Wednesday, March 18, 2026
Wednesday, March 18, 2026
Home Blog Page 1501

ಮೈಸೂರಿನಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರಿಕೆಟ್ ಪಂದ್ಯಾವಳಿ

0

ಆಗಸ್ಟ್ 7 ರಂದು ಮೈಸೂರಿನಲ್ಲಿ ಆರಂಭಗೊಳ್ಳಲಿರುವ ಮಹಾರಾಜ ಟ್ರೋಫಿ ಕೆ ಎಸ್ ಎ ಟಿ 20 ಟೂರ್ನಿಯಲ್ಲಿ ಶಿವಮೊಗ್ಗ ದ ತಂಡವು ಭಾಗವಹಿಸಲಿದೆ.

ಮೈಸೂರಿನ ಮಹಾರಾಜರು ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಘನತೆವೆತ್ತ ಶ್ರೀ ಕಂಠದತ್ತ ನರಸಿಂಹ ರಾಜ ಒಡೆಯರ್ ಅವರ ಸ್ಮರಣಾರ್ಥ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಈ ಪ್ರತಿಷ್ಠಿತ ಟೂರ್ನಿಯನ್ನು ಆಯೋಜಿಸಿದೆ.

ಶಿವಮೊಗ್ಗದ ರಾಯಲ್ ಆರ್ಕಿಡ್ ಹೋಟೆಲ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅಂತಾರಾಷ್ಟ್ರೀಯ ಮಾಜಿ ಅಂಪೈರ್ ಹಾಗೂ ಕೆಎಸ್ ಸಿ ಎಂ ಜಂಟಿ ಕಾರ್ಯದರ್ಶಿ ಶಬೀರ್ ತಾರಾಪೂರ್ ಅವರು, ಯುವ ಕ್ರಿಕೆಟಿಗರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ನೀಡುವಲ್ಲಿ ಕೆ ಎಸ್ ಸಿಎ ಆದ್ಯತೆಯನ್ನು ನೀಡುತ್ತದೆ. ಮಹಾರಾಜ ಟ್ರೋಫಿ ಕೆ ಎಸ್ ಸಿ ಎ ಟಿ20ಯಲ್ಲಿ ಶಿವಮೊಗ್ಗ ಜಿಲ್ಲೆಯು ತನ್ನದೇ ಆದ ತಂಡವನ್ನು ಹೊಂದಲಿದೆ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ.ಈ ಮೂಲಕ ಈ ವಲಯದ ಆಟಗಾರರಿಗೆ ನೇರಪ್ರಸಾರಗೊಳ್ಳುವ ಪ್ರತಿಷ್ಠಿತ ಟೂರ್ನಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸದಂತಾಗಿದೆ. ಎಂದರು.

ಟೂರ್ನಿಯಲ್ಲಿ ಶಿವಮೊಗ್ಗ, ಮೈಸೂರು, ಹುಬ್ಬಳ್ಳಿ, ರಾಯಚೂರು ಮತ್ತು ಮಂಗಳೂರು ಸೇರಿದಂತೆ ಒಟ್ಟು ಆರು ತಂಡಗಳು ಪಾಲ್ಗೊಳ್ಳಲಿವೆ.ಮೈಸೂರಿನಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿದಂತೆ 16 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ ಎಂದು ತಿಳಿಸಿದರು.

ತಂಡದ ಆಟಗಾರರನ್ನು ಪ್ಲೇಯರ್ಸ್ ಡ್ರಾಫ್ಟ್ ಮೂಲಕ ಆಯ್ಕೆ ಮಾಡಲಾಗುವುದು. ಇದಕ್ಕೆ ಕೃತಕ ಬುದ್ಧಿಮತ್ತೆಯ ಕ್ರಮವನ್ನು ಅನುಸರಿಸುವುದು. ಆಟಗಾರರ ಹಿಂದಿನ ಸಾಧನೆಗಳನ್ನು ಆಧರಿಸಿ ಅವರನ್ನು ಬೇರೆ ಬೇರೆ ವರ್ಗಗಳನ್ನಾಗಿ ವಿಂಗಡಿಸಿ ಬೆಲೆ ನಿಗದಿಪಡಿಸಲಾಗುವುದು. ಕೆಎಸ್ ಸಿಎಯು ನೀಯೋ
ಜಿಸಿರುವ ಸಮಿತಿಯು ಪ್ರತಿಯೊಂದು ತಂಡಕ್ಕೂ ತರಬೇತಿ ಸಿಬ್ಬಂದಿ ಮತ್ತು ಸಹಾಯಕ ಸಿಬ್ಬಂದಿಯನ್ನು ನಿಯೋಜಿಸಲಿದೆ ಎಂದು ವಿವರಿಸಿದರು.

ಪ್ರತಿಯೊಂದು ತಂಡವು ಆಯಾ ಪ್ರದೇಶದ ಇಬ್ಬರು ಆಟಗಾರರನ್ನು ಒಳಗೊಂಡಿರಬೇಕಾಗಿರುವುದರಿಂದ ಶಿವಮೊಗ್ಗದ ಆಟಗಾರರಿಗೆ ಮಹಾರಾಜ ಟ್ರೋಫಿ ಕೆ ಎಸ್ ಸಿ ಎ ಟಿ 20 ಇಲ್ಲಿಯ ತಂಡದಲ್ಲಿ ಸ್ಥಾನ ಪಡೆಯಲು ಉತ್ತಮ ಅವಕಾಶ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್‌. ಅರುಣ್ ಅವರು ತಿಳಿಸಿದರು.

ಯುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದರು.

ವಿಶೇಷವಾಗಿ ವಿನ್ಯಾಸಗೊಳಿಸಿರುವ ಮಹಾರಾಜ ಟ್ರೋಫಿಯನ್ನು ಪ್ರದರ್ಶನ
ಮಾಡಲಾಯಿತು.

ಲಾಂಚನ ಮತ್ತು ಮಹಾರಾಜ ವಿಷಯಾಧಾರಿತ ಟ್ರೋಫಿಯನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಲೋಹದಲ್ಲಿ ಅತ್ಯಂತ ಸೂಕ್ಷ್ಮ ವಾಗಿ ಕೆತ್ತಲಾಗಿರುವ ಈ ಟ್ರೋಫಿಯನ್ನು 11ರೆಕ್ಕೆಗಳಿದ್ದು, ಇದು ಕ್ರಿಕೆಟ್ ತಂಡದಲ್ಲಿರುವ ಒಟ್ಟೂ ಆಟಗಾರರನ್ನು ಪ್ರತಿನಿಧಿಸುತ್ತದೆ. ಈ ಟೂರ್ನಿಯು ಸ್ಟಾರ್ ಸ್ಪೋರ್ಟ್ಸ್ ಮತ್ತು ಸ್ಟಾರ್ಟ್ ಸ್ಪೋರ್ಟ್ಸ್ ಕನ್ನಡ ಚಾನೆಲ್ ನಲ್ಲಿ ನೇರಪ್ರಸಾರಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಡಿ.ಆರ್. ನಾಗರಾಜ್, ಕೆ.ಎಸ್.ಸುಬ್ಬರಮಣ್ಯ, ಕೆ .ಎಸ್. ಶಶಿಧರ , ಸದಾನಂದ, ಮಂಜುನಾಥ್ ರಾಜು , ಶಿವಮೊಗ್ಗ ಕ್ರಿಕೆಟ್ ಅಸೋಸಿಯೇಷನ್ ವಿಭಾಗದ ಸಿಬ್ಬಂದಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಖಾದಿ ಗ್ರಾಮೋದ್ಯೋಗ ಆಯೋಗದಲ್ಲಿ ಉದ್ಯೋಗಾವಕಾಶ

0

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು ಯುವ ವೃತ್ತಿಪರರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. 10 ಯುವ ವೃತ್ತಿಪರ ಭರ್ತಿಗೆ ಆಯೋಗ ಅಧಿಸೂಚನೆ ಹೊರಡಿಸಿದೆ. ಯಾವುದೇ ವಿಷಯದಲ್ಲಿ ಪದವಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 30 ಆಗಿದೆ.

ಈ ಹುದ್ದೆಗಳನ್ನು ಆಯೋಗ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲು ಮುಂದಾಗಿದೆ. ಒಂದು ವರ್ಷದ ಒಪ್ಪಂದದ ಹುದ್ದೆ ಇದಾಗಿದೆ. ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಈ ಹುದ್ದೆಯನ್ನು ಮೂರು ವರ್ಷಗಳ ಕಾಲ ವಿಸ್ತರಣೆ ಮಾಡಲಾಗುವುದು. ಈ ಹುದ್ದೆ ಆಯ್ಕೆ ಪ್ರಕ್ರಿಯೆ, ನೇಮಕಾತಿ, ಅರ್ಜಿ ಭರ್ತಿ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ
ಯುವ ವೃತ್ತಿಪರರು :ಹುದ್ದೆಗಳ ಸಂಖ್ಯೆ10

ಕಾರ್ಯ ನಿರ್ವಹಣೆ ಸ್ಥಳ
ಕೇರಳ – ತಮಿಳುನಾಡು – ಕರ್ನಾಟಕ – ತೆಲಂಗಾಣ

ವೇತನ
25000-30000 ರೂ ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು27 ವರ್ಷಗಳಿಗಿಂತ ಕಡಿಮೆಯಿರಬೇಕು.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ

ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:
ದಾಖಲೆಗಳ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನ

ಪ್ರಮುಖ ಕೌಶಲ್ಯ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ಕಂಪ್ಯೂಟರ್​ ಜ್ಞಾನವನ್ನು ಹೊಂದಿರಬೇಕು.
ಉತ್ತಮ ಸಂವಹನ ಮತ್ತು ಬರವಣಿಗೆ ಕೌಶಲ್ಯವನ್ನು ಕೂಡ ಹೊಂದಿರಬೇಕು.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13 ಜುಲೈ 2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜುಲೈ 2022
ಅಧಿಕೃತ ವೆಬ್‌ಸೈಟ್: kvic.gov.in

ಗದ್ದಲದಲ್ಲೇ ಆರಂಭಗೊಂಡ ಸಂಸತ್ತಿನ ಮುಂಗಾರು ಅಧಿವೇಶನ

0

ಸಂಸತ್ತಿನ ಮುಂಗಾರು ಅಧಿವೇಶನ ಗದ್ದಲದೊಂದಿಗೆ ಆರಂಭವಾಗಿದೆ. ಇದರಿಂದಾಗಿ ಆರಂಭದ ದಿನ ಹೆಚ್ಚಿನ ಪ್ರಮಾಣ ದಲ್ಲಿ ಕಲಾಪ ನಡೆಸಲು ಸಾಧ್ಯವಾಗದೆ ಲೋಕ ಸಭೆ ಮತ್ತು ರಾಜ್ಯಸಭೆಯಲ್ಲಿ ಕಲಾಪಗಳನ್ನು ಮಂಗಳವಾರಕ್ಕೆ ಮುಂದೂಡಲಾಯಿತು.

ಇದು ನನಗೆ ಕೊನೆಯ ಸಂಸತ್‌ ಅಧಿವೇಶನ. ಹೀಗಾಗಿ ಚೆನ್ನಾಗಿ ಚರ್ಚೆ ನಡೆಸಿ ಉತ್ತಮ ಬೀಳ್ಕೊಡುಗೆ ನೀಡಿ ಎಂದು ರಾಜ್ಯಸಭೆಯ ಉಪಸಭಾಪತಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಸಂಸದರನ್ನು ಕೇಳಿಕೊಂಡಿದ್ದರು.
ಆದರೆ ಉಭಯ ಸದನ ಗಳಲ್ಲಿಯೂ ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷ ಗಳು ಜಿಎಸ್‌ಟಿ, ಬೆಲೆ ಏರಿಕೆ ಮತ್ತಿತರ ಹಲವು ವಿಚಾರಗಳ ಬಗ್ಗೆ ಕೋಲಾಹಲ ಎಬ್ಬಿಸಿದ್ದರಿಂದ ಕಲಾಪ ಮಂಗಳವಾರಕ್ಕೆ ಮುಂದೂಡಿಕೆಯಾಯಿತು.

ಮುಂಗಾರು ಅಧಿವೇಶನದಲ್ಲಿ ಎಲ್ಲ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆದು ಕಲಾಪಗಳು ಫ‌ಲಪ್ರದವಾಗುವಂತೆ ಸಹಕರಿಸಬೇಕು ಎಂದು ಅಧಿವೇಶನ ಆರಂಭವಾಗುವುದಕ್ಕೆ ಮುನ್ನ ಪ್ರಧಾನಿ ಮೋದಿ ಮನವಿ ಮಾಡಿದ್ದರು.

ಜಿಲ್ಲೆಯಲ್ಲಿ ರಸಗೊಬ್ಬರ ಸಾಕಷ್ಟು ಲಭ್ಯವಿದೆ-ಡಾ.ಸೆಲ್ವಮಣಿ

0

ಜಿಲ್ಲೆಯಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ರೈತರಿಗೆ ಸಮರ್ಪಕವಾಗಿ ಲಭ್ಯವಾಗುವಂತೆ ಖಾತ್ರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು.

ಜಿಲ್ಲೆಯಲ್ಲಿ ರಸಗೊಬ್ಬರ ಲಭ್ಯತೆ ಕುರಿತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು.

ಜಿಲ್ಲೆಯ ಅವಶ್ಯಕತೆಗನುಗುಣವಾಗಿ ವಿವಿಧ ಶ್ರೇಣಿಯ ರಸಗೊಬ್ಬರಗಳನ್ನು ಹಂತಹಂತವಾಗಿ ಪೂರೈಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟಾರೆಯಾಗಿ ಸೆಪ್ಟಂಬರ್ ಅಂತ್ಯದವರೆಗೆ 103857 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆಯಿದ್ದು, ಇದುವರೆಗೆ 64130 ಮೆ.ಟನ್ ರಸಗೊಬ್ಬರ ಪೂರೈಕೆಯಾಗಿದೆ. ಇದರಲ್ಲಿ 47910 ಮೆ.ಟನ್ ರಸಗೊಬ್ಬರ ವಿತರಣೆ ಮಾಡಲಾಗಿದ್ದು, 16220 ಮೆ.ಟನ್ ರಸಗೊಬ್ಬರ ದಾಸ್ತಾನಿದೆ. ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವಂತೆ ಖಾತ್ರಿಪಡಿಸಬೇಕು ಎಂದು ಹೇಳಿದರು.

ಕೃಷಿ ಇಲಾಖೆ ಅಧಿಕಾರಿಗಳು ನಿರಂತರವಾಗಿ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರಸಗೊಬ್ಬರ ಮತ್ತು ಬಿತ್ತನೆ ಬೀಜ ಲಭ್ಯತೆ ಬಗ್ಗೆ ಪರಿಶೀಲಿಸಬೇಕು. ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗದಂತೆ ಎಚ್ಚರಿಕೆ ವಹಿಸಬೇಕು. ಕಲಬೆರೆಕೆ ರಸಗೊಬ್ಬರ ಮಾರಾಟದ ಮೇಲೆ ನಿಗಾ ಇರಿಸಿ ನಿರಂತರ ತಪಾಸಣೆ ಕಾರ್ಯ ಕೈಗೊಳ್ಳಬೇಕು. ರಸಗೊಬ್ಬರದ ಗುಣಮಟ್ಟದ ಬಗ್ಗೆ ದೂರುಗಳು ಬಂದ ತಕ್ಷಣ ಪರಿಶೀಲನೆ ನಡೆಸಿ, ಅಂತಹ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಹೇಳಿದರು.

ಪ್ರತಿ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುವ ರಸಗೊಬ್ಬರ ದಾಸ್ತಾನು ಬಗ್ಗೆ ವಿವರಗಳನ್ನು ಪ್ರಕಟಿಸಬೇಕು. ಕಳಪೆ ಬಿತ್ತನೆ ಬೀಜ ಪೂರೈಕೆ ಕುರಿತು ದೂರುಗಳು ಬಂದರೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಅತಿವೃಷ್ಟಿಯಿಂದ ಜಿಲ್ಲೆಯ ವಿವಿದೆಡೆ ಉಂಟಾಗಿರುವ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ಸಮಗ್ರ ವರದಿಯನ್ನು ಸಲ್ಲಿಸಬೇಕು. ನೆರೆ ನೀರು ಕಡಿಮೆಯಾದ ತಕ್ಷಣ ಬೆಳೆ ಹಾನಿ ಸಮೀಕ್ಷೆ ಆರಂಭಿಸಬೇಕು. ಬೆಳೆ ಹಾನಿ ಕುರಿತು ಎನ್‍ಡಿಆರ್‍ಎಫ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬೆಳೆಹಾನಿ ಸಂಭವಿಸಿದ ರೈತರಿಗೆ ಸೂಕ್ತ ಪರಿಹಾರ ಧನವನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 79602 ಹೆಕ್ಟೇರ್ ಭತ್ತ ಕೃಷಿ ಗುರಿ ಹೊಂದಲಾಗಿದ್ದು, ಇದುವರೆಗೆ 6776 ಹೆಕ್ಟೇರ್, 53ಸಾವಿರ ಹೆಕ್ಟೇರ್ ಮುಸುಕಿನ ಜೋಳ ಗುರಿ ಹೊಂದಲಾಗಿದ್ದು, 45795 ಹೆಕ್ಟೇರ್ ಗುರಿ ಸಾಧಿಸಲಾಗಿದೆ. ಒಟ್ಟಾರೆಯಾಗಿ 135184 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು, 54042 ಹೆಕ್ಟೇರ್ ಬಿತ್ತನೆ ಗುರಿಯನ್ನು ಸಾಧಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಪೂರ್ಣಿಮಾ ಅವರು ಮಾಹಿತಿ ನೀಡಿದರು.

ಕೃಷಿ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಗ್ರಾಹಕರಿಗೆ ಇಷ್ಟವಾದ ಕೆಎಂಎಫ್ ಕ್ರಮ

0

ದಿನನಿತ್ಯದ ಬಳಕೆಯ ವಸ್ತುಗಳನ್ನೂ ಸೇರಿ ಹಲವು ಅಗತ್ಯ ವಸ್ತುಗಳ ಮೇಲೆ ಜಿಎಸ್​ಟಿ ತೆರಿಗೆ ಹೆಚ್ಚಿಸಿ ಜಿಎಸ್​ಟಿ ಮಂಡಳಿ ಇತ್ತೀಚೆಗಷ್ಟೇ ಹೊಸ ನಿಯಮಗಳನ್ನು ಜಾರಿ ಮಾಡಿತ್ತು. ಮಜ್ಜಿಗೆ ಮತ್ತು ಲಸ್ಸಿ, ಮೊಸರಿನ ಮೇಲೂ ಶೇ.5 ರಷ್ಟು ಜಿಎಸ್​ಟಿ ವಿಧಿಸಿದೆ. ಈ ನಿರ್ಧಾರದ ವಿರುದ್ಧ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಕೇಂದ್ರ ವಿತ್ತ ಸಚಿವಾಲಯ ಸೂಚನೆ ಮೇರೆಗೆ ಶೇ. 5ರಷ್ಟು ಜಿಎಸ್​ಟಿ ವಿಧಿಸಿ ಮಜ್ಜಿಗೆ, ಮೊಸರು ಮತ್ತು ಲಸ್ಸಿ ಮಾರಾಟ ಮಾಡಲಾಗುತ್ತಿತ್ತು. ಜನರ ತೀವ್ರ ವಿರೋಧದ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಗ್ರಾಹಕರ ಹಿತದೃಷ್ಠಿಯಿಂದ ಕರ್ನಾಟಕ ಹಾಲು ಒಕ್ಕೂಟಕ್ಕೆ ದರ ಮರು ಪರಿಷ್ಕರಣೆ ಮಾಡಿ ಎಂದು ಆದೇಶಿಸಿದೆ.

ಈಗ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಕರ್ನಾಟಕ ಹಾಲು ಒಕ್ಕೂಟ ಮೊಸರಿನ ಬೆಲೆ 1.50 ಪೈಸೆ ಇಳಿಕೆ ಮಾಡಿದೆ. ಅಲ್ಲದೇ ಮಜ್ಜಿಗೆ ಬೆಲೆಯಲ್ಲಿ 50 ಪೈಸೆ ಹಾಗೂ ಲಸ್ಸಿ ಬೆಲೆಯಲ್ಲಿ 50 ಪೈಸೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.

ಯುವಜನತೆ ಹೊಸ ಆವಿಷ್ಕಾರಗಳನ್ನ ನಡೆಸಬೇಕು-ಡಾ.ಕೆ.ಶಿವಶಂಕರ್

0

ಜಗತ್ತಿನ ಜನಸಂಖ್ಯೆಯಲ್ಲಿ ಅತಿ ದೊಡ್ಡ ಮೊತ್ತದ ಯುವ ಶಕ್ತಿಯನ್ನು ಹೊಂದಿರುವ ಭಾರತ ದೇಶದ ನಿಜವಾದ ಸಂಪತ್ತು ಯುವ ಸಮೂಹವಾಗಿದೆ. ಯುವ ಸಮೂಹವು ಅಭಿವೃದ್ಧಿಶೀಲ ಭಾರತ ಎನ್ನುವ ಹಣೆಪಟ್ಟಿಯನ್ನು ಹೋಗಲಾಡಿಸಿ ಅಭಿವೃದ್ಧಿ ಹೊಂದಿದ ರಾಷ್ಟ್ರ ಭಾರತ ಎನ್ನುವ ಮಟ್ಟಕ್ಕೆ ಕೊಂಡೊಯ್ಯಬೇಕು. ಇದಕ್ಕಾಗಿ ಹೊಸತನದ ಅವಿಷ್ಕಾರಗಳನ್ನು ನಡೆಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ರೆಜಿಸ್ಟ್ರಾರ್ ಡಾ. ಕೆ.ಶಿವಶಂಕರ್ ಅವರು ತಿಳಿಸಿದ್ದಾರೆ.

ಅವರು, ದಾವಣಗೆರೆಯ ಬಾಪೂಜಿ ಮೆನೇಜ್ಮೆಂಟ್ ಕಾಲೇಜಿನ ರಾಜ್ಯಮಟ್ಟದ ಅಂತರ ಕಾಲೇಜು ಸ್ಪರ್ಧೋತ್ಸವ ಆಗ್ಟಾಗನ್ ನ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಬಹುಮಾನ ಮತ್ತು ಚಾಂಪಿಯನ್ ಶಿಪ್ ಟ್ರೋಫಿ ವಿತರಿಸಿ ಮಾತನಾಡುತ್ತಾ, ಹೊಸತನದ ಆವಿಷ್ಕಾರಗಳಿಗೆ ಪ್ರೇರಣೆಯಾಗುವ ಇಂತಹ ಸ್ಪರ್ಧೆಗಳು ಉಪಯುಕ್ತವಾಗಿದೆ. ಇದರಿಂದ ವಿಕಾಸವಾಗಬೇಕು.ವಿಕಾಸವೇ ನಮ್ಮ ವಿಳಾಸವಾಗಬೇಕು. ನಾವು ಮಾತನಾಡುವುದಲ್ಲ. ನಮ್ಮ ಕಾರ್ಯಗಳೇ ಮಾತನಾಡುವಂತಾಗಬೇಕು ಎಂದು ಹೇಳಿದ್ದಾರೆ.

ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಕಾಲೇಜಿನ ನಿರ್ದೇಶಕ ಡಾ.ಸ್ವಾಮಿ ತ್ರಿಭುವನಾನಂದ ನಿರ್ವಹಣೆಯ ಬಗ್ಗೆ ವಿಶೇಷ ಅರಿವು ಉಂಟು ಮಾಡುವುದೇ ಈ ಸ್ಪರ್ಧೋತ್ಸವದ ಉದ್ದೇಶವಾಗಿದೆ. ಅದು ಇಲ್ಲಿ ಯಶಸ್ವಿಯಾಗಿದೆ. ಇದು ಬಹು ಮಾನಕ್ಕಿಂತ ದೊಡ್ಡದು ಎಂದರು.ಕಾಲೇಜಿನ ಪ್ರಾಂಶುಪಾಲ ಡಾ.ನವೀನ್ ನಾಗರಾಜ್,ಬಾಪೂಜಿ ಹೈಟೆಕ್ ಕಾಲೇಜಿನಪ್ರಾಂಶುಪಾಲ ಡಾ.ಬಿ. ವೀರಪ್ಪ ಮುಂತಾದವರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ವಿಭಾಗ ಮುಖ್ಯಸ್ಥ, ಸ್ಪರ್ಧೋತ್ಸವದ ಮುಖ್ಯ ನಿರ್ವಾಹಕ ಡಾ. ಪ್ರಕಾಶ್ ಎಸ್. ಅಳಲಗೇರಿ ವಂದನೆ ಸಲ್ಲಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಮಹೇಂದ್ರ ಹಾಗೂ ಶ್ರೀರಕ್ಷ ಮಾಡಿದರೆ, ಇಂಚರ ಮೂರ್ತಿ ಪ್ರಾರ್ಥನಾ ಗೀತೆ ಹಾಡಿದರು. ಆಕ್ಟಾಗನ್ ನ ಚಾಂಪಿಯನ್ಶಿಪ್ ಫಲಕವನ್ನು ಸಹ ಇದೇ ಸಂದರ್ಭದಲ್ಲಿ ಪ್ರದಾನ ಮಾಡಲಾಯಿತು.

ವರದಿ ಕೃಪೆ: ಎಚ್.ಬಿ.ಮಂಜುನಾಥ

ಜನಾಂಗೀಯ ತಾರತಮ್ಯ ವಿರೋಧಿಸಿ ಜಗ ಗೆದ್ದ ಮಗ ನೆಲ್ಸನ್ ಮಂಡೆಲಾ

0

ಪ್ರತಿ ವರ್ಷ ಜುಲೈ 18ರಂದು ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರ ಜನ್ಮದಿನವನ್ನು ನೆಲ್ಸನ್ ಮಂಡೇಲಾ ದಿನವೆಂದು ಆಚರಿಸಲಾಗುತ್ತದೆ. ವರ್ಣಭೇದ ನೀತಿಯನ್ನು ವಿರೋಧಿಸುವ ನಾಯಕನ ಸಾಧನೆಗಳನ್ನು ಸ್ಮರಿಸಲು ಮತ್ತು ಉತ್ತಮ ಭವಿಷ್ಯಕ್ಕಾಗಿ ಅವರ ಪರಂಪರೆಯನ್ನು ಮುಂದುವರಿಸಲು ನೆಲ್ಸನ್ ಮಂಡೇಲಾ ದಿನವನ್ನು ವಿಶ್ವಾದ್ಯಂತ ಆಚರಿಸಲಾಗುತ್ತದೆ.

ನೆಲ್ಸನ್ ಮಂಡೇಲಾ ಅಂತಾರಾಷ್ಟ್ರೀಯ ದಿನ ಎಂದು ಕೂಡ ಮಂಡೇಲಾ ದಿನವನ್ನು ಕರೆಯಲಾಗುತ್ತದೆ. ಮಂಡೇಲಾ ದಿನವು ಜನಾಂಗೀಯ ತಾರತಮ್ಯ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ದಕ್ಷಿಣ ಆಫ್ರಿಕಾದ ನಾಯಕನ 67 ವರ್ಷಗಳ ಸುದೀರ್ಘ ಹೋರಾಟದ ಆಚರಣೆಯಾಗಿದೆ. ನೆಲ್ಸನ್ ಮಂಡೇಲಾ ದಕ್ಷಿಣ ಆಫ್ರಿಕಾದ ಮೊದಲ ಕಪ್ಪು ವರ್ಣೀಯ ಅಧ್ಯಕ್ಷರಾಗಿದ್ದರು. ಮಂಡೇಲಾ ಅವರ ಸಿದ್ಧಾಂತ ಮತ್ತು ದೃಷ್ಟಿಕೋನವನ್ನು ಅನುಸರಿಸುವ ಮೂಲಕ ಕಪ್ಪು ವರ್ಣೀಯ ಸಮುದಾಯಗಳಲ್ಲಿ ಬದಲಾವಣೆಯನ್ನು ಮಾಡಲು ಪ್ರತಿಯೊಬ್ಬರನ್ನು ಪ್ರೇರೇಪಿಸುವುದು ಈ ದಿನದ ಉದ್ದೇಶವಾಗಿದೆ.

ವಿಶ್ವಸಂಸ್ಥೆಯು ಅಧಿಕೃತವಾಗಿ ನೆಲ್ಸನ್ ಮಂಡೇಲಾ ಅಂತಾರಾಷ್ಟ್ರೀಯ ದಿನ ಅಥವಾ ಮಂಡೇಲಾ ದಿನವನ್ನು ಆಚರಿಸಲು ನವೆಂಬರ್ 2009ರಲ್ಲಿ ನಿರ್ಧರಿಸಿತು. ಈ ದಿನದ ಮೊದಲ ಆಚರಣೆ 2010ರ ಜುಲೈ 18ರಂದು ನಡೆಯಿತು. ನೆಲ್ಸನ್ ಮಂಡೇಲಾ ಅವರಿಗೆ ನೊಬೆಲ್ ಪ್ರಶಸ್ತಿ ಸೇರಿದಂತೆ 250ಕ್ಕೂ ಹೆಚ್ಚು ಪ್ರಶಸ್ತಿಗಳು ಬಂದಿವೆ.

ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯು 2014ರಲ್ಲಿ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ಮಾನವೀಯತೆಯ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟವರನ್ನು ಗೌರವಿಸಲು ಸ್ಥಾಪಿಸಿತು.

ನೆಲ್ಸನ್ ಮಂಡೇಲಾ ಅವರ ಮೂಲ ಹೆಸರು ರೋಲಿಹ್ಲಾಹ್ಲಾ. ಇದಕ್ಕೆ ಅವರ ಬುಡಕಟ್ಟು ಜನಾಂಗದಲ್ಲಿ ‘ಮರದ ಕೊಂಬೆಯನ್ನು ಎಳೆಯುವುದು’ ಎಂದರ್ಥವಿದೆ. ಅವರ ಪ್ರಾಥಮಿಕ ಶಾಲೆಯ ಮೊದಲ ದಿನ ಅವರ ಶಿಕ್ಷಕರು ಅವರಿಗೆ ‘ನೆಲ್ಸನ್’ ಎಂಬ ಹೆಸರಿಟ್ಟರು.

ನೆಲ್ಸನ್ ಮಂಡೇಲಾ ಅವರ ಹೆಂಡತಿ ಗ್ರೇಸ್ ಮಾಚೆಲ್ ಮೊದಲು ಮೊಜಾಂಬಿಕ್ ಅಧ್ಯಕ್ಷ ಸಮೋರಾ ಮಾಚೆಲ್ ಅವರನ್ನು ವಿವಾಹವಾಗಿದ್ದರು. ಆದರೆ, ಗಂಡನ ಮರಣದ ನಂತರ ಅವರು ನೆಲ್ಸನ್ ಮಂಡೇಲಾ ಅವರನ್ನು ವಿವಾಹವಾದರು. ನೆಲ್ಸನ್ ಮಂಡೇಲಾ ಅವರ 80ನೇ ಹುಟ್ಟುಹಬ್ಬದ ದಿನದಂದೇ ಗ್ರೇಸ್ ಮಾಚೆಲ್ ಅವರನ್ನು ಮದುವೆಯಾದರು.

ನೆಲ್ಸನ್ ಮಂಡೇಲಾ ಬಾಕ್ಸಿಂಗ್‌ನಲ್ಲಿ ಬಹಳ ಆಸಕ್ತಿ ಹೊಂದಿದ್ದರು.
ನೆಲ್ಸನ್ ಸ್ಪೈಕ್ ಲೀ ಅವರ 1992ರ ಬಯೋಪಿಕ್ ಮಾಲ್ಕಮ್ ಎಕ್ಸ್​​ನಲ್ಲಿ ಕಾಣಿಸಿಕೊಂಡಿದ್ದರು. ಅವರು ಅದರಲ್ಲಿ ಅತಿಥಿ ಪಾತ್ರದಲ್ಲಿ ಶಿಕ್ಷಕನಾಗಿ ಕಾಣಿಸಿಕೊಂಡಿದ್ದರು.

1952ರಲ್ಲಿ ನೆಲ್ಸನ್ ಮಂಡೇಲಾ ಅವರು ವಿಟ್ವಾಟರ್‌ರಾಂಡ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದ ನಂತರ ಜೋಹಾನ್ಸ್‌ಬರ್ಗ್‌ನಲ್ಲಿ ರಾಷ್ಟ್ರದ ಮೊದಲ ಕಪ್ಪು ಕಾನೂನು ಸಂಸ್ಥೆಯನ್ನು ಸ್ಥಾಪಿಸಿದರು.

ಬಡತನವನ್ನು ಹೋಗಲಾಡಿಸುವುದು ದಾನದ ಕಾರ್ಯವಲ್ಲ, ಅದು ಒಂದು ನ್ಯಾಯದ ಕಾರ್ಯವಾಗಿದೆ.
ನೆಲ್ಸನ್ ಮಂಡೇಲಾ ದಕ್ಷಿಣ ಆಫ್ರಿಕಾದ ಮೊದಲ ಕಪ್ಪು ವರ್ಣೀಯ ಅಧ್ಯಕ್ಷರಾಗಿದ್ದರು. ನೆಲ್ಸನ್ ಮಂಡೇಲಾ ಅವರಿಗೆ ನೊಬೆಲ್ ಪ್ರಶಸ್ತಿ ಸೇರಿದಂತೆ 250ಕ್ಕೂ ಹೆಚ್ಚು ಪ್ರಶಸ್ತಿಗಳು ಬಂದಿವೆ.

ಉಪರಾಷ್ಟ್ರಪತಿ ಹುದ್ದೆಗೆ ಮಾರ್ಗರೇಟ್ ಆಳ್ವ ವಿಪಕ್ಷಗಳ ಅಭ್ಯರ್ಥಿ

0

ಉಪರಾಷ್ಟ್ರಪತಿ ಚುನಾವಣೆ ಆಗಸ್ಟ್ 6ರಂದು ನಡೆಯಲಿದ್ದು ರಾಜಸ್ಥಾನದ ಮಾಜಿ ಗವರ್ನರ್ ಮಾರ್ಗರೇಟ್ ಆಳ್ವ ಅವರನ್ನು ಭಾನುವಾರ ವಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಘೋಷಿಸಿವೆ. 80ರ ಹರೆಯದ ಆಳ್ವ ಅವರ ವಿರುದ್ಧ ಆಡಳಿತಾರೂಢ ಎನ್​​ಡಿಎ ಪ್ರಸ್ತುತ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಜಗದೀಪ್ ಧನ್ಖರ್ ಅವರನ್ನು ಕಣಕ್ಕಿಳಿಸಿದೆ.

ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ನನ್ನ ಹೆಸರನ್ನು ನಾಮನಿರ್ದೇಶನ ಮಾಡಿರುವುದು ಗೌರವ. ಈ ನಾಮನಿರ್ದೇಶನವನ್ನು ನಾನು ವಿನಯದಿಂದ ಒಪ್ಪಿಕೊಂಡಿದ್ದು, ನನ್ನ ಮೇಲೆ ಭರವಸೆ ಇರಿಸಿದ ವಿಪಕ್ಷದ ನೇತಾರರಿಗೆ ಧನ್ಯವಾದಗಳು ಎಂದು ಆಳ್ವ ಅವರು ಟ್ವೀಟ್ ಮಾಡಿದ್ದಾರೆ.

ಅಮೃತ ಮಹೋತ್ಸವ:ಕಂಗೊಳಿಸಲಿದೆ ತ್ರಿವರ್ಣ ಬಾವುಟ ಆರೋಹಣ

0

ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಭಾರತದಲ್ಲಿ ಭರ್ಜರಿಯಾಗಿ ಸಿದ್ದತೆಯನ್ನು ನಡೆಸಲಾಗುತ್ತಿದೆ. ಅದರಂತೆ ಕರ್ನಾಟಕ ಸರ್ಕಾರವು ಕೂಡ ಎಲ್ಲ ಆರೀತಿಯಲ್ಲಿ ಸಿದ್ದತೆಯನ್ನು ನಡೆಸಿದೆ. ಈ ಬಾರಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ ಹರ್ ಘರ್ ತಿರಂಗಾ ಅಭಿಯಾನ ನಡೆಸಲು ಘೋಷಿಸಿದೆ.

ಅದರಂತೆ, ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯುಸಿ ಕಾಲೇಜುಗಳು, ಮದರಸಾಗಳ ಮೇಲೂ ಕಡ್ಡಾಯವಾಗಿ ತಿರಂಗಾ ಹಾರಿಸಲೇಬೇಕು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಘೋಷಣೆ

0

ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಆಡಳಿತವು ಸಾಮಾಜಿಕ ಅಶಾಂತಿಯನ್ನು ತಗ್ಗಿಸಲು ಮತ್ತು ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಪ್ರಯತ್ನಿಸುತ್ತಿದೆ ಎಂದು ಭಾನುವಾರ ತಡರಾತ್ರಿ ಬಿಡುಗಡೆಯಾದ ಸರ್ಕಾರದ ಸೂಚನೆ ತಿಳಿಸಿದೆ.

ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸಮುದಾಯದ ಜೀವನಕ್ಕೆ ಅಗತ್ಯವಾದ ಸರಬರಾಜು ಹಾಗೂ ಸೇವೆಗಳ ನಿರ್ವಹಣೆಯ ಹಿತದೃಷ್ಟಿಯಿಂದ ತುರ್ತು ಪರಿಸ್ಥಿತಿ ಘೋಷಣೆ ಸೂಕ್ತವಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಶ್ರೀಲಂಕಾದ ಉಚ್ಛಾಟಿತ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ತಮ್ಮ ಸರ್ಕಾರದ ವಿರುದ್ಧದ ಜನರ ದಂಗೆಯಿಂದ ತಪ್ಪಿಸಿಕೊಳ್ಳಲು ವಿದೇಶಕ್ಕೆ ಪಲಾಯನ ಮಾಡಿದ್ದಾರೆ.