್ತಾರೆ. ಮಲೆನಾಡು ಮೇಳದಲ್ಲಿ ಹಾಸನ, ಬೆಂಗಳೂರು, ಚಿಕ್ಕಮಗಳೂರು, ತೀರ್ಥಹಳ್ಳಿ ಹಾಗೂ ಅನೇಕ ಭಾಗಗಳಿಂದ ಆಗಮಿಸಿದ್ದಾರೆ ಎಂದು ತಿಳಿಸಿದರು.

ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಚ್.ಬಿ.ಆದಿಮೂರ್ತಿ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಮಹಿಳಾ ವೇದಿಕೆಯ ಕಾರ್ಯದರ್ಶಿ ರಚನಾ ಸಂತೋಷ್, ಖಜಾಂಚಿ ಮಹಿಮಾ ಪ್ರಶಾಂತ್, ಸಂಸ್ಥಾಪಕ ಅಧ್ಯಕ್ಷೆ ಛಾಯಾದೇವಂಗಿ, ಮಾಜಿ ಅಧ್ಯಕ್ಷೆ ಅಂಜು ಆದಿಮೂರ್ತಿ, ಮಧುರಾ ಮಹೇಶ್, ಸುಜಯಾ ಪುರುಷೋತ್ತಮ, ಆಶಾ ಶ್ರೀಕಾಂತ್, ಪ್ರಭಾ ಆದಿಮೂರ್ತಿ, ಸುಪ್ರಿಯಾ ರಮೇಶ್, ಜ್ಯೋತಿ ಸುಬ್ಬೇಗೌಡ, ಕಾವ್ಯ ಸತೀಶ್, ಬಿಂದು ವಿಜಯ್‌ಕುಮಾರ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಮಟ್ಟದ ಪುಸ್ತಕ ಸಮಿತಿಗೆ ಆಯ್ಕೆಗಾಗಿ ಪುಸ್ತಕ ಕಳಿಸಲು ಅರ್ಜಿ ಆಹ್ವಾನ

0

ಶಿವಮೊಗ್ಗ:

2022 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಆಂಗ್ಲ, ಭಾರತೀಯ ಇತರೆ ಭಾಷೆಗಳ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2022 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ದಿನಾಂಕ: 31-01-2023 ರೊಳಗೆ ಕಾಪಿರೈಟ್ ಮಾಡಿಸಿರತಕ್ಕದ್ದು. ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು(ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು 560001 ಇಲ್ಲಿಗೆ ದಿ: 31-01-2023 ರ ಒಳಗೆ ಸಲ್ಲಿಸುವುದು.

ನಿಗದಿತ ಅರ್ಜಿ ನಮೂನೆ ಮತ್ತು ನಿಬಂಧನೆಗಳ ಕುರಿತಾದ ಮಾಹಿತಿಯನ್ನು ಇಲಾಖಾ ಅಂತರ್ಜಾಲ www.dpl.karnataka.gov.in ಹಾಗೂ ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು/ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿಗಳಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 080-22864990, 22867358 ನ್ನು ಸಂಪರ್ಕಿಸಬಹುದೆಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ತಿಳಿಸಿದ್ದಾರೆ.

ಶ್ರೀರಾಮಚಂದ್ರಾಪುರ ಮಠದಲ್ಲಿ ಸಾವಯವ ಸಿರಿ ಕಾರ್ಯಾಗಾರ

0

ಕೃಷಿ ಇಲಾಖೆ ಶಿವಮೊಗ್ಗ ಮತ್ತು ಧರ್ಮ ಚಕ್ರ ಟ್ರಸ್ಟ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜನವರಿ 09 ರ ಬೆಳಿಗ್ಗೆ 10.30 ಕ್ಕೆ ರಾಮಚಂದ್ರಾಪುರ ಮಠದ ಆವರಣ, ಹೊಸನಗರ ತಾಲ್ಲೂಕುನಲ್ಲಿ ಸಾವಯವ ಸಿರಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಾಗಾರದಲ್ಲಿ ಸಾವಯವ ಅಥವಾ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತಬಾಂಧವರು ಭಾಗವಹಿಸುವಂತೆ ಕೋರಲಾಗಿದೆ. ಆಸಕ್ತರು ಶಿವರಾಜಕುಮಾರ್ ಹೆಚ್.ಎಸ್, ಸಹಾಯಕ ಕೃಷಿ ನಿರ್ದೇಶಕರು, ಶಿವಮೊಗ್ಗ ಮೊ.ಸಂ: 8277932618, ಗಣೇಶ್ ಕಮ್ಮಾರ್, ಸಹಾಯಕ ಕೃಷಿ ನಿರ್ದೇಶಕರು ಹೊಸನಗರ 8277932684, ಶಶಿಧರ್ ಬಿ ಸಿ, ಸಹಾಯಕ ಕೃಷಿ ನಿರ್ದೇಶಕರು ಭದ್ರಾವತಿ 8277932648, ಸೀತಾರಾಮ್ ಐ ಎನ್, ಧರ್ಮಚಕ್ರ ಟ್ರಸ್ಟ್ ಹೊಸನಗರ 9886228350 ನ್ನು ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ವೈಕುಂಠ ಏಕಾದಶಿಯಂದು ತಿರುಪತಿ ತಿಮ್ಮಪ್ಪನ ಹುಂಡಿಗೆ ಕೋಟಿ ಕೋಟಿ ಕಾಣಿಕೆ

0

ತಿರುಮಲದಲ್ಲಿ ವೈಕುಂಠ ಏಕಾದಶಿಯ ಸೊಬಗು ಕಣ್ಣಿಗೆ ಹಬ್ಬವನ್ನುಂಟು ಮಾಡಿತ್ತು. ವೆಂಕಟೇಶ್ವರನ ಸ್ವರ್ಣ ರಥೋತ್ಸವ ಕೂಡಾ ಅದ್ಧೂರಿಯಾಗಿ ನೆರವೇರಿದ್ದು, ದೇಗುಲಗಳಲ್ಲಿ ಭಕ್ತಿಯ ಭಾವ ಮೇಳೈಸಿತ್ತು. ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಇತರೆ ರಾಜ್ಯಗಳ ಚುನಾಯಿತ ಪ್ರತಿನಿಧಿಗಳು, ನ್ಯಾಯಾಧೀಶರು, ಅಧಿಕಾರಿಗಳು, ಸೆಲೆಬ್ರಿಟಿಗಳು ಮತ್ತು ಇತರ ವಿಐಪಿಗಳು ಸೋಮವಾರ ವೈಕುಂಠ ಏಕಾದಶಿಯಂದು ತಿರುಮಲದಲ್ಲಿರುವ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ ಶ್ರೀನಿವಾಸನನ್ನು ಕಣ್ತುಂಬಿಕೊಂಡರು.

ವೈಕುಂಠ ಏಕಾದಶಿಯಂದು ತಿರುಪತಿ ತಿಮ್ಮಪ್ಪನ ಹುಂಡಿಗೆ ದಾಖಲೆ ಪ್ರಮಾಣದಲ್ಲಿ ಕಾಣಿಕೆ ಹರಿದುಬಂದಿದೆ. ವೈಕುಂಠ ಏಕಾದಶಿ ದಿನ ವ್ರತ ಆಚರಿಸಿ ಗೋವಿಂದನ ದರ್ಶನ ಪಡೆದ್ರೆ ಇಷ್ಟಾರ್ಥ ಸಿದ್ಧಿಯಾಗತ್ತದೆ ಎನ್ನುವ ನಂಬಿಕೆ ಇದೆ.

ಹೀಗಾಗಿ ಲಕ್ಷಾಂತರ ಭಕ್ತರು ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭೇಟಿ ನೀಡಿದ್ದು, ಒಂದೇ ದಿನದಲ್ಲಿ ತಿಮ್ಮಪ್ಪನ ಹುಂಡಿಗೆ ಬರೋಬ್ಬರಿ 7.68 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಇದು ಈವರೆಗಿನ ಗರಿಷ್ಠ ಮೊತ್ತವಾಗಿದೆ.

ಹೊಸ ವರ್ಷದ ಹಿಂದಿನ ದಿನವೇ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಡಿಸೆಂಬರ್ 31ರಿಂದಲೇ ತಿರುಮಲದಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಲ್ಲಲು ಪ್ರಾರಂಭಿಸಿದ್ದರು. ಕಾಲ್ನಡಿಗೆ ಮೂಲಕ ಬೆಟ್ಟ ಹತ್ತುವ ಭಕ್ತರ ಸಂಖ್ಯೆ ಕೂಡಾ ಅಧಿಕವಾಗಿತ್ತು.

ಶ್ರೀಸಿದ್ಧೇಶ್ವರರು ಅರಿವಿನಿಂದಲೇ ಗುರುವಾದವರು- ಶೇಖರ್ ಗೌಳೇರ್

0

ಸಿದ್ಧಗಂಗಾ ಶ್ರೀಗಳು ಹಾಗೂ ವಿಜಯಪುರದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಕನ್ನಡ ನಾಡಿನಲ್ಲಿ ಸರಳ ಬದುಕಿನ ಆದರ್ಶ ಸಾರಿದ ಮಹಾನ್ ಚೇತನರು ಎಂದು ನಿವೃತ್ತ ಪ್ರಾಚಾರ್ಯ ಶೇಖರ್ ಗೌಳೇರ್ ಹೇಳಿದರು.

ರಾಜೇಂದ್ರ ನಗರ ಬಡಾವಣೆಯ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಿದ್ದೇಶ್ವರ ಶ್ರೀಗಳು ಜಗತ್ತಿನ ಅನೇಕ ದಾರ್ಶನಿಕರ ಬಗ್ಗೆ, ಆಧ್ಯಾತ್ಮದ ಬಗ್ಗೆ ಅಧ್ಯಯನ ಮಾಡಿದ್ದರು. ದಾರ್ಶನಿಕರ ಆದರ್ಶಗಳಿಂದ ಸರಳ ಜೀವನಶೈಲಿ ರೂಢಿಸಿಕೊಂಡಿದ್ದರು. ಸಿದ್ದೇಶ್ವರ ಶ್ರೀಗಳು ಅರಿವಿನಿಂದಲೇ ಗುರು ಆಗಿದ್ದವರು ಎಂದು ತಿಳಿಸಿದರು.

ಶಿವಗಂಗಾ ಯೋಗಕೇಂದ್ರದ ರುದ್ರಾರಾಧ್ಯ ಮಾತನಾಡಿ, ಕೋಟ್ಯಾನುಕೋಟಿ ಜನಸಂಖ್ಯೆಯಲ್ಲಿ ಸಿದ್ಧೇಶ್ವರ ಸ್ವಾಮೀಜಿ ಅಂತಹ ಮಹಾನ್ ವ್ಯಕ್ತಿಗಳು ಸಿಗುವುದು ಅಪರೂಪ. ಅವರ ಪ್ರತಿಯೊಂದು ಪ್ರವಚನಗಳು ಕೂಡ ಪ್ರತಿಯೊಬ್ಬರ ಬದುಕಿಗೆ ದಾರಿದೀಪ ಎಂದು ಹೇಳಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಸಿದ್ದೇಶ್ವರ ಶ್ರೀಗಳು ಉತ್ತಮ ದಾರ್ಶನಿಕರಾಗಿದ್ದು, ಶ್ರೀಗಳ ಜೀವನ ನಮ್ಮೆಲ್ಲರಿಗೂ ಮಾರ್ಗದರ್ಶನ. ಎಲ್ಲರೂ ಅವರ ಸಂದೇಶಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.

ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ಸದಸ್ಯ, ನಿವೃತ್ತ ವಾರ್ತಾಧಿಕಾರಿ ಬಿ.ಎಸ್.ತಿಮ್ಮೋಲಿ ನುಡಿನ ನಮನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಅರ್ಥವಾಗುವ ರೀತಿಯಲ್ಲಿ ಉತ್ತಮ ಸಂದೇಶಗಳನ್ನು ನೀಡುತ್ತಿದ್ದರು ಎಂದರು.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಕತ್ತಿಗೆ ಚೆನ್ನಪ್ಪ, ಬಸವ ಮಂಟಪದ ಯೋಗೀಶ್ ನಿರ್ವಿಕಲ್ಪ, ವೀರಣ್ಣ ಹುಗ್ಗಿ, ಟ್ರಸ್ಟ್ ನಿರ್ದೇಶಕರಾದ ಕೆ.ಸಿ.ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.