Haratalu Halappa ಮಾಜಿ ಸಚಿವರಾದ ಹೆಚ್.ಹಾಲಪ್ಪ ನವರು, ಹಿರೇಬಿಲಗುಂಜಿ ಗ್ರಾ.ಪಂ, ಸಂಪಳ್ಳಿ ಕೋಟೆಕೊಪ್ಪ ಗ್ರಾಮದ ಬಡ ರೈತ ಕುಟುಂಬದ ಶ್ರೀಮತಿ ಪ್ರೇಮ ಕೋಂ ಬಸವರಾಜ್ ರವರ ಸ್ವಾಧೀನದಲ್ಲಿದ್ದ ಜಮೀನನ್ನು ರಾಜಕೀಯ ಪ್ರಭಾವವಿರುವ ಪುಡಾರಿಗಳು ಪೊಲೀಸರೊಂದಿಗೆ ತೆರಳಿ ದೌರ್ಜನ್ಯದಿಂದ ಕಬಳಿಸಲು ಹೋಗಿದ್ದರು. ಆತಂಕಕ್ಕೊಳಗಾಗಿ ವಿಷ ಸೇವಿಸಿ,ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಯೋಗಕ್ಷೇಮ ವಿಚಾರಿಸಿ, ಆತ್ಮಸ್ಥೈರ್ಯ ತುಂಬಿ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.
Haratalu Halappa ನಂತರ ದೌರ್ಜನ್ಯ ಖಂಡಿಸಿ, ಪ್ರತಿಭಟನಾ ಮೆರವಣಿಗೆ ಮೂಲಕ AC ಕಛೇರಿಗೆ ಭೇಟಿ ನೀಡಿ, ಬಡ ರೈತ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಿ, ತಪ್ಪಿತಸ್ಥರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ AC ಮತ್ತು DYSP ಯವರು, ತಪ್ಪಿತಸ್ಥ ಪೊಲೀಸರ ವಿರುದ್ಧ ಇಲಾಖಾ ಕ್ರಮ ಕೈಗೊಂಡು, ಮಹಿಳೆಯ ಕುಟುಂಬಕ್ಕೆ ರಕ್ಷಣೆ ಜೊತೆಗೆ ಸಾಗುವಳಿ ಮಾಡಿಕೊಳ್ಳಲು ಅವಕಾಶ ನೀಡುವ ಬಗ್ಗೆ ಭರವಸೆ ನೀಡಿದರು.
ಮಹಿಳೆಯ ಕುಟುಂಬಸ್ಥರು, ಗ್ರಾಮಸ್ಥರು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Department of Tourism Shivamogga ಪ್ರಾಣಿ-ಪಕ್ಷಿ-ವನ ಸೇರಿದಂತೆ ನಮ್ಮ ಪರಿಸರವನ್ನು ಪ್ರೀತಿ ಮತ್ತು ಕಾಳಜಿಯಿಂದ ಉಳಿಸಿ ಮುಂದಿನ ಪೀಳಿಗೆಗೆ ನೀಡಿದರೆ ವಿಶ್ವ ಪರಿಸರ ದಿನ ಸಾರ್ಥಕವಾಗುತ್ತದೆ. ಆದ್ದರಿಂದ ಇಂದೇ ಈ ನಿಟ್ಟಿನಲ್ಲಿ ನಾವು ಸಂಕಲ್ಪ ತೊಡೋಣ ಎಂದು ತಿರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಮಂತ್ರಾಲಯ, ಭಾರತ ಸರ್ಕಾರ, ಬೆಂಗಳೂರು ಮತ್ತ ಅರಣ್ಯ ಇಲಾಖೆ ಶಿವಮೊಗ್ಗ ಇವರ ಸಹಯೋಗದಲ್ಲಿ ಇಂದು ಸಕ್ರೆಬೈಲಿನ ಆನೆ ಬಿಡಾರದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ಲಾಸ್ಟಿಕ್ ಮಾಲಿನ್ಯ ತೊಲಗಿಸಿ’ ಎಂಬ ಘೋಷವಾಕ್ಯದಡಿ ಈ ಸಾಲಿನ ಪರಿಸರ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಪ್ಲಾಸ್ಟಿಕ್ ಬಳಕೆ ನಮಗೆ ಮಾರಕ. ಪ್ಲಾಸ್ಟಿಕ್ ಇಲ್ಲದ ಕಾಲದಲ್ಲಿಯೂ ನಾವು ನೆಮ್ಮದಿಯಿಂದ ಬದುಕುತ್ತಿದ್ದೆವೆವು. ಮಾರಕವಾಗಿರುವ ಪ್ಲಾಸ್ಟಿಕ್ನ್ನು ಉಪಯೋಗಿಸುವುದಿಲ್ಲವೆಂಬ ಸಂಕಲ್ಪವನ್ನು ಈಗಿನಿಂದಲೇ ಮಾಡೋಣ ಎಂದು ಕರೆ ನೀಡಿದರು.
ಪ್ರಕೃತಿ ನಮ್ಮ ಆಸೆಗಳನ್ನು ಪೂರೈಸುತ್ತದೆ, ದುರಾಸೆಯನ್ನಲ್ಲ ಎಂಬುದನ್ನು ನೆನಪಿಟ್ಟಿ, ಪ್ರಜ್ಞಾವಂತರಾಗಿ ಪರಿಸರದ ಕಾಳಜಿ ವಹಿಸಬೇಕು. ಜಿಲ್ಲೆಯಲ್ಲಿ ಹಿಂದಿದ್ದ ನಿತ್ಯಹರಿದ್ವರ್ಣದ ಕಾಡು ಕಳೆದುಹೋಗುತ್ತಿದೆ. ತಾಪಮಾನ ಏರುತ್ತಿದೆ. ಆದ್ದರಿಂದ ನಮ್ಮನೆಲ್ಲ ರಕ್ಷಿಸುವ ಪರಿಸರವನ್ನು ಉಳಿಸಲು ನಾವು ಕಾಳಜಿಯಿಂದ ವರ್ತಿಸಬೇಕು. ಒಂದೊಂದು ಹನಿ ನೀರು ನಮ್ಮ ದೇಹದ ಒಂದೊಂದು ಹನಿ ರಕ್ತದಂತೆ. ಅದನ್ನು ಕಾಪಾಡಬೇಕು. ಪ್ಲಾಸ್ಟಿಕ್ ಸೇರಿದಂತೆ ಎಲ್ಲ ರೀತಿಯ ಮಾಲಿನ್ಯ ತಡೆದು ಪರಿಸರ ಸಂರಕ್ಷಣೆ ಮಾಡುವ ಪ್ರತಿಜ್ಞೆ ಮಾಡೋಣ ಎಂದರು.
Department of Tourism Shivamogga ಪರಿಸರ ತಜ್ಞರಾದ ಬಿ.ಎಂ.ಕುಮಾರಸ್ವಾಮಿ ಮಾತನಾಡಿ, ಕೈಗಾರಿಕಾ ಕ್ರಾಂತಿ ಆರಂಭವಾಗಿ ಕೇವಲ 120 ವರ್ಷಗಳಲ್ಲಿ ಪರಿಸರಕ್ಕೆ ಎಷ್ಟೊಂದು ಹಾನಿಯಾಗಿದೆ ಎಂಬುದನ್ನು ಕಾಣಬಹುದು. ಕೈಗಾರಿಕಾ ಕ್ರಾಂತಿಯ ಪರಿಣಾಮವಾಗಿ ಪಶ್ಚಿಮ ಯೂರೋಪ್ ಮತ್ತು ಅಮೇರಿಕಾ ದೇಶಗಳು ಯಥೇಚ್ಚವಾಗಿ ಕಲ್ಲಿದ್ದಲು, ಪೆಟ್ರೋಲಿಯಂ ಬಳಕೆ ಮಾಡಿದ್ದರಿಂದ ಕಾರ್ಬನ್ ಡೈ ಆಕ್ಸೈಡ್ ಪ್ರಮಾಣ ಹೆಚ್ಚಾಗಿ ಪರಿಸರ ನಾಶಕ್ಕೆ ಕಾರಣವಾಯಿತು.
1972 ರಲ್ಲಿ ಮೊದಲ ಬಾರಿಗೆ ವಿಶ್ವಸಂಸ್ಥೆ ವತಿಯಿಂದ ಪರಿಸರ ಸಂರಕ್ಷಣೆ ಕುರಿತು ಸ್ಟಾಕ್ಹೋಂ ನಲ್ಲಿ ಜೂನ್ 5 ರಂದು ಜಾಗತಿಕ ಸಮ್ಮೇಳನ ನಡೆಯಿತು. ಅದರ ನೆನಪಿನ ಅಂಗವಾಗಿ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತಿದೆ.
ಸಾವಿರಾರು ಮಾಲಿನ್ಯಗಳಲ್ಲಿ ಪ್ಲಾಸ್ಟಿಕ್ ಮಾಲಿನ್ಯ ಒಂದಾಗಿದೆ. ಪ್ಲಾಸ್ಟಿಕ್ನಿಂದ ಹಲವಾರು ಉಪಯೋಗಗಳಿದ್ದರೂ ಅಷ್ಟೇ ಅಪಾಯಕಾರಿಯಾಗಿದೆ. ಪ್ಲಾಸ್ಟಿಕ್ ಅದರಲ್ಲೂ ಏಕಬಳಕೆಯ ಪ್ಲಾಸ್ಟಿಕ್ ಅತ್ಯಂತ ಅಪಾಯಕಾರಿ. ಪ್ಲಾಸ್ಟಿಕ್ ಇತರೆ ಜೈವಿಕ ವಸ್ತುಗಳಂತೆ ಜೈವಿಕ ವಿಘಟನೆಗೆ ಒಳಗಾಗದ ಕಾರಣ ಸಾವಿರಾರು ವರ್ಷ ಮೈಕ್ರೋ ಪ್ಲಾಸ್ಟಿಕ ಕಣಗಳಾಗಿ ಪರಿಸರದಲ್ಲಿ, ನಾವು ಉಸಿರಾಡುವ ಗಾಳಿಯಲ್ಲಿ ಸೇರಿ ಹಾನಿಯುಂಟು ಮಾಡುತ್ತಿದೆ. ಭೂಮಿಯ ಮೈಕ್ರೊ ಆರ್ಗಾನಿಸಮ್ನ ಕೊಲ್ಲುತ್ತಿದೆ.
ಸಮುದ್ರ-ಸಾಗರಗಳಿಗೆ ಸೇರಿಕೊಂಡು ಸಾಗರ ಮಾಲಿನ್ಯದ ಮೂಲಕ ಜಲಚರ ಸರಪಳಿಗೆ ಹಾನಿ ಮಾಡುತ್ತಿದೆ. 1922 ರ ಯುಎನ್ಓ ವರದಿ ಪ್ರಕಾರ ವಿಶ್ವದಲ್ಲಿ ಪ್ರತಿ ವರ್ಷ 430 ಮಿಲಿಯನ್ ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತಿದೆ. ಅದರಲ್ಲಿ ಶೇ.51 ಏಷಿಯಾ ರಾಷ್ಟ್ರದಲ್ಲಿ ಅದರಲ್ಲೂ ಶೇ.71 ಚೀನಾ ದೇಶದಲ್ಲಿ ಆಗುತ್ತಿದೆ. 80 ಲಕ್ಷ ಟನ್ನಷ್ಟು ಪ್ಲಾಸ್ಟಿಕ್ ಸಾಗರ ಸೇರುತ್ತಿದೆ.
ಏಕ ಬಳಕೆಯ ಪ್ಲಾಸ್ಟಿಕ್ ನಮ್ಮ ದೊಡ್ಡ ಶತ್ರುವಾಗಿದ್ದು, ನಾವು ಬಳಸಿ ಎಸೆದ ಪ್ಲಾಸ್ಟಿಕ್ ಸಾವಿರಾರು ವರ್ಷ ಮಾಲಿನ್ಯ ಉಂಟು ಮಾಡುತ್ತದೆ. ವರ್ಷಕ್ಕೆ 35 ಲಕ್ಷ ಟನ್ ಪ್ಲಾಸ್ಟಿಕ್ ವೇಸ್ಟ್ ಉತ್ಪಾದನೆಯಾಗುತ್ತಿದ್ದು ಅದರಲ್ಲಿ ಶೇ.68 ಏಕಬಳಕೆ ಪ್ಲಾಸ್ಟಿಕ್ ಆಗಿದೆ.
ಏಕ ಬಳಕೆ ಪ್ಲಾಸ್ಟಿಕ್ ಮಾಲಿನ್ಯದ ದೊಡ್ಡ ಕಾರಣ ಏಕಬಳಕೆ ನೀರಿನ ಬಾಟಲ್ ಮಾರುಕಟ್ಟೆ ವ್ಯಾಪಕವಾಗಿ ನಮ್ಮಲ್ಲಿ ಬೆಳೆಯುತ್ತಿರುವುದು. ಮದುವೆ ಮನೆಗಳಲ್ಲಿ ಸಾವಿರಾರು ನೀರಿನ ಬಾಟಲ್ ಬಳಸಿ ತಿಪ್ಪೆಗೆ ಎಸೆಯಲಾಗುತ್ತಿದೆ. ಕೇಂದ್ರ ಸರ್ಕಾರ 2022 ರ ಜುಲೈ ಲ್ಲಿ 19 ರೀತಿಯ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿದ್ದರೂ ಅದರ ಜಾರಿ ವಿಫಲವಾಗಿದೆ. ಕಾರಣ ನಾವುಗಳು. ಪ್ಲಾಸ್ಟಿಕ್ ಮಾಲಿನ್ಯಕ್ಕೆ ಕಾರಣ ನಾವೆ. ಪರಿಹಾರವೂ ನಮ್ಮ ಕೈಯಲ್ಲಿದ್ದು ಇನ್ನು ಮುಂದೆ ಪ್ಲಾಸ್ಟಿಕ್ ಕವರ್, ಸ್ಟ್ರಾ ಇತ್ಯಾದಿ ಏಕಬಳಕೆ ಪ್ಲಾಸ್ಟಿಕ್ ಬಳಸುವುದಿಲ್ಲವೆಂದು ಯುವಜನತೆ, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ನಿರ್ಧಾರ ಕೈಗೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಆನೆಬಿಡಾರದ ಎರಡು ಆನೆ ಮರಿ ಮತ್ತು ಒಂದು ಆನೆ ಸೇರಿ ಮೂರೆ ಆನೆಗಳಿಗೆ ಕ್ರಮವಾಗಿ ಕೃಷ್ಣ, ಅಭಿಮನ್ಯು ಮತ್ತು ಧೃವ ಎಂಬುದಾಗಿ ಶಾಸಕರ ಸಮ್ಮುಖದಲ್ಲಿ ನಾಮಕರಣ ಮಾಡಲಾಯಿತು.
ವನ್ಯಜೀವಿ ಉಪವಲಯ ಅಧಿಕಾರಿ ಪ್ರಸನ್ನಕೃಷ್ಣ ಪಟಗಾರ್ ವಿಶ್ವ ಪರಿಸರ ದಿನಾಚರಣೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೆಳಿಗ್ಗೆ 8.30 ರಿಂದ 9 ಗಂಟೆವರೆಗೆ ಸಕ್ರೆಬೈಲಿನ ಆನೆಬಿಡಾರದಲ್ಲಿ ಸ್ವಚ್ಚತಾ ಅಭಿಯಾನ ಕೈಗೊಳ್ಳಲಾಗಿತ್ತು. ಆನಂತರ ಅರಣ್ಯ ಇಲಾಖೆ, ಕಾನೂನೂ ಸೇವಾ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರವಾಸೋದ್ಯ ಇಲಾಖೆಯ ನಿರ್ದೇಶಕರಾದ ಮೊಹಮ್ಮದ್ ಫಾರೂಕ್ ಇಕೋ ಟೂರಿಸಂ ಮತ್ತು ಬಯೋ ಡೈವರ್ಸಿಟಿ ಸಂರಕ್ಷಣೆ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಸಿಸಿಎಫ್ ಡಾ.ಹನುಮಂತಪ್ಪ, ಅರಣ್ಯ ಅಧಿಕಾರಿ ಶಿವಶಂಕರ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಅವಿನ್ ಆರ್, ಎಸ್.ಪಿ.ಶೇಷಾದ್ರಿ, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪರಿಸರ ಪ್ರೇಮಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
World Environment Day ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಸಿರಿಗಾಗಿ ಹಸಿರು ಹಾಗೂ ವಿನೋಬನಗರದ ರಕ್ತೇಶ್ವರಿ ಮತ್ತು ಮಡಲಿ ಗಿಡ್ಡಮ್ಮ ದೇವಾಲಯ ಸೇವಾ ಸಮಿತಿಯ ಸಂಯುಕ್ತ ಆಶಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಯಲ್ಲಿ ದೇವಾಲಯದ ಮುಂಭಾಗದಲ್ಲಿ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆ ಮಾತ್ರ ಗಿಡಗಳ ನಡೆಯುವ ಹಾಗೂ ಪೋಷಿಸುವ ಕೆಲಸವಾಗಬಾರದು ಬದಲಾಗಿ ವರ್ಷಪೂರ್ತಿ ನಾವು ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದು ಉಸಿರಿಗಾಗಿ ಹಸಿರು ಸಂಸ್ಥೆಯ ಅಧ್ಯಕ್ಷ ಪರಿಸರ ಯಶ್ವಂತ ಹೇಳಿದರು.
World Environment Day ಈ ಸಂದರ್ಭದಲ್ಲಿ ರಕ್ತೇಶ್ವರಿ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷರಾದ ಲಿಂಗರಾಜ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಹಾಗೂ ವಿನೋಬನಗರ ಮುಖಂಡ ದೀಪಕ್ ಸಿಂಗ್ ಸೇರಿದಂತೆ ದೇವಸ್ಥಾನದ ಪದಾಧಿಕಾರಿಗಳಾದ ರಾಘವೇಂದ್ರ ಧನರಾಜ್ ಭೀಮಣ್ಣ ಉಪಸ್ಥಿತರಿದ್ದರು.
Abu Dhabi International Airport ಕೆಲವೊಮ್ಮೆ ಅದೃಷ್ಟ ಯಾವ ರೀತಿ ಖುಲಾಯಿಸುತ್ತದೆ ಎಂದು ಹೇಳಲಾಗುವುದಿಲ್ಲ.. ಸಾಮಾನ್ಯ ನರ್ಸ್ ಒಬ್ಬರು ರಾತ್ರೋರಾತ್ರಿ ಕೋಟ್ಯಾಧೀಶ್ವರಿಯಾದ ಆಶ್ಚರ್ಯಕರ ಸಂಗತಿ ಇಲ್ಲಿದೆ ನೋಡಿ.ಕೇರಳ ಮೂಲದ ನರ್ಸ್ ಕುಟುಂಬವೊಂದಕ್ಕೆ ಈ ಅದೃಷ್ಟ ಒಲಿದು ಬಂದಿದೆ. ಬಿಗ್ ಟಿಕೆಟ್ ಲಾಟರಿಯಲ್ಲಿ ಬರೋಬ್ಬರಿ 45 ಕೋಟಿ ರೂಪಾಯಿ ಬಹುಮಾನ ಬಂದಿದೆ.
ಲವಲ್ ಮೋಲ್ ಅಚ್ಚಮ್ಮ ಮತ್ತು ಕುಟುಂಬದವರಿಗೆ ಈ ಅದೃಷ್ಟ ಒಲಿದಿದೆ. ಇವರ ಪತಿ ಪ್ರತಿ ತಿಂಗಳು ಅಬುದಾಬಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಾಟರಿ ಖರೀದಿಸುತ್ತಿದ್ದರು ಎಂದು ಹೇಳಲಾಗಿದೆ.
Abu Dhabi International Airport ಇದೀಗ ಈ ಭಾರೀ ಮೊತ್ತ ಅವರಿಗೆ ಲಭಿಸಿದ್ದು, ಈ ಪೈಕಿ ಮಕ್ಕಳ ಶಿಕ್ಷಣಕ್ಕೆ ಒಂದಷ್ಟು ಹಣ ಬಳಸಿಕೊಂಡು ಒಂದು ಭಾಗವನ್ನು ಕುಟುಂಬದ ಇತರೆ ಸದಸ್ಯರಿಗೆ ನೀಡುವುದಾಗಿ ಹೇಳಿದ್ದಾರೆ.
ಇನ್ನುಳಿದ ಹಣವನ್ನು ದಾನ ಮಾಡುವುದಾಗಿ ಅಚ್ಚಮ್ಮ ಅವರು ತಿಳಿಸಿದ್ದಾರೆ. ಪ್ರಸ್ತುತ ಅವರೀಗ ಅಬುಧಾಬಿಯಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ
CM Siddaramaiah ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿಗಳನ್ನು ಆರ್ಥಿಕವಾಗಿ ಸಾಮರ್ಥ್ಯವುಳ್ಳವರು ತ್ಯಜಿಸಿ, ಇಲ್ಲದವರಿಗೆ ತಲುಪುವಂತೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.
ಖಾಸಗಿ ವಲಯದಲ್ಲಿ ಕೆಲಸ ಮಾಡುತ್ತಿರುವವರು ಮತ್ತು ಮಾಧ್ಯಮಗಳ ಮುಖ್ಯಸ್ಥರು, ಸರ್ಕಾರಿ ಅಧಿಕಾರಿಗಳು, ಗೃಹ ಜ್ಯೋತಿ ಯೋಜನೆಯನ್ನು ಬಿಟ್ಟುಕೊಡುವುದಾಗಿ ನನಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.
CM Siddaramaiah ಈ ಯೋಜನೆಯ ಲಾಭದಿಂದ ಹೊರಗುಳಿಯಲು ಬಯಸುವವರಿಗೆ ಅವಕಾಶ ಮಾಡಿಕೊಡಲಾಗುವುದು. ಉಳ್ಳವರು’ ದೊಡ್ಡ ಮನಸ್ಸಿನಿಂದ ‘ಇಲ್ಲದವರ’ನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಟ್ಟರೆ ಅದು ರಾಜ್ಯ ಸರ್ಕಾರದ ಮೇಲಿರುವ ಆರ್ಥಿಕ ಹೊರೆಯನ್ನು ಕಡಿತಗೊಳಿಸುತ್ತದೆ. ಇದರಿಂದ ಆ ಹಣವನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಉಪಯೋಗಿಸಬಹುದು ಎಂದು ಸಿಎಂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ICAR Agricultural Science Centre Shivamogga ಹಲಸಿನ ಹಣ್ಣು ಋತುಕಾಲದಲ್ಲಿ ಎಲ್ಲಾ ವರ್ಗದ ಜನರಿಗೆ ಕಡಿಮೆ ಬೆಲೆಗೆ ಹೇರಳವಾಗಿ ದೊರೆಯುವ ಹಣ್ಣಾಗಿದೆ. ಈ ಹಣ್ಣಿನಲ್ಲಿರುವ ತೊಳೆ, ಬೀಜ ಮತ್ತು ಸಿಪ್ಪೆಯನ್ನು ಸಂಸ್ಕರಿಸಿ ವಿವಿಧ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಯಲ್ಲಿ ಅಧಿಕ ಲಾಭ ಪಡೆಯಬಹುದಾಗಿದೆ ಎಂದು ಇರುವಕ್ಕಿ ಕೆ.ಶಿ.ನಾ.ಕೃ.ತೋವಿ.ವಿಯ ಸಹ ವಿಸ್ತರಣಾ ನಿರ್ದೇಶಕ ಡಾ. ಬಿ.ಸಿ. ಹನುಮಂತಸ್ವಾಮಿ ಹೇಳಿದರು.
ICAR Agricultural Science Centre Shivamogga ಅವರು ತಮ್ಮಡಿಹಳ್ಳಿ ಗ್ರಾಮದಲ್ಲಿ ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಹಾಗೂ ಜನ ಶಿಕ್ಷಣ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದೊಂದಿಗೆ “ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಕುರಿತು ಸಾವiರ್ಥ್ಯ ಅಭಿವೃದ್ದಿ ತರಬೇತಿ ಕಾರ್ಯಕ್ರಮ” ದಲ್ಲಿ ಭಾಗವಹಿಸಿ ಮಾತನಾಡಿದರು.
ಕೆ.ವಿ.ಕೆ ಶಿವಮೊಗ್ಗದ ಗೃಹ ವಿಜ್ಞಾನಿ ಡಾ.ಜ್ಯೋತಿ ಎಂ ರಾಠೋಡ್ ಮಾತನಾಡಿ, ಹಲಸಿನ ಹಣ್ಣು ಸುವಾಸನೆ ಹಾಗೂ ರುಚಿ ಎರಡನ್ನೂ ಹೊಂದಿದೆ. ಈ ಹಣ್ಣನ್ನು ಬಳಸಿಕೊಂಡು ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಬಹುದು. ಹಲಸಿನ ಹಣ್ಣಿನಲ್ಲಿ ವಿಟಾಮಿನ್, ಖನಿಜಾಂಶ, ಕಾರ್ಬೋಹೈಡ್ರೇಟ್, ಎಲೆಕ್ಟ್ರೊಲೈಟ್ಗಳು, ಪೊಟ್ಯಾಷಿಯಂ ಹಾಗೂ ನಾರಿನಾಂಶಗಳು ಯೆಥೇಚ್ಚವಾಗಿ ಸಿಗುವುದರಿಂದ ಇದೊಂದು ಆರೋಗ್ಯಕಾರಿ ಹಣ್ಣು ಎಂದರು.
ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರತಿಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗರಾಜ್, ಜನ ಶಿಕ್ಷಣ ಸಂಸ್ಥೆಯ ಶೋಭಾ ಹಾಗೂ ಶಿಕ್ಷಕಿ ಅಶ್ವಿನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.
ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
30 ದಿನಗಳ ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೈಟಿಂಗ್ ತರಬೇತಿ ನೀಡಲಾಗುತ್ತದೆ. ತರಬೇತಿಗಳು ಪ್ರಾರಂಭವಾಗುವ ದಿನಾಂಕ 10/07/2023
ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ: ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577216 (ಶಿವಮೊಗ್ಗ ತಾಲ್ಲೂಕು) ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.974329595, 8660062683, 8722384541, 9449371579, 9481955721, 8105378735 ಅನ್ನು ಸಂಪರ್ಕಿಸಬಹುದಾಗಿದೆ.
Rotary Shivamogga ನಗು ಸಂತೋಷ ನಮ್ಮ ಮನಸ್ಸನ್ನು ಹಗುರಗೊಳಿಸುವುದರ ಜತೆಗೆ ಖಿನ್ನತೆ ದೂರವಾಗಿಸುತ್ತದೆ. ನಗು ಒಂದು ದಿವ್ಯ ಸಂಜೀವಿನಿ ಎಂದು ರಂಗಭೂಮಿ ಕಲಾವಿದ ಅಣ್ಣಪ್ಪ ಒಂಟಿಮಾಳಿಗಿ ಹೇಳಿದರು.
ರಾಜೇಂದ್ರನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕೌಟುಂಬಿಕ ಸ್ನೇಹಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ, ನಗುವಿಗೆ ವಿಶೇಷ ಶಕ್ತಿ ಇದೆ. ಹಾಸ್ಯ ನಮ್ಮೊಳಗೆ ಹುದುಗಿರುತ್ತದೆ. ಆದರೆ ನಮ್ಮಲ್ಲಿ ಹಾಸ್ಯ ಪ್ರಜ್ಞೆ ಇರಬೇಕು. ಇನ್ನೂ ಹಾಸ್ಯ ಕಲಾವಿದರ ಸಂಖ್ಯೆಯು ಕ್ಷೀಣಿಸುತ್ತಿದೆ ಎಂದು ತಿಳಿಸಿದರು.
ಪ್ರತಿ ನಿತ್ಯ ನಮ್ಮ ನಿಜ ಜೀವನದಲ್ಲಿ ಸಾಕಷ್ಟು ಹಾಸ್ಯ ಪ್ರಸಂಗಗಳು ನಡೆಯುತ್ತಿರುತ್ತವೆ. ಅವುಗಳನ್ನು ಸ್ವೀಕರಿಸುವ ಪ್ರಜ್ಞೆ ನಮ್ಮೆಲ್ಲರಲ್ಲಿ ಇರಬೇಕು ಎಂದರು.
ಅನೇಕ ಹಾಸ್ಯ ಪ್ರಸಂಗಗಳು ಹಾಸ್ಯ ಕವನಗಳು, ಹಾಸ್ಯ ಗೀತೆಗಳನ್ನು ಹಾಡಿ ರಂಜಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಮಾತನಾಡಿ, ರೋಟರಿ ಸಂಸ್ಥೆ ಸೇವಾ ಕಾರ್ಯಗಳ ಜತೆಯಲ್ಲಿ ಸಾಧಕರನ್ನು ಕಲಾವಿದರನ್ನು ಗುರುತಿಸಿ ಗೌರವಿಸುವ ಸಾರ್ಥಕ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದು ಹೇಳಿದರು.
Rotary Shivamogga ಹಾಸ್ಯ ನಮ್ಮಲ್ಲಿ ವಿಶೇಷ ಚೈತನ್ಯವನ್ನು ಮೂಡಿಸುತ್ತದೆ. ಸದಾ ಆರೋಗ್ಯದಿಂದ ಇರುವಂತೆ ಸಹಕಾರಿ ಆಗಿಸುತ್ತದೆ. ಹಾಸ್ಯ ಮನೋಭಾವ, ಹಾಸ್ಯ ಪ್ರಜ್ಞೆ ನಮ್ಮಲ್ಲಿ ಸದಾ ಜಾಗೃತ ಆಗಿರಬೇಕು ಎಂದು ತಿಳಿಸಿದರು. ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್ಕುಮಾರ್, ಚಂದ್ರಹಾಸ ಪಿ ರಾಯ್ಕರ್, ಮಾಜಿ ಗವರ್ನರ್ ಎಚ್.ಎಲ್.ರವಿ, ಮ್ಯಾನೇಜಿಂಗ್ ಟ್ರಸ್ಟಿ ಚಂದ್ರಶೇಖರಯ್ಯ, ಮಾಜಿ ಅಧ್ಯಕ್ಷ ಆದಿಮೂರ್ತಿ, ಕಡಿದಾಳ್ ಗೋಪಾಲ್, ಡಾ. ಪರಮೇಶ್ವರ ಶಿಗ್ಗಾವ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ, ಗಣೇಶ್, ಡಾ. ಅರುಣ್, ಹುಲಿರಾಜ್, ನಾಗವೇಣಿ, ಇನ್ನರ್ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ್ಕುಮಾರ್, ವಿಜಯ ರಾಯ್ಕರ್ ಉಪಸ್ಥಿತರಿದ್ದರು.
World Environment Day ವಿಶ್ವ ಪರಿಸರದ ಹಾರ್ದಿಕ ಶುಭಕಾಮನೆಗಳೊಂದಿಗೆ ಆರು ಹನಿಗವಿತೆಗಳು ಒಪ್ಪಿಸಿಕೊಳ್ಳಿ.. ಇಲ್ಲಿ ಪರಿಸರದ ಕಾಳಜಿಯಿದೆ. ವಾಸ್ತವದ ಅನಾವರಣವಿದೆ. ವ್ಯಂಗ್ಯ, ವಿಡಂಬನೆ, ವಿಷಾದ ಎಲ್ಲವೂ ಇದೆ. ಪ್ರತಿಯೊಬ್ಬರಲ್ಲೂ ಪರಿಸರ ಪ್ರಙ್ನೆ ಜಾಗೃತವಾಗಿ, ಸಂರಕ್ಷಣೆಗೆ ಕಟಿಬದ್ದರಾಗಿ ಕಾರ್ಯಪ್ರವೃತ್ತರಾದಲ್ಲಿ ಇಳೆಯ ಕಣಕಣವೂ ಹಸಿರಾದೀತು. ನಾಳಿನ ಪೀಳಿಗೆಗೂ ಉಸಿರಾದೀತು.. ಏನಂತೀರಾ..?”- ಪ್ರೀತಿಯಿಂದ ಎ.ಎನ್.ರಮೇಶ್. ಗುಬ್ಬಿ.
ಕಾಡು ಉಳಿಸುವ ನಿಮ್ಮಯ ಆಂದೋಲನ ಸ್ವಲ್ಪ ಬದಿಗಿಡಿ ಮೊದಲು ಮನೆಯ ಮುಂದಿನ ಮರ ಕಡಿಯದಂತೆ ಕಣ್ಣಿಡಿ.!
ಪರಿಣಾಮ.!
ಕಾಡು ಕಡಿದು ನಾಡು ಮಾಡಿ ಮರ ಬೀಳಿಸಿ ಲೇಔಟ್ ಏಳಿಸಿ ದುಡ್ಡು ಮಾಡುವ ದಿನಮಾನ ಬದಲಾಗದಿದ್ದೀತೆ ಋತುಮಾನ ಏರದಿದ್ದೀತೆ ಜಾಗತಿಕ ತಾಪಮಾನ.?
ವಿಷಾದ.!
ಮಕ್ಕಳ ಸಾಕುವ ಬದಲು ನಾಲ್ಕು ಮರ ಬೆಳೆಸಿದ್ದರೆ ಚೆನ್ನಿರುತ್ತಿತ್ತೇನೋ ವೃದ್ದಾಪ್ಯ ಮಾತುಕತೆ ಇಲ್ಲದಿದ್ದರೂ.. ಅವು ಕನಿಷ್ಟ ವಿದೇಶಕ್ಕಂತೂ ಹಾರುತ್ತಿರಲಿಲ್ಲ ತೊರೆದು ಸಖ್ಯ.! ಹೂ-ಹಣ್ಣು ನೆರಳುಗಳಿಡುತ ನಮ್ಮ ಕಾಯುತ್ತಿದ್ದವು ಪ್ರತಿನಿತ್ಯ.!
CM Siddaramaiah 2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ವೃತ್ತಿಪರ ಕೋರ್ಸುಗಳು ಸೇರಿದಂತೆ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ CM Siddaramaiah ಅವಧಿಗೆ ನೀಡುವ “ಯುವನಿಧಿ” ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ, ಆದೇಶಿಸಲಾಗಿದೆ. ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.