Friday, March 27, 2026
Friday, March 27, 2026
Home Blog Page 1371

ಎಚ್ಎಎಲ್ ನಲ್ಲಿ ಉದ್ಯೋಗಾವಕಾಶ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಚಿಸುವರು ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 3, 2022 ಮೊದಲು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.‌

ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆಯ ಹೆಸರು :ಹಿರಿಯ ವೈದ್ಯಕೀಯ ಅಧಿಕಾರಿ
ಹುದ್ದೆಯ ಸಂಖ್ಯೆ: 1
ಉದ್ಯೋಗ ಸ್ಥಳ : ಬೆಂಗಳೂರು,
ವೇತನ:106000 ರೂ ಪ್ರತಿತಿಂಗಳು

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು MBBS, M.S, DNB ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳಿಗೆ 45 ವರ್ಷ ವಯಸ್ಸಾಗಿರಬೇಕು.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ 16-11-2022 ರಿಂದ 3 -12-2022 ರವರೆಗೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ ಸೈಟ್‌ hal-india.co.inನಲ್ಲಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಭಾರತಕ್ಕೆ ಡಿ 1 ರಿಂದ ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷತೆ ಪಟ್ಟ

0

ಭಾರತ ಡಿ. 1ರಿಂದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸುತ್ತಿದ್ದು, ಭಯೋತ್ಪಾದನೆ ನಿಗ್ರಹ ಮತ್ತು ಬಹುಪಕ್ಷೀಯ ಸಂಬಂಧಗಳ ಸುಧಾರಣೆಯು ದೇಶದ ಆದ್ಯತೆಯಾಗಿರಲಿದೆ ಎಂದು ಭಾರತದ ವಿಶ್ವಸಂಸ್ಥೆಯ ಕಾಯಂ ಪ್ರತಿನಿಧಿ ರುಚಿರಾ ಕಾಂಬೋಜ್‌ ತಿಳಿಸಿದ್ದಾರೆ.

ಭಾರತದ ಒಂದು ತಿಂಗಳ ಅಧಿಕಾರಾವಧಿ ಡಿ.31ಕ್ಕೆ ಮುಕ್ತಾಯವಾಗಲಿದೆ. ಇದಕ್ಕೂ ಮೊದಲು ಕಳೆದ ವರ್ಷ ಆಗಸ್ಟ್‌ನಲ್ಲಿ ಭಾರತ ಮಂಡಳಿಯ ಅಧ್ಯಕ್ಷತೆ ವಹಿಸಿಕೊಂಡಿತ್ತು.

ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯ ರಾಷ್ಟ್ರವಾಗಿ ಭಾರತದ ಎರಡು ವರ್ಷದ ಅಧಿಕಾರಾವಧಿಯು ಮುಕ್ತಾಯದ ಹಂತದಲ್ಲಿದೆ.

15 ರಾಷ್ಟ್ರಗಳು ಮಂಡಳಿಯ ಸದಸ್ಯತ್ವ ಹೊಂದಿವೆ. ಇಂಗ್ಲಿಷ್‌ ವರ್ಣಮಾಲೆಯ ಪ್ರಕಾರ ಆಯಾ ದೇಶಗಳಿಗೆ ಮಂಡಳಿಯ ಅಧ್ಯಕ್ಷ ಸ್ಥಾನದಲ್ಲಿ ಒಂದು ತಿಂಗಳ ಅವಧಿಗೆ ಕಾರ್ಯನಿರ್ವಹಿಸುವ ಅವಕಾಶ ನೀಡಲಾಗುತ್ತದೆ.

ವಸತಿರಹಿತರಿಗೆ ನಿವೇಶನ ವಿತರಣೆ-ಸಚಿವ ಅಶೋಕ್

0

ವಸತಿ ರಹಿತರಿಗೆ ಕಂದಾಯ ಸಚಿವ ಆರ್. ಅಶೋಕ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ 565 ಮತ್ತು ನಗರ ಭಾಗದ 191 ಎಕರೆ ಜಾಗದಲ್ಲಿ 22 ಸಾವಿರ ಫಲಾನುಭವಿಗಳಿಗೆ ನಿವೇಶನ ವಿತರಿಸುವುದಾಗಿ ಸಚಿವ ಆರ್.ಅಶೋಕ್ ಅವರು ಘೋಷಿಸಿದ್ದಾರೆ.

ಶನಿವಾರ ಜಿಲ್ಲಾಡಳಿತದಿಂದ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಂಚೇನಹಳ್ಳಿ ತಾಲ್ಲೂಕಿನ ಜರಬಂಡಹಳ್ಳಿ ಗ್ರಾಮದ ಸರ್ವಾಂಗಿಣ ಅಭಿವೃದ್ಧಿಗೆ ಒಂದು ಕೋಟಿ ಅನುದಾನವನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ. ಈ ಹಣದಲ್ಲಿ ಏನೆಲ್ಲಾ ಕಾಮಗಾರಿಗಳು ಆಗಬೇಕೋ ಆ ಎಲ್ಲಾ ಕಾರ್ಯಗಳಿಗೂ ಈ ಹಳ್ಳಿಯ ಜನರ ಮಧ್ಯೆಯೇ ಇಂದೇ ನಿರ್ಧಾರ ಕೈಗೊಂಡು ಕಾರ್ಯಗತಗೊಳಿಸಲಾಗುವುದು. ಈ ಕಾರ್ಯಕ್ರಮ ನನಗೆ ಪಾಠಶಾಲೆಯಾಗಿದ್ದು ಜನರ ಭವಣೆಗಳನ್ನು ಹತ್ತಿರದಿಂದ ಆಲಿಸಿ ಪರಿಹರಿಸಲು ನೆರವಾಗಿದ.ನೂತನವಾಗಿ ರಚನೆಯಾಗಿರುವ ಮಂಚೇನಹಳ್ಳಿ ತಾಲ್ಲೂಕು ಆಡಳಿತ ಕೇಂದ್ರವಾದ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 15 ಕೋಟಿ ಅನುದಾನ ನೀಡಲು ಹಾಗೂ ಚಿಕ್ಕಬಳ್ಳಾಪುರ ವಿಧಾನ ಸಭಾ ವ್ಯಾಪ್ತಿಯಲ್ಲಿ 22 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನಗಳನ್ನು ಸದ್ಯದಲ್ಲೆ ವಿತರಿಸಲು ಸ್ಥಳದಲ್ಲಿಯೇ ಶನಿವಾರ ಜಿಲ್ಲಾಡಳಿತದಿಂದ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿಯಲ್ಲಿ ಆಯೋಜಿಸಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಂಚೇನಹಳ್ಳಿ ತಾಲ್ಲೂಕಿನ ಜರಬಂಡಹಳ್ಳಿ ಗ್ರಾಮದ ಸರ್ವಾಂಗಿಣ ಅಭಿವೃದ್ಧಿಗೆ ಒಂದು ಕೋಟಿ ಅನುದಾನವನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ. ಈ ಹಣದಲ್ಲಿ ಏನೆಲ್ಲಾ ಕಾಮಗಾರಿಗಳು ಆಗಬೇಕೋ ಆ ಎಲ್ಲಾ ಕಾರ್ಯಗಳಿಗೂ ಈ ಹಳ್ಳಿಯ ಜನರ ಮಧ್ಯೆಯೇ ಇಂದೇ ನಿರ್ಧಾರ ಕೈಗೊಂಡು ಕಾರ್ಯಗತಗೊಳಿಸಲಾಗುವುದು. ಈ ಕಾರ್ಯಕ್ರಮ ನನಗೆ ಪಾಠಶಾಲೆಯಾಗಿದ್ದು ಜನರ ಭವಣೆಗಳನ್ನು ಹತ್ತಿರದಿಂದ ಆಲಿಸಿ ಪರಿಹರಿಸಲು ನೆರವಾಗಿದ.ನೂತನವಾಗಿ ರಚನೆಯಾಗಿರುವ ಮಂಚೇನಹಳ್ಳಿ ತಾಲ್ಲೂಕು ಆಡಳಿತ ಕೇಂದ್ರವಾದ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 15 ಕೋಟಿ ಅನುದಾನ ನೀಡಲು ಹಾಗೂ ಚಿಕ್ಕಬಳ್ಳಾಪುರ ವಿಧಾನ ಸಭಾ ವ್ಯಾಪ್ತಿಯಲ್ಲಿ 22 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನಗಳನ್ನು ಸದ್ಯದಲ್ಲೆ ವಿತರಿಸಲು ಸ್ಥಳದಲ್ಲಿಯೇ ಮಂಜೂರಾತಿ ನೀಡಿರುವುದಾಗಿ ಕಂದಾಯ ಸಚಿವರು ಘೋಷಿಸಿದರು.

ಚಾರ್ಮಾಡಿ ‌ಭಾಗದಲ್ಲಿ ಬಾಂಬ್ ಸ್ಫೋಟ

0

ನಾಗುರಿಯಲ್ಲಿ ರಿಕ್ಷಾದಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸದಿಂತೆ ತನಿಖೆ ಚುರುಕುಗೊಂಡಿದೆ. ಮಂಗಳೂರು ಬ್ಲಾಸ್ಟ್ ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸುತ್ತಿದೆ. ಮಂಗಳೂರು ಬ್ಲಾಸ್ಟ್ ಬೆನ್ನಲ್ಲೇ ಇದೀಗ ಪಶ್ಚಿಮಘಟ್ಟದ ತಪ್ಪಲು ಚಾರ್ಮಾಡಿ ಭಾಗದಲ್ಲಿ ಬಾಂಬ್ ಬ್ಲಾಸ್ಟ್ ಆಗಿರುವ ಸ್ಟೋಟ ಮಾಹಿತಿ ಲಭ್ಯವಾಗಿದೆ.

ಮಂಗಳೂರು ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ಮಾಹಿತಿಗಳು ಬಯಲಾಗುತ್ತಲೇ ಇವೆ. ಉಗ್ರರು ಬಾಂಬ್‌ ಬ್ಲಾಸ್ಟ್‌ ಮಾಡಲು ಹಲವಾರು ಪ್ರದೇಶಗಳನ್ನು ಟಾರ್ಗೆಟ್‌ ಮಾಡಿದ್ದು, ಹಲವೆಡೆ ಟ್ರಯಲ್‌ ಬ್ಲಾಸ್ಟ್‌ ಕೂಡ ನಡೆಸಿದ್ದಾರೆ. ಇದೀಗ ಬಾಂಬ್‌ ಬಾಸ್ಟ್‌ ಪ್ರರಣಕ್ಕೆ ಇನ್ನೊಂದು ಟ್ವಿಸ್ಟ್‌ ಸಿಕ್ಕಿದ್ದು, ಚಾರ್ಮಾಡಿ ತಪ್ಪಲಿನಲ್ಲೂ ಕೂಡ ಟ್ರಯಲ್‌ ಬ್ಲಾಸ್ಟ್‌ ನಡೆದಿದೆ ಎಂಬ ಮಾಹಿತಿ ಬಯಲಾಗಿದೆ.

ಮಂಗಳೂರಲ್ಲಿ ಬಂಧನಕ್ಕೆ ಒಳಗಾಗಿರುವ ಉಗ್ರ ಶಾರೀಖ್‌ ಸ್ಯಾಟಲೈಟ್‌ ಫೋನ್‌ ಬಳಸಿ ಭಯೋತ್ಪಾದಕ ಸಂಘಟನೆಗಳೊಂದಿಗೆ ಮಾತನಾಡುತ್ತಿದ್ದ ಎಂಬ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ತನಿಖೆಗೆ ಇಳಿದಿದ್ದರು. ಹಲವು ಪ್ರದೇಶಗಳಲ್ಲಿ ಸ್ಯಾಟಲೈಟ್‌ ತನಿಖೆ ನಡೆಸುತ್ತಿದ್ದು, ಚಾರ್ಮಾಡಿ ತಪ್ಪಲಿನಲ್ಲೂ ಕೂಡ ತನಿಖೆಯನ್ನು ನಡೆಸಿದ್ದಾರೆ. ಚಾರ್ಮಾಡಿ ಅರಣ್ಯ ಪ್ರದೇಶದ ತಪ್ಪಲಿನಲ್ಲಿ ಸ್ಯಾಟಲೈಟ್‌ ತನಿಖೆ ನಡೆಸುವ ವೇಳೆಯಲ್ಲಿ ಪೊಲೀಸರಿಗೆ ಸ್ಫೋಟಕ ಮಾಹಿತಿಯೊಂದು ದೊರೆತಿದ್ದು, ಚಾರ್ಮಾಡಿ ತಪ್ಪಲಿನ ಅರಣ್ಯ ಪ್ರದೇಶದಲ್ಲಿಯೂ ಕೂಡ ಉಗ್ರರು ಟ್ರಯಲ್‌ ಬ್ಲಾಸ್ಟ್‌ ನಡೆಸಿದ್ದರು ಎನ್ನುವುದು ತಿಳಿದುಬಂದಿದೆ. ಈ ಹಿಂದೆ ಶಿವಮೊಗ್ಗದಲ್ಲಿಯೂ ಕೂಡ ಉಗ್ರ ಶಾರೀಖ್‌ ಹಾಗೇ ಇನ್ನೂ ಕೆಲವು ಉಗ್ರರು ಟ್ರಯಲ್‌ ಬ್ಲಾಸ್ಟ್‌ ನಡೆಸಿದ್ದರು. ಇದೀಗ ಚಾರ್ಮಾಡಿ ತಪ್ಪಲಿನಲ್ಲೂ ಕೂಡ ಟ್ರಯಲ್‌ ಬ್ಲಾಸ್ಟ್‌ ನಡೆದಿದೆ ಎಂಬುದು ತಿಳಿದು ಬಂದಿದೆ.

ಚಾರ್ಮಾಡಿ ತಪ್ಪಲಿನಲ್ಲಿರುವ ಬೆಳ್ತಂಗಡಿ ತಾಲೂಕಿನ ಬೆಂದ್ರಾಳ ಅರಣ್ಯಪ್ರದೇಶದಲ್ಲಿ ಸುಮಾರು ಏಳು ದಿನಗಳ ಹಿಂದೆ ರಾತ್ರಿ 11 ಗಂಟೆಯ ಸುಮಾರಿಗೆ ಟ್ರಯಲ್‌ ಬ್ಲಾಸ್ಟ್‌ ನಡೆದಿರುವುದು ತನಿಖೆ ವೇಳೆ ತಿಳಿದುಬಂದಿದೆ. ಭಾರೀ ಪ್ರಮಾಣದಲ್ಲಿ ಬಾಂಬ್‌ ಸ್ಫೋಟಗೊಂಡಿದೆ. ಸ್ಥಳೀಯರು ಸ್ಫೋಟದ ತೀವ್ರತೆಗೆ ಬೆಚ್ಚಿಬಿದ್ದಿದ್ದಾರೆ ಎಂದು ಸ್ಥಳೀಯರಾದ ಚೆಲುವಮ್ಮ ಎನ್ನುವವರು ಪೊಲೀಸರಿಗೆ ದೂರು ನೀಡಿದ್ದಾರೆ.

2022-23 ಶ್ರವಣ ದೋಷ ಮುಕ್ತ ಕರ್ನಾಟಕ ಯೋಜನೆ-ಡಾ.ಸುಧಾಕರ್

0

ಎಲ್ಲರಿಗೂ ಆರೋಗ್ಯ ಎಂಬ ಘೋಷಣೆಯನ್ನು ಸಾಕಾರಗೊಳಿಸಲು ಹಾಗೂ ಶ್ರವಣ ದೋಷ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ 6 ವರ್ಷದೊಳಗಿನ ಮಕ್ಕಳ ಶ್ರವಣ ದೋಷ ನಿವಾರಣೆಗೆ ವಿಶೇಷ ಗಮನವನ್ನು ಹರಿಸಿದೆ.

ಈ ವರ್ಷ ಎಲ್ಲ ಜನ್ಮಜಾತ ಶ್ರವಣ ದೋಷ ಸಮಸ್ಯೆ ಇರುವ ಮಕ್ಕಳ ಸಂಬಂಧ ವಿಶೇಷ ಗಮನ ಹರಿಸಲಾಗಿದ್ದು, ಶ್ರವಣ ದೋಷ ಸಮಸ್ಯೆ ಇರುವ ಮಕ್ಕಳಲ್ಲಿ ಮಾತು ಮತ್ತು ಶ್ರವಣ ಸಾಮರ್ಥ್ಯ ಸುಧಾರಿಸಲು 500 ಮಕ್ಕಳಿಗೆ ಉಚಿತವಾಗಿ ಕಾಕ್ಲಿಯರ್ ಇಂಪ್ಲಾಂಟ್ ಮಾಡಲು ಸರ್ಕಾರ ಎಲ್ಲ ವ್ಯವಸ್ಥೆ ಮಾಡಿದೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ 6 ವರ್ಷದೊಳಗಿನ 1,939 ಮಕ್ಕಳು ಶ್ರವಣ ದೋಷಕ್ಕೊಳಗಾಗಿದ್ದಾರೆ ಎಂದು ಗುರುತಿಸಲಾಗಿದೆ. ಈ ಪೈಕಿ ಹೆಚ್ಚಿನವರು ಜನ್ಮಜಾತ ಕಿವುಡು ಸಮಸ್ಯೆಗೆ ಸಿಲುಕಿದ್ದು, ಪ್ರಸವಪೂರ್ವ ಅವಧಿಯಲ್ಲಿ ಔಷಧ ಸೇವನೆ, ವೈರಾಣು ಸೋಂಕು, ಉಸಿರುಗಟ್ಟುವಿಕೆ, ಆಘಾತದಂತಹ ಸಮಸ್ಯೆಗಳು ಇದಕ್ಕೆ ಮೂಲ ಕಾರಣವಾಗಿದೆ.

ಕಾಕ್ಲಿಯರ್ ಇಂಪ್ಲಾಂಟ್ ಒಂದು ಸಣ್ಣ ಎಲೆಕ್ಟ್ರಾನಿಕ್ ಸಾಧನವಾಗಿದ್ದು, ಈ ಸಾಧನವು ತೀವ್ರ ಮತ್ತು ಅತಿಯಾದ ಶ್ರವಣ ದೋಷ ಹೊಂದಿರುವ ಮಕ್ಕಳಿಗೆ ಶಬ್ದಗಳನ್ನು ಕೇಳಲು ಸಹಾಯ ಮಾಡುತ್ತದೆ. ಒಳ ಕಿವಿಯ ಕಾಕ್ಲಿಯಾಗೆ ಸೇರಿಸಿ ಇಂಪ್ಲಾಂಟ್ ಅಳವಡಿಸಿದ ನಂತರ ಪ್ರೊಸೆಸರ್ ಅನ್ನು ಕಿವಿಯ ಹಿಂದೆ ಇರಿಸಲಾಗುತ್ತದೆ, ನಿಷ್ಕ್ರಿಯ ಶ್ರವಣ ಸಾಧನ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ ಮತ್ತು ಆಡಿಯೊ ಸಂಕೇತಗಳನ್ನು ಮೆದುಳಿಗೆ ರವಾನಿಸುತ್ತದೆ.

ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದು, ಶಸ್ತ್ರಚಿಕಿತ್ಸೆಗೆ ನೆರವಾಗುವ ಆಶಾ ಕಾರ್ಯಕರ್ತೆಯರಿಗೆ 250 ರೂ. ಗೌರವಧನ ನೀಡಲಾಗುತ್ತಿದೆ. ಇಂತಹ ಶಸ್ತ್ರ ಚಿಕಿತ್ಸೆಯನ್ನು ಕೆ.ಸಿ. ಜನರಲ್ ಆಸ್ಪತ್ರೆ, ಇಂದಿರಾಗಾಂಧಿ ಮಕ್ಕಳ ಸಂಸ್ಥೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು ಬಿಎಂಸಿಆರ್‌ಐ, ಹುಬ್ಬಳ್ಳಿಯ ಕಿಮ್ಸ್ ಸೇರಿದಂತೆ 20 ಆಸ್ಪತ್ರೆಗಳಲ್ಲಿ ಸುಸಜ್ಜಿತ ಶಸ್ತ್ರಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಇನ್ನಷ್ಟು ಆಸ್ಪತ್ರೆಗಳನ್ನು ಉಚಿತ ಶಸ್ತ್ರಚಿಕಿತ್ಸೆಗಾಗಿ ಸೇರ್ಪಡೆ ಮಾಡಲಾಗುತ್ತಿದೆ.

ಕಿವುಡುತನ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ರಾಷ್ಟ್ರೀಯ ಕಾರ್ಯಕ್ರಮ (ಎನ್.ಪಿ.ಪಿ.ಸಿ.ಡಿ.) ಅಡಿ ಕಾರ್ಯನಿರ್ವಹಿಸುವ ಶ್ರವಣಶಾಸ್ತ್ರ ತಂಡಗಳು ರಾಷ್ಟ್ರೀಯ ಬಾಲ ಸುರಕ್ಷಾ ಕಾರ್ಯಕ್ರಮ (ಆರ್.ಬಿ.ಎಸ್.ಕೆ.)ದಡಿ ಸಂಚಾರಿ ಆರೋಗ್ಯ ತಂಡಗಳ ಸಹಯೋಗದೊಂದಿಗೆ ಫಲಾನುಭವಿಗಳನ್ನು ಗುರುತಿಸಲಾಗುತ್ತದೆ. ಗುರುತಿಸಲಾದ ಅರ್ಹ ಮಕ್ಕಳನ್ನು ಹೆಚ್ಚಿನ ಮೌಲ್ಯಮಾಪನ ಮತ್ತು ನಿರ್ವಹಣೆಗಾಗಿ ತಾಲೂಕು ಮತ್ತು ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತದೆ.

ರಾಜ್ಯದಲ್ಲಿ ಪ್ರಸ್ತುತ ಇಂತಹ 652 ಮಕ್ಕಳನ್ನು ಗುರುತಿಸಿದ್ದು, ಈ ಪೈಕಿ 586 ಮಕ್ಕಳು ವಿವಿಧ ಹಂತಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 62 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, 258 ಮಕ್ಕಳ ಮೇಲೆ ನಿಗಾ ವಹಿಸಲಾಗಿದೆ. 142 ಮಕ್ಕಳು ಶ್ರವಣ ಸಾಧನ ಅಳವಡಿಕೆ ಚಿಕಿತ್ಸೆ ಪಡೆಯುತ್ತಿವೆ.

ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23 ನೇ ಸಾಲಿನ ಬಜೆಟ್‌ನಲ್ಲಿ ಶ್ರವಣ ದೋಷ ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ಘೋಷಣೆ ಮಾಡಿದ್ದರು. ಈ ಯೋಜನೆ ಕುರಿತು ಸಚಿವರು ಪ್ರಗತಿ ಪರಿಶೀಲನೆ ನಡೆಸಿ ಮಾಹಿತಿ ನೀಡಿದ್ದಾರೆ.

ತಳಮಟ್ಟದಿಂದ ಪಕ್ಷ ಚಟುವಟಿಕೆ ಆರಂಭಿಸಿದ ಬಿಜೆಪಿ

0

ಕಮಲಪಡೆಯ ತಳಮಟ್ಟದ ಕಾರ್ಯಪಡೆ ಬಿಡುವಿಲ್ಲದ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಮತ್ತೊಮ್ಮೆ ಜಯಭೇರಿ ಬಾರಿಸುವುದಕ್ಕೆ ಪೂರಕ ವಾತಾವರಣ ಸೃಷ್ಟಿಗೆ ಬೆವರಿಳಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದ ಪ್ರತಿ ಬಾರಿ ‘ಡಬಲ್ ಇಂಜಿನ್ ಸರ್ಕಾರ’ದ ಪ್ರಯೋಜನದ ಮೇಲೆ ಹೆಚ್ಚೆಚ್ಚು ಬೆಳಕು ಚೆಲ್ಲಿ, ಪಕ್ಷದ ರಾಜ್ಯ ನಾಯಕರ ಮಾರ್ಗಪಥ ಏನೆಂಬುದು ಸೂಚ್ಯವಾಗಿ ತಿಳಿಸಿದ್ದಾರೆ.

ಮೋದಿ ಸೂಚನೆಯಂತೆ ಪಕ್ಷದ ಸಂಘಟನಾ ಕಾರ್ಯಯೋಜನೆಯಲ್ಲಿ ‘ಮನೆ ಮನೆಗೆ ಅಭಿಯಾನ’ ಸೇರಿಸಿ, ಜನರ ಮನೆ ಬಾಗಿಲಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಮಾಹಿತಿ ನೀಡುವ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ.

ಪ್ರತಿಯೊಂದು ಬೂತ್ಗೆ 12 ಜನ ಸಕ್ರಿಯ ಸದಸ್ಯರ ತಂಡವನ್ನು ನೇಮಿಸಿ ಅಭಿಯಾನದ ಹೊಣೆ ಒಪ್ಪಿಸಿದ್ದು, ವಿವಿಧ ಹಂತದ ಪದಾಧಿಕಾರಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ನಗರ-ಗ್ರಾಮೀಣ ಪ್ರದೇಶದ ಪ್ರತಿಯೊಂದು ಅರ್ಹ ಕುಟುಂಬ ಡಬಲ್ ಇಂಜಿನ್ ಸರ್ಕಾರದ ಒಂದಲ್ಲ, ಒಂದು ಯೋಜನೆ ಫಲಾನುಭವಿ ಆಗಿರುವ ಮಾಹಿತಿಯನ್ನೂ ನಿಯೋಜಿತ ತಂಡಗಳು ಹಂಚಿಕೊಳ್ಳುತ್ತಿವೆ. ಕೇಂದ್ರ-ರಾಜ್ಯ ಸರ್ಕಾರದ ಬಗ್ಗೆ ವ್ಯಾಪಕ ಪ್ರಚಾರವೆಂದು ಮೇಲ್ನೋಟಕ್ಕೆ ಕಂಡು ಬಂದರೂ ಜನಪರ ಯೋಜನೆ, ಕಾರ್ಯಕ್ರಮಗಳ ಗರಿಷ್ಠ ಲಾಭ ಪಡೆಯಲಿ ಎಂಬುದು ಅಭಿಯಾನದ ಆಶಯವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶರಾವತಿ ಸಂತ್ರಸ್ತರ ಬದುಕಿಗೆ ಭದ್ರತೆ ನೀಡಲು ಬದ್ಧ- ಬೊಮ್ಮಾಯಿ

0

ಬಹಳ ಜನ ಏನೇನೋ ಮಾತನಾಡುತ್ತಾರೆ. ರಾಜಕೀಯದಲ್ಲಿ ಅಧಿಕಾರ ಬರುತ್ತದೆ, ಹೋಗುತ್ತದೆ. ಆದರೆ, ಶರಾವತಿ ಮುಳುಗಡೆ ಸಂತ್ರಸ್ತರ ಬದುಕನ್ನು ಕಟ್ಟಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ತೀರ್ಥಹಳ್ಳಿಯ ಪಂಚಾಯಿತಿ ಆವರಣದಲ್ಲಿ ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ತರ ಮನವಿಗಳನ್ನು ಸ್ವೀಕರಿಸಿ ಮಾತನಾಡಿ, 60 ವರ್ಷಗಳ ಹಿಂದೆ ನಿಮ್ಮ ಹಿರಿಯರು ಭೂಮಿ ತ್ಯಾಗ ಮಾಡಿದ್ದರಿಂದ ಇಂದು ಇಡೀ ರಾಜ್ಯಕ್ಕೆ ಬೆಳಕು ಸಿಕ್ಕಿದೆ.
ಶರಾವತಿ ಜಲವಿದ್ಯುತ್ ಯೋಜನೆ‌ ಮಾಡುವ ಸಂದರ್ಭದಲ್ಲಿ ಫಲವತ್ತಾದ ಜಮೀನು ಬಿಟ್ಟುಕೊಟ್ಟು ರೈತರು ಸ್ಥಳಾಂತರವಾಗಿದ್ದರು. 60 ವರ್ಷ ಆದರೂ ಸಂತ್ರಸ್ತರ ಸಮಸ್ಯೆ ಬಗೆಹರಿದಿಲ್ಲ. ಇದಕ್ಕೆ ಅಂದಿನ ಸರ್ಕಾರಗಳೇ ಕಾರಣ ಎಂದು ಕಿಡಿಕಾರಿದರು.

1978ರಲ್ಲಿ ಕೇಂದ್ರ ಅರಣ್ಯ ಸಂರಕ್ಷಣೆ ಕಾಯ್ದೆ ಜಾರಿಗೆ ಬಂತು. ಆದರೆ, ಅದಕ್ಕಿಂತ ಮೊದಲೇ ಶರಾವತಿ ಯೋಜನೆ ಅನುಷ್ಠಾನ ಆರಂಭವಾಯಿತು. ಹೀಗಾಗಿ ಭೂಮಿಯನ್ನು ಆಗಲೇ ಸರ್ವೇ ಮಾಡಿ ಜನರಿಗೆ ಹಂಚಿಕೆ ಮಾಡಬಹುದಿತ್ತು. ಅವತ್ತಿನ ಕಾಲದಲ್ಲಿ ರಾಜ್ಯ ಸರ್ಕಾರಕ್ಕೆ ಯೋಜನೆಗೆ ಜಾಗ ಬಿಟ್ಟುಕೊಟ್ಟವರಿಗೆ ಭೂಮಿ ಹಂಚಿಕೆ ಮಾಡಲು ಅವಕಾಶವಿತ್ತು. ಆದರೆ ಅಂತಹ ಅವಕಾಶಗಳು ತಪ್ಪಿ ಹೋದವು, ಒಂದು ಸಮಸ್ಯೆಯನ್ನು ಸೃಷ್ಟಿಸಿ ಎಷ್ಟು ಬಾರಿ ರಾಜಕೀಯವಾಗಿ ಲಾಭ ಪಡೆದುಕೊಳ್ಳುತ್ತಾರೆ ಎಂದು ಈ ಹಿಂದಿನ ಸರ್ಕಾರಗಳ ವಿರುದ್ಧ ಕಿಡಿಕಾರಿದರು.

ಮೊದಲಿಗೆ 24 ಸಾವಿರ ಎಕರೆ ಪ್ರದೇಶವನ್ನು ಗುರುತಿಸುವುದು, ಸುಮಾರು 9 ಸಾವಿರ ಎಕರೆ ಭೂಮಿಯನ್ನು ಕೇಂದ್ರ ಸರ್ಕಾರದ ಅನುಮತಿ ಹಂಚಿಕೆ ಮಾಡುವುದು, ಇನ್ನು ಅಧಿಕವಾಗಿರುವ 4-5 ಸಾವಿರ ಎಕರೆ ಭೂಮಿಯನ್ನು ಗುರುತಿಸಿ ಸರ್ವೇ ಮಾಡಲಾಗುತ್ತದೆ ಎಂದ ಅವರು, ಸರ್ವೇ ಪ್ರಕ್ರಿಯೆಯನ್ನು ಡಿಸೆಂಬರ್‌ನೊಳಗೆ ಮುಗಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ನಂತರ ಕೇಂದ್ರಕ್ಕೆ ವರದಿ ಕಳುಹಿಸುತ್ತೇವೆ. ಈಗಾಗಲೇ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ನಿಯೋಗ ಕೇಂದ್ರ ಸಚಿವರನ್ನು ಭೇಟಿಯಾಗಿ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದೆ. ಕೇಂದ್ರ ಸರ್ಕಾರ ಸಮಸ್ಯೆ ಪರಿಹರಿಸಲು ಸಹಕಾರ ನೀಡುವ ಭರವಸೆ ನೀಡಿದೆ ಎಂದರು.

ಟೈಲರ್ ಮಕ್ಕಳಿಗೂ ವಿದ್ಯಾನಿಧಿ ಯೋಜನೆ- ಬೊಮ್ಮಾಯಿ

0

ರೈತರ ಮಕ್ಕಳಿಗಾಗಿ ರಾಜ್ಯ ಸರ್ಕಾರ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಇದನ್ನು ಟೈಲರ್ ಮಕ್ಕಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಈ ಮಹತ್ವದ ಘೋಷಣೆ ಮಾಡಿದ್ದಾರೆ.

ಭಾನುವಾರದಂದು ಕೊಪ್ಪದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ವಿದ್ಯಾನಿಧಿ ಯೋಜನೆಯನ್ನು ಟೈಲರ್ ಮಕ್ಕಳಿಗೂ ವಿಸ್ತರಿಸುವಂತೆ ಮನವಿ ಬಂದಿದೆ. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಆನೆ ಉಪಟಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಇದರ ನಿಯಂತ್ರಣಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಅಲ್ಲದೆ ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೀಡುವ ಪರಿಹಾರವನ್ನು 7.50 ಲಕ್ಷದಿಂದ 15 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಜನವರಿ 23 ರೊಳಗೆ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಗಡುವು

0

ಒಕ್ಕಲಿಗ ಸಮುದಾಯದ ಮೀಸಲಾತಿಯನ್ನ 2023 ನೇ ಜನವರಿ 23 ರೊಳಗೆ ಹೆಚ್ಚಿಸುವಂತೆ ಆದಿ ಚುಂಚನಗಿರಿ ಶ್ರೀಗಳು ಸರ್ಕಾರಕ್ಕೆ ಗಡುವು ನೀಡಿದ್ದಾರೆ.

ರಾಜ್ಯ ಒಕ್ಕಲಿಗ ಸಂಘ, ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಸಹಯೋಗದಲ್ಲಿ ಬೆಂಗಳೂರನಲ್ಲಿ ಭಾನುವಾರ ನಡೆದ ಸಭೆಯಲ್ಲಿ ಒಕ್ಕಲಿಗ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಶೇ.4ರಷ್ಟಿರುವ ಮೀಸಲಾತಿ ಪ್ರಮಾಣವನ್ನು ಶೇ.12 ರಷ್ಟು ಹೆಚ್ಚಿಸಬೇಕೆಂದು ಚರ್ಚೆ ನಡೆಸಿ ತಿರ್ಮಾನ ಕೈಗೊಳ್ಳಲಾಯಿತು. ಒಂದು ವೇಳೆ ಸರಕಾರ ಗಡುವಿನೊಳಗೆ ಮೀಸಲು ಪ್ರಮಾಣ ಹೆಚ್ಚಳ ಮಾಡದಿದ್ದಲ್ಲಿ ರಾಜ್ಯಾದ್ಯಂತ ಮೀಸಲಾತಿಗಾಗಿ ಬೃಹತ್‌ ಹೋರಾಟದ ಕಿಚ್ಚು ಹೊತ್ತಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಶೇ. 4 ರಷ್ಟು ಮೀಸಲಾತಿಯಿಂದ ಒಕ್ಕಲಿಗ ಸಮುದಾಯಕ್ಕೆ ನ್ಯಾಯ ದೊರೆಯುತ್ತಿಲ್ಲ. ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ (ಶೇ. 16ರಷ್ಟು) ಒಕ್ಕಲಿಗ ಸಮುದಾಯದ ಜನರಿದ್ದಾರೆ. ಅವರಲ್ಲಿ ಶೇ. 80ರಷ್ಟು ಬಡ ಕುಟುಂಬಗಳಾಗಿದ್ದು, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಹಾಗಾಗಿ, ಜನಸಂಖ್ಯೆಗೆ ಅನುಗುಣವಾಗಿ ಶೇ.12ರಿಂದ 15 ರಷ್ಟು ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ಜತೆಗೆ, ಕೇಂದ್ರದ ಒಬಿಸಿ ಪಟ್ಟಿಯಿಂದ ಹೊರಗಿರುವ ಕುಂಚಿಟಿಗ ಸಮುದಾಯ ಸೇರಿ ನಾಲ್ಕು ಒಕ್ಕಲಿಗ ಉಪ ಪಂಗಡಗಳನ್ನು ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.

ನಮ್ಮ ಸಮುದಾಯದ ನಾಯಕರಾದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಈ ರಾಜ್ಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಜನವರಿ 23ಕ್ಕೆ ಈ ಇಬ್ಬರು ದಿಗ್ಗಜರ ಅಭಿನಂದನೆ ಕಾರ್ಯಕ್ರಮವಧಿನ್ನು ರಾಜ್ಯ ಒಕ್ಕಲಿಗರ ಸಂಘ ಹಮ್ಮಿಕೊಂಡಿದೆ. ಸರಕಾರ ಆ ದಿನದಂದೇ ಮೀಸಲಾತಿ ಹೆಚ್ಚಿಸಿ ಆದೇಶ ನೀಡಿದರೆ ವಿಜಯೋತ್ಸವ ಆಚರಿಸಲಾಗುವುದು. ಇಲ್ಲದಿದ್ದರೆ ಸಂಘದ ನಿರ್ಣಯದಂತೆ ಬೃಹತ್‌ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.