Monday, March 2, 2026
Monday, March 2, 2026
Home Blog Page 1572

ಫೇಲ್ ಆದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ

0

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ಶೇ 85.63ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆ ಬರೆದಿದ್ದ 8.53 ಲಕ್ಷ ವಿದ್ಯಾರ್ಥಿಗಳ ಪೈಕಿ 7.38 ಲಕ್ಷ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಈ ಪೈಕಿ 145 ವಿದ್ಯಾರ್ಥಿಗಳು ಔಟ್​ ಆಫ್ ಅಂಕಗಳನ್ನು ಪಡೆದಿದ್ದಾರೆ.

ಫೇಲ್ ಆದ ವಿದ್ಯಾರ್ಥಿಗಳಿಗೆ ಮೇ 27ರಿಂದ ಜೂನ್ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಬಳಿಕ ಪೂರಕ ಪರೀಕ್ಷೆಯ ಫಲಿತಾಂಶ ಜೂನ್ 3ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಬಿ.ಸಿ ನಾಗೇಶ್​ ಅವರು,
2021-22ನೇ ಸಾಲಿನ 10ನೇ ತರಗತಿಯಲ್ಲಿ ಈ ಬಾರಿ ರಾಜ್ಯದಲ್ಲಿ 8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8,07,206 ವಿದ್ಯಾರ್ಥಿಗಳು ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ರಿಪೀಟರ್ಸ್​ ಸೇರಿದಂತೆ 8,53,436 ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 625ಕ್ಕೆ 625 ಅಂಕಗಳನ್ನು ಒಟ್ಟು 145 ಮಕ್ಕಳು ಪಡೆದಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶದ ವಿವರ ನೀಡಿದರು.

1462 ಸರ್ಕಾರಿ ಶಾಲೆಗಳಲ್ಲಿ ಪರೀಕ್ಷೆ ತೆಗೆದುಕೊಂಡ ಎಲ್ಲ ಮಕ್ಕಳೂ ಪಾಸಾಗಿದ್ದಾರೆ. 467 ಅನುದಾನಿತ ಶಾಲೆಗಳು ಮತ್ತು 1991 ಅನುದಾನ ರಹಿತ ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ ಬಂದಿದೆ. ಎರಡು ಸರ್ಕಾರಿ ಶಾಲೆಗಳು, ಮೂರು ಅನುದಾನಿತ ಮತ್ತು 15 ಅನುದಾನರಹಿತ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

ಎಸ್ ಎಸ್ ಎಲ್ ಸಿ ಟಾಪರ್ ಜೊತೆ ಶಿಕ್ಷಣ ಸಚಿವ ನಾಗೇಶ್ ಫೋನ್​ ಮಾಡಿ ಶುಭಾಶಯ ತಿಳಿಸಿದ್ದಾರೆ. 14 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ. ವಿದ್ಯಾರ್ಥಿ ಅಮಿತ್ ಹಾಗೂ ವಿದ್ಯಾರ್ಥಿನಿ ಭೂಮಿಕಾಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಫೋನ್ ಮಾಡಿ ಶುಭಾಶಯ ತಿಳಿಸಿದ್ದಾರೆ. ವಿದ್ಯಾರ್ಥಿ ಪೋಷಕರ ಜೊತೆ ಕೂಡ ಸಚಿವರು ಮಾತಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಪರೀಕ್ಷೆ ವೇಳಾಪಟ್ಟಿ

0

ಶಿವಮೊಗ್ಗ ಜಿಲ್ಲೆಯಲ್ಲಿ ಮೇ 21 ಮತ್ತು 22 ರಂದು ಜಿಲ್ಲೆಯಲ್ಲಿ ನಡೆಯಲಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ-2022 ರ ವೇಳಾಪಟ್ಟಿಯು ಈ ಕೆಳಕಂಡಂತೆ ಇದೆ.

ಮೇ 21 ರಂದು ಅಧಿವೇಶನ-1 ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ಪೇಪರ್-1 ಸಾಮಾನ್ಯ ಅಧ್ಯಯನ(ಬಹು ಆಯ್ಕೆ ಪ್ರಶ್ನೆಗಳು.ಅಧಿವೇಶನ-2 ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಪೇಪರ್-2 ಆಂಗ್ಲ ಭಾಷಾ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ (2.30 ರಿಂದ 3.30 ರವರೆಗೆ ಬಹು ಆಯ್ಕೆ ಮತ್ತು 3.30 ರಿಂದ 5.30 ರವರೆಗೆ ವಿವರಣಾತ್ಮಕ ಪರೀಕ್ಷೆ). ಮೇ 22 ರಂದು ಅಧಿವೇಶನ-3 ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಪೇಪರ್-2 ಗಣಿತ ಮತ್ತು ವಿಜ್ಞಾನ/ಜೀವ ವಿಜ್ಞಾನ/ಸಮಾಜ ಪಾಠಗಳು, ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ (10 ರಿಂದ 11 ರವರೆಗೆ ಬಹು ಆಯ್ಕೆ ಪರೀಕ್ಷೆ ಮತ್ತು 11 ರಿಂದ 01 ಗಂಟೆವರೆಗೆ ವಿವರಣಾತ್ಮಕ ಪರೀಕ್ಷೆ). ಅಧಿವೇಶನ-4 ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ಪೇಪರ್-3 (ವಿವರಣಾತ್ಮಕ ಪರೀಕ್ಷೆ) ಅರ್ಜಿ ಸಲ್ಲಿಸಿದ ಹುದ್ದೆಯ ಮಾಧ್ಯಮದ ಭಾಷಾ ಸಾಮರ್ಥ್ಯ ಪರೀಕ್ಷೆ ನಡೆಯಲಿದೆ.

ಅಭ್ಯರ್ಥಿಗಳು ಕೇಂದ್ರೀಕೃತ ದಾಖಲಾತಿ ಘಟಕದ ಅಂತರ್ಜಾಲ ತಾಣದಿಂದ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.

ಕಲಾವಿದರು,ಸಾಹಿತಿಗಳ ದತ್ತಾಂಶ ಸಂಗ್ರಹ ನೋಂದಾವಣೆ ದಿನಾಂಕ ವಿಸ್ತರಣೆ

0

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯು ರಾಜ್ಯಾದ್ಯಂತ ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಡಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಕಾರಗಳ ಕಲಾವಿದರು/ಚಿತ್ರ ಕಲಾವಿದರು/ಶಿಲ್ಪಕಲೆ/ಸಾಹಿತಿಗಳು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ತಮ್ಮ ಮಾಹಿತಿಯನ್ನು ನೋಂದಾಯಿಸಿಕೊಳ್ಳಲು
ದಿ: 31-05-2022 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ರಂಗಾಯಣದ ಆಡಳಿತಾಧಿಕಾರಿ ಶೈಲಜಾ.ಎ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತುಂಗಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ

0

ಭಾರಿ ಮಳೆ ಸುರಿದ ಪರಿಣಾಮ ತುಂಗಾ ಜಲಾಶಯ ಭರ್ತಿಯಾಗಿದೆ. 5 ಗೇಟುಗಳ ಮೂಲಕ ನೀರು ಹೊರಬಿಡಲಾಗುತ್ತಿದೆ.

ಜಲಾಶಯದ ಗರಿಷ್ಠ ಮಟ್ಟ 588.24 ಮಿಮೀ ಆಗಿದೆ. ಈಗಾಗಲೆ ಅಷ್ಟೆ ಪ್ರಮಾಣದ ನೀರಿನ ಸಂಗ್ರಹವಿತ್ತು. ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗಿದ್ದರಿಂದ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿತ್ತು.

ಗುರುವಾರ ಜಲಾಶಯದ ಐದು ಕ್ರಸ್ಟ್ ಗೇಟುಗಳನ್ನು ಮೇಲೆತ್ತಿ, ಹೊಳೆಗೆ ನೀರು ಹರಿಸಲಾಯಿತು. ಸದ್ಯ ಐದು ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಉಪ ವಿಭಾಗಾಧಿಕಾರಿ ಪ್ರಕಾಶ್ ಸೇರಿದಂತೆ ಹಲವು ಅಧಿಕಾರಿಗಳು ಜಲಾಶಯಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.

ಮಳೆಹಾನಿ,ಪ್ರವಾಹ ಮುಂಜಾಗ್ರತೆ ಬಗ್ಗೆ ತುರ್ತು ಸೂಚನೆ ನೀಡಿದ ಸಚಿವ ಅಶೋಕ್

0

ಕಳೆದ ಕೆಲ ದಿನಗಳಿಂದ ಬಿಡದೇ ಸುರಿಯುತ್ತಿರುವ ತೀವ್ರ ಮಳೆ ಹಿನ್ನೆಲೆಯಲ್ಲಿ ಹಲವೆಡೆ ರೆಡ್‌ ಅಲರ್ಟ್ ಘೋಷಣೆಯಾಗಿದೆ. ರಾಜ್ಯದ 8 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಿನ್ನೆ ಗುರುವಾರ ಕಂದಾಯ ಸಚಿವ ಆರ್‌. ಅಶೋಕ್‌ ಅವರು ಪೂರ್ವ ಸಿದ್ಧತೆಗಳ ಪರಿಶೀಲನಾ ಸಭೆ ನಡೆಸಿದ್ದಾರೆ. ಮುಂದಿನ 3-4 ತಿಂಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು.

ನೆರೆ ಉಂಟಾದ ಸ್ಥಳಗಳಿಗೆ ಖುದ್ದು ಜಿಲ್ಲಾಧಿಕಾರಿಗಳು ಭೇಟಿ ನೀಡಿ ಸಂಪೂರ್ಣ ಮನೆ ಹಾನಿ ಮತ್ತು ಪ್ರಾಣಹಾನಿ ಉಂಟಾದ ಪ್ರಕರಣಗಳಲ್ಲಿ 48 ಗಂಟೆಗಳಲ್ಲಿ ಪರಿಹಾರ ನೀಡಬೇಕು ಎಂದು ಕಂದಾಯ ಸಚಿವರು ಸೂಚಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯಕ್ಕೆ ಈಗಾಗಲೇ 4 ಎನ್‌ಡಿಆರ್‌ಎಫ್‌ ತಂಡಗಳು ಆಗಮಿಸಿವೆ. ಇವುಗಳನ್ನು ಬಳಸಿಕೊಂಡು ಎಲ್ಲೇ ಸಮಸ್ಯೆಯಾದರೂ ತಕ್ಷಣ ಜನರ ನೆರವಿಗೆ ಧಾವಿಸಬೇಕು. ಮುನ್ನೆಚ್ಚರಿಕಾ ಕ್ರಮಗಳಿಂದಾಗಿ ಸಂಭವನೀಯ ಹಾನಿಗಳನ್ನು ತಡೆಯಬೇಕು ಎಂದು ಸಲಹೆ ನೀಡಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಅವರು, ರೆಡ್‌ ಅಲರ್ಟ್ ಘೋಷಣೆಯಾಗಿರುವ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಕಾರಣಕ್ಕೆ ಹಾಸನ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬದಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದು ಪರಿಶೀಲನಾ ಸಭೆ ನಡೆಸುವಂತೆ ಮನವಿ ಮಾಡುತ್ತೇನೆ. ಜೊತೆಗೆ ಎಲ್ಲೆಲ್ಲಿ ಭೂಕುಸಿತ ಸಾಧ್ಯತೆ ಇದೆಯೋ ಅಂತಹ ಕಡೆ ಸಾರ್ವಜನಿಕರ ಮನವೊಲಿಸಿ ಸ್ಥಳಾಂತರ ಮಾಡಬೇಕು. ಇನ್ನು 3-4 ತಿಂಗಳು ಮಳೆಯಿಂದ ಸಮಸ್ಯೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಎಚ್ಚರ ವಹಿಸಬೇಕು. ಎಲ್ಲೇ ಭೂಕುಸಿತ, ನೆರೆ ಉಂಟಾದರೂ ಜಿಲ್ಲಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಅಲ್ಲಿ ತ್ವರಿತವಾಗಿ ಪರಿಹಾರ ಕಾರ್ಯ ಕೈಗೊಳ್ಳಲು ಸೂಚಿಸಬೇಕು. ಮನೆಹಾನಿ, ಪ್ರಾಣಹಾನಿ ಉಂಟಾದಾಗ 48 ಗಂಟೆಯಲ್ಲಿ ಪರಿಹಾರ ನೀಡಬೇಕು ಎಂದು ಕಂದಾಯ ಸಚಿವರು ತಿಳಿಸಿದ್ದಾರೆ.

ಏರುತ್ತಿರುವ ಕೆ ಆರ್ ಎಸ್ ಜಲಾಶಯ ನೀರಿನ ಮಟ್ಟ

0

ಕಳೆದ ಕೆಲ ದಿನಗಳಿಂದ ಮಳೆಯಿಂದಾಗಿ ಅವಾಂತರ ಸೃಷ್ಠಿ ಆಗಿದೆ. ನದಿಗಳಲ್ಲಿ ನೀರು ತುಂಬಿ ಹರೆಯುತ್ತಿದೆ. ಕೆಆರ್‌ಎಸ್‌ ನ ನೀರಿನ ಮಟ್ಟ ಹೆಚ್ಚಳವಾಗಿದೆ.

ಒಳ ಹರಿವಿನ ಪ್ರಮಾಣ ಕೂಡ 15000 ಕ್ಯುಸೆಕ್ ದಾಟಿದೆ. ಇಂದಿನ ಜಲಾಶಯದ ಮಟ್ಟ 101.72 ಅಡಿ ಇದೆ. ಒಳಹರಿವು 15885 ಕ್ಯುಸೆಕ್ ಮತ್ತು ಹೊರ ಹರಿವು 3524 ಕ್ಯುಸೆಕ್ ಇದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗ ಮಂಡ್ಯ ಸಮೀಪದ ಚಿಕ್ಕ ಮಂಡ್ಯ ಕೆರೆ ಅಂಗಳ ಜಲಾವೃತವಾಗಿದೆ. ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ನಿವಾಸಿಗಳು ರಾತ್ರಿಯೆಲ್ಲ ತೊಂದರೆ ಅನುಭವಿಸುವಂತಾಗಿದೆ. ನಗರಸಭೆ ಅಧಿಕಾರಿಗಳು ಯಾವುದೇ ರೀತಿ ಸ್ಪಂದಿಸದೇ ಇರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕ ಮಂಡ್ಯ ಮಾತ್ರವಲ್ಲದೇ ನಗರದ ತಗ್ಗು ಪ್ರದೇಶಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ

0

ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪರಿಚಿತ ಇಂದು ಮುಂಜಾನೆ ಹುಸಿ ಬಾಂಬ್ ಕರೆ ಬಂದಿದೆ. ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು.

ಇಂದು ಬೆಳ್ಳಿಗೆ 3.30 ರ ಸಮಯಕ್ಕೆ ಅಪರಿಚಿತ ವ್ಯಕ್ತಿ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಬಾಂಬ್ ಇಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಏರ್ಪೋರ್ಟ್ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ಎಲ್ಲೆಡೆ ಪರಿಶೀಲನೆ ನಡೆಸಿದರು. ಡಾಗ್ ಸ್ಕ್ವಾಡ್, ಸಿಎಸ್ ಎಫ್, ಬಿಎಸ್ ಎಫ್ ತಂಡದವರು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದರು.

ಏರ್‌ಲೈನ್ ಗೇಟ್‌ಗಳು ಸೇರಿದಂತೆ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ಸುಮಾರು 2 ಗಂಟೆಗಳಿಗೂ ಹೆಚ್ಚು ಕಾಲ ತಪಾಸಣೆ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ನಂತರ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ಬಂದಿದೆ.

ರಾಜ್ಯ ರಾಜಕಾರಣಕ್ಕೆ ಮರು ಪ್ರವೇಶವಿಲ್ಲ- ಕರಂದ್ಲಾಜೆ

0

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತೆ ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎಂಬ ಸುದ್ದಿ ಕೆಲ ದಿನಗಳಿಂದ ಕೇಳಿ ಬರುತ್ತಿದೆ. ಈ ವಿಷಯದ ಬಗ್ಗೆ ಸಚಿವೆ ಸ್ಪಷ್ಟನೆ ನೀಡಿದ್ದಾರೆ. ಆ ಸುದ್ದಿಗಳೆಲ್ಲಾ ಊಹಾಪೋಹ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ಈಗಾಗಲೇ ನಮ್ಮ ಕೇಂದ್ರದ ನಾಯಕರು ಸಚಿವೆಯನ್ನಾಗಿ ಮಾಡಿದ್ದಾರೆ.

ಇಂತಹ ಒಳ್ಳೆಯ ಅವಕಾಶ ಸಿಕ್ಕಿರುವಂತಹ ಈ ಸಂದರ್ಭದಲ್ಲಿ ನಾನು ಬೇರೆ ಯಾವ ಯೋಚನೆಯನ್ನೂ ಮಾಡಿಲ್ಲ. ಏನೇ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದರೂ, ಖಂಡಿತವಾಗಿಯೂ ನನಗೆ ಆ ಬಗ್ಗೆ ಮಾಹಿತಿಯಿಲ್ಲ ಎಂದು ಶೋಭಾ ಕರಂದ್ಲಾಜೆ ಹೇಳುವ ಮೂಲಕ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ವಿಚಾರದ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದಾರೆ.

ಚುನಾವಣೆಯ ವೇಳೆಯಲ್ಲಿ ಕಾಂಗ್ರೆಸ್ಸಿನವರಿಗೆ ಆತಂಕ ಕಾಡಲಾರಂಭಿಸಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ನಡುವೆ ಪೈಪೋಟಿ ನಡೆಯುತ್ತಿದೆ. ಈ ಕಾರಣದಿಂದಾಗಿ ಇಬ್ಬರೂ ನಾಯಕರು ಭಯದಿಂದ ಬಾಯಿಗೆ ಬಂದಂತೆ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಶೋಭಾ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸಿದ್ದರಾಮಯ್ಯ ಅವರಿಗೆ ರಾಜ್ಯವಾಳಲು 5 ವರ್ಷಗಳ ಅವಕಾಶವನ್ನು ಕೊಟ್ಟಿತ್ತು. ಯಾವುದೇ ಗೊಂದಲ ಅಡೆತಡೆಗಳು ಅವರಿಗೆ ಇರಲಿಲ್ಲ. ಸ್ಥಿರ ಸರ್ಕಾರವನ್ನು ಅವರು ನೀಡಿದ್ದರು. ಅಂತಹ ಸಮಯದಲ್ಲೂ ಅವರು ಯಾವುದೇ ನಿರ್ಧಾರವನ್ನು ಮಾಡಿರಲಿಲ್ಲ. ಟಿಪ್ಪು ಜಯಂತಿ ಸೇರಿದಂತೆ ಬರೀ ಗೊಂದಲದ ನಿರ್ಧಾರವನ್ನು ಅವರು ಮಾಡಿದ್ದರು ಎಂದು ಶೋಭಾ ಕರಂದ್ಲಾಜೆ ಅವರು ಆರೋಪಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಸಮೀಕ್ಷಿಸಿದ ಕೇಂದ್ರ ತಂಡ

0

ಶಿವಮೊಗ್ಗದ ನಗರದ ಹೊರವಲಯದ ಸೊಗಾನೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ.
ಈ ವರ್ಷದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಗುರುವಾರ ವಿಮಾನ ನಿಲ್ದಾಣ ಕಾಮಗಾರಿ ಹಾಗೂ ಇನ್ನಿತರ ವಿಷಯವನ್ನು ತಿಳಿಯಲು ಕೇಂದ್ರದ ಅಧಿಕಾರಿಗಳ ತಂಡವು ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆಯಿತು. ಈ ಕುರಿತು ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಮಾಹಿತಿ ನೀಡಿದರು.

ವಿಮಾನ ನಿಲ್ದಾಣ ನಿರ್ಮಾಣ ಸ್ಥಳಕ್ಕೆ ಕೇಂದ್ರ ವಿಮಾನಯಾನ ಖಾತೆ ತಂಡವನ್ನು ಕಳುಹಿಸಿಕೊಡಲು ಮನವಿ ಮಾಡಿದ್ದರು.

ವಿಮಾನ ನಿಲ್ದಾಣ ಪ್ರಾಧಿಕಾರದ ಡಿಜಿಎಂ ರವೀಂದ್ರನಾಥ್ ನೇತೃತ್ವದ ತಂಡದಲ್ಲಿ ಅಧಿಕಾರಿಗಳಾದ ಬಾಲಾಜಿ, ಫೇರೋಜ್, ದೊರೈ ರಾಜು, ಅಂಟೋನಿ, ವೆಂಕಟಾಚಲಂ ಇದ್ದರು.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂಬುದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕನಸು. ಅವರು ಮುಖ್ಯಮಂತ್ರಿಯಾಗಿದ್ದಾಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಇದ್ದ ಅಡೆ-ತಡೆ ನಿವಾರಿಸಿ, ಕಾಮಗಾರಿಗೆ ಶಂಕು ಸ್ಥಾಪನೆ ಮಾಡಿದ್ದರು.

ಮೊದಲು 2500 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್‌ ವೇ ಉದ್ದವನ್ನು 3200 ಮೀಟರ್‌ಗೆ ಹೆಚ್ಚಿಸಲಾಯಿತು.
ವಿಮಾನ ನಿಲ್ದಾಣವನ್ನು ಉಡಾನ್ ಯೋಜನೆ ವ್ಯಾಪ್ತಿಗೆ ಸೇರಿಸಲು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಶಿವಮೊಗ್ಗ ಮತ್ತು ಅಕ್ಕಪಕ್ಕದ ಜಿಲ್ಲೆಗಳ ಕೈಗಾರಿಕಾ ಅಭಿವೃದ್ಧಿ ಆಗುವ ನಿರೀಕ್ಷೆ ಇದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಮುಖ್ಯ ಇಂಜಿನಿಯರ್ ಕಾಂತರಾಜ್, ಎಕ್ಸಿಕ್ಯೂಟಿವ್ ಇಂಜಿನಿಯರ್ ಸಂಪತ್, ಎಇಇ ಕಿರಣ್ ಮುಂತಾದವರು ಕೇಂದ್ರದ ಅಧಿಕಾರಿಗಳ ತಂಡಕ್ಕೆ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು.

ಮಳೆಹಾನಿ ಬಗ್ಗೆ ಸಾರ್ವಜನಿಕ ಕುಂದು ಕೊರತೆಗೆ ಕಂಟ್ರೋಲ್ ರೂಂ ಸ್ಥಾಪನೆ

0

ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿರುವುದರಿಂದ ಹಾಗೂ ಮಳೆಯಿಂದ ತುಂಗಾ ನದಿಯಲ್ಲಿ ಹೆಚ್ಚಿನ ನೀರು ಬಂದು ಪ್ರವಾಹದ ಭೀತಿ ಇರುವ ಹಿನ್ನೆಲೆಯಲ್ಲಿ ಆಗುವ ಹಾನಿಯ ಬಗ್ಗೆ ಸಾರ್ವಜನಿಕರಿಂದ ಹಾಗೂ ಸರ್ಕಾರದಿಂದ ಬರುವ ದೂರವಾಣಿ ಕರೆಗಳನ್ನು ಸ್ವೀಕರಿಸಿ ಅಧಿಕಾರಿಗಳಿಗೆ ತಿಳಿಸಲು ಕಂಟ್ರೋಲ್ ರೂಂನ್ನು ಸ್ಥಾಪಿಸಲಾಗಿದೆ.

ಸಾರ್ವಜನಿಕರು ಜಿಲ್ಲೆ ಹಾಗೂ ಆಯಾ ತಾಲೂಕುಗಳಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಂಗಳ ಪ್ರಯೋಜನ ಪಡೆಯಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ –08182-221010, 1022 ,

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ 08182-261413, 100,

ಶಿವಮೊಗ್ಗ ತಹಸೀಲ್ದಾರ್ 08182-279311ಭದ್ರಾವತಿ –
08282-263466

ತೀರ್ಥಹಳ್ಳಿ –
08181-228239

ಸಾಗರ –
08183-226074,

ಶಿಕಾರಿಪುರ –
08187-222239

ಸೊರಬ 08184-272241/8904666991,

ಹೊಸನಗರ –
08185-221235 ಗಳನ್ನು ಸಂಪರ್ಕಿಸುವುದು.