Wednesday, March 4, 2026
Wednesday, March 4, 2026
Home Blog Page 1545

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕ್ರೀಡಾಹಬ್ಬ ನಡೆಯಲಿ- ಈಶ್ವರಪ್ಪ

0

ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಸಿಬ್ಬಂದಿ ವರ್ಗದವರಿಗಾಗಿ ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.

ಜಿಲ್ಲಾ ಪಂಚಾಯಿತಿಯಿಂದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಹಾಗೂ ಸಿಬ್ಬಂದಿಗಾಗಿ ಏರ್ಪಡಿಸಲಾಗಿದ್ದ ಕ್ರೀಡಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿಗಳ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿನ ಕೆರೆಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಪಂಚಾಯಿತಿ ಅಧ್ಯಕ್ಷರು-ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘಟಿತವಾಗಿ ಪ್ರಯತ್ನಿಸಿದರೆ ಯಶಸ್ಸು ಕಾಣಲು ಸಾಧ್ಯ. ಇದರಿಂದಾಗಿ ಗ್ರಾಮಗಳಲ್ಲಿ ಸಹಜವಾಗಿಯೇ ಹಸಿರುಕ್ರಾಂತಿ ಆಗಲಿದೆ ಎಂದರು.

ಕ್ರೀಡಾಕೂಟದಂತಹ ಮಾದರಿ ಕಾರ್ಯಕ್ರಮ ಆಯೋಜಿಸಲು ಕಾರಣಕರ್ತರಾದ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರನ್ನು ಅಭಿನಂದಿಸುವುದಾಗಿ ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಚುನಾಯಿತ ಸದಸ್ಯರಲ್ಲಿ ಸ್ಪರ್ಧಾ ಮನೋಭಾವ, ಸಾಮರಸ್ಯ ಮೂಡಿಸುವಲ್ಲಿ ಈ ಕ್ರೀಡಾಕೂಟ ಸಹಕಾರಿಯಾಗಿದೆ ಎಂದರು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಅಶೋಕ ನಾಯ್ಕ್ ಮಾತನಾಡಿ, ಗ್ರಾಮಗಳಲ್ಲಿ ನೀರು, ರಸ್ತೆ, ಚರಂಡಿ, ವಿದ್ಯುತ್ ಸಮಸ್ಯೆಗಳೊಂದಿಗೆ ದಿನ ಕಳೆಯುವ ಪ್ರತಿನಿಧಿಗಳು ದೈನಂದಿನ ಒತ್ತಡದಿಂದ ಮುಕ್ತರಾಗಲು ಹಾಗೂ ಸದಾ ಲವಲವಿಕೆಯಿಂದ ಇರಲು ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದರು.

ಪ್ರತಿಯೊಬ್ಬರಲ್ಲೂ ವಿಶೇಷ ಪ್ರತಿಭೆಗಳಿವೆ. ಅವುಗಳ ಅನಾವರಣಕ್ಕೆ ವೇದಿಕೆ ಅಗತ್ಯವಿದೆ. ಅಂತಹ ವೇದಿಕೆ ಕಲ್ಪಿಸುವ ಪ್ರಯತ್ನ ಇದಾಗಿದೆ. ಎಲ್ಲ ಕ್ರೀಡಾಕೂಟಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಪ್ರಮುಖವಾಗಿದೆ. ಮುಂದಿನ ದಿನಗಳಲ್ಲಿ ಗೆಲ್ಲಲು ಇದು ಪ್ರಥಮ ಹೆಜ್ಜೆ ಎಂದರು.
ಮುಂದಿನ ಅಕ್ಟೋಬರ್‌ನಲ್ಲಿ ಚುನಾಯಿತ ಪ್ರತಿನಿಧಿಗಳಿಗಾಗಿಯೇ ಸಾಂಸ್ಕೃತಿಕ ಹಬ್ಬ ನಡೆಸಲು ಉದ್ಧೇಶಿಸಲಾಗಿದೆ. ವಿಜೇತರು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವಂತಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಯೋಜನಾಧಿಕಾರಿ ಉಮಾ ಸದಾಶಿವ, ಜಿಲ್ಲಾ ಪಂಚಾಯಿತಿ
ಮಾಜಿ ಸದಸ್ಯ ಕೆ.ಇ.ಕಾಂತೇಶ್, ಮಂಜುನಾಥ್, ಅವಿನಾಶ್ ಉಪಸ್ಥಿತರಿದ್ದರು.

ರಾಜ್ಯದಲ್ಲಿ ಕೋವಿಡ್ ಪ್ರಸರಣ ಮಾಸ್ಕ್ ಕಡಾಯ ಮಾಡಲು ಸಲಹಾ ಸಮಿತಿ ಸೂಚನೆ

0

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ನಿಯಮಗಳನ್ನು ಪರಿಣಾಮಕಾರಿ ಜಾರಿಗೊಳಿಸಲು ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸೂಚನೆ ನೀಡಿದೆ.

ಕೇಂದ್ರ ಸರ್ಕಾರ ಸೂಚಿಸಿರುವಂತೆ ರಾಜ್ಯದಲ್ಲಿ ನಿತ್ಯ ಕಡ್ಡಾಯವಾಗಿ 30 ಸಾವಿರ ಮಂದಿಯ ಸೋಂಕು ಪರೀಕ್ಷೆ ನಡೆಸಬೇಕು. ಜೊತೆಗೆ ಹೊಸ ರೂಪಾಂತರಿಗಳ ಪತ್ತೆ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ವಂಶವಾಹಿ ಪರೀಕ್ಷೆಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಕೊರೊನಾ ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಸಭೆಯಲ್ಲಿ ತಜ್ಞರು, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರ್ವಜನಿಕರು ಮಾಸ್ಕ್ ಕಡ್ಡಾಯ ನಿಯಮಗಳನ್ನು ಸಮರ್ಪಕವಾಗಿ ಪಾಲಿಸುವಂತೆ ಸೂಚನೆ ನೀಡಿದೆ.

ಇನ್ನು ಕೊರೊನಾ ವೈರಸ್ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಕೊರೊನಾ ಸೋಂಕಿನ ಮೂರನೇ ಡೋಸ್ ಲಸಿಕೆ ಪಡೆಯಬೇಕು. 2 ಡೋಸ್ ಪಡೆದವರು 3 ನೇ ಡೋಸ್ ಲಸಿಕೆ ಪಡೆಯಬೇಕು ಎಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ.

ಮಾಜಿ ಸಿಎಂ ಗಳ ಭೇಟಿ: ಮಾಧ್ಯಮಗಳ ಕುತೂಹಲಕ್ಕೆ ಗ್ರಾಸ

0

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾಗುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲಕ್ಕೆ ಸಾಕ್ಷಿಯಾಗಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಐಪಿ ಲಾಂಚ್ ನಲ್ಲಿ ಇಂದು ಮಾಜಿ ಸಿಎಂ ಬಿ ಎಸ್ ವೈ ಹಾಗೂ ಸಿದ್ದರಾಮಯ್ಯ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ.

ಕೆಲಕಾಲ ಉಭಯ ಕುಶಲೋಪರಿ, ರಾಜ್ಯದಲ್ಲಿನ ಪ್ರಸ್ತುತ ಬೆಳವಣಿಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಏರ್ ಪೋರ್ಟ್ ನಲ್ಲಿ ಇಬ್ಬರೂ ಮಾಜಿ ಸಿಎಂಗಳ ಭೇಟಿ, ಚರ್ಚೆ ವಿಚಾರ ಕುತೂಹಲಕ್ಕೂ ಕಾರಣವಾಗಿದೆ.

ವಿದೇಶಕ್ಕೆ ಹೋಗಿ ನೋಡಲಿ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ-ಖಾದರ್

0

ಹಿಜಾಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ ಎಂದು ವಿಧಾನಸಭಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹಿಜಬ್ ವಿದ್ಯಾರ್ಥಿನಿಯರಿಗೆ ತಿರುಗೇಟು ನೀಡಿದ್ದಾರೆ.

ಹಿಜಾಬ್ ವಿವಾದದ ಕುರಿತು ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ನಮ್ಮ ದೇಶದಲ್ಲಿ ಬೇಕಾದ ಹಾಗೆ ಮಾತನಾಡುವುದು, ಡಿಸಿಯನ್ನು ಭೇಟಿಯಾಗುವುದು, ಪ್ರೆಸ್ ಮೀಟ್ ಎಲ್ಲ ಮಾಡಬಹುದು. ಆದರೆ ಅದನ್ನೇ ವಿದೇಶಕ್ಕೆ ಹೋಗಿ ಮಾತನಾಡಲಿ. ಇಲ್ಲಿ ಹುಲಿಯ ಹಾಗೆ ಇದ್ದವರು ಅಲ್ಲಿ ಬೆಕ್ಕಿನ ತರಹ ಆಗುತ್ತಾರೆ ಎಂದರು.

ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಪಾಕಿಸ್ತಾನ, ಸೌದಿಯಂತಹ ದೇಶಗಳಿಗೆ ಹೋಗಲಿ.
ಆಗ ಅವರಿಗೆ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ ಎಂದು ಸವಾಲು ಹಾಕಿದರು.
ನಮ್ಮ ದೇಶದ ಕಾನೂನು ನೀಡಿದ ಅವಕಾಶದ ಮಹತ್ವ ಗೊತ್ತಾಗುತ್ತದೆ. ಇಲ್ಲಿ ಸಿಗುವ ಸ್ವಾತಂತ್ರ್ಯದ ಅರಿವು ಆಗುತ್ತದೆ ಎಂದು ಕಿಡಿಕಾರಿದರು.

ಮಂಕಿಪಾಕ್ಸ್ ಪ್ರಕರಣ: ರಾಜ್ಯಾದ್ಯಂತ ಮುನ್ನೆಚ್ಚರಿಕೆ

0

ಮಂಕಿಪಾಕ್ಸ್ ಪ್ರಕರಣಗಳ ಆತಂಕದ ಹಿನ್ನೆಲೆಯಲ್ಲಿ ಶಂಕಿತ ಪ್ರಕರಣಗಳು ವರದಿಯಾದಲ್ಲಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಆತಂಕದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮಹತ್ವದ ಮುನ್ನೆಚರಿಕೆ ಕ್ರಮ ಕೈಗೊಂಡಿದೆ. ನೋಡಲ್ ಅಧಿಕಾರಿಯಾಗಿ ಡಾ.ಎನ್.ಶ್ರೀನಿವಾಸ್ ಅವರನ್ನು ಆರೋಗ್ಯ ಇಲಾಖೆ ನೇಮಿಸಿದೆ.

ಶಂಕಿತ ಪ್ರಕರಣಗಳು ವರದಿಯಾದರೆ ಸೂಕ್ತ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ ಕನಿಷ್ಟ ಎರಡು ಬೆಡ್ ಗಳನ್ನು ಮೀಸಲಿಡಬೇಕೆಂದು ಆರೋಗ್ಯ ಇಲಾಖೆ ಜಿಲ್ಲಾ ಸರ್ಜನ್ ಗಳಿಗೆ ಸೂಚನೆ ನೀಡಿದೆ.
ಮಂಕಿಪಾಕ್ಸ್ ಶಂಕಿತ ಪ್ರಕರಣಗಳು ವರದಿಯಾದರೆ ಪ್ರತ್ಯೇಕಿಸಿ ಚಿಕಿತ್ಸೆ ನೀಡಬೇಕು. ಬೆಂಗಳೂರಿನ ಇಂದಿರಾನಗರದ ಸಾಂಕ್ರಾಮಿಕ ರೋಗ ಆಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕು ಎಂದು ಸೂಚನೆ ನೀಡಿದೆ.

ಭಾರತದ ಈಶಾನ್ಯ ಭಾಗದಲ್ಲಿ ಚುರುಕಾದ ನೈಋತ್ಯ ಮುಂಗಾರು

0

ಭಾರತದ ಈಶಾನ್ಯ ಭಾಗದಲ್ಲಿ ನೈರುತ್ಯ ಮುಂಗಾರು ವೇಗ ಪಡೆದುಕೊಂಡಿದೆ. ಮುಂದಿನ 5 ದಿನಗಳಲ್ಲಿ ಈಶಾನ್ಯ ಭಾರತ, ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಬಂಗಾಳ ಕೊಲ್ಲಿಯಿಂದ ಈಶಾನ್ಯ ಭಾರತದವರೆಗೆ ಕಡಿಮೆ ಉಷ್ಣವಲಯದ ಮಟ್ಟಗಳಲ್ಲಿ ಬಲವಾದ ನೈಋತ್ಯ ಮಾರುತಗಳ ಪ್ರಭಾವದ ಕಾರಣದಿಂದ, ಮುಂಬರುವ ಕೆಲವು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಜೂನ್ 10 ರವರೆಗೆ ಮೇಘಾಲಯದಲ್ಲಿ ಪ್ರತ್ಯೇಕವಾದ ಅತ್ಯಂತ ಭಾರೀ ಮಳೆಯ ಮುನ್ಸೂಚನೆ ಇದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ 5 ದಿನಗಳಲ್ಲಿ ಬಿಹಾರ, ಜಾರ್ಖಂಡ್, ಒಡಿಶಾ ಹಾಗೂ ಗಂಗಾನದಿ ಪಶ್ಚಿಮ ಬಂಗಾಳದ ಮೇಲೆ ಗುಡುಗು ಅಥವಾ ಸಿಡಿಲು ಸಹಿತ ಮಳೆಯ ಮುನ್ಸೂಚನೆ ತಿಳಿಸಿದೆ.

ಸಣ್ಣಪುಟ್ಟ ಲೋಪಗಳಾಗಿವೆ ಪ್ರತಿಕ್ರಿಯೆಗಳಿಗೆ ಮುಕ್ತ ಮನಸ್ಸಿನ ಸ್ವಾಗತ-ನಾಗೇಶ್

0

ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡುವುದಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ 2 ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ, ಮುಖ್ಯಮಂತ್ರಿ ಭೇಟಿ ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ವಿಚಾರ ಸಂಬಂಧ 2 ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಜನರಿಗೆ ಸತ್ಯ ತಿಳಿಸಲು ಸಾರ್ವಜನಿಕರಿಗೆ ಪಠ್ಯ ಪರಿಷ್ಕರಣೆ ದಾಖಲಾತಿ ಪ್ರಕಟ ಮಾಡುತ್ತೇವೆ ಎಂದು ಬಿ.ಸಿ. ನಾಗೇಶ್ ಅವರು ಹೇಳಿದ್ದಾರೆ.

ಹಿಂದಿನ ಸಮಿತಿಯಲ್ಲಿ ಏನೀತ್ತು. ಬರಗೂರು ಸಮಿತಿ ಏನು ಮಾಡಿದೆ. ನಾವು ಏನು ಮಾಡಿದ್ದೇವೆ ಅಂತ ಜನರೇ ತೀರ್ಮಾನ ಮಾಡಲಿ. ಸಾರ್ವಜನಿಕರು ಏನಾದರೂ ಆಕ್ಷೇಪಣೆ ಸಲ್ಲಿಸಿದರೆ ಅದನ್ನು ಸರಿ ಮಾಡುತ್ತೇವೆ. ಅಂಬೇಡ್ಕರ್ ಸಂವಿಧಾನ ಶಿಲ್ಪಿ ಎನ್ನುವ ಪದವನ್ನು ಸೇರಿಸುತ್ತೇವೆ. ಬಸವಣ್ಣನವರ 2 ಸಾಲುಗಳನ್ನು ಸೇರ್ಪಡೆ ಮಾಡುತ್ತೇವೆ. ಸಣ್ಣಪುಟ್ಟ ಲೋಪಗಳು ಆಗುತ್ತದೆ. ಅದನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತೇವೆ ಎಂದು ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.

ಕರೆನ್ಸಿ ನೋಟುಗಳಲ್ಲಿ ಯಾವುದೇ ಬದಲಾವಣೆಯಿಲ್ಲ-ಆರ್ ಬಿ ಐ

0

ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ.

ಮಹಾತ್ಮ ಗಾಂಧಿಯವರ ಮುಖವನ್ನು ಇತರರ ಮುಖದೊಂದಿಗೆ ಬದಲಾಯಿಸುವ ಮೂಲಕ ಭಾರತೀಯ ರಿಸರ್ವ್ ಬ್ಯಾಂಕ್ ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಬದಲಾವಣೆಗಳನ್ನು ಪರಿಗಣಿಸುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಗಳಿವೆ. ರಿಸರ್ವ್ ಬ್ಯಾಂಕಿನಲ್ಲಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂಬುದನ್ನು ಗಮನಿಸಬಹುದು ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಮಹಾತ್ಮಾ ಗಾಂಧಿಯವರ ಮುಖವನ್ನು ಇತರರ ಮುಖದೊಂದಿಗೆ ಬದಲಾಯಿಸುವ ಮೂಲಕ ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಬದಲಾವಣೆಗಳನ್ನು ಪರಿಗಣಿಸುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಬಗ್ಗೆ RBI ಸ್ಪಷ್ಟನೆ ನೀಡಿದ್ದು, ರಿಸರ್ವ್ ಬ್ಯಾಂಕ್‌ ಮುಂದೆ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ಗಮನಿಸಬಹುದು ಎಂದು ಆರ್ಬಿಐ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಮನುಷ್ಯನ ಅತಿಯಾಸೆಯಿಂದ ಮರಗಿಡಗಳ ನಾಶ- ಮಲ್ಲಿಕಾರ್ಜುನ ಮುರುಘಾಶ್ರೀ

0

ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್, ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್ ಮತ್ತು ಶಿವಗಂಗಾ ಯೋಗ ಕೇಂದ್ರ , ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು.

ಈ ಕಾರ್ಯಕ್ರಮ ಉದ್ಘಾಟಿಸಿದ ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಅವರು, ಮನುಷ್ಯನ ಅತಿಯಾಸೆ ಯಿಂದಾಗಿ ಮರ ಗಿಡಗಳ ನಾಶ ಅಧಿಕವಾಗಿದೆ. ಇದನ್ನು ನಿಯಂತ್ರಿಸಿ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಅದನ್ನು ಉಳಿಸಿ ರಕ್ಷಿಸಿ ಕೊಳ್ಳಬೇಕೆಂದು ಕರೆ ನೀಡಿದರು.

ಮುಂದುವರೆದು ಮಾತನಾಡಿದ ಅವರು ಮುಂದಿನ ಪೀಳಿಗೆಗೆ ನೀರು, ಕಾಡು, ಕಲ್ಮಶ ಇಲ್ಲದ ಭೂಮಿಯನ್ನು ನಾವೆಲ್ಲಾ ಬಿಟ್ಟು ಹೋಗಬೇಕಾಗಿದೆ ಈ ನಿಟ್ಟಿನಲ್ಲಿ ಎಲ್ಲರೂ ಚಿಂತಿಸಿ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಇತರ ಸಂಘ ಸಂಸ್ಥೆಗಳ ಜೊತೆ ಕೈಗೂಡಿಸಿ ಕಾರ್ಯ ಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಸಂಚಾಲಕರು ಮತ್ತು ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್ ನ ನಿರ್ದೇಶಕರಾದ ಶ್ರೀಯುತ ಕೆ.ಸಿ.ಬಸವರಾಜ್ ರವರು ನೀರು, ಗಾಳಿ, ಮಲೀನ ಆಗದಂತೆ ತಡೆಯಲು ದೈನಂದಿನ ಕಸ ದ ವಿಲೇವಾರಿ ಯನ್ನು ಸರಿಯಾದ ರೀತಿಯಲ್ಲಿ ನಡೆಸಬೇಕು.

ಇದಕ್ಕಾಗಿ ಸ್ಥಳೀಯ ಸಂಸ್ಥೆಗಳ ಜೊತೆ ನಾಗರೀಕ ಸಂಘ ಸಂಸ್ಥೆಗಳು ಕೈಜೋಡಿಸಿ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕಸದ ವಿಲೇವಾರಿ, ತ್ಯಾಜ್ಯದ ನಿರ್ವಹಣೆ ಮತ್ತು ಸಸಿಗಳನ್ನು ನೆಟ್ಟು ಬೆಳೆಸುವ ಬಗ್ಗೆ , ಪರಿಸರ ಸಂರಕ್ಷಣೆ ಬಗ್ಗೆ ಸ್ಥಳೀಯ ನಾಗರೀಕರ ಅಥವಾ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಸಂಸ್ಥೆಗಳ ಜೊತೆ ನಿರಂತರವಾಗಿ ಕೆಲಸ ಮಾಡಲು ತೊಡಗಿದ್ದು, ಇದಕ್ಕೆ ಹಾಗೂ ನಮ್ಮ ಶಿವಮೊಗ್ಗ ಜಿಲ್ಲೆಯನ್ನು ಸ್ವಚ್ಛ್ ಹಾಗೂ ಸುಂದರವನ್ನಾಗಿ ಉಳಿಸಿಕೊಳ್ಳಲು ಎಲ್ಲರ ಸಹಕಾರ ಕೋರಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಸತ್ರ ನ್ಯಾಯಾಧೀಶರಾದ ಶ್ರೀಯುತ ಮಾನು ಅವರು ಮಾತನಾಡಿ, ಪರಿಸರ ಮಾಲಿನ್ಯ ತಡೆಗಟ್ಟಲು ಎಲ್ಲರ ಸಾಮೂಹಿಕ ಪ್ರಯತ್ನ ಅಗತ್ಯವೆಂದು ತಿಳಿಸಿ ಪರಿಸರ ಸಂರಕ್ಷಣೆಗೆ ಇರುವ ಕಾನೂನುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು.

ಜಿಲ್ಲಾ ಪರಿಸರ ಅಧಿಕಾರಿ ಶ್ರೀಯುತ ಹರಿಕುಮಾರ್ ರವರು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಅಂತರ್ ಜಲ ವಿಷವಾಗುವುದನ್ನು ತಪ್ಪಿಸಬೇಕು ಎಂದು ಹೇಳಿದರು.

ಶಿವಗಂಗಾ ಯೋಗ ಕೇಂದ್ರದ ಶ್ರೀಯುತ ರುದ್ರಾರಾಧ್ಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಯುತ ಸಂಕಣ್ಣ ಅವರ, ರೋಟರಿಯ ಶ್ರೀಯುತ ವಿಜಯಕುಮಾರ್, ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ನ ಶ್ರೀಯುತ ಮಹದೇವಸ್ವಾಮಿ, ಶ್ರೀ ಸುಧಾಕರ್, ಶ್ರೀ ಫಾರೂಖ್, ಶ್ರೀ ದೇವರಾಜ್, ಶ್ರೀ ಬಸವನಗೌಡ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಕೊನೆಯಲ್ಲಿ ಅತಿಥಿ ಗಣ್ಯರು ತುಂಗಾ ನದಿ ದಡದ ಬೆಕ್ಕಿನಕಲ್ಮಠದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಜಿಲ್ಲಾದ್ಯಂತ ನಡೆಯಲಿರುವ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ನ ಪರಿಸರ ಜಾಗೃತಿ ಮತ್ತು ಸಸಿಗಳನ್ನು ನೆಟ್ಟು ಬೆಳೆಸುವ ಆಂದೋಲನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಹಿಳೆಯರು ಪರಿಸರ ಗೀತೆ ಹಾಡಿದರು.

ಉಪ ಚುನಾವಣೆಯಲ್ಲಿ ಆಯ್ಕೆಯಾದ ಉತ್ತರಾಖಂಡ್ ಸಿಎಂ ಧಾಮಿ

0

ಉತ್ತರಾಖಂಡ ಮುಖ್ಯಮಂತ್ರಿ, ಬಿಜೆಪಿಯ ಪುಷ್ಕರ್ ಸಿಂಗ್ ಧಾಮಿ ಅವರು ನಿರ್ಣಾಯಕ ಉಪ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಪುಷ್ಕರ್ ಸಿಂಗ್ ಪರಾಭವಗೊಂಡಿದ್ದರಿಂದ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಉಪ ಚುನಾವಣೆಯ ಗೆಲುವು ಅಗತ್ಯವಾಗಿತ್ತು. ಚಂಪಾವತ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 55,025 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

ಕೆಲ ತಿಂಗಳ ಹಿಂದೆ ನಡೆದ ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಗೆಲ್ಲಿಸಿ, ಸೋಲು ಕಂಡಿದ್ದ ಮುಖ್ಯಮಂತ್ರಿ ಪುಷ್ಕರ್​ ಸಿಂಗ್ ಧಾಮಿ ಚಂಪಾವತ್​ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ.
ಈ ಹಿನ್ನೆಲೆಯಲ್ಲಿ ಪುನಃ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.

ಧಾಮಿ ಅವರು, ಎದುರಾಳಿಯಾದ ಕಾಂಗ್ರೆಸ್​ ಅಭ್ಯರ್ಥಿ ನಿರ್ಮಲಾ ಗೆಹ್​ತೊರ್​, ಸಮಾಜವಾದಿ ಪಕ್ಷದ ಮನೋಜ್ ಕುಮಾರ್ ಭಟ್​ ಹಾಗೂ ಸ್ವತಂತ್ರ ಅಭ್ಯರ್ಥಿ ಹಿಮಾಂಶು ಗಡ್ಕೊಟಿ ಅವರನ್ನು ಸೋಲಿಸಿದ್ದಾರೆ.

ಚಂಪಾವತ್ ಕ್ಷೇತ್ರದ ಬಿಜೆಪಿ ಶಾಸಕ ಕೈಲಾಶ್ ಗೆಹ್ತೋರಿ ಅವರು ರಾಜೀನಾಮೆ ನೀಡುವ ಮೂಲಕ ತಮ್ಮ ಸ್ಥಾನ ತ್ಯಾಗ ಮಾಡಿ, ಪುಷ್ಕರ್ ಸಿಂಗ್ ಧಾಮಿ ಅವರಿಗೆ ಅನುವು ಮಾಡಿಕೊಟ್ಟಿದ್ದರು.

ಕುತೂಹಲದ ವಿಷಯ ಎಂದರೆ ಕಾಂಗ್ರೆಸ್​ ಅಭ್ಯರ್ಥಿ ನಿರ್ಮಲಾ ಠೇವಣಿ ಸಹ ಕಳೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಮೇ 31ರಂದು ನಡೆದಿದ್ದ ಚುನಾವಣೆಯಲ್ಲಿ ಧಾಮಿ ಅವರು ಎದುರಾಳಿ ಕಾಂಗ್ರೆಸ್​ನ ನಿರ್ಮಲಾ ವಿರುದ್ಧ 54 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. ಉಪಚುನಾವಣೆಯಲ್ಲಿ ಒಟ್ಟು 61,771 ಮತಗಳು ಚಲಾವಣೆಯಾಗಿದ್ದವು. 13ನೇ ಸುತ್ತಿನವರೆಗೆ 61 ಸಾವಿರಕ್ಕೂ ಹೆಚ್ಚು ಮತಗಳ ಎಣಿಕೆ ನಡೆದಿದೆ.