Sunday, March 1, 2026
Sunday, March 1, 2026
Home Blog Page 1586

ತಾಲಿಬಾನ್ ಫತ್ವಾ ವಿರುದ್ಧ ಸಿಡಿದೆದ್ದ ಆಫ್ಘನ್ ಮಹಿಳಾಸಮೂಹ

0

ಸಾರ್ವಜನಿಕ ಸ್ಥಳದಲ್ಲಿ ದೇಹ ಮತ್ತು ಮುಖ ಮುಚ್ಚಿಕೊಳ್ಳುವಂತಹ ವಸ್ತ್ರ ಧರಿಸುವಂತೆ ತಾಲಿಬಾನ್ ಆಡಳಿತ ಫತ್ವಾ ಹೊರಡಿಸಿರುವುದನ್ನು ವಿರೋಧಿಸಿ ಹತ್ತಕ್ಕೂ ಅಧಿಕ ಮಹಿಳೆಯರು ಅಫ್ಘಾನಿಸ್ತಾನದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಇತ್ತೀಚೆಗೆ ಅಫ್ಘಾನಿಸ್ತಾನದ ನಾಯಕ ಮತ್ತು ತಾಲಿಬಾನ್ ಮುಖ್ಯಸ್ಥ ಹಿಬಾತುಲ್ಹಾ ಅಖುಂಡ್ಝಾದಾ, ಮಹಿಳೆಯರು ಕಡ್ಡಾಯವಾಗಿ ಬುರ್ಖಾ ಧರಿಸಬೇಕೆಂದು ಫತ್ವಾ ಹೊರಡಿಸಿದ್ದರು.

ಮಹಿಳೆಯರ ಗುಂಪೊಂದು ಧೈರ್ಯ ತೋರಿ ರಾಜಧಾನಿ ಕಾಬೂಲಿನಲ್ಲಿ ನ್ಯಾಯ ಬೇಕು ಎಂದು ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದೆ. ವಿಶೇಷವೆಂದರೆ ಇವರಲ್ಲಿ ಬಹುತೇಕ ಮಂದಿ ಮುಖ ಮುಚ್ಚಿಕೊಳ್ಳದೇ ತಾಲಿಬಾನಿ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುರ್ಖಾ ಕಡ್ಡಾಯ ಬೇಡವೇ ಬೇಡ ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನಾ ಜಾಥಾ ನಡೆಸಿದ ಈ ಗುಂಪನ್ನು ತಡೆದ ತಾಲಿಬಾನಿ ಹೋರಾಟಗಾರರು, ಈ ಬಗ್ಗೆ ವರದಿ ಮಾಡಲು ತೆರಳಿದ್ದ ಪತ್ರಕರ್ತರನ್ನೂ ತಡೆದಿದ್ದಾರೆ.

ಈ ಜಾಥಾದಲ್ಲಿ ಭಾಷಣ ಮಾಡಿದ ಮಹಿಳಾ ನಾಯಕಿ ಸಾಯಿರಾ ಸಮಾ ಅಲಿಮ್ಯಾರ್, ನಾವು ಮನುಷ್ಯರಾಗಿ ಜೀವಿಸಲು ಬಯಸುತ್ತೇವೆಯೇ ಹೊರತು ಮನೆಯೊಂದರಲ್ಲಿ ಕೂಡಿ ಹಾಕಿದ ಪ್ರಾಣಿಯಂತೆ ಜೀವಿಸಲು ಬಯಸುವುದಿಲ್ಲ. ನಮಗೆ ನಮ್ಮದೇ ಆದ ರೀತಿಯಲ್ಲಿ ಜೀವಿಸುವ ಹಕ್ಕಿದೆ ಎಂದು ಹೇಳಿದ್ದಾರೆ.

ಉಕ್ರೇನ್ ಗೆ 40 ಶತಕೋಟಿ ಡಾಲರ್ ಪ್ಯಾಕೇಜ್ ನೆರವಿಗೆ ಅಮೆರಿಕ ಸೆನೆಟರ್ ಗಳ ಸಮ್ಮತಿ

0

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರ ವಿನಂತಿಯನ್ನು ಮನ್ನಿಸಿ ಉಭಯಪಕ್ಷೀಯ (ಡೆಮೋಕ್ರಾಟ್ ಮತ್ತು ರಿಪಬ್ಲಿಕನ್) ಸೆನೆಟರ್ ಗಳು ಒಗ್ಗಟಿನ ಒಪ್ಪಿಗೆಯ ಮೂಲಕ ಸದನವು ಉಕ್ರೇನ್ ನೆರವಿಗೆ 40 ಶತಕೋಟಿ ಡಾಲರ್ ಪ್ಯಾಕೇಜ್ ಅನುಮೋದಿಸಿತು ಎಂದು ತಿಳಿದುಬಂದಿದೆ.

ಸಂಸತ್ತಿನಲ್ಲಿ ನಡೆದ ಚರ್ಚೆಯ ನಂತರ ಸಂಸದರ ಮತದಾನದಲ್ಲಿ 368-57 ಅಂತರದಿಂದ ಅನುಮೋದನೆ ಪಡೆಯಿತು. ವಿಶೇಷ ಎಂದರೆ ಕೋರಿಕೆಗಿಂತ 7 ಶತಕೋಟಿ ಹೆಚ್ಚಿನದನ್ನು ನೆರವು ಒದಗಿಸುತ್ತದೆ.

ಯುದ್ದದಿಂದ ಉಂಟಾಗುವ ಜಾಗತಿಕ ಆಹಾರದ ಕೊರತೆಯನ್ನು ಪರಿಹರಿಸಲು 5 ಶತಕೋಟಿ ಡಾಲರ್ ಒದಗಿಸಲಿದೆ ಎಂದು ತಿಳಿದುಬಂದಿದೆ.

ಈ ನೆರವನ್ನು ರಕ್ಷಣಾ ಮತ್ತು ಮಾನವೀಯ ಕಾರ್ಯಕ್ರಮಗಳಿಗೆ ಸಮವಾಗಿ ವಿಭಜಿಸಿತು. ಮೊದಲಿಗೆ ಉಕ್ರೇನ್‍ಗೆ ಮಿಲಿಟರಿ ಮತ್ತು ಆರ್ಥಿಕ ಸಹಾಯವನ್ನು ನೀಡುತ್ತದೆ. ನಂತರ ಮಿತ್ರರಾಷ್ಟ್ರಗಳಿಗೆ ಸಹಾಯ ನೀಡಲಾಗುತ್ತದೆ ಎಂದು ವಿಶ್ಲೇಶಿಸಲಾಗಿದೆ.

ಚೀನಾ, ಇರಾನ್ ಮತ್ತು ಉತ್ತರ ಕೊರಿಯಾ ನಮ್ಮ ಪ್ರತಿಕ್ರಿಯೆಯನ್ನು ವೀಕ್ಷಿಸುತ್ತಿರುವಂತೆ, ಅಮೆರಿಕವು ತನ್ನ ಮಿತ್ರರಾಷ್ಟ್ರಗಳೊಂದಿಗೆ ದೃಢವಾಗಿ ನಿಂತಿದೆ ಮತ್ತು ವಿದೇಶದಲ್ಲಿ ನಮ್ಮ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವುದನ್ನು ನಾವು ಜಗತ್ತಿಗೆ ತೋರಿಸಬೇಕು ಎಂದು ಹಿರಿಯ ರಿಪಬ್ಲಿಕನ್ ಸೆನೆಟರ್‍ಟೆಕ್ಸಾಸ್‍ನ ರೆಪ್ ಕೇ ಗ್ರ್ಯಾಂಗರ್ ಡೊಡ್ಡ ಮೊತ್ತದ ಪ್ಯಾಕೇಜ್ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ಕಡ್ಡಾಯ

0

ರಾಜ್ಯದಲ್ಲಿ ಎದ್ದಿದ್ದಂತ ಆಜಾನ್ ವರ್ಸಸ್ ಸುಪ್ರಭಾತ ವಿವಾದಕ್ಕೆ ಸರ್ಕಾರ, ಕೊನೆಗೂ ಬ್ರೇಕ್ ಹಾಕಿದೆ. ರಾಜ್ಯದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವವರು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ 15 ದಿನಗಳ ಒಳಗೆ ಅನುಮತಿ ಪಡೆಯುವುದು ಕಡ್ಡಾಯಗೊಳಿಸಿ, ಆದೇಶಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸೋದಕ್ಕೆ ಸಕ್ಷಮ ಪ್ರಾಧಿಕಾರದಿಂದ 15 ದಿನದೊಳಗೆ ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ಅನುಮತಿರಹಿತ ಧ್ವನಿ ವರ್ಧಕಗಳನ್ನು ತೆಗೆದು ಹಾಕಲು ಅಧಿಕಾರಿಗಳಿಗೆ ಸೂಚಿಸಿದೆ.

ಇದಷ್ಟೇ ಅಲ್ಲದೇ ನಿಗದಿಪಡಿಸಿದ ಗಡುವಿನೊಳಗೆ ಅನುಮತಿ ಪಡೆಯದ ಧ್ವನಿ ವರ್ಧಕಗಳನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸಬೇಕು. ಇಲ್ಲದಿದ್ದರೇ ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳು ತೆರವುಗೊಳಿಸಬೇಕು ಎಂದು ಹೇಳಿದೆ.

ಇನ್ನೂ ಶಬ್ದಕ್ಕೂ ಮಿತಿಯನ್ನು ಹೇರಿರುವಂತ ಸರ್ಕಾರ ಧ್ವನಿವರ್ಧಕಗಳನ್ನು ಯಾವ ವ್ಯಾಪ್ತಿಯಲ್ಲಿ ಎಷ್ಟು ಇರಬೇಕು ಎಂಬುದಕ್ಕೂ ಶಬ್ದಕ್ಕೆ ಮಿತಿಯನ್ನು ನಿಗದಿ ಪಡಿಸಿದೆ. ವಸತಿ ಪ್ರದೇಶದಲ್ಲಿ ಹಗಲು 55 ಡೆಸಿಬಲ್, ರಾತ್ರಿ 45 ಡೆಸಿಬಲ್ ಇರುವಂತೆ ಧ್ವನಿಯ ಪ್ರಮಾಣ ನಿಗದಿ ಪಡಿಸಿದೆ.

ವಾಣಿಜ್ಯ ಪ್ರದೇಶದಲ್ಲಿ ಹಗಲು 65 ಡೆಸಿಬಲ್, ರಾತ್ರಿ 55 ಡೆಸಿಬಲ್, ಕೈಗಾರಿಕಾ ಪ್ರದೇಶದಲ್ಲಿ ಹಗಲು 75 ಡೆಸಿಬಲ್, ರಾತ್ರಿ 70 ಡೆಸಿಬಲ್ ಮತ್ತು ನಿಶ್ಯಬ್ದ ಪ್ರದೇಶಗಳಲ್ಲಿ ಹಗಲು 50 ಡೆಸಿಬಲ್, ರಾತ್ರಿ 40 ಡೆಸಿಬಲ್ ಧ್ವನಿ ಮಿತಿಯನ್ನು ನಿಗದಿಗೊಳಿಸಿದೆ.

ಪೋಕ್ರಾನ್ ಅಣುಸ್ಫೋಟ ಪರೀಕ್ಷೆ:ವಿಜ್ಞಾನಿಗಳ ಶ್ರಮ ಹೊಗಳಿದ ಪ್ರಧಾನಿ

0

ಇಂದು ಮೇ 11 ರಾಷ್ಟ್ರೀಯ ತಂತ್ರಜ್ಞಾನ ದಿನ, ಈ ಸಂದರ್ಭದಲ್ಲಿ ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಿರುವ ಪ್ರಧಾನಿ ನರೇಂದ್ರ ಮೋದಿ 1998ರಲ್ಲಿ ಪೋಕ್ರಾನ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದರ ಹಿಂದಿನ ವಿಜ್ಞಾನಿಗಳ ಶ್ರಮವನ್ನು ಕೊಂಡಾಡಿದ್ದಾರೆ.

1998ರ ಪೋಕ್ರಾನ್ ಟೆಸ್ಟ್ ನ ವಿಡಿಯೊವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ವಿಶಿಷ್ಟ ನಾಯಕತ್ವವನ್ನು ಸಹ ಸ್ಮರಿಸಿದ್ದಾರೆ. ಅಂದು ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿಯವರು ಅದ್ವಿತೀಯ ರಾಜಕೀಯ ಧೈರ್ಯ ಮತ್ತು ನಾಯಕತ್ವವನ್ನು ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ಮೇ 1998 ರಲ್ಲಿ ರಾಜಸ್ಥಾನದ ಭಾರತೀಯ ಸೇನೆಯ ಪೋಖ್ರಾನ್ ಪರೀಕ್ಷಾ ಶ್ರೇಣಿಯಲ್ಲಿ ಭಾರತವು ಪೋಖ್ರಾನ್- 2 ಪರೀಕ್ಷೆಗಳನ್ನು ನಡೆಸಿತು, ಇದು ಐದು ಪರಮಾಣು ಸ್ಫೋಟಗಳ ಸರಣಿ ಪರೀಕ್ಷೆಯಾಗಿದೆ.

ಪೋಖ್ರಾನ್-II ಪರೀಕ್ಷೆಗಳ ವಾರ್ಷಿಕೋತ್ಸವದ ನೆನಪಿಗಾಗಿ ಪ್ರತಿ ವರ್ಷ ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ.

ಉಕ್ರೇನ್ ರಷ್ಯ ಸಮರ: ಮತ್ತೆ 44 ಸೈನಿಕರ ಶವ ಪತ್ತೆ

0

ರಷ್ಯಾ ಹಾರಿಸಿದ ಹೈಪರ್​ಸಾನಿಕ ಕ್ಷಿಪಣಿಯಿಂದ ಒಡೆಸಾದ ಬಂದರು ಧ್ವಂಸಗೊಂಡಿದೆ ಎಂದು ಉಕ್ರೇನ್ ಅಧಿಕಾರಿಗಳು ನಿನ್ನೆ ಮಂಗಳವಾರ ಮಾಹಿತಿ ತಿಳಿಸಿದ್ದಾರೆ.

ಸಾಮಗ್ರಿಗಳ ಸರಬರಾಜು ಮತ್ತು ಶಸ್ತ್ರಾಸ್ತ್ರಗಳ ಪೂರೈಕೆಯನ್ನು ಅಸ್ತವ್ಯಸ್ತಗೊಳಿಸುವುದು. ಕಪ್ಪು ಸಮುದ್ರದಲ್ಲಿರುವ ಬಂದರು ನಾಶ ಮಾಡುವುದು ರಷ್ಯಾದ ಉದ್ದೇಶವಾಗಿದೆ.

ಇನ್ನೊಂದು ಕಡೆ, ರಷ್ಯಾ ಪಡೆಗಳಿಗೆ ಸಂಪೂರ್ಣ ನಿಯಂತ್ರಣ ಬಿಟ್ಟು ಕೊಡದಂತೆ ತೀವ್ರ ಪ್ರತಿರೋಧ ಒಡ್ಡಲಾಗುತ್ತಿರುವ ಮಹತ್ವದ ಮರಿಯುಪೋಲ್ ಬಂದರಿನಲ್ಲಿನ ಉಕ್ಕು ಸ್ಥಾವರದ ಮೇಲೂ ರಷ್ಯಾ ದಾಳಿ ಮಾಡಿದೆ. ಬಾಂಬ್ ದಾಳಿಗಳಿಂದ ತಪ್ಪಿಸಿಕೊಳ್ಳಲು ಇನ್ನೂ ಸುಮಾರು ನೂರು ಜನರು ಸುರಂಗ ಮಾರ್ಗಗಳಲ್ಲಿ ಅಡಗಿ ಕುಳಿತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರದೇಶದ ಇಝಿಯುಂ ಎಂಬಲ್ಲಿ ಮಾರ್ಚ್​ನಲ್ಲಿ ರಷ್ಯಾ ನಾಶ ಮಾಡಿದ್ದ ಒಂದು ಕಟ್ಟಡದ ಅಡಿಯಲ್ಲಿ 44 ನಾಗರಿಕರ ದೇಹಗಳು ಪತ್ತೆಯಾಗಿವೆ ಎಂದು ಈ ಮಾಹಿತಿಯನ್ನು ಉಕ್ರೇನ್ ಅಧಿಕಾರಿಯೊಬ್ಬರು ನೀಡಿದ್ದಾರೆ.

Google ಆ್ಯಪ್ ನಲ್ಲಿ ಬದಲಾವಣೆ ಗಮನಿಸಿ

0

ಬಹಳ ದಿನಗಳಿಂದ ಗೂಗಲ್ ತನ್ನ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಥರ್ಡ್ ಪಾರ್ಟಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್​ಗಳನ್ನು ಮಿತಿಗೊಳಿಸಲು ಪ್ರಯತ್ನಿಸುತ್ತಿತ್ತು. ಈಗ ಅದನ್ನು ಜಾರಿಗೆ ತರಲು ನಿರ್ಧರಿಸಿದೆ.
ಮೇ. 11ರ ನಂತರ ಅಂದರೆ ಇಂದಿನಿಂದ ಆಯಂಡ್ರಾಯ್ಡ್‌ ಫೋನ್‌ ಬಳಕೆದಾರರು ಆ್ಯಪ್ ಬಳಸಿ ಕರೆ ರೆಕಾರ್ಡ್‌ ಮಾಡುವುದು ಸಾಧ್ಯವಾಗುವುದಿಲ್ಲ.

ಆಯಂಡ್ರಾಯ್ಡ್‌ನಲ್ಲಿ ಸುರಕ್ಷತೆ ಮತ್ತು ಗೋಪ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೂಗಲ್‌ ಅನೇಕ ಕ್ರಮಗಳಿಗೆ ಮುಂದಾಗಿದೆ. ಕಾಲ್‌ ರೆಕಾರ್ಡಿಂಗ್‌ ಅವಕಾಶ ನೀಡುವ ಅಪ್ಲಿಕೇಷನ್‌ಗಳನ್ನು ನಿರ್ಬಂಧಿಸಲಿದೆ. ಈ ಹೊಸ ನೀತಿಯನ್ನು ಹೇಗೆ ಕಾರ್ಯಗತಗೊಳಿಸಲು ಗೂಗಲ್‌ ಪ್ಲಾನ್‌ ಮಾಡಿದೆ.ಅದೇನು ಎಂಬುವುದನ್ನು ಇನ್ನೂ ಬಹಿರಂಗ ಪಡಿಸಿಲ್ಲ. ಅಂದರೆ, ಗೂಗಲ್‌ ತನ್ನ ಪ್ಲೇ ಸ್ಟೋರ್‌ನಲ್ಲಿ ಎಲ್ಲಾ ಥರ್ಡ್‌ ಪಾರ್ಟಿ ಕಾಲ್‌ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬ್ಯಾನ್‌ ಮಾಡಲಿದೆಯಾ ಅಥವಾ ಪ್ಲಾಟ್‌ಫಾರ್ಮ್‌ನಿಂದ ತಮ್ಮ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಲು ಡೆವಲಪರ್‌ಗಳನ್ನು ಕೇಳುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಇದರಲ್ಲಿ ಟ್ರೂ ಕಾಲರ್ ಕೂಡ ಒಳಗೊಂಡಿದೆ. ಬಹಳ ದಿನಗಳಿಂದಲೂ ಗೂಗಲ್ ತನ್ನ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಥರ್ಡ್ ಪಾರ್ಟಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್ಗಳನ್ನು ಮಿತಿಗೊಳಿಸಲು ಪ್ರಯತ್ನಿಸುತ್ತಿತ್ತು. ಈಗ ಅದನ್ನು ಜಾರಿಗೆ ತರಲು ನಿರ್ಧರಿಸಿದೆ.

ಥರ್ಡ್ ಪಾರ್ಟಿ ವ್ಯಕ್ತಿಗಳಿಂದ ಅಭಿವೃದ್ಧಿಪಡಿಸಲಾದ ಧ್ವನಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬಳಕೆದಾರರ ಗೌಪ್ಯತೆಯ ಮೇಲೆ ಆಕ್ರಮಣ ಎಂದು ಪರಿಗಣಿಸಿ ಗೂಗಲ್ ಇಂತಹದೊಂದು ಮಹತ್ತರ ಬದಲಾವಣೆಗೆ ಕೈ ಹಾಕಿದೆ ಎಂದು ಹೇಳಲಾಗುತ್ತಿದೆ. ಟ್ರೂ ಕಾಲರ್‌ ಈಗಾಗಲೇ ಗ್ರಾಹಕರ ಬೇಡಿಕೆಯಂತೆ ಎಲ್ಲಾ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಿಗೆ ಕರೆ ರೆಕಾರ್ಡಿಂಗ್ ವೈಶಿಷ್ಟ್ಯವನ್ನು ಪರಿಚಯಿಸಿದೆ. ಆದರೆ ಇದೀಗ ಗೂಗಲ್‌ ಡೆವಲಪರ್ ಪ್ರೋಗ್ರಾಂ ನೀತಿಗಳ ಪ್ರಕಾರ,ಇನ್ಮುಂದೆ ಟ್ರೂ ಕಾಲರ್‌ ಕಾಲ್‌ ರೆಕಾರ್ಡಿಂಗ್ ಅನ್ನು ಸ್ಟಾಪ್‌ ಮಾಡಲಿದೆ.

ಹಾಗಂತೆ ಎಲ್ಲಾ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಪ್ಲಾಟ್‌ಫಾರ್ಮ್‌ನಿಂದ ಬ್ಯಾನ್‌ ಆಗುವುದಿಲ್ಲ. ಅಂದರೆ ಒನ್‌ಪ್ಲಸ್‌, ಶಿಯೋಮಿ ಮತ್ತು ಸ್ಯಾಮ್‌ಸಂಗ್‌ ಕಂಪೆನಿಗಳು ನೀಡುವ ಇಂಟರ್‌ಬಿಲ್ಟ್‌ ಕಾಲ್‌ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳು ಬ್ಯಾನ್‌ ಆಗುವುದಿಲ್ಲ. ಇದಲ್ಲದೆ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಲ್ಲಿ ಗೂಗಲ್‌ನ ಸ್ವಂತ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್ ಸಹ ಲಭ್ಯವಿರುತ್ತದೆ.

ಇಲ್ಲಿ ಗಮನಿಸಬೇಕಾದ ಸಂಗತಿಯೆಂದರೆ, ಕಳೆದ ಕೆಲ ವರ್ಷಗಳಿಂದ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳು ಮತ್ತು ಸೇವೆಗಳ ವಿರುದ್ಧ ಗೂಗಲ್ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಕೆಲವು ವರ್ಷಗಳ ಹಿಂದೆ, ಆಂಡ್ರಾಯ್ಡ್ 6 ನಲ್ಲಿ ಗೂಗಲ್ ನೈಜ ಸಮಯದ ಕರೆ ರೆಕಾರ್ಡಿಂಗ್ ಅನ್ನು ನಿರ್ಬಂಧಿಸಿತ್ತು. ಹಾಗೂ ಆಂಡ್ರಾಯ್ಡ್
10 ನೊಂದಿಗೆ ಮೈಕ್ರೊಫೋನ್‌ನಲ್ಲಿ ಕರೆ ರೆಕಾರ್ಡಿಂಗ್ ಅನ್ನು ಮತ್ತಷ್ಟು ನಿರ್ಬಂಧಿಸಿತ್ತು. ಇದಾದ ನಂತರ ಆವೃತ್ತಿಗಳೊಂದಿಗೆ ಕರೆಗಳನ್ನು ರೆಕಾರ್ಡ್ ಮಾಡಲು ಥರ್ಡ್ ಪಾರ್ಟಿ ಅಪ್ಲಿಕೇಶನ್‌ಗಳು ಪ್ರವೇಶಿಸುವಿಕೆಯನ್ನು ಪ್ರಾರಂಭಿಸಿದವು. ಆದರೆ, ಗೂಗಲ್ ಇದೀಗ ತನ್ನ ನೀತಿಯನ್ನು ನವೀಕರಿಸಿರುವುದರಿಂದ, ಇನ್ನು ಮುಂದೆ ಥರ್ಡ್ ಪಾರ್ಟಿ ವ್ಯಕ್ತಿಗಳಿಂದ ಅಭಿವೃದ್ಧಿಪಡಿಸಲಾದ ಧ್ವನಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳು ಕರೆಗಳನ್ನು ರೆಕಾರ್ಡ್ ಮಾಡಲು ಸಾಧ್ಯವಾಗುವುದಿಲ್ಲ.

ಮೇ16 ಶಾಲಾರಂಭ: ಮೇ 3 ನೇ ವಾರ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ- ನಾಗೇಶ್

0

ಈಗಾಗಲೇ ನಿಗದಿಯಾಗಿರುವಂತೆ ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.

ಮೇ 16 ರಿಂದ ಶಾಲೆಗಳನ್ನು ಆರಂಭಿಸಿ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಬಿಸಿಲ ಬೇಗೆ ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಬೇಸಿಗೆ ರಜೆ ವಿಸ್ತರಿಸಬೇಕು. ಜೂನ್ 1 ರಿಂದ ಶಾಲೆಗಳನ್ನು ಆರಂಭಿಸಬೇಕೆಂಬ ಒತ್ತಾಯ ಕೇಳಿ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಹವಾಮಾನ ಇಲಾಖೆಯಿಂದ ಮಾಹಿತಿ ಪಡೆದುಕೊಂಡೇ 15 ದಿನಗಳ ಮೊದಲೇ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಎಂದು ಬಿಸಿ ನಾಗೇಶ್ ಅವರು ಮಾಹಿತಿ ನೀಡಿದ್ದಾರೆ.

ಕೊರೋನಾ ಕಾರಣದಿಂದಾಗಿ ಮಕ್ಕಳ ಕಲಿಕಾ ಮಟ್ಟದಲ್ಲಿ ಹಿನ್ನಡೆಯಾಗಿದೆ. ಆದ್ದರಿಂದ ಮೇ 16 ರಿಂದ ಶಾಲೆಗಳನ್ನು ಆರಂಭಿಸಿ ಕಲಿಕಾ ಚೇತರಿಕೆ ಕಾರ್ಯಕ್ರಮ ಆರಂಭಿಸಲಾಗುತ್ತದೆ. ಮೇ 16 ರಂದು ತುಮಕೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ಎಸ್‌ಎಸ್‌ಎಲ್ಸಿ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ ಸಚಿವ ನಾಗೇಶ್, ಎಸ್‌ಎಸ್‌ಎಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಅಂಕಗಳ ಕ್ರೋಡೀಕರಣ ಮಾಡಲಾಗುತ್ತಿದೆ. ಮೇ 3ನೇ ವಾರ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದ್ದಾರೆ.

ಯುದ್ಧವನ್ನ ಕೇವಲ ಡಾನ್ ಬಾಸ್ ಪ್ರದೇಶಕ್ಕೆ ಸೀಮಿತಮಾಡಿಲ್ಲ-ಹೇನ್ಸ್

0

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಜತೆಗಿನ ಯುದ್ಧವನ್ನು ಕೇವಲ ಡಾನ್‍ ಬಸ್ ದಾಳಿಗೆ ಸೀಮಿತಗೊಳಿಸುವ ಸಾಧ್ಯತೆ ಇಲ್ಲ. ರಷ್ಯಾ ನಿಯಂತ್ರಿತ ಮೊಲ್ಡೋವಾ ಪ್ರದೇಶಕ್ಕೆ ಭೂ ಸೇತುವೆ ನಿರ್ಮಿಸಲು ರಷ್ಯಾ ಬದ್ಧವಾಗಿದೆ ಎಂದು ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕ ಅವ್ರಿಲ್ ಹೇನ್ಸ್ ಹೇಳಿದ್ದಾರೆ.

ಅಧ್ಯಕ್ಷ ಪುಟಿನ್ ಅವರು ಉಕ್ರೇನ್ ಜತೆ ಸುಧೀರ್ಘ ಸಂಘರ್ಷಕ್ಕೆ ಸಜ್ಜಾಗಿದ್ದು, ಡಾನ್‍ಬಸ್‍ನ ಆಚೆಗೆ ತಮ್ಮ ಗುರಿಯನ್ನು ಸಾಧಿಸುವ ಉದ್ದೇಶ ಹೊಂದಿದ್ದಾರೆ” ಎಂದು ಹೇನ್ಸ್ ಅಭಿಪ್ರಾಯಪಟ್ಟಿದ್ದಾರೆ.

ಪುಟಿನ್ ಅವರು ಮಾರ್ಷಿಯಲ್ ಕಾನೂನು ಆದೇಶ ಸೇರಿದಂತೆ ತಮ್ಮ ಸಂಪೂರ್ಣ ದೇಶವನ್ನು ಯುದ್ಧಕ್ಕಾಗಿ ಸಂಘಟಿಸುವ ಸಾಧ್ಯತೆ ಅಧಿಕವಾಗಿದೆ ಮತ್ತು ಉಕ್ರೇನ್‍ಗೆ ಪಾಶ್ಚಿಮಾತ್ಯ ದೇಶಗಳ ನೆರವನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಿದ್ದಾರೆ ಎಂದು ಗುಪ್ತಚರ ವಿಭಾಗ ತಿಳಿಸಿದೆ.

ಉತ್ತರದಲ್ಲಿ ಕೀವ್ ನಗರವನ್ನು ವಶಪಡಿಸಿಕೊಳ್ಳಲು ವಿಫಲವಾದ ಬಳಿಕ ರಷ್ಯನ್ ಪಡೆಗಳನ್ನು ಪೂರ್ವ ಉಕ್ರೇನ್‍ನ ಡಾನ್‍ಬಸ್ ಪ್ರದೇಶದಲ್ಲಿ ಕೇಂದ್ರೀಕರಿಸುವ ಪುಟಿನ್ ನಿರ್ಧಾರ ಕೇವಲ ತಾತ್ಕಾಲಿಕ ಎನ್ನುವುದು ಅಮೆರಿಕ ಗುಪ್ತಚರ ವಿಭಾಗದ ಅಭಿಪ್ರಾಯವಾಗಿದೆ.

ಆಂಧ್ರದ ಕರಾವಳಿಯಲ್ಲಿ ರಥದ ಮಾದರಿ ಪತ್ತೆ

0

ನಿನ್ನೆ ಮಂಗಳವಾರ ಸಂಜೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಸುನ್ನಪಲ್ಲಿ ಕರಾವಳಿಯಲ್ಲಿ ಚಿನ್ನದ ಬಣ್ಣದ ರಥದಂತಹ ಮಾದರಿಯು ಪತ್ತೆಯಾಗಿದೆ. ಇದು ಮ್ಯಾನ್ಮಾರ್, ಮಲೇಷ್ಯಾ ಅಥವಾ ಥೈಲ್ಯಾಂಡ್‌ನಿಂದ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಗ್ರಾಮಸ್ಥರು ಹಗ್ಗಗಳ ಸಹಾಯದಿಂದ ಇದನ್ನು ದಡಕ್ಕೆ ಎಳೆದಿದ್ದಾರೆ.

ರಥವು ಆಗ್ನೇಯ ಏಷ್ಯಾದ ದೇಶಗಳ ಮಠದ ಆಕಾರವನ್ನು ಹೋಲುತ್ತದೆ. ಆಸಾನಿ ಚಂಡಮಾರುತದ ಪ್ರಭಾವದಿಂದ ರಥವು ಆಂಧ್ರಪ್ರದೇಶ ಕರಾವಳಿಗೆ ತೇಲಿ ಬಂದಿದೆ ಎಂದು ಶಂಕಿಸಲಾಗಿದೆ

ಜಾಗತಿಕ ಹೂಡಿಕೆದಾರರ ಮೇಳ: ವಿವಿಧ ದೇಶಗಳ ರಾಯಭಾರಿಗಳ ಸಭೆಯಲ್ಲಿ ಸಿಎಂ

0

ಕರ್ನಾಟಕ ಬಂಡವಾಳ ಹೂಡಿಕೆಗೆ ಸೂಕ್ತ ಸ್ಥಳ. ಈ ಪ್ರಪಂಚದಲ್ಲಿ ನಿಮ್ಮದೇ ಆದ ಪ್ರಪಂಚವನ್ನು ಸೃಷ್ಟಿಸಿ ಎಂದು ವಿವಿಧ ದೇಶಗಳ ರಾಯಭಾರಿಗಳಿಗೆ ಸಿಎಂ ಕರೆ ನೀಡಿದರು.

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ ನಿರ್ಮಿಸಲಾದ ಸೆಟಿಲೈಟ್ ಗಳಲ್ಲಿ ಚಂದ್ರನೆಡೆಗೆ ಪ್ರಯಾಣಿಸಲಾಯಿತು. ಬಯೋ ಟೆಕ್ನಾಲಜಿ, ಫಾರ್ಮಾ ಕೈಗಾರಿಕೆಗಳು, ಐಟಿ ಕ್ಷೇತ್ರ ಗಳು ರಾಜ್ಯದಲ್ಲಿವೆ. ಅಮೆರಿಕದ ನಂತರ ಬೆಂಗಳೂರಿನ ಸಿಲಿಕಾನ್ ವ್ಯಾಲಿ ಖ್ಯಾತಿ ಗಳಿಸಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದ ಪ್ರಯೋಗಾಲಯಗಳು ಕರ್ನಾಟಕದಲ್ಲಿವೆ. ರಾಜ್ಯದಲ್ಲಿ 400 ಸಂಶೋಧನಾ ಕೇಂದ್ರಗಳಿದ್ದು, ಅವುಗಳಲ್ಲಿ 180 ವಿಶ್ವಮಟ್ಟದ ಸಂಶೋಧನಾ ಕೇಂದ್ರಗಳಾಗಿವೆ ಎಂದರು.

ಕರ್ನಾಟಕದ ಅಭಿವೃದ್ಧಿ ವೈಜ್ಞಾನಿಕವಾಗಿ ಆಗಿದೆ. ತಂತ್ರಜ್ಞಾನದ ಬದಲಾವಣೆ ಗಳನ್ನು ಅಳವಡಿಸಿಕೊಂಡಿದೆ. ಆದ್ದರಿಂದ ರಾಜ್ಯದ ಎಲ್ಲ ವಲಯಗಳಲ್ಲಿ ಸಹಜವಾದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣ ಸಾಧ್ಯವಾಗಿದೆ. ಮೆಷಿನ್ ಟೂಲ್ಸ್ ಗಳನ್ನು ಉತ್ಪಾದಿಸುವ ಮೊದಲ ರಾಜ್ಯ. ದೇಶದಲ್ಲಿ ಮೊದಲ ಬಾರಿ ಏರೋಸ್ಪೇಸ್ ಘಟಕವನ್ನು ಸ್ಥಾಪಿಸಿದ ರಾಜ್ಯ ಕರ್ನಾಟಕ ಎಂದರು.

ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ – 2022 – ಜಾಗತಿಕ ಹೂಡಿಕೆದಾರರ ಸಮಾವೇಶದ ಕುರಿತು ವಿವಿಧ ದೇಶಗಳ ರಾಯಭಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ನವದೆಹಲಿಯಲ್ಲಿ ಸಂವಾದ ನಡೆಸಿದರು.

ಜಾಗತೀಕರಣದಿಂದಾಗಿ ವಿಶ್ವ ಬಹಳ ಸಣ್ಣದಾಗಿದೆ. ದಕ್ಷತೆ ಹಾಗೂ ಉತ್ಕೃಷ್ಟತೆ ಆರ್ಥಿಕ ಚಟುವಟಿಕೆಯ ಮೂಲಮಂತ್ರ. ಆದ್ದರಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯಕರ ಸ್ಪರ್ಧೆ ಪ್ರಾರಂಭವಾಗಿದೆ ಎಂದರು.

ಶ್ರೇಷ್ಠರಾದವರು ಮನ್ನಣೆ ಗಳಿಸುತ್ತಾರೆ. ಕರ್ನಾಟಕವನ್ನು ಬಹಳ ಸದೃಢವಾಗಿ, ಸಶಕ್ತವಾಗಿ ವಿಶ್ವಕ್ಕೆ ಪರಿಚಯಿಸಲಾಗುತ್ತದೆ. ರಾಜ್ಯಕ್ಕೆ ಶ್ರೀಮಂತ ಪರಂಪರೆಯೇ ಭದ್ರ ಅಡಿಪಾಯವಾಗಿದೆ. ಮೌಲ್ಯಗಳು, ಪ್ರಾಮಾಣಿಕತೆ ನಮ್ಮ ಪರಂಪರೆಯ ಭಾಗವಾಗಿದೆ. ಅತಿಥಿಗಳೇ ದೇವರು ಎಂಬುದು ಕರ್ನಾಟಕದ ಸಂಸ್ಕೃತಿ. ಶ್ರೀಮಂತ ನೈಸರ್ಗಿಕ ಸಂಪತ್ತು ನಮ್ಮಲ್ಲಿದೆ ಎಂದರು.