Monday, March 16, 2026
Monday, March 16, 2026
Home Blog Page 1520

ಡಾ.ಬಿ.ಸಿ.ರಾಯ್ ವೈದ್ಯರ ದಿನದ ಕಾರಣೀಭೂತ ವ್ಯಕ್ತಿತ್ವ

0

ಭಾರತದಲ್ಲಿ ಪಶ್ಚಿಮ ಬಂಗಾಳದ 2ನೇ ಮುಖ್ಯಮಂತ್ರಿ ಡಾ. ಬಿಧಾನ್ ಚಂದ್ರ ರಾಯ್ ಸ್ಮರಣಾರ್ಥ ಜು.1ರಂದು ‘ರಾಷ್ಟ್ರೀಯ ವೈದ್ಯರ ದಿನ’ ಆಚರಿಸಲಾಗುತ್ತದೆ.

1882ರ ಜು.1ರಂದು ಜನಿಸಿದ ರಾಯ್, 1962ರಲ್ಲಿ ಅಂದೇ ನಿಧನರಾದರು. ಅಸಾಧಾರಣ ವೈದ್ಯರಾಗಿದ್ದ ಅವರ ಗಣನೀಯ ಸೇವೆ ಪರಿಗಣಿಸಲು 1961ರ ಫೆ. 4ರಂದು ಕೇಂದ್ರ ಸರ್ಕಾರ ‘ಭಾರತರತ್ನ’ ಪ್ರಶಸ್ತಿ ನೀಡಿ ಗೌರವಿಸಿತ್ತು. ಮಾತ್ರವಲ್ಲ, ಅವರ ಬದುಕು ಹಾಗೂ ಸೇವೆಯ ನೆನಪಿಗಾಗಿ 1991ರ ಜು.1ರಂದು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಘೋಷಿಸಿತು. ಅಪ್ರತಿಮ ವೈದ್ಯರಾಗಿದ್ದ ಡಾ. ರಾಯ್, ತಮ್ಮ ದೂರದೃಷ್ಟಿಯ ನಿಲುವುಗಳಿಂದ ವೈದ್ಯಲೋಕಕ್ಕೆ ಅವಿಸ್ಮರಣೀಯ ಕೊಡುಗೆ ಕೊಟ್ಟರು. ಮೇಲು- ಕೀಳು ಎನ್ನದೆ, ಜಾತಿಭೇದ ಮಾಡದೆ ಎಲ್ಲರನ್ನೂ ಒಂದೇ ರೀತಿ ನೋಡಿದ ಜನರ ಮೆಚ್ಚುಗೆ ಗಳಿಸಿದ್ದರು.

ವೈದ್ಯರು ಸಾಮಾನ್ಯವಾಗಿ ಸುದೀರ್ಘ ಕೆಲಸ ಮತ್ತು ರೋಗಿಗಳ ಭಾವನೆಗಳಿಗೆ ಸ್ಪಂದಿಸುವುದರ ಜತೆಗೆ ಚಿಕಿತ್ಸೆ ನೀಡುವುದು. ಗಂಭೀರ ಸ್ವರೂಪದ ಕಾಯಿಲೆಗಳಿಗೆ ಚಿಕಿತ್ಸೆ ನೀಡುವುದು ಸವಾಲಾಗಿರುತ್ತದೆ.
ಕೋವಿಡ್ ಅಬ್ಬರದಿಂದ ಜಗತ್ತು ತಲ್ಲಣಗೊಂಡಿದ್ದರೂ ದೈವಸ್ವರೂಪಿಗಳಂತೆ ಪ್ರಾಣವನ್ನೇ ಒತ್ತೆ ಇಟ್ಟು ಸೇವೆ ನೀಡುತ್ತಿದ್ದಾರೆ ವೈದ್ಯರು. ಆ ಮೂಲಕ ‘ವೈದ್ಯೋ ನಾರಾಯಣ ಹರಿಃ’ ಎಂಬ ಮಾತಿಗೆ ಅರ್ಥ ತುಂಬಿದ್ದಾರೆ. ವೈದ್ಯರ ನಿಸ್ವಾರ್ಥ ಸೇವೆಯಿಂದ ಜು. 1ರ ವೈದ್ಯರ ದಿನ ಸಾರ್ಥಕತೆ ಪಡೆದುಕೊಂಡಿದೆ.
ವೈಯಕ್ತಿಕ ಜೀವನ ಮತ್ತು ಸಮುದಾಯಗಳಿಗೆ ವೈದ್ಯರ ಕೊಡುಗೆಗಳನ್ನು ಗುರುತಿಸಲು ವೈದ್ಯರ ದಿನವನ್ನು ಆಚರಿಸಲಾಗುತ್ತದೆ.

ಒಂದೊಂದು ದೇಶದಲ್ಲಿ ಒಂದೊಂದು ದಿನ ಆಚರಿಸಲಾಗುತ್ತದೆ. ಭಾರತದಲ್ಲಿ ಜು.1ರಂದು ಆಚರಿಸಲಾಗುತ್ತದೆ. ಆರೋಗ್ಯ ಕ್ಷೇತ್ರದ ಫಲಾನುಭವಿಗಳು ಹಾಗೂ ರೋಗಿಗಳು ಆಚರಿಸಬೇಕೆಂದು ಭಾವಿಸಲಾಗಿದ್ದರೂ ಸಾಮಾನ್ಯವಾಗಿ ಆರೋಗ್ಯ ಸಂಸ್ಥೆಗಳು ಆಚರಿಸುತ್ತವೆ. ವೈದ್ಯರ ಕೊಡುಗೆಗಳನ್ನು ಹಾಗೂ ಅವರ ಸೇವೆಯನ್ನು ಸ್ಮರಿಸುವ ದಿನವಾಗಿದೆ.

ರಾಷ್ಟ್ರೀಯ ವೈದ್ಯರ ದಿನದ ಮುನ್ನಾದಿನದಂದು ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳು, ಗ್ರಾಮಗಳು ಇತ್ಯಾದಿಗಳಲ್ಲಿ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಾಗುತ್ತದೆ.
ಸೆಮಿನಾರ್‌ಗಳನ್ನು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸುತ್ತದೆ. ವಿವಿಧ ವೈದ್ಯಕೀಯ ಕಾಲೇಜುಗಳು ಒಂದು ದಿನದ ಸಮ್ಮೇಳನ ಮತ್ತು ವೈದ್ಯಾಧಿಕಾರಿಗಳನ್ನು ಉದ್ದೇಶಿಸಿ ಸೆಮಿನಾರ್‌ಗಳನ್ನು ಆಯೋಜಿಸಲಾಗುತ್ತದೆ.

ರಾಷ್ಟ್ರೀಯ ವೈದ್ಯರ ದಿನಾಚರಣೆಯ ಮುನ್ನಾದಿನದಂದು ವಿವಿಧ ವೈದ್ಯಕೀಯ ಸಂಸ್ಥೆಗಳು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸುತ್ತವೆ. ಗಾಯಾಳುಗಳಲ್ಲಿ ವೈದ್ಯರ ಅದ್ಭುತ ಪ್ರಯತ್ನಗಳಿಗೆ ಪ್ರಶಸ್ತಿ ನೀಡುವುದು ರಾಷ್ಟ್ರೀಯ ವೈದ್ಯರ ದಿನದಂದು ಸಾಕ್ಷಿಯಾದ ಪ್ರಮುಖ ಘಟನೆಗಳಲ್ಲಿ ಒಂದಾಗಿದೆ.

ಸಾಮಾಜಿಕ ಮಾಧ್ಯಮ ಸೈಟ್‌ಗಳಲ್ಲಿ ವಿವಿಧ ಚಿತ್ರಗಳು, ಸಂದೇಶಗಳು, ಉಲ್ಲೇಖಗಳು ಮತ್ತು ಟ್ಯಾಗಿಂಗ್ ಚಟುವಟಿಕೆಗಳನ್ನು ವೀಕ್ಷಿಸಲಾಗುತ್ತದೆ.

ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಶೈಕ್ಷಣಿಕ ಸಾಲಯೋಜನೆ

0

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ, ಬಿ.ಆಯುಷ್, ಬಿ.ಆರ್ಕ್ ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ವ್ಯಾಸಂಗಕ್ಕಾಗಿ ಸಿಇಟಿ/ನೀಟ್ ಮೂಲಕ ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿಗಳಿಗೆ ‘ಅರಿವು’ ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದ ವೆಬ್‍ಸೈಟ್ www.kmdconline.karnataka.gov.in/ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಿಗಧಿಪಡಿಸುವ ಶುಲ್ಕದನ್ವಯ ನಿಗಮವು ವಿದ್ಯಾಭ್ಯಾಸ ಸಾಲವನ್ನು ಮುಂಚಿತವಾಗಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಂಜೂರು ಮಾಡಿ ನಂತರ ಮಂಜೂರಾದ ಹಣವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ಕಾಲೇಜಿಗೆ ನೇರವಾಗಿ ಪಾವತಿಸಲಾಗುತ್ತದೆ.

ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿದ ಅರ್ಜಿಯನ್ನು ಪ್ರಿಂಟ್‍ಔಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 04, ಸಿಇಟಿ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ಇಂಡೆಮ್ನಿಟಿ ಬಾಂಡ್ ಈ ಎಲ್ಲಾ ದಾಖಲಾತಿಗಳನ್ನು ಜುಲೈ, 20 ರೊಳಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ), ಮೌಲಾನ ಆಜಾದ್ ಭವನ, ಎಫ್‍ಎಂಸಿ. ಕಾಲೇಜು ಹತ್ತಿರ, ಮಡಿಕೇರಿ. ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ. 08272-220449 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಬಿ.ಎನ್.ನಾಗೇಂದ್ರ ಅವರು ತಿಳಿಸಿದ್ದಾರೆ.

ಮಾದಕದ್ರವ್ಯ ಸೇವನೆ ದುಷ್ಪರಿಣಾಮಗಳಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು

0

ಮಾದಕ ದ್ರವ್ಯ ಸೇವನೆಯಿಂದ ಎದುರಾಗುವ ಸಮಸ್ಯೆಗಳು ಮತ್ತು ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿ ಹಂತದಲ್ಲೇ ಅರಿವು ಮೂಡಿಸುವುದರಿಂದ ಇದರ ತಡೆ ಸಾಧ್ಯವಾಗುವುದು ಎಂದು 1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾನು.ಕೆ.ಎಸ್ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಅಬಕಾರಿ ಇಲಾಖೆ, ಸರ್ಕಾರಿ ಪದವಿಪೂರ್ವ ಕಾಲೇಜು, ಸೈನ್ಸ್ ಮೈದಾನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಣಿಕೆಯಿಂದ ಇಡೀ ಸಮಾಜದ ಮೇಲಾಗುವ ಹಾನಿ, ದುಷ್ಪರಿಣಾಮ ಕುರಿತು ಅರಿವು ಮೂಡಿಸಿ, ತಡೆಯುವ ಉದ್ದೇಶದಿಂದ 1989 ರಿಂದ ಪ್ರತಿ ವರ್ಷ ಜೂನ್ 26 ರಂದು ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ. ಈ ದಿನಾಚರಣೆಯ ಉದ್ದೇಶ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಗಳ ಕುರಿತು ವಿದ್ಯಾರ್ಥಿಗಳು, ಯುವಜನತೆ ಅರ್ಥ ಮಾಡಿಕೊಳ್ಳಬೇಕು ಎಂದರು.

ಹದಿವಯಸ್ಸಿನಲ್ಲಿ ಏನೋ ಶೋಕಿ, ನಟರ ಸ್ಟೈಲ್ ಅನುಕರಣೆ ಅಥವಾ ಆನಂದ ಪಡೆಯಲೆಂದು ಶುರುವಾದ ಮಾದಕ ವ್ಯಸನ ದುಶ್ಚಟವಾಗಿ ಪರಿವರ್ತನೆಯಾಗಿ ಇಡೀ ಜೀವನವ ದಿಕ್ಕು ದೆಸೆಯನ್ನು ದುರಂತಮಯವಾಗಿಸುತ್ತದೆ. ಆದ್ದರಿಂದ ಮಕ್ಕಳ ಹಂತದಲ್ಲೇ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ಮನದಟ್ಟು ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ ಮಾತನಾಡಿ, ನಟರು, ಶ್ರೀಮಂತರ ಮಕ್ಕಳು ಸೇರಿದಂತೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು ಕಂಡು ಬರುತ್ತಿದೆ. ಇದರ ದುಷ್ಪರಿಣಾಮಗಳನ್ನು ಅರ್ಥಮಾಡಿಕೊಂಡು ಎಚ್ಚರಿಕೆಯಿಂದ ಬದುಕುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಿದೆ. ಗಾಂಜಾ ಸೇರಿದಂತೆ ಯಾವುದೇ ರೀತಿಯ ಮಾದಕ ಸೇವನೆಯ ಪ್ರಕರಣಕ್ಕೆ ನ್ಯಾಯಾಲಯದಲ್ಲಿ ಜಾಮೀನು ಸಿಗುವುದಿಲ್ಲ. ಜೈಲೇ ಗತಿಯಾಗುವುದು. ಈ ವಿಷಯದಲ್ಲಿ ಕಾಯ್ದೆ ಕಠಿಣವಾಗಿದೆ. ನಿಮ್ಮ ನಂಬಿದ ಇಡೀ ಕುಟುಂಬ ನೋವು ಅನುಭವಿಸಬೇಕಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಈ ದುಶ್ಚಟಗಳಿಂದ ದೂರವಿದ್ದು, ತಮ್ಮ ಸುತ್ತಮುತ್ತಲಿನಲ್ಲೂ ಈ ಬಗ್ಗೆ ಅರಿವು ಮೂಡಿಸಬೇಕೆಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅತಿ ಹೆಚ್ಚಿನ ಚೈತನ್ಯ, ಉತ್ಸಾಹ, ಹುಮ್ಮಸ್ಸು ಇರುತ್ತದೆ. ಹದಿವಯಸ್ಸಿನಲ್ಲಿ ಮನಸ್ಸು ವಿವಿಧ ರೀತಿಯ ಆಕರ್ಷಣೆಗೆ ಒಳಗಾಗುವುದು ಸಹಜವಾದರೂ, ಓದಿನ ಕಡೆ ಹೆಚ್ಚಿನ ಗಮನ ಕೊಡಬೇಕು. ವರದಿಗಳನ್ನು ನೋಡಿದರೆ ವಿದ್ಯಾರ್ಥಿ ಹಂತದಲ್ಲೇ ದುಶ್ಚಟಗಳಿಗೆ ಬಲಿಯಾಗುವವರ ಸಂಖ್ಯೆ ಹೆಚ್ಚಿದೆ. ಈ ವಯಸ್ಸಿನಲ್ಲಿ ದುಶ್ಚಟಗಳಿಗೆ ದಾಸರಾದರೆ ಇಡೀ ಜೀವನ ಹಾಳಾಗುತ್ತದೆ. ಸಣ್ಣ ಆಸೆಗಾಗಿ ಉನ್ನತವಾದ ಜೀವನವನ್ನು ಬಲಿಕೊಡುವುದು ಬೇಡವೆಂದು ಕಿವಿಮಾತು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯ ಕುರಿತು ಮನೆಯಿಂದಲೇ ಅರಿವು ಆರಂಭವಾಗಬೇಕು. ಜಿಲ್ಲೆಯಲ್ಲಿ 2022 ರಲ್ಲಿ ಗಾಂಜಾ ಸೇವನೆಯ 49 ಪ್ರಕರಣ ಮತ್ತು ಇತರೆ ಎನ್‍ಡಿಪಿಎಸ್ ಪ್ರಕರಣದಡಿ 11 ಪ್ರಕರಣದ ದಾಖಲಿಸಿ 12 ಕೆಜಿ 753 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಹಾಗೂ 54 ಪಾನಮತ್ತ ವಾಹನ ಚಾಲನೆ ಪ್ರಕರಣದಲ್ಲಿ ದಾಖಲಾಗಿದೆ. ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಾದಕ ದ್ರವ್ಯ ತಡೆ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ. ಮಾದಕ ದ್ರವ್ಯ ಸೇವನೆ ಬಗ್ಗೆ ಮೊದಲು ಯಾವುದೇ ಪುರಾವೆಗಳು ಇರುತ್ತಿರಲಿಲ್ಲ. ಆದರೆ ಈಗ ಟೆಸ್ಟ್ ಕಿಟ್ ಬಂದಿದೆ. ಮಾದಕ ದ್ರವ್ಯ ಸೇವನೆ ಮಾಡಿದ್ದರೆ ಇದರಿಂದ ಸುಲಭವಾಗಿ ತಿಳಿಯಬಹುದು. ಆದ್ದರಿಂದ ವಿದ್ಯಾರ್ಥಿಗಳು, ಯುವಜನತೆ ಎಚ್ಚರಿಕೆಯಿಂದ ಇರಬೇಕು. ಈ ಬಗ್ಗೆ ಭಯ ಮತ್ತು ಜಾಗೃತಿ ಎರಡೂ ಇರಬೇಕು ಎಂದರು.

ಜಿಲ್ಲಾ ಅಬಕಾರಿ ಅಧಿಕಾರಿ ಕ್ಯಾಪ್ಟನ್ ಅಜೀತ್ ಕುಮಾರ್ ಪಿಪಿಟಿ ಪ್ರದರ್ಶನ ಮೂಲಕ ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ(ಎನ್‍ಡಿಪಿಎಸ್) ಕುರಿತು ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು.

ಮನೋವೈದ್ಯರಾದ ಡಾ.ಸಂತೋಷ್.ಎಂ.ಎನ್ ಮಾದಕ ವಸ್ತುಗಳ ಸೇವನೆಯಿಂದಾಗು ಸಮಸ್ಯೆಗಳು, ಮಾದಕ ವಸ್ತು ವ್ಯಸನಕ್ಕೆ ಚಿಕಿತ್ಸೆ, ವ್ಯಸನ ತಡೆಗಟ್ಟಲು ಅನುಸರಿಸಬೇಕಾದ ಜೀವನ ಶೈಲಿ ಕುರಿತು ಉಪನ್ಯಾಸ ನೀಡಿದರು.

ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್, ಸಿಮ್ಸ್ ಮನೋವೈದ್ಯಕೀಯ ವಿಭಾಗದ ಡಾ.ಶ್ರೀಧರ್, ಜಿಲ್ಲಾ ಕುಷ್ಟ ರೋಗ ನಿವಾರಣೆ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಟಾನಾಧಿಕಾರಿ ಡಾ.ಶಮಾ ಬೇಗಂ ಫಕೃದ್ದೀನ್, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ವೈ.ಚಂದ್ರಶೇಖರ್, ಆರೋಗ್ಯ ಇಲಾಖೆಯ ದೊಡ್ಡವೀರಪ್ಪ, ಪ್ರತಿಮಾ ಇತರೆ ಸಿಬ್ಬಂದಿ ಪಾಲ್ಗೊಂಡಿದ್ದರು. ಪಾಲ್ಗೊಂಡಿದ್ದರು.

ಡೈಮಂಡ್ ಲೀಗ್ ನಲ್ಲಿ ನೀರಜ್ ಚೋಪ್ರಾಗೆ ಬೆಳ್ಳಿಪದಕ

0

ಒಲಿಂಪಿಕ್ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ನಿನ್ನೆ ಗುರುವಾರ ಸ್ಟಾಕ್‌ಹೋಮ್‌ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ನಲ್ಲಿ 89.94 ಮೀ. ಓಪನಿಂಗ್ ಥ್ರೋ ಮೂಲಕ ಹೊಸ ರಾಷ್ಟ್ರೀಯ ದಾಖಲೆ ಸೃಷ್ಟಿಸಿದ್ದಾರೆ. ಹಾಗೂ ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ.

ತುರ್ಕುದಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ ನೀರಜ್ 89.30 ಮೀ. ಜಾವೆಲಿನ್‌ ಎಸೆದು ತಮ್ಮದೇ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ.

ನಿನ್ನೆ ಗುರುವಾರ ನಡೆದ ಡೈಮಂಡ್ ಲೀಗ್‌ನಲ್ಲಿ ಗ್ರೆನಡಾದ ಹಾಲಿ ವಿಶ್ವ ಚಾಂಪಿಯನ್ ಆಂಡರ್ಸನ್ ಪೀಟರ್ಸ್ ತಮ್ಮ 3ನೇ ಪ್ರಯತ್ನದಲ್ಲಿ 90.31 ಮೀ ಜಾವೆಲಿನ್‌ ಎಸೆಯುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.

ಅಂತಿಮವಾಗಿ, ಚೋಪ್ರಾ ತನ್ನ ಮೊದಲ ಪ್ರಯತ್ನವನ್ನು ಉತ್ತಮಗೊಳಿಸಲು ವಿಫಲರಾಗಿದ್ದಾರೆ. ಮತ್ತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ.

ನೂತನ ಶಿಕ್ಷಣ ನೀತಿಯಲ್ಲಿ ಶಿಸ್ತಿನ ಕಲಿಕಾ ಕ್ರಮವಿದೆ-ಜೋಸ್

0

ನೂತನ ಶಿಕ್ಷಣ ನೀತಿ ಬಹು ಶಿಸ್ತಿನ ಕಲಿಕಾ ಕ್ರಮದ ಅಧ್ಯಯನದ ವಿಧಾನವನ್ನು ಹೊಂದಿದೆ. ಎಂದು ಬಳ್ಳಾರಿ ಕೃಷ್ಣದೇವರಾಯ ವಿ.ವಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ರಾಬರ್ಟ್ ಜೋಸ್ ತಿಳಿಸಿದರು.

ಅವರು ಇಂದು ಕುವೆಂಪು ವಿ.ವಿ ಇಂಗ್ಲಿಷ್ ಅಧ್ಯಯನ ಮಂಡಳಿ,ಹಾಗೂ ಇಂಗ್ಲಿಷ್ ಅಧ್ಯಾಪಕರ ವೇದಿಕೆ ಇವರ ಪ್ರಾಯೋಜಕತ್ವದಲ್ಲಿ ದಿನಾಂಕ 01.07. 2022 ರ ಶುಕ್ರವಾರದಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಇಂಗ್ಲಿಷ್ ಪಠ್ಯಕ್ರಮ ಕುರಿತುರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಇಂಗ್ಲಿಷ್ ಪಠ್ಯಕ್ರಮ ಕುರಿತು ಸಾಧ್ಯತೆಗಳು ಮತ್ತು ಸವಾಲುಗಳ ಬಗ್ಗೆ ಒಂದು ದಿನದ ಕಾರ್ಯಾಗಾರದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

ನೂತನ ಎಜುಕೇಶನ್ ಪಾಲಿಸಿಯಲ್ಲಿ ಅಧ್ಯಾಪಕರು ಒಂದು ರೀತಿಯ ಕತ್ತಲೆಯಲ್ಲಿ ಇದ್ದಾರೆ ಅವರೆಲ್ಲ ಈ ಸವಾಲಿಗಳಿಂದ ಹೊರಬರಬೇಕು. ಉತ್ತಮಗೊಳ್ಳುವ ಕಡೆ ಎಲ್ಲರು ಶ್ರಮಿಶಬೇಕಿದೆ. ಪಠ್ಯಗಳು,ಬೋಧನೆ, ಭೌತಿಕ ತರಗತಿಗಳು ಸವಲತ್ತುಗಳನ್ನು ಸರ್ಕಾರ ನೀಡಿದೆ, ನಾವು ಕೈ ಜೋಡಿಸಿ ಸಾದಿಸಬೇಕಿದೆ ಎಂದರು.

ನೂತನ ಪಾಲಿಸಿಯು ವಿದ್ಯಾರ್ಥಿಗಳು ಏನು ಕಲಿಯಬೇಕು ಎಂಬುದಕ್ಕಿಂತ ಹೇಗೆ ಕಲಿಯಬೇಕು. ಎಂಬುದನ್ನು ಕಲಿಸುವ ಉದ್ದೇಶವನ್ನು ಹೊಂದಿದೆ. ಭಾರತದ ಜ್ಞಾನಶಾಸ್ತ್ರ ಮೂಲಕ ಭಾರತದ ಪರಂಪರೆ, ತತ್ವಜ್ಞಾನವನ್ನು ಕಲಿಸುವ ಆಶಯವನ್ನು ಹೊಂದಿದೆ ಎಂದರು.

ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯ ಡಾ. ಧನಂಜಯ ಕೆ.ಬಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಡಾ. ಅವಿನಾಶ್ ಟಿ, ಕಾರ್ಯದರ್ಶಿ ಇಂಗ್ಲಿಷ್ ಅಧ್ಯಾಪಕರ ವೇದಿಕೆ ಇವರು ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಭಾಷಾಶಾಸ್ತ್ರದ ಬೋಧನೆ ಕುರಿತು ಡಾ. ರಾಮಪ್ರಸಾದ್ ಬಿ.ವಿ, ಇಂಗ್ಲಿಷ್ ಪ್ರಾಧ್ಯಾಪಕರು ಹಾಗೂ ಮೇಟಿ ಮಲ್ಲಿಕಾರ್ಜುನ, ಭಾಷಾಶಾಸ್ತ್ರದ ಪ್ರಾಧ್ಯಾಪಕರು ಇವರು ಪ್ರಬಂಧ ಮಂಡಿಸಿದರು.

ಡಾ ಬಿ ಎಚ್ ನಾಗ್ಯಾನಾಯ್ಕ, ಅಧ್ಯಕ್ಷರು , ಇಂಗ್ಲಿಷ್ ಅಧ್ಯಯನ ಮಂಡಳಿ, ಇವರು ಇಂಗ್ಲಿಷ್ ಪಠ್ಯಕ್ರಮವನ್ನು ರೂಪಿಸುವುದರ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಾಗಾರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ ಇಂಗ್ಲಿಷ್ ಪಠ್ಯಕ್ರಮದ ಸಾಧಕ ಭಾದಕಗಳು, ಬೋಧನೆ ಮತ್ತು ಕಲಿಕಾ ವಿಧಾನಗಳ ಕುರಿತು ಚರ್ಚೆ, ಭಾಷಾ ಶಾಸ್ತ್ರದ ವಿಷಯ ಬೋಧನೆ ಕುರಿತು ತರಬೇತಿ, ಪರೀಕ್ಷೆ ಮತ್ತು ಮೌಲ್ಯಮಾಪನ ವಿಧಾನಗಳ ಕುರಿತ ಕಾರ್ಯಾಗಾರ, ಪಠ್ಯಕ್ರಮವನ್ನು ರೂಪಿಸುವ ಬಗೆ ಮತ್ತು ಕಲಿಕಾ ವಿಧಾನಗಳ ಕುರಿತು ನುರಿತ ಸಂನ್ಮೂಲ ವ್ಯಕ್ತಿಗಳಿಂದ ಚರ್ಚೆ ನಡೆಯಿತು.
ಕಾರ್ಯಾಗಾರದಲ್ಲಿ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಎಮ್.ಕೆ. ವೀಣಾ ಉಪಸ್ಥಿತರಿದ್ದರು.

ಶೋಭಾ ಭಟ್ ಪ್ರಾರ್ಥಿಸಿದರು.
ನಿಸರ್ಗ ಕಾರ್ಯಕ್ರಮ ನಿರೂಪಿಸಿದರು.

ಅನುದಾನಿತ ಪ್ರೌಢ ಶಾಲೆಗಳಲ್ಲಿ ತೆರವಾಗಿರುವ ಹುದ್ದೆ ಗಳ ಭರ್ತಿ

0

ಅನುದಾನಿತ ಪ್ರೌಢಶಾಲೆಗಳಲ್ಲಿ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ತೆರವಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ.

ಅನುದಾನಿತ ಶಾಲೆಗಳಲ್ಲಿ 2015ರ ಡಿಸೆಂಬರ್ 31ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರ್ಥಿಕ ಇಲಾಖೆಯೂ ಸಹ ಅನುದಾನದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.

ಜೂನ್ 23ರ ಅನಧಿಕೃತ ಟಿಪ್ಪಣಿಯಲ್ಲಿ ಅನುದಾನಿತ ಪ್ರೌಢಶಾಲೆಗಳಲ್ಲಿ 2015ರ ಡಿಸೆಂಬರ್ 31ರವರೆಗೆ ವಿವಿಧ ಕಾರಣಗಳಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸಲು ಆರ್ಥಿಕ ಇಲಾಖೆಯು ಸಹಮತಿಯನ್ನು ನೀಡಿದೆ.

ಗರ್ಭಸ್ಥ ಮಗುವನ್ನ ದತ್ತು ಸ್ವೀಕರಿಸುವಂತಿಲ್ಲ

0

ಗರ್ಭದಲ್ಲಿರುವ ಮಗುವನ್ನು ದತ್ತು ತೆಗೆದುಕೊಳ್ಳುವಂತಿಲ್ಲ ಎಂದು ಪಂಜಾಬ್,ಹರಿಯಾಣ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪು ನೀಡಿದೆ.

ಪಟಿಯಾಲ ನಿವಾಸಿ ಪೂಜಾ ರಾಣಿ ಎಂಬ ಮಹಿಳೆ ದತ್ತು ಪಡೆದ ಪೋಷಕರಿಂದ ತನ್ನ ನವಜಾತ ಶಿಶುವನ್ನು ಮರಳಿ ಕೊಡಿಸಬೇಕೆಂದು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ನನ್ನ ಮಗು ಗರ್ಭದಲ್ಲಿದ್ದಾಗಲೇ ಅದನ್ನು ದತ್ತು ಪಡೆಯಲು ದಂಪತಿಗಳಿಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ನಾನು ಕೂಡ ಸಮ್ಮತಿಸಿದ್ದೆ. ಮಗು 23 ಮೇ 2022 ರಂದು ಜನಿಸಿದಾಗಿನಿಂದ ದಂಪತಿಗಳ ಬಳಿಯೇ ಇದೆ. ಮಗುವನ್ನು ದತ್ತು ಪಡೆದಿರುವ ಯಾವುದೇ ನೋಂದಾಯಿತ ಪ್ರಮಾಣಪತ್ರವನ್ನು ಹೊಂದಿಲ್ಲ. ನನ್ನ ಮಗುವನ್ನು ತನಗೆ ಮರಳಿ ಕೊಡಿಸಬೇಕೆಂದು ಮಹಿಳೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆಯ ನಂತರ ಮಗುವನ್ನು ವಾಪಸ್​ ನೀಡಲು ದಂಪತಿಗೆ ಕೋರ್ಟ್​ ತಾಕೀತು ಮಾಡಿದೆ. ಹಿಂದೂ ದತ್ತು ಸ್ವೀಕಾರ ಕಾಯ್ದೆಯಲ್ಲಿ ಅಂತಹ ಯಾವುದೇ ಅವಕಾಶವಿಲ್ಲ. ಇದು ಕಾನೂನು ಬಾಹಿರ. ದತ್ತು ಸ್ವೀಕಾರಕ್ಕೆ ಸಂಬಂಧಿಸಿದಂತೆ ಯಾವುದೇ ನೋಂದಾಯಿತ ದಾಖಲೆ ಇಲ್ಲದಿದ್ದಲ್ಲಿ ಮಗುವನ್ನು ಮೂಲ ಪೋಷಕರಿಗೆ ಒಪ್ಪಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಮಗುವನ್ನು ಅವರ ಮೂಲ ಪೋಷಕರಿಗೆ ಹಸ್ತಾಂತರಿಸುವಂತೆ ನ್ಯಾಯಾಲಯವು ಆದೇಶಿಸಿದೆ.

ಸಕ್ರೆಬೈಲ್ ಆನೆ ಬಿಡಾರಕ್ಕೆ ಬೋಟಿಂಗ್ ಮೆರುಗು

0

ಶಿವಮೊಗ್ಗ ಸಮೀಪದ ಸಕ್ರೆಬೈಲು ಆನೆಗಳ ಬಿಡಾರಕ್ಕೆ ಹೊಂದಿಕೊಂಡಿರುವ ತುಂಗಾ ಜಲಾಶಯದ ಹಿನ್ನೀರಿನ ಪ್ರದೇಶ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಕ್ರಿಯೋಯೋಜನೆಯೊಂದನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.
ಅವರು ಇಂದು ಸಕ್ರೆಬೈಲು ಆನೆಗಳ ಬಿಡಾರಕ್ಕೆ ಹೊಂದಿಕೊಂಡಿರುವ ತುಂಗಾ ಹಿನ್ನೀರಿನಲ್ಲಿ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ ದೋಣಿವಿಹಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ನಿಕಟಪೂರ್ವ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪನವರು ಈ ಹಿಂದೆಯೇ ಈ ಪ್ರದೇಶದ ಅಭಿವೃದ್ಧಿಗೆ ಸುಮಾರು 20.00ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಉದ್ದೇಶಿತ ಕಾಮಗಾರಿಗಳನ್ನು ಶೀಘ್ರದಲ್ಲಿ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ನಿಗಧಿಪಡಿಸಿದ ಕಾಲಮಿತಿಯಲ್ಲಿ ಇಲ್ಲಿನ ಅಭಿವೃದ್ಧಿ ಕಾಮಗಾರಿಗಳು ಆರಂಭಗೊಳ್ಳದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಶಿವಮೊಗ್ಗ ಜಿಲ್ಲೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ನಿರೀಕ್ಷೆಗೆ ಮೀರಿದ ಪ್ರಗತಿ ಸಾಧಿಸಲು ವಿಫುಲ ಅವಕಾಶಗಳಿರುವುದನ್ನು ಗುರುತಿಸಲಾಗಿದೆ. 460ಕೋಟಿ ರೂ.ಗಳ ವೆಚ್ಚದಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ಯೋಜನೆ, 1 ಕೋಟಿ ರೂ.ವೆಚ್ಚದಲ್ಲಿ ಹೊಸನಗರದ ಕೋಟೆ, 2ಕೋಟಿ ರೂ.ಗಳ ವೆಚ್ಚದಲ್ಲಿ ಕವಲೇದುರ್ಗ, 2ಕೋಟಿ ರೂ.ಗಳ ವೆಚ್ಚದಲ್ಲಿ ಶಿವಪ್ಪನಾಯಕನ ಅರಮನೆ, ಅಕ್ಕಮಹಾದೇವಿ ಜನ್ಮಸ್ಥಳ ಉಡುಗಣಿ, ವಿಶೇಷವಾಗಿ ವಿಶ್ವವಿಖ್ಯಾತ ಜೋಗ ಜಲಪಾತದ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಈಗಾಗಲೇ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲಾಗಿದೆ ಎಂದರು.

ಅಲ್ಲದೇ ಇಲ್ಲಿನ ಲಯನ್ ಸಫಾರಿಯ ವಿಸ್ತೃತ ಅಭಿವೃದ್ಧಿ ಕಾವiಗಾರಿಗಳಿಗೆ ಕೇಂದ್ರ ಸರ್ಕಾರವು ಅಗತ್ಯ ಅನುದಾನ ಬಿಡುಗಡೆ ಮಾಡಿ ಮಂಜೂರಾತಿ ನೀಡಿದೆ. ಖಾಸಗಿ ಸಹಭಾಗಿತ್ವದಲ್ಲಿ ಕೊಲ್ಲೂರು-ಕೊಡಚಾದ್ರಿ ನಡುವೆ ಸಂಪರ್ಕ ಕಲ್ಪಿಸುವ ಕೇಬಲ್‌ಕಾರ್ ಅಳವಡಿಸುವ 1000ಕೋ.ವೆಚ್ಚದ ಕಾಮಗಾರಿಗೆ ಮಂಜೂರಾತಿ ದೊರೆತಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಹೊಸನಗರ ಮತ್ತು ಕೊಲ್ಲೂರಿಗೆ ೨ಘಂಟೆಗಳ ಸುದೀರ್ಘ ಹಾದಿಯಿದೆ. ಇದನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಕೇಂದ್ರ ಸರ್ಕಾರವು ಘೋಷಿಸಿದೆ. ಇದರಿಂದಾಗಿ ಹೊಸನಗರ ಮತ್ತು ಕೊಲ್ಲೂರು ನಡುವೆ ನೇರ ರಸ್ತೆ ಸಂಪರ್ಕ ಕಲ್ಪಿಸಿ 15 ನಿಮಿಷದಲ್ಲಿ ಪ್ರಯಾಣ ಪೂರ್ಣಗೊಳಿಸುವ 400 ಕೋಟಿ ರೂ.ಗಳ ಯೋಜನೆಗೆ ಸರ್ಕಾರವು ಈಗಾಗಲೆ 150 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿದೆ ಎಂದರು.

ಪ್ರಸ್ತುತ ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳಿಂದಾಗಿ ಕೆಲವೇ ವರ್ಷಗಳಲ್ಲಿ ಶಿವಮೊಗ್ಗ ಜಿಲ್ಲೆಯ ಭೌಗೋಳಿಕ ಚಿತ್ರಣವೇ ಬದಲಾಗಿ, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದ ಆಕರ್ಷಣೀಯ ಕೇಂದ್ರವಾಗಿ ರೂಪುಗೊಳ್ಳಲಿದೆ. ಮಾತ್ರವಲ್ಲ ದಿನಂಪ್ರತಿ ಸಹಸ್ರಾರು ಸಂಖ್ಯೆಯ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ ಎಂದವರು ನುಡಿದರು.

ದೂರದೃಷ್ಠಿಯ ಹಾಗೂ ಇಚ್ಚಾಶಕ್ತಿ ಹೊಂದಿರುವ ಜನಪ್ರತಿ ಇದ್ದಲ್ಲಿ ನಿರೀಕ್ಷಿತ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗಲಿದೆ. ಪ್ರಸ್ತುತ ಸಕ್ರೆಬೈಲಿನ ಹಿನ್ನೀರಿನ ದೋಣಿವಿಹಾರ ಮತ್ತು ಇಲ್ಲಿನ ಪ್ರಾಕೃತಿಕ ಸೊಬಗು ಅತ್ಯಾಕರ್ಷಕವಾಗಿದ್ದು, ಪ್ರವಾಸಿಗರನ್ನು ಸೆಳೆಯುವುದರಲ್ಲಿ ಸಂಶಯವಿಲ್ಲ. ಈ ದೋಣಿ ವಿಹಾರ ಕೇಂದ್ರವು ಅತ್ಯಲ್ಪ ಕಾಲದಲ್ಲಿ ಪೂರ್ಣಪ್ರಮಾಣದಲ್ಲಿ ಅಭಿವೃದ್ಧಿಗೊಂಡು ಕಾರ್ಯನಿರ್ವಹಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಮಾತನಾಡಿ, ಪ್ರವಾಸೋದ್ಯಮ ಕ್ಷೇತ್ರದಲ್ಲಿ ದೊಡ್ಡಪ್ರಮಾಣದಲ್ಲಿ ಉದ್ಯೋಗಾವಕಾಶಗಳಿವೆ. ಬಹುತೇಕ ರಾಷ್ಟçಗಳು ಪ್ರವಾಸೋದ್ಯಮವನ್ನೇ ಪ್ರಮುಖ ಆದಾಯದ ಮೂಲವನ್ನಾಗಿ ಅವಲಂಬಿಸಿವೆ ಎಂದರು.

ವಿಧಾನ ಪರಿಷತ್ ಸದಸ್ಯ ಆರ್.ರುದ್ರೇಗೌಡ ಅವರು ಮಾತನಾಡಿ, ಸಂಸದ ದೂರದೃಷ್ಠಿಯ ಚಿಂತನೆ, ಮತ್ತು ಆಲೋಚನೆಗಳ ಫಲಶೃತಿಯಿಂದಾಗಿ ಇಂತಹ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸುವುದು ಸಾಧ್ಯವಾಗಿದೆ ಎಂದರು.
ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಐ.ಎಂ.ನಾಗರಾಜ್, ಸಕ್ರೆಬೈಲಿನ ವ್ಯವಸ್ಥಾಪಕ ಎ.ಪಿ.ಕಿರಣ್, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ನ ನಿರ್ದೇಶಕ ರಾಜೇಶ್ ಕಾಮತ್, ಜ್ಯೋತಿಪ್ರಕಾಶ್, ಬಳ್ಳೆಕರೆ ಸಂತೋಷ್, ಮಾಲತೇಶ್ ಸೇರಿದಂತೆ ನಿಗಮದ ಸದಸ್ಯರು, ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಜಯಶ್ರೀ, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಉದ್ಯಮಿ ಸ್ನೇಹಿ ರಾಜ್ಯಗಳ ಟಾಪ್ 7 ರ ಪಟ್ಟಿಯಲ್ಲಿ ರಾರಾಜಿತ ಕರ್ನಾಟಕ

0

ಆಂಧ್ರಪ್ರದೇಶ, ಗುಜರಾತ್‌, ತೆಲಂಗಾಣ, ಹರ್ಯಾಣ ಹಾಗೂ ಕರ್ನಾಟಕ ರಾಜ್ಯಗಳು ದೇಶದಲ್ಲೇ ಅತ್ಯಂತ ಉತ್ತಮ ಉದ್ಯಮಸ್ನೇಹಿ ವಾತಾವರಣ ಹೊಂದಿರುವ ಐದು ರಾಜ್ಯಗಳಾಗಿ ಹೊರಹೊಮ್ಮಿವೆ.

ಕೇಂದ್ರ ವಿತ್ತ ಹಾಗೂ ವಾಣಿಜ್ಯ ಸಚಿವಾಲಯ 2022ನೇ ಸಾಲಿನ ಉದ್ಯಮಸ್ನೇಹಿ ರಾಜ್ಯಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಈ ರಾಜ್ಯಗಳು ಉನ್ನತ ಸ್ಥಾನ ಪಡೆದಿವೆ.
ಉದ್ಯಮಸ್ನೇಹಿ ವಾತಾವರಣವನ್ನು ಅಳೆಯಲು ಈ ಬಾರಿ ಉದ್ಯಮ ಸುಧಾರಣೆ ಕ್ರಿಯಾಯೋಜನೆ (ಬಿಆರ್‌ಎಪಿ)ಗೆ ಅನುಗುಣವಾಗಿ 15 ವಿಭಾಗಗಳನ್ನು ಮಾಡಿ ರಾಜ್ಯಗಳಿಗೆ ರಾರ‍ಯಂಕಿಂಗ್‌ ನೀಡಲಾಗಿದೆ. ಅದರಲ್ಲಿ ಕರ್ನಾಟಕವು ‘ಈಸ್‌ ಆಫ್‌ ಡೂಯಿಂಗ್‌ ಬಿಸಿನೆಸ್‌’ ವಿಭಾಗದಲ್ಲಿ ಐದನೇ ಸ್ಥಾನ ಪಡೆದಿದೆ. ಉದ್ದಿಮೆಗಳಿಗೆ ಮಾಹಿತಿಯ ಲಭ್ಯತೆ, ಏಕಗವಾಕ್ಷಿ ವ್ಯವಸ್ಥೆ, ಕಾರ್ಮಿಕ ಹಾಗೂ ಭೂಸುಧಾರಣೆ ಮುಂತಾದ ಅಂಶಗಳನ್ನು ರ‍್ಯಾಂಕಿಂಗ್‌ಗೆ ಪರಿಗಣಿಸಲಾಗಿದೆ.

ಟಾಪ್‌ 7 ಉದ್ಯಮಸ್ನೇಹಿ ರಾಜ್ಯಗಳು
ಆಂಧ್ರಪ್ರದೇಶ
ಗುಜರಾತ್‌
ತೆಲಂಗಾಣ
ಹರ್ಯಾಣ
ಕರ್ನಾಟಕ
ಪಂಜಾಬ್‌
ತಮಿಳುನಾಡು

ಪ್ರಿ ಪೆಯ್ಡ್ ಗ್ರಾಹಕರಿಗೆ ಬಿಎನ್ ಎಲ್ ಬೃಹತ್ ಕೊಡುಗೆ?

ಬಿಎಸ್‌ಎನ್‌ಎಲ್ ಮತ್ತೊಂದು ಭರ್ಜರಿ ಕೂಡುಗೆ ಘೋಷಿಸಿದೆ. ಪ್ರೀ ಪೇಯ್ಡ್ ಗ್ರಾಹಕರಿಗೆ ವಾರ್ಷಿಕ ಪ್ಲಾನ್ ಘೋಷಿಸಿದೆ. ಈ ಪ್ಲಾನ್ ಅಡಿಯಲ್ಲಿ ಒಂದು ವರ್ಷದ ವರೆಗೆ ಉಚಿತ ಕರೆ ಹಾಗೂ 600 ಜಿಬಿ ಉಚಿತ ಡೇಟಾ ಸಿಗಲಿದೆ. 365 ದಿನಗಳ ವರೆಗೆ ಯಾವುದೇ ವ್ಯಾಲಿಟಿಡಿ, ರಿಚಾರ್ಜ್ ತಲೆನೋವು ದೂರವಾಗಲಿದೆ.

ಈ ವಾರ್ಷಿಕ ಪ್ಲಾನ್‌ನಲ್ಲಿ ಹಲವು ಸೌಲಭ್ಯಗಳಿವೆ. ಗ್ರಾಹಕರು 1,999 ರೂಪಾಯಿ ರೀಚಾರ್ಜ್ ಮಾಡಿದರೆ ಬಿಎಸ್‌ಎನ್‌ಎಲ್ ವಾರ್ಷಿಕ ಪ್ಲಾನ್ ಆಯಕ್ಟೀವೇಟ್ ಆಗಲಿದೆ. 365 ದಿನ ಅನ್‌ಲಿಮಿಟೆಡ್ ಕಾಲ್, ಉಚಿತ 100 ಎಸ್‌ಎಂಎಸ್, ಹಾಗೂ 600 ಜಿಬಿ ಉಚಿತ ಡೇಟಾಸಿಗಲಿದೆ.
ಹಲವು ಆಫರ್‌ಗಳಲ್ಲಿ ಪ್ರತಿ ದಿನ 1, 1.5 ಅಥವಾ 3 ಜಿಬಿ ಗರಿಷ್ಠ ಬಳಕೆಗೆ ಅವಕಾಶವಿರುತ್ತದೆ. ಹೆಚ್ಚುವರಿ ಡೇಟಾಗೆ ಮತ್ತೆ ಹೆಚ್ಚುವರಿ ರೀಚಾರ್ಜ್ ಮಾಡಿಕೊಳ್ಳಬೇಕು. ಆದರೆ ಬಿಎಸ್‌ಎನ್‌ಎಲ್ ವಾರ್ಷಿಕ ಪ್ಲಾನ್ ರಿಚಾರ್ಜ್ ಮಾಡಿದರೆ ಗ್ರಾಹಕರು 600 ಜಿಬಿ ಡೇಟಾವನ್ನು ಹೇಗೆ ಬೇಕಾದರು ಉಪಯೋಗಿಸಿಕೊಳ್ಳಬಹುದು.
ಸ್ವದೇಶಿ 4ಜಿ ನೆಟ್‌ವರ್ಕ್ ಸೇವೆ ಬಿಎಸ್‌ಎನ್‌ಎಲ್‌ ಮೂಲಕ ಆರಂಭವಾಗಲಿದೆ.

ಆಗಸ್ಟ್ 15 ರಂದು ಬಿಎಸ್‌ಎನ್‌ಎಲ್ 4ಜಿ ಸೇವೆ ಆರಂಭಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ದೇಶಾದ್ಯಂತ 2343 ಟವರ್‌ಗಳಿಗೆ (ಸೈಟ್ಸ್‌) ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌, ಮಾಹಿತಿ ತಂತ್ರಜ್ಞಾನ ಮತ್ತು ಸಂಹವನ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.
ಭಾರತೀಯ ಎಂಜಿನಿಯರ್‌ಗಳು ಮತ್ತು ವಿಜ್ಞಾನಿಗಳಿಂದಲೇ ಅಭಿವೃದ್ಧಿಪಡಿಸಲಾಗಿರುವ ದೇಶೀಯ 4ಜಿ ನೆಟ್‌ವರ್ಕ್ ಸೇವೆ ಇನ್ನು ಕೆಲವೇ ವಾರಗಳಲ್ಲಿ ಆರಂಭವಾಗಲಿದೆ.

ಬಿಎಸ್‌ಎನ್‌ಎಲ್‌ ಮೂಲಕ ದೇಶದ ಜನರಿಗೆ ಈ ಸೇವೆ ಲಭ್ಯವಾಗಲಿದೆ. ಇದಕ್ಕಾಗಿ ವಿವಿಧ ರಾಜ್ಯಗಳಲ್ಲಿ ಮೊದಲ ಹಂತದಲ್ಲಿ 2400 ಕೋಟಿ ರು.ಗೂ ಹೆಚ್ಚು ಮೊತ್ತದಲ್ಲಿ ಒಟ್ಟು 2343 ಟವರ್‌ಗಳನ್ನು 4ಜಿಗೆ ಉನ್ನತೀಕರಿಸಲಾಗುತ್ತಿದೆ. ಇದಕ್ಕೆ ಸ್ಥಳಾವಕಾಶವನ್ನೂ ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದರು.

600 ಜಿಜಿ ಡೆಟಾ ಬದಲಾಗಿ 670 ಜಿಬಿ ಡೆಟಾ ಸೌಲಭ್ಯ ನೀಡಿದ್ದಲ್ಲಿ ಬಿಎಸ್ ಎನ್ ಎಲ್ ಉಳಿದ ಎಲ್ಲಾ ಕಂಪನಿಗಳನ್ನೂ ಸೈಡ್ ಹೊಡೆಯಬಹುದೆನೋ?…