Monday, March 2, 2026
Monday, March 2, 2026
Home Blog Page 1570

ಪೆಟ್ರೋಲ್ ಡಿಸೆಲ್ ಸಿಮೆಂಟ್, ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ- ಸೀತಾರಾಮನ್

0

ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 8 ರೂಪಾಯಿ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 6ರೂ.ಗಳಷ್ಟು ಕಡಿಮೆ ಮಾಡಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಪ್ರತಿ ಅನಿಲ ಸಿಲಿಂಡರ್ ಗೆ 200 ರೂಪಾಯಿಗಳ ಸಬ್ಸಿಡಿಯನ್ನು ಕೊಡುತ್ತೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ತಿಳಿಸಿದ್ದಾರೆ.

ಸಿಮೆಂಟ್ ನ ಲಭ್ಯತೆಯನ್ನು ಸುಧಾರಿಸಲು ಮತ್ತು ಸಿಮೆಂಟ್ ವೆಚ್ಚವನ್ನು ಕಡಿಮೆ ಮಾಡಲು ಉತ್ತಮ ಲಾಜಿಸ್ಟಿಕ್ಸ್ ಮೂಲಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸೀತಾರಾಮನ್ ಅವರು ಹೇಳಿದ್ದಾರೆ.

ಬಜೆಟ್ ನಲ್ಲಿ ಘೋಷಿಸಲಾದ ಸಾಮಾನ್ಯ ಸಬ್ಸಿಡಿಯಾದ 1.05 ಲಕ್ಷ ಕೋಟಿ ರೂ.ಗಿಂತ 1.10 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ರಸಗೊಬ್ಬರ ಸಬ್ಸಿಡಿಯನ್ನು ಸೀತಾರಾಮನ್ ನಿನ್ನೆ ಶನಿವಾರ ಮಾಹಿತಿ ತಿಳಿಸಿದ್ದಾರೆ.

ಸುರಿಮಳೆಯಲ್ಲಿಈರುಳ್ಳಿ ಬೆಲೆ ಇಳಿಕೆ

0

ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರೈತರಿಗೆ ಭಾರಿ ಭಾರಿ ಪ್ರಮಾಣದಲ್ಲಿ ನಷ್ಟವಾಗುತ್ತಿದೆ. ಅದೇ ರೀತಿ ಈರುಳ್ಳಿ ಬೆಳೆದ ರೈತರಿಗೆ ತಾವು ಬೆಳೆದ ಈರುಳ್ಳಿ ಯ ಬೆಲೆ ಇಳಿಕೆ ಕಂಡಿದೆ.

ಇದರಿಂದ ರೈತರು ಕಂಗಾಲಾಗಿದ್ದಾರೆ. ಒಂದು ಎಕರೆ ಜಮೀನಿನಲ್ಲಿ ಸುಮಾರು 60 ಸಾವಿರದಷ್ಟು ರೂಪಾಯಿ ಖರ್ಚು ಮಾಡಿ ಬೆಳೆದ ಈರುಳ್ಳಿಗೆ ಕೆ.ಜಿ.ಗೆ 2 ರೂ.ರಷ್ಟು ಬೆಲೆಯೂ ದೊರೆಯದ ಸ್ಥಿತಿ ರೈತರಿಗೆ ಎದುರಾಗಿರಾಗಿದೆ. ಇದರಿಂದ ರೈತರು ಚಿಂತೆಗೀದಡಾಗಿದ್ದರೆ.
ಸಾಲ ಮಾಡಿ ಬೆಳೆಯನ್ನು ಬೆಳೆದರು,ಅದಕ್ಕೆ ಸರಿಯಾದ ಬೆಲೆ ಸಿಗದ ಪರಿಸ್ಥಿತಿ ರೈತರಿಗೆ ಎದುರಾಗಿದೆ.

ಬೇಸಿಗೆಯ ಕಾಲದಲ್ಲಿ ಕೊಳವೆಬಾವಿ ನೀರು ಬಳಸಿ ಈರುಳ್ಳಿ ನಾಟಿ ಮಾಡಿ, ಮುಂಗಾರು ಮಳೆ ಆರಂಭಕ್ಕೂ ಮುಂಚೆ ಬೆಳೆ ಕೊಯ್ಲಿಗೆ ಬರುವ ಕಾರಣ ಉತ್ತಮ ದರ ಸಿಗುತ್ತದೆ ಎಂದು ರೈತರು ಕನಸು ಈಗ ನುಚ್ಚು ನೂರಾಗಿದೆ. ಒಂದು ಕಡೆ ಬಿಡದೇ ಸುರಿಯುತ್ತಿರುವ ಮಳೆಯ ಪರಿಣಾಮಕ್ಕೆ ಸುಮಾರು ಈರುಳ್ಳಿ ಕೊಳೆತು ಹೋಗಿದೆ. ಇನ್ನೊಂದು ಕಡೆ ತಾನು ಬೆಳೆದ ಈರುಳ್ಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ.

ಅನೇಕ ರೈತರು ಈರುಳ್ಳಿಯನ್ನು ಹೊಲದಲ್ಲಿಟ್ಟು ಕಾಯುತ್ತಿದ್ದಾರೆ.
ಮಧ್ಯವರ್ತಕರು ರೈತರು ಬೆಳೆದ ಈರುಳ್ಳಿಗೆ 60-65ಕೆಜಿ ಇರುವ ಒಂದು ಚೀಲಕ್ಕೆ 100ರಿಂದ 150 ಕೇಳುತ್ತಿದ್ದಾರೆ. ಸಾಲ ಸೂಲ ಮಾಡಿ ಬೆಳೆ ಬೆಳೆದರೂ ಅದಕ್ಕೆ ಸರಿಯಾದ ಬೆಲೆ ಸಿಗುತ್ತಿಲ್ಲ ಎಂದು ರೈತರು ಕಂಗಾಲಾಗಿದ್ದಾರೆ. ಎಂದು ಹಿರಿಯೂರು ತಾಲ್ಲೂಕಿನ ದಿಂಡಾವರ ಗ್ರಾಮದ ರೈತರು ಅಳಲು ತೋಡಿಕೊಂಡಿದ್ದಾರೆ.

ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಸುರಿತ

0

ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಇನ್ನೂ ಮುಂದುವರೆದಿದೆ. ಇನ್ನೂ 3 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಸುರಿಯಲಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಇನ್ನೂ ಮೇ 24ರವರೆಗೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮೇ 27ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ. ಜೂನ್ ತಿಂಗಳ ಮೊದಲ ವಾರಕ್ಕೆ ಕರ್ನಾಟಕದಲ್ಲಿ ಮಾನ್ಸೂನ್ ಶುರುವಾಗಲಿದೆ. ಅದಕ್ಕೂ ಮುಂಚೆ ಕೇರಳದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ.ಇಲ್ಲಿ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ.

ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದರೂ ಇಂದಿನಿಂದ ಮಳೆಯ ಪ್ರಮಾಣ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಲಿದೆ

ಜಮ್ಮು-ಕಾಶ್ಮೀರ ಹೆದ್ದಾರಿಯಲ್ಲಿ ಭೂಕುಸಿತ ಅವಶೇಷದಡಿ ಕಾರ್ಮಿಕರು

0

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಕುಸಿತದ ನಂತರ ಅವಶೇಷಗಳಡಿ ಸಿಲುಕಿರುವ ಒಂಬತ್ತು ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಪುನರಾರಂಭವಾಗಿದೆ.

ಪಶ್ಚಿಮ ಬಂಗಾಳದ ಜಾದವ್ ರಾಯ್ (23), ಗೌತಮ್ ರಾಯ್ (22), ದೀಪಕ್ ರಾಯ್ (33) ಮತ್ತು ಪರಿಮಳ್ ರಾಯ್ (38), ಅಸ್ಸಾಂನ ಶಿವ ಚೌಹಾಣ್ (26), ನೇಪಾಳಿ ನಾಗರಿಕರಾದ ನವರಾಜ್ ಚೌಧರಿ (26) ) ಖುಷಿ ರಾಮ್ (25), ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಾದ ಮುಜಾಫರ್ (38) ಮತ್ತು ಇಸ್ರತ್ (30) ಸುರಂಗದಲ್ಲಿ ಸಿಲುಕಿದ್ದು, ಅವರು ಜೀವಂತವಾಗಿರುವದು ಅನುಮಾನ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ 10.15 ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಖೂನಿ ನಲ್ಲಾ ಬಳಿ ಹೆದ್ದಾರಿಯಲ್ಲಿ ಟಿ 3 ನ ಆಡಿಟ್ ಸುರಂಗವು ಕುಸಿದಿತ್ತು. ಅದರಲ್ಲಿ ಪಶ್ಚಿಮ ಬಂಗಾಳ ಮೂಲದ ಸುೀಧಿರ್ ರಾಯ್ (31) ಎಂಬ ಕಾರ್ಮಿಕ ಸಾವನ್ನಪ್ಪಿದ್ದಾರೆ.

ಮೂವರನ್ನು ರಕ್ಷಿಸಲಾಗಿತ್ತು.
ಸುರಂಗದ ಅವಶೇಷಗಳೊಳಗೆ ಸಿಲುಕಿರುವ 9 ಮಂದಿಯನ್ನು ರಕ್ಷಿಸುವ ಕಾರ್ಯಾಚರಣೆ ಇಂದು ಮುಂಜಾನೆ 5.30 ಕ್ಕೆ ಪ್ರಾರಂಭವಾಗಿದೆ.

ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ ಎಂದು ರಾಂಬನ್ ಜಿಲ್ಲಾಧಿಕಾರಿ ಮುಸ್ಸರತ್ ಇಸ್ಲಾಂ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

ರಾಮ್ಸು ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ನಯೀಮ್-ಉಲ್-ಹಕ್ ಸೇರಿದಂತೆ 15 ಕ್ಕೂ ಹೆಚ್ಚು ರಕ್ಷಕರು ಶುಕ್ರವಾರ ಸಂಜೆ ಹೊಸ ಭೂಕುಸಿತದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಇದರಿಂದಾಗಿ ಇದು ರಕ್ಷಣಾ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಗುಡ್ಡದ ಮೇಲಿನ ಕಲ್ಲುಗುಂಡುಗಳು ಭಾರೀ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಉರುಳಿವೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ಮಂದ ಬೆಳಕಿನಲ್ಲಿ ರಕ್ಷಣಾ ಕಾರ್ಯಾಚರಣೆ ಪುನರಾರಂಭವಾಗಿದೆ. ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಲೈಂಗಿಕ ಕಾರ್ಯಕರ್ತೆಯರಿಗೂ ಆಧಾರ್ ಕಾರ್ಡ್ ನೀಡಿ- ಸುಪ್ರೀಂ ನಿರ್ದೇಶನ

0

ಲೈಂಗಿಕ ಕಾರ್ಯಕರ್ತರಿಗೆ ಕೂಡ ಆಧಾರ್ ಕಾರ್ಡ್‌ಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ನೀಡಿದ ಪ್ರೊಫಾರ್ಮಾ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್‌ಗಳನ್ನು ನೀಡಲಾಗುತ್ತದೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (NACO)ಯಲ್ಲಿ ಗೆಜೆಟೆಡ್ ಅಧಿಕಾರಿ ಅಥವಾ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಯೋಜನಾ ನಿರ್ದೇಶಕರು ಸಲ್ಲಿಸುತ್ತಾರೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (ನ್ಯಾಕೊ) ಅಥವಾ ರಾಜ್ಯ ಏಡ್ಸ್ ನಿಯಂತ್ರಣ ಸಂಘದ ಯೋಜನೆ ನಿರ್ದೇಶಕರು ಸಲ್ಲಿಸಿದ ಆಧಾರದಲ್ಲಿ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ನೀಡಬಹುದು. ವ್ಯಕ್ತಿ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗಿರಲಿ ಆ ವ್ಯಕ್ತಿಗೆ ಗೌರವ ನೀಡಬೇಕು ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಎ.ಎಸ್. ಬೋಪಣ್ಣ ಅವರಿದ್ದ ಪೀಠ ತಿಳಿಸಿದೆ.

ಪ್ರತಿಯೊಬ್ಬ ವ್ಯಕ್ತಿಯನ್ನು ಘನತೆಯಿಂದ ನಡೆಸಿಕೊಳ್ಳುವುದು ಮೂಲಭೂತ ಹಕ್ಕಾಗಿದೆ ಎಂದು ಸುಪ್ರೀಂಕೋರ್ಟ್​ ಹೇಳಿದೆ. ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ನೇತೃತ್ವದ ಪೀಠವು ಲೈಂಗಿಕ ಕಾರ್ಯಕರ್ತೆಯರ ಗೌಪ್ಯತೆಯನ್ನು ಉಲ್ಲಂಘಿಸಬಾರದು ಮತ್ತು ಅವರ ಗುರುತನ್ನು ಬಹಿರಂಗಪಡಿಸಬಾರದು ಎಂದು ಹೇಳಿದೆ.

NACO ಗೆಜೆಟೆಡ್ ಅಧಿಕಾರಿ ಅಥವಾ ಆಯಾ ರಾಜ್ಯ ಸರ್ಕಾರಗಳ ಆರೋಗ್ಯ ಇಲಾಖೆಯ ಗೆಜೆಟೆಡ್ ಅಧಿಕಾರಿ ನೀಡಿದ ಪ್ರಮಾಣಪತ್ರವನ್ನು ಸಲ್ಲಿಸಿದರೆ ಗುರುತಿನ ಪುರಾವೆಯನ್ನು ಒತ್ತಾಯಿಸದೆಯೇ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್ ನೀಡಬಹುದು ಎಂದು UIDAI ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಸೂಚಿಸಿತ್ತು.

ಯಾವುದೇ ಗುರುತಿನ ಪುರಾವೆ ಹೊಂದಿರದ ಮತ್ತು ಪಡಿತರ ವಿತರಣೆಯಿಂದ ವಂಚಿತರಾಗಿರುವ ಲೈಂಗಿಕ ಕಾರ್ಯಕರ್ತೆಯರನ್ನು ಗುರುತಿಸುವ ಪ್ರಕ್ರಿಯೆಯನ್ನು ಮುಂದುವರಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಸುಪ್ರೀಂ ಆದೇಶದಂತೆಯೇ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ-ಅಶೋಕ್

0

ಸುಪ್ರೀಂಕೋರ್ಟ್‌ ಆದೇಶದಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮಾಡಲಾಗುವುದು, ಈ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಕಂದಾಯ ಇಲಾಖೆ ಆರ್‌.ಅಶೋಕ್‌ ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಇಷ್ಟುದೊಡ್ಡದಾಗಿ ಬೆಳೆದಿದೆ. ಇದು ಕಾರ್ಯಕರ್ತರ ಪಕ್ಷ. ಮುಂಬರುವ ಎಲ್ಲಾ ಚುನಾವಣೆಗಳಿಗೆ ಪಕ್ಷ ಸಕಲ ಸಿದ್ಧತಾ ಕಾರ್ಯ ಆರಂಭಿಸಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂತಹ ಪ್ರಬಲ ನಾಯಕತ್ವನ್ನು ಹೊಂದಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವವನ್ನು ಹೊಂದಿದ್ದೇವೆ. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿ ನಡೆಸಲಿದ್ದೇವೆ ಎಂದರು.

ಬಿಬಿಎಂಪಿ ಚುನಾವಣೆಗೆ ಸರ್ಕಾರ ಎಲ್ಲ ಸಿದ್ಧತೆ ಮಾಡಿದೆ.
ಪಕ್ಷವು ಸಹ ಚುನಾವಣಾ ತಯಾರಿ ನಡೆಸಿ ಪೇಜ್‌ ಪ್ರಮುಖ್‌ ಕಾರ್ಯ ಮುಗಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಬಿಬಿಎಂಪಿ ಚುನಾವಣೆ ಎದುರಿಸುತ್ತೇವೆ. ಟಿಕೆಟ್‌ ಅಂತಿಮಗೊಳಿಸಲು ಸಮಿತಿ ಇದೆ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಸ್ಥಿತಿ ವಿಭಿನ್ನ. ಇನ್ನು ಪಕ್ಷದ ಅಧಿಕೃತ ನೇತಾರ ಯಾರು ಎನ್ನುವುದು ನಿರ್ಣಯವಾಗಿಲ್ಲ. ರಾಜ್ಯದಲ್ಲಿಯೂ ನಾಯಕತ್ವಕ್ಕಾಗಿ ನಿರಂತರ ಜಗಳ ಇದೆ. ಕಾಂಗ್ರೆಸ್‌ನವರಿಗೆ ಮುಂದಿನ ನಾಯಕ ಯಾರು ಎಂದರೆ ಉತ್ತರ ಇಲ್ಲ ಎಂದು ಲೇವಡಿ ಮಾಡಿದರು.

ಅಡ್ಡಹಾದಿಯಿಂದ ಬಿಜೆಪಿ ಅಧಿಕಾರಕ್ಕೆ ಪ್ರಯತ್ನ-ಕುಮಾರಸ್ವಾಮಿ

0

2006ರಲ್ಲಿ ಜೆಡಿಎಸ್ ದೆಸೆಯಿಂದ ಅಧಿಕಾರದ ರುಚಿ ಕಂಡ ಬಿಜೆಪಿಗೆ ಅಡ್ಡದಾರಿಯಲ್ಲಿ ಅಧಿಕಾರ ಹಿಡಿಯುವುದು ಚಾಳಿ ಆಗಿಬಿಟ್ಟಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು,ಬಿಜೆಪಿಯ ನಯವಂಚಕ & ಅನೈತಿಕ ರಾಜಕಾರಣದ ಮುಖವನ್ನು ಬೆಂಗಳೂರು ನಗರದ ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಮುನಿರಾಜು ಎಂಬ ಮಹಾಶಯರೇ ಬಹಿರಂಗಪಡಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರುವುದು ಅಡ್ಡದಾರಿಯಲ್ಲೇ ಎನ್ನುವುದು ಈಗ ರುಜುವಾತಾಗಿದೆ. 1998ರ ವಿಧಾನಸಭೆ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಹಾಲಿ ಕಂದಾಯ ಸಚಿವ ಆರ್.ಅಶೋಕ್ ಸ್ಪರ್ಧಿಸಿದಾಗ ಯಲಹಂಕದಿಂದ ಬಂದಿದ್ದ 1,000 ಕಾರ್ಯಕರ್ತರು ತಲಾ 5ರಿಂದ 10 ಕಳ್ಳವೋಟು ಹಾಕಿ ಅವರನ್ನು ಗೆಲ್ಲಿಸಿದ್ದರು!!’ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಆಪರೇಷನ್ ಕಮಲ ಎಂಬ ಅನೈತಿಕ ದಾರಿಯಲ್ಲಿ ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವದ ಅಡಿಪಾಯವನ್ನೇ ಬಿಜೆಪಿ ಅಭದ್ರಗೊಳಿಸಿದೆ ಎಂದು ಟೀಕಿಸಿದ್ದಾರೆ.

ಅನಿಲ ಸಿಲಿಂಡರ್ ಪೆಟ್ರೋಲ್ & ಡಿಸೆಲ್ ಬೆಲೆ ಇಳಿಕೆ

0

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ನಡುವೆ ಕೇಂದ್ರ ಸರ್ಕಾರ ಬಡವರಿಗೆ ಸಿಹಿ ಸುದ್ದಿ ನೀಡಿದೆ.

ಮಹತ್ವದ ಬೆಳವಣಿಗೆಯಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 8 ರೂ., ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 6 ರೂ. ಇಳಿಕೆ ಮಾಡಲಾಗಿದೆ.

ಪ್ರತಿ ಸಿಲಿಂಡರ್ ಖರೀದಿಗೆ 200 ರೂ. ಸಹಾಯಧನ ನೀಡಲಾಗುವುದು.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್‌ ಗೆ (12 ಸಿಲಿಂಡರ್‌ ಗಳವರೆಗೆ) 200 ರೂ.
ಸಬ್ಸಿಡಿ ನೀಡುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.

ಅಬಕಾರಿ ಸುಂಕ ಕಡಿತವಾದ ಹಿನ್ನೆಲೆಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 9.5 ರೂಪಾಯಿ ಇಳಿಕೆಯಾಗಿದೆ. ಇದರಿಂದ ಪ್ರತಿ ಲೀಟರ್‌ ಪೆಟ್ರೋಲ್‌ ದರ 9.5 ರೂ. ಹಾಗೂ ಡೀಸೆಲ್‌ ದರ 7 ರೂ.ಇಳಿಕೆಯಾಗಲಿದೆ.

2021-22 ನೇ ಸಾಲಿನ ಬೆಳೆವಿಮೆ ಹಣ ಇನ್ನೊಂದು ವಾರದಲ್ಲಿ ರೈತರಿಗೆ ತಲುಪಲಿದೆ

0

(2021-22ನೇ) ಸಾಲಿನ ಬೆಳೆ ವಿಮೆ ಹಣ ಇನ್ನೊಂದು ವಾರದಲ್ಲಿ ರೈತರ ಕೈ ಸೇರಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ತಿಳಿಸಿದರು.

ಹರಿಹರ ತಾಲೂಕಿನ ನಂದಿತಾವರೆ ಬಳಿಯ ಭಾಸ್ಕರರಾವ್‌ ಕ್ಯಾಂಪಿನಲ್ಲಿ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ರೈತರು ವಿವಿಧ ಬೆಳೆ ಬೆಳೆಯುವ ಮೂಲಕ ಸಮತೋಲನ ಕಾಪಾಡಬೇಕು. ಯಾವುದಾದರೊಂದು ಬೆಳೆಯ ಬೆಲೆ ಕೈಕೊಟ್ಟರೆ ಮತ್ತೊಂದು ಬೆಳೆ ಕೈಹಿಡಿಯುತ್ತದೆ. ಆದ್ದರಿಂದ ರೈತರು ಮಿಶ್ರಬೆಳೆ, ಬಹು ಬೆಳೆ ಬೆಳೆಯುವತ್ತ ಗಮನಹರಿಸಬೇಕು ಎಂದರು.

ಈಗಾಗಲೇ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಪ್ರಸಕ್ತ ವರ್ಷ ಈಗಷ್ಟೇ ಮುಂಗಾರು ಪ್ರಾರಂಭವಾಗಿದೆ.
ಕೆಲ ವ್ಯಾಪಾರಸ್ಥರು ದುರುದ್ದೇಶದಿಂದ ಅಕ್ರಮವಾಗಿ ಸಂಗ್ರಹ ಮಾಡಿಕೊಂಡು ಅದನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದಕ್ಕಾಗಿ ರಸಗೊಬ್ಬರ ಮತ್ತು ಬೀಜದ ಕೊರತೆಯಾಗುತ್ತದೆ ಎಂಬ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.

ರೈತರು ಇದನ್ನು ನಂಬಬಾರದು. ರಸಗೊಬ್ಬರ ಮತ್ತು ಬೀಜಕ್ಕೆ ಯಾವುದೇ ರೀತಿಯ ಕೊರತೆಯಿಲ್ಲ.
ಕೃತಕ ಗೊಬ್ಬರದ ಅಭಾವ ಉಂಟಾಗುವಂತೆ ಮಾಡುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ, ಕೃಷಿ ಅಧಿಕಾರಿ ಹಾಗೂ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ಬಾರಿ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್‌ ಮಾರ್ಗಸೂಚಿಗಿಂತ ಹೆಚ್ಚಿನ ಪರಿಹಾರ ನೀಡಲಾಗಿದೆ.
ಪ್ರಸ್ತುತ ವರ್ಷವೂ ಅಷ್ಟೇ ಪ್ರಮಾಣದಲ್ಲಿ ಪರಿಹಾರ ನೀಡಲಾಗುವುದು. ಭತ್ತದ ಬೆಳೆಗೆ ವಿಮಾ ಪರಿಹಾರ ವಿಷಯದಲ್ಲಿ ರೈತರು ಆತಂಕ ಪಡುವುದು ಬೇಡ. ಬಿರುಗಾಳಿಗೆ ಭತ್ತ ನೆಲಕ್ಕೆ ಬಿದ್ದಿರುವುದರಿಂದ ಅದು ಪ್ರಕೃತಿ ವಿಕೋಪ ಪರಿಹಾರದಡಿ ಬರುತ್ತದೆ. ಹಾಗಾಗಿ ಭತ್ತದ ಬೆಳೆಗೂ ಪರಿಹಾರ ಸಿಗಲಿದೆ.
ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೆ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ನಷ್ಟ ಅಂದಾಜು ಮಾಡುವುದು ಹಾಗೂ ಅವರಿಗೆ ಸೂಕ್ತ ಬೆಳೆ ಹಾನಿ ಪರಿಹಾರ ನೀಡುವುದರ ಕಡೆಗೆ ಗಮನ ಹರಿಸಬೇಕು ಎಂದರು.

ಮಾವಿನ ಸವಿ ಬೇಕೆ?ಜೂನ್ 20 ರಿಂದ ಬೆಂಗಳೂರಲ್ಲಿ ಮಾವಿನ ಮೇಳ

0

ಮಾವಿನಹಣ್ಣು ಅಂದ್ರೆ ಯಾರಿಗೆ ತಾನೆ ಇಷ್ಟ ಆಗಲ್ಲ ಹೇಳಿ… ಮಾವಿನ ಸೀಸನ್ ಬಂತೆಂದರೆ ಜನರು ಮಾವಿನಹಣ್ಣಿಗೆ ಫಿದಾ ಆಗಿ ಬಿಡುತ್ತಾರೆ.

ಹಣ್ಣುಗಳ ರಾಜ ಎಂದೇ ಪ್ರಖ್ಯಾತಿ ಪಡೆದಿರುವ ಮಾವಿನಹಣ್ಣು ಆದರೆ ಸೀಸನ್ನಲ್ಲಿ ಎಲ್ಲರ ಮನಗೆದ್ದು ಬಿಡುತ್ತೆ…

ಆಹಾ..! ಮಾವಿನ ಹಣ್ಣನ್ನ ನೆನ್ಸ್ಕೊಂಡ್ರೆ ಸಾಕು ಬಾಯಲ್ಲಿ ನೀರು ಬರತ್ತೆ … ಮಾವಿನಹಣ್ಣಿನಲ್ಲಿ ವಿವಿಧ ಬಗೆಗಳು ಇವೆ. ಸಿಹಿ ಮಾವು, ಹುಳಿ ಮಾವು ಅಂತ ಸಾಮಾನ್ಯವಾಗಿ ಗುರುತಿಸುತ್ತೇವೆ.

ಮಾವಿನ ಹಣ್ಣಿನ ಸೀಸನ್ ಸ್ಟಾರ್ಟ್ ಆಗುತ್ತಿದ್ದಂತೆ ಹಣ್ಣಿನ ಮಳಿಗೆಗಳಲ್ಲಿ ವ್ಯಾಪಾರ ಹೆಚ್ಚಾಗುತ್ತೆ. ಆ ಸಮಯದಲ್ಲಿ ಎಲ್ಲೆಲ್ಲೂ ಹಣ್ಣಿನ ಸುವಾಸನೆ ಬೀರುತ್ತಾ ಇರುತ್ತದೆ.

ಮಾವಿನ ಹಣ್ಣಿನ ಪ್ರಿಯರಿಗೆ ಒಂದು ಗುಡ್ ನ್ಯೂಸ್…!
ದೊಡ್ಡ ನಗರದಲ್ಲಿ ಮಾವಿನ ಹಣ್ಣಿನ ಸೀಸನ್ ಸ್ಟಾರ್ಟ್ ಆಗುತ್ತಿದ್ದಂತೆ ವಿವಿಧ ಮೇಳಗಳನ್ನು ಆಯೋಜಿಸಲಾಗುತ್ತದೆ. ಅದೇ ಥರ ಬೆಂಗಳೂರಿನಲ್ಲಿ ಮಾವಿನ ಹಣ್ಣಿನ ಮೇಳ ಆರಂಭ ಆಗ್ತಾ ಇದೆ. ಇದು ಸಾಮಾನ್ಯವಾದ ಮೇಳ ಅಲ್ಲ ಕಣ್ರೀ… ಈ ಮೇಳದಲ್ಲಿ ಮಾವಿನ ಹಣ್ಣಿನ ವಿವಿಧ ಬಗೆಯ ಖಾದ್ಯಗಳು ಮಾವಿನ ಹಣ್ಣಿನ ಪ್ರಿಯರಿಗೆ ದೊರೆಯುತ್ತದೆ. ಜೊತೆಗೆ ಅನೇಕ ಬಗೆಯ ಮಾವುಗಳನ್ನು ಪ್ರದರ್ಶನ ಕ್ಕೆ ಇಡಲಾಗುತ್ತದೆ. ಆಸಕ್ತರು ಇಲ್ಲಿ ಭಾಗವಾಗಿಸಬಹುದು.

ಇದು ಬೆಂಗಳೂರಿನಲ್ಲಿ ಮುಂದಿನ ತಿಂಗಳ ಜೂನ್ 20ರಂದು ಮೇಳ ಆರಂಭ ವಾಗಲಿದೆ.ಹಾಪ್ ಕಾಮ್ಸ್ ಸಂಸ್ಥೆ ಬೆಂಗಳೂರಿನ ನಾಗವಾರ ಜಂಕ್ಷನ್ ಬಳಿ ಇರುವ ಎಲಿಮೆಂಟ್ಸ್ ಮಾಲ್ ನಲ್ಲಿ ಈ ಮೇಳ ನಡೆಯಲಿದೆ.

ಈ ಮೇಳಕ್ಕೆ ಆಸಕ್ತರು ಭಾಗವಹಿಸಿ, ಮೇಳದ ಉಪಯೋಗವನ್ನು ಪಡೆದುಕೊಳ್ಳಿ.