Thursday, March 26, 2026
Thursday, March 26, 2026
Home Blog Page 1389

ಮುಖಂಡರಿಂದ ಮುರುಘಾಶ್ರೀಗಳ ವಜಾಕ್ಕೆ ಆಗ್ರಹ

0

ಪೋಕ್ಸೋಕೇಸ್ನಲ್ಲಿ ನ್ಯಾಯಾಂಗಬಂಧನದಲ್ಲಿರುವಂತಮುರುಘಾ ಶ್ರೀಗಳ ಲೈಂಗಿಕ ಹಗರಣಗಳು ಒಂದರ ಹಿಂದೆ ಒಂದು ಬಯಲಾಗುತ್ತಿದೆ.
ಈಗಾಗಲೇ ನಾಲ್ವರು ವಿದ್ಯಾರ್ಥಿನಿಗಳು ಆರೋಪ ಮಾಡಿದ್ದು, ಮಠದಲ್ಲಿ ಇನ್ನೊಂದಷ್ಟು ಲೈಂಗಿಕ ಹಗರಣಗಳು ಬೆಳಕಿಗೆ ಬರುತ್ತಿದೆ.

ಇದೀಗ ಮುರುಘಾ ಶ್ರೀ ಗಳನ್ನು ಪೀಠಾಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಭಾರೀ ಆಗ್ರಹ ಕೇಳಿಬರುತ್ತಿದೆ. ಕೂಡಲೇ ಸ್ವಾಮೀಜಿಯನ್ನು ಮಠದಿಂದ ವಜಾ ಮಾಡಬೇಕು ಎಂದು ಹಲವರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾಜಿ ಸಿಎಂ ಯಡಿಯೂರಪ್ಪರನ್ನು ಕೂಡ ಭೇಟಿಯಾಗಿ ಮುರುಘಾ ಶ್ರೀಗಳ ವಜಕ್ಕೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು ಪೋಸ್ಕೋ ಪ್ರಕರಣದಲ್ಲಿ ಜೈಲು ಪಾಲು ಆಗಿರುವಂತ ಬೆನ್ನಲ್ಲೇ, ಮಠದ ಪೀಠಾಧ್ಯಕ್ಷರ ಆಯ್ಕೆ ಕುರಿತಂತೆ ಮಾಜಿ ಸಚಿವ ಏಕಾಂತಯ್ಯ ನೇತೃತ್ವದಲ್ಲಿ ಮುಖಂಡರ ಸಭೆಯನ್ನು ಕೂಡ ನಡೆಸಲಾಗಿತ್ತು.

ಕೆಪಿಎಸ್ ಸಿ ಯಿಂದ ಸಾಂಖ್ಯಿಕ ಇಲಾಖೆಯಲ್ಲಿನ ಹುದ್ದೆಗಳಿಗೆ ಆನ್ ಲೈನ್ ಅರ್ಜಿ

0

ಕರ್ನಾಟಕ ಲೋಕ ಸೇವಾ ಆಯೋಗವು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿ ಮತ್ತು ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಉಳಿಕೆ ಮೂಲ ವೃಂದದ 55 + 03 (ಬ್ಯಾಕ್‌ಲಾಗ್‌) ಒಟ್ಟು ೫೮ ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆ ಹಾಗೂ ಕಲ್ಯಾಣ ಕರ್ನಾಟಕದ 17 ಸಾಂಖ್ಯಿಕ ನಿರೀಕ್ಷಕರ ಹುದ್ದೆ, ಎಲ್ಲ ಸೇರಿಸಿ ಒಟ್ಟು 75 ಹುದ್ದೆಗಳಿಗೆ ನೇಮಕ ನಡೆಯಲಿದೆ. ಕಲ್ಯಾಣ ಕರ್ನಾಟಕದ ಐದು ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಕಳೆದ ಜುಲೈನಲ್ಲಿ ಅಧಿಸೂಚನೆ ಪ್ರಕಟಿಸಿರುವುದರಿಂದ ಈಗ ಈ ಹುದ್ದೆಗೆ ನೇಮಕ ನಡೆಯುತ್ತಿಲ್ಲ.
ಉಳಿಕೆ ಮೂಲ ವೃಂದದ ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಮತ್ತು ಕಲ್ಯಾಣ ಕರ್ನಾಟಕದ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಪ್ರತ್ಯೇಕವಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ಆಸಕ್ತ, ಅರ್ಹ ಅಭ್ಯರ್ಥಿಗಳು ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗೆ ಅಕ್ಟೋಬರ್‌ 20 ರಿಂದ ನವೆಂಬರ್‌ 18 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಪಾವತಿಸಲು ನವೆಂಬರ್‌ 19 ಕೊನೆಯ ದಿನವಾಗಿರುತ್ತದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳಿಗೆ ಅಕ್ಟೋಬರ್‌ 17 ರಿಂದ ನವೆಂಬರ್‌ 15 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಪಾವತಿಸಲು ನವೆಂಬರ್‌ 16 ಕೊನೆಯ ದಿನವಾಗಿರುತ್ತದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗೆ Mathematics, Pure Mathematics, Statistics, Applied Statistics, Economics with Statistics / Quantitative Techniques, Pure Economics, Applied Economics, Applied Mathematics, Econometrics or Computer Science ಈ ವಿಷಯಗಳಲ್ಲಿ ಮಾಸ್ಟರ್‌ ಡಿಗ್ರಿ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳಿಗೆ 1. Economics 2. Statistics 3.Mathematics 4. Computer Science ಈ ಯಾವುದಾದರೂ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ವಿದ್ಯಾರ್ಹತೆಯನ್ನು ಹೊರತು ಪಡಿಸಿ ಇತರೆ ಯಾವುದೇ ತತ್ಸಮಾನ ಎಂದು ಹೇಳಲಾಗುವ ವಿದ್ಯಾಹರ್ತೆಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಸಾಮಾನ್ಯ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38ವರ್ಷಗಳು. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-10-2022 (ನಿರೀಕ್ಷಕರ ಹುದ್ದೆ ) 20-10-2022 (ಅಧಿಕಾರಿ ಹುದ್ದೆ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-11-2022 (ನಿರೀಕ್ಷಕರ ಹುದ್ದೆ) 18-11-2022 (ಅಧಿಕಾರಿ ಹುದ್ದೆ)
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 16-11-2022 (ನಿರೀಕ್ಷಕರ ಹುದ್ದೆ) 19-11-2022 (ಅಧಿಕಾರಿ ಹುದ್ದೆ)
ಸಹಾಯವಾಣಿ ಸಂಖ್ಯೆ: 18005728707
ಸಾಮಾನ್ಯ ಅಭ್ಯರ್ಥಿಗಳು 600 ರೂ. ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಹಾಗೂ ಮಾಜಿ ಸೈನಿಕರು 50 ರೂ. ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.

ಪ್ರಕ್ರಿಯೆ ಶುಲ್ಕ (processing fees) 35 ರೂ.ಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳೂ ಸೇರಿದಂತೆ ಎಲ್ಲ ಅಭ್ಯರ್ಥಿಗಳು ಪಾವತಿಸಬೇಕಿರುತ್ತದೆ. ಈ ಶುಲ್ಕ ಪಾವತಿಸದಿದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಶೇಕಡಾವಾರು ಅಂಕಗಳ ಆಧಾರದಲ್ಲಿ ನೇಮಕಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ.

ಪ್ರತಿಯೊಂದು ಪತ್ರಿಕೆಯು ಗರಿಷ್ಠ 100 ಅಂಕಗಳಿಗೆ ನಡೆಯಲಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ನಡೆಯಲಿದೆ. ಪತ್ರಿಕೆ-1 ಸಾಮಾನ್ಯ ಜ್ಞಾನಕ್ಕೆ ಸಂಬಂಧ ಪಟ್ಟಿದ್ದರೆ ಪತ್ರಿಕೆ-2 ಮೂರು ವಿಭಾಗಗಳನ್ನು ಹೊಂದಿರುತ್ತದೆ. ಅವುಗಳೆಂದರೆ;
ಸಾಮಾನ್ಯ ಕನ್ನಡ-35 ಅಂಕ, ಸಾಮಾನ್ಯ ಇಂಗ್ಲಿಷ್‌-35 ಅಂಕ, ಕಂಪ್ಯೂಟರ್‌ ಜ್ಞಾನ-30 ಅಂಕ.
ಪತ್ರಿಕೆ-1 ಪರೀಕ್ಷೆ ಬರೆಯಲು ಒಂದೂವರೆ ಗಂಟೆ ಹಾಗೂ ಪತ್ರಿಕೆ-2 ರ ಪರೀಕ್ಷೆ ಬರೆಯಲು ಎರಡು ಗಂಟೆ ಕಾಲಾವಕಾಶ ನೀಡಲಾಗುತ್ತದೆ.

ಈ ಪರೀಕ್ಷೆಯ ಪಠ್ಯ ಕ್ರಮವನ್ನು ಆಯೋಗದ ವೆಬ್‌ನಲ್ಲಿ ಒದಗಿಸಲಾಗಿದೆ. ಪ್ರಶ್ನೆ ಪತ್ರಿಕೆಯು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಇರಲಿದೆ. ಈ ಪರೀಕ್ಷೆಯಲ್ಲಿ ಶೇ.35 ರಷ್ಟು ಅಂಕ ಪಡೆದವರು ಮಾತ್ರ ನೇಮಕಕ್ಕೆ ಅರ್ಹರಾಗಿರುತ್ತಾರೆ. ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನ (Negative) ನಡೆಸಲಾಗುತ್ತದೆ.

ಆದರೆ ಪ್ರತಿ ತಪ್ಪು ಉತ್ತರಕ್ಕೆ ಪ್ರಶ್ನೆಗೆ ನಿಗದಿಪಡಿಸಿದ ಅಂಕಗಳ ನಾಲ್ಕನೇ ಒಂದು ಭಾಗದಷ್ಟು(1/4) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಮುಂದೆ ನೀಡಲಾಗುತ್ತದೆ. ಅಗತ್ಯ ಇರುವ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನೂ ಬರೆದು ಅರ್ಹತೆ ಪಡೆಯಬೇಕಿರುತ್ತದೆ.

ಪರೀಕ್ಷಾ ವೇಳಾಪಟ್ಟಿಯನ್ನು ಮುಂದೆ ಪ್ರಕಟಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕೆಪಿಎಸ್ ಸಿ ಯಿಂದಸಾಂಖ್ಯಿಕ ಇಲಾಖೆಯಲ್ಲಿನ ಹುದ್ದೆಗಳಿಗೆ ಆನ್ ಲೈನ್ ಅರ್ಜಿ

ಉಕ್ರೇನ್ ಜೊತೆ ಮಾತುಕತೆಗೆ ಸಿದ್ಧ-ಪುಟಿನ್

0

ಉಕ್ರೇನ್ ಮೇಲೆ ಬೃಹತ್ ಹೊಸ ದಾಳಿಗಳ ಅಗತ್ಯವಿಲ್ಲ. ರಷ್ಯಾ ದೇಶವನ್ನು ನಾಶಮಾಡಲು ನೋಡುತ್ತಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಹೇಳಿದರು.

ಕಝಾಕಿಸ್ತಾನ್‌ನಲ್ಲಿ ನಡೆದ ಶೃಂಗಸಭೆಯ ಕೊನೆಯಲ್ಲಿ ಪುಟಿನ್ ಸುದ್ದಿಗೋಷ್ಠಿಯಲ್ಲಿ, ರಷ್ಯಾದ ಮೀಸಲುದಾರರ ಕರೆ ಎರಡು ವಾರಗಳಲ್ಲಿ ಮುಗಿಯಲಿದೆ. ಮುಂದಿನ ದಿನಗಲ್ಲಿ ಸಜ್ಜುಗೊಳಿಸುವ ಯಾವುದೇ ಯೋಜನೆಗಳಿಲ್ಲ ಎಂದು ಹೇಳಿದರು.

ಉಕ್ರೇನ್ ಭಾಗವಹಿಸಲು ಸಿದ್ಧವಾಗಿದ್ದರೆ ಅವರಿಗೆ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಅಗತ್ಯವಿರುತ್ತದೆ. ಉಕ್ರೇನ್ ಜೊತೆ ಮಾತುಕತೆ ನಡೆಸಲು ರಷ್ಯಾ ಸಿದ್ಧವಾಗಿದೆ ಎಂಬ ಕ್ರೆಮ್ಲಿನ್ ನಿಲುವನ್ನು ಅವರು ಪುನರಾವರ್ತಿಸಿದರು.

ವಾರಗಳ ಉಕ್ರೇನಿಯನ್ ಪ್ರಗತಿ ಮತ್ತು ಗಮನಾರ್ಹ ರಷ್ಯಾದ ಸೋಲುಗಳು ಪುಟಿನ್ ಅವರನ್ನು ಕೊಂಚ ಮೇದುಗೊಳಿಸಿದೆ ಎಂದೇನಿಸುತ್ತದೆ. ಉಕ್ರೇನ್ ಮತ್ತು ರಷ್ಯಾದ ನಡುವೆ ನಡೆಯುತ್ತಿರುವ ಯುದ್ಧ 8 ನೇ ತಿಂಗಳಿಗೆ ಕಾಲಿಡುತ್ತಿದೆ.

ಕೆಲ ದಿನಗಳ ಹಿಂದೆ ರಷ್ಯಾದ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಲು ಸಿದ್ಧ ಎಂದು ಹೇಳಿದ್ದ ಪುಟಿನ್ ,ರಷ್ಯಾದೊಂದಿಗೆ ನ್ಯಾಟೋ ಪಡೆಗಳ ನೇರ ಘರ್ಷಣೆಯ ಸಂದರ್ಭದಲ್ಲಿ ಜಾಗತಿಕ ದುರಂತದ ಬಗ್ಗೆಯೂ ಎಚ್ಚರಿಕೆ ನೀಡಿದ್ದರು.

ಫೆಬ್ರವರಿ 24ರಿಂದ ಉಕ್ರೇನ್, ರಷ್ಯಾದ ನಡುವೆ ಯುದ್ಧ ಪ್ರಾರಂಭದಿಂದಲೂ ಕೈವ್ ಮತ್ತು ಇತರ ಉಕ್ರೇನಿಯನ್ ನಗರಗಳ ಮೇಲೆ ರಷ್ಯಾ ತನ್ನ ಭಾರೀ ಕ್ಷಿಪಣಿ ದಾಳಿಯನ್ನು ನಡೆಸುತ್ತಿದೆ. ಕೆಲ ದಿನಗಳ ಹಿಂದೆ ಉಕ್ರೇನ್ ಕ್ರೈಮಿಯಾ ಸೇತುವೆ ಮೇಲೆ ದಾಳಿ ನಡೆಸಿತ್ತು. ಇದರಿಂದ ಕೋಪಗೊಂಡಿದ್ದ ಪುಟಿನ್ ಮರುದಿನ ಉಕ್ರೇನ್ ಮೇಲೆ ಬಹು ಕ್ಷಿಪಣಿ ದಾಳಿ ನಡೆಸಿದ್ದರು.

ಇದು ಕ್ರೈಮಿಯಾ ಸೇತುವೆ ಹಾನಿಗೊಳಗಾಗಿದ್ದಕ್ಕೆ ಪ್ರತಿಕಾರ ಎಂದು ಹೇಳಿದ್ದರು.

ನಾವು ಉಕ್ರೇನ್ ಅನ್ನು ನಾಶಮಾಡುವ ಉದ್ದೇಶ ಹೊಂದಿಲ್ಲ. ಖಂಡಿತ ಇಲ್ಲ ಪುಟಿನ್ ಅವರು ಹೇಳಿದ್ದಾರೆ.

ನೀರು ಎಲ್ಲ ಜೀವರಾಶಿಗಳಿಗೆ ಉಪಯುಕ್ತ ಅದಕ್ಕೆ ದೈವದ ಸ್ಥಾನ- ಡಾ.ವೀರೇಂದ್ರ ಹೆಗ್ಗಡೆ

0

ಕೆ.ಆರ್‌.ಪೇಟೆ ತಾಲೂಕಿನ ಅಂಬಿಗರಹಳ್ಳಿ, ಪುರ, ಸಂಗಾಪುರ ಬಳಿ ಇರುವ ತ್ರಿವೇಣಿ ಸಂಗಮದಲ್ಲಿ ಪವಿತ್ರ ಕುಂಭಮೇಳ ಮತ್ತು ಬಾಲ ಮಹದೇಶ್ವರ ಸ್ವಾಮಿಯ ದೇವಸ್ಥಾನವನ್ನು ಸಾಧು-ಸಂತರ ಸಮ್ಮುಖದಲ್ಲಿ ಉದ್ಘಾಟಿಸುವ ಮೂಲಕ ಮಹಾ ಕುಂಭಮೇಳಕ್ಕೆ ಚಾಲನೆ ನೀಡಲಾಯಿತು.

ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಆದಿ ಚುಂಚನಗಿರಿ ಕ್ಷೇತ್ರದ ಡಾ| ನಿರ್ಮಲಾನಂದನಾಥ ಸ್ವಾಮೀಜಿ ಸಹಿತ ವಿವಿಧ ಕ್ಷೇತ್ರಗಳಿಂದ ಆಗಮಿಸಿದ್ದ ಸಾಧುಸಂತರ ಸಮ್ಮುಖದಲ್ಲಿ ಮಹಾ ಕುಂಭಮೇಳಕ್ಕೆ ಚಾಲನೆ ದೊರೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು, ಎಲ್ಲ ಜೀವರಾಶಿಗಳಿಗೂ ನೀರು ಅತಿ ಉಪಯುಕ್ತ. ಇದಕ್ಕೆ ದೇವರ ಸ್ಥಾನ ನೀಡಿ ಪೂಜೆ ಸಲ್ಲಿಸುತ್ತಾ ಬಂದಿ ದ್ದೇವೆ. ಇದರ ಒಂದು ಭಾಗವೇ ಕುಂಭ ಮೇಳ. ಕಾವೇರಿ, ಹೇಮಾವತಿ, ಲಕ್ಷ್ಮಣತೀರ್ಥ ನದಿಗಳ ಸಂಗಮ ಕ್ಷೇತ್ರವಾಗಿರುವ ತ್ರಿವೇಣಿ ಸಂಗಮದಲ್ಲಿ ನಮಗೆ ಅರಿವಿಲ್ಲದಂತೆ ಆಗಿರುವ ಪಾಪ ಕರ್ಮಗಳನ್ನು ಪರಿಹರಿಸಿಕೊಳ್ಳಲು ಸ್ನಾನ ಮಾಡುವಂತೆ ಸಲಹೆ ನೀಡಿದರು.ಸಚಿವ ಕೆ.ಸಿ. ನಾರಾಯಣ ಗೌಡ ಅಧ್ಯಕ್ಷತೆ ವಹಿಸಿದ್ದರು.

ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ಕಾಗಿನೆಲೆ ಕೆ.ಆರ್‌. ನಗರ ಶಾಖಾ ಮಠದ ಪೀಠಾಧ್ಯಕ್ಷರಾದ ಶಿವಾನಂದಪುರಿ ಮಹಾ ಸ್ವಾಮೀಜಿ, ಚಂದ್ರವನದ ಶ್ರೀ ತ್ರಿನೇತ್ರಮಹಂತ ಶಿವಯೋಗಿ ಸ್ವಾಮೀಜಿ, ಸಾಲೂರು ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಮೈಸೂರು ಆದಿಚುಂಚನಗಿರಿ ಮಠದ ಸೋಮನಾಥ ಸ್ವಾಮೀಜಿ, ಬೆಡದಹಳ್ಳಿ ಪಂಚಭೂತೇಶ್ವರ ಮಠದ ರುದ್ರಮುನಿ ಸ್ವಾಮೀಜಿ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸಹಿತ ಅನೇಕರು ಉಪಸ್ಥಿತರಿದ್ದರು.

ರಾಜ್ಯ ಪರೀಕ್ಷಾ ಪಾಧಿಕಾರದಿಂದ ಎಂಬಿಎ ಎಂಟೆಕ್ ಕೋರ್ಸ್ ಗಳ ಪ್ರವೇಶ ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸುಗಳ ಮೊದಲನೆ ವರ್ಷದ, 1ನೇ ಸೆಮಿಸ್ಟರ್ ಗಳ ಪ್ರವೇಶಕ್ಕೆ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ-2022ಕ್ಕೆ ಅರ್ಜಿ ಸಲ್ಲಿಸೋದಕ್ಕೆ ಆಹ್ವಾನಿಸಿದೆ.

ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಅಕ್ಟೋಬರ್ 24, 2022 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.

ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. 2022-23ನೇ ಸಾಲಿನ ಮೊದಲನೇ ವರ್ಷದ, 1ನೇ ಸೆಮಿಸ್ಟರ್ ಗಳ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇಂಜಿನಿಯರಿಂಗ್ ಹಾಗೂ ಟೆಕ್ನಾಲಜಿ ವಿಭಾಗದ GATE ಅರ್ಹ ಅಭ್ಯರ್ಥಿಗಳು ಮಾತ್ರ ವಿಟಿಯು, ಬೆಳಗಾವಿ ಅಡಿಯಲ್ಲಿನ ವಿವಿಧ ಎಂ.ಟೆಕ್ ಕೋರ್ಸುಗಳಿಗೆ ಪ್ರವೇಶ ಪಡೆಯಲು ಅರ್ಹರಾಗುತ್ತಾರೆ ಎಂದು ಹೇಳಿದೆ.

ಅರ್ಹತಾ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಒಟ್ಟು ಕನಿಷ್ಟ ಶೇ.50 ಹಾಗೂ ಕರ್ನಾಟಕ ಎಸ್ಸಿ, ಎಸ್ಟಿ, ಪ್ರವರ್ಗ-1ರ ಅಭ್ಯರ್ಥಿಗಳು ಕನಿಷ್ಠ ಶೇ.45 ಅಂಕಗಳನ್ನು ಪಡೆದಿರಬೇಕು. ಸಿಜಿಪಿಎ, ಎಸ್ ಜಿಪಿಎ ಗ್ರೇಡ್ ಗಳ ಮಾದರಿಯಲ್ಲಿ ನಿಗದಿಪಡಿಸಿರುವ ಅರ್ಹತಾ ಪರೀಕ್ಷೆಯ ಅಂಕಗಳು, ಅಗತ್ಯವಿರುವ ಕನಿಷ್ಠ ಅರ್ಹತಾ ಅಂಕಗಳನ್ನು ಅಥವಾ ಅಧಕ್ಕಿಂತ ಹೆಚ್ಚು ಅಂಕಗಳನ್ನು ಗ್ರೇಡ್ ಗಳ ಅಂಕಗಳು ಸೂಚಿಸುತ್ತಿವು ಬಗ್ಗೆ ಖಾತರಿ ಪಡಿಸಿಕೊಳ್ಳಿ ಎಂದು ತಿಳಿದು ಬಂದಿದೆ.

ಪಿಜಿ ಸಿಇಟಿ-2022ಕ್ಕೆ ಆನ್ ಲೈನ್ ಮೂಲಕ ನೊಂದಣಿ ಹಾಗೂ ಅರ್ಜಿ ಸಲ್ಲಿಸಲು ಪೋರ್ಟಲ್ ಅನ್ನು ದಿನಾಂಕ 15-10-2022ರಿಂದ ತೆರೆಯಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 24-10-2022ರ ಸಂಜೆ 4 ರೊಳಗಾಗಿ ಆನ್ ಲೈನ್ ಮೂಲಕ ನೋಂದಣಿ ಮಾಡಿ, ಶುಲ್ಕ ಪಾವತಿಸಿ, 26-10-2022ರ ರಾತ್ರಿ 11.59ರ ವರೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ತಿಳಿಸಿದೆ.

ಸಾಮಾನ್ಯ ಮತ್ತು ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಪ್ರತಿ ಕೋರ್ಸಿಗೆ ರೂ.650, ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ 1ಕ್ಕೆ ಸೇರಿದ ಕರ್ನಾಟಕದ ಅಭ್ಯರ್ಥಿಗಳಿಗೆ ಮಾತ್ರ ರೂ.500 ಆಗಿರುತ್ತದೆ.

ಡಿಜಿಟಲ್ ಇಂಡಿಯಾ ಯೋಜನೆ ಸಫಲ- ಐಎಂಎಫ್ ಶ್ಲಾಘನೆ

0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಡಿಜಿಟಲ್​ ಇಂಡಿಯಾ ಫಲ ನೀಡಿದೆ.ಕಳೆದ 2 ವರ್ಷಗಳಿಂದ ಭಾರತ ಡಿಜಿಲೀಕರಣದಲ್ಲಿ ಮುಂಚೂಣಿಯಲ್ಲಿದೆ. ಇದರ ಬಳಕೆಯಿಂದ ಕೆಲ ಆಡಳಿತಾತ್ಮಕ ಸಮಸ್ಯೆಗಳೂ ಕೂಡ ನಿವಾರಣೆಯಾಗಿವೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ ತಿಳಿಸಿದೆ.

ಕೋವಿಡ್​ ನಂತರ ಡಿಜಿಟಲೀಕರಣ ಜಗತ್ತಿನಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಅದರಲ್ಲೂ ಭಾರತದಲ್ಲಿ ಇದರ ಬಳಕೆ ಹೆಚ್ಚಿದೆ. 2 ವರ್ಷಗಳಿಂದ ದೇಶ ಮುಂಚೂಣಿಯಲ್ಲಿದೆ. ಡಿಜಿಟಲ್​ ಸೌಕರ್ಯ ಒದಗಿಸಿರುವುದರಿಂದ ಆಡಳಿದಲ್ಲಿನ ದೋಷಗಳೂ ಮುಕ್ತಿ ಕಂಡಿವೆ ಎಂದು ಐಎಂಎಫ್‌ನ ಏಷ್ಯಾ ಪೆಸಿಫಿಕ್ ವಿಭಾಗದ ಉಪನಿರ್ದೇಶಕ ಅನ್ನೆರ್ ಮೇರಿ ಗುಲ್ಡೆ ವೋಲ್ಫ್ ಹೇಳಿದ್ದಾರೆ.

ಕೊರೋನಾ ಸಂದರ್ಭದ ನಂತರ ಏಷ್ಯಾ ಮತ್ತು ಇತರಡೆಗಳಲ್ಲಿ ಗಮನಾರ್ಹವಾದ ಬದಲಾವಣೆ ಕಂಡುಬಂದಿದೆ. ಡಿಜಿಟಲೀಕರಣವು ಆಯಾ ಸಂಸ್ಥೆಗಳ ಉತ್ಪಾದಕತೆಯನ್ನೂ ಹೆಚ್ಚಿಸಿದೆ ಎಂದು ಪ್ರತಿಕ್ರಿಯಿಸಿದರು.

ಡಿಜಿಟಲೀಕರಣದಲ್ಲಿ ಜಾಗತಿಕವಾಗಿ ಭಾರತ 6.1 ಶೇಕಡಾ ಬೆಳವಣಿಗೆಯನ್ನು ಸಾಧಿಸಿದೆ. ಅತಿ ಬೇಡಿಕೆ ಇರುವ ದೇಶಗಳಲ್ಲಿ ಇದು ಮುಂದಿದೆ ಎಂದು ಹೇಳಿದರು.

ಉಕ್ರೇನಿನಲ್ಲಿ ಶಿಕ್ಷಣ ವಂಚಿತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಜ್ಬೆಕಿಸ್ತಾನ್ ಆಮಂತ್ರಣ

ಉಕ್ರೇನ್​ ಮೇಲೆ ರಷ್ಯಾ ಯುದ್ಧ ಮಾಡಿದಾಗ ಅಲ್ಲಿಂದ 10 ಸಾವಿರಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್​ ಬಂದಿದ್ದಾರೆ.

ಭಾರತದಲ್ಲಿ ಅವರ ಮುಂದಿನ ಓದು, ಭವಿಷ್ಯದ ಬಗ್ಗೆ ಇನ್ನೂ ಯಾವುದೇ ಒಂದು ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ. ಹೀಗಿರುವಾಗ ಉಜ್ಬೇಕಿಸ್ತಾನ ಸರ್ಕಾರ ಒಂದು ಮಹತ್ವದ ನಿರ್ಧಾರ ಪ್ರಕಟಿಸಿದೆ.

ಉಕ್ರೇನ್​​ನಿಂದ ಭಾರತಕ್ಕೆ ವಾಪಸ್​ ಬಂದ ವಿದ್ಯಾರ್ಥಿಗಳಲ್ಲಿ ಸುಮಾರು 2000 ಜನರಿಗೆ ತಮ್ಮ ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ಸೀಟ್​ ಕೊಡುವುದಾಗಿ ತಿಳಿಸಿದೆ.

ಈ ಬಗ್ಗೆ ಉಜ್ಬೇಕಿಸ್ತಾನ​ ವೈದ್ಯಕೀಯ ಉನ್ನತ ಶಿಕ್ಷಣ ಸಂಸ್ಥೆ ಪ್ರಕ್ರಿಯೆಯನ್ನು ಶುರುಮಾಡಿದೆ. 2000 ವಿದ್ಯಾರ್ಥಿಗಳಲ್ಲಿ ಕೆಲವರಿಗೆ ಸಾಂಕೇತಿಕವಾಗಿ ಪ್ರವೇಶ ಪತ್ರಗಳನ್ನೂ ವಿತರಣೆ ಮಾಡಿದೆ. ಹೈದರಾಬಾದ್​ನ ನಿಯೋ ಇನ್​ಸ್ಟಿಟ್ಯೂಟ್ ಆಫ್​ ಮೆಡಿಕಲ್​ ಸೈನ್ಸ್​ ಆಯಂಡ್​ ಟೆಕ್ನಾಲಜಿಯಲ್ಲಿ ಈ ಪ್ರವೇಶ ಪತ್ರ ವಿತರಣೆ ಕಾರ್ಯಕ್ರಮ ನಡೆದಿತ್ತು. ಭಾರತದಲ್ಲಿರುವ ಉಜ್ಬೇಕಿಸ್ತಾನ್​ ರಾಯಭಾರಿ ದಿಲ್ಶೋದ್ ಅಖಾಟೋವ್ ಈ ಬಗ್ಗೆ ಮಾಹಿತಿ ನೀಡಿದೆ. ಭಾರತೀಯ ರಾಷ್ಟ್ರೀಯ ವೈದ್ಯಕೀಯ ಮಂಡಳಿಯ ಹೊಸ ಸ್ಕ್ರೀನಿಂಗ್​ ಟೆಸ್ಟ್ ನಿಯಮಗಳು ಮತ್ತು ವಿದೇಶಿ ವೈದ್ಯಕೀಯ ಪದವೀಧರ ಪರವಾನಗಿ ಸ್ವೀಕಾರಾರ್ಹ ಎಂದು ಉಜ್ಬೇಕಿಸ್ತಾನ್ ವೈದ್ಯಕೀಯ ಉನ್ನತ ಶಿಕ್ಷಣ ಸಂಸ್ಥೆ ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.

ಉಜ್ಬೇಕಿಸ್ತಾನದ ಅನೇಕ ಯೂನಿವರ್ಸಿಟಿಗಳಲ್ಲಿ ಈಗಾಗಲೇ ಭಾರತದ 500 ವಿದ್ಯಾರ್ಥಿಗಳು ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದೀಗ ಮತ್ತೆ ಹೆಚ್ಚುವರಿಯಾಗಿ 2000 ವಿದ್ಯಾರ್ಥಿಗಳು ಸೇರಲಿದ್ದಾರೆ. ಭಾರತದ ಇನ್ನಷ್ಟು ವಿದ್ಯಾರ್ಥಿಗಳಿಗೆ ಸೀಟ್​ ವ್ಯವಸ್ಥೆ ಮಾಡಲು ಪ್ರಯತ್ನ ಪಡುವುದಾಗಿಯೂ ದಿಲ್ಶೋದ್ ತಿಳಿಸಿದ್ದಾರೆ. ಇದಕ್ಕೂ ಮುಂಚೆ ಕಳೆದ ತಿಂಗಳು ಉಜ್ಬೇಕಿಸ್ತಾನ್​ ಆರೋಗ್ಯ ಇಲಾಖೆ ಮತ್ತು ಭಾರತದ ಆರೋಗ್ಯ ಇಲಾಖೆ ನಡುವೆ ಇದೇ ವಿಚಾರವಾಗಿ ಸುದೀರ್ಘ ಮಾತುಕತೆ ನಡೆದಿತ್ತು. ಉಜ್ಬೇಕಿಸ್ತಾನದ ಸರ್ಜನ್​​ಗಳು ಮತ್ತು ವೈದ್ಯರು ಹೈದರಾಬಾದ್​ನ ಎಐಜಿ, ಯಶೋದಾ ಮತ್ತು ಮೇದಾಂತಾ ಆಸ್ಪತ್ರೆಗಳಿಗೆ ಭೇಟಿಕೊಟ್ಟಿದ್ದರು.

ಉಕ್ರೇನ್​​ ಶಿಕ್ಷಣ ವ್ಯವಸ್ಥೆಗೂ ಭಾರತದ ಶಿಕ್ಷಣ ವ್ಯವಸ್ಥೆಗೂ ವಿಭಿನ್ನತೆ ಇರುವುದರಿಂದ ಅಲ್ಲಿಂದ ಬಂದ ವಿದ್ಯಾರ್ಥಿಗಳಿಗೆ ಒಮ್ಮೆಲೇ ಇಲ್ಲಿನ ವೈದ್ಯಕೀಯ ಕಾಲೇಜುಗಳಲ್ಲಿ ಶಿಕ್ಷಣ ಕಲ್ಪಿಸುವುದು ಸುಲಭವೂ ಆಗಿರಲಿಲ್ಲ. ಆದರೆ ಉಕ್ರೇನ್​ ಮತ್ತು ಉಜ್ಬೇಕಿಸ್ತಾನ್​​ ಶಿಕ್ಷಣ ವ್ಯವಸ್ಥೆಯಲ್ಲಿ ಸಾಮ್ಯತೆ ಇರುವುದರಿಂದ, ಉಕ್ರೇನ್​ನಿಂದ ಬಂದು ಉಜ್ಬೇಕಿಸ್ತಾನಕ್ಕೆ ಓದಲು ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ವಿಚಾರದಲ್ಲಿ ಯಾವುದೇ ತೊಂದರೆಯೂ ಆಗುವುದಿಲ್ಲ ಎಂದು ಹೈದರಾಬಾದ್​ನ ನಿಯೋ ಇನ್​ಸ್ಟಿಟ್ಯೂಟ್ ಆಫ್​ ಮೆಡಿಕಲ್​ ಸೈನ್ಸ್​ ಆಯಂಡ್​ ಟೆಕ್ನಾಲಜಿ ನಿರ್ದೇಶಕಿ ಡಾ. ಬಿ. ದಿವ್ಯಾ ಆರ್​ ರೆಡ್ಡಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ವಿದ್ಯಾರ್ಥಿಗಳಿಗೆ ಉಜ್ಬೇಕಿಸ್ತಾನ ಇದೀಗ 2 ಪದವಿ ಪೂರ್ವ ವೈದ್ಯಕೀಯ ಕೋರ್ಸ್​​ಗಳನ್ನು ನೀಡುವುದಾಗಿ ತಿಳಿಸಿದೆ. ಅದರಲ್ಲಿ ಒಂದು ಆ ಮೂರು ಯೂನಿವರ್ಸಿಟಿಗಳಲ್ಲಿ ಸೀಟ್ ವ್ಯವಸ್ಥೆ ಮಾಡಲಾಗಿದೆ. ಅದರಲ್ಲಿ ಒಂದು ಆರು ವರ್ಷದ ಎಂಡಿ ಡಿಪ್ಲೋಮಾ ಹಾಗೂ ಇನ್ನೊಂದು ಎಂಬಿಬಿಎಸ್​ ಪದವಿ,ಒಂದು ವರ್ಷದ ಇಂಟರ್ನ್​ಶಿಪ್​. ಉಜ್ಬೇಕಿಸ್ತಾನ್​​ದ ಈ ನಡೆಯಿಂದ ಭಾರತೀಯ ವಿದ್ಯಾರ್ಥಿಗಳಲ್ಲಿ ತುಸು ಭರವಸೆ ಬಂದಂತಾಗಿದೆ.

ಶಾಲಾಮಕ್ಕಳಿಗೆ ಇನ್ನೂ ಸಿಗದ ಬೂಟು ಭಾಗ್ಯ

0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಅನುದಾನ ಬಿಡುಗಡೆಯಾಗಿ ಮೂರು ತಿಂಗಳಾದರೂ ಮಕ್ಕಳಿಗೆ ಉಚಿತ ಶೂ , ಸಾಕ್ಸ್ ಭಾಗ್ಯ ಇಲ್ಲ.

ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿ ಆರು ತಿಂಗಳು ಕಳೆದರೂ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಇನ್ನೂ ವಿತರಣೆ ಮಾಡಿಲ್ಲ. ಈ ವರ್ಷ ಶಾಲಾರಂಭದಿಂದ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸುವಂತೆ ರಾಜ್ಯ ಸರ್ಕಾರ ಜುಲೈ 2 ನೇ ವಾರದಲ್ಲಿ 1 ರಿಂದ 10 ನೇ ತರಗತಿವರೆಗೆ 132 ಕೋಟಿ ರೂ. ಬಿಡುಗಡೆ ಮಾಡಿ ಆದೇಶ ಹೊರಡಿಸಿತ್ತು. ಆದರೆ ಅನುದಾನ ಬಿಡುಗಡೆಯಾಗಿ ಮೂರು ತಿಂಗಳು ಕಳೆದರೂ ಮಕ್ಕಳಿಗೆ ಇನ್ನೂ ಶೂ, ಸಾಕ್ಸ್ ಸಿಕ್ಕಿಲ್ಲ.

ಸರ್ಕಾರಿ ಶಾಲೆಗ ಸೇರುವ 1 ರಿಂದ 10ನೇ ತರಗತಿ ವರೆಗಿನ ಬಡ ವಿದ್ಯಾರ್ಥಿಗಳು ಮತ್ತು ಸರ್ಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಹಾಗೂ ಖಾಸಗಿ ಶಾಲೆಗಳೊಂದಿಗೆ ಸ್ಪರ್ಧೆ ಮಾಡಲು ರಾಜ್ಯ ಸರ್ಕಾರ ಪ್ರತಿ ವಿದ್ಯಾರ್ಥಿಗೆ ಒಂದು ಜೊತೆ ಶೂ ಮತ್ತು 2 ಎರಡು ಜೊತೆ ಸಾಕ್ಸ್ ನೀಡುವ ಯೋಜನೆ 2016ರಲ್ಲಿ ಜಾರಿ ಮಾಡಲಾಗಿತ್ತು. 1-5ನೇ ತರಗತಿಗೆ 225 ರೂ. 6-8ನೇ ತರಗತಿಗೆ 250 ರೂ. ಮತ್ತು 9ರಿಂದ10 ನೇ ತರಗತಿ ವಿದ್ಯಾರ್ಥಿಗಳಿಗೆ 275 ರೂ. ನಂತೆ ಶೂಗೆ ದರ ನಿಗದಿ ಮಾಡಲಾಗಿದೆ.

ಎಲೆಕ್ಟ್ರಿಕ್ ವಾಹನಗಳನ್ನು ಮೋಟಾರ್ ವೆಹಿಕಲ್ ಆಗಿ ಪರಿಗಣಿಸುವ ಬಗ್ಗೆ ಸರ್ಕಾರದ ಸೂಚನೆಗಳು

0

ಕಡಿಮೆ ವೇಗದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಕುರಿತಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ, ರಾಜ್ಯಗಳಿಗೆ ಶುಕ್ರವಾರದಂದು ಮಹತ್ವದ ಮಾಹಿತಿಯನ್ನು ರವಾನೆ ಮಾಡಿದೆ.

ಕೆಲ ದ್ವಿಚಕ್ರ ವಾಹನ ತಯಾರಕ ಕಂಪನಿಗಳು ಮತ್ತು ಡೀಲರ್ ಗಳು ಹೆಚ್ಚಿನ ಬ್ಯಾಟರಿ ಕೆಪ್ಯಾಸಿಟಿ ಹೊಂದಿರುವ ಹಾಗೂ ಪ್ರತಿ ಗಂಟೆಗೆ 40 ರಿಂದ 55 ಕಿ.ಮೀ.

ವೇಗದಲ್ಲಿ ಚಲಿಸುವ ವಾಹನಗಳನ್ನು ಅನುಮತಿ, ವಿಮೆ ಹಾಗೂ ವಾಹನ ದೃಢೀಕರಣ ಇಲ್ಲದೆ ವಿತರಿಸುತ್ತಿದ್ದಾರೆ ಎಂದು ತಿಳಿಸಿದೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು, ಮೋಟಾರ್ ವೆಹಿಕಲ್ ಎಂದು ಪರಿಗಣಿಸದಿರಲು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಕೆಲವೊಂದು ನಿಯಮಗಳನ್ನು ರೂಪಿಸಿದ್ದು, ಇವುಗಳ ಪಾಲನೆ ಆಗುತ್ತಿಲ್ಲ ಎನ್ನಲಾಗಿದೆ.

ಯಾವುದೇ ಎಲೆಕ್ಟ್ರಿಕ್ ದ್ವಿಚಕ್ರ ವಾಹನ 0.25 ಕಿ. ಮೀ ಸಾಮರ್ಥ್ಯದ 30 ನಿಮಿಷಗಳ ಪವರ್ ಹೊಂದಿದ್ದರೆ, ಇವುಗಳ ವೇಗ ಪ್ರತಿ ಗಂಟೆಗೆ 25 ಕಿ.ಮೀ ಒಳಗಿದ್ದರೆ ಹಾಗೂ ಬ್ಯಾಟರಿ ರಹಿತವಾಗಿ 60 ಕೆಜಿ ಒಳಗಿದ್ದರೆ ಮಾತ್ರ ಮೋಟಾರ್ ವೆಹಿಕಲ್ ಎಂದು ಪರಿಗಣಿಸಲಾಗುವುದಿಲ್ಲ.