Sunday, March 8, 2026
Sunday, March 8, 2026
Home Blog Page 1535

ಟಿ20: ದ.ಆಫ್ರಿಕಾದ ವಿರುದ್ದ ಭಾರತಕ್ಕೆ 48 ರನ್ ಜಯ

0

ದ.ಆಫ್ರಿಕಾ ವಿರುದ್ಧ ಮೂರನೇ ಟಿ20 ಪಂದ್ಯ ಗೆದ್ದ ಟೀಂ ಇಂಡಿಯಾ ಕೊನೆಗೂ ಸರಣಿ ಜೀವಂತವಾಗಿರಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು. ಆರಂಭಿಕರಾದ ಋತುರಾಜ್ ಗಾಯಕ್ ವಾಡ್ 57, ಇಶಾನ್ ಕಿಶನ್ 54 ರನ್ ಗಳಿಸಿ ಉತ್ತಮ ಆರಂಭ ನೀಡಿದರು. ಆದರೆ ಮಧ‍್ಯಮ ಕ್ರಮಾಂಕದಲ್ಲಿ ರಿಷಬ್ ಪಂತ್, ಶ್ರೇಯಸ್ ಅಯ್ಯರ್ ಮತ್ತೆ ಕೈಕೊಟ್ಟರು.

ಭಾರತದ ಪರ ಬೌಲರ್ ಗಳು ಈ ಪಂದ್ಯದಲ್ಲಿ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು.
ಕೆಳ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ 21 ಎಸೆತಗಳಲ್ಲಿ 31 ರನ್ ಗಳಿಸಿ ತಂಡಕ್ಕೆ ಉತ್ತಮ ಮೊತ್ತ ಗಳಿಸಲು ನೆರವಾದರು.

ಭಾರತಕ್ಕೆ 48 ರನ್ ಗಳ ಗೆಲುವು ಸಿಕ್ಕಿತು. ಚಾಹಲ್ 3, ಹರ್ಷಲ್ ಪಟೇಲ್ 4 ಮತ್ತು ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ಕಬಳಿಸಿದರು.

ಈ ಮೊತ್ತ ಬೆನ್ನತ್ತಿದ ಆಫ್ರಿಕಾಗೆ ಅಕ್ಸರ್ ಪಟೇಲ್ ಮತ್ತು ಹರ್ಷಲ್ ಪಟೇಲ ಆರಂಭಿಕ ಆಘಾತ ನೀಡಿದರು. ಬಳಿಕ ಯಜುವೇಂದ್ರ ಚಾಹಲ್ ಮಧ್ಯಮ ಕ್ರಮಾಂಕದ ಬೆನ್ನುಲುಬು ಮುರಿದರು. ಕಳೆ ಕ್ರಮಾಂಕದ ಬ್ಯಾಟಿಗರನ್ನು ಪೆವಿಲಿಯನ್ ಗಟ್ಟಿದ ಕೀರ್ತಿ ಭುವನೇಶ್ವರ್ ಕುಮಾರ್ ಮತ್ತು ಹರ್ಷಲ್ ಪಟೇಲ್ ರದ್ದು. ಇದರಿಂದಾಗಿ ಆಫ್ರಿಕಾ 19.1 ಓವರ್ ಗಳಲ್ಲಿ 131 ರನ್ ಗಳಿಗೆ ಆಲೌಟ್ ಆದರು.

ವಿಪಕ್ಷಗಳಿಂದ ದೇವೇಗೌಡರು ಮತ್ತು ಪವಾರ್ ಹೆಸರು ಸೂಚನೆ ಸಾಧ್ಯತೆ

0

ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ವತಿಯಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಉದ್ದೇಶದಿಂದ ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ ಅವರು ದಿಲ್ಲಿ ಕಾನ್‌ಸ್ಟಿಟ್ಯೂಷನ್‌ ಕ್ಲಬ್‌ನಲ್ಲಿ ಪ್ರತಿಪಕ್ಷಗಳ ಸಭೆ ಆಯೋಜಿಸಿದ್ದಾರೆ.

ಇನ್ನು ಈ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌. ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ಸೇರಿದಂತೆ 22 ಪಕ್ಷಗಳಿಗೆ ಸಭೆಗೆ ಆಹ್ವಾನ ನೀಡಲಾಗಿದೆ. ಮಮತಾ ವಿರೋಧಿ ಪಕ್ಷವಾದರೂ ಕಾಂಗ್ರೆಸ್‌ ವತಿಯಿಂದ ಮಲ್ಲಿಕಾರ್ಜುನ ಖರ್ಗೆ, ರಣದೀಪ್‌ ಸುರ್ಜೇವಾಲಾ ಹಾಗೂ ಜೈರಾಂ ರಮೇಶ್‌ ಅವರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಹೀಗಿರುವಾಗ ಈ ಮಹತ್ವದ ಸಭೆಯಲ್ಲಿ ಸಭೆಯಲ್ಲಿ ತೃತೀಯ ರಂಗದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಾದ್ಯತೆ ಇದೆ ಎನ್ನಲಾಗಿದೆ. ಶರತ್ ಪವಾರ್ ಅಥವಾ ದೇವೇಗೌಡ ಇಬ್ಬರಲ್ಲಿ ಒಬ್ಬರನ್ನು ಅಭ್ಯರ್ಥಿ ಮಾಡಲು ತೃತೀಯ ರಂಗದ ಆಸಕ್ತಿ ತೋರಿದ್ದಾರೆನ್ನಲಾಗಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಎಚ್‌ಡಿ ಕುಮಾರಸ್ವಾಮಿ, ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲು ಮಮತಾ ಬ್ಯಾನರ್ಜಿ ದೆಹಲಿಯಲ್ಲಿ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೇವೇಗೌಡರಿಗೆ ಹಾಗೂ ನನಗೆ ವೈಯಕ್ತಿಕವಾಗಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಹೀಗಾಗಿ ನಾವಿಬ್ಬರೂ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದಿದ್ದಾರೆ.

ಇನ್ನು ಏಕಪಕ್ಷೀಯವಾಗಿ ಸಭೆ ಕರೆದಿದ್ದಕ್ಕೆ ಅಪಸ್ವರ ಎತ್ತಿರುವ ಎಡಪಕ್ಷಗಳ ನಾಯಕರು, ತಮ್ಮ ಬದಲಿಗೆ ತಮ್ಮ ಪಕ್ಷದ ಸಂಸದರನ್ನು ಸಭೆಗೆ ಕಳುಹಿಸಲು ನಿರ್ಧರಿಸಿದ್ದಾರೆ.

ಏನಿದು I2U2 ? India, Israel ,USA ಮತ್ತು UAE ವೇದಿಕೆ

0

I2U2′ ಹೆಸರಿನ ನಾಲ್ಕು ರಾಷ್ಟ್ರಗಳ ವರ್ಚುವಲ್ ಶೃಂಗಸಭೆ ಜುಲೈ 13 ರಿಂದ 16 ರವರೆಗೆ ಪಶ್ಚಿಮ ಏಷ್ಯಾದ ದೇಶಗಳಿಗೆ ಬಿಡೆನ್ ಅವರ ಭೇಟಿಯ ಸಮಯದಲ್ಲಿ ನಡೆಯಲಿದೆ ಎಂದು ಬಿಡೆನ್ ಆಡಳಿತದ ಹಿರಿಯ ಅಧಿಕಾರಿ ದೈನಂದಿನ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಮುಂದಿನ ತಿಂಗಳು ನಡೆಯಲಿರುವ ಆನ್‌ಲೈನ್ ಶೃಂಗಸಭೆ ‘ಐ2ಯು2’ನಲ್ಲಿ ಭಾಗವಹಿಸಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

I2U2′ ಎಂದರೆ ‘ಭಾರತ, ಇಸ್ರೇಲ್, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಮತ್ತು ಯುಎಇ’. ಬಿಡೆನ್ ಅವರ ಪ್ರವಾಸದ ಸಮಯದಲ್ಲಿ ಇದು ನಡೆಯಲಿದೆ.

ಈ I2U2 ಶೃಂಗಸಭೆಯಲ್ಲಿ ಆಹಾರ ಭದ್ರತೆ ಬಿಕ್ಕಟ್ಟು ಮತ್ತು ಇತರ ಕ್ಷೇತ್ರಗಳ ಕುರಿತು ಚರ್ಚೆ ನಡೆಯಲಿದೆ.

ಬುಲ್ಡೋಜರ್ ಕ್ರಮದ ಬಗ್ಗೆ ಸುಪ್ರೀಂ ಕೋರ್ಟ್ ಗೆ ಮಾಜಿ ನ್ಯಾಯಮೂರ್ತಿಗಳಪತ್ರ

0

ಬುಲ್ಡೋಜರ್‌ಗಳಿಂದ ಮನೆ ನೆಲಸಮ ಮಾಡುವ ಮೂಲಕ ಉತ್ತರ ಪ್ರದೇಶದ ಆಡಳಿತ ಸಂವಿಧಾನದ ಅಪಹಾಸ್ಯ ಮಾಡಲಾಗುತ್ತಿದೆ ಎಂದು ಮೂವರು ಸುಪ್ರಿಂ ಕೋರ್ಟ್‌ನ ಮಾಜಿ ನ್ಯಾಯಾಧೀಶರು ಸೇರಿದಂತೆ 12 ಜನ ಸುಪ್ರಿಂ ಕೋರ್ಟ್‌ಗೆ ಪತ್ರ ಬರೆದಿದ್ದಾರೆ.

ಜೊತೆಗೆ ಸರ್ವೋಚ್ಚ ನ್ಯಾಯಾಲಯ ಕೂಡಲೇ ಮಧ್ಯಪ್ರವೇಶಿಸಿ ಸುಮೋಟೊ ಕೇಸ್‌ ದಾಖಲಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಸುಪ್ರಿಂನ ಮಾಜಿ ನ್ಯಾಯಾಧೀಶರಾದ ಬಿ.ಸುದರ್ಶನ್‌ ರೆಡ್ಡಿ, ವಿ ಗೋಪಾಲ ಗೌಡ ಮತ್ತು ಎ.ಕೆ ಗಂಗೂಲಿ ಸೇರಿದಂತೆ ಮೂವರು ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರು ಹಾಗು 6 ಜನ ವಕೀಲರು ಈ ಪತ್ರಕ್ಕೆ ಸಹಿ ಮಾಡಿದ್ದಾರೆ.

ಹೊರಟ್ಟಿ ಗೆಲುವಿನ ಫಲಿತಾಂಶ ಪ್ರಕಟಣೆಯೊಂದೇ ಬಾಕಿ

0

ವಾಯುವ್ಯ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ದಾಖಲೆಯ 8ನೇ ಬಾರಿಗೆ ಜಯ ದಾಖಲಿಸಿದ್ದಾರೆ.

ಗೆಲುವಿನ ಗುರಿಗೆ ಬೇಕಾಗಿದ್ದ ಮತಗಳನ್ನು ಸುಲಭವಾಗಿ ಪಡೆದ ಹೊರಟ್ಟಿ ಇನ್ನೂ 4 ಸಾವಿರ ಮತಗಳ ಎಣಿಕೆ ಬಾಕಿ ಇರುವಾಗಲೇ ಜಯದ ನಗೆ ಬೀರಿದ್ದಾರೆ.

ಗೆಲುವಿನ ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ಈ ವೇಳೆಗೆ ಹೊರಟ್ಟಿ ಅವರು 7500 ಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ.

ವಿಧಾನಪರಿಷತ್ ನ 2 ಶಿಕ್ಷಕರು, ಮತ್ತು 2 ಪದವೀಧರರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ ಆರಂಭಗೊಂಡಿದೆ. ಸಂಜೆಯೊಳಗೆ 4 ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ, 76 ರ ಹರೆಯದ ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಅವರ ವಿರುದ್ಧ ಜೆಡಿಎಸ್ ನ ಶ್ರೀಶೈಲ ಗಡದಿನ್ನಿ, ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಕಣದಲ್ಲಿದ್ದರು.

ಜೂನ್ 16 ರಿಂದ ಕಲ್ಬುರ್ಗಿ to ಬೆಂಗಳೂರು ವಿಮಾನಯಾನ ಆರಂಭ

0

ಬೀದರ್ ಬೆಂಗಳೂರು ನಡುವೆ ಸ್ಟಾರ್ ಏರ್ ವಿಮಾನ ಸಂಚಾರ ಬುಧವಾರ ಆರಂಭವಾಗಲಿದೆ.
ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ವಿಮಾನ ಸೇವೆಗೆ ಚಾಲನೆ ನೀಡಲಿದ್ದಾರೆ. ಬೀದರ್ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಜರಿರಲಿದ್ದಾರೆ.

ಸ್ಟಾರ್ ಏರ್ ಸಂಸ್ಥೆಯು ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ವಾರದಲ್ಲಿ 4 ಬೀದರ್,ಬೆಂಗಳೂರು ಮಧ್ಯೆ ವಿಮಾನ ಯಾನ ಸೇವೆ ಒದಗಿಸಲಿದೆ.

ಒಂದು ಬದಿಗೆ ಒಂದು, ಇನ್ನೊಂದು ಬದಿಗೆ 2 ಆಸನಗಳಿರುವ ವಿಮಾನದಲ್ಲಿ ಒಟ್ಟು 50 ಜನ ಸಂಚರಿಸಬಹುದಾಗಿದೆ. 50 ನಿಮಿಷಗಳಲ್ಲಿ ಬೀದರ್ ನಿಂದ ಬೆಂಗಳೂರಿಗೆ ತಲುಪಲಿದೆ. ಪ್ರಯಾಣ ವೆಚ್ಚ 2,599 ರೂಪಾಯಿ ವೆಚ್ಚದ ಆಗಿದೆ.

ಜಿಲ್ಲಾ ಆಡಳಿತವು ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ, ವಿಮಾನ ಸೇವೆ ಆರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.
ವಿಮಾನದಲ್ಲಿ ಮೊದಲು ಟಿಕೆಟ್ ಬುಕ್ ಮಾಡಿದವರು ಅತಿಥಿಯಿಂದ ಪ್ರಶಸ್ತಿ ಪಡೆಯುವ ಅವಕಾಶ ಪಡೆಯಲಿದ್ದಾರೆ. ಮೊದಲು ಬರುವ ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ಸಿಗಲಿದೆ.

ಮಧ್ಯಾಹ್ನ 2.55ಕ್ಕೆ ವಿಮಾನ ಬೆಂಗಳೂರಿನಿಂದ ಹೊರಟು ಸಂಜೆ 4.05ಕ್ಕೆ ಬೀದರ್‍ಗೆ ಬರಲಿದೆ. ವಿಮಾನಕ್ಕೆ ವಾಟರ್ ಸೆಲ್ಯೂಟ್, ಲೈಟಿಂಗ್ ಲ್ಯಾಂಪ್ ಸ್ವಾಗತ ನೀಡಲು ತಯಾರಿ ಮಾಡಿಕೊಳ್ಳಲಾಗಿದೆ.

ಬೆಂಗಳೂರಿನ ಟೆಕ್ ಸಂಸ್ಥೆಗಳು ವಿಸಿ ಫಂಡಿಂಗ್ ನಲ್ಲಿಅಗ್ರಪಂಕ್ತಿ

0

ಭಾರತದ ಸಿಲಿಕಾನ್ ವ್ಯಾಲಿ ಎನಿಸಿಕೊಂಡು ಹಲವು ವರ್ಷಗಳಿಂದ ಜಾಗತಿಕ ಐಟಿ ಭೂಪಟದಲ್ಲಿ ಹೈಲೈಟ್ ಆಗಿರುವ ಬೆಂಗಳೂರು ನಗರಕ್ಕೆ ಈಗ ಇನ್ನೊಂದು ಗರಿಮೆ ಸಿಕ್ಕಿದೆ.

ಇತ್ತೀಚೆಗೆ ಆರಂಭವಾದ ಲಂಡನ್ ಟೆಕ್ ವೀಕ್‌ನಲ್ಲಿ ಬಿಡುಗಡೆಯಾದ ಗ್ಲೋಬಲ್ ಸ್ಟಾರ್ಟಪ್ ಇಕೋಸಿಸ್ಟಂ ರಿಪೋರ್ಟ್‌ನಲ್ಲಿ ಈ ಮಾಹಿತಿ ಇದೆ. ಈ ವರ್ಷದ ಮೊದಲ ಐದು ತಿಂಗಳಲ್ಲಿ ಬೆಂಗಳೂರಿನ ಟೆಕ್ ಸಂಸ್ಥೆಗಳು 7.5 ಬಿಲಿಯನ್ ಡಾಲರ್ (58 ಸಾವಿರ ಕೋಟಿ ರೂಪಾಯಿ) ಮೊತ್ತದಷ್ಟು ವಿಸಿ ಫಂಡಿಂಗ್ ಪಡೆದಿವೆ ಎನ್ನಲಾಗಿದೆ.

ಹೊಸ ಮಾದರಿ ತಂತ್ರಜ್ಞಾನ ಆಧರಿತ ಉದ್ಯಮಗಳ ವ್ಯವಸ್ಥೆಯಲ್ಲಿ ಬೆಂಗಳೂರು ಪ್ರಮುಖ ಶಕ್ತಿಯಾಗಿ ಬೆಳೆಯುತ್ತಿದೆ.

ಈ ವರ್ಷ ಇಂಥ ಉದ್ಯಮಗಳ ಮೇಲೆ ಹೂಡಲಾದ ಬಂಡವಾಳದ (ವೆಂಚರ್ ಕ್ಯಾಪಿಟಲ್) ಲೆಕ್ಕಾಚಾರದಲ್ಲಿ ಬೆಂಗಳೂರು ವಿಶ್ವದಲ್ಲೇ ಐದನೇ ಸ್ಥಾನ ಹೊಂದಿದೆ. ಏಷ್ಯಾದಲ್ಲಿ ಬೆಂಗಳೂರು ಅಗ್ರಪಂಕ್ತಿಯಲ್ಲಿ ನಿಂತಿದೆ.

ಬೆಳೆ ವಿಮಾ ಯೋಜನೆ ನೋಂದಾವಣೆ ಬಗ್ಗೆ ಮಾಹಿತಿ

0

ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಗೆ ಸಂಬಂಧಪಟ್ಟಂತೆ 2022ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಗಳಲ್ಲಿ ಒಟ್ಟು 36 ಆಹಾರ, ಎಣ್ಣೆಕಾಳು, ವಾರ್ಷಿಕ ವಾಣಿಜ್ಯ ಮತ್ತು ತೋಟ ಗಾರಿಕಾ ಬೆಳೆಗಳನ್ನು ಅಧಿಸೂಚಿಸಲಾಗಿದೆ. ತಾಲೂಕಿನ ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ.

ಮುಂಗಾರು ಹಂಗಾಮಿನಲ್ಲಿ, ರೈತರು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ 29 ಪ್ರೀಮಿಯಂ ಮೊತ್ತವನ್ನು ಪಾವತಿಸಬೇಕಾಗಿರುತ್ತದೆ ಮತ್ತು ವಾರ್ಷಿಕ ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳಿಗೆ ಶೇ.5 ರಷ್ಟು ಪ್ರೀಮಿಯಂ ಮೊತ್ತವನ್ನು ಪಾವತಿಸಬೇಕಾಗಿರುತ್ತದೆ

ಈ ಯೋಜನೆಯ ಮಾರ್ಗಸೂಚಿಯನ್ವಯ ಬೆಳೆಸಾಲ ಪಡೆದ ಹಾಗೂ ಬೆಳೆಸಾಲ ಪಡೆಯದ ರೈತರು ಬೆಳೆ ವಿಮೆಯಡಿ ಒಳಪಡುವುದು ಐಚ್ಛಿಕವಾಗಿರುತ್ತದೆ.

ಬೆಳೆಸಾಲ ಪಡೆಯದ ರೈತರು ಯೋಜನೆಯಲ್ಲಿ ಪಾಲ್ಗೊಳ್ಳಲು ಹತ್ತಿರದ ಬ್ಯಾಂಕುಗಳು, ಸಾಮಾನ್ಯ ಸೇವಾ ಕೇಂದ್ರಗಳನ್ನು ಅಥವಾ ಗ್ರಾಮಾ ಒನ್ ಕೇಂದ್ರಗಳನ್ನು ಸಂಪರ್ಕಿಸಿ ಆರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ, ದಾಖಲಾತಿಗಳಾದ ಪಹಣಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆಧಾರ್ ಪ್ರತಿಯನ್ನು ನೀಡಬೇಕು. ಬ್ಯಾಂಕಿನಲ್ಲಿ ಖಾತೆಯನ್ನು ತೆರೆದು ವಿಮಾ ಕಂತನ್ನು ಕಟ್ಟಬೇಕು.

ಬೆಳೆ ವಿಮೆ ಯೋಜನೆಯಡಿ ಪಾಲ್ಗೊಳ್ಳುವ ರೈತರು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಅರ್ಜಿ ನಮೂನೆಯಲ್ಲಿ ನಮೂದಿಸತಕ್ಕದ್ದು. ಈ ಯೋಜನೆಯಡಿ ಬೆಳೆ ಸಾಲ ಪಡೆಯದ ರೈತರು ಅಂದಾಜು ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲಿ ಪಾಲ್ಗೊಳ್ಳಬಹುದು.

ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ, ಭಾಗವಹಿಸಲು ಇಚ್ಛೆಪಡದೇ ಇದ್ದಲ್ಲಿ, ಈ ವಿಷಯ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು, ಬೆಳೆವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ.

ಬೆಳೆ ವಿಮೆಗೆ ನೊಂದಾಯಿಸಿದ ನಂತರ, ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕಿಂತ 2 ದಿವಸಗಳು ಮುಂಚಿತವಾಗಿ ನೋಂದಾಯಿಸಿದ ಆರ್ಥಿಕ ಸಂಸ್ಥೆಗಳಲ್ಲಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸತಕ್ಕದೆ. ಅಂತಹ ಸಂದರ್ಭದಲ್ಲಿ ಹೆಚ್ಚುವರಿ ವಿಮಾ ಕಂತಿನ ವ್ಯತ್ಯಾಸದ ಮೊತ್ತವನ್ನು ರೈತರು ಭರಿಸತಕ್ಕದ್ದು. ಅಥವಾ ಹೆಚ್ಚುವರಿ ವಿಮಾ ಕಂತನ್ನು ರೈತರಿಗೆ ಮರುಪಾವತಿಸುತ್ತದೆ.

2022ರ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪ ಅಂದರೆ, ಆಲಿಕಲ್ಲು ಮಳೆ, ಭೂಕುಸಿತ ಮತ್ತು ಬೆಳೆ ಮುಳುಗಡೆ ಇವುಗಳಿಂದ ಬೆಳೆ ನಾಶ ಸಂಭವಿಸಿದಲ್ಲಿ, ಪ್ರತ್ಯೇಕವಾಗಿ ಬೆಳೆ ನಮ್ಮ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುತ್ತದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ 2 ವಾರಗಳೊಳಗೆ ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ಪ್ರತ್ಯೇಕವಾಗಿ ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥ ಪಡಿಸಲಾಗುತ್ತದೆ.

ಈ ಯೋಜನೆಯಡಿ ರೈತರು ಪಾಲ್ಗೊಳ್ಳಲು ಕೊನೆಯ ದಿನಾಂಕಗಳು5 ಹಂತಗಳಲ್ಲಿದೆ. ಜೂ.15, ಜೂ.30, ಜು.15, ಜು.31ಹಾಗೂ ಆ.16 ಆಗಿದೆ. ಜಿಲ್ಲಾವಾರು ಬೆಳೆವಾರು ಕೊನೆಯ ದಿನಾಂಕದ ವಿವರವನ್ನು ಹತ್ತಿರದ ರೈತ ಸಂಪರ್ಕ ಕೇಂದ್ರದಿಂದ ಪಡೆಯಬಹುದು. ಸಂರಕ್ಷಣೆ ತಂತ್ರಾಂಶದ ಮೂಲಕ ಪಡೆಯಬಹುದಾಗಿದೆ.

ಎಲ್ಲಾ ಪಠ್ಯಪುಸ್ತಕ ಸಮಿತಿಗಳ ಪಠ್ಯಗಳು ಈಗ ಸಾರ್ವಜನಿಕ ಅವಗಾಹನೆಗೆ

0

ರಾಜ್ಯ ಶಿಕ್ಷಣ ಇಲಾಖೆಯು ಪಠ್ಯಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ಮುಂದಾಗಿದೆ. ಈ ಹಿಂದಿನ 3 ಸಮಿತಿಗಳ ಶಿಫಾರಸು ಆಧರಿಸಿ ಪರಿಷ್ಕರಣೆಯಾಗಿದ್ದ ಪಠ್ಯಗಳನ್ನು ktbs.kar.nic.in ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದರೆ ಶಿಕ್ಷಣ ಇಲಾಖೆಗೆ ಸಲ್ಲಿಸಬಹುದು.

ಪ್ರಸಕ್ತ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ, ಹಿಂದಿನ ಡಾ.ಬರಗೂರು ರಾಮಚಂದ್ರಪ್ಪ ಸಮಿತಿ ಹಾಗೂ ಅದಕ್ಕೂ ಹಿಂದಿನ ಡಾ.ಮುಡಂಬಡಿತ್ತಾಯ ನೇತೃತ್ವದ ಸಮಿತಿಗಳು ಪರಿಷ್ಕರತ ಪಠ್ಯಪುಸ್ತಕಗಳನ್ನು ಸಾರ್ವಜನಿಕ ವೇದಿಕೆಗೆ ತೆರೆದಿಟ್ಟಿದೆ. ರಾಜ್ಯ ಪಠ್ಯ ಪುಸ್ತಕ ಸಂಘದ ವೆಬ್ ಸೈಟ್ https://karbs.kar.nic.in ನಲ್ಲಿ 3 ಸಮಿತಿಗಳು ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು ಪ್ರಕಟಿಸಲಾಗಿದೆ.

3 ಸಮಿತಿಗಳ ಪರಿಷ್ಕೃತ ಪಠ್ಯಗಳನ್ನು ಪ್ರಕಟಿಸಿ ಯಾವುದೇ ಆಕ್ಷೇಪಾರ್ಯ ಅಂಶಗಳಿದ್ದರೂ ಅವುಗಳ ಬಗ್ಗೆ ಶಿಕ್ಷಣ ಇಲಾಖೆಗೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.

ಕ್ರೀಡಾರಂಗದಲ್ಲಿ ಹಿಂದು ಮುಸ್ಲಿಂ ಮುಖ್ಯವಲ್ಲ ದೇಶ ಮುಖ್ಯ- ಜರೀನ್

0

ಕ್ರೀಡಾಪಟುವಾಗಿ ನಾನು ಭಾರತವನ್ನು ಪ್ರತಿನಿಧಿಸುತ್ತೇನೆ. ನನಗೆ ಹಿಂದೂ-ಮುಸ್ಲಿಂ ಮುಖ್ಯವಲ್ಲ. ನಾನು ಸಮುದಾಯವನ್ನು ಪ್ರತಿನಿಧಿಸುತ್ತಿಲ್ಲ ಬದಲಿಗೆ ನನ್ನ ದೇಶವನ್ನು ಪ್ರತಿನಿಧಿಸುತ್ತಿದ್ದೇನೆ ಎಂದು ವಿಶ್ವ ಚಾಂಪಿಯನ್ ಅವರು ತಿಳಿಸಿದ್ದಾರೆ.

ಇವರ ಸಾಧನೆಗಳಿಗಿಂತ ಇವರ ಧಾರ್ಮಿಕ ಹಿನ್ನೆಲೆಯ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಬಾಕ್ಸರ್ ನಿಖತ್ ಜರೀನ್ ಅವರು ಪ್ರತ್ಯುತ್ತರ ನೀಡಿದ್ದಾರೆ.

ಕ್ರೀಡಾಕೂಟಗಳಲ್ಲಿ ಮಾನಸಿಕ ಒತ್ತಡವನ್ನು ನಿಭಾಯಿಸಲು ಬೆಂಬಲದ ಅಗತ್ಯ. ನಮ್ಮ ಭಾರತೀಯ ಬಾಕ್ಸರ್‌ಗಳು ತುಂಬಾ ಪ್ರತಿಭಾವಂತರು, ನಾವು ಯಾರಿಗೂ ಕಡಿಮೆ ಇಲ್ಲ. ನಮ್ಮಲ್ಲಿ ಶಕ್ತಿ, ವೇಗ ಮತ್ತು ಶಕ್ತಿ..ಎಲ್ಲವೂ ಇದೆ ಎಂದಿದ್ದಾರೆ.

ಜರೀನ್ ಅವರು ಕಳೆದ ತಿಂಗಳು ಟರ್ಕಿಯಲ್ಲಿ ನಡೆದ ಚಾಂಪಿಯನ್‌ಶಿಪ್‌ನ ಫ್ಲೈವೇಟ್ ವಿಭಾಗದಲ್ಲಿ ಥಾಯ್ಲೆಂಡ್‌ನ ಜಿಟ್‌ಪಾಂಗ್ ಜುತಾಮಾಸ್ ಅವರನ್ನು 5-0 ಅಂತರದಿಂದ ಸೋಲಿಸಿ ವಿಶ್ವ ಚಾಂಪಿಯನ್ ಕಿರೀಟವನ್ನು ಅಲಂಕರಿಸಿದ ಐದನೇ ಭಾರತೀಯ ಮಹಿಳೆಯಾಗಿದ್ದಾರೆ.

ಕಳೆದ ತಿಂಗಳು ಫ್ಲೈವೇಟ್ ಸ್ಪರ್ಧೆಯಲ್ಲಿ ವಿಶ್ವ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡ ಜರೀನ್, ಜುಲೈ 28 ರಿಂದ ಪ್ರಾರಂಭವಾಗುವ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್‌ಗೆ ಸಹ ಸ್ಥಾನ ಪಡೆದಿದ್ದಾರೆ.