Wednesday, March 4, 2026
Wednesday, March 4, 2026
Home Blog Page 1547

ಬಿಜೆಪಿ ವಕ್ತಾರೆ ನೂಪುರ್ ಶರ್ಮ ಅವರನ್ನ ಬಿಜೆಪಿಯಿಂದ ಅಮಾನತ್ತು ಮಾಡಲಾಗಿದೆ

0

ಖಾಸಗಿ ಸುದ್ದಿ ಚಾನೆಲ್‌ನ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪಕ್ಷದ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಿಜೆಪಿ ಅಮಾನತುಗೊಳಿಸಿ, ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿದೆ.

ದೆಹಲಿ ಘಟಕದ ಮಾಧ್ಯಮ ವಿಭಾಗದ ನೇತೃತ್ವ ವಹಿಸಿದ್ದ ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಅವರು ವ್ಯಕ್ತಪಡಿಸಿರುವ ಅಭಿಪ್ರಾಯಗಳು ಕೋಮು ಸೌಹಾರ್ದಕ್ಕೆ ಧಕ್ಕೆ ತರುವುದಲ್ಲದೆ, ಪಕ್ಷದ ಸಂವಿಧಾನಕ್ಕೂ ವಿರುದ್ಧವಾಗಿದೆ ಎಂದು ಬಿಜೆಪಿ ತಿಳಿಸಿದೆ.

ಶರ್ಮಾ ಅವರು ವಿವಿಧ ವಿಷಯಗಳ ಬಗ್ಗೆ ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ, ಇದು ಪಕ್ಷದ ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಕ್ಷದ ಶಿಸ್ತು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಪ್ರಕಟಣೆ ಬಿಡುಗಡೆ ಮಾಡಿ, ಪಕ್ಷವು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮ, ವ್ಯಕ್ತಿ ಅವಮಾನಿಸುವುದನ್ನು ಬಲವಾಗಿ ಖಂಡಿಸುತ್ತದೆ. ಯಾವುದೇ ಧರ್ಮವನ್ನು ಅವಹೇಳನ ಮಾಡುವ ಅಥವಾ ಕೀಳಾಗಿ ಕಾಣುವ ಸಿದ್ಧಾಂತಗಳಿಗೆ ಪ್ರಕ್ಷದ ವಿರೋಧವಿದೆ. ಬಿಜೆಪಿ ಅಂಥ ವ್ಯಕ್ತಿಗಳನ್ನು ಅಥವಾ ಚಿಂತನೆಗಳನ್ನು ಪ್ರಚುರಪಡಿಸುವುದಿಲ್ಲ ಎಂದು ತಿಳಿಸಿದ್ದರು.

ಶರ್ಮಾ ಮತ್ತು ನವೀನ್ ಅವರ ಹೇಳಿಕೆಗಳ ಬಳಿಕ, ಕೆಲ ದೇಶಗಳಲ್ಲಿ ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಲು ಕರೆ ನೀಡಿ, ಟ್ವಿಟರ್ ಅಭಿಯಾನ ನಡೆದಿದೆ. ಈ ಕಾರಣಕ್ಕಾಗಿಯೇ ಬಿಜೆಪಿ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.

ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸಿದ ಆರೋಪದ ಮೇಲೆ ಉತ್ತರಪ್ರದೇಶದ ಕಾನ್ಪುರದಲ್ಲಿ ಉದ್ರಿಕ್ತ ಜನರ ಗುಂಪು ಬಲವಂತವಾಗಿ ಅಂಗಡಿಗಳನ್ನು ಬಂದ್‌ ಮಾಡಿಸಲು ಯತ್ನಿಸಿದಾಗ ಹಿಂಸಾಚಾರ ಭುಗಿಲೆದ್ದು, ಎರಡು ಗುಂಪುಗಳು ಪರಸ್ಪರ ಬಾಂಬ್‌ ಎಸೆದು, ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಹತ್ತಾರು ಮಂದಿ ಗಾಯಗೊಂಡಿದ್ದರು.

ಬಿಜೆಪಿ ಹೇಳಿಕೆ ಹೊರ ಬಿದ್ದ ಬೆನ್ನಲ್ಲೆ ಶ್ರೀನಗರದಲ್ಲಿ ಮಾತನಾಡಿರುವ ನ್ಯಾಷನಲ್‌ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲಾ, ದೇಶದಲ್ಲಿರುವ ಮುಸ್ಲಿಮರ ಭಾವನೆಗಳಿಗೆ ಧಕ್ಕೆಯಾದ ಕಾರಣಕ್ಕೆ ಬಿಜೆಪಿ ಈ ರೀತಿ ಹೇಳಿಕೆ ನೀಡಿಲ್ಲ. ಬದಲಿಗೆ ಅಂತರರಾಷ್ಟ್ರೀಯ ಒತ್ತಡಕ್ಕೆ ಮಣಿದು, ದಿಢೀರ್ ಎಚ್ಚೆತ್ತುಕೊಂಡು ಈ ಹೇಳಿಕೆ ನೀಡಿದೆ ಎಂದು ಟೀಕಿಸಿದ್ದಾರೆ.

ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಪಕ್ಷ ತನ್ನ ನಿಜವಾದ ಮುಖವನ್ನು ತೋರಿಸಿದೆ. ಸಬ್‌ಕಾ ಸಾಥ್‌, ಸಬ್‌ಕಾ ವಿಕಾಸ್‌ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಮಂತ್ರವನ್ನು ಉಲ್ಲಂಘಿಸಲು ಯಾರಿಗೂ ಬಿಡುವುದಿಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖ್ಯಸ್ಥ ಜಮಾಲ್‌ ಸಿದ್ಧಿಖಿ ತಿಳಿಸಿದ್ದಾರೆ.

ಭಾರತ ಸರ್ಕಾರವು ಎಲ್ಲಾ ಧರ್ಮಗಳನ್ನೂ ಗೌರವಿಸುತ್ತದೆ-ಅರಿಂದಮ್ ಬಾಗ್ಚಿ

0

ಪ್ರವಾದಿ ಮೊಹಮ್ಮದರ ಬಗೆಗಿನ ಬಿಜೆಪಿ ನಾಯಕರ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ರಾಷ್ಟ್ರಗಳ ಸಹಕಾರ ಒಕ್ಕೂಟದ ಟೀಕೆಗಳಿಗೆ ಕೇಂದ್ರ ಸರ್ಕಾರ ಸೋಮವಾರ ತಿರುಗೇಟು ನೀಡಿದೆ.

ಪ್ರವಾದಿ ಮೊಹಮ್ಮದರ ವಿರುದ್ಧ ಬಿಜೆಪಿ ನಾಯಕಿ ನೂಪುರ್‌ ಶರ್ಮಾ ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹೇಳಿಕೆಯನ್ನು ಇಸ್ಲಾಮಿಕ್ ಸಹಕಾರ ಸಂಘಟನೆ ಖಂಡಿಸಿತ್ತು.

ಇದು, ಭಾರತದಲ್ಲಿ ಇಸ್ಲಾಂ ಧರ್ಮದ ವಿರುದ್ಧ ದ್ವೇಷ ಮತ್ತು ನಿಂದನೆಯನ್ನು ತೀವ್ರಗೊಳಿಸುವ, ಮುಸ್ಲಿಮರ ಆಚರಣೆಗಳ ವಿರುದ್ಧದ ವ್ಯವಸ್ಥಿತ ಕಾರ್ಯತಂತ್ರ’ ಎಂದು ಒಐಸಿ ಹೇಳಿತ್ತು.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್‌ ಬಾಗ್ಚಿ ಅವರು ‘ಇಸ್ಲಾಮಿಕ್ ಸಹಕಾರ ಸಂಘಟನೆಯ (ಒಐಸಿ) ಇತ್ತೀಚಿನ ಹೇಳಿಕೆಗೆ ಸಂಬಂಧಿಸಿದ ಮಾಧ್ಯಮದ ವರದಿಗಳನ್ನು ಗಮನಿಸಲಾಗಿದೆ. ಒಐಸಿಯ ಅನಗತ್ಯ ಮತ್ತು ಸಂಕುಚಿತ ಮನೋಭಾವದ ಹೇಳಿಕೆಗಳನ್ನು ಭಾರತ ಸರ್ಕಾರವು ಸ್ಪಷ್ಟವಾಗಿ ತಿರಸ್ಕರಿಸುತ್ತದೆ’ ಎಂದು ಹೇಳಿದ್ದಾರೆ.

ಭಾರತ ಸರ್ಕಾರವು ಎಲ್ಲಾ ಧರ್ಮಗಳ ವಿಚಾರದಲ್ಲಿ ಅಪಾರವಾದ ಗೌರವ ಹೊಂದಿದೆ. ‘ಧಾರ್ಮಿಕ ಮುಖಂಡರನ್ನು ನಿಂದಿಸುವಂಥ ಆಕ್ಷೇಪಾರ್ಹ ಟ್ವೀಟ್‌ಗಳು ಮತ್ತು ಹೇಳಿಕೆಗಳನ್ನು ಕೆಲ ವ್ಯಕ್ತಿಗಳು ನೀಡಿದ್ದಾರೆ. ಅವು ಯಾವುದೇ ರೀತಿಯಲ್ಲೂ ಭಾರತ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಸಂಬಂಧಪಟ್ಟ ಸಂಸ್ಥೆ ಅವರ ವಿರುದ್ಧ ಈಗಾಗಲೇ ಕಠಿಣ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಉಕ್ರೇನ್ ಗೆ ಶಸ್ತ್ರಾಸ್ತ್ರಗಳ ಪೂರೈಕೆ: ಯುಎಸ್& ಪಾಶ್ಚಿಮಾತ್ಯ ದೇಶಗಳಿಗೆ ರಷ್ಯ ವಾರ್ನಿಂಗ್

0

ಉಕ್ರೇನ್ ಹಾಗೂ ರಷ್ಯಾ ಯುದ್ಧ ಆರಂಭಿಸಿ ಅನೇಕ ದಿನಗಳೇ ಕಳೆದಿವೆ. ಇತ್ತ ಯುಕ್ರೇನ್‌ ಸೋಲುತ್ತಿಲ್ಲ. ಪುಟಿನ್‌ ಬಿಡುತ್ತಿಲ್ಲ. ಆದರೆ, ಉಕ್ರೇನ್‌ಗೆ ಮಾತ್ರ ಶಸ್ತ್ರಾಸ್ತ್ರ ಪೂರೈಕೆ ನಡಿಯುತ್ತಿದೆ.

ಅದರಲ್ಲೂ, ರಷ್ಯಾ ವಿರುದ್ದ ಈಗ ಲಾಂಗ್‌ ರೇಂಜ್‌ ಮಿಸೈಲ್‌ಗಳನ್ನ ನೀಡಲಾಗುತ್ತಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಇತ್ತ ಅಮೆರಿಕ ಮತ್ತು ಪಾಶ್ಚೀಮಾತ್ಯ ದೇಶಗಳಿಗೆ ಪುಟಿನ್‌ ಬಿಗ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇದು ಹೀಗೆ, ಮುಂದುವರೆದರೆ ನಾವು ನಮ್ಮ ಆಯುಧಗಳ ಮೂಲಕ ಖಂಡಿತ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ. ಈ ಹಿಂದೆ ಮುಟ್ಟದ ಗುರಿಗಳನ್ನೂ ಹೊಡೆದು ಹಾಕುತ್ತೇವೆ ಎಂದು ಎಚ್ಚರಿಸಿದ್ದಾರೆ.

ಗರಿಗೆದರಿದ ರಷ್ಯದ ರಣೋತ್ಸಾಹ: ಉಕ್ರೇನ್ ಮೇಲೆ ತೀವ್ರ ಧಾಳಿ

0

ಉಕ್ರೇನ್‌ ಮೇಲೆ ದಾಳಿ ಆರಂಭಿಸಿ ಸುಮಾರು 100 ದಿನಗಳೇ ಪೂರೈಸಿದೆ. ರಷ್ಯಾ ಸೇನೆ, ಭಾನುವಾರ ಉಕ್ರೇನ್‌ನ ರಾಜಧಾನಿ ಕೀವ್‌ನ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿವೆ.

ರೈಲ್ವೆ ಘಟಕ ಮತ್ತು ಟಿ-72 ಯುದ್ಧ ಟ್ಯಾಂಕ್‌ಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಸಾಕಷ್ಟುಹಾನಿ ಸಂಭವಿಸಿದೆ ಎನ್ನಲಾಗಿದೆ.

ದಾಳಿಗೆ ತುತ್ತಾದ ಎಲ್ಲಾ ಶಸ್ತ್ರಾಸ್ತ್ರಗಳು ವಿದೇಶಗಳು ದೇಣಿಗೆಯಾಗಿ ನೀಡಿದ್ದಾಗಿವೆ.

5 ವಾರದ ಹಿಂದೆ ವಿಶ್ವಸಂಸ್ಥೆ ಪ್ರಧಾನಿ ಕಾರ್ಯದರ್ಶಿ ಆಯಂಟಾನಿಯಾ ಗ್ಯುಟೆರ್ರೆಸ್‌ ಉಕ್ರೇನ್‌ಗೆ ಭೇಟಿಕೊಟ್ಟ ನಂತರ, ರಾಜಧಾನಿ ಕೀವ್‌ ಸೇರಿದಂತೆ ಅಕ್ಕಪಕ್ಕದ ಪ್ರದೇಶಗಳ ಮೇಲೆ ರಷ್ಯಾ ದಾಳಿ ನಡೆಸಿರಲಿಲ್ಲ. ತನ್ನ ದಾಳಿಯನ್ನು ಕೇವಲ ಪೂರ್ವದ ಪ್ರದೇಶಗಳಿಗೆ ಸೀಮಿತಗೊಳಿಸಿತ್ತು.

ಆದರೆ, ಇದೀಗ 5 ವಾರಗಳ ನಂತರ ರಷ್ಯಾ ನಡೆಸಿರುವ ದಾಳಿಯು, ಈಗಲೂ ಯಾವುದೇ ಪ್ರದೇಶಗಳ ಮೇಲೆ ದಾಳಿ ನಡೆಸುವ ರಷ್ಯಾದ ಸಾಮರ್ಥ್ಯ ಮತ್ತು ಇಚ್ಛೆಯನ್ನು ತೋರಿಸುತ್ತದೆ ಎಂದು ವಿಶ್ಲೇಷಕರು ಹೇಳಿದ್ದಾರೆ.

ಭಾನುವಾರದ ದಾಳಿಯ ವೇಳೆ ಒಂದು ಕ್ಷಿಪಣಿ ಪಿವ್‌ಡೆನ್ನೋಕ್ರೇನ್ಸ್‌ ಪರಮಾಣು ಸ್ಥಾವರದ ಸಮೀಪದ ಆತಂಕಕಾರಿ ರೀತಿಯಲ್ಲಿ ಬಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೀವ್‌ ಮಾತ್ರವಲ್ಲದೇ ದೇಶದ ಇತರೆ ಹಲವು ಪ್ರದೇಶಗಳ ಮೇಲೂ ರಷ್ಯಾ ಸೇನೆ ಭಾನುವಾರ ದಾಳಿ ನಡೆಸಿದೆ.

ಇನ್ನೂ ನಾಕೈದು ದಿನ ಅಬ್ಬರಿಸಲಿದ್ದಾನೆ ಮಳೆರಾಯ-ಹವಾಮಾನ ತಜ್ಞರು

0

ರಾಜ್ಯದಲ್ಲಿ ಕಳೆದ ಮೂರು, ನಾಲ್ಕು ದಿನಗಳಿಂದ ಅಬ್ಬರಿಸುತ್ತಿರುವ ಮಳೆರಾಯನ ಆರ್ಭಟ ಮುಂದಿನ 5 ದಿನಗಳವರೆಗೆ ಮುಂದುವರೆಯುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

ಮುಂಗಾರು ಮಳೆ ಪೂರ್ಣ ಪ್ರಮಾಣದಲ್ಲಿ ರಾಜ್ಯದಾದ್ಯಂತ ಆವರಿಸುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.

ಇಂದು ಸಂಜೆ ಚಿಕ್ಕಮಗಳೂರು , ಹಾಸನ , ಕೊಡಗು , ಚಾಮರಾಜನಗರ , ಬೆಂಗಳೂರು , ಬೆಂಗಳೂರು ಗ್ರಾಮಾಂತರ , ಮಂಡ್ಯ , ರಾಮನಗರ , ತುಮಕೂರು , ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಭಾರಿ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಎಲ್ಲಾ ಜಿಲ್ಲೆಗಳಲ್ಲೂ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಂದಿನ 4 ದಿನ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು , ಮಿಂಚು ಸಹಿತ ಮಳೆಯಾಗಲಿದೆ.

ರಾಯಚೂರಿನಲ್ಲಿ ಕಲುಷಿತ ನೀರು ಸೇವನೆ: 3 ಸಾವು

0

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು 3 ಸಾವನ್ನಪ್ಪಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನೀರಿನ ಮಾದರಿಯನ್ನು ಸಂಗ್ರಹಿಸಿ, ಲ್ಯಾಬ್ ಗೆ ಕಳುಹಿಸಲು ಸೂಚಿಸಲಾಗಿದೆ. ಅಧಿಕಾರಿಗಳ ಲೋಪ ದೋಷದ ಬಗ್ಗೆಯೂ ತನಿಖೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರ ರೊಂದಿಗೆ ಈ ವಿಷಯವಾಗಿ ಮಾತನಾಡಿದ ಅವರು, ರಾಯಚೂರು ಪ್ರಕರಣದ ಬಗ್ಗೆ ಸರ್ಕಾರ ಗಂಭೀರವಾಗಿ ಚರ್ಚಿಸಿದೆ. ಆ ಪ್ರಕರಣವನ್ನು ಗಂಭೀರವಾಗಿಯೂ ಪರಿಗಣಿಸಲಾಗಿದೆ. ಕಲುಷಿತ ನೀರು ಕುಡಿದು 3 ಸಾವನ್ನಪ್ಪಿದ್ದು ಹೇಗೆ ಎನ್ನುವ ಬಗ್ಗೆಯೂ ತನಿಖೆಯ ನಡೆಸಲಾಗುತ್ತದೆ. ಈಗಾಗಲೇ, ನೀರಿನ ಮಾದರಿ ಸಂಗ್ರಹಿಸಲು ಸೂಚಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿ, ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ರಾಯಚೂರಿನಲ್ಲಿ ನಗರಸಭೆಯ ನೀರು ಕುಡಿದು 80ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು. ಅಲ್ಲದೇ 3 ತೀವ್ರವಾಗಿ ಅಸ್ಪಸ್ಥಗೊಂಡು ಚಿಕಿತ್ಸೆ ಪಡೆಯದೇ ಸಾವನ್ನಪ್ಪಿದ್ದರು. ಕಲುಷಿತ ನೀರು ಸೇವನೆಯಿಂದ ಕೆಲವರ ಕಿಡ್ನಿಗೂ ಹಾನಿ ಉಂಟಾಗಿತ್ತು.

ಪ್ರತೀ ತಿಂಗಳ 3 ನೇ ಶನಿವಾರ ವಿದ್ಯುತ್ ಅದಾಲತ್- ಸುನೀಲ್ ಕುಮಾರ್

0

ಪ್ರತಿ 3ನೇ ಶನಿವಾರ ವಿದ್ಯುತ್​ ಅದಾಲತ್​ ನಡೆಬೇಕೆಂದು ಇಂಧನ ಸಚಿವ ಸುನಿಲ್​ ಕುಮಾರ್​ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಆದೇಶಿಸಿರುವ ಅವರು, ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೆ ಹಳ್ಳಿವರೆಗೆ ಭೇಟಿ ನೀಡಬೇಕು.

ವಿದ್ಯುತ್​ ಅದಾಲತ್​ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸಚಿವ ಸುನಿಲ್ ಕುಮಾರ್ ಅವರು ಆದೇಶ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್​ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ಮಾಡಲು ಆಂದೋಲನ ರೀತಿಯ ಕಾರ್ಯಕ್ರಮ ರೂಪಿಸಬೇಕು. ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್​ ಅದಾಲತ್​ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ವರೆಗಿನ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಹೋಗಿ, ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡುವಂತೆ ಸಚಿವರು ತಿಳಿಸಿದ್ದಾರೆ.

ಸಹಾಯಕ ಕಾರ್ಯಪಾಲಕ ಇಂಜಿನಿಯರ್​ರಿಂದ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳೂ ಅಭಿಯಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಆದ್ಯತೆ ಮೇರೆಗೆ ತಾಲೂಕಿನ ಗಡಿ ಭಾಗದ ಹಳ್ಳಿಗಳಿಂದ ಆರಂಭಿಸಿ, ಪ್ರತಿ ಹಳ್ಳಿಗೆ ಪ್ರತಿ ಹಳ್ಳಿಗೆ ಅಭಿಯಾನ ವಿಸ್ತರಿಸಬೇಕು ಎಂದು ವಿವರಿಸಿದ್ದಾರೆ.

ವಿವಿಧ ಹಂತದ ಅಧಿಕಾರಿಗಳು ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಅಭಿಯಾನವನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಅಭಿಯಾನದ ವಿವರಗಳನ್ನು ಪ್ರತಿ ತಿಂಗಳು ನಿಗದಿತ ನಮೂನೆಯಲ್ಲಿ ನಮೂದಿಸಿ, ಮಾಹಿತಿಯನ್ನು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸಬೇಕು. ವ್ಯವಸ್ಥಾಪಕ ನಿರ್ದೇಶಕರು ಪ್ರತಿ 3ನೇ ಸೋಮವಾರ ತಪ್ಪದೇ emg 1 energy@gpail.com ಇ-ಮೇಲ್​ ಮೂಲಕ ಸರ್ಕಾರಕ್ಕೆ ಕಳುಹಿಸಬೇಕೆಂದು ಆದೇಶ ನೀಡಿದ್ದಾರೆ.

ವಿಶ್ವ ಪರಿಸರ ದಿನ ಮಣ್ಣು ಉಳಿಸಿ ಆಂದೋಲನದಲ್ಲಿ ಪ್ರಧಾನಿ

0

ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಣ್ಣು ಉಳಿಸಿ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ವಿಶ್ವ ಪರಿಸರ ದಿನದಂದು ಇಡೀ ವಿಶ್ವದ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಇಂದು ದೇಶ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಅಮೃತ ಕಾಲದಲ್ಲಿ ಹೊಸ ಸಂಕಲ್ಪಗಳನ್ನು ಕೈಗೊಳ್ಳುತ್ತಿದೆ. ಆದ್ದರಿಂದ, ಈ ರೀತಿಯ ಸಾರ್ವಜನಿಕ ಅಭಿಯಾನ ಬಹಳ ಮುಖ್ಯವಾಗುತ್ತದೆ. ಕಳೆದ 8 ವರ್ಷಗಳಿಂದ ದೇಶದಲ್ಲಿ ನಡೆಯುತ್ತಿರುವ ಎಲ್ಲಾ ಯೋಜನೆಗಳು ಒಂದಲ್ಲ ಒಂದು ರೀತಿಯಲ್ಲಿ ಪರಿಸರವನ್ನು ಸಂರಕ್ಷಿಸುವ ಹಂಬಲವನ್ನು ಹೊಂದಿವೆ ಎಂಬ ತೃಪ್ತಿ ನನಗಿದೆ ಎಂದು ತಿಳಿಸಿದ್ದಾರೆ.

ಸ್ವಚ್ಛ ಭಾರತ್ ಮಿಷನ್, ತ್ಯಾಜ್ಯವನ್ನು ಸಂಪತ್ತಾಗಿಸುವ ಕಾರ್ಯಕ್ರಮಗಳು, ಅಮೃತ್ ಮಿಷನ್ ಅಡಿ ನಗರಗಳಲ್ಲಿ ಆಧುನಿಕ ಒಳಚರಂಡಿ ಸಂಸ್ಕರಣಾ ಘಟಕಗಳ ನಿರ್ಮಾಣ, ಸಿಂಗಲ್ ಯೂಸ್ ಪ್ಲಾಸ್ಟಿಕ್‌ಗಳನ್ನು ಬಳಸಿ ಪರಿಸರವನ್ನು ರಕ್ಷಿಸುವ ಭಾರತದ ಬಹು ಆಯಾಮಗಳಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಒಡಿಶಾದಿಂದ ರಾಜ್ಯಸಭೆಗೆ ಮೂವರ ಅವಿರೋಧ ಆಯ್ಕೆ

0

ಒಡಿಶಾದಲ್ಲಿ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ನವೀನ್ ಪಟ್ನಾಯಕ್ ನೇೃತ್ವದ ಒಡಿಶಾ ಸರ್ಕಾರ ಸಂಪುಟ ಪುನಾರಚನೆಗೆ ನಿರ್ಧರಿಸಿದೆ. ಪರಿಣಾಮ ಸಂಪುಟದ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಒಡಿಶಾದ ಆಡಳಿತರೂಢ ಬಿಜು ಜನತಾದಳ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತ ಬ್ರಜ್‌ರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜಿ ಡಿ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ನವೀನ್ ಪಟ್ನಾಯಕ್ ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೊರತು ಪಡಿಸಿ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ. ನಾಳೆ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕೆಲ ಸಚಿವರನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಆದರೆ ಖಾತೆ ಬದಲಾವಣೆಯಾಗುವ ಸಾಧ್ಯತೆ ಇದೆ. ಇನ್ನು ಹೊಸ ಮುಖಗಳಿಗೆ ಅವಕಾಶ ನೀಡಲು ನವೀನ್ ಪಟ್ನಾಯಕ್ ನಿರ್ದರಿಸಿದ್ದಾರೆ.

ಒಡಿಶಾ ವಿಧಾನಸಭೆ ಸಂಖ್ಯಾ ಬಲ 147. ಇದರಲ್ಲಿ ಆಡಳಿತರೂಢ ಬಿಜೆಡಿ 113 ಶಾಸಕರನ್ನು ಹೊಂದಿದೆ. ಇತ್ತ ಪ್ರತಿಪಕ್ಷ ಬಿಜೆಪಿ 22 ಶಾಸಕರನ್ನು ಹೊಂದಿದ್ದರೆ, ಕಾಂಗ್ರೆಸ್ 9 ಶಾಸಕರನ್ನು ಹೊಂದಿದೆ.

ಬ್ರಜ್‌ರಾಜನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಡಿ ಅಭ್ಯರ್ಥಿ ಅಲಕಾ ಮೊಹಾಂತಿ 66,000 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ, ಹಿರಿಯ ರಾಜಕರಾಣಿ ಕಿಶೋರ್ ಪಟೆಲ್ ವಿರುದ್ಧ ಗೆಲುವು ಸಾಧಿಸಿದ್ದರು. 2019ರ ಬಳಿಕ ನಡೆದ ಒಡಿಶಾ ಉಪ ಚುನಾವಣೆಗಳಲ್ಲಿ ಈ ಗೆಲುವು ಗರಿಷ್ಠ ಅಂತರದ ಗೆಲುವಾಗಿದೆ.

ನವದೆಹಲಿ ಸರ್ಕಾರಿ ಬಂಗಲೆಗಳಲ್ಲಿರುವ ರಾಜಕೀಯ ಪಕ್ಷಗಳಿಗೆ ತೆರವು ಮಾಡಲು ಕ್ರಮ

0

ರಾಷ್ಟ್ರ ರಾಜಧಾನಿ ನವದೆಹಲಿಯ ಲ್ಯೂಟೆನ್ಸ್‌ ಪ್ರದೇಶದಲ್ಲಿರುವ ಬಂಗಲೆಗಳಲ್ಲಿ ಠಿಕಾಣಿ ಹೂಡಿರುವ ರಾಜಕೀಯ ಪಕ್ಷಗಳು ಅಲ್ಲಿಂದ ಕಾಲೆಂಗೆಯಲೇಬೇಕಾಗಿದೆ. ಹೀಗೆಂದು, ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನವದೆಹಲಿಯ ದೀನ್‌ ದಯಾಳ್‌ ಉಪಾಧ್ಯಾಯ ರಸ್ತೆಯಲ್ಲಿ ಅತ್ಯಾಧುನಿಕವಾಗಿರುವ ಕೇಂದ್ರ ಕಚೇರಿಯನ್ನು ಬಿಜೆಪಿ ಹೊಂದಿದ್ದರು. ಸರ್ಕಾರಿ ಬಂಗಲೆಗಳಲ್ಲಿ ಬಿಜೆಪಿ ವಾಸ್ತವ್ಯ ಹೂಡಿರುವುದನ್ನು ಮುಂದುವರಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ನಗರ ವ್ಯವಹಾರಗಳು ಮ
ಹಾಗೂ ವಸತಿ ಸಚಿವ ಹರ್ದೀಪ್ ಸಿಂಗ್ ಪುರಿ,ವೈಯಕ್ತಿಕವಾಗಿ ಒಬ್ಬರನ್ನು ಸರ್ಕಾರಿ ಬಂಗಲೆಗಳಿಂದ ತೆರವುಗೊಳಿಸುವುದು ಕಷ್ಟ.

ಈಗ ನಾವು ಕೆಲವರನ್ನು ಮಾತ್ರ ಗುರಿಯಾಗಿಸಿಕೊಂಡು ತೆರವುಗೊಳಿಸುತ್ತಿಲ್ಲ ಎಂಬ ಟೀಕೆಯನ್ನು ಇನ್ನು ಮಾಡಲಾರರು ಎಂದು ತಿಳಿದು ಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಬಂಗಲೆಗಳಿಂದ ರಾಜಕೀಯ ಪಕ್ಷಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಏಕೆಂದರೆ, ಎಲ್ಲಾ ರಾಜಕೀಯ ಪಕ್ಷಗಳಿಗೂ ಕಚೇರಿ ನಿರ್ಮಿಸಲು ಜಮೀನು ನೀಡಲಾಗಿದೆ ಎಂದಿದ್ದಾರೆ.