Saturday, March 21, 2026
Saturday, March 21, 2026
Home Blog Page 1462

ರಾಜ್ಯ ಇಂಧನ ಕ್ಷೇತ್ರದಲ್ಲಿ ಪ್ರಗತಿಹೊಂದುತ್ತಿದೆ- ಬೊಮ್ಮಾಯಿ

0

ದೇಶದ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸಿರುವ ಇಂಧನ ಕ್ಷೇತ್ರದಲ್ಲಿ ನೂತನ ತಂತ್ರಜ್ಞಾನಗಳ ಬೆಳವಣಿಗೆ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ ಇಂಧನ ಕ್ಷೇತ್ರದಲ್ಲಿನ ಉದ್ಯಮಗಳನ್ನು ಉತ್ತೇಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ದೊಡ್ಡಬಳ್ಳಾಪುರದ ಶೆಟ್ಟಿಹಳ್ಳಿಯಲ್ಲಿ ಹಿಟಾಚಿ ಎನರ್ಜಿ ಪವರ್‌ ಕ್ವಾಲಿಟಿ ಉತ್ಪನ್ನಗಳ ತಯಾರಿಕ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಇಂಧನ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಇಂಧನ ಕ್ಷೇತ್ರದ ಸವಾಲು ಎದುರಿಸಿ, ಒಂದು ದೇಶ ಒಂದು ಗ್ರಿಡ್‌ ಎಂಬ ಪ್ರಧಾನಿ ಆಶಯ ಸಾಕಾರ ಮಾಡಬೇಕಿದೆ.
ಕೆಲವು ವರ್ಷಗಳ ಹಿಂದೆ ಗ್ರಿಡ್‌ ವ್ಯವಸ್ಥೆ ಸರಿಯಿಲ್ಲದೆ, ಉತ್ತರ ಭಾರತದಿಂದ ದಕ್ಷಿಣ ಭಾರತಕ್ಕೆ ವಿದ್ಯುತ್‌ ಹರಿಸುವುದು ಕಷ್ಟವಾಗಿತ್ತು. ಆದರೆ, ಈಗ ಪ್ರಧಾನಿಯವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪವರ್‌ ಬಳಕೆ ಮಾಡುವ ಕುರಿತಾದ ದೂರದೃಷ್ಟಿ ಹೊಂದಿದ್ದು, ಇದಕ್ಕೆ ಪೂರಕ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯದ ಜಲಾಶಯಗಳ ನೀರಿನ ಮಟ್ಟದ ಮಾಹಿತಿ

0

ಈ ಬಾರಿ ರಾಜ್ಯದಲ್ಲಿ ಮಳೆ ಸಾಕಷ್ಟು ಸುರಿದಿದ್ದು ಪ್ರಮುಖ ಜಲಾಶಯಗಳಲ್ಲಿ ನೀರು ಸಮೃದ್ಧವಾಗಿ ಸಂಗ್ರಹಣೆಗೊಂಡಿದೆ.

ಅಲ್ಲದೆ, ಕೆಲ ಜಲಾಶಯಗಳಿಂದ ಹೆಚ್ಚುವರಿಯಾದ ನೀರನ್ನು ಈಗ ಹೊರಬಿಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಮಳೆಯ ಆರ್ಭಟ ಸಾಕಷ್ಟಿದ್ದ ಕಾರಣ ಕೆಲ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿತ್ತು. ಆದರೆ, ಈಗ ಎಲ್ಲೆಡೆ ಮಳೆ ಕಡಿಮೆಯಾಗಿದ್ದು ಅದರಂತೆ ಒಳಹರಿವಿನ ಪ್ರಮಾಣವೂ ಕಡಿಮೆಯಾಗಿದೆ. ಆದಾಗ್ಯೂ ಜಲಾಶಯಗಳು ಭರ್ತಿಯಾಗಿರುವುದು ಉತ್ತಮ ವಿಷಯವಾಗಿದ್ದು ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಮುಂಬರುವ ದಿನಗಳಲ್ಲಿ ಉತ್ತಮ ಪ್ರೋತ್ಸಾಹ ದೊರೆಯಲಿದೆ.

ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ.

ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್‌ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿಯಾಗಿವೆ.

ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ.

ತುಂಗಭದ್ರಾ ಜಲಾಶಯ – Tungabhadra Dam
ಗರಿಷ್ಠ ನೀರಿನ ಮಟ್ಟ – 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ – 105.47 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು – 18,931 ಕ್ಯೂಸೆಕ್ಸ್
ಇಂದಿನ ಹೊರಹರಿವು – 22,649 ಕ್ಯೂಸೆಕ್ಸ್

ಕೆಆರ್‌ಎಸ್ ಜಲಾಶಯ – KRS Dam
ಗರಿಷ್ಠ ಮಟ್ಟ – 124.80 ಅಡಿ
ಒಟ್ಟು ಸಾಮರ್ಥ್ಯ – 49.45 ಟಿಎಂಸಿ
ಇಂದಿನ ನೀರಿನ ಮಟ್ಟ – 48.92 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 43.27 ಟಿಎಂಸಿ
ಇಂದಿನ ಒಳಹರಿವು -7,478 ಕ್ಯೂಸೆಕ್ಸ್
ಇಂದಿನ ಹೊರಹರಿವು -5,022 ಕ್ಯೂಸೆಕ್ಸ್

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ – 2,284 ಅಡಿ
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ – 19.16 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 18.98 ಟಿಎಂಸಿ
ಇಂದಿನ ಒಳಹರಿವು – 4,621 ಕ್ಯೂಸೆಕ್ಸ್
ಇಂದಿನ ಹೊರಹರಿವು – 4,350 ಕ್ಯೂಸೆಕ್ಸ್

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ – 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.86 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 70.28 ಟಿಎಂಸಿ
ಇಂದಿನ ಒಳಹರಿವು- 9,837 ಕ್ಯೂಸೆಕ್ಸ್
ಇಂದಿನ ಹೊರಹರಿವು – 5,046 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ – 1,704 ಅಡಿ
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 121.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-123.08 ಟಿಎಂಸಿ
ಇಂದಿನ ಒಳಹರಿವು- 73,819 ಕ್ಯೂಸೆಕ್ಸ್
ಇಂದಿನ ಹೊರಹರಿವು – 69,048 ಕ್ಯೂಸೆಕ್ಸ್

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ – 662.91 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು – 6,446 ಕ್ಯೂಸೆಕ್ಸ್
ಇಂದಿನ ಹೊರಹರಿವು – 4,996 ಕ್ಯೂಸೆಕ್ಸ್

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ – 2,922 ಅಡಿ
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 37.07 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 34.26 ಟಿಎಂಸಿ
ಇಂದಿನ ಒಳಹರಿವು – 7,187 ಕ್ಯೂಸೆಕ್ಸ್
ಇಂದಿನ ಹೊರಹರಿವು – 6,340 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ – 35.66 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 35.66 ಟಿಎಂಸಿ
ಇಂದಿನ ಒಳಹರಿವು – 4,107 ಕ್ಯೂಸೆಕ್ಸ್
ಇಂದಿನ ಹೊರಹರಿವು – 944 ಕ್ಯೂಸೆಕ್ಸ್

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ – 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 20.55 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 16.67 ಟಿಎಂಸಿ
ಇಂದಿನ ಒಳಹರಿವು – 2,523 ಕ್ಯೂಸೆಕ್ಸ್
ಇಂದಿನ ಹೊರಹರಿವು – 0 ಕ್ಯೂಸೆಕ್ಸ್

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ – 871.38 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.19 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 8.08 ಟಿಎಂಸಿ
ಇಂದಿನ ಒಳಹರಿವು – 4,918 ಕ್ಯೂಸೆಕ್ಸ್
ಇಂದಿನ ಹೊರಹರಿವು – 3,707 ಕ್ಯೂಸೆಕ್ಸ್

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ – 554.44 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 134.61 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 131.3 ಟಿಎಂಸಿ
ಇಂದಿನ ಒಳಹರಿವು – 18,781 ಕ್ಯೂಸೆಕ್ಸ್
ಇಂದಿನ ಹೊರಹರಿವು – 4,694 ಕ್ಯೂಸೆಕ್ಸ್

ನಾರಾಯಣಪುರ ಜಲಾಶಯ- Narayanapura Dam
ಗರಿಷ್ಠ ಮಟ್ಟ – 492.25 ಮೀಟರ್
ಒಟ್ಟು ಸಾಮರ್ಥ್ಯ – 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 32.09 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 31.68 ಟಿಎಂಸಿ
ಇಂದಿನ ಒಳಹರಿವು – 73,819 ಕ್ಯೂಸೆಕ್ಸ್
ಇಂದಿನ ಹೊರಹರಿವು – 69,048 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ – 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 89.18 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 108.3 ಟಿಎಂಸಿ
ಇಂದಿನ ಒಳಹರಿವು – 9,715 ಕ್ಯೂಸೆಕ್ಸ್
ಇಂದಿನ ಹೊರಹರಿವು – 253 ಕ್ಯೂಸೆಕ್ಸ್

ಶಾರ್ಟ್ ರೇಂಜ್ ಸರ್ಫೇಸ್ ಟು ಏರ್ ಮಿಸೈಲ್ ಕ್ಷಿಪಣಿ ಯಶಸ್ವಿ ಉಡಾವಣೆ

0

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಮತ್ತು ಭಾರತೀಯ ನೌಕಾಪಡೆ ಒಡಿಶಾದ ಕರಾವಳಿಯ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ ನಿಂದ ಲಂಬವಾದ ಉಡಾವಣೆ ಶಾರ್ಟ್ ರೇಂಜ್ ಸರ್ಫೇಸ್-ಟು-ಏರ್ ಮಿಸೈಲ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.

ಲಂಬ ಉಡಾವಣಾ ಸಾಮರ್ಥ್ಯದ ಪ್ರಾತ್ಯಕ್ಷಿಕೆಗಾಗಿ ಹೆಚ್ಚಿನ ವೇಗದ ಮಾನವರಹಿತ ವೈಮಾನಿಕ ಗುರಿಯ ವಿರುದ್ಧ ಭಾರತೀಯ ನೌಕಾ ಹಡಗಿನಿಂದ ಹಾರಾಟ ಪರೀಕ್ಷೆಯನ್ನ ನಡೆಸಲಾಯಿತು. ಸ್ಥಳೀಯ ರೇಡಿಯೋ ಫ್ರೀಕ್ವೆನ್ಸಿ ಅನ್ವೇಷಕನೊಂದಿಗೆ ಸಜ್ಜುಗೊಳಿಸಲಾದ ಕ್ಷಿಪಣಿಗಳು ಹೆಚ್ಚಿನ ನಿಖರತೆಯೊಂದಿಗೆ ಗುರಿಯನ್ನ ತಡೆದವು.

ವರ್ಟಿಕಲ್ ಲಾಂಚ್ ಶಾರ್ಟ್ ರೇಂಜ್ ಸರ್ಫೇಸ್-ಟು-ಏರ್ ಮಿಸೈಲ್ ವ್ಯವಸ್ಥೆಯನ್ನ ಡಿಆರ್‌ಡಿಒ ದೇಶೀಯವಾಗಿ ವಿನ್ಯಾಸಗೊಳಿಸಿದೆ ಮತ್ತು ಅಭಿವೃದ್ಧಿಪಡಿಸಿದೆ.

ಕೊರೋನ ನಂತರ ಕರ್ನಾಟಕವೂ ಸೇರಿ ದೇಶದ19ರಾಜ್ಯಗಳ ಆರ್ಥಿಕತೆ ಚೇತರಿಕೆ

0

ಕೊರೊನಾ ಸೋಂಕಿನ ಆಘಾತದಿಂದ ಪಾತಾಳಕ್ಕಿಳಿದಿದ್ದ ಆರ್ಥಿಕತೆಗಳು ಈಗ ಪುಟಿದೇಳಲಾರಂಭಿಸಿವೆ.

ಕರ್ನಾಟಕ ಸೇರಿದಂತೆ 19 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈ ನಿಟ್ಟಿನಲ್ಲಿ ಧನಾತ್ಮಕ ಬೆಳವಣಿಗೆಯನ್ನು ಕಂಡಿದ್ದು, 2021-22ರ ಹಣಕಾಸು ವರ್ಷದಲ್ಲಿ ಎರಡಂಕಿ ಪ್ರಗತಿಯನ್ನು ಸಾಧಿಸಿವೆ.

21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಅಧಿಕೃತ ದತ್ತಾಂಶಗಳ ವಿಶ್ಲೇಷಣೆಯಿಂದ ಈ ಅಂಶ ತಿಳಿದುಬಂದಿದೆ.

ಆದರೆ, ಗುಜರಾತ್‌ ಹಾಗೂ ಮಹಾರಾಷ್ಟ್ರ ಸೇರಿದಂತೆ 11 ರಾಜ್ಯಗಳ ಪ್ರಗತಿ ದರದ ಅಂಕಿಅಂಶ ಲಭ್ಯವಾಗಿಲ್ಲ.
ಈ ವಿಶ್ಲೇಷಣೆಯ ಪ್ರಕಾರ, ಕೇಂದ್ರ ಸರ್ಕಾರವು ಕೊರೊನಾ ಹಿನ್ನೆಲೆಯಲ್ಲಿ ರಾಷ್ಟ್ರೀಯ ಲಾಕ್‌ಡೌನ್‌ ಹೇರಿದಾಗ ಕುಸಿದಿದ್ದ 19 ರಾಜ್ಯಗಳು- ಕೇಂದ್ರಾಡಳಿತ ಪ್ರದೇಶಗಳ ಜಿಎಸ್‌ಡಿಪಿ(ರಾಜ್ಯದ ಒಟ್ಟು ಆಂತರಿಕ ಉತ್ಪನ್ನ) ದರ 2021-22ರಲ್ಲಿ ಕೊರೊನಾಪೂರ್ವ ಮಟ್ಟಕ್ಕೆ ತಲುಪಿದೆ.

ಇಂಥ ಸಾಧನೆ ಮಾಡಿದ ರಾಜ್ಯಗಳೆಂದರೆ, ಕರ್ನಾಟಕ, ಆಂಧ್ರಪ್ರದೇಶ, ರಾಜಸ್ಥಾನ, ಬಿಹಾರ, ತೆಲಂಗಾಣ, ದೆಹಲಿ, ಒಡಿಶಾ, ಮಧ್ಯಪ್ರದೇಶ, ಹರ್ಯಾಣ, ತ್ರಿಪುರ, ಸಿಕ್ಕಿಂ, ಹಿಮಾಚಲಪ್ರದೇಶ, ಮೇಘಾಲಯ, ಜಾರ್ಖಂಡ್‌, ತಮಿಳುನಾಡು, ಜಮ್ಮು ಮತ್ತು ಕಾಶ್ಮೀರ, ಪಂಜಾಬ್‌ , ಉತ್ತರಾಖಂಡ ಮತ್ತು ಪುದುಚೇರಿ.

ಕೇಂದ್ರ ಸರ್ಕಾರದ ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಅಂಕಿಅಂಶಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

ಜಲಸಂಪನ್ಮೂಲ ಇಲಾಖೆಯಲ್ಲಿ ಇಂಜಿನಿಯರ್ ನೇಮಕ ಆದೇಶ ವಿತರಣೆ

0

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಜಲ ಸಂಪನ್ಮೂಲ ಇಲಾಖೆ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿರುವ ಕಿರಿಯ ಎಂಜಿನಿಯರ್‌ ಮತ್ತು ಸಹಾಯಕ ಎಂಜಿನಿಯರ್‌ಗಳು ಸೇರಿ 160 ಮಂದಿಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ನೇಮಕಾತಿ ಆದೇಶ ವಿತರಿಸಿದರು.

2020ರಲ್ಲಿ ಈ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿತ್ತು. 2021ರಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಆದರೆ, ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಿಂಧುತ್ವ ಪ್ರಮಾಣಪತ್ರ ಸಲ್ಲಿಕೆ ವಿಳಂಬದ ಕಾರಣದಿಂದ ನೇಮಕಾತಿ ಆದೇಶ ನೀಡುವುದು ತಡವಾಗಿತ್ತು.

ಆಯ್ಕೆಯಾದವರಿಗೆ ನೇಮಕಾತಿ ಆದೇಶ ವಿತರಿಸಿ ಮಾತನಾಡಿದ ಕಾರಜೋಳ ಅವರು, ‘ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 371-ಜೆ ತಿದ್ದುಪಡಿ ಜಾರಿಯಾದ ಬಳಿಕ ಆ ಭಾಗದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಮೀಸಲಾತಿ ದೊರಕುತ್ತಿದೆ.

ಆರಂಭದ ವರ್ಷ
ಗಳಲ್ಲಿ ಇತರ ಭಾಗದ ಸರ್ಕಾರಿ ನೌಕರರೇ ಆ ಸೌಲಭ್ಯ ದುರ್ಬಳಕೆ ಮಾಡಿಕೊಂಡಿದ್ದರು. ಈಗ ಅದಕ್ಕೆ ಕಡಿವಾಣ ಹಾಕಿದ್ದೇವೆ. ಕಲ್ಯಾಣ ಕರ್ನಾಟಕದ ಹುದ್ದೆಗಳಿಗೆ ನೇಮಕಗೊಂಡವರು ಇತರೆಡೆ ಹುದ್ದೆ ಬಯಸಬೇಡಿ’ ಎಂದರು.

ಭಾರತ ಜಿಂಬಾಬ್ವೆ ಏಕದಿನ ಕ್ರಿಕೆಟ್ ಸರಣಿ ಪ್ರಶಸ್ತಿ ಭಾರತದ ಮುಡಿಗೆ

0

ಹರಾರೆಯ ಸ್ಪೋರ್ಟ್ಸ್​ ಕ್ಲಬ್ ಮೈದಾನದಲ್ಲಿ ನಡೆದ ಭಾರತ-ಜಿಂಬಾಬ್ವೆ ನಡುವಣ 3ನೇ ಏಕದಿನ ಪಂದ್ಯದಲ್ಲಿ ಭಾರತ ಜಯಗಳಿಸಿದ್ದು, ಸರಣಿ 3-0 ಯಿಂದ ಜಯಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ‌ ನಿಗದಿತ ಐವತ್ತು ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು 289 ರನ್ ಗಳಿಸಿತ್ತು. ವನ್ ಡೌನ್ ಬ್ಯಾಟಿಂಗ್ ಮಾಡಲಿಳಿದ ಶುಭ್ಮನ್ ಗಿಲ್ ಆಕರ್ಷಕ ಶತಕದಾಟವಾಡಿದರು.

290 ರನ್ ಗಳ ಗುರಿಯೊಂದಿಗೆ ಬ್ಯಾಟಿಂಗ್ ಆರಂಭಿಸಿದ ಜಿಂಬಾಬ್ವೆ ಆರಂಭಿಕ ಕುಸಿತ ಕಂಡಿತು. ಬಳಿಕ ಸಿಕಂದರ್ ರಾಜಾ ಭರ್ಜರಿ ಶತಕ ಗಳಿಸುವ ಮೂಲಕ ಗೆಲುವಿನಾಸೆ ಮೂಡಿಸಿದ್ದರು.

ಆದರೆ‌ 19 ನೇ ಓವರ್ ನಲ್ಲಿ ಶಾರ್ದೂಲ್‌ ಠಾಕೂರ್ ಬೌಲಿಂಗ್ ನಲ್ಲಿ ಸಿಕಂದರ್ ರಾಜಾ ಔಟ್ ಆಗುತ್ತಲೇ ಜಿಂಬಾಬ್ವೆ ಸೋಲು ಖಚಿತವಾಗಿತ್ತು. ಕೊನೆಯ ಓವರ್ ನಲ್ಲಿ 276 ರನ್ ಗಳಿಗೆ‌ ಆಲೌಟ್ ಆದ ಜಿಂಬಾಬ್ವೆ ಸೋಲೊಪ್ಪಿಕೊಂಡಿತು.

ಆಟ ನೋಡಲು ಬಂದವರ ಕಾದಾಟ ಕೋಮು ಸಂಘರ್ಷವಾಗಿ ಕೊನೆ

0

ಶಿರಾಳಕೊಪ್ಪ ಪಟ್ಟಣದಲ್ಲಿ ನಿನ್ನೆ ಸೋಮವಾರ ಇಬ್ಬರ ಯುವಕರ ಮಧ್ಯೆ ಆರಂಭವಾದ ಜಗಳ ಎರಡು ಕೋಮುಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ.

ಈ ಘಟನೆಯ ಹಿನ್ನೆಲೆಯಲ್ಲಿ ವ್ಯಾಪಾರ ವೈವಾಟುಗಳು ಸ್ಥಗಿತಗೊಂಡ ಪರಿಣಾಮ ಪಟ್ಟಣದಲ್ಲಿ ಅಘೋಷಿತ ಬಂದ್ ಸ್ಥಿತಿ ನಿರ್ಮಾಣಗೊಂಡಿದೆ.

ಇಲ್ಲಿನ ಸೊರಬ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಿನ್ನೆ ಸೋಮವಾರ ಮಂಚಿಕೊಪ್ಪ ವಲಯ ಮಟ್ಟದ ಕ್ರೀಡಾಕೂಟ ನಡೆಯುತ್ತಿತ್ತು. ಕ್ರೀಡಾಕೂಟ ನೋಡಲು ಬಂದಿದ್ದ ಇಬ್ಬರು ಯುವಕರು ಗಲಾಟೆ ಮಾಡಿಕೊಂಡಿದ್ದು, ಅವರನ್ನು ಕ್ರೀಡಾಂಗಣದಿಂದ ಹೊರಗೆ ಕಳುಹಿಸಲಾಗಿತ್ತು.

ನಂತರ ಅವರು ಹತ್ತಿರದ ಮಂಚಿಕೊಪ್ಪ ಗ್ರಾಮಕ್ಕೆ ತೆರಳುತ್ತಿರುವಾಗ ಹಿರೇಕೆರೂರು ರಸ್ತೆಯಲ್ಲಿ ಬೇರೆ ಕೋಮಿನ ಯುವಕರ ತಂಡ ಅಡ್ಡಗಟ್ಟಿ ಹಲ್ಲೆ ಮಾಡಿದೆ. ಇದರಲ್ಲಿ ಮಂಚಿಕೊಪ್ಪ ಗ್ರಾಮದ ಆರು ಯುವಕರು ಗಾಯಗೊಂಡಿದ್ದಾರೆ. ಶಿರಾಳಕೊಪ್ಪದ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಘಟನೆ ನಡೆದ ನಂತರ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿನ ವ್ಯಾಪಾರ ಬೈಬಲ್ ಸ್ಥಗಿತಗೊಳಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮಾಲೀಕರು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿದರು.

ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ವಿಕ್ರಮ ಅಮಟೆ, ಡಿವೈಎಸ್ಪಿ ಶಿವಾನಂದ್ ಮದರಖಂಡಿ ನೇತೃತ್ವದಲ್ಲಿ ಬಂದುಬಸ್ತ್ ಕೈಗೊಳ್ಳಲಾಗಿತ್ತು. ಜಿಲ್ಲಾ ಮೀಸಲು ಪೊಲೀಸ್ ಪಡೆಯ ಎರಡು ತುಕಡಿ ಹಾಗೂ ಆನವಟ್ಟಿ, ಸೊರಬ, ಶಿಕಾರಿಪುರದ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಪರಿಸ್ಥಿತಿ ಹತೋಟಿಯಲ್ಲಿದೆ.

ಗಣೇಶನ ಹಬ್ಬ ಸುಗಮ ಆಚರಣೆಗೆ ಜಿಲ್ಲಾಡಳಿತದಿಂದ ಸೂಚನೆಗಳು

0

ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಈಬಾರಿ ಗಣೇಶ ಹಬ್ಬವನ್ನು ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ.

ಈ ಬಗ್ಗೆ ಜಿಲ್ಲಾಧಿಕಾರಿ
ಡಾ. ಸೆಲ್ವ ಮಣಿ, ಎಸ್ ಪಿ ಡಾ. ಲಕ್ಷ್ಮೀ ಪ್ರಸಾದ್ ಹಾಗೂ ಡಿ ವೈ ಎಸ್ ಪಿ ಬಾಲರಾಜ್ ನೇತೃತ್ವದಲ್ಲಿ 150ಕ್ಕೂ ಹೆಚ್ಚು ಗಣಪತಿ ಮಂಡಳಿಯವರ ಜೊತೆ ಗಣಪತಿ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

2018-19ರ ವೇಳೆಯಲ್ಲಿ ಗಣಪತಿ ಕೂರಿಸಿದ ರೀತಿಯಲ್ಲಿಯೇ ಅವಕಾಶ ನೀಡಲಾಗುತ್ತದೆ. ಆದರೆ, ನಿಗದಿತ ವಿಸರ್ಜನೆ ಮೆರವಣಿಗೆಯ ಮಾರ್ಗ ಮೊದಲೇ ನೀಡಬೇಕು. ಕೊನೆ ಗಳಿಗೆಯಲ್ಲಿ ಮಾರ್ಗ ಬದಲಾಯಿಸಬಾರದು ಎಂದು ಡಾ. ಬಿ.ಎಂ. ಲಕ್ಷ್ಮೀ ಪ್ರಸಾದ್ ಅವರು ಹೇಳಿದ್ದಾರೆ.

ಗಣಪತಿ ಸಮಿತಿಯವರು ಹಬ್ಬದ ಬಗ್ಗೆ ಮಾಹಿತಿ ಕೊಟ್ಟಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ ಇದುವರೆಗೂ ಗಣಪತಿಯ ಎತ್ತರದ ಪ್ರಶ್ನೆ ಬಂದಿಲ್ಲ. ಆದರೂ, ವಿದ್ಯುತ್ ತಂತಿಗೆ ತಾಗದಂತೆ ಎಚ್ಚರ ವಹಿಸಬೇಕು ಎಂದು ಸಹ ಸೂಚಿಸಿದರು. ಸ್ಥಳೀಯ ಅಧಿಕಾರಿಗಳು ತಮ್ಮೊಂದಿಗೆ ಸಂಪರ್ಕದಲ್ಲಿ ಇರುತ್ತಾರೆ. ಮೈಕ್ ಗೆ ಸುಪ್ರೀಂಕೋರ್ಟ್ ನಿಯಮ ಪಾಲಿಸಬೇಕಿದೆ. ಆದ್ದರಿಂದ ಡಿಜೆ ಹೊರತುಪಡಿಸಿ, ಗಣಪತಿ ತೋರಿಸುವ ಹಾಗೂ ವಿಸರ್ಜಿಸುವ ಬಗ್ಗೆ ಇಲಾಖೆಯಿಂದ ಯಾವುದೇ ನಿರ್ಬಂಧವಿಲ್ಲ ಎಂದರು.

2019ರಲ್ಲಿ ಡಿಜೆಗೆ ಅವಕಾಶವಿತ್ತು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ರಾತ್ರಿ 10 ರಿಂದ ಬೆಳಗ್ಗೆ 6ರವರೆಗೆ ಹೆಚ್ಚು ಶಬ್ದಕ್ಕೆ ನಿಬಂಧಗಳಿವೆ. ಆದರೆ, ಸರ್ಕಾರ ಡಿಜೆ ಅಥವಾ ಸೌಂಡ್ ಸಿಸ್ಟಮ್ ಗೆ ಅವಕಾಶ ಮಾಡಿಕೊಟ್ಟರೆ ಸ್ಥಳೀಯವಾಗಿಯೂ ಅವಕಾಶ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವ ಮಣಿ ಅವರು ತಿಳಿಸಿದ್ದಾರೆ.

ಮೆಸ್ಕಾಂ, ಅಗ್ನಿಶಾಮಕ ದಳ, ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಸಿಂಗಲ್ ವಿಂಡೋದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ಮೆರವಣಿಗೆ ಹೋಗುವ ದಾರಿಗೆ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗುತ್ತದೆ. ಪೊಲೀಸ್ ಬಂದೋಬಸ್ತ್ ನೀಡಲಾಗುತ್ತದೆ. ಆದರೆ, ವಿಸರ್ಜನೆಯ ದಾರಿ ಸರಿಯಾಗಿ ತಿಳಿಸಬೇಕು. ಬದಲಾವಣೆ ಮಾಡಬಾರದು ಎಂದು ಕೂಡ ಸೂಚಿಸಿದರು.

ಭಾರತ್ ಜೋಡೋ ರಾಜ್ಯದಲ್ಲಿ 510 ಕಿಮೀ ಕಾಂಗ್ರೆಸ್ ಪಾದಯಾತ್ರೆ

0

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಪಾದಯಾತ್ರೆಯ ಮಾರ್ಗದ ವಿಚಾರವಾಗಿ ಚರ್ಚೆ ಮಾಡುತ್ತಿದೆ. ರಾಜ್ಯದಲ್ಲಿನ ಪಾದಯಾತ್ರೆಯ ಉಸ್ತುವಾರಿಯನ್ನು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ನೀಡಲಾಗಿದೆ.

ಜಿಲ್ಲಾ ನಾಯಕರಿಗೆ ಕೆಲವು ಜವಾಬ್ದಾರಿ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಸೋಮವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 510 ಕಿ.ಮೀ ದೂರ 21 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. ಕೆಲವು ಕಡೆ ಅರಣ್ಯ ಪ್ರದೇಶವಿದೆ. ಅಲ್ಲಿ ಪಾದಯಾತ್ರೆ ಮಾಡಬೇಕೆ, ಬೇಡವೆ ಎಂಬ ವಿಚಾರವಾಗಿ ಸ್ಥಳೀಯ ಪೊಲೀಸರ ಜೊತೆ ಚರ್ಚಿಸಿ ದೆಹಲಿಯ ತಂಡ ತೀರ್ಮಾನಿಸಲಿದೆ ಎಂದರು.

ಸೆ.7ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸಮಾಧಿಗೆ ನಮಿಸಿ, ಸಭೆ ನಡೆಸಿ ಕನ್ಯಾಕುಮಾರಿಯಿಂದ ಪಾದಯಾತ್ರೆ ಆರಂಭಿಸಲಾಗುತ್ತದೆ. ರಾಜ್ಯದಲ್ಲಿ 8 ಜಿಲ್ಲೆಗಳ ಮೂಲಕ ಈ ಪಾದಯಾತ್ರೆ ಸಾಗಲಿದೆ. ಬಳ್ಳಾರಿ ಹೊರತಾಗಿ ಚಿತ್ರದುರ್ಗ, ತುಮಕೂರು, ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಗಳ ಮಾರ್ಗವನ್ನು ಖುದ್ದಾಗಿ ನೋಡಿದ್ದೇನೆ. ಇಡೀ ರಾಜ್ಯದ ಕಾರ್ಯಕರ್ತರು ಹಾಗೂ ಮುಖಂಡರು ಹೆಜ್ಜೆ ಹಾಕಲಿದ್ದಾರೆ ಎಂದು ಅವರು ತಿಳಿಸಿದರು.

ಭಾರತವನ್ನು ಒಗ್ಗೂಡಿಸಲು, ಶಾಂತಿ, ಸೌಹಾರ್ದತೆ ಸ್ಥಾಪಿಸಿ, ಜನರ ಸಮಸ್ಯೆಯನ್ನು ಚರ್ಚೆ ಮಾಡಲು ದೇಶದಾದ್ಯಂತ ಸುಮಾರು 600ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಸೇರಿ ಚರ್ಚೆ ಮಾಡಿದ್ದಾರೆ. ಅದರಂತೆ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಗಾಗಿ ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ. ಪಾದಯಾತ್ರೆ ಮಾಡಬೇಕು ಎಂಬ ಸೂಚನೆ ನೀಡಲಾಗಿತ್ತು. ಆದರೆ, ನಮ್ಮ ನಾಯಕರು ಜಿಲ್ಲೆಯಲ್ಲಿ ಅಲ್ಲ. ಕ್ಷೇತ್ರದಲ್ಲೇ 200 ಕಿ.ಮೀ. ದೂರ ಪಾದಯಾತ್ರೆ ಮಾಡಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

ಜಿಲ್ಲಾ ಮಟ್ಟದ ಪಾದಯಾತ್ರೆ ಅವಧಿಯನ್ನು ಆ.30ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಾವು ಜನರ ಸಮಸ್ಯೆಯನ್ನು ಆಲಿಸುತ್ತಿದ್ದೇವೆ. ಆ.15 ರಂದು ರಾಜ್ಯಮಟ್ಟದಲ್ಲಿ ತಿರಂಗಾ ಯಾತ್ರೆ ಮಾಡಿದ್ದೇವೆ. ಆ ಮೂಲಕ ಉದಯಪುರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಅವರು ತಿಳಿಸಿದರು.

ಶೀಘ್ರದಲ್ಲೇ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ಕರೆದು ಭಾರತ್ ಜೋಡೋ ಕಾರ್ಯಕ್ರಮದ ವಿಚಾರವಾಗಿ ಚರ್ಚೆ ಮಾಡುತ್ತೇವೆ. ಪಾದಯಾತ್ರೆ ಹಾದು ಹೋಗುವ ಜಿಲ್ಲೆಗಳ ನಾಯಕರನ್ನು ಕರೆದು ಚರ್ಚೆ ಮಾಡುತ್ತೇವೆ. ಸ್ಥಳೀಯರು ಈ ಪಾದಯಾತ್ರೆಯಲ್ಲಿ ಯಾವ ರೀತಿ ಭಾಗವಹಿಸಬೇಕು ಎಂಬ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಅವರು ಹೇಳಿದರು.

ವಿಜಯಪುರದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಹಾಕಿರುವ ವಿಚಾರವಾಗಿ ಬೊಮ್ಮಾಯಿ ಉತ್ತರ ನೀಡಬೇಕು. ರಾಜ್ಯದಲ್ಲಿ ಶಾಂತಿ ಕಾಪಾಡಬೇಕಿರುವುದು ಬೊಮ್ಮಾಯಿ ಅವರ ಜವಾಬ್ದಾರಿ. ನಾವು ಪ್ರಚೋದನಕಾರಿ ಹೇಳಿಕೆ ನೀಡಿ, ಕಾಂಗ್ರೆಸಿಗರನ್ನು ಎತ್ತಿ ಕಟ್ಟಿ, ಕಪ್ಪು ಬಾವುಟ ಹಿಡಿಯಿರಿ ಎಂದು ಹೇಳುವ ಅಗತ್ಯವಿಲ್ಲ ಎಂದು ಶಿವಕುಮಾರ್ ಅವರು ತಿಳಿಸಿದರು.

ಹಳ್ಳಿಗಳಿಗೆ, ನೆರೆ ಪ್ರದೇಶಕ್ಕೆ ಹೋಗಿ ಜನರಿಗೆ ಧ್ವನಿಯಾಗುತ್ತದೆ. ಅವರ ವಿರೋಧ ಪಕ್ಷದ ನಾಯಕರ ಕರ್ತವ್ಯ. ಅದನ್ನು ಮಾಡಬಾರದು,ಮಾಡಿದರೆ ಕಪ್ಪು ಬಾವುಟ ಪ್ರದರ್ಶಿಸುತ್ತೇನೆ. ಮೊಟ್ಟೆ ಹೊಡೆಯುತ್ತೇವೆ ಎನ್ನುವುದು ಸರಿಯಲ್ಲ. ನೀವು ಕೇವಲ ಮೊಟ್ಟೆಯಲ್ಲ, ಏನಾದರೂ ಹೊಡೆಯಿರಿ. ಆದರೆ ಅದೇ ಕೆಲಸವನ್ನು ಬೇರೆ ಪಕ್ಷದವರು ಮಾಡಿದರೆ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ಯೋಚಿಸಿ ಎಂದು ಅವರು ಎಚ್ಚರಿಸಿದರು.

ಈ ಸರ್ಕಾರ ದಿನಬೆಳಗಾದರೆ ಭ್ರಷ್ಟಾಚಾರ ಮಾಡುತ್ತಿದೆ. ಹೈಕೋರ್ಟ್ ಕೂಡ ಇದನ್ನೇ ಹೇಳಿದೆ. ಇನ್ನು ಸರ್ಕಾರಿ ಶಾಲೆಗಳನ್ನು ಮಾರಾಟಕ್ಕೆ ಇಟ್ಟಿದ್ದಾರೆ. ಈ ಬಗ್ಗೆ ಧ್ವನಿ ಎತ್ತಬಾರದೇ? ಈ ಸರ್ಕಾರ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಪ್ರಮಾಣ ಮಾಡಿ, ಈಗ ಒಂದು ವರ್ಗಕ್ಕೆ ಪರಿಹಾರ ನೀಡಿ ಮತ್ತೊಂದು ವರ್ಗಕ್ಕೆ ನೀಡದೇ ಅವರನ್ನು ಪ್ರಚೋದನೆ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಆ.26 ರಂದು ಕೊಡಗು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕುವ ಹೋರಾಟದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಸ್ಪಿ ಕೇವಲ ನೆಪ ಮಾತ್ರ. ಈ ಕಪ್ಪು ಬಾವುಟ ಪ್ರತಿಭಟನೆ ಸರಕಾರದ ಪ್ರಾಯೋಜಿತದಿಂದ ಆಗಿದೆ. ಆದ್ದರಿಂದ, ಈ ಹೋರಾಟ ಸರಕಾರದ ವಿರುದ್ಧವೇ ಹೊರತು, ಅಧಿಕಾರಿ ವಿರುದ್ಧ ಅಲ್ಲ ಎಂದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಉಪಸ್ಥಿತರಿದ್ದರು.

ಖಾದ್ಯತೈಲದ ಬೆಲೆಯಲ್ಲಿ ಇಳಿಕೆ

0

ಗೌರಿ ಗಣೇಶ ಹಬ್ಬ ಸಮೀಪಿಸುತ್ತಿರುವ ಹೊತ್ತಲ್ಲೇ ದೇಶದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಖಾದ್ಯ ತೈಲ, ಆಹಾರ ಪದಾರ್ಥಗಳು, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆಯಾಗಿದೆ.

ಉತ್ಪಾದನಾ ವೆಚ್ಚ ತಗ್ಗಿರುವುದು, ಕಚ್ಚಾ ವಸ್ತುಗಳ ಬೆಲೆ ಇಳಿಕೆಯಾಗಿರುವುದರಿಂದ ಎಲೆಕ್ಟ್ರಾನಿಕ್ ವಸ್ತುಗಳ ದರ ಕೂಡ ಕಡಿಮೆಯಾಗಿದೆ.

ಪ್ರಮುಖ ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕಾ ಸಂಸ್ಥೆಗಳಾದ ಸ್ಯಾಮ್ಸಂಗ್, ಎಲ್.ಜಿ , ಸೋನಿ ಟಿವಿ ದರ ಶೇ. 5 ರಿಂದ 8 ರಷ್ಟು ಇಳಿಕೆಯಾಗಿದೆ. ಲ್ಯಾಪ್ಟಾಪ್ ದರ 1500 ರೂ. ನಿಂದ 200 ರೂಪಾಯಿವರೆಗೆ ಕಡಿಮೆಯಾಗಿದೆ. ಸ್ಮಾರ್ಟ್ ಫೋನ್ ಗಳ ದರ ಶೇ. 4 ರಿಂದ 5 ರಷ್ಟು ಕಡಿಮೆಯಾಗಿದೆ.

ಕೊರೋನಾ ಹತೋಟಿಗೆ ಬಂದಿರುವುದು, ರಷ್ಯಾ ,ಉಕ್ರೇನ್ ಯುದ್ಧದ ಪರಿಣಾಮ ಕಡಿಮೆಯಾಗಿರುವುದು, ಹಬ್ಬದ ಹೊತ್ತಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಕಂಪನಿಗಳು ಮುಂದಾಗಿರುವುದು ಕೆಲವು ತೆರಿಗೆ ವಿನಾಯಿತಿಗಳ ಲಾಭ ಗ್ರಾಹಕರಿಗೆ ವರ್ಗಾವಣೆ ಮಾಡಲಾಗುತ್ತಿದೆ. ಇದರ ಪರಿಣಾಮ ಆಹಾರ ಪದಾರ್ಥಗಳು, ದಿನ ಬಳಕೆ ವಸ್ತುಗಳ ಜೊತೆಗೆ ಎಲೆಕ್ಟ್ರಾನಿಕ್ ಸಾಮಗ್ರಿಗಳ ದರ ಕೂಡ ಕಡಿಮೆಯಾಗಿದೆ.