Tuesday, March 31, 2026
Tuesday, March 31, 2026
Home Blog Page 1353

COVID 19 UPDATES & NOTIFICATIONS

0

No: NVBDCP/EST-72./Covid19/2020-21
Date: 22nd Dec 2022
Presently, the Covid-19 situation in the State is well under control. However, in the
light of emerging Covid-19 situation in few countries and the upcoming festive season of
Christmas and New Year, caution needs to be exercised. Govt. of India has recently issued
guidelines and Hon’ble Chief Minister and Honble Health Minister have also reviewed the
emerging Covid-19 scenario in the State.
In view of this, it is felt necessary to issue the following advisory / guidelines to General
Public.
⦁ It is strongly advised to wear face mask, particularly by the elderly and those with
comorbidities in all indoor areas and dosed places like pubs, bars & restaurants,
cinema halls, buses, flights, trains including metros, shopping malls, offices, etc.
⦁ All eligible are advised to take up the precautionary dose of vaccination at the
earliest.
⦁ All Respiratory symptomatics need to self-isolate and get tested immediately and
based on the results, abide by the standard protocol.
⦁ To maintain good physical and mental health, moderate physical exercise, breathing
exercise and meditation may be practiced.
Further the event organizers are expected to follow the below mentioned guidelines.
⦁ As far as possible the public social activities / events shall be kept outdoor or in well
ventilated areas and preferably in the day time, avoiding exposure to chill and cold in
the early mornings and late evenings.
⦁ It is also advised to ensure face masking for indoor events and ensure maintenance
of the basic social distancing norms in such gatherings.
⦁ Congregation of large number of people, more so in indoor areas needs to be strictly
avoided.
The State I District Health Authorities and BBMP Health Authorities need to ensure that
the above mentioned guidelines are properly communicated to General Public / event
organizers for compliance, in order to sustain the gains achieved so far in Covid-19
prevention and control.

ಮನಸ್ಸಿನಿಂದ ಮನಸ್ಸಿಗೆ -05

0

ನಾವೆಲ್ಲರೂ ನೆನಪಿಡಬೇಕಾದ – ಪ್ರೀತಿಯಿಂದ – ಹೃದಯದಾಳದಿಂದ ಕೃತಜ್ಞತೆ ಸಲ್ಲಿಸಬೇಕಾದ ಅತ್ಯಂತ ಮಹತ್ವದ ದಿನ…

ದೀರ್ಘವಾದರು ತಿನ್ನುವ ಅನ್ನಕ್ಕೆ – ರೈತರಿಗೆ ಪ್ರತಿ ವಂದನೆ ಸಲ್ಲಿಸಲು – ರೈತರ ಪರಿಸ್ಥಿತಿ ಅರ್ಥಮಾಡಿಕೊಳ್ಳಲು ಸಮಯ ಮಾಡಿಕೊಂಡು ತಾಳ್ಮೆಯಿಂದ ಓದಿ…

ರಾಷ್ಟ್ರೀಯ ರೈತ ದಿನ
( ಕಿಸಾನ್ ದಿವಸ್ )
ಡಿಸೆಂಬರ್ 23…
ಮಾಜಿ ಪ್ರಧಾನಿ ದಿವಂಗತ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದ ಅಂಗವಾಗಿ.,

ರೈತ ಹುತಾತ್ಮ ದಿನ
ಜೂನ್ 21.
( ಕರ್ನಾಟಕದಲ್ಲಿ ಮಾತ್ರ )
ನರಗುಂದ – ನವಲಗುಂದ ಹೋರಾಟದಲ್ಲಿ ಹುತಾತ್ಮರಾದ ರೈತರ ನೆನಪಿಗಾಗಿ…

ಅನ್ನದಾತ ಅನಾಥನಾಗುವ ಮುನ್ನ…….

ಅನ್ನಕ್ಕಾಗಿ ನಾವು ಪರದಾಡುವ ಮುನ್ನ.

ರೈತರಿಗೆ ಕೊಡಲು ನಮ್ಮ ಬಳಿ ಹಣವಿಲ್ಲ,
ರೈತರ ಸಂಕಷ್ಟ ಪರಿಹರಿಸಲು ನಮ್ಮ ಬಳಿ ಅಧಿಕಾರವೂ ಇಲ್ಲ,
ಸಣ್ಣ ಪುಟ್ಟ ಹೋರಾಟಗಳಿಗೆ ಕೈ ಜೋಡಿಸಿದರು ಉತ್ತಮ ಫಲಿತಾಂಶ ಕಾಣುತ್ತಿಲ್ಲ.

ಏಕೆಂದರೆ, ಪ್ರಾಮುಖ್ಯತೆ ಕೊಡಬೇಕಾದ ವಿಷಯಗಳನ್ನು ಮರೆಸಿ ಭಾವನಾತ್ಮಕ ಅಂಶಗಳನ್ನು ಮುನ್ನಲೆಗೆ ತಂದು ಇಡೀ ರೈತ ಸಮೂಹವನ್ನು ವಂಚಿಸಲಾಗುತ್ತಿದೆ.

ಮನರಂಜನೆಗೆ ಸಾಕಷ್ಟು ಪ್ರೇಕ್ಷಕರಿದ್ದಾರೆ,
ರಾಜಕಾರಣಕ್ಕಾಗಿ ಸಾಕಷ್ಟು ಹಿಂಬಾಲಕರಿದ್ದಾರೆ,
ಧಾರ್ಮಿಕ ಕೆಲಸಗಳಿಗೆ ಸಾಕಷ್ಟು ಭಕ್ತರಿದ್ದಾರೆ.

ಆದರೆ ರೈತರ ಕಷ್ಟಗಳಿಗೆ ಧ್ವನಿಯಾಗಲು ಮಾತ್ರ ಕೆಲವೇ ಜನರಿದ್ದಾರೆ.

ಅದಕ್ಕೆ ಕಾರಣ ಜನರಿಗೆ ತಿನ್ನುವ ಅನ್ನ ಬೆಳೆಯುವ ಕೃಷಿ ಎಂಬುದು ಏನು ಎಂದೇ ಸರಿಯಾದ ತಿಳಿವಳಿಕೆ ಇಲ್ಲ.

ದುಡಿದು ದುಡಿದು ಸವೆಯುತ್ತಿರುವ ರೈತರು…

ತಿಂದು ತಿಂದು ಕೊಬ್ಬುತ್ತಿರುವ ಕೆಲವರು…

ದುಡಿಯದೇ ತಿನ್ನುತ್ತಾ ಅನ್ನವೇ ವಿಷವಾಗಿ ಸಾಯುತ್ತಿರುವ ಹಲವರು…

ಕೃಷಿ ಮತ್ತು ರೈತ ನಮ್ಮ ಕಣ್ಣ ಮುಂದೆಯೇ ಬಿಕ್ಕಳಿಸುವುದನ್ನು ನೋಡುವ ದೌರ್ಭಾಗ್ಯ ನಮ್ಮದು…

ಏಳಿ ಎದ್ದೇಳಿ ಎಚ್ಚರಗೊಳ್ಳಿ ,
ಅರ್ಥಮಾಡಿಕೊಳ್ಳಿ ನೀವು ದಡ್ಡರೆಂದು,
ಆಗ, ನಿಮಗೆ ಅರಿವಾಗುತ್ತದೆ ನೀವು ಯಾರೆಂದು,
ಆಗ ನಿಮ್ಮ ಶೋಷಣೆಯ ಕಾರಣಗಳು ಅರ್ಥವಾಗುತ್ತದೆ,

ಬೆನ್ನು ಮೂಳೆಗೂ ಎಲುಬಿಲ್ಲದ ನಾಲಿಗೆಗೂ ಇರುವ ವ್ಯತ್ಯಾಸ,
ಆಗ ತೋರಿಸಿ ಈ ದುರಹಂಕಾರಿಗಳಿಗೆ ಅನ್ನದ ಮಹತ್ವ,
ಆಗ ನೋಡಿ ನಿಮ್ಮ ಕಾಲಿಗೆ ಬೀಳುತ್ತಾರೆ. ನೀವೇ ಅನ್ನದಾತರೆಂದು,
ಆಮೇಲೆ ಪ್ರತಿದಿನವೂ ನಿಮ್ಮನ್ನೇ ನೆನಪಿಸಿಕೊಳ್ಳುತ್ತಾರೆ,

ಅಲ್ಲಿಯವರೆಗೂ ನಿಮ್ಮ ದಿನ ನಿಮ್ಮ ತ್ಯಾಗ ಯಾರಿಗೂ ನೆನಪಾಗುವುದಿಲ್ಲ.
ಇದನ್ನು ಸಾಧ್ಯವಾಗಿಸಬೇಕಾಗಿರುವುದು ಶೇಕಡ 70% ರಷ್ಟು ಇರುವ ರೈತರ ವಿದ್ಯಾವಂತ ಮಕ್ಕಳು. ಅವರುಗಳು ಜಾಗೃತರಾದರೆ ಯಾರೂ ತಡೆಯಲು ಸಾಧ್ಯವಿಲ್ಲ.

ರೈತರಾಗುವುದು ವರವೋ ? ಶಾಪವೋ ?

ಅನ್ನದಾತ – ದೇಶದ ಬೆನ್ನೆಲುಬು – ರೈತನೇ ದೇವರು ಈ ಭಾವನಾತ್ಮಕ ನಂಬಿಕೆಗಳನ್ನು ಸ್ವಲ್ಪ ಪಕ್ಕಕ್ಕೆ ಸರಿಸಿ ವಾಸ್ತವ ಪರಿಶೀಲಿಸೋಣ…

ಈ ಕ್ಷಣದಲ್ಲಿ
” ತಿನ್ನವವರಿಗೆ ವರ,
ಬೆಳೆಯುವವರಿಗೆ ಶಾಪ “

ಮಂಗನಿಂದ ಮಾನವನಾದ ಕಾಲ ಮುಗಿದು ಕ್ರಮೇಣ ಮಾನವ ಮಂಗನಾಗುತ್ತಿರುವ ಈ ಸನ್ನಿವೇಶದಲ್ಲಿ ರೈತ ಮಾತ್ರ ಆಗಲೂ ಮಂಗನೇ ಈಗಲೂ ಮಂಗನೇ ಎಂದು ವಿಷಾದದಿಂದ, ದುಃಖದಿಂದ ಮತ್ತು ಆಕ್ರೋಶದಿಂದ ಹೇಳಬೇಕೆನಿಸುತ್ತದೆ.

ಎಲ್ಲಾ ಕ್ಷೇತ್ರಗಳು ಅಭಿವೃದ್ಧಿಯ ಪಥದಲ್ಲಿ ಸಾಕಷ್ಟು ಮುನ್ನಡೆಯುತ್ತಿರುವಾಗ ಶಿಕ್ಷಣ ಸಾಹಿತ್ಯ ಸಂಗೀತ ವಿಜ್ಞಾನ ಆರೋಗ್ಯ ಆಡಳಿತ ಸಾರಿಗೆ ಸಂಪರ್ಕ ದಿನದಿನಕ್ಕೂ ಹೊಸ ಹೊಸ ಆಯಾಮ ಪಡೆದುಕೊಳ್ಳುತ್ತಿರುವಾಗ ಭಾರತದ ಕೃಷಿ ಮಾತ್ರ ಎಲ್ಲೋ ಕೆಲವು ಸಣ್ಣ ಪುಟ್ಟ ಬದಲಾವಣೆ ಹೊರತುಪಡಿಸಿ ಮೂಲ ನಿಯಮಗಳು ಮಾತ್ರ ಇನ್ನೂ ಗತಕಾಲದ ಅಂಶಗಳನ್ನೇ ಅಳವಡಿಸಿಕೊಂಡಿದೆ.

ಭೂಮಿಯ ಉಪಯೋಗ, ಬಿತ್ತನೆ, ನೀರಾವರಿ, ಸಸ್ಯಗಳ ಬೆಳವಣಿಗೆ, ಕಟಾವು, ಸಂಗ್ರಹಣೆ, ಮಾರುಕಟ್ಟೆ,
ಬೆಲೆ ನಿಗದಿ, ಲಾಭ ಹಣದ ಉಪಯೋಗ, ನಷ್ಟದ ಪರಿಸ್ಥಿತಿಯ ನಿರ್ವಹಣೆ, ಕೌಟುಂಬಿಕ ನಿರ್ವಹಣೆ, ನಂಬಿಕೆಗಳು, ಅರಿವು ಮತ್ತು ಅವರ ಒಟ್ಟು ವ್ಯಕ್ತಿತ್ವ ಸಮಾಜದ ದೃಷ್ಟಿಯಲ್ಲಿ ಇನ್ನೂ ಹಾಸ್ಯಾಸ್ಪದವಾಗಿಯೇ ಇದೆ. ಅವರನ್ನು ಶೋಷಿಸಲು ಯಾವ ತಂತ್ರಗಳೂ ಬೇಡ. ಆತನ ವ್ಯಕ್ತಿತ್ವವೇ ಶೋಷಣೆಯನ್ನು ಸ್ವತಃ ತಾನೇ ಒಪ್ಪಿಕೊಳ್ಳುವ ಮನಸ್ಥಿತಿ ಹೊಂದಿದೆ.

ವ್ಯಕ್ತಿ ಮೂಲಭೂತವಾಗಿ ಪ್ರಜ್ಞಾವಂತನಾಗಿದ್ದರೆ ಆತ ಮಾಡುವ ಕೆಲಸಗಳು ಸಹ ಘನತೆಯಿಂದ ಕೂಡಿರುತ್ತದೆ. ವೈದ್ಯನೇ ಇರಬಹುದು, ಇಂಜಿನಿಯರೇ ಇರಬಹುದು, ಚಾಲಕ ಶಿಕ್ಷಕ ವಕೀಲ ರಾಜಕಾರಣಿ ವ್ಯಾಪಾರೋದ್ಯಮಿ ಯಾರೇ ಆಗಲಿ ಧೃಡ ಮನಸ್ಸಿನ ಅರಿವಿರುವ ವ್ಯಕ್ತಿತ್ವ ಅವನದಾಗಿದ್ದರೆ ಆತ ಯಾವುದೇ ವ್ಯವಸ್ಥೆಯಲ್ಲಿ ಕನಿಷ್ಠ ಉತ್ತಮ ಬದುಕನ್ನು ರೂಪಿಸಿಕೊಳ್ಳಬಹುದು.

ಆದರೆ, ಮೂಲ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ ಯಾವುದೇ ಕೆಲಸ ಮಾಡಿದರೂ ಆತ ಸೋಲುವ ಸಂಕಷ್ಟಕ್ಕೆ ಗುರಿಯಾಗುವ ಸಾಧ್ಯತೆಯೇ ಹೆಚ್ಚು.

ವಾಸ್ತವವಾಗಿ ಭಾರತೀಯ ಬಹುತೇಕ ರೈತರು ಸಾಮಾನ್ಯ ಜ್ಞಾನದಿಂದ ವಂಚಿತರಾಗಿದ್ದಾರೆ. ಜಾಗತೀಕರಣದ ಸ್ಪರ್ಧಾತ್ಮಕ ಬದಲಾವಣೆಗಳನ್ನು ಗಮನಿಸಲೇ ಸಾಧ್ಯವಾಗದಂತ ಕತ್ತಲೆಯಲ್ಲಿ ಮುಳುಗುತ್ತಿದ್ದಾರೆ. ರಾಜಕಾರಣಿಗಳ, ಮಧ್ಯವರ್ತಿಗಳ, ವ್ಯಾಪಾರಿ ವಾಣಿಜ್ಯೋದ್ಯಮಿಗಳ ಬಲೆಯೊಳಗೆ ಬಹು ಸುಲಭವಾಗಿ ಸಿಕ್ಕಿಹಾಕಿಕೊಂಡಿದ್ದಾರೆ.

ಬಲಿಷ್ಠ ರಕ್ಷಣಾತ್ಮಕ ಆಡಳಿತ ವ್ಯವಸ್ಥೆ ಹೊಂದಿರುವ ಸರ್ಕಾರದ ವಿರುದ್ಧ ಇನ್ನೂ ಹಳೆಯ ಅಸ್ತ್ರಗಳಾದ ಪ್ರತಿಭಟನೆ, ಮುತ್ತಿಗೆ, ಉಪವಾಸ, ಸತ್ಯಾಗ್ರಹ ಎಂಬ ಮೊಂಡಾದ ಕತ್ತಿಯನ್ನು ಉಪಯೋಗಿಸುತ್ತಿದ್ದಾರೆ.

ಅತಿಯಾದ ಜನಸಂಖ್ಯೆಯ ಪರಿಣಾಮ ಮತ್ತು ಬಡತನ ಅಜ್ಞಾನದ ಕಾರಣದಿಂದ ಅನಿವಾರ್ಯವಾಗಿ ಒಡೆದು ಆಳುವ ರಾಜಕೀಯ ಪಕ್ಷಗಳ ಒತ್ತಡಕ್ಕೆ ಒಳಗಾಗುತ್ತಾರೆ ಮತ್ತು ಅತಿಯಾದ ಹಣದ ಹರಿವಿನಿಂದ ಹಾಗು ಹಣದ ಮಹತ್ವದಿಂದ ರೈತನೆಂಬುದು ಶಾಪವಾಗಿ ಮಾರ್ಪಟ್ಟಿದೆ.

ಇದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಎಂಬುದನ್ನು ಮರೆಯದಿರಿ. ಮತ ಎಂಬುದು ನಮ್ಮ ಮತಿಯ ( ಮನಸ್ಸಿನ ) ಅಸ್ತ್ರವಾದಾಗ…

ಒಂದು ವೇಳೆ ಹೊಸ ನಾಯಕತ್ವದ ಹೊಸ ಚಿಂತನೆಯ ಹೊಸ ಗಾಳಿಯೊಂದು ಬಲವಾಗಿ ರೈತರ ಮನಸ್ಸಿನಲ್ಲಿ ಬೀಸಿ ಅವರನ್ನು ಪ್ರಬುದ್ದತೆಯೆಡಗೆ ಆಧುನಿಕತೆಯೆಡೆಗೆ,
ಸ್ವತಂತ್ರ ಚಿಂತನೆಯೆಡೆಗೆ ಮುನ್ನಡೆಸಿದರೆ…

ವಿಧಾನಸೌದ – ಪಾರ್ಲಿಮೆಂಟು, ಅಧಿಕಾರಶಾಹಿ, ವ್ಯಾಪಾರಿಗಳು, ಮಧ್ಯವರ್ತಿಗಳು,
ವೃತ್ತಿನಿರತರು,
ಅಷ್ಟೇ ಏಕೆ,
ಇಡೀ ವ್ಯವಸ್ಥೆಯೇ ಬುಡಮೇಲಾಗಿ

ರೈತನೇ ಅನ್ನದಾತ. ನಮ್ಮ ಬದುಕಿನ ಜೀವ ದ್ರವ್ಯ ರೈತನೇ

ಎಂದು ಕೂಗಿ ಹೇಳುತ್ತಾ ಎಲ್ಲರೂ ಆತನ ಬಗ್ಗೆ ಘನತೆಯಿಂದ ನಡೆದುಕೊಳ್ಳುವ ದಿನಗಳು ಬರುತ್ತದೆ.

ಮುಖ್ಯವಾಗಿ ರೈತನನ್ನು ಹಾಸ್ಯಾಸ್ಪದವಾಗಿ ನೋಡುವ ಮನರಂಜನಾ ಉದ್ಯಮ, ರಾಜಕೀಯ ವ್ಯವಸ್ಥೆ, ವಾಣಿಜ್ಯೋಧ್ಯಮ, ಮಧ್ಯವರ್ತಿ ವೃತ್ತಿಯಲ್ಲಿರುವವರು ತಾವೇ ಹಾಸ್ಯಾಸ್ಪದವಾಗುತ್ತಾರೆ..

ಆ ಹೊಸ ನಾಯಕತ್ವ ಮತ್ತು ಚಿಂತನೆಯ ತಂಗಾಳಿಗಾಗಿ ಕಾಯುತ್ತಿರುವ……….

ಹಾಗಾಗಲಿ ಎಂದು ಆಶಿಸುತ್ತಾ …………….

ನನ್ನ ಪ್ರೀತಿಯ ಗೆಳೆಯ ಗೆಳತಿಯರೇ……

ನಿಂಬೆ ಹಣ್ಣು ಮಾರುವ ಅಜ್ಜಿಯ ಬಳಿ ಚೌಕಾಸಿ ಮಾಡದಿರಿ…….

ಸೊಪ್ಪಿನ ಅಜ್ಜನ ಬಳಿ ಕೊಸರಾಡದಿರಿ…….

ಕಡಲೆಕಾಯಿ ಮಾರುವವರ ಹತ್ತಿರ ಜಗಳವಾಡದಿರಿ……..

ಹಣ್ಣಿನವನ ಹತ್ತಿರ ಪೌರುಷ ತೋರದಿರಿ…..

ಎಳನೀರಿನವರ ಬಳಿ ಜುಗ್ಗುತನದಿಂದ ವರ್ತಿಸದಿರಿ……..

ಹೂವಿನವರ ಹತ್ತಿರ ನಿಮ್ಮೆಲ್ಲಾ ಜಿಪುಣತನ ಖರ್ಚುಮಾಡದಿರಿ…….

ಗೊತ್ತೇ ನಿಮಗೆ ಹಣ್ಣು ತರಕಾರಿ ಸೊಪ್ಪು ಬೇಳೆಕಾಳುಗಳು ಭತ್ತ ಬೆಳೆಯುವವರ ಕಷ್ಟ,…..

ಗೊತ್ತೇ ನಿಮಗೆ ಅವು ಬೆಳೆಯಲು ಎಷ್ಟು ದಿನ ಬೇಕೆಂದು……

ಗೊತ್ತೇ ನಿಮಗೆ ಅದು ಫಸಲಾಗಲು ಎಷ್ಟು ಜನರು ಶ್ರಮಪಡಬೇಕೆಂದು…..

ಗೊತ್ತೇ ನಿಮಗೆ ಅದಕ್ಕೆ ತಗಲುವ ಖರ್ಚು ಎಷ್ಟೆಂದು……….

ಗೊತ್ತೇ ನಿಮಗೆ ಅದರ ಆರೈಕೆ ಎಷ್ಟು ಕಷ್ಟವೆಂದು…….

ಗೊತ್ತೇ ನಿಮಗೆ ಅದರ ಕಟಾವಿನಲ್ಲಿ ಸುರಿಯುವ ಬೆವರು ಎಷ್ಟೆಂದು…….

ಗೊತ್ತೇ ನಿಮಗೆ ಅದರ ಸಾಗಾಣಿಕೆಯ ಕರ್ಮಕಾಂಡ………

ಗೊತ್ತೇ ನಿಮಗೆ ಅದರಲ್ಲಿ ಆಗುವ ಸೋರಿಕೆಯ ನಷ್ಟ ಎಷ್ಟೆಂದು…….

ಗೊತ್ತೇ ನಿಮಗೆ ಇಷ್ಟಾದರೂ ಅದಕ್ಕೆ ಸಿಗುವ ಪ್ರತಿಫಲ ಎಷ್ಟೆಂದು…..

ನಿಮ್ಮ ಮನೆಯಲ್ಲಿ ಬೇಯುವ ಅನ್ನ ಕಂಪ್ಯೂಟರ್ ನಲ್ಲಿ ತಯಾರಾದದ್ದಲ್ಲ……

ನೀವು ಊಟ ಮಾಡುವ ತರಕಾರಿ ಇಂಟರ್ನೆಟ್ ನಲ್ಲಿ ಬೆಳೆದದ್ದಲ್ಲ……

ಅದು ರೈತರ ಬೆವರ ಹನಿಗಳಿಂದ ಬಸಿದದ್ದು………..

ತಾಕತಿದ್ದರೆ Pizza – Burger ಹೋಟೆಲ್ ಗಳಲ್ಲಿ ಚೌಕಾಸಿ ಮಾಡಿ……..

ಧೈರ್ಯವಿದ್ದರೆ Shopping mall ಗಳಲ್ಲಿ ಕೊಸರಾಡಿ…

ಶಕ್ತಿಯಿದ್ದರೆ Multiplex theater ಟಿಕೆಟ್ ಕೌಂಟರ್ ನಲ್ಲಿ ಜಗಳವಾಡಿ……..

ಸದ್ಯಕ್ಕೆ ಸಾಮಾನ್ಯರಿಗೆ ಊಟಕ್ಕೇನು ಕೊರತೆ ಇಲ್ಲ,
ರಾಜಕಾರಣಿಗಳಿಗೆ ಓಟು ಕೊಳ್ಳಲು ಸಮಸ್ಯೆ ಇಲ್ಲ,
ಉದ್ಯಮಿಗಳಿಗೆ ವ್ಯಾಪಾರಕ್ಕೇನು ತೊಂದರೆ ಇಲ್ಲ,……

ಡಾಕ್ಟರು, ಆಕ್ಟರು, ಮೇಷ್ಟರು, ಲಾಯರು, ಆಡಿಟರು, ಬ್ರೋಕರು, ಆಫೀಸರು ಯಾರಿಗೂ ತೊಂದರೆ ಏನೂ ಇಲ್ಲ….

ನೋಡೋಣ ಮುಂದೆ..

ರೈತರೆಲ್ಲ ವಿಷ ಕುಡಿದು ಸತ್ತ ಮೇಲೆ, ಊಟಕ್ಕೆ ತೊಂದರೆಯಾದ ಮೇಲೆ ರೈತರನ್ನು ನೆನಪಿಸಿಕೊಳ್ಳೋಣ…….

ಅಲ್ಲಿಯವರೆಗೂ ಚೆನ್ನಾಗಿ ಊಟ ಮಾಡ್ಕೊಂಡು ಎಲ್ರೂ ಆರಾಮವಾಗಿರಿ………

ಬೆಳಗಿನ ಬಿಸಿ ಬಿಸಿ ಕಾಫಿ ಟೀ,
ನಂತರದ ಉಪ್ಪಿಟ್ಟು ಚಿತ್ರಾನ್ನ ಇಡ್ಲಿ ವಡೆ ದೋಸೆ,
ಮಧ್ಯಾಹ್ನದ ರೊಟ್ಟಿ ಚಪಾತಿ ಮುದ್ದೆ ಅನ್ನ, ಸಂಜೆಯ ಪಾನಿಪುರಿ, ಮಸಾಲಾ ಪುರಿ, ಬೇಲ್ ಪುರಿ, ವಡಾ ಪಾವ್, ಪಾವ್ ಬಾಜಿ, ರಾತ್ರಿಯ ಚಿಕನ್ ಮಟನ್ ರೋಟಿ, ದಾಲ್ ಪಾಲಾಕ್, ದೋಕ್ಲಾ, ಕಿಚಡಿ ಎಲ್ಲಾ ದುಡ್ಡು ಕೊಟ್ಟರೆ ಸಿಗುತ್ತದೆ.
ಮನೆಗೇ ತಂದು ಕೊಡುತ್ತಾರೆ.

ಫಾದರ್ಸ್ ಡೇ, ಮದರ್ಸ್ ಡೇ, ಚಿಲ್ಡ್ರನ್ಸ್ ಡೇ, ವ್ಯಾಲೆಂಟೈನ್ ಡೇ, ಆ ಡೇ ಈ ಡೇ….ಎಲ್ಲಾ ಸಂಭ್ರಮದಿಂದ ಆಚರಿಸಿ…..

ನೋಡೋಣ ಗಾಡಿ ಹೀಗೆ ಎಷ್ಟು ದೂರ ಹೋಗುತ್ತೆ ಅಂತ……….

ರೈತರ ಬೆವರಿನ ಘಮಲು,
ಶ್ರಮದ ನಿಟ್ಟುಸಿರು,
ನಿರಾಸೆಯ ಆಕ್ರಂದನ,
ನೋವಿನ ಕೂಗು,
ಈ ಸಮಾಜಕ್ಕೆ ತಟ್ಟುವವರೆಗೂ……

ಮನುಷ್ಯ ಪ್ರಾಣಿಗಳ ಸುಖಕ್ಕೆ ತೊಂದರೆಯೇನು ಇಲ್ಲ……

ಆತ್ಮವಂಚಕರು
ನಾವು
ಆತ್ಮವಂಚಕರು…

ಕ್ಷಮಿಸಿ,

ಇದು ಯಾರ ವಿರುದ್ಧದ ದ್ವೇಷವೂ ಅಲ್ಲ,
ನಿಮ್ಮ ಮನಸ್ಸಿನ ಜಾಗೃತಿಗಾಗಿ,
ನಿಮ್ಮ ಗಮನ ಸೆಳೆಯಲು,
ರೈತರ ಶ್ರಮವನ್ನು ನಿಮಗೆ ನೆನಪಿಸಲು,
ಆಹಾರದ ಮಹತ್ವ ಸಾರಲು ಮಾತ್ರ…

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,

ಬರಹ ಕೃಪೆ: ವಿವೇಕಾನಂದ ಎಚ್. ಕೆ.

ಕೆನರಾ ಬ್ಯಾಂಕ್ ಉದ್ಯೋಗ ತರಬೇತಿ ಸಂಸ್ಥೆಯ ಚಟುವಟಿಕೆ ಉದ್ಘಾಟನೆ

0

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರಿನಲ್ಲಿ ಲಘು ವಾಹನ ಚಾಲನಾ ತರಬೇತಿ ಮತ್ತು ಕಂಪ್ಯೂಟರ್ ಡಿಟಿಪಿ ತರಬೇತಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀ ಸಂದೀಪ್ ರಾವ್ ಡಿಜಿಎಂ ಕೆನರಾ ಬ್ಯಾಂಕ್ ಕೇಂದ್ರಯಾ ಕಛೇರಿ ಶಿವಮೊಗ್ಗ, ಜಿಲ್ಲಾ ಪಂಚಾಯತಿಯ ಶ್ರೀಮತಿ ನಂದಿನಿ ಯೋಜನಾ ನರ‍್ದೇಶಕರು, ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಬಿರರ‍್ಥಿಗಳಿಗೆ ತರಬೇತಿಯ ಮಹತ್ವವನ್ನು ವಿವರಿಸುವುದರ ಜೊತೆಗೆ LLR ಲೈಸೆನ್ಸ್ ವಿತ್ತರಿಸಿದರು.

ಈ ಸಂದರ್ಭದಲ್ಲಿ ಶ್ರೀ ಯತೀಶ್ ದೇವಯ್ಯ LDDM ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಶಿವಮೊಗ್ಗ ಸಂಸ್ಥೆಯ ನಿರ್ದೇಶಕರಾದ ಸೀತಾರಾಮ್ ಎನ್ ಭಟ್ ,ಉಮೇಶ್ ಮತ್ತು ಯತಿರಾಜ್, ತರಬೇತುದಾರರಾದ ಆರೀಪ್, ಲೋಹಿತ್ ಮತ್ತು ಸುರೇಶ್ ವೈ ಹಳ್ಳಿ ಉಪಸ್ಥಿತರಿದ್ದರು.

ಎನ್ಇಪಿ ಯಿಂದ ವಿದ್ಯಾರ್ಥಿಗಳ ಜ್ಞಾನಮಟ್ಟ ವೃದ್ಧಿ- ಪ್ರೊ.ವೀರಭದ್ರಪ್ಪ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಿಗೆ ಬಹುಶಿಸ್ತೀಯ ವಿಷಯಗಳನ್ನು ಆಯ್ಕೆಮಾಡಿಕೊಂಡು ಅಧ್ಯಯನಿಸಲು ಅವಕಾಶ ನೀಡುವುದರಿಂದ ಶಿಕ್ಷಣದ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಜ್ಞಾನಮಟ್ಟ ವೃದ್ಧಿಯಾಗಲಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ಕುವೆಂಪು ವಿವಿ ಜ್ಞಾನಸಹ್ಯಾದ್ರಿ ಆವರಣದಲ್ಲಿರುವ ವಿಶ್ವವಿದ್ಯಾಲಯ ಕಲಾ ಮತ್ತು ವಾಣಿಜ್ಯ ಕಾಲೇಜಿನ 2022-23ನೇ ಸಾಲಿನ ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆ, ರಾಷ್ಟ್ರೀಯಯ ಸೇವಾ ಯೋಜನೆ, ಯುವರೆಡ್‌ಕ್ರಾಸ್ ಘಟಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆಯನ್ನು ವಿವಿಯ ಬಸವ ಸಭಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೆರವೇರಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಜೊತೆಗೆ ಪ್ರಸ್ತುತ ಇರುವ ಉನ್ನತ ಶಿಕ್ಷಣದ ನೊಂದಣಿ ಪ್ರಮಾಣವನ್ನು 50ಕ್ಕೆ ಏರಿಸುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬಹುಶಿಸ್ತೀಯ ಅಧ್ಯಯನದತ್ತ ಮುಖಮಾಡಿ ಹೆಚ್ಚು ಜ್ಞಾನಗಳಿಸುವ ಅವಕಾಶ ಸದುಪಯೋಗಪಡಿಸಿಕೊಂಡು ಉತ್ತಮ ಜ್ಞಾನಕೌಶಲ್ಯಗಳೊಂದಿಗೆ ದೇಶದ ಬೆಳವಣಿಗೆಗೆ ತಮ್ಮ ಕೊಡುಗೆ ನೀಡಬೇಕು ಎಂದರು.

ವಿಶ್ವವಿದ್ಯಾಲಯ ಆವರಣದಲ್ಲಿರುವ ವಿಶ್ವವಿದ್ಯಾಲಯ ಕಲಾ ಮತ್ತು ವಾಣಿಜ್ಯ ಕಾಲೇಜನ್ನು ವಿವಿಯ ಘಟಕ ಕಾಲೇಜಾಗಿ ಪರಿಗಣಿಸಲು ನಿರ್ಧರಿಸಲಾಗಿದೆ. ಸದ್ಯದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿವಿಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ, ಕಾಲೇಜಿನ ಪ್ರಾಂಶುಪಾಲರಾದ ಡಾ. ಎಚ್. ಎಂ. ಧರ್ಮೇಗೌಡ, ಸೇರಿದಂತೆ ಕಾಲೇಜಿನ ಎಲ್ಲ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯವಿದೆ- ಮಿಥುನ್ ಕುಮಾರ್

0

ಸಮಾಜದಲ್ಲಿ ಜವಬ್ದಾರಿಯುತ ಪ್ರಜೆಯಾಗಿ ರೂಪುಗೊಳ್ಳಲು ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರು ಹೇಳಿದರು.

ಶಿವಮೊಗ್ಗದ ಗೋಪಾಲ ಬಡಾವಣೆಯಲ್ಲಿರುವ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್‌, ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾಜಿಕ ಜವಬ್ದಾರಿ ಮರೆಯಾಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಬೇಕಾದ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶೈಕ್ಷಣಿಕ ಹಂತದಲ್ಲಿಯೇ ಮಕ್ಕಳಿಗೆ ಮೌಲ್ಯಯುತ ಶಿಕ್ಷಣದ ಜೊತೆಗೆ ಶುದ್ಧ ಚಾರಿತ್ಯ ತುಂಬಿದಲ್ಲಿ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ ಎಂದರು.

ಮಕ್ಕಳು ಪ್ರೌಢ ಹಂತಕ್ಕೆ ತಲುಪಿದಾಗ ಬೇರೆ ವಸ್ತುಗಳ ಕಡೆ ಬಹಳ ಬೇಗ ಆಕರ್ಷಿತರಾಗುತ್ತಾರೆ. ಈ ಹಂತದಲ್ಲಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಿಳಿದು ಸರಿದಾರಿಯಲ್ಲಿ ನಡೆದಾಗ ಮಾತ್ರ ಉತ್ತಮ ನಾಗರಿಕನಾಗಲು ಸಾಧ್ಯ. ಸಮಾಜದಲ್ಲಿ ಉತ್ತಮ ನಾಗರಿಕರ ಸಂಖ್ಯೆ ಹೆಚ್ಚಿದರೆ ಅಪರಾಧ ಕೃತ್ಯಗಳು ತಾನಾಗಿಯೇ ಕಡಿಮೆಯಾಗುತ್ತವೆ. ವಿದ್ಯಾರ್ಥಿ ದಿಸೆಯಲ್ಲೇ ಮಕ್ಕಳು ಜೀವನದಲ್ಲಿ ಸ್ಪಷ್ಟ ಗುರಿ ಉದೇಶ ಹೊಂದಿರುಬೇಕು. ಮಾದಕ ವಸ್ತುಗಳ ವಿರುದ್ಧ ಸ್ವಯಂ ನಿಯಂತ್ರಣ ಮಾಡಿಕೊಂಡಲ್ಲಿ ಇದಕ್ಕೆ ಬಲಿಯಾಗಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡು ಸಮಾಜಕ್ಕೆ ಉತ್ತಮ ಕೊಡಗೆ ನೀಡಬೇಕು ಎಂದು ಕರೆ ನೀಡಿದರು.

ಪತ್ರಕರ್ತರ ಕಾರ್ಯ ಅರ್ಥಪೂರ್ಣ:
ನಾನು ಹಲವಾರು ಜಿಲ್ಲೆಗಳಲ್ಲಿ ಪತ್ರಕರ್ತರ ಸಂಘಗಳ ಚಟುವಟಿಕೆಗಳನ್ನು ಹತ್ತಿರದಿಂದ ಗಮನಿಸಿದ್ದೇನೆ. ಆದರೆ, ಶಿವಮೊಗ್ಗ ಜಿಲ್ಲಾ ಕಾರ್ಯಕರ್ತರ ಸಂಘದ ಕಾರ್ಯಚಟುವಟಿಕೆ ಬಹಳ ವಿಭಿನ್ನವಾಗಿದೆ. ಪತ್ರಕರ್ತ ವೃತ್ತಿ ಜೊತೆಗೆ ಸಮಾಜ ಮುಖಿಕಾರ್ಯದಲ್ಲಿ ಸಂಘ ಭಾಗಿಯಾಗುತ್ತಿರುವುದು ನಿಜಕ್ಕೂ ಅರ್ಥಪೂರ್ಣ. ನಿಮ್ಮ ಸುತ್ತಮುತ್ತ ಪ್ರದೇಶದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ನಡೆಯತ್ತಿದ್ದರೆ ಅಂತಹ ಘಟನೆಗಳನ್ನು ಪೋಲೀಸರ ಗಮನಕ್ಕೆ ತಂದರೆ ಸಮಾಜಘಾತಕ ಕೃತ್ಯಗಳನ್ನು ತಡೆಯಬಹುದು. ಪೊಲೀಸ್ ಇಲಾಖೆಗೆ ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಜಿ.ಕೆ.ಮಿಥುನ್‌ಕುಮಾರ್ ತಿಳಿಸಿದರು.

ಪ್ರೆಸ್‌ಟ್ರಸ್ಟ್‌ ಅಧ್ಯಕ್ಷ ಎನ್.ಮಂಜುನಾಥ್ ಮಾತನಾಡಿ, ಮಕ್ಕಳನ್ನು ಗಾಂಜಾದಂತ ಮಾದಕ ವಸ್ತುಗಳಿಂದ ದೂರ ಇರಿಸುವ ಜೊತೆಗೆ ಇತ್ತೀಚೆಗೆ ಮಾದಕ ವಸ್ತುವಿನಂತಾಗಿರುವ ಮೊಬೈಲ್‌ನಿಂದಲೂ ಮಕ್ಕಳನ್ನು ದೂರ ಇಡಬೇಕಾದರ ಸನ್ನಿವೇಶ ನಿರ್ಮಾಣವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ರಾಮಕೃಷ್ಣ ವಿದ್ಯಾನಿಕೇತನ ಕಾರ್ಯದರ್ಶಿ ಶೋಭಾ ವೆಂಕಟರಮಣ ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಣ ಎಸ್.ಸಿ.ತೀರ್ಥೇಶ್ ಸ್ವಾಗತಿಸಿದರು, ವಿದ್ಯಾರ್ಥಿನಿ ವರ್ಷಿಣಿ ತಂಡ ಶ್ಲೋಕ ಹಾಡಿದರು, ಅನ್ಯನ್ಯ ಮತ್ತು ವಿಧಾತ್ರಿ ಪ್ರಾರ್ಥಿಸಿದರು, ಶಿಕ್ಷಕ ಕೆ.ಎಂ.ನಾಗರಾಜ್ ವಂದಿಸಿದರು.

ಕೋವಿಡ್ ಇನ್ನೂ ಮುಗಿದಿಲ್ಲ ಜಾಗೃತರಾಗಿರಿ- ಡಾ.ಮನ್ಸುಖ್ ಮಾಂಡವೀಯ

0

ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಏಕಾಏಕಿ ಏರಿಕೆಯಾಗಿದೆ. ಆದ್ದರಿಂದ ಹೆಚ್ಚಿಸಲು ಹಾಗೂ ಲಸಿಕಾ ಕರಣಕ್ಕೆ ಒತ್ತು ನೀಡಲು ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಹಾಗೂ ಅಧಿಕಾರಿಗಳ ಸಭೆಯಲ್ಲಿ ದೇಶದಲ್ಲಿನ ಪರಿಸ್ಥಿತಿ ಅವಲೋಕಿಸಲಾಗಿದ್ದು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲಾಯಿತು.

ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ ಧರಿಸುವುದು ಸೇರಿ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಜ್ಞರು ನಾಗರಿಕರಿಗೆ ಸಲಹೆ ನೀಡಿದ್ದಾರೆ.
ಮುಂದೆ ಹಬ್ಬಗಳ ಋತು ಶುರುವಾಗಲಿದೆ. ಹೀಗಾಗಿ ಎಂತಹುದೇ ಪರಿಸ್ಥಿತಿ ಎದುರಾದರೂ ಸಜ್ಜಾಗಬೇಕು. ಕೋವಿಡ್ ನ ಹೊಸ ತಳಿಯ ಬಗ್ಗೆ ಜಾಗೃತರಾಗಿರಬೇಕು . ಸೊಂಕಿತರಿಂದ ಸಂಗ್ರಹಿಸಲಾಗುವ ಮಾದರಿಗಳನ್ನು ಪ್ರತಿದಿನವೂ ಕೇಂದ್ರ ಸರ್ಕಾರದ ವೈರಾಣು ಸಂರಚನೆ ವಿಶ್ಲೇಷಣೆ ಸಂಸ್ಥೆ ಐಎನ್ ಎಸ್ ಎಸಿ ಒಜಿಯ ಪ್ರಯೋಗಾಲಯಗಳಿಗೆ ಕಳುಹಿಸಬೇಕು ಎಂದು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಲಾಗಿದೆ.

ಚೀನಾ ಸೇರಿದಂತೆ ಇತರ ದೇಶಗಳಿಂದ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರಲ್ಲಿ ಆಯುಧ ಕೆಲವರನ್ನ ಪರೀಕ್ಷೆಗೆ ಒಳಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಕೋವಿಡ್ ಇನ್ನು ಮುಗಿದಿಲ್ಲ. ಜಾಗೃತರಾಗಿರುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದ್ದೇನೆ. ಯಾವುದೇ ಪರಿಸ್ಥಿತಿ ನಿಭಾಯಿಸಲು ನಾವು ಸನ್ನದ್ಧರಾಗಿದ್ದೇವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಶರಾವತಿ ಸಂತ್ರಸ್ತರ ಪರ ಗಮನ ಸೆಳೆದ ಸಂಸದ ರಾಘವೇಂದ್ರ

0

ಶರಾವತಿ ಸಂತ್ರಸ್ತರ ಸಮಸ್ಯೆ ಇಂದು ನಿನ್ನೆಯದಲ್ಲ. ಸುಮಾರು 64 ವರ್ಷಗಳಿಂದ ಈ ಸಮಸ್ಯೆ ಇದೆ. 1980ರ ಮೊದಲು ರಾಜ್ಯ ಸರ್ಕಾರವೇ ಅರಣ್ಯ ಭೂಮಿ ಡಿನೋಟಿಫಿಕೇಷನ್ ಮಾಡಲು ಅವಕಾಶ ಇತ್ತು. ಆದರೆ, ಆಗಿನ ಸರ್ಕಾರ ನಿರ್ಲಕ್ಷ್ಯ ವಹಿಸಿತ್ತು. ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬಂದ ಬಳಿಕ ಕೇಂದ್ರ ಅರಣ್ಯ ಹಾಗೂ ಪರಿಸರ ಸಚಿವಾಲಯ ಡಿನೋಟಿಫೈ ಮಾಡಬೇಕಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಆಗ್ರಹಿಸಿದರು.

ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ
ಪ್ರಸ್ತಾಪಿಸಿದ ಅವರು,
ಶರಾವತಿ ಜಲ ವಿದ್ಯುತ್‌ ಯೋಜನೆಯಿಂದ ಸಂತ್ರಸ್ತರಾದವರು ಅರಣ್ಯ ಪ್ರದೇಶದಲ್ಲಿ ಕೃಷಿ ಮಾಡುತ್ತಿದ್ದು, ಆ ಜಾಗವನ್ನು ಡಿನೋಟಿಫೈ ಮಾಡಲು ಕೇಂದ್ರ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು’ ಎಂದರು.

‘ಶಿವಮೊಗ್ಗ ಜಿಲ್ಲೆಯ 31 ಅರಣ್ಯ ಪ್ರದೇಶಗಳಲ್ಲಿ ಸಂತ್ರಸ್ತರು ಕೃಷಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಬೇಡಿಕೆ ಮುಂದಿಟ್ಟಿದ್ದಾರೆ. ಈಡಿಗ ಸಮುದಾಯ, ಇತರ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರೇ ಹೆಚ್ಚು ಸಮಸ್ಯೆಗೆ ಸಿಲುಕಿದ್ದಾರೆ ಎಂದು ತಿಳಿಸಿದರು.

‘ಈ ಅರಣ್ಯ ಪ್ರದೇಶಗಳ ಡಿನೋಟಿಫೈ ಮಾಡಲು ಕರ್ನಾಟಕ ಸರ್ಕಾರ
ವಿಸ್ಕೃತ ಪ್ರಸ್ತಾವನೆ ಕಳುಹಿಸಬೇಕು. ಕೇಂದ್ರ ಸರ್ಕಾರ ಡಿನೋಟಿಫೈ ಮಾಡಿ
ಸಾವಿರಾರು ರೈತರಿಗೆ ನೆರವಾಗಬೇಕು’ ಎಂದು ಅವರು ಆಗ್ರಹಿಸಿದರು.

1959ರಿಂದಲೂ ಈ ರೈತರ ಹೆಸರು ಕಂದಾಯ ದಾಖಲೆಗಳಲ್ಲಿ ಸೇರ್ಪಡೆಯಾಗಿಲ್ಲ. ಇದರಿಂದಾಗಿ, ಕಿಸಾನ್ ಸಮ್ಮಾನ್‌ ಯೋಜನೆ ಹಾಗೂ ಇತರ ಯೋಜನೆಗಳ ಲಾಭದಿಂದ ಈ ರೈತರು ವಂಚಿತರಾಗಿದ್ದಾರೆ” ಎಂದು ಗಮನ ಸೆಳೆದರು.

ಅಮರ ಗಮಕಿ ಪದ್ಮಶ್ರೀ ಹೆಚ್.ಆರ್. ಕೇಶವಮೂರ್ತಿ

0

ಡಿಸೆಂಬರ್ 21 ರಂದು ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ ಪ್ರಸಿದ್ದ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹೆಚ್.ಆರ್.ಕೇಶವಮೂರ್ತಿ, ಇವರ ಅಂತ್ಯಕ್ರಿಯೆಯು ಹೊಸಹಳ್ಳಿಯಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಮೃತರ ಗೌರವಾರ್ಥ ಸರ್ಕಾರ, ಸರ್ಕಾರಿ ಗೌರವದೊಂದಿಗೆ ಅಂತಿಮ ಕ್ರಿಯೆ ನಡೆಸಲು ಆದೇಶಿಸಿರುವನ್ವಯ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಸೇರಿದಂತೆ ಇತರೆ ಗಣ್ಯರು ಪಾರ್ಥೀವ ಶರೀರಕ್ಕೆ ಪುಷ್ಪಮಾಲೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ಬಳಿಕ ಶಿಷ್ಟಾಚಾರದಂತೆ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮೃತರ ಪತ್ನಿ, ಪುತ್ರಿ, ಬಂಧುಗಳು, ವಿಪ್ರ ಸಮಾಜದ ಮುಖಂಡರು, ಸಾರ್ವಜನಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ಪಾಲ್ಗೊಂಡಿದ್ದರು

ಮತದಾರರ ಮನೆಸಮೀಕ್ಷೆಗೆ ಸರ್ಕಾರದ ಸಿಬ್ಬಂದಿಗಳನ್ನ ಮಾತ್ರ ನೇಮಿಸಲಾಗಿದೆ- ಡಾ.ಸೆಲ್ವಮಣಿ

0

ಶಿವಮೊಗ್ಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮನೆ ಸಮೀಕ್ಷೆ ಕಾರ್ಯಕ್ರಮಗಳಲ್ಲಿ ಯಾವುದೇ ಖಾಸಗಿ ಸಂಸ್ಥೆ, ಎನ್‍ಜಿಓ ಅಥವಾ ಯಾವುದೇ ವ್ಯಕ್ತಿಯನ್ನು ನಿಯೋಜಿಸಲಾಗಿಲ್ಲ. ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಇದಕ್ಕೆಂದು ನಿಯೋಜಸಲಾದ ಸರ್ಕಾರಿ ಅಧಿಕಾರಿ/ಸಿಬ್ಬಂದಿಗಳಿಂದ ಮಾತ್ರ ಸಂಗ್ರಹಿಸಲಾಗುತ್ತಿದೆ.
ಯಾವುದೇ ವ್ಯಕ್ತಿ/ಎನ್‍ಜಿಓ/ಖಾಸಗಿ ಸಂಸ್ಥೆ/ಕಂಪನಿ/ಟ್ರಸ್ಟ್‍ಗಳು ಸಾರ್ವಜನಿಕರಿಂದ ಅವರ ಖಾಸಗಿ ಅಥವಾ ಯಾವುದೇ ರೀತಿಯ ದತ್ತಾಂಶಗಳನ್ನು ಯಾವುದೇ ರೀತಿಯಲ್ಲಿ ಸಂಗ್ರಹಿಸುವುದರಲ್ಲಿ ತೊಡಗಿರುವುದು ಕಂಡು ಬಂದಲ್ಲಿ ಅವರ ವಿರುದ್ದ ಸಕ್ಷಮ ಶಾಸನದ ಪ್ರಕಾರ ಮತ್ತು ಅವಶ್ಯವಿದ್ದಲ್ಲಿ ಐಪಿಸಿ ಸೆಕ್ಷನ್ 188 ರಡಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು.


ಈ ರೀತಿಯ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಟೋಲ್‍ಫ್ರೀ ಸಂಖ್ಯೆ 1950 ಮೂಲಕ ಜಿಲ್ಲಾಡಳಿತಕ್ಕೆ ದೂರು ನೀಡಬಹುದು. ಸಾರ್ವಜನಿಕರು ಶಾಸನಬದ್ದ ನಮೂನೆಗಳು ಮತ್ತು ಭಾರತೀಯ ಚುನಾವಣಾ ಆಯೋಗದ ಅರ್ಜಿಗಳಲ್ಲಿ ಮಾತ್ರ ಜಿಲ್ಲಾಡಳಿತದಿಂದ ನಿಯೋಜಿತರಾದ ಅಧಿಕಾರಿಗಳಿಗೆ, ಅಧಿಕೃತ ಬೂತ್ ಮಟ್ಟದ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.

ವಿಶ್ವದಲ್ಲಿ ರೋಟರಿ ಸಂಸ್ಥೆಯ ಸೇವೆ ಅನನ್ಯ-ಜಿ.ವಿಜಯಕುಮಾರ್

0

ವಿಶ್ವದಲ್ಲಿ ರೋಟರಿ ಸಂಸ್ಥೆಯ ಸಮಾಜಮುಖಿ ಸೇವೆ ಅನನ್ಯವಾಗಿದೆ. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ರೋಟರಿ ಸಂಸ್ಥೆ ನಿರಂತರವಾಗಿ ತೊಡಗಿಸಿಕೊಂಡಿದೆ ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಅವರು ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಉತ್ತರದ ವತಿಯಿಂದ ಆಯೋಜಿಸಿದ್ದ ವಾರದ ಸಭೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ರೋಟರಿ ಅಂತರಾಷ್ಟೀಯ ಸಂಸ್ಥೆ ಆಗಿದ್ದು, ರೋಟರಿ ಸದಸ್ಯರು ಶಿಕ್ಷಣ, ಆರೋಗ್ಯ, ವೈದ್ಯಕೀಯ ಶಿಬಿರ, ಮಹಿಳಾ ಸಬಲೀಕರಣ ಹಾಗೂ ರೋಟರಿ ಫೌಂಡೇಶನ್‌ಗ್ಲೋಬಲ್ ಗ್ರಾಂಟ್ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಶಾಲಾ ಶೌಚಗೃಹ, ಹೈನುಗಾರಿಕೆ, ಕುಡಿಯುವ ನೀರು, ಸ್ಮಾರ್ಟ್ ಕ್ಲಾಸ್ ಹೀಗೆ ಅನೇಕ ಸೇವಾಕಾರ್ಯಗಳ ಮುಖಾಂತರ ಜನಮನ್ನಣೆಗಳಿಸಿದೆ ಎಂದು ತಿಳಿಸಿದರು.

ರೋಟರಿಯಲ್ಲಿ ಸದಸ್ಯರ ಪಾತ್ರ ಮುಖ್ಯ. ಒಳ್ಳೆಯ ಓಡನಾಟ,ಸ್ನೇಹ,ಸೇವೆಯನ್ನು ವಿಸ್ತರಿಸುವುದರ ಮೂಲಕಜನಸ್ನೇಹಿ ಆಗುವುದರೊಂದಿಗೆ ಆತ್ಮಸಂತೋಷ ದೊರಕುತ್ತದೆ. ಈ ಸಂದರ್ಭದಲ್ಲಿಅಧ್ಯಕ್ಷರ ಒಂದು ವರ್ಷದ ಅವಧಿಯಲ್ಲಿ ಅವರು ಸಮಾಜಕ್ಕೆ ಮಾಡಿದ ಸೇವೆಯನ್ನು ಸ್ಮರಿಸಿಕೊಂಡರು.
ರೋಟರಿ ಉತ್ತರದ ಅಧ್ಯಕ್ಷಸರ್ಜಾ ಜಗದೀಶ ಮಾತನಾಡಿ, ಸದಸ್ಯರು ಕ್ಲಬ್ ಆಸ್ತಿ, ಇವರು ಕ್ಲಬ್ ನ ಎಲ್ಲಾ ಯೋಜನೆ, ಸಭೆ ಸಮಾರಂಭದಲ್ಲಿ, ಅಧಿವೇಶನ, ಅಸೆಂಬ್ಲಿಗಳಲ್ಲಿ,ವೇದಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮುಂದಿನ ಲೀಡರ್ ಆಗಬೇಕು ಅಂತ ಹೇಳಿದರು.ನಂತರ ಸಭೆಯ ಮುಖ್ಯ ಅತಿಥಿಗಳಾದ ಜಿ.ವಿಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಈ ಸಮಾರಂಭದಲ್ಲಿ ಮಾಜಿ ಸಹಾಯಕ ಗವರ್ನರ್ ರವೀಂದ್ರನಾಥ ಐತಾಳ, ಮಾಜಿ ಅಧ್ಯಕ್ಷg ಪ್ರೊ. ಡಾ.ಶಿವಲಿಂಗಪ್ಪ, ಉಮೇಶ್,ಹಾಲಪ್ಪ, ಕಾರ್ಯದರ್ಶಿ ವೆಂಕಟೇಶ ಮತ್ತು ಇನ್ನರ್ ವೀಲ್ ಮಾಜಿ ಚರ‍್ಮನ್ ವಾರಿಜಾ ಹಾಗೂ ಇತರ ರೋಟರಿ ಸದಸ್ಯರು ಉಪಸ್ಥಿತರಿದ್ದರು