Thursday, March 26, 2026
Thursday, March 26, 2026
Home Blog Page 1386

ಸ್ನಾತಕೋತ್ತರ ವೈದ್ಯಕೀಯ ಪದವಿ‌ ಪ್ರವೇಶ ನೀಟ್ ಕೌನ್ಸೆಲಿಂಗ್ ಪೂರ್ಣಗೊಳಿಸಲು ಸೂಚನೆ

0

ನ. 16 ರೊಳಗೆ ಸ್ನಾತಕೋತ್ತರ ವೈದ್ಯಕೀಯ ಪದವಿ ಪ್ರವೇಶಕ್ಕೆ ನಡೆಸುವ ಎರಡನೇ ಸುತ್ತಿನ ನೀಟ್ ಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ನವೆಂಬರ್ 16 ರ ಗಡುವು ನೀಡಲಾಗಿದೆ.

ಈ ಕುರಿತ ಅಂಕಿ ಅಂಶಗಳನ್ನು ಅದೇ ದಿನ ವೈದ್ಯಕೀಯ ಕೌನ್ಸೆಲಿಂಗ್ ಸಮಿತಿಗೆ ಸಲ್ಲಿಸಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ ನೀಟ್ ಪಿಜಿ ಎರಡನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಂಡಲ್ಲಿ ಕೇಂದ್ರ ಸರ್ಕಾರ ಕೊನೆಯ ಸುತ್ತಿನ ಕೌನ್ಸೆಲಿಂಗ್ ನಡೆಸಬಹುದು. ಹೀಗಾಗಿ ಎರಡನೇ ಸುತ್ತಿನ ನೀಟ್ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ನವೆಂಬರ್ 16ರೊಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಒಂದು ತಿಂಗಳ ಅವಕಾಶ

0

ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹಾಗೂ ಹೆಸರುಗಳನ್ನು ತೆಗೆದು ಹಾಕಲು ಅಥವಾ ಕ್ಷೇತ್ರ ಬದಲಾವಣೆ ಮಾಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಾತನಾಡಿ, ಮತದಾರರ ಪಟ್ಟಿಯಿಂದ ಹೆಸರು ಸೇರ್ಪಡೆ ಅಥವಾ ಅಳಿಸುವಿಕೆಗೆ ಸಂಬಂಧಿಸಿದಂತೆ ಯಾವುದೇ ಹಕ್ಕು ಸಲ್ಲಿಸಲು ಡಿಸೆಂಬರ್ 8ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಚುನಾವಣಾ ಆಯೋಗವು ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಭಿಯಾನವನ್ನು ಪ್ರಾರಂಭಿಸಿದೆ. ಮುಂದಿನ ವರ್ಷ ಜನವರಿ 1ಕ್ಕೆ 18 ವರ್ಷ ತುಂಬಿದವರೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು.

ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು, ಅಳಿಸಲು ಅಥವಾ ನಿಮ್ಮ ಕ್ಷೇತ್ರ ಬದಲಾವಣೆ ಮಾಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.

ದಯಾಮರಣ ಕೋರಿ ಸಾಗರ ತಾಲೂಕಿನ ದಂಪತಿಗಳು ರಾಷ್ಟ್ರಪತಿಗೆ ಮನವಿ

0

ಇಬ್ಬರು ದಂಪತಿಗಳು ಸರ್ಕಾರಿ ಅಧಿಕಾರಿಗಳ ಕಿರುಕುಳಕ್ಕೆ ಮನನೊಂದು ನಮಗೆ ದಯಾಮರಣ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದಿದ್ದಾರೆ.

ಈ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಖಂಡಿಕಾಯಲ್ಲಿ ನಡೆದಿದೆ. ಅಧಿಕಾರಿಗಳ ಲಂಚಬಾಕತನಕ್ಕೆ ಬೇಸತ್ತು ದಯಾಮರಣಕ್ಕೆ ಅರ್ಜಿಯನ್ನು ಸಲ್ಲಿಸಿದ್ದೇವೆ ಎಂದು ದಂಪತಿಗಳು ಹೇಳಿದ್ದಾರೆ.

ಶ್ರೀಕಾಂತ್ ನಾಯ್ಕ್-ಸುಜಾತ ನಾಯ್ಕ್ ದಂಪತಿಗಳಿಗೆ ಸಂಬಂಧಿಸಿದ ಜಮೀನಿನಲ್ಲಿ‌ರುವ ಸೈಟ್​ಗಳ ಅಭಿವೃದ್ಧಿಗೆ ಅನುಮೋದನೆ ಮತ್ತು ನಿವೇಶನಗಳ ಅಭಿವೃದ್ಧಿಗೆ ಲಂಚ ನೀಡುವಂತೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಗ್ರಾಮ ಪಂಚಾಯತಿಗೆ ಶುಲ್ಕ ನೀಡಿ ಅನುಮೋದನೆಗೆ ಮನವಿ ಮಾಡಿದ್ದೇವು, ಆದರೆ ಶುಲ್ಕ ನೀಡಿದರೂ ಅಧಿಕಾರಿಗಳು 3-4 ಬಾರಿ ಅಲೆದಾಡಿಸಿದ್ದಾರೆ, ಪ್ರತಿದಿನ ಸರ್ಕಾರಿ ಕಚೇರಿ ಮುಂದೆ ನಿಂತು ನಿಂತು ಸಾಕಾಗಿದೆ. ಇದೀಗ ಪಿಡಿಒ 5 ಲಕ್ಷ ಹಣ ಹಾಗೂ ತಾ.ಪಂ. ಇಒ 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಷ್ಟೊಂದು ಹಣವನ್ನು ನಾವು ಎಲ್ಲಿಂದ ತರಬೇಕು, ಅನೇಕ ಬಾರಿ ಈ ಬಗ್ಗೆ ದೂರು ನೀಡದರು ಯಾವುದೇ ಪ್ರಯೋಜನ ಆಗಿಲ್ಲ ಎಂದು ಹೇಳಿದ್ದಾರೆ.

ಇಬ್ಬರು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಪಿಡಿಒ, ತಾ.ಪಂ. ಇಒ ವಿರುದ್ಧ ಶ್ರೀಕಾಂತ್ ದಂಪತಿಗಳು ಆರೋಪಿಸಿದ್ದಾರೆ. ಅಧಿಕಾರಿಗಳ ಲಂಚಬಾಕತನಕ್ಕೆ ಬೇಸತ್ತು ದಯಾಮರಣ ನೀಡುವಂತೆ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದೇವೆ ಎಂದ ಶ್ರೀಕಾಂತ್​ ದಂಪತಿಗಳು ಹೇಳಿದ್ದಾರೆ.

ಅಧಿಕಾರಿಗಳು ಅಷ್ಟೊಂದು ಮೊತ್ತದ ಹಣಕ್ಕೆ ಬೇಡಿಕೆ ಇಟ್ಟರೆ, ಬಡ ಕುಟುಂಬಗಳು ಏನು ಮಾಡಬೇಕು. ಈ ಕಾರಣಕ್ಕೆ ನಾವು ದಯಾಮರಣ ನೀಡುವಂತೆ ರಾಷ್ಟ್ರಪತಿಗೆ ಪತ್ರ ಬರೆದಿದ್ದೇವೆ ಎಂದು ಹೇಳಿದ್ದಾರೆ.

ಮಾತೃಭಾಷೆ ಮಾಧ್ಯಮದಿಂದ ಸೃಜನಶಕ್ತಿ ಮತ್ತು ವಿಶ್ಲೇಷಣಾ ಶಕ್ತಿ ವೃದ್ಧಿ – ದ್ರೌಪದಿ ಮುರ್ಮು

0

ಪ್ರಾದೇಶಿಕ ಹಾಗೂ ಸ್ಥಳೀಯ ಭಾಷೆಯಲ್ಲಿ ಅಧ್ಯಯನ ಮಾಡುವುದರಿಂದ ಎಲ್ಲರಿಗೂ ಶಿಕ್ಷಣ ದೊರೆಯುತ್ತದೆ ಎಂದು ರಾಷ್ಟ್ರಪತಿ ದ್ರೌಪತಿ ಮುರ್ಮು ಹೇಳಿದ್ದಾರೆ.

ಎರಡು ದಿನಗಳ ಒಡಿಶಾ ಪ್ರವಾಸದಲ್ಲಿರುವ ಮುರ್ಮು ಅವರು ಕೇಂದ್ರ ಶಿಕ್ಷಣ ಸಚಿವಾಲಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ, ಶಿಕ್ಷಣವು ಸಬಲೀಕರಣದ ಸಾಧನವಾಗಿದೆ ಮತ್ತು ಮಾತೃಭಾಷೆಯ ಬಳಕೆಯು ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂದರು.

ಮಾತೃಭಾಷೆಯಲ್ಲಿ ಕಲಿಯುವುದರಿಂದ ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಚಿಂತನೆ ಮತ್ತು ವಿಶ್ಲೇಷಣಾತ್ಮಕ ಕೌಶಲ ವೃದ್ಧಿಯಾಗುತ್ತದೆ.

ಅಲ್ಲದೇ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಸಿಗುತ್ತದೆ. ದೇಶದ ಪ್ರತಿ ಮಗುವಿಗೂ ತಾರತಮ್ಯವಿಲ್ಲದೇ ಶಿಕ್ಷಣ ದೊರೆಯುವಂತಾಗಬೇಕು. ಈ ಕಾರಣದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಪ್ರಾದೇಶಿಕ ಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದೆ ಎಂದರು.

ಸ್ಥಳೀಯ ಭಾಷೆಗಳಲ್ಲಿ ತಾಂತ್ರಿಕ ಪುಸ್ತಕ ದೊರೆಯುವಂತೆ ಮಾಡಿದ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್‌ (ಎಐಸಿಇಟಿ) ಕಾರ್ಯವನ್ನು ಶ್ಲಾಘಿಸಿದರು.

ಕಾರ್ಯಕ್ರಮಕ್ಕೂ ಮುನ್ನ ತಾವು ಓದಿದ ಅಲ್ಮಾ ಮ್ಯಾಟರ್‌ ಗವರ್ನಮೆಂಟ್ ಗರ್ಲ್ಸ್‌ ಹೈಸ್ಕೂಲ್‌, ತಾವು ವಾಸವಿದ್ದ ಕುಂತಲಾ ಕುಮಾರಿ ಸಾಬತ್‌ ಆದಿವಾಸಿ ಗರ್ಲ್ಸ್‌ ವಸತಿ ಗೃಹಕ್ಕೆ ಭೇಟಿ ನೀಡಿ ತಮ್ಮ ಹಿಂದಿನ ದಿನಗಳನ್ನು ಸ್ಮರಿಸಿದರು.

ದೇಶದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಏರುಗತಿ

0

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 833 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,528 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 12,553 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 4,41,22,562 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 1,16,228 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,79,09,506 ಡೋಸ್ ಲಸಿಕೆ ಹಾಕಲಾಗಿದೆ.

24 ಗಂಟೆಯಲ್ಲಿ 1,57,660 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ

ಮುಂದಿನ 10-15 ವರ್ಷಗಳಲ್ಲಿ ಭಾರತ ಜಾಗತಿಕ ಆರ್ಥಿಕ ಶಕ್ತಿಗಳಲ್ಲಿ ಅಗ್ರ ಪಂಕ್ತಿ ಸೇರಲಿದೆ

0

ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಮತ್ತು ಮುಂದಿನ 10-15 ವರ್ಷಗಳಲ್ಲಿ ಜಾಗತಿಕವಾಗಿ ಅಗ್ರ ಮೂರು ಆರ್ಥಿಕ ಶಕ್ತಿಗಳಲ್ಲಿ ಒಂದಾಗುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಯುಎಸ್-ಇಂಡಿಯಾ ವ್ಯವಹಾರಗಳು ಮತ್ತು ಹೂಡಿಕೆ ಅವಕಾಶಗಳ ಸಮಾರಂಭದಲ್ಲಿ ಮಾತನಾಡಿದ ಸೀತಾರಾಮನ್, ಜಾಗತಿಕ ಆರ್ಥಿಕ ದೃಷ್ಟಿಕೋನವು ಸವಾಲಾಗಿಯೇ ಉಳಿದಿದೆ ಮತ್ತು ಜಾಗತಿಕ ಆರ್ಥಿಕ ಬೆಳವಣಿಗೆಗಳ ಪ್ರಭಾವದಿಂದ ಭಾರತದ ಆರ್ಥಿಕತೆಯು ಪ್ರತ್ಯೇಕವಾಗಿಲ್. ಆದಾಗ್ಯೂ, ಭಾರತದ ಬೆಳವಣಿಗೆಯ ಪಥವು ನೈಋತ್ಯ ಮಾನ್ಸೂನ್, ಸಾರ್ವಜನಿಕ ಹೂಡಿಕೆ, ಬಲವಾದ ಕಾರ್ಪೊರೇಟ್ ಬ್ಯಾಲೆನ್ಸ್ ಶೀಟ್‌ಗಳು, ಲವಲವಿಕೆಯ ಗ್ರಾಹಕ ಮತ್ತು ವ್ಯಾಪಾರದ ವಿಶ್ವಾಸ ಮತ್ತು ಕೋವಿಡ್ ಸಾಂಕ್ರಾಮಿಕದ ಬೆದರಿಕೆಯಿಂದ ಬೆಂಬಲಿತವಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಇದು ಇತ್ತೀಚಿಗೆ ಯುಕೆಯನ್ನು ಮೀರಿಸಿ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ಮುಂದಿನ 10-15 ವರ್ಷಗಳಲ್ಲಿ ಜಾಗತಿಕವಾಗಿ ಅಗ್ರ ಮೂರು ಆರ್ಥಿಕ ಶಕ್ತಿಗಳಲ್ಲಿ ಒಂದಾಗುವ ನಿರೀಕ್ಷೆಯಿದೆ, “ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಡವರು ಮತ್ತು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಿದ ಮಹನೀಯ ಮೌಲಾನ

0

ಭಾರತವು 2022 ರ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸುವ ಹಿಂದಿನ ಮುಖ್ಯ ಗುರಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನ. ಭಾರತದ ಮೊದಲ ಶಿಕ್ಷಣ ಸಚಿವರಾಗಿ ಆಜಾದ್ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸುವ ಸಲುವಾಗಿ…
ಭಾರತದಲ್ಲಿ ಪ್ರತೀ ವರ್ಷ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.

ಭಾರತದ ಮೊದಲ ಶಿಕ್ಷಣ ಸಚಿವರಾದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಸಂದರ್ಭದಲ್ಲಿ ಇಂದು 2022 ರ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಶಿಕ್ಷಣ ದಿನ 2022 ರ ಕುರಿತು ನೀವು ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ. ಈಗ ಶಿಕ್ಷಣ ಸಚಿವಾಲಯ ಎಂದು ಕರೆಯಲ್ಪಡುವ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಸೆಪ್ಟೆಂಬರ್ 11, 2008 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸುವುದಾಗಿ ಘೋಷಿಸಿತು.

ಭಾರತದ ಮೊದಲ ಶಿಕ್ಷಣ ಸಚಿವರ ಜಯಂತಿ ಮತ್ತು ಭಾರತದಲ್ಲಿ ಶಿಕ್ಷಣಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ.

ಭಾರತವು 2022 ರ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸುವ ಹಿಂದಿನ ಮುಖ್ಯ ಗುರಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನ. ಭಾರತದ ಮೊದಲ ಶಿಕ್ಷಣ ಸಚಿವರಾಗಿ ಆಜಾದ್ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸುವ ಸಲುವಾಗಿ ಮಾನವ ಸಂಪನ್ಮೂಲ ಸಚಿವಾಲಯವು ಈ ದಿನವನ್ನು ಆಚರಿಸುವುದಾಗಿ ಘೋಷಿಸಿತು.

ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಆಗಸ್ಟ್ 15, 1947 ರಿಂದ ಫೆಬ್ರವರಿ 2, 1958 ರವರೆಗೆ ಭಾರತದ ಶಿಕ್ಷಣ ಸಚಿವರಾಗಿದ್ದರು. ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ, ಆಜಾದ್ ಅವರು ಗ್ರಾಮೀಣ ಬಡವರು ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಲು ಒತ್ತು ನೀಡಿದರು..

ಕೇಂದ್ರೀಯ ಶಿಕ್ಷಣ ಸಲಹಾ ಮಂಡಳಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರು ವಯಸ್ಕರ ಸಾಕ್ಷರತೆ, ಸಾರ್ವತ್ರಿಕ ಪ್ರಾಥಮಿಕ ಶಿಕ್ಷಣ, 14 ವರ್ಷದವರೆಗಿನ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ, ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಮಾಧ್ಯಮಿಕ ಶಿಕ್ಷಣ ಮತ್ತು ವೃತ್ತಿಪರ ತರಬೇತಿಯ ವೈವಿಧ್ಯತೆಗೆ ಒತ್ತಾಯಿಸಿದರು.

ಪ್ರಸ್ತುತ ದಿನದ ಥೀಮ್ ‘ಶಿಕ್ಷಣ’ ಆಗಿದ್ದು, ಶಿಕ್ಷಣ ಸಚಿವಾಲಯವು ಪ್ರತಿ ವರ್ಷ ವಿಭಿನ್ನ ಕ್ಷೇತ್ರಗಳಲ್ಲಿ ಗಮನ ಕೇಂದ್ರೀಕರಿಸುತ್ತದೆ. 2022 ರ ರಾಷ್ಟ್ರೀಯ ಶಿಕ್ಷಣ ದಿನದ ಥೀಮ್ “ಕೋರ್ಸ್ ಬದಲಾಯಿಸುವುದು ಮತ್ತು ಶಿಕ್ಷಣವನ್ನು ಪರಿವರ್ತಿಸುವುದು” ಎಂಬುದಾಗಿದೆ.

ಪೋಲಿಸ್ ಇಲಾಖೆಯಲ್ಲಿ 12000 ಹುದ್ದೆಗಳು ಶೀಘ್ರವೇ ಭರ್ತಿ- ಜ್ಞಾನೇಂದ್ರ

ಪೊಲೀಸ್ ಇಲಾಖೆಯಲ್ಲಿ 12 ಸಾವಿರ ಹುದ್ದೆಗಳು ಖಾಲಿ ಇದ್ದು, ಶೀಘ್ರವೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಹೆಬ್ಬಾಳು ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು, ಪ್ರಸ್ತುತ ಪೊಲೀಸ್ ಇಲಾಖೆಯಲ್ಲಿ 12 ಸಾವಿರ ಹುದ್ದೆಗಳು ಖಾಲಿ ಇವೆ.

ಈಗ ಐದು ಸಾವಿರ ಹುದ್ದೆಗಳ ಭರ್ತಿಗೆ ಕ್ರಮವಹಿಸಲಾಗಿದೆ ಎಂದರು, ಇದುವರೆಗೆ ಶೇ.35ರಷ್ಟು ಪೊಲೀಸ್ ಹುದ್ದೆಗಳು ಖಾಲಿ ಇರುತ್ತಿತ್ತು. ಇದೀಗ 12 ಸಾವಿರ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಹಂತ ಹಂತವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದರು.

ಬಿಜೆಪಿ ಸರ್ಕಾರ ಬರುವ ಮುನ್ನ ಪೊಲೀಸ್ ಇಲಾಖೆಯಲ್ಲಿ 35 ಸಾವಿರ ಹುದ್ದೆಗಳು ಖಾಲಿಯಿತ್ತು, ಪ್ರತಿ ವರ್ಷ ಸಾವಿರಾರು ಖಾಲಿ ಹುದ್ದೆ ಭರ್ತಿ ಮಾಡುವ ಮೂಲಕ ಇಲಾಖೆಗೆ ಶಕ್ತಿ ತುಂಬುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ವರದಿ ಬರುವವರೆಗೂ SI ಪರೀಕ್ಷೆ ನಡೆಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ವರದಿ ಬರುವವರೆಗೂ ಪರೀಕ್ಷೆ ನಡೆಸುವುದಿಲ್ಲ.. ಈಗಾಗಲೇ ಎಲ್ಲಾ ತನಿಖೆಗಳು ಪಾರದರ್ಶಕವಾಗಿ ನಡೆಯುತ್ತಿವೆ. ವರದಿಯನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ವಶಪಡಿಸಿದ ವಾಹನ ಠಾಣೆಯ ಮುಂದೆ ನಿಲ್ಲಿಸದೇ ಶ್ಯೂರಿಟಿ ಪಡೆದು ಕಳಿಸಿ

0

ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಅನಗತ್ಯವಾಗಿ ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿಕೊಳ್ಳಬೇಡಿ. ಬದಲಿಗೆ ಶ್ಯೂರಿಟಿ ಪಡೆದು ಬಿಡುಗಡೆ ಮಾಡಿ ಎಂದು ಹೈಕೋರ್ಟ್ ಸೂಚಿಸಿದೆ.

ವಾಹನ ಬಿಡುಗಡೆ ಮಾಡಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಜವ್ವಾಜಿ ಧನತೇಜ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.
ಕೆ. ನಟರಾಜನ್ ಅವರಿದ್ದ ಪೀಠ ಈ ನಿರ್ದೇಶನ ನೀಡಿದೆ.
ಪೀಠ ತನ್ನ ಆದೇಶದಲ್ಲಿ, ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡ ವಾಹನಗಳನ್ನು ವಿನಾಕಾರಣ ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ.

ಹಲವು ವರ್ಷಗಳ ಕಾಲ ಠಾಣೆಯ ಮುಂದೆ ನಿಲ್ಲುವ ವಾಹನಗಳು ನಿಧಾನವಾಗಿ ಹಾಳಾಗುತ್ತವೆ. ದಿನ ಕಳೆದಂತೆ ಅವುಗಳನ್ನು ಗುರುತಿಸುವುದಕ್ಕೂ ಸಾಧ್ಯವಾಗದು ಮತ್ತು ನ್ಯಾಯಾಲಯಕ್ಕೆ ತರಲಿಕ್ಕೂ ಆಗದ ಸ್ಥಿತಿ ತಲುಪುತ್ತವೆ.
ಆದ್ದರಿಂದ ಸುಪ್ರೀಂ ಕೋರ್ಟ್ ಸುಂದರ್ ಬಾಯ್ ಅಂಬಲಾಲ್ ವರ್ಸಸ್ ಗುಜರಾತ್ ಸರ್ಕಾರ ಪ್ರಕರಣದಲ್ಲಿ ನೀಡಿರುವ ನಿರ್ದೇಶನಗಳ ಅನ್ವಯ ವಾಹನಗಳನ್ನು ಅವುಗಳ ಮಾಲಿಕರಿಗೆ ಬಾಂಡ್ ಪಡೆದುಕೊಳ್ಳುವುದು ಸೇರಿದಂತೆ ಅಗತ್ಯ ಷರತ್ತುಗಳನ್ನು ವಿಧಿಸುವ ಮೂಲಕ ಹಿಂದಿರುಗಿಸಬೇಕು.

ಅಲ್ಲದೇ, ವಾಹನ ಬಿಡುಗಡೆಗೂ ಮುನ್ನ ಪಂಚರ ಸಮಕ್ಷಮದಲ್ಲಿ ವಿವಿಧ ಕೋನಗಳಲ್ಲಿ ವಾಹನದ ಫೋಟೋಗಳನ್ನು ಚಿತ್ರಿಸಿಕೊಳ್ಳಬೇಕು. ಈ ಫೋಟೋಗಳನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಕೈಗಾರಿಕಾ ಕಾರಿಡಾರ್ ವಿರೋಧಿಸಿ ಪ್ರತಿಭಟನೆ

0

ಕೈಗಾರಿಕಾ ಕಾರಿಡಾರ್ ಯೋಜನೆಗೆ ಫಲವತ್ತಾದ ಕೃಷಿ ಜಮೀನು ಸ್ವಾಧೀನ ಪಡಿಸಿಕೊಳ್ಳುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ತಾಲ್ಲೂಕಿನ ಮೆಳ್ಳೆಕಟ್ಟೆ, ಅಣಜಿ, ಲಿಂಗಾಪುರ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

‘ಕೈಗಾರಿಕಾ ಕಾರಿಡಾರ್ ಉದ್ದೇಶಕ್ಕಾಗಿ ಫಲವತ್ತಾದ 1,156 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕೆಐಎಡಿಬಿ ಮುಂದಾಗಿದೆ. ನಮ್ಮ ಜಮೀನಲ್ಲಿ ಅಡಿಕೆ, ತೆಂಗು, ಮಾವು, ಹಣ್ಣಿನ ಬೆಳೆ, ಸಾಂಬಾರ್ ಪದಾರ್ಥ ಸೇರಿದಂತೆ ತೋಟಗಾರಿಕೆ ಹಾಗೂ ಕೃಷಿ ಬೆಳೆಗಳನ್ನು ಬೆಳೆಯುತ್ತಿದ್ದೇವೆ. 6-7 ತಲೆಮಾರುಗಳಿಂದ ಕೃಷಿ ಮಾಡಿಕೊಂಡು ಬಂದಿದ್ದೇವೆ. ಈಗ ನಮ್ಮ ಬದುಕನ್ನು ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ ಎಂದು’ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಹೊರತುಪಡಿಸಿ ಬೇರೆ ಯಾವುದೇ ಉದ್ದೇಶಕ್ಕೂ ಬಳಸಲಾಗದ ಪ್ರದೇಶವಾಗಿದೆ. ಫಲವತ್ತಾದ ಕೃಷಿ ಜಮೀನಿನಲ್ಲಿ ಯಾವುದೇ ಕೈಗಾರಿಕಾ ಕಟ್ಟಡ, ಕ್ಷೇತ್ರ ರಚನೆ ಮಾಡಲು ಯೋಗ್ಯವಾಗಿಲ್ಲ ಎಂದು ತಿಳಿಸಿದರು.

ನವಿಲು, ಗೂಬೆ, ಮೊಲ, ನರಿ, ಕಾಡುಹಂದಿ, ಪುನುಗು ಬೆಕ್ಕು, ಕಾಡುಬೆಕ್ಕು, ಕಾಡುಕುರಿ, ಕರಡಿ, ಜಿಂಕೆ ಸೇರಿದಂತೆ ವನ್ಯಜೀವಿ ಸಂಕುಲ ಆಶ್ರಯ ಪಡೆದಿದೆ. ಇಂತಹ ಪ್ರದೇಶದಲ್ಲಿ ಕೈಗಾರಿಕಾ ಕಾರಿಡಾರ್ ಮಾಡಿದರೆ ಜೀವವೈವಿಧ್ಯ ನಾಶವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಹಿಂದಿನ ಸರ್ಕಾರಗಳು ಬೃಹತ್ ನೀರಾವರಿ ಯೋಜನೆಗಳನ್ನು ಕೈಗೊಂಡಿವೆ. ಕೈಗಾರಿಕಾ ಕಾರಿಡಾರ್ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದಲ್ಲಿ ಸರ್ಕಾರದ ಬೊಕ್ಕಸಕ್ಕೂ ಅಪಾರ ನಷ್ಟವಾಗುತ್ತದೆ.

ಸರ್ಕಾರ ಭೂಸ್ವಾಧೀನದಿಂದ ಹಿಂದೆ ಸರಿಯದಿದ್ದರೆ ತೀವ್ರಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ, ಮುಖಂಡರಾದ ಹೊನ್ನೂರು ಮುನಿಯಪ್ಪ, ಸಿದ್ಧವೀರಪ್ಪ, ಮರಳಸಿದ್ದಯ್ಯ, ಗೋಶಾಲೆ ಬಸವರಾಜ, ಚಿತ್ರದುರ್ಗದ ಚಿಕ್ಕಬ್ಬಿಗೆರೆ ನಾಗರಾಜ, ಗ್ರಾಮಸ್ಥರಾದ ಶಂಕರ್, ಚಂದ್ರಪ್ಪ, ಕೆ.ವಿ.ಅನ್ನಪೂರ್ಣ, ಶರತ್, ಸುನೀತಾ, ಮಂಜುಳಾ, ಜ್ಯೋತಿ, ನವೀನ, ಗಿರಿಜಮ್ಮ, ಶಶಿಕಲಾ, ನಿರ್ಮಲಮ್ಮ ಭಾಗವಹಿಸಿದ್ದರು.