Sunday, March 22, 2026
Sunday, March 22, 2026
Home Blog Page 1438

ಕೆನಡಾದಲ್ಲಿ ಭಗವದ್ಗೀತೆಗೆ ರಾಷ್ಟ್ರೀಯ ಗೌರವ

0

ಹಿಂದೂಗಳ ಪವಿತ್ರ ಗ್ರಂಥಕ್ಕೆ ವಿದೇಶದಲ್ಲಿ ಮತ್ತೊಂದು ಮನ್ನಣೆ ಲಭಿಸಿದೆ. ಮಾರಿಷಸ್ ಮತ್ತು ಲಂಡನ್ ಬಳಿಕ ಕೆನಡಾದ ಸಂಸತ್ತಿನಲ್ಲಿ ಪವಿತ್ರ ಗ್ರಂಥ ಭಗವದ್ಗೀತೆಯನ್ನು ಸ್ಥಾಪಿಸಲು ಇಲ್ಲಿನ ಸರ್ಕಾರ ಯೋಜನೆ ರೂಪಿಸಿದೆ ಎಂದು ತಿಳಿದುಬಂದಿದೆ.

ಕೆನಡಾದ ಸಂಸತ್ತಿನ ಕ್ವೀನ್ಸ್ ಪಾರ್ಕ್‌ನಲ್ಲಿ ಗೀತಾ ಗ್ರಂಥವನ್ನು ಸ್ಥಾಪಿಸಲಾಗುವುದು ಎಂದು ಮೂಲಗಳು ಮಾಹಿತಿ ನೀಡಿವೆ.
ಗೀತಾ ಪಾರ್ಕ್ ಭೂಮಿ ಪೂಜೆಯು ಒಂಟಾರಿಯೊದ ಬ್ರಾಂಪ್ಟನ್ ನಗರದಲ್ಲಿ ನಡೆಯಲಿದೆ.

ಭಗವದ್ಗೀತೆಯನ್ನು ವಿದೇಶಿ ನೆಲದಲ್ಲಿ ಸ್ಥಾಪಿಸುತ್ತಿರುವುದು ಇದೇ ಮೊದಲಲ್ಲ. 2019 ರಲ್ಲಿ ಯುಕೆಯ ಲಂಡನ್ ‌ ಸಂಸತ್ತಿನಲ್ಲಿ ಮತ್ತು ಮಾರಿಷಸ್ ಅಧ್ಯಕ್ಷರ ಮನೆಯಲ್ಲಿ ಕೂಡ ಹಿಂದುಗಳ ಪವಿತ್ರ ಗ್ರಂಥವಾದ ಗೀತಾವನ್ನು ಸ್ಥಾಪಿಸಲಾಗಿದೆ.

ಬ್ರಾಂಪ್ಟನ್ ಕೌನ್ಸಿಲ್ ಈ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದೆ ಮತ್ತು ಪಾರ್ಕ್‌ ನಲ್ಲಿ ಕೃಷ್ಣ-ಅರ್ಜುನ ರಥವನ್ನು ಸಹ ಸ್ಥಾಪಿಸಲಾಗುವುದು ಎಂದು ಹೇಳಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಛಾಬ್ರಾ, ಸ್ವಾಮಿ ಜ್ಞಾನಾನಂದರು ಸುಮಾರು ಎರಡು ತಿಂಗಳ ಹಿಂದೆ ಕೆನಡಾಕ್ಕೆ ಹೋಗಿದ್ದರು ಮತ್ತು ಪಾರ್ಕ್‌ಗೆ ಗೀತಾ ಪಾರ್ಕ್ ಎಂದು ಹೆಸರಿಸಲು ಬ್ರಾಂಪ್ಟನ್‌ನ ಮೇಯರ್ ಮತ್ತು ಕೌನ್ಸಿಲರ್‌ಗಳೊಂದಿಗೆ ಚರ್ಚಿಸಿದ್ದಾರೆ ಎಂದು ತಿಳಿಸಿದರು.

ಕುರುಕ್ಷೇತ್ರವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯಲು ಮತ್ತು ಪವಿತ್ರ ಗ್ರಂಥ ಗೀತೆಯ ಉಪದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಕುರುಕ್ಷೇತ್ರ, ಹರಿಯಾಣ ಮಾತ್ರವಲ್ಲದೆ ಮಾರಿಷಸ್, ಲಂಡನ್, ಕೆನಡಾ ಮುಂತಾದ ದೇಶಗಳಲ್ಲಿ ಅಂತರಾಷ್ಟ್ರೀಯ ಗೀತಾ ಉತ್ಸವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಪ್ರಪಂಚದಾದ್ಯಂತ ಪವಿತ್ರ ಗ್ರಂಥ, ಭಗವದ್ಗೀತೆಯ ಅನುಕರಣೆ ಹೆಚ್ಚುತ್ತಿದ್ದು ಅದರ ಮೌಲ್ಯ ಕೂಡ ಹೆಚ್ಚುತ್ತಿದೆ. ಮಹಾಭಾರತ ಯುದ್ಧದಲ್ಲಿ ಅರ್ಜುನನು ತನ್ನ ಬಂಧುಗಳನ್ನು ಎದುರಿಗೆ ನೋಡಿ ಹತಾಶನಾಗುತ್ತಿದ್ದಾಗ, ಶ್ರೀಕೃಷ್ಣನು ಆ ಸಮಯದಲ್ಲಿ ಅವನಿಗೆ ಉಪದೇಶ ಮಾಡಿದ್ದನು. ಈ ಬೋಧನೆಯನ್ನೇ ಭಗವದ್ಗೀತೆ ಎಂದು ಕರೆಯಲಾಗುತ್ತದೆ.

ಮಹಾಭಾರತ ಯುದ್ದವು ಹರಿಯಾಣದ ಕುರುಕ್ಷೇತ್ರದ ನೆಲದಲ್ಲಿ 18 ದಿನಗಳ ಕಾಲ ನಡೆಯಿತು.

ಕಿಸಾನ್ ಸಮ್ಮಾನ್ ನಿಧಿ ಮಾಹಿತಿ

0

ಕೇಂದ್ರ ಸರ್ಕಾರ ರೈತರಿಗಾಗಿ ಹಲವು ಯೋಜನೆಗಳನ್ನ ನಡೆಸುತ್ತಿದೆ. ರೈತರನ್ನ ಬೆಂಬಲಿಸಲು ಕೇಂದ್ರವು ವಿವಿಧ ಹೂಡಿಕೆ ಯೋಜನೆಗಳ ಮೂಲಕ ಉತ್ತಮ ಆದಾಯವನ್ನ ಗಳಿಸುತ್ತಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಮೋದಿ ಸರ್ಕಾರವು ರೈತರಿಗಾಗಿ ಪರಿಚಯಿಸಿದ ಯೋಜನೆಗಳಲ್ಲಿ ಒಂದಾಗಿದೆ.

ಈ ಯೋಜನೆಯ ಮೂಲಕ ರೈತರು ವರ್ಷಕ್ಕೆ 6000 ರೂಪಾಯಿ ಮೂರು ಕಂತುಗಳಲ್ಲಿ ಪಡೆಯುತ್ತಾರೆ. ಇದುವರೆಗೆ ರೈತರಿಗೆ 11ನೇ ಕಂತು ಬಂದಿದ್ದು, ಈಗ 12ನೇ ಕಂತು ಬರುತ್ತಿದೆ. ಈ ಹಣವೂ ಈ ತಿಂಗಳ ಅಂತ್ಯದೊಳಗೆ ರೈತರ ಖಾತೆಗೆ ಜಮೆಯಾಗುವ ಸಾಧ್ಯತೆ ಇದೆ. ಈ ಯೋಜನೆಯ ಭಾಗವಾಗಿ, ಕೇಂದ್ರ ಸರ್ಕಾರವು ರೈತರಿಗೆ ಕೆಲವು ವಿಶೇಷ ಸಂಖ್ಯೆಗಳನ್ನು ನಿಗದಿಪಡಿಸಿದೆ.
ಈ ಸಂಖ್ಯೆಗಳ ಮೂಲಕ ರೈತರು ಸಂಪೂರ್ಣ ಮಾಹಿತಿ ಪಡೆಯಬಹುದು.

ಅಗ್ರಿಕಲ್ಚರ್ ಇಂಡಿಯಾ ತನ್ನ ಅಧಿಕೃತ ಟ್ವೀಟ್‌ನಲ್ಲಿ ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿದ ದೇಶದ ರೈತರಿಗೆ ಅರ್ಜಿಯ ಸ್ಥಿತಿಯನ್ನು ತಿಳಿಯಲು ಸಂಖ್ಯೆಯನ್ನ ಬಿಡುಗಡೆಗೊಳಿಸಿದೆ. ಅರ್ಜಿ ಸಲ್ಲಿಸಿದ ರೈತರು 155261 ಸಂಖ್ಯೆಗೆ ಕರೆ ಮಾಡಿ ಅರ್ಜಿ ಸ್ಥಿತಿ ಮತ್ತು ಕಂತು ನವೀಕರಣದ ಬಗ್ಗೆ ತಿಳಿದುಕೊಳ್ಳಬಹುದು.

ವೆಬ್‌ಸೈಟ್ ಮೂಲಕ ನಿಮ್ಮ ಕಂತು ಸ್ಥಿತಿಯನ್ನ ಸಹ ನೀವು ಪರಿಶೀಲಿಸಬಹುದು. ನೀವು ಮೊದಲು ಅಧಿಕೃತ ವೆಬ್‌ಸೈಟ್‌ಗೆ ಹೋಗಬೇಕು. ನಂತರ ಬಲಭಾಗದಲ್ಲಿರುವ ‘ಫಾರ್ಮರ್ಸ್ ಕಾರ್ನರ್’ ಆಯ್ಕೆಯನ್ನ ಆರಿಸಿ. ನಂತರ ಬೆನಿಫಿಶಿಯರಿ ಸ್ಟೇಟಸ್ ಮೇಲೆ . ನಂತರ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಆಧಾರ್ ಸಂಖ್ಯೆ ಅಥವಾ ಬ್ಯಾಂಕ್ ಖಾತೆಯನ್ನ ಆಯ್ಕೆ ಮಾಡಬೇಕು. ನಂತರ ನಿಮ್ಮ ಖಾತೆಗೆ ಹಣ ಬರುತ್ತದೆಯೇ.? ಇಲ್ಲವೇ.? ಅನ್ನುವುದನ್ನು ಪರಿಶೀಲಿಸಬಹುದು.

ಬೆಂಗಳೂರಿನಲ್ಲಿ 186 ಮಂದಿಗೆ ಕೊರೋನ ದೃಢ ಪಟ್ಟಿದೆ

0

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 344 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,59,218ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು 3ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 40,225ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 186 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,689,80ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 522 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4015187ಕ್ಕೆ ಏರಿಕೆಯಾಗಿದೆ. ಇನ್ನು 3764 ಸಕ್ರಿಯ ಪ್ರಕರಣಗಳಿವೆ.

ದಸರಾ ಹಬ್ಬಕ್ಕೆ ಪೂರಕವಾಗಿ ರಜೆ ವ್ಯವಸ್ಥೆಮಾಡಲು ಸೂಚನೆ- ಬಿ.ಸಿ.ನಾಗೇಶ್

0

ಸೆ.26ರಿಂದ ನವರಾತ್ರಿ ಹಬ್ಬ ಆರಂಭವಾಗುತ್ತಿದ್ದು., ಹಬ್ಬಕ್ಕೆ ಪೂರಕವಾಗುವಂತೆ ದಸರಾ ರಜೆ ಬದಲಾವಣೆ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಸ್ಥಳೀಯ ಸನ್ನಿವೇಶಗಳಿಗೆ ತಕ್ಕಂತೆ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನಿಗದಿಪಡಿಸಿದ ವೇಳಾಪಟ್ಟಿಯಲ್ಲಿ ಮಾರ್ಪಾಡು ಅಗತ್ಯವಿದ್ದಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಬದಲಾವಣೆಯನ್ನು ಮಾಡಿಕೊಳ್ಳಲು ಈಗಾಗಲೇ ಅನುಮತಿ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರೆ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗವಂತೆ ಸೆ.26ರಿಂದ ಅ.10ರವರೆಗೆ ನೀಡುವಂತೆ ಕೋರಿಕೆ ಬಂದಿತ್ತು. ಹೀಗಾಗಿ ಪರಿಶೀಲನೆ ಮಾಡಿ ಶೈಕ್ಷಣಿಕ ಚಟುವಟಿಕೆಯನ್ನು ಸರಿದೂಗಿಸುವ ಹಾಗೂ ಅಕ್ಟೋಬರ್ 2 ರಂದು ಗಾಂಧಿ ಜಯಂತಿಯನ್ನು ಆಚರಿಸುವ ಷರತ್ತಿನ ಮೇರೆಗೆ ರಜೆಯನ್ನು ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ತಿಳಿಸಿದ್ದಾರೆ.

ಇನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಶಾಸಕ ವೇದವ್ಯಾಸ್‌ ಕಾಮತ್‌ ಅವರು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಅವರಿಗೆ ನೀಡಿದ ಮನವಿಯಂತೆ ದ.ಕ. ಜಿಲ್ಲೆಯಲ್ಲಿ ಸೆ.26ರಿಂದ ಅ.10ರವರೆಗೆ ದಸರಾ ರಜೆ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಕಾಮತ್‌, ಸೆ.26ರಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತಿದ್ದು ಶಾಲಾ ಮಕ್ಕಳ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಸಚಿವರಿಗೆ ಮನವಿ ಮಾಡಿದ್ದೆ. ಮಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಯುವ ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನ ಸೇರಿದಂತೆ ನಗರದೆಲ್ಲೆಡೆ ಅತ್ಯಂತ ಸಂಭ್ರಮದಲ್ಲಿ ದಸರಾ ಹಬ್ಬ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಅ.2ರಂದು ಗಾಂಧಿ ಜಯಂತಿ ಆಚರಿಸುವ ಷರತ್ತಿನೊಂದಿಗೆ ರಜೆ ಘೋಷಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕೆಲವೇ ವರ್ಷಗಳಲ್ಲಿ ಭಾರತದ ಆರ್ಥಿಕತೆಗೆ ವಿಶ್ವದಲ್ಲೇ 3 ನೇ ಬೃಹತ್ ಸ್ಥಾನ ಲಭಿಸಲಿದೆ-ಶಾ

0

ಇನ್ನು ಕೆಲವೇ ವರ್ಷಗಳಲ್ಲಿ ಭಾರತವು ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಮತ್ತು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸಹಕಾರಿ ಕ್ಷೇತ್ರವೂ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದಾರೆ.

ಸೆಪ್ಟೆಂಬರ್ 12-15ರ ಅವಧಿಯಲ್ಲಿ ಇಲ್ಲಿನ ಇಂಡಿಯಾ ಎಕ್ಸ್‌ಪೋ ಸೆಂಟರ್ ಮತ್ತು ಮಾರ್ಟ್‌ನಲ್ಲಿ ಆಯೋಜಿಸಲಾಗಿದ್ದ ಇಂಟರ್ನ್ಯಾಷನಲ್ ಡೈರಿ ಫೆಡರೇಶನ್ ವರ್ಲ್ಡ್ ಡೈರಿ ಶೃಂಗಸಭೆ 2022 ರಲ್ಲಿ ಮಾತನಾಡಿದ ಶಾ, 2024 ರ ಸಾರ್ವತ್ರಿಕ ಚುನಾವಣೆಗೂ ಮೊದಲು ಗ್ರಾಮ ಮಟ್ಟದಲ್ಲಿ 2 ಲಕ್ಷ ಹೊಸ ಡೈರಿ ಸಹಕಾರಿ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಸಹಾಯ ಮಾಡುತ್ತದೆ ಎಂದಿದ್ದಾರೆ.

ಕಳೆದ 8 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಭಾರತವು 11 ನೇ ಆರ್ಥಿಕತೆಯಿಂದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಶೀಘ್ರದಲ್ಲೇ ನಾವು 3ನೇ ಅತಿದೊಡ್ಡ ಆರ್ಥಿಕತೆಯಾಗಲಿದ್ದೇವೆ. ಇದರಲ್ಲಿ ಸಹಕಾರಿ ಕ್ಷೇತ್ರವು ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದಿದ್ದಾರೆ.

1974 ರಿಂದ ಪ್ರಥಮ ಬಾರಿಗೆ ಭಾರತದಲ್ಲಿ ಅಂತರರಾಷ್ಟ್ರೀಯ ಡೈರಿ ಫೆಡರೇಶನ್‌ನ ಡೈರಿ ಶೃಂಗಸಭೆಯನ್ನು ಆಯೋಜಿಸಲಾಗುತ್ತಿದೆ. ಇಂದು ಲಕ್ಷಾಂತರ ಸಣ್ಣ ಮತ್ತು ಅತಿ ಸಣ್ಣ ಡೈರಿ ರೈತರ ಕೊಡುಗೆಯೊಂದಿಗೆ ಭಾರತವು ವಿಶ್ವದ ಅತಿದೊಡ್ಡ ಹಾಲು ಉತ್ಪಾದಕರಾಗಿದೆ ಎಂದು ಶಾ ಹೇಳಿದ್ದಾರೆ.

ದೇಶದಲ್ಲಿ 34 ಕ್ಯಾನ್ಸರ್ ಚಿಕಿತ್ಸೆ ಔಷಧಿಗಳ ದರ ಇಳಿಕೆ

0

ಕೇಂದ್ರದಿಂದ 34 ಅಗತ್ಯ ಔಷಧಗಳ ಬೆಲೆ ಇಳಿಕೆ ಮಾಡಲಾಗಿದೆ. ಕ್ಯಾನ್ಸರ್ ಚಿಕಿತ್ಸೆ ಹಾಗೂ ವಿವಿಧ ಸೋಂಕು ನಿವಾರಣೆಗೆ ಬಳಕೆ ಮಾಡುವ ಔಷಧ ಸೇರಿದಂತೆ ಹೊಸದಾಗಿ 34 ಔಷಧಗಳನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಅತ್ಯಗತ್ಯ ಔಷಧಗಳ ಪಟ್ಟಿಗೆ ಸೇರ್ಪಡೆ ಮಾಡಿದ್ದು, ಈ ಔಷಧಗಳ ದರ ಇಳಿಕೆಯಾಗಲಿದೆ.

ಪಟ್ಟಿಯಿಂದ 26 ಔಷಧಗಳನ್ನು ಕೈ ಬಿಡಲಾಗಿದೆ. ದರ ನಿಯಂತ್ರಣ ಪಟ್ಟಿಯಲ್ಲಿ 384 ಔಷಧಗಳು ಇವೆ. ಸುಕ್ರಾಲ್ ಫೇಟ್, ವೈಟ್ ಪೆಟ್ರೋಲಿಯಂ, ಆಥೆನೋಲೋಲ್, ಮಿಥೈಲ್ ಡೋಪ ಸೇರಿದಂತೆ 26 ಔಷಧಗಳನ್ನು ದರ ನಿಯಂತ್ರಣ ಪಟ್ಟಿಯಿಂದ ಕೈ ಬಿಡಲಾಗಿದೆ.

ಐವರ್ ಮೆಸಿಟಿನ್, ಮುಪಿರೋಸಿನ್, ಇನ್ಸುಲಿನ್ ಗ್ಲಾರ್ಗಿನ್, ಆಂಟಿ ಬಯೋಟೆಕ್ಸ್ ಗಳು, ಲಸಿಕೆಗಳು ಕ್ಯಾನ್ಸರ್ ಗೆ ನೀಡುವ ಔಷಧ ಮತ್ತು ಇತರೆ ಕೆಲವು ಮಹತ್ವದ ಔಷಧಗಳು ಕಡಿಮೆ ದರದಲ್ಲಿ ಸಿಗಲಿದೆ.

ಕ್ಯಾನ್ಸರ್ ವಿರುದ್ಧ ಅಮೆರಿಕ ಹೊಸ ಯೋಜನೆ- ಬೈಡೆನ್

0

ಅಮೆರಿಕದಲ್ಲಿ ಕ್ಯಾನ್ಸರ್‌ ಸಂಬಂಧಿ ಮರಣ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಮಹತ್ವಾಕಾಂಕ್ಷೆಯ ಯೋಜನೆಯನ್ನು ಅಧ್ಯಕ್ಷ ಜೋ ಬೈಡನ್‌ ಅವರು ಘೋಷಿಸಿದರು.

ಎಆರ್‌ಪಿಎ-ಎಚ್‌ ನಿರ್ಮಿಸುವುದಾಗಿ ಬೋಸ್ಟನ್‌ನಲ್ಲಿ ನಡೆದ ಸಮಾರಂಭದಲ್ಲಿ ಅವರು ಹೇಳಿದರು.

ಕ್ಯಾನ್ಸರ್‌ ರೋಗಿಗಳ ಜೀವಿತಾವಧಿ ಹೆಚ್ಚಿಸುವಂಥ ಮತ್ತು ರೋಗಿಗಳ ಪ್ರಾಣ ಉಳಿಸುವಂಥ ಹಲವಾರು ವೈದ್ಯಕೀಯ ಕ್ರಮಗಳನ್ನು ಕೈಗೊಂಡ ಬಳಿಕವೂ ಅಮೆರಿಕದಲ್ಲಿ ಜನರು ಸಾವಿಗೀಡಾಗುವುದಕ್ಕೆ ಕ್ಯಾನ್ಸರ್‌ ಎರಡನೇ ಕಾರಣವಾಗಿದೆ. ಹಲವಾರು ಕ್ಯಾನ್ಸರ್‌ ರೋಗಿಗಳು ಮತ್ತು ಅವರ ಕುಟುಂಬಕ್ಕೆ ಭರವಸೆ ಬದಲು ಆತಂಕವಿದೆ ಎಂದು ಬೈಡನ್‌ ಹೇಳಿದರು.

ಕ್ಯಾನ್ಸರ್‌, ಮಧುಮೇಹ ಹಾಗೂ ಇತರ ಕಾಯಿಲೆಗಳು ವ್ಯಕ್ತಿಗೆ ಬರುವುದಕ್ಕೂ ಮೊದಲೇ ಅದನ್ನು ಪತ್ತೆಮಾಡಿ, ಅದನ್ನು ತಡೆಯುವ ಮತ್ತು ಚಿಕಿತ್ಸೆ ನೀಡುವ ಉದ್ದೇಶವನ್ನು ಎಆರ್‌ಪಿಎ-ಎಚ್‌ ಹೊಂದಿದೆ ಎಂದು ಅವರು ಹೇಳಿದರು. ‌

ಪಾಕ್ ಪ್ರವಾಹ ₹2ಲಕ್ಷ ಕೋಟಿ ನಷ್ಟ ವಿಶ್ವಸಂಸ್ಥೆಯ ಪ್ರಾಥಮಿಕ ಅಂದಾಜು

0

ಈ ಬಾರಿ ಪಾಕಿಸ್ತಾನದಲ್ಲಿ ಭಾರಿ ಪ್ರವಾಹದಿಂದಾಗಿ ಸುಮಾರು 3 ಲಕ್ಷ ಕೋಟಿ ರೂಪಾಯಿಯಷ್ಟು ಆರ್ಥಿಕ ನಷ್ಟವುಂಟಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.

ಕಳೆದ ವಾರ ಪಾಕಿಸ್ತಾನದ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರು ಸುಮಾರು 2 ಲಕ್ಷ ಕೋಟಿ ರೂಪಾಯಿಯಷ್ಟು ಹಾನಿ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.

ಆದರೆ, ಅವರು ಅಂದಾಜಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆರ್ಥಿಕ ನಷ್ಟವುಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರವಾಹದಲ್ಲುಂಟಾದ ನಷ್ಟದ ಅಂದಾಜು ಕುರಿತು ಚರ್ಚಿಸಲು ರಾಷ್ಟ್ರೀಯ ಪ್ರವಾಹ ಪ್ರತಿಕ್ರಿಯೆ ಕೇಂದ್ರ ಸಭೆಯಲ್ಲಿ ಪ್ರವಾಹದಿಂದಾಗಿ ಪಾಕಿಸ್ತಾನ ಆರ್ಥಿಕ ಪರಿಸ್ಥಿತಿ ಮೇಲೆ ಸುಮಾರು 3 ಲಕ್ಷ ಕೋಟಿ ರೂಪಾಯಿಯಷ್ಟು ನಷ್ಟವುಂಟಾಗಿದೆ ಎಂದು ಹಣಕಾಸು ಸಚಿವಾಲಯವು ತಿಳಿಸಿದೆ.

ಇತ್ತ, ಮನೆ ಮಠ ಕಳೆದು ಕೊಂಡು ಲಕ್ಷಾಂತರ ಜನರು ಬೀದಿ ಪಾಲಾಗಿದ್ದಾರೆ. ತುತ್ತು ಅನ್ನಕ್ಕೂ ಜನ ಪರದಾಡುತ್ತಿದ್ದಾರೆ. ಮಕ್ಕಳ ಪಾಡ ಹೇಳತೀರದಾಗಿದೆ. ಸಾವಿರಾರ ಜನ ಬೇರೆಡೆ ವಲಸೆ ಹೋಗುತ್ತಿದ್ದಾರೆ.

ರಾಜ್ಯದಲ್ಲಿ 3484 ಪಿಸಿ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭ-ಜ್ಞಾನೇಂದ್ರ

0

ಕರ್ನಾಟಕ ಸಶಸ್ತ್ರ ಪಡೆಗಳಲ್ಲಿ 3,484 ಹುದ್ದೆಗಳನ್ನು ಭರ್ತಿ ಮಾಡಲು ಕಾನ್ ಸ್ಟೆಬಲ್ ಗಳನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ನಡುವೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 79 ಹುದ್ದೆಗಳನ್ನು ಪುರುಷ ತೃತೀಯ ಲಿಂಗಿಗಳಿಗೆ ಮೀಸಲಿಡಲಾಗಿದೆ ಅಂಥ ಸಚಿವರ ತಿಳಿಸಿದರು.

ಖಾಲಿ ಇರುವಂತ 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಪೊಲೀಸ್ ಇಲಾಖೆಯಿಂದಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ( ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯ ಲಿಂಗ ) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

ಅರ್ಹ ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ನೇಮಕಾತಿ ಜಾಲತಾಣ https://ksp.karnataka.gov.in/ ಅಥವಾ https://ksp-recruitment.in/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ
ಎಸ್‌ಎಸ್ ಎಲ್ ಸಿ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಇದಲ್ಲದೇ ಸಿಬಿಎಸ್ ಇ ಮತ್ತು ಐ ಸಿ ಎಸ್ ಇ ಮಂಡಳಿಯು ನಡೆಸುವ 10ನೇ ಕ್ಲಾಸ್ ಪರೀಕ್ಷೆ, ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 10 ಪರೀಕ್ಷೆ, ನ್ಯಾಷನಲ್ ಇನ್ಸ್ ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್ ಕೆ ಒಎಸ್ ಪಾಸ್ ಆಗಿದ್ದವರು ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ – ರೂ.23,500 ರಿಂದ ರೂ.47,650

ಆಯ್ಕೆಯ ವಿಧಾನ – ಲಿಖಿಂತ ಪರೀಕ್ಷೆಯಲ್ಲಿ ತೇರ್ಗಡೆಯಾದವರಲ್ಲಿ 1:5 ಅನುಪಾತದಲ್ಲಿ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ತೇರ್ಗಡೆ ನಡೆಸಲಾಗುತ್ತದೆ. ಈ ಎರಡು ಪರೀಕ್ಷೆಯಲ್ಲಿ ಪಾಸ್ ಆದವರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ವಯೋಮಿತಿ

  • ಪುರುಷ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
  • ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 27 ವರ್ಷ
  • ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷ
  • ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು

ಹುದ್ದೆಗಳ ವಿವರ

  • ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ( ಸಾಮಾನ್ಯ ಪುರುಷ ) ( ಸಿಎಆರ್ / ಡಿಎಆರ್) – 2,996
  • ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ( ಪುರುಷ ತೃತೀಯ ಲಿಂಗ) ( ಸಿಎಆರ್/ಡಿಎಆರ್) – 68 ಸೇರಿದಂತೆ ಒಟ್ಟು 3064 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.400 ಆಗಿದ್ದರೇ, ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.200 ಆಗಿದೆ.

ಪ್ರಮುಖ ದಿನಾಂಕಗಳು
ಈ ಹುದ್ದೆಗಳಿಗೆ ದಿನಾಂಕ 19-09-2022ರಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-10-2022 ಆಗಿರುತ್ತದೆ. ಆನ್ ಲೈನ್ ಮೂಲಕ, ಅಧಿಕೃತ ಬ್ಯಾಂಕ್ ಚಲನ್ ಗಳ ಮೂಲಕ, ಸ್ಥಳೀಯ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 03-11-2022 ಆಗಿದೆ. ಹೆಚ್ಚಿನ ಮಾಹಿತಿಗಾಗಿ https://ksp.karnataka.gov.in/ ಅಥವಾ https://ksp-recruitment.in/ ಜಾಲತಾಣಕ್ಕೆ ಭೇಟಿ ನೀಡಿ ಪಡೆಯಬಹುದಾಗಿದೆ.

ಯುಪಿಎಸ್ ಸಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

0

ಕೇಂದ್ರ ಲೋಕ ಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಗೃಹ ವ್ಯವಹಾರಗಳು ಹಾಗೂ ಇತರ ಸಚಿವಾಲಯಗಳಲ್ಲಿ ಜಾರಿ ನಿರ್ದೇಶಕ ಅಧಿಕಾರಿ ಸೈಂಟಿಸ್ಟ್​ ಬಿ ಹುದ್ದೆಗೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಒಟ್ಟು 54 ಹುದ್ದೆಗಳ ಭರ್ತಿಗೆ ಮುಂದಾಗಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 29 ಆಗಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 12 ಸೆಪ್ಟೆಂಬರ್​​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಸೆಪ್ಟೆಂಬರ್​​ 2022

ಅಧಿಕೃತ ವೆಬ್‌ಸೈಟ್: upsc.gov.in

ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ಬಳಿಕ ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ…