Wednesday, March 25, 2026
Wednesday, March 25, 2026
Home Blog Page 1395

ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಹಗರಣ ಬಯಲುಮಾಡುವೆ-ಬಿಎಸ್ ವೈ

0

ಕಾಂಗ್ರೆಸ್ ಹಗರಣಗಳನ್ನು ಮುಂದಿನ ಅಧಿವೇಶನದಲ್ಲಿ ಬಯಲು ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ.

ರಾಯಚೂರು ತಾಲೂಕಿನ ಗಿಲ್ಲೆಸುಗೂರಿನಲ್ಲಿ ನಡೆದೆ ಜನ ಸಂಕಲ್ಪ ಯಾತ್ರೆಯಲ್ಲಿ ಅವರು ಮಾತನಾಡಿದರು, ಬಿಜೆಪಿ ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​​ ಯಡಿಯೂರಪ್ಪ ಅವರು ಹೇಳಿದ್ದಾರೆ.

ತನಿಖೆ ಮಾಡಿಸಿ ನಿಮ್ಮನ್ನು ಎಲ್ಲಿ ನಿಲ್ಲಿಸಬೇಕೋ ಅಲ್ಲಿಗೆ ನಿಲ್ಲಿಸುತ್ತೇವೆ. ರಾಬರ್ಟ್​ ವಾದ್ರಾ ಮಾಡಿದ್ದ ಹಗರಣಗಳ ಪಟ್ಟಿ ಇದೆ. ನ್ಯಾಷನಲ್​ ಹೆರಾಲ್ಡ್​​​ ಹಗರಣ ಗೊತ್ತಿಲ್ಲವೇ…
ಹಗರಣವನ್ನ ಮಾಡದ ಪ್ರಧಾನಿ ಮೋದಿ ಬಗ್ಗೆ ಮಾತಮಾಡುತ್ತಿದ್ದೀರಾ..? 25 ಲಕ್ಷ ಮೌಲ್ಯದ ಹ್ಯೂಬ್ಲೆಟ್​ ವಾಚ್​ ಕೊಟ್ಟಿದ್ಯಾರು ಗೊತ್ತಿಲ್ಲವೇ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಯಚೂರು ಜಿಲ್ಲೆಗೆ ಏಮ್ಸ್ ಕೊಡೊದಾಗಿ ಘೋಷಣೆ ಮಾಡುತ್ತೇವೆ. ಏಮ್ಸ್ ಕೊಟ್ಟರೆ, 5 ಕ್ಷೇತ್ರ ಗೆಲ್ಲಿಸಿ ಕೊಡುತ್ತೇವೆ ಎಂದು ಹೇಳಿದ್ದಿರಾ.

ಇಂದೇ ರಾಯಚೂರಿಗೆ ಏಮ್ಸ್ ಘೋಷಣೆ ಮಾಡುತ್ತೇವೆ. ಸಿಎಂ ಬೊಮ್ಮಾಯಿ ಏಮ್ಸ್ ಘೋಷಣೆ ಮಾಡಲಿದ್ದಾರೆ. 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಜೀವನಶೈಲಿ ಬದಲಾವಣೆಯಿಂದ ಮಧುಮೇಹ ನಿಯಂತ್ರಣ

0

ಇತ್ತೀಚಿನ ದಿನಗಳಲ್ಲಿ ಮಧುಮೇಹ ರೋಗವು ಅನೇಕ ಜನರಿಗೆ ದೊಡ್ಡ ಸಮಸ್ಯೆಯಾಗಿದೆ. ಇದರ ಚಿಕಿತ್ಸೆ ಸಾಧ್ಯವಿಲ್ಲ. ಆದರೆ ಖಂಡಿತವಾಗಿಯೂ ಈ ರೋಗವನ್ನು ತಡೆಯಬಹುದು. ಮಧುಮೇಹದ ನಿಜವಾದ ಕಾರಣಗಳನ್ನು ತಿಳಿದರೆ, ರೋಗಿಯನ್ನು ಈ ಕಾಯಿಲೆಯಿಂದ ರಕ್ಷಿಸಬಹುದು ಎಂದು ತಜ್ಞರು ಹೇಳುತ್ತಾರೆ.

ಮಧುಮೇಹದ ಕಾಯಿಲೆಯು ಕಾಲಾನಂತರದಲ್ಲಿ ಮುಂದುವರಿಯುತ್ತದೆ ಎಂದು ವೈದ್ಯರು ಹೇಳುತ್ತಾರೆ. ಮಧುಮೇಹವು ಮುಂದುವರೆದಂತೆ, ಅದನ್ನು ನಿಯಂತ್ರಿಸಲು ಕಷ್ಟವಾಗುತ್ತದೆ. ಈ ಕಾರಣದಿಂದಲೇ ಮಧುಮೇಹ ವಾಸಿಯಾಗುವ ನಿರೀಕ್ಷೆಯಿಲ್ಲ. ಸಾಮಾನ್ಯವಾಗಿ ಮಧುಮೇಹ ರೋಗಿಗಳು ತಮ್ಮ ಆಹಾರದ ಬಗ್ಗೆ ಕಾಳಜಿ ವಹಿಸಲು ಸಾಧ್ಯವಾಗುವುದಿಲ್ಲ, ಇದರಿಂದಾಗಿ ಅವರು ಅಪಾಯಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಕೆಲವು ವೈದ್ಯರು ನಿಮ್ಮ ಆಹಾರ ಮತ್ತು ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿದರೆ, ನಂತರ ಹೆಚ್ಚಿನ ಪ್ರಮಾಣದಲ್ಲಿ ಇದನ್ನು ತಪ್ಪಿಸಬಹುದು.

ಇಂದಿನ ದಿನಗಳಲ್ಲಿ ಪ್ರತಿಯೊಬ್ಬರ ಜೀವನಶೈಲಿ ಕೆಟ್ಟಿದೆ. ತಪ್ಪು ಆಹಾರ ಪದ್ಧತಿ, ಯಾವುದೋ ಸಮಯದಲ್ಲಿ ಮಲಗುವುದು ಮತ್ತು ಎಚ್ಚರಗೊಳ್ಳುವುದು, ವ್ಯಾಯಾಮ ಮಾಡದಿರುವುದು, ಇವೆಲ್ಲವೂ ಯಾವುದೇ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಪ್ರಮುಖ ಅಂಶಗಳಾಗಿವೆ. ಆದರೆ,
ನಾವು ಅದನ್ನು ಬದಲಾಯಿಸಬೇಕಾಗಿದೆ. ಅದೇ ಸಮಯದಲ್ಲಿ, ಕೆಲವು ಆರೋಗ್ಯ ತಜ್ಞರು ಜೀವನಶೈಲಿಯ ಬದಲಾವಣೆಯಿಂದ ಮಧುಮೇಹವನ್ನು ತೊಡೆದುಹಾಕಬಹುದು.
ಮಧುಮೇಹವು ಆನುವಂಶಿಕವಾಗಿದ್ದರೆ ಅದು ಅಸಾಧ್ಯ. ಬೊಜ್ಜು ಕಾರಣ ಮಧುಮೇಹ ಹೊಂದಿದ್ದರೆ, ನಂತರ ಅದನ್ನು ತೊಡೆದುಹಾಕಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಮಲೆನಾಡು ಭಾಗದ ಕುಮ್ಕಿ ಬಾಣೆ ಸೊಪ್ಪಿನಬೆಟ್ಟ ಜಮೀನುಗಳ ಸಕ್ರಮ- ಸಚಿವ ಅಶೋಕ್

0

ವಿಧಾನಸೌಧದಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಿತು. ಸಭೆ ನಂತರ ಮಾತನಾಡಿರುವ ಸಚಿವ ಆರ್.ಅಶೋಕ್ ಮಲೆನಾಡು ಭಾಗದ ಕುಮ್ಕಿ, ಬಾಣೆ, ಸೊಪ್ಪಿನ ಬೆಟ್ಟ ಜಮೀನುಗಳನ್ನು ರೈತರಿಗೆ ನೀಡಲು ತೀರ್ಮಾನ ಮಾಡಲಾಗಿದೆ ಎಂದಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವರುಈ ಜಮೀನುಗಳನ್ನು ಅರಣ್ಯ ಭೂಮಿ ಎಂದು ಘೋಷಣೆ ಆಗಿದೆ. ಆದರೆ 60 ರಿಂದ 70 ವರ್ಷಗಳಿಂದ ಭೂಮಿಗಳಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಈ ಜಮೀನುಗಳಲ್ಲಿ ತೆಂಗು, ಅಡಿಕೆ ಬೆಳೆಯುತ್ತಿದ್ದಾರೆ. ಆದ್ದರಿಂದ, ಈಥರದ ಜಮೀನುಗಳನ್ನು ಕಾನೂನು ತಿದ್ದುಪಡಿ ಮಾಡಿ ರೈತರಿಗೆ ಕೊಡಬೇಕು ಎಂದು ನಿರ್ಧಾರ ಮಾಡಿದ್ದೀವಿ.

ಜಮೀನುಗಳನ್ನು ಅರಣ್ಯ ಭೂಮಿ ಮಾಡಲು ಈಗ ಆಗಲ್ಲ. ಆದ್ದರಿಂದ, ಬಡ ರೈತರಿಗೆ ಕೊಡಲು ತೀರ್ಮಾನ ಮಾಡಿದ್ದೇವೆ. ಈ ಸಂಬಂಧ ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಆದಷ್ಟು ಬೇಗ ಈ ನಿಟ್ಟಿನಲ್ಲಿ ಸರ್ಕಾರಿಂದ ಆದೇಶ ಮಾಡಲಾಗುತ್ತದೆ ಎಂದು ಅಶೋಕ್ ಅವರು ತಿಳಿಸಿದ್ದಾರೆ.

ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಬೆನ್ನಿಗೆ ಡಿನೋಟಿಫಿಕೇಷನ್ ಭೂತ

0

ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನಲ್ಲಿ ಡಿನೋಟಿಫಿಕೇಶನ್ ಅಕ್ರಮ ಆರೋಪ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನ ಸಿದ್ದಾಪುರ ಮತ್ತು ಭೂಪಸಂದ್ರದಲ್ಲಿ ಡಿ ನೋಟಿಫಿಕೇಶನ್ ಸಿದ್ದಾಪುರ-200 ಕೋಟಿ ಅಕ್ರಮ ಮತ್ತು ಭೂಪಸಂದ್ರದಲ್ಲಿ 350 ಕೋಟಿ ಅಕ್ರಮದ ಆರೋಪ ಕೇಳಿ ಬಂದಿತ್ತು. ಈಗ ಡಿನೋಟಿಫಿಕೇಶನ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳ ಸಮೇತ ಬಿಜೆಪಿ ನಾಯಕ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಕೆಲವು ದೇಶಗಳಲ್ಲಿಆರ್ಥಿಕ ಹಿಂಜರಿತ ಕಾಡಲಿದೆ- ಐಎಂಎಫ್

0

ಈ ಹಿಂದೆ ವಿಧಿಸಲಾಗಿದ್ದ ಕೊರೊನಾ ಲಾಕ್ಡೌನ್ ಕಾರಣಕ್ಕೆ ವಿಶ್ವದ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದೆ.

ಲಾಕ್ಡೌನ್ ತೆರವುಗೊಳಿಸಿದ ನಂತರ ಪರಿಸ್ಥಿತಿ ಸುಧಾರಿಸುತ್ತದೆ ಎಂದು ಸಮಾಧಾನಪಟ್ಟುಕೊಳ್ಳುತ್ತಿರುವುದರ ಮಧ್ಯೆ ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ ಎಚ್ಚರಿಕೆ ನೀಡಿದೆ.

ಮುಂದಿನ ವರ್ಷ ಬಹುತೇಕ ದೇಶಗಳು ಆರ್ಥಿಕ ಹಿಂಜರಿತವನ್ನು ಕಾಣಲಿವೆ ಎಂದು ಐಎಂಎಫ್ ತಿಳಿಸಿದೆ.

ಅಮೆರಿಕದ ಬ್ಯಾಂಕುಗಳ ಸಾಲದ ಮೇಲಿನ ಬಡ್ಡಿ ನಿರಂತರವಾಗಿ ಹೆಚ್ಚಳವಾಗುತ್ತಿರುವುದು, ಉಕ್ರೇನ್ , ರಷ್ಯಾ ಯುದ್ಧ ಮುಂದುವರೆದಿರುವುದು ಹಾಗೂ ಆಯಾ ದೇಶಗಳಲ್ಲಿನ ಆಂತರಿಕ ಸಮಸ್ಯೆಯಿಂದ ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿರುವುದು ಆರ್ಥಿಕ ಹಿಂಜರಿತಕ್ಕೆ ಕಾರಣವಾಗಲಿದೆ ಎಂದು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ ತಿಳಿಸಿದೆ. ಇದನ್ನು ಎದುರಿಸಲು ಜಗತ್ತು ಸನ್ನದ್ದವಾಗಬೇಕಿದೆ ಎಂದು ಮಾಹಿತಿ ನೀಡಿದೆ.

ಮುಂದಿನ ವರ್ಷ ಆರ್ಥಿಕ ಹಿಂಜರಿತ ಎದುರಾಗಲಿದೆ ಎಂಬ ಕಾರಣಕ್ಕಾಗಿಯೇ ಅನೇಕ ಕಂಪನಿಗಳು ಹೊಸ ಉದ್ಯೋಗಿಗಳ ನೇಮಕಕ್ಕೆ ಹಿಂದೇಟು ಹಾಕುತ್ತಿವೆ ಎನ್ನಲಾಗಿದೆ. ಇದರಿಂದ ನಿರುದ್ಯೋಗ ಸಮಸ್ಯೆ ಮತ್ತಷ್ಟು ಹೆಚ್ಚಳವಾಗಲಿದೆ ಎಂಬ ಭೀತಿ ಎದುರಾಗಿದೆ. ಇದರ ಜೊತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯೂ ಆದರೆ, ಜನಸಾಮಾನ್ಯರ ಪರಿಸ್ಥಿತಿ ಮತ್ತಷ್ಟು ಕಠಿಣವಾಗಲಿದೆ. ತೈಲಬೆಲೆಯೂ ಸಹ ಮುಗಿಲು ಮುಟ್ಟುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಈಗಾಗಲೇ ಭವಿಷ್ಯ ನುಡಿದಿದ್ದಾರೆ.

ನಮ್ಮದು ವಿಜಯ ಸಂಕಲ್ಪ ಯಾತ್ರೆ-ಯಡಿಯೂರಪ್ಪ

0

ರಾಜ್ಯದಲ್ಲಿ ಬಿಜೆಪಿ ಕೈಗೊಂಡಿರುವ ಯಾತ್ರೆ ಜನಸಂಕಲ್ಪ ಅಲ್ಲ, ವಿಜಯದ ಸಂಕಲ್ಪ ಯಾತ್ರೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ.

ರಾಯಚೂರು ತಾಲೂಕಿನ ಗಿಲ್ಲೆಸುಗೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಬಿಜೆಪಿ ಜನಸಂಕಲ್ಪ ಯಾತ್ರೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಘವೇಂದ್ರ ಸ್ವಾಮಿಗಳು ನಡೆದಾಡಿದ ಪ್ರದೇಶದಿಂದಲೇ ಯಾತ್ರೆಗೆ ಚಾಲನೆ ನೀಡಲಾಗಿದೆ.
ಅವರ ಆಶೀರ್ವಾದದಿಂದ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನಗಳಲ್ಲಿ ಗೆಲುವು ನಿಶ್ಚಿತವಾಗಿದ್ದು, ಇದನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದರು.

ದೇಶದಲ್ಲಿ ಶೇ.73ರಷ್ಟು ಜನರು ಮೋದಿ ಪರವಾಗಿದ್ದಾರೆ ಎನ್ನುವುದು ಸಮೀಕ್ಷೆಯಿಂದ ಗೊತ್ತಾಗಿದೆ. ಇಡೀ ಜಗತ್ತೇ ಮೋದಿ ಅವರನ್ನು ವಿಶ್ವ ನಾಯಕರು ಎಂದು ಒಪ್ಪಿಕೊಂಡಿದೆ. ಆದರೆ, ಕಾಂಗ್ರೆಸ್ಸಿಗರು ಹಗುರವಾಗಿ ಮಾತನಾಡುವುದನ್ನು ಬಿಡಬೇಕು. ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ.

ಆದರೆ, ಅವರ ಕನಸು ನನಸಾಗುವುದಿಲ್ಲ. ಮೋದಿ ಅವರ ಕಾಲಿನಡಿ ಕುಳಿತುಕೊಳ್ಳುವ ಯೋಗ್ಯತೆ ಕೂಡ ಅವರಿಗಿಲ್ಲ ಎಂದರು.

ಕಳಪೆ ಗುಣಮಟ್ಟದ ರಸ್ತೆ ದೃಢಪಟ್ಟರೆ ಕಾನೂನು ಕ್ರಮ- ಸಚಿವ ಮುನಿರತ್ನ

0

ಕೋಲಾರ ಜಿಲ್ಲೆಯಲ್ಲಿ ಐದು ದಿನಗಳ ಕಾಲ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಪರಿಶೀಲನೆ ಮಾಡುತ್ತಿದ್ದು, ಕಳಪೆಯಾಗಿದ್ದರೆ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳುತ್ತೇನೆ. ನನ್ನ ಈ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಸ್ವಷ್ಟಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೊದಲೇ ಹೇಳಿದಂತೆ ಜಿಲ್ಲೆಯಲ್ಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಲು ಬಂದಿದ್ದೇನೆ. ಯಾರೊಂದಿಗೂ ರಾಜಿ ಪ್ರಶ್ನೆಯೇ ಇಲ್ಲ, ನನ್ನ ಧ್ವನಿಯೂ ಸಹಾ ಬದಲಾಗಿಲ್ಲ. ಏಕಾಏಕಿ ಬಂದು ಕೆಲಸ ಮಾಡುವುದಲ್ಲ. ಪ್ರತಿ ತಾಲೂಕಿನಲ್ಲಿ ಯಾವ ಕೆಲಸಗಳು ಹೇಗೆ ಆಗಿವೆ ಎನ್ನುವುದನ್ನು ಮೊದಲು ತಿಳಿದುಕೊಳ್ಳಬೇಕು. ಹಾಗಾಗಿ ಸೋಮವಾರದಂದು ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ತಿಳಿಸಿದರು.

ಈಗಾಗಲೇ ಕಾಮಗಾರಿ ಪೂರ್ಣಗೊಂಡು, ಅಂತಿಮ ಬಿಲ್‌ ಪಾವತಿಯಾಗಿರುವುದು, ನಿರ್ವಹಣೆ ಅವಧಿ ಮುಗಿದಿರುವ ಕಾಮಗಾರಿಗಳನ್ನು ಪರಿಶೀಲನೆ ಮಾಡುವ ಅವಶ್ಯಕತೆಯಿಲ್ಲ. ನಿರ್ವಹಣೆ ಅವಧಿ ಪೂರ್ಣಗೊಳ್ಳದೆ ಇರುವಾಗ, ಕಳಪೆ ಕಂಡು ಬಂದರೆ ಪರಿಶೀಲನೆ ಮಾಡಲಾಗುವುದು. ಅದರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಹಲವು ಇಲಾಖೆ ವಿಲೀನ ಬಹುಪಾಲು ಹುದ್ದೆ ರದ್ದತಿ ಸರ್ಕಾರದ ಸುಧಾರಣಾ ಕ್ರಮ

0

ಕೃಷಿ, ರೇಷ್ಮೆ ಹಾಗೂ ತೋಟಗಾರಿಕೆ ಇಲಾಖೆಗಳನ್ನು ವಿಲೀನಗೊಳಿಸುವ ಪ್ರಸ್ತಾಪವು ಅನೇಕ ವರ್ಷಗಳಿಂದಲೂ ರಾಜ್ಯ ಸರ್ಕಾರದ ಮುಂದೆ ಇದೆ. ಕೃಷಿಗೆ ಸಂಬಂಧಪಟ್ಟ ಹಾಗೂ ಏಕರೂಪದ ಕಾರ್ಯನಿರ್ವಹಣೆ ಇರುವ ಈ ಇಲಾಖೆಗಳನ್ನು ವಿಲೀನಗೊಳಿಸುವುದು ಆಡಳಿತಾತ್ಮಕ ಸಮತೋಲನ ಹಾಗೂ ಮಿತವ್ಯಯ ಸಾಧಿಸುವ ದೃಷ್ಟಿಯಿಂದ ಸಮ್ಮತವಾದುದು ಎಂಬ ಅಭಿಪ್ರಾಯ ದಟ್ಟವಾಗಿದ್ದರೂ ಇದಿನ್ನೂ ಕಾರ್ಯರೂಪಕ್ಕೆ ಬಂದಿಲ್ಲ.

ಆದರೀಗ ಕೃಷಿ, ರೇಷ್ಮೆ ಹಾಗೂ ತೋಟಗಾರಿಕೆ ಇಲಾಖೆಗಳ ಸಚಿವಾಲಯ ಮಟ್ಟದ, ಉನ್ನತ ಹಾಗೂ ಹಿರಿಯ ಶ್ರೇಣಿಯ ಎರಡು ಸಾವಿರ ಹುದ್ದೆಗಳನ್ನು ರದ್ದುಪಡಿಸಲು ಸಚಿವ ಸಂಪುಟದ ಉಪಸಮಿತಿಯು ಶಿಫಾರಸು ಮಾಡಿರುವುದು ಈ ನಿಟ್ಟಿನಲ್ಲಿ ಕೈಗೊಂಡ ಮೊದಲ ಹೆಜ್ಜೆ ಎನ್ನಬಹುದಾಗಿದೆ.

ಈ ಇಲಾಖೆಗಳಲ್ಲಿನ ಸಚಿವಾಲಯ ಮಟ್ಟದ, ಉನ್ನತ ಅಧಿಕಾರಿಗಳ ಹುದ್ದೆಗಳನ್ನು ತೆಗೆದುಹಾಕಬೇಕು ಹಾಗೂ ಕೆಲಸದ ಅಗತ್ಯಕ್ಕೆ ಅನುಗುಣವಾಗಿ ಕೆಳಹಂತದ ಸಿಬ್ಬಂದಿ ಮುಂದುವರಿಸಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಅಧ್ಯಕ್ಷತೆಯ ಸಚಿವ ಸಂಪುಟದ ಉಪಸಮಿತಿಯು ಮಾಡಿರುವ ಶಿಫಾರಸು ಅತ್ಯಂತ ಸೂಕ್ತವಾಗಿದೆ.

ಸರ್ಕಾರವು ವಿಳಂಬಕ್ಕೆ ಎಡೆ ಮಾಡಿಕೊಡದೆ ಈ ನಿಟ್ಟಿನಲ್ಲಿ ತಕ್ಷಣವೇ ಕ್ರಮ ಕೈಗೊಳ್ಳುವ ಮೂಲಕ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಿ, ತಮ್ಮತೆರಿಗೆ ಹಣವು ಅಪವ್ಯಯವಾಗುವುದನ್ನು ತಡೆಯಬೇಕು ಎಂಬ ನಿರೀಕ್ಷೆ ಸಾರ್ವಜನಿಕರದ್ದಾಗಿದೆ.

ಮೈಸೂರು ತಂಬಾಕು ಕಂಪನಿ, ಕರ್ನಾಟಕ ಕೃಷಿ ಕೈಗಾರಿಕಾ ನಿಗಮ, ಕರ್ನಾಟಕ ಆಹಾರ ನಿಗಮಗಳನ್ನು ಕೃಷಿ ಇಲಾಖೆಯಡಿ ಸೇರ್ಪಡೆ ಮಾಡುವುದು; ಮುದ್ರಣ, ಲೇಖನ ಸಾಮಗ್ರಿ, ಪ್ರಕಟಣೆ ಇಲಾಖೆಯನ್ನು ಶಿಕ್ಷಣ ಇಲಾಖೆಯಲ್ಲಿ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವನ್ನು ಪ್ರವಾಸೋದ್ಯಮ ಇಲಾಖೆಯಲ್ಲಿ ವಿಲೀನಗೊಳಿಸುವುದು; ರೇಷ್ಮೆ ಬೆಳೆಯದ ಜಿಲ್ಲೆಗಳಲ್ಲಿನ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳ ಹುದ್ದೆಗಳು.

ಕೆಳಹಂತದ ಸಿಬ್ಬಂದಿಯನ್ನು ಕೃಷಿ ಇಲಾಖೆಗೆ ಹಸ್ತಾಂತರಿಸುವುದು – ಈ ರೀತಿಯ ಶಿಫಾರಸುಗಳನ್ನು ಕೂಡ ಉಪಸಂಪುಟ ಸಮಿತಿ ಮಾಡಿದ್ದು, ಇವು ಅತ್ಯಂತ ಯೋಗ್ಯ ಸಲಹೆಗಳಾಗಿವೆ.
ಕರ್ನಾಟಕ ಆಡಳಿತ ಸುಧಾರಣಾ ಆಯೋಗ – 2 ತನ್ನ ಮೊದಲ ವರದಿಯನ್ನು 2021ರ ಜುಲೈ ತಿಂಗಳಲ್ಲಿಯೇ ಸಲ್ಲಿಸಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅಧ್ಯಕ್ಷತೆಯ ಈ ಸಮಿತಿಯು ರಾಜ್ಯದ ನಾಲ್ಕೂ ಪ್ರಾದೇಶಿಕ ಆಯುಕ್ತರ ಕಾರ್ಯಾಲಯವನ್ನು ರದ್ದು ಮಾಡಲು ಶಿಫಾರಸು ಮಾಡಿದೆ. ಗ್ರಾಮ ಲೆಕ್ಕಾಧಿಕಾರಿಗಳನ್ನು ಗ್ರಾಮ ಅಧಿಕಾರಿಗಳಾಗಿ ಮರುನಾಮಕರಣ ಮಾಡಬೇಕು ಎಂದೂ ಹೇಳಿದೆ.

ನಂತರ ಇದೇ ವರ್ಷದ ಫೆಬ್ರವರಿಯಲ್ಲಿ 2 ಮತ್ತು 3ನೇ ವರದಿಯನ್ನೂ ಈ ಸಮಿತಿ ನೀಡಿದೆ. ಸಾರ್ವಜನಿಕ ಉದ್ಯಮಗಳ ಇಲಾಖೆಯನ್ನು ಆರ್ಥಿಕ ಇಲಾಖೆಯಲ್ಲಿ ವಿಲೀನಗೊಳಿಸಬೇಕು ಎಂದು ಇದರಲ್ಲಿ ಸಲಹೆ ನೀಡಿದೆ. ವಿವಿಧ ಕಚೇರಿಗಳಲ್ಲಿ ಕಾರ್ಯಭಾರ ಆಧಾರದ ಮೇಲೆ ಹುದ್ದೆಗಳನ್ನು ಸ್ಥಳಾಂತರ ಮಾಡಬಹುದು ಎಂದೂ ಅದು ಹೇಳಿದೆ.

ನ್ಯಾ.ಪ್ರಸನ್ನ.ಬಿ.ವರಲೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ

0

ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಲೆ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಸಿಜೆಐ ಯು.ಯು.ಲಲಿತ್ ನೇತೃತ್ವದಲ್ಲಿ ಸೆ.28ರಂದು ನಡೆದ ಸುಪ್ರೀಂಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಪಿ.ಬಿ.ವರಲೆ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು.

ಇದೀಗ ರಾಷ್ಟ್ರಪತಿಗಳ ಆದೇಶಾನುಸಾರು ಪ್ರಸನ್ನ ಬಿ.ವರಲೆ ಅವರನ್ನು ಕರ್ನಾಟಕ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ರಾಜ್ಯ ಹೈಕೋರ್ಟ್‌ನ ಹಿಂದಿನ ಸಿಜೆ ರಿತುರಾಜ್ ಅವಸ್ಥಿ ಕಳೆದ ಜು.2ರಂದು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಹಿರಿಯ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ 1962ರ ಜೂ.23ರಂದು ಜನಿಸಿದ ಪ್ರಸನ್ನ ಬಿ.ವರಲೆ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಕಲಾ ಮತ್ತು ಕಾನೂನು ಪದವಿ ಪಡೆದಿದ್ದಾರೆ.

1985ರ ಆ.12ರಂದು ವಕೀಲಿಕೆ ಆರಂಭಿಸಿದ ಅವರು ವಕೀಲರಾದ ಎಸ್.ಎಲ್. ಲೋಯಾ ಕಚೇರಿಗೆ ಸೇರಿ ಸಿವಿಲ್ ಮತ್ತು ಕ್ರಿಮಿನಲ್ ಕೇಸ್‌ಗಳನ್ನು ನಿರ್ವಹಿಸಿದರು. 1990ರಿಂದ 92ವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು.

ಔರಂಗಾಬಾದ್ ಹೈಕೋರ್ಟ್ ಪೀಠದಲ್ಲಿ ಸಹಾಯಕ ಸರ್ಕಾರಿ ಪ್ಲೀಡರ್ ಹಾಗೂ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಅವರು, ಕೇಂದ್ರ ಸರ್ಕಾರದ ಪರ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು. 2008ರ ಜು.18ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ಪ್ರಸನ್ನ ಬಿ. ವರಲೆ ಕಳೆದ 14 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

ಕೋಟಿ ಕಂಠ ಕಲರವದಲ್ಲಿ ಕನ್ನಡ ರಾಜ್ಯೋತ್ಸವ-ಸುನೀಲ್ ಕುಮಾರ್

0

ಈ ಬಾರಿ ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ಅದ್ಧೂರಿಯಿಂದ ಆಚರಣೆಗೆ ಮಾಡಲು ನಿರ್ಧಾರ ಮಾಡಲಾಗಿದೆ. ಅಕ್ಟೋಬರ್ 28 ರಂದು ನನ್ನ ನಾಡು ನನ್ನ ಹಾಡು ಶೀರ್ಷಿಕೆಯಡಿ ಐತಿಹಾಸಿಕ ಕಾರ್ಯಕ್ರಮ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯೋಜನೆ ಹಾಕಿಕೊಂಡಿದೆ. ಈ ಕುರಿತು ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದಾರೆ.

ನವೆಂಬರ್ 1ರಂದು ಎಲ್ಲ ಕಡೆ ಕನ್ನಡ ಹಬ್ಬ ಸಂಭ್ರಮಿಸಲಿದೆ. ಈ ಬಾರಿ ಕನ್ನಡ ರಾಜ್ಯೋತ್ಸವಕ್ಕೆ ಅದ್ಧೂರಿ ಕಾರ್ಯಕ್ರಮಗಳಿಗೆ ತಯಾರಿ ಮಾಡಲಾಗುತ್ತಿದೆ. ಸರ್ಕಾರ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ.

ರಾಜ್ಯ, ದೇಶ, ವಿದೇಶಗಳಲ್ಲಿರುವ ಕನ್ನಡಿಗರಿಂದ ಏಕಕಾಲದಲ್ಲಿ ಗಾಯನ ನಡೆಸುವ ಕಾರ್ಯಕ್ರಮವನ್ನು ಹಾಕಿಕೊಂಡಿದೆ. ಇದರ ಜೊತೆಗೆ ವಿದ್ಯಾರ್ಥಿಗಳಿಂದಲೂ ಕೋಟಿ ಕಂಠ ಗಾಯನಕ್ಕೆ ಸಹಕಾರ ಬೇಕಾಗಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್ 28 ರಂದು ನಡೆಯಲಿರುವ ಕೋಟಿ ಕಂಠ ಗಾಯನ 1 ಕೋಟಿ ಜನ ಹಾಡು ಹಾಡಲಿದ್ದಾರೆ ಎಂದು ವಿಕಾಸಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.

ಬೆಳಗ್ಗೆ 11 ಗಂಟೆಗೆ 10 ಸಾವಿರ ಕಡೆಗಳಲ್ಲಿ ಕನ್ನಡದ 6 ಹಾಡುಗಳನ್ನು ಹಾಡಬೇಕು.
ವಿಶ್ವವಿದ್ಯಾಲಯ ಪ್ರಮುಖರ ಜೊತೆ ಸಚಿವ ಡಾ. ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಇದು ನಾಡಿನ ಕಾರ್ಯಕ್ರಮ ನಾಡಿಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗುತ್ತದೆ. ಉದಯವಾಗಲಿ ಚೆಲುವ ಕನ್ನಡ ನಾಡು, ಹಚ್ಚೇವು ಕನ್ನಡದ ದೀಪ , ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಹೀಗೆ ಕನಿಷ್ಟ ಆರು ಹಾಡು ಹಾಡಬೇಕ. ಗಾಯನಕ್ಕೆ ನಾಡಿನ ಜನರ ಸಹಕಾರ ಬೇಕು ಎಂದು ಹೇಳಿದ್ದಾರೆ.