Monday, March 16, 2026
Monday, March 16, 2026
Home Blog Page 1517

ಜಮೀನು ಸ್ವಾಧೀನದ ಪರಿಹಾರ90 ದಿನದೊಳಗೆ ನೀಡಲು ಚಿಂತನೆ

0

ಸರ್ಕಾರದ ಯೋಜನೆಗಳಿಗೆ, ಕೈಗಾರಿಕೆಗಾಗಿ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ.

ಆದರೆ, ಭೂ ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ರೈತರು ಪರಿಹಾರ ಪಡೆದುಕೊಳ್ಳುವ ಪ್ರಕರಣ ಸಾವಿರಾರು ಇವೆ. ಇನ್ನು ಮುಂದೆ ಈ ರೀತಿ ನಡೆಯಕೂಡದು ಎಂದು ಸರ್ಕಾರ ಅಧಿಕಾರಿಗಳಿಗೆ ಎಚ್ಚರಿಸಿದೆ.

ಕೆಲವು ಕಡೆ ಜಮೀನನ್ನು ಸ್ವಾಧೀನಪಡಿಸಿಕೊಂಡರೂ ರೈತರಿಗೆ ಪರಿಹಾರ ನೀಡದೆ ವಿಳಂಬ ಮಾಡಲಾಗಿದೆ ಎಂಬ ಆರೋಪವಿದೆ‌. ದಾಖಲೆಗಳು ಸರಿ ಇದ್ದರೆ, 90 ದಿನದೊಳಗೆ ಪರಿಹಾರ ನೀಡಲು ಇರುವ ಸಮಸ್ಯೆಯಾದರೂ ಏನು ಎಂದು ಇಲಾಖೆಯ ಪ್ರಗತಿಪರಿಶೀಲನಾ ಸಭೆಯಲ್ಲಿ ಪ್ರಶ್ನಿಸಿದ್ದಾರೆ.

ರೈತರ ಭೂಕಂದಾಯ ದಾಖಲೆಗಳು ಕಾನೂನಾತ್ಮಕವಾಗಿದ್ದರೆ, ಕೆಐಎಡಿಬಿಯಿಂದ ಸ್ವಾಧೀನಮಾಡಿಕೊಂಡ ಜಮೀನುಗಳಿಗೆ ಮೂರು ತಿಂಗಳಲ್ಲಿ ಪರಿಹಾರ ನೀಡಬೇಕು ಎಂದು ಬೃಹತ್ ಮತ್ತು ಮಧ್ಯಮ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಆಗಸ್ಟ್ 15 ರೊಳಗೆ ವಾಣಿಜ್ಯ ಕೈಗಾರಿಕಾ ಇಲಾಖೆ ವ್ಯಾಪ್ತಿಗೆ ಒಳಪಡುವ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕಚೇರಿಗಳನ್ನು ಇ-ಕಚೇರಿ ವ್ಯವಸ್ಥೆಗಳನ್ನಾಗಿ ಪರಿವರ್ತನೆ ಮಾಡಬೇಕು. ಒಂದು ವೇಳೆ ಆಗಸ್ಟ್ 15ರೊಳಗೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಇ ಕಚೇರಿ ವ್ಯವಸ್ಥೆಗಳನ್ನಾಗಿ ಪರಿವರ್ತನೆ ಮಾಡದೇ ಇದ್ದರೆ ಮುಖ್ಯ ಕಚೇರಿಗೆ ಬರುವ ಭೌತಿಕ ಕಡತ ಸ್ವೀಕಾರ ಮಾಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.

ಕಂಪ್ಯೂಟರ್ ಇಲ್ಲ, ಸಿಬ್ಬಂದಿ ಇಲ್ಲ, ಕಚೇರಿ ಇಲ್ಲ ಇಂತಹ ಸಬೂಬುಗಳನ್ನು ಹೇಳಬಾರದು. ಇದಕ್ಕೆ ಬೇಕಾದ ಪೂರ್ವ ಸಿದ್ಧತೆಗಳನ್ನು ಇಂದಿನಿಂದಲೇ ತಯಾರು ಮಾಡಿಕೊಳ್ಳಿ. ಇಲ್ಲದಿದ್ದರೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಿಂದ ಬರುವ ಭೌತಿಕ ಕಡತಗಳನ್ನು ಹಿಂದಕ್ಕೆ ಕಳುಹಿಸುವುದಾಗಿ ಅಧಿಕಾರಿಗಳನ್ನು ಸಚಿವರು ಎಚ್ಚರಿಸಿದರು.

ಸಣ್ಣಪುಟ್ಟ ದೋಷಗಳನ್ನು ಮುಂದಿಟ್ಟುಕೊಂಡು ಕಡತ ವಿಲೇವಾರಿಯನ್ನು ವಿಳಂಬ ಮಾಡಬೇಡಿ. ವಿಳಂಬ ಮಾಡಿದರೆ ಉದ್ದಿಮೆದಾರರು ಕರ್ನಾಟಕಕ್ಕೆ ಬರಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದರು.
ಕೆಐಎಡಿಬಿಯಿಂದ ಜಮೀನು ಪಡೆದುಕೊಂಡು ಕೈಗಾರಿಕೆಗಳನ್ನು ಸ್ಥಾಪನೆ ಮಾಡದೇ ಹಾಗೆ ಉಳಿಸಿಕೊಂಡಿದ್ದಾರೆ. ಅಂತಹ ಜಮೀನನ್ನು ತಕ್ಷಣವೇ ಗುರುತಿಸಬೇಕು. ಬಳಕೆಯಾಗದ ಭೂಮಿಯನ್ನು ನಾವು ಮುಲಾಜಿಲ್ಲದೇ ಹಿಂಪಡೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಇನ್ನುಮುಂದೆ ಸರ್ಕಾರಿ ಶಾಲೆಗಳ ಮಕ್ಕಳಿಗೂ ಬಸ್ ಸೌಲಭ್ಯ- ಸಚಿವ ನಾಗೇಶ್

0

ಖಾಸಗಿ ಶಾಲೆಗಳಂತೆ ಇನ್ನು ಮುಂದೆ ಸರಕಾರಿ ಶಾಲೆ ಮಕ್ಕಳು ಕೂಡ ವಾಹನಗಳಲ್ಲಿ ಶಾಲೆಗೆ ಬರಲಿದ್ದಾರೆ. ಸರಕಾರಿ ಶಾಲಾ ಮಕ್ಕಳನ್ನು ಮನೆಯಿಂದ ಶಾಲೆಗೆ ಕರೆತರಲು ಶಾಸಕರ ಅನುದಾನದಲ್ಲಿ ವಾಹನ ಖರೀದಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಆರಂಭಿಕ ಹಂತದಲ್ಲಿ ರಾಜ್ಯದ ಸುಮಾರು 200 ಶಾಲೆಗಳಲ್ಲಿ ಈ ಸೌಲಭ್ಯ ಕಲ್ಪಿಸಲು ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ತಿಳಿದು ಬಂದಿದೆ.

ಗ್ರಾ. ಪಂ. ಮಟ್ಟದ ಮಾದರಿ ಶಾಲೆಗಳಿಗೆ ಶಾಸಕರ ಅನುದಾನದಲ್ಲಿ ವಾಹನ ಖರೀದಿ ಸುವ ಕುರಿತು ಯೋಜನೆ ರೂಪಿಸುವಂತೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖೀಕ ಇಲಾಖೆ ಆದೇಶ ಹೊರಡಿಸಿದೆ.

10ಕ್ಕಿಂತ ಕಡಿಮೆ ಮಕ್ಕಳಿರುವಲ್ಲಿ ಅವರನ್ನು ಮಾದರಿ ಶಾಲೆಗೆ ಕರೆತರಲು ವ್ಯವಸ್ಥೆ ಮಾಡಲಾಗುತ್ತದೆ. ಈ ಶಾಲೆಗಳಲ್ಲಿ ಶಿಕ್ಷಕರು ಮತ್ತು ಮಕ್ಕಳು ಇಬ್ಬರಿಗೂ ಸರಿಯಾದ ನ್ಯಾಯ ಸಿಗುತ್ತಿಲ್ಲ. ಎಲ್ಲ ವಿಷಯ ಗಳನ್ನು ಒಬ್ಬನೇ ಶಿಕ್ಷಕ ಬೋಧನೆ ಮಾಡುವುದರಿಂದ ಹೊರೆಯಾಗುತ್ತದೆ. ಮಕ್ಕಳಿಗೂ ಪೂರ್ಣ ಪ್ರಮಾಣದಲ್ಲಿ ಶಿಕ್ಷಣ ಸಿಗುವುದಿಲ್ಲ.
ಇಂತಹ ಶಾಲೆಗಳನ್ನು ಮಾದರಿ ಶಾಲೆಗಳಿಗೆ ವರ್ಗಾವಣೆ ಮಾಡಿಸಿ ಅಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಮಾದರಿ ಶಾಲೆಗೆ ಕರೆತರಲು ವಾಹನ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

ಹಾವೇರಿ ಜಿಲ್ಲೆಯಲ್ಲಿ ಜನೌಷಧಿ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ

0

ಹಾವೇರಿ ಜಿಲ್ಲೆಯ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಮಳಿಗೆ ತೆರೆಯಲು ಡಿಪ್ಲೋಮಾ ಫಾರ್ಮಸಿ ಪದವೀಧರರು ಮತ್ತು ಇತರೆ ಸ್ವಾಯತ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜನೌಷಧಿ ಮಳಿಗೆ ಲಭ್ಯವಿಲ್ಲದ ಆರೋಗ್ಯ ಸಂಸ್ಥೆಗಳಲ್ಲಿ ಮಾತ್ರ ಜನೌಷಧಿ ಮಳಿಗೆ ತೆರೆಯಲು ಅವಕಾಶವಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮೇಲ್ಕಂಡ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಿಂದ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಮಳಿಗೆ ತರೆಯಲು ಲಭ್ಯವಿರುವ ಕಟ್ಟಡವನ್ನು ಪರಿಶೀಲಿಸಿ ನಿಯಮಾನುಸಾರ ಎನ್.ಒ.ಸಿ. ಹಾಗೂ ಆರೋಗ್ಯ ರಕ್ಷಾ ಸಮಿತಿ ಅನುಮೋದನೆ ಪ್ರತಿಯೊಂದಿಗೆ ಲಿಖಿತ ಅರ್ಜಿಯನ್ನು ಹಾವೇರಿ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9448867799 ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಮರೆಯಲಾಗದ ಪುನೀತ್- ತಳಗೆರೆಯಲ್ಲಿ ನೆನಪಿನ ಕಾರಂಜಿ

0

ಶಿವಮೊಗ್ಗ ಸಾಗರ ತಾಲ್ಲೂಕು ತಳಗೆರೆ ಗ್ರಾಮದಲ್ಲಿ ದೊಡ್ಡ ಮನೆ ಹುಡುಗ ಪುನೀತ್ ರಾಜಕುಮಾರ್ ಅವರ ಸ್ಮಾರಕ ಸ್ಥಾಪಿಸಿದ್ದಾರೆ.

ನಟ ಪುನೀತ್ ರಾಜಕುಮಾರ್ ಅವರ ಸ್ಮಾರಕದಲ್ಲಿ ಕಾರಂಜಿಯನ್ನು ಆಕರ್ಷಕವಾಗಿ ಕಾಣುವಂತೆ ನಿರ್ಮಿಸಲಾಗಿದೆ.ಗ್ರಾಮದ ಹಿರಿಯರಿಂದ ಸ್ಮಾರಕವನ್ನು ಉದ್ಘಾಟಿಸಿದ್ದಾರೆ.

ಈ ಸಂದರ್ಭದಲ್ಲಿ ಪುನೀತ್ ಅವರನ್ನು ನೆನೆದು, ಅಭಿಮಾನಿಗಳು ಗುಣಗಾನ ಮಾಡಿದ್ದಾರೆ.

ರಾಹುಲ್ ಗಾಂಧಿಯವರ ಹೇಳಿಕೆ ಅಸಮರ್ಪಕ ಪ್ರಸಾರ- ವಾರ್ತಾ ಟಿವಿಯಿಂದ ಕ್ಷಮಾಯಾಚನೆ

0

ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆಗೂ ಉದಯಪುರ್ ಹತ್ಯೆಗೂ ಸಂಬಂಧವಿಲ್ಲದೇ ಇದ್ದರೂ ಅವರ ಹೇಳಿಕೆಯನ್ನು ಉದಯಪುರ್ ಹತ್ಯೆ ಘಟನೆಗೆ ಥಳಕು ಹಾಕಿ ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿ ಝೀ ನ್ಯೂಸ್ ವಾಹಿನಿ ಇಂದು ಕ್ಷಮೆಯಾಚಿಸಿದೆ.

ಕೇರಳದ ತಮ್ಮ ಸ್ವಕ್ಷೇತ್ರ ವಯನಾಡಿನಲ್ಲಿರುವ ತಮ್ಮ ಕಚೇರಿಯಲ್ಲಿ ನಡೆದ ದಾಂಧಲೆ ಕುರಿತು ರಾಹುಲ್ ಮಾತನಾಡುತ್ತಿರುವ ವೀಡಿಯೋವನ್ನು ಝೀ ನ್ಯೂಸ್ ತನ್ನ ಪ್ರೈಮ್ ಟೈಮ್ ಶೋ ಡಿಎನ್‍ಎ ಇದರಲ್ಲಿ ಪ್ರಸಾರ ಮಾಡಿ, ರಾಹುಲ್ ಅವರು ಉದಯಪುರ್ ಹತ್ಯೆ ಘಟನೆ ಕುರಿತು ಮಾತನಾಡುತ್ತಿದ್ದಾರೆ ಎಂದು ವಿವರಿಸಿತ್ತು.

ಉದಯಪುರ್ ಹತ್ಯೆ ಕುರಿತು ರಾಹುಲ್ ಅವರು ಆಘಾತಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ರಾಹುಲ್ ಅವರ ಹೇಳಿಕೆ ಪ್ರಸಾರ ಮಾಡುವ ಮುನ್ನ ನಿರೂಪಕ ರೋಹಿತ್ ರಂಜನ್ ಹೇಳಿದ್ದರು.

ರಾಹುಲ್ ಅವರು ಉದಯಪುರ್ ಹತ್ಯೆ ಪ್ರಕರಣದ ಆರೋಪಿಗಳನ್ನು ಮಕ್ಕಳು ಎಂದು ಹೇಳುವ ಮೂಲಕ ತಾವು ಅವರ ಬಗ್ಗೆ ಆಕ್ರೋಶ ಹೊಂದಿಲ್ಲ ಎಂದು ಹೇಳಿದ್ದಾರೆ ಎಂದು ರಂಜನ್ ವಿವರಣೆ ನೀಡಿದ್ದರು.

ವೀಡಿಯೋದಲ್ಲಿ ರಾಹುಲ್ ಆಡಿದ ಮಾತುಗಳು ಹೀಗಿದ್ದವು- ದೇಶದಲ್ಲಿರುವ ಈಗಿನ ವಾತಾವರಣವನ್ನು ಆಡಳಿತ ಪಕ್ಷ ಸೃಷ್ಟಿಸಿದೆ ಎಂದು ಹೇಳುವುದು ಕೇಳಿಸುತ್ತದೆ.

ಇದರ ಬಳಿಕ ಇನ್ನೊಂದು ತುಣುಕು ಪ್ರಸಾರ ಮಾಡಿದಾಗ ಅದರಲ್ಲಿ ರಾಹುಲ್ ಇದನ್ನು ಮಾಡಿದ ಮಕ್ಕಳು,ಅವರು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. ಅವರ ಬಗ್ಗೆ ನನಗೆ ಕೋಪವಿಲ್ಲ.ಅವರು ಮಕ್ಕಳು, ಇಂತಹ ಕೃತ್ಯಗಳ ಪರಿಣಾಮಗಳ ಬಗ್ಗೆ ಅವರಿಗೆ ತಿಳಿದಿಲ್ಲ ಎಂದಿದ್ದರು.

ಇಂಗ್ಲೆಂಡ್ ವಿರುದ್ಧ ಭಾರತ 416 ಜಡೇಜ ಶತಕ ಬೂಮ್ರಾ ಅಬ್ಬರ

0

ರವೀಂದ್ರ ಜಡೇಜಾ ಶತಕ. ವಿಶ್ವ ದಾಖಲೆಯ ಬ್ಯಾಟಿಂಗ್ನ ಬೆನ್ನಲ್ಲೇ ಬೋಲಿಂಗ್ ನಲ್ಲಿಯೂ ಬೆಂಕಿಯುಗುಳಿದ ಜಸ್ಪ್ರೀತ್ ಬೂ ಮ್ರಾ ಇಂಗ್ಲೆಂಡ್ ತಂಡಕ್ಕೆ ನುಂಗಲಾಗದ ತುತ್ತಾಗಿ ಪರಿಣಮಿಸಿತು .


ಹಂಗಾಮಿ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿರುವ ಬೂಮ್ರ ಅವರ ಆಲ್ರೌಂಡ್ ಆಟದ ನೆರವಿನಿಂದ ಐದನೇ ಹಾಗೂ ಕೊನೆಯ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿತು. ಮೊದಲ ಇನ್ನಿಂಗ್ಸ್ ನಲ್ಲಿ 416 ಗಳಿಸಿದ ಬೂಮ್ರ ಬಳಗ, ಎದುರಾಳಿ ತಂಡಕ್ಕೆ ಆರಂಭಿಕ ಆಘಾತ ನೀಡಿದೆ. ಎರಡನೇ ದಿನವಾದ ಶನಿವಾರ ಚಹ ವಿರಾಮದ ವೇಳೆಗೆ ಬೆನ್ ಸ್ಟ್ರೋಕ್ಸ್ ಬಳಗದ ಮೊದಲನೇ ಇನಿಂಗ್ ನಲ್ಲಿ ಮೂರು ವಿಕೆಟ್ ಗೆ 60 ಗಳಿಸಿದೆ ಸ್ಟುವರ್ಟ್ ಬ್ರಾಡ್ ಅವರ ಒಂದೇ ಓವರ್ ನಲ್ಲಿ 29 ರನ್ ಗಳಿಸಿ ದಾಖಲೆ ಮಾಡಿದ ಬೂಮ್ರ ಎದುರಾಳಿ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ ಗಳನ್ನು ಬೇಗನೆ ಡೆವಿಲಿಯನ್ ಗೆ ಅಟ್ಟಿದರು. ಅಲೆಕ್ಸ್ ಲೀಸ್ ಅವರನ್ನು ಬೋಲ್ಡ್ ಮಾಡಿ ವಿಕೆಟ್ ಬೇಟೆ ಆರಂಭಿಸಿದ ಬೂಮ್ರ ಇನ್ನಿಂಗ್ನ ಐದನೇ ಓವರ್ ನಲ್ಲಿ ಜಾಕ್ ಕ್ರಾಲಿ ಅವರನ್ನು ಸುಬ್ಬನ್ ಗಿಲ್ ನೆರವಿನಿಂದ ಔಟ್ ಮಾಡಿದರು. ಪೋಪ್ ಅವರು ಭಾರತದ ವೇಗಯ ಮುಂದೆ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲಿಲ್ಲ.

ಇಂಗ್ಲೆಂಡ್ ತಂಡವನ್ನು ಕುಸಿತದಿಂದ ಪಾರು ಮಾಡುವ ಜವಾಬ್ದಾರಿ ಅನುಭವಿ ಆಟಗಾರರಾದ ಜೋ ರೂಟ್ ಮತ್ತು ಜಾನಿ ಬೈಸ್ಟೋ ಅವರ ಮೇಲಿದೆ. ಮಳೆಯ ಕಾರಣ ಎರಡು ಸಲ ದಿನದಾಟಕ್ಕೆ ಅಡ್ಡಿ ಉಂಟಾಯಿತು. ಸತತ 7 ಓವರ್ ಬೋಲಿಂಗ್ ಮಾಡಿದ ಬೂಮ್ರಾ, ಅತಿಥೇ ಯ ಬ್ಯಾಟ್ಸ್ಮನ್ಗಳನ್ನು ಕಟ್ಟಿ ಹಾಕಿದರು.

ಮಾಜಿ ರಾಷ್ಟ್ರಪತಿಗಳಿಗೆ ಸಿಗುವ ಸೌಲಭ್ಯಗಳ ಮಾಹಿತಿ

0

ನಮ್ಮ ದೇಶದಲ್ಲಿ ರಾಷ್ಟ್ರಪತಿ ಮೊದಲ ಪ್ರಜೆ. ಪ್ರಸ್ತುತ ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಮುಕ್ತಾಯವಾಗಲಿದೆ. ಅವರು ದೇಶದ 14 ನೇ ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಅವರ ನಿವೃತ್ತಿಗೆ ಸಿದ್ಧತೆಗಳು ಕೂಡ ನಡೆಯುತ್ತಿವೆ. ನಿವೃತ್ತಿಯಾದ ಬಳಿಕ ರಾಷ್ಟ್ರಪತಿ ಕೋವಿಂದ್ ಅವರು ನಂತರ ಯಾವೆಲ್ಲ ಸೌಲಭ್ಯಗಳು ಸಿಗುತ್ತವೆ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

ಮಾಧ್ಯಮ ವರದಿಗಳ ಪ್ರಕಾರ, ನಿವೃತ್ತಿಯ ಬಳಿಕ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಾಷ್ಟ್ರ ರಾಜಧಾನಿ ದೆಹಲಿಯ 12 ಜನಪಥ್‌ನಲ್ಲಿರುವ ನಿವಾಸದಲ್ಲಿ ವಾಸಿಸಲಿದ್ದಾರೆ. ಇದು ಲುಟ್ಯೆನ್ಸ್ ದೆಹಲಿಯ ಅತಿದೊಡ್ಡ ಬಂಗಲೆಗಳಲ್ಲಿ ಒಂದಾಗಿದೆ. ಆದರೆ, ಅವರ ಹೆಸರಿಗೆ ಇನ್ನೂ ಹಂಚಿಕೆಯಾಗಿಲ್ಲ.

ಪ್ರೆಸಿಡೆಂಟ್ ಎಲಿಮೆಂಟ್ಸ್ ಆಕ್ಟ್ 1951 ರ ಪ್ರಕಾರ, ಭಾರತದ ರಾಷ್ಟ್ರಪತಿಗಳು ನಿವೃತ್ತಿಯ ಬಳಿಕ ಅನೇಕ ಸರ್ಕಾರಿ ಸೌಲಭ್ಯಗಳನ್ನು ಪಡೆಯುತ್ತಾರೆ.

ಮಾಸಿಕ ಪಿಂಚಣಿ,
ಇಬ್ಬರು ಕಾರ್ಯದರ್ಶಿಗಳು ಹಾಗೂ ದೆಹಲಿ ಪೊಲೀಸರ ಭದ್ರತೆ
ಕನಿಷ್ಠ 8 ಕೊಠಡಿಗಳೊಂದಿಗೆ ಸುಸಜ್ಜಿತ ಸರ್ಕಾರಿ ಬಂಗಲೆ
2 ಲ್ಯಾಂಡ್ ಲೈನ್ ಫೋನ್, 1 ಮೊಬೈಲ್ ಮತ್ತು 1 ಇಂಟರ್ನೆಟ್ ಸಂಪರ್ಕ
ಉಚಿತ ನೀರು ಮತ್ತು ವಿದ್ಯುತ್
ಕಾರುಗಳು ಮತ್ತು ಚಾಲಕರು
ಜೀವಿತಾವಧಿಯವರೆಗೆ ರೈಲು ಮತ್ತು ವಿಮಾನಕ್ಕಾಗಿ ಉಚಿತ ಟಿಕೆಟ್ ಅಧ್ಯಕ್ಷರ ಪತ್ನಿಗೆ ಕಾರ್ಯದರ್ಶಿ 30,000 ರೂ. ನೆರವು ನೀಡಲಾಗುತ್ತದೆ.

ಆರೋಗ್ಯ ಕಾಳಜಿ ವ್ಯಕ್ತಪಡಿಸಿದ ಅಭಿಮಾನಿಗಳಿಗೆ ನಟ ದಿಗಂತ್ ಧನ್ಯತೆಯ ನುಡಿ

0

ಮೊನ್ನೆ ನಡೆದಂತಹ ಚಿಕ್ಕ ಘಟನೆಯಿಂದ ನನಗೆ ಸರ್ಜರಿ ಆಗಿತ್ತು. ಒಂದು ದೊಡ್ಡ ಅಪಘಾತವಾಗಬಹುದಾಗಿತ್ತು. ಆದರೆ,ವೈದ್ಯರು ಸರ್ಜರಿ ಮೂಲಕ ತಪ್ಪಿಸಿ, ಗುಣಮುಖರನ್ನಾಗಿ ಮಾಡಿದ್ದಾರೆ. ಎಲ್ಲರಿಗೂ ಧನ್ಯವಾದಗಳು ಎಂದು ಸ್ಯಾಂಡಲ್ ವುಡ್ ನಟ ದಿಗಂತ್ ಅವರು ಹೇಳಿದ್ದಾರೆ.

ಈ ವಿಷಯದ ಕುರಿತು ವೀಡಿಯೋ ಬಿಡುಗಡೆ ಮಾಡಿರುವಂತಹ ದಿಗಂತ್ ಅವರು, ನನಗಾದಂತ ಚಿಕ್ಕ ಘಟನೆಯಿಂದಾಗಿ ಒಂದು ಸಣ್ಣ ಸರ್ಜರಿಯಾಗಿದೆ. ಈ ಸಂಧರ್ಭದಲ್ಲಿ ನನಗೆ ಬಹಳಷ್ಟು ಜನರು ಸಹಕರಿಸಿದ್ದಾರೆ. ಗೋವಾದಿಂದ ಏರ್ ಲಿಫ್ಟ್ ಮಾಡೋದಕ್ಕೆ ಗೋವಾ ಸಿಎಂ ಸಹಕರಿಸಿದ್ದಾರೆ. ಚಿಕಿತ್ಸೆಯ ಮೂಲಕ ಮಣಿಪಾಲ್ ಆಸ್ಪತ್ರೆಯ ವೈದ್ಯರು ನೆರವಾಗಿದ್ದಾರೆ ಅವರೆಲ್ಲರಿಗೂ ನನ್ನ ಧನ್ಯವಾದಗಳನ್ನು ವಿಡಿಯೋ ಮುಖಾಂತರ ತಿಳಿಸಿದ್ದಾರೆ.

ಮಣಿಪಾಲ್ ಆಸ್ಪತ್ರೆಯ ವೈದ್ಯರಾದಂತ ಡಾ.ವಿದ್ಯಾಧರ್ ಅವರು ದೇವರ ರೂಪದಲ್ಲಿ ಬಂದು ನನಗೆ ಸರ್ಜರಿ ಮಾಡಿದ್ದಾರೆ. ಅವರಿಗೆ ಧನ್ಯವಾದಗಳು. ನನ್ನ ಆರೋಗ್ಯ ಬಗ್ಗೆ ತೀರ್ಥಹಳ್ಳಿಯ ಶಾಲಾ ಸ್ನೇಹಿತರು. ನನ್ನ ಸಿನಿಮಾ ಇಂಡಸ್ಟ್ರಿಯ ಗೆಳೆಯರು ವಿಚಾರಿಸಿದ್ದಾರೆ. ಅವರೆಲ್ಲರಿಗೂ ನನ್ನ ಧನ್ಯವಾದಗಳು ಎಂದು ಹೇಳಿಕೊಂಡಿದ್ದಾರೆ.

ವಿದ್ಯುತ್ ಸಂಪರ್ಕ ಪಡೆಯಲು ನಿರಾಕರಣ ಪತ್ರ ನಿಯಮ ರದ್ದು

0

ವಿದ್ಯುತ್ ಸಂಪರ್ಕ ಪಡೆಯಲು ಓಸಿ ನಿಯಮವನ್ನು ಕೆಇಆರ್​ಸಿ ತೆಗೆದು ಹಾಕಿದೆ. ಇನ್ನು ಮುಂದೆ ವಿದ್ಯುತ್ ಸಂಪರ್ಕ ಪಡೆಯಲು ಒಸಿ ಕಡ್ಡಾಯವಲ್ಲ.

ಉದ್ಯಮ, ವಾಣಿಜ್ಯ ಮಳಿಗೆ, ವಾಸದ ಮನೆಗೆ ಒಸಿ ಅಗತ್ಯವಿತ್ತು. ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳಿಂದ ಒಸಿ ಪಡೆಯಬೇಕಾಗಿತ್ತು. ಒಸಿ ಇದ್ದವರಿಗೆ ಮಾತ್ರ ವಿದ್ಯುತ್ ಸಂಪರ್ಕ ನೀಡಲಾಗುತ್ತಿತ್ತು. ಸಿಎಂ ಅನುಮೋದನೆಯೊಂದಿಗೆ ಸರ್ಕಾರ ಮನವಿ ಸಲ್ಲಿಸಿದೆ. ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗ ನಿಯಮ ತೆಗೆದುಹಾಕಿದೆ. ಈ ಕುರಿತಾಗಿ ಇಂಧನ ಸಚಿವ ವಿ. ಸುನೀಲ್ ಕುಮಾರ್ ಅವರು ಟ್ವೀಟ್​ ಮಾಡಿದ್ದಾರೆ.

ಕಟ್ಟಡಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ನಿರಾಕ್ಷೇಪಣಾ ಪತ್ರ ಇಲ್ಲ ಎಂಬ ಕಾರಣಕ್ಕೆ ವಿದ್ಯುತ್ ಸಂಪರ್ಕ ನಿರಾಕರಣೆ ಇನ್ನು ಸಾಧ್ಯವಿಲ್ಲ. ಕಾಂಗ್ರೆಸ್ ಕಾಲದ ಈ ಕತ್ತಲೆಭಾಗ್ಯದ ನಿಯಮವನ್ನು ಕೊನೆಗೂ ನಿವಾರಿಸಿದ್ದೇವೆ. ನಿಯಮ ಬದಲಾಯಿಸಿ ಕೆ ಆರ್ ಇಸಿ ಹೊರಡಿಸಿದ್ದ ಆದೇಶ ಇಂದಿನಿಂದಲೇ ರಾಜ್ಯಪತ್ರದ ಮೂಲಕ ಜಾರಿಗೆ ಬರುತ್ತಿದೆ. ಸರ್ವರಿಗೂ ಬೆಳಕು ಎಂಬ ನಮ್ಮ ಧ್ಯೇಯ ವಾಕ್ಯಕ್ಕೆ ಇನ್ನು ಯಾವುದೇ ಅಡ್ಡಿ ಇಲ್ಲ ಎಂದು ಟ್ವೀಟ್​ ಮಾಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 5 ಲಕ್ಷ ಕುಟುಂಬಗಳಿಗೆ ಇದು ಅನುಕೂಲವಾಗಲಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಕತ್ತಲೆ ಭಾಗ್ಯದ ಕಾನೂನನ್ನು ಜಾರಿಗೆ ಬಂದಿದೆ. ನಮ್ಮ ಸರ್ಕಾರ ಅದನ್ನು ಬದಲಾಯಿಸಿದೆ. ಎಲ್ಲರ ಮನೆಯಲ್ಲೂ ಬೆಳಕು ಮೂಡಲಿದೆ ಎಂದು ಇಂಧನ, ಕನ್ನಡ ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಟ್ವೀಟ್ ಮೂಲಕ ಮಾಹಿತಿ ಹಂಚಿ ಕೊಂಡಿದ್ದಾರೆ.

ಕಳೆದ ಐದು ವರ್ಷಗಳಿಂದ ಈ ಸಮಸ್ಯೆ ಬೆಂಗಳೂರಿನ ನಾಗರಿಕರನ್ನು ಕಾಡುತ್ತಿದೆ. ಬಿಬಿಎಂಪಿ ಮತ್ತು ಇಂಧನ ಇಲಾಖೆಯ ಈ ಧೋರಣೆ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಜೆಪಿಯ ಬೆಂಗಳೂರು ಶಾಸಕರು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ ನಿಯಮ ಬದಲಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಧ್ಯತೆಯನ್ನು ಪರಿಶೀಲನೆಗೆ ಕ್ರಮ ಕೈಗೊಳ್ಳುವಂತೆ ಸುನೀಲ್ ಕುಮಾರ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಿದ್ದರು. ಬಳಿಕ ಕೆಇಆರ್ ಸಿಗೆ ಪತ್ರ ಬರೆಯಲಾಗಿತ್ತು. ಈ ಬಗ್ಗೆ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಆಯೋಗ ಹೊರಡಿಸಿದ ಆದೇಶ ಈಗ ರಾಜ್ಯಪತ್ರದ ಮೂಲಕ ಅಧಿಕೃತಗೊಂಡಿದೆ. ಇನ್ನುಮುಂದೆ ಗುರುತಿನ ಚೀಟಿ ಹಾಗೂ ಸ್ವತ್ತಿನ ಹಕ್ಕುಪತ್ರ ಇದ್ದರೆ ವಿದ್ಯುತ್ ಸಂಪರ್ಕ ಪಡೆಯಬಹುದಾಗಿದೆ.

ರಾಜ್ಯ ಸರ್ಕಾರಿ ಕಾಲೇಜುಗಳಿಗೆ 3500 ಅತಿಥಿ ಉಪನ್ಯಾಸಕರ ನೇಮಕ ಪ್ರಸ್ತಾವನೆ

0

ಉದ್ಯೋಗಾಕಾಂಕ್ಷಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಂತೋಷದ ವಿಚಾರವನ್ನು ನೀಡಿದೆ. ಪ್ರಸ್ತುತ ಸಾಲಿನಲ್ಲಿ 3,500 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಹಾಗೂ ಸಂಭಾವನೆಯನ್ನು 9 ಸಾವಿರ ರೂ.ನಿಂದ 15 ಸಾವಿರ ರೂ.ಗೆ ಹೆಚ್ಚಿಸುವಂತೆ ಕೋರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 3,500 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಮತ್ತು ಅತಿಥಿ ಉಪನ್ಯಾಸಕರ ಗೌರವಧನವನ್ನು 15 ಸಾವಿರ ರೂ.ಗಳಿಗೆ ಏರಿಕೆ ಮಾಡುವಂತೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಇನ್ನು ಕಳೆದ ವರ್ಷ 3,552 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿತ್ತು. ಈ ಉಪನ್ಯಾಸಕರ ಗೌರವಧನವನ್ನು ಕನಿಷ್ಟ 12 ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ಹಿಂದೆಯೂ ಪಿಯು ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಕೊರೋನಾ ಕಾರಣ ಗೌರವಧನ ಹೆಚ್ಚಿಸಿರಲಿಲ್ಲ. ಈ ಬಾರಿ ಗೌರವಧನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.