Tuesday, March 10, 2026
Tuesday, March 10, 2026
Home Blog Page 1525

ಸಮಾಜಕ್ಕೆ ಶಿಕ್ಚಣವಂತರನ್ನ ಕೊಡುಗೆ ನೀಡಿದ ಡಿವಿಎಸ್ ಸಂಜೆ ಕಾಲೇಜು

0

ಡಿ.ವಿ.ಎಸ್. ಸಂಜೆ ಕಾಲೇಜು ಶಿವಮೊಗ್ಗ ನಗರದ ಶಿಕ್ಷಣ ಸಂಸ್ಥೆಯಾಗಿದೆ.ಇಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯವನ್ನು ಕಂಡುಕೊಂಡು ಜೀವನವನ್ನು ನಡೆಸಿಕೊಂಡು ಬರುತ್ತಿದ್ದಾರೆ ಎಂದು ನಗರದ ಪ್ರಮುಖ ಗುತ್ತಿಗೆದಾರರು, ದೇಶಿಯ ವಿದ್ಯಾಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ಕೋರ್ ಕಮಿಟಿಯ ಅಧ್ಯಕ್ಷರಾದ ಎನ್.ಎಮ್.ಸಿ.ಮಂಜುನಾಥ್ ರವರು ತಿಳಿಸಿದರು.

ಅವರು ಬುಧುವಾರ ಸಂಜೆ ದೇಶೀಯ ವಿದ್ಯಾಶಾಲೆಯ ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ಮಾತನಾಡುತ್ತ ಶ್ರಮಜೀವಿಗಳಿಗೆ ದಾರಿದೀಪ ಡಿ.ವಿ.ಎಸ್. ಸಂಜೆ ಕಾಲೇಜು. ಈ ಕಾಲೇಜಿನಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಪದೋನ್ನತಿ ಪಡೆದಿರುವುದು. ಅಷ್ಟೆ ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಭವ್ಯ ಜೀವನ ನಡೆಸುತ್ತಿದ್ದಾರೆ. ಹತ್ತು ಹಲವಾರು ವಿದ್ಯಾರ್ಥಿಗಳು ಸ್ವಂತ ಉದ್ಯೋಗವನ್ನು ಆರಿಸಿಕೊಂಡು ದೊಡ್ಡ ದೊಡ್ಡ ಉಧ್ಯಮವನ್ನು ನಡೆಸುತ್ತಿದ್ದಾರೆ. ಅಲ್ಲದೆ ನೂರಾರು ಜನರಿಗೆ ನೌಕರಿ ನೀಡಿದ್ದಾರೆ. ಇಂತಹ ಸಂಸ್ಥೆಯಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳಲ್ಲಿ ನಾನು ಒಬ್ಬ ಎಂದು ಹೇಳಿಕೊಳ್ಳಲು ಸಂತೋಷವಾಗುತ್ತದೆ ಎಂದರು.

ಹಲವಾರು ಕಾರಣದಿಂದ ನಿತ್ಯ ಕಾಲೇಜಿಗೆ ಹೋಗಲಾಗದೆ, ಬೆಳಿಗ್ಗೆ ಕೆಲಸಕ್ಕೆ ಹೋಗಿ ಸಂಜೆ ಕಾಲೇಜು ಓದಿದ ಹಲವಾರು ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಎಮ್.ಎಲ್.ಏ, ಹಿರಿಯ ಅಧಿಕಾರಿಯಾಗಿ, ನ್ಯಾಯಾಲಯದಲ್ಲಿ ನ್ಯಾಯಾದೀಶರಾಗಿ, ಪೋಲಿಸ್ ಉನ್ನತ ಹುದ್ಧೆಯನ್ನು ಅಲಂಕರಿಸಿದವರು, ಬಹಳ ಜನರಿದ್ದಾರೆ ಎಂದು ತಮ್ಮ ಸಹಪಾಠಿಗಳ ಸಾಧನೆ ತಿಳಿಸಿದರು.

ಕಾಲೇಜಿನ ಈ ಸಾಧನೆಗೆ ಕಾಲೇಜನ್ನು ನಡೆಸುತ್ತಿರುವ ದೇಶೀಯ ವಿದ್ಯಾ ಶಾಲಾ ಸಮಿತಿ ಕಾರಣವಾಗಿದೆ ಎಂದರೆ ಅತಿಶಯೋಕ್ತಿಯಲ್ಲ. ಸಂಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಕನಿಷ್ಠ ಶುಲ್ಕವನ್ನು ಮಾತ್ರ ತೆಗೆದುಕೊಳ್ಳಲಾಗುತ್ತಾರೆ. ಈ ಕಾಲೇಜಿನ ಬಹಳಷ್ಟು ಅಧ್ಯಾಪಕರು ಮತ್ತು ಸಿಬ್ಬಂದಿ ವರ್ಗವನ್ನು ಡಿ.ವಿ.ಎಸ್ ಆಡಳಿತ ಮಂಡಳಿ ನೇಮಕ ಮಾಡಿಕೊಂಡಿದೆ. ಪ್ರತಿ ವರ್ಷ ಲಕ್ಷಾಂತರ ರೂಪಾಯಿಗಳನ್ನು ವೆಚ್ಚ ಮಾಡಿ ಸಂಜೆ ಕಾಲೇಜನ್ನು ನಡೆಸುತ್ತಿರುವ ಡಿ.ವಿ.ಎಸ್. ಆಡಳಿತ ಮಂಡಳಿಗೆ ಲಾಭಗಳಿಕೆಯ ಉದ್ದೇಶವಿಲ್ಲ. ಇದು ಕಾಲೇಜಿನ ಆಡಳಿತ ಮಂಡಳಿ ಜನಪರ ಕಾಳಜಿ ಮತ್ತು ಸಮಾಜ ಸೇವೆ ಉದ್ದೇಶ ಹೊಂದಿರುವುದಕ್ಕೆ ಪ್ರಮುಖ ಸಾಕ್ಷಿಯಾಗಿದೆ.

ಇದಕ್ಕಾಗಿ ಡಿ.ವಿ.ಎಸ್. ಸಂಜೆ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಡಂಘದ ಪರವಾಗಿ ಕಾಲೇಜಿನ ಆಡಳಿತ ಮಂಡಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ವೇದಿಕೆಯಲ್ಲಿ ದೇಶಿಯ ವಿದ್ಯಾಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ಕೋರ್ ಕಮಿಟಿಯ ಕಾರ್ಯದರ್ಶಿ ಎಸ್.ಆರ್.ಹಾಲಸ್ವಾಮಿ, ದೇಶೀಯ ವಿದ್ಯಾಶಾಲೆಯ ಕಲಾ ಮತ್ತು ವಿಜ್ಙಾನ ಕಾಲೇಜಿನ ಸಸ್ಯಶಾಸ್ತದ ಮುಖ್ಯಸ್ಥರಾದ ಪ್ರೋಫೇಸರ್ ಸುಧಾಕರ್, ದೇಶೀಯ ಸಂಜೆ ಕಾಲೇಜಿನ ಪ್ರಾಂಶುಪಾಲ ಪದ್ಮೇಗೌಡ ಉಪಸ್ಥಿತರಿದ್ದರು.

ವರದಿ: ಅ.ನಾ.ವಿಜಯೇಂದ್ರ ರಾವ್

ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ಧಾಳಿ

0

ಇಂದು ಬೆಳಗ್ಗೆ ಬೆಂಗಳೂರಿನ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹುಣಸಮಾರಹಳ್ಳಿಯ ಕೃಷ್ಣದೇವರಾಯ ಇನ್ಸ್ಟಿಟ್ಯೂಷನ್ ಮೇಲೆ ಐಟಿ ದಾಳಿ ನಡೆಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಆದಾಯ ತೆರಿಗೆಯಲ್ಲಿ ವಂಚನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಇದರ ಜತೆಗೆ ರಿಯಲ್ ಎಸ್ಟೇಟ್ ಬಿಲ್ಡರ್‌ಗಳ ಮನೆ ಮೇಲೂ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿಗೆ ಪ್ರಮುಖವಾಗಿ ಮೂರು ವಿಚಾರಗಳು ಕಾರಣವಾಗಿವೆ.
1)ಸರ್ಕಾರದ ನಿಯಮಾವಳಿಗಳನ್ನ ಮೀರಿ ಪೇಮೆಂಟ್ ಕೋಟಾ ಸೀಟ್ ಗಳನ್ನ ಮ್ಯಾನೇಜ್ ಮೆಂಟ್ ಗಳು ಬ್ಲಾಂಕಿಂಗ್ ಮಾಡಿ ಹೆಚ್ಚಿಸಿರುವ ಆರೋಪ.

2)ವಿದೇಶಿ ವಿದ್ಯಾರ್ಥಿಗಳಿಂದ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ‌ ಶುಲ್ಕ ಸಂಗ್ರಹ ಆರೋಪ.

3)ಈ ಮೂಲಕ ಅಕ್ರಮವಾಗಿ ಸಂಗ್ರಹಿಸಲಾದ ಹಣದ ಮಾಹಿತಿ ಐಟಿ ಗೆ ಒದಗಿಸದೆ ತೆರಿಗೆ ವಂಚನೆ ಆರೋಪ
ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ ಐಟಿ ಅಧಿಕಾರಿಗಳ ತಂಡ. ಸೆರ್ಚ್ ವಾರೆಂಟ್ ಪಡೆದು ಮುಂಜಾನೆಯೇ ಐಟಿ ದಾಳಿ ನಡೆದಿದೆ. 20 ಕ್ಕೂ ಹೆಚ್ಚು ಕಡೆ 250 ಕ್ಕೂ ಹೆಚ್ಚು ಅಧಿಕಾರಿಗಳಿಂದ ಈ ದಾಳಿ ನಡೆಯುತ್ತಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ಐಟಿ ಅಧಿಕಾರಿಗಳು ನಿರಂತರಾಗಿದ್ದಾರೆ.

ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದು ಇಂದು ಬೆಳಿಗ್ಗೆ ಐಟಿ ದಾಳಿ ನಡೆಸಿದ್ದಾರೆ. 20 ಕ್ಕೂ ಹೆಚ್ಚು ಕಡೆ 250 ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ದಾಳಿ ನಡೆಸಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶ ಅಗ್ನಿಪಥ ಸಂಬಂಧಿತ ಗಲಭೆ: ಹಾನಿಕೋರರಿಂದಲೇ ನಷ್ಟ ವಸೂಲಾತಿ

0

ಕೇಂದ್ರ ಸರ್ಕಾರದ ಹೊಸ ಅಗ್ನೀಪಥ ಯೋಜನೆಯನ್ನು ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆಗಳು ಆರಂಭವಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ/ಸರ್ಕಾರಿ ಆಸ್ತಿ ನಾಶ ಮಾಡಿದ ಗಲಭೆಕೋರರಿಂದ ನಷ್ಟವನ್ನು ವಸೂಲಿ ಮಾಡುವುದಾಗಿ ಯು.ಪಿ ಸರ್ಕಾರ ಹೇಳಿದೆ.

ಕೇಂದ್ರದ ಹೊಸ ಸೇನಾ ನೇಮಕಾತಿ ಯೋಜನೆ ಹೊರಬಂದ ತಕ್ಷಣ, ಪ್ರತಿಭಟನೆ ಶುರುವಾಯಿತು. ಆ ಸಂದರ್ಭದಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಕೆಲವರು ಬಸ್ಸು, ರೈಲು ಹಾಗು ಇನ್ನಿತರ ಸರ್ಕಾರಿ ಹಾಗೂ ಸಾರ್ವಜನಿಕ ಆಸ್ತಿಯನ್ನು ಬೆಂಕಿ ಹಚ್ಚಿ ನಾಶ ಮಾಡಿದರು, ಅದಕ್ಕೆ ಉತ್ತರ ಪ್ರದೇಶ ರಾಜ್ಯ ಸರ್ಕಾರವು ಹಾನಿ ಮಾಡಿದವರಿಂದ ನಮ್ಮ ನಷ್ಟವನ್ನು ಮರುಪಡೆಯುತ್ತೇವೆ ಹಾಗೂ ಅವರ ವಿರುದ್ಧ ಕಠಿಣ ಕ್ರಮ ತೆಗೆದು ಕೊಳ್ಳುತ್ತೇವೆ ಎಂದು ಹೇಳಿದೆ.

ಉತ್ತರ ಪ್ರದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿರುವ ಜನರಿಂದ ನಮ್ಮ ನಷ್ಟವನ್ನು ವಸೂಲಿ ಮಾಡುವುದಾಗಿ ಅಡಿಷನಲ್ ಡೈರೆಕ್ಟರ್ ಜನರಲ್ (ಲಾ ಅಂಡ್ ಆರ್ಡರ್ ) ಪ್ರಶಾಂತ್ ಕುಮಾರ್ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ಸೇನಾ ನೇಮಕಾತಿಯ ಹೊಸ ಸ್ಕೀಮ್ ತಂದ ತಕ್ಷಣ ಉತ್ತರ ಪ್ರದೇಶದ 14 ಜಿಲ್ಲೆಗಳಲ್ಲಿ, ಪ್ರತಿಭಟನೆ ಶುರುವಾಯಿತು. ಆ ಸಂದರ್ಭದಲ್ಲಿ ಯುವ ಪ್ರತಿಭಟನಾಕಾರರು, ಆಕ್ರೋಶದಲ್ಲಿ ಬಸ್ಸು ಹಾಗು ಇನ್ನಿತರ ವಾಹನಗಳಿಗೆ ಬೆಂಕಿ ಹಚ್ಚಿದರು, ರೈಲುಗಳನ್ನು ನಾಶಮಾಡಲು ಯತ್ನಿಸಿದರು.

ಅಲ್ಲದೆ ಹಲವೆಡೆ ಟೈರುಗಳಿಗೆ ಬೆಂಕಿ ಹಚ್ಚಿದರು, ಸರ್ಕಾರಿ ಹಾಗು ಕೆಲವು ಸಾರ್ವಾಜನಿಕ ಆಸ್ತಿಯನ್ನು ಬೆಂಕಿ ಹಚ್ಚುವ ಹಾಗು ಕಲ್ಲು ತೂರುವ ಮೂಲಕ ನಾಶ ಮಾಡಿದರು. ಇದರಿಂದ ಸಾಮಾನ್ಯ ಜನರಿಗೆ ಹಾಗು ಸಮಾಜದ ವ್ಯವಸ್ಥೆಗೆ ತೊಂದರೆ ಉಂಟಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಇಲ್ಲಿಯ ವರೆಗೂ ಈ ಪ್ರಕರಣದ ಮೇಲೆ ಸುಮಾರು 49 ಎಫ್.ಐ.ಆರ್ ಗಳನ್ನೂ ದಾಖಲಿಸಿದ್ದು 525 ಜನ ಪ್ರತಿಭಟನಾಯಕಾರರನ್ನು ಬಂಧಿಸಿದ್ದಾರೆ. 145 ಸೆಕ್ಷನ್ ಅಡಿಯಲ್ಲಿ ಶಾಂತಿ ಕದಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ

ಅಗ್ನಿವೀರರಿಗೆ ರಾಜ್ಯದ ಸಮಾಜ ಕಲ್ಯಾಣ ಇಲಾಖೆ ನೇಮಕಾತಿ ಪ್ರಸ್ತಾವನೆ

0

ಅಗ್ನಿವೀರರಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ತಿಳಿಸಿದ್ದಾರೆ.

ಅಗ್ನಿಪಥ್ ಯೋಜನೆಗೆ ಪೂರಕವಾಗಿ ಸೇನಾ ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು. ಸೇನಾ ಸೇರ್ಪಡೆಗೆ ಪೂರ್ವ ತರಬೇತಿ ಕೇಂದ್ರಗಳ ಸ್ಥಾಪನೆ, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕೇಂದ್ರ ಸ್ಥಾಪನೆಗೆ ಯೋಜನೆ ಮಾಡಲಾಗಿದೆ. ರಾಣಿ ಅಬ್ಬಕ್ಕ, ಕೋಟಿ-ಚೆನ್ನಯ್ಯ, ಹೆಂಜ ನಾಯ್ಕರ ಹೆಸರಲ್ಲಿ ಕೇಂದ್ರ ಸ್ಥಾಪನೆಗೆ ಈಗಲೇ ಆದೇಶ ಮಾಡಲಾಗಿದೆ. ತಿಂಗಳೊಳಗೆ ಕೇಂದ್ರದ ಚಟುವಟಿಕೆಗಳ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ.
ಅಗ್ನಿಪಥ ವಿರೋಧಿಸಿ ಅಗ್ನಿ ಕೊಡುವವರು ಗಲಾಟೆ ಆರಂಭಿಸಿದ್ದಾರೆ. ದೇಶದಲ್ಲಿ ಅಗ್ನಿ ವೀರರು ಕೂಡ ಸೃಷ್ಟಿಯಾಗುತ್ತಿದ್ದಾರೆ. ಅಗ್ನಿಪಥ ಯೋಜನೆಯಲ್ಲಿ ನಾಲ್ಕು ವರ್ಷಗಳ ತರಬೇತಿ ನೀಡಲಾಗುತ್ತದೆ. ಅಗ್ನಿ ವೀರರಿಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ತಿಳಿದುಬಂದಿದೆ.

ಇದಲ್ಲದೇ ಅಗ್ನಿವೀರರಿಗೆ ದೈಹಿಕ ಶಿಕ್ಷಕ ಹುದ್ದೆ ನೀಡಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಸರ್ಕಾರಕ್ಕೆ ಟಿಪ್ಪಣಿ ಕೊಟ್ಟಿದ್ದೇನೆ. ಶೇಕಡ 75ರಷ್ಟು ಅಗ್ನಿವೀರರಿಗೆ ಮೀಸಲಿಡುವ ಯೋಚನೆ ಇದೆ.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ವಸತಿ ಶಾಲೆಯಲ್ಲಿ ಮೀಸಲಾತಿಗೆ ಚಿಂತನೆ ಮಾಡಲಾಗಿದೆ. ಇತರ ಹುದ್ದೆಗಳಲ್ಲೂ ಆದ್ಯತೆ ನೀಡುವ ಚಿಂತನೆ ಇದ್ದು, ಕಡತವನ್ನು ಮಂಡಿಸಲು ಈಗಾಗಲೇ ಟಿಪ್ಪಣಿ ಕೊಡಲಾಗಿದೆ ಎಂದು ಶ್ರೀನಿವಾಸ್ ಪೂಜಾರಿ ಅವರು ತಿಳಿಸಿದ್ದಾರೆ.

ಅದೇ ರೀತಿ ವಾರ್ಡನ್ ಹುದ್ದೆಯಲ್ಲೂ ಅಗ್ನಿ ವೀರರಿಗೆ ಅವಕಾಶ ನೀಡಲು ಯೋಜಿಸಲಾಗಿದೆ. ಸುಶಿಕ್ಷಿತ ಅಗ್ನಿ ವೀರರಿಗೆ ಸೂಕ್ತ ಹುದ್ದೆ ನೀಡಲು ಚಿಂತಿಸಲಾಗಿದೆ. ಅಗ್ನಿ ವೀರರನ್ನು ನೇಮಿಸಿಕೊಳ್ಳಲು ನಮಗೆ ಹೆಮ್ಮೆ ಇದೆ ಖಂಡಿತ ಅವರಿಗೆ ಮೀಸಲು ಇರುತ್ತದೆ ಎಂದು ತಿಳಿಸಿದರು.

ರೈಲ್ವೆ ಇಲಾಖೆಯಲ್ಲಿ ಅಪ್ರೈಂಟಿಸ್ ಹುದ್ದೆಗಳಿಗೆ ಭರ್ತಿ ಅಧಿಸೂಚನೆ

0

ಈಶಾನ್ಯ ಫ್ರಾಂಟಿಯರ್ ರೈಲ್ವೇಯಲ್ಲಿ ಸಾವಿರಾರು ಅಪ್ರೆಂಟಿಸ್ ಹುದ್ದೆಗಳಿಗೆ ರೈಲ್ವೇ ಇಲಾಖೆ ಅಧಿಸೂಚನೆಯನ್ನು ಹೊರಡಿಸಿದೆ.

ಹುದ್ದೆಗೆ ಅರ್ಹರಾಗಿರುವ ಅಭ್ಯರ್ಥಿಗಳು nfr.indianrailways.gov.in ನಲ್ಲಿ NFR (ಈಶಾನ್ಯ ಫ್ರಾಂಟಿಯರ್ ರೈಲ್ವೆ) ಅಧಿಕೃತ ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳ ನೇಮಕಾತಿಗೆ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಈ ನೇಮಕಾತಿಯ ಮೂಲಕ 5636 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30.

ಈ ರೈಲ್ವೇ ನೇಮಕಾತಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50 ಶೇಕಡಾ ಅಂಕಗಳೊಂದಿಗೆ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದರ ಜೊತೆಗೆ, ಅರ್ಜಿದಾರರು ಸಂಬಂಧಿತ ವ್ಯಾಪಾರದಲ್ಲಿ ಐಟಿಐ ಹೊಂದಿರಬೇಕು.

ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು 15 ವರ್ಷದಿಂದ 24 ವರ್ಷದೊಳಗಿರಬೇಕು. ವಯೋಮಿತಿ ಮೀರಿದವರು ಇಲ್ಲಿ ಅರ್ಜಿ ಸಲ್ಲಿಸುವಂತಿಲ್ಲ.
ಹುದ್ದೆಗೆ ಅರ್ಜಿ ಸಲ್ಲಿಸುವವರಲ್ಲಿ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಭಾರತೀಯ ರೈಲ್ವೇಯ ಈ ನೇಮಕಾತಿ ಅಭಿಯಾನದ ಮೂಲಕ, ಕತಿಹಾರ್ ಮತ್ತು ಟಿಡಿಹೆಚ್ ಕಾರ್ಯಾಗಾರಗಳಿಗೆ 919 ಹುದ್ದೆಗಳು, ಅಲಿಪುರ್‌ದುವಾರ್‌ಗೆ 522 ಹುದ್ದೆಗಳು, ರಂಗೀಯಕ್ಕೆ 551 ಹುದ್ದೆಗಳು, ಲುಮ್‌ಡಿಂಗ್‌ಗೆ 1140 ಹುದ್ದೆಗಳು, ಟಿನ್ಸುಕಿಯಾಕ್ಕೆ 547 ಹುದ್ದೆಗಳು, ನ್ಯೂ ಬೊಂಗೈಗನ್‌ ವರ್ಕ್‌ಶಾಪ್‌ನಲ್ಲಿ 1,110 ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ. ದಿಬ್ರುಗಢ್ ಕಾರ್ಯಾಗಾರಕ್ಕಾಗಿ 847 ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತಿದೆ.

ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 100 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಇತ್ಯಾದಿಗಳನ್ನು ಬಳಸಿಕೊಂಡು ಈ ಮೊತ್ತವನ್ನು ಪಾವತಿಸಬಹುದು.

ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳ ವಿಲೀನ

0

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ತನ್ನ ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳನ್ನು ವಿಲೀನಗೊಳಿಸಲು ತೀರ್ಮಾನಿಸಿದೆ.

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡ ಕಂದಾಯ ಸಚಿವ ಆರ್. ಅಶೋಕ್ ಅವರು

ಒಂದೊಂದು ಇಲಾಖೆಯಲ್ಲಿ ನಾಲ್ಕೈದು ನಿಗಮಗಳಿದ್ದು, ಬಹುತೇಕ ನಿಗಮಗಳಿಗೆ ಮಾಡಲು ಕೆಲಸವೇ ಇಲ್ಲ. ಇಂತಹ ನಿಗಮಗಳಿಗೆ ಹಲವು ಸಿಬ್ಬಂದಿ, ಅಧಿಕಾರಿಗಳಿದ್ದು, ವಿನಾಕಾರಣ ಕಾರುಗಳು ಬಳಕೆಯಾಗುತ್ತಿವೆ. ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಹಣ್ಣಿನ ರಸ ತೆಗೆಯಲು, ರಬ್ಬರ್ ರಸ ತೆಗೆಯಲು ಸಹ ನಿಗಮಗಳಿವೆ. ಇಂತಹ ನಿಗಮಗಳಿಂದ ಸರ್ಕಾರದ ಬೊಕ್ಕಸಕ್ಕೆ ಅನಗತ್ಯ ಭಾರ. ಈ ಭಾರವನ್ನು ಕಡಿಮೆ ಮಾಡಿಕೊಳ್ಳುವುದು ಅನಿವಾರ್ಯ ಎಂದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವು ನಿಗಮಗಳಿದ್ದರೂ, ಅಲ್ಲಿ ಬಹಳ ಕೆಲಸಗಳಿವೆ. ಹೀಗಾಗಿ ಸಮಾಜ ಕಲ್ಯಾಣ ಇಲಾಖೆಯಂತಹ ಪ್ರಮುಖ ಇಲಾಖೆಗಳಲ್ಲಿರುವ ನಿಗಮಗಳನ್ನು ಮುಟ್ಟಲು ಹೋಗುವುದಿಲ್ಲ. ಆದರೆ ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ಒಂದು ನಿಗಮದ ಜಾಗದಲ್ಲಿ ಹಲವು ನಿಗಮಗಳಿದ್ದು, ಇವನ್ನು ವಿಲೀನಗೊಳಿಸಿ ಆಯಾ ಇಲಾಖೆಯಲ್ಲಿ ಒಂದೇ ನಿಗಮವಿರುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಚೀನಾದಲ್ಲಿ ತೇಲುತ್ತಿದ್ದ ಐಷಾರಾಮಿ ಹೋಟೆಲ್ ಮುಳುಗಿತು

0

ಹಾಂಕಾಂಗ್ ನ ಪ್ರಸಿದ್ಧ ಜಂಬೋ ರೆಸ್ಟೋರೆಂಟ್ ಚೀನಾದ ದಕ್ಷಿಣ ಭಾಗದ ಸಮುದ್ರದಲ್ಲಿ 1,000 ಅಡಿಗೂ ಅಧಿಕ ಆಳಕ್ಕೆ ಮುಳುಗಿ ಹೋಗಿದೆ.

46 ವರ್ಷಗಳಿಂದ ಒಂದೇ ನೆಲೆಯಲ್ಲಿದ್ದ ಫ್ಲೋಟಿಂಗ್ ರೆಸ್ಟೋರೆಂಟ್ ಅನ್ನು ಬೇರೆಡೆಗೆ ಸ್ಥಳಾಂತರಿಸಲು ಟಗ್ಬೋಟ್ ಸಹಾಯದಿಂದ ಎಳೆದುಕೊಂಡು ಹೋಗಲಾಗಿತ್ತು.
ಈ ಸಂದರ್ಭ ದಕ್ಷಿಣ ಚೀನಾ ಸಮುದ್ರದ ಭಾರೀ ಅಲೆಯ ಕಾರಣ ಜಂಬೋ ರೆಸ್ಟೋರೆಂಟ್ ಮಗುಚಿ ಬಿದ್ದಿದೆ. ಅದನ್ನು ನೀರಿನಿಂದ ಮೇಲೆತ್ತುವುದು ಅತ್ಯಂತ ಕಷ್ಟಕರವಾಗಿದೆ. ಸದ್ಯ ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ವರದಿಗಳು ತಿಳಿಸಿವೆ.

2013ರ ಸಮಯ ಚೀನಾದ ದಕ್ಷಿಣ ಭಾಗದಲ್ಲಿ ಮೀನುಗಾರಿಕೆ ಹಾಗೂ ಜನಸಂಖ್ಯೆ ಕ್ಷೀಣಿಸಿದ ಕಾರಣ ಜಂಬೋ ತನ್ನ ಪ್ರಸಿದ್ಧಿಯನ್ನು ನಿಧಾನವಾಗಿ ಕಳೆದುಕೊಂಡಿತು.

ಒಂದು ಕಾಲದಲ್ಲಿ ವಿಶ್ವದ ಅತಿ ದೊಡ್ಡ ತೇಲುವ ರೆಸ್ಟೋರೆಂಟ್ ಎಂದು ಹೆಗ್ಗಳಿಕೆಗೆ ಪಾತ್ರವಾಗಿದ್ದ ಜಂಬೋ, ಅನೇಕ ಹಾಂಕಾಂಗ್ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರಗಳಲ್ಲೂ ಕಾಣಿಸಿಕೊಂಡಿತ್ತು.

ಈ ರೆಸ್ಟೋರೆಂಟ್ ನಲ್ಲಿ ಎರಡನೇ ರಾಣಿ ಎಲಿಜಬೆತ್, ಜಿಮ್ಮಿ ಕಾರ್ಟರ್, ಟಾಮ್ ಕ್ರೂಸ್ ಸೇರಿದಂತೆ ಹಲವು ಗಣ್ಯರಿಗೆ ಆತಿಥ್ಯ ನೀಡಲಾಗಿತ್ತು. ಭವ್ಯವಾದ ಗೋಪುರ, ವರ್ಣರಂಜಿತ ಚಿತ್ರ, ಚೈನೀಸ್ ಭಾಷೆಯ ಸಾಲುಗಳಿಂದ ಜಂಬೋ ಪ್ರಸಿದ್ಧವಾಗಿತ್ತು.

ಎಸ್ಸಿ.ಎಸ್ಟಿ ಸಂಬಂಧಿತ ಪ್ರಕರಣಗಳನ್ನ ಅಧಿಕಾರಿಗಳು ಪರಿಹರಿಸಬೇಕು

0

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ದೌರ್ಜನ್ಯ ಪ್ರತಿಬಂಧ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲಿಸಿ ಪರಿಹಾರ ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚಿಸಿದರು.

ಜಿಲ್ಲಾ ಮಟ್ಟದ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟುಗಳ ಜಾಗೃತಿ ಮತ್ತು ಉಸ್ತುವಾರಿ(ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಿತಿ ಸದಸ್ಯರಾದ ಜಗದೀಶ್ ಮಾತನಾಡಿ, ಶಿವಮೊಗ್ಗ ಸುತ್ತಮುತ್ತ ಗ್ರಾಮಗಳು ಉದಾಹರಣೆಗೆ ಹಸೂಡಿಯಂತಹ ಗ್ರಾಮಗಳು ನಗರಕ್ಕೆ ಹತ್ತಿರವಿದ್ದರೂ ಜನರು ಸೌಲಭ್ಯ ವಂಚಿತರಾಗಿದ್ದಾರೆ. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಸ್‍ಸಿ, ಎಸ್‍ಟಿ, ತಮಿಳು ಇತರೆ ಹಿಂದುಳಿದ ಜನಾಂಗದವರಿದ್ದು ನಿರ್ಗತಿಕರಾಗಿದ್ದಾರೆ. ಇಂತಹ ಗ್ರಾಮಗಳಲ್ಲಿ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಬೇಕೆಂದು ಕೋರಿದರು.

ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಈ ಹಳ್ಳಿಗಳಲ್ಲಿನ ಸಮಸ್ಯೆಗಳ ಪಟ್ಟಿ ಮಾಡಿ ನೀಡಿ, ದಿನಾಂಕ ನಿಗದಿಪಡಿಸಿ ಅರ್ಧ ದಿನ ಬಂದು ಸಮಸ್ಯೆಗಳನ್ನು ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಸರ್ಕಾರದ ಮರಳು ಕ್ವಾರೆಗಳಲ್ಲಿ ಅಕ್ರಮ ಮರಳು ಸಾಗಾಣಿಕೆ ನಡೆಸುವುದನ್ನು ತಡೆಯುವಂತೆ ಸದಸ್ಯ ಜಗದೀಶ್ ಕೋರಿದರು. ಜಿಲ್ಲಾಧಿಕಾರಿಗಳು ಭೂವಿಜ್ಞಾನಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಪ್ರತಿ ತಿಂಗಳು ಮರಳು ಬಳಕೆ ಮಾಡಿದ ಇಲಾಖೆಗಳಿಂದ ವರದಿ ಪಡೆದು ನೀಡುವಂತೆ ಹಾಗು ಸಿಸಿ ಟಿವಿ ಫೂಟೆಜ್ ನೀಡುವಂತೆ ಸೂಚಿಸಿದರು. ಒಂದು ವೇಳೆ ನೀಡದಿದ್ದರೆ ಅವರ ವಿರುದ್ದ ನೋಟಿಸ್ ನೀಡಲಾಗುವುದು ಎಂದು ತಿಳಿಸಿದರು.

ಶಿಕಾರಿಪುರ ತಾಲ್ಲೂಕಿನ ಉಡುಗಣಿ ಗ್ರಾಮದ ಸರ್ವೇ ನಂ 43 ಬ್ಲಾಕ್ ಫಲಾನುಭವಿಯೋರ್ವರ 5 ವರ್ಷದ 20 ಅಡಿಕೆ ಗಿಡಗಳನ್ನು ಅರಣ್ಯ ಇಲಾಖೆಯವರು ಸರ್ವೇ ಕಾರ್ಯ ಮಾಡಿ ಕಡಿದು ಹಾಕಿದ್ದು, ಇವರಿಗೆ ಸೂಕ್ತ ಪರಿಹಾರ ನೀಡುವಂತೆ ಅವರು ಕೋರಿದರು. ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆಯವರು ಫಲಾನುಭವಿಯನ್ನು ಕರೆಯಿಸಿ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಅನುಕೂಲ ಮಾಡಿಕೊಡುವಂತೆ ಸೂಚನೆ ನೀಡಿದರು.

ಕಟ್ಟಡ ಕಾರ್ಮಿಕರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಭೋವಿ ಜನಾಂಗದವರಿಗೆ ಕಾರ್ಮಿಕ ಕಾರ್ಡ್ ಹಾಗೂ ಇತರೆ ಸೌಲಭ್ಯಗಳು ಕಾರ್ಮಿಕ ಇಲಾಖೆಯಿಂದ ಸಿಗುತ್ತಿಲ್ಲ. ಸಂತೇಕಡೂರು, ಸೋಗಾನೆ, ಮತ್ತೂರು ಪ್ರದೇಶದಲ್ಲಿ ಬಲಿಷ್ಟ ವ್ಯಕ್ತಿಗಳು ಸರ್ಕಾರಿ ಭೂಮಿ ಖರೀದಿಸಿ, ಮಾರಾಟ ಮಾಡುವ ಮಾಫಿಯಾ ಹೆಚ್ಚುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕು, ಮೊರಾರ್ಜಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟವಿಲ್ಲವಾಗಿದ್ದು, ಉತ್ತಮ ಶಿಕ್ಷಕರನ್ನು ನೇಮಿಸಬೇಕು, ಶಾಸಗಿ ಶಾಲೆಗಳಲ್ಲಿ ಫೀ ಹಾವಳಿ ತಪ್ಪಿಸುವಂತೆ ಮತ್ತು ಕೆಲವು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿವೇತನ ಸೌಲಭ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುತ್ತಿಲ್ಲ ಈ ಬಗ್ಗೆ ಕ್ರಮ ವಹಿಸುವಂತೆ ಹಾಗೂ ಅಬ್ಬಲಗೆರೆ ಗ್ರಾಮದ ಒಂದು ಎಕರೆ ಸರ್ಕಾರಿ ಜಾಗದಲ್ಲಿ ಲೇಔಟ್ ನಿರ್ಮಾಣವಾಗುತ್ತಿದ್ದು ಇದನ್ನು ತೆರವುಗೊಳಿಸುವಂತೆ ಕೋರಿದರು.

ಜಿಲ್ಲಾಧಿಕಾರಿಗಳು, ಜಿಲ್ಲಾ ಕಾರ್ಮಿಕ ಇಲಾಖೆಯಿಂದ ಒಂದು ಶಿಬಿರ ಏರ್ಪಡಿಸಿ ಅರ್ಹರಿಗೆ ಕಾರ್ಡ್ ನೀಡುವಂತೆ ಸೂಚಿಸಿದರು. ಹಾಗೂ ಭೂಮಿ ಖರೀದಿ ಕುರಿತು ಪರಿಶೀಲಿಸುವುದಾಗಿ ತಿಳಿಸಿದರು.

ಸಮಿತಿ ಸದಸ್ಯರಾದ ನಾಗರಾಜ ಮಾತನಾಡಿ, ವಿದ್ಯಾನಗರದ ಸರ್ಕಾರಿ ಶಾಲೆಗೆ ಸೇರಿದ ಜಾಗವನ್ನು ಪ್ರಭಾವಿ ವ್ಯಕ್ತಿ ಕಬಳಿಸುವ ಯತ್ನ ಮಾಡುತ್ತಿದ್ದು, ಶಾಲಾ ಎಸ್‍ಡಿಎಂಸಿ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಪಾಲಿಕೆ ಆಯುಕ್ತರು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ಸದರಿಯವರ ಹೆಸರಿನಲ್ಲಿರುವ ಖಾತೆಯನ್ನು ರದ್ದುಪಡಿಸಿ ಶಾಲೆಗೆ ನ್ಯಾಯ ಒದಗಿಸಿಕೊಡಬೇಕು. ಹಾರ್ನಹಳ್ಳಿ ಹಾಗೂ ಇತರೆಡೆ ಪರವಾನಗಿ ಇಲ್ಲದೇ ಬಾರ್ ಮತ್ತು ವೈನ್ ಶಾಪ್‍ಗಳನ್ನು ಪ್ರಭಾವಿ ವ್ಯಕ್ತಿಗಳು ನಡೆಸುತ್ತಿದ್ದು ಇವುಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಕೋರಿದರು.

ಸಮಿತಿ ಸದಸ್ಯರಾದ ರಾಜಕುಮಾರ್ ಮಾತನಾಡಿ, ಪೊಲೀಸ್ ಕ್ವಾಟ್ರಸ್ ಹಿಂಭಾಗ ಶೋಷಿತ ಸಮುದಾಯದ ಅಭಿವೃದ್ದಿಗಾಗಿ ಮೀಸಲಾಗಿದ್ದ ಜಾಗವನ್ನು ನೀಡುವಂತೆ ಕೋರಿದರು. ರಾಮಿನಕೊಪ್ಪದಲ್ಲಿ ಬಡವರಿಂದ ಮೇಲ್ವರ್ಗದವರಿಗೆ ಭೂಮಿಯನ್ನು ಬಿಡಿಸಿಕೊಡಲಾಗುತ್ತಿದ್ದು ಈ ಬಗ್ಗೆ ಕ್ರಮ ವಹಿಸಬೇಕು. ಹಾಗೂ ವಿದ್ಯಾನಗರದ ದಲಿತ ಹುಡುಗನ ಮೇಲಿನ ದೌರ್ಜನ್ಯ ಪ್ರಕರಣ ಇತ್ಯರ್ಥಪಡಿಸುವುದು ಮತ್ತು ವಿನಯ್ ಎಂಬಾತನ ದೌರ್ಜನ್ಯ ಪ್ರಕರಣ ದಾಖಲಾಗಿ ಒಂದು ವರ್ಷ ಕಳೆದರೂ ಪರಿಹಾರ ದೊರೆತಿಲ್ಲ. ಹಾಗೂ ಸೊರಬ ತಾಲ್ಲೂಕಿನ ಚೌಟಿ ಗ್ರಾಮದಲ್ಲಿ ರೂ.1 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣವಾಗಿದ್ದು ಹಾಳಾಗಿದೆ. ಈ ಬಗ್ಗೆ ವಿಚಾರಣೆ ನಡೆಸಬೇಕೆಂದರು.

ಸಮಿತಿ ಸದಸ್ಯರಾದ ಬಸವರಾಜ ಹಸ್ವಿ ಮಾತನಾಡಿ, ಸೊರಬ ತಾಲ್ಲೂಕಿನ ಗ್ರಾಮವೊಂದರಲ್ಲೇ 16 ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದ್ದು ಕೂಡಲೇ ಕ್ರಮ ವಹಿಸಬೇಕು ಹಾಗೂ ಇನ್ನೊಂದು ಗ್ರಾಮದಲ್ಲಿ ಭೂ ಮಾಲೀಕ ಗೇಣಿದಾರನನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು.

ಸಮಿತಿ ಸದಸ್ಯರಾದ ಏಳುಕೋಟಿ ಮಾತನಾಡಿ, ಹೊಳೆಹೊನ್ನೂರು ಠಾಣೆಯಲ್ಲಿ ದಾಖಲಾದ ಅಟ್ರಾಸಿಟಿ ಪ್ರಕರಣ ಬಗ್ಗೆ ಸಮರ್ಪಕ ತನಿಖೆ ನಡೆದು ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಮೀಟರ್ ಬಡ್ಡಿ ವ್ಯವಹಾರ ಮಾಡುತ್ತಿರುವವರ ಮೇಲೆ ಶೀಘ್ರವಾಗಿ ಕ್ರಮ ವಹಿಸಬೇಕು ಎಂದರು.

ಸಮಿತಿ ಸದಸ್ಯರಾದ ರಾಮಚಂದ್ರಪ್ಪ ಮಾತನಾಡಿ, ಮೆಡಿಕಲ್ ಶಾಪ್‍ಗಳಲ್ಲಿ ಡ್ರಗ್ಸ್ ಮಾರಾಟದ ವಿರುದ್ದ ಕ್ರಮ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ತಾಂಡ/ಭೋವಿ ಕಾಲೋನಿ ಹಟ್ಟಿ ಇತರೆ ಮನೆಗಳಲ್ಲಿ ಮದ್ಯ ಮಾರಾಟ ಹೆಚ್ಚುತ್ತಿದ್ದು ಇದನ್ನು ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದರು.

ಜಿಲ್ಲಾಧಿಕಾರಿಗಳು, ಅಕ್ರಮ ಮದ್ಯ ಮಾರುವವರ ವಿರುದ್ದ ಪ್ರಕರಣ ದಾಖಲಿಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿ, ಸ್ಮಶಾನ ಭೂಮಿ ಮಂಜೂರಾತಿ, ಕೋವಿಡ್ ಪರಿಹಾರ, ದೌರ್ಜನ್ಯ ಪ್ರಕರಣಗಳ ಶೀಘ್ರ ವಿಲೇವಾರಿ, ಪರಿಹಾರ ಸೇರಿದಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ತಿಳಿಸಿದರು.

2022 ನೇ ಸಾಲಿನಲ್ಲಿ ದೌರ್ಜನ್ಯ ಪ್ರತಿಬಂಧ ಕಾಯ್ದೆಯಡಿ ಒಟ್ಟು 41 ಪ್ರಕರಣ ದಾಖಲಾಗಿದ್ದು, 27 ಪ್ರಕರಣಗಳಿಗೆ ಪರಿಹಾರ ಮಂಜೂರು ಮಾಡಲಾಗಿದೆ. 06 ಪ್ರಕರಣ ಬಾಕಿ ಇದ್ದು, ಸುಳ್ಳು ಜಾತಿ 08 ಪ್ರಕರಣಗಳಾಗಿವೆ. ಒಟ್ಟು ರೂ. 82 ಲಕ್ಷ ಪರಿಹಾರ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ನಾಗರಾಜ್ ಅವರು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್ ಬಿ.ಎಂ, ಜಿಲ್ಲಾ ಪಂಚಾಯಿತಿ ಸಿಇಓ ಎಂ.ಎಲ್.ವೈಶಾಲಿ, ಸಾಗರ ಉಪವಿಭಾಗದ ತಹಶೀಲ್ದಾರ್ ನಾಗರಾಜ್, ಶಿವಮೊಗ್ಗ ತಹಶೀಲ್ದಾರ್ ಡಾ.ನಾಗರಾಜ್, ಅರಣ್ಯ ಇಲಾಖೆ, ಅಬಕಾರಿ, ಇತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಭಾರತ ನಮಗೆ ದೇಣಿಗೆ ಕೊಟ್ಟಿಲ್ಲ ಸಾಲರೂಪ ನೆರವು ನೀಡಿದೆ-ವಿಕ್ರಮಸಿಂಘೆ

0

ಭಾರತವು ಒದಗಿಸುವ ಹಣಕಾಸಿನ ನೆರವು ದೇಣಿಗೆಯಲ್ಲ ಎಂದು ಶ್ರೀಲಂಕಾದ ಪ್ರಧಾನ ಮಂತ್ರಿ ರಾನಿಲ್ ವಿಕ್ರಮಸಿಂಘೆ ಸ್ಪಷ್ಟಪಡಿಸಿದ್ದಾರೆ.

ಸಂಸತ್ತಿನಲ್ಲಿ ಮಾತನಾಡಿದ ಅವರು, ಭಾರತದಿಂದ ಕ್ರೆಡಿಟ್ ಲೈನ್ ಅಡಿಯಲ್ಲಿ 31,32,54,000 ರೂ. ಮೊತ್ತದ ಸಾಲವನ್ನು ತೆಗೆದುಕೊಂಡಿದ್ದೇವೆ. ಭಾರತವು ಈ ರೀತಿ ನಮ್ಮನ್ನು ನಿರಂತರವಾಗಿ ಬೆಂಬಲಿಸಲು ಸಾಧ್ಯವಾಗುವುದಿಲ್ಲ. ಅವರ ಸಹಾಯಕ್ಕೂ ಮಿತಿ ಇರುತ್ತದೆ. ಇದರಿಂದಾಗಿ ನಾವು ಸಾಲವನ್ನು ಮರುಪಾವತಿಸಬೇಕು ಎಂದು ತಿಳಿಸಿದರು.

ದೇಶವು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಅನುಭವಿಸುತ್ತಿರುವುದರಿಂದ ಭಾರತವು ಹಣವನ್ನು ಸಾಲದ ರೂಪದಲ್ಲಿ ನೀಡಿದೆ. ಇದನ್ನು ಮರುಪಾವತಿ ಮಾಡಲು ಯೋಜನೆಯನ್ನು ಹೊಂದಬೇಕು ಎಂದು ತಿಳಿಸಿದರು.

ಸಾಲುಮರದ ತಿಮ್ಮಕ್ಕನವರಿಗೆ ಬಿಡಿಎ ನಿವೇಶನ ವಿತರಣೆ

0

ಪರಿಸರಪ್ರೇಮಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ನೀಡಲಾಯಿತು. ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ನಲ್ಲಿರು ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು. ನಂತರ ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ಶತಾಯುಷಿ ತಿಮ್ಮಕ್ಕ ಅವರನ್ನು ಸನ್ಮಾನಿಸಿ ನಿವೇಶನದ ನೋಂದಣಿ ಪತ್ರವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಾಲುಮರದ ತಿಮ್ಮಕ್ಕ, ನನಗೆ ಬಿಡಿಎ ವತಿಯಿಂದ ನಿವೇಶನವನ್ನು ನೀಡಿರುವುದಕ್ಕೆ ಸಂತಸವಾಗುತ್ತಿದೆ.ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರಲ್ಲಿ ಪರಿಸರ ಕಾಳಜಿ ಮೂಡುವಂತೆ ಮಾಡಬೇಕೆಂದು ಹಾರೈಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಆನಂದ್, ಉಪಕಾರ್ಯದರ್ಶಿ ಡಾ.ಮಧು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.
ಬಿಡಿಎ ಅಧ್ಯಕ್ಷ ಎಸ್. ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರು ಬಿಡಿಎ ವತಿಯಿಂದ ನೀಡಲಾದ ನಿವೇಶನದ ನೋಂದಣಿ ಪತ್ರವನ್ನು ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಆನಂದ್, ಉಪಕಾರ್ಯದರ್ಶಿ ಡಾ.ಮಧು, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.