Friday, March 27, 2026
Friday, March 27, 2026
Home Blog Page 1368

ಏಕರೂಪ ನಾಗರೀಕ ಸಂಹಿತೆ ವಿರೋಧಿಸುತ್ತೇನೆ-ಎಚ್,ಡಿ. ದೇವೇಗೌಡ

0

ಏಕರೂಪ ನಾಗರೀಕ ಸಂಹಿತೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರು ವಿರೋಧಿಸಿದ್ದು, ಸಂವಿಧಾನದ ಬದ್ಧವಾಗಿ ನಿಲ್ಲುವುದಾಗಿ ಗುರುವಾರ ಹೇಳಿದ್ದಾರೆ.

ನಂಜನಗೂಡಿನಲ್ಲಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಕುಟುಂಬದೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಸಿಸಿ ಜಾರಿಗೆ ತರಲು ಸಂವಿಧಾನದಲ್ಲಿ ಅವಕಾಶವಿಲ್ಲ. ಜಾರಿಗೆ ತರಲು ಸರ್ಕಾರ ಯತ್ನಿಸಿದ್ದೇ ಆದರೆ, ತೀವ್ರ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಏಕರೂಪ ನಾಗರಿಕ ಸಂಹಿತೆ ಕುರಿತು ಇತರೆ ರಾಜ್ಯಗಳಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಳಿಕ ಮೇಕೆದಾಟು ಯೋಜನೆ ಕುರಿತು ಮಾತನಾಡಿ, ನದಿ ತೀರದ ರಾಜ್ಯವಾದ ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರನ್ನು ಬಳಸಿಕೊಳ್ಳಲು ಸೇಲಂ ಜಿಲ್ಲೆ ಮತ್ತು ಸುತ್ತಮುತ್ತಲಿನ 4 ಲಕ್ಷ ಎಕರೆ ಭೂಮಿಗೆ ನೀರುಣಿಸಲು ಅನುಮತಿಸಲಾಗಿದೆ. ಆದರೆ, ಸಮುದ್ರಕ್ಕೆ ಸೇರುತ್ತಿರುವ ನೀರನ್ನು ಬಳಸಿಕೊಳ್ಳಲು ಕರ್ನಾಟಕಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಸಂಸತ್ತಿನಲ್ಲಿ ಕನ್ನಡದ ಕಂಪು ಹರಡಿದ ಸ್ಫೂರ್ತಿ

0

ಕೋಲಾರದ ಕುಮಾರಿ ಸ್ಪೂರ್ತಿ ಸಂಸತ್ತಿನಲ್ಲಿ ಅಚ್ಚ ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಸ್ಫೂರ್ತಿ ಪ್ರಸ್ತುತ ಬೆಂಗಳೂರಿನ ಬಿಎಂಎಸ್ ಕಾನೂನು ಮಹಾವಿದ್ಯಾಲಯದ ಪ್ರಥಮ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಭಾರತ ಸರ್ಕಾರದ ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವಾಲಯ, ಪ್ರಜಾಪ್ರಭುತ್ವಕ್ಕಾಗಿ ಸಂಸದೀಯ ಸಂಶೋಧನಾ ಮತ್ತು ತರಬೇತಿ ಸಂಸ್ಥೆ ನ.19ರಂದು ಜಂಟಿಯಾಗಿ ಆಯೋಜಿ ಸಿದ್ದ ರಾಷ್ಟ್ರನಾಯಕರಿಗೆ ಸಂಸತ್‌ನಲ್ಲಿ ಗೌರವ ಸಮರ್ಪಣೆ’ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯವನ್ನು ಕೋಲಾರದ ಚಿನ್ನದ ಪದಕ ವಿಜೇತ ಹುಡುಗಿ ಕು.ಸ್ಪೂರ್ತಿ ಪ್ರತಿನಿಧಿಸಿದ್ದರು.

ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಣ್ಯ-ಮಾನ್ಯರು, ಸಂಸತ್‌ ಸದಸ್ಯರು ಇತರೆ ರಾಜ್ಯಗಳ ಯುವ ಪ್ರತಿನಿಧಿಗಳ ಸಮ್ಮುಖದಲ್ಲಿ ತಮ್ಮ ವಿಚಾರ, ನಿಲುವುಗಳನ್ನು ಭಾಷಣದ ಮೂಲಕ ಪ್ರಸ್ತುತ ಪಡಿಸಿದ್ದಾರೆ.

ಭದ್ರಾವತಿ ತಾಲೂಕು ಹರಮಘಟ್ಟ ಗ್ರಾಮದಲ್ಲಿ ಸುಮಾರು 15 ದಿನಗಳ ಹಿಂದೆ 3 ಹಸುಗಳನ್ನ‌ ಭೇಟೆಯಾಡಿದ್ದ ಚಿರತೆ ಬೋನಿಗೆ ಬಿದ್ದಿದೆ. ಚಿರತೆ ಹಾವಳಿಯಿಂದ ಸುತ್ತಮುತ್ತಲಿನ ಗ್ರಾಮದ ಜನರಲ್ಲಿ ಭಯ ಹುಟ್ಟಿಸಿತ್ತು. ಗ್ರಾಮಸ್ಥರಲ್ಲಿ ಭಯವನ್ನ ಹುಟ್ಟಿಸಿತ್ತು. ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆಯವರಿಗೆ ಆಗ್ರಹಿಸಿದ್ದರು. ಇದೀಗ ಕೊನೆಗೂ ಚಿರತೆ ಬೋನಿಗೆ ಬಿದ್ದಿರುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಹರಮಘಟ್ಟ ಗ್ರಾಮದಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ಬೋನು ಇಟ್ಟು ಅದರಲ್ಲಿ ನಾಯಿಯನ್ನ ಇಡಲಾಗಿತ್ತು. ಇಂದು ಬೆಳಗ್ಗೆ ಚಿರತೆ ಬೋನಿಗೆ ಬಿದ್ದಿದೆ.
ಇದೊಂದು ಗಂಡು ಚಿರತೆಯಾಗಿದ್ದು ಸಾಕಷ್ಟು ದಷ್ಟಪುಷ್ಟವಾಗಿದೆ. ಬೋನಿಗೆ ಬಿದ್ದ ಚಿರತೆ ನೋಡಲು ಗ್ರಾಮಸ್ಥರು ಮುಗಿಬಿದ್ದರು. ವಿಷಯ ತಿಳಿದ ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರು ಕೂಡ ಚಿರತೆ ನೋಡಲು ಹರಮಘಟ್ಟ ಗ್ರಾಮಕ್ಕೆ ಬಂದಿದ್ದರು.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಮಕ್ಕಳ ಸಮಗ್ರ ವ್ಯಕ್ತಿತ್ಚ ರೂಪು-ಬೊಮ್ಮಾಯಿ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಮುಂದಿನ ವರ್ಷದಿಂದ ಪ್ರಾಥಮಿಕ ಹಂತದಲ್ಲೂ ಅಳವಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಭದ್ರಾವತಿ ತಾಲ್ಲೂಕಿನ ಕಾರೇಹಳ್ಳಿಯ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಶಾಲೆಗಳ ವಿದ್ಯಾರ್ಥಿಗಳಿಗೆ ಗುರುವಾರ ಆಯೋಜಿಸಿದ್ದ ‘ರಜತ ಚುಂಚಾದ್ರಿ’ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರದಲ್ಲಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ನೀತಿ ಇಲ್ಲಿಯವರೆಗೂ ಇರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನದಿಂದ ಎನ್‌ಇಪಿ ಮೂಲಕ ಆ ಆಶಯ ಈಡೇರಿದೆ. ಒಂದೇ ಅವಧಿಯಲ್ಲಿ ಹಲವು ಪದವಿ ಪಡೆಯುವ ಅವಕಾಶವನ್ನು ಎನ್‌ಇಪಿ ಕಲ್ಪಿಸಿದೆ. ಮಕ್ಕಳ ಸಮಗ್ರ ವ್ಯಕ್ತಿತ್ವ ರೂಪುಗೊಳ್ಳಲು ಈ ಶಿಕ್ಷಣ ವ್ಯವಸ್ಥೆ ರೂಪಿಸಿದ್ದು, ಪ್ರಾಥಮಿಕ ಹಂತದಿಂದಲೇ ಇದು ಜಾರಿಗೊಂಡರೆ ಮಕ್ಕಳಿಗೆ ಅನುಕೂಲವಾಗಲಿದೆ’ ಎಂದರು.

ಕಲಿಕೆಯನ್ನು ಇನ್ನಷ್ಟು ಸರಳಗೊಳಿಸುವ ಅಗತ್ಯವಿದ್ದು, ಸಾಮಾನ್ಯ ಕುಟುಂಬದಿಂದ ಬರುವ ಮಗು ಮಾನಸಿಕ ಒತ್ತಡಕ್ಕೆ ಒಳಗಾಗದೆ ಕಲಿಯುವ ವಾತಾವರಣ ನಿರ್ಮಿಸಬೇಕಿದೆ. ಈ ಸರಳೀಕರಣ ಎನ್‌ಇಪಿಯ ಭಾಗ ಎಂದರು.

ನಮ್ಮಲ್ಲಿ ಬಿರುಕಿಲ್ಲ ಕೇವಲ ತಪ್ಪು ಗ್ರಹಿಕೆಯನ್ನ ಬಿಜೆಪಿ ಬಿಂಬಿಸುತ್ತಿದೆ- ಡಿ.ಕೆ.ಶಿವಕುಮಾರ್

0

ನಮ್ಮ ಪಕ್ಷದಲ್ಲಿ ಯಾವುದೇ ಅಂತರವಿಲ್ಲ. ಬಿಜೆಪಿಯಲ್ಲಿ ಬಿರುಕಿದ್ದು, ನಮ್ಮಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಅಂತರ ಇದೆ ಎಂಬುದನ್ನ ಬಿಜೆಪಿ ಸೃಷ್ಟಿಸುತ್ತಿದೆ.

ರಾಜಕೀಯ ನಿಂತ ನೀರಲ್ಲ. ಇಲ್ಲಿ ಯಾರೂ ಶಾಶ್ವತವಲ್ಲ. ಪಿಜಿಆರ್ ಸಿಂಧ್ಯಾ ಅವರ ಜತೆ ನಾನು ಚುನಾವಣೆಯಲ್ಲಿ ಹೋರಾಡಿದರೂ, ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿಲ್ಲವೇ?. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರ ಮಧ್ಯೆ ಅಂತರ ಇದ್ದರೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಪತ್ರ ನೀಡಲಿಲ್ಲವೇ? ಬಿಜೆಪಿಯಲ್ಲಿ ಬಿರುಕಿದ್ದು, ನಮ್ಮಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿದ್ದಾರೆ. ಅವರ ಪಕ್ಷದಲ್ಲಿ ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸನಗೌಡ ಯತ್ನಾಳ್, ಯಡಿೂರಪ್ಪನವರ ಗುಂಪು ಇಲ್ಲವೇ. ಅವರ ಪಕ್ಷದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಆರೋಗ್ಯದ ಆರೈಕೆ ಕಾಳಜಿ ಉತ್ತಮವಾಗಿದೆ

0

ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಕೆಯಾಗಿದೆ. ಜನರಲ್ಲಿಯೂ ಮಹಾಮಾರಿ ಸೋಂಕು ಕುರಿತ ಆತಂಕ ದೂರಾಗಿದೆ. ಈ ನಡುವಲ್ಲೇ ಕೈಗೆಟುಕುವ ವೆಚ್ಚದಲ್ಲಿ ಆರೋಗ್ಯ ಸೌಲಭ್ಯಗಳು ದೊರೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಕೆಯಾಗಿದ್ದು, ಜನರಲ್ಲಿಯೂ ಮಹಾಮಾರಿ ಸೋಂಕು ಕುರಿತ ಆತಂಕ ದೂರಾಗಿದೆ. ಈ ನಡುವಲ್ಲೇ ಕೈಗೆಟುಕುವ ವೆಚ್ಚದಲ್ಲಿ ಆರೋಗ್ಯ ಸೌಲಭ್ಯಗಳು ದೊರೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ.

ನಗರದ ಕೆಸಿ ಜನರಲ್, ಜಯನಗರ ಜನರಲ್ ಹಾಗೂ ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಪ್ರತೀದಿನ ಸರಾಸರಿ 1,200 ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೆಸಿ ಜನರಲ್ ಆಸ್ಪತ್ರೆಯ 2022 ಅಂಕಿಅಂಶಗಳಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವ ಸಂಖ್ಯೆಯಲ್ಲಿ ಏರಿಕೆಯಾಗಿರುವುದು ಕಂಡು ಬಂದಿದೆ. ಏಪ್ರಿಲ್ ತಿಂಗಳಿನಲ್ಲಿ 1,399 ಮಂದಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರೆ, ಜುಲೈನಲ್ಲಿ 1,569, ಸೆಪ್ಟೆಂಬರ್ನಲ್ಲಿ 1,877 ದಾಖಲಾತಿಗಳಾಗಿರುವುದು ಕಂಡು ಬಂದಿದೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಹಬ್ಬಗಳಿದ್ದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರ ಸಂಖ್ಯೆ ಸೆಪ್ಟೆಂಬರ್’ಗೆ ಹೋಲಿಕೆ ಮಾಡಿದರೆ, ಈ ಎರಡು ತಿಂಗಳಿನಲ್ಲಿ ಕಡಿಮೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳನ್ನು ಸುಧಾರಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಕೆಸಿ ಜನರಲ್ನಲ್ಲಿ, ಎಲ್ಲಾ ಹಾಸಿಗೆಗಳು ಆಮ್ಲಜನಕ ಸೌಲಭ್ಯವನ್ನು ಹೊಂದಿದೆ ಮತ್ತು ಐಸಿಯು ಹಾಸಿಗೆಗಳ ಸಂಖ್ಯೆಯೂ ಹೆಚ್ಚಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹಣದುಬ್ಬರ ಹೆಚ್ಚಾಗುತ್ತಿದ್ದು, ಜನರು ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯವನ್ನು ಬಯಸುತ್ತಾರೆ. ಕೋವಿಡ್ ಸೋಂಕು ಕಡಿಮೆಯಾದ ಬಳಿಕ ಆಸ್ಪತ್ರೆಗಳು ಕೋವಿಡ್ ಹಾಸಿಗೆಗಳನ್ನು ಸಾಮಾನ್ಯ ವಾರ್ಡ್ಗಳಿಗೆ ನೀಡಲು ಆರಂಭಿಸಿವೆ ಎಂದು ಹೇಳಿದ್ದಾರೆ.

ರಾಜ್ಯದ ಆರೋಗ್ಯದ ಆರೈಕೆ ಉತ್ತಮವಾಗಿದೆ. ಆದರೆ, ಮಾನವ ಸಂಪನ್ಮೂಲದ ವಿಷಯದಲ್ಲಿ ಸರ್ಕಾರಿ ಆಸ್ಪತ್ರೆಗಳು ಹಿಂದುಳಿದಿವೆ ಎಂದು ಕೆಲವು ವೈದ್ಯರು ಹೇಳಿದ್ದಾರೆ. ಆಸ್ಪತ್ರೆಗಳಿಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ, ಸಿಬ್ಬಂದಿಗಳ ಸಂಖ್ಯೆ ಮಾತ್ರ ಒಂದೇ ಆಗಿದ್ದು, ಕೋವಿಡ್ ನಂತರ ಕೆಲಸದ ಹೊರೆ ಹೆಚ್ಚಾಗಿದೆ ಎಂದು ಕೆಲವು ಆಸ್ಪತ್ರೆಗಳಲ್ಲಿನ ನರ್ಸ್ ಗಳು ಮತ್ತು ಇತರ ಸಿಬ್ಬಂದಿಗಳು ಹೇಳಿದ್ದಾರೆ.

ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಸದಸ್ಯರ ನೇಮಕ

ಮೈಂಡ್‌ಟ್ರೀ ಕಂಪನಿಯ ಸಿಇಒ ದೇವಶಿಶ್ ಚಟರ್ಜಿ ಮತ್ತು ಅಜೀಂ ಪ್ರೇಂಜಿ ವಿಶ್ವ ವಿದ್ಯಾನಿಲಯದ ಮಾಜಿ ಕುಲಪತಿ ಪ್ರೊ. ಅನುರಾಗ್ ಬೆಹಾರ್ ಸೇರಿದಂತೆ ಹತ್ತು ತಜ್ಞರನ್ನು ಮುಂದಿನ ಐದು ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಮಿಕ್ಕಂತೆ ವಿಶಾಖಪಟ್ಟಣ ಕೇಂದ್ರೀಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ ವಿ ಕಟ್ಟೀಮನಿ, ಕುವೆಂಪು ವಿವಿ ನಿವೃತ್ತ ಕುಲಪತಿ ಜೋಗಿನ್ ಶಂಕರ್, ಅಕ್ಕಮಹಾದೇವಿ ವಿವಿ ನಿವೃತ್ತ ಕುಲಪತಿ ಮೀನಾ ಚಂದಾವರ್ಕರ್, ಐಸಿಎಸ್‌ಎಸ್‌ಆರ್ ನಿರ್ದೇಶಕಿ ಪ್ರೊ. ಉಷಾರಾಣಿ, ಎಂಎಆರ್ಸಿಕೆ ಲೈಫ್ ಸೈನ್ಸಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್ ಎಸ್ ಶ್ರೀನಾಥ್, ಕ್ವಿಸ್ಟ್ ಗ್ಲೋಬಲ್ ಕಂಪನಿಯ ಅಧ್ಯಕ್ಷ ಅಜಯ್ ಪ್ರಭು ಮತ್ತು ಬಾಶ್ ಗ್ಲೋಬಲ್ ಸಾಫ್ಟ್‌ವೇರ್‌ನ ಮುಖ್ಯ ಕಾರ್ಯತಂತ್ರ ಅಧಿಕಾರಿ ರಾಘವೇಂದ್ರ ಕೃಷ್ಣಮೂರ್ತಿ ಅವರನ್ನು ಉನ್ನತ ಶಿಕ್ಷಣ ಪರಿಷತ್ತಿಗೆ ನಾಮನಿರ್ದೇಶಕ ಸದಸ್ಯರನ್ನಾಗಿ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಉದ್ಯಮದ ಪ್ರಮುಖರನ್ನು ಶಿಕ್ಷಣ ಕ್ಷೇತ್ರದ ಜೊತೆ ಜೋಡಿಸುವ ಉದ್ದೇಶದಿಂದ ಈ ಬಾರಿ ಪರಿಷತ್ತಿಗೆ ಉದ್ಯಮಿಗಳನ್ನೂ ನೇಮಿಸಲಾಗಿದೆ.

ಹಿಜಾಬ್ ನಿಷೇಧ ಶಿಕ್ಷಣ ಸಂಸ್ಥೆಗಳಲ್ಲಿ ಮುಂದುವರಿಕೆ- ಸಚಿವ ನಾಗೇಶ್

ರಾಜ್ಯದಲ್ಲಿ ಶಿಕ್ಷಣ ಕಾಯ್ದೆ ಪ್ರಕಾರ ಯಾವುದೇ ಧಾರ್ಮಿಕ ಆಚರಣೆಗಳಿಗೆ ಅವಕಾಶ ಇರುವುದಿಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿ ಹೊರಡಿಸಿರುವ ಆದೇಶ ಮುಂದುವರಿಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.

ಜಗತ್ತಿನಲ್ಲಿ ಮಹಿಳಾ ಸ್ವಾತಂತ್ರ್ಯದ ಬಗ್ಗೆ ಹೆಚ್ಚು ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಒಳ್ಳೆಯ ತೀರ್ಪು ನಿರೀಕ್ಷೆ ಮಾಡಿದ್ದೆವು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದಾರೆ. ಅಲ್ಲದೇ, ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದಿಂದ ಅಂತಿಮ ತೀರ್ಪು ಬರುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ಆದುದರಿಂದ, ರಾಜ್ಯದಲ್ಲಿ ಶಿಕ್ಷಣ ಕಾಯ್ದೆ ಪ್ರಕಾರ ಯಾವುದೇ ಧಾರ್ಮಿಕ ಆಚರಣೆಗಳಿಗೆ ಅವಕಾಶ ಇರುವುದಿಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿ ಹೊರಡಿಸಿರುವ ಆದೇಶ ಮುಂದುವರಿಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ವಿಶ್ವದ 100 ಅತ್ಯುತ್ತಮ ಟೆಕ್ ಪ್ರತಿಭೆಗಳಿಗೆ ಬ್ರಿಟನ್ ಆಹ್ವಾನ-ರಿಷಿ ಸುನಕ್

0

ಪ್ರಪಂಚದಾದ್ಯಂತ ಯುಕೆಯನ್ನು ಟೆಕ್‌ ದೈತ್ಯನನ್ನಾಗಿ ಮಾಡಲು ಪ್ರಧಾನ ಮಂತ್ರಿ ರಿಷಿ ಸುನಕ್ ಅವರು ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಕೆಲಸ ಮಾಡುವ ವಿಶ್ವದ 100 ಅತ್ಯುತ್ತಮ ಯುವ ವೃತ್ತಿಪರರಿಗೆ ಹೊಸ ಕಾರ್ಯಕ್ರಮವನ್ನು ಘೋಷಿಸಿದ್ದಾರೆ. ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ಕಾನ್ಫೆಡರೇಶನ್ ಆಫ್ ಬ್ರಿಟಿಷ್ ಇಂಡಸ್ಟ್ರಿ ವಾರ್ಷಿಕ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸುನಕ್ AI ನಲ್ಲಿ ವಿಶ್ವದ ಅಗ್ರ 100 ಯುವ ಪ್ರತಿಭೆಗಳನ್ನು ಅನ್ವೇಷಿಸಲು ಮತ್ತು ನೇಮಕ ಮಾಡಿಕೊಳ್ಳಲು ಯುಕೆ ಅಭಿಯಾನವನ್ನು ಪ್ರಾರಂಭಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಸಮ್ಮೇಳನದಲ್ಲಿ ಮಾತನಾಡಿದ ಸುನಕ್‌ ಬ್ರೆಕ್ಸಿಟ್ ನಂತರದ ವಲಸೆ ನೀತಿಯ ಮೇಲೆ ನಿಯಂತ್ರಣವು ನಿರ್ಣಾಯಕವಾಗಿದೆ ಎಂದು ತಿಳಿಸಿದರು. ವ್ಯಾಪಾರ ಮಾಲೀಕರು ಮತ್ತು ಹೆಚ್ಚು ಪ್ರತಿಭಾವಂತ ವ್ಯಕ್ತಿಗಳಿಗಾಗಿ ವಿಶ್ವದ ಅತ್ಯಂತ ಆಕರ್ಷಕ ವಲಸೆ ಕಾರ್ಯಕ್ರಮಗಳಲ್ಲಿ ಒಂದನ್ನು ಸ್ಥಾಪಿಸುವುದಾಗಿ ಸುನಕ್ ಭರವಸೆ ನೀಡಿದ್ದಾರೆ.

ಬ್ರೆಕ್ಸಿಟ್ ಸ್ವಾತಂತ್ರ್ಯಗಳನ್ನ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳೊಂದಿಗೆ ವ್ಯಾಪಾರ ಒಪ್ಪಂದಗಳನ್ನು ಮಾತುಕತೆ ಮಾಡಲು ಬಳಸುವುದಾಗಿ ಭರವಸೆ ನೀಡಿದ್ದಾರೆ.

ಯುಕೆ ಪ್ರಸ್ತುತ ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದವನ್ನು ಮಾತುಕತೆ ನಡೆಸುತ್ತಿದೆ. ಅದನ್ನು ಸಂಸತ್ತಿನ ಮುಂದೆ ಆದಷ್ಟು ಬೇಗ ಒಪ್ಪಿಸುವುದಾಗಿ ಹೇಳಿದ್ದಾರೆ.

ವಿವಿಗಳ ಕೌನ್ಸಿಲ್,ಹಣಕಾಸು ಸಮಿತಿ ,ಸಿಂಡಿಕೇಟ್ ಸಭೆಗಳಿಗೆ ನೇರಪ್ರಸಾರ ಸೌಲಭ್ಯ

0

ಮಾಜಿ ಪ್ರಧಾನಮಂತ್ರಿ ದಿವಂಗತ ಎ.ಬಿ. ವಾಜಪೇಯಿ ಅವರ ನೆನಪಿನಲ್ಲಿ ಡಿಸೆಂಬರ್ ತಿಂಗಳನ್ನು ‘ಸುಶಾಸನ ಮಾಸ’ ವನ್ನಾಗಿ ಆಚರಿಸಲಾಗುತ್ತಿದ್ದು, ತಮ್ಮ ವ್ಯಾಪ್ತಿಯ ಇಲಾಖೆಗಳಲ್ಲಿ ಅನೇಕ ಸುಧಾರಣೆಗಳನ್ನು ತರಲಾಗುತ್ತಿದೆ. ಬೆಂಗಳೂರು: ಮಾಜಿ ಪ್ರಧಾನಮಂತ್ರಿ ದಿವಂಗತ ಎ.ಬಿ.ವಾಜಪೇಯಿ ಅವರ ನೆನಪಿನಲ್ಲಿ ಡಿಸೆಂಬರ್ ತಿಂಗಳನ್ನು ‘ಸುಶಾಸನ ಮಾಸ’ ವನ್ನಾಗಿ ಆಚರಿಸಲಾಗುತ್ತಿದ್ದು, ತಮ್ಮ ವ್ಯಾಪ್ತಿಯ ಇಲಾಖೆಗಳಲ್ಲಿ ಅನೇಕ ಸುಧಾರಣೆಗಳನ್ನು ತರಲಾಗುತ್ತಿದೆ. ಅದರ ಒಂದು ಭಾಗವಾಗಿ ವಿಶ್ವವಿದ್ಯಾಲಯಗಳ ಅಕಾಡೆಮಿಕ್ ಕೌನ್ಸಿಲ್, ಹಣಕಾಸು ಸಮಿತಿ, ಸಿಂಡಿಕೇಟ್ ಸಭೆಗಳ ನೇರ ಪ್ರಸಾರಕ್ಕೆ ಚಾಲನೆ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಮಂಗಳವಾರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ವರ್ಷಗಳಲ್ಲಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25ರಂದು ಸುಶಾಸನ ದಿನ ಆಚರಿಸಲಾಗುತ್ತಿತ್ತು.

ಈ ವರ್ಷ ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿ ಡಿಸೆಂಬರ್ ತಿಂಗಳು ಪೂರ್ತಿ ಸುಶಾಸನ ಮಾಸ’ವನ್ನಾಗಿ ಆಚರಿಸಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 1ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ತಾವು ನಿರ್ವಹಿಸುವ ಉನ್ನತ ಶಿಕ್ಷಣ, ಎಲೆಕ್ಟ್ರಾನಿಕ್ಸ್/ಐಟಿಬಿಟಿ/ವಿಜ್ಞಾನ ಮತ್ತು ತಂತ್ರಜ್ಞಾನ/ ಹಾಗೂ ಕೌಶಲಾಭಿವೃದ್ಧಿ/ಉದ್ಯಮಶೀಲತೆ ಅಥವಾ ಜೀವನೋಪಾಯ ಇಲಾಖೆಗಳಲ್ಲಿ ಇದರ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿಸರ್ಜಿಸಲಾಗಿದೆ, ಅಮಾನತು ಮಾಡಿಲ್ಲ: ಸಚಿವ ಅಶ್ವತ್ಥ್ ನಾರಾಯಣ್ ವಿಶ್ವವಿದ್ಯಾಲಯದ ಆಡಳಿತವನ್ನು ಪಾರದರ್ಶಕವಾಗಿಸುವುದು ಹಾಗೂ ಪರಿಣಾಮಕಾರಿಯಾಗಿಸುವುದು ಸರ್ಕಾರದ ಉದ್ದೇಶ.

ಈ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇವುಗಳಲ್ಲಿ ಅಕಾಡೆಮಿ ಕೌನ್ಸಿಲ್, ಹಣಕಾಸು ಸಮಿತಿ ಹಾಗೂ ಸಿಂಡಿಕೇಟ್ ಸಭೆಗಳ ನೇರ ಪ್ರಸಾರ ವ್ಯವಸ್ಥೆಯೂ ಸೇರಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಈ ನೇರ ಪ್ರಸಾರ ನಡೆಯಲಿದೆ. ಒಮ್ಮೆ ಜಾರಿಗೆ ಬರುತ್ತಿದ್ದಂತೆ ಕಾಯಂ ವ್ಯವಸ್ಥೆಯಾಗಿ ಮುಂದುವರಿಯಲಿದೆ ಎಂದು ವಿವರಿಸಿದರು.

ಚಾಮರಾಜ ನಗರ ಜಿಲ್ಲೆ: ಎಚ್ ಐ ವಿ ಸೋಂಕಿತರು ಪೂರ್ಣ ಪ್ರಮಾಣದಲ್ಲಿ ಮುಖ್ಯವಾಹಿನಿಗೆ ಬರುತ್ತಿಲ್ಲ

0

ಚಾಮರಾಜನಗರ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಎಚ್‌ಐವಿ ಸೋಂಕಿನ ಪ್ರಕರಣಗಳು ಇಳಿಮುಖವಾಗುತ್ತಿದೆ. ಆರೋಗ್ಯ ಇಲಾಖೆಯ ಜಿಲ್ಲಾ ಏಡ್ಸ್‌ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರೂ, ಸೋಂಕಿತರು ಪೂರ್ಣ ಪ್ರಮಾಣದಲ್ಲಿ ಮುಖ್ಯವಾಹಿನಿಗೆ ಬರುತ್ತಿಲ್ಲ.

ಜಿಲ್ಲಾ ಏಡ್ಸ್‌ ನಿಯಂತ್ರಣ ಘಟಕ ನೀಡಿರುವ ಮಾಹಿತಿ ಪ್ರಕಾರ, 2008ರಿಂದ 2022ರ ಅಕ್ಟೋಬರ್‌ವರೆಗೆ 4,306 ಎಚ್‌ಐವಿ ಸೋಂಕಿನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿವೆ. ಈ ಪೈಕಿ 2,258 ಪುರುಷರು, 2,032 ಮಹಿಳೆಯರು (226 ಗರ್ಭಿಣಿಯರು) ಹಾಗೂ 16 ಮಂದಿ ಲೈಂಗಿಕ ಅಲ್ಪಸಂಖ್ಯಾತರು ಇದ್ದಾರೆ. 1,661 ಮಂದಿ ಮೃತಪಟ್ಟಿದ್ದಾರೆ.

ಹೊರ ಜಿಲ್ಲೆಗಳು, ಹೊರ ರಾಜ್ಯದವರು ಸೇರಿದಂತೆ ಜಿಲ್ಲೆಯಲ್ಲಿ ಈ ವರೆಗೆ 5,075 ಎಚ್‌ಐವಿ ಸೋಂಕಿತರು ನೋಂದಣಿಯಾಗಿದ್ದಾರೆ. ಈ ಪೈಕಿ ಸದ್ಯ 2,509 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 1,809 ಮಂದಿ ನಿಧನರಾಗಿದ್ದಾರೆ. 757 ಮಂದಿ ಆರೋಗ್ಯ ಇಲಾಖೆ ನೀಡುವ ಚಿಕಿತ್ಸೆಯನ್ನು ಪಡೆಯುತ್ತಿಲ್ಲ.

ಇದರಲ್ಲಿ ಬಹುತೇಕರು ಖಾಸಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೆಲವರು ಕಳಂಕ ಹಾಗೂ ತಾರತಮ್ಯದ ಭೀತಿಯಿಂದ ಚಿಕಿತ್ಸೆಯಿಂದ ದೂರ ಉಳಿದಿದ್ದಾರೆ. ಎಲ್ಲರಿಗೂ ಕೌನ್ಸೆಲಿಂಗ್‌ ಮಾಡಿ, ಅವರಿಗೆ ಚಿಕಿತ್ಸೆಯ ಅಗತ್ಯದ ಬಗ್ಗೆ ತಿಳಿ ಹೇಳುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳುತ್ತಾರೆ ಅಧಿಕಾರಿಗಳು.

ಏಡ್ಸ್‌ ನಿಯಂತ್ರಣ ಕಾರ್ಯಕ್ರಮ 2008ರಿಂದ ಜಾರಿಗೆ ಬಂದಿದ್ದು, 14 ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಎಚ್‌ಐವಿ ಸೋಂಕಿನ ಅಂಕಿ ಅಂಶಗಳನ್ನು ಗಮನಿಸಿದರೆ ಪ್ರಕರಣಗಳು ಇಳಿಮುಖವಾಗುತ್ತಿವೆ. ಗರ್ಭಿಣಿಯರಲ್ಲೂ ಸೋಂಕಿನ ಪ್ರಮಾಣ ಇಳಿದಿದೆ. ಕಳೆದ ವರ್ಷ ಇದು ಶೂನ್ಯವಾಗಿತ್ತು.

ಚಿಕಿತ್ಸಾ ವ್ಯವಸ್ಥೆ: ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯು ಎಚ್‌ಐವಿ ಸೋಂಕು ಪತ್ತೆ ಹಾಗೂ ಚಿಕಿತ್ಸೆ ಕಾರ್ಯದಲ್ಲಿ ತೊಡಗಿದೆ.

ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಸೋಂಕು ಪತ್ತೆ ಹಾಗೂ ಕೌಂನ್ಸೆಲಿಂಗ್‌ ಗಾಗಿ ಎಂಟು ಕೇಂದ್ರಗಳಿವೆ (ಐಸಿಟಿಸಿ). ಒಂದು ಸಂಚಾರಿ ಘಟಕವಿದ್ದು, ಬುಡಕಟ್ಟು ಸಮುದಾಯದವರ ಪರೀಕ್ಷೆಗಾಗಿ ಬಳಕೆಯಾಗುತ್ತಿದೆ. ಜಿಲ್ಲೆಯ 64 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರು ಖಾಸಗಿ ಕೇಂದ್ರಗಳಲ್ಲಿ ಉಚಿತ ಎಚ್‌ಐವಿ ಪರೀಕ್ಷೆ ಲಭ್ಯವಿದೆ. ಚಾಮರಾಜನಗರ ಹಾಗೂ ಕೊಳ್ಳೇಗಾಲದಲ್ಲಿ ಎಆರ್‌ಟಿ ಕೇಂದ್ರಗಳಿವೆ.