Tuesday, March 10, 2026
Tuesday, March 10, 2026
Home Blog Page 1523

ಸುಟ್ಟ ಟೀಸಿ ಬದಲಾವಣೆ ಪ್ರಕ್ರಿಯೆ ಶೇ80 ಪ್ರಗತಿಯಾಗಿದೆ- ಸುನೀಲ್ ಕುಮಾರ್

0

ರೈತರ ಟಿಸಿ ಸುಟ್ಟ 24 ಯೊಳಗೆ ಟಿಸಿ ಬದಲಾವಣೆ ಮಾಡುವಂತಹ ದಾಖಲೆಯ ನಿರ್ಧಾರ ಸೇರಿದಂತೆ ವಿವಿಧ ಹೊಸ ಯೋಜನೆಗಳ ಮೂಲಕ ರಾಜ್ಯದ ವಿದ್ಯುತ್ ಸರಬರಾಜಿನಲ್ಲಿ ಪ್ರಗತಿಯನ್ನು ಸಾಧಿಸಲಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್‍ಕುಮಾರ್ ತಿಳಿಸಿದರು.

ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ವತಿಯಿಂದ ನಗರದ ಮಂಡ್ಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೆಸ್ಕಾಂ ನಗರ ವಿಭಾಗೀಯ ಕಚೇರಿ-2 ರ ಹಾಗೂ ಘಟಕ-6ರ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಅಭಿವೃದ್ದಿ ಒಂದು ನಿರಂತರ ಪ್ರಕ್ರಿಯೆಯಾಗಿದ್ದು ಇಂಧನ ಇಲಾಖೆಯಲ್ಲಿ ಅತ್ಯುತ್ತಮ ಸುಧಾರಣೆಗಳು ಆಗಿವೆ. ಗ್ರಾಮೀಣ ಭಾಗದಲ್ಲಿ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಹೊಂದಿರುವವರಿಗೆ ಉಚಿತ ವಿದ್ಯುತ್ ನೀಡುವ ‘ಬೆಳಕು’ ಯೋಜನೆಯಡಿ ಕೇವಲ 100 ದಿನಗಳ ಅವಧಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದರು.

ರೈತರ ಸುಟ್ಟ ಟಿಸಿ ಬದಲಾವಣೆ ಮಾಡುವುದು ದೊಡ್ಡ ಸವಾಲಿನ ಕೆಲಸವಾಗಿದ್ದು ಕೇವಲ 24 ಗಂಟೆಗಳಲ್ಲಿ ಸುಟ್ಟ ಟಿಸಿ ಬದಲಾಯಿಸುವ ನಿರ್ಧಾರವನ್ನು ನಮ್ಮ ಇಲಾಖೆ ಕೈಗೊಂಡು ಈ ಕುರಿತು ಅಭಿಯಾನ ನಡೆಸಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ 250 ಕಡೆ ಟಿಸಿ ಬ್ಯಾಂಕ್, 162 ಟಿಸಿ ರಿಪೇರಿ ಕೇಂದ್ರಗಳನ್ನು ತೆರೆಯಲಾಗಿದ್ದು, ಟಿಸಿ ಸುಟ್ಟ 24 ಗಂಟೆಯೊಳಗೆ ಟಿಸಿ ಬದಲಾಯಿಸುವ ಪ್ರಕ್ರಿಯೆಯಲ್ಲಿ ಶೇ.80 ರಿಂದ 90 ಪ್ರಗತಿ ಸಾಧಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಳೆದ ತಿಂಗಳು ಟ್ರಾನ್ಸ್‍ಫಾರ್ಮರ್ ನಿರ್ವಹಣೆಗಾಗಿ 10 ದಿನಗಳ ವಿದ್ಯುತ್ ಪರಿವರ್ತಕ ಅಭಿಯಾನ ಕೈಗೊಂಡು ಎಲ್ಲ ಅಧಿಕಾರಿ/ನೌಕರರು ತಮ್ಮ ಸುತ್ತಮುತ್ತ ಇರುವ ಟಿಸಿ ಗಳನ್ನು ಪರಿಶೀಲಿಸಿ, ರಾಜ್ಯದಲ್ಲಿ ಸುಮಾರು 8 ರಿಂದ 9 ಲಕ್ಷ ಟಿಸಿಗಳ ನಿರ್ವಹಣೆ ಮಾಡುವ ಮೂಲಕ ಹೊಸ ದಾಖಲೆ ಮಾಡಲಾಗಿದೆ ಎನ್ನಬಹುದು.

ಬೇಸಿಗೆಯಲ್ಲಿ ವಿದ್ಯುತ್ ಕಡಿತ, ಲೋಡ್‍ಶೆಡ್ಡಿಂಗ್ ಆಗಲಿದೆ ಎಂಬ ಅನುಮಾನ ಜನರಲ್ಲಿ ಹೆಚ್ಚಿತ್ತು. ಆದ್ದರಿಂದ ಏಪ್ರಿಲ್, ಮೇ ತಿಂಗಳಲ್ಲಿ ಎದುರಾಗಬಹುದಾಗಿದ್ದ ಸವಾಲುಗಳ ಕುರಿತು ನವೆಂಬರ್, ಡಿಸೆಂಬರ್ ಮಾಹೆಯಲ್ಲೇ ಎಚ್ಚರಿಕೆ ವಹಿಸಲಾಗಿತ್ತು. ಬೇರೆ ರಾಜ್ಯಗಳಲ್ಲಿ ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಅಡಚಣೆಯಾಗಿರಬಹುದು. ಆದರೆ ನಮ್ಮ ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗಿ ವಿದ್ಯುತ್ ಅಡಚಣೆಯಾಗಿದಲ್ಲ. ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗದಂತೆ ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡು ಎಲ್ಲ ರೀತಿಯ ಕ್ರಮ ವಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಅಧಿಕಾರಿಗಳ ತಂಡ ಕೂಡ ವಿಶೇಷ ಪ್ರಯತ್ನ ಮಾಡುತ್ತಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿಯವರು ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ ಉಚಿತವಾಗಿ 75 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದು, ಲಕ್ಷಾಂತರ ಜನರು ಈ ಯೋಜನೆ ಉಪಯೋಗ ಪಡೆಯಲಿದ್ದಾರೆ.

ಜನಸ್ನೇಹಿ ವಿದ್ಯುತ್ ಉತ್ಪಾದನೆಗಾಗಿ ಹಸಿರು ವಿದ್ಯುತ್‍ಗೆ ಹೆಚ್ಚು ಒತ್ತು ನೀಡಿ, ಹೈಬ್ರಿಡ್ ಪಾರ್ಕ್ ನಿರ್ಮಾಣ ಯೋಜನೆಗೆ ತಯಾರಿ ನಡೆಸಲಾಗುತ್ತಿದೆ. 1 ಸಾವಿರ ಮೆಗಾವ್ಯಾಟ್ ಹಸಿರು ವಿದ್ಯುತ್ ಉತ್ಪಾದಿಸಲು ಸರ್ವೇ ಕಾರ್ಯ ಆರಂಭಿಸಲಾಗಿದೆ. ರೈತರ ಪಂಪ್‍ಸೆಟ್‍ಗಳಿಗೆ ಸೋಲಾರ್ ಮೂಲಕ ವಿದ್ಯುತ್ ನೀಡಲು 2 ಯೋಜನೆ ರೂಪಿಸಿದ್ದು, ಕುಸುಮ್ ಬಿ ಯೋಜನೆಯಡಿ ಮೊದಲ ಹಂತದಲ್ಲಿ ಸುಮಾರು 10 ಸಾವಿರ ವೈಯಕ್ತಿಕ ಫಲಾನುಭವಿಗಳಿಗೆ ಸೌಲಭ್ಯ ನೀಡಲು ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಹಾಗೂ ಫೀಡರ್‍ಗಳಿಗೆ ಸೋಲಾರ್ ಮೂಲಕ ವಿದ್ಯುತ್ ನೀಡುವ ಯೋಜನೆ ಕೂಡ ಪ್ರಗತಿಯಲ್ಲಿದ್ದು ರಾಜ್ಯದ ಜನತೆ ಈ ಎಲ್ಲ ಯೋಜನೆಗಳ ಸದುಪಯೋಗ ಪಡೆಯಬೇಕು.

ನಾವು ಶರಾವತಿಯಿಂದ ಶೇ.20 ವಿದ್ಯುತ್‍ನ್ನು ಪಡೆಯುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ವಿದ್ಯುತ್ ಅಡಚಣೆಯಾಗದಂತೆ ಎಲ್ಲ ರೀತಿಯ ಕ್ರಮ ವಹಿಸಲಾಗುತ್ತಿದ್ದು ಈ ನಿಟ್ಟಿನಲ್ಲಿ ಜಿಲ್ಲೆಯ ಶಿಕಾರಿಪುರ, ಸಾಗರ, ಸೊರಬ, ತೀರ್ಥಹಳ್ಳಿ ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ ಒಟ್ಟು 6 ಕಡೆಗಳಲ್ಲಿ 110 ಕೆವಿ ಸ್ಟೇಷನ್ ಮತ್ತು ಸಾಗರದ ನಾಡಮಂಚಾಲೆಯಲ್ಲಿ 70 ಕೋಟಿ ವೆಚ್ಚದಲ್ಲಿ 200 ಕೆವಿ ಸ್ಟೇಷನ್ ಸ್ಥಾಪನೆಗೆ ಟೆಂಡರ್ ಆಗಿದೆ. ಮುಂದಿನ ತಿಂಗಳು ಗುದ್ದಲಿ ಪೂಜೆ ಸಹ ನಡೆಯಲಿದ್ದು ರಾಜ್ಯದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಹೊಸ ಪ್ರಗತಿಯನ್ನು ಕಾಣುತ್ತಿದ್ದೇವೆ ಎಂದರು.

ಮೆಸ್ಕಾಂ ನೌಕರರ ಸಂಘದ ಮೋಹನ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೆಸ್ಕಾಂ ಎಇಇ ವೀರೇಂದ್ರ ಹೆಚ್.ಆರ್. ಸ್ವಾಗತಿಸಿದರು.

ಮಹಾನಗರಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಸದಸ್ಯರಾದ ಲಕ್ಷ್ಮೀ ಶಂಕರನಾಯ್ಕ, ಕ್ರೀಡಾ ಪ್ರಾಧಿಕಾರದ ಕೆ.ಪಿ ಪುರುಷೋತ್ತಮ್, ಮೆಸ್ಕಾಂ ನಿರ್ದೇಶಕರಾದ ನಂಜುಂಡಸ್ವಾಮಿ, ಗಿರಿರಾಜ್, ದಿನೇಶ್, ಮುಖ್ಯ ಇಂಜಿನಿಯರ್, ಗುತ್ತಿಗೆದಾರರು, ಇತರೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗಾವಕಾಶಗಳು

0

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಸುಮಾರು 462 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆ ಅರ್ಜಿ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಕೃಷಿ ಇಲಾಖೆಯಲ್ಲಿ ಕೆಲಸ ಮಾಡುವ ಇಚ್ಛೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​ 25 ಆಗಿದೆ.

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಹುದ್ದೆಗಳಿಗೆ ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್​ 1 ಕಡೆಯ ದಿನಾಂಕವಾಗಿತ್ತು.
ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಜೂನ್​ 25ರವರೆಗೆ ವಿಸ್ತರಣೆ ಮಾಡಲಾಗಿದೆ.

ಅಭ್ಯರ್ಥಿಗಳಿಗೆ ಎರಡು ಹಂತದ ಆನ್​ಲೈನ್​​ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

10ನೇ ತರಗತಿಅಂಕಪಟ್ಟಿ
ಡಿಗ್ರಿ ಅಂಕಪಟ್ಟಿ
ಆಧಾರ ಕಾರ್ಡ್
ಜಾತಿ ಪ್ರಮಾಣ ಪತ್ರ
ಪೋಟೋ ಮತ್ತು ಸಹಿ
ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು ಮೊದಲಾದ ದಾಖಲಾತಿಗಳು ಇರತಕ್ಕದ್ದು.

ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – 1200 ರೂ
ಒಬಿಸಿ ವರ್ಗ ಅಭ್ಯರ್ಥಿಗಳಿಗೆ – 1200 ರೂ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ, ಅಂಗವಿಕಲ ಅಭ್ಯರ್ಥಿಗಳಿಗೆ- 500 ರೂ. ಶುಲ್ಕವಿರುತ್ತದೆ.

ಅಭ್ಯರ್ಥಿಗಳು ಶುಲ್ಕವನ್ನು ಆನ್​ಲೈನ್​ ಮುಖಾಂತರ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.

ಸಂಶೋಧಾನಸಕ್ತಿ ಮತ್ತು ಸರಳ ವ್ಯಕ್ತಿತ್ವದತೀನಂಶಂ-ಡಾ.ಕೇಶವ ಶರ್ಮ

0

ಕರ್ನಾಟಕದಲ್ಲಿ ಜಾನಪದ ಅಧ್ಯಯನ ಮತ್ತು ಸಂಶೋಧನೆಗೆ ನಿರ್ದಿಷ್ಟ ಕಾಯಕಲ್ಪ ನೀಡಿದ ಶ್ರೇಯಸ್ಸು ಪ್ರೊ. ತೀ.ನಂ. ಶಂಕರನಾರಾಯಣ ಅವರಿಗೆ ಸಲ್ಲಬೇಕಾಗುತ್ತದೆ ಎಂದು ಕುವೆಂಪು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ. ಕೆ. ಕೇಶವ ಶರ್ಮ ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ ಕನ್ನಡ ಭಾರತಿ ವಿಭಾಗದಿಂದ ವಿವಿಯ ಬಸವ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪ್ರೊ. ತೀ. ನಂ. ಶಂಕರನಾರಾಯಣ ಅವರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತೀ. ನಂ. ಶಂ. ತಮ್ಮ ಅಪಾರ ಜಾನಪದ ವಿದ್ವತ್ತನ್ನು ಎಳೆಯ ವಿದ್ಯಾರ್ಥಿ ತಲೆಮಾರಿಗೆ ಆಸಕ್ತಿಯುತವಾಗಿ ತಲುಪಿಸುವ ಮೂಲಕ ಜಾನಪದ ಸಂಶೋಧನಾ ಕ್ಷೇತ್ರವನ್ನು ಶ್ರೀಮಂತಗೊಳಿಸಿದರು. ಅತ್ಯಂತ ಸರಳ ವ್ಯಕ್ತಿತ್ವದ ಜೊತೆಗೆ ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತಿದ್ದ ಅವರು ಸಂಸ್ಥೆಗಳನ್ನು ಕಟ್ಟುವ ಕೆಲಸದಲ್ಲಿ ನಿಸ್ಸೀಮರು ಎಂದರು.

ತೀ.ನಂ. ಶಂ. ಒಡನಾಡಿಯಾಗಿದ್ದ ಡಾ. ಬಸವರಾಜ ನೆಲ್ಲಿಸರ ಮಾತನಾಡಿ ಕುವೆಂಪು ವಿವಿಯಲ್ಲಿ ಜಾನಪದ ಮ್ಯೂಸಿಯಂ ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲಬೇಕು. ಸಾಮಾನ್ಯರಲ್ಲಿ ಸಾಮಾನ್ಯರಾಗಿ ವರ್ತಿಸುತ್ತಿದ್ದ ಅವರು ಹಳ್ಳಿಹಳಿಗೆ, ಮನೆಮನೆಗೂ ತೆರಳಿ ಜಾನಪದ ವಸ್ತುಗಳು ಮತ್ತು ಪರಿಕರಗಳನ್ನು ಸಂಗ್ರಹಿಸಿ ಮ್ಯೂಸಿಯಂ ನಿರ್ಮಿಸಿದರು ಎಂದರು.

ಈ ಸಂಧರ್ಭದಲ್ಲಿ ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ವಿಭಾಗದ ಪ್ರೊ. ಶಿವಾನಂದ ಕೆಳಗಿನಮನಿ, ಪ್ರೊ. ಪ್ರಶಾಂತ ನಾಯಕ್, ಡಾ. ನೆಲ್ಲಿಕಟ್ಟೆ ಸಿದ್ಧೇಶ್ ಮಾತನಾಡಿದರು. ವಿವಿಯ ವಿವಿಧ ವಿಭಾಗಗಳ ಅಧ್ಯಾಪಕರು, ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು

ಕೋಮು ಸೌಹಾರ್ದತೆ ರಕ್ಷಿಸಲು ಸೀಎಂ ಗೆ ಗಣ್ಯರ ಪತ್ರ

0

ಕರ್ನಾಟಕದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿ, ನಾಡನ್ನು ಸರ್ವ ಜನಾಂಗದ ಶಾಂತಿ ತೋಟವಾಗಿ ಮರು ಸ್ಥಾಪಿಸುವಂತೆ ಒತ್ತಾಯಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಲವು ಗಣ್ಯರು ಪತ್ರ ಬರೆದಿದ್ದಾರೆ.

ಕೋಮು ಸೌಹಾರ್ದತೆಯ ವಿಷಯದಲ್ಲಿ ನಮ್ಮ ರಾಜ್ಯಕ್ಕೆ ಭವ್ಯ ಪರಂಪರೆಯಿದೆ. 1956 ರಲ್ಲಿ ಕರ್ನಾಟಕ ಏಕೀಕರಣವಾಯಿತು. ಆದರೆ ಕರ್ನಾಟಕದ ಮತೀಯ ಸೌಹಾರ್ದೆಯ ಇತಿಹಾಸ ಇದಕ್ಕಿಂತಲೂ ಹಳೆಯದು, 12 ನೇ ಶತಮಾನದಲ್ಲಿಯೇ ಕವಿ-ದಾರ್ಶನಿಕ ಬಸವಣ್ಣನವರ ಪ್ರಯತ್ನಗಳಿಂದ ಸಾಮಾಜಿಕ ಹಾಗೂ ಧಾರ್ಮಿಕ ಸುಧಾರಣೆಯಲ್ಲಿ ನಮ್ಮ ಕನ್ನಡ ನಾಡು ಸೌಹಾರ್ದೆಯ ಇತಿಹಾಸವನ್ನು ನಿರ್ಮಿಸಿದೆ.

ಸಮ್ಮಿಶ್ರ ಸಂಪ್ರದಾಯಗಳಿಗೆ ಹಿಂದು-ಮುಸ್ಲಿಂರನ್ನು ಒಳಗೊಂಡಂತೆ ಜನಸಮುದಾಯಗಳ ನಡುವೆ ಶಾಂತಿಯುತ ಸಹಬಾಳ್ವೆಗೆ ನಮ್ಮ ನಾಡಿನ ಇತಿಹಾಸ ಸಾಕ್ಷಿಯಾಗಿದೆ. ಈ ಭವಯ ಪರಂಪರೆಯ ಹಿನ್ನೆಲೆಯಲ್ಲಿ ನಮ್ಮ ರಾಷ್ಟ್ರಕವಿ ಕುವೆಂಪು ಅವರು ನೂರು ವರ್ಷಗಳಷ್ಟು ಹಿಂದೆಯೇ ಈ ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ಬಣ್ಣಿಸಿದ್ದಾರೆ ಎಂದಿದ್ದಾರೆ.

ಶಾಂತಿ, ಸಹಬಾಳ್ವೆ, ವೈವಿದ್ಯತೆ, ಬಹುತ್ವಕ್ಕೆ ಹಸರಾಗಿದ್ದ ಈ ನಾಡಿನಲ್ಲಿ ಇವುಗಳನ್ನೆಲ್ಲ ನಾಶಗೊಳಿಸುವಂತಹ ಇತ್ತೀಚಿನ ಬೆಳವಣಿಗೆಗಳನ್ನು ನೋಡಿ ಲಕ್ಷಾಂತರ ನಾಗರಿಕರಂತೆ ನಾವೂ ಸಹ ತೀವ್ರವಾಗಿ ವ್ಯಾಕುಲಗೊಂಡಿದ್ದೇವೆ. ಇಂಥ ತಪ್ಪು ನಡೆಗಳನ್ನು ಸರಿಪಡಿಸಲು ಈಗಲೂ ಅವಕಾಶವಿದ್ದು, ಅದಕ್ಕೆ ಅಗತ್ಯವಾದ ಸಲಹೆಗಳನ್ನು ಸರ್ಕಾರಕ್ಕೆ ನೀಡುವುದು ನಾಗರಿಕರಾದ ನಮ್ಮ ಕರ್ತವ್ಯವೆಂದು ಭಾವಿಸಿ ಪತ್ರ ಬರೆಯುತ್ತಿದ್ದೇವೆ ಎಂದು ಉಲ್ಲೇಖಿಸಿದ್ದಾರೆ.

ಸಂಕುಚಿತ ಮತೀಯವಾದಿಗಳು ಹಾಗೂ ದ್ವೇಷಪೂರಿತ ಕೆಲ ವ್ಯಕ್ತಿಗಳು ಮತ್ತು ಗುಂಪುಗಳು ಧರ್ಮ ಮತ್ತು ಜಾತೀಯ ಆಧಾರದಲ್ಲಿ ಅಲ್ಪಸಂಖ್ಯಾತರನ್ನು ಪ್ರತ್ಯೇಕಿಸಿ ದೂರವಿಡುವ ಹಾಗೂ ಅವರನ್ನು ದಮನಗೊಳಿಸುವ ಕೃತ್ಯಗಳಲ್ಲಿ ತೊಡಗಿರುವುದು ಆತಂಕದ ವಿಷಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಿಜಾಬ್ ವಿವಾದ ತಂಡದ ವಿದ್ಯಾರ್ಥಿನಿ ಕ್ಷಮೆಯಾಚಿಸಿ ಪ್ರವೇಶಕ್ಕೆ ಮನವಿ

0

ಹಿಜಾಬ್ ವಿವಾದದಿಂದ ರಾಜ್ಯಾದ್ಯಂತ ಸುದ್ದಿಯಾಗಿದ್ದ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಶ್ಚರ್ಯಕರ ಬೆಳವಣಿಗೆ ನಡೆದಿದೆ.

ಹಿಜಾಬ್ ಬೇಕು ಅಂತ ಪಟ್ಟು ಹಿಡಿದು ಕಾಲೇಜಿನ ವಿರುದ್ಧವೇ ಹೋರಾಟಕ್ಕೆ ಇಳಿದಿದ್ದ 15 ಮಂದಿ ವಿದ್ಯಾರ್ಥಿನಿಯರ ಪೈಕಿ ಒಬ್ಬಾಕೆ ಪ್ರಾಂಶುಪಾಲರ ಬಳಿ ಕ್ಷಮೆಯಾಚಿಸಿ ಕಾಲೇಜಿನ ನಿಯಮವನ್ನು ಅನುಸರಿಸಿ ಕಾಲೇಜಿಗೆ ಬರಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಮಂಗಳೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮೂವರು ವಿದ್ಯಾರ್ಥಿನಿಯರ ಪೈಕಿ ಒಬ್ಬಾಕೆ ಧಾರ್ಮಿಕ ಕಟ್ಟುಪಾಡುಗಳನ್ನು ಕಾಲೇಜಿನ ಒಳಗೆ ಅನುಸರಿಸದೇ, ಕಾಲೇಜಿನ ನಿಯಮಗಳನ್ನು ಪಾಲಿಸಿ ತರಗತಿಗೆ ಬರುವುದಾಗಿ ಪ್ರಾಂಶುಪಾಲರ ಬಳಿ ತನ್ನ ಹೆತ್ತವರ ಸಮ್ಮುಖದಲ್ಲಿ ಕ್ಷಮೆಯಾಚಿಸಿರುವುದು ಬೆಳಕಿಗೆ ಬಂದಿದೆ.

ತಮ್ಮನ್ನ ಚುನಾವಣೆಯಲ್ಲಿ ಬೆಂಬಲಿಸಲು ಪ್ರಮುಖ ಪಕ್ಷಗಳಿಗೆ ದ್ರೌಪದಿ ಮುರ್ಮು ಕರೆ

0

ರಾಷ್ಟ್ರಪತಿ ಹುದ್ದೆಗೆ ತನ್ನನ್ನು ಬೆಂಬಲಿಸಿ ಎಂದು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ,ಎನ್ ಸಿಪಿ ವರಿಷ್ಠ ಶರದ್ ಪವಾರ್ ಹಾಗೂ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿಗೆ ಕರೆ ಮಾಡಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ದ್ರೌಪದಿ ಮುರ್ಮು ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಕೇಂದ್ರ ಸಚಿವರ ಸಮ್ಮುಖದಲ್ಲಿ ರಾಷ್ಟ್ರಪತಿ ಚುನಾವಣೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ಕಾಂಗ್ರೆಸ್, ಟಿಎಂಸಿ ನೇತೃತ್ವದ ವಿಪಕ್ಷಗಳು ಹಿರಿಯ ಮುಖಂಡ ಯಶವಂತ ಸಿನ್ಹಾ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿವೆ.

ಪಿಎಂ ಬೆಂಗಳೂರು ಭೇಟಿ: ರಸ್ತೆಗಳ ಕಳಪೆ ಕಾಮಗಾರಿ ತನಿಖೆಗೆ ಸೀಎಂ ಸೂಚನೆ

0

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಕಳಪೆ ರಸ್ತೆಗಳನ್ನು ದುರಸ್ಥಿತಿಗೊಳಿಸಿದ್ದರ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಬಳಿಯ ರಸ್ತೆಯನ್ನು ಮೋದಿ ಅವರು ಬೇಸ್ ಕ್ಯಾಂಪಸ್ ಅನ್ನು ಉದ್ಘಾಟಿಸಲು ಭೇಟಿ ನೀಡುವ ಕೆಲವು ದಿನಗಳಷ್ಟೇ ರಸ್ತೆಯನ್ನು ಸರಿ ಮಾಡಿದ್ದರು. ಇದೀಗ ಕಳಪೆ ಕಾಮಗಾರಿಯ ಬಗ್ಗೆ ತನಿಖೆ ನಡೆಸುವಂತೆ, ಹಾಗೂ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರೌಂಡ್ ಟೇಬಲ್ ಸಂಸ್ಥೆಯ ಶೈಕ್ಷಣಿಕ ಪ್ರಗತಿ ಕಾರ್ಯ ಶ್ಲಾಘನೀಯ-ಡಾ.ಸರ್ಜಿ

0

ವಿದ್ಯಾರ್ಥಿಗಳ ಶಿಕ್ಷ ಣಕ್ಕೆ ಪೂರಕವಾಗುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ರೌಂಡ್‌ ಟೇಬಲ್‌ ಇಂಡಿಯಾ ಸಂಸ್ಥೆಯು ಶೈಕ್ಷ ಣಿಕ ವ್ಯವಸ್ಥೆಗೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿದೆ ಎಂದು ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ದುರ್ಗಿಗುಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಆಂಗ್ಲಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಊಟದ ಹಾಲ್‌ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 40 ವರ್ಷದ ಇತಿಹಾಸ ಹೊಂದಿರುವ ಸಂಸ್ಥೆ ಭಾರತದಲ್ಲಿಶಿಕ್ಷ ಣ ಮೂಲಕ ಸ್ವಾತಂತ್ರ ಎಂಬ ಧ್ಯೇಯದೊಂದಿಗೆ ಮಹತ್ತರ ಕೊಡುಗೆಯನ್ನು ದೇಶಕ್ಕೆ ನೀಡುತ್ತಿ ದೆ ಎಂದು ಹೇಳಿದರು.

ವಿಶೇಷವಾಗಿ ಸರಕಾರಿ ಶಾಲೆಗಳ ದುಸ್ಥಿತಿಯನ್ನು ಸಂಸ್ಥೆ ಸ್ವತಃ ಭೇಟಿ ನೀಡಿ ಕೂಲಂಕುಷವಾಗಿ ಪರಿಶೀಲನೆ ನಡೆಸಿ, ಕಟ್ಟಡ ನವೀಕರಣ, ಡೈನಿಂಗ್‌ ಹಾಲ್‌, ಬೆಂಚ್‌, ಕ್ಲಾಸ್‌ ರೂಂ, ಶೌಚಾಲಯ ನಿರ್ಮಿಸುವ ಮೂಲಕ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದೆ. ಪ್ರತಿ ವರ್ಷ ಭಾರತದಲ್ಲಿ450 ಕ್ಕೂ ಹೆಚ್ಚು ಕ್ಲಾಸ್‌ ರೂಂಗಳನ್ನು ಉದ್ಘಾಟನೆ ಮಾಡುತ್ತಿದೆ. ಜಿಲ್ಲೆಯಲ್ಲಿಈವರೆಗೂ 42 ಸರಕಾರಿ ಶಾಲೆಗಳ ಅಭಿವೃದ್ಧಿಗೆ ಕೈ ಜೋಡಿಸಿದೆ. ನಗರದ ಗಾಡಿಕೊಪ್ಪ ಸರಕಾರಿ ಪ್ರಾಥಮಿಕ ಶಾಲೆಯಲ್ಲಿಕ್ಲಾಸ್‌ ರೂಂಗಳನ್ನು ಉದ್ಘಾಟಿಸಲಾಗಿದೆ.

ಹೀಗೆ ಸರಾಸರಿ ದಿನವೊಂದಕ್ಕೆ ಒಂದೂವರೆ ಕೊಠಡಿಯನ್ನು ನಿರ್ಮಿಸಿ ಲೋಕಾರ್ಪಣೆ ಮಾಡುತ್ತಾ ಶಿಕ್ಷ ಣಕ್ಕೆ ನೆರವು ನೀಡುತ್ತಿರುವುದು ಶ್ಲಾಘನೀಯವಾದುದು ಎಂದರು.

ಕೇವಲ ಶಾಲೆಗಳ ಅಭಿವೃದ್ಧಿಗೆ ಮಾತ್ರ ಸೀಮಿತವಾಗದೇ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಹಾಗೂ ಸರಕಾರಿ ಆರೋಗ್ಯ ಕೇಂದ್ರಗಳ ಅಭಿವೃದ್ಧಿಯನ್ನೂ ಕೈಗೊಳ್ಳುತ್ತಿದೆ. ಕಳೆದ ಮೂರು ವರ್ಷಳ ಹಿಂದೆ ಪ್ರವಾಹ ಪೀಡಿತ ಬಡಾವಣೆಗಳಲ್ಲಿಟೈಪಾಯಿಡ್‌ ಉಚಿತ ಲಸಿಕಾ ಕಾರ್ಯಕ್ರಮವನ್ನು ಉಚಿತವಾಗಿ ಹಮ್ಮಿಕೊಂಡಿತ್ತು ಎಂದು ಹೇಳಿದರು.

ದುರ್ಗಿಗುಡಿಯ ಈ ಸರಕಾರಿ ಶಾಲೆಯೊಂದರಲ್ಲಿ1300 ಕ್ಕೂ ಹೆಚ್ಚು ಮಕ್ಕಳು ಕಲಿಯುತ್ತಿದ್ದಾರೆಂದರೆ ನಿಜಕ್ಕೂ ಹೆಮ್ಮೆಯ ಸಂಗತಿ ಎಂದು ಹೇಳಿದರು.

ಧೂಮಪಾನ, ಮದ್ಯಪಾನ ಹಾಗೂ ಡ್ರಗ್ಸ್ ಗಿಂತ ಬಹಳ ಅಪಾಯಕಾರಿ ಮೊಬೈಲ್‌ ಪೋನ್‌. ಇದು ಮಕ್ಕಳು ಹಾಗೂ ಯುವ ಸಮೂಹದಲ್ಲೊಂದು ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಅಲ್ಲದೆ ಮಾನಸಿಕ, ಬೌದ್ಧಿಕವಾಗಿ ವ್ಯತಿರಿಕ್ತ ಪರಿಣಾವನ್ನೂ ಬೀರುತ್ತಿದೆ. ಮಕ್ಕಳು ಮೊಬೈಲ್‌ನಿಂದ ದೂರವಿರಬೇಕಾದರೆ ಮೊದಲು ಪೋಷಕರು ಮೊಬೈಲ್‌ ಬಳಕೆ ಕಡಿಮೆ ಮಾಡಬೇಕು. ಕೇವಲ ಓದಲು, ಬರೆಯಲು ಒತ್ತಡ ಹಾಕದೇ ಅವರಿಗೆ ಅಲ್ಪಮಟ್ಟಿಗೆ ಮನರಂಜನೆ ನೀಡುವಂತ ಚಟುವಟಿಕೆ ಹಾಗೂ ಆಟೋಟಗಳಲ್ಲಿತೊಡಗುವಂತೆ ಪ್ರೇರೇಪಿಸಬೇಕು. ಆಗ ಮೊಬೈಲ್‌ ಬಳಕೆ ತನ್ನಿಂದ ತಾನೆ ಕಡಿಮೆ ಆಗುತ್ತದೆ ಎಂದು ಸಲಹೆ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌ ಅರುಣ್‌ ಮಾತನಾಡಿ, ದುರ್ಗಿಗುಡಿ ಶಾಲೆಗೆ ಅಂದಾಜು 70 ಲಕ್ಷ ರೂ., ಹಾಗೂ ಗಾಡಿಕೊಪ್ಪ ಶಾಲೆಗೆ ಅಂದಾಜು 60 ಲಕ್ಷ ರೂ.ಗಳ ಅನುದಾನದ ಯೋಜನೆಗಳನ್ನು ನೀಡಲಾಗಿದೆ. ಈ ಮೂಲಕ ರೌಂಡ್‌ ಟೇಬಲ್‌ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ ಎಂದರು.

ವಿದ್ಯಾರ್ಥಿಗಳು ಈ ಸೌಲತ್ತುಗಳ ಸದ್ಬಳಕೆ ಮಾಡಿಕೊಂಡು ದೇಶದ ಆಸ್ತಿಯಾಬೇಕು. ಶಿಕ್ಷಕರೂ ಕೂಡ ಹೊಸ ಹುಮ್ಮಸ್ಸಿನೊಂದಿಗೆ ಮಕ್ಕಳ ಸರ್ವಾಂಗೀಣ ಏಳಿಗೆಗೆ ಪಣ ತೊಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರೌಂಡ್‌ ಟೇಬಲ್‌ ಇಂಡಿಯಾ ನ್ಯಾಷನಲ್‌ ಪ್ರಾಜೆಕ್ಟ್ ಕನ್ವಿನಿಯರ್‌ ರಚಿತ್‌ ಬನ್ಸಾಲ್‌, ಪದಾದಿಕಾರಿಗಳಾದ ವಿನಯ್‌ ಟಿ.ಆರ್‌. ಕೌಶಿಕ್‌ ಡಿ.ಎನ್‌, ವಿಶ್ವಾಸ್‌ ಕಾಮತ್‌, ಈಶ್ವರ್‌ ಸರ್ಜಿ, ಕಾರ್ತಿಕ್‌ ಸಿ.ಎಸ್‌ ಭಾಗವಹಿಸಿದ್ದರು.

ಮಾದಕ ವಸ್ತು ವ್ಯಸನ & ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ ಕಾರ್ಯಕ್ರಮ

0

ಜಿಲ್ಲಾಡಳಿತ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ ಕುವೆಂಪು ವಿಶ್ವ ವಿದ್ಯಾನಿಲಯ ಹಾಗೂ ಡಿ ವಿ ಎಸ್ ಕಾಲೇಜು ಶಿವಮೊಗ್ಗ ಇವರ ಸಹಯೋಗದೊಂದಿಗೆ
ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ ಮಾಸಾಚಾರಣೆ ಅಂಗವಾಗಿ
ಶಿವಮೊಗ್ಗ ತಾಲೂಕು ಮಟ್ಟದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಶಿವಮೊಗ್ಗದ ಡಿವಿಎಸ್ ಕಾಲೇಜು ಆವರಣದಲ್ಲಿ ನಡೆದವು.

ಕಾರ್ಯಕ್ರಮ ದಲ್ಲಿ DVS ಪ್ರಾಂಶುಪಾಲರಾದ ಡಾ.ಎಂ. ವೆಂಕಟೇಶ್ , ಕೋಟೆ ಪೊಲೀಸ್ ಇನ್ಸ್ಪೆಕ್ಟರ್ ಟಿ. ಚಂದ್ರಶೇಖರ್ ಸೈಬರ್ ಕ್ರಮ್ ದೀಪಕ್ ಕಾರ್ಯಕ್ರಮಾಧಿಕಾರಿ ಡಾ. ಪರಿಸರ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು .

ಪ್ರತೀ 2 ಸೆಕೆಂಡಿಗೆ ಒಬ್ಬರಿಗೆ ರಕ್ತದ ಅವಶ್ಯಕತೆಯಿದೆ- ಪ್ರೊ.ವೀರಭದ್ರಪ್ಪ

0

ಪ್ರತಿ 02 ಸೆಕೆಂಡ್‌ಗೆ ಒಬ್ಬರಿಗೆ ರಕ್ತದ ಅವಶ್ಯಕತೆ ಇದ್ದು ನಾವುಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವುದರ ಮೂಲಕ ಸಮಾಜಸೇವಾ ಕಾರ್ಯಕ್ಕೆ ಮುಂದಾಗಬೇಕೆಂದು ಪ್ರೊ.ಬಿ.ಪಿ.ವೀರಭದ್ರಪ್ಪ ಎಂದು ಕರೆಕೊಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜಕಾರ್ಯ ಮತ್ತು ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗ, ಸಂಯುಕ್ತ ಆಸ್ಪತ್ರೆ, ಬಿ.ಆರ್ ಪ್ರಾಜೆಕ್ಟ್, ಆರೋಗ್ಯ ಕೇಂದ್ರ, ಕುವೆಂಪು ವಿವಿ ಮತ್ತು ರಕ್ತನಿಧಿ ಕೇಂದ್ರ ಮೆಗ್ಗಾನ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದ ಜೊತೆಜೊತೆಗೆ ರಕ್ತದಾನದಂತಹ ಸಮಾಜಮುಖಿ ಕಾರ್ಯಗಳನ್ನು ಮಾಡುವುದರಿಂದ ವಿಶ್ವವಿದ್ಯಾಲಯ ಹಾಗೂ ಪೋಷಕರ ಗೌರವವನ್ನು ಹೆಚ್ಚಿಸುವಂತಹ ಕಾರ್ಯಗಳನ್ನು ಮಾಡಬೇಕೆಂದು ಅಭಿಪ್ರಾಯಪಟ್ಟರು.

ಶಿಬಿರದಲ್ಲಿ ವಿವಿಯ ಅಧ್ಯಾಪಕ ಮತ್ತು ಅಧ್ಯಾಪಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದು 250ಕ್ಕಿಂತ ಹೆಚ್ಚು ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಆಯೋಜಕರು ತಿಳಿಸಿದರು.

ಈ ಸಂದರ್ಭದಲ್ಲಿ ಸಮಾಜಕಾರ್ಯ ವಿಭಾಗದ ಅಧ್ಯಕ್ಷ ಪ್ರೊ.ರಾಮೇಗೌಡ, ಪ್ರೊ.ಅಂಜನಪ್ಪ, ಕುವೆಂಪು ವಿವಿಯ ವೈದ್ಯಾಧಿಕಾರಿ ಡಾ.ರಕ್ಷಾ, ಡಾ,ಉಷಾ, ಮೆಗ್ಗಾನ್ ಆಸ್ಪತ್ರೆಯ ಡಾ.ದಿಕ್ಷಾಂತ್ ಬಾಟಿ, ಡಾ.ಸಂಜನಾ, ಡಾ. ದಿವ್ಯಾ, ಸಂಯುಕ್ತ ಆಸ್ಪತ್ರೆ ಬಿ.ಆರ್.ಪ್ರಾಜೆಕ್ಟ್‌ನ ಡಾ.ಹಂಸವೇಣಿ, ಸೇರಿದಂತೆ ವಿವಿಯ ಅಧ್ಯಾಪಕ ವರ್ಗ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು