Tuesday, March 17, 2026
Tuesday, March 17, 2026
Home Blog Page 1504

ಸಂಸದ್ ಭವನದ ಆವರಣದಲ್ಲಿ ಧರಣಿ ಉಪವಾಸ ಇತ್ಯಾದಿ ನಿರ್ಬಂಧ

0

ಜುಲೈ 18 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದೆ‌. ಈ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಕೆಲ ಪದಗಳ ಬಳಕೆಯನ್ನು ನಿಷೇಧಿಸಿ ಎರಡು ದಿನಗಳ ಹಿಂದಷ್ಟೇ ಆದೇಶ ಹೊರಡಿಸಲಾಗಿತ್ತು.

ಇದೀಗ ಅದರ ಮರುದಿನವೇ ಮತ್ತೊಂದು ಆದೇಶ ಹೊರ ಬಿದ್ದಿದೆ.
ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ, ಈ ಸುತ್ತೋಲೆ ಹೊರಡಿಸಿದ್ದು ಇನ್ನು ಮುಂದೆ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ, ಧರಣಿ, ಉಪವಾಸ ಅಥವಾ ಧಾರ್ಮಿಕ ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ತಿಳಿಸಲಾಗಿದೆ.

ಕೇಂದ್ರ ಸರ್ಕಾರದ ಈ ನಡೆಗೆ ಪ್ರತಿಪಕ್ಷಗಳ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸುತ್ತೋಲೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

ಎಸ್ 400 ಕ್ಷಿಪಣಿ ಖರೀದಿ: ಭಾರತಕ್ಕೆ ವಿಶ್ವದ ದೊಡ್ಡಣ್ಣನ ಬೆಂಬಲ

0

ಚೀನಾದಂತಹ ಆಕ್ರಮಣಕಾರರನ್ನು ತಡೆಯಲು ನೆರವಾಗಲು ರಷ್ಯಾದಿಂದ ಭಾರತ ಖರೀದಿಸುತ್ತಿರುವ ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಗೆ ಸಿಎಎಟಿಎಸ್ ಎಸ್ (ಕಾಟ್ಸಾ) ಕಾಯ್ದೆಯಿಂದ ವಿನಾಯಿತಿ ನೀಡುವ ತಿದ್ದುಪಡಿ ಮಸೂದೆಗೆ ಅಮೆರಿಕದ ಪ್ರಜಾ ಪ್ರತಿನಿಧಿ ಸಭೆಯಲ್ಲಿ ಧ್ವನಿಮತದ ಅಂಗೀಕಾರ ದೊರೆತಿದೆ.

2017ರಲ್ಲಿ ಜಾರಿಗೆ ತರಲಾದ CAATSA, ರಷ್ಯಾದ ರಕ್ಷಣಾ ಮತ್ತು ಗುಪ್ತಚರ ಕ್ಷೇತ್ರಗಳೊಂದಿಗೆ ವಹಿವಾಟುಗಳಲ್ಲಿ ತೊಡಗಿರುವ ಯಾವುದೇ ದೇಶದ ವಿರುದ್ಧ ದಂಡನಾತ್ಮಕ ಕ್ರಮಗಳಿಗೆ ಅವಕಾಶ ಒದಗಿಸುತ್ತದೆ. ರಷ್ಯಾದಿಂದ S-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳ ಬ್ಯಾಚ್ ಖರೀದಿಸಿದ್ದಕ್ಕಾಗಿ CAATSA ಅಡಿಯಲ್ಲಿ ಅಮೆರಿಕವು ಈಗಾಗಲೇ ಟರ್ಕಿಯ ಮೇಲೆ ನಿರ್ಬಂಧಗಳನ್ನು ವಿಧಿಸಿದೆ. ಆದರೀಗ ಇದರಿಂದ ತಿದ್ದುಪಡಿ ಮಸೂದೆಗೆ ಅಮೆರಿಕ ಅಂಗೀಕರಿಸಿದೆ.

ಅಕ್ಟೋಬರ್ 2018ರಲ್ಲಿ, S-400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಗಳ ಐದು ಘಟಕಗಳನ್ನು ಖರೀದಿಸಲು ಭಾರತವು ರಷ್ಯಾದೊಂದಿಗೆ USD 5 ಶತಕೋಟಿ ಒಪ್ಪಂದಕ್ಕೆ ಸಹಿ ಹಾಕಿತ್ತು. S-400 ಕ್ಷಿಪಣಿ ವ್ಯವಸ್ಥೆಗಳನ್ನು ಖರೀದಿಸಲು ಅಮೆರಿಕದ ವಿರೋಧಿಗಳ ಮೂಲಕ ನಿರ್ಬಂಧಗಳ ಕಾಯ್ದೆ (CAATSA) ಯ ನಿಬಂಧನೆಗಳ ಅಡಿಯಲ್ಲಿ ಭಾರತದ ಮೇಲೆ ನಿರ್ಬಂಧಗಳನ್ನು ವಿಧಿಸುತ್ತದೆಯೇ ಎಂದು ಜೋ ಬೈಡನ್ ಆಡಳಿತವು ಸ್ಪಷ್ಟಪಡಿಸಿರಲಿಲ್ಲ. ಸದ್ಯ ಸಿಎಎಟಿಎಸ್ ಎಸ್ (ಕಾಟ್ಸಾ) ಕಾಯ್ದೆಯಿಂದ ವಿನಾಯಿತಿ ನೀಡುವ ತಿದ್ದುಪಡಿ ಮಸೂದೆಗೆ ಅಮೆರಿಕದ ಪ್ರಜಾ ಪ್ರತಿನಿಧಿ ಸಭೆಯಲ್ಲಿ ಧ್ವನಿಮತದ ಅಂಗೀಕಾರ ದೊರೆತಿದೆ.

ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಉಪ ರಾಷ್ಟ್ರಪತಿ ಹುದ್ದೆ ಅಭ್ಯರ್ಥಿ ಬಗ್ಗೆ ಚರ್ಚೆ

0

ಎನ್‌ಡಿಎ ಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗೆ ಜುಲೈ 16 ಬಿಜೆಪಿ ಸಂಸದೀಯ ಮಂಡಳಿ ಸಭೆ ಕರೆಯಲಾಗಿದೆ. ಈ ಸಭೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

ಈಗಾಗಲೇ ಹಲವು ಹೆಸರುಗಳು ಮುನ್ನಲೆಗೆ ಬಂದಿದ್ದು, ಮಹತ್ವದ ಚರ್ಚೆ ಬಳಿಕ ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಹೆಸರು ಘೋಷಿಸುವ ಸಾಧ್ಯತೆ ಇದೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ನಾಮ ಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದೆ. ಆದ್ದರಿಂದ, ಇಂದೇ ಉಪ ರಾಷ್ಟ್ರಪತಿ ಅಭ್ಯರ್ಥಿ ಹೆಸರು ಅಂತಿಮಗೊಳ್ಳಲಿದೆ. ಸದ್ಯ ಉಪರಾಷ್ಟ್ರಪತಿಯಾಗಿರುವ ವೆಂಕಯ್ಯ ನಾಯ್ಡು ಅಧಿಕಾರವದಿ ಆಗಸ್ಟ್ 10ಕ್ಕೆ ಅಂತ್ಯಗೊಳ್ಳಲಿದೆ. ಆಗಸ್ಟ್ 11 ರಂದು ನೂತನ ಉಪ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಡೆ ವಿಪಕ್ಷಗಳು ಕೂಡ ಶೀಘ್ರದಲ್ಲೇ ಉಪ ರಾಷ್ಟ್ರಪತಿ ಅಭ್ಯರ್ಥಿ ಹೆಸರನ್ನು ಘೋಷಿಸಲಿದೆ.

ಚುನಾವಣಾ ಆಯೋಗ ಜೂನ್ 29ಕ್ಕೆ ಉಪರಾಷ್ಟ್ರಪತಿ ಚುನಾವಣಾ ದಿನಾಂಕ ಘೋಷಿಸಿದೆ. ಇದರ ಬೆನ್ನಲ್ಲೇ ಎನ್‌ಡಿಎ, ಯುಪಿಎ ಕೂಟದಲ್ಲಿ ಬಿರುಸಿನ ಚಟುವಟಿಕೆ ಆರಂಭಗೊಂಡಿದೆ. ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆದಿವಾಸಿ ಸಮುದಾಯದ ನಾಯಕಿ ದ್ರೌಪದಿ ಮರ್ಮು ಹೆಸರನ್ನು ನಾಮಪತ್ರ ಸಲ್ಲಿಸಿದ್ದಾರೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ದ್ರೌಪದಿ ಮುರ್ಮು ವಿರುದ್ಧ ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಮಳೆ ಪರಿಸ್ಥಿತಿ: ಸೀಎಂ ಜೊತೆ ಜಿಲ್ಲಾಧಿಕಾರಿ ವಿಡಿಯೋ ಸಂವಾದ

0

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ ಹತ್ತಾರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಜನಜೀವನ ಅಸ್ತವ್ಯಸ್ತವಾಗಿದ್ದು, ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿರುವ ಸಂತ್ರಸ್ಥ ಕುಟುಂಬಗಳಿಗೆ ತಕ್ಷಣದ ಕ್ರಮವಾಗಿ ಅಗತ್ಯ ನೆರವನ್ನು ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಅವರು ರಾಜ್ಯದ ಆಯ್ದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಅತಿಹೆಚ್ಚು ಮಳೆಯಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಕುರಿತು ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಭಾಗಶಃ ಅಥವಾ ಪೂರ್ಣಪ್ರಮಾಣದಲ್ಲಿ ಮನೆಯನ್ನು ಕಳೆದುಕೊಂಡವರನ್ನು ಗುರುತಿಸಿ, ತಕ್ಷಣದಲ್ಲಿ ರೂ.10,000/-ಗಳ ಸಹಾಯಧನವನ್ನು ನೀಡುವಂತೆ ಸೂಚಿಸಿದ ಅವರು, ಉಳಿದಂತೆ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಸರ್ಕಾರಿ ಸ್ವಾಮ್ಯದ ಶಾಲೆ, ಅಂಗನವಾಡಿ ಹಾಗೂ ಮತ್ತಿತರ ಇಲಾಖಾ ಕಟ್ಟಡಗಳು, ರಸ್ತೆ, ಸೇತುವೆ, ಜಲಾಶಯಗಳ ತುರ್ತು ದುರಸ್ತಿಗೆ ವಿಳಂಬಕ್ಕೆ ಅವಕಾಶವಿಲ್ಲದಂತೆ ಕ್ರಮ ವಹಿಸುವುದು. ಅಂತೆಯೇ ಆಗಿರಬಹುದಾದ ಬೆಳೆಹಾನಿಯ ಸಮೀಕ್ಷೆ ನಡೆಸಿ, ಖಚಿತವಾದ ವರದಿಯನ್ನು ಸಂಗ್ರಹಿಸಿ ಕಾಲಕಾಲಕ್ಕೆ ಸಲ್ಲಿಸುವಂತೆ, ಅಗತ್ಯವಿರುವಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಸಂಪರ್ಕಿಸುವಂತೆ ಹಾಗೂ ಶಾಶ್ವತ ಪರಿಹಾರ ಕಾರ್ಯ ಕೈಗೊಳ್ಳಲು ಕ್ರಿಯಾ ಯೋಜನೆಯನ್ನು ತಯಾರಿಸಿ ಸಲ್ಲಿಸುವಂತೆಯೂ ಅವರು ಸೂಚಿಸಿದರು.

ಸಂವಾದದಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಮಾನ್ಯ ಮುಖ್ಯಮಂತ್ರಿಗಳಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗಳ ಸಮಗ್ರ ಮಾಹಿತಿ ನೀಡಿ, ಜುಲೈ ಮಾಹೆಯಲ್ಲಿ ನಿಗಧಿಪಡಿಸಿದ ಕಾಲಾವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಆಗಿರುವ ಮಳೆಯಿಂದಾಗಿ ಆಸ್ತಿ ಹಾಗೂ ಬೆಳೆಹಾನಿ ಉಂಟಾಗಿದ್ದು, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯ ತುಂಗಾ ಮತ್ತು ಭದ್ರಾ ಜಲಾಶಯಗಳಿಗೆ ಬರುತ್ತಿರುವ ನೀರಿನ ಒಳಹರಿವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಆದ್ದರಿಂದ ಭದ್ರಾ ಜಲಾಶಯದಿಂದ ಪ್ರತಿದಿನ 45,000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಈವರೆಗೆ ಸುಮಾರು 254ಮನೆಗಳು ಭಾಗಶಃ ಹಾನಿ, 97ಮನೆಗಳು ತೀವ್ರಹಾನಿ, ೩೦ಮನೆಗಳು ಪೂರ್ಣ ಪ್ರಮಾಣದ ಮನೆಗಳು ಸೇರಿದಂತೆ ಒಟ್ಟು 281ಮನೆಗಳು ಹಾನಿಗೊಳಗಾಗಿವೆ.

33ಕೊಟ್ಟಿಗೆಗಳು ನಾಶಗೊಂಡಿವೆ. ಅಲ್ಲದೇ ಎರಡು ಮಾವನ ಜೀವಹಾನಿ ಹಾಗೂ 08 ಜಾನುವಾರು ಹಾನಿಯ ಪ್ರಕರಣಗಳನ್ನು ಗುರುತಿಸಲಾಗಿದ್ದು, ಈ ಎಲ್ಲಾ ಘಟನಾವಳಿಗೆ ಸಂಬಂಧಿಸಿದಂತೆ ಅಗತ್ಯ ಪರಿಹಾರ ಕ್ರಮಗಳನ್ನು ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾಗಿದೆ ಎಂದರು.

ಭದ್ರಾವತಿ ತಾಲೂಕಿನಲ್ಲಿ 03ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, 400 ಮಂದಿ ನಿರಾಶ್ರಿತರಿಗೆ ವಸತಿ ಅವಕಾಶ ಕಲ್ಪಿಸಲಾಗಿದೆ ಎಂದವರು ತಿಳಿಸಿದರು.

ಜಿಲ್ಲೆಯ ಬಹುಭಾಗಗಳಲ್ಲಿ ಭತ್ತದ ಗದ್ದೆಗಳು, ಮೆಕ್ಕೆಜೋಳ ಹಾಗೂ ಮತ್ತಿತರ ಬೆಳೆಗಳ ಜಮೀನುಗಳು ಜಲಾವೃತವಾಗಿವೆ. ಮಳೆ ಇಳಿಮುಖವಾಗುತ್ತಿದ್ದಂತೆಯೇ ಜಂಟಿ ಸಮೀಕ್ಷೆ ನಡೆಸಿ ವರದಿ ತಯಾರಿಸಿ ಸಲ್ಲಿಸಲಾಗುವುದು ಎಂದ ಅವರು, 258 ಕಿ.ಮೀ. ಗ್ರಾಮೀಣ ರಸ್ತೆ ಮಳೆಯಿಂದ ಹಾನಿಗೊಳಗಾಗಿರುವುದನ್ನು ಈವರೆಗೆ ಗುರುತಿಸಲಾಗಿದೆ.

ಶಿಕಾರಿಪುರ ಹೊರತುಪಡಿಸಿ ಉಳಿದೆಲ್ಲಾ ತಾಲೂಕುಗಳು ಒಳಗೊಂಡಂತೆ ಒಟ್ಟು 19 ಮೋರಿ, ಸೇತುವೆಗಳು ಹಾನಿಯಾಗಿದ್ದು, ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

546 ವಿದ್ಯುತ್ ಕಂಬಗಳು, 102 ಶಾಲಾ ಕಟ್ಟಡಗಳು,53ಅಂಗನವಾಡಿ ಕಟ್ಟಡಗಳು, 13 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾನಿಗೊಳಗಾಗಿವೆ. ಅಲ್ಲದೇ ಸೊರಬ ತಾಲೂಕಿನ 50 ಕೆರೆಗಳು, ಶಿಕಾರಿಪುರ ತಾಲೂಕಿನ 18 ಕೆರೆಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 91 ಕೆರೆಗಳು ಹಾನಿಗೊಳಗಾಗಿವೆ.

ತೀವ್ರ ಪ್ರಮಾಣದಲ್ಲಿ ಹಾನಿಗೊಳಗಾಗಿರುವ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಕಲ್ಪಿಸಲಾಗಿದೆ. ಆಗುಂಬೆ ಘಾಟಿ-ಶಿವಮೊಗ್ಗ-ತೀರ್ಥಹಳ್ಳಿ-ಆಗುಂಬೆ-ಉಡುಪಿ-ಮಂಗಳೂರು ಮಾರ್ಗವನ್ನು ಭೂಕುಸಿತದ ಪರಿಣಾಮವಾಗಿ ವಾಹನ ಸಂಚಾರ ನಿಷೇಧಿಸಿದ್ದು, ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ ಎಂದವರು ತಿಳಿಸಿದರು.

ಮಳೆ ಮುಂದುವರೆದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಅಲ್ಲದೆ ತುರ್ತು ಕ್ರಮಗಳಿಗಾಗಿ ಅಗತ್ಯ ಸಿಬ್ಬಂಧಿಗಳನ್ನು ಮೇಲುಸ್ತುವಾರಿಗಾಗಿ ನಿಯೋಜಿಸಲಾಗಿದೆ ಎಂದರು.

ಪ್ರಸಕ್ತ ಮುಂಗಾರಿನ ಕೃಷಿ ಚಟುವಟಿಕೆಗಳಿಗೆ ಅಗತ್ಯವಾಗಿರುವ ರಸಗೊಬ್ಬರ ದಾಸ್ತಾನಿದ್ದು, ಎಲ್ಲಾ ರೈತರಿಗೂ ಸಕಾಲದಲ್ಲಿ ವಿತರಣೆಯಾಗುವಂತೆ ಕ್ರಮವಹಿಸಲಾಗಿದೆ. ಅಲ್ಲದೇ ಇನ್ನಷ್ಟು ರಸಗೊಬ್ಬರ ಜಿಲ್ಲೆಗೆ ಬರಲಿದ್ದು, ಒಂದೆರೆಡು ದಿನಗಳಲ್ಲಿ ರೈತರ ಅಗತ್ಯಗಳಿಗೆ ಸಕಾಲದಲ್ಲಿ ಪೂರೈಕೆಯಾಗಲಿದೆ. ಅಲ್ಲದೇ ಕೃಷಿಕರ ಅಹವಾಲುಗಳನ್ನು ಆಲಿಸಲು ಕೃಷಿ ಸಹಾಯವಾಣಿಯನ್ನು ಆರಂಭಿಸಲು ಜಂಟಿಕೃಷಿ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಅಗತ್ಯವಿರುವ ತಾಲೂಕುಗಳಲ್ಲಿ ತುರ್ತು ಪರಿಹಾರ ಕಾರ್ಯಗಳಿಗಾಗಿ ಅಗತ್ಯ ಅನುದಾನವನ್ನು ಬಿಡುಗಡೆಗೊಳಿಸಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಅಪರ ಜಿಲ್ಲಾಧಿಕಾರಿ ಡಾ|| ನಾಗೇಂದ್ರ ಎಫ್.ಹೊನ್ನಳ್ಳಿ, ಜಿಲ್ಲಾ ಯೋಜನಾಧಿಕಾರಿ ಮೂಕಪ್ಪ ಕರಭೀಮಣ್ಣನವರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಧರ್, ಜಂಟಿ ಕೃಷಿ ನಿದೇಶಕಿ ಶ್ರೀಮತಿ ಪೂರ್ಣಿಮಾ ಜಿ.ಸಿ., ಪಶುಪಾಲನಾ ಇಲಾಖೆಯ ಜಂಟಿ ನಿರ್ದೇಶಕ ಡಾ|| ಶಿವಯೋಗಿ ಯಲಿ, ಚನ್ನಪ್ಪ, ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳೊಂದಿಗಿನ ವಿಡಿಯೋ ಸಂವಾದದಲ್ಲಿ ಉಪಸ್ಥಿತರಿದ್ದರು

ಭಾರತದ ವಿದ್ಯಾರ್ಥಿಗಳೀಗ ಚೀನಾದಲ್ಲಿ ಅಧ್ಯಯನ ಮುಂದುವರೆಸಬಹುದು

0

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ವೀಸಾ ನಿರ್ಬಂಧ ಹೇರಲಾಗಿತ್ತು. ಹಾಗಾಗಿ ವಿದ್ಯಾರ್ಥಿಗಳು ಭಾರತದಲ್ಲೇ ಉಳಿದಿದ್ದು ಅವರನ್ನು ಚೀನಾಕ್ಕೆ ಕರೆಸಿಕೊಳ್ಳುವ ಮತ್ತು ಅವರು ವ್ಯಾಸಂಗ ಮಾಡುತ್ತಿದ್ದ ಕಾಲೇಜುಗಳಲ್ಲಿ ಪುನಃ ದಾಖಲಾತಿ ಒದಗಿಸುವ ನಿಟ್ಟಿನಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ಮಾಡಲಾಗತ್ತಿದೆ ಎಂದು ಚೀನಾ ಹೇಳಿದೆ.

ಭಾರತದ ಸುಮಾರು 23,000 ವಿದ್ಯಾರ್ಥಿಗಳು ಚೀನಾದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅವರಲ್ಲಿ ಹಲವರು ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದು, ಯಾರೆಲ್ಲಾ ಚೀನಾದಲ್ಲಿ ವ್ಯಾಸಂಗ ಮುಂದುವರೆಸಲು ಇಚ್ಛಿಸುತ್ತಾರೋ ಅಂತಹ ವಿದ್ಯಾರ್ಥಿಗಳ ಪಟ್ಟಿಯನ್ನು ಭಾರತ ಈಗಾಗಲೇ ಚೀನಾಕ್ಕೆ ನೀಡಿದೆ ಎಂದು ಹೇಳಲಾಗಿದೆ.

ಚೀನಾ ಮತ್ತು ಭಾರತದ ಸಂಬಂಧಪಟ್ಟ ಇಲಾಖೆಗಳು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಚೀನಾದಲ್ಲಿ ವ್ಯಾಸಂಗ ಮುಂದುವರೆಸಲು ಇಚ್ಛಿಸುವ ಭಾರತೀಯ ವಿದ್ಯಾರ್ಥಿಗಳ ಮೊದಲ ತಂಡವನ್ನು ಆದಷ್ಟು ಬೇಗ ಕರೆಸಿಕೊಳ್ಳುವ ಪ್ರಯತ್ನ ನಡೆದಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿಂಗ್‌ ಅವರು ತಿಳಿಸಿದ್ದಾರೆ.

ಸರ್ಕಾರಿ ಆಫೀಸುಗಳಲ್ಲಿ ಫೋಟೋ ವಿಡಿಯೊ ನಿರ್ಬಂಧ ಆದೇಶ ವಾಪಸ್

0

ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನು ವಾಪಸ್ ಪಡೆದಿದೆ.

ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ರಾಜ್ಯ ಸರ್ಕಾರವು ಶುಕ್ರವಾರ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ಅಥವಾ ವಿಡಿಯೋ ಚಿತ್ರೀಕರಿಸದಂತೆ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಡರಾತ್ರಿ ಈ ಆದೇಶವನ್ನು ವಾಪಸ್ ಪಡೆದಿದೆ.

ಕೌಶಲ್ಯ ತರಬೇತಿಯಿಂದ ಮಹಿಳೆಯರ ಕೌಟುಂಬಿಕ ಆರ್ಥಿಕತೆ ವರ್ಧಿಸುತ್ತದೆ

0

ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸಲು ಕೌಶಲ್ಯ ತರಬೇತಿಯ ಜೊತೆಗೆ ಉದ್ಯಮಶೀಲತೆ ತಿಳುವಳಿಕೆ ಪಡೆದಲ್ಲಿ ಸ್ವಯಂ ಉದ್ಯಮ ಸ್ಥಾಪಿಸಿ ತಮ್ಮ ಕುಟುಂಬದ ಆರ್ಥಿಕ ಮಟ್ಟವನ್ನು ಸುಧಾರಿಸಬಹುದು ಎಂದು ಜನ ಶಿಕ್ಷಣ ಸಂಸ್ಥಾನದ ನಿರ್ದೇಶಕಿ ಬಿ.ವೈ ಅರುಣಾದೇವಿ ನುಡಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್),ಧಾರವಾಡ ಮತ್ತು ಜನ ಶಿಕ್ಷಣ ಸಂಸ್ಥಾನ ಶಿವಮೊಗ್ಗ, ಇವರ ಸಂಯುಕ್ತಾಶ್ರಯದಲ್ಲಿ ಜನ ಶಿಕ್ಷಣ ಸಂಸ್ಥಾನದ ಸಭಾಂಗಣದಲ್ಲಿ ಜು.12 ರಂದು ಮಹಿಳೆಯರಿಗಾಗಿ ಏರ್ಪಡಿಸಲಾಗಿದ್ದ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು 4 ಗೋಡೆಗಳ ಚೌಕಟ್ಟಿಗೆ ಸೀಮಿತವಾಗಿರದೆ ಈ ತರಹದ ತರಬೇತಿಗಳಲ್ಲಿ ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿ ತರಬೇತಿಯಲ್ಲಿ ಬೋಧಿಸುವ ವಿಷಯಗಳನ್ನು ತಿಳಿದುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ಸರ್ಕಾದಿಂದ ಮಹಿಳಾ ಉದ್ಯಮಿಗಳಿಗೆ ಅನೇಕ ರೀತಿಯ ಸಹಾಯಧನದ ಯೋಜನೆಗಳು ಲಭ್ಯವಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಲೀಡ್ ಬ್ಯಾಂಕ್‍ನ ಜಿಲ್ಲಾ ವಿಭಾಗೀಯ ಮಾರ್ಗದರ್ಶಿ ವ್ಯವಸ್ಥಾಪಕ ಯತೀಶ್ ಎಂ.ಡಿ ಮಾತನಾಡಿ, ಲೀಡ್ ಬ್ಯಾಂಕ್ ಕಾರ್ಯವೈಖರಿ, ಉದ್ಯಮ ಪ್ರಾರಂಭಿಸುವವರಿಗೆ ಲಭ್ಯವಿರುವ ಸರ್ಕಾರದ ವಿವಿಧ ಯೋಜನೆಗಳಾದ ಮುದ್ರಾ ಹಾಗೂ ಇತರೆ ಯೋಜನೆಗಳ ಕುರಿತು ಮಾಹಿತಿ, ಬ್ಯಾಂಕಿಂಗ್ ವ್ಯವಸ್ಥೆಯ ನೀತಿ ನಿಯಮಗಳು, ಸಾಲ ಯೋಜನೆಗಳು, ಉತ್ತಮ ಯೋಜನಾ ವರದಿಗಳ ಕುರಿತು ಹಾಗೂ ಉದ್ದಿಮೆದಾರರಾಗುವ ಹಂತದಲ್ಲಿ ಎದುರಿಸಬೇಕಾದ ಪ್ರಮುಖ ವಿಚಾರಗಳ ಬಗ್ಗೆ ತಿಳಿಸಿ ಸಲಹೆಗಳನ್ನು ನೀಡಿ ದೇಶದ ಆರ್ಥಿಕತೆಯಲ್ಲಿ ಉದ್ದಿಮದಾರರ ಪಾತ್ರ ಹಾಗೂ ಜವಾಬ್ದಾರಿಗಳನ್ನು ತಿಳಿಸುವ ಮೂಲಕ ಶಿಬಿರಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ ಆರ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಉದ್ಯಮವನ್ನು ಸ್ಥಾಪಿಸುವದಷ್ಟೇ ಅಲ್ಲದೇ ಉದ್ಯಮದ ಕುರಿತು ಸಂಪೂರ್ಣವಾದ ಜ್ಞಾನ ಹೊಂದುವುದು ಅತ್ಯಂತ ಮುಖ್ಯವಾಗಿರುತ್ತದೆ. ಅಲ್ಲದೆ ಉದ್ಯಮದ ಮಾರುಕಟ್ಟೆ ವ್ಯಾಪ್ತಿ, ಹಣಕಾಸಿನ ಸೌಲಭ್ಯಗಳು. ಸಂಪನ್ಮೂಲಗಳ ಸರಿಯಾದ ಬಳಕೆ ಹಾಗೂ ಕಾಲಕ್ಕೆ ತಕ್ಕಂತೆ ತಾಂತ್ರಿಕ ಉನ್ನತೀಕರಣಗೂಂಡಲ್ಲಿ ಖಂಡಿತವಾಗಿಯೂ ಯಶಸ್ವೀ ಉದ್ಯಮದಾರರಾಗಲು ಸಾಧ್ಯ ಎಂದು ಸಲಹೆ ನೀಡಿದ ಅವರು ಜಿಲ್ಲಾ ಕೈಗಾರಿಕಾ ಕೇಂದ್ರಲ್ಲಿ ಸ್ವಯಂ ಉದ್ಯಮ ಮಾಡಲು ಉತ್ತೇಜಿಸುವ ಯೋಜನೆಗಳಾದ ಪಿಎಂಇಜಿಪಿ, ಇತರೆ ಯೋಜನೆಗಳ ಕುರಿತು ಮಾಹಿತಿ ತಿಳಿಸಿದರು.

ತರಬೇತುದಾರ ರಮೇಶ ಸಿ.ಎಲ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಉದ್ಯಮವನ್ನ ಯಾವ ರೀತಿಯಲ್ಲಿ ಪ್ರಾರಂಭಿಸಬೇಕು. ಉದ್ಯಮ ಆರಂಭಿಸಲು ಇರುವಂತಹ ಅವಕಾಶಗಳನ್ನ ಗುರುತಿಸುವುದು ಹೇಗೆ, ಸವಾಲುಗಳನ್ನು ಎದುರಿಸುವ ಬಗೆ, ಸರ್ಕಾರಿ ಯೋಜನೆಗಳ ಮತ್ತು ವಿವಿಧ ಇಲಾಖೆಗಳ ಕುರಿತು ಮಾಹಿತಿ ನೀಡುವುದರ ಜೊತೆಗೆ ಯಾವ ರೀತಿಯಲ್ಲಿ ಪಡೆದುಕೊಳ್ಳುವ ಹಂತಗಳ ಬಗ್ಗೆ ತಿಳಿಸಿದರು.

ದಾವಣಗೆರೆ ಸಿಡಾಕ್ ಜಂಟಿ ನಿರ್ದೇಶಕ ಆರ್.ಪಿ. ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜನ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಸುಮನ ಎಂ. ಸ್ವಾಗತಿಸಿದರು.

ಶಿವಮೊಗ್ಗ ಸಿಡಾಕ್‍ನ ತರಬೇತುದಾರ ವಿನಯ ನಿರೂಪಿಸಿದರು.

ರಾಜ್ಯ ಗೃಹ ಸಚಿವರ ಹೇಳಿಕೆಗಳ ಬಗ್ಗೆ ಸಿದ್ಧರಾಮಯ್ಯ ಟೀಕೆ

0

ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಕಿಡಿಕಾರಿದ್ದಾರೆ.

ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಗಲಭೆಯಲ್ಲಿ ಗಾಯಗೊಂಡವರು ಮತ್ತು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ.

ಘಟನೆಯ ಸುದ್ದಿ ಗೊತ್ತಾದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠರ ಜೊತೆ ಮಾತನಾಡಿ ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ನಡೆದಿದ್ದ ಗಲಭೆ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ರಸ್ತೆ ನಿರ್ಮಾಣಕ್ಕೂ ಈಗ ಪ್ಲಾಸ್ಟಿಕ್ ಬಳಕೆ

0

ಪ್ಲಾಸ್ಟಿಕ್ ಮುಕ್ತ ದೇಶ ಮಾಡಲು ಎಲ್ಲೆಡೆ ಪ್ಲಾಸ್ಟಿಕ್​ ಬ್ಯಾನ್​ ಮಾಡಲಾಗಿದೆ. ವಿಶೇಷ ಎಂದರೆ, ಬೆಂಗಳೂರಲ್ಲಿ ಮರುಬಳಕೆಯ ಪ್ಲಾಸ್ಟಿಕ್ ಬಳಸಿ ರಸ್ತೆಯನ್ನೇ ನಿರ್ಮಾಣ ಮಾಡಲಾಗಿದೆ. ಪ್ಲಾಸ್ಟಿಕ್ ತ್ಯಾಜ್ಯವನ್ನು ಸದುಪಯೋಗ ಪಡಿಸಿಕೊಂಡಿದ್ದು, ನಗರದಲ್ಲಿ ಟ್ರಾಫಿಕ್​ ಸಮಸ್ಯೆ ಕಡಿಮೆ ಮಾಡಲು ಸಹಕಾರಿಯಾಗಿದೆ.

ಇಕೋವರ್ಲ್ಡ್ ಮತ್ತು ಹೊರ ವರ್ತುಲ ರಸ್ತೆ ಅನ್ನು ಸಂಪರ್ಕಿಸುವ ಹೊಸ ಕಾಂಕ್ರೀಟ್ ರಸ್ತೆಯನ್ನು ಸಂಪೂರ್ಣವಾಗಿ 100% ಮರುಬಳಕೆಯ ಪ್ಲಾಸ್ಟಿಕ್‌ನಿಂದ ನಿರ್ಮಿಸಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಾಮಾಜಿಕ ಉದ್ಯಮ ಮತ್ತು ORR ಕಂಪನಿಗಳ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೆತ್ತಿಕೊಂಡಿದೆ. ಇದನ್ನು PotHoleRaja ‘GridMats’ ಎಂದು ಕರೆಯಲಾಗುತ್ತಿದ್ದು,ಇದು ಪೇಟೆಂಟ್ ಪಡೆದ ಉತ್ಪನ್ನವಾಗಿದ್ದು, ಪರಿಸರ ಸ್ನೇಹಿ ಹಾಗೂ ದೀರ್ಘಕಾಲ ಬಾಳಿಕೆ ಬರುವ ಮತ್ತು ಪಾದಚಾರಿ ಮಾರ್ಗಗಳು ಮತ್ತು ರಸ್ತೆಗಳನ್ನು ನಿರ್ಮಿಸಲು 100% ಮರುಬಳಕೆಯ ಪ್ಲಾಸ್ಟಿಕ್ ತ್ಯಾಜ್ಯದಿಂದ ಸಂಪೂರ್ಣವಾಗಿ ರಚಿಸಲಾಗಿದೆ ಎಂದು ಕಂಪನಿಯು ವಿವರಿಸಿದೆ.

ರೈಲ್ವೆ ಪ್ರಯಾಣದಲ್ಲಿ ಆಹಾರ ಪದಾರ್ಥಗಳ ಹಣಕ್ಕೆ ಡಿಜಿಟಲ್ ವರ್ಗಾವಣೆ ಸೌಲಭ್ಯ

0

ರೈಲಿನಲ್ಲಿ ಪ್ರಯಾಣಿಸುವಾಗ ಆಹಾರ ಪದಾರ್ಥಗಳ ಮೇಲೆ ಇರುವ ಬೆಲೆಗಿಂತ ಹೆಚ್ಚುವರಿ ಬೆಲೆಯನ್ನು ಮಾರಾಟಗಾರರು ಕೇಳುತ್ತಾರೆ. ಇದನ್ನು ಎಲ್ಲಾ ಪ್ರಯಾಣಿಕರ ಅನುಭವಕ್ಕೆ ಬಂದಿರುತ್ತದೆ.

ಇಂತಹ ಘಟನೆಗಳ ಬಗ್ಗೆ ಹಲವು ರೈಲು ಪ್ರಯಾಣಿಕರು ಕೂಡ ಇಲಾಖೆಗೆ ದೂರು ನೀಡಿದ್ದರು. ಕೊನೆಗೂ ಇಂತಹ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹೆಚ್ಚುವರಿ ಹಣ ಪಡೆಯುವುದಕ್ಕೆ ತಡೆ ಹಾಕಲಾಗಿದೆ.ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮವು ಈ ಮಾರಾಟಗಾರರನ್ನು ನಿಯಂತ್ರಿಸಲು ಸಿದ್ಧತೆಗಳನ್ನು ಮಾಡಿದೆ.

IRCTC ಮೆನು ಕಾರ್ಡ್‌ನಲ್ಲಿಯೇ QR ಕೋಡ್ ಅನ್ನು ಮುದ್ರಿಸಿದೆ. ಈ ಕ್ರಮದಿಂದಾಗಿ ಆಹಾರ ಪದಾರ್ಥ ಮಾರಾಟಗಾರರು ಹೆಚ್ಚಿನ ಶುಲ್ಕ ವಿಧಿಸಲು ಆಗುವುದಿಲ್ಲ.

ಕ್ರಮೇಣ, ಈ ವ್ಯವಸ್ಥೆಯನ್ನು IRCTC ಅಡುಗೆ ಸೌಲಭ್ಯವನ್ನು ಹೊಂದಿರುವ ಎಲ್ಲಾ ರೈಲುಗಳಲ್ಲಿ ಜಾರಿಗೊಳಿಸಲು ನಿರ್ಧರಿಸಿದೆ. ರಾಜಧಾನಿ, ಶತಾಬ್ದಿ, ತೇಜಸ್‌ನಂತಹ ರೈಲುಗಳಲ್ಲಿ ಟಿಕೆಟ್ ಬುಕ್ಕಿಂಕ್ ಜೊತೆಗೆಯೇ ಆಹಾರದ ಆಯ್ಕೆ ಇದೆ. ಆದರೆ ಅನೇಕ ರೈಲುಗಳಲ್ಲಿ ಟಿಕೆಟ್ ಜೊತೆಗೆ ಆಹಾರವನ್ನು ಕಾಯ್ದಿರಿಸಲು ಅವಕಾಶವಿಲ್ಲ. ಆದರೆ, ಅಂತಹ ರೈಲುಗಳಲ್ಲಿ ಊಟದ ಸೇವೆ ನೀಡುವ ಅಡುಗೆ ಬೋಗಿಗಳನ್ನು( ಪ್ಯಾಂಟ್ರಿ ಕಾರ್) ಹೊಂದಿರುತ್ತವೆ.

ಅಡುಗೆ ಬೋಗಿ ಹೊಂದಿರದ ಮೂರನೇ ವಿಧದ ರೈಲುಗಳಿವೆ. ಇವುಗಳಲ್ಲಿ IRCTC ಮಾರಾಟಗಾರರು ಮೂಲ ಅಡುಗೆಮನೆಯಿಂದ ಆಹಾರವನ್ನು ಮಾರಾಟ ಮಾಡುತ್ತಾರೆ. ಈ ಮಾರಾಟಗಾರರು ಕೆಲವೊಮ್ಮೆ ಪ್ರಯಾಣಿಕರಿಂದ ಹೆಚ್ಚು ಶುಲ್ಕ ಪಡೆಯುತ್ತಾರೆ. ಪ್ರಯಾಣಿಕರು ಹೆಚ್ಚಾಗಿ ನಗದು ಮೂಲಕ ಪಾವತಿಸುತ್ತಾರೆ. ಇದು ಅಧಿಕ ಶುಲ್ಕ ವಿಧಿಸುವ ಸಾಧ್ಯತೆಗೆ ಕಾರಣವಾಗುತ್ತದೆ ಎಂದು ಅಧಿಕಾರಿಗಳು ತಿಳಿಸುತ್ತಾರೆ.