Sunday, March 1, 2026
Sunday, March 1, 2026
Home Blog Page 1585

ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಯಾರೂ ಹೇಳಿಕೆ ನೀಡಬಾರದು-ಹರಿಪ್ರಸಾದ್

0

ಕಾಂಗ್ರೆಸ್ ನಲ್ಲಿ‌ ಮುಖ್ಯಮಂತ್ರಿ ಆಯ್ಕೆ ಮಾಡುವುದಕ್ಕೆ ಅದರದ್ದೇ ಆದ ವಿಧಾನ ಇದೆ. ಜಮೀರ್ ಹೇಳಿಕೆ ಮುಖ್ಯವಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಜಮೀರ್ ಅಹಮದ್ ಖಾನ್ ಅವರು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು.

ಜಮೀರ್ ಹೇಳಿಕೆ ಮುಖ್ಯವಲ್ಲ.
ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಆಯ್ಕೆಗೆ ಅದರದ್ದೇ ಆದ ವಿಧಾನ ಇದೆ ಹೈಕಮಾಂಡ್ ಇದೆ ಎಂದರು.

ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಪಟ್ಟಂತೆ ಯಾರೂ ಹೇಳಿಕೆ ನೀಡಬಾರದು ಎಂದು ಈಗಾಗಲೇ ವರಿಷ್ಠರು ಸೂಚನೆ ನೀಡಿದ್ದಾರೆ. ಈ ವಿಚಾರ ಶಿಸ್ತು ಸಮಿತಿಯ‌ ಗಮನಕ್ಕೂ ಬರುತ್ತದೆ ಎಂದರು.

ಟಾಟಾ ಐಪಿಎಲ್ ರಾಜಸ್ತಾನ್ ವಿರುದ್ಧ ಡೆಲ್ಲಿ ಜಯ ಪ್ಲೇ ಆಫ್ ಆಸೆ ಜೀವಂತ

ಮುಂಬೈನ ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ರಾಜಸ್ತಾನ್ ನೀಡಿದ ಸುಲಭ ಗುರಿಯನ್ನ ಬೆನ್ನಟ್ಟಿದ ಡೆಲ್ಲಿ 8 ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಜೀವಂತವಾಗಿರಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ತಾನ್ ರಾಯಲ್ಸ್ ಪರ ಇನ್‌ಫಾರ್ಮ್ ಬ್ಯಾಟ್ಸ್‌ಮನ್ ಜಾಸ್ ಬಟ್ಲರ್ ಕೇವಲ 7ರನ್‌ಗೆ ಚೇತನ್ ಸಕಾರಿಯಾಗೆ ವಿಕೆಟ್ ಒಪ್ಪಿಸಿದರು.

ಈ ಮೂಲಕ ರಾಜಸ್ತಾನ್ ರಾಯಲ್ಸ್‌ ಆರಂಭಿಕ ಆಘಾತ ಅನುಭವಿಸಿತು. ಇದರ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್ 19ರನ್‌ಗಳಿಸಿ ವಿಕೆಟ್ ಪಡೆದು
ಈ ವೇಳೆಯಲ್ಲಿ ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದ ಅಶ್ವಿನ್ ಕೊಟ್ಟ ಅವಕಾಶದಲ್ಲಿ ಮಿಂಚಿನ ಆಟವಾಡಿದರು.

38 ಎಸೆತಗಳಲ್ಲಿ 50 ರನ್ ಸಿಡಿಸಿದ ಅಶ್ವಿನ್ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 2 ಭರ್ಜರಿ ಸಿಕ್ಸರ್‌ಗಳಿದ್ದವು. ಅಶ್ವಿನ್ ಔಟಾದ ಬಳಿಕ ಪಡಿಕ್ಕಲ್ 48ರನ್ ಸಿಡಿಸಿ ವಿಕೆಟ್ ಪಡೆದುಕೊಂಡರು. ಆದರೆ ನಂತರದಲ್ಲಿ ಯಾವೊಬ್ಬ ಬ್ಯಾಟರ್ ಕೂಡ ತಂಡಕ್ಕೆ ಆಧಾರವಾಗದ ಹಿನ್ನಲೆಯಲ್ಲಿ ರಾಜಸ್ತಾನ್ 6 ವಿಕೆಟ್ ನಷ್ಟಕ್ಕೆ 160 ರನ್ ಕಲೆಹಾಕಿತು.

161ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ಆರಂಭಿಕ ಬ್ಯಾಟರ್ ಶ್ರೀಕರ್ ಭರತ್ ಶೂನ್ಯಕ್ಕೆ ಔಟಾದರೂ ಸಹ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಶ್‌ ಜೋಡಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಭರ್ಜರಿ ಗೆಲುವು ತಂದುಕೊಟ್ಟಿತು.

ವಾರ್ನರ್ ಅಜೇಯ 52 ರನ್ ಗಳಿಸಿದ್ರೆ, ಮಿಚೆಲ್ ಮಾರ್ಷ್‌ 62 ಎಸೆತಗಳಲ್ಲಿ 89 ರನ್ ಸಿಡಿಸಿ ಔಟಾಗಿದ್ದಲ್ಲದೆ ತಂಡಕ್ಕೆ ಗೆಲುವು ತಂದುಕೊಟ್ಟರು. ಡೆಲ್ಲಿ 18.1 ಓವರ್‌ನಲ್ಲಿಯೇ ಎರಡು ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಈ ಪಂದ್ಯದಲ್ಲಿ ರಾಜಸ್ತಾನ್ ವಿರುದ್ಧ 8 ವಿಕೆಟ್‌ಗಳ ಭಾರೀ ಗೆಲುವಿನ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 12 ಪಾಯಿಂಟ್ಸ್ ಪಾಯಿಂಟ್ಸ್‌ಗಳ ನೆಟ್ ರನ್‌ರೇಟ್‌ (+0.210) ಮೂಲಕ ಐದನೇ ಸ್ಥಾನದಲ್ಲಿಯೇ ಉಳಿದಿದೆ. ಡೆಲ್ಲಿ ಆಡಿದ 12 ಪಂದ್ಯಗಳಲ್ಲಿ 6 ಗೆಲುವು ಮತ್ತು 6 ಪಂದ್ಯಗಳ ಸೋಲಿನಿಂದ 12 ಪಾಯಿಂಟ್ಸ್ ಪಡೆಯಿತು.

ಮೊದಲ ಮೂರು ಸ್ಥಾನದಲ್ಲಿ ಗುಜರಾತ್ ಬಳಿಕ ಲಕ್ನೋ (16) ರಾಜಸ್ತಾನ್ ರಾಯಲ್ಸ್ 14 ಪಾಯಿಂಟ್ಸ್‌ನೊಂದಿಗಿದ್ದು, ಆರ್‌ಸಿಬಿ ನಾಲ್ಕು ಹಾಗೂ ನಂತರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಉತ್ತಮ ರನ್‌ರೇಟ್ ಮೂಲಕ ಐದನೇ ಸ್ಥಾನ ಅಲಂಕರಿಸಿದೆ.
ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ನೀಡುವ ಪರ್ಪಲ್ ಕ್ಯಾಪ್ ಕೂಡ ಆರ್‌ಆರ್ ಆಟಗಾರನ ಬಳಿಯೇ ಉಳಿದುಕೊಂಡಿತು.

ಯುಜುವೇಂದ್ರ ಚಾಹಲ್ ಈ ಪಟ್ಟಿಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚಾಹಲ್ ಒಟ್ಟು 23 ವಿಕೆಟ್‌ಗಳನ್ನು ಸಂಪಾದಿಸಿದ್ದು ಈ ಪಟ್ಟಿಯಲ್ಲಿಯೂ ಆರ್‌ಆರ್ ಆಟಗಾರ ಎಲ್ಲರಿಗಿಂತ ಮುಂದಿದ್ದಾರೆ.

ಇವರ ನಂತರದ ಸ್ಥಾನದಲ್ಲಿ ಆರ್‌ಸಿಬಿ ಸ್ಪಿನ್ನರ್ ವಹಿಂದು ಹಸರಂಗ ಕೇವಲ ಒಂದು ವಿಕೆಟ್ ಅಂತರದಲ್ಲಿ ಹಿಂದುಳಿದಿದ್ದಾರೆ. ಹಸರಂಗ ಕಳೆದ ಸನ್‌ರೈಸರ್ಸ್ ಹೈದ್ರಾಬಾದ್ ವಿರುದ್ಧದ ಪಂದ್ಯದಲ್ಲಿ ಐದು ವಿಕೆಟ್ ಪಡೆಯುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಲ್ಲದೆ, ಸೀಸನ್‌ನ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ್ದಿದ್ದಾರೆ. 12 ಪಂದ್ಯಗಳಲ್ಲಿ ಈ ಲಂಕಾ ಸ್ಪಿನ್ನರ್ 21 ವಿಕೆಟ್ ಕಬಳಿಸಿದ್ದಾರೆ..

ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿ ಗುಜರಾತ್ ಟೈಟನ್ಸ್‌ನ ರಶೀದ್ ಖಾನ್ (19), ಪಂಜಾಬ್ ಕಿಂಗ್ಸ್‌ನ ಕಗಿಸೊ ರಬಾಡ (18) ಸ್ಥಾನ ಪಡೆದಿದ್ದಾರೆ.

ಸದ್ಯ ಶ್ರೀಲಂಕಾ ಸ್ಥಿತಿ ನಿರ್ವಹಿಸಲು ನೂತನ ಪ್ರಧಾನಿ ನೇಮಿಸಲು ಯತ್ನ

0

ಆರ್ಥಿಕ ಬಿಕ್ಕಟ್ಟಿನ ನಡುವೆ ಶ್ರೀಲಂಕಾದಲ್ಲಿ ಪರಿಸ್ಥಿತಿ ನಿಭಾಯಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನೂತನ ಪ್ರದಾನಿಯನ್ನು ನೇಮಕ ಮಾಡುವುದಾಗಿ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಹೇಳಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಮಾತನಾಡಿರುವ ಅವರು ದೇಶವು ಅರಾಜಕತೆಗೆ ಬೀಳದಂತೆ ತಡೆಯಲು ಮತ್ತು ಸ್ಥಗಿತಗೊಂಡಿರುವ ರಾಜ್ಯದ ವ್ಯವಹಾರಗಳನ್ನು ನಿರ್ವಹಿಸಲು ಹೊಸ ಸರ್ಕಾರವನ್ನು ರಚಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಸಂಸತ್ತಿನಲ್ಲಿ ಬಹುಮತವನ್ನು ಸಾಬೀತುಗೊಳಿಸಿದ ಮತ್ತು ಜನರ ವಿಶ್ವಾಸವನ್ನು ಪಡೆಯಲು ಸಮರ್ಥವಾಗಿರುವ ಪ್ರಧಾನಿಯನ್ನು ಈ ವಾರದೊಳಗೆ ನೇಮಿಸಲಾಗುವುದು ಎಂದು ಹೇಳಿದ್ದಾರೆ.

ಸಂಸತ್ತಿಗೆ ಮತ್ತಷ್ಟು ಅಧಿಕಾರ ನೀಡಲು ದೇಶದ ಸಂವಿಧಾನವನ್ನು ತಿದ್ದುಪಡಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ತಿದ್ದುಪಡಿಯ ವಿಷಯಗಳನ್ನು ಮರು ಜಾರಿಮಾಡುವ ಮೂಲಕ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಮತ್ತು ಜನರ ವಿಶ್ವಾಸವನ್ನು ಗಳಿಸುವ ಪ್ರಧಾನಿಯನ್ನು ಈ ವಾರದೊಳಗೆ ನೇಮಕ ಮಾಡಲಾಗುತ್ತದೆ ಎಂದು ಗೋಟಬಯ ಘೋಷಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಜನಸಾಮಾನ್ಯರ ಜೀವ ಮತ್ತು ಆಸ್ತಿಪಾಸ್ತಿಗಳ ರಕ್ಷಣೆಗೆ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳಲು ಸಹಕರಿಸಬೇಕು ಎಂದು ಅವರು ದೇಶದ ಪ್ರಜೆಗಳಲ್ಲಿ ವಿನಂತಿಸಿದ್ದಾರೆ.

ಜಾಗತಿಕ ಕೋವಿಡ್ ವರ್ಚುವಲ್ ಸಭೆಗೆ ಮೋದಿಯವರಿಗೆ ಆಹ್ವಾನ

0

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಆಹ್ವಾನದ ಮೇರೆಗೆ ಎರಡನೇ ಜಾಗತಿಕ ಕೋವಿಡ್ ಸಮಾವೇಶದ ವರ್ಚುವಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನಾ ಭಾಷಣ ಮಾಡಲಿದ್ದು, ಸಾಂಕ್ರಾಮಿಕ ತಡೆ ಕುರಿತ ಸಿದ್ಧತೆಗಳ ಬಗ್ಗೆ ಮಾತನಾಡಲಿದ್ದಾರೆ. ಈ ಸಭೆಯಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರೂ ಕೂಡ ಭಾಗವಹಿಸಲಿದ್ದಾರೆ.

ಸಭೆ ಭಾರತೀಯ ಕಾಲಮಾನ ಬೆಳಿಗ್ಗೆ 10 ಗಂಟೆ ನಂತರ ಆರಂಭವಾಗುವ ನಿರೀಕ್ಷೆ ಇದೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.

ನರೇಂದ್ರ ಮೋದಿ ಕಳೆದ 2022 ರ ಸೆಪ್ಟೆಂಬರ್ 22 ರಂದು ನಡೆದಿದ್ದ ಮೊದಲ ಜಾಗತಿಕ ಕೋವಿಡ್ ಸಮಾವೇಶದಲ್ಲೂ ಪಾಲ್ಗೊಂಡಿದ್ದರು.
ಎರಡನೇ ಜಾಗತಿಕ ಕೋವಿಡ್ ಸಮಾವೇಶದಲ್ಲಿ ಕೋವಿಡ್‌ ರೂಪಾಂತರಿಗಳಿಂದ ಎದುರಾಗಿರುವ ಹೊಸ ಸವಾಲುಗಳನ್ನು ಹೇಗೆ ಎದುರಿಸುವುದು ಹಾಗೂ ವಿಶ್ವ ಆರೋಗ್ಯ ರಕ್ಷಣೆಗೆ ಮಾಡಬೇಕಿರುವ ತುರ್ತು ಕೆಲಸಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.

ಏತನ್ಮಧ್ಯೆ ದೇಶದಲ್ಲಿ ಬುಧವಾರ 2,505 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 52 ಜನ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಇದುವರೆಗೆ ಭಾರತದಲ್ಲಿ 5,22,864 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬಹುಮುಖಿ ಚಿಂತನೆಗಳ ವಿದ್ವಾಂಸ ಡಾ.ತೀ.ನಂ.ಶಂಕರನಾರಾಯಣ

0

ಜಾನಪದ ವಿದ್ವಾಂಸರೂ, ಸಂಶೋಧಕರೂ ಆದ ಡಾ. ತಿ. ನಂ. ಶಂಕರನಾರಾಯಣ ಅವರು 11.05.2022ರಂದು ನಿಧನರಾಗಿದ್ದಾರೆ.

ತೀ. ನಂ. ಶಂಕರನಾರಾಯಣರವರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ತೀರ್ಥಪುರದಲ್ಲಿ 1947ರ ಸಪ್ಟೆಂಬರ್ 27ರಂದು ಜನಿಸಿದರು. ತಂದೆ ಟಿ.ಎಸ್.ನಂಜುಂಡಯ್ಯ. ತಾಯಿ ಸತ್ಯಭಾಮಮ್ಮ. ಪ್ರಾರಂಭಿಕ ಶಿಕ್ಷಣ ತೀರ್ಥಪುರದಲ್ಲಿ, ಮಾಧ್ಯಮಿಕ ಶಿಕ್ಷಣ ಶೆಟ್ಟಿಕೆರೆಗಳಲ್ಲಿ ನಡೆಯಿತು. ಮುಂದೆ ಮೈಸೂರಿನ ಶಾರದಾವಿಲಾಸ ಪ್ರೌಢಶಾಲೆ ಹಾಗೂ ಮಹಾಜನ ಪ್ರೌಢಶಾಲೆಗಳಲ್ಲಿ ಓದಿದರು. ವಿಜ್ಞಾನ ವಿಷಯಗಳಲ್ಲಿ ಅತ್ಯುತ್ತಮ ಅಂಕಗಳಿಸಿದ್ದರೂ ಕನ್ನಡದ ಮೇಲಿನ ಪ್ರೀತಿಯಿಂದ ಬಿ.ಎ. ಸೇರಿದರು. ಇವರ ಸಂಬಂಧಿಗಳಾದ ಮಹಾನ್ ಸಾಹಿತಿಗಳಾದ ತೀ.ನಂ.ಶ್ರೀ ಅವರ ಮನೆಯಲ್ಲಿದ್ದ ಸಾಹಿತ್ಯಿಕ ಪರಿಸರ ಇವರನ್ನು ಅಪಾರವಾಗಿ ಪ್ರಭಾವಿಸಿತ್ತು. ಮಾಸ್ತಿ, ಡಿ.ವಿ.ಜಿ., ಬೇಂದ್ರೆ, ಪು.ತಿ.ನ, ಎ.ಎನ್. ಮೂರ್ತಿರಾವ್, ಡಿ.ಎಲ್.ಎನ್ ಮುಂತಾದವರುಗಳ ಸಮಾವೇಶ ಹಾಗೂ ಅವರ ಶಿಷ್ಯರಾಗಿದ್ದ ಹಾ.ಮಾ.ನಾ, ಎಚ್. ಎಂ. ಶಂಕರನಾರಾಯಣರಾಯರು, ಪರಮೇಶ್ವರ ಭಟ್ಟರು ಮುಂತಾದವರುಗಳ ಮಾತುಗಳನ್ನು ಕೇಳುವ ಅವಕಾಶ ಇವರಿಗೆ ಲಭಿಸಿತ್ತು.

ಆರನೆಯ ರ‍್ಯಾಂಕ್ ನೊಡನೆ ಬಿ.ಎ. ಪದವಿ ಹಾಗೂ ಎರಡನೆಯ ರ‍್ಯಾಂಕ್ ಸಾಧನೆಯಲ್ಲಿ ಎಂ.ಎ. ಪದವಿ ಗಳಿಸಿದರು.
ತೀರ್ಥಪುರ ಹಾಗೂ ಶೆಟ್ಟಿಕೆರೆ ಹಳ್ಳಿಗಳ ಗ್ರಾಮೀಣ ಅನುಭವ ಮತ್ತು ಮನೆಯಲ್ಲಿ ಅಜ್ಜಿ ವೆಂಕಟಲಕ್ಷಮ್ಮನವರು ಹೇಳುತ್ತಿದ್ದ ಜನಪದ ಕಥೆಗಳು ಮತ್ತು ಹಾಡುಗಳು ಹಾಗೂ ಎಂ.ಎ. ತರಗತಿಯಲ್ಲಿ ಪ್ರೊ. ಸುಜನಾ ಮತ್ತು ಜೀಶಂಪರವರ ಪಾಠ ಪ್ರವಚನಗಳಿಂದ ಪ್ರಭಾವಿತರಾಗಿ ‘ಕಾಡುಗೊಲ್ಲರ ಸಂಪ್ರದಾಯಗಳು ಮತ್ತು ನಂಬಿಕೆಗಳು’ ಮಹಾಪ್ರಬಂಧ ಮಂಡಿಸಿ ಮೈಸೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಗಳಿಸಿದರು.

ತೀ. ನಂ. ಶಂಕರನಾರಾಯಣ ಅವರು ಮೈಸೂರು ವಿ.ವಿ.ಯ ಸಂಜೆ ಕಾಲೇಜಿನ ಕನ್ನಡ ವಿಭಾಗದ ಅಧ್ಯಾಪಕರಾಗಿ ಸೇರಿ, ಶಿವಮೊಗ್ಗ ಜಿಲ್ಲೆಯ ಬಿ.ಆರ್ ಪ್ರಾಜೆಕ್ಟೆನ ಸ್ನಾತಕೋತ್ತರ ಕೇಂದ್ರದ ಸ್ಥಾಪಕ ಮುಖ್ಯಾಧಿಕಾರಿಯಾಗಿ, ಕುವೆಂಪು ವಿಶ್ವವಿದ್ಯಾಲಯ ಪ್ರಾರಂಭವಾದ ನಂತರ ಕನ್ನಡ ಅಧ್ಯಯನ ಸಂಸ್ಥೆ, ಕನ್ನಡ ಭಾರತಿ ಮತ್ತು ಪ್ರಸಾರಾಂಗದ ನಿರ್ದೇಶಕರಾಗಿ, ಕಲಾ ವಿಭಾಗದ ಡೀನ್ ಆಗಿ – ಹೀಗೆ ವಿವಿಧ ಹಂತಗಳಲ್ಲಿ ಕಾರ‍್ಯನಿರ್ವಹಿಸಿದ್ದಲ್ಲದೆ ಸ್ನಾತಕೋತ್ತರ ಪರೀಕ್ಷಾಮಂಡಳಿ, ಸ್ನಾತಕ ಕನ್ನಡ ಅಧ್ಯಯನ ಮಂಡಳಿ ಸ್ನಾತಕೋತ್ತರ ಕನ್ನಡ ಅಧ್ಯಯನ ಮಂಡಳಿ ಮುಂತಾದವುಗಳ ಅಧ್ಯಕ್ಷರಾಗಿ; ಕುವೆಂಪು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ, ಸಿಂಡಿಕೇಟ್ ಸದಸ್ಯರಾಗಿ, ಹಲವಾರು ವಿಶ್ವವಿದ್ಯಾಲಯಗಳ ಪರೀಕ್ಷಾ ಮಂಡಳಿಯ ಸದಸ್ಯರಾಗಿ, ಬೆಂಗಳೂರು ಹಾಗೂ ಕರ್ನಾಟಕ ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ಕನ್ನಡ ಅಧ್ಯಯನ ಮಂಡಲಿಯ ಸದಸ್ಯರಾಗಿ ಕಾರ‍್ಯ ನಿರ್ವಹಿಸಿದ್ದರು.

ಶಂಕರನಾರಾಯಣ ಅವರು ಪರಿಸರ ವಿಜ್ಞಾನ, ಮನೋವಿಜ್ಞಾನ, ಮಾನವ ವಿಜ್ಞಾನ, ತೌಲನಿಕ ಸಾಹಿತ್ಯ, ಇತಿಹಾಸ, ರಾಜಕೀಯ ವಿಜ್ಞಾನ ಮುಂತಾದವುಗಳಲ್ಲಿ ಆಸಕ್ತರಾಗಿದ್ದು ಪದವಿ ತರಗತಿಗಳಿಗೆ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳಿಗೆ ಕನ್ನಡ ಭಾಷೆ, ಸಂಸ್ಕ್ರತಿ, ಸಾಹಿತ್ಯ ವಿಮರ್ಶೆ, ತೌಲನಿಕ ಕಾವ್ಯ ಮೀಮಾಂಸೆ, ಛಂದಸ್ಸು,, ಜಾನಪದ ವಿಜ್ಞಾನ ಮುಂತಾದ ವಿಷಯಗಳನ್ನು ಬೋಧಿಸಿದ್ದರು.

ತೀ. ನಂ. ಶಂಕರನಾರಾಯಣ ಅವರು ಜಾನಪದ ಅಧ್ಯಯನ ಹಾಗೂ ಸಂಗ್ರಹ, ಸಂಶೋಧನಾ ಕಾರ‍್ಯವನ್ನೂ ಮುಂದುವರೆಸಿಕೊಂಡು ಬಂದು ಫಿನ್ ಲೆಂಡ್ ಜನಪದ ಮಹಾಕಾವ್ಯವಾದ ‘ಕಾಲೆವಾಲ’ ಮತ್ತು ಮಾನವ ಶಾಸ್ತ್ರದ ಅತಿ ಮಹತ್ವದ ಕೃತಿಯಾದ ಫ್ರೆಜರ್ ಅವರ ‘ಗೋಲ್ಡನ್ ಬೊ’ ಎಂಬ ಎರಡು ಮೌಲಿಕ ಕೃತಿಗಳನ್ನು ಪರಿಚಯ ಮಾಡಿಕೊಟ್ಟರು.

ಇವಲ್ಲದೆ ಜಾನಪದ ವಿಚಾರ, ಕಾಡು ಗೊಲ್ಲರು, ಕಾಡು ಗೊಲ್ಲರ ಸಂಪ್ರದಾಯ ಮತ್ತು ನಂಬಿಕೆಗಳು, ಜಾನಪದ ಮಹಾ ಕಾವ್ಯ, ಜಾನಪದ ಸಂಗ್ರಹ -ಸಂಪಾದನೆ, ಫಿನ್ಲೆಂಡಿನ ಜಾನಪದ ವಿದ್ವಾಂಸರು ಮೊದಲಾದ ಕೃತಿಗಳನ್ನು ರಚಿಸಿದರು. ಇವುಗಳ ಜೊತೆಗೆ ಸಂಕೀರ್ಣ ಜಾನಪದ ಕಥೆಗಳು, ಜಾನಪದ ಕೈಪಿಡಿ, ಕರ್ನಾಟಕ ಜಾನಪದ ಮಹಾಕಾವ್ಯಗಳು, ಜನಪದ ಸಾಹಿತ್ಯ ಪ್ರಕಾರಗಳು, ಶ್ರೀಕಂಠ ತೀರ್ಥ (ತೀ.ನಂ.ಶ್ರೀ ಯವರಿಗೆ ಅರ್ಪಿಸಿದ ಸಂಸ್ಮರಣ ಗ್ರಂಥ), ಆಧುನಿಕತೆ ಮತ್ತು ಕನ್ನಡ ಸಾಹಿತ್ಯ, ಆಧುನಿಕತೆ ಮತ್ತು ಸಾಹಿತ್ಯ ಪ್ರಕಾರಗಳು ಮುಂತಾದವುಗಳನ್ನು ಸಂಪಾದಿಸಿದ್ದರು. ಇವರು ಇಂಗ್ಲಿಷಿನಲ್ಲಿ ರಚಿಸಿರುವ ಕೃತಿಗಳು ‘ದಿ ಎಪಿಕ್ ಆಫ್ ಜುಂಜಪ್ಪ’ , ‘ಟೆಕ್ಸ್ಟ್ ಅಂಡ್ ಪರ್ಫಾರ‍್ಮೆನ್ಸ್’ ಮುಂತಾದವು.

ಕುವೆಂಪು ವಿಶ್ವವಿದ್ಯಾಲಯದ ಪ್ರಸಾರಾಂಗ ಮತ್ತು ಕನ್ನಡ ಭಾರತಿಯಿಂದ ಇವರ ಪ್ರಧಾನ ಸಂಪಾದಕತ್ವದಲ್ಲಿ 50ಕ್ಕೂ ಹೆಚ್ಚು ಕೃತಿಗಳು ಪ್ರಕಟಗೊಂಡವು. ಮನೋವೈಜ್ಞಾನಿಕ ಮತ್ತು ಜಾನಪದ, ಜಾನಪದ ವಿಜ್ಞಾನ, ಅಂತಾರಾಷ್ಟ್ರೀಯ ಜಾನಪದ ವಿಜ್ಞಾನದ ಸೈದ್ಧಾಂತಿಕ ವಿಷಯಗಳು- ಮುಂತಾದ ವಿಚಾರಗಳ ಬಗ್ಗೆ ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳು, ಕಮ್ಮಟಗಳಲ್ಲಿ ಭಾಗಿಯಾಗಿದ್ದರು.

ತೀ. ನಂ. ಶಂಕರನಾರಾಯಣ ಅವರ ಜಾನಪದ ಸಂಶೋಧನೆ, ಸಾಹಿತ್ಯ ಕೃತಿ ರಚನೆಗಾಗಿ ಕರ್ನಾಟಕ ಜಾನಪದ ಯಕ್ಷಗಾನ ಅಕಾಡೆಮಿಯಿಂದ ಜಾನಪದ ತಜ್ಙ ಪ್ರಶಸ್ತಿ, ಜಾನಪದ ಸಮೀಕ್ಷೆ – ವಿಶ್ಲೇಷಣೆ ಗ್ರಂಥಕ್ಕೆ ಕರ್ನಾಟಕ ಜಾನಪದ ಅಕಾಡೆಮಿ ಮತ್ತು ಕು.ಶಿ. ಹರಿದಾಸಭಟ್ ಸ್ಮಾರಕ ಪುಸ್ತಕ ಬಹುಮಾನ, ಫೋಕ್ಲೋರ್ ಮ್ಯೂಸಿಯಂ ಗೈಡ್ ಕೃತಿಗೆ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಬಹುಮಾನ ಮುಂತಾದವುಗಳಲ್ಲದೆ ಚಿಕ್ಕನಾಯಕನ ಹಳ್ಳಿಯಲ್ಲಿ ನಡೆದ ಮೊದಲ ತಾಲ್ಲೂಕು ಸಮ್ಮೇಳನದ ಸರ್ವಾಧ್ಯಕ್ಷತೆ, ಕರ್ನಾಟಕ ವಿಶ್ವವಿದ್ಯಾಲಯದ 37ನೆಯ ಅಖಿಲ ಕರ್ನಾಟಕ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷತೆ ಮುಂತಾದ ಅನೇಕ ಗೌರವಗಳು ಸಂದಿದ್ದವು.

ವಿದ್ಯಾರ್ಥಿಗಳು, ಅಭಿಮಾನಿಗಳು ಇವರಿಗೆ 2008ರಲ್ಲಿ ಅರ್ಪಿಸಿದ ಗೌರವ ಗ್ರಂಥ ‘ಸಮನ್ವಯ’.

ಅಗಲಿದ ಚೇತನಕ್ಕೆ ನಮನ.

ಮಲೆಬೆನ್ನೂರಿನಲ್ಲಿ ಪಾನ್ ಮತ್ತು ಕಿಸಾನ್ ಕಾರ್ಡ್ ವಿತರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್. ಸಾಮಾನ್ಯ ಸೇವಾಕೇಂದ್ರ CSC ಪ್ರಾರಂಭಿಸಿದೆ.

ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಯೋಜನಾಕಚೇರಿಯಲ್ಲಿ 1001 ನೇ ಪಾನ್ ಕಾರ್ಡ್, ಹಾಗೂ 101 ನೇ ಕಿಸಾನ್ ಕ್ರೆಡಿಟ್ ಕಾರ್ಡ್ ನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಯೋಜನಾಧಿಕಾರಿ ಶ್ರೀ ವಸಂತ ದೇವಾಡಿಗ, ಜಿಲ್ಲಾ‌ ಸಿ.ಎಸ್.ಸಿ.ನೋಡಲ್ ಅಧಿಕಾರಿ ನಂಜುಂಡ ಪ್ರಸಾದ್ ಹಾಗೂ ತಾಲ್ಲೂಕು ನೋಡಲ್ ಅಧಿಕಾರಿ ಮಂಜುನಾಥ್ ಇವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಸೇವಾ ಶುಲ್ಕಕ್ಕಿಂತಲೂ ಅಧಿಕ ಖರ್ಚಾಗುತ್ತಿದ್ದು ಇದರ ಹೊರೆಯನ್ನು ಸಾರ್ವಜನಿಕರಿಗೆ ಕಡಿಮೆಗೊಳಿಸುವ ಸಲುವಾಗಿ ಯೋಜನೆಯು ಸಿ.ಎಸ್.ಸಿ.ಕೇಂದ್ರಗಳನ್ನು ಪ್ರತಿ ಗ್ರಾಮದಲ್ಲಿಯೂ ಪ್ರಾರಂಭಗೊಳಿಸಲು ಸಜ್ಜಾಗಿದೆ. ಪ್ರಸ್ತುತ 6000 ಸಿ.ಎಸ್‌ಸಿ ಕೇಂದ್ರಗಳು ಕರ್ನಾಟಕದಾದ್ಯಂತ ಪ್ರಾರಂಭವಾಗಿದ್ದು 10000 ಕೇಂದ್ರಗಳನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ ಎಂದು ಯೋಜನಾಧಿಕಾರಿ ಶ್ರೀ ವಸಂತ ದೇವಾಡಿಗ ತಿಳಿಸಿದರು.

ವರದಿ ಸೌಜನ್ಯ; ಎನ್ .ನಂಜುಂಡ ಪ್ರಸಾದ್.

ಏನಿದು ಟೊಮ್ಯಾಟೊ ಜ್ವರ? ನಿಮಗಾಗಿ ಮಾಹಿತಿ

0

ಮಕ್ಕಳಲ್ಲಿ ಕಂಡುಬರುವ ಟೊಮ್ಯಾಟೊ ಫ್ಲೂ ರೋಗದ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದರು.

ಅಪರೂಪದ ವೈರಸ್ ರೋಗವಾಗಿರುವ ಟೊಮ್ಯಾಟೊ ಜ್ವರದ ಪ್ರಕರಣಗಳು ಕೇರಳ ರಾಜ್ಯದ ಅರ್ಯಂಕಾರು, ಅಂಚಲ್ ಹಾಗೂ ನೆಡುವತೂರ್ ನಲ್ಲಿ ಕಂಡುಬಂದಿದೆ.
ಸಾಮಾನ್ಯವಾಗಿ 5 ವರ್ಷ ವಯಸ್ಸಿನೊಳಗಿನ ಮಕ್ಕಳಲ್ಲಿ ಕಂಡುಬರುವ ಈ ರೋಗ, ಚರ್ಮದ ತುರಿಕೆ, ಕೆಂಪಾಗುವುದು, ನೀರಡಿಕೆ ಮೊದಲಾದ ಲಕ್ಷಣಗಳನ್ನು ಹೊಂದಿದೆ. ತೀವ್ರ ಜ್ವರ, ಮೈ ಕೈ ನೋವು, ಕೀಲು ನೋವು, ಆಯಾಸ ಮೊದಲಾದ ಲಕ್ಷಣಗಳೂ ಕಂಡುಬರುತ್ತವೆ ಎಂದು ಮಾಹಿತಿ ನೀಡಿದರು.

ಇದು ಈಗಾಗಲೇ ಇರುವ ಕಾಯಿಲೆಯಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ.
ಕೇರಳದಲ್ಲಿ ಈ ರೋಗದ ಪ್ರಕರಣಗಳು ಪತ್ತೆಯಾಗಿರುವುದರಿಂದ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಕೇರಳದಿಂದ ಆಗಮಿಸುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇರಿಸಲು ಸೂಚನೆ ನೀಡಲಾಗಿದೆ ಎಂದರು.

ರಾಜ್ಯದ ಯಾವುದೇ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ ಈ ರೋಗ ಲಕ್ಷಣ ಕಂಡುಬರುವ ಮಕ್ಕಳ ಬಗ್ಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ. ಈ ಬಗ್ಗೆ ಹೆಚ್ಚಿನ ನಿಗಾ ಇರಿಸಲು ಈ ಜಿಲ್ಲೆಗಳೂ ಸೇರಿದಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿಯಿಂದ ಲಿಖಿತ ನಿರ್ದೇಶನ ನೀಡಲಾಗಿದೆ.

ಟೊಮ್ಯಾಟೊ ಜ್ವರಕ್ಕೂ ಕೊರೊನಾಗೂ ಯಾವುದೇ ರೀತಿಯ ಸಂಬಂಧವಿಲ್ಲ. ಇದು ಕೇರಳದಲ್ಲಿ ಈಗಾಗಲೇ ಇರುವ ಎಂಡೆಮಿಕ್ ಕಾಯಿಲೆ ಆಗಿದೆ. ಆದ್ದರಿಂದ ಯಾವುದೇ ಆತಂಕ ಬೇಡ ಎಂದು ಸಲಹೆ ನೀಡಿದರು.

ಪೋಷಕರಿಂದ ನೇರ ಮಗುವನ್ನ ದತ್ತು ಪಡೆದರೆ ಅಪರಾಧವಲ್ಲ

0

ಪೋಷಕರಿಂದ ನೇರವಾಗಿ ಮಗುವನ್ನು ದತ್ತು ಪಡೆದು ಪೋಷಿಸುವುದು ಬಾಲ ನ್ಯಾಯ ಕಾಯ್ದೆಯಡಿ ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಮಗುವನ್ನು ದತ್ತು ಪಡೆದ ವೇಳೆ ಬಾಲ ನ್ಯಾಯ ಕಾಯ್ದೆಯ ನಿಯಮ ಪಾಲಿಸಿಲ್ಲ ಎಂಬ ಆರೋಪ ಸಂಬಂಧ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಕೊಪ್ಪಳದ ಝರೀನಾ ಬೇಗಂ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಪೀಠದ ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ್‌ ಈ ಆದೇಶ ಮಾಡಿದ್ದಾರೆ.

ಮೆಹಬೂಬ್‌ ಸಾಬ್‌ ನಬಿಸಾಬ್‌ ಮತ್ತು ಅವರ ಪತ್ನಿ ಬಾನು ಬೇಗಂ ಎಂಬುವರಿಗೆ 2018ರ ಸೆ.18ರಂದು ಅವಳಿ ಹೆಣ್ಣು ಮಕ್ಕಳು ಜನಿಸಿದ್ದವು. ಝರೀನಾ ಬೇಗಂ ಮತ್ತು ಅಬ್ದುಲ್‌ ಸಾಬ್‌ ಹುಡೇದಮನಿ ಅವರಿಗೆ ಮಕ್ಕಳು ಇರಲಿಲ್ಲ. ಇದರಿಂದ ಬಾನು ಬೇಗಂ ಅವರಿಂದ ಒಂದು ಮಗುವನ್ನು ಜರೀನಾ ಬೇಗಂ ದಂಪತಿ ದತ್ತು ಪಡೆದು ಸಾಕುತ್ತಿದ್ದರು. ಈ ಕುರಿತು .20 ಛಾಪಾ ಖಾಗದದ ಮೇಲೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.

ಆದರೆ, ಪ್ರಕರಣದಲ್ಲಿ ಬಾಲ ನ್ಯಾಯ ಕಾಯ್ದೆ ಸೆಕ್ಷನ್‌-80 ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಆರ್‌.ಜಯಶ್ರೀ ನರಸಿಂಹ ಎಂಬುವರು ದೂರು ದಾಖಲಿಸಿದ್ದರು. ಗಂಗಾವತಿ ಠಾಣಾ ಪೊಲೀಸರು ತನಿಖೆ ನಡೆಸಿ ಅರ್ಜಿದಾರರ ವಿರುದ್ಧ ದೋಷಾರೋಪ ಪಟ್ಟಿಸಲ್ಲಿಸಿದ್ದರು. ಅದನ್ನು ಆಧರಿಸಿ ಮ್ಯಾಜಿಸ್ಪ್ರೇಟ್‌ ಕೋರ್ಚ್‌ ಸಮನ್ಸ್‌ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಪುರಸ್ಕರಿಸಿರುವ ಹೈಕೋರ್ಟ್, ಬಾಲ ನ್ಯಾಯ ಕಾಯ್ದೆ (ಆರೈಕೆ ಮತ್ತು ಮಕ್ಕಳ ರಕ್ಷಣಾ)-2015ರ ಸೆಕ್ಷನ್‌ 80ರಲ್ಲಿ ಮಗು ಅನಾಥವಾಗಿದ್ದರೆ, ನಿರಾಶ್ರಿತವಾಗಿದ್ದರೆ ಅಥವಾ ಬಾಲಮಂದಿರಗಳಿಗೆ ಒಪ್ಪಿಸಿರುವ ಮಗುವಾಗಿದ್ದರೆ ಆ ಮಗುವನ್ನು ದತ್ತು ಪಡೆದ ಸಂದರ್ಭಗಳಲ್ಲಿ ಕಾಯ್ದೆಯ ನಿಯಮಗಳು ಅನ್ವಯವಾಗುತ್ತವೆ ಎಂದು ಅಭಿಪ್ರಾಯಪಟ್ಟಿತು.

ಐಪಿಎಲ್ 22 ಲಕ್ನೊ ಜೈಂಟ್ಸ್ ವಿರುದ್ಧ ಟೈಟನ್ಸ್ ಜಯ

ಪ್ರಸ್ತುತ ನಡೆಯುತ್ತಿರುವ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟನ್ಸ್ 62 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟನ್ಸ್ 62 ರನ್‌ಗಳ ಅಂತರದ ಜಯ ದಾಖಲಿಸಿ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಿಂದ ಒಂದನೇ ಸ್ಥಾನಕ್ಕೆ ಜಿಗಿತ ಕಂಡಿದೆ.

ಇನ್ನು ಈ ಪಂದ್ಯದಲ್ಲಿ ಸೋಲನ್ನು ಅನುಭವಿಸಿರುವ ಲಕ್ನೋ ಸೂಪರ್ ಜೈಂಟ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಾಲ್ಕನೇ ಪರಾಭವವನ್ನು ಕಂಡಿದೆ.

ಮೊದಲು ಬೌಲಿಂಗ್ ಮಾಡಿ ಗುಜರಾತ್ ಟೈಟನ್ಸ್ ತಂಡ ಬೃಹತ್ ಮೊತ್ತ ಗಳಿಸದಂತೆ ಹಿಡಿತ ಸಾಧಿಸಿದ್ದ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟಿಂಗ್‌ನಲ್ಲಿಯೂ ಅದೇ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಗುಜರಾತ್ ಟೈಟನ್ಸ್ ಬೌಲರ್‌ಗಳ ದಾಳಿಗೆ ತತ್ತರಿಸಿದ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟ್ಸ್‌ಮನ್‌ಗಳು 82 ರನ್‌ಗಳಿಸಲಷ್ಟೇ ಶಕ್ತರಾದರು.

ಮೊದಲು ಬ್ಯಾಟ್ ಮಾಡಿದ್ದ ಗುಜರಾತ್ ಟೈಟನ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಶುಭ್‌ಮನ್ ಗಿಲ್ ಮತ್ತು ವೃದ್ದಿಮಾನ್ ಸಹಾ ಮೊದಲ ವಿಕೆಟ್‌ಗೆ ಉತ್ತಮ ಮೊತ್ತ ಕಲೆ ಹಾಕುವಲ್ಲಿ ಎಡವಿದರು.

2.4 ಓವರ್‌ಗಳಾಗಿದ್ದಾಗ ವೃದ್ದಿಮಾನ್ ಸಹಾ 11 ಎಸೆತಗಳಲ್ಲಿ 5 ರನ್ ಬಾರಿಸಿ ಔಟಾದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಥ್ಯೂ ವೇಡ್ 7 ಎಸೆತಗಳಲ್ಲಿ 10 ರನ್ ಕಲೆ ಹಾಕಿ ಔಟಾದರು. ಆರಂಭಿಕ ಆಟಗಾರ ಶುಭ್‌ಮನ್ ಗಿಲ್ 49 ಎಸೆತಗಳಲ್ಲಿ 63 ರನ್ ಗಳಿಸಿ ಮಿಂಚಿದರು.

ಇನ್ನುಳಿದಂತೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ 11 ರನ್, ಡೇವಿಡ್ ಮಿಲ್ಲರ್ 24 ಎಸೆತಗಳಲ್ಲಿ 26 ರನ್ ಗಳಿಸಿ ಹೋಲ್ಡರ್‌ಗೆ ವಿಕೆಟ್ ಒಪ್ಪಿಸಿದರು. ರಾಹುಲ್ ತೇವಾಟಿಯಾ 22 ರನ್ ಗಳಿಸಿ ಅಜೇಯರಾಗಿ ಉಳಿದರು.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ರಮುಖ ಬೌಲರ್ ಆವೇಶ್ ಖಾನ್ ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ 26 ರನ್ ನೀಡಿ 5 ವಿಕೆಟ್ ಪಡೆದರು. ಇನ್ನುಳಿದಂತೆ ಮೊಹ್ಸಿನ್ ಖಾನ್, ಜೇಸನ್ ಹೋಲ್ಡರ್ ತಲಾ ಒಂದೊಂದು ವಿಕೆಟ್ ಪಡೆದರು.

ನಾವು ಅಲ್ಪ ಸಂಖ್ಯಾತರು ಮತ್ತು ಶೋಷಿತರ ಪರ- ಖರ್ಗೆ

0

ಮುಂಬರುವ 2023ರ ಸಾರ್ವತ್ರಿಕ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ಲೌಡ್‌ ಸ್ಪೀಕರ್‌ ಅಭಿಯಾನ ನಡೆಯುತ್ತಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ರಾಜ್ಯದಲ್ಲಿ ಆಜಾನ್‌-ಸುಪ್ರಭಾತ ವಿವಾದಕ್ಕೆ ಕೊನೆ ಹಾಡಲು ರಾಜ್ಯದ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವವರು ಸಂಬಂಧಪಟ್ಟಸಕ್ಷಮ ಪ್ರಾಧಿಕಾರದಿಂದ 15 ದಿನಗಳ ಒಳಗೆ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರ, ಅನುಮತಿರಹಿತ ಧ್ವನಿವರ್ಧಕಗಳನ್ನು ತೆಗೆದು ಹಾಕಲು ಅಧಿಕಾರಿಗಳಿಗೆ ಸೂಚಿಸಿದೆ.
ನಿಗದಿಪಡಿಸಿದ ಗಡುವಿನೊಳಗೆ ಅನುಮತಿ ಪಡೆಯದ ಧ್ವನಿವರ್ಧಕಗಳನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಸಂಬಂಧಪಟ್ಟಸರ್ಕಾರಿ ಅಧಿಕಾರಿಗಳು ತೆರವುಗೊಳಿಸಬೇಕು ಎಂದು ಸೂಚಿಸಿದೆ ಎಂದರು.

ಹನುಮಾನ್‌ ಚಾಲೀಸಾ ಆಗಲಿ, ರಾಮ ಭಕ್ತರೇ ಆಗಲಿ ಇಷ್ಟುದಿನ ಇವರು ಎಲ್ಲಿಗೆ ಹೋಗಿದ್ದರು ಎಂದು ಪ್ರಶ್ನಿಸಿದರು. ಈ ವಿಷಯದಲ್ಲಿ ನಾವು ಅಲ್ಪಸಂಖ್ಯಾತರ ಹಾಗೂ ಶೋಷಿತರ ಪರವಾಗಿ ನಿಲ್ಲುತ್ತೇವೆ. ಮುಸ್ಲಿಮರ ಮೇಲೆ ಅನ್ಯಾಯವಾದರೆ ನಾವು ಮಾತನಾಡುವುದು ತಪ್ಪಾ? ದಲಿತರು, ಲಿಂಗಾಯತ ರೈತರು, ಹಿಂದುಳಿದ ಜನಾಂಗದ ಮೇಲೆ ಅನ್ಯಾಯವಾದ್ರೆ ನಾವು ಮಾತನಾಡೋದು ತಪ್ಪಾ? ಎಲ್ಲಿ, ಅನ್ಯಾಯ, ಅತ್ಯಾಚಾರ, ದಬ್ಬಾಳಿಕೆ ನಡೆಯುತ್ತೆಯೋ ಅಲ್ಲಿ ಕಾಂಗ್ರೆಸ್‌ ಮುಂದಾಳತ್ವದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಶಬ್ಧ ಮಾಲಿನ್ಯ (ನಿಯಂತ್ರಣ ಮತ್ತು ನಿಯಂತ್ರಣ ನಿಯಮಗಳು) 2002 ಅನ್ವಯ ಸಕ್ಷಮ ಪ್ರಾಧಿಕಾರದ ಪರವಾನಗಿ ಇಲ್ಲದ ಸಾರ್ವಜನಿಕ ಧ್ವನಿವರ್ಧಕಗಳನ್ನು ತೆಗೆದುಹಾಕಲು ಸಮಿತಿ ರಚನೆಗೆ ಆದೇಶಿಸಿದೆ.
ಪೊಲೀಸ್‌ ಕಮಿಷನರೇಟ್‌ ಪ್ರದೇಶಗಳಲ್ಲಿ ಸಹಾಯಕ ಪೊಲೀಸ್‌ ಆಯುಕ್ತರು, ಸಂಬಂಧಿತ ನಗರ ಪಾಲಿಕೆ ಕಾರ್ಯ ನಿರ್ವಾಹಕ ಎಂಜಿನಿಯರ್‌ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರತಿನಿಧಿ ಈ ಮೂವರನ್ನು ಒಳಗೊಂಡ ಸಮಿತಿ ರಚಿಸಲು ಹಾಗೂ ಇನ್ನಿತರ ಎಲ್ಲ ಪ್ರದೇಶಗಳಲ್ಲಿ ಡಿವೈಎಸ್ಪಿ, ಸಂಬಂಧಿತ ತಹಶೀಲ್ದಾರ್‌ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರತಿನಿಧಿ ಒಳಗೊಂಡ ಸಮಿತಿ ರಚಿಸಲು ಸರಕಾರ ಆದೇಶಿಸಿದೆ ಎಂದರು.

ಮಸೀದಿ ಅಥವಾ ಮಂದಿರ ಯಾವುದೇ ಆದರೂ ಸಾರ್ವಜನಿಕ ಧ್ವನಿವರ್ಧಕ ಬಳಕೆಗೆ ಈ ಸಮಿತಿಗಳ ಮೂಲಕ 15 ದಿನಗಳ ಒಳಗೆ ಅನುಮತಿ ಪಡೆದಿರಬೇಕು. ಪರವಾನಗಿ ಇಲ್ಲದಿದ್ದಲ್ಲಿ ಸ್ವಯಂ ತೆರವು ಮಾಡಬೇಕು ತಪ್ಪಿದರೆ, ಸಕ್ಷಮ ಪ್ರಾಧಿಕಾರ ಬಲವಂತವಾಗಿ ತೆರವು ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು