Saturday, August 8, 2026
Saturday, August 8, 2026
Home Blog Page 152

CM Siddharamaih ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ- ಮುಖ್ಯಮಂತ್ರಿ ಸಿದ್ಧರಾಮಯ್ಯ.

0

CM Siddharamaih ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು ಸಾಧ್ಯವಿಲ್ಲ, ಜನ ಕಲ್ಯಾಣ ಹಾಗೂ ಅಭಿವೃದ್ಧಿಗಾಗಿ ಸಾಲ ಮಾಡಬೇಕು. ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ. ನಮ್ಮ ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು.

ನಾನು ಎಂದೂ ಸಾಲ ಮಾಡಬಾರದು ಎಂದು ಹೇಳಿಲ್ಲ. ಹೇಳುವುದೂ ಇಲ್ಲ. ಆದರೆ ಮಾಡುವ ಸಾಲ ಜನರ ಕಲ್ಯಾಣಕ್ಕಾಗಿ ಮತ್ತು ನಾಡಿನ ಅಭಿವೃದ್ಧಿಗಾಗಿ ಬಳಕೆಯಾಗಿದೆಯೇ ಎಂಬುದು ಮುಖ್ಯ.
ಎಂದು
ಬಜೆಟ್‌ ಕುರಿತ ಚರ್ಚೆಗೆ ವಿಧಾನ ಪರಿಷತ್‌ನಲ್ಲಿ ಮುಖ್ಯಮಂತ್ರಿ ಉತ್ತರಿಸಿದರು.

CM Siddharamaih 2008 ರಿಂದ 2013 ರವರೆಗೆ ಇದ್ದ ಬಿಜೆಪಿಯೂ ಸಾಲ ಮಾಡಿದೆ. ಆದರೆ, ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿಲ್ಲ, ಅಭಿವೃದ್ಧಿಯೂ ಶೂನ್ಯ. ಹಾಗಿದ್ರೂ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಲ ಮಾಡಿದ್ದು ಏಕೆ? ಎಂದು ಪ್ರತಿಪಕ್ಷಕ್ಕೆ‌ ಮುಖ್ಯಮಂತ್ರಿಗಳು ಅಧಿವೇಶನದಲ್ಲಿ ಮಾತಿನ ಈಟಿ ತಿವಿದರು.

Shri Mahavir Jayanti ಮಾರ್ಚ್ 30. ಶ್ರೀಮಹಾವೀರ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಜ್ಜು.

0

Shri Mahavir Jayanti ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ ಸಮಾಜದ ವಿವಿಧ ಸಂಘಟನೆಗಳು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಾ.30 ರ ಸಂಜೆ 4.30ಕ್ಕೆ ನಗರದ ಕುವೆಂಪು ರಂಗಮAದಿರದಲ್ಲಿ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, Shri Mahavir Jayanti ಪ್ರಾಧಿಕಾರಗಳ ಅಧ್ಯಕ್ಷರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳುವರು. ಸಾಗರದ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ವಿ.ಟಿ.ಸ್ವಾಮಿ ಇವರು ವಿಶೇಷ ಉಪನ್ಯಾಸ ನೀಡುವರು.

Davangere By Election ಸಾದಿಕ್ ಪೈಲ್ವಾನ್ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ.

0

Davangere By Election ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲದ ಕಾರಣ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ

ಅವರು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರು. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ. ಅವರು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ.
ನಿನ್ನೆ 11 ಜನ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಎಲ್ಲರಿಗೂ ಧನ್ಯವಾದಗಳು. ‌

Davangere By Election ಶಾಸಕ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಹಿಂಪಡೆಯುವಂತೆ ಮನವೊಲಿಸಲು ಸಾಧ್ಯವಾಗಲಿಲ್ಲ. ವಿಧಾನಪರಿಷತ್ ನಲ್ಲಿ ಉತ್ತರ ನೀಡಬೇಕಿದ್ದರಿಂದ ನಾನು ಖುದ್ದು ಭೇಟಿ ನೀಡಲಾಗಿಲ್ಲ.

ಸಾದಿಕ್ ಪೈಲ್ವಾನ್ ಅವರು ಕಾಂಗ್ರೆಸ್ ನಲ್ಲಿ ಸುಮಾರು 40 ವರ್ಷಗಳಿಂದ ಇದ್ದು, ಪಕ್ಷದ ಕಟ್ಟಾಳು. ದಾವಣಗೆರೆಯಲ್ಲಿ 70 ಸಾವಿರ ಮುಸ್ಲಿಂ ಮತದಾರರಿದ್ದು, ಸಮುದಾಯದವರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಹೈಕಮಾಂಡ್ ಇದನ್ನು ಪರಿಶೀಲಿಸಿ ಮೃತರಾದವರ ಕುಟುಂಬದವರಿಗೆ ಟಿಕೆಟ್ ನೀಡುವ ಪದ್ಧತಿಯಂತೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡಿದೆ ಎಂದು ಸಿದ್ಧರಾಮಯ್ಯ ಪಕ್ಷದ ನಿಲುವನ್ನ ಸ್ಪಷ್ಟಪಡಿಸಿದ್ದಾರೆ.

Madhu Bangarappa ಎಸ್ಎಸ್ಎಲ್ ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್.ಪಾಸ್- ಫೇಲ್ ಪದ್ಧತಿ ರದ್ದು.- ಮಧು ಬಂಗಾರಪ್ಪ.

0

Madhu Bangarappa  ಎಸ್.ಎಸ್.ಎಲ್.ಸಿಯಲ್ಲಿ ತೃತೀಯ ಭಾಷೆ ಇನ್ಮುಂದೆ ಗ್ರೇಡಿಂಗ್‌; ಪಾಸ್‌-ಫೇಲ್ ಪದ್ಧತಿ ರದ್ದು: ಸಚಿವ ಎಸ್. ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ಇಂದು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.

ವಿಧಾನಸಭಾ ಅಧಿವೇಶನದ ಮುಕ್ತಾಯದ ಬಳಿಕ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇನ್ಮುಂದೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳಲ್ಲಿ ‘ತೃತೀಯ ಭಾಷೆ’ಯನ್ನು (Third Language) ಗ್ರೇಡಿಂಗ್ ವ್ಯವಸ್ಥೆಗೆ (Grading System) ಒಳಪಡಿಸಲಾಗುವುದು ಎಂದು ಹೇಳಿದರು.

“ಈವರೆಗೆ 625 ಅಂಕಗಳ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ 100 ಅಂಕಗಳನ್ನು ನಿಗದಿಪಡಿಸಲಾಗಿತ್ತು. ಇನ್ಮುಂದೆ ತೃತೀಯ ಭಾಷೆಯಲ್ಲಿ ಪಾಸ್ ಅಥವಾ ಫೇಲ್ ಎಂಬ ಪದ್ಧತಿ ಇರುವುದಿಲ್ಲ. ಅಂದರೆ, ಅಂತಿಮ ಫಲಿತಾಂಶದ ಅಂಕಗಳಿಗೆ ತೃತೀಯ ಭಾಷೆಯ ಅಂಕಗಳನ್ನು ಪರಿಗಣಿಸಲಾಗುವುದಿಲ್ಲ. ಬದಲಾಗಿ ಗ್ರೇಡಿಂಗ್ (ಉದಾಹರಣೆಗೆ: ಎ, ಬಿ, ಸಿ, ಡಿ) ನೀಡಲಾಗುತ್ತದೆ,” ಎಂದು ಸಚಿವರು ಸ್ಪಷ್ಟಪಡಿಸಿದರು.

ಹಿಂದಿ, ಸಂಸ್ಕೃತ, ತುಳು, ಮರಾಠಿ, ಅರೇಬಿಕ್ ಸೇರಿದಂತೆ ಪಠ್ಯಕ್ರಮದಲ್ಲಿರುವ ಎಲ್ಲಾ ತೃತೀಯ ಭಾಷೆಗಳಿಗೂ ಈ ನಿಯಮ ಅನ್ವಯವಾಗಲಿದೆ.

ಅಧಿಕೃತ ಆದೇಶವನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ತಿಳಿಸಿದರು.

ಮಕ್ಕಳಿಗೆ ‘ನೈತಿಕ ಶಿಕ್ಷಣ’ (Moral Science) ಜಾರಿ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಉಚಿತವಾಗಿ ‘ನೈತಿಕ ಶಿಕ್ಷಣ’ ಪುಸ್ತಕಗಳನ್ನು ಒದಗಿಸಲಾಗುತ್ತಿದೆ. ಇದು ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಸರ್ಕಾರದ ಹೆಜ್ಜೆಯಾಗಿದೆ, ಎಂದು ಹೇಳಿದರು.

Madhu Bangarappa 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ (Social Media) ಬಳಕೆಯನ್ನು ನಿರ್ಬಂಧಿಸುವ ಮಹತ್ವದ ಪ್ರಸ್ತಾಪವನ್ನು ಸದನದಲ್ಲಿ ಚರ್ಚಿಸಲಾಗಿದ್ದು, ಎಲ್ಲರಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಈ ಸಮಸ್ಯೆಯು ಕೇವಲ ಸರ್ಕಾರದ ಮಟ್ಟದಲ್ಲಿ ಬಗೆಹರಿಯುವುದಿಲ್ಲ, ಪೋಷಕರು ತಮ್ಮ ಮಕ್ಕಳ ಮೊಬೈಲ್ ಬಳಕೆಯ ಮೇಲೆ ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಸಚಿವರು ಕಳಕಳಿಯ ಮನವಿ ಮಾಡಿದರು.

“ನಮ್ಮ ಸರ್ಕಾರದ ಪ್ರಮುಖ ಉದ್ದೇಶ ಸರ್ಕಾರಿ ಶಾಲೆಗಳ ಸಬಲೀಕರಣ, ಪಾರದರ್ಶಕತೆ ಕಾಯ್ದುಕೊಳ್ಳುವುದು ಮತ್ತು ವಿದ್ಯಾರ್ಥಿಗಳನ್ನು ಪರೀಕ್ಷಾ ಒತ್ತಡದಿಂದ ಮುಕ್ತಗೊಳಿಸುವುದಾಗಿದೆ. ಈ ನಿಟ್ಟಿನಲ್ಲಿ ವಾರ್ಷಿಕ 3 ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಅಂಕ ಉಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ,” ಎಂದು ಸಚಿವ ಶ್ರೀ ಮಧು ಬಂಗಾರಪ್ಪ ಅವರು ತಮ್ಮ ಇಲಾಖೆಯ ಸಾಧನೆ ಮತ್ತು ಮುಂದಿನ ಗುರಿಗಳ ಬಗ್ಗೆ ವಿವರಿಸಿದರು.

Madhu Bangarappa 2026-27 ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಕ್ಕಳ ವಯೋಮಿತಿಯಲ್ಲಿ 60 ದಿನ ಸಡಿಲಿಕೆ- ಮಧು ಬಂಗಾರಪ್ಪ.

0

Madhu Bangarappa “ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರು ವರ್ಷ ತುಂಬಿರಲೇಬೇಕು ಎಂಬ ಕಡ್ಡಾಯ ನಿಯಮವನ್ನು 2026-27ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ವಿನಾಯಿತಿ ನೀಡಲಾಗಿದೆ. 60 ದಿನಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿದ್ದು, ಇದಕ್ಕೆ ಪೂರಕವಾಗಿ ದಾಖಲಾತಿ ತಂತ್ರಾಂಶದಲ್ಲಿ ಬದಲಾವಣೆ ಮಾಡಲಾಗುವುದು.” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ
ಮಧು ಬಂಗಾರಪ್ಪ ವಿಧಾನ ಸಭೆ ಅಧಿವೇಶನದಲ್ಲಿ ತಿಳಿಸಿದ್ದಾರೆ.

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

0

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ ಅವರ ಬೆಂಗಳೂರಿನ ನಿವಾಸದಲ್ಲಿ “ಹಿಂದಿ ಹೇರಿಕೆ ವಿರೋಧಿ ಕರ್ನಾಟಕ ಒಕ್ಕೂಟ” ದವರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಯಿತು.

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಅಗ್ರಸ್ಥಾನವಿರಬೇಕು ಮತ್ತು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಮೇಲೆ ಅನ್ಯ ಭಾಷೆಯ ಹೇರಿಕೆ ಇರಬಾರದು ಎಂಬುದು ನಮ್ಮ ಸರ್ಕಾರದ ಸ್ಪಷ್ಟ ನಿಲುವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

“ಪಾಸ್ ವಿಥೌಟ್ ಹಿಂದಿ” (Pass Without Hindi) ಶಾಲಾ ಹಂತದಲ್ಲಿ ಹಿಂದಿ ವಿಷಯದಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರಬಾರದು ಮತ್ತು ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಬಾರದು ಎಂಬ ಕಾನೂನು ಜಾರಿಗೊಳಿಸುವ ಕುರಿತು ಒಕ್ಕೂಟವು ಒತ್ತಾಯಿಸಿ, ಸಲ್ಲಿಸಿರುವ ಮನವಿಯನ್ನು ಸಕಾರಾತ್ಮಕವಾಗಿ ಸ್ವೀಕರಿಸಲಾಗಿದ್ದು, ಈ ಕುರಿತು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಶಿಕ್ಷಣ ಇಲಾಖೆಯ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಇಲಾಖೆಯ ಕ್ರಮದ ಬಗ್ಗೆ ಮಧು ಬಂಗಾರಪ್ಪ ಚರ್ಚೆಯಲ್ಲಿ ತಿಳಿಸಿದರು.

MADHU BANGARAPPA ಕನ್ನಡ ಪರ ಸಂಘಟನೆಗಳು ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕುವ ನಿರ್ಧಾರವನ್ನು ತಕ್ಷಣವೇ ಕೈಬಿಡಬೇಕು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶಾಂತಿಯುತವಾಗಿ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು .ಇದಕ್ಕೆ‌ಚರ್ಚೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದರು.

ನಮ್ಮ ನೆಲ, ನಮ್ಮ ಭಾಷೆ ಮತ್ತು ನಮ್ಮ ವಿದ್ಯಾರ್ಥಿಗಳ ಭವಿಷ್ಯ ಕಾಪಾಡಲು ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಅನ್ಯ ಭಾಷೆಯ ಹೇರಿಕೆಯನ್ನು ಸಹಿಸುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು

ಈ ಸಂದರ್ಭದಲ್ಲಿ ಹಿರಿಯ ಕನ್ನಡ ಪರ ಹೋರಾಟಗಾರರಾದ ಶ್ರೀ ಸಾ.ರ ಗೋವಿಂದ್, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷರಾದ ಶ್ರೀ ಶಿವರಾಮೇಗೌಡ, ಶ್ರೀ ರಾಧಾಕೃಷ್ಣ, ಶ್ರೀ ರಾಮಪ್ರಸಾದ್, ಶ್ರೀ ಪಾರ್ವತೀಶ್ ಸೇರಿದಂತೆ ಅನೇಕ ಪದಾಧಿಕಾರಿಗಳು ಹಾಜರಿದ್ದರು.

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

0

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಎ.ಪಿ.ಜೆ ಅಬ್ದುಲ್ ಕಲಾಂ/ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27 ನೇ ಸಾಲಿನ 6ನೇ ತರಗತಿಗೆ ಪ್ರವೇಶಕ್ಕಾಗಿ ಏಪ್ರಿಲ್ 12 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯುತ್ತಿದೆ.
ಏಪ್ರಿಲ್ ಮೊದಲ ವಾರದಲ್ಲಿ ಪ್ರವೇಶ ಪತ್ರವನ್ನು ಅಲ್ಪಸಂಖಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮೇಲಿನಹನಸವಾಡಿ ಪ್ರಾಂಶುಪಾಲರ ದೂ.ಸಂ: 9483623537, ಭದ್ರಾವತಿ ದೊಡ್ಡೇರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿಶಾಲೆ ಪ್ರಾಂಶುಪಾಲರ ದೂ.ಸಂ : 9591237905, ಶಿರಾಳಕೊಪ್ಪ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ದೂ.ಸಂ :8310350361, ಶಿಕಾರಿಪುರ ಉಡಗಣಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ದೂ.ಸಂ 9036866642, ಶಿವಮೊಗ್ಗ ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರದ ದೂ.ಸಂ : 7676888388, ಭದ್ರಾವತಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರದ Morarji Desai Residential School ದೂ.ಸಂ :9538853680, ತೀರ್ಥಹಳ್ಳಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರದ ದೂ.ಸಂ :8861982835, ಸೊರಬ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರದ ದೂ.ಸಂ :9513815513, ಶಿಕಾರಿಪುರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರದ ದೂ.ಸಂ :7829136724, ಹೊಸನಗರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರದ ದೂ.ಸಂ :9008447029 ಹಾಗೂ ಸಾಗರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರದ ದೂ.ಸಂ :7338222907 ನ್ನು ಸಂಪರ್ಕಿಸಬಹುದೆAದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

0

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ ಮಾ 29ರ ಭಾನುವಾರ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಗೋಪಾಲ ಭಟ್ರು ತಿಳಿಸಿದ್ದಾರೆ.

ದೇವಸ್ಥಾನದ ಅರ್ಚಕ ವೃಂದದ ನೇತೃತ್ವದಲ್ಲಿ ಗಂಗಪ್ರಿಯಾ ಕಲ್ಯಾಣ ಮಂದಿರದಲ್ಲಿ ಸಮೂಹ ಆಶ್ಲೇಷ ಬಲಿ ಪೂಜೆ, ನಾಗದರ್ಶನ, ಪಂಚಾಮೃತ ಅಭಿಷೇಕ ಮತ್ತು ಕಾಳಸರ್ಪ ಶಾಂತಿ ಪೂಜೆ ನಡೆಯಲಿದೆ.
ಅಂದು ಬೆಳಿಗ್ಗೆ ಬೆಳಿಗ್ಗೆ 7.30 ಕಾಳಸರ್ಪ ಶಾಂತಿ ಆರಂಭ, ಬೆಳಿಗ್ಗೆ 10.30, ಆಶ್ಲೇಷ ಬಲಿ ಪೂಜೆ, ಮಧ್ಯಾಹ್ನ 12.30 ನಾಗದರ್ಶನ ನಂತರ ಪ್ರಸಾದ ವಿತರಣೆ ನಡೆಯಲಿದ್ದು ಸೇವೆಗೆ ಹಿಂಗಾರ ಮತ್ತು ಎಳನೀರು ಸಲ್ಲಿಸಲು ಭಕ್ತರಿಗೆ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Mylaralingeshwara Temple in Shimoga ಹೆಚ್ಚಿನ ವಿವರಗಳಿಗಾಗಿ ದೂರವಾಣಿ 9480354402 ಸಂಪರ್ಕಿಸಬಹುದು

Online shopping ಆನ್ ಲೈನ್ ಶಾಪಿಂಗ್ ಬಗ್ಗೆ ಬಹಳ ಜಾಗರೂಕರು ಹಾಗು ಜಾಣರಾಗಿರಿ- ಟಿ.ಶಿವಣ್ಣ.

0

Online shopping ಇತ್ತೀಚಿನ ಕಾಲಮಾನದಲ್ಲಿ ಆನ್‌ಲೈನ್ ಶಾಪಿಂಗ್ ಹೆಚ್ಚುತ್ತಿದೆ. ಆನ್‌ಲೈನ್ ಶಾಪಿಂಗ್ ಅನುಕೂಲಕರ ಹಾಗೂ ಲಾಭದಾಯಕ ಎಂದೆನಿಸಿದರೂ ಕೂಡ ವಂಚನೆ, ಗುಣಮಟ್ಟದ ಖಾತ್ರಿಯ ಕೊರತೆ, ನಕಲಿ ಉತ್ಪನ್ನಗಳ ಮಾರಾಟ ಮತ್ತು ಡೇಟಾ ಸೋರಿಕೆಯ ಅಪಾಯಗಳಿರುವುದರಿಂದ ಜಾಗರೂಕರಾಗಿದ್ದು ಜಾಣರಾಗಿರಿ ಎಂದು ಜಿಲ್ಲಾ ನಿವೃತ್ತ ನ್ಯಾಯಾಧೀಶರು ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ. ಶಿವಣ್ಣ ಎಚ್ಚರಿಸಿದರು.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಹಾಗೂ ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 26ರ ಗುರುವಾರ ಮಧ್ಯಾಹ್ನ ಕೋಟೆ ರಸ್ತೆಯ ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರವು 1986ರಲ್ಲಿ ಗ್ರಾಹಕ ಹಕ್ಕುಗಳ ಕಾಯ್ದೆ ಜಾರಿಗೊಳಿಸಿದೆ. ದೈನಂದಿನ ಜೀವನದಲ್ಲಿ ಪ್ರತಿಯೊಬ್ಬರೂ ಗ್ರಾಹಕರೇ. ಗ್ರಾಹಕರಿಗೆ ನ್ಯಾಯಯುತ, ಯೋಗ್ಯ ಹಾಗೂ ಗುಣಮಟ್ಟದ ಸರಕು ಮತ್ತು ಸೇವೆಗಳನ್ನು ನೀಡುವ ಜವಾಬ್ದಾರಿ ವ್ಯಾಪಾರಸ್ಥರದ್ದು. ಯಾವುದೇ ವಸ್ತುಗಳನ್ನು ಕೊಡುವವನ ತೃಪ್ತಿಗಾಗಿ ಕೊಳ್ಳುವುದಲ್ಲ, ಅಲ್ಲಿ ಗ್ರಾಹಕರ ಸಂತೃಪ್ತಿಯೇ ಮುಖ್ಯ. ಸುರಕ್ಷತೆ, ಆಯ್ಕೆ ಹಾಗೂ ಆರೋಗ್ಯಪೂರ್ಣ ಪರಿಸರ ಹೊಂದುವ ಹಕ್ಕನ್ನು ಕಾಯ್ದೆಯು ಎಲ್ಲಾ ಗ್ರಾಹಕರಿಗೂ ನೀಡಿದೆ ಎಂದರು.

ಗ್ರಾಹಕರು ಮೋಸ ಹೋದ ಬಳಿಕ ಎಚ್ಚೆತ್ತು ಕೊಳ್ಳುವ ಬದಲು ಜಾಗೃತರಾಗಿರುವುದು ಉತ್ತಮ. ಗ್ರಾಹಕರ ರಕ್ಷಣೆ ಹಾಗೂ ಸಬಲೀಕರಣಕ್ಕಾಗಿ ಗ್ರಾಹಕ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ ಸಹ ಮೋಸ ಹೋಗುವುದು ತಪ್ಪುತ್ತಿಲ್ಲ. ಆಕಸ್ಮಿಕವಾಗಿ ಮೋಸ ಹೋದಾಗ ಗ್ರಾಹಕರ ರಕ್ಷಣೆಗೆ ಇರುವ ಕಾಯ್ದೆಗಳ ಬಗ್ಗೆ ಅರಿವು ಹೊಂದಿ ನ್ಯಾಯ ಪಡೆಯಬೇಕೆಂದರು.

Online shopping ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ಪ್ರಶಾಂತ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಬಿ.ಡಿ. ಯೋಗಾನಂದ, ವಾಸವಿ ವಿದ್ಯಾಲಯದ ಕಾರ್ಯದರ್ಶಿ ಎಸ್.ಕೆ. ಶೇ಼಼ಷಾಚಲ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಚಾಲಕ ಎಂ.ಎಂ. ಜಯಸ್ವಾಮಿ, ಕಾನೂನು ಮಾಪನ ಶಾಸ್ತç ಇಲಾಖೆಯ ಸಹಾಯಕ ನಿಯಂತ್ರಕರಾದ ಸಿ.ಎಂ. ಧನಲಕ್ಷ್ಮೀ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಡಿ. ಸತೀಶ್, ಸಹಾಯಕ ನಿರ್ದೇಶಕರಾದ ಲಕ್ಷ್ಮೀ ಉಪಸ್ಥಿತರಿದ್ದರು.

ಕಾನೂನು ಮಾಪನ ಶಾಸ್ತç ಇಲಾಖೆ ವತಿಯಿಂದ ತೂಕ ಮತ್ತು ಅಳತೆಯ ಬಗ್ಗೆ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು. ಲೋಲಾಕ್ಷಿ ಮತ್ತು ತಂಡ ಸ್ವಾಗತಿಸಿ, ಎಂ. ಮೇಘನಾ ಸ್ವಾಗತಿಸಿದರು.

Shivamogga-Bangalore Train ಬೆಂಗಳೂರು- ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್ ಗೆ ಹೊಸ ಕೋಚ್ ಗಳ ಸೇರ್ಪಡೆ-ಸಂಸದ ಬಿ.ವೈ.ರಾಘವೇಂದ್ರ.

0

Shivamogga-Bangalore Train ಬೆಂಗಳೂರು ಮತ್ತು ತಾಳಗುಪ್ಪ ನಡುವೆ ಸಂಚರಿಸುವ ರೈಲು ಸಂಖ್ಯೆ 20651/20652 ಕ್ಕೆ ಇಂದಿನಿಂದ (ಮಾರ್ಚ್ 26, 2026) ಅತ್ಯಾಧುನಿಕ ಸೌಲಭ್ಯವುಳ್ಳ ಹೊಸ ಎಲ್‌ಎಚ್‌ಬಿ (LHB) ಬೋಗಿಗಳನ್ನು ಅಳವಡಿಸಿ ಚಾಲನೆ ನೀಡಲಾಗಿದೆ.

ನಮ್ಮ ಶಿವಮೊಗ್ಗ ಕ್ಷೇತ್ರದ ಜನರ ರೈಲ್ವೆ ಬೇಡಿಕೆಗಳನ್ನು ಈಡೇರಿಸಲು ಸತತವಾಗಿ ಶ್ರಮಿಸುತ್ತಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ, ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರಿಗೆ ಶಿವಮೊಗ್ಗ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಹೃತ್ಪೂರ್ವಕ ಧನ್ಯವಾದ ಹೇಳಿದ್ದಾರೆ.