Saturday, August 8, 2026
Saturday, August 8, 2026
Home Blog Page 142

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

0

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ವಸತಿ ನಿಲಯ ಹಾಗೂ ಕೌಶಲ್ಯ ತರಬೇತಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎಸ್.ಎನ್‌. ಚನ್ನಬಸಪ್ಪ ಪಾಲ್ಗೊಂಡಿದ್ದರು.

ಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಸಚ್ಚಿದಾನಂದೇಶ್ವರ ಭಾರತೀಯ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮವು ಸಮಾಜದ ಮಹಿಳೆಯರ ಶೈಕ್ಷಣಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದೆ. ಮಹಿಳೆಯರಿಗೆ ಸುರಕ್ಷಿತ ವಸತಿ ಹಾಗೂ ಸ್ವಾವಲಂಬಿ ಬದುಕಿಗೆ ಅಗತ್ಯವಾದ ಕೌಶಲ್ಯ ತರಬೇತಿ ನೀಡುವ ಈ ಸಂಸ್ಥೆಯ ದೂರದೃಷ್ಟಿ ಶ್ಲಾಘನೀಯ ಎಂದು ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಶ್ಲಾಘಿಸಿದರು.

S.N.Channabasappa ನಮ್ಮ ನಗರದ ಶ್ರೇಯೋಭಿವೃದ್ಧಿಗೆ ಇಂತಹ ಸೇವಾ ಕೇಂದ್ರಗಳು ಪೂರಕವಾಗಿದ್ದು, ಸಮಾಜದ ಪ್ರತಿಯೊಬ್ಬರಿಗೂ ಇದರ ಪ್ರಯೋಜನ ಸಿಗುವಂತಾಗಲಿ ಎಂದು ಈ ಸಂದರ್ಭದಲ್ಲಿ ಶುಭ ಶಾಸಕರು ಹಾರೈಸಿದರು

ಹುಂಚದ ಮಠದ ಜಡ್ಡುವಿನಲ್ಲಿ ಮನೆಗೆ ಏಕಾಏಕಿ ಬೆಂಕಿ ವ್ಯಾಪಿಸಿ ಮನೆ ಸಂಪೂರ್ಣ ಅಗ್ನಿಗಾಹುತಿ

0

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಅಗ್ನಿ ಅವಘಡ ನಡೆದಿದ್ದು, ಕ್ಷಣಾರ್ಧದಲ್ಲಿ ಮನೆ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಹುಂಚ ಗ್ರಾಮದ ಮಠದಜಡ್ಡು ಸಮೀಪದಲ್ಲಿರುವ ಸುಮಿತ್ರಾ ಎಂಬವರ ಮನೆಯಲ್ಲಿ ಭಾನುವಾರ ಸಂಜೆ ಕಾಣಿಸಿಕೊಂಡ ಬೆಂಕಿ ಕಾಣಿಸಿಕೊಂಡಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ಭಾರೀ ಅಗ್ನಿಯಾಗಿ ವ್ಯಾಪಿಸಿ, ಮನೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಘಟನೆಯ ವೇಳೆಯಲ್ಲಿ ಮನೆಯಲ್ಲಿ ಇದ್ದವರು ತಕ್ಷಣ ಹೊರಗೆ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಎಲ್ಲಾ ಗೃಹೋಪಯೋಗಿ ವಸ್ತುಗಳು, ದಾಖಲೆಗಳು ಸುಟ್ಟು ಭಸ್ಮವಾಗಿದೆ. ಈ ಘಟನೆದಿಂದ ಮಾನಸಿಕವಾಗಿ ತೀವ್ರ ಆಘಾತಕ್ಕೊಳಗಾದ ಮನೆಯ ಮಾಲಕಿ ಸುಮಿತ್ರಾ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

0

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ ಇರಬೇಕು ಅದು ಯಾವತ್ತೂ ನಷ್ಟವಾಗುವುದಿಲ್ಲ ಎಂದು ಕನ್ನಡ ಮೀಡಿಯಂ 24×7 ಕೇಬಲ್ ಹಾಗೂ ಡಿಜಿಟಲ್ ಸುದ್ದಿ ವಾಹಿನಿ ಪ್ರಧಾನ ಸಂಪಾದಕರಾದ ಹೊನ್ನಾಳಿ ಚಂದ್ರಶೇಖರ್ ಹೇಳಿದರು.

ಅವರು ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಇಂದು ಆಯೋಜಿಸಿದ್ದ “ಟೆಲಿವಿಷನ್ ನಿರೂಪಣೆ” ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ ಇದೆ. ಇದಕ್ಕಾಗಿ ಭಾಷಾ ಪಾಂಡಿತ್ಯ, ವಿಷಯದ ಬಗ್ಗೆ ಸಮಗ್ರ ಅರಿವು ಹಾಗೂ ಸಮಾಜವನ್ನು ತೆರೆದ ಕಣ್ಣಿನಿಂದ ನೋಡುವ ಮನೋಭಾವ ಅಗತ್ಯ ಎಂದು ಹೇಳಿದರು.

ಪತ್ರಿಕೋದ್ಯಮದಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಗಟ್ಟಿತನವನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಥರ್ಡ್ ಐ ವಾಹಿನಿ ಸಂಸ್ಥಾಪಕ ಸಂಪಾದಕರಾದ ಸುಬ್ರಹ್ಮಣ್ಯ ಎಸ್. ಹಂಡಿಗೆ, ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮದಲ್ಲಿ ನೈತಿಕತೆ ಕುಸಿಯುತ್ತಿದ್ದು, ಧರ್ಮ ಮತ್ತು ಜಾತಿ ಆಧಾರಿತ ವಿಭಜನೆಗಳನ್ನು ಉಂಟುಮಾಡುವ ಪ್ರವೃತ್ತಿ ಹೆಚ್ಚುತ್ತಿದೆ, ರಾಜಕೀಯ ನಾಯಕರನ್ನು ಪ್ರಶ್ನಿಸುವ ಧೈರ್ಯ ಕಡಿಮೆಯಾಗುತ್ತಿದೆ ಎಂದರು.

ಮೀಸಲಾತಿಯ ಉದ್ದೇಶ ಸಾಮಾಜಿಕ ಸಮಾನತೆ ಸಾಧಿಸುವುದೇ ಹೊರತು ಶ್ರೀಮಂತಿಕೆ ಹೆಚ್ಚಿಸುವುದಲ್ಲ. ಈ ವಿಷಯವನ್ನು ಸರಿಯಾದ ಅರಿವಿಲ್ಲದೆ ತಪ್ಪಾಗಿ ಪತ್ರಕರ್ತರು ವಾಗ್ಮಿಗಳು ಬಿಂಬಿಸುತ್ತಿರುವುದು ವಿಷಾದನೀಯ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಪತ್ರಿಕೋದ್ಯಮದಲ್ಲಿ ಅನೇಕ ಅವಕಾಶಗಳಿದ್ದು, ತಮ್ಮದೇ ವೇದಿಕೆಯನ್ನು ನಿರ್ಮಿಸಿಕೊಳ್ಳಬಹುದಾಗಿದೆ. ಆದರೆ ನೈತಿಕತೆಯಿಂದ ಸಮಾಜದಲ್ಲಾಗಿರುವ ಗಾಯಗಳಿಗೆ ಔಷಧಿಯನ್ನು ಹಚ್ಚುವ ಕೆಲಸಗಳನ್ನು ಮಾಡಬೇಕು ಎಂದರು.

ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾದ ಶ್ರೀ ಹೇಮಂತ್ ಎನ್ ಮಾತನಾಡಿ, ನಿರೂಪಕರಿಗೆ ಕೌಶಲ್ಯ, ವಿಷಯ ಜ್ಞಾನ ಹಾಗೂ ಸಮಯ ನಿರ್ವಹಣೆ ಪ್ರಮುಖವೆಂದರು.

Kuvempu University ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕುಲಪತಿಗಳಾದ ಪ್ರೊ. ಶರತ್ ಅನಂತಮೂರ್ತಿ ಅವರು ಮಾತನಾಡಿ, ಟಿಆರ್‌ಪಿ ಹಂಬಲದಲ್ಲಿ ಮಾಧ್ಯಮಗಳು ವಸ್ತುನಿಷ್ಠತೆಯನ್ನು ಕಳೆದುಕೊಳ್ಳುತ್ತಿದ್ದು, ನೈತಿಕ ಮೌಲ್ಯಗಳನ್ನು ಮರೆಯುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಧ್ಯಕ್ಷರಾದ ಡಾ. ವರ್ಗೀಸ್ ಪಿ.ಎ., ಪ್ರಾಧ್ಯಾಪಕರಾದ ಡಾ. ಸತೀಶ್ ಕುಮಾರ್, ಡಾ. ಸತ್ಯಪ್ರಕಾಶ್ ಎಂ.ಆರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪ್ರಗತಿ ಡಿ.ಡಿ ನಿರ್ವಹಿಸಿದ್ದು, ಪ್ರಾರ್ಥನೆಯನ್ನು ಭಾರ್ಗವಿ ನೆರವೇರಿಸಿದರು. ಮನೋಜ್ ವಂದನಾರ್ಪಣೆ ಸಲ್ಲಿಸಿದರು.

Rotary Shivamogga ರಕ್ತದಾನವು ಮಹತ್ವದ ಸೇವೆ- ಡಿ.ಎಸ್.ಅರುಣ್

0

Rotary Shivamogga ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ವತಿಯಿಂದ, ರೋಟರಿ ರಕ್ತ ಕೇಂದ್ರ ಹಾಗೂ ಆಶಾಜ್ಯೋತಿ ಬ್ಲಡ್ ಸೆಂಟರ್ ಅವರ ಸಂಯುಕ್ತ ಆಶ್ರಯದಲ್ಲಿ, ಶಿವಮೊಗ್ಗ ಡಿ.ಪಿ.ಡಿ.ಎ. ಮಾಜಿ ಅಧ್ಯಕ್ಷರು ಮತ್ತು ಖ್ಯಾತ ರಕ್ತದಾನಿಗಳಾದ ಕೀರ್ತಿಶೇಷ ಎಸ್.ಜಿ. ಯಜ್ಞ ನಾರಾಯಣರವರ ಸ್ಮರಣಾರ್ಥವಾಗಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ವಿಧಾನ ಪರಿಷತ್ತಿ ಸದಸ್ಯ ಡಿ.ಎಸ್.ಅರುಣ್ ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ರಕ್ತದಾನವು ಜೀವ ಉಳಿಸುವ ಮಹತ್ವದ ಸೇವೆಯಾಗಿದ್ದು, ಸಮಾಜದಲ್ಲಿ ಪ್ರತಿಯೊಬ್ಬರೂ ಇದರಲ್ಲಿ ತೊಡಗಿಸಿಕೊಳ್ಳಬೇಕು ಎಂದು ಡಿ.ಎಸ್.ಅರುಣ್ ಕರೆ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಸಂಘದ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ವೇಳೆ ಸಂಘದ ಮಾಜಿ ಅಧ್ಯಕ್ಷರು ಮಾತನಾಡಿ, ಡಿ.ಹೆಚ್. ಶಂಕರಮೂರ್ತಿ ಅವರು ಸಂಘದ ಸಭಾಭವನ ನಿರ್ಮಾಣಕ್ಕಾಗಿ ನೀಡಿದ ₹5 ಲಕ್ಷ ಅನುದಾನವನ್ನು ಸ್ಮರಿಸಿ, ಅವರ ಸಹಕಾರವನ್ನು ಕೃತಜ್ಞತೆಯಿಂದ ಉಲ್ಲೇಖಿಸಿದರು.

Rotary Shivamogga ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ, ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಎಸ್.ಪಿ. ಮಧುಕರ್, ADC ಸಹಾಯಕ ಔಷಧ ನಿಯಂತ್ರಕರಾದ ಡಾ. ಎಸ್.ವಿ. ವೀರೇಶ್ ಬಾಬು, ಶ್ರೀಮತಿ ವಿ. ವಿಶಾಲಾಕ್ಷಿ, ಔಷಧ ಮಾರಾಟ ಪ್ರತಿನಿಧಿಗಳ ಸಂಘದ ಅಧ್ಯಕ್ಷರಾದ ಅಶೋಕ ಎಸ್.ಜಿ., ಜಿಲ್ಲಾ ಫಾರ್ಮಸಿಸ್ಟ್ ಅಸೋಸಿಯೇಷನ್ ಅಧ್ಯಕ್ಷರಾದ ಗಣೇಶ್ ಎಸ್. ರಾವ್ ಸೇರಿದಂತೆ ಹಲವು ಗಣ್ಯರು ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

B.Y. Raghavendra ಕೇಂದ್ರ ಸಚಿವರೊಂದಿಗೆ ಅಡಿಕೆ ಕೃಷಿಕರ ಸಮಸ್ಯೆ ಚರ್ಚಿಸಿದ ಬಿ.ವೈ.ರಾಘವೇಂದ್ರ

0

B.Y. Raghavendra ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾನ್ ಜಿ ಅವರನ್ನು
ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ನವದೆಹಲಿಯಲ್ಲಿ ಭೇಟಿ ಮಾಡಿದ್ದರು.
ಅಡಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿ, ಅಡಿಕೆ ಕೃಷಿಕರ ಭವಿಷ್ಯದ ಬಗ್ಗೆ ಕಾಳಜಿ ತಾಳಲು ಸಚಿವರ ಗಮನ ಸೆಳೆದರು.

WHO/IARC ವರ್ಗೀಕರಣ ಹಾಗೂ ಕೊಲಂಬೊ ಘೋಷಣೆಯ ನಂತರದ ಬೆಳವಣಿಗೆಗಳ ಬಗ್ಗೆ ಗಮನ ಸೆಳೆದರು. ಅಲ್ಲದೇ ಇದು ರೈತರು ಮತ್ತು ಗ್ರಾಮೀಣ ಜೀವನೋಪಾಯದ ಮೇಲೆ ಬೀರುವ ಪರಿಣಾಮವನ್ನು ಸಂಸದರು ಒತ್ತಿಹೇಳಿದರು

B.Y. Raghavendra ಮಾನ್ಯ ಸಚಿವರು ವಿಷಯವನ್ನು ಸಕಾರಾತ್ಮಕವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದ ಬಿ.ವೈ‌ರಾಘವೇಂದ್ರ ಸಚಿವರ ಭೇಟಿಯ ಬಗ್ಗೆ
ಹರ್ಷ ವ್ಯಕ್ತಪಡಿಸಿದ್ದಾರೆ.

S.N. Channabasappa ಬಿಜಿಪಿ ಸ್ಥಾಪನಾ ದಿನ: ಮೋದೀಜಿ ಅವರ “ವಿಕಸಿತ ಭಾರತ” ಸಂಕಲ್ಪದ ಮೂಲಕ ಪಕ್ಷವು ಹೊಸ ಎತ್ತರಕ್ಕೆ ಜಿಗಿದಿದೆ- ಎಸ್.ಎನ್.ಚನ್ನಬಸಪ್ಪ

0

S.N. Channabasappa ರಾಷ್ಟ್ರಪ್ರೇಮದ ಪಯಣಕ್ಕೆ 47 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ, ‘ದೇಶವೇ ಮೊದಲು’ ಎಂಬ ಮಂತ್ರದೊಂದಿಗೆ ಮುನ್ನಡೆಯುತ್ತಿರುವ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾದ ಭಾರತೀಯ ಜನತಾ ಪಾರ್ಟಿಯ ‘ಸ್ಥಾಪನಾ ದಿನವನ್ನು ಇಂದು ಶಿವಮೊಗ್ಗದ ಜಿಲ್ಲಾ ಕಾರ್ಯಾಲಯದಲ್ಲಿ ಅತ್ಯಂತ ಸಡಗರದಿಂದ ಆಚರಿಸಲಾಯಿತು.

ಸಂಘಟನೆಯ ಉದಾತ್ತ ಪರಂಪರೆ ಸ್ಮರಣೆ:
ಪಕ್ಷದ ಧ್ವಜಾರೋಹಣ ನೆರವೇರಿಸಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಂಘಟನೆಯ ಪರಂಪರೆಯನ್ನು ಸ್ಮರಿಸಿದ ಶಾಸಕರು, “ಅಂತ್ಯೋದಯದ ಆಶಯವನ್ನು ಹೊತ್ತು ಜನಸಂಘದಿಂದ ಜನಾರ್ದನನ ಸೇವೆಯವರೆಗೆ ಪಕ್ಷವು ಬೆಳೆದು ಬಂದಿದೆ. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ಹಾಕಿದ ಸಿದ್ಧಾಂತದ ಅಡಿಪಾಯ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಸಮರ್ಥ ನೇತೃತ್ವದಲ್ಲಿ ‘ವಿಕಸಿತ ಭಾರತ’ದ ಸಂಕಲ್ಪದೊಂದಿಗೆ ಪಕ್ಷವು ಇಂದು ಹೊಸ ಎತ್ತರಕ್ಕೆ ಜಿಗಿಯುತ್ತಿದೆ,” ಎಂದು ಅಭಿಪ್ರಾಯಪಟ್ಟರು.

ಈ ಸಂಭ್ರಮದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಶ್ರೀ ದತ್ತಾತ್ರಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿದ್ದರಾಮಣ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಹಾಗೂ ಮಾಜಿ ಶಾಸಕರಾದ ಶ್ರೀ ಅಶೋಕ್ ನಾಯಕ್ ಅವರು ಉಪಸ್ಥಿತರಿದ್ದರು.

S.N. Channabasappa ಕಾರ್ಯಕ್ರಮದಲ್ಲಿ ಜಿಲ್ಲೆ ಹಾಗೂ ನಗರದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ನೂರಾರು ನಿಷ್ಠಾವಂತ ಕಾರ್ಯಕರ್ತರು ಪಾಲ್ಗೊಂಡು ಪಕ್ಷದ ಬಲವರ್ಧನೆಯ ಸಂಕಲ್ಪ ಮಾಡಿದರು.

Chamber of Commerce Shivamogga ಸಂಗೀತದಿಂದ ಖಿನ್ನತೆ ದೂರವಾಗಿ ಜೀವನೋತ್ಸಾಹ ಮೂಡುತ್ತದೆ- ಎಸ್.ಆರ್.ಮಂಜುನಾಥ್

0

Chamber of Commerce Shivamogga ತಂತ್ರಜ್ಞಾನ ಯುಗದಲ್ಲಿ ನಮ್ಮ ವೃತ್ತಿಯ ಜೊತೆಗೆ ಸಂಗೀತವಿರಬೇಕು. ಸಂಗೀತದಿಂದ ಖಿನ್ನತೆ ದೂರವಾಗುತ್ತದೆ ಹಾಗೂ ಜೀವನೋತ್ಸಾಹ ಮೂಡುತ್ತದೆ. ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಆರ್.ಮಂಜುನಾಥ್ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಶಿವಮೊಗ್ಗ ಶಿಕ್ಷಕರ ಗಾಯನ ವೇದಿಕೆಯಿಂದ ಆಯೋಜಿಸಿದ್ದ ಗಾಯನ ಸಮ್ಮಿಲನ 2 ಕಾರ್ಯಕ್ರಮದಲ್ಲಿ ಮಾತನಾಡಿ, ಸುಮಧುರವಾದ ಸಂಗೀತ ಆಲಿಸುವಿಕೆಯು ಮನಸ್ಸನ್ನು ಮುದ ಗೊಳಿಸುವದರ ಜೊತೆಗೆ ಸಂತೋಷಗೊಳಿಸುತ್ತದೆ. ಸಂಗೀತ ಕಲಿಯುವುದರಿಂದ ಏಕಾಗ್ರತೆ ಮತ್ತು ಕ್ರಿಯಾಶೀಲತೆ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಶಿಕ್ಷಕರು ಕಾಲಕಾಲಕ್ಕೆ ಈ ರೀತಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಚಿತ್ರಗೀತೆ, ಭಾವಗೀತೆ ಹಾಗೂ ಜಾನಪದ ಗೀತೆಗಳನ್ನು ಹಾಡಬೇಕು. ಇಂತಹ ಸಾಂಸ್ಕೃತಿಕ ವೇದಿಕೆಗಳು ಅತ್ಯಂತ ಅವಶ್ಯಕ ಎಂದರು.
, ಸಂಗೀತ ಆಸಕ್ತರು ಗುರುಗಳ ಮಾರ್ಗದರ್ಶನದಲ್ಲಿ ನಿರಂತರ ಅಭ್ಯಾಸ ಮಾಡಬೇಕು. ಜೀವನ ಸುಂದರಗೊಳಿಸಲು ಸಂಗೀತ ನೆರವಾಗುತ್ತದೆ ಎಂದು ಹೇಳಿದರು.
Chamber of Commerce Shivamogga ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಸಂಗೀತ ಆಲಿಸುವುದರಿಂದ ಮನಸ್ಸು ಸಂತಸಗೊಂಡು ಒತ್ತಡಮುಕ್ತರಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಸಂಗೀತ ಮನುಷ್ಯನ ಮನಸ್ಸಿಗೆ ಮತ್ತು ತರುವ ದಿವ್ಯ ಔಷದ. ಸಂಗೀತಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಎಂದು ತಿಳಿಸಿದರು.
ಎಸ್.ಆರಮಂಜುನಾಥ್ ಹಾಗೂ ಜಿ.ವಿಜಯಕುಮಾರ್. ಶ್ರೀಮತಿ ಶಶಿರೇಖಾ. ಕುಬೇರ ನಾಯಕ್ ಅವರನ್ನು ಸನ್ಮಾನಿಸಲಾಯಿತು.
ಶಿವಮೊಗ್ಗ ಶಿಕ್ಷಕರ ಗಾಯನ ವೇದಿಕೆ ಸಂಸ್ಥಾಪಕ, ಆಯೋಜಕರಾದ ಶಿಕ್ಷಕ ಬಿ.ಕುಬೇರ್ ನಾಯ್ಕ್ ಸ್ವಾಗತಿಸಿದರು. ಶಿಕ್ಷಣ ಸಂಯೋಜಕಿ ಕೆ.ಕೆ.ಶಶಿರೇಖಾ ವಂದನಾರ್ಪಣೆ ನಡೆಸಿಕೊಟ್ಟರು. ರಾಜ್ಯ, ರಾಷ್ಟ್ರಮಟ್ಟದ ಕ್ರೀಡೆ, ಸಂಗೀತ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಗೌರವಿಸಲಾಯಿತು. ಶಿಕ್ಷಕಿ ಸುಮ ಪರಶುರಾಮ್ ಮತ್ತಿತರರು ಹಾಜರಿದ್ದರು.

ಹೊಸನಗರ ವಿಧಾನ ಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹ: ಹಿರಿಯ ರಾಜಕಾರಣಿ ಬಿ.ಸ್ವಾಮಿರಾವ್ ನೇತೃತ್ವದಲ್ಲಿ ಪಾದಯಾತ್ರೆ

0

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ಹೊಸನಗರದಿಂದ ರಿಪ್ಪನ್ ಪೇಟೆವರೆಗೆ 45 ಕಿ.ಮೀ. ಬೃಹತ್ಪಾದಯಾತ್ರೆ ಆರಂಭಗೊಂಡಿದೆ.

ಹೊಸನಗರದ ಮೂಲ ಗದ್ದೆ ಮಠದ ಅಭಿನವ ಶ್ರೀ ಚನ್ನಬಸವ ಸ್ವಾಮೀಜಿ, ಶಾಸಕ ಬಿ ಸ್ವಾಮಿ ರಾವ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಅವರ ನೇತೃತ್ವದಲ್ಲಿ ಪಾದಯಾತ್ರೆ ಆರಂಭಗೊಂಡಿದೆ.

ಹೊಸನಗರ ತಾಲೂಕು ಅಭಿವೃದ್ಧಿಗಾಗಿ ಕ್ಷೇತ್ರ ಮರು ಸ್ಥಾಪನೆಗೆ ಒತ್ತಾಯಿಸಲಾಯಿತು. ಜನಪ್ರತಿನಿಧಿಗಳು ಸೇರಿದಂತೆ ಸಾವಿರಾರು ಜನರು ಪಾದಯಾತ್ರೆಯಲ್ಲಿ ಪಕ್ಷತೀತವಾಗಿ ಭಾಗಿಯಾಗಿದ್ದಾರೆ.

ಬಹಿರಂಗ ಸಮಾವೇಶದ ಬಳಿಕ ರಿಪ್ಪನ್ ಪೇಟೆಯಲ್ಲಿ ಪಾದಯಾತ್ರೆ ಕೊನೆಗೊಳ್ಳಲಿದೆ.

ಕಾಡು ಹಂದಿ ಕಾಟ ತಪ್ಪಿಸಲು ಇಟ್ಟ ಕಚ್ಚಾ ಬಾಂಬ್ ಸಿಡಿದು ಮಹಿಳೆ ಗಾಯಾಳು

0

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆವಟೂರಿನಲ್ಲಿ
ಕಾಡು ಹಂದಿಗೆ ಅಡಿಕೆಯಲ್ಲಿ ಇಟ್ಟಿದ್ದ ಕಚ್ಚಾ ಬಾಂಬ್ ಸಿಡಿದು ಮಹಿಳೆಗೆ ಗಾಯವಾಗಿರುವ ಘಟನೆ ನಡೆದಿದೆ.

ಹಂದಿ ಶಿಕಾರಿ ಮಾಡಲು ಇಟ್ಟಿದ್ದ ಸಿಡಿಯುವ ಕಚ್ಚಾ ಬಾಂಬ್ ಸಿಡಿದು ಮಹಿಳೆ
ಕೈಯ ಐದು ಬೆರಳುಗಳಿಗೆ ಸಂಪೂರ್ಣ ಹಾನಿ ಉಂಟಾಗಿದೆ.

ತೋಟದಲ್ಲಿ ಹಂದಿ ಶಿಕಾರಿ ಮಾಡಲು ಅಡಿಕೆ ಒಳಗೆ ಇಟ್ಟಿದ್ದ ಕಚ್ಚಾ ಬಾಂಬ್ ಅನ್ನು
ನಾಯಿ ಕಚ್ಚಿಕೊಂಡು ಮನೆಯ ಅಂಗಳಕ್ಕೆ ತಂದಿದೆ.

ಅದನ್ನು ಮುಟ್ಟಿದ ಕಮಲಮ್ಮ ಅವರ ಕೈ ಸಂಪೂರ್ಣ ಸುಟ್ಟು ಗಾಯಗಳಾಗಿವೆ.

ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರಿದೀಪ- ಎಸ್.ಎನ್.ಚನ್ನಬಸಪ್ಪ

0

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ ಬೆಳವಣಿಗೆಗಾಗಿ ಶ್ರಮಿಸಿದ ಶ್ರೇಷ್ಠವ್ಯಕ್ತಿ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಡಾ. ಬಾಬು ಜಗಜೀವನ್ ರಾಮ್ ರವರ 119 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಗಜೀವನ್ ರಾಮ್ ಅವರು ಕೇವಲ ರಾಜಕಾರಣಿಯಾಗಿರದೆ, ದಲಿತರ ಮತ್ತು ಶೋಷಿತರ ಹಕ್ಕುಗಳಿಗಾಗಿ ಶ್ರಮಿಸಿದ ಮಹಾನ್ ನಾಯಕ.
ಬಾಬೂಜಿರವರು ದೇಶಕ್ಕೆ ಪೂರಕವಾದ ನಿಲುವುಗಳನ್ನು ತಂದು ಕೊಟ್ಟ ಶ್ರೇಷ್ಠ ವ್ಯಕ್ತಿ. ಮಲಹೊರುವ ಅನಿಷ್ಟ ಪದ್ಧತಿ ನಿಷೇಧಿಸುವಲ್ಲಿ ಅಗ್ರಗಣ್ಯರಾಗಿ ನಿಂತವರು. ದಲಿತ ಸಮುದಾಯದಿಂದ ಬಂದು ದೇಶದ ಅತ್ಯುನ್ನತ ಸ್ಥಾನಗಳನ್ನು ಅಲಂಕರಿಸಿದ ಇವರು, ಸಮಾನತೆಗಾಗಿ ನಡೆಸಿದ ಹೋರಾಟ ಅವಿಸ್ಮರಣೀಯವಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು ಹಾಗೂ ಅವರ ಆಶಯಗಳನ್ನು ಮುಂದೆ ತೆಗೆದುಕೊಂಡು ಹೋಗಬೇಕು ಎಂದರು.
ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ,ಯಾವುದೇ ವ್ಯಕ್ತಿಯನ್ನು ಸಂಕುಚಿತ ಮನೋಭಾವನೆಯಿಂದ ನೋಡಬಾರದು.‌ ಶೋಷಿತರ ಧ್ವನಿಯಾಗಿದ್ದ ಬಾಬೂಜಿಯವರನ್ನು ನಾವು ಸಮಾಜದ ಶ್ರೇಷ್ಟ ವ್ಯಕ್ತಿಯನ್ನಾಗಿ ಸ್ವೀಕರಿಸಿ ಅವರ ತತ್ವಗಳು, ಕೊಡುಗೆಗಳನ್ನು ಮಾರ್ಗಸೂಚಿಗಳಾಗಿ ನಮ್ಮಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ದೇಶ ಕಟ್ಟುವ ಕಾರ್ಯದಲ್ಲಿ ಒಗ್ಗೂಡಿ ದೇಶವನ್ನು ಮುನ್ನಡೆಸಬೇಕು.
1936 ರಿಂದ 1986 ರವರೆಗೆ 50 ವರ್ಷ ಶಾಸಕಾಂಗದಲ್ಲಿ ಜನರಿಗೋಸ್ಕರ ನಿರಂತರ ಕಾರ್ಯ ನಿರ್ವಹಿಸಿದಂತಹ ಉನ್ನತ ವ್ಯಕ್ತಿ ಬಾಬೂಜಿ. ಕಾರ್ಮಿಕ, ಕೃಷಿ, ರಕ್ಷಣಾ ಸಚಿವರಾಗಿ, ಉಪ ಪ್ರಧಾನಿಯಾಗಿ, ವಿಭಿನ್ನ ಕ್ಷೇತ್ರದಲ್ಲಿ ಕಾನೂನು ಮಾಡಿ ಸಾಮಾಜಿಕ‌ ಕಳಕಳಿ ಮೆರೆದರು ಎಂದು ಸ್ಮರಿಸಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜು ಜೀವಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸತೀಶ್ ಜಿ. ಕೆ. ವಿಶೇಷ ಉಪನ್ಯಾಸ ನೀಡಿ ಮಾತನಾಡಿ, 1935 ರಿಂದ ರಾಜಕೀಯ ರಂಗಕ್ಕೆ ಪ್ರವೇಶ ನೀಡಿ ದೇಶದಲ್ಲಿ ಸಕ್ರಿಯ ರಾಜಕೀಯ ವ್ಯವಸ್ಥೆ ನಿರ್ಮಿಸುವಲ್ಲಿ ಪ್ರಮುಖ ರಾದವರು ಬಾಬುಜಿರವರು. ಅಸ್ಪೃಶ್ಯ ಸಮಾಜದಲ್ಲಿ ಜನಿಸಿದ ಇವರು ತಮ್ಮ ನಿರಂತರ ಶ್ರಮದಿಂದ ಮೇಲ್ಮಟ್ಟಕ್ಕೆ ಬಂದು ಅಸ್ಪೃಶ್ಯತೆಯಿಂದ ಬಳಲುತ್ತಿದ್ದ ಕೋಟ್ಯಂತರ ಜನರ ಬದುಕು ಕಟ್ಟುವಲ್ಲಿ ಯಶಸ್ವಿಯಾದರು. ಕಾರ್ಮಿಕರನ್ನೆಲ್ಲ ಒಗ್ಗೂಡಿಸಿ ಎಲ್ಲರಿಗೂ ಪರಿಚಿತರಾದರು. ತಮ್ಮ ಹಕ್ಕುಗಳ ರಕ್ಷಣೆಗಾಗಿ
Babu Jagjivanram ರೈತರನ್ನು ಮತ್ತು ಕಾರ್ಮಿಕರನ್ನು ಜಾಗೃತ ಗೊಳಿಸುವ ಕಾರ್ಯ ಕೈಗೊಂಡರು. ದಲಿತರ, ಕಾರ್ಮಿಕರ ಮಕ್ಕಳಿಗಾಗಿ ಉಚಿತ ಶಿಕ್ಷಣವನ್ನು ಘೋಷಣೆ ಮಾಡಿದರು. ಕಾರ್ಮಿಕ ಮಂತ್ರಿಯಾಗಿ ಕಾರ್ಮಿಕರಿಗೆ ನ್ಯಾಯ ಒದಗಿಸಲು ಹೋರಾಟ ನಡೆಸಿ, ಅವರಿಗೆ ಕನಿಷ್ಠ ವೇತನ ಕಾಯ್ದೆ ಮತ್ತು ಭವಿಷ್ಯ ನಿಧಿ ವ್ಯವಸ್ಥೆಯನ್ನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ.,ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಲ್ಲೇಶಪ್ಪ.ಡಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್.ಹೆಚ್, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.