amazon ಶಿವಮೊಗ್ಗ ಜಿಲ್ಲೆಯ ಗಾಜನೂರು ಡಾ. ಕಾರುಣ್ಯ ಜೆ.ಜೆ. ಇವರು ಬೆಂಗಳೂರು ಅಮೆಜಾನ್ ಸೆಲ್ಲರ್ ಸರ್ವಿಸ್ ಪ್ರೆöÊ.ಲಿ. ಹಾಗೂ ಹರಿಯಾಣ ಗುರಂಗಾವ್ ಕ್ಲಿಕ್‌ಟೆಕ್ ರೀಟೈಲ್ ಪ್ರೆöÊ.ಲಿ. ಇವರ ಮೇಲೆ ಗುಣಮಟ್ಟ ಸರಿಯಿಲ್ಲದ ಲಿಟ್‌ಮ್ಯಾನ್ ಸ್ಟೆತೋಸ್ಕೋಪ್ ನೀಡಿದ್ದು, ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ವಕೀಲ ಮೂಲಕ ನೀಡಿದ್ದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಎದುರುದಾರರಿಂದ ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ.
ದೂರುದಾರರು 2023ರ ನವೆಂಬರ್‌ನಲ್ಲಿ ಅಮೆಜಾನ್ ಸೆಲ್ಲರ್‌ನಿಂದ ಲಿಟ್‌ಮ್ಯಾನ್ ಸ್ಟೆತೋಸ್ಕೋಪ್ ಆನ್‌ಲೈನ್ ಮೂಲಕ ರೂ. 10,024/-ಗಳನ್ನು ಪಾವತಿಸಿ ಬುಕ್ ತರಿಸಿದ್ದು, ಇದರ ಗುಣಮಟ್ಟ ಸರಿಯಿಲ್ಲದ್ದರಿಂದ ವಾಪಾಸ್ಸು ಮಾಡಿರುತ್ತಾರೆ. ಆದರೆ 3 ರಿಂದ 10 ದಿನಗಳೊಳಗಾಗಿ ಹಣ ವಾಪಸ್ಸು ಮಾಡಲಾಗುವುದೆಂದು ತಿಳಿಸಿದ್ದರೂ, ಹಣ ವಾಪಸ್ಸು ಮಾಡದಿದ್ದರಿಂದ ಲೀಗಸ್ ನೋಟೀಸ್‌ಗೂ ಎದುರುದಾರರು ಯಾವುದೇ ಪ್ರತ್ಯುತ್ತರ ನೀಡದೆ ಸೇವಾನ್ಯೂನತೆ ಎಸಗಿರುತ್ತಾರೆ ಎಂದು ಆಯೋಗಕ್ಕೆ ದೂರನ್ನು ಸಲ್ಲಿಸಿರುತ್ತಾರೆ.
ಆಯೋಗವು ದೂರನ್ನು ದಾಖಲಿಸಿಕೊಂಡು ಎರಡೂ ಎದುರುದಾರರಿಗೆ ನೋಟೀಸ್ ನೀಡಿದ್ದು, ಎದುರುದಾರರು ಆಯೋಗಕ್ಕೆ ಹಾಜರಾಗದಿರುವುದರಿಂದ ಏಕಪಕ್ಷೀಯವಾಗಿ ಆದೇಶವಾಗಿದ್ದು, ಆಯೋಗವು ದೂರುದಾರರು ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲಾತಿಗಳನ್ನು ಪರಿಶೀಲಿಸಿ, ದೂರುದಾರರ ವಾದವನ್ನು ಆಲಿಸಿ, ಎದುರುದಾರರು ಸ್ಟೆತೋಸ್ಕೋಪ್ ಅನ್ನು ಹಿಂಪಡೆದು, ಹಣವನ್ನು ಹಿಂತಿರುಗಿಸದೆ ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ತೀರ್ಮಾನಿಸಿ, ದೂರನ್ನು ಭಾಗಶಃ ಪುರಸ್ಕರಿಸಿ, ಎದುರುದಾರರು ಪಡೆದಿರುವ ರೂ. 10024/- ಗಳಿಗೆ ವಾರ್ಷಿಕ ಶೇ. 9ರ ಬಡ್ಡಿಯನ್ನು ಸೇರಿಸಿ 2025ರ ಏಪ್ರಿಲ್ ರೀಮದ ಅನ್ವಯವಾಗುವಂತೆ ಈ ಆದೇಶವಾದ 45 amazon ದಿನಗಳೊಳಗಾಗಿ ದೂರುದಾರರಿಗೆ ಪಾವತಿಸುವಂತೆ, ತಪ್ಪಿದ್ದಲ್ಲಿ ವಾರ್ಷಿಕ ಶೇ. 12ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಹಾಗೂ ರೂ. 15,000/- ಗಳನ್ನು ಪರಿಹಾರವಾಗಿ ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ ಈ ಆದೇಶವಾದ 45 ದಿನಗಳೊಳಗಾಗಿ ದೂರುದಾರರಿಗೆ ಪಾವತಿಸುವಂತೆ ತಪ್ಪಿದ್ದಲ್ಲಿ ವಾರ್ಷಿಕ ಶೇ. 12ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಮಾ. 17 ರಂದು ಆದೇಶಿಸಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟಾçರ್ ಗಂಗಾಧರ ನಾಯ್ಕ್ ಎಂ.ಟಿ. ತಿಳಿಸಿದ್ದಾರೆ.
amazon ಅಮೆಜಾನ್ ಸೆಲ್ಲರ್ ಸೇವಾ ನ್ಯೂನತೆ ದೀರು: ಪರಿಹಾರ ನೀಡಲು ಆಯೋಗದಿಂದ ಆದೇಶ.
Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.
Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ ಪ್ರತಿಬಂಧಕ ಕಾಯಿದೆ ಕುರಿತು ವ್ಯಾಪಕವಾಗಿ ಅರಿವು ಮೂಡಿಸುವ ಮೂಲಕ ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ನೀಡುವ ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಪರಿಶೀಲನೆ ನಡೆಸಿ ಮಾತನಾಡಿದರು.
ಜಿಲ್ಲೆಯಲ್ಲಿ ದೌರ್ಜನ್ಯ ಪ್ರತಿಬಂಧಕ ಕಾಯ್ದೆಯಡಿ 2025 ರಲ್ಲಿ 128 ಮತ್ತು 2026 ರ ಫೆಬ್ರವರಿ ಮಾಹೆಯವರೆಗೆ 45 ಸೇರಿ ಒಟ್ಟು 174 ಪ್ರಕರಣಗಳು ದಾಖಲಾಗಿವೆ. ದಾಖಲಾದ ಪ್ರಕರಣಗಳಲ್ಲಿ 71 ಕ್ಕೆ ಚಾರ್ಜ್ ಶೀಟ್ ಹಾಕಲಾಗಿದೆ. 1 ಪ್ರಕರಣ ಕೈಬಿಡಲಾಗಿದೆ. 15 ಕ್ಕೆ ಬಿ. ರಿಪೋರ್ಟ್ ಸಲ್ಲಿಕೆಯಾಗಿದ್ದು 3 ಕ್ಕೆ ಹೈಕೋರ್ಟ್ ತಡೆಯಾಜ್ಞೆಯಿದೆ. 32 ಪ್ರಕರಣಗಳನ್ನು ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಲಾಗಿದೆ ಎಂದರು.
ದೌರ್ಜನ್ಯ ಪ್ರಕರಣದಡಿ ನೊಂದ ಸಂತ್ರಸ್ಥರಿಗೆ ರೂ.3.45 ಕೋಟಿ ಪರಿಹಾರ ನೀಡಲಾಗಿದೆ. ಇದರಲ್ಲಿ ಎಫ್.ಐ.ಆರ್. ದಾಖಲಾದ ತಕ್ಷಣ ರೂ. 2.02 ಕೋಟಿ, ಚಾರ್ಜ್ ಶೀಟ್ ಹಂತದಲ್ಲಿ ರೂ.1.38 ಕೋಟಿ ಮತ್ತು ತೀರ್ಪು ನಂತರ ರೂ. 3.45 ಲಕ್ಷ ಪರಿಹಾರ ನೀಡಲಾಗಿದೆ. ಪರಿಹಾರ ಪಡೆದವರಲ್ಲಿ 536 ಪರಿಶಿಷ್ಟ ಜಾತಿ ಮತ್ತು 53 ಪರಿಶಿಷ್ಟ ಪಂಗಡದ ಸಂತ್ರಸ್ಥರಿದ್ದಾರೆ.
ಬಾಲ್ಯ ವಿವಾಹ ತಡೆಗೆ ಕ್ರಮ: ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳ ತಡೆಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 64 ಬಾಲ್ಯ ವಿವಾಹಗಳು ನಡೆದಿದ್ದು ಪ್ರಕರಣ ವಿಚಾರಣಾ ಹಂತದಲ್ಲಿವೆ. ಇದೇ ಅವಧಿಯಲ್ಲಿ 63 ಬಾಲ್ಯ ವಿವಾಹಗಳನ್ನು ಸಹ ತಡೆಗಟ್ಟಲಾಗಿದೆ. ಬಾಲ್ಯ ವಿವಾಹ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಿ ವಿವಾಹಕ್ಕೆ ಮುಂದಾಗುವ ಪೋಷಕರ ಮೇಲೆ ಮತ್ತು ಮುಹೂರ್ತ ನಡೆಸಿಕೊಡುವ ಅರ್ಚಕನ ಮೇಲೆಯು ಕಾನೂನು ಕ್ರಮ ಜರುಗಿಸಲಾಗುತ್ತದೆ. ಈ ನಿಟ್ಟಿನಲ್ಲಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ ಎಂದಾಗ ಪೊಲೀಸ್ ಅಧೀಕ್ಷಕರಾದ ನಿಖಿಲ್.ಬಿ ಅವರು ತಪ್ಪಿತಸ್ಥ ಎಲ್ಲರೂ ಮೇಲೂ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿದರು. ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಹೇಮಂತ್ ಎನ್ ಮಾತನಾಡಿ ಪಂಚಾಯಿತಿ ಮಟ್ಟದಲ್ಲಿ 15 ಸದಸ್ಯರ ಬಾಲ್ಯ ವಿವಾಹ ತಡೆ ಕಾವಲು ಸಮಿತಿ ಇದ್ದು ನಿಯಮಿತವಾಗಿ ಸಭೆ ನಡೆಸಿ ತಡೆಗೆ ಮುಂದಾಗಲು ಸೂಚಿಸಲಾಗುತ್ತದೆ ಎಂದರು.
ದೇವಸ್ಥಾನ, ಸಾರ್ವಜನಿಕ ಸ್ಥಳಗಳು ಎಲ್ಲರಿಗೂ ಪ್ರವೇಶ ಮುಕ್ತ: ಯಾವುದೇ ದೇವಸ್ಥಾನ, ಶಾಲೆಗಳು, ಸಾರ್ವಜನಿಕ ಸ್ಥಳಗಳು ಎಲ್ಲರ ಪ್ರವೇಶಕ್ಕೆ ಮುಕ್ತವಾದ ಸ್ಥಳಗಳಾಗಿವೆ. ಆದರೆ ಇಲ್ಲಿ ಅಸ್ಪೃಶ್ಯತೆ ಆಚರಣೆ ಮಾಡುವಂತಿಲ್ಲ. ಸಮಿತಿ ಸದಸ್ಯರು ದೇವಸ್ಥಾನಗಳ ಬಳಿ ಮುಕ್ತ ಪ್ರವೇಶ ಎಂದು ನಾಮಫಲಕ ಹಾಕಬೇಕೆಂದು ಪ್ರಸ್ತಾಪಿಸಿದಾಗ ಜನರಲ್ಲಿ ಕಾಯಿದೆ ಬಗ್ಗೆ ಸಾಕಷ್ಟು ಅರಿವಿದೆ, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಸೌಹಾರ್ಧತಾ ವಾತಾವರಣಾ ನಿರ್ಮಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
Prabhuling Kavalikatti ಸಾರಿಗೆ ಶಿಬಿರ: ಜಿಲ್ಲೆಯ ಕೊಳಚೆ ಪ್ರದೇಶದಲ್ಲಿ ವಾಸಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಾಹನ ಚಾಲನಾ ಪರವಾನಗಿ ನೀಡಲು ತಾಲ್ಲೂಕಿಗೆ ಒಂದು ಸಾರಿಗೆ ಶಿಬಿರ ನಡೆಸಿ ಅವರ ಮನೆ ಬಾಗಿಲಲ್ಲೆ ಡಿಎಲ್ ವಿತರಣೆ ಮಾಡಲು ನಿರ್ಣಯಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಹೇಮಂತ್ ಎನ್, ಪೊಲೀಸ್ ಅಧೀಕ್ಷಕ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಪಾಲಿಕೆ ಆಯುಕ್ತ ಮಾಯಣ್ಣಗೌಡ, ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ಸಮಿತಿ ಸದಸ್ಯರಾದ ಓಂ ಪ್ರಕಾಶ್, ಅಣ್ಣಪ್ಪ, ದಿನೇಶ್ ಪಟೇಲ್, ಮಂಜುನಾಥ್, ಶಿವಬಸಪ್ಪ ಹಾಗೂ ಇನ್ನಿತರೆ ಸದಸ್ಯರು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲೇಶಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Shimoga Bharat Scouts and Guides ಯುವಜನರಲ್ಲಿ ಯೋಗ,ಪ್ರಾಣಾಯಾಮ ಮತ್ತು ಧ್ಯಾನಗಳ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು- ಎಚ್.ಎಂ.ಚಂದ್ರಶೇಖರಯ್ಯ.
Shimoga Bharat Scouts and Guides ದೇಶದ ನಿಜವಾದ ಶಕ್ತಿ ಯುವಸಂಪತ್ತು. ಪರಿಣಾಮಕಾರಿಯಾಗಿ ಯುವಶಕ್ತಿ ಬಳಸಿಕೊಳ್ಳಬೇಕಿದೆ ಎಂದು ಯೋಗ ಶಿಕ್ಷಕ ಎಚ್.ಎಂ.ಚಂದ್ರಶೇಖರಯ್ಯ ಹೇಳಿದರು.
ಶಿವಮೊಗ್ಗ ಜಿಲ್ಲಾ ಸ್ಕೌಟ್ ಭವನದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಒಂದು ವಾರದ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮದಲ್ಲಿ ಮಾತನಾಡಿ, ಯುವಜನರಿಗೆ ಯೋಗ, ಪ್ರಾಣಾಯಾಮ ಮತ್ತು ಧ್ಯಾನಗಳ ಮಹತ್ವದ ಅರಿವು ಮೂಡಿಸಬೇಕಿದೆ. ಶಿಸ್ತು, ಸಂಯಮ, ದೇಶಭಕ್ತಿ, ಸಮರ್ಪಣಾ ಮನೋಭಾವ, ತ್ಯಾಗ, ಸೇವಾ ಮನೋಭಾವನೆ, ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್ ಮಾತನಾಡಿ, ಯೋಗ, ಪ್ರಾಣಾಯಾಮ, ಧ್ಯಾನ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಭಾವನೆಗಳನ್ನು ಮೂಡಿಸುವುದರ ಜೊತೆಗೆ ದೇಹ, ಮನಸ್ಸು ಸದೃಢವಾಗಿ ಸದಾ ಲವಲವಿಕೆಯಿಂದ ಆರೋಗ್ಯವಂತರಾಗಿ ಇರಲು ಸಾಧ್ಯವಾಗುತ್ತದೆ. ವಿದ್ಯಾಭ್ಯಾಸದ ಜೊತೆಗೆ ಇಂತಹ ಶಿಬಿರಗಳಲ್ಲಿ ಪಾಲ್ಗೊಂಡರೆ ವಿದ್ಯಾರ್ಥಿಗಳು ಪರಿಪೂರ್ಣ ವ್ಯಕ್ತಿಗಳಾಗುತ್ತಾರೆ ಎಂದರು.
Shimoga Bharat Scouts and Guides ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ರಾಜೇಶ್ ಅವಲಕ್ಕಿ ಮಾತನಾಡಿ, 199 ದೇಶಗಳಲ್ಲಿ ಯೋಗವನ್ನು ಎಲ್ಲಾ ದೇಶದವರು ಒಪ್ಪಿ ಯೋಗಭ್ಯಾಸ ಮಾಡುತ್ತಿದ್ದಾರೆ. ಸನಾತನ ಕಾಲದಿಂದಲೂ ಯೋಗ್ಯ ಅಭ್ಯಾಸಕ್ಕೆ ತನ್ನದೇ ಆದ ಹಿನ್ನೆಲೆ ಇದೆ ಎಂದು ತಿಳಿಸಿದರು.
ರಾಜ್ಯ ಸಂಘಟನಾ ಆಯುಕ್ತರಾದ ಸುಮನ ಶೇಖರ್ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಕಾರ್ಯಕ್ರಮಗಳನ್ನು ನಾವು ಆಯೋಜಿಸಿದ್ದೇವೆ. ವಿದ್ಯಾರ್ಥಿಗಳು ಕಾರ್ಯಕ್ರಮದ ಲಾಭಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಯೋಗ ಗುರುಗಳಿಗೆ ಸನ್ಮಾನಿಸಲಾಯಿತು. ನಾಗರತ್ನಾ ಚಂದ್ರಶೇಖರಯ್ಯ ಅವರು ವಿದ್ಯಾರ್ಥಿಗಳಿಗೆ ದೇಶಭಕ್ತಿಗಳನ್ನು ಹೇಳಿಕೊಟ್ಟರು. ವಿವಿಧ ಕಾಲೇಜುಗಳಿಂದ 170 ಪದವಿ ವಿದ್ಯಾರ್ಥಿಗಳು ಹಾಜರಿದ್ದರು
MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.
MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;.9480880595.
World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.
World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಇದಕ್ಕೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಕ್ಷಯರೋಗಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಡಿಹೆಚ್‌ಓ ಡಾ. ನಟರಾಜ.ಕೆ.ಎಸ್ ತಿಳಿಸಿದರು.
ಶಿವಮೊಗ್ಗ ನಗರ ಆರೋಗ್ಯ ಕೇಂದ್ರ ತುಂಗಾನಗರ ವ್ಯಾಪ್ತಿಯ ನೇತಾಜಿ ವೃತ್ತದಲ್ಲಿ ಮಂಗಳವಾರ ಬೆಳಿಗ್ಗೆ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಈ ವರ್ಷದ ಘೋಷಣೆಯಡಿ ಏರ್ಪಡಿಸಲಾಗಿದ್ದ “ಹೌದು, ಭಾರತದ ನೇತೃತ್ವದಲ್ಲಿ, ಜನರ ಶಕ್ತಿಯೊಂದಿಗೆ ನಾವು ಕ್ಷಯರೋಗವನ್ನು ನಿರ್ಮೂಲನೆ ಮಾಡಬಹುದು” ಎಂಬ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದುಶ್ಚಟಗಳಿಂದ ದೂರವಿದ್ದು, ಪೌಷ್ಟಿಕ ಆಹಾರ ತೆಗೆದುಕೊಳ್ಳುವುದರಿಂದ ಕ್ಷಯರೋಗ ಸೇರಿದಂತೆ ಯಾವುದೇ ರೋಗದಿಂದ ದೂರ ಉಳಿಯಬಹುದಾಗಿದೆ. ಕ್ಷಯ ರೋಗಿಗಳು ಸೂಕ್ತ ಚಿಕಿತ್ಸೆಯೊಂದಿಗೆ ಪೌಷ್ಟಿಕ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
World Tuberculosis Day ಕಳೆದ ವರ್ಷದಲ್ಲಿ ಭಾರತದಲ್ಲಿ 25 ಲಕ್ಷ ಟಿಬಿ ಪ್ರಕರಣಗಳು ವರದಿಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 1806 ಪ್ರಕರಣ ವರದಿಯಾಗಿದೆ. ಇತ್ತೀಚಿನ ವರ್ಷದಲ್ಲಿ ಕ್ಷಯ ರೋಗ ಹರಡುವ ಪ್ರಮಾಣ ಶೇ.21 ಕಡಿಮೆ ಯಾಗಿದೆ. ಈ ಪ್ರಮಾಣವನ್ನು ಇನ್ನೂ ತಗ್ಗಿಸುವ ಅವಶ್ಯಕತೆ ಇದ್ದು, ಶೀಘ್ರ ಪತ್ತೆ, ಪೌಷ್ಟಿಕ ಆಹಾರ ಮತ್ತು ಚಿಕಿತ್ಸೆಯಿಂದ ಇದು ಸಾಧ್ಯ ಎಂದರು.
ರೋಟರಿ ಸಂಸ್ಥೆಯ ಬಸವರಾಜ್ ಬಿ ಮಾತನಾಡಿ, ಸಂಸ್ಥೆಯ ವತಿಯಿಂದ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರವನ್ನು ನಿಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸಹಕಾರ ನಿಡುತ್ತೇವೆ ಎಂದರು.
ಕಾರ್ಯಕ್ರಮದ ಅಂಗವಾಗಿ ಚಿಕಿತ್ಸೆಯಲ್ಲಿರುವವರಿಗೆ ಪೌಷ್ಟಿಕ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು.
ಈ ಜಾಥಾ ಕಾರ್ಯಕ್ರಮದಲ್ಲಿ ತಮಟೆ ಜಗದೀಶ್ ಕಲಾ ತಂಡ ಭದ್ರಾವತಿ ಇವರು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಬೀದಿ ನಾಟಕ ನಡೆಸಿಕೊಟ್ಟರು.
ಜಾಥಾವು ನೇತಾಜಿ ವೃತ್ತದಿಂದ ಜೆ.ಪಿ ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸಿತು.
ಕಾರ್ಯಕ್ರಮದಲ್ಲಿ ಡಾ. ಕಿರಣ್.ಎಸ್.ಕೆ ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿಗಳು, ಡಾ. ಚಂದ್ರಶೇಖರ್ ಟಿ.ಹೆಚ್.ಒ, ಐ.ಎಂ.ಎ ಯ ಅಧ್ಯಕ್ಷರು ಹಾಗೂ ಸದಸ್ಯರು ಆದ ಡಾ. ರವೀಶ, ಡಾ. ಸುಭ್ರತಾ, ಡಾ. ಕೌಸ್ತುಬ ಹಾಗೂ ರೋಟರಿ ಸಂಸ್ಥೆಯ ಅಧ್ಯಕ್ಷರು ಹಾಗೂ ಸದಸ್ಯರಾದ ಬಸವರಾಜ್, ಕಿರಣ್ ಮತ್ತು ಇತರರು, ಮಹಮ್ಮದ್ ನಜೀರ್ ಅಧ್ಯಕ್ಷರು ನೂರುಲ್ಲಾ ಇಸ್ಲಾಂ ಮಸೀದಿ, ನಜೀಮಾ, ಜೈ ಕರ್ನಾಟಕ ಮಹಿಳಾ ಸದಸ್ಯರು, ಸಮಾಜ ಸೇವಕ ಬಸವರಾಜಪ್ಪ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ನಂಜಪ್ಪ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶ್ರೀನಿವಾಸ್ ಸ್ವಾಗತಿಸಿ, ಶ್ರೀ ಕುಮಾರ್ ಎಸ್ ನಿರೂಪಿಸಿದರು. ಜಾಥಾ ಕಾರ್ಯಕ್ರಮವನ್ನು ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಸಮಾಪ್ತಿಗೊಳಿಸಲಾಯಿತು.
Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್
Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ ಶಿಕ್ಷಣಕ್ಕೆ ಕಂಪ್ಯೂಟರ್ ಅನುಕೂಲವಾಗಲಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷ ಎನ್. ಪ್ರಕಾಶ್ ಹೇಳಿದರು.
ತಾಲೂಕಿನ ಆನವಟ್ಟಿ ಹೋಬಳಿಯ ಗುಡ್ಡದ ಬೆಣ್ಣಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿವಮೊಗ್ಗದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿ ಸಹಯೋಗದೊಂದಿಗೆ ಕಂಪ್ಯೂಟರ್ ಮತ್ತು ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಸಾಧ್ಯವಿದೆ. ಜೊತೆಗೆ ಆಧುನಿಕ ಯುಗದಲ್ಲಿ ಕಂಪ್ಯೂಟರ್ ಕಲಿಕೆ ಅತ್ಯಗತ್ಯ ಎನ್ನುವಂತಾಗಿದೆ. ಈ ನಿಟ್ಟಿನಲ್ಲಿ ಹಿಂದುಳಿದ ಪ್ರದೇಶಗಳ ಶಾಲೆಗಳನ್ನು ಗುರುತಿಸಿ ಕಂಪ್ಯೂಟರ್‌ಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು.
Shivamogga News ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ದಯಾನಂದ ಕಲ್ಲೇರ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಪರಿಚಯ ಮಾಡಿಕೊಡುವ ಉದ್ದೇಶದಿಂದ ಕಂಪ್ಯೂಟರ್‌ನ್ನು ಕೊಡುಗೆಯಾಗಿ ನೀಡಲಾಗುತ್ತಿರುವುದು ಸ್ವಾಗತಾರ್ಹ. ಉತ್ತಮ ಕಲಿಕಾ ವಾತಾವರಣವನ್ನು ಸರ್ಕಾರಿ ಶಾಲೆಗಳಲ್ಲಿ ಕಲ್ಪಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಸುಧಾರಣೆಯಾಗಿದ್ದು, ಜಾಗತಿಕ ಬದಲಾವಣೆಗೆ ಹೊಂದಿಕೊಳ್ಳಲು ಕಂಪ್ಯೂಟರ್ ಕಲಿಕೆ ಅಗತ್ಯವಾಗಿದೆ ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೋಮಪ್ಪ ಅಧ್ಯಕ್ಷತೆ ವಹಿಸಿದ್ದರು. ಬಾರಂಗಿ ಗ್ರಾಪಂ ಪಿಡಿಒ ರಮೇಶ್, ಡಾ.ಬಿ.ಆರ್. ಅಂಬೇಡ್ಕರ್ ಆದಿ ಜಾಂಬವ ತಾಲೂಕು ಸಮಿತಿ ಅಧ್ಯಕ್ಷೆ ಕೆಂಚಮ್ಮ ರಮೇಶ್, ಮುಖ್ಯ ಶಿಕ್ಷಕ ಪಿ. ಗುತ್ಯಪ್ಪ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಶಿವಮೊಗ್ಗ ವಿಶು ಕುಮಾರ್ ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.
National Horticulture Mission Scheme ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿ ಅರ್ಹ ಸಾಮಾನ್ಯ &ಪ.ಜಾ/ ಪ.ವರ್ಗಗಳ ರೈತರಿಂದ ಅರ್ಜಿ ಆಹ್ವಾನ
National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಹ ಸಾಮಾನ್ಯ ಮತ್ತು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಿದೆ.
“ಸಮಗ್ರ ಪೋಷಕಾಂಶ ನಿರ್ವಹಣೆ ಹಾಗೂ ಸಮಗ್ರ ರೋಗ \ ಕೀಟ ನಿಯಂತ್ರಣ” ಕಾರ್ಯಕ್ರಮದಡಿ ಜೈವಿಕ ಗೊಬ್ಬರವಾದ ಅರ್ಕ ಮೈಕ್ರೋಬಿಯಲ್ ಕನ್ಸಾರ್ಷಿಯಮ್ ಪರಿಕರವನ್ನು ಮತ್ತು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಲಘು ಪೋಷಕಾಂಶಗಳ ಮಿಶ್ರಣ ಅಥವಾ ಬೆಳೆ ಸ್ಪೇಷಲ್ ಪರಿಕರವನ್ನು ವಿತರಿಸಲಾಗುತ್ತಿದೆ.
National Horticulture Mission Scheme ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಬುಕ್, ಆರ್‌ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರ ನಕಲುಗಳೊಂದಿಗೆ ಶಿಕಾರಿಪುರ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ತಮ್ಮ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
Prabhuling Kavalikatti ಏಪ್ರಿಲ್5 ರಂದು ಬಾಬು ಜಗಜೀವನಾ ರಾಂ ಜಯಂತಿ ಮತ್ತು ಏಪ್ರಿಲ್ 14. ಡಾ.ಅಂಬೇಡ್ಕರ್ ಜಯಂತಿ ಆಚರಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ- ಪ್ರಭುಲಿಂಗ ಕವಳಿಕಟ್ಟಿ
Prabhuling Kavalikatti ಹಸಿರು ಕ್ರಾಂತಿ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್‌ರವರ ಜಯಂತಿಯನ್ನು ಏ.5 ರಂದು ಕುವೆಂಪು ರಂಗಮಂದಿರದಲ್ಲಿ ಮತ್ತು ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರ ಜಯಂತಿಯನ್ನು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಏ.5 ರಂದು ಡಾ.ಬಾಬು ಜಗಜೀವನರಾಂ ಮತ್ತು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್‌ರವರ ಜನ್ಮ ದಿನಾಚರಣೆ ಕಾರ್ಯಕ್ರಮದ ಕುರಿತು ಚರ್ಚಿಸಲು ಮಂಗಳವಾರ ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ವಿತರಣೆ ಮಾಡುವಂತೆ ಹಾಗೂ ಪ್ರಚಾರಕ್ಕಾಗಿ ನಗರದ ಮುಖ್ಯ ಭಾಗಗಳಲ್ಲಿ ಫೆಕ್ಸ್ಗಳನ್ನು ಅಳವಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೂವಿನ ಅಲಂಕಾರ, ವೇದಿಕೆ, ವಿದ್ಯುತ್, ಕುಡಿಯುವ ನೀರು, ಲಘು ಉಪಹಾರ, ಪೊಲೀಸ್ ಬಂದೋಬಸ್ತ್, ಕಲಾತಂಡಗಳು, ಕಿರುಹೊತ್ತಿಗೆ ವಿತರಣೆ ಸೇರಿದಂತೆ ಎಲ್ಲ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೆರವಣಿಗೆ : ಡಾ.ಬಾಬು ಜಗಜೀವನರಾಂ ಜಯಂತಿಯಂದು ಸೈನ್ಸ್ ಮೈದಾನದಿಂದ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು ಪಾಲಿಕೆಯಿಂದ ಈ ಮಹಾತ್ಮರ ಭಾವಚಿತ್ರಗಳನ್ನು ಮೆರವಣಿಗೆ ಮೂಲಕ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬಂದು ಸೇರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಪ್ರತಿಭಾ ಪುರಸ್ಕಾರ ಮತ್ತು ಹೋರಾಟಗಾರರಿಗೆ ಸನ್ಮಾನ : ಮಹಾತ್ಮರ ಜನ್ಮ ದಿನಾಚರಣೆಯಂದು ಅತಿ ಹೆಚ್ಚು ಅಂಕ ಗಳಿಸಿದ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಮುದಾಯಗಳ ಪರವಾಗಿ ಹೋರಾಟ ಮಾಡಿದ ಹೋರಾಟಗಾರರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಇಬ್ಬರು ಮಹನೀಯರ ಜಯಂತಿ ವೇದಿಕೆ ಕಾರ್ಯಕ್ರಮಗಳು ಬೆಳಿಗ್ಗೆ 11 ಕ್ಕೆ ನಡೆಸಲಾಗುವುದು. ಮುಖಂಡರ ಸಲಹೆಯಂತೆ ಉಪನ್ಯಾಸಕರನ್ನು ಆಯ್ಕೆ ಮಾಡಲಾಗುವುದು ಎಂದರು.
Prabhuling Kavalikatti ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ : ಡಾ.ಬಾಬು ಜಗಜೀವನರಾಂ ಭವನದ ಕಾಮಗಾರಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದೆ. ಕಾಮಗಾರಿ ಪೂರ್ಣಗೊಂಡಿಲ್ಲ. ಬಾಕಿ ಇರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಈಗ ಯಾವುದೇ ತೊಡಕು ಇಲ್ಲವಾಗಿದ್ದು ಇನ್ನು ಒಂದು ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಂಡು ಮೇ ಮಾಹೆಯಲ್ಲಿ ಉದ್ಘಾಟನೆಯಾಗಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ
ಪ್ರಭುಲಿಂಗ ಕವಳಿಕಟ್ಟಿ ಅವರು ತಿಳಿಸಿದ್ದಾರೆ.
ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ನಗರದಲ್ಲಿರುವ ಅಂಬೇಡ್ಕರ್ ನಗರಕ್ಕೆ ದೀಪಾಲಂಕಾರ ಹಾಗೂ ಪಾಲಿಕೆ ಆವರಣದಲ್ಲಿರುವ ಡಾ.ಅಂಬೇಡ್ಕರ್ ಪುತ್ಥಳಿಗೆ ಹಾರ ಹಾಕಲು ಮೆಟ್ಟಿಲು ಅಥವಾ ಪೂರಕ ವ್ಯವಸ್ಥೆ ಮಾಡುವಂತೆ ಸಲಹೆಗಳನ್ನು ನೀಡಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಅಂಬೇಡ್ಕರ್ ನಗರದಲ್ಲಿ ದೀಪಾಲಂಕಾರಕ್ಕೆ ವ್ಯವಸ್ಥೆ ಮಾಡಲು ಹಾಗೂ ಪಾಲಿಕೆಯ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಯನ್ನು ಪಾಲಿಷ್ ಮಾಡಿಸಿ, ಸುತ್ತಮುತ್ತ ಸ್ವಚ್ಚತೆ ಕಾಪಾಡಬೇಕು ಹಾಗೂ ಮಾಲಾರ್ಪಣೆಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡುವಂತೆ ಪಾಲಿಕೆ ಆಯುಕ್ತರಿಗೆ ತಿಳಿಸಿದ ಅವರು ಎಲ್ಲರೂ ಒಟ್ಟಾಗಿ ಸೇರಿ ಜಯಂತಿಯನ್ನು ಯಶಸ್ವಿಗೊಳಿಸೋಣ ಎಂದು ಮನವಿ ಮಾಡಿದರು.
ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ, ಎಎಸ್‌ಪಿ ಕಾರಿಯಪ್ಪ, ಜಿ.ಪಂ.ಉಪಕಾರ್ಯದರ್ಶಿ ಸುಜಾತ, ಎಸಿ ಸತ್ಯನಾರಾಯಣ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ ಡಿ, ದಲಿತ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
Yogoda Satsanga Society of India ಧಾರವಾಡದಲ್ಲಿ ಮಾ.25 ರಿಂದ ಪರಮಹಂಸ ಯೋಗಾನಂದರ ಯೋಗ ಬೋಧನೆ ಕುರಿತ ಉಪನ್ಯಾಸ ಮಾಲಿಕೆ -ಸ್ವಾಮಿ ಸ್ಮರಣಾನಂದ ಗಿರಿ.
Yogoda Satsanga Society of India ಪರಮಹಂಸ ಯೋಗಾನಂದರ ಕ್ರಿಯಾ ಯೋಗದ ಬೋಧನೆಗಳ ಆಧಾರಿತ ಉಪನ್ಯಾಸ ಕಾರ್ಯಕ್ರಮ ದಿ. 25ರಂದು ಸಂಜೆ 6ರಿಂದ 7.15ರ ವರೆಗೆ ನಗರದ ಹೋಟೆಲ್ ಗ್ರ್ಯಾಂಡ್ ಮಾಸ್ಟಿವ್‌ನಲ್ಲಿ ನಡೆಯಲಿದೆ ಎಂದು ಯೋಗದ ಸತ್ಸಂಗ ಸೊಸೈಟಿ ಉಪಾಧ್ಯಕ್ಷ ಸ್ವಾಮಿ ಸ್ಮರಣಾನಂದ ಗಿರಿಯವರ ಹೇಳಿದರು.
ಧಾರವಾಡ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪರಮಹಂಸ ಯೋಗಾನಂದರ ಉಪದೇಶಗಳು ಹಾಗೂ ವೈಜ್ಞಾನಿಕ ಧ್ಯಾನದ ಆಧ್ಯಾತ್ಮಿಕ ಮಹತ್ವದ ಕುರಿತ ಉಪನ್ಯಾಸದ ನಂತರ, ಆಸಕ್ತರಿಗೆ ಅದೇ ವೈಜ್ಞಾನಿಕ ಧ್ಯಾನದ ಕೆಲವು ಮೂಲಭೂತ ತಂತ್ರಗಳನ್ನು ಬೋಧಿಸಲಾಗುವುದು ಎಂದರು.
1917ರಲ್ಲಿ ಆಧ್ಯಾತ್ಮಿಕ ಮಹಾಗುರು ಪರಮಹಂಸ ಯೋಗಾನಂದರು ಸ್ಥಾಪಿಸಿದ ಸಂಸ್ಥೆ-ಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾ ಶೀಘ್ರದಲ್ಲೇ ಯೋಗದಾ ಸತ್ಸಂಗ ಕ್ರಿಯಾ ಯೋಗ ಪಾಠಗಳನ್ನು ಕನ್ನಡದಲ್ಲಿ ಪರಿಚಯಿಸಲಿದೆ. ಇದರಿಂದ ಪ್ರಾಚೀನ ಮತ್ತು ವೈಜ್ಞಾನಿಕ ಕ್ರಿಯಾ ಯೋಗ ಧ್ಯಾನ ಉಪದೇಶಗಳು ಮತ್ತು ಯೋಗದ ಸರ್ವಮಾನವೀಯ ತತ್ವಗಳು ಕನ್ನಡಭಾಷಿಕ ಆತ್ಮಸಾಧಕರಿಗೆ ಅವರ ಮಾತೃಭಾಷೆಯಲ್ಲಿ ಲಭ್ಯವಾಗಲಿವೆ ಎಂದರು.
ಈ ಪಾಠಗಳು ಈಗಾಗಲೇ ಇಂಗ್ಲಿಷ್, ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಲಭ್ಯವಿದ್ದು, ಅವುಗಳ ಮೂಲಕ ಸಾವಿರಾರು ಆತ್ಮಸಾಧಕರು ಆಂತರಿಕ ಪರಿವರ್ತನೆ ಅನುಭವಿಸುತ್ತಿದ್ದಾರೆ. ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಯೋಗದಾ ಸತ್ಸಂಗ ಸೊಸೈಟಿ ಶಾಂತಿ, ಆಂತರಿಕ ಭದ್ರತೆ ಮತ್ತು ಶಾಶ್ವತ ಸಂತೋಷ ಹುಡುಕುವ ಜನರಿಗೆ ಭಾರತದ ಅಮೂಲ್ಯ ಆಧ್ಯಾತ್ಮಿಕ ಜ್ಞಾನ ಹಂಚಿಕೊಂಡಿದೆ ಎಂದರು.
ಪರಮಹಂಸ ಯೋಗಾನಂದರು ಬೋಧಿಸಿದ ಧ್ಯಾನದ ವೈಜ್ಞಾನಿಕ ವಿಧಾನಗಳು ಮತ್ತು ಸಮತೋಲನಯುತ ಜೀವನದ ತತ್ವಗಳ ಮೂಲಕ, ಪ್ರಾಮಾಣಿಕ ಸಾಧಕರು ಕ್ರಮಬದ್ಧವಾಗಿ ಮತ್ತು ಹಂತ ಹಂತವಾಗಿ ಕ್ರಿಯಾ ಯೋಗ ಧ್ಯಾನದ ತಂತ್ರಗಳನ್ನು, ಮನೆ ಮೂಲಕ ಅಧ್ಯಯನದ ಪತ್ರಾಚಾರ ಪಾಠಕ್ರಮವಾಗಿ ಕಲಿಯಬಹುದು ಮತ್ತು ತಮ್ಮ ದೈನಂದಿನ ಕರ್ತವ್ಯಗಳನ್ನು ಮುಂದುವರಿಸಿಕೊಂಡೇ ಈ ಉಪದೇಶಗಳನ್ನು ಅಭ್ಯಾಸ ಮಾಡಬಹುದು ಎಂದು ತಿಳಿಸಿದರು.
Yogoda Satsanga Society of India ಪರಮಹಂಸ ಯೋಗಾನಂದರ ಉಪದೇಶಗಳು ಮತ್ತು ಕ್ರಿಯಾ ಯೋಗ ಧ್ಯಾನದ ವೈಜ್ಞಾನಿಕ ವಿಧಾನವನ್ನು ಅನುಸರಿಸುವ ಮೂಲಕ ಪ್ರತಿಯೊಬ್ಬರೂ ತಮ್ಮೊಳಗಿನ ಅಂತರಂಗದ ಶಾಂತಿ ಹಾಗೂ ಅಂತರ್ನಿಹಿತ ದೈವಿಕ ಸಾನಿಧ್ಯ ಶಕ್ತಿ ಮತ್ತು ಆನಂದವನ್ನು ನೇರವಾಗಿ ಅನುಭವಿಸಬಹುದು ಎಂಬುದನ್ನು ವಿಶೇಷವಾಗಿ ವ್ಯಕ್ತಪಡಿಸುತ್ತೇವೆ ಎಂದರು.
ಸ್ವಾಮಿ ಶ್ರೇಯಾನಂದ ಗಿರಿಯವರ ಮಾತನಾಡಿ,
ಯೋಗದಾ ಸತ್ಸಂಗ ಸೊಸೈಟಿ ದೇಶದಾದ್ಯಂತ ಆನ್‌ಲೈನ್ ಧ್ಯಾನ ಕೇಂದ್ರಗಳು ಹಾಗೂ ಪ್ರತ್ಯಕ್ಷ ಧ್ಯಾನ ಕೇಂದ್ರಗಳನ್ನು ನಡೆಸುತ್ತಿದ್ದು, ಭಕ್ತರು ಸಾಮೂಹಿಕ ಧ್ಯಾನ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಇದಲ್ಲದೆ, ಈ ಸಂಸ್ಥೆ ಭಾರತದಲ್ಲಿ ಐದು ಆಶ್ರಮಗಳನ್ನು ಹೊಂದಿದ್ದು, ಅಲ್ಲಿ ಸಾಧಕರು ಧ್ಯಾನ, ಆಧ್ಯಾತ್ಮಿಕ ಸಾಧನೆ ಹಾಗೂ ಸಮತೋಲನಯುತ ಜೀವನಕ್ಕೆ ಸಂಬಂಧಿಸಿದ ಶಿಬಿರಗಳು ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶವಿದೆ ಎಂದರು.
ಯೋಗದಾ ಸತ್ಸಂಗ ಪಾಠಗಳ ಕನ್ನಡ ಆವೃತ್ತಿಯ ಪ್ರಕಟಣೆ ಹಾಗೂ ಪರಿಚಯದ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜಿಸುತ್ತಾ ಬರಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ https://yssofindia.org/lessons-programmes ಧಾರವಾಡ: 83103 89328; 96861 50110, ಬೆಂಗಳೂರು: 9448101212; 8296335455 ಸಂಪರ್ಕಿಸಬಹುದು ಎಂದರು.
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ ಶಿಕ್ಷಣಕ್ಕೆ ಕಂಪ್ಯೂಟರ್ ಅನುಕೂಲ
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ ಶಿಕ್ಷಣಕ್ಕೆ ಕಂಪ್ಯೂಟರ್ ಅನುಕೂಲವಾಗಲಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷ ಎನ್. ಪ್ರಕಾಶ್ ಹೇಳಿದರು.
ತಾಲೂಕಿನ ಆನವಟ್ಟಿ ಹೋಬಳಿಯ ಗುಡ್ಡದ ಬೆಣ್ಣಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿವಮೊಗ್ಗದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿ ಸಹಯೋಗದೊಂದಿಗೆ ಕಂಪ್ಯೂಟರ್ ಮತ್ತು ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಸಾಧ್ಯವಿದೆ. ಜೊತೆಗೆ ಆಧುನಿಕ ಯುಗದಲ್ಲಿ ಕಂಪ್ಯೂಟರ್ ಕಲಿಕೆ ಅತ್ಯಗತ್ಯ ಎನ್ನುವಂತಾಗಿದೆ. ಈ ನಿಟ್ಟಿನಲ್ಲಿ ಹಿಂದುಳಿದ ಪ್ರದೇಶಗಳ ಶಾಲೆಗಳನ್ನು ಗುರುತಿಸಿ ಕಂಪ್ಯೂಟರ್‌ಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯವರು ಮತ್ತು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ದಯಾನಂದ ಕಲ್ಲೇರ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಪರಿಚಯ ಮಾಡಿಕೊಡುವ ಉದ್ದೇಶದಿಂದ ಕಂಪ್ಯೂಟರ್‌ನ್ನು ಕೊಡುಗೆಯಾಗಿ ನೀಡಲಾಗುತ್ತಿರುವುದು ಸ್ವಾಗತಾರ್ಹ. ಉತ್ತಮ ಕಲಿಕಾ ವಾತಾವರಣವನ್ನು ಸರ್ಕಾರಿ ಶಾಲೆಗಳಲ್ಲಿ ಕಲ್ಪಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಸುಧಾರಣೆಯಾಗಿದ್ದು, ಜಾಗತಿಕ ಬದಲಾವಣೆಗೆ ಹೊಂದಿಕೊಳ್ಳಲು ಕಂಪ್ಯೂಟರ್ ಕಲಿಕೆ ಅಗತ್ಯವಾಗಿದೆ ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೋಮಪ್ಪ ಅಧ್ಯಕ್ಷತೆ ವಹಿಸಿದ್ದರು. ಬಾರಂಗಿ ಗ್ರಾಪಂ ಪಿಡಿಒ ರಮೇಶ್, ಡಾ.ಬಿ.ಆರ್. ಅಂಬೇಡ್ಕರ್ ಆದಿ ಜಾಂಬವ ತಾಲೂಕು ಸಮಿತಿ ಅಧ್ಯಕ್ಷೆ ಕೆಂಚಮ್ಮ ರಮೇಶ್, ಮುಖ್ಯ ಶಿಕ್ಷಕ ಪಿ. ಗುತ್ಯಪ್ಪ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಶಿವಮೊಗ್ಗ ವಿಶು ಕುಮಾರ್ ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.
