Monday, March 2, 2026
Monday, March 2, 2026
Home Blog Page 1576

ಮಳೆಗಾಲ ಎದುರಿಸಲು ಸನ್ನದ್ಧರಾಗಿ-ಡಾ.ಸೆಲ್ವಮಣಿ

0

ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಸಂಭವಿಸಬಹುದಾದ ಅಪಾಯಗಳನ್ನು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ಮುಂಗಾರು ಎದುರಿಸಲು ಕೈಗೊಳ್ಳುವ ಕ್ರಮಗಳ ಕುರಿತು ಕಾರ್ಯ ಯೋಜನೆಯನ್ನು ವಾರದ ಒಳಗಾಗಿ ಸಲ್ಲಿಸುವಂತೆ ಅವರು ತಿಳಿಸಿದರು.

ನಗರ ಪ್ರದೇಶದಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾಗಬಹುದಾದ ಸೂಕ್ಷ್ಮ ಪ್ರದೇಶಗಳನ್ನು ಮೊದಲೇ ಗುರುತಿಸಿ ಸೂಕ್ತ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯ ಬಿದ್ದರೆ ಕಾಳಜಿ ಕೇಂದ್ರ ತೆರೆಯಬಹುದಾದ ಸ್ಥಳಗಳನ್ನು ಗುರುತಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಅತಿವೃಷ್ಟಿ ಸಂದರ್ಭದಲ್ಲಿ ಸಾರ್ವಜನಿಕರು ನೆರವಿಗಾಗಿ ಸಂಪರ್ಕ ಮಾಡಲು 24×7 ಸಹಾಯಕೇಂದ್ರಗಳನ್ನು ತೆರೆಯಲು ಸಿದ್ಧತೆ ಮಾಡಬೇಕು. ಪರಿಹಾರ ಕಾರ್ಯಗಳನ್ನು ನಡೆಸಲು ಕಾರ್ಯಪಡೆಯನ್ನು ರಚಿಸಿ ಅವರಿಗೆ ಸೂಕ್ತ ತರಬೇತಿಯನ್ನು ನೀಡಬೇಕು. ಕಾರ್ಯಪಡೆಯಲ್ಲಿ ಪೊಲೀಸ್, ಕಂದಾಯ, ಆರೋಗ್ಯ ಸೇರಿದಂತೆ ಎಲ್ಲಾ ಪ್ರಮುಖ ಇಲಾಖೆಗಳ ಪ್ರತಿನಿಧಿಗಳು ಇರಬೇಕು ಎಂದು ಹೇಳಿದರು.

ಜಲಾಶಯಗಳ ನೀರಿನ ಮಟ್ಟದ ಮಾಹಿತಿಯನ್ನು ನಿರಂತರವಾಗಿ ಅಧಿಕಾರಿಗಳ ನಡುವೆ ಹಂಚಿಕೊಳ್ಳಬೇಕು. ಜಲಾಶಯದಿಂದ ನೀರನ್ನು ಬಿಡುಗಡೆ ಮಾಡುವ ಸಾಕಷ್ಟು ಪೂರ್ವದಲ್ಲಿ ಮಾಹಿತಿಯನ್ನು ಒದಗಿಸಬೇಕು. ನೀರು ನಿಂತು ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಸದಾ ಸನ್ನದ್ಧವಾಗಿರಬೇಕು. ಎಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತದ ಔಷಧ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಗಾಳಿ ಮಳೆಯಿಂದ ಮರ, ವಿದ್ಯುತ್ ಕಂಬಗಳು ಬಿದ್ದ ತಕ್ಷಣ ಅವುಗಳನ್ನು ತೆರವುಗೊಳಿಸಲು ಎಲ್ಲಾ ತಾಲೂಕುಗಳಲ್ಲಿ ತಂಡಗಳನ್ನು ರಚಿಸಬೇಕು. ಜೆಸಿಬಿ ಸೇರಿದಂತೆ ಅಗತ್ಯ ಸೌಲಭ್ಯಗಳು ಎಲ್ಲಾ ಕಡೆ ಸಿದ್ಧವಿರಬೇಕು. ಮಳೆಯಿಂದಾಗಿ ಗುಡ್ಡ ಕುಸಿಯಬಹುದಾದ ಸ್ಥಳಗಳು, ಘಾಟಿ ಪ್ರದೇಶದಲ್ಲಿ ರಸ್ತೆ ಕುಸಿಯಬಹುದಾದ ಸ್ಥಳಗಳನ್ನು ಈಗಲೇ ಗುರುತಿಸಬೇಕು. ಅಂತಹ ಸಂದರ್ಭದಲ್ಲಿ ತಕ್ಷಣ ಸಂಚಾರ ವ್ಯವಸ್ಥೆಯನ್ನು ಪುನಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ವಿದ್ಯುತ್ ಕಂಬಗಳು, ಟ್ರಾನ್ಸ್‍ಫಾರ್ಮರ್‍ಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ವಿದ್ಯುತ್ ಸಂಪರ್ಕವನ್ನು ಆದಷ್ಟು ಬೇಗನೇ ಪುನರ್ ಒದಗಿಸಲು ತಂಡಗಳನ್ನು ರಚಿಸಬೇಕು. ಪ್ರಸ್ತುತ 3ಬೋಟ್‍ಗಳು ಜಿಲ್ಲಾಡಳಿತದಲ್ಲಿ ಲಭ್ಯವಿದ್ದು, ಇನ್ನಷ್ಟು ಅಗತ್ಯ ಬೋಟ್‍ಗಳನ್ನು ಪಡೆಯಲು ಕ್ರಮ ಕೈಗೊಳ್ಳಲಾಗುವುದು. ನಗರ ಪ್ರದೇಶದಲ್ಲಿ ಹೂಳೆತ್ತುವ ಕಾರ್ಯವನ್ನು ಮಳೆಗಾಲಕ್ಕಿಂತ ಮೊದಲೇ ಪೂರ್ಣಗೊಳಿಸಬೇಕು. ಜಾನುವಾರು, ಮಾನವ ಪ್ರಾಣ ಹಾನಿ ಸಂಭವಿಸಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ 24ಗಂಟೆ ಒಳಗಾಗಿ ಪರಿಹಾರದ ಮೊತ್ತವನ್ನು ನೀಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಅಮೃತಭಾರತಿಗೆ ಕನ್ನಡ ಆರತಿ ಕಾರ್ಯಕ್ರಮ, ಜಿಲ್ಲೆಯಲ್ಲಿ ಸಕಲಸಿದ್ಧತೆ- ಡಾ.ಸೆಲ್ವಮಣಿ

0

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ ಏರ್ಪಡಿಸಲಾಗಿರುವ ‘ಅಮೃತ ಭಾರತಿಗೆ ಕನ್ನಡ ಆರತಿ’ ಕಾರ್ಯಕ್ರಮಕ್ಕೆ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಈಸೂರು ಹಾಗೂ ಹೊಸನಗರ ತಾಲ್ಲೂಕಿನ ನಗರ ಸ್ಥಳಗಳು ಆಯ್ಕೆಯಾಗಿದ್ದು ಇಲ್ಲಿ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ನಿರ್ವಹಿಸಲು ಸಂಬಂಧಿಸಿದ ಅಧಿಕಾರಿಗಳು ಸಲಕ ಸಿದ್ದತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಭಾರತಿಗೆ ಕನ್ನಡ ಆರತಿ ಕಾರ್ಯಕ್ರಮ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವೀರ ಸಾವರ್ಕರ್ ಜಯಂತಿ- ಮೇ 28 ರಂದು ‘ಅಮೃತ ಭಾರತಿಗೆ ಕನ್ನಡ ಆರತಿ ಕಾರ್ಯಕ್ರಮ’ವು ಏಕಕಾಲದಲ್ಲಿ ಈಸೂರು ಮತ್ತು ನಗರದಲ್ಲಿ ನಡೆಯಲಿದ್ದು, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯೊಂದಿಗೆ ಎರಡೂ ತಾಲ್ಲೂಕುಗಳ ತಹಶೀಲ್ದಾರರು, ಇಓ ಗಳು ಮತ್ತು ಗ್ರಾ.ಪಂ ಯವರು ಸಮನ್ವಯ ಸಾಧಿಸಿ ಕಾರ್ಯಕ್ರಮದ ಸಿದ್ದತೆ ಮಾಡಿಕೊಳ್ಳಬೇಕು ಎಂದರು.

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಿಂದ ಮೆರವಣಿಗೆಗೆ ಅಗತ್ಯವಾದ ಕಲಾತಂಡಗಳನ್ನು ಕಳುಹಿಸಲಾಗುವುದು. ಎರಡೂ ಸ್ಥಳಗಳಲ್ಲಿ ಮೆರವಣಿಗೆಗೆ ಸೂಕ್ತ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ನಿಗದಿಯಂತೆ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು. 2 ರಿಂದ 3 ಗಂಟೆಯ ಕಾರ್ಯಕ್ರಮ ನಿಗದಿಪಡಿಸಿಕೊಂಡು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಅಮೃತ ಮಹೋತ್ಸವ ಕುರಿತಾದ ಉಪನ್ಯಾಸ ಕಾರ್ಯಕ್ರಮಕ್ಕೆ ಸೂಕ್ತ ಉಪನ್ಯಾಸಕರನ್ನು ಆಯ್ಕೆ ಮಾಡಬೇಕು. ಕಾರ್ಯಕ್ರಮದ ಸಮಯ, ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ, ವೇದಿಕೆ ಸೇರಿದಂತೆ ಇತರೆ ಎಲ್ಲ ಪೂರಕ ಸಿದ್ದತೆಗಳ ಕುರಿತು ತಾಲ್ಲೂಕು ಆಡಳಿತದ ನೇತೃತ್ವದಲ್ಲಿ ಹಾಗೂ ಗ್ರಾ.ಪಂ ಮಟ್ಟದಲ್ಲಿ ಪ್ರತ್ಯೇಕ ಸಭೆಯನ್ನು ಕರೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದರು.

ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತಲಿನ ಎಲ್ಲ ಸಂಘ-ಸಂಸ್ಥೆಗಳು, ಎನ್‍ಎಸ್‍ಎಸ್, ಎನ್‍ಸಿಸಿ ತಂಡಗಳು, ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿಗಳನ್ನು ಒಳಗೊಂಡು ಈ ಕಾರ್ಯಕ್ರಮ ನಡೆಸಬೇಕು. ಹಾಗೂ ಸ್ಥಳೀಯವಾಗಿ ಸ್ವಾತಂತ್ರ್ಯ ಹೋರಾಟಗಾರರು, ದೇಶ ರಕ್ಷಣೆಯಲ್ಲಿ ಪ್ರಾಣತೆತ್ತ ಕುಟುಂಬ ಇದ್ದಲ್ಲಿ ಅವರನ್ನು ಕರೆಯಿಸಿ ಸನ್ಮಾನ ಮಾಡಬೇಕೆಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಶಿಕಾರಿಪುರ ಮತ್ತು ಹೊಸನಗರ ತಾಲ್ಲೂಕಿನ ತಹಶೀಲ್ದಾರರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್, ಇತರೆ ಅಧಿಕಾರಿಗಳು ಇದ್ದರು.

ಪಿಯು ಪರೀಕ್ಷಾ ವಿದ್ಯಾರ್ಥಿಗಳಿಗೆ ಸರ್ಕಾರದ ಮಾರ್ಗಸೂಚಿ

0

ಹಿಜಾಬ್‌ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯು ಈ ಬಾರಿ ವಿದ್ಯಾರ್ಥಿಗಳು ಕಾಲೇಜು ಅಭಿವೃದ್ಧಿ ಸಮಿತಿ ನಿಗದಿಪಡಿಸಿರುವ ಸಮವಸ್ತ್ರ ಧರಿಸಬೇಕು. ಒಂದು ವೇಳೆ ನಿಗದಿಪಡಿಸಿಲ್ಲವಾದರೆ, ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡುವ ಸಮವಸ್ತ್ರ ಧರಿಸುವಂತೆ ಮಾರ್ಗಸೂಚಿ ಪ್ರಕಟಿಸಿದೆ.

ಜೂ. 1ರಿಂದ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಪ್ರವೇಶ ಪಡೆಯಲು ಜೂ. 15 ಕೊನೆಯ ದಿನವಾಗಿದೆ. ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಜೂ. 9ರಿಂದ ಆರಂಭವಾಗಲಿದೆ. ಅ. 1ರಿಂದ 12ರ ವರೆಗೆ ಮಧ್ಯಾಂತರ ರಜೆ ಇರಲಿದೆ. 2023 ಮಾ. 31 ಕೊನೆಯ ಕಾರ್ಯನಿರತ ದಿನವಾಗಿದೆ. ಎ. 1ರಿಂದ ಬೇಸಗೆ ರಜೆ ಆರಂಭವಾಗಲಿದೆ.
ದಂಡ ಶುಲ್ಕವಿಲ್ಲದೆ ದಾಖಲಾತಿ ಪಡೆಯಲು ಜೂ. 15 ಕೊನೆಯ ದಿನವಾಗಿದೆ. ವಿವಿಧ ಮಂಡಳಿಗಳಿಂದ ಪಾಸ್‌ ಆಗಿರುವ ಬಗ್ಗೆ ತಾತ್ಕಾಲಿಕ ಆರ್ಹತಾ ಪತ್ರದ ಆಧಾರದ ಮೇಲೆ ಪ್ರವೇಶ ನೀಡಬಾರದು.
ಹಾಗಾದರೆ ಪ್ರಾಂಶುಪಾಲರನ್ನೇ ನೇರ ಹೊಣೆಗಾರರಾಗಿ ಮಾಡಲಾಗುವುದು ಎಂದು ಎಚ್ಚರಿಕೆಯನ್ನೂ ಇಲಾಖೆ ನೀಡಿದೆ.

ಹಿಜಾಬ್‌ ವಿವಾದದಲ್ಲಿ ಹೈಕೋರ್ಟ್‌ ನೀಡಿರುವ ತೀರ್ಪಿನ ಅನ್ವಯ ಸಮವಸ್ತ್ರಗಳನ್ನು ಧರಿಸುವಂತೆ ಸೂಚಿಸಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯು 2022-23ನೇ ಶೈಕ್ಷಣಿಕ ವರ್ಷದ ದಾಖಲಾತಿ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮೇ 20ರಿಂದಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ.

ಕಾರ್ತಿ ಚಿದಂಬರಂ ವಿರುದ್ಧ ಹೊಸ ಕೇಸು ದಾಖಲಿಸಿದ ಸಿಬಿಐ

0

ಕೇಂದ್ರೀಯ ತನಿಖಾ ದಳ ಅಧಿಕಾರಿಗಳು ದೆಹಲಿ, ಮುಂಬೈ ಚೆನೈ ಮತ್ತು ತಮಿಳುನಾಡಿನ ಶಿವಗಂಗೈನಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಗೆ ಸೇರಿದ ಅನೇಕ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, 2010ರಿಂದ 2014ರ ನಡುವೆ ನಡೆದ ವಿದೇಶಿ ಹಣ ರವಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಹೊಸ ಕೇಸು ದಾಖಲಿಸಿಕೊಂಡಿದೆ.

ಪುತ್ರ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನಗರಗಳಾದ್ಯಂತ ಮಾಜಿ ಸಚಿವ
ಪಿ. ಚಿದಂಬರಂ ಅವರಿಗೆ ಸೇರಿದ ಸುಮಾರು ಏಳು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮುಕ್ತ ಮಾರುಕಟ್ಟೆ ಮೂಲಕ ಡಾಲರ್ ಸಂಗ್ರಹದತ್ತ ಶ್ರೀಲಂಕಾ

0

ಪ್ರಸ್ತುತ ಶ್ರೀಲಂಕಾದ ಆರ್ಥಿಕತೆಯ ಸ್ಥಿತಿ ಅನಿಶ್ಚಿತವಾಗಿದೆ. ಮುಕ್ತ ಮಾರುಕಟ್ಟೆಯ ಮೂಲಕ ಡಾಲರ್​ ಸಂಗ್ರಹಿಸಲು ಯತ್ನಿಸುತ್ತಿದ್ದೇವೆ ಎಂದು ಶ್ರೀಲಂಕಾದ ನೂತನ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು,ಇನ್ನು ಕಳೆದ ಮಾರ್ಚ್​ಗೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ವಿಮಾನಯಾನ ಸಂಸ್ಥೆಯು 45 ಶತಕೋಟಿ ಶ್ರೀಲಂಕಾ ರೂಪಾಯಿಗಳಷ್ಟು ನಷ್ಟ ಅನುಭವಿಸಿದೆ. ಒಮ್ಮೆಯೂ ವಿಮಾನದಲ್ಲಿ ಹೆಜ್ಜೆ ಇರಿಸದ ದೇಶದ ಬಡ ಜನರು ಈ ನಷ್ಟ ಭರಿಸಬೇಕು ಎನ್ನುವುದರಲ್ಲಿ ಯಾವ ಅರ್ಥವೂ ಇಲ್ಲ. ಹೀಗಾಗಿ ಸಂಸ್ಥೆಯ ಖಾಸಗೀಕರಣದ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳ ಮೂರು ಹಡಗುಗಳನ್ನು ತರಿಸಲು ಮುಕ್ತ ಮಾರುಕಟ್ಟೆಯ ಮೂಲಕ ಡಾಲರ್​ ಸಂಗ್ರಹಿಸಲು ಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ದೇಶದ ಜನರಿಗೆ ಮಾಹಿತಿ ನೀಡಿರುವ ಅವರು, ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗದೇ, ಹೊಸದಾಗಿ ನಗದು ಮುದ್ರಿಸಲು ನಿರ್ಧರಿಸಿದೆ.
ಇದರ ಜೊತೆಗೆ ಸರ್ಕಾರಿ ಸ್ವಾಮ್ಯದಲ್ಲಿರುವ ವೈಮಾನಿಕ ಸಂಸ್ಥೆಯನ್ನು ಮಾರಾಟ ಮಾಡುವ ಪ್ರಸ್ತಾವವನ್ನೂ ಗಂಭೀರವಾಗಿ ಪರಿಗಣಿಸಿದೆ ಎಂದರು.

ಇನ್ನು ಕಳೆದ ಮಾರ್ಚ್​ಗೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ವಿಮಾನಯಾನ ಸಂಸ್ಥೆಯು 45 ಶತಕೋಟಿ ಶ್ರೀಲಂಕಾ ರೂಪಾಯಿಗಳಷ್ಟು ನಷ್ಟ ಅನುಭವಿಸಿದೆ. ಒಮ್ಮೆಯೂ ವಿಮಾನದಲ್ಲಿ ಹೆಜ್ಜೆ ಇರಿಸದ ದೇಶದ ಬಡ ಜನರು ಈ ನಷ್ಟ ಭರಿಸಬೇಕು ಎನ್ನುವುದರಲ್ಲಿ ಯಾವ ಅರ್ಥವೂ ಇಲ್ಲ. ಹೀಗಾಗಿ ಸಂಸ್ಥೆಯ ಖಾಸಗೀಕರಣದ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳ ಮೂರು ಹಡಗುಗಳನ್ನು ತರಿಸಲು ಮುಕ್ತ ಮಾರುಕಟ್ಟೆಯ ಮೂಲಕ ಡಾಲರ್​ ಸಂಗ್ರಹಿಸಲು ಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಚೀನಾ ಬೋಯಿಂಗ್ ವಿಮಾನವನ್ನ ಉದ್ದೇಶಪೂರ್ವಕ ಪತನಗೊಳಿಸಲಾಗಿದೆ

0

ಮಾರ್ಚ್​ ತಿಂಗಳಿನಲ್ಲಿ ಚೀನಾದಲ್ಲಿ ದುರಂತಯೊಂದು ಸಂಭವಿಸಿತ್ತು. ಸಿಬ್ಬಂದಿ ಒಳಗೊಂಡಂತೆ 132 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ದಕ್ಷಿಣ ಚೀನಾದಲ್ಲಿ ಪತನಗೊಂಡು ಎಲ್ಲರು ಸಾವನ್ನಪ್ಪಿದ್ದರು.

ಆದರೆ, ಈಗ ಈ ಘಟನೆಯ ಬಗ್ಗೆ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಅದೇನು ಅಂದರೆ, ಈ ಘಟನೆ ಉದ್ದೇಶಪೂರ್ವಕವಾಗಿಯೇ ನಡೆದ ದುಷ್ಕೃತ್ಯ ಎಂದು ತಿಳಿದುಬಂದಿದೆ.

ಪತನವಾದ ವಿಮಾನದಲ್ಲಿ ದೊರೆತ ಬ್ಲಾಕ್​ ಬಾಕ್ಸ್​ನಿಂದ ಸಂಗ್ರಹಿಸಲಾದ ಡೇಟಾ ಪ್ರಕಾರ, ಕಾಕ್​ಪಿಟ್​ನಲ್ಲಿ ಒಬ್ಬರು ಉದ್ದೇಶಪೂರ್ವಕವಾಗಿಯೇ ವಿಮಾನವನ್ನು ಪತನ ಮಾಡಿರುವುದು ಬೆಳಕಿಗೆ ಬಂದಿದೆ.

ಚೀನಾ ಈಸ್ಟರ್ನ್​ ಏರ್​ಲೈನ್ಸ್​ಗೆ ಸೇರಿದ ಬೋಯಿಂಗ್​ ಜೆಟ್​ 737-800 ವಿಮಾನವು ಗುವಾಂಗ್ಸಿ ಪ್ರದೇಶದಲ್ಲಿ ಮಾರ್ಚ್​ 21ರಂದು ಪತನವಾಗಿತ್ತು. ವಿಮಾನವು 132 ಪ್ಯಾಸೇಂಜರ್​ನ ಹೊತ್ತುಕೊಂಡು ಕುನ್ಮಿಂಗ್‌ನಿಂದ ಗುವಾಂಗ್‌ಝೌಗೆ ತೆರಳುತ್ತಿತ್ತು. ಫ್ಲೈಟ್​ರಾಡರ್​ ಡೇಟಾ ಪ್ರಕಾರ ಪತನಗೊಂಡ ಸಮಯದಲ್ಲಿ ವಿಮಾನವು ಗಂಟೆಗೆ 700 ಕಿ.ಮೀ ವೇಗದಲ್ಲಿ 29 ಸಾವಿರ ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು.

ಮಾರ್ಚ್​ 21ರಂದು ಮಧ್ಯಾಹ್ನ 1.11ಕ್ಕೆ ಟೇಕಾಫ್​ ಆಗಿರುವ ವಿಮಾನ ಮಧ್ಯಾಹ್ನ 3.05ರ ಸುಮಾರಿಗೆ ಮಾರ್ಗಮಧ್ಯೆ ಗುವಾಂಗ್ಸಿ ಪ್ರದೇಶದಲ್ಲಿ ಇದ್ದಕ್ಕಿದ್ದಂತೆ ಕೆಳಮುಖವಾಗಿ ಕುಸಿದು ಪತನಗೊಂಡಿತು. ಇದಕ್ಕೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ಹರಿದಾಡುತ್ತಿತ್ತು.

ಈ ವಿಷಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಇದು 28 ವರ್ಷದಲ್ಲಿ ಚೀನಾದಲ್ಲಿ ನಡೆದ ಅತ್ಯಂತ ಅಪಾಯಕಾರಿ ವಿಮಾನ ಪತನ ಇದಾಗಿದೆ.

ಘಟನೆ ನಡೆದ 2 ತಿಂಗಳ ನಂತರ ವಿಮಾನದಲ್ಲಿ ದೊರೆತ ಬ್ಲಾಕ್​ಬಾಕ್ಸ್​ ಡೇಟಾವನ್ನು ಅಮೆರಿಕ ಅಧಿಕಾರಿಗಳು ವಿಶ್ಲೇಷಣೆ ಮಾಡಿದ್ದಾರೆ. ಕಾಕ್​ಪಿಟ್​ನಿಂದ ಉದ್ದೇಶಪೂರ್ವಕವಾಗಿಯೇ ವಿಮಾನವನ್ನು ಪತನ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.

ವಿಮಾನ ದಿಢೀರನೇ ಕುಸಿಯುವ ಸಮಯದಲ್ಲಿ ಏರ್ ಟ್ರಾಫಿಕ್ ಕಂಟ್ರೋಲರರ್​ಗಳು ಮತ್ತು ಹತ್ತಿರದ ವಿಮಾನಗಳಿಂದ ಪದೇ ಪದೇ ಕರೆ ಮಾಡಿದರೂ ಪೈಲಟ್‌ಗಳು ಸ್ಪಂದಿಸಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುಎಸ್​ನ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯ ಅಧ್ಯಕ್ಷೆ, ಜೆನ್ನಿಫರ್ ಹೋಮೆಂಡಿ ಮಾತನಾಡಿ, ನಮ್ಮ ಮಂಡಳಿಯ ತನಿಖಾಧಿಕಾರಿಗಳು ಮತ್ತು ಬೋಯಿಂಗ್ ಸಂಸ್ಥೆ, ಚೀನಾದ ವಿಮಾನ ತನಿಖೆಗೆ ಸಹಾಯ ಮಾಡಲು ಚೀನಾಕ್ಕೆ ಪ್ರಯಾಣಿಸಿದ್ದರು. ಈ ಸಂದರ್ಭದಲ್ಲಿ ಯಾವುದೇ ತುರ್ತು ಕ್ರಮದ ಅಗತ್ಯವಿರುವ ಯಾವುದೇ ಸಮಸ್ಯೆಗಳು ವಿಮಾನದಲ್ಲಿ ಇರಲಿಲ್ಲ ಎಂದು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಅಪಘಾತದ ತನಿಖೆಗೆ ತಾನು ಜವಾಬ್ದಾರನಲ್ಲ ಎಂದು ಚೀನಾದ ಈಸ್ಟರ್ನ್​ ಏರ್‌ಲೈನ್ ಈಗಾಗಲೇ ಹೇಳಿಕೊಂಡಿದೆ. ಹಾಗೂ ಏಪ್ರಿಲ್ 20ರಂದು ಬಿಡುಗಡೆಯಾದ ತನ್ನ ಪ್ರಾಥಮಿಕ ವರದಿಯಲ್ಲಿ ಚೀನಾ ಸರ್ಕಾರದ ಸಾರಾಂಶವನ್ನು ವರದಿಯಲ್ಲಿ ಉಲ್ಲೇಖಿಸಿದೆ.

ಹಾನಿಗೊಳಗಾದ ಬ್ಲಾಕ್​ಬಾಕ್ಸ್ ಡೇಟಾದ ಮರುಸ್ಥಾಪನೆ ಮತ್ತು ವಿಶ್ಲೇಷಣೆ ಇನ್ನೂ ಪ್ರಗತಿಯಲ್ಲಿದೆ ಎಂದು ವರದಿಯಲ್ಲಿ ತಿಳಿಸಿದೆ.

ಚೀನಾ ಈಸ್ಟರ್ನ್ ಪ್ರಕಾರ, ಪೈಲಟ್ ಮತ್ತು ಸಹ-ಪೈಲಟ್ ಇಬ್ಬರೂ ಉತ್ತಮ ಆರೋಗ್ಯ ಹೊಂದಿದ್ದರು. ಹಾಗೂ ಯಾವುದೇ ಹಣಕಾಸಿನ ಅಥವಾ ಕೌಟುಂಬಿಕ ಸಮಸ್ಯೆಗಳಿರಲಿಲ್ಲ. ವಿಮಾನದಿಂದ ಯಾವುದೇ ತುರ್ತು ಸಂಕೇತವನ್ನು ಕಳುಹಿಸಲಾಗಿಲ್ಲ ಎಂದು ಚೀನಾದ ಅಧಿಕಾರಿಗಳು ಹೇಳಿದ್ದಾರೆ, ಕಾಕ್‌ಪಿಟ್ ಭದ್ರತೆಯನ್ನು ಉಲ್ಲಂಘಿಸಿರುವ ಸಾಧ್ಯತೆಯಿಲ್ಲ ಎಂದು ಚೀನಾ ಈಸ್ಟರ್ನ್​ ಹೇಳಿದೆ. ಆದರೆ, ಇದೀಗ ಅಮೆರಿಕ ಬಿಡಗಡೆ ಮಾಡಿರುವ ವರದಿ ಇದಕ್ಕೆ ತದ್ವಿರುದ್ಧವಾಗಿದೆ. ಉದ್ದೇಶಪೂರ್ವಕವಾಗಿಯೇ ವಿಮಾನ ಪತನ ಮಾಡಲಾಗಿದೆ ಎನ್ನಲಾಗುತ್ತಿದೆ.

ಮಳೆಹಾನಿಗೊಳಗಾದವರಿಗೆ ಮುಖ್ಯಮಂತ್ರಿ ಭರವಸೆ

0

ನೀರು ನುಗ್ಗಿ ವಾಸಕ್ಕೆ ಸಮಸ್ಯೆಯಾಗಿರುವಂತ ಮನೆಯವರಿಗೆ ಊಟದ ವ್ಯವಸ್ಥೆ ಮಾಡುತ್ತೇವೆ. ಮಳೆ ನೀರು ಮನೆಗೆ ನುಗ್ಗಿರುವಂತ ಕುಟುಂಬಕ್ಕೆ ರೂ.25,000 ಪರಿಹಾರ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ನೀರು ನುಗಿರುವ ಮನೆಗಳಿಗೆ 25 ಸಾವಿರ ಪರಿಹಾರ ನೀಡುತ್ತೇವೆ. ನೀರು ನುಗ್ಗಿ ಸಮಸ್ಯೆಯಾದವರಿಗೆ ಊಟದ ವ್ಯವಸ್ಥೆ ಮಾಡುತ್ತೇವೆ. ಅಲ್ಲದೇ ಮನೆಯನ್ನು ಕ್ಲೀನ್ ಮಾಡಿ ಕೊಡುವಂತ ವ್ಯವಸ್ಥೆ ಮಾಡುತ್ತೇವೆ ಎಂಬುದಾಗಿ ತಿಳಿಸಿದರು.

ಹಿಂದೂ ದೇವಾಲಯ ನಿರ್ಮಾಣ, ಹಿಂದೂ ಸಮಾಜದ ಗುರಿ- ಈಶ್ವರಪ್ಪ

0

ಅಯೋಧ್ಯೆ, ಕಾಶಿ, ಮಥುರಾ ಸೇರಿದಂತೆ ಭಾರತದ ಅನೇಕ ಕ್ಷೇತ್ರಗಳು ಹಿಂದುಗಳ ಪುಣ್ಯಕ್ಷೇತ್ರವಾಗಿದೆ. ಇಂತಹ ಪುಣ್ಯಕ್ಷೇತ್ರಗಳಲ್ಲಿ ಮುಸ್ಲಿಂ ಆಕ್ರಮಣಕಾರರು ದೇವಾಲಯಗಳನ್ನು ಧ್ವಂಸಗೊಳಿಸಿ ಮಸೀದಿಗಳನ್ನು ನಿರ್ಮಿಸಿದ್ದು, ಈಗ ಅಲ್ಲೆಲ್ಲಾ ಹಿಂದೂ ದೇವಾಲಯಗಳು ಇದ್ದವು ಎಂಬುದಕ್ಕೆ ಪುರಾವೆ ಸಿಕ್ಕುತ್ತಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯೆಂದೆ ಕಾಶಿಯಲ್ಲಿ ದೊರೆತ ಹನ್ನೆರಡು ಅಡಿ ಎತ್ತರದ ಶಿವಲಿಂಗವೇ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸುಮಾರು 350 ವರ್ಷಗಳ ಹಿಂದೆ ಔರಂಗಜೇಬ ಎಂಬಾತ ಕಾಶಿವಿಶ್ವನಾಥ ದೇವಸ್ಥಾನವನ್ನು ಧ್ವಂಸ ಮಾಡಿದ್ದನು. ಇದಾದ ನಂತರ 110 ವರ್ಷಗಳ ನಂತರ ಮಹಾರಾಣಿ ಅಹಲ್ಯಬಾಯಿ ಹೋಳ್ಕರ್‍ರವರು ದೇವಾಲಯವನ್ನು ಮರು ನಿರ್ಮಾಣ ಮಾಡಿದರು. ಔರಂಗಜೇಬನ ಸಂತತಿಯಲ್ಲಿ ನಾವು ಇರುವುದಿಲ್ಲ. ಅಹಲ್ಯಬಾಯಿಯವರ ಸಂತತಿ ಜೊತೆ ಇರುತ್ತೇವೆ ಎಂದು ಪಕ್ಷಬೇಧ ಮರೆತು ಹೇಳುತ್ತಿದ್ದಾರೆ. ಆದರೆ, ಕೆಲವು ಕಾಂಗ್ರೆಸ್ಸಿಗರು ಮಾತ್ರ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದು ರಾಷ್ಟ್ರದ್ರೋಹವಲ್ಲದೇ ಮತ್ತೇನೂ ಅಲ್ಲ ಎಂದರು.

ಇಸ್ಲಾಮಿಕ್ ಆಕ್ರಮಣಕಾರರು ಭಾರತದ 36 ಸಾವಿರ ಹಿಂದೂ ದೇವಾಲಯಗಳನ್ನು ಕೆಡವಿ ಮಸೀದಿ ನಿರ್ಮಿಸಿದ್ದು, ಈ ಮಸೀದಿಗಳನ್ನೆಲ್ಲಾ ತೆರವುಗೊಳಿಸಿ ಅಲ್ಲಿ ಹಿಂದೂ ದೇವಾಲಯಗಳನ್ನು ನಿರ್ಮಿಸುವುದೇ ಹಿಂದೂ ಸಮಾಜದ ಮುಖ್ಯ ಗುರಿಯಾಗಿದೆ ಎಂದರು.

ಸೈಬರ್ ವಂಚಕರಿದ್ದಾರೆ ಜಾಗ್ರತೆ- ಗೋಪಿನಾಥ್

2

ಇತ್ತೀಚಿಗೆ ಶಿವಮೊಗ್ಗ ನಗರ ಹಾಗೂ ಜಿಲ್ಲೆಯ ವಿವಿಧೆಡೆ ಉದ್ಯಮಿಗಳು, ಸೈಬರ್ ವಂಚನೆಗೊಳಗಾಗುತ್ತಿದ್ದಾರೆ. ಅಪಾರ ಪ್ರಮಾಣದ ಹಣ ಕಳೆದುಕೊಳ್ಳುತ್ತಿರುವ ಮಾಹಿತಿಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಆನ್’ಲೈನ್ ಆಧಾರಿತ ವಹಿವಾಟು ನಡೆಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಎನ್. ಗೋಪಿನಾಥ್ ಅವರು ಉದ್ಯಮಿಗಳಿಗೆ ಕಿವಿಮಾತು ಹೇಳಿದ್ದಾರೆ.

ಉದ್ಯಮಿಗಳು ಆನ್ ಲೈನ್ ಆಧಾರಿತ ವ್ಯವಹಾರ ನಡೆಸುವಾಗ ಬಹಳ ಎಚ್ಚರಿಕೆಯಿಂದಿರಬೇಕು. ಯಾವುದೇ ಕಾರಣಕ್ಕೂ ಅನಾಮಧೇಯ ವ್ಯಕ್ತಿಗಳು ಕಳಿಸುವ ಸಂದೇಶಗಳಿಗೆ ಪ್ರತಿಕ್ರಿಯಿಸುವ ವೇಳೆ ಸತ್ಯಾಸತ್ಯತೆ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ.

ಈಗಾಗಲೇ ಶಿವಮೊಗ್ಗ ನಗರದಲ್ಲಿ ಹಲವು ವರ್ತಕರು ಸೈಬರ್ ವಂಚಕರಿಂದ ಲಕ್ಷಾಂತರ ರೂ. ಕಳೆದುಕೊಂಡಿದ್ದಾರೆ. ಆದರೆ ಕೆಲ ವರ್ತಕರು ಈ ಕುರಿತಂತೆ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗದಿರುವ ಮಾಹಿತಿಯೂ ಕೇಳಿಬರುತ್ತಿದೆ.

ಸೈಬರ್ ವಂಚಕರಿಂದ ಮೋಸಹೋದ ವರ್ತಕರು ತಕ್ಷಣವೇ ಈ ಕುರಿತಂತೆ ಸೈಬರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ವಂಚನೆಗೊಳಗಾದ ವರ್ತಕರಿಗೆ ಸಂಘಟನೆಯು ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಉದ್ಯಮ ವಲಯದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆ ಕುರಿತಂತೆ ವರ್ತಕ ವಲಯದಲ್ಲಿ ಜನಜಾಗೃತಿ ಮೂಡಿಸಲು ಸಂಘ ಕ್ರಮಕೈಗೊಂಡಿದೆ.

ಇಷ್ಟರಲ್ಲಿಯೇ ಸೈಬರ್ ಪೊಲೀಸ್ ಠಾಣೆ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಸಂಘಟನೆ ಹಮ್ಮಿಕೊಳ್ಳಲಿದೆ ಎಂದು ಎನ್.ಗೋಪಿನಾಥ್ ಹೇಳಿದ್ದಾರೆ.

ಧ್ವನಿವರ್ಧಕ ಬಳಕೆ ಮಾರ್ಗಸೂಚಿಯನ್ನ ಹಿಂದೂಗಳು ಅನುಸರಿಸಬೇಕು- ಪೇಜಾವರಶ್ರೀ

0

ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್ ವಿಚಾರವಾಗಿ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಪ್ರತಿಕ್ರಿಯೆ ನೀಡಿದ್ದಾರೆ.

ಯಾವುದೋ ಕಾರಣಕ್ಕೆ ಯಾವುದೋ ಕಾಲದಲ್ಲಿ ಧರ್ಮ ಕೇಂದ್ರಗಳು ಮಸೀದಿಗಳಾಗಿ ಪರಿವರ್ತಿತವಾಗಿರುತ್ತದೆ. ಯಾವುದೋ ದೇವಾಲಯವನ್ನು ಖರೀದಿ ಮಾಡಿ ಮಸೀದಿಯಾಗಿ ಪರಿವರ್ತಿಸಿದ್ದರೆ ನಮ್ಮ ಆಕ್ಷೇಪ ಇಲ್ಲ.ಯಾವುದೇ ಪೂಜಾಸ್ಥಳ ಆಗಿದ್ದರೂ ಕೂಡ ಒಂದು ಸಮಾಜದವರು ಖರೀದಿಸಿ ಮಾರ್ಪಾಟು ಮಾಡಿದ್ದರೆ ಸಮಸ್ಯೆ ಇಲ್ಲ. ಆದರೆ ಆಕ್ರಮಿಸಿಕೊಂಡು ಪರಿವರ್ತನೆ ಮಾಡಿದ್ದರೆ ಮರು ಪರಿವರ್ತನೆ ಆಗಬೇಕಾದದ್ದು ಅನಿವಾರ್ಯ ಎಂದು ಸ್ವಾಮೀಜಿ ಹೇಳಿದರು.

ಸುಪ್ರೀಂ ಕೋರ್ಟ್ ಧ್ವನಿವರ್ಧಕ ಬಳಕೆಗೆ ಮಾರ್ಗದರ್ಶನ ಮಾಡಿದೆ.
ಈ ನಿಯಮಗಳನ್ನು ಪಾಲಿಸಬೇಕು ಎಂದು ಹಿಂದೂ ಸಮಾಜಕ್ಕೂ ಕರೆ ಕೊಡುತ್ತೇನೆ. ವಿಶೇಷ ದಿನಗಳು ವಿಶೇಷ ಆಚರಣೆಗಳ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಅನುಮತಿ ಪಡೆದು ಧ್ವನಿವರ್ಧಕ ಬಳಕೆ ಮಾಡೋಣ ಎಂದು ಸ್ವಾಮೀಜಿ ಹೇಳಿದ್ದಾರೆ.