Tuesday, March 3, 2026
Tuesday, March 3, 2026
Home Blog Page 1555

ಜೂನ್ 2 ರಿಂದ ವಾಡಿಕೆ ಮಳೆರಾಯನ ಆಗಮನ

0

ಮಳೆ ಯಾವಾಗ ಆರಂಭವಾಗುತ್ತದೆ ಎಂದು ಯೋಚಿಸುತ್ತಿದ್ದ ರೈತರಿಗೆ ಜೂನ್ 2 ರಿಂದ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

ಜೂನ್ 2 ರಿಂದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ . ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ನೈರುತ್ಯ ಮುಂಗಾರು ಮೇ. 29 ರ ಭಾನುವಾರ ಕೇರಳಕ್ಕೆ ಪ್ರವೇಶಿಸಿದೆ. ಜೂನ್ 1 ರಿಂದ ಕರ್ನಾಟಕಕ್ಕೆ ಪ್ರವೇಶವಾಗಲಿದೆ. ಜೂನ್ 2 ರಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಜೂನ್ 2 ರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜೂನ್ 2 ರ ರಾತ್ರಿ , ಜೂನ್ 3 ಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ರಾಮನಗರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ,ಉಡುಪಿ, ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರೈತಶಕ್ತಿ ಯೋಜನೆಯಡಿ ಡಿಸೆಲ್ ಖರೀದಿಗೆ ಸಹಾಯಧನ

0

2022-23ನೇ ಸಾಲಿನ ರೈತ ಶಕ್ತಿ ಯೋಜನೆಯಡಿ ಕರ್ನಾಟಕ ಸರ್ಕಾರ ಕೃಷಿ ಉತ್ಪಾದಕತೆ ಹೆಚ್ಚಿಸಿ, ಇಂಧನ ಕಡಿಮೆ ಮಾಡುವ ದೃಷ್ಠಿಯಿಂದ ಪ್ರತಿ ಎಕರೆಗೆ 250 ರೂ.ಗಳಂತೆ ಗರಿಷ್ಟ 5 ಎಕರೆಗೆ 1250 ರೂಪಾಯಿಗಳ ನೇರ ನಗದು ಮೂಲಕ ಡೀಸೆಲ್ ಸಹಾಯಧನ ನೀಡಲಾಗುತ್ತದೆ.

ರಾಯಚೂರಿನ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ವತಿಯಿಂದ ರೈತ ಶಕ್ತಿ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲಿದೆ. ಈ ಯೋಜನೆಯಡಿ ರೈತರು ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಲು ಕೃಷಿ, ಕಂದಾಯ, ರೇಷ್ಮೆ, ತೋಟಗಾರಿಕೆ ಮತ್ತು ಪಶು ಸಂಗೋಪನಾ ಇಲಾಖೆಗಳನ್ನು ಸಂಪರ್ಕಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ರಾಜ್ಯ ನೌಕರರಿಗೆ ಕೇಂದ್ರ ವೇತನ ಮಾದರಿ ಜಾರಿ- ಬೊಮ್ಮಾಯಿ

0

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಮಾದರಿ ಜಾರಿಗೊಳಿಸೋದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು – 2022ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಆರೋಗ್ಯ ಸಂಜೀವಿನ ಯೋಜನೆಗೆ ಈಗಾಗಲೇ ಸಚಿವ ಸಂಪುಟದಿಂದ ಅನುಮೋದನೆ ಕೊಟ್ಟಿದ್ದೇವೆ. ಆದಷ್ಟು ಬೇಗ ಆ ಯೋಜನೆಯನ್ನು ಲೋಕಾರ್ಪಣೆ ಮಾಡಲಾಗುತ್ತದೆ. ನಿಮ್ಮ ಆರೋಗ್ಯ ಮುಖ್ಯ. ಸರ್ಕಾರಿ ನೌಕರರ ಆರೋಗ್ಯ ಚೆನ್ನಾಗಿದ್ದರೇ ಉತ್ತಮ ಸೇವೆ ನೀಡಲು ಸಾಧ್ಯ ಎಂದು ಹೇಳಿದ್ದಾರೆ.

ನಾವು ಅನೇಕ ಯೋಜನೆ ಮಾಡುತ್ತೇವೆ. ಬಜೆಟ್ ಗಳನ್ನು ಮಾಡಿರುತ್ತೇವೆ. ಕಟ್ಟ ಕಡೆಯ ಬಡವರು, ದೀನ, ದಲಿತರಿಗೆ, ರೈತರು, ಮಹಿಳೆಯರಿಗೆ ಆ ಎಲ್ಲಾ ಸೌಲಭ್ಯ ತಲುಪಬೇಕಾದರೆ ಸರ್ಕಾರಿ ನೌಕರರ ಸೇವೆ ಮುಖ್ಯವಾಗಿದೆ. ನಿಮ್ಮ ಶ್ರಮ ಆ ಬಡವರಿಗೆ ಮುಟ್ಟಿದರೆ, ಕೇವಲ ನಿಮಗೆ ನಿಮ್ಮ ನೌಕರಿಯಿಂದ ಒಳ್ಳೆಯ ಹೆಸರು ಬರೋದಲ್ಲ. ಪುಣ್ಯ ಪ್ರಾಪ್ತಿ ಕೂಡ ಆಗಲಿದೆ. ನಿಮ್ಮ ಸೇವೆ ಪ್ರಾಮಾಣಿಕವಾಗಿರಲಿ ಎಂದು ತಿಳಿಸಿದ್ದಾರೆ.

ಪದ್ಮ ಪ್ರಶಸ್ತಿಗಳಿಗೆ ವೆಬ್ ಸೈಟ್ ಮೂಲಕ ಹೆಸರು ಸೂಚಿಸಲು ಸೆ‌.15 ಕೊನೇ ದಿನ

0

2023ನೇ ಸಾಲಿನ ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನ ಮತ್ತು ಶಿಫಾರಸು ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶವಿದ್ದು ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಮುಂದಿನ ವರ್ಷ ಗಣರಾಜ್ಯೋತ್ಸವ ದಿನ ಘೋಷಿಸಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಪದ್ಮ ಪ್ರಶಸ್ತಿಗೆ ಹೆಸರುಗಳನ್ನು ಸೂಚಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಪದ್ಮ ಪ್ರಶಸ್ತಿಗೆ ಹೆಸರು, ಶಿಫಾರಸುಗಳನ್ನು ಆನ್ ಲೈನ್ ಮೂಲಕ ಮಾತ್ರ ಅದರ ರಾಷ್ಟ್ರೀಯ ಪ್ರಶಸ್ತಿ ಪೋರ್ಟಲ್ ನಲ್ಲಿ ಅಧಿಕೃತ ವೆಬ್ ಸೈಟ್ ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ.

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳು ಒಳಗೊಂಡಿರುತ್ತದೆ.
1954 ರಲ್ಲಿ ಸ್ಥಾಪಿಸಲಾದ ಪದ್ಮ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಪ್ರಶಸ್ತಿಯು ದೇಶದಲ್ಲಿ ಯಾವುದೇ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮೆರೆದ ನಾಗರಿಕರನ್ನು ಗುರುತಿಸುವುದಾಗಿರುತ್ತದೆ. ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆಗಳಂತಹ ಹೀಗೆ ಹಲವು ಕ್ಷೇತ್ರಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆ ಮಾಡಿದವರಿಗೆ ನೀಡಲಾಗುತ್ತದೆ.

ರಾಜ್ಯದಲ್ಲೂ ಉದಯಪುರ ಚಿಂತನೆಯ ಮಾದರಿಶಿಬಿರ-ಡಿಕೆಶಿ

0

ರಾಜಸ್ಥಾನದ ಉದಯ ಪುರದಲ್ಲಿ ಆಯೋಜಿಸಿದ್ದ ಮಾದರಿಯಲ್ಲಿ ರಾಜ್ಯದಲ್ಲೂ ಚಿಂತನಾ ಶಿಬಿರ ನಡೆಸಲು ಕರ್ನಾಟಕ ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ.

ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುಮಾರು 400 ಜನ ಕಾರ್ಯಕರ್ತ- ಮುಖಂಡರ ಜತೆ ಸೇರಿ ಚರ್ಚಿಸಿ ಈ ಕಾರ್ಯಕ್ರಮ ರೂಪಿಸಲಾಗುತ್ತಿದ್ದು, ಇದಕ್ಕಾಗಿ ಐವರು ಹಿರಿಯ ನಾಯಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದರು.

ಜೂನ್ 1,2,3 ರಂದು ಶಿಬಿರ ನಡೆಯಲಿದ್ದು, ಆ ಸಭೆಯಲ್ಲಿ ಕೆಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಅಧ್ಯಕ್ಷತೆಯಲ್ಲಿ ಬೆಲೆ ಏರಿಕೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಪಕ್ಷ ಸಂಘಟನೆ ಕುರಿತು ವಿಧಾನ ಪರಿಷತ್ತಿನ
ಪ್ರತಿ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸಮಿತಿ ರಚಿಸಲಾಗಿದೆ.

ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ರೈತ ಸಮಿತಿ, ರಾಜಕೀಯ ಬೆಳವಣಿಗೆಗಳು ಚುನಾವಣೆ ಚರ್ಚೆಗೆ ಡಾ.ಜಿ ಪರಮೇಶ್ವರ್ ನೇತೃತ್ವದ ಸಮಿತಿ, ಯುವಕರ ಬಗ್ಗೆ ಕೃಷ್ಣಭೈರೇಗೌಡ ನೇತೃತ್ವದ ಸಮಿತಿ ರಚನೆಯಾಗಿದೆ ಎಂದು ತಿಳಿಸಿದರು.

ಶಿಬಿರದಲ್ಲಿ 500 ಕೂ ಹೆಚ್ಚು ಜನ ಭಾಗವಹಿಸಲಿದೆ. 500 ಜನರನ್ನು 6 ಭಾಗ ಮಾಡಿ ಚರ್ಚೆಗೆ ಬಿಡುತ್ತೇವೆ. ಶಾಸಕರು, ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಮುಂಚೂಣಿ ಘಟಕಳ ಸದಸ್ಯರು ಪಾಲ್ಗೊಳಲಿದ್ದಾರೆ.

ಮುಂದೆಯೂ ಪಕ್ಷ ಹೇಗೆ ಕೆಲಸ ಮಾಡಬೇಕೆಂಬ ಬಗ್ಗೆ ಶಿಬಿರದಲ್ಲಿ ಚರ್ಚೆ ನಡೆಯಲಿದೆ.

ಬ್ರಿಟನ್& ದಾವೋಸ್ ಪ್ರವಾಸ ಫಲಪ್ರದ-ಸಚಿವ ಅಶ್ವತ್ಥನಾರಾಯಣ

0

ಬ್ರಿಟನ್ ಮತ್ತು ದಾವೋಸ್ ಪ್ರವಾಸ ಯಶಸ್ವಿಯಾಗಿದೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಪಾಲುದಾರಿಕೆ ವಹಿಸಲು ಹಲವು ರಾಷ್ಟ್ರಗಳು ಆಸಕ್ತಿ ತೋರಿವೆ ಎಂದು ತಿಳಿದುಬಂದಿದೆ.

ಜೂನ್ 9ರಂದು ಬ್ರಿಟನ್ ನ 20 ವಿಶ್ವವಿದ್ಯಾಲಯಗಳ ಕುಲಪತಿಗಳ ನಿಯೋಗ ಕರ್ನಾಟಕಕ್ಕೆ ಬರುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳೊಂದಿಗೆ ಶೈಕ್ಷಣಿಕ ಸಹಭಾಗಿತ್ವಕ್ಕೆ ಚಾಲನೆ ನೀಡುವುದು ಮತ್ತು ಒಡಂಬಡಿಕೆಗಳನ್ನು ಮಾಡಿಕೊಳ್ಳುವ ಉದ್ದೇಶದಿಂದ ಯುನೈಟೆಡ್ ಕಿಂಗ್ಡಂನ 20 ಕುಲಪತಿಗಳ ತಂಡವು ಜೂನ್ 9 ಮತ್ತು 10ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದೆ ಎಂದು ಹೇಳಿದರು.

ಆ ದೇಶದಲ್ಲಿ ಇತ್ತೀಚೆಗೆ ನಡೆದ ಕಾಮನ್ವೆಲ್ತ್ ಶೈಕ್ಷಣಿಕ ಸಮಾವೇಶ ಮತ್ತು ವರ್ಲ್ಡ್ ಎಜುಕೇಷನ್ ಫೋರಂ (ಡಬ್ಲ್ಯುಇಎಫ್) ಅಧಿವೇಶನದಲ್ಲಿ ಭಾಗವಹಿಸಲು ತೆರಳಿದ್ದ ಸಚಿವರು, ಅಲ್ಲಿನ ಫಲಶ್ರುತಿ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಜೂನ್21 ಯೋಗ ದಿ‌ನ: ಪ್ರಧಾನಿ ಮೈಸೂರು ಭೇಟಿ ಫಿಕ್ಸ್

0

ಜೂನ್21 ರಂದು ಯೋಗ ದಿನಾಚರಣೆ ಹಿನ್ನೆಲೆ ಮೈಸೂರಿಗೆ ಆಗಮಿಸುತ್ತಿರುವ ಮೋದಿ
ಅರಮನೆ ಮೈದಾನದಲ್ಲಿ ನಡೆಯುವ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.

ಇನ್ನೂ ಈ ಬಗ್ಗೆ ಸೋಮವಾರ ಸಿಎಂ ಜತೆ ವೀಡಿಯೋ ಸಂವಾದ ನಡೆಸಿದ ಮೋದಿ ಅರಮನೆ ಮೈದಾನದಲ್ಲಿ ಸಕಲ ಸಿದ್ದತೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಜೂನ್21 ಕ್ಕೆ ಜರಗುವ ಯೋಗ ದಿನಾಚರಣೆಯಲ್ಲಿ ಮೈಸೂರಿ ಹಲವೆಡೆ ಸುಮಾರು 75ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಭದ್ರತೆಯ ದೃಷ್ಟಿಯಿಂದ ಮೈಸೂರಿನ‌ ಸುತ್ತ ಮುತ್ತ ಪೊಲೀಸ್ ಅಧಿಕಾರಿಗಳ ಕಾರ್ಯಚಟುವಟಿಕೆಗಳು ಪ್ರಾರಂಭವಾಗಿದೆ.

ಚಿನ್ನದ ಬೆಲೆ ಏರಿಕೆ ಜೊತೆ ಬೆಳ್ಳಿಯೂ ಜಿಗಿತ

0

ಭಾರತದಲ್ಲಿ ಕಳೆದ 3 ದಿನಗಳಿಂದ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ.
ಆದರೆ, ಇಂದು ಚಿನ್ನದ ದರ 110 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ ಕೂಡ ಇಂದು 300 ರೂ. ಏರಿಕೆಯಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 47,850 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,090 ರೂ. ಇದ್ದುದು 52,200 ರೂ. ಆಗಿದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,950 ರೂ. ಮುಂಬೈ- 47,850 ರೂ, ದೆಹಲಿ- 47,850 ರೂ, ಕೊಲ್ಕತ್ತಾ- 47,850 ರೂ, ಬೆಂಗಳೂರು- 47,850 ರೂ, ಹೈದರಾಬಾದ್- 47,850 ರೂ, ಕೇರಳ- 47,850 ರೂ, ಪುಣೆ- 47,900 ರೂ, ಮಂಗಳೂರು- 47,850 ರೂ, ಮೈಸೂರು- 47,850 ರೂ. ಇದೆ.

ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ವಿಮಾನ ನಿಲ್ದಾಣ ಸ್ಥಾಪನೆ:ಯುವಜನಕ್ಕೆ ಉದ್ಯೋಗಾವಾಕಾಶ- ಬಿವೈಆರ್

0

ಶಿವಮೊಗ್ಗ ನಗರದಲ್ಲಿ ಶ್ರೀಮಂತರು ಪ್ರಯಾಣಿಸಲು ವಿಮಾನ ನಿಲ್ದಾಣ ನಿರ್ಮಿಸುತ್ತಿಲ್ಲ. ಜಿಲ್ಲೆಯ ಯುವ ಪೀಳಿಗೆಗೆ ಉದ್ಯೋಗ ಅವಕಾಶ ದೊರೆಯಲಿ ಎಂಬ ಉದ್ದೇಶದಿಂದ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ‘ಸರ್ಕಾರದ ಯೋಜನೆ ಪಡೆಯಲು ನೂರಾರು ಜನ ಅರ್ಜಿ ಹಾಕುತ್ತಾರೆ. ಆದರೆ, ಅಯ್ಕೆ ಸಮಿತಿ ಕೆಲವೇ ಫಲಾನುಭವಿಗಳನ್ನು ಆಯ್ಕೆ ಮಾಡುತ್ತದೆ. ಆಯ್ಕೆಯಾಗದವರು ಅಸಮಾಧಾನ ಹೊಂದಬಾರದು’ ಎಂದು ಹೇಳಿದರು.

ಶಿವಮೊಗ್ಗ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ದೇವರಾಜ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಆಯೋಜಿಸಿದ್ದ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಆಗುತ್ತಿರುವುದರಿಂದ ಬಂಡವಾಳಶಾಹಿಗಳು ಕೈಗಾರಿಕೆ ಸ್ಥಾಪಿಸಲು ಮುಂದಾಗಲಿದ್ದಾರೆ.
ಕೈಗಾರಿಕೆ ಸ್ಥಾಪನೆಯಿಂದ ಜಿಲ್ಲೆಯ ಯುವಕರಿಗೆ ಉದ್ಯೋಗವಕಾಶ ದೊರೆಯಲಿದೆ. ಒಂದೂವರೆ ಸಾವಿರ ಕೋಟಿ ವೆಚ್ಚದಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ನಿರ್ಮಾಣವಾಗಲಿದ್ದು, ಶೀಘ್ರದಲ್ಲಿ ಕೇಂದ್ರ ರೈಲ್ವೆ ಸಚಿವರು ಶಂಕುಸ್ಥಾಪನೆ ನೆರವೇರಿಸುವರು. ಜಿಲ್ಲೆಯಿಂದ 8 ರಾಜ್ಯಗಳಿಗೆ ರೈಲು ಸಂಪರ್ಕ ದೊರೆಯಲಿದ್ದು, ರೈತರು ಬೆಳೆದ ಬೆಳೆ ಇತರೆ ರಾಜ್ಯಕ್ಕೆ ಸಾಗಿಸಲು ಅನುಕೂಲವಾಗಲಿದೆ. ರೈತರು ಹಾಗೂ ಕೂಲಿಕಾರ್ಮಿಕರು ಆರ್ಥಿಕವಾಗಿ
ಅಭಿವೃದ್ಧಿಯಾಗಲಿದ್ದಾರೆ ಎಂದರು.

ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿರ್ದೇಶಕರಾದ ಭದ್ರಾಪುರ ಹಾಲಪ್ಪ, ಭೋವಿ ಅಭಿವೃದ್ಧಿ ನಿಗಮ ನಿರ್ದೇಶಕ ತೊಗರ್ಸಿ ಸಣ್ಣ ಹನುಮಂತಪ್ಪ, ಅಲೆಮಾರಿ ಅಭಿವೃದ್ಧಿ ನಿಗಮ ನಿರ್ದೇಶಕ ಕೆಂಗಟ್ಟಿ ಲಕ್ಷ್ಮಣ್, ತಾಲ್ಲೂಕು ಪಂಚಾಯಿತಿ ಇಒ ಪರಮೇಶ್, ವಿವಿಧ ಇಲಾಖೆ ಅಧಿಕಾರಿಗಳಾದ ಉಮೇಶ್, ಶಿಲ್ಪಾ ದೊಡ್ಮನಿ, ಸುಪ್ರೀತಾ ಉಪಸ್ಥಿತರಿದ್ದರು.

ದೇಶದಲ್ಲಿ ಕೊಂಚ ಏರಿಕೆ ಕಂಡ ಕೊವಿಡ್ ಸೋಂಕಿತರ ಸಂಖ್ಯೆ

0

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 2,338 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. 19 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,31,58,087 ಕ್ಕೆ ಏರಿಕೆಯಾಗಿದೆ.

ಆ ಪೈಕಿ 5,24,630 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 4,26,15,574 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 17,883 ಸಕ್ರಿಯ ಪ್ರಕರಣಗಳಿದೆ. ಪಾಸಿಟಿವಿಟಿ ದರ ಶೇ. 0.64 ರಷ್ಟಿದೆ.

ಕೇರಳದಲ್ಲಿ 5,498, ಮಹಾರಾಷ್ಟ್ರದಲ್ಲಿ 3,131, ಕರ್ನಾಟಕದಲ್ಲಿ 2,106, ದೆಹಲಿಯಲ್ಲಿ 1,486, ಹರಿಯಾಣದಲ್ಲಿ 1,044, ಉತ್ತರ ಪ್ರದೇಶದಲ್ಲಿ 920 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಒಟ್ಟು 193.45 ಕೋಟಿ ಕೊರೋನಾ ಲಸಿಕೆ ವಿತರಣೆ ಮಾಡಲಾಗಿದೆ.